ವಿಸ್ತಾರ TOP 10 NEWS | PFI ನಿಷೇಧದಿಂದ ಗರೀಬ್‌ ಕಲ್ಯಾಣ್‌ ವಿಸ್ತರಣೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | PFI ನಿಷೇಧದಿಂದ ಗರೀಬ್‌ ಕಲ್ಯಾಣ್‌ ವಿಸ್ತರಣೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

TOP 10 NEWS 28092022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದ ರಾಜಕೀಯ, ಸಾಮಾಜಿಕ ವಲಯದಲ್ಲಿ ಅನೇಕ ವರ್ಷಗಳಿಂದ ಕೇಳಿಬರುತ್ತಿದ್ದ ʼಪಿಎಫ್‌ಐ ಬ್ಯಾನ್‌ʼ ಆಗ್ರಹಕ್ಕೆ ಕೇಂದ್ರ ಸರ್ಕಾರ ಕೊನೆಗೂ ಸ್ಪಂದಿಸಿದೆ. ಈ ಕುರಿತು ದೇಶಾದ್ಯಂತ ಸ್ವಾಗತ ವ್ಯಕ್ತವಾಗಿದ್ದರೂ, ಭವಿಷ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗದಂತೆ ತಡೆಯುವ ಚರ್ಚೆಗೂ ಈ ನಿರ್ಧಾರ ನಾಂದಿ ಹಾಡಿದೆ. ಬಡವರಿಗೆ ಉಚಿತ ಪಡಿತರ ನೀಡುವ ಗರೀಬ್‌ ಕಲ್ಯಾಣ್‌ ಯೋಜನೆಯನ್ನು ಕೇಂದ್ರ ಸರ್ಕಾರ ಮೂರು ತಿಂಗಳು ವಿಸ್ತರಿಸಿದೆ. ರೈಲ್ವೆ ಸೇರಿದಂತೆ ಕೇಂದ್ರ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಯೋಧ್ಯೆಯಲ್ಲಿ ಗಾನಕೋಗಿಲೆ ಲತಾ ಮಂಗೇಷ್ಮರ್‌ ವೃತ್ತ ಸ್ಥಾಪನೆಯಾಗಿದೆ ಎನ್ನುವುದು ಸೇರಿದಂತೆ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. BANNED | ಪಿಎಫ್‌ಐ, ಸಹ ಸಂಘಟನೆಗಳಿಗೆ ಐದು ವರ್ಷ ನಿಷೇಧ: ಕೇಂದ್ರ ಸರ್ಕಾರ ಘೋಷಣೆ
ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಮತ್ತು ಅದರ ಸಹ ಸಂಘಟನೆಗಳಿಗೆ ಕೇಂದ್ರ ಸರಕಾರ ಐದು ವರ್ಷಗಳ ಕಾಲ ನಿಷೇಧ ಹೇರಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಇವುಗಳನ್ನು ಕಾನೂನುಬಾಹಿರ ಸಂಘಟನೆಗಳು ಎಂದು ಘೋಷಿಸಲಾಗಿದೆ. ರಿಹಾಬ್‌ ಇಂಡಿಯಾ ಫೌಂಡೇಷನ್‌ (ಆರ್‌ಐಎಫ್‌), ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ (ಸಿಎಫ್‌ಐ), ಆಲ್‌ ಇಂಡಿಯಾ ಇಮಾಮ್ಸ್‌ ಕೌನ್ಸಿಲ್‌ (ಎಐಐಸಿ) ಸೇರಿದಂತೆ ಏಳು ಇತರ ಸಂಘಟನೆಗಳು ಕೂಡ ನಿಷೇಧಿತ ಎಂದು ಕೇಂದ್ರ ಸರಕಾರ ಘೋಷಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

2. PFI Banned | ಭಯೋತ್ಪಾದನೆ, ದೇಶದ್ರೋಹ, ಸೌಹಾರ್ದಕ್ಕೆ ಧಕ್ಕೆ ಪಿಎಫ್ಐ ನಿಷೇಧಕ್ಕೆ ಕಾರಣ! ಗೆಜೆಟ್ ಡಿಟೇಲ್ಸ್ ಓದಿ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಹಾಗೂ ಅದರ ಸಹವರ್ತಿ ಸಂಸ್ಥೆಗಳ ಮೇಲೆ ನಿಷೇಧ (PFI Banned) ಹೇರಿರುವ ಕೇಂದ್ರ ಸರ್ಕಾರವು, ತಾನು ಕೈಗೊಂಡ ನಿರ್ಧಾರಕ್ಕೆ ಸಂಪೂರ್ಣ ಸಾಕ್ಷ್ಯಗಳನ್ನು ಒದಗಿಸಿದೆ. ಈ ಬಗ್ಗೆ ಹೊರಡಿಸಲಾಗಿರುವ ಗೆಜೆಟ್‌ನಲ್ಲಿ ವಿವರವಾಗಿ ತಿಳಿಸಲಾಗಿದೆ. ಪಿಎಫ್ಐನ ಹುಟ್ಟು, ಅದರ ಉದ್ದೇಶಗಳು, ಸಮಾಜದಲ್ಲಿ ಹೇಗೆ ಶಾಂತಿ ಸೌಹಾರ್ದತೆಯನ್ನು ಹಾಳು ಮಾಡುತ್ತಿತ್ತು, ಹಣ ದುರುಪಯೋಗ, ಉಗ್ರ ಕೃತ್ಯಗಳನ್ನು ನಡೆಸಿರುವುದು ಸೇರಿ ಎಲ್ಲ ಮಾಹಿತಿಯನ್ನು ಗೆಜೆಟ್‌ನಲ್ಲಿ ವಿವರಿಸಲಾಗಿದೆ. ಪಿಎಫ್ಐ ನಿಷೇಧದ ಗೆಜೆಟ್ ನೋಟಿಫಿಕೇಷನ್ ಬಗ್ಗೆ ಓದಲು ಇಲ್ಲಿ ಕ್ಲಿಕ್ ಮಾಡಿ.

3. ವಿಸ್ತಾರ Explainer | PFI BANNED | ಪಿಎಫ್‌ಐ ಹುಟ್ಟಿದ್ದು ಏಕೆ? ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ಹೇಗೆ?
ಹಲವಾರು ರಾಜ್ಯಗಳಲ್ಲಿ ಭಯೋತ್ಪಾದನೆ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ, ಭಯೋತ್ಪಾದನೆಗೆ ಹಣಕಾಸು ಪೂರೈಕೆ ಮಾಡುತ್ತಿದ್ದ ಕರಾಳ ಸಂಘಟನೆಯ ಕಥೆ ಮುಗಿದಿದೆ. ಸಚಿವಾಲಯದ ಅಧಿಸೂಚನೆಯ ಪ್ರಕಾರ 2016ರಿಂದೀಚೆಗೆ ಕೇರಳ ಮತ್ತು ಕರ್ನಾಟಕದಲ್ಲಿ ನಡೆದ ಸಂಜಿತ್‌, ವಿ ರಾಮಲಿಂಗಮ್‌, ನಂದು, ಅಭಿಮನ್ಯು, ಬಿಬಿನ್‌, ಶರತ್‌, ಆರ್.‌ ರುದ್ರೇಶ್‌, ಪ್ರವೀಣ್‌ ಪೂಜಾರಿ, ಶಶಿಕುಮಾರ್‌, ಪ್ರವೀಣ್‌ ನೆಟ್ಟಾರು ಅವರ ಬರ್ಬರ ಹತ್ಯೆಯಲ್ಲಿ ಪಿಎಫ್‌ಐ ಕಾರ್ಯಕರ್ತರು ಶಾಮೀಲಾಗಿದ್ದಾರೆ. ಹಾಗಾದರೆ ಪಿಎಫ್‌ಐ ಹುಟ್ಟಿದ್ದು ಹೇಗೆ? ಇದರ ಕರಾಳ ಇತಿಹಾಸ ಏನು? ಇದಕ್ಕೆ ಹಣಕಾಸು ವ್ಯವಸ್ಥೆ ಹೇಗೆ ಆಯಿತು? ಇಲ್ಲಿದೆ ವಿವರ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

4. PFI Banned | ಮುಸ್ಲಿಂ ಸಂಘಟನೆಗಳ ಜತೆ ಚರ್ಚೆ ಬಳಿಕವೇ ಪಿಎಫ್‌ಐ ಬ್ಯಾನ್‌, ಇದು ಮೋದಿ ಮಾಸ್ಟರ್‌ಪ್ಲ್ಯಾನ್‌
ಅದು ರಾಮಮಂದಿರ ಕುರಿತು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪೇ ಇರಬಹುದು, ಜಮ್ಮು-ಕಾಶ್ಮೀರದಲ್ಲಿ ೩೭೦ನೇ ವಿಧಿಯನ್ನು ರದ್ದುಗೊಳಿಸಿದ್ದೇ ಇರಬಹುದು, ಪ್ರಮುಖ ತೀರ್ಮಾನ ತೆಗೆದುಕೊಂಡರೆ ಅದರಿಂದ ಉಂಟಾಗುವ ಗಲಭೆಗಳನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಚಾಣಾಕ್ಷತನ ಪ್ರದರ್ಶಿಸಿದೆ. ಅದರಂತೆ, ಪಿಎಫ್‌ಐ (PFI Banned) ನಿಷೇಧಕ್ಕೂ ಮೊದಲು ಕೇಂದ್ರ ಸರ್ಕಾರದ ಪ್ರಮುಖರು ಮುಸ್ಲಿಂ ಸಂಘಟನೆಗಳ ಜತೆ ಮಾತುಕತೆ ನಡೆಸಿ, ನಿಷೇಧದ ಕಾರಣ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

5. CBI RAID: ಡಿ.ಕೆ. ಶಿವಕುಮಾರ್‌ ಅವರ ನಿವಾಸಗಳ ಮೇಲೆ ಸಿಬಿಐ ದಾಳಿ: ಆಸ್ತಿಪಾಸ್ತಿ ದಾಖಲೆಗಳ ಪರಿಶೀಲನೆ
ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿವಾಸಗಳಿಗೆ ದಾಳಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರ ಕನಕಪುರ, ದೊಡ್ಡ ಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

bhagat singh birthday

6. ಭಗತ್‌ ಸಿಂಗ್‌ 115ನೇ ಜನ್ಮದಿನ | ಗಲ್ಲಿಗೇರುವಾಗಲೂ ನಗುತ್ತಾ ದೇಶವೇ ಮೊದಲೆಂದ ಧೀರ
ಇಂದು ಭಗತ್‌ ಸಿಂಗ್‌ ಜನ್ಮದಿನ. ಅವರ ಬಲಿದಾನ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಘಟ್ಟ. ಗಲ್ಲಿಗೇರುವಾಗಲೂ ನಗುನಗುತ್ತಾ ಇದ್ದ ಈ ಧೀರನನ್ನು ನೆನಪಿಸಿಕೊಳ್ಳುವ ದಿನ ಇಂದು. ಈ ಕುರಿತು ಲೇಖಕಿ ಮಯೂರಲಕ್ಷ್ಮಿ ಅವರ ವಿಶೇಷ ಲೇಖನ ಇಲ್ಲಿದೆ. ಕ್ರಾಂತಿಕಾರಿ ಕುರಿತು ತಿಳಿಯಲೇಬೇಕಾದ 10 ಕುತೂಹಲಕಾರಿ ಸಂಗತಿಗಳನ್ನೂ ನೀಡಲಾಗಿದೆ. ಪ್ರಮೋದ ನ.ಗೋ. ಅವರ ವಿಶೇಷ ಲೇಖನ ಇಲ್ಲಿದೆ.

7. ಗರೀಬ್‌ ಕಲ್ಯಾಣ್‌ ವಿಸ್ತರಣೆ, ಕೇಂದ್ರ ನೌಕರರಿಗೆ ತುಟ್ಟಿ ಭತ್ಯೆ, ರೈಲ್ವೆ ನೌಕರರಿಗೆ ಸಿಹಿ ಸುದ್ದಿ
ದಸರಾ ಹಬ್ಬಕ್ಕೆ (Dasara Bonus) ರೈಲ್ವೆ ಇಲಾಖೆ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ನೌಕರರ ತುಟ್ಟಿ ಭತ್ಯೆ (ಡಿಎ) ಯನ್ನು ಶೇ.4ರಷ್ಟು ಏರಿಸಲಾಗಿದೆ. ಪ್ರಧಾನ ಮಂತ್ರಿ ಗ್ರಾಮೀಣ ಕಲ್ಯಾಣ ಅನ್ನ ಯೋಜನೆಯನ್ನು (PMGKAY) ಕೇಂದ್ರ ಸರ್ಕಾರ ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸಿದೆ. ಸುಮಾರು ೧೧ ಲಕ್ಷ ನಾನ್‌ ಗೆಜೆಟೆಡ್‌ ನೌಕರರಿಗೆ (ಸಿ ಹಾಗೂ ಡಿ ದರ್ಜೆಯ ನೌಕರರು) ಕೇಂದ್ರದ ನಿರ್ಧಾರದಿಂದ ಬೋನಸ್‌ ಸಿಗಲಿದೆ. ಇದಕ್ಕೆ ಕೇಂದ್ರ ಸರ್ಕಾರವು ೧,೯೮೫ ಕೋಟಿ ರೂ. ವ್ಯಯಿಸಲಿದೆ. ಬುಧವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ.
🔴 ಇನ್ನೂ 3 ತಿಂಗಳು ಬಡವರಿಗೆ ಉಚಿತ ಆಹಾರ ಧಾನ್ಯ | PMGKAY ವಿಸ್ತರಿಸಿದ ಕ್ಯಾಬಿನೆಟ್‌
🔴 ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಏರಿಕೆ, ಮೋದಿ ಸಂಪುಟ ನಿರ್ಣಯ
🔴 Dasara Bonus | ರೈಲ್ವೆ ಇಲಾಖೆಯ 11 ಲಕ್ಷ ನೌಕರರಿಗೆ ಕೇಂದ್ರ ಬೋನಸ್‌, ಇದು ದಸರಾ ಉಡುಗೊ
ರೆ

8. Anil Chauhan | ರಕ್ಷಣಾ ಸಿಬ್ಬಂದಿ ನೂತನ ಮುಖ್ಯಸ್ಥರಾಗಿ ಅನಿಲ್‌ ಚೌಹಾಣ್‌ ನೇಮಕ
ದೇಶದ ನೂತನ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS)ರಾಗಿ ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಅನಿಲ್‌ ಚೌಹಾಣ್‌‌ (Anil Chauhan) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಜನರಲ್‌ ಬಿಪಿನ್‌ ರಾವತ್‌ ಅವರ ಅಗಲಿಕೆಯಿಂದಾಗಿ ತೆರವಾದ ಸ್ಥಾನಕ್ಕೆ ಅನಿಲ್‌ ಚೌಹಾಣ್‌ ಅವರನ್ನು ನೇಮಿಸಿ ರಕ್ಷಣಾ ಸಚಿವಾಲಯ ಆದೇಶ ಹೊರಡಿಸಿದೆ.
ದೇಶದ ಸೇನೆಯಲ್ಲಿ ೪೦ ವರ್ಷ ಸೇವೆಗೈದಿರುವ ಅನಿಲ್‌ ಚೌಹಾಣ್‌ ಅವರು ಹಲವು ವಿಭಾಗಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರ ಕಾರ್ಯಕ್ಷಮತೆ, ಸೇವಾ ಅನುಭವವನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಸಿಡಿಎಸ್‌ ಆಗಿ ನೇಮಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಜನರಲ್‌ ಬಿಪಿನ್‌ ರಾವತ್‌ ಅವರು ಸೇನಾ ಹೆಲಿಕಾಪ್ಟರ್‌ ಪತನವುಂಟಾಗಿ ನಿಧನರಾಗಿದ್ದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

9. Navaratri 2022 | 4ನೇ ದಿನ ಆರಾಧಿಸಲ್ಪಡುವ ದೇವಿ ಯಾರು? ಯಾವ ವರ್ಣದ ವಸ್ತ್ರ ಶ್ರೇಷ್ಠ?
ಎಲ್ಲರಿಗೂ ತಿಳಿದಿರುವಂತೆ ನವರಾತ್ರಿಯ (Navratri 2022) ಒಂಬತ್ತು ದಿನವೂ ದೇವಿಯ ಒಂದೊಂದು ರೂಪಕ್ಕೆ ಆರಾಧನೆ ನಡೆಯುತ್ತದೆ. ನಾಲ್ಕನೇ ದಿನ ದೇವಿಯ ಯಾವ ಸ್ವರೂಪವನ್ನು ಪೂಜಿಸಬೇಕು?, ಯಾವ ವರ್ಣದ ವಸ್ತ್ರವನ್ನು ಧರಿಸಬೇಕು? ಎಂಬ ಮಾಹಿತಿ ಇಲ್ಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.
🟢 ನವರಾತ್ರಿಯಲ್ಲಿ ಯಾವೆಲ್ಲಾ ಪಾರಾಯಣ ಮಾಡಬಹುದು? ಅನುಸರಿಸಬೇಕಾದ ಕ್ರಮಗಳೇನು?
🔵 ನವರಾತ್ರಿಯ 4ನೇ ದಿನವನ್ನು ರಂಗಾಗಿಸುವ ಹಳದಿ ಬಣ್ಣ

10. Helicopter | 3,250 ರೂ.ಗೆ ಬೆಂಗಳೂರು ಏರ್‌ಪೋರ್ಟ್‌ನಿಂದ ಎಚ್‌ಎಎಲ್‌ಗೆ ಹೆಲಿಕಾಪ್ಟರ್‌ನಲ್ಲಿ ಶೀಘ್ರ ಪಯಣಿಸಿ!
ಮಹಾನಗರಗಳಲ್ಲಿ ಟ್ರಾಫಿಕ್‌ ರಗಳೆ ತಪ್ಪಿದ್ದಲ್ಲ ಎಂಬಂತಾಗಿದೆ. ಬೆಂಗಳೂರಿನ ಸಂಚಾರ ದಟ್ಟಣೆ ಲೋಕ ವಿಖ್ಯಾತ. ಈ ಸನ್ನಿವೇಶದಲ್ಲಿ ಹೆಲಿಕಾಪ್ಟರ್‌ ಮೂಲಕ ನಗರದಲ್ಲಿ ಹಾರಾಟ ನಡೆಸಲು ಸಾಧ್ಯವೇ? ಇದಕ್ಕೆ ಉತ್ತರವೆಂಬಂತೆ, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಚ್‌ಎಎಲ್‌ಗೆ ಹೆಲಿಕಾಪ್ಟರ್‌ ಸೇವೆ (Helicopter) ಶೀಘ್ರದಲ್ಲಿಯೇ ಆರಂಭವಾಗಲಿದೆ. ಇದರಲ್ಲಿ 3,250 ರೂ. ಟಿಕೆಟ್‌ ದರ ಕೊಟ್ಟು ನೀವು ಏರ್‌ಪೋರ್ಟ್‌ನಿಂದ ಎಚ್‌ಎಎಲ್‌ಗೆ ಹೆಲಿಕಾಪ್ಟರ್‌ನಲ್ಲಿ ಸಂಚರಿಸಬಹುದು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lokayukta Raid: ಲೋಕಾಯುಕ್ತ ದಾಳಿ; 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಎಫ್‌ಡಿಎ

Lokayukta Raid: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ, ಲಂಚ ಸ್ವೀಕಾರ ಮಾಡುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

VISTARANEWS.COM


on

Lokayukta Raid
Koo

ಮೈಸೂರು: ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಲೋಕಾಯುಕ್ತ ಬಲೆಗೆ (Lokayukta Raid) ಬಿದ್ದಿದ್ದಾರೆ.

ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ನಟೇಶ್ ಎಂಬುವರಿಗೆ ಆಹಾರ ಪೂರೈಕೆ ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚಕ್ಕೆ ವಿಜಯ್ ಕುಮಾರ್ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತ ಪೊಲೀರಿಗೆ ನಟೇಶ್‌ ದೂರು ನೀಡಿದ್ದರು.

ಮೊದಲೇ ನಡೆದಿದ್ದ ಮಾತುಕತೆಯಂತೆ ಎಫ್‌ಡಿಎ ವಿಜಯ್‌ ಕುಮಾರ್‌, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಜಿತ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್‌ಪಿ ವಿ.ಕೃಷ್ಣಯ್ಯ ಲೋಕಾಯುಕ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳಾದ ರವಿಕುಮಾರ್‌, ರೂಪಶ್ರೀ, ಲೋಕೇಶ್‌, ಸಿಬ್ಬಂದಿಯಾದ ಮೋಹನ್‌ ಗೌಡ, ವೀರಭದ್ರಸ್ವಾಮಿ, ಆಶಾ, ತ್ರಿವೇಣಿ, ಪುಷ್ಪಲತಾ, ದಿನೇಶ್‌, ಲೋಕೇಶ್‌, ಪೃಥ್ವೀಶ್‌, ಶೇಖರ್‌ ಇದ್ದರು.

ಇದನ್ನೂ ಓದಿ | Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

shoot out doddaballapur murder case

ದೊಡ್ಡಬಳ್ಳಾಪುರ: ಕೊಲೆ ಆರೋಪಿಯೊಬ್ಬನ (Murder Suspect) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Encounter) ಬಂಧಿಸಿದ್ದಾರೆ. ಹೇಮಂತ್‌ ಕುಮಾರ್‌ ಗೌಡ ಎಂಬ ಯುವಕನ ಕೊಲೆ (Murder Case) ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ (Shoot out) ಬಂಧಿಸಲಾಗಿದೆ.

ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದೆ. ರೌಡಿ‌ ಶೀಟರ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ‌ ನಡೆಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಸಾಧಿಕ್ ಪಾಷ ಅವರಿಂದ ಫೈರಿಂಗ್ ನಡೆದಿದೆ.

ಈತ ಕೊಲೆ ಕೇಸ್‌ನ 2ನೇ ಆರೋಪಿಯಾಗಿದ್ದಾನೆ. ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧನಕ್ಕಾಗಿ ಬಲೆ ಬೀಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್​ ಮಿಟ್ಟೆ ಎಂಬಾತನನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ಸಾಫ್ಟ್‌ವೇರ್‌ ಎಂಜಿನಿಯರ್‌ ಪತ್ನಿಯ ಅನುಮಾನಾಸ್ಪದ ಸಾವು

ಬೆಂಗಳೂರು: ರಾಜಧಾನಿಯ (bengaluru crime) ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ (woman self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು (UDR Case) ಎಂದು ಮೃತಳ ತವರಿನವರು ಶಂಕಿಸಿದ್ದಾರೆ.

ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading

ಆರೋಗ್ಯ

Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

Ambulance Booking: ಈ ಸೇವೆಯನ್ನು ನೀಡವುದಕ್ಕಾಗಿ ಬಳಸಲಾದ ಆಕ್ಕೊದ ಅತ್ಯಾಧುನಿಕ ತಂತ್ರಜ್ಞಾನವು, ಜನರು ಆಂಬುಲೆನ್ಸ್‌ಅನ್ನು ಶೀಘ್ರವಾಗಿಯೂ ತಡೆರಹಿತವಾಗಿಯೂ ಪಡೆದುಕೊಳ್ಳಲು ನೆರವು ನೀಡುತ್ತದೆ. 3000 ವಾಹನಗಳ ಪ್ರಬಲ ಕಾರ್ಯಜಾಲದಿಂದ ಹತ್ತಿರದ ಆಂಬುಲೆನ್ಸ್ ಪಡೆದುಕೊಳ್ಳಲು ನೆರವಾಗುವ ಈ ಆ್ಯಪ್, ಕೇವಲ ಮೂರು ನಿಮಿಷಗಳೊಳಗೆ ಚಾಲಕರ ವಿವರಗಳನ್ನು ತಿಳಿಸುತ್ತದೆ. ಮೇಲಾಗಿ, ರಿಯಲ್ ಟೈಮ್​ ಟ್ರ್ಯಾಕಿಂಗ್​ನ ವಿಶಿಷ್ಟ ಅನುಕೂಲವನ್ನು ನೀಡಿದೆ.

VISTARANEWS.COM


on

ambulance-booking
Koo

ಬೆಂಗಳೂರು: ತಂತ್ರಜ್ಞಾನ ಆಧಾರಿತ ವಿಮಾ ಸಂಸ್ಥೆಯಾದ ಆಕ್ಕೊ (ACKO), ತನ್ನ ಅನೇಕ ಕೊಡುಗೆಗಳ ಪೋರ್ಟ್‌ಫೋಲಿಯೋಗೆ ತನ್ನ ಮೊಬೈಲ್ ಆ್ಯಪ್‌ನಲ್ಲಿ ಆಂಬುಲೆನ್ಸ್ ಬುಕ್ ಮಾಡುವ ಹೊಸ ಸೇವೆಯೊಂದನ್ನು ಸೇರಿಸಿದೆ. ತನ್ನ ಸೇವೆಗಳನ್ನು ವಿಮಾ ಪರಿಹಾರಗಳಾಚೆ ವಿಸ್ತರಿಸುವ ಮೂಲಕ ಎಲ್ಲಾ ಆರೋಗ್ಯ ಸುರಕ್ಷತಾ ಅಗತ್ಯಗಳಿಗೆ ಒಂದೇ ಸೂರಿನಡಿ ಸೇವೆ ಸಲ್ಲಿಸುವ ದೂರದೃಷ್ಟಿಯನ್ನು ಹೊಂದಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಲಭ್ಯವಿರುವ ಸೇವೆಯು ಮುಂಬರುವ ವಾರಗಳಲ್ಲಿ ಚೆನ್ನೈ, ಮುಂಬೈ, ಹೈದರಾಬಾದ್, ದೆಹಲಿ ಮತ್ತು ಕೋಲ್ಕತ್ತಾದಲ್ಲೂ ಸಿಗಲಿದೆ ಎಂದು ಕಂಪನಿ ಹೇಳಿದೆ.

ದೇಶದ ಮುಂಚೂಣಿ ತುರ್ತು ಸೇವಾ ಸಂಸ್ಥೆಗಳ ಪೈಕಿ ಒಂದಾದ Red.Healthನ ಸಹಭಾಗಿತ್ವದೊಂದಿಗೆ ಈ ಸೇವೆಯನ್ನು ಆರಂಭಿಸಲಾಗಿದ್ದು ವೈದ್ಯಕೀಯ ತುರ್ತುಸ್ಥಿತಿಗಳಲ್ಲಿ ಎಲ್ಲರಿಗೂ ನೆರವು ಒದಗಿಸುವ ಗುರಿ ಹೊಂದಿದೆ. ಈ ಸೇವೆಯನ್ನು ನೀಡವುದಕ್ಕಾಗಿ ಬಳಸಲಾದ ಆಕ್ಕೊದ ಅತ್ಯಾಧುನಿಕ ತಂತ್ರಜ್ಞಾನವು, ಜನರು ಆಂಬುಲೆನ್ಸ್‌ಅನ್ನು ಶೀಘ್ರವಾಗಿಯೂ ತಡೆರಹಿತವಾಗಿಯೂ ಪಡೆದುಕೊಳ್ಳಲು ನೆರವು ನೀಡುತ್ತದೆ. 3000 ವಾಹನಗಳ ಪ್ರಬಲ ಕಾರ್ಯಜಾಲದಿಂದ ಹತ್ತಿರದ ಆಂಬುಲೆನ್ಸ್ ಪಡೆದುಕೊಳ್ಳಲು ನೆರವಾಗುವ ಈ ಆ್ಯಪ್, ಕೇವಲ ಮೂರು ನಿಮಿಷಗಳೊಳಗೆ ಚಾಲಕರ ವಿವರಗಳನ್ನು ತಿಳಿಸುತ್ತದೆ. ಮೇಲಾಗಿ, ರಿಯಲ್ ಟೈಮ್​ ಟ್ರ್ಯಾಕಿಂಗ್​ನ ವಿಶಿಷ್ಟ ಅನುಕೂಲವನ್ನು ನೀಡಿದೆ. ಗ್ರಾಹಕರು ಆಂಬುಲೆನ್ಸ್‌ನ ನಿಖರ ಲೊಕೇಶನ್‌ಅನ್ನು ಮ್ಯಾಪ್ ಮೇಲೆ ನೋಡಿ ಅದರ ಆಗಮನದ ಅಂದಾಜು ಸಮಯವನ್ನು ಲೆಕ್ಕ ಹಾಕಬಹುದು. ಆತಂಕದ ಸಮಯದಲ್ಲಿ ಅವರಿಗೆ ಅದು ನೆಮ್ಮದಿ ಒದಗಿಸಬಹುದು. ತಮ್ಮ ಪ್ರೀತಿಪಾತ್ರರ ಯೋಗಕ್ಷೇಮದ ಮೇಲೆ ಗಮನ ಕೇಂದ್ರೀಕರಿಸಬಹುದಾಗಿದೆ. ಈ ಆವಿಷ್ಕಾರವು ತುರ್ತುಸ್ಥಿತಿಗಳಲ್ಲಿ ತಡೆಯಿಲ್ಲದ ಮತ್ತು ತೊಂದರೆಯಿಲ್ಲದ ಅನುಭವ ಒದಗಿಸುತ್ತದೆ.

ಆಕ್ಕೊದ ಸಮಗ್ರ ವೇದಿಕೆಯ ಮೇಲಿರುವ ಆಂಬುಲೆನ್ಸ್ ಬುಕಿಂಗ್ ಆರೋಗ್ಯ ಸೇವಾ ಪರಿಹಾರಗಳನ್ನು ಒದಗಿಸುವ ಮೂಲಕ ಬಳಕೆದಾರ-ಸುರಕ್ಷತೆ ಹಾಗೂ ಕ್ಷೇಮಾಭಿವೃದ್ಧಿಯನ್ನು ಖಾತರಿಪಡಿಸುತ್ತದೆ. ಈ ಕ್ರಮವು, ಹೊಸ ಯುಗದಲ್ಲಿ ತುರ್ತುಸ್ಥಿತಿ ಆರೋಗ್ಯ ಶುಶ್ರೂಷೆಯನ್ನು ಪರಿವರ್ತಿಸುವ ಗುರಿ ಹೊಂದಿದೆ.

ಆಕ್ಕೊದ ಆಂಬುಲೆನ್ಸ್ ಬುಕಿಂಗ್ ಸೇವೆಯ ವಿಶೇಷತೆಗಳು

● ವ್ಯಾಪಕ ಕಾರ್ಯಜಾಲ: ಈ ಯೋಜನೆಯಡಿ ಐದು ನಗರಗಳಾದ್ಯಂತ 3000 ಆಂಬುಲೆನ್ಸ್‌ಗಳು ಲಭ್ಯವಿರುತ್ತವೆ.
● ತಡೆರಹಿತ ಬುಕಿಂಗ್: ACKO ಆಪ್ ಮೂಲಕ ಫೋನ್‌ನಲ್ಲಿ ಕೆಲವೇ ಕ್ಲಿಕ್‌ಗಳೊಂದಿಗೆ ಆಂಬುಲೆನ್ಸ್ ಪಡೆದುಕೊಳ್ಳಬಹುದು
● ನೈಜ -ಸಮಯ ಟ್ರ್ಯಾಕಿಂಗ್: ಗಂಭೀರ ಪರಿಸ್ಥಿತಿಗಳಲ್ಲಿ ನೆಮ್ಮದಿನೀಡುವಂಥ ಆಂಬುಲೆನ್ಸ್‌ನ ಆಗಮನದ ನೈಜ ಸಮಯವನ್ನು ಟ್ರ್ಯಾಕ್ ಮಾಡಬಹುದು.
● ಬಳಕೆದಾರ-ಕೇಂದ್ರಿತ ವಿನ್ಯಾಸ: ಸುಲಭವಾಗಿ ಬಳಸುವುದಕ್ಕಾಗಿಯೇ ಆಕ್ಕೊ ಆಪ್ ವಿನ್ಯಾಸಗೊಂಡಿದೆ.

ಇದನ್ನೂ ಓದಿ: Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

ವೈದ್ಯಕೀಯ ತುರ್ತುಸ್ಥಿತಿಗಳು ತಕ್ಷಣ ಪ್ರತಿಕ್ರಿಯೆಯನ್ನು ಬೇಡುತ್ತದೆ. ಆದರೆ ಅದು ಎಲ್ಲರಿಗೂ ಪೂರಕವಾಗಿಲ್ಲ ಎಲ್ಲಕ್ಕಿಂತ ಮಿಗಿಲಾಗಿ, ಆಂಬುಲೆನ್ಸ್ ಸೇವೆಗಳು, ನಿರ್ಲಕ್ಷಿತ ಕ್ಷೇತ್ರವಾಗಿಯೇ ಉಳಿದು ಪರಿಸ್ಥಿತಿಗಳನ್ನು ಮೀರಲು ಜನರು ಬಹಳ ಕಷ್ಟಪಡಬೇಕಾಗುತ್ತದೆ. ತುರ್ತುಸ್ಥಿತಿಗಳಲ್ಲಿ ಗಂಭೀರ ನೆರವು ಒದಗಿಸಲು ತಂತ್ರಜ್ಞಾನವನ್ನು ವರ್ಧಿಸುವ ಮೂಲಕ ಆಕ್ಕೊ, ಬಳಕೆದಾರ ಸುರಕ್ಷತೆ ಹಾಗೂ ಸಂತೃಪ್ತಿಗೆ ತನ್ನ ಅಚಲ ಬದ್ಧತೆಯನ್ನು ಪ್ರದರ್ಶಿಸಿದೆ.

ಆಂಬುಲೆನ್ಸ್-ಬುಕಿಂಗ್ ಅಂಶವು, ನಿಜಜೀವನದ ಸಮಸ್ಯೆಗಳಿಗೆ ವಾಸ್ತವ ಪರಿಹಾರ ಒದಗಿಸುತ್ತದೆ.

Continue Reading

ಶಿಕ್ಷಣ

SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

SSLC Grace Marks: ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

VISTARANEWS.COM


on

SSLC Grace Marks 20 per cent grace marks CM Siddaramaiah slams education department
Koo

ಬೆಂಗಳೂರು: ಬರ ಪರಿಹಾರ, ಮುಂಗಾರು ಮಳೆ, ಬಿತ್ತನೆ ಬೀಜ, ರಸ ಗೊಬ್ಬರ ವಿತರಣೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ಗರಂ ಆಗಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು.

ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಎಸ್‌ಎಸ್‌ಎಲ್‌ಸಿಗೆ ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರುವ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 20 ಮಾರ್ಕ್ಸ್‌ ಅನ್ನು ಏಕೆ ಕೊಟ್ಟಿರಿ? ಯಾರನ್ನು ಕೇಳಿ ಹೆಚ್ಚುವರಿ ಅಂಕ ಕೊಟ್ಟಿರಿ? ಹೀಗೆ ಅಂಕ ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ? ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಲ್ಲದೆ, ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.

ಗ್ರೇಸ್‌ ಮಾರ್ಕ್ಸ್‌ ಮರು ಪರಿಶೀಲಿಸಿ

ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಮುಂದಿನ ವರ್ಷ ಹೀಗಿರುವುದಿಲ್ಲ

ಈ ವೇಳೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿಯಲ್ಲಿ ಯಾವಾಗಲೂ ಶೇಕಡಾ 5ರಷ್ಟು ಗ್ರೇಸ್‌ ಮಾರ್ಕ್ಸ್‌ ಇತ್ತು. ಕೋವಿಡ್ ವೇಳೆ ಅದನ್ನು ಶೇಕಡಾ 10ಕ್ಕೆ ಏರಿಕೆ ಮಾಡಲಾಗಿತ್ತು. ಈ ಬಾರಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಳಕ್ಕಾಗಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್‌ ಕೊಟ್ಟು ಪಾಸ್‌ ಮಾಡಿದೆವು. ಇದು ಈ ವರ್ಷಕ್ಕೆ ಮಾತ್ರವಾಗಿದೆ. ಮುಂದಿನ ವರ್ಷದಿಂದ ಇದು ಮುಂದುವರಿಯುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ, ಇನ್ನು 15 ದಿನಗಳಲ್ಲಿ ಅಧಿಕೃತ ಮತ್ತು ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ಗ್ರೇಸ್‌ ಮಾರ್ಕ್ಸ್‌ ಕೊಟ್ಟಿದ್ದರಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸಿದಾಗ ಅಪಾರ ಸಂಖ್ಯೆಯಲ್ಲಿ ಅಂದರೆ ಕಳೆದ ಬಾರಿಗಿಂತ ಶೇಕಡಾ 30ರಷ್ಟು ಕುಸಿತವನ್ನು ಕಾಣಲಾಗಿತ್ತು. ಇದರಿಂದ ಚಿಂತೆಗೊಳಗಾದ ಶಿಕ್ಷಣ ಇಲಾಖೆಯು ಕೊನೆಗೆ ಪಾಸಿಂಗ್‌ ಮಾರ್ಕ್ಸ್‌ ಅನ್ನೇ ಕಡಿಮೆ ಮಾಡಿದೆ.

ಅಂದರೆ ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ಇಲಾಖೆ ಗ್ರೇಸ್‌ ಮಾರ್ಕ್ಸ್‌ ಹೆಚ್ಚಳದ ತೀರ್ಮಾನವನ್ನು ಮಾಡಿತ್ತು.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಕೆ ಮಾಡಿದ್ದಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿತ್ತು. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿತ್ತು. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿತ್ತು. ಆದರೆ, ಇದಕ್ಕೆ ಈಗ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

Continue Reading

ರಾಮನಗರ

Drowned In water : ನಮಾಜ್‌ ಮುಗಿಸಿ ಈಜಲು ಹೋದ ಮೂವರು ನೀರುಪಾಲು; ಐವರು ಪ್ರಾಣಾಪಾಯದಿಂದ ಪಾರು

Drowned In water : ಹಾಸನದಲ್ಲಿ ಕೆರೆಯಲ್ಲಿ ಈಜಲು ಹೋದ ನಾಲ್ವರು ಬಾಲಕರು ನೀರುಪಾಲಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ರಾಮನಗರದಲ್ಲೂ ಈಜಲು ಹೋದ 8 ಮಂದಿ ಪೈಕಿ ಮೂವರು ಬಾಲಕರು ನೀರುಪಾಲಾಗಿರುವ ದಾರುಣ ಘಟನೆ ನಡೆದಿದೆ.

VISTARANEWS.COM


on

By

Drowned in water
Koo

ರಾಮನಗರ: ಈಜಲು ಹೋಗಿ‌ದ್ದ ಮೂವರು (Drowned In water) ನೀರುಪಾಲಾಗಿದ್ದಾರೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಘಟನೆ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ ಶಾಬಾಜ್ (14), ಸುಲ್ತಾನ್ (13), ರಿಹಾನ್ ಖಾನ್ (16) ಮೃತಪಟ್ಟಿದ್ದಾರೆ.

ಶಾಬಾಜ್ ಹಾಗೂ ರಿಯಾನ್ ಖಾನ್ ಸಹೋದರರಾಗಿದ್ದು, ಮೃತರೆಲ್ಲರೂ ರಾಮನಗರ ಟೌನ್‌ನ ಸುಲ್ತಾನ್ ನಗರದವರು. ಒಟ್ಟು 8 ಯುವಕರ ತಂಡ ನಮಾಜ್ ಮುಗಿಸಿದ ಈಜಲು ಹೊಂಡಕ್ಕೆ ಇಳಿದಿದ್ದರು. ಈ ವೇಳೆ ಮೂವರು ನೀರುಪಾಲಾದರೆ, ಐವರು ಸಾವಿನ ದವಡೆಯಿಂದ ಬಚಾವ್‌ ಆಗಿದ್ದಾರೆ.

ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

ಹಾಸನದಲ್ಲಿ ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು (Drowned in water) ನೀರುಪಾಲಾಗಿದ್ದರು. ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು.

ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು. ಮೃತ ಮಕ್ಕಳು ಮುತ್ತಿಗೆ ಗ್ರಾಮದವರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರಲು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದರು. ಮತ್ತೊರ್ವ ಬದುಕುಳಿದಿದ್ದಾನೆ.

Drowned in water 4 boys death

ಇದನ್ನೂ ಓದಿ: Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

ಈಜಲು ತೆರಳಿದ್ದ ಐವರು ಬಾಲಕರಲ್ಲಿ, ನಾಲ್ವರು‌ ಮುಳುಗಡೆ ಆಗುತ್ತಿದ್ದರು. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ್ದ. ಆದರೆ ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ಮುಳುಗಿದ್ದರು.

ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ನೀರಲ್ಲಿ ಕೊಚ್ಚಿ ಹೋಗಿದ್ದ ಮೃತದೇಹಗಳನ್ನು ಅಗ್ನಿಶಾಮಕದಳದ ಸಿಬ್ಬಂದಿ ಶೋಧಕಾರ್ಯ ನಡೆಸಿ ಮೇಲೆತ್ತಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
SubAir facility
ಕ್ರೀಡೆ2 seconds ago

SubAir facility: ಸಬ್‌ ಏರ್‌ ಸಿಸ್ಟಮ್‌ ಹೇಗೆ ಕಾರ್ಯನಿರ್ವಹಿಸುತ್ತದೆ?; ಮಳೆ ನಿಂತು ಎಷ್ಟು ಗಂಟೆಯಲ್ಲಿ ಪಂದ್ಯ ಆರಂಭ?

Lokayukta Raid
ಕರ್ನಾಟಕ6 mins ago

Lokayukta Raid: ಲೋಕಾಯುಕ್ತ ದಾಳಿ; 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಎಫ್‌ಡಿಎ

Health Tips Kannada sleepy is good
ಆರೋಗ್ಯ8 mins ago

Health Tips Kannada: ಕೂತಲ್ಲೇ ತೂಕಡಿಸುತ್ತೀರಾ? ಇದು ಒಳ್ಳೆಯದು!

Jr NTR and Prashanth Neel get the title Dragon from Karan
ಬಾಲಿವುಡ್12 mins ago

Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

Narendra Modi
ದೇಶ23 mins ago

Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

ambulance-booking
ಆರೋಗ್ಯ26 mins ago

Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

SSLC Grace Marks 20 per cent grace marks CM Siddaramaiah slams education department
ಶಿಕ್ಷಣ33 mins ago

SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

Kannada New Movie powder Teaser Out
ಸ್ಯಾಂಡಲ್ ವುಡ್44 mins ago

Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

Drowned in water
ರಾಮನಗರ44 mins ago

Drowned In water : ನಮಾಜ್‌ ಮುಗಿಸಿ ಈಜಲು ಹೋದ ಮೂವರು ನೀರುಪಾಲು; ಐವರು ಪ್ರಾಣಾಪಾಯದಿಂದ ಪಾರು

Illegal sand mining
ಕರ್ನಾಟಕ45 mins ago

Illegal Sand Mining: ಅಕ್ರಮ ಮರಳುಗಾರಿಕೆ: ಪೊಲೀಸರು, ಅಧಿಕಾರಿಗಳಿಗೆ ರಕ್ಷಣೆ ಕೊಡುವಂತೆ ಗ್ರಾಮಸ್ಥರ ಮನವಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌