Threatening Phone Calls | ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡಗೆ ಜೀವ ಬೆದರಿಕೆ - Vistara News

ಕರ್ನಾಟಕ

Threatening Phone Calls | ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡಗೆ ಜೀವ ಬೆದರಿಕೆ

ನನಗೆ ಜೀವ ಬೆದರಿಕೆ ಕರೆಗಳು (Threatening Phone Calls) ಬರುತ್ತಿವೆ, ಆದರೆ ನಾನು ಠಾಣೆಗೆ ದೂರು ನೀಡಲು ಹೋಗುವುದಿಲ್ಲ. ಸರ್ಕಾರ ನನ್ನ ಕ್ಷೇತ್ರದ ಜನರ ಸಮಸ್ಯೆ ಬಗೆಹರಿಸಬೇಕೆಂದು ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಮನವಿ ಮಾಡಿದ್ದಾರೆ.

VISTARANEWS.COM


on

ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ʻʻನಮ್ಮ ಕ್ಷೇತ್ರದ ಸಮಸ್ಯೆಯನ್ನು ಬಗೆಹರಿಸಿ ನನ್ನ ಜೀವ ಉಳಿಸಿ” ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಮಾಧ್ಯಮದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನಿತ್ಯವೂ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ (Threatening Phone Calls) ಬರುತ್ತಿರುವುದಾಗಿ ಶಾಸಕರು ಹೇಳಿಕೊಂಡಿದ್ದಾರೆ.

ಅರಣ್ಯ ಇಲಾಖೆ ಕಿರುಕುಳದಿಂದ ಮಲೆನಾಡಿನಲ್ಲಿ ನಕ್ಸಲ್ ಸಮಸ್ಯೆ ಹುಟ್ಟಿಕೊಂಡಿದೆ. ಕಿರುಕುಳಕ್ಕೆ ಬೇಸತ್ತು ರೈತರು ಕಂಗಾಲಾಗಿದ್ದಾರೆ. ಇದರಿಂದ ಮುಕ್ತಿ ಕೊಡಿಸಿ ಎಂದು ಹೇಳಿಕೊಂಡು ನನಗೆ ಜೀವ ಬೆದರಿಕೆ ಬರುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಪತ್ರದ ಮೂಲಕ ಮೌಖಿಕವಾಗಿ, ದೂರವಾಣಿ ಕರೆಗಳ ಮೂಲಕ ಜೀವ ಬೆದರಿಕೆ ಬರುತ್ತಿದೆ. ಆದರೆ, ನಾನು ಈ ಸಂಬಂಧ ಯಾವುದೇ ದೂರು ನೀಡಲು ಹೋಗುವುದಿಲ್ಲ. ಕ್ಷೇತ್ರದ ಮತದಾರರಿಗೆ ನ್ಯಾಯ ಕೊಡಿಸಲು ಆಗದೇ ಇದ್ದರೆ ನಾವು ಇರುವುದಕ್ಕಿಂತ ಸಾಯುವುದೇ ಲೇಸು. ಸರ್ಕಾರ ನನ್ನ ಕ್ಷೇತ್ರದ ಜನರ ಸಮಸ್ಯೆಯನ್ನು ಬಗೆಹರಿಸಬೇಕೆಂದು ಮನವಿ ಮಾಡಿದ್ದಾರೆ.

ಕುದುರೆಮುಖವನ್ನು ರಾಷ್ಟ್ರೀಯ ಉದ್ಯಾನವನ್ನಾಗಿ ಘೋಷಣೆ ಬಳಿಕ ಸಮಸ್ಯೆ ಹುಟ್ಟಿಕೊಂಡಿದೆ. ಅರಣ್ಯ ಇಲಾಖೆ ಅಲ್ಲಿಯ ಜನರ ಬದುಕನ್ನು ಕಸಿದುಕೊಂಡಿದೆ. ಶೃಂಗೇರಿ ಕ್ಷೇತ್ರದ ಕೆರೆಕಟ್ಟೆ ವ್ಯಾಪ್ತಿ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳಿಂತ ವಂಚಿತರಾಗಿದ್ದಾರೆ. ತಲೆಮಾರುಗಳಿಂದ ಬಂದ ಜನರು ನಿತ್ಯನರಕ ಅನುಭವಿಸುತ್ತಿದ್ದಾರೆ. ಹಾಗಾಗಿ ನನಗೆ ಜೀವ ಬೆದರಿಕೆ ಬರುತ್ತಿವೆ. ಆದರೆ, ಯಾರು ಜೀವ ಬೆದರಿಕೆ ಹಾಕುತ್ತಿದ್ದಾರೆಂದು ಎಲ್ಲೂ ಬಹಿರಂಗ ಮಾಡುವುದಿಲ್ಲ. ಸರ್ಕಾರ ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ | Rain News | ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಹೆದ್ದಾರಿ ಕುಸಿತ; ಸಂಪರ್ಕ ಕಡಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Tungabhadra Dam : ತುಂಗಭದ್ರಾ ಜಲಾಶಯದ ಬಳಿ ವಿಧಿಸಿದ್ದ ಸೆಕ್ಷನ್‌ 144 ವಾಪಸ್‌‌

Tungabhadra dam : ಜಲಾಶಯ ಸುತ್ತಮುತ್ತಲಿನ ಕಾಲುವೆಗಳು, ಡ್ಯಾಂ ವೀಕ್ಷಣೆಗೆ ಆ.12ರಿಂದ ನಿರ್ಬಂಧ ಹೇರಿ ಆದೇಶಿಸಿದ್ದ ವಿಜಯನಗರ ಜಿಲ್ಲಾಡಳಿತ ಗೇಟ್‌ ದುರಸ್ತಿ ಆದ ಹಿನ್ನೆಲೆಯಲ್ಲಿ ವಾಪಸ್ ಪಡೆದುಕೊಂಡಿದೆ. ಇದೀಗ ನಿರ್ಬಂಧ ಆದೇಶ ತೆರವುಗೊಳಿಸಿ ಪ್ರವಾಸಿಗರ ಪ್ರವೇಶಕ್ಕೆ ಮುಕ್ತಗೊಳಿಸಿದೆ. ಕ್ರಸ್ಟ್ ಗೇಟ್ ಕೂಡಿಸುವ ವೇಳೆ ಸಾಮಾನ್ಯ ಜನ ಪ್ರವೇಶ ನಿರ್ಬಂಧಕ್ಕೆ ಮನವಿ ಮಾಡಿದ್ದ ದುರಸ್ತಿ ತಂಡದ ಮುಖ್ಯಸ್ಥರಾದ ಕನ್ಹಯ್ಯ ನಾಯ್ಡು ಕೋರಿದ್ದರು.

VISTARANEWS.COM


on

Tungabhadra dam
Koo

ವಿಜಯನಗರ : ತುಂಗಭದ್ರಾ ಜಲಾಶಯ 19ನೇ ಕ್ರಸ್ಟ್‌ ಕಿತ್ತುಹೋದ (Tungabhadra Dam) ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ವಿಧಿಸಲಾಗಿದ್ದ ಸೆಕ್ಷನ್‌ 144 ಅನ್ನು ಅಧಿಕಾರಿಗಳು ವಾಪಸ್ ಪಡೆದುಕೊಂಡಿದ್ದದಾರೆ. ಕ್ರಸ್ಟ್‌ ಗೇಟ್ ದುರಸ್ತಿ ವೇಳೆ ಕಾನೂನು ಸುರಕ್ಷತೆ ಹಾಗೂ ಸುರಕ್ಷತೆ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸೆಕ್ಷನ್ ವಾಪಸ್ ಪಡೆಯಲಾಗಿದೆ. ಗೇಟ್‌ ಕುಸಿತದ ಸುದ್ದಿ ಹರಡಿದಾಗ ಜನರು ದೊಡ್ಡ ಸಂಖ್ಯೆಯಲ್ಲಿ ವೀಕ್ಷಣೆಗೆ ಬರಬಹುದು ಹಾಗೂ ಅದರಿಂದ ಅಪಾಯ ಉಂಟಾಗಬಹುದು ಎಂಬ ಅನುಮಾನದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು

ಜಲಾಶಯ ಸುತ್ತಮುತ್ತಲಿನ ಕಾಲುವೆಗಳು, ಡ್ಯಾಂ ವೀಕ್ಷಣೆಗೆ ಆ.12ರಿಂದ ನಿರ್ಬಂಧ ಹೇರಿ ಆದೇಶಿಸಿದ್ದ ವಿಜಯನಗರ ಜಿಲ್ಲಾಡಳಿತ ಗೇಟ್‌ ದುರಸ್ತಿ ಆದ ಹಿನ್ನೆಲೆಯಲ್ಲಿ ವಾಪಸ್ ಪಡೆದುಕೊಂಡಿದೆ. ಇದೀಗ ನಿರ್ಬಂಧ ಆದೇಶ ತೆರವುಗೊಳಿಸಿ ಪ್ರವಾಸಿಗರ ಪ್ರವೇಶಕ್ಕೆ ಮುಕ್ತಗೊಳಿಸಿದೆ. ಕ್ರಸ್ಟ್ ಗೇಟ್ ಕೂಡಿಸುವ ವೇಳೆ ಸಾಮಾನ್ಯ ಜನ ಪ್ರವೇಶ ನಿರ್ಬಂಧಕ್ಕೆ ಮನವಿ ಮಾಡಿದ್ದ ದುರಸ್ತಿ ತಂಡದ ಮುಖ್ಯಸ್ಥರಾದ ಕನ್ಹಯ್ಯ ನಾಯ್ಡು ಕೋರಿದ್ದರು.

ರೈತರಿಗೆ ಸಮಸ್ಯೆಯಾಗದಂತೆ ಕ್ರಮ

ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ (Tungabhadra Dam) ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭರವಸೆ ವ್ಯಕ್ತಪಡಿಸಿದ್ದರು.

ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಇದು ರಾಜಕೀಯ ಮಾಡುವ ವಿಷಯವಲ್ಲ. ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ.. ಈ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ. ಆದರೆ ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದು ಹೇಳಿದ್ದಾರೆ.

ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ನೀರು ತುಂಬಿತ್ತು. ಆದರೆ ತುಂಡಾಗಿರುವ ಗೇಟ್ ನ ದುರಸ್ತಿಗಾಗಿ 50 ರಿಂದ 60 ಟಿಎಂಸಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನ: ನೀರು ತುಂಬುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯಂತೆ ಆಗಸ್ಟ್ 15 ರ ನಂತರ ಪುನಃ ಮಳೆಬರುವ ನಿರೀಕ್ಷೆಯಿದೆ. ಆದ್ದರಿಂದ ಈಗ ಪೋಲಾಗಿರುವ ನೀರು ಮತ್ತೊಮ್ಮೆ ಜಲಾಶಯದಲ್ಲಿ ತುಂಬಲಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: Raichur News : ಉಸಿರಾಡುತ್ತಿವೆ ಮುಸ್ಲಿಂ ಧರ್ಮಗುರುಗಳ ಗೋರಿಗಳು, ಪವಾಡ ಎಂದ ಭಕ್ತರು

ಎರಡನೇ ಬೆಳೆಗೆ ನೀರು ಸಿಗುವುದೇ?

ಗೇಟ್ ರಿಪೇರಿಗಾಗಿ 60 TMC ನೀರನ್ನು ಅಣೆಕಟ್ಟಿನಿಂದ ಖಾಲಿ ಮಾಡುವ ಅನಿವಾರ್ಯತೆ ಇದೆ. 105 TMC ಸಾಮರ್ಥ್ಯದ TB ಡ್ಯಾಂನಲ್ಲಿ 20 ಅಡಿ ನೀರು ಕುಗ್ಗಿಸಿ 60 TMCಯಷ್ಟು ನೀರನ್ನು‌ ಅಧಿಕಾರಿಗಳು ಖಾಲಿ ಮಾಡುತ್ತಿದ್ದಾರೆ. ಸೆಪ್ಟೆಂಬರ್ ತಿಂಗಳಿಂದ ಮಳೆ ಪ್ರಮಾಣ ಕುಗ್ಗಬಹುದು. ಹೀಗಾಗಿ ಖಾಲಿಯಾದ 60 ಟಿಎಂಸಿ ನೀರನ್ನು ಮತ್ತೆ ತುಂಬಿಸುವುದು ಕಷ್ಟಸಾಧ್ಯ. ಬೇಸಿಗೆಯಲ್ಲಿ ನಿರ್ವಹಣೆಗಾಗಿ ಡ್ಯಾಂ ತುಂಬಿಸುವುದು ಅಧಿಕಾರಿಗಳಿಗೆ ಸವಾಲು ಆಗುತ್ತದೆ. ಸೆಪ್ಟೆಂಬರ್ ಬಳಿಕ ಕಾಲುವೆ ನೀರು ಕೈಕೊಟ್ಟರೆ ಬೆಳೆಗಳು ಬಾಡುತ್ತವೆ. ಹೀಗಾಗಿ ಈ ಬಾರಿ ಬೆಳೆಗಳಿಗೆ‌ ಡ್ಯಾಂ ನೀರು ಸಿಗುವುದೇ ಅನುಮಾನ ಎಂಬಂತಾಗಿದೆ.

Continue Reading

ಪ್ರಮುಖ ಸುದ್ದಿ

Raichur News : ಉಸಿರಾಡುತ್ತಿವೆ ಮುಸ್ಲಿಂ ಧರ್ಮಗುರುಗಳ ಗೋರಿಗಳು, ಪವಾಡ ಎಂದ ಭಕ್ತರು

Raichur News : ಲಿಂಗಸ್ಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ಈ ಅಚ್ಚರಿ ಉಂಟಾಗಿದೆ ಎಂಬುದಾಗಿ ಸಾರ್ವಜನಿಕರು ಹೇಳಿದ್ದಾರೆ ಇಲ್ಲಿನ ಸೈಯದ್ ಶಾ ನಸರುದ್ದೀನ್ ನಬಿರಾ ಖಾದ್ರಿ ದರ್ಗಾದಲ್ಲಿನ ಉರುಸ್ ಬಳಿಕ ಇಂಥದ್ದೊಂದು ಪವಾಡ ಸಂಭವಿಸಿದೆ ಎಂಬುದಾಗಿ ಜನರು ಹೇಳುತ್ತಿದ್ದಾರೆ. ನೂರಾರು ವರ್ಷಗಳ ಹಳೆ ಗೋರಿಗಳು ಉಸಿರಾಟ ನಡೆಸಿದಂತೆ ಅಲ್ಲಿಗೆ ಭೇಟಿ ನೀಡುತ್ತಿರುವ ಭಕ್ತರಿಗೆ ಭಾಸವಾಗುತ್ತಿದೆ. ಅದರ ವಿಡಿಯೊಗಳು ಸಾರ್ವಜನಿಕವಾಗಿ ಹರಿದಾಡುತ್ತಿದೆ.

VISTARANEWS.COM


on

Raichur News
Koo

ರಾಯಚೂರು : ಜಿಲ್ಲೆಯಲ್ಲಿ ವಿಸ್ಮಯಕಾರಿ (Raichur News) ಘಟನೆಯೊಂದು ನಡೆಯುತ್ತಿದ್ದು ಇಸ್ಲಾಂ ಧರ್ಮಗುರುಗಳ ಗೋರಿಗಳು ಉಸಿರಾಡುತ್ತಿವೆ ಎಂಬುದಾಗಿ ಭಕ್ತರು ನಂಬಿದ್ದಾರೆ. ಹೀಗಾಗಿ ಗೋರಿಗಳ ವೀಕ್ಷಣೆಗೆ ಭಕ್ತರು ಸಾಲು ಗಟ್ಟಿ ಬರುತ್ತಿದ್ದಾರೆ ಎಂಬುದಾಗಿ ವರದಿಯಾಗಿದೆ.

ಲಿಂಗಸ್ಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ಈ ಅಚ್ಚರಿ ಉಂಟಾಗಿದೆ ಎಂಬುದಾಗಿ ಸಾರ್ವಜನಿಕರು ಹೇಳಿದ್ದಾರೆ ಇಲ್ಲಿನ ಸೈಯದ್ ಶಾ ನಸರುದ್ದೀನ್ ನಬಿರಾ ಖಾದ್ರಿ ದರ್ಗಾದಲ್ಲಿನ ಉರುಸ್ ಬಳಿಕ ಇಂಥದ್ದೊಂದು ಪವಾಡ ಸಂಭವಿಸಿದೆ ಎಂಬುದಾಗಿ ಜನರು ಹೇಳುತ್ತಿದ್ದಾರೆ. ನೂರಾರು ವರ್ಷಗಳ ಹಳೆ ಗೋರಿಗಳು ಉಸಿರಾಟ ನಡೆಸಿದಂತೆ ಅಲ್ಲಿಗೆ ಭೇಟಿ ನೀಡುತ್ತಿರುವ ಭಕ್ತರಿಗೆ ಭಾಸವಾಗುತ್ತಿದೆ. ಅದರ ವಿಡಿಯೊಗಳು ಸಾರ್ವಜನಿಕವಾಗಿ ಹರಿದಾಡುತ್ತಿದೆ.

ಈ ದರ್ಗಾದಲ್ಲಿ ಉರುಸ್‌ ನಡೆದಿದ್ದು ಆ ಬಳಿಕ 40 ದಿನಗಳ ಕಾಲ ಜನರಿಗೆ ಇದೇ ಅನುಭವ ಉಂಟಾಗುತ್ತಿದೆ ಎಂದು ಹೇಳಲಾಗಿದೆ. ಅಲ್ಲಿರುವ ಒಟ್ಟು ಮೂರು ಗೋರಿಗಳು ಉಸಿರಾಟ ನಡೆಸಿದಂತೆ ಅನುಭವವಾಗುತ್ತಿದೆ ಎಂದು ಹೇಳಲಾಗಿದೆ. ಗೋರಿಗಳು ಉಸಿರಾಟದಿಂದಾಗಿ ಅದರ ಮೇಲೆ ಹಾಕಿರುವ ಹೂವುಗಳು ಪುಟಿಯುತ್ತಿದೆ ಎಂದು ಭೇಟಿ ನೀಡಿದ ಭಕ್ತರು ಹೇಳಿದ್ದಾರೆ. ಸಂಜೆಯಿಂದ ಬೆಳಗಿನವರೆಗೂ ಮೂರು ಗೋರಿಗಳು ಉಸಿರಾಡಿದಂತೆ ಭಾಸವಾಗುತ್ತಿದೆ ಎಂದು ಭಕ್ತರು ನುಡಿದಿದ್ದಾರೆ. ಕೌತುಕಕಾರಿ ಘಟನೆಯನ್ನು ವೀಕ್ಷಿಸಲ ಸಾವಿರಾರು ಮಂದಿ ದರ್ಗಾಕ್ಕೆ ಬರುತ್ತಿದ್ದಾರೆ.

ಈ ವಸ್ತುಗಳನ್ನು ಮನೆಯಲ್ಲಿಟ್ಟರೆ ಸಂತೋಷ, ಸಮೃದ್ಧಿ, ನೆಮ್ಮದಿ ಸಿಗುತ್ತವೆ!

ಮನೆಯಲ್ಲಿ ಕೆಲವೊಂದು ವಸ್ತುಗಳನ್ನು ಇರಿಸುವುದು ಶುಭ ಸಂಕೇತವೆಂದು (Good sign) ಪರಿಗಣಿಸಲಾಗಿದೆ. ವಾಸ್ತು ಶಾಸ್ತ್ರದಲ್ಲೂ (Vastu Tips) ಇದನ್ನು ಉಲ್ಲೇಖಿಸಲಾಗಿದೆ. ಹಿಂದೂ ಧರ್ಮದಲ್ಲಿ (hindu dharma) ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಯಾಕೆಂದರೆ ಇದು ಭಾರತೀಯರ ಅತ್ಯಂತ ಪುರಾತನ ವಿಜ್ಞಾನವೂ ಹೌದು.

ಕೆಲವೊಂದು ವಸ್ತುಗಳು ಮನೆಯಲ್ಲಿ ಇದ್ದರೆ ಅದು ನಮ್ಮ ಜೀವನದಿಂದ ನಕಾರಾತ್ಮಕತೆಯನ್ನು ತೆಗೆದುಹಾಕುತ್ತದೆ ಮತ್ತು ಸಕಾರಾತ್ಮಕತೆಯನ್ನು ತರುತ್ತದೆ. ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ತುಂಬಲು ಬಯಸಿದರೆ ವಾಸ್ತು ಪ್ರಕಾರ ಈ ದಿಕ್ಕುಗಳಲ್ಲಿ ಈ ವಸ್ತುಗಳನ್ನು ಇರಿಸಿ.

ಇದನ್ನೂ ಓದಿ: Sudha Murthy : ವಿವಾದ ಸೃಷ್ಟಿಸಿದ ಸುಧಾ ಮೂರ್ತಿಯವರ ‘ರಕ್ಷಾ ಬಂಧನ’ದ ಕತೆ; ಸ್ಪಷ್ಟನೆ ನೀಡಿದ ಸಂಸದೆ

ಆನೆಯ ಪ್ರತಿಮೆಗಳು: ಮನೆಯಲ್ಲಿ ಎರಡು ಜೋಡಿ ಎತ್ತರಿಸಿದ ಸೊಂಡಿಲು ಇರುವ ಆನೆಯ ಪ್ರತಿಮೆಗಳನ್ನು ಇಟ್ಟುಕೊಳ್ಳುವುದರಿಂದ ಕುಟುಂಬ ಸದಸ್ಯರಲ್ಲಿ ಸಂತೋಷ, ಶಾಂತಿ ಮತ್ತು ಪ್ರೀತಿಯನ್ನು ತರಬಹುದು. ಈ ಮೂರ್ತಿಗಳನ್ನು ಉತ್ತರ ದಿಕ್ಕಿನಲ್ಲಿ ಇಡುವುದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.
ಕಾಮಧೇನು ಹಸುವಿನ ಪ್ರತಿಮೆ : ಕಾಮಧೇನು ಹಸುವಿನ ಪ್ರತಿಮೆಯನ್ನು ಮನೆಯಲ್ಲಿ ಇಡುವುದರಿಂದ ಉತ್ತಮ ಆರೋಗ್ಯ ಮತ್ತು ಸಂಪತ್ತು ಆಶೀರ್ವಾದವನ್ನು ತರುತ್ತದೆ. ಉತ್ತಮ ಫಲಿತಾಂಶಗಳಿಗಾಗಿ ಈ ಪ್ರತಿಮೆಯನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ ಇರಿಸಿ.

ಗೂಬೆ ಪ್ರತಿಮೆ: ಇದು ಕೆಟ್ಟ ಕಣ್ಣು ಮತ್ತು ನಕಾರಾತ್ಮಕ ಶಕ್ತಿಗಳಿಂದ ರಕ್ಷಿಸುತ್ತದೆ. ಮನೆಯ ಮುಖ್ಯ ದ್ವಾರದಲ್ಲಿ ಗೂಬೆಯ ಪ್ರತಿಮೆಯನ್ನು ಇರಿಸುವುದು ನಕಾರಾತ್ಮಕ ಶಕ್ತಿಗಳನ್ನು ದೂರವಿಡಲು ಮತ್ತು ಮನೆಯವರ ಮೇಲೆ ಹೊರಗಿನವರ ಕೆಟ್ಟ ದೃಷ್ಟಿ ಬೀಳದಂತೆ ಮಾಡಲು ಸಹಾಯ ಮಾಡುತ್ತದೆ.

Continue Reading

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಇಂದು ಭಾರಿ ಮಳೆ ಎಚ್ಚರಿಕೆ

Karnataka Weather Forecast : ಮುಕ್ಕಾಲು ಕರ್ನಾಟಕಕ್ಕೆ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲ್ಡಿವ್ಸ್ ದ್ವೀಪದವರೆಗೆ 1.5 ಮತ್ತು 1.8ಕಿ.ಮೀ ಟ್ರಪ್ ಎದ್ದಿದೆ. ಇದರ ಪ್ರಭಾವದಿಂದಾಗಿ ಇಂದು ರಾಜ್ಯಾದ್ಯಂತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain news) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather Forecast) ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಮಳೆಯು ಅಬ್ಬರಿಸಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

karnataka weather Forecast
karnataka weather Forecast

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

karnataka weather Forecast
karnataka weather Forecast

ಆರೆಂಜ್ ಅಲರ್ಟ್‌

ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Justice KS Hegde: ಜಸ್ಟೀಸ್‌ ಕೆ.ಎಸ್.ಹೆಗ್ಡೆ ಜೀವನ, ಕೊಡುಗೆ ಕುರಿತು ಚಂದನ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮ

ಜಸ್ಟೀಸ್‌ ಕೆ.ಎಸ್.ಹೆಗ್ಡೆ (Justice KS Hegde) ಅವರ 115ನೇ ಜನ್ಮದಿನಾಚರಣೆ ಅಂಗವಾಗಿ ಅವರ ಜೀವನ ಹಾಗೂ ಕೊಡುಗೆಗಳ ಕುರಿತು “ಪ್ರಾತಸ್ಮರಣೀಯ ಜಸ್ಟೀಸ್‌ ಕೆ.ಎಸ್‌. ಹೆಗ್ಡೆ” ಶೀರ್ಷಿಕೆಯಡಿಯಲ್ಲಿ ದೂರದರ್ಶನ ಚಂದನ ವಾಹಿನಿಯಲ್ಲಿ ಜುಲೈ 28 ರಿಂದ ಸೆಪ್ಟೆಂಬರ್‌ 29 ರವರೆಗೆ ಪ್ರತಿ ಭಾನುವಾರ ಸಂಜೆ 5.30ರಿಂದ 6 ಗಂಟೆಯವರೆಗೆ ವಿಶೇಷ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Justice KS Hegde
Koo

ಬೆಂಗಳೂರು: ಜಸ್ಟೀಸ್‌ ಕೆ.ಎಸ್. ಹೆಗ್ಡೆ (Justice KS Hegde) ಅವರ 115ನೇ ಜನ್ಮದಿನಾಚರಣೆ ಅಂಗವಾಗಿ ಅವರ ಜೀವನ ಹಾಗೂ ಕೊಡುಗೆಗಳ ಕುರಿತು “ಪ್ರಾತಸ್ಮರಣೀಯ ಜಸ್ಟೀಸ್‌ ಕೆ.ಎಸ್‌. ಹೆಗ್ಡೆ” ಶೀರ್ಷಿಕೆಯಡಿಯಲ್ಲಿ ದೂರದರ್ಶನ ಚಂದನ ವಾಹಿನಿಯಲ್ಲಿ ಜುಲೈ 28ರಿಂದ ಸೆಪ್ಟೆಂಬರ್‌ 29ರವರೆಗೆ ಪ್ರತಿ ಭಾನುವಾರ ಸಂಜೆ 5.30ರಿಂದ 6 ಗಂಟೆಯವರೆಗೆ ವಿಶೇಷ ಕಾರ್ಯಕ್ರಮ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಅವರ ತಂದೆಯವರಾದ ನ್ಯಾಯಮೂರ್ತಿ ಕೌಡೂರು ಸದಾನಂದ ಹೆಗ್ಡೆ ಅವರ ಜೀವನ ನಡೆದು ಬಂದ ದಾರಿ ಹಾಗೂ ರಾಷ್ಟ್ರಕ್ಕೆ ನೀಡಿದ ಅಪಾರ ಕೊಡುಗೆ, ನ್ಯಾಯಾಂಗದ ಘನತೆಯನ್ನು ಎತ್ತಿ ಹಿಡಿದ ಕುರಿತು ಹಾಗೂ ನ್ಯಾಯಮೂರ್ತಿಯಾಗಿ, ಲೋಕಸಭಾ ಸ್ಪೀಕರ್‌ ಆಗಿ, ಶಿಕ್ಷಣ ಸಂಸ್ಥೆ ಆರಂಭಿಸಿ, ಗ್ರಾಮೀಣರಿಗೂ ಉನ್ನತ ಶಿಕ್ಷಣ ದೊರಕುವಂತೆ ತಮ್ಮ ಜೀವನವನ್ನು ರಾಷ್ಟ್ರಕ್ಕಾಗಿಯೇ ಮುಡುಪಾಗಿಟ್ಟು ಎಲೆಮರೆಯ ಕಾಯಿಯಂತೆ ಆದರ್ಶ ಜೀವನ ನಡೆಸಿದ ಜಸ್ಟೀಸ್‌ ಕೆ.ಎಸ್.ಹೆಗ್ಡೆ ಅವರ 115ನೇ ಜನ್ಮದಿನಾಚರಣೆ ಅಂಗವಾಗಿ ಅವರ ಜೀವನ ಹಾಗೂ ಕೊಡುಗೆಗಳ ಕುರಿತು ಸರಣಿ ಕಾರ್ಯಕ್ರಮ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: Uttara Kannada News: ಪಿಎಂ ಸ್ವ-ನಿಧಿ ಯೋಜನೆ; ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ

ಕಾರ್ಯಕ್ರಮದಲ್ಲಿ ಮಾಜಿ ಉಪಪ್ರಧಾನಿ ಎಲ್‌.ಕೆ.ಅಡ್ವಾಣಿ, ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್‌.ಸಂತೋಷ್‌ ಹೆಗ್ಡೆ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಚಾನ್ಸಲರ್‌ ಎನ್‌.ವಿನಯ್‌ ಹೆಗ್ಡೆ, ಕ್ಯಾಪ್ಟನ್‌ ಪ್ರಸನ್ನ, ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಆಳ್ವಾಸ್‌ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮೋಹನ್‌ ಆಳ್ವಾ, ಮಾಜಿ ಸಚಿವ ರಾಮಚಂದ್ರೇಗೌಡ ಹಾಗೂ ಹಿರಿಯ ವಕೀಲರು, ಗಣ್ಯರು ಜಸ್ಟೀಸ್‌ ಕೆ.ಎಸ್.ಹೆಗ್ಡೆ ಅವರ ಕುರಿತು ಸಂದೇಶ, ಸದಭಿಪ್ರಾಯಗಳನ್ನು ವ್ಯಕ್ತಪಡಿಸಿರುತ್ತಾರೆ ಎಂದು ಕಾರ್ಯಕ್ರಮದ ನಿರ್ದೇಶಕ ಹಾಗೂ ನಿರ್ಮಾಪಕ ದೀಪಕ್‌ ಆರ್‌. ಸಾಗರ್‌, ಹುಲಿದೇವರಬನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading
Advertisement
Kolkata Doctor murder case
ದೇಶ7 mins ago

Kolkata Doctor murder case: ಕೋಲ್ಕತ್ತಾ ಟ್ರೈನಿ ವೈದ್ಯೆಯ ಕೊಲೆ ಪ್ರಕರಣ- ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

Tungabhadra dam
ಪ್ರಮುಖ ಸುದ್ದಿ12 mins ago

Tungabhadra Dam : ತುಂಗಭದ್ರಾ ಜಲಾಶಯದ ಬಳಿ ವಿಧಿಸಿದ್ದ ಸೆಕ್ಷನ್‌ 144 ವಾಪಸ್‌‌

Paneer test
ಆರೋಗ್ಯ44 mins ago

Use Of Paneer Water: ಪನೀರ್‌ ಮಾಡುವಾಗ ಉಳಿದ ನೀರನ್ನು ಚೆಲ್ಲಬೇಡಿ; ಹೀಗೆ ಬಳಸಿ ಪೋಷಕಾಂಶ ಪಡೆಯಿರಿ!

Raichur News
ಪ್ರಮುಖ ಸುದ್ದಿ52 mins ago

Raichur News : ಉಸಿರಾಡುತ್ತಿವೆ ಮುಸ್ಲಿಂ ಧರ್ಮಗುರುಗಳ ಗೋರಿಗಳು, ಪವಾಡ ಎಂದ ಭಕ್ತರು

Vastu Tips
ಧಾರ್ಮಿಕ2 hours ago

Vastu Tips: ಸ್ನಾನಗೃಹದಲ್ಲಿ ಯಾವ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

Karnataka Weather Forecast
ಮಳೆ2 hours ago

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಇಂದು ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ3 hours ago

Dina Bhavishya : ಹೊಸ ಒಪ್ಪಂದ ಮಾಡ್ಬೇಡಿ; ಆತುರದಲ್ಲಿ ಯಾವ ತೀರ್ಮಾನವನ್ನೂ ಕೈಗೊಳ್ಳಬೇಡಿ

Justice KS Hegde
ಕರ್ನಾಟಕ8 hours ago

Justice KS Hegde: ಜಸ್ಟೀಸ್‌ ಕೆ.ಎಸ್.ಹೆಗ್ಡೆ ಜೀವನ, ಕೊಡುಗೆ ಕುರಿತು ಚಂದನ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮ

Paris Olympics 2024
ಪ್ರಮುಖ ಸುದ್ದಿ9 hours ago

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಚೀನಾದ ಅಥ್ಲೀಟ್​ ಈಗ ರೆಸ್ಟೋರೆಂಟ್​​ನಲ್ಲಿ ವೇಟರ್​!

Sudha Murthy'
ಪ್ರಮುಖ ಸುದ್ದಿ9 hours ago

Sudha Murthy : ವಿವಾದ ಸೃಷ್ಟಿಸಿದ ಸುಧಾ ಮೂರ್ತಿಯವರ ‘ರಕ್ಷಾ ಬಂಧನ’ದ ಕತೆ; ಸ್ಪಷ್ಟನೆ ನೀಡಿದ ಸಂಸದೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌