ಬೆಂಗಳೂರು | ಗಣ್ಯರ ಭೇಟಿ ಹಿನ್ನೆಲೆಯಲ್ಲಿ ಸೆ.26ರಿಂದ ಕೆಲ ಮಾರ್ಗಗಳ ಸಂಚಾರ ವ್ಯವಸ್ಥೆ ಬದಲು - Vistara News

ಬೆಂಗಳೂರು

ಬೆಂಗಳೂರು | ಗಣ್ಯರ ಭೇಟಿ ಹಿನ್ನೆಲೆಯಲ್ಲಿ ಸೆ.26ರಿಂದ ಕೆಲ ಮಾರ್ಗಗಳ ಸಂಚಾರ ವ್ಯವಸ್ಥೆ ಬದಲು

ಬೆಂಗಳೂರಿನಲ್ಲಿ ಕೆಲ ಏಕಮುಖ ಸಂಚಾರ ರಸ್ತೆಗಳನ್ನು ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಗಳನ್ನಾಗಿ ಮಾರ್ಪಡಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ ತಿಳಿಸಿದೆ.

VISTARANEWS.COM


on

ಸಂಚಾರ ವ್ಯವಸ್ಥೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರಕ್ಕೆ ಸೆ.26ರಿಂದ ಸೆ.28ರವರೆಗೆ ವಿವಿಧ ಗಣ್ಯರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಕಬ್ಬನ್‌ಪಾರ್ಕ್‌ ಮತ್ತು ಅಶೋಕನಗರ ಸಂಚಾರ ಪೊಲೀಸ್‌ ವ್ಯಾಪ್ತಿಯಲ್ಲಿನ ಕೆಲ ಮಾರ್ಗಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಈ ಕೆಳಕಂಡ ಏಕಮುಖ ಸಂಚಾರ ರಸ್ತೆಗಳನ್ನು ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಗಳನ್ನಾಗಿ ಮಾರ್ಪಡಿಸಲಾಗಿದೆ.

  1. ಸೆ.25ರಿಂದ 27ರವರೆಗೆ ಕಬ್ಬನ್‌ಪಾರ್ಕ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜಭವನ ರಸ್ತೆಯನ್ನು ರಾಜಭವನ ಮುಖ್ಯದ್ವಾರದಿಂದ ಪೊಲೀಸ್ ತಿಮ್ಮಯ್ಯ ವೃತ್ತದವರೆಗೆ ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಮಾರ್ಪಡಿಸಿದ್ದು, ಗಣ್ಯ ವ್ಯಕ್ತಿಗಳ ಕಾನ್ವಾಯ್ ಸಂಚರಿಸುವ ಸಮಯದಲ್ಲಿ ಮಾತ್ರ ಅನುವು ಮಾಡಿಕೊಡಲಾಗಿದೆ ಮತ್ತು ವಿಧಾನ ಸೌಧದ ನಿರ್ಗಮನ ಗೇಟ್‌ ನಂ-4ರಲ್ಲಿ ಹಾಲಿ ಪ್ರವೇಶ ನಿಷೇಧವಿದ್ದು, ಕಾನ್ವಾಯ್ ಸಂಚರಿಸುವ ಸಮಯದಲ್ಲಿ ಮುಕ್ತ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ.
  2. ಅಶೋಕ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ರಿಚ್ಮಂಡ್‌ ರಸ್ತೆಯಲ್ಲಿ ರಿಚ್ಮಂಡ್‌ ವೃತ್ತದಿಂದ ಬಾಲ್ಡ್‌ವಿನ್‌ ಬಾಲಕಿಯರ ಶಾಲೆಯ ವೃತ್ತದವರೆಗೆ ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಮಾರ್ಪಡಿಸಿ ಗೌರವಾನ್ವಿತ ಗಣ್ಯ ವ್ಯಕ್ತಿಗಳ ಕಾನ್ವಾಯ್ ಸಂಚರಿಸುವ ಸಮಯದಲ್ಲಿ ಮಾತ್ರ ಅನುವು ಮಾಡಿಕೊಡಲಾಗಿದೆ.

ಸಾರ್ವಜನಿಕರು ಈ ಕೆಳಕಂಡ ರಸ್ತೆಗಳನ್ನು ಬಳಸದೆ ಪರ್ಯಾಯ ರಸ್ತೆಗಳಲ್ಲಿ ಸಂಚರಿಸಬೇಕು:

  • ಸೆ.26 ರಂದು ಸಂಜೆ 5.30 ರಿಂದ 6 ಗಂಟೆವರೆಗೆ ಹಳೇ ವಿಮಾನ ನಿಲ್ದಾಣ ರಸ್ತೆ-ಎಂ.ಜಿ.ರಸ್ತೆ – ಡಿಕನ್ಸನ್ ರಸ್ತೆ – ಕೆ.ಆರ್‌.ರಸ್ತೆ ಮತ್ತು ಕಬ್ಬನ್ ರಸ್ತೆ-ರಾಜಭವನ ರಸ್ತೆ.
  • ಸೆ.27ರಂದು ಬೆಳಗ್ಗೆ 9.30 ಗಂಟೆಯಿಂದ 11.30 ಗಂಟೆವರೆಗೆ ರಾಜಭವನ ರಸ್ತೆ-ಇನ್‌ಫೆಂಟ್ರಿ ರಸ್ತೆ – ಕೆ.ಆರ್.ರಸ್ತೆ ಮತ್ತು ಕಬ್ಬನ್ ರಸ್ತೆ – ಡಿಕನ್ಸನ್ ರಸ್ತೆ – ಎಂ.ಜಿ.ರಸ್ತೆ – ಹಳೇ ವಿಮಾನ ನಿಲ್ದಾಣ ರಸ್ತೆ – ಸುರಂಜನ್‌ದಾಸ್ ರಸ್ತೆ. ಮಧ್ಯಾಹ್ನ 3.40ರಿಂದ ರಾತ್ರಿ 8 ಗಂಟೆಯವರೆಗೆ ರಾಜಭವನ ರಸ್ತೆ – ಇನ್‌ಫೆಂಟ್ರಿ ರಸ್ತೆ – ಕ್ವೀನ್ಸ್ ರಸ್ತೆ – ಕಸ್ತೂರಿ ಬಾ ರಸ್ತೆ – ರಿಚ್ಮಂಡ್ ರಸ್ತೆ – ಲ್ಯಾಂಗ್ ಫೋರ್ಡ್ ರಸ್ತೆ-ಅಂಬೇಡ್ಕರ್ ರಸ್ತೆ.
  • ಸೆ.28ರಂದು ಬೆಳಗ್ಗೆ 9ರಿಂದ 9.30 ಗಂಟೆವರೆಗೆ ರಾಜಭವನ ರಸ್ತೆ-ಇನ್‌ಫೆಂಟ್ರಿ ರಸ್ತೆ – ಕೆ.ಆರ್.ರಸ್ತೆ ಮತ್ತು ಕಬ್ಬನ್ ರಸ್ತೆ – ಡಿಕೆನ್ಸನ್ ರಸ್ತೆ- ಎಂ.ಜಿ.ರಸ್ತೆ – ಹಳೇ ವಿಮಾನ ನಿಲ್ದಾಣ ರಸ್ತೆ.

ಇದನ್ನೂ ಓದಿ | ರಾಜ್ಯದಲ್ಲಿ ಮತ್ತೊಮ್ಮೆ ಜನಪರ ಸರ್ಕಾರ ಮರು ಸ್ಥಾಪನೆ ಎಂದ ಸಿಎಂ ಬೊಮ್ಮಾಯಿ‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Karnataka Weather Forecast : ಗಂಟೆಗಳ ಕಾಲ ಮಳೆ ಸುರಿದರೂ ವಾತಾವರಣ ಮಾತ್ರ ಕಾದ ಕೆಂಡವಾಗಿಯೇ ಇದೆ. ರಾಜ್ಯಾದ್ಯಂತ ಕೆಲವೆಡೆ ಮಳೆ ಸೂಚನೆ (Rain News) ಇದ್ದರೂ, ಮುಕ್ಕಾಲು ಭಾಗದಲ್ಲಿ ತಾಪಮಾನ ಏರಿಕೆ ಮುಂದುವರಿಯಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ (Rain News) ಮಳೆಯಾಗಲಿದ್ದು, ಹವಾಮಾನ ಇಲಾಖೆ (Karnataka Weather Forecast) ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೊಂದೆಡೆ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು,ಕೊಪ್ಪಳ, ಕಲಬುರಗಿ ಹಾಗೂ ಹಾವೇರಿ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ. ಹೀಗಾಗಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನೂ ರಾಜಧಾನಿ ಬೆಂಗಳೂರಲ್ಲಿ ಮಳೆ ಇದ್ದರೂ ಬಿಸಿಲ ಧಗೆ ಕಡಿಮೆ ಆಗುವುದಿಲ್ಲ. ಹೀಗಾಗಿ ಬೆಂಗಳೂರು ನಗರವು ಸೇರಿ ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ತಾಪಮಾನ ಮುನ್ಸೂಚನೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿಯಂದು ವಾತಾವರಣ ಬೆಚ್ಚಗೆ ಇರಲಿದ್ದು, ಬಿಸಿಗಾಳಿ ಬೀಸಲಿದೆ. ಶಾಖ ತರಂಗ ಎಚ್ಚರಿಕೆಯನ್ನು ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಹೀಟ್‌ ವೇವ್‌ ಇರಲಿದೆ.

ಇದನ್ನೂ ಓದಿ: Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Prajwal Revanna Case: ಅಪಹರಣಕ್ಕೀಡಾದ ಸಂತ್ರಸ್ತೆಯು ಪ್ರಾಣಭಯದಿಂದ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸದಂತಹ ಸ್ಥಿತಿಗೆ ತಲುಪಿದ್ದಾರೆ. ಎಸ್‌ಐಟಿ ಅಧಿಕಾರಿಗಳ ಭದ್ರತೆ ಇದ್ದರೂ, ಅವರನ್ನು ಬೆಂಗಳೂರಿಗೆ ಕರೆಸಿಕೊಂಡರೂ, ರೇವಣ್ಣ ಕುಟುಂಬಸ್ಥರ ದೌರ್ಜನ್ಯದ ಕುರಿತು ಅವರು ಯಾವುದೇ ಮಾಹಿತಿ ನೀಡಲು ಹಿಂಜರಿಯುತ್ತಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್‌ ರೇವಣ್ಣ (Prajwal Revanna) ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇಡೀ ಪ್ರಕರಣವು ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ತಂದಿದೆ. ಇದರ ಬೆನ್ನಲ್ಲೇ, ಅಪಹರಣಕ್ಕೀಡಾದ ಸಂತ್ರಸ್ತೆಯು ಪ್ರಾಣಭಯದಿಂದ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸದಂತಹ ಸ್ಥಿತಿಗೆ ತಲುಪಿದ್ದಾರೆ.

ಹೌದು, ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬಣ್ಣ ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಭದ್ರತೆ ದೃಷ್ಟಿಯಿಂದ ಮಹಿಳೆಯನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅವರು ತನಿಖಾಧಿಕಾರಿಗಳ ಎದುರು ಎಲ್ಲವನ್ನೂ ಹೇಳಲು ಆಗುತ್ತಿಲ್ಲ. ಇದರಿಂದಾಗಿ ಪ್ರಕರಣದಲ್ಲಿ ಮಹತ್ವದ ಪ್ರಗತಿ ಸಾಧಿಸಲು ಎಸ್‌ಐಟಿ ಅಧಿಕಾರಿಗಲು ಹೆಣಗಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂತ್ರಸ್ತೆಯನ್ನು ಅಪಹರಿಸಿ ಇರಿಸಲಾಗಿದ್ದ ಹುಣಸೂರಿನ ತೋಟದ ಮನೆ.

“ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್‌ ಶರಣಾಗತಿ?

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಇದನ್ನೂ ಓದಿ: HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

Continue Reading

ಕರ್ನಾಟಕ

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Bangalore To Belagavi Train: ಮೇ 6ರಂದು ಬೆಂಗಳೂರಿನಿಂದ ಹುಬ್ಬಳ್ಳಿ- ಧಾರವಾಡ, ಬೆಳಗಾವಿಗೆ ವಿಶೇಷ ರೈಲು ಸಂಚರಿಸಲಿದೆ. ಪ್ರಯಾಣಿಕರು ಈ ವಿಶೇಷ ರೈಲಿನ ಸೌಲಭ್ಯ ಪಡೆದುಕೊಳ್ಳಬಹುದು.

VISTARANEWS.COM


on

Bangalore To Belagavi Train
Koo

ಹುಬ್ಬಳ್ಳಿ: ಮೇ 6ರಂದು ಬೆಂಗಳೂರಿನಿಂದ ಹುಬ್ಬಳ್ಳಿ- ಧಾರವಾಡ, ಬೆಳಗಾವಿಗೆ ವಿಶೇಷ ರೈಲು (Bangalore To Belagavi Train) ಸಂಚರಿಸಲಿದ್ದು, ಪ್ರಯಾಣಿಕರು ಈ ವಿಶೇಷ ರೈಲಿನ ಸೌಲಭ್ಯ ಪಡೆದುಕೊಳ್ಳಬಹುದು ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಸೋಮವಾರ ರಾತ್ರಿ 9.55ಕ್ಕೆ ರೈಲು ನಂ. 07319/07320 ಬೆಂಗಳೂರಿನ ಯಶವಂತಪುರದಿಂದ ಹೊರಟು ತುಮಕೂರು-ಅರಸೀಕೆರೆ-ದಾವಣಗೆರೆ-ಹಾವೇರಿ ಮಾರ್ಗವಾಗಿ ಹುಬ್ಬಳ್ಳಿ-ಧಾರವಾಡಕ್ಕೆ ಬೆಳಗ್ಗೆ 5 ಗಂಟೆಗೆ ತಲುಪಲಿದೆ. ನಂತರ ಗೋಕಾಕ್‌-ಘಟಪ್ರಭಾ-ರಾಯಭಾಗ-ಕುಡಚಿ ಮಾರ್ಗವಾಗಿ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ.

ಮೇ 7ರಂದು ರಾತ್ರಿ 9.10ಕ್ಕೆ ಧಾರವಾಡದಿಂದ 9.55ಕ್ಕೆ ಹುಬ್ಬಳ್ಳಿಯಿಂದ ಮರಳಿ ಬೆಂಗಳೂರಿಗೆ ಹೊರಡಲಿದೆ. ಪ್ರಯಾಣಿಕರು ಈ ವಿಶೇಷ ರೈಲಿನ ಸೌಲಭ್ಯ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.

ಇದನ್ನೂ ಓದಿ | Train Ticket Cancellation: ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಆರ್‌ಎಸಿ ಟಿಕೆಟ್‌ ರದ್ದು ಪಡಿಸಿದರೆ ಇನ್ನು ಮುಂದೆ ಕೇವಲ 60 ರೂ. ಕಡಿತ

ಮಂತ್ರಾಲಯಕ್ಕೆ ಒಂದೇ ದಿನದಲ್ಲಿ ಹೋಗಿ ಬರಬೇಕೆ? ಈ ರೈಲುಗಳಲ್ಲಿ ಹೊರಡಿ

Mantralaya Tour

ಬೆಂಗಳೂರು: ಮಂತ್ರಾಲಯ ಅತ್ಯಂತ ಪ್ರಸಿದ್ಧ ಯಾತ್ರಾಸ್ಥಳ. ಆಂಧ್ರಪ್ರದೇಶ ಮತ್ತು ಕರ್ನಾಟಕದ ಗಡಿಯಲ್ಲಿರುವ ತುಂಗಾಭದ್ರಾ ನದಿಯ ದಡದಲ್ಲಿದೆ. ಇಲ್ಲಿಗೆ ಹೋಗಿ ಶ್ರೀ ಗುರುರಾಘವೇಂದ್ರ ಸ್ವಾಮಿಯ ದರ್ಶನ ಪಡೆಯಲು ಪ್ರತಿಯೊಬ್ಬರೂ ತವಕಿಸುತ್ತಾರೆ. ನೀವು ಒಂದೇ ದಿನದಲ್ಲೂ ಮಂತ್ರಾಲಯಕ್ಕೆ ಹೋಗಿಬರಲು ಸಾಧ್ಯವಿದೆ. ಆದರೆ ಎಲ್ಲಾ ಟ್ರೈನ್‌ಗಳು ಒಂದೇ ದಿನದಲ್ಲಿ ಮಂತ್ರಾಲಯಕ್ಕೆ (Mantralaya Tour) ಹೋಗಿ ಬರಲು ಅನುಕೂಲಕರವಾಗಿಲ್ಲ. ಹಾಗಾಗಿ ಒಂದೇ ದಿನದಲ್ಲಿ ಮಂತ್ರಾಲಯಕ್ಕೆ ಹೋಗಿ ಬರಲು ಯಾವ ಟ್ರೈನ್ ಸೂಕ್ತ ಎಂಬ ಮಾಹಿತಿ ಇಲ್ಲಿದೆ ನೋಡಿ.

ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗಲು ʼಬಸವ ಎಕ್ಸ್ ಪ್ರೆಸ್ʼ ಬಹಳ ಸೂಕ್ತ. ಇದು ಬೆಂಗಳೂರು ಕೆಂಪೇಗೌಡ ರೈಲು ನಿಲ್ದಾಣದಿಂದ ಸಂಜೆ 4.49ಕ್ಕೆ ಹೊರಟು ಮಧ್ಯರಾತ್ರಿ 12.09ಕ್ಕೆ ಮಂತ್ರಾಲಯಕ್ಕೆ ತಲುಪುತ್ತದೆ.

ನಾಂದೇಡ್ ಎಕ್ಸ್ ಪ್ರೆಸ್ ರೈಲು ರಾತ್ರಿ 11.39ಕ್ಕೆ ಹೊರಟು ಬೆಳಗ್ಗೆ 7.09ಕ್ಕೆ ಮಂತ್ರಾಲಯ ತಲುಪುತ್ತದೆ.

ಕರ್ನಾಟಕ ಎಕ್ಸ್ ಪ್ರೆಸ್  ಟ್ರೈನ್ ಕೆಂಪೇಗೌಡ ರೈಲು ನಿಲ್ದಾಣದಿಂದ ಸಂಜೆ 7.20ಕ್ಕೆ ಹೊರಟು ಬೆಳಗಿನ ಜಾವ 2.24ರ ಹೊತ್ತಿಗೆ ಮಂತ್ರಾಲಯ ತಲುಪಲಿದೆ.

ಲಾತೂರ್ ಎಕ್ಸ್ ಪ್ರೆಸ್ ಟ್ರೈನ್ ಯಶವಂತಪುರ ಟ್ರೈನ್ ಸ್ಟೇಷನ್ ನಿಂದ ಸಂಜೆ 7.15ಕ್ಕೆ ಹೊರಟು ಬೆಳಗಿನ ಜಾವ 1.20ಕ್ಕೆ ಮಂತ್ರಾಲಯ ತಲುಪಲಿದೆ.

ಎಲ್ಲೆಲ್ಲಿ ಹೋಗಬಹುದು?

ಈ ಎಲ್ಲಾ ಟ್ರೈನ್ ಗಳು ಮಂತ್ರಾಲಯ ರೋಡ್ ರೈಲ್ವೇ ಸ್ಟೇಷನ್ ತಲುಪುತ್ತದೆ. ಅಲ್ಲಿಂದ ಮಂತ್ರಾಲಯ ಮಠಕ್ಕೆ 15 ಕಿ.ಮೀ ದೂರವಿದೆ. ಹಾಗಾಗಿ ನೀವು  ರೈಲ್ವೇ ಸ್ಟೇಷನ್ ನಿಂದ ಆಟೋ, ಕ್ಯಾಬ್ ಮಾಡಿಕೊಂಡು ಮಂತ್ರಾಲಯದ ಮಠಕ್ಕೆ ತಲುಪಬಹುದು. ಹಾಗೇ ಮಂತ್ರಾಲಯದಲ್ಲಿ ನಿಮಗೆ ವಿಶ್ರಾಂತಿ ಪಡೆಯಲು ರೂಂಗಳ ವ್ಯವಸ್ಥೆ ಇದೆ. ಹಾಗಾಗಿ ನೀವು ರೂಂ ಬುಕ್ ಮಾಡಿ ಅಲ್ಲಿ ಸ್ನಾನಾದಿಗಳನ್ನು ಮುಗಿಸಿ ನಂತರ ರಾಯರ ದರ್ಶನ ಪಡೆಯಬಹುದು. ಅಲ್ಲಿ ರಾಯರ ಬೃಂದಾವನ ದರ್ಶನ ಮಾಡಿ. ಮಂತ್ರಾಲಯದಿಂದ ಸ್ವಲ್ಪ ದೂರದಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಹೋಗಬಹುದು.

ವಾಪಸ್‌ ಬರಲು ಯಾವ ರೈಲು?:

ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿದ ಬಳಿಕ ವಾಪಸ್ ಬೆಂಗಳೂರು ತಲುಪಲು ಮಂತ್ರಾಲಯದಿಂದ ಟ್ರೈನ್ ವ್ಯವಸ್ಥೆ ಇದೆ. ನಾಂದೇಡ್ ಎಕ್ಸ್ ಪ್ರೆಸ್ ರೈಲು ರಾತ್ರಿ 8.45ಕ್ಕೆ ಮಂತ್ರಾಲಯದಿಂದ ಹೊರಟು ಬೆಳಗ್ಗೆ 4 ಗಂಟೆಗೆ ಕೆಂಪೇಗೌಡ ರೈಲು ನಿಲ್ದಾಣವನ್ನು ತಲುಪಲಿದೆ. ಅಲ್ಲದೇ ಉದ್ಯಾನ ಎಕ್ಸ್ ಪ್ರೆಸ್ ರಾತ್ರಿ 8.45ಕ್ಕೆ ಮಂತ್ರಾಲಯ ರೈಲ್ವೇ ಸ್ಟೇಷನ್ ನಿಂದ ಹೊರಟು ಬೆಳಗ್ಗೆ 6 ಗಂಟೆಗೆ ಕೆಂಪೇಗೌಡ ರೈಲು ನಿಲ್ದಾಣ ತಲುಪುತ್ತದೆ.

ಇದನ್ನೂ ಓದಿ:

ಹಾಗಾಗಿ ನೀವು ಈ ರೈಲುಗಳ ಮೂಲಕ ಒಂದೇ ದಿನದಲ್ಲಿ ಮಂತ್ರಾಲಯಕ್ಕೆ ಪ್ರಯಾಣ ಮಾಡಬಹುದು. ರಜಾ ದಿನಗಳಲ್ಲಿ ನಿಮ್ಮ ಕುಟುಂಬದವರು, ಸ್ನೇಹಿತರ ಜೊತೆಯಲ್ಲಿ ಮಂತ್ರಾಲಯದ ರಾಯರ ದರ್ಶನ ಪಡೆಯಬಹುದು.

Continue Reading

ಕರ್ನಾಟಕ

HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

HD Revanna: ಹೊಳೆನರಸಿಪುರದಲ್ಲಿರುವ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಗಣಪತಿ ಹೋಮ ಮಾಡಿಸಲಾಗಿತ್ತು. ಅಲ್ಲದೆ, ನಿರೀಕ್ಷಣಾ ಜಾಮೀನು ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ ಎಂಬುದಾಗಿ ಜ್ಯೋತಿಷಿಯೊಬ್ಬರು ಹೇಳಿದ್ದರು. ಇದರಿಂದಾಗಿ ತುಸು ನಿರಾಳರಾಗಿದ್ದ ಎಚ್‌.ಡಿ.ರೇವಣ್ಣ ಅವರು ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ನಿಶ್ಚಿಂತೆಯಿಂದ ಇದ್ದರು. ಯಾವ ಪ್ರಯತ್ನವೂ ಫಲಿಸಲಿಲ್ಲ. ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸುತ್ತಲೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದರು.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಿಐಡಿ ಕಚೇರಿಯಲ್ಲಿ ವೈದ್ಯಕೀಯ ಪರೀಕ್ಷೆ (Medical Test) ನಡೆಸಲಾಗುತ್ತಿದೆ. ಇನ್ನು, ಪ್ರಕರಣದಲ್ಲಿ ಯಾವುದೇ ತೊಂದರೆಯಾಗದಿರಲಿ ಎಂದು ಎಚ್‌.ಡಿ.ರೇವಣ್ಣ ಅವರು ಮಾಡಿಸಿದ ಹೋಮ, ಇವರ ಕುರಿತು ಜ್ಯೋತಿಷಿ ನೀಡಿದ ಭವಿಷ್ಯ ಸುಳ್ಳಾಗಿದೆ. ಅವರು ಯಾವಾಗಲೂ ಹಿಡಿದುಕೊಂಡು ತಿರುಗಾಡುತ್ತಿದ್ದ ನಿಂಬೆ ಹಣ್ಣು ಕೂಡ ಮತ್ತಷ್ಟು ಹುಳಿ ಆಗಿದೆ.

ಹೌದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಯಾವುದೇ ಸಮಸ್ಯೆ ಎದುರಾಗದಿರಲಿ, ಮಗ ಬಚಾವಾಗಲಿ, ಜಾಮೀನು ಸಿಗಲಿ ಎಂಬುದು ಸೇರಿ ಹಲವು ದೃಷ್ಟಿಯಿಂದ ಬುಧವಾರ (ಮೇ 1) ಸಂಜೆ ಹೊಳೆನರಸಿಪುರದಲ್ಲಿರುವ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಗಣಪತಿ ಹೋಮ ಮಾಡಿಸಲಾಗಿತ್ತು. ಅಲ್ಲದೆ, ನಿರೀಕ್ಷಣಾ ಜಾಮೀನು ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ ಎಂಬುದಾಗಿ ಜ್ಯೋತಿಷಿಯೊಬ್ಬರು ಹೇಳಿದ್ದರು. ಇದರಿಂದಾಗಿ ತುಸು ನಿರಾಳರಾಗಿದ್ದ ಎಚ್‌.ಡಿ.ರೇವಣ್ಣ ಅವರು ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ನಿಶ್ಚಿಂತೆಯಿಂದ ಇದ್ದರು. ಜಾಮೀನು ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವೂ ಅವರದ್ದಾಗಿತ್ತು ಎಂದು ತಿಳಿದುಬಂದಿದೆ.

ರೇವಣ್ಣ ಅಂದುಕೊಂಡಂತೆ ಯಾವುದೂ ಆಗಲಿಲ್ಲ. ಸುದೀರ್ಘ ವಾದ-ಪ್ರತಿವಾದ ಆಲಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಚ್‌.ಡಿ.ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಇದಾದ ಕೆಲ ಹೊತ್ತಿನಲ್ಲೇ ಎಚ್‌.ಡಿ.ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಪಡಿಸಿಕೊಂಡರು.

ಸಿಐಡಿ ಕಚೇರಿಯಲ್ಲಿ ಆಂಬುಲೆನ್ಸ್‌, ಅಲ್ಲೇ ವೈದ್ಯಕೀಯ ಪರೀಕ್ಷೆ

ಎಚ್‌.ಡಿ.ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, ಭದ್ರತಾ ದೃಷ್ಟಿಯಿಂದ ಆಂಬುಲೆನ್ಸ್‌ ಹಾಗೂ ವೈದ್ಯರನ್ನೇ ಸಿಐಡಿ ಕಚೇರಿಗೆ ಕರೆಸಿದ್ದಾರೆ. ಭದ್ರತಾ ದೃಷ್ಟಿಯಿಂದಾಗಿ ವೈದ್ಯಕೀಯ ಪರೀಕ್ಷೆಗಾಗಿ ರೇವಣ್ಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯದೆ, ಆಂಬುಲೆನ್ಸ್‌ಅನ್ನು ಸಿಐಡಿ ಕಚೇರಿಗೆ ಕರೆಸಲಾಗಿದೆ. ಆಂಬುಲೆನ್ಸ್‌ನಲ್ಲಿಯೇ ಎಚ್‌.ಡಿ.ರೇವಣ್ಣ ಅವರ ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ.

ಪ್ರಜ್ವಲ್‌ ಶರಣಾಗತಿ?

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಇದನ್ನೂ ಓದಿ: HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Continue Reading
Advertisement
Summer Health Tips
ಆರೋಗ್ಯ17 mins ago

Summer Health Tips: ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

karnataka Weather Forecast
ಮಳೆ47 mins ago

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Vistara Editorial
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ, ನಿಷ್ಪಕ್ಷಪಾತ ತನಿಖೆಯಾಗಲಿ

Drinking Water Before Meals
ಆರೋಗ್ಯ1 hour ago

Drinking Water Before Meals: ಊಟಕ್ಕಿಂತ ಎಷ್ಟು ಮೊದಲು ನೀರು ಕುಡಿದರೆ ಒಳ್ಳೆಯದು?

World Laughter Day
ಆರೋಗ್ಯ2 hours ago

World Laughter Day 2024: ಇಂದು ವಿಶ್ವ ನಗುವಿನ ದಿನ; ನಗುನಗುತ ಬಾಳೋಣ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

HD Revanna
ಕರ್ನಾಟಕ7 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ7 hours ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ7 hours ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ8 hours ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌