Vistara ವಿಶ್ಲೇಷಣೆ | 8 ವರ್ಷದಲ್ಲಿ ಕರ್ನಾಟಕಕ್ಕೆ ಜನಸಂಖ್ಯೆ ಗಂಡಾಂತರ: ಮೋಹನದಾಸ್‌ ಪೈ ವರದಿಯಲ್ಲಿ ಬಹಿರಂಗ - Vistara News

ಕರ್ನಾಟಕ

Vistara ವಿಶ್ಲೇಷಣೆ | 8 ವರ್ಷದಲ್ಲಿ ಕರ್ನಾಟಕಕ್ಕೆ ಜನಸಂಖ್ಯೆ ಗಂಡಾಂತರ: ಮೋಹನದಾಸ್‌ ಪೈ ವರದಿಯಲ್ಲಿ ಬಹಿರಂಗ

ಕರ್ನಾಟಕದ ಆರ್ಥಿಕತೆಯ ಕುರಿತು ಅನೇಕ ಧನಾತ್ಮಕ ಅಂಶಗಳನ್ನು ಮೋಹನದಾಸ್‌ ಪೈ ಹಾಗೂ ನಿಶಾ ಹೊಳ್ಳ ವರದಿ ತಿಳಿಸಿದ್ದರೂ ಸವಾಲುಗಳನ್ನೂ ಪಟ್ಟಿ ಮಾಡಿದೆ.

VISTARANEWS.COM


on

mohandas pai report
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ವರದಿಯನ್ನು ಮಂಗಳವಾರ ಬಿಡುಗಡೆ ಮಾಡಲಾಯಿತು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
nalin kumar kateel

ರಮೇಶ ದೊಡ್ಡಪುರ, ಬೆಂಗಳೂರು
ದೇಶದಲ್ಲೆ ಅತ್ಯಧಿಕ ಸ್ಟಾರ್ಟಪ್‌ಗಳನ್ನು ಹೊಂದಿರುವ ರಾಜ್ಯ, ತಂತ್ರಜ್ಞಾನದ ರಾಜಧಾನಿ ಎಂಬ ಹೆಗ್ಗಳಿಕೆ ಹೊಂದಿರುವ ಕರ್ನಾಟಕ ರಾಜ್ಯಕ್ಕೆ ಮುಂದಿನ ಎಂಟು ವರ್ಷದಲ್ಲಿ ಹೆಚ್ಚಿನ ಸವಾಲುಗಳು ಹಾಗೂ ಜನಸಂಖ್ಯೆಯ ಗಂಡಾಂತರ ಎದುರಾಗಲಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಮುಖ್ಯವಾಗಿ, ಕುಸಿಯುತ್ತಿರುವ ಫಲವತ್ತತೆ, ಯುವಕರ ಸಂಖ್ಯೆ ಕುಸಿತ, ಹಿರಿಯ ನಾಗರಿಕರ ಸಂಖ್ಯೆ ಹೆಚ್ಚಳದಂತಹ ಅನೇಕ ಸಂಗತಿಗಳನ್ನು ತಿಳಿಸಿಕೊಟ್ಟಿದೆ.

ಇನ್ಫೋಸಿಸ್‌ ಸಹ ಸಂಸ್ಥಾಪಕ ಟಿ.ವಿ. ಮೋಹನದಾಸ್‌ ಪೈ ಹಾಗೂ ಆರ್ಥಿಕ ತಜ್ಞೆ ನಿಶಾ ಹೊಳ್ಳ ಅವರು ಸಿದ್ಧಪಡಿಸಿ, ಸಿಎಂ ಬಸವರಾಜ ಬೊಮ್ಮಾಯಿ ಮಂಗಳವಾರ ಬಿಡುಗಡೆ ಮಾಡಿದ ʼಕರ್ನಾಟಕ- $೧ ಲಕ್ಷ ಕೋಟಿ ಜಿಡಿಪಿ ಮಹತ್ವಾಕಾಂಕ್ಷೆʼ ಕುರಿತ ವರದಿಯಲ್ಲಿ ಇಂತಹ ಅಂಶಗಳನ್ನು ತಿಳಿಸಲಾಗಿದೆ.

ಮುಖ್ಯವಾಗಿ ಕರ್ನಾಟಕವನ್ನು 2026ರ ವೇಳೆಗೆ $1 ಲಕ್ಷ ಕೋಟಿ ಜಿಡಿಪಿಯ ಆರ್ಥಿಕತೆಯನ್ನಾಗಿ ರೂಪಿಸಲು ಸರ್ಕಾರಕ್ಕೆ ಮಾರ್ಗದರ್ಶಿ ಸೂತ್ರಗಳನ್ನು ಈ ವರದಿ ನೀಡಿದೆ. 2025ರ ವೇಳೆಗೆ ಭಾರತವನ್ನು $5 ಲಕ್ಷ ಕೋಟಿ ಜಿಡಿಪಿಯ ಆರ್ಥಿಕತೆಯನ್ನಾಗಿ ರೂಪಿಸುವುದಾಗಿ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದರು. ಆದರೆ ಈ ನಡುವೆ ಕೋವಿಡ್‌ ಆಗಮಿಸಿದರಿಂದ ಗುರಿಯನ್ನು 2026ಕ್ಕೆ ಮುಂದೂಡಲಾಗಿದೆ. ಈ $5 ಲಕ್ಷ ಕೋಟಿ ಜಿಡಿಪಿ ಆರ್ಥಿಕತೆಯಲ್ಲಿ ಕರ್ನಾಟಕವು $1 ಲಕ್ಷ ಕೋಟಿ ಅಂದರೆ ಒಟ್ಟು ದೇಶದ ಜಿಡಿಪಿಯ ಶೇ.20 ಪಾಲನ್ನು ಕರ್ನಾಟಕ ಸಾಧಿಸಬೇಕು ಎಂಬ ಮಹತ್ವಾಕಾಂಕ್ಷಿ ಗುರಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಆದರೆ ಇದೀಗ ಮೋಹನದಾಸ್‌ ಪೈ ಹಾಗೂ ನಿಶಾ ಹೊಳ್ಳ ಸಿದ್ಧಪಡಿಸಿರುವ ವರದಿಯಲ್ಲಿ, ಕರ್ನಾಟಕವನ್ನು 2032ಕ್ಕೆ ಅಂದರೆ ಭಾರತದ ಜಿಡಿಪಿಯು $10 ಲಕ್ಷ ಕೋಟಿ ಡಾಲರ್‌ ಆದಾಗ $1 ಲಕ್ಷ ಕೋಟಿಗೆ ಕೊಂಡೊಯ್ಯುವ ಗುರಿ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಗುರಿ ಅಸಾಧ್ಯ ಎನ್ನುವುದನ್ನು ವರದಿ ಪರೋಕ್ಷವಾಗಿ ತಿಳಿಸಿಕೊಟ್ಟಿದೆ.

ಇದನ್ನೂ ಓದಿ | ಕರ್ನಾಟಕದ ಆರ್ಥಿಕತೆಯನ್ನು1 ಲಕ್ಷ ಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿ: ಸಿಎಂ ಬೊಮ್ಮಾಯಿ

ಶೇ.10 ಪಾಲು ಹೊಂದಬೇಕು

ಭಾರತವು ವಾರ್ಷಿಕ ಶೇ.12ಸಿಎಜಿಆರ್‌ ದರದಲ್ಲಿ ಏರಿಕೆ ಕಾಣುತ್ತ ಸಾಗಿದರೆ 2032ಕ್ಕೆ $10 ಲಕ್ಷ ಕೋಟಿ ಆರ್ಥಿಕತೆ ಆಗುತ್ತದೆ. ಆದರೆ ಕರ್ನಾಟಕ ಈ ವೇಗದಲ್ಲಿ ಸಾಗಿದರೆ ಗುರಿ ಮುಟ್ಟಲು ಆಗುವುದಿಲ್ಲ. ಇದೀಗ ದೇಶದ ಜಿಡಿಪಿಯಲ್ಲಿ ಕರ್ನಾಟಕದ ಪಾಲು ಶೇ. 8.7 ಇದೆ. ಈ ಪ್ರಮಾಣವನ್ನು ಶೇ.10ಕ್ಕೆ ಕೊಡೊಯ್ಯಬೇಕೆಂದರೆ ಕರ್ನಾಟಕವು ಶೇ.16.3 ದರದಲ್ಲಿ ಏರಿಕೆ ಕಾಣಬೇಕಾಗುತ್ತದೆ ಎನ್ನುವುದನ್ನು ಮೋಹನದಾಸ್‌ ಪೈ ಹಾಗೂ ನಿಶಾ ಹೊಳ್ಳ ವರದಿ ತಿಳಿಸಿದೆ.

ಕರ್ನಾಟಕದ ಒಟ್ಟು ಆರ್ಥಿಕತೆಯಲ್ಲಿ ಶೇ.66 ಪಾಲನ್ನು ಸೇವಾ ವಲಯವೇ ಪಡೆದುಕೊಂಡಿದೆ. ಅದರಲ್ಲೂ ಸಾಫ್ಟ್‌ವೇರ್‌ ಕ್ಷೇತ್ರದ ಪಾಲು ಇದರಲ್ಲಿ ಅಗ್ರಗಣ್ಯ. ಕೈಗಾರಿಕಾ ವಲಯ ಶೇ.೨೦, ಕೃಷಿ ವಲಯದ ಪಾಲು ಶೇ.33.8 ಆದರೆ ಇದು ಕ್ರಮೇಣ ಇಳಿಕೆ ಆಗುತ್ತಿದೆ.

ಜನಸಂಖ್ಯೆಯ ಅಪಾಯ

ಕರ್ನಾಟಕದಲ್ಲಿ ಸದ್ಯ 6.6 ಕೋಟಿ ಜನಸಂಖ್ಯೆ ಇದ್ದು, 2030ರ ವೇಳೆಗೆ 7.06 ಕೋಟಿ ಆಗುತ್ತದೆ. ಫಲವತ್ತತೆ ದರವು ಕರ್ನಾಟಕದಲ್ಲಿ ಕುಸಿಯುತ್ತಿದೆ ಎಂದು ವರದಿ ಆತಂಕ ವ್ಯಕ್ತಪಡಿಸಿದೆ. ಸದ್ಯ ಫಲವತ್ತತೆ ದರವು 1.೭ ಇದ್ದು, ಈಗಾಗಲೆ ದೇಶದ ಸರಾಸರಿಗಿಂತ (೨) ಕಡಿಮೆ ಇದೆ. 2030ರ ವೇಳೆಗೆ ಈ ಪ್ರಮಾಣವು ಮತ್ತಷ್ಟು ಕುಸಿದು 1.5 ಆಗುತ್ತದೆ.ಅದಕ್ಕಿಂತಲೂ ಆಘಾತಕಾರಿ ಸಂಗತಿ ಎಂದರೆ ಕರ್ನಾಟಕದಲ್ಲಿ ಯುವಕರ ಸಂಖ್ಯೆ ಕಡಿಮೆ ಆಗುತ್ತಿದೆ. ಸದ್ಯ 18-23 ವಯೋಮಾನದವರ ಪ್ರಮಾಣ ಶೇ. 10.2 ಇದೆ. 60 ವರ್ಷ ಮೀರಿದವರ ಪ್ರಮಾಣ ಶೇ.11.5 ಇದೆ. ಆದರೆ 2030ರ ವೇಳೆಗೆ 18-23 ವಯೋಮಾನದವರ ಪ್ರಮಾಣ ಶೇ.8.7ಕ್ಕೆ ಕುಸಿದರೆ 60 ವರ್ಷ ಮೀರಿದವರ ಸಂಖ್ಯೆ ಶೇ. 15ಕ್ಕೆ ಹೆಚ್ಚಾಗಲಿದೆ ಎಂದು ವರದಿ ಹೇಳಿದೆ.

ಅಂದರೆ 2030ರ ವೇಳೆಗೆ ರಾಜ್ಯದಲ್ಲಿ ಹಿರಿಯ ನಾಗರಿಕರ ಸಂಖ್ಯೆ ಹೆಚ್ಚಾಗುತ್ತದೆ. ಇದರಿಂದಾಗಿ ಯುವಕರ ಮೇಲೆ ಹೆಚ್ಚಿನ ಒತ್ತಡಬೀಳುತ್ತದೆ. ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡುವವರ ಸಂಖ್ಯೆಯೂ ಕಡಿಮೆ ಆಗುತ್ತದೆ. ಹಿರಿಯ ನಾಗರಿಕರ ಆರೋಗ್ಯದ ಮೇಲೆ ಸರ್ಕಾರ ಹೆಚ್ಚು ವೆಚ್ಚ ಮಾಡಬೇಕಾಗುತ್ತದೆ ಎಂಬುದರತ್ತ ವರದಿಯು ಬೊಟ್ಟು ಮಾಡಿ ತೋರಿಸಿದೆ. “ಆರ್ಥಿಕ ಉತ್ಪಾದನೆಯನ್ನು ಬೆಂಬಲಿಸುವ ಕೌಶಲ್ಯ ಭರಿತ ಕಾರ್ಯಪಡೆಯನ್ನು ಹೆಚ್ಚಿಸುವ ಅವಕಾಶಗಳೊಂದಿಗೆ, ಅಧಿಕವಾಗುತ್ತಿರುವ ಹಿರಿಯ ನಾಗರೀಕರಿಗೆ ಸಾಮಾಜಿಕ ಭದ್ರತೆ ನೀಡುವುದು ನಿರ್ಣಾಯಕವಾಗಿದೆ” ಎಂದು ವರದಿ ಹೇಳಿದೆ.

ಕರ್ನಾಟಕದ ಮುಂದಿರುವ ಸವಾಲುಗಳು

  1. ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ಗಮನ ನೀಡಬೇಕಾಗಿರುವ 6 ಅಂಶಗಳನ್ನು ವರದಿಯಲ್ಲಿ ಪಟ್ಟಿ ಮಾಡಲಾಗಿದೆ.
  2. ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಡುವಿನ ಅಭಿವೃದ್ಧಿಯ ಅಂತರ ಹೆಚ್ಚಾಗಿದೆ. ಅತೀ ಬಡತನವಿರುವ ಹತ್ತು ಜಿಲ್ಲೆಗಳು ಉತ್ತರ ಕರ್ನಾಟಕ ಭಾಗದಲ್ಲೇ ಇವೆ.
  3. ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಯಲ್ಲಿ ಕುಸಿತ
  4. ಕೆಲವು ವಲಯಗಳಲ್ಲಿ ಸರ್ಕಾರದ ವೆಚ್ಚ ದುಪ್ಪಟ್ಟಾಗಿದೆ
  5. ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಹಿಂದುಳಿಯಲಾಗಿದೆ. ಉನ್ನತ ಶಿಕ್ಷಣಕ್ಕೆ ದಾಖಲಾಗುವವರ ಪ್ರಮಾಣ ದಕ್ಷಿಣ ಭಾರತದಲ್ಲಿ, ಕರ್ನಾಟಕದಲ್ಲಿಯೇ ಅತಿ ಕಡಿಮೆ ಇದೆ.
  6. ಫಲವತ್ತತೆ ಪ್ರಮಾಣ ಕುಸಿಯುತ್ತಿದೆ. ಹೆಚ್ಚಿನ ಹಿರಿಯ ನಾಗರಿಕರನ್ನು ಹೊಂದಲಿದೆ. ಉತ್ಪಾದನೆ ಹೆಚ್ಚಿಸುವಂತೆ ಕಾರ್ಮಿಕರನ್ನು ಉತ್ತೇಜಿಸುವುದು
  7. ತಂತ್ರಜ್ಞಾನದ ಅಡೆತಡೆ ಹಾಗೂ ಯಾಂತ್ರೀಕರಣದಿಂದಾಗಿ ಅನೇಕ ಸೇವಾ ವಲಯಗಳ ಉದ್ಯೋಗದ ಮೇಲೆ ಪರಿಣಾಮ ಬೀರುತ್ತದೆ.

ವರದಿಯಲ್ಲಿ ಸೂಚಿಸಿರುವ 9 ಆರ್ಥಿಕ ಕಾರ್ಯತಂತ್ರಗಳು

  1. ಕೃಷಿ ವಲಯವನ್ನು ತಂತ್ರಜ್ಞಾನ, ಬ್ರ್ಯಾಂಡಿಂಗ್‌, ಮಾರುಕಟ್ಟೆ ಮತ್ತು ರಪ್ತು ಮೂಲಕ ಉತ್ತೇಜಿಸುವುದು
  2. ಕಾರ್ಮಿಕ ಆಧಾರಿತ ಕೈಗಾರಿಕೆಗಳ ಮೂಲಕ ಉತ್ಪಾದನೆ ಮತ್ತು ರಫ್ತುಗಳನ್ನು ಹೆಚ್ಚಿಸುವುದು (ಉದಾ: ವಿದ್ಯುತ್ ಉಪಕರಣಗಳು, ಯಂತ್ರೊಪಕರಣಗಳು ಪಿಟೋಪಕರಣಗಳು)
  3. ಮೂಲಭೂತ ಸೌಕರ್ಯಗಳಿಗೆ ವೆಚ್ಚವನ್ನು ಹೆಚ್ಚಿಸುವ ಮೂಲಕ ನಿರ್ಮಾಣ ವಲಯದ ಮೌಲ್ಯವರ್ಧನೆಯನ್ನು ಉತ್ತೇಜಿಸುವುದು
  4. ಬೆಂಗಳೂರು ಹೊರತುಪಡಿಸಿ – 200 ಸಣ್ಣಪಟ್ಟಣಗಳಲ್ಲಿ ವ್ಯವಸ್ಥಿತ ನಗರೀಕರಣ
  5. NITI ಆಯೋಗದ ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮವನ್ನು ವಿಸ್ತರಿಸುವುದು
  6. ಉತ್ಪಾದನೆ ಮತ್ತು ರಫ್ತು ಕೈಗಾರಿಕೆಗಳ ಮೌಲ್ಯವರ್ಧನೆಯನ್ನು ಹೆಚ್ಚಿಸಲು ವಿಶೇಷವಾದ ಹೈಟೆಕ್ ಉದ್ಯಮಗಳ ಸೃಜನೆ
  7. ಬೆಂಗಳೂರು ಗ್ಲೋಬಲ್ ಹೈಟೆಕ್ ಸಿಟಿ ಆಗಲು ಹೆಚ್ಚಿನ ಹೂಡಿಕೆ ಮಾಡುವುದು
  8. ಫೀಡ್‌ಫಾರ್ವರ್ಡ್‌ ಸಾಮರ್ಥ್ಯಗಳು ಮತ್ತು ಬೆಳವಣಿಗೆಯ ಕ್ಷೇತ್ರಗಳನ್ನು ನಿರ್ಮಿಸಲು ಮಾಹಿತಿ ತಂತ್ರಜ್ಞಾನ ಸೇವಾ ವಲಯವನ್ನು ತ್ವರಿತಗೊಳಿಸುವುದು
  9. ನವೋದ್ಯಮಗಳ ಇಕೋಸಿಸ್ಟಮ್‌ನ್ನು ಬಲಪಡಿಸಲು ಹೂಡಿಕೆ ಮಾಡುವುದು

ಇದನ್ನೂ ಓದಿ | Economy | 2029ರಲ್ಲಿ ಜಗತ್ತಿನ 3ನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ ಭಾರತ: ಎಸ್‌ಬಿಐ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಮೇ 25ರಂದು ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ (Rain News) ಇದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ಗದಗ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡಿನ ಹಾಸನ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Driving Bus With Umbrella: ಮಳೆಯಿಂದ ಬಸ್ ಸೋರಿಲ್ಲ, ಮೋಜಿಗಾಗಿ ಡ್ರೈವರ್ ಕೊಡೆ ಹಿಡಿದು ಚಾಲನೆ ಮಾಡಿದ್ದ ಎನ್ನುವ ವಿಷಯ ಬೆಳಕಿಗೆ ಬಂದಿದೆ. ಹೀಗಾಗಿ ಚಾಲಕ, ನಿರ್ವಾಹಕಿಯನ್ನು ಅಮಾನತು ಮಾಡಲಾಗಿದೆ.

VISTARANEWS.COM


on

Koo

ಧಾರವಾಡ: ಸಾರಿಗೆ ಬಸ್‌ನಲ್ಲಿ ಚಾಲಕ ಛತ್ರಿ ಹಿಡಿದು ಚಾಲನೆ ಮಾಡಿದ್ದ ವಿಡಿಯೊ ವೈರಲ್ (Driving Bus With Umbrella) ಆದ ಹಿನ್ನೆಲೆಯಲ್ಲಿ ಕಳಪೆ ನಿರ್ವಹಣೆ ಬಗ್ಗೆ ಸಾರಿಗೆ ನಿಗಮದ ವಿರುದ್ಧ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದರು. ಆದರೆ, ವಿಡಿಯೊ ವೈರಲ್ ಆಗುತ್ತಿದ್ದಂತೆ ಸಿಬ್ಬಂದಿಯನ್ನು ಅಧಿಕಾರಿಗಳು ವಿಚಾರಣೆ ಮಾಡಿದಾಗ, ವಿಡಿಯೋ ಅಸಲಿಯತ್ತು ಹೊರಬಿದ್ದಿದೆ. ಮಳೆಯಿಂದ ಬಸ್ ಸೋರಿಲ್ಲ, ಮೋಜಿಗಾಗಿ ಡ್ರೈವರ್ ಕೊಡೆ ಹಿಡಿದು ಚಾಲನೆ ಮಾಡಿದ್ದ ಎನ್ನುವ ವಿಷಯ ಬೆಳಕಿಗೆ ಬಂದಿದೆ. ಹೀಗಾಗಿ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ ಅಮಾನತು ಮಾಡಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸೋರುತಿಹುದು ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್ ಎಂದು ವಿಡಿಯೊ ವೈರಲ್ ಆಗಿತ್ತು. ಇದರಿಂದ ಸಾರಿಗೆ ನಿಗಮದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ವಿಡಿಯೊ ವೈರಲ್ ಆಗುತ್ತಿದ್ದಂತೆ ಸಿಬ್ಬಂದಿಯನ್ನು ಅಧಿಕಾರಿಗಳು ವಿಚಾರಣೆ ಮಾಡಿದಾಗ ಅಸಲೀ ವಿಷಯ ಬೆಳಕಿಗೆ ಬಂದಿದೆ. ಮಳೆಯಿಂದ ಬಸ್ ಸೋರಿಲ್ಲ, ಮೋಜಿಗಾಗಿ ಡ್ರೈವರ್ ಕೊಡೆ ಹಿಡಿದು ಚಾಲನೆ ಮಾಡಿದ್ದ ಎನ್ನುವುದು ತಿಳಿದುಬಂದಿದೆ.

ಕೊಡೆ ಹಿಡಿದು ಡ್ರೈವರ್ ಚಾಲನೆ ಮಾಡುತ್ತಿದ್ದರೆ ನಿರ್ವಾಹಕಿ ವಿಡಿಯೊ ಸೆರೆಹಿಡಿದಿದ್ದಾಳೆ. ಪ್ರಕರಣ ಸಂಬಂಧ ಚಾಲಕ ಹಣಮಂತ್ ಕಿಲ್ಲೇದಾರ್ ಹಾಗೂ ನಿರ್ವಾಹಕಿ ಎಚ್. ಅನಿತಾ ಅವರನ್ನು ಅಮಾನತು ಮಾಡಿ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

ಧಾರವಾಡದಲ್ಲಿ ಭಾರಿ ಮಳೆಗೆ ಸಾರಿಗೆ ಬಸ್‌ನಲ್ಲಿ ನೀರು ಸೋರುತ್ತಿದ್ದ ಕಾರಣಕ್ಕೆ, ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಬಸ್ ಡ್ರೈವಿಂಗ್ ಮಾಡಿದ್ದಾರೆ ಎಂಬ ವಿಡಿತೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಗೆ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ನಲ್ಲಿ ಭಾರಿ ಮಳೆಗೆ ಎಲ್ಲ ಕಡೆಯು ನೀರು ಸೋರಿದೆ. ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ಚಾಲಕ ಛತ್ರಿ ಹಿಡಿದುಕೊಂಡು ಬಸ್‌ ಅನ್ನು ಚಾಲನೆ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ, ಕರ್ತವ್ಯದ ವೇಳೆ ರೀಲ್ಸ್‌ ಮಾಡಲು ಬಸ್‌ ಬಳಕೆ ಮಾಡಿಕೊಂಡಿದ್ದರಿಂದ ಚಾಲಕ, ನಿರ್ವಾಹಕಿ ವಿರುದ್ಧ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಂಡಿದ್ದಾರೆ.

Continue Reading

ಬೆಂಗಳೂರು

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

ಭಾರತದಲ್ಲಿ ಇಂದೋರ್ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಗಳಿಸಿದೆ. ನಮ್ಮ ಹಲವು ಹಿಂದಿನ ಸಚಿವರು ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿಯೂ ಇದ್ದಾರೆ. ಏನೇನು ಕಲಿತುಕೊಂಡು ಬಂದಿದ್ದಾರೆ, ಕಲಿತದ್ದನ್ನು ಅನ್ವಯಿಸಲಾಗಿದೆಯೇ ಇಲ್ಲವೇ ಎಂಬುದು ತಿಳಿಯದು. ಹಾಗೆ ನೋಡಿದರೆ ಉತ್ತರ ಭಾರತದ ಹೆಚ್ಚಿನ ನಗರಗಳಿಗಿಂತ ಬೆಂಗಳೂರಿನ ತ್ಯಾಜ್ಯ ನಿರ್ವಹಣೆ ಉತ್ತಮವಾಗಿದೆ. ಇನ್ನಷ್ಟು ಉತ್ತಮ ಆಗಬೇಕಿದೆ.

VISTARANEWS.COM


on

Vistara editorial
Koo

ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಸ ವಿಲೇವಾರಿ (waste disposal) ಸಮಸ್ಯೆ ಬೃಹತ್‌ ಆಗಿ ಬೆಳೆದು ನಿಂತಿದೆ. ಬಿಬಿಎಂಪಿಯಲ್ಲಿ (BBMP) ಸಾಕಷ್ಟು ಎಂಜಿನಿಯರ್‌ಗಳು (Engineers) ಇದಕ್ಕಾಗಿಯೇ ಇದ್ದರೂ ಇದನ್ನು ನಿರ್ವಹಿಸುವುದು ಸವಾಲೇ ಆಗಿದೆ. ಹೀಗಾಗಿ, ರಾಜ್ಯ ಸರ್ಕಾರದಿಂದ ಕಸ ವಿಲೇವಾರಿಗೆ ಇದೇ ಜೂನ್‌ 1ರಿಂದ ಹೊಸ ಯೋಜನೆ ಜಾರಿಯಾಗುತ್ತಿದೆ. ಘನ ತ್ಯಾಜ್ಯ ವಿಲೇವಾರಿಗಾಗಿಯೇ (garbage disposal) ಒಂದು ಕಂಪನಿಯನ್ನು ರಾಜ್ಯ ಸರ್ಕಾರ ಸ್ಥಾಪಿಸಿದೆ. “ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ” ಹೆಸರಿನ ಈ ಕಂಪನಿ ಘನತ್ಯಾಜ್ಯ ನಿರ್ವಹಣೆಯನ್ನು ಕೈಗೆತ್ತಿಕೊಳ್ಳಲಿದ್ದು, ಇನ್ನು ಮುಂದೆ ನಗರದಲ್ಲಿ ಕಸದ ಸಮಸ್ಯೆ ಕಂಡುಬಂದರೆ ಅದನ್ನು ಈ ಕಂಪನಿಯ ಮುಂದೆ ಪ್ರಶ್ನಿಸಬೇಕಾಗಲಿದೆ. ಒಂದು ರೀತಿಯಿಂದ ಇದಕ್ಕೊಂದು ಪ್ರತ್ಯೇಕ ವ್ಯವಸ್ಥೆ ಇರುವುದು ಒಳ್ಳೆಯದು.

ರಾಜ್ಯ ಸರ್ಕಾರ ಹಾಗೂ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ಜಂಟಿಯಾಗಿ ಈ ಸಂಸ್ಥೆಯನ್ನು ನಿರ್ಮಾಣ ಮಾಡಿವೆ. ಇನ್ನು ಮುಂದೆ ಈ ಕಂಪನಿಯಿಂದಲೇ ಕಸ ಸಂಗ್ರಹಣೆ, ಸಾಗಾಣಿಕೆ ಹಾಗೂ ಹಾಗೂ ವಿಲೇವಾರಿ ಕಾರ್ಯ ನಡೆಯಲಿದೆ. ಜೂನ್ 1ರಿಂದ ಮನೆಮನೆಯಿಂದ ಅಟೋದಲ್ಲಿ ಕಸ ಸಂಗ್ರಹಣೆ, ಸಂಗ್ರಹಿಸಿದ ಕಸವನ್ನು ಟಿಪ್ಪರ್ ಲಾರಿಗಳ ಮೂಲಕ ಕಸದ ಸಂಸ್ಕರಣಾ ಘಟಕ ಅಥವಾ ಕ್ಯಾರಿಗಳಿಗೆ ಸಾಗಿಸುವುದು ಈ ಸಂಸ್ಥೆಯ ಹೊಣೆ. ಬಿಬಿಎಂಪಿ ಅಡಿಯಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ನಿರ್ವಹಿಸುತ್ತಿರುವ ಅಟೋ, ಟಿಪ್ಪರ್, ಕಾಂಪ್ಯಾಕ್ಟರ್ ಚಾಲಕರು, ಸಹಾಯಕರು ಕಂಪನಿ ವ್ಯಾಪ್ತಿಗೆ ಬರಲಿದ್ದಾರೆ. ಘನತ್ಯಾಜ್ಯ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ವಾರ್ಡ್‌ ಮಟ್ಟದ ಎಂಜಿನಿಯರ್‌ಗಳು, ಸಿಬ್ಬಂದಿಗಳು ಹಾಗೂ ಮಾರ್ಷಲ್‌ಗಳು ಕಂಪನಿ ಅಧೀನಕ್ಕೆ ಬರಲಿದ್ದಾರೆ. ಈ ಅಧಿಕಾರಿಗಳ, ಸಿಬ್ಬಂದಿಗಳ ವೇತನವನ್ನು ಕಂಪನಿಯೇ ಪಾವತಿ ಮಾಡಲಿದೆ. ನಗರದಲ್ಲಿ ಇರುವ 7 ಕಸ ಸಂಸ್ಕರಣಾ ಘಟಕಗಳು ಕಂಪನಿ ವ್ಯಾಪ್ತಿಗೆ ಬರಲಿವೆ. ಪೌರ ಕಾರ್ಮಿಕರು, ಗುತ್ತಿಗೆ ಪೌರಕಾರ್ಮಿಕರು ಬಿಬಿಎಂಪಿ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದ್ದು, ಇವರಿಗೆ ಬಿಬಿಎಂಪಿಯಿಂದ ವೇತನ ದೊರೆಯಲಿದೆ. ಪೌರಕಾರ್ಮಿಕರು ಕೇವಲ ಕಸ ಗುಡಿಸುವುದು, ಸಾರ್ವಜನಿಕ ಸ್ಥಳಗಳನ್ನು ಕ್ಲೀನ್ ಮಾಡುವುದು ಮಾಡಲಿದ್ದಾರೆ. ಘನತ್ಯಾಜ್ಯ ಇಲಾಖೆಯನ್ನು ಆರೋಗ್ಯ ಇಲಾಖೆ ಜೊತೆ ವಿಲೀನ ಮಾಡಿ ಅದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಆರೋಗ್ಯ ಮತ್ತು ನೈರ್ಮಲ್ಯ ಇಲಾಖೆ ಎಂದು ಕರೆಯಲಾಗುತ್ತದೆ.

2012ರಿಂದಲೇ ಘನತ್ಯಾಜ್ಯ ನಿರ್ವಹಣೆ ಬಗ್ಗೆ ಹೈಕೋರ್ಟ್, ಬಿಬಿಎಂಪಿಯ ಕಿವಿ ಹಿಂಡುತ್ತ ಬಂದಿದೆ. ಬೆಂಗಳೂರಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ 2012ರಲ್ಲಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಪೀಠ ವಿಚಾರಣೆ ನಡೆಸಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಯ ಸಾಮರ್ಥ್ಯ ವೃದ್ಧಿಸಲು ಮತ್ತು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳುವಂತೆ ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್ ಇತ್ತೀಚೆಗೆ ಸೂಚನೆ ನೀಡಿತ್ತು. ಅದರನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ.

ಭಾರತದಲ್ಲಿ ಇಂದೋರ್ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಗಳಿಸಿದೆ. ನಮ್ಮ ಹಲವು ಹಿಂದಿನ ಸಚಿವರು ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿಯೂ ಇದ್ದಾರೆ. ಏನೇನು ಕಲಿತುಕೊಂಡು ಬಂದಿದ್ದಾರೆ, ಕಲಿತದ್ದನ್ನು ಅನ್ವಯಿಸಲಾಗಿದೆಯೇ ಇಲ್ಲವೇ ಎಂಬುದು ತಿಳಿಯದು. ಹಾಗೆ ನೋಡಿದರೆ ಉತ್ತರ ಭಾರತದ ಹೆಚ್ಚಿನ ನಗರಗಳಿಗಿಂತ ಬೆಂಗಳೂರಿನ ತ್ಯಾಜ್ಯ ನಿರ್ವಹಣೆ ಉತ್ತಮವಾಗಿದೆ. ಇನ್ನಷ್ಟು ಉತ್ತಮ ಆಗಬೇಕಿದೆ. ಆದರೆ ಸಂಸ್ಥೆ ಬದಲಾಯಿಸಿದ ಮಾತ್ರಕ್ಕೆ ನಿರ್ವಹಣೆ ಉತ್ತಮಗೊಳ್ಳುತ್ತದೆ ಎಂದೇನಿಲ್ಲ. ಕಂಪನಿಗೂ ಬಿಬಿಎಂಪಿಗೂ ಹಂಚಿಕೊಳ್ಳಲಾದ ಕಾರ್ಯಗಳಲ್ಲಿ ಭಿನ್ನಮತ ತಲೆದೋರಬಾರದು. ಕಸದ ಸಮಸ್ಯೆಯಿಂದ ಬಿಬಿಎಂಪಿ ಜಾರಿಕೊಳ್ಳಲು ಇದು ನೆಪ ಆಗಬಾರದು. ಈ ಬದಲಾವಣೆಗಳಿಂದ ಮುಂದಿನ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಕಸದ ಸಮಸ್ಯೆ ಇರವುದಿಲ್ಲವೇ, ಗಾರ್ಬೆಜ್ ಸಿಟಿ ಗಾರ್ಡನ್ ಸಿಟಿ ಆಗಲಿದೆಯೇ ಎಂಬ ಪ್ರಶ್ನೆಗಳಿಗೆ ಉತ್ತರ ಕಾದು ನೋಡಬೇಕಿದೆ.

ಇದನ್ನೂ ಓದಿ: Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Continue Reading

ಕ್ರೈಂ

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Electric Shock: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದಲ್ಲಿ ಅವಘಡ ನಡೆದಿದೆ. ಅರೆ ಬರೆ ವಿದ್ಯುತ್ ಕಾಮಗಾರಿ ನಡೆಸಿದ್ದರಿಂದ ವಿದ್ಯುತ್‌ ಸ್ಪರ್ಶಿಸಿ ಬಾಲಕ ಕೊನೆಯುಸಿರೆಳೆದಿದ್ದಾನೆ.

VISTARANEWS.COM


on

Electric Shock
Koo

ರಾಯಚೂರು: ಬೋರ್‌ ವೆಲ್ ಬಳಿ ಕುಡಿಯುವ ನೀರು ತರಲು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತಪಟ್ಟಿರುವ ಘಟನೆ (Electric Shock) ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದಲ್ಲಿ ನಡೆದಿದೆ. ಬೋರ್ ವೆಲ್ ಬಳಿ ಅರೆ ಬರೆ ವಿದ್ಯುತ್ ಕಾಮಗಾರಿ ನಡೆಸಿದ್ದರಿಂದ ವಿದ್ಯುತ್‌ ಸ್ಪರ್ಶಿಸಿ ಬಾಲಕ ಕೊನೆಯುಸಿರೆಳೆದಿದ್ದಾನೆ.

ಬಸವರಾಜ್ (2) ಮೃತ ಬಾಲಕ. ಬೋರ್ ವೆಲ್ ಬಳಿ ಅರೆ ಬರೆ ವಿದ್ಯುತ್ ಕಾಮಗಾರಿ ಮಾಡಿದ್ದರಿಂದ ವಿದ್ಯುತ್‌ ತಂತಿಗಳು ಕೆಳಗೆ ನೇತಾಡುತ್ತಿದ್ದವು. ಈ ವೇಳೆ ಬಾಲಕ ಬೋರ್‌ ವೆಲ್‌ ಬಳಿ ಹೋದಾಗ ವಿದ್ಯುತ್‌ ತಗುಲಿತ್ತು. ನಂತರ ಆತನನ್ನು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಬಾಲಕ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಪಂಚಾಯಿತಿ ಸಿಬ್ಬಂದಿ ಹಾಗೂ ಪಿಡಿಒ ಎಡವಟ್ಟಿನಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಬಾಲಕನ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಕೃಷ್ಣಾ ನದಿಯಲ್ಲಿ ಬಾಲಕನನ್ನು ಎಳೆದೊಯ್ದ ಮೊಸಳೆ

ರಾಯಚೂರು: ಕೃಷ್ಣಾ ನದಿಯಲ್ಲಿ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ನಡೆದಿದೆ. ಕುರಿಗಳಿಗೆ ನೀರು ಕುಡಿಸಲು ನದಿಗೆ ಇಳಿದಿದ್ದ ಬಾಲಕನನ್ನು ಮೊಸಳೆ ಬಲಿ (Crocodile Attack) ಪಡೆದಿದೆ. ಗಂಜಳ್ಳಿ ಗ್ರಾಮದ ವಿಶ್ವ (12) ಮೃತ ಬಾಲಕ. ಸ್ಥಳಕ್ಕೆ ರಾಯಚೂರು ಗ್ರಾಮಾಂತರ ಪೋಲಿಸರು ದೌಡಾಯಿಸಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಯಿಂದ ಬಾಲಕನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ | Murder Attempt: ಮಗು ಹೆಣ್ಣೋ ಗಂಡೋ ನೋಡಲು ಹೆಂಡತಿಯ ಹೊಟ್ಟೆ ಸೀಳಿದವನಿಗೆ ಜೀವಾವಧಿ ಶಿಕ್ಷೆ!

ಮಹಿಳೆ ಕಾಲಿನ ಮೇಲೆ ಹರಿದ ಬಸ್ ಚಕ್ರ

ವಿಜಯಪುರ: ಬಸ್ ಹತ್ತುವ ವೇಳೆ ಆಯುತಪ್ಪಿ ಬಿದ್ದ ಮಹಿಳೆ ಕಾಲಿನ ಮೇಲೆ ಬಸ್ ಚಕ್ರ ಹರಿದ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಕಾಲಿಗೆ ತೀವ್ರ ಗಾಯಗಳಾಗಿವೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸಾಲುಟಗಿ ಗ್ರಾಮದ ಸಾವಿತ್ರಿಬಾಯಿ ಬಿರಾದಾರ ಗಾಯಗೊಂಡವರು. ವಿಜಯಪುರದಿಂದ ಇಂಡಿಗೆ ತೆರಳುವ KA 28 F 2492 ಸಂಖ್ಯೆಯ ಬಸ್ ಹರಿದಿದ್ದರಿಂದ ಮಹಿಳೆ ಗಾಯಗೊಂಡಿದ್ದು, ಅವರನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

Continue Reading
Advertisement
Egg Benefits
ಆರೋಗ್ಯ10 mins ago

Egg Benefits: ನೀವು ಮೊಟ್ಟೆ ಪ್ರಿಯರೆ? ಹಾಗಾದರೆ ಮೊಟ್ಟೆ ತಿನ್ನಬಹುದು ಎಂಬುದೂ ಅರಿವಿರಲಿ!

karnataka Weather Forecast
ಮಳೆ10 mins ago

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

World Thyroid Day
ಆರೋಗ್ಯ1 hour ago

World Thyroid Day: ಇಂದು ವಿಶ್ವ ಥೈರಾಯ್ಡ್‌ ದಿನ; ‘ಗಂಟಲ ಚಿಟ್ಟೆ’ಯ ಬಗ್ಗೆ ಈ ಸಂಗತಿ ನಿಮಗೆ ಗೊತ್ತೆ?

Dina bhavishya
ಭವಿಷ್ಯ2 hours ago

Dina Bhavishya : ಕುಟುಂಬದ ಆಪ್ತರಿಂದ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Narendra Modi
ದೇಶ7 hours ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ7 hours ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು7 hours ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

SRH vs RR
ಕ್ರೀಡೆ7 hours ago

SRH vs RR: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್’; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

Electric Shock
ಕ್ರೈಂ8 hours ago

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Prajwal Revanna Case
ಕರ್ನಾಟಕ8 hours ago

Prajwal Revanna Case: ರಾಜ್ಯಕ್ಕೆ ಬಂದು ಕಾನೂನು ಗೌರವಿಸಿ; ಪ್ರಜ್ವಲ್‌ಗೆ ವಿಸ್ತಾರ ನ್ಯೂಸ್‌ ಬಹಿರಂಗ ಪತ್ರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌