T20 World Cup | ಬ್ಯಾಟಿಂಗ್ ವೈಫಲ್ಯ; ಅಭ್ಯಾಸ ಪಂದ್ಯದಲ್ಲಿ ಭಾರತ ತಂಡಕ್ಕೆ ಹೀನಾಯ ಸೋಲು - Vistara News

ಕ್ರಿಕೆಟ್

T20 World Cup | ಬ್ಯಾಟಿಂಗ್ ವೈಫಲ್ಯ; ಅಭ್ಯಾಸ ಪಂದ್ಯದಲ್ಲಿ ಭಾರತ ತಂಡಕ್ಕೆ ಹೀನಾಯ ಸೋಲು

ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ವೆಸ್ಟರ್ನ್‌ ಅಸ್ಟ್ರೇಲಿಯಾ ವಿರುದ್ಧ 36 ರನ್‌ಗಳ ಹೀನಾಯ ಸೋಲಿಗೆ ಒಳಗಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪರ್ತ್‌: ವೆಸ್ಟರ್ನ್‌ ಆಸ್ಟ್ರೇಲಿಯಾ ಇಲೆವೆನ್‌ ತಂಡದ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ೩೬ ರನ್‌ಗಳ ಹೀನಾಯ ಸೋಲಿಗೆ ಒಳಗಾಗಿದೆ. ಕೆ. ಎಲ್‌ ರಾಹುಲ್‌ (೭೬) ಒಬ್ಬರನ್ನು ಬಿಟ್ಟು ಉಳಿದ ಎಲ್ಲ ಬ್ಯಾಟರ್‌ಗಳು ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಕಾರಣ ತಂಡಕ್ಕೆ ಸೋಲು ಎದುರಾಯಿತು.

ಪರ್ತ್‌ನ ವೆಸ್ಟರ್ನ್‌ ಆಸ್ಟ್ರೇಲಿಯಾ ಕ್ರಿಕೆಟ್‌ ಸ್ಟೇಡಿಯಮ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್‌ ಮಾಡಿದ ವೆಸ್ಟರ್ನ್‌ ಆಸ್ಟ್ರೇಲಿಯಾ ತಂಡ ನಿಗದಿತ ೨೦ ಓವರ್‌ಗಳಲ್ಲಿ ೮ ವಿಕೆಟ್‌ಗೆ ೧೬೮ ರನ್‌ ಬಾರಿಸಿತು. ಪ್ರತಿಯಾಗಿ ಆಡಿದ ಭಾರತ ತನ್ನ ಪಾಲಿನ ಓವರ್‌ಗಳು ಮುಕ್ತಾಯಗೊಂಡಾಗ ೮ ವಿಕೆಟ್‌ ನಷ್ಟಕ್ಕೆ ೧೩೨ ರನ್ ಮಾತ್ರ ಬಾರಿಸಲು ಶಕ್ತಗೊಂಡು ಸೋಲಿಗೊಳಗಾಯಿತು.

ಭಾರತ ಪರ ಕೆ. ಎಲ್‌ ರಾಹುಲ್ ಅರ್ಧ ಶತಕ ಬಾರಿಸಿದರೆ ಹಾರ್ದಿಕ್‌ ಪಾಂಡ್ಯ ೧೭ ರನ್‌ ಹಾಗೂ ದಿನೇಶ್‌ ಕಾರ್ತಿಕ್‌ ೧೦ ರನ್‌ ಗಳಿಸಿದರು. ನಾಯಕ ರೋಹಿತ್‌ ಶರ್ಮ ಬ್ಯಾಟಿಂಗ್‌ ಮಾಡಲಿಲ್ಲ. ರಿಷಭ್‌ ಪಂತ್‌ (೯), ದೀಪಕ್‌ ಹೂಡ (೬), ಅಕ್ಷರ್‌ ಪಟೇಲ್‌ (೨) ಬ್ಯಾಟಿಂಗ್‌ ವೈಫಲ್ಯ ಎದುರಿಸಿದರು.

ಮೊದಲು ಬ್ಯಾಟ್‌ ಮಾಡಿದ ವೆಸ್ಟರ್ನ್‌ ಆಸ್ಟ್ರೇಲಿಯಾ ತಂಡದ ಪರ ಡಿ ಅರ್ಕಿ ಶಾರ್ಟ್‌ (೫೨), ನಿಕ್‌ ಹಾಬ್ಸನ್‌ (೬೪) ಅರ್ಧ ಶತಕ ಬಾರಿಸಿದರು. ಭಾರತ ಪರ ಬೌಲಿಂಗ್‌ನಲ್ಲಿ ಆರ್‌ ಅಶ್ವಿನ್‌ ೩ ವಿಕೆಟ್‌ ಕಬಳಿಸಿದರು.

ಇದನ್ನೂ ಓದಿ | T20 World Cup | ವಿಶ್ವ ಕಪ್‌ಗೆ ಮೊದಲು ಭಾರತ ತಂಡಕ್ಕೆ ಸಾಲು ಸಾಲು ಅಭ್ಯಾಸ ಪಂದ್ಯಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup final: ತ್ರಿವರ್ಣ ಧ್ವಜ ಹಿಡಿದು ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ

T20 World Cup final: ಜಮ್ಮು ಕಾಶ್ಮೀರದ ಕಚಿ ಚೌನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳಿಯನ್ನು ಕೂಡ ಲೆಕ್ಕಿಸದೆ ಮಧ್ಯರಾತ್ರಿಯೇ ಅಭಿಮಾನಿಗಳು ಮನೆಯಿಂದ ಹೊರ ಬಂದು ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ. ಬೃಹತ್ ತ್ರಿವರ್ಣ ಧ್ವಜ ಹಿಡಿದು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದ್ದಾರೆ.

VISTARANEWS.COM


on

T20 World Cup final
Koo

ಜಮ್ಮ-ಕಾಶ್ಮೀರ: 17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup final)​ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ತಡರಾತ್ರಿಯೇ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ಅಭಿಮಾನಿಗಳು ತ್ರಿವರ್ಣ ಧ್ವಜಗಳನ್ನು ಹಿಡಿದು ಗೆಲುವನ್ನು ಸಂಭ್ರಮಿಸಿದ್ದಾರೆ. ಇದರ ಫೋಟೊ ಮತ್ತು ವೈರಲ್​ ಆಗಿದೆ.

ಜಮ್ಮು ಕಾಶ್ಮೀರದ ಕಚಿ ಚೌನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳಿಯನ್ನು ಕೂಡ ಲೆಕ್ಕಿಸದೆ ಮಧ್ಯರಾತ್ರಿಯೇ ಅಭಿಮಾನಿಗಳು ಮನೆಯಿಂದ ಹೊರ ಬಂದು ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ. ಬೃಹತ್ ತ್ರಿವರ್ಣ ಧ್ವಜ ಹಿಡಿದು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ 

ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳ ಸಡಗರ ಮುಗಿಲು ಮುಟ್ಟಿತ್ತು‌. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಕೋರಮಂಗಲ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಮತ್ತು ತ್ರಿವರ್ಣ ಧ್ವಜ ಹಾರಿಸಿ, ಹಾಡುಗಳಿಗೆ ಕುಣಿದು ಸಂಭ್ರಮ ಆಚರಿಸಿ ಭಾರತ ತಂಡಕ್ಕೆ ಅಭಿನಂದನೆ‌ ಸಲ್ಲಿಸಿದರು.

ಭಾರತ ತಂಡ ಎರಡನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ಕ್ರಿಕೆಟ್ ಪ್ರೇಮಿಗಳು ಭಾರತ ಧ್ವಜ, ಭಗವಾಧ್ವಜ ಪ್ರದರ್ಶಿಸಿ ಖುಷಿಪಟ್ಟರು. ಜತೆಗೆ ಡಿಜೆಗೆ ಸಖತ್‌ ಸ್ಟೆಪ್ ಹಾಕಿ ಕ್ರೀಡಾ ಪ್ರೇಮಿಗಳು ಸಂಭ್ರಮಿಸಿದರು. ಕನ್ನಡ, ಹಿಂದಿ ಹಾಡುಗಳ ನಡುವೆ ಯುವ ಜನತೆಯ ಡ್ಯಾನ್ಸ್‌ ಗಮನ ಸೆಳೆಯಿತು.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಭಾರತದ ಗೆಲುವನ್ನು ಕ್ರಿಕೆಟ್ ಪ್ರೇಮಿಗಳು ಸಂಭ್ರಮಿಸಿದರು. ಭಟ್ಕಳದ ಸಂಶುದ್ದೀನ್ ವೃತ್ತದಲ್ಲಿ ತಡರಾತ್ರಿ ಸಂಭ್ರಮಾಚರಣೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಹೆದ್ದಾರಿಯಲ್ಲಿ ಜಮಾಯಿಸಿದ ಕ್ರಿಕೆಟ್ ಪ್ರೇಮಿಗಳು ಸಂಚರಿಸುತ್ತಿದ್ದ ವಾಹನಗಳ ಎದುರು ಕುಣಿದು ಕುಪ್ಪಳಿಸಿದರು. ಭಾರತದ ಬಾವುಟ ಹಿಡಿದ ಯುವಕರು, ಮಕ್ಕಳು, ಕ್ರಿಕೆಟ್ ಪ್ರೇಮಿಗಳ ಸಂಭ್ರಮ ಮುಗಿಲು ಮುಟ್ಟಿತು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡ ಪ್ರಸಂಗವೂ ನಡೆಯಿತು. ಕ್ರಿಕೆಟ್ ಪ್ರೇಮಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಡಬೇಕಾಯಿತು. ಕೊನೆಗೆ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಿಕೆಟ್ ಪ್ರೇಮಿಗಳನ್ನು ಪೊಲೀಸರು ಚದುರಿಸಿದರು.

Continue Reading

ಕ್ರೀಡೆ

MS Dhoni Instagram Post: ಭಾರತ 2ನೇ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಅಚ್ಚರಿಯ ಪೋಸ್ಟ್ ಮಾಡಿದ ಧೋನಿ

MS Dhoni Instagram Post: 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಧೋನಿ ನಾಯಕತ್ವದಲ್ಲಿ ಭಾರತ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ ಭಾರತ ಯಾವುದೇ ಕಪ್​ ಗೆದ್ದಿಲ್ಲ. 2014ರಲ್ಲಿ ಧೋನಿ ನಾಯಕತ್ವದಲ್ಲಿ ಫೈನಲ್​ ಪ್ರವೇಶಿಸಿದ್ದರೂ ಕೂಡ ಶ್ರೀಲಂಕಾ ವಿರುದ್ಧ ಸೋಲು ಕಂಡು ರನ್ನರ್ ಅಪ್​ ಆಗಿತ್ತು. ಇದೀಗ ರೋಹಿತ್​ ಕಪ್​ ಗೆಲ್ಲುವ ಮೂಲಕ ಭಾರತ ತಂಡ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್​ ಗೆದ್ದ ಸಾಧನೆ ಮಾಡಿದೆ.

VISTARANEWS.COM


on

Koo

ರಾಂಚಿ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಗೆದ್ದ ಟೀಮ್​ ಇಂಡಿಯಾಕ್ಕೆ, ಚೊಚ್ಚಲ ಟಿ20 ವಿಶ್ವಕಪ್(T20 World Cup Win)​ ಗೆದ್ದ ನಾಯಕ ಮಹೇಂದ್ರ ಸಿಂಗ್​ ಧೋನಿ(MS Dhoni) ವಿಶೇಷವಾಗಿ ಶುಭ ಹಾರೈಸಿದ್ದಾರೆ. ನನ್ನ ಹುಟ್ಟು ಹಬ್ಬಕ್ಕೆ ಮುಂಚಿತವಾಗಿಯೇ ಸ್ಮರಣೀಯ ಉಡುಗೊರೆ ನೀಡಿದ್ದಕ್ಕೆ ಟೀಮ್​ ಇಂಡಿಯಾಕ್ಕೆ ಧನ್ಯವಾದಗಳು ಎಂದು ಇನ್​ಸ್ಟಾಗ್ರಾಮ್(MS Dhoni Instagram Post)​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಚಾಂಪಿಯನ್​ ತಂಡದ ಫೋಟೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿರುವ ಧೋನಿ, ನನ್ನ ಎದೆ ಬಡಿತ ಹೆಚ್ಚಾಗಿತ್ತು. ಆದರೆ ದೃಢ ನಂಬಿಕೆಯೊಂದಿಗೆ ನೀವೆಲ್ಲರೂ ಉತ್ತಮವಾಗಿ ಆಡಿದ್ದೀರಿ. ತವರಿನ ಮತ್ತು ವಿಶ್ವದೆಲ್ಲಡೆ ಇರುವ ಎಲ್ಲಾ ಭಾರತೀಯರಿಂದ, ವಿಶ್ವಕಪ್ ಮರಳಿ ಮನೆಗೆ ತಂದಿದ್ದಕ್ಕಾಗಿ ಧನ್ಯವಾದಗಳು. ಅಭಿನಂದನೆಗಳು. ಜತೆಗೆ ನನ್ನ ಹುಟ್ಟುಹಬ್ಬದ ಉಡುಗೊರೆಗೆ ಧನ್ಯವಾದಗಳು” ಎಂದು ಧೋನಿ ಬರೆದುಕೊಂಡಿದ್ದಾರೆ. ಧೋನಿ ಅವರ ಜನ್ಮ ದಿನ ಜುಲೈ 7. 43ನೇ ವರ್ಷಕ್ಕೆ ಕಾಲಿಡುತ್ತಿರುವ ಧೋನಿಗೆ ಈ ಗೆಲುವು ಅಮೂಲ್ಯ ಉಡುಗೊರ ಎಂದು ಧೋನಿ ಭಾವಿಸಿದ್ದಾರೆ.

2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಧೋನಿ ನಾಯಕತ್ವದಲ್ಲಿ ಭಾರತ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ ಭಾರತ ಯಾವುದೇ ಕಪ್​ ಗೆದ್ದಿಲ್ಲ. 2014ರಲ್ಲಿ ಧೋನಿ ನಾಯಕತ್ವದಲ್ಲಿ ಫೈನಲ್​ ಪ್ರವೇಶಿಸಿದ್ದರೂ ಕೂಡ ಶ್ರೀಲಂಕಾ ವಿರುದ್ಧ ಸೋಲು ಕಂಡು ರನ್ನರ್ ಅಪ್​ ಆಗಿತ್ತು. ಇದೀಗ ರೋಹಿತ್​ ಕಪ್​ ಗೆಲ್ಲುವ ಮೂಲಕ ಭಾರತ ತಂಡ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್​ ಗೆದ್ದ ಸಾಧನೆ ಮಾಡಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading

ಕ್ರೀಡೆ

Virat Kohli: ಗೆಲುವಿನ ಬಳಿಕ ಪಂಜಾಬಿ ಹಾಡಿಗೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿರಾಟ್​ ಕೊಹ್ಲಿ

Virat Kohli: ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು

VISTARANEWS.COM


on

Virat Kohli (
Koo

ಬಾರ್ಬಡೋಸ್​: ದಕ್ಷಿಣ ಆಫ್ರಿಕಾವನ್ನು(South Africa vs India) ಮಣಿಸಿ ಭಾರತ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿದ ಬಳಿಕ ಟಿ20(T20 World Cup 2024) ಕ್ರಿಕೆಟ್​ಗೆ ವಿದಾಯ ಹೇಳಿದ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(Virat Kohli), ಗೆಲುವಿನ ಸಂಭ್ರಮಾಚರಣೆಯನ್ನು ತಂಡದ ಸಹ ಆಟಗಾರರೊಂದಿಗೆ ನೃತ್ಯ ಮಾಡುವ ಮೂಲಕ ಎಂಜಾಯ್​ ಮಾಡಿದರು. ಪಂಜಾಬಿ ಹಾಡಿಗೆ ಹೆಜ್ಜೆ ಹಾಕಿದ ವಿಡಿಯೊವನ್ನು ಐಸಿಸಿ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದೆ.

ಚಿನ್ನದ ಪದಕ ಸ್ವೀಕರಿಸಿದ ಬಳಿಕ ವಿರಾಟ್​ ಕೊಹ್ಲಿ, ಅರ್ಶ್​ದೀಪ್​ ಸಿಂಗ್​, ಮೀಸಲು ಆಟಗಾರ ರಿಂಕು ಸಿಂಗ್​, ಮೊಹಮ್ಮದ್​ ಸಿರಾಜ್​, ಅಕ್ಷರ್​ ಪಟೇಲ್​ ಸುತ್ತಿವರಿದು ಮಸ್ತ್​ ನೃತ್ಯ ಮಾಡಿ ಗೆಲುವುವನ್ನು ಸಂಭ್ರಮಿಸಿದ್ದಾರೆ. ಈ ವಿಡಿಯೊ ಇದೀಗ ವೈರಲ್​ ಆಗಿದೆ. ಕೊಹ್ಲಿಯ ಅಭಿಮಾನಿಗಳಂತು ಈ ವಿಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್​ ಮಾಡಲಾರಂಭಿಸಿದ್ದಾರೆ.

ಸರಣಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ವಿರಾಟ್​ ಕೊಹ್ಲಿ ಅವರು ನಾಯಕ ರೋಹಿತ್​ ಶರ್ಮ ಹೇಳಿದಂತೆ ಫೈನಲ್​ನಲ್ಲಿ 76 ರನ್ ಗಳಿಸಿ ತಂಡಕ್ಕೆ ನೆರವಾದರು. ಸೆಮಿಫೈನಲ್​ ಪಂದ್ಯದ ಬಳಿಕ ಕೊಹ್ಲಿಯನ್ನು ಟೀಕೆ ಮಾಡುತ್ತಿದ್ದವರಿಗೆ ನಾಯಕ ರೋಹಿತ್​ ಅವರು ತಕ್ಕ ಉತ್ತರ ನೀಡಿದ್ದರು. ಕೊಹ್ಲಿಯ ಆಟ ಫೈನಲ್​ನಲ್ಲಿ ಪ್ರದರ್ಶನಗೊಳ್ಳುತ್ತದೆ. ಆತ ಕ್ಲಾಸ್​ ಆಟಗಾರ ಎಂದು ಹೇಳಿದ್ದರು. ರೋಹಿತ್​ ಹೇಳಿದಂತೆ ಕೊಹ್ಲಿ ಫೈನಲ್​ಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು.

ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

ಇದನ್ನೂ ಓದಿ Rohit Sharma: ಗೆಲುವಿನ ಸವಿ ನೆನಪಿಗಾಗಿ ಪಿಚ್​ನ ಮಣ್ಣು ತಿಂದ ರೋಹಿತ್​; ವಿಡಿಯೊ ವೈರಲ್​

ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ. ಈ ಟಿ 20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ 59 ಎಸೆತಗಳಲ್ಲಿ 76 ರನ್ ಮಾಡುವ ಮೊದಲು ಏಳು ಇನ್ನಿಂಗ್ಸ್‌ಗಳಲ್ಲಿ ಕೇವಲ 75 ರನ್ ಮಾತ್ರ ಗಳಿಸಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading

ಕ್ರಿಕೆಟ್

T20 World Cup 2024: ಸುದೀಪ್‌ ಸೇರಿದಂತೆ ಸೌತ್‌ ,ಬಾಲಿವುಡ್‌ ತಾರೆಯರು ವಿಶ್ವಕಪ್​ ಗೆಲುವನ್ನು  ಸಂಭ್ರಮಿಸಿದ್ದು ಹೀಗೆ!

T20 World Cup 2024: ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ.

VISTARANEWS.COM


on

T20 World Cup 2024 Celebrities Celebrates India ICC Cricket
Koo

ಬೆಂಗಳೂರು: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್​ ಫೈನಲ್(T20 World Cup 2024) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ(South Africa vs India) ತಂಡವನ್ನು 7 ರನ್​ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಜತೆಗೆ 13 ವರ್ಷಗಳ ಕಪ್​ ಬರಗಾಲ ಕೂಡ ನೀಗಿತು.  ಭಾರತ ಕ್ರಿಕೆಟ್ ತಂಡದ ಗೆಲುವನ್ನು ಸಿನಿಮಾ ಸೆಲೆಬ್ರಿಟಿಗಳು ಕೂಡ ಸಂಭ್ರಮಿಸಿದ್ದಾರೆ.

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಎಕ್ಸ್‌ ಖಾತೆಯಲ್ಲಿ ʻʻರಾಹುಲ್ ದ್ರಾವಿಡ್ ಸರ್ ನೀವು ನಮ್ಮ ಹೆಮ್ಮೆ. , ಘನತೆಯ ಶಿಖರ ಇದು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅವರುಗಳು ನಮ್ಮ ಹೀರೋಗಳಾಗಿ ಹೊರಹೊಮ್ಮಿದ್ದಕ್ಕೆ ಧನ್ಯಾವದ. ಅದ್ಭುತ ಕ್ಯಾಚ್ ಪಡೆದ ಸೂರ್ಯಕುಮಾರ್ ಯಾದವ್​ಗೆ ವಿಶೇಷ ಧನ್ಯವಾದ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

ಅಮಿತಾಭ್‌ ಬಚ್ಚನ್‌ ಕೂಡ ʻʻಕಣ್ಣೀರು ಹರಿಯುತ್ತಿದೆ. ವಿಶ್ವ ಚಾಂಪಿಯನ್ಸ್ ಭಾರತ. ಭಾರತ ಮಾತಾ ಕಿ ಜಯ್‌. ಜಯ ಹಿಂದ್ ಜಯ ಹಿಂದ್ʼʼಎಂದು ಬರೆದುಕೊಂಡಿದ್ದಾರೆ.

ಇನ್ನು ನಟ, ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸಹ ಟ್ವೀಟ್ ಮಾಡಿದ್ದು, ಸರಳವಾಗಿ, ‘ಭಾರತ ತಂಡಕ್ಕೆ ಅಭಿನಂದನೆಗಳು’ ಎಂದಿದ್ದಾರೆ. ಭಾರತ ಕ್ರಿಕೆಟ್ ತಂಡದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಸಹ ಟ್ವೀಟ್ ಮಾಡಿದ್ದು, ʻʻಈ ಕಪ್‌ ನಮ್ಮದು! ಹೀರೋಸ್-ಇನ್-ಬ್ಲೂ ಹೊಸ ‘ವಿಶ್ವ ಚಾಂಪಿಯನ್’! ಸೂರ್ಯ ಕುಮಾರ್‌ ಕ್ಯಾಚ್‌ ಅದ್ಭುತ. ಈ ಐತಿಹಾಸಿಕ ಗೆಲುವಿನ ಬಗ್ಗೆ ತುಂಬಾ ಹೆಮ್ಮೆ ಇದೆ. ಜೈ ಹಿಂದ್! ಎಂದು ಬರೆದುಕೊಂಡಿದ್ದಾರೆ.

ರಣದೀಪ್ ಹೂಡಾ “ಬುಮ್ರಾ ಸ್ವಿಂಗ್ ದೇವರು ಮತ್ತು ಅರ್ಶ್‌ದೀಪ್ ಮತ್ತು ಅಕ್ಸರ್ .. ಕೊಹ್ಲಿ ಬ್ಯಾಟ್ ಮತ್ತು ರೋಹಿತ್ ಗ್ರೇಟ್‌. ಧನ್ಯವಾದಗಳು ರಾಹುಲ್ ದ್ರಾವಿಡ್.”ಎಂದು ಬರೆದುಕೊಂಡಿದ್ದಾರೆ.

ಅನಿಲ್ ಕಪೂರ್, ಮತ್ತು ರಶ್ಮಿಕಾ ಮಂದಣ್ಣ, ಅನನ್ಯ ಪಾಂಡೆ, ರವೀನಾ ಟಂಡನ್ ರಣದೀಪ್ ಹೂಡಾ ರಣ್ವೀರ್ ಸಿಂಗ್ ಸೇರಿದಂತೆ ಇನ್ನೂ ಹಲವು ಸಿನಿಮಾ ಸೆಲೆಬ್ರಿಟಿಗಳು ಭಾರತ ಕ್ರಿಕೆಟ್ ತಂಡದ ಅತ್ಯದ್ಭುತವಾದ ವಿಜಯಕ್ಕೆ ಟ್ವೀಟ್ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading
Advertisement
T20 World Cup final
ಕ್ರೀಡೆ55 seconds ago

T20 World Cup final: ತ್ರಿವರ್ಣ ಧ್ವಜ ಹಿಡಿದು ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ

Shawarma
ಕರ್ನಾಟಕ11 mins ago

Shawarma: ನಾನ್‌ವೆಜ್ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌; ಶೀಘ್ರದಲ್ಲೇ ರಾಜ್ಯದಲ್ಲಿ ಶವರ್ಮಾ ಬ್ಯಾನ್ ?

ಕ್ರೀಡೆ30 mins ago

MS Dhoni Instagram Post: ಭಾರತ 2ನೇ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಅಚ್ಚರಿಯ ಪೋಸ್ಟ್ ಮಾಡಿದ ಧೋನಿ

ಟಾಲಿವುಡ್31 mins ago

Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

Indian Armed Forces
ದೇಶ31 mins ago

Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Road Accident
ಕ್ರೈಂ58 mins ago

Road Accident: ಕೂಡ್ಲಿಗಿಯಲ್ಲಿ ಮತ್ತೊಂದು ರಸ್ತೆ ಅಪಘಾತ; ಇಬ್ಬರ ಸಾವು

Virat Kohli (
ಕ್ರೀಡೆ1 hour ago

Virat Kohli: ಗೆಲುವಿನ ಬಳಿಕ ಪಂಜಾಬಿ ಹಾಡಿಗೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿರಾಟ್​ ಕೊಹ್ಲಿ

T20 World Cup 2024 Celebrities Celebrates India ICC Cricket
ಕ್ರಿಕೆಟ್1 hour ago

T20 World Cup 2024: ಸುದೀಪ್‌ ಸೇರಿದಂತೆ ಸೌತ್‌ ,ಬಾಲಿವುಡ್‌ ತಾರೆಯರು ವಿಶ್ವಕಪ್​ ಗೆಲುವನ್ನು  ಸಂಭ್ರಮಿಸಿದ್ದು ಹೀಗೆ!

T20 World Cup 2024 Netizen Thanking Darshan For India World Cup Win
ಸ್ಯಾಂಡಲ್ ವುಡ್1 hour ago

T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

Rohit Sharma
ಕ್ರೀಡೆ1 hour ago

Rohit Sharma: ಗೆಲುವಿನ ಸವಿ ನೆನಪಿಗಾಗಿ ಪಿಚ್​ನ ಮಣ್ಣು ತಿಂದ ರೋಹಿತ್​; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ17 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ23 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌