Livestreame | ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಕಲಾಪ ಲೈವ್ ಸ್ಟ್ರೀಮ್, ನೀವು ನೋಡಬಹುದು! - Vistara News

ಕೋರ್ಟ್

Livestreame | ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಕಲಾಪ ಲೈವ್ ಸ್ಟ್ರೀಮ್, ನೀವು ನೋಡಬಹುದು!

ಸುಪ್ರೀಂ ಕೋರ್ಟ್ ತನ್ನ ಸಾಂವಿಧಾನಿಕ ಪೀಠದ ಕಲಾಪಗಳನ್ನು ಇದೇ ಮೊದಲ ಬಾರಿಗೆ ಲೈವ್‌ಸ್ಟ್ರೀಮಿಂಗ್ (Livestreame) ಮಾಡುವ ಮೂಲಕ ಐತಿಹಾಸಿಕ ಮೈಲುಗಲ್ಲು ನೆಟ್ಟಿದೆ.

VISTARANEWS.COM


on

Supreme Court directed the Maharashtra to videograph the Hindu Jan Aakrosh Sabha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವ ದೆಹಲಿ: ಸುಪ್ರೀಂ ಕೋರ್ಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಾಂವಿಧಾನಿಕ ಪೀಠದ ಕಲಾಪಗಳನ್ನು ಲೈವ್ ಸ್ಟ್ರೀಮಿಂಗ್ (Livestreame) ಮಾಡಲಾಗುತ್ತಿದೆ. ಇದು ನ್ಯಾಯಾಲಯದ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಆಗಿದೆ. ಶಿವಸೇನೆಯ ಪ್ರಕರಣವನ್ನು ಸಂವಿಧಾನ ಪೀಠವು ವಿಚಾರಣೆ ನಡೆಸುತ್ತಿದೆ. ಸುಪ್ರೀಂ ಕೋರ್ಟ್‍ನ ಸಾಂವಿಧಾನಿಕ ಪೀಠ ಕಲಾಪವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

2018ರ ಸೆಪ್ಟೆಂಬರ್ 27ರಂದು ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು, ಸಾಂವಿಧಾನಿಕ ವಿಷಯಗಳಿಗೆ ಸಂಬಂಧಿಸಿದಂತೆ ಲೈವ್ ಟೆಲಿಕಾಸ್ಟ್ ಮ್ತತು ವೆಬ್‌ಕಾಸ್ಟ್‌ನ ಮಹತ್ವದ ಬಗ್ಗೆ ಪ್ರಮುಖ ತೀರ್ಪು ಪ್ರಕಟಿಸಿದ್ದರು. ಈಗ ಸುಪ್ರೀಂ ಕೋರ್ಟ್ ಲೈವ್ ಸ್ಟ್ರೀಮಿಂಗ್ ನಡೆಸುತ್ತಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ನೇತೃತ್ವದ ಪೂರ್ಣ ಪ್ರಮಾಣದ ಸಾಂವಿಧಾನಿಕ ಪೀಠವು ನಿಯಮಿತವಾಗಿ ವಿಚಾರಣೆ ನಡೆಸಲಿದೆ. ಈ ಪೀಠದ ಎಲ್ಲ ಕಲಾಪಗಳನ್ನು ನೇರವಾಗಿ ಲೈವ್ ಮಾಡಲಾಗುತ್ತಿದೆ.

ಮಂಗಳವಾರದ ಕಲಾಪದಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಇಡಬ್ಲ್ಯೂಎಸ್ ಮೀಸಲು ಕಾನೂನು, ದಾವೂದಿ ಬೋಹ್ರಾ ಕಮ್ಯುನಿಟಿ ಧಾರ್ಮಿಕ ಪದ್ಧತಿ, ಸೇನಾ ವರ್ಸಸ್ ಸೇನಾ ಪ್ರಕರಣಗಳನ್ನು ವಿಚಾರಣೆ ನಡೆಸಲಿದೆ. ಈಗಾಗಲೇ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿರುವ ಸೇನಾ ವರ್ಸಸ್ ಸೇನಾ ಕಲಾಪವನ್ನು ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತಿದೆ.

ಇದನ್ನೂ ಓದಿ | Hijab Row | ಹಿಜಾಬ್ ನಿಷೇಧ ಕುರಿತ ತೀರ್ಪು ಕಾಯ್ದಿಟ್ಟ ಸುಪ್ರೀಂ ಕೋರ್ಟ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Horse Racing: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್‌ಗೆ ತಡೆ ನೀಡಿದ ಹೈಕೋರ್ಟ್

Horse Racing: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್ ಆಯೋಜನೆಗೆ ತಡೆ ನೀಡಿ ಸಿಜೆ ಎನ್‌.ವಿ. ಅಂಜಾರಿಯಾ, ನ್ಯಾ.ಕೆ.ವಿ. ಅರವಿಂದ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ.

VISTARANEWS.COM


on

Horse Racing
Koo

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್ ಆಯೋಜನೆಗೆ ಅನುಮತಿ ನೀಡಿ ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ನ ವಿಭಾಗೀಯ ಪೀಠ ಆದೇಶ ನೀಡಿದ್ದು, ಇದರಿಂದ ಸದ್ಯಕ್ಕೆ ರೇಸ್ ಪಂದ್ಯಾವಳಿ (Horse Racing) ಹಾಗೂ ಬೆಟ್ಟಿಂಗ್‌ ಸ್ಥಗಿತಗೊಳ್ಳಲಿದೆ.

ಸಿಜೆ ಎನ್‌.ವಿ. ಅಂಜಾರಿಯಾ, ನ್ಯಾ.ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಆದೇಶ ನೀಡಿದೆ. ಇದರಿಂದ ಇಂದಿನಿಂದ ಆರಂಭವಾಗಬೇಕಿದ್ದ ರೇಸ್‌ ಪಂದ್ಯಾವಳಿಗಳು ತಾತ್ಕಾಲಿಕವಾಗಿ ಅಮಾನತುಗೊಂಡಂತಾಗಿದೆ.

ಕುದುರೆ ರೇಸ್ ಆಯೋಜನೆಗೆ ಅನುಮತಿ ನಿರಾಕರಿಸಿ ರಾಜ್ಯ ಸರ್ಕಾರ 2024ರ ಜೂ.6ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ (ಬಿಟಿಸಿ), ಕರ್ನಾಟಕ ಟ್ರೈನರ್ಸ್‌ ಅಸೋಸಿಯೇಷನ್ಸ್, ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘ, ಕರ್ನಾಟಕ ಜಾಕಿಗಳ ಸಂಘ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠ, ಮಾರ್ಚ್‌ ತಿಂಗಳಲ್ಲಿ ಆನ್‌ ಕೋರ್ಸ್‌ ಮತ್ತು ಆಫ್‌ ಕೋರ್ಸ್‌ ಕುದುರೆ ಪಂದ್ಯ ಮತ್ತು ಬೆಟ್ಟಿಂಗ್‌ ಚಟುವಟಿಕೆಗಳನ್ನು ನಡೆಸಲು ಸರ್ಕಾರ ನೀಡಿದ್ದ ಪರವಾನಗಿಯ ಷರತ್ತಿನಂತೆ ಕುದುರೆ ಪಂದ್ಯ ಆಯೋಜಿಸಬಹುದು ಎಂದು ಮಧ್ಯಂತರ ಆದೇಶ ನೀಡಿತ್ತು. ಇದಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ತಡೆ ನೀಡಿದೆ.

ಬೆಂಗಳೂರು ಟರ್ಫ್‌ ಕ್ಲಬ್‌ನಲ್ಲಿ 2024ರ ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ಆನ್‌ ಕೋರ್ಸ್‌-ಆಫ್‌ ಕೋರ್ಸ್‌ ಕುದುರೆ ಪಂದ್ಯಗಳು ಹಾಗೂ ಬೆಟ್ಟಿಂಗ್ ಚಟುವಟಿಕೆ ನಡೆಸಲು ಅನುಮತಿ ನೀಡುವಂತೆ ಕೋರಿ ಬಿಟಿಸಿ 2024ರ ಮಾ.21ರಂದು ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿತ್ತು. ಆದರೆ, ಸರ್ಕಾರದಿಂದ ಕುದುರೆ ರೇಸ್ ಪಂದ್ಯಾವಳಿ ಆಯೋಜನೆಗೆ ಅನುಮತಿ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಬಿಟಿಸಿ ಮತ್ತಿತರರು ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಜೂ.6ರವರೆಗೆ ಕಾಲಾವಕಾಶ ನೀಡಿ ಹೈಕೋರ್ಟ್‌ ಮೇ 21 ಹಾಗೂ 23ರಂದು ಆದೇಶಿಸಿತ್ತು. ಅದರಂತೆ, ಬಿಟಿಸಿಯ ಮನವಿ ಪರಿಶೀಲಿಸಿದ್ದ ರಾಜ್ಯ ಸರ್ಕಾರ, ತೆರಿಗೆ ವಂಚನೆ ಹಾಗೂ ಬೆಟ್ಟಿಂಗ್‌ ಅಕ್ರಮ ಸೇರಿ ವಿವಿಧ ಅವ್ಯವಹಾರಗಳನ್ನು ಮುಂದಿಟ್ಟುಕೊಂಡು ಕುದುರೆ ಪಂದ್ಯ ಆಯೋಜಿಸಲು ಅನುಮತಿ ನಿರಾಕರಿಸಿ ಜೂ.6ರಂದು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ತಿದ್ದುಪಡಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ | Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

ಭೂ ಕಬಳಿಕೆ; ರೋಹಿಣಿ ಸಿಂಧೂರಿ ಸೇರಿ 6 ಮಂದಿ ವಿರುದ್ಧ ಬಾಲಿವುಡ್‌ ಖ್ಯಾತ ಗಾಯಕ ದೂರು

Land Grabbing

ಬೆಂಗಳೂರು: ಭೂ ಕಬಳಿಕೆ (Land Grabbing) ಮಾಡಿದ್ದಾರೆ ಎಂದು ಆರೋಪಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಸೇರಿ 6 ಮಂದಿ ವಿರುದ್ಧ ಬಾಲಿವುಡ್‌ನ ಖ್ಯಾತ ಗಾಯಕ ಲಕ್ಕಿ ಅಲಿ(Lucky Ali), ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಲಹಂಕ ನ್ಯೂ ಟೌನ್ ಬಳಿ, ಟ್ರಸ್ಟ್‌ಗೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪಿಸಿದ್ದು, ಈ ಬಗ್ಗೆ ದೂರಿನ ಪ್ರತಿಯನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ, ಸಹಾಯಕ ಪೊಲೀಸ್‌ ಕಮಿಷನರ್‌ ಮಂಜುನಾಥ್‌, ಯಲಹಂಕ ನ್ಯೂ ಟೌನ್‌ ಪಿಎಸ್‌ಐ, ತಾಲೂಕು ಸರ್ವೇಯರ್‌ ಮನೋಹರ್‌, ಸುಧೀರ್‌ ರೆಡ್ಡಿ ಹಾಗೂ ಮಧಸೂಧನ್‌ ರೆಡ್ಡಿ ಸೇರಿ ಮಂದಿ ವಿರುದ್ಧ ದೂರು ದಾಖಲಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ತಮ್ಮ ಟ್ರಸ್ಟ್‌ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಇದಕ್ಕೆ ರೋಹಿಣಿ ಸಿಂಧೂರಿ ಸಹಕಾರ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಯಲಹಂಕ ನ್ಯೂಟೌನ್ ಬಳಿ ಲಕ್ಕಿ ಅಲಿ ಟ್ರಸ್ಟ್ ಇದ್ದು, ಭೂ ಕಬಳಿಕೆಯಲ್ಲಿ ಯಲಹಂಕ ನ್ಯೂ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಶಾಮೀಲಾಗಿದ್ದಾರೆ ಎಂದು ದೂರು ನೀಡಿದ್ದಾರೆ. ರೋಹಿಣಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಲೋಕಾಯುಕ್ತಕ್ಕೆ ಗಾಯಕ ಮನವಿ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

NEET-UG Row: ನೀಟ್‌ ಕೌನ್ಸೆಲಿಂಗ್‌ಗೆ ತಡೆ ಇಲ್ಲ ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್

NEET-UG Row: ಕಳೆದ ವಾರ, ನೀಟ್‌ ಪರೀಕ್ಷೆಯಲ್ಲಿ ಆಗಿರಬುದಾದ ಸಣ್ಣ ನಿರ್ಲಕ್ಷ್ಯವನ್ನು ಸಹ ಸಹಿಸಲಾಗುವುದಿಲ್ಲ ಎಂದು ನ್ಯಾಯಾಲಯ ಗುಡುಗಿತ್ತು. ಆದರೆ ಕೌನ್ಸೆಲಿಂಗ್‌ಗೆ ತಡೆ ನೀಡಲು ನಿರಾಕರಿಸಿತ್ತು. “ಯಾರದಾದರೂ ಕಡೆಯಿಂದ 0.001% ನಿರ್ಲಕ್ಷ್ಯವಿದ್ದರೆ ಸದ ಅದನ್ನು ಸಂಪೂರ್ಣವಾಗಿ ಬಗೆಹರಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

VISTARANEWS.COM


on

NEET UG row Result 2024 supreme court
Koo

ಹೊಸದಿಲ್ಲಿ : ವೈದ್ಯಕೀಯ ಪ್ರವೇಶ ಪರೀಕ್ಷೆಯ (NEET-UG 2024) ನಡಾವಳಿಯ ಅಕ್ರಮಗಳ ಕುರಿತು ಎದ್ದಿರುವ ಕೋಲಾಹಲದ (NEET-UG Row) ನಡುವೆ, NEET-UG 2024 ಕೌನ್ಸೆಲಿಂಗ್‌ಗೆ (NEET-UG 2024 counselling) ತಡೆ ನೀಡಲು ಸುಪ್ರೀಂ ಕೋರ್ಟ್ (Supreme Court) ಮತ್ತೊಮ್ಮೆ ನಿರಾಕರಿಸಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ (NTA) ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬಾಕಿ ಉಳಿದಿರುವ ಅರ್ಜಿಗಳ ಜೊತೆಗೆ ಹೊಸ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಟ್ಯಾಗ್ ಮಾಡಿ ಜುಲೈ 8ರಂದು ವಿಚಾರಣೆಗೆ ಮುಂದೂಡಿದೆ. ಗುರುವಾರ, ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ- ಪದವಿಪೂರ್ವ (NEET-UG) 2024ರ ನಡವಳಿಯನ್ನು ಪ್ರಶ್ನಿಸಿ, ಪೇಪರ್ ಸೋರಿಕೆ ಮತ್ತು ಗ್ರೇಸ್ ಮಾರ್ಕ್‌ಗಳನ್ನು ಒಳಗೊಂಡಿರುವ ಅವ್ಯವಹಾರಗಳ ಬಗ್ಗೆ ಸ್ವತಂತ್ರ ತನಿಖೆಯನ್ನು ಕೋರಿ ಮೂರು ಹೈಕೋರ್ಟ್‌ಗಳಲ್ಲಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ತಡೆಹಿಡಿಯಿತು.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎಸ್‌ವಿಎನ್ ಭಟ್ಟಿ ಅವರಿದ್ದ ರಜಾಕಾಲದ ಪೀಠವು, ಎನ್‌ಇಇಟಿ-ಯುಜಿ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸಲ್ಲಿಸಿದ ವರ್ಗಾವಣೆ ಅರ್ಜಿಗಳು ಮತ್ತು ಇದೇ ರೀತಿಯ ಕುಂದುಕೊರತೆಗಳನ್ನು ಎತ್ತುವ ಇತರ 11 ಅರ್ಜಿಗಳನ್ನೂ ಸೇರಿಸಿ ನೋಟಿಸ್ ಜಾರಿ ಮಾಡಿದೆ. ಜುಲೈ 8 ರಂದು ವಿಚಾರಣೆಗೆ ಬರಲಿರುವ ಇದೇ ವಿಷಯದ ಕುರಿತು ಬಾಕಿ ಉಳಿದಿರುವ ಪ್ರಕರಣಗಳ ಜೊತೆಗೆ ಈ ವಿಷಯವನ್ನು ಸೇರಿಸಲಾಗಿದೆ.

ಕಳೆದ ವಾರ, ನೀಟ್‌ ಪರೀಕ್ಷೆಯಲ್ಲಿ ಆಗಿರಬುದಾದ ಸಣ್ಣ ನಿರ್ಲಕ್ಷ್ಯವನ್ನು ಸಹ ಸಹಿಸಲಾಗುವುದಿಲ್ಲ ಎಂದು ನ್ಯಾಯಾಲಯ ಗುಡುಗಿತ್ತು. ಆದರೆ ಕೌನ್ಸೆಲಿಂಗ್‌ಗೆ ತಡೆ ನೀಡಲು ನಿರಾಕರಿಸಿತ್ತು. “ಯಾರದಾದರೂ ಕಡೆಯಿಂದ 0.001% ನಿರ್ಲಕ್ಷ್ಯವಿದ್ದರೆ ಸದ ಅದನ್ನು ಸಂಪೂರ್ಣವಾಗಿ ಬಗೆಹರಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

ನೀಟ್‌ ಪರೀಕ್ಷೆಯನ್ನು ಮೇ 5ರಂದು ನಡೆಸಲಾಗಿತ್ತು. ಈ ತಿಂಗಳ ಆರಂಭದಲ್ಲಿ ಫಲಿತಾಂಶಗಳು ಬಂದವು. ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದೆಂದು ಪರಿಗಣಿಸಲಾದ ನೀಟ್ ಪರೀಕ್ಷೆಯಲ್ಲಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೂರ್ಣ ಅಂಕಗಳನ್ನು ಗಳಿಸಿದ್ದರು. ನಂತರ, ಪ್ರವೇಶ ಪರೀಕ್ಷೆಯ ನಡವಳಿಯಲ್ಲಿ ಅಕ್ರಮಗಳಾಗಿವೆ ಎಂದು ವೈದ್ಯಕೀಯ ಆಕಾಂಕ್ಷಿಗಳು ಆರೋಪಿಸಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ನೀಡಿದ ಗ್ರೇಸ್ ಅಂಕಗಳ ಬಗ್ಗೆಯೂ ಕೋಲಾಹಲ ಉಂಟಾಗಿತ್ತು. ಪ್ರತಿಭಟನೆಯ ನಂತರ, NTA 1500ಕ್ಕೂ ಹೆಚ್ಚು ವೈದ್ಯಕೀಯ ಆಕಾಂಕ್ಷಿಗಳಿಗೆ ಪರೀಕ್ಷೆಯನ್ನು ಮರುಪಡೆಯಲು ಕೇಳಿಕೊಂಡಿತು.

ಏತನ್ಮಧ್ಯೆ, ಯುಜಿಸಿ-ನೆಟ್ ಪೇಪರ್ ಇಂಟರ್‌ನೆಟ್‌ನಲ್ಲಿ ಸೋರಿಕೆಯಾದ ನಂತರ ಪರೀಕ್ಷೆ ರದ್ದತಿಗೆ ಕಾರಣವಾಯಿತು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಎನ್‌ಟಿಎಯಲ್ಲಿ ಸುಧಾರಣೆಗಳ ಕುರಿತು ಶಿಫಾರಸುಗಳನ್ನು ಮಾಡಲು ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

“ಎನ್‌ಟಿಎಯಲ್ಲಿನ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದೆ. ಸಮಿತಿಯು ಎನ್‌ಟಿಎ, ಅದರ ರಚನೆ, ಕಾರ್ಯನಿರ್ವಹಣೆ, ಪರೀಕ್ಷಾ ಪ್ರಕ್ರಿಯೆ, ಪಾರದರ್ಶಕತೆ ಮತ್ತು ಡೇಟಾ ಭದ್ರತಾ ಪ್ರೋಟೋಕಾಲ್‌ಗಳನ್ನು ಇನ್ನಷ್ಟು ಸುಧಾರಿಸಲು ಶಿಫಾರಸುಗಳನ್ನು ಮಾಡುವ ನಿರೀಕ್ಷೆಯಿದೆ. ಶೂನ್ಯ-ದೋಷ ಪರೀಕ್ಷೆಯು ನಮ್ಮ ಬದ್ಧತೆ. ಸಮಿತಿಯು ಜಾಗತಿಕ ತಜ್ಞರನ್ನೂ ಹೊಂದಿರುತ್ತದೆ” ಎಂದು ಅವರು ಹೇಳಿದರು.

ಏನಿದು ಹಗರಣ?

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG Result 2024) ಅಕ್ರಮ ನಡೆದಿದೆ ಎಂದು ನೀಟ್ ಆಕಾಂಕ್ಷಿಗಳು ಒಂದೆಡೆ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ (exam) ಗ್ರೇಸ್ ಅಂಕಗಳನ್ನು (grace marks) ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ (retest) ನಡೆಸಲು ಕೇಂದ್ರ ಸರ್ಕಾರ (central govt) ಗುರುವಾರ ಪ್ರಸ್ತಾವನೆ ಸಲ್ಲಿಸಿದೆ. ನೀಟ್ ಫಲಿತಾಂಶ ಘೋಷಣೆಯಾದ ಬಳಿಕ ಆಕಾಂಕ್ಷಿಗಳು ಮತ್ತು ಪೋಷಕರು ಕೆಲವು ಕೇಂದ್ರಗಳಲ್ಲಿ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ತನಿಖೆ ಮತ್ತು ಮರು ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ.

ನೀಟ್- ಯುಜಿ ಅನ್ನು ಮೊದಲು ಆಲ್ ಇಂಡಿಯಾ ಪ್ರಿ ಮೆಡಿಕಲ್ ಟೆಸ್ಟ್ (AIPMT) ಎಂದು ಕರೆಯಲಾಗುತ್ತಿತ್ತು. ಇದು ದೇಶದಾದ್ಯಂತ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನಡೆಯುವ ಏಕೈಕ ಪ್ರವೇಶ ಪರೀಕ್ಷೆಯಾಗಿದೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಸೇರಿದಂತೆ ಹದಿಮೂರು ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸುವ ಉಸ್ತುವಾರಿ ವಹಿಸಿಕೊಂಡಿದೆ. ಈ ಹಿಂದೆ ಸೆಂಟ್ರಲ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್ (CBSE) ಇದನ್ನು ನಡೆಸುತ್ತಿತ್ತು.

ನೀಟ್ ಯುಜಿ ಫಲಿತಾಂಶಗಳ ಸುತ್ತ ವಿವಾದ

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರಿಪೂರ್ಣ ಅಂಕಗಳನ್ನು ಸಾಧಿಸಲು ಪ್ರಶ್ನೆ ಪತ್ರಿಕೆ ಸೋರಿಕೆಯೇ ಕಾರಣ ಎಂಬ ಆರೋಪಗಳೂ ಕೇಳಿ ಬಂದಿದೆ.

ನೀಟ್ ಯುಜಿ ಪರೀಕ್ಷೆ ಬರೆದ 67 ವಿದ್ಯಾರ್ಥಿಗಳು ಒಟ್ಟು 720 ಅಂಕಗಳನ್ನು ಗಳಿಸಿದ್ದಾರೆ ಎಂಬುದು ಫಲಿತಾಂಶ ತೋರಿಸಿವೆ. ಇದು ಹಿಂದಿನ ವರ್ಷಗಳ ಫಲಿತಾಂಶಗಳಿಗೆ ಹೋಲಿಸಿದರೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ಮಾತ್ರ ಪೂರ್ಣ ಅಂಕ ಗಳಿಸಿದ್ದರೆ, 2022ರಲ್ಲಿ ಮೂವರು, 2021ರಲ್ಲಿ ಇಬ್ಬರು, 2020ರಲ್ಲಿ ಒಬ್ಬರು ಮಾತ್ರ ಪೂರ್ಣ ಅಂಕ ಗಳಿಸಿದ್ದರು. ಈ ಬಾರಿ ಹರ್ಯಾಣದ ಒಂದೇ ಕೇಂದ್ರದಲ್ಲಿ ಆರು ಮಂದಿ ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಇದು ಸಂಶಯಕ್ಕೆ ಆಸ್ಪದ ಮಾಡಿ ಕೊಟ್ಟಿದೆ.

Continue Reading

ಕರ್ನಾಟಕ

Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

Darshan Arrested: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಾತ್ರ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ದರ್ಶನ್‌ ಸೇರಿ ನಾಲ್ವರನ್ನೇ ಕಸ್ಟಡಿಗೆ ಪಡೆದಿರುವ ಪೊಲೀಸರು ಯಾವೆಲ್ಲ ತನಿಖೆ ನಡೆಸಲಿದ್ದಾರೆ. ಕೇಸ್‌ನಲ್ಲಿ ಇನ್ನೂ ಯಾವೆಲ್ಲ ರೀತಿಯ ತನಿಖೆ ಬಾಕಿ ಇದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

actor Darshan Arrested
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎರಡನೇ ಆರೋಪಿಯಾಗಿರುವ ನಟ ದರ್ಶನ್‌ (Darshan Arrested) ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು ಎರಡು ದಿನ ಪೊಲೀಸ್‌ ಕಸ್ಟಡಿಗೆ ವಹಿಸಿದೆ. ಇನ್ನು ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾ ಗೌಡ ಸೇರಿ ಒಟ್ಟು 11 ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇನ್ನು ನ್ಯಾಯಾಲಯಕ್ಕೆ ಪೊಲೀಸರು ಎರಡು ರಿಮ್ಯಾಂಡ್‌ ಅರ್ಜಿಗಳನ್ನು ಸಲ್ಲಿಸಿತ್ತು. ದರ್ಶನ್‌ ಸೇರಿ ಆರು ಆರೋಪಿಗಳನ್ನು ಮಾತ್ರ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂಬುದಾಗಿ ಕೋರಿತ್ತು. ಈಗ ಇಷ್ಟೇ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂಬುದಾಗಿ ಮನವಿ ಮಾಡಿದ್ದು ಏಕೆ ಎಂಬುದೇ ರೋಚಕವಾಗಿದೆ.

ಹೌದು, ನಟ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್‌ನನ್ನು ನ್ಯಾಯಾಲಯವು 2 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಹಣ ಪಡೆದಿದ್ದೇ ಎ 14 ಪ್ರದೋಷ್.‌ ದರ್ಶನ್‌ ಪರಮಾಪ್ತನಾಗಿರುವ ಈತನು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾನೆ. ಇನ್ನು, ಎ 10 ವಿನಯ್ ಸ್ಟೋನಿ ಬ್ರೂಕ್‌ ರೆಸ್ಟೋರೆಸ್ಟ್‌ನ ಮಾಲೀಕನಾಗಿದ್ದಾನೆ. ವಿನಯ್‌ ಮಾವ ಪಟ್ಟಣಗೆರೆ ಜಯಣ್ಣ ಅವರ ಮಾಲೀಕತ್ವದ ಶೆಡ್‌ನಲ್ಲೇ ಕೊಲೆ ನಡೆದಿದೆ. ಮತ್ತೊಂದೆಡೆ, ರೇಣುಕಾಸ್ವಾಮಿಯ ಮೊಬೈಲ್‌ಅನ್ನು ಧನರಾಜ್‌ ಬಿಸಾಡಿದ್ದಾನೆ. ಹಾಗಾಗಿ, ಪೊಲೀಸರು ನಾಲ್ವರನ್ನು ಕಸ್ಟಡಿಗೆ ಪಡೆದಿದ್ದಾರೆ.

ಪೊಲೀಸರ ಪರವಾಗಿ ವಾದ ಮಂಡಿಸಿದ ಎಸ್‌ಪಿಪಿ ಪ್ರಸನ್ನಕುಮಾರ್‌, “ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ರೇಣುಕಾಸ್ವಾಮಿಯ ಮೊಬೈಲ್‌ ಪತ್ತೆಯಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್‌ ವರದಿ ಬರಬೇಕು. ಮೃತ ವ್ಯಕ್ತಿಯ ಒಳಾಂಗಗಳ ಎಫ್‌ಎಸ್‌ಎಲ್‌ ವರದಿ, ಆರೋಪಿಗಳ ಎಫ್‌ಎಸ್‌ಎಲ್‌ ವರದಿ ಬರಬೇಕು. ಹಾಗಾಗಿ, ದರ್ಶನ್‌ ಸೇರಿ ಕೆಲ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂಬುದಾಗಿ ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾಯಾಧೀಶ ವಿಶ್ವನಾಥ್‌ ಸಿ. ಗೌಡರ್‌ ಅವರು ನಾಲ್ವರನ್ನು ಪೊಲೀಸ್‌ ಕಸ್ಟಡಿಗೆ ವಹಿಸಿದರು. ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಕೃತ್ಯ ನಡೆಸಿದಾಗ ಧರಿಸಿದ್ದ ಬಟ್ಟೆಗಳು, ಮೊಬೈಲ್‌ಗಳು, ಸ್ಥಳ ಮಹಜರು ವೇಳೆ ಹಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ಕಲೆಹಾಕಿದ್ದಾರೆ.

ಪವಿತ್ರಾ ಗೌಡ ಸೇರಿ 11 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಇವರನ್ನು ಇಂದೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡಲಾಗುತ್ತದೆ. ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ , ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ. ಜೂನ್‌ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು. ಜೂನ್ 11ರಂದು ಹತ್ಯೆ ಸಂಬಂಧ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದು ಬಂಧಿಸಲಾಗಿತ್ತು. ಅದೇ ದಿನ ಪವಿತ್ರಾ ಗೌಡರನ್ನೂ ಬಂಧಿಸಲಾಗಿತ್ತು.

ಇದನ್ನೂ ಓದಿ: Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

Continue Reading

ಮೈಸೂರು

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Mysuru News : ಪತ್ನಿಯ ಶೀಲ ಶಂಕಿಸಿದ ಪಾಪಿ ಪತಿಯೊಬ್ಬ ಸ್ಯಾನಿಟೈಜರ್ ಸುರಿದು ಬೆಂಕಿ ಹಚ್ಚಿದ್ದ. ಗಂಭೀರ ಗಾಯಗೊಂಡಿದ್ದ ಮಹಿಳೆ ನರಳಾಡಿ (Murder case) ಮೃತಪಟ್ಟಿದ್ದಳು. ಇದೀಗ ಕೃತ್ಯ ನಡೆಸಿದ ಆರೋಪಿಗೆ 4 ವರ್ಷದ ನಂತರ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

VISTARANEWS.COM


on

By

Mysuru News
ಸಾಂದರ್ಭಿಕ ಚಿತ್ರ
Koo

ಮೈಸೂರು: ಪತ್ನಿ ಶೀಲ ಶಂಕಿಸಿ ಕೊಲೆ (Murder Case) ಮಾಡಿದ (Mysuru News) ಆರೋಪಿಗೆ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ ಮೈಸೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ರವಿ ಜೀವಾವಧಿ ಶಿಕ್ಷೆಗೆ ಒಳಗಾದವನು. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇಬೂರು ಗ್ರಾಮದ ನಿವಾಸಿಯಾದ ರವಿ ಎಂಬಾತ ಪತ್ನಿ ಅಮುದಾಳ ಶೀಲ ಶಂಕಿಸಿ ಕೊಲೆ ಮಾಡಿದ್ದ.

ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ರವಿಗೆ ಐಪಿಸಿ ಸೆಕ್ಷನ್ 498(ಎ ) ಪ್ರಕಾರ 2 ವರ್ಷ ಕಠಿಣ ಶಿಕ್ಷೆ ಒಂದು ಸಾವಿರ ದಂಡ ಹಾಗೂ ಐಪಿಸಿ ಸೆಕ್ಷನ್ 302 ಪ್ರಕಾರ ಜೀವಾವಧಿ ಶಿಕ್ಷೆ ಹಾಗೂ ಐದು ಸಾವಿರ ದಂಡ ಹಾಕಿ ಆದೇಶಿಸಿದೆ. ಮೈಸೂರು 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್ ತೀರ್ಪು ನೀಡಿದ್ದಾರೆ.

ಮಕ್ಕಳಿಬ್ಬರು ಅನಾಥ

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇಬೂರು ಗ್ರಾಮದ ಸುಬ್ಬ ಅಲಿಯಾಸ್‌ ರವಿ 10 ವರ್ಷದ ಹಿಂದೆ ನಂಜನಗೂಡು ಪಟ್ಟಣದ ರಾಜಾಜಿ ಕಾಲೋನಿಯ ನಂಜುಂಡ ಅವರ ಮಗಳು ಅಮುದಾರವರನ್ನು ಮದುವೆ ಆಗಿದ್ದ. ಈ ದಂಪತಿಗೆ 9 ಹಾಗೂ 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದರು.

ಮದುವೆಯಾದ 2-3 ವರ್ಷಕ್ಕೆ ಆರೋಪಿ ರವಿ ತನ್ನ ವಾರೆಸೆ ಶುರು ಮಾಡಿದ್ದ. ಅಮುದಾಳಿಗೆ ನೀನು ಬೇರೆಯವರ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ ಎಂದು ಶೀಲ ಶಂಕಿಸಿ ಪ್ರತಿದಿನ ಕುಡಿದು ಬಂದು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ.

ಹೀಗೆ ಕಳೆದ 2020ರ ಡಿಸೆಂಬರ್‌ 6ರಂದು ಸಂಜೆ 4-30ರ ಸುಮಾರಿಗೆ ಕುಡಿದು ಬಂದ ರವಿ, ಅಮುದಾಳೊಂದಿಗೆ ಜಗಳ ತೆಗೆದಿದ್ದ. ಈ ವೇಳೆ ರವಿಗೆ ಊಟ ಬಡಿಸುತ್ತಿದ್ದಾಗ ಅಮುದಾ ಮೇಲೆ ಸ್ಯಾನಿಟೈಜರ್ ಸುರಿದು ಬೆಂಕಿ ಹಚ್ಚಿದ್ದ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಆಮುದಾಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಮುದಾ ಮೃತಪಟ್ಟಿದ್ದಳು.

ಇದನ್ನೂ ಓದಿ: Hassan Shoot Out : ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ಇಬ್ಬರ ಹತ್ಯೆಗೈದ ಪಾತಕಿಗಳು!

ಮೃತಳ ಸಹೋದರ ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ರವಿ ವಿರುದ್ಧ ಕಲಂ 498(ಎ), 302 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆ ಮಾಡಿ ಅಂದಿನ ಪೊಲೀಸ್ ವೃತ್ತ ನಿರೀಕ್ಷಕರಾದ ಲಕ್ಷ್ಮೀಕಾಂತ ತಳವಾರ್‌ರವರು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್, ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪಿಯು ಅಪರಾಧ ಎಸಗಿರುವುದು ಸಾಬೀತಾಗಿದೆ. ಹೀಗಾಗಿ ಆರೋಪಿಗೆ ಕಲಂ 498(ಎ) ಐಪಿಸಿ ಅಡಿಯ ಅಪರಾಧಕ್ಕೆ 2 ವರ್ಷ ಕಠಿಣ ಶಿಕ್ಷೆ ಮತ್ತು ರೂ.1.000/- ದಂಡವನ್ನು ವಿಧಿಸಿದ್ದು ಮತ್ತು ಕಲಂ 302 ಐಪಿಸಿ ಅಡಿಯ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಮತ್ತು ರೂ.5,000/- ದಂಡವನ್ನು ವಿಧಿಸಿ ತೀರ್ಪು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
PGCET 2024
ಕರ್ನಾಟಕ1 min ago

PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

Liquor Price karnataka
ಕರ್ನಾಟಕ3 mins ago

Liquor Price Karnataka: ಶ್ರೀಮಂತರಿಗೆ ಮತ್ತು, ಬಡವರಿಗೆ ಕುತ್ತು! ಪ್ರೀಮಿಯಂ ಮದ್ಯ ದರ ಇಳಿಕೆ, ಬಡವರ ಎಣ್ಣೆ ರೇಟ್‌ ಏರಿಕೆ?

Lok Sabha Speaker
ದೇಶ18 mins ago

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Tharun Sudhir and sonal monteiro love story support By Darshan
ಸ್ಯಾಂಡಲ್ ವುಡ್22 mins ago

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Kenya Violence
ವಿದೇಶ30 mins ago

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

ಕಥೆಕೂಟ literature meet
ಕಲೆ/ಸಾಹಿತ್ಯ37 mins ago

ಕಥೆ ನಿಜ, ಕಥೆಗಾರ ಸುಳ್ಳು: ಕಥೆಕೂಟ ಸಮಾವೇಶದಲ್ಲಿ ಟಿಎನ್‌ ಸೀತಾರಾಮ್‌

CM Siddaramaiah
ಕರ್ನಾಟಕ40 mins ago

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

Jayam Ravi's wife Aarti Ravi removes all her Instagram photos
ಕಾಲಿವುಡ್43 mins ago

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ1 hour ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌