ರಾಜಕಾಲುವೆಗೆ ಬಿದ್ದ ಮಗು ಮೂರು ದಿನವಾದರೂ ಪತ್ತೆಯಿಲ್ಲ - Vistara News

ಬೆಂಗಳೂರು

ರಾಜಕಾಲುವೆಗೆ ಬಿದ್ದ ಮಗು ಮೂರು ದಿನವಾದರೂ ಪತ್ತೆಯಿಲ್ಲ

ವರ್ತೂರಿನಲ್ಲಿ ಭಾನುವಾರ ಆಟವಾಡುತ್ತಿದ್ದ ಬಾಲಕನೊಬ್ಬ ರಾಜಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದು, ಮೂರು ದಿನಗಳ ಹುಡುಕಾಟ ಫಲ ನೀಡಿಲ್ಲ.

VISTARANEWS.COM


on

child drown
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವರ್ತೂರಿನಲ್ಲಿ ರಾಜಕಾಲುವೆಗೆ ಮಗು ಬಿದ್ದು ನಾಪತ್ತೆಯಾದ ಪ್ರಕರಣದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ದಿನಗಳಿಂದ ಹುಡುಕಾಟ ನಡೆಸಿದ್ದು, ಮಗುವಿನ ಪತ್ತೆಯಾಗಿಲ್ಲ.

ನೇಪಾಳ ಮೂಲದ ಬಿನೋದ್ ಸೌದ್ ಹಾಗೂ ಸ್ವಪ್ನ ದಂಪತಿಯ ಪುತ್ರ ಕಬೀರ್(3) ನಾಪತ್ತೆಯಾದ ಬಾಲಕ. ಬಳಗೆರೆಯ ಅಪಾರ್ಟ್‌ಮೆಂಟ್‌ ಬಳಿ ಭಾನುವಾರ ಮಕ್ಕಳೊಂದಿಗೆ ಆಟವಾಡುವಾಗ ಆಯತಪ್ಪಿ ರಾಜಕಾಲುವೆಗೆ ಬಿದ್ದಿದ್ದಾನೆ. ಪೋಷಕರು ಕಬೀರ್ ಜತೆ ಆಟವಾಡುತ್ತಿದ್ದ ಮಕ್ಕಳ ಬಳಿ ಕೇಳಿದಾಗ ರಾಜಕಾಲುವೆಯತ್ತ ಬೊಟ್ಟು ಮಾಡಿದ್ದಾರೆ. ಇದರಿಂದ ಆತಂಕಗೊಂಡ ಪೋಷಕರು‌ ವರ್ತೂರು ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ. ಪೊಲೀಸರೊಂದಿಗೆ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಧಾವಿಸಿ ಬಾಲಕನಿಗಾಗಿ ಹುಡುಕಾಟ ನಡೆಸಿದರು.

6 ತಿಂಗಳ ಹಿಂದೆ ಹೊಟ್ಟೆಪಾಡಿಗಾಗಿ ವರ್ತೂರಿಗೆ ಬಂದು ನೆಲೆಸಿರುವ ನೇಪಾಳ ಮೂಲದ ಮಗುವಿನ ಕುಟುಂಬದವರು, ಮಗನ ಬರುವಿಕೆಗಾಗಿ ಕಾದು ಕುಳಿತಿದ್ದಾರೆ. 3 ದಿನಗಳಿಂದ ಮಗುವಿನ ಹುಡುಕಾಟ ನಡೆಸುತ್ತಿದ್ದರೂ ಫಲ ದೊರೆತಿಲ್ಲ. ನಿನ್ನೆ ರಾತ್ರಿಯಾದ ಕಾರಣ ಹುಡುಕಾಟ ನಿಲ್ಲಿಸಲಾಗಿತ್ತು. ಬೆಳಗ್ಗೆ 8 ಗಂಟೆಯಿಂದ ಮತ್ತೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ | Boy drowned | ಆಟವಾಡುತ್ತಿದ್ದಾಗ ರಾಜಕಾಲುವೆಗೆ ಬಿದ್ದು 3 ವರ್ಷದ ಬಾಲಕ ನಾಪತ್ತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

Jobs Alert: ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

VISTARANEWS.COM


on

teacher jobs alert
Koo

ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ (Teacher) ಹುದ್ದೆಗಳನ್ನು ಭರ್ತಿ ಮಾಡಲು (Jobs Alert) ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಶಿಕ್ಷಕ, ಉಪನ್ಯಾಸಕ ಹುದ್ದೆಗಳ ಶೋಧದಲ್ಲಿರುವವರಿಗೆ ಇದು ಗುಡ್ ನ್ಯೂಸ್ (Good news) ಆಗಿದೆ.

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. 1987ರಿಂದ 1994-95ರ ಶೈಕ್ಷಣಿಕ ಅವಧಿಯಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ದಿನಾಂಕ:01-01-2016ರಿಂದ ದಿನಾಂಕ:31-12-2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

ಷರತ್ತುಗಳು:

ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ:09-04- 2013ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದು. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.

ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 2016-2017 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಖಚಿತಪಡಿಸಿಕೊಳ್ಳುವುದು. ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಸಂಖ್ಯೆ: ಇಡಿ 16 ಟಿಪಿಯು 2011. ದಿನಾಂಕ:30-09-2011 ಅನ್ನು ಹಿಂಪಡೆದು, ಹುದ್ದೆಗಳ ಅನುಮೋದನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.

ಕನ್ನಡಿಗರಿಗೆ ಉದ್ಯೋಗ ಕಡ್ಡಾಯಕ್ಕೆ ಕಾನೂನು ಸಮಸ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ನಾಲ್ವರು ಸಚಿವರು ಇಂದು ವಿಧಾನಸಭೆಯಲ್ಲಿ (Vidhan sabha) ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಈ ವಿಚಾರದಲ್ಲಿ ಕಾನೂನಾತ್ಮಕ ಸಮಸ್ಯೆ ಇದ್ದು, ಇದರ ಬಗ್ಗೆ ಇನ್ನಷ್ಟು ಚರ್ಚೆ ನಡೆಯಬೇಕಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದ್ದಾರೆ.

ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜು.16) ಅನುಮೋದನೆ ನೀಡಿತ್ತು. ಇದಕ್ಕೆ ಉದ್ಯಮಿ ಕಿರಣ್‌ ಮಜುಂದಾರ್‌ ಶಾ, ಮೋಹನ್​ ದಾಸ್​ ಪೈ ಸೇರಿದಂತೆ ಇನ್ನೂ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೆ ಒಳಗಾದ ಸರಕಾರ, ವಿಧೇಯಕ ಜಾರಿಗೆ ಹಿಂದೇಟು ಹಾಕಿದೆ. ಈ ಹಿನ್ನೆಲೆಯಲ್ಲಿ ಇಂದು (ಜು.18) ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸಚಿವರಾದ ದಿನೇಶ್‌ ಗುಂಡೂರಾವ್​, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್‌ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ

Continue Reading

ಕ್ರೈಂ

UDR Case: ವಿದೇಶಿ ಪ್ರಜೆಯ ಕೊಳೆತ ಶವ ಬೆಂಗಳೂರಿನಲ್ಲಿ ಪತ್ತೆ

UDR Case: ಕಳೆದ ತಿಂಗಳ 27ರಂದು ಮನೆ ಓನರ್‌ಗೆ ಕರೆ ಮಾಡಿದ್ದ ಜೇಮ್ಸ್, ಆಗಸ್ಟ್ 1ರವರೆಗೂ ನನ್ನನ್ನು ಡಿಸ್ಟರ್ಬ್‌ ಮಾಡಬೇಡಿ ಎಂದು ಹೇಳಿದ್ದ. ಶನಿವಾರ ಮನೆ ಮಾಲೀಕ ಎಷ್ಟೇ ಕರೆ ಮಾಡಿದರೂ ಜೇಮ್ಸ್ ಸ್ವೀಕರಿಸಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮನೆ ಬಳಿ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

VISTARANEWS.COM


on

udr case foreigner
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bangalore crime) ವಿದೇಶಿ ಪ್ರಜೆಯ (Foreigner) ಶವ (Body) ಕೊಳೆತ ಸ್ಥಿತಿಯಲ್ಲಿ (UDR Case) ಪತ್ತೆಯಾಗಿದೆ. ಯುಕೆ ಮೂಲದ ಪ್ರಜೆ ಗೇವಿನ್ ಜೇಮ್ಸ್ ಯಂಗ್ (59) ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಶಂಕೆ ಇದೆ.

ಕೋರಮಂಗಲ 7ನೇ ಬ್ಲಾಕ್‌ಲ್ಲಿ ಘಟನೆ ನಡೆದಿದೆ. ಮೃತ ಜೇಮ್ಸ್‌ ಡೆತ್ ನೋಟ್ ಬರೆದಿಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಜುಲೈ 1ರಂದು ಬೆಂಗಳೂರಿಗೆ ಬಂದಿದ್ದ ಜೇಮ್ಸ್ ಯಂಗ್, ಆಪ್ ಮೂಲಕ ಕೋರಮಂಗಲದಲ್ಲಿ ಮನೆ ಬಾಡಿಗೆಗೆ ಪಡೆದಿದ್ದ. ಜನಾರ್ದನ್ ಎಂಬವರ ಮನೆಯಲ್ಲಿ ಬಾಡಿಗೆಗೆ ಇದ್ದ. ಶೆಫ್ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದ.

ಜೇಮ್ಸ್‌ ಹೆಂಡತಿಯಿಂದ ಡೈವೋರ್ಸ್‌ ಕೂಡ ಪಡೆದಿದ್ದು, ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಅನಾರೋಗ್ಯದಿಂದ ಕೂಡ ಬಳಲುತ್ತಿದ್ದ ಜೇಮ್ಸ್‌ಗೆ ಬಿಪಿ, ಶುಗರ್ ಕೂಡ ಇತ್ತು. ಶುಗರ್ ಹಿನ್ನೆಲೆಯಲ್ಲಿ ಮಾತ್ರೆ ಹಾಗೂ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದ. ಓವರ್ ಡೋಸ್ ಟ್ಯಾಬ್ಲೆಟ್ ಹಾಗೂ ಇನ್ಸುಲಿನ್ ತಗೆದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅನುಮಾನಿಸಲಾಗಿದೆ.

ಕಳೆದ ತಿಂಗಳ 27ರಂದು ಮನೆ ಓನರ್‌ಗೆ ಕರೆ ಮಾಡಿದ್ದ ಜೇಮ್ಸ್, ಆಗಸ್ಟ್ 1ರವರೆಗೂ ನನ್ನನ್ನು ಡಿಸ್ಟರ್ಬ್‌ ಮಾಡಬೇಡಿ ಎಂದು ಹೇಳಿದ್ದ. ಶನಿವಾರ ಮನೆ ಮಾಲೀಕ ಎಷ್ಟೇ ಕರೆ ಮಾಡಿದರೂ ಜೇಮ್ಸ್ ಸ್ವೀಕರಿಸಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮನೆ ಬಳಿ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಕೂಡಲೇ ಕೋರಮಂಗಲ ಪೊಲೀಸರಿಗೆ ಮನೆ ಮಾಲೀಕ ಜನಾರ್ದನ್ ಮಾಹಿತಿ ನೀಡಿದ್ದಾರೆ. ಕೋರಮಂಗಲ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾವಿನ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು, ಈ ಬಗ್ಗೆ ಎಫ್ಆರ್‌ಆರ್‌ಓಗೆ ಮಾಹಿತಿ ನೀಡಿದ್ದಾರೆ. ಕೋರಮಂಗಲ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಹೌದು, ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಶುಕ್ರವಾರ (ಆಗಸ್ಟ್‌ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

ವಿಡಿಯೊ ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್‌ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Kangana Ranaut: ಮಲಗುವ ಕೋಣೆಗಳಲ್ಲಿ ಲೈಂಗಿಕತೆ ಏಕೆ ಉಳಿಯಬಾರದು?; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ

Continue Reading

ಮಳೆ

Karnataka weather : ಬೆಂಗಳೂರಿನಲ್ಲಿ ಚದುರಿದಂತೆ, ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ

Karnataka weather Forecast : ರಾಜ್ಯದ ಹಲವೆಡೆ ಮಳೆ (Rain News) ಪ್ರಮಾಣ ತಗ್ಗಿದೆ. ಕರಾವಳಿಯ ಕೆಲವೆಡೆ ಭಾರಿ ಮಳೆಯಾದರೆ, ಒಳನಾಡಿನಲ್ಲಿ ಒಣ ವಾತಾವರಣ ಇರಲಿದೆ. ಕೆಲವೊಮ್ಮೆ ಮೇಲ್ಮೇ ಗಾಳಿ ಬೀಸಲಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Heavy Rain alert) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಲವಾದ ಮೇಲ್ಮೈ ಮಾರುತಗಳು (Karnataka Weather Forecast) ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿರಲಿದೆ. ಮಲೆನಾಡಿನ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Karnataka Weather Forecast
Karnataka Weather Forecast

ಇದನ್ನೂ ಓದಿ: Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

ಬೆಂಗಳೂರಿನಲ್ಲಿ ಚದುರಿದ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Bengaluru:‌ ಬೆಂಗಳೂರಲ್ಲಿ ಸ್ತ್ರೀಯರಿಗಿಲ್ಲ ರಕ್ಷಣೆ; ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಕಿಸ್‌ ಕೊಟ್ಟ ಕಾಮುಕ; Video ವೈರಲ್

Bengaluru: ಬೆಂಗಳೂರಿನ ಕೋಣನಕುಂಟೆ ಬಳಿಯ ಕೃಷ್ಣಾ ನಗರದಲ್ಲಿ ಮಹಿಳೆಯೊಬ್ಬರು ವಾಕಿಂಗ್‌ ಮಾಡುತ್ತಿದ್ದರು. ಇದೇ ವೇಳೆ ದುಷ್ಕರ್ಮಿಯೊಬ್ಬ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಗೆ ಕಿಸ್‌ ಕೊಟ್ಟು ಆತ ಪರಾರಿಯಾಗಿದ್ದಾನೆ. ಈ ವಿಡಿಯೊ ಈಗ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

VISTARANEWS.COM


on

Bengaluru
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಹೌದು, ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಸಿಸಿಟಿವಿ ದೃಶ್ಯಾವಳಿ

ಶುಕ್ರವಾರ (ಆಗಸ್ಟ್‌ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

ವಿಡಿಯೊ ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್‌ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಕೆಲವು ವಾರಗಳಿಂದ ಸಕ್ರಿಯವಾಗಿರುವ ಎಟಿಎಂ ಕಳ್ಳರ ಗ್ಯಾಂಗ್‌ಗಳು ಕೂಡ ಪೊಲೀಸರಿಗೆ ತಲೆನೋವಾಗಿವೆ. ಹರಿಯಾಣ ಮೂಲದ ಎರಡು ಗ್ಯಾಂಗ್‌ಗಳು ಸತತವಾಗಿ ಎಟಿಎಂಗಳಿಂದ ಹಣ ಎತ್ತುತ್ತಿವೆ. ಗುರುತೇ ಸಿಗದಂತೆ ದರೋಡೆ ಮಾಡುತ್ತಿರುವ ಈ ಗ್ಯಾಂಗ್‌ಗಳು ಪೊಲೀಸರಿಗೆ ತಲೆನೋವಾಗಿವೆ.

ಬೆಳ್ಳಂದೂರು ಠಾಣೆ ವ್ಯಾಪ್ತಿಯ ಎಕ್ಸಿಸ್ ಬ್ಯಾಂಕ್ ಎಟಿಎಂನಿಂದ ಕಳ್ಳತನ ಮಾಡಲಾಗಿದೆ. ಇಕೋ ಎರ್ಟಿಗಾ ಕಾರ್‌ನಲ್ಲಿ ಬಂದು ಕಳವು ಮಾಡಲಾಗಿದೆ. ಪರಿಶೀಲಿಸಿದಾಗ ಕಾರು ಕೂಡ ಕಳವು ಮಾಲು ಎಂಬುದು ಗೊತ್ತಾಗಿದೆ. ಆರೋಪಿಗಳು ಮೈಮೇಲೆ ಹೊದಿಕೆ ಹೊದ್ದುಕೊಂಡು ಎಟಿಎಂ ಒಳಗೆ ಹೋಗಿ ಕೃತ್ಯ ನಡೆಸುತ್ತಿದ್ದಾರೆ. ಹೀಗಾಗಿ ಇವರು ಗುರುತು ಕಾಣಿಸದಾಗಿದೆ.

ಇದನ್ನೂ ಓದಿ: Kangana Ranaut: ಮಲಗುವ ಕೋಣೆಗಳಲ್ಲಿ ಲೈಂಗಿಕತೆ ಏಕೆ ಉಳಿಯಬಾರದು?; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ

Continue Reading
Advertisement
teacher jobs alert
ಪ್ರಮುಖ ಸುದ್ದಿ5 mins ago

Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

udr case foreigner
ಕ್ರೈಂ20 mins ago

UDR Case: ವಿದೇಶಿ ಪ್ರಜೆಯ ಕೊಳೆತ ಶವ ಬೆಂಗಳೂರಿನಲ್ಲಿ ಪತ್ತೆ

gratitude ರಾಜಮಾರ್ಗ ಅಂಕಣ
ಅಂಕಣ50 mins ago

ರಾಜಮಾರ್ಗ ಅಂಕಣ: ಕೃತಜ್ಞತೆ ಎಂಬ ಮಹಾನ್ ಪ್ರವಾಹ

Shravan 2024
ಕರ್ನಾಟಕ2 hours ago

Shravan 2024: ಇಂದಿನಿಂದ ಶ್ರಾವಣ ಶುಭಾರಂಭ; ಈ ತಿಂಗಳ ವಿಶೇಷ ಏನು?

Waqf Act
EXPLAINER2 hours ago

Waqf Act: ವಕ್ಫ್‌ ಮಂಡಳಿ ಪರಮಾಧಿಕಾರಕ್ಕೆ ಮೋದಿ ಮೂಗುದಾರ; ಏನೆಲ್ಲ ತಿದ್ದುಪಡಿ? 9.4 ಲಕ್ಷ ಎಕರೆ ಯಾರ ಪಾಲು?

ಪ್ರಮುಖ ಸುದ್ದಿ2 hours ago

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳು ಎಷ್ಟಿವೆ? ಇಲ್ಲಿದೆ ಎಲ್ಲ ವಿವರಗಳು

karnataka Weather Forecast
ಮಳೆ2 hours ago

Karnataka weather : ಬೆಂಗಳೂರಿನಲ್ಲಿ ಚದುರಿದಂತೆ, ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Bengaluru
ಕ್ರೈಂ8 hours ago

Bengaluru:‌ ಬೆಂಗಳೂರಲ್ಲಿ ಸ್ತ್ರೀಯರಿಗಿಲ್ಲ ರಕ್ಷಣೆ; ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಕಿಸ್‌ ಕೊಟ್ಟ ಕಾಮುಕ; Video ವೈರಲ್

Wanindu Hasaranga
ಕ್ರೀಡೆ8 hours ago

Wanindu Hasaranga : ಭಾರತ ವಿರುದ್ಧದ ಏಕ ದಿನ ಸರಣಿಗೆ ಲಂಕಾದ ಆಲ್​ರೌಂಡರ್​ ಔಟ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ18 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌