Janardhan Reddy Son | ಜನಾರ್ದನ ರೆಡ್ಡಿ ಪುತ್ರನ ಸಿನಿಮಾ ಟೈಟಲ್​​ ಲಾಂಚ್​​ಗೆ ಕ್ಷಣಗಣನೆ! - Vistara News

ಟಾಲಿವುಡ್

Janardhan Reddy Son | ಜನಾರ್ದನ ರೆಡ್ಡಿ ಪುತ್ರನ ಸಿನಿಮಾ ಟೈಟಲ್​​ ಲಾಂಚ್​​ಗೆ ಕ್ಷಣಗಣನೆ!

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಅಭಿನಯದ ಮೊದಲ ಸಿನಿಮಾದ ಟೈಟಲ್ ಲಾಂಚ್​​ಗೆ ವೇದಿಕೆ ಸಿದ್ಧವಾಗಿದ್ದು, ಸೆಪ್ಟೆಂಬರ್ 29ಕ್ಕೆ ಸಿನಿಮಾ ಹೆಸರು ಲಾಂಚ್ ಆಗಲಿದೆ.

VISTARANEWS.COM


on

Janardhan Reddy Son
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪುತ್ರ ಈಗಾಗಲೇ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಾಗಿದೆ. ಕಿರೀಟಿ ಗ್ರ್ಯಾಂಡ್ ಎಂಟ್ರಿಗೆ ವೇದಿಕೆ ಸಜ್ಜಾಗಿದ್ದು, ಇಂಟ್ರಡಕ್ಷನ್ ಟೀಸರ್ ಮೂಲಕ ಗಮನ ಸೆಳೆದಿರುವ ಕಿರೀಟಿ (Janardhan Reddy Son) ಇದೀಗ ಟೈಟಲ್ ಮೂಲಕ ಹವಾ ಎಬ್ಬಿಸಲು ಸಿದ್ಧರಾಗಿದ್ದಾರೆ. ಕಿರೀಟಿ ರೆಡ್ಡಿ ಹುಟ್ಟುಹಬ್ಬದ ದಿನವೇ ಸ್ಪೆಷಲ್ ಗಿಫ್ಟ್ ಕೊಡಲು ಸಿನಿಮಾ ತಂಡ ಸಿದ್ಧವಾಗಿದೆ.

ಸೆಪ್ಟೆಂಬರ್ 29ಕ್ಕೆ ಕಿರೀಟಿ ಹುಟ್ಟುಹಬ್ಬದ ಹಿನ್ನೆಲೆ ಸಿನಿಮಾ ಟೈಟಲ್ ಅನಾವರಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಿರೀಟಿ ಅಭಿನಯದ ಮೊದಲ ಚಿತ್ರದಲ್ಲೇ ಸ್ಟಾರ್​ಗಳ ದಂಡು ಇದೆ. ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ಜೆನಿಲಿಯಾ, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗ ಇದೆ. ಚಿತ್ರದ ತಾಂತ್ರಿಕ ವರ್ಗ ಕೂಡ ಸಾಕಷ್ಟು ಗಮನ ಸೆಳೆಯುತ್ತಿದೆ. ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ, ಬಾಹುಬಲಿ ಖ್ಯಾತಿಯ ಸೆಂಥಿಲ್ ಕುಮಾರ್ ಕ್ಯಾಮೆರಾ ವರ್ಕ್, ರವೀಂದರ್ ಕಲಾ ನಿರ್ದೇಶನ, ಪೀಟರ್ ಹೆನ್ ಆಕ್ಷನ್ ಚಿತ್ರಕ್ಕಿದೆ.

ಜನಾರ್ದನ ರೆಡ್ಡಿ ಪುತ್ರ ಕಿರೀಟಿ.

ರಾಜಮೌಳಿ ಸಾಥ್
ಈ ಹಿಂದೆ ಅದ್ಧೂರಿಯಾಗಿ ನೆರವೇರಿದ್ದ ಕಿರೀಟಿ ಸಿನಿಮಾ ಮುಹೂರ್ತ ಕಾರ್ಯಕ್ರಮದಲ್ಲಿ ಸ್ಟಾರ್ ನಿರ್ದೇಶಕ ಎಸ್.ಎಸ್.ರಾಜಮೌಳಿ ಸಾಥ್ ನೀಡಿದ್ದರು. ಇಂಟ್ರಡಕ್ಷನ್ ಟೀಸರ್ ಮೂಲಕವೇ ಕಿರೀಟಿ ರೆಡ್ಡಿ ಒಂದೇ ನೋಟಕ್ಕೆ ಎಲ್ಲರ ಗಮನ ಸೆಳೆದಿದ್ದರು. ಸದ್ಯ ಕಿರೀಟಿ ಮೊದಲ ಚಿತ್ರದ ಬಗ್ಗೆ ಲೇಟೆಸ್ಟ್ ಅಪ್‌ಡೇಟ್ ಸಿಕ್ಕಿದ್ದು, ಟೈಟಲ್ ಅನಾವರಣಕ್ಕೆ ಕೌಂಟ್​ಡೌನ್ ಶುರುವಾಗಿದೆ. ಈ ಮೂಲಕ ನಟ ಕಿರೀಟಿ ಹುಟ್ಟುಹಬ್ಬಕ್ಕೆ ಗಿಫ್ಟ್ ನೀಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

ಸೆಪ್ಟೆಂಬರ್ 29ರ ಸಂಜೆ 6.39ಕ್ಕೆ ವಾರಾಹಿ ಚಲನಚಿತ್ರ ಯುಟ್ಯೂಬ್ ಚಾನೆಲ್​ನಲ್ಲಿ ಕಿರೀಟಿ ಮೊದಲ ಚಿತ್ರದ ಟೈಟಲ್ ಲಾಂಚ್ ಆಗಲಿದೆ. ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಪ್ರೊಡಕ್ಷನ್ ಬಂಡವಾಳ ಹೂಡಿ, ಸಿನಿಮಾ ನಿರ್ಮಿಸುತ್ತಿದೆ. ಅಲ್ಲದೆ ಇದು ವಾರಾಹಿ ಸಂಸ್ಥೆಯ 15ನೇ ಚಿತ್ರ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: Nano Narayanappa | ಕೆಜಿಎಫ್ ಸಿನಿಮಾ ತಾತ ಈಗ ಫುಲ್ ಟೈಂ ಹೀರೋ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kannapp Teaser : ವಿಷ್ಣು ಮಂಚು ನಾಯಕನಾಗಿ ನಟಿಸಿರುವ `ಕಣ್ಣಪ್ಪ’ ಚಿತ್ರದ ಟೀಸರ್‌ ಬಿಡುಗಡೆ

Kannapp Teaser: ಟೀಸರ್‌ ಲಾಂಚ್‌ ವೇಳೆ ಮಾತನಾಡಿದ ಮೋಹನ್ ಬಾಬು, ಪರಮೇಶ್ವರನ ಒಪ್ಪಿಗೆಯ ಮೇರೆಗೆ ನಾವು ಈ ಕಣ್ಣಪ್ಪ ಸಿನಿಮಾ ಮಾಡಿದ್ದೇವೆ. ಅಚ್ಚು ಕಟ್ಟಾಗಿ ಸಿನಿಮಾ ಮೂಡಿ ಬಂದಿದೆ. ಬಹುಭಾಷೆಯ ತಾರೆಯರು ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ. ಅದ್ಧೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದರು.

VISTARANEWS.COM


on

Kannappa Teaser Kannada Vishnu Manchu Mohan Babu
Koo

ಬೆಂಗಳೂರು: ವಿಷ್ಣು ಮಂಚು ಅವರ ಕನಸಿನ ಯೋಜನೆಯಾದ ‘ಕಣ್ಣಪ್ಪ’ (Kannappa Movie) ಎವಿಎ ಎಂಟರ್‌ಟೈನ್‌ಮೆಂಟ್ಸ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಬ್ಯಾನರ್‌ಗಳಲ್ಲಿ ಅದ್ಧೂರಿಯಾಗಿ (Kannapp Teaser) ಚಿತ್ರೀಕರಣಗೊಳ್ಳುತ್ತಿದೆ. ಈ ಚಿತ್ರವನ್ನು ಡಾ.ಮೋಹನ್ ಬಾಬು ನಿರ್ಮಿಸಿದ್ದಾರೆ ಮತ್ತು ಮುಖೇಶ್ ಕುಮಾರ್ ಸಿಂಗ್ ನಿರ್ದೇಶಿಸಿದ್ದಾರೆ. ಶುಕ್ರವಾರ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್‌ ಲಾಂಚ್ ಕಾರ್ಯಕ್ರಮವನ್ನು ಅಷ್ಟೇ ಅದ್ಧೂರಿಯಾಗಿ ಚಿತ್ರತಂಡ ಆಯೋಜಿಸಲಾಗಿತ್ತು.

ಟೀಸರ್‌ ಲಾಂಚ್‌ ವೇಳೆ ಮಾತನಾಡಿದ ಮೋಹನ್ ಬಾಬು, ಪರಮೇಶ್ವರನ ಒಪ್ಪಿಗೆಯ ಮೇರೆಗೆ ನಾವು ಈ ಕಣ್ಣಪ್ಪ ಸಿನಿಮಾ ಮಾಡಿದ್ದೇವೆ. ಅಚ್ಚು ಕಟ್ಟಾಗಿ ಸಿನಿಮಾ ಮೂಡಿ ಬಂದಿದೆ. ಬಹುಭಾಷೆಯ ತಾರೆಯರು ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ. ಅದ್ಧೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದರು.

ವಿಷ್ಣು ಮಂಚು ಹೇಳಿದ್ದೇನು?

“ಮೊದಲ ದಿನದಿಂದ ಇಲ್ಲಿಯವರೆಗೆ ‘ಕಣ್ಣಪ್ಪ’ ಚಿತ್ರವನ್ನು ಪ್ರತಿಯೊಬ್ಬ ಪ್ರೇಕ್ಷಕ ಕುತೂಹಲದಿಂದಲೇ ನೋಡುತ್ತಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾಕ್ಕೆ ಸಿಗುತ್ತಿರುವ ಬೆಂಬಲ ನೋಡಿದ್ದೇನೆ. ಇದೀಗ ಆ ಕನಸು ನಿಮ್ಮೆಲ್ಲರ ಮುಂದೆ ತೆರೆದಿಡುವ ಹಂತಕ್ಕೆ ಬಂದಿದೆ. ಕಣ್ಣಪ್ಪ ಸಿನಿಮಾ ಪಯಣ 2014 -15ರಲ್ಲಿ ಶುರುವಾಗಿತ್ತು. ತಂದೆ ಮೋಹನ್ ಬಾಬು, ವಿನ್ನಿ ಮತ್ತು ಸಹೋದರ ವಿನಯ್ ಅವರ ಪ್ರೋತ್ಸಾಹದಿಂದಾಗಿ ಇದೀಗ ಅದು ಸಿದ್ಧವಾಗುತ್ತಿದೆ”

ಇದನ್ನೂ ಓದಿ: Actor Darshan: ಎಷ್ಟೇ ದಿನ ಆದರೂ ಚಂದ್ರಣ್ಣನ ಶವ ಎತ್ತಲ್ಲ; ಅನು ತಂದೆ ನಿಧನಕ್ಕೆ ಸಂಬಂಧಿಕರ ಕಣ್ಣೀರು

“ಕಣ್ಣಪ್ಪ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ ಎಂದು ಶಂಕರಾಚಾರ್ಯರು ಹೇಳಿದ್ದರು. 14 ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. 18ನೇ ಶತಮಾನದಲ್ಲಿ ಬ್ರಿಟಿಷರೂ ಇಂಗ್ಲಿಷ್‌ನಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ಇದೆಲ್ಲವನ್ನು ಅಧ್ಯಯನ ನಡೆಸಿ ಈ ಸಿನಿಮಾ ಮಾಡಿದ್ದೇವೆ. ಅಷ್ಟೇ ಎಚ್ಚರಿಕೆಯಿಂದ ಈ ಸಿನಿಮಾ ಮಾಡಿದ್ದೇವೆ” ಎಂದರು ವಿಷ್ಣು ಮಂಚು.

ನಿರ್ದೇಶಕ ಮುಕೇಶ್ ಕುಮಾರ್ ಸಿಂಗ್ ಮಾತನಾಡಿ, ʻʻಕಣ್ಣಪ್ಪ ಚಿತ್ರದ ನನ್ನ ಶಕ್ತಿಯೇ ನನ್ನ ಕಲಾವಿದರು. ವಿಷ್ಣು ಅವರ ನಟನೆ ಮತ್ತು ಅವರು ಎದುರಿಸಿದ ಕಷ್ಟಗಳ ಬಗ್ಗೆ ನಾನು ಹೇಳಲಾರೆ. ಕೊರೆಯುವ ಚಳಿಯಲ್ಲೂ ಇಡೀ ತಂಡ ಶ್ರಮಿಸಿದೆ. ವಿಷ್ಣು, ಶರತ್ ಕುಮಾರ್, ಮೋಹನ್ ಬಾಬು ನನ್ನ ನಿರೀಕ್ಷೆಗೂ ಮೀರಿದ ಬೆಂಬಲ ನೀಡಿದ್ದಾರೆʼʼ ಎಂದರು.

ʻಶರತ್ ಕುಮಾರ್ ಮಾತನಾಡಿ ʻʻ, ಕಣ್ಣಪ್ಪ ಕೇವಲ ಸಿನಿಮಾ ಅಲ್ಲ; ಇದು ನಮ್ಮ ಇತಿಹಾಸ. ಪ್ರತಿಯೊಬ್ಬರೂ ತಮ್ಮ ತಮ್ಮ ಪಾತ್ರಗಳನ್ನು ಜೀವಿಸಿದ್ದಾರೆ. ಈಗಲೂ ನಾವು ಆ ಪಾತ್ರಗಳಲ್ಲಿ ಉಳಿದಿದ್ದೇವೆ. ಅಷ್ಟೊಂದು ಅಚ್ಚುಕಟ್ಟಾಗಿ ಸಿನಿಮಾ ಮೂಡಿಬಂದಿದೆ. ಎಲ್ಲರೂ ಇತಿಹಾಸವನ್ನು ಮರೆಯುತ್ತಿದ್ದಾರೆ. ನಾವು ನಮ್ಮ ಇತಿಹಾಸವನ್ನು ಹೇಳಬೇಕು. ಎಲ್ಲರೂ ಕಣ್ಣಪ್ಪನನ್ನು ನೋಡಬೇಕು” ಎಂದು ಹೇಳಿದರು.

ಮಧುಬಾಲಾ ಮಾತನಾಡಿ, “ಕಣ್ಣಪ್ಪನಂಥ ಪ್ರಾಜೆಕ್ಟ್‌ನಲ್ಲಿ ನಟಿಸಲು ನನಗೆ ಸಂತೋಷ ಮತ್ತು ಹೆಮ್ಮೆ ಇದೆ. ನನಗೆ ಇಂತಹ ಒಳ್ಳೆಯ ಅವಕಾಶ ನೀಡಿದ ಮೋಹನ್ ಬಾಬು ಮತ್ತು ವಿಷ್ಣು ಅವರಿಗೆ ಧನ್ಯವಾದಗಳು. ವಿಷ್ಣು ಮಂಚು ಅವರಿಗೆ ಸಿನಿಮಾ ನಿರ್ಮಾಣದಲ್ಲಿ ಸಾಕಷ್ಟು ಜ್ಞಾನವಿದೆ. ವಿಷ್ಣು ಅವರಂತಹವರು ಈ ಸಿನಿಮಾ ಮೂಲಕ ದೊಡ್ಡ ರಿಸ್ಕ್‌ ತೆಗೆದುಕೊಂಡಿದ್ದಾರೆ. ಒಂದು ದೊಡ್ಡ ಯಜ್ಞದಲ್ಲಿ ಪಾಲ್ಗೊಂಡಂತೆ ಭಾಸವಾಯಿತು” ಎಂದಿದ್ದಾರೆ.

 ‘ಕಣ್ಣಪ್ಪ’ ಸಿನಿಮಾವು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಕಾಳಹಸ್ತಿಯಲ್ಲಿ ಸಿನಿಮಾದ ಮುಹೂರ್ತ ಮಾಡಲಾಗಿತ್ತು. ತೆಲುಗಿನಲ್ಲೂ ಕೃಷ್ಣಂರಾಜು ‘ಭಕ್ತ ಕಣ್ಣಪ್ಪ’ ಚಿತ್ರದಲ್ಲಿ ನಟಿಸಿದ್ದರು.

Continue Reading

Latest

Akira Nandan: ಅಕಿರಾ ನಂದನ್‌; ಆರೂವರೆ ಅಡಿ ಎತ್ತರದ ಪವನ್ ಕಲ್ಯಾಣ್ ಪುತ್ರನಿಗೆ ಭಾರಿ ಡಿಮ್ಯಾಂಡ್‌!

Akira Nandan: ಪವನ್ ಕಲ್ಯಾಣ್ ಪುತ್ರ ಅಕಿರಾ ನಂದನ್ ಇಂಟರ್ನೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ. ಅಕಿರಾ ನಂದನ್ ಯಾರು ಎನ್ನುವುದರ ಕುರಿತು ಜನರು ಸಿಕ್ಕಾಪಟ್ಟೆ ಹುಡುಕುತ್ತಿದ್ದಾರೆ. ಪವನ್ ಕಲ್ಯಾಣ್ ಹಾಗೂ ರೇಣು ದೇಸಾಯಿ ಪುತ್ರನಾದ ಅಕಿರಾ ನಂದನ್‌ಗೆ ಕ್ರಿಕೆಟ್, ಡ್ಯಾನ್ಸ್ ಬಗ್ಗೆ ವಿಪರೀತವಾದ ಒಲವಿದೆಯಂತೆ. ಹಾಗೇ ಪಿಯಾನೋ ಕೂಡ ಇವನ ಇಷ್ಟದ ಪಟ್ಟಿಯಲ್ಲಿದೆ. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಪವನ್ ಕಲ್ಯಾಣ್ ತಮ್ಮ ಮಗ ಅಕಿರಾ ನಂದನ್ ಹಾಗೂ ತನ್ನ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

VISTARANEWS.COM


on

Pawan Kalyan
Koo

ಹೈದರಾಬಾದ್ : ಖ್ಯಾತ ಟಾಲಿವುಡ್ ನಟ ಪವನ್ ಕಲ್ಯಾಣ್ (Akira Nandan) ಅವರು ಸಿನಿಮಾ ರಂಗದಲ್ಲಿ ಹೆಸರು ಮಾಡಿ ನಂತರ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಇದೀಗ ಅವರು 2024ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ತಮ್ಮ ಆಡಳಿತವನ್ನು ಕೈಗೆ ತೆಗೆದುಕೊಂಡಿದ್ದಾರೆ. ಚುನಾವಣೆಯ ನಂತರ ಅವರು ತಮ್ಮ ಹಿರಿಯ ಪುತ್ರ ಅಕಿರಾ ನಂದನ್ ಜೊತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಹಾಗಾಗಿ ಇದೀಗ ಅಕಿರಾ ನಂದನ್ ಇಂಟರ್‌ನೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ. ಅವನು ಯಾರು ಎನ್ನುವುದರ ಬಗ್ಗೆ ಜನರು ಹುಡುಕಾಟ ಮಾಡುತ್ತಿದ್ದಾರೆ, ಹಾಗಾಗಿ ಅಕಿರಾ ನಂದನ್ ಬಗ್ಗೆ ಇಲ್ಲಿದೆ ಮಾಹಿತಿ.

ಅಕಿರಾ ನಂದನ್, ಪವನ್ ಕಲ್ಯಾಣ್ ಅವರ ಮೊದಲ ಪುತ್ರ. ಅಕಿರಾ ನಂದನ್ ಏಪ್ರಿಲ್ 8, 2004ರಲ್ಲಿ ಪವನ್ ಕಲ್ಯಾಣ್ ಮತ್ತು ಅವರ ಮಾಜಿ ಪತ್ನಿ ರೇಣು ದೇಸಾಯಿ ದಂಪತಿಯ ಪುತ್ರನಾಗಿ ಜನಿಸಿದ್ದ. ಅವನಿಗೆ ಆಧ್ಯಾ ಕೊನಿಡೆಲಾ ಎಂಬ ತಂಗಿಯೂ ಇದ್ದಾಳೆ. ಇನ್ನು ಅಕಿರಾ ನಂದನ್ ಬಣ್ಣದ ಲೋಕದಲ್ಲೂ ಕಾಣಿಸಿಕೊಂಡಿದ್ದಾನೆ. ತನ್ನ ತಾಯಿ ನಿರ್ದೇಶನದ ‘ಇಷ್ಕ್ ವಾಲಾ ಲವ್’ (2014) ಚಿತ್ರದಲ್ಲಿ ನಟಿಸಿದ್ದ. ಆತ ನಟನೆಯಲ್ಲಿ ಮುಂದುವರಿಯುತ್ತಾನೆ ಎಂಬ ಊಹಾಪೋಹಗಳು ಕೇಳಿ ಬಂದ ಕಾರಣ ತಾಯಿ ರೇಣು ದೇಸಾಯಿ ತಮ್ಮ ಮಗನಿಗೆ ಈಗ ನಟನೆಯಲ್ಲಿ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ.

ಅಕಿರಾಗೆ ಕ್ರಿಕೆಟ್‌, ಡ್ಯಾನ್ಸ್ ಬಗ್ಗೆ ವಿಪರೀತವಾದ ಒಲವಿದೆಯಂತೆ. ಹಾಗೆಯೇ ಪಿಯಾನೋ ಕೂಡ ಇವನ ಇಷ್ಟದ ಪಟ್ಟಿಯಲ್ಲಿದೆ. ಹಾಗಾಗಿ ಅಕಿರಾ ಮುಂದೆ ಯಾವುದರಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಾನೆ ಎಂಬುದನ್ನು ನೋಡಬೇಕಿದೆ.
ಅಕಿರಾ ನಂದನ್ ಆಗಾಗ ತಂದೆ ಪವನ್ ಕಲ್ಯಾಣ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದು, ವಿಧಾನ ಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಅವರ ಐತಿಹಾಸಿಕ ಗೆಲುವಿನ ನಂತರ ಅವರು ತಮ್ಮ ಮಗ ಅಕಿರಾ ನಂದನ್ ಹಾಗೂ ತನ್ನ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಇತ್ತೀಚೆಗೆ ನವದೆಹಲಿಗೆ ತೆರಳಿದ್ದರು. ಅಂದ ಹಾಗೆ ಅಕಿರಾ ನಂದನ್‌ 6 ಅಡಿ 4 ಇಂಚು ಎತ್ತರ ಇದ್ದಾನೆ.

ಇದನ್ನೂ ಓದಿ: Baby Death: ಆಟವಾಡುತ್ತ 7ನೇ ಮಹಡಿ ಬಾಲ್ಕನಿಯಿಂದ ಕೆಳಗೆ ಬಿದ್ದ ಮಗು; ವಿಡಿಯೊ ಇದೆ

ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ಅಕಿರಾ ನಂದನ್ ತಾಯಿ ರೇಣು ದೇಸಾಯಿ ಇತ್ತೀಚೆಗೆ ತಮ್ಮ ಎರಡನೇ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದರು. ತಾವು ಎರಡನೇ ಮದುವೆಯಾಗುವ ಬಗ್ಗೆ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿದ್ದರು. ಇಷ್ಟು ವರ್ಷಗಳ ಕಾಲ ಮಕ್ಕಳ ಆರೈಕೆಗಾಗಿ ಮದುವೆಯಾಗಿಲ್ಲ. ಈಗ ಮಕ್ಕಳು ಬೆಳೆದು ದೊಡ್ಡವರಾದ ಕಾರಣ ತಾನು ಎರಡನೇ ಮದುವೆ ಮಾಡಿಕೊಳ್ಳುವುದಾಗಿ ಬಹಿರಂಗಪಡಿಸಿದ್ದರು. ಇದಕ್ಕೆ ತಮ್ಮ ಮಕ್ಕಳ ಒಪ್ಪಿಗೆ ಕೂಡ ಇದೆ ಎಂಬುದಾಗಿ ತಿಳಿಸಿದ್ದರು.

Continue Reading

ಟಾಲಿವುಡ್

Pawan Kalyan: ಪವನ್‌ ಕಲ್ಯಾಣ್‌ ಗೆದ್ದ ಬಳಿಕ ತಲೆಗೂದಲಿಗೆ ಕತ್ತರಿ ಹಾಕಿದ ಡೈ ಹಾರ್ಡ್​ ಫ್ಯಾನ್!

Pawan Kalyan: ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು.

VISTARANEWS.COM


on

Pawan Kalyan Fan Narendra cut hairs after Five Years
Koo

ಬೆಂಗಳೂರು: ಇತ್ತೀಚೆಗೆ ನಡೆದ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ (Telugu Desam Party), ಬಿಜೆಪಿ ಮತ್ತು ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಾರ್ಟಿ (Jana Sena Party)ಯ ಎನ್‌ಡಿಎ (NDA) ಒಕ್ಕೂಟ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇಂದು (ಜೂನ್‌ 12) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡರು. 2019ರ ಚುನಾವಣೆಯಲ್ಲಿ ಪವನ್‌ ಕಲ್ಯಾಣ್‌ ಎರಡೂ ಕ್ಷೇತ್ರಗಳಲ್ಲಿ ಸೋತು ನಗೆಪಾಟಲಿಗೀಡಾಗಿದ್ದರು. ಆ ಸಮಯದಲ್ಲಿ ಪವನ್‌ ಅವರ ಫ್ಯಾನ್‌ ತೋಟ ನರೇಂದ್ರ ಅವರು ಪವನ್ ಗೆದ್ದೇ ಗೆಲ್ಲುತ್ತಾರೆಂದು ಸವಾಲು ಹಾಕಿ, ಪವನ್ ಗೆಲ್ಲುವವರೆಗೂ ತಲೆಗೂದಲು ಕತ್ತರಿವುದಿಲ್ಲ ಎಂದು ಪ್ರಮಾಣ ಮಾಡಿದ್ದರು. ಇದೀಗ ಕೂದಲಿಗೆ ಕತ್ತರಿ ಹಾಕಿದ್ದಾರೆ.

ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು. ಹಾಗಾಗಿ ಆ ಸಮಯದಲ್ಲಿ ನರೇಂದ್ರ ಅವರು ಪ್ರಮಾಣ ಮಾಡಿದರು. ಪವನ್ ಕಲ್ಯಾಣ್ ಗೆದ್ದು ವಿಧಾನಸಭೆಗೆ ಕಾಲಿಡುವವರೆಗೂ ಕೂದಲಿಗೆ ಕತ್ತರಿ ಹಾಕಲ್ಲ ಎಂದು. ಇದೀಗ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡಿದ್ದಾರೆ. ಐದು ವರ್ಷಗಳ ಕಾಲ ಕೂದಲು ಬೆಳೆಸುತ್ತಲೇ ಪಕ್ಷಕ್ಕಾಗಿ ದುಡಿದ ನರೇಂದ್ರ ಕೊನೆಗೂ ಕೂದಲಿಗೆ ಕತ್ತರಿ ಹಾಕಿದ್ದಾರೆ.

ಇದನ್ನೂ ಓದಿ: Pawan Kalyan: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ ಆಯ್ಕೆ; ಇಂದು ಪ್ರಮಾಣ ವಚನ ಸ್ವೀಕಾರ

ಪವನ್ ಕಲ್ಯಾಣ್ ಸೇರಿದಂತೆ ಜನಸೇನಾದ 21 ಅಭ್ಯರ್ಥಿಗಳು ಈ ಬಾರಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಚುನಾವಣೆ ಎದುರಿಸಿದ್ದರು. ಎದುರಾಳಿ ವೈಸಿಪಿ ಅಭ್ಯರ್ಥಿ ವಂಗಾ ಗೀತ ವಿರುದ್ಧ ಭಾರಿ ಅಂತರದ ಜಯವನ್ನು ಪವನ್ ಕಲ್ಯಾಣ್ ಪಡೆದಿದ್ದಾರೆ. 

ವಿಜಯವಾಡದಲ್ಲಿರುವ ಮೇಧಾ ಐಟಿ ಪಾರ್ಕ್‌ ಬಳಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎನ್‌.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದಾದ ಬಳಿಕ ಮೋದಿ ಅವರು ನಾಯ್ಡು ಅವರಿಗೆ ಶುಭ ಕೋರಿದರು. ನಂತರ ಪವನ್‌ ಕಲ್ಯಾಣ್‌ ಅವರು ತಮ್ಮ ಸಹೋದರ ಚಿರಂಜೀವಿ ಕೂಡ ಇಲ್ಲೇ ಇದ್ದಾರೆ ಎಂದು ಮೋದಿ ಅವರಿಗೆ ಹೇಳಿದರು. ಆಗ ಮೋದಿ ಅವರು ಚಿರಂಜೀವಿ ಬಳಿ ಹೋಗಿ, ಅವರ ಹಾಗೂ ಪವನ್‌ ಕಲ್ಯಾಣ್‌ ಕೈ ಹಿಡಿದು ವೇದಿಕೆಗೆ ಕರೆತಂದರು. ಬಳಿಕ ಮೂವರೂ ಕೈ ಎತ್ತಿದರು. ಆ ಮೂಲಕ ಒಗ್ಗಟ್ಟಿನ ಬಲ ಪ್ರದರ್ಶನ ಮಾಡಿದರು.

Continue Reading

ಟಾಲಿವುಡ್

Pushpa 2: ಅಗಸ್ಟ್ 15 ರಂದು ರಿಲೀಸ್‌ ಆಗ್ತಿಲ್ಲ ಪುಷ್ಪ 2; ಮತ್ತೆ ಶುರುವಾಯ್ತು ಚರ್ಚೆ!

Pushpa 2: 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ.

VISTARANEWS.COM


on

Pushpa 2 Allu Arjun postponed
Koo

ಬೆಂಗಳೂರು: ಅಗಸ್ಟ್ 15 ರಂದು ಬಿಡುಗಡೆಯಾಗಬೇಕಿದ್ದ ಅಲ್ಲು ಅರ್ಜುನ್ ಅವರ ಬಹು ನಿರೀಕ್ಷಿತ ಸೀಕ್ವೆಲ್ ‘ಪುಷ್ಪ: ದಿ ರೂಲ್’ (Pushpa 2) ಅನ್ನು ಮುಂದೂಡಲಾಗಿದೆ ಎಂದು ತೆಲು ಮಾಧ್ಯಮಗಳು ವರದಿ ಮಾಡಿವೆ. ನಿರ್ದೇಶಕ ಸುಕುಮಾರ್ ಇನ್ನೂ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳಲ್ಲಿ ನಿರತರಾಗಿರುವುದರಿಂದ ಸಿನಿಮಾ ರಿಲೀಸ್‌ ಆಗೋದು ಕಷ್ಟ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಇನ್ನೂ ಒಂದು ತಿಂಗಳ ಶೂಟಿಂಗ್ ಬಾಕಿಯಿದ್ದು ಜುಲೈ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸುವ ಗುರಿಯನ್ನು ಸುಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ. ಅಗಸ್ಟ್ 15 ರಂದು ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಕೂಡ ಬಿಡುಗಡೆಗೊಳ್ಳುತ್ತಿದೆ. ಈ ಮೊದಲು, ‘ಖೇಲ್ ಖೇಲ್ ಮೇ’ ಸೆಪ್ಟೆಂಬರ್ 6 ರಂದು ಅದ್ಧೂರಿಯಾಗಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಎರಡನೇ ಹಾಡು ಕೂಡ ಔಟ್‌ ಆಗಿದ್ದು, ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀವ್ಸ್‌ ಪಡೆದುಕೊಂಡಿದೆ.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

ಪುಷ್ಪ 2ʼ ಸಿನಿಮಾದಲ್ಲಿ ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿರುವುದು ಕಂಡು ಬಂದಿತ್ತು. ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿ ಗೂಂಡಾಗಳನ್ನು ಹೊಡೆಯುತ್ತಿರುವುದು ಟೀಸರ್‌ ಕಂಡು ಬಂದು ವೀಕ್ಷಕರ ಕುತೂಹಲ ಕೆರಳಿಸಿತ್ತು.

Continue Reading
Advertisement
Team India Coach
ಕ್ರೀಡೆ8 mins ago

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

murder Case
ಬೆಂಗಳೂರು ಗ್ರಾಮಾಂತರ14 mins ago

Murder Case : ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು; ಮಗನ ಶವ ಕಂಡು ತಂದೆ ಕಣ್ಣೀರು

R Ashok
ಕರ್ನಾಟಕ19 mins ago

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

Viral News
ವೈರಲ್ ನ್ಯೂಸ್37 mins ago

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Chandan Shetty Students Party Video Song Vidyarthi Vidyarthiniyare Movie
ಸ್ಯಾಂಡಲ್ ವುಡ್51 mins ago

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Vijayanagara News
ವಿಜಯನಗರ1 hour ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Pakistan Cricket Team
ಕ್ರಿಕೆಟ್1 hour ago

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Madrasa
ದೇಶ1 hour ago

Madrasa: ಬಕ್ರೀದ್‌ ಹಿನ್ನೆಲೆ ಮದರಸಾದಲ್ಲೇ ಗೋವುಗಳ ಬಲಿ; ನೂರಾರು ಹಿಂದುಗಳಿಂದ ದಾಳಿ, ಸೆಕ್ಷನ್‌ 144 ಜಾರಿ!

Actor Darshan teacher Addanda Cariappa sad on arrested darshan
ಸಿನಿಮಾ1 hour ago

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Shivraj Chouhan
ವೈರಲ್ ನ್ಯೂಸ್2 hours ago

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ1 hour ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ23 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌