Tragic death | ವಾಕಿಂಗ್‌ ಹೊರಟಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ: ಎರಡು ತುಂಡಾಗಿ ಬಿದ್ದ ದೇಹ - Vistara News

ಕರ್ನಾಟಕ

Tragic death | ವಾಕಿಂಗ್‌ ಹೊರಟಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ: ಎರಡು ತುಂಡಾಗಿ ಬಿದ್ದ ದೇಹ

ಬಾಗಲಕೋಟೆ ಜಿಲ್ಲೆಯ ತೇರದಾಳದಲ್ಲಿ ಮುಂಜಾನೆ ವಾಕಿಂಗ್‌ ಹೊರಟಿದ್ದ ಯುವಕ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ವಾಹನ ಪರಾರಿಯಾಗಿದ್ದು ಹುಡುಕಾಟ ನಡೆಯುತ್ತಿದೆ.

VISTARANEWS.COM


on

Terdal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತೇರದಾಳ (ಬಾಗಲಕೋಟೆ): ಬೆಳಗ್ಗೆ ವಾಕಿಂಗ್‌ ಹೊರಟಿದ್ದ ಯುವಕನೊಬ್ಬನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ದಾನಿಗೊಂಡ ಆಸ್ಪತ್ರೆ ಬಳಿ ಘಟನೆ ನಡೆದಿದೆ. ಪಟ್ಟಣದ ಸವದಿ ನಗರದ ನಿವಾಸಿಯಾಗಿರುವ ಸುಜಿತ್ ಗಿರಿಮಲ್ಲಪ್ಪ ತಮದಡ್ಡಿ(೨೬) ಮೃತರು.

ಸುಜಿತ್‌ ಅವರು ಬೆಳಗ್ಗೆ ಎದ್ದು ವಾಕಿಂಗ್‌ ಹೋಗುತ್ತಿದ್ದರು. ರಸ್ತೆಯ ಬದಿಯಲ್ಲಿ ಸಾಗುತ್ತಿದ್ದ ಅವರಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನೆಲಕ್ಕೆ ಉರುಳಿದ ಅವರ ಮೇಲೆಯೇ ವಾಹನ ಹರಿದಿದೆ. ಅವರ ದೇಹದ ಕೆಳಗಿನ ಭಾಗ ಜರ್ಜರಿತವಾಗಿದ್ದು, ಹೆಚ್ಚು ಕಡಿಮೆ ಮೇಲ್ಭಾಗ ಮತ್ತು ಕೆಳಭಾಗ ಬೇರೆ ಬೇರೆ ಆದಂತಿದೆ.

ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನವನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ. ಸ್ಥಳೀಯ ಕಟ್ಟಡಗಳಲ್ಲಿರುವ ಸಿಸಿ ಟಿವಿ ಫೂಟೇಜ್‌ಗಳ ಪರಿಶೀಲನೆಯಿಂದ ಡಿಕ್ಕಿ ಹೊಡೆದ ವಾಹನ ಪತ್ತೆಹಚ್ಚಬಹುದು ಎಂದು ಹೇಳಲಾಗುತ್ತಿದೆ.

ಇದು ಕೇವಲ ಅಪಘಾತವೇ ಅಥವಾ ಬೇರೆ ಏನಾದರೂ ಷಡ್ಯಂತ್ರಗಳು ಇವೆಯೇ ಎನ್ನುವ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.

ಇದನ್ನೂ ಓದಿ | Accident | ಕ್ಯಾಂಟರ್‌ ಡಿಕ್ಕಿ, ಪಾದಚಾರಿ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ರಾಜ್ಯಮಟ್ಟದ ಅಂತರಶಾಲಾ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

Bengaluru News: ಬೆಂಗಳೂರಿನ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಯಂಗ್‌ಸ್ಟರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಎರಡು ದಿನಗಳ 16ನೇ ರಾಜ್ಯಮಟ್ಟದ ಅಂತರಶಾಲಾ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು.

VISTARANEWS.COM


on

Minister Ramalinga Reddy drives for state level inter school Olympics sports in Bengaluru
Koo

ಬೆಂಗಳೂರು: ನಗರದ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 16ನೇ ರಾಜ್ಯಮಟ್ಟದ ಅಂತರಶಾಲಾ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ (Bengaluru News) ನೀಡಿದರು.

ನಗರದ ಯಂಗ್‌ಸ್ಟರ್ಸ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಲಾಗಿದ್ದ ಎರಡು ದಿನಗಳ 16ನೇ ರಾಜ್ಯಮಟ್ಟದ ಅಂತರಶಾಲಾ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿ, ಬಳಿಕ ಮಾತನಾಡಿದರು.

ಕ್ರೀಡಾಕೂಟವು 8 ವರ್ಷ, 10 ವರ್ಷ, 12 ವರ್ಷ, 14 ವರ್ಷ, 16 ವರ್ಷ ಹಾಗೂ 18 ವರ್ಷ ವಯಸ್ಸಿನ ವಿದ್ಯಾರ್ಥಿಗಳಿಗೆ ನಡೆಯಿತು. ವಿವಿಧ ವಿಭಾಗಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳ ನಾಲ್ಕು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ ‘ವಿದ್ಯಾಧನ’, ‘ಉತ್ಕರ್ಷ’ ಯೋಜನೆ

ಕ್ರೀಡಾಕೂಟದಲ್ಲಿ ಟೀಮ್ ಚಾಂಪಿಯನ್ ಆಗಿ ಹೊರಹೊಮ್ಮಿದ ಶಾಲೆಗಳಿಗೆ ಪ್ರಥಮ ಬಹುಮಾನ 25,000 ರೂಪಾಯಿ ನಗದು ಬಹುಮಾನ ಮತ್ತು ದ್ವಿತೀಯ ಬಹುಮಾನ 15,000 ರೂಪಾಯಿ ಹಾಗೂ ತೃತೀಯ ಬಹುಮಾನ 10000 ರೂ.ದೊಂದಿಗೆ ರೋಲಿಂಗ್ ಟ್ರೋಫಿ ನೀಡಿ, ಗೌರವಿಸಲಾಯಿತು. ಇನ್ನು ವಿಜೇತರಿಗೆ ಪ್ರಮಾಣ ಪತ್ರ ಹಾಗೂ ಪದಕ ನೀಡಿ ಗೌರವಿಸಲಾಯಿತು.

Continue Reading

ಕರ್ನಾಟಕ

Lakshmi Hebbalkar: ಸುರಕ್ಷತೆ ದೃಷ್ಟಿಯಿಂದ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ನಿರ್ಧಾರ

Lakshmi Hebbalkar: ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರು ಹೊರಬಿಡಲು ನಿರ್ಧರಿಸಲಾಗಿದ್ದು, ಒಳಹರಿವಿನ ಪ್ರಮಾಣ ಆಧರಿಸಿ ತಕ್ಷಣದಿಂದಲೇ ನೀರು ಬಿಡುಗಡೆ ಮಾಡಲಾಗುವುದು ಎಂದು ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

VISTARANEWS.COM


on

Decision to release water from Malaprabha Reservoir says minister Lakshmi Hebbalkar
Koo

ಸವದತ್ತಿ: ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರು ಹೊರಬಿಡಲು ನಿರ್ಧರಿಸಲಾಗಿದ್ದು, ಒಳಹರಿವಿನ ಪ್ರಮಾಣ ಆಧರಿಸಿ ತಕ್ಷಣದಿಂದಲೇ ನೀರು ಬಿಡುಗಡೆ ಮಾಡಲಾಗುವುದು ಎಂದು ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ತಿಳಿಸಿದ್ದಾರೆ.

ಸವದತ್ತಿಯ ನವಿಲುತೀರ್ಥದಲ್ಲಿ ಮಂಗಳವಾರ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದ ಸಚಿವರು, ಕಳೆದ ವರ್ಷ ಸರಿಯಾಗಿ ಮಳೆಯಾಗದ ಕಾರಣ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗಿತ್ತು. ಆದರೆ ಈ ವರ್ಷ ಸವದತ್ತಿ ಯಲ್ಲಮ್ಮನ ಕೃಪೆಯಿಂದ ಚೆನ್ನಾಗಿ ಮಳೆಯಾಗುತ್ತಿದೆ. ಎಲ್ಲ ಜಲಾಶಯಗಳೂ ಭರ್ತಿಯಾಗುತ್ತಿವೆ. 2025ರ ಜುಲೈವರೆಗೆ ಕುಡಿಯುವ ನೀರಿನ ಸಂಗ್ರಹವಿರುವಂತೆ ನೋಡಿಕೊಳ್ಳಬೇಕು. ಸದ್ಯದ ಮಳೆಯ ಪರಿಸ್ಥಿತಿ, ಜಲಾಶಯದ ಒಳಹರಿವಿನ ಪ್ರಮಾಣ ನೋಡಿಕೊಂಡು ನೀರು ಬಿಡಬೇಕಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಆ.3ರಂದು ‘ಬೌದ್ಧ ಸಾಹಿತ್ಯ-ಹಲವು ನೆಲೆಗಳು’ ರಾಷ್ಟ್ರೀಯ ವಿಚಾರ ಸಂಕಿರಣ

ಪ್ರತಿ ತಿಂಗಳು ಅಗತಕ್ಕೆ ತಕ್ಕಂತೆ ಯೋಜನೆ ರೂಪಿಸಿ, ಹಳ್ಳ, ಕೆನಾಲ್‌ಗಳಿಗೆ ನೀರು ಬಿಡುಗಡೆಗೆ ಅಧಿಕಾರಿಗಳ ಕ್ರಮ ವಹಿಸಬೇಕು. ನಮ್ಮ ಸರ್ಕಾರ ರೈತರ ಪರವಾದ ಸರ್ಕಾರ. ಏನೇ ನಿರ್ಣಯ ತೆಗೆದುಕೊಳ್ಳುವುದಿದ್ದರೂ ರೈತರ ಹಿತದೃಷ್ಟಿಯಿಂದಲೇ ತೆಗೆದುಕೊಳ್ಳಲಾಗುವುದು. ಕುಡಿಯುವ ನೀರು ಪೂರೈಕೆ ಜತೆಗೆ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಜಲಾಶಯಗಳಲ್ಲಿ ನೀರಿನ ಮಟ್ಟ, ಒಳಹರಿವು ಸೇರಿದಂತೆ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ನೀರು ಬಿಡುಗಡೆ ಮಾಡಬೇಕು ಎಂದು ತಿಳಿಸಿದರು.

ಕಳೆದ 50 ವರ್ಷಗಳಲ್ಲಿ ರೇಣುಕಾ ಸಾಗರ ಅಣೆಕಟ್ಟು ನಿರ್ಮಾಣದ ಬಳಿಕ 5 ಬಾರಿ ಮಾತ್ರ ಸಂಪೂರ್ಣ ಭರ್ತಿಯಾಗಿದೆ. ಅದೇ ರೀತಿಯಲ್ಲಿ ಈ ಬಾರಿಯೂ ರೇಣುಕಾಸಾಗರ ಅಣೆಕಟ್ಟು ಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ. ಸಾಂಪ್ರದಾಯಿಕವಾಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಆ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೀರು ಬಿಡುಗಡೆಗೆ ಮಾಡಲಾಗುವುದು. ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರು ಹೊರಬಿಡಲು ನಿರ್ಧರಿಸಲಾಗಿದ್ದು, ಒಳಹರಿವಿನ ಪ್ರಮಾಣ ಆಧರಿಸಿ ಇಂದಿನಿಂದಲೇ ನೀರು ಬಿಡುಗಡೆ ಮಾಡಲಾಗುವುದು. ಕೆಳ ಭಾಗದಲ್ಲಿ ಪ್ರವಾಹ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಕಾಲುವೆಗಳ ನಿರ್ವಹಣೆ ಸರಿಯಾಗಿ ಆಗಬೇಕು. ನಮ್ಮ ಸರ್ಕಾರ ಯಾವತ್ತೂ ರೈತರ ಪರವಾಗಿದೆ. ರೈತರ ಹಿತಾಸಕ್ತಿ ನಮಗೆ ಮುಖ್ಯ. ಅದಕ್ಕೆ ತಕ್ಕಂತೆ ಸೂಕ್ತ ಯೋಜನೆ ರೂಪಿಸಿ. ಕಾಲುವೆಗಳ ನಿರ್ವಹಣೆಗೆ ರೈತರ ಹಿತಕ್ಕೆ ಅನುಕೂಲವಾಗುವಂತೆ ಪ್ರಸ್ತಾವನೆ ಸಲ್ಲಿಸಿ. ಈ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಗಿದೆ. ಅಗತ್ಯವಿರುವ ಎಲ್ಲ ಕೆಲಸಗಳನ್ನು ಮಾಡಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ನದಿ ಪಾತ್ರಗಳಲ್ಲಿ ಬರುವ ಗ್ರಾಮ ಹಾಗೂ ಪಟ್ಟಣಗಳಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ ಈಗಾಗಲೇ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರು ಕಲ್ಪಿಸುವ ಉದ್ದೇಶದಿಂದ ಮಲಪ್ರಭಾ ಎಡದಂಡೆಯ ಕಾಲುವೆಗಳಲ್ಲಿ ನೀರು ತುಂಬಿಸಲಾಗಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ವಿವರಿಸಿದರು.

ಇದನ್ನೂ ಓದಿ: Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ ‘ವಿದ್ಯಾಧನ’, ‘ಉತ್ಕರ್ಷ’ ಯೋಜನೆ

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರೈತರಿಗೆ ಸಮರ್ಪಕ ನೀರು ಪೂರೈಕೆ ಆಗುತ್ತಿಲ್ಲ. ಈ ಕುರಿತು ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕಾಟಾಚಾರದ ಉತ್ತರ ಕೇಳಿ ಬರುತ್ತಿವೆ. ಇದರಿಂದಾಗಿ ಸಾಕಷ್ಟು ರೈತರಿಗೆ ತೊಂದರೆಯಾಗುತ್ತಿದೆ. ಇಂತಹ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರೊಬ್ಬರು ಮನವಿ ಮಾಡಿಕೊಂಡರು.

ಎಡದಂಡೆ ಕಾಲುವೆಗೆ ಸಮರ್ಪಕವಾಗಿ ನೀರು ಬಿಡುಗಡೆ ಮಾಡುತ್ತಿಲ್ಲ. ಎಡದಂಡೆ, ಬಲದಂಡೆ ಎರಡು ಕಾಲುವೆಗಳಲ್ಲಿ ನಿಯಮಿತವಾಗಿ ನೀರು ಬಿಡಬೇಕು. ಕೇವಲ ಬಲದಂಡೆಗೆ ಮಾತ್ರ ಹೆಚ್ಚಾಗಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಅಂತಹ ಧೋರಣೆಯನ್ನು ಬಿಟ್ಟು ರೈತರ ಜಮೀನುಗಳಿಗ ಅಗತ್ಯಕ್ಕೆ ತಕ್ಕಂತೆ ನೀರು ಬಿಡುಗಡೆಗೆ ಮಾಡುವುದರ ಮೂಲಕ ನೀರು ಪೂರೈಕೆ ಆಗಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.

ನರಗುಂದ ಶಾಸಕ ಸಿ.ಸಿ. ಪಾಟೀಲ್ ಮಾತನಾಡಿ, ಮಲಪ್ರಭಾ ಎಡದಂಡೆ ಮತ್ತು ಬಲದಂಡೆ ನೀರು ಬಿಡುಗಡೆಗೆ ಮುನ್ನ ಸಂಗ್ರಹ ಪ್ರಮಾಣ ನೋಡಿಕೊಂಡು ಬರುವ ದಿನಗಳಲ್ಲಿ ನೀರಿನ ಕೊರತೆ ಆಗದಂತೆ ಬಿಡುಗಡೆ ಮಾಡಬೇಕು. ಹಿಂದಿನ ವರ್ಷಗಳಲ್ಲಿ ಅನಗತ್ಯವಾಗಿ ನೀರು ಹರಿಬಿಟ್ಟು ನರಗುಂದ ಕ್ಷೇತ್ರದಲ್ಲಿ ತೊಂದರೆಯಾಗಿದೆ. ಹಾಗಾಗಿ ಅಗತ್ಯಕ್ಕೆ ಅನುಗುಣವಾಗಿ ನಿಯಮಿತವಾಗಿ ನೀರು ಬಿಡುಗಡೆಗೆ ಮಾಡಬೇಕು ಎಂದು ತಿಳಿಸಿದರು.

ಕಾಲುವೆಗಳ ಸ್ವಚ್ಚತೆ ಕೈಗೊಳ್ಳಿ

ನೀರು ಬಿಡುಗಡೆಗೆ ಮುನ್ನ ಕಾಲುವೆಗಳ ಸ್ವಚ್ಚತೆ ಕೈಗೊಳ್ಳಬೇಕು. ಇಲ್ಲಿಯವರೆಗೂ ಯಾವೊಂದು ಕಾಲುವೆಗಳ ಸ್ವಚ್ಚತೆ ಪೂರ್ಣಗೊಳಿಸಿಲ್ಲ. ಕೂಡಲೇ ಟೆಂಡರ್ ಕರೆದು ಕಾಲುವೆಗಳ ಸ್ವಚ್ಚತೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು. ಪ್ರತಿ ಎರಡು ತಿಂಗಳಿಗೊಮ್ಮೆ ನೀರಾವರಿ ನಿಗಮದ ಅಧಿಕಾರಿಗಳು ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಸಭೆ ಆಯೋಜಿಸಬೇಕು. ಸಚಿವರ ನಿರ್ದೇಶನದಂತೆ ನೀರು ಪೂರೈಕೆ ಕುರಿತು ಯೋಜನೆ ರೂಪಿಸಬೇಕು ಎಂದು ಶಾಸಕ ಸಿ.ಸಿ ಪಾಟೀಲ ನಿರ್ದೇಶನ ನೀಡಿದರು.

ಈಗಾಗಲೇ ಜಲಾಶಯ ಭರ್ತಿಯಾಗಿದೆ, ಕೇವಲ ಸ್ವಲ್ಪ ಪ್ರಮಾಣ ಮಾತ್ರ ನೀರು ಸಂಗ್ರಹಣೆಗೆ ಅವಕಾಶವಿದೆ. ಜಲಾಶಯ ಸಂಪೂರ್ಣ ಭರ್ತಿಮಾಡಿ ನೀರು ಬಿಡುಗಡೆ ಮಾಡಿದರೆ ಸುಮಾರು 13 ಗ್ರಾಮಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಹಾಗಾಗಿ ಅಂದಾಜು 5 ಸಾವಿರದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಸೂಚಿಸಲಾಗಿದೆ ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ತಿಳಿಸಿದರು.

ನವಲಗುಂದ ಶಾಸಕ ಎನ್.ಎಚ್ ಕೋನರೆಡ್ಡಿ, ಮಂಗಳವಾರ ಅಥವಾ ಶುಕ್ರವಾರ ಜಲಾಶಯದಿಂದ ನೀರು ಬಿಡುಗಡೆ ಮಾಡುವುದು ಸಂಪ್ರದಾಯ. ಅದರಂತೆ ಸ್ವಲ್ಪಮಟ್ಟಿಗೆ ನೀರು ಬಿಡುಗಡೆ ಮಾಡಬೇಕು ಎಂದರು.

ಇದನ್ನೂ ಓದಿ: Paris Olympics 2024 : ಜುಲೈ 31ರಂದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತೀಯ ಸ್ಪರ್ಧಿಗಳ ವೇಳಾಪಟ್ಟಿ ಇಂತಿದೆ

ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಲಪ್ರಭಾ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು, ಸೇರಿದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Continue Reading

ದೇಶ

Pralhad Joshi: ಕಾಂಗ್ರೆಸ್‌ ಹಗರಣ, ಭ್ರಷ್ಟಾಚಾರದ ವಿರುದ್ಧ ಚಕ್ರವ್ಯೂಹ ರಚಿಸಲಾಗಿದೆ; ಪ್ರಲ್ಹಾದ್ ಜೋಶಿ

Pralhad Joshi: ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿಯ ಚಕ್ರವ್ಯೂಹ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಚಕ್ರವ್ಯೂಹ ರಚನೆಯಾಗುತ್ತಿದೆ ಆದರೆ ಕಾಂಗ್ರೆಸ್ ಹಗರಣಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಎಂದು ಹೇಳಿದ್ದಾರೆ. 60 ವರ್ಷಗಳ ಮಾಡಿರುವ ಭ್ರಷ್ಟಾಚಾರ ಮತ್ತು ಹಗರಣವನ್ನು ಮುಚ್ಚಿಹಾಕಲು ಇದೆಲ್ಲವನ್ನೂ ಹೇಳುತ್ತಿದ್ದಾರೆ ಎಂದು ಸಚಿವರು ಆರೋಪಿಸಿದ್ದಾರೆ.

VISTARANEWS.COM


on

Union Minister Pralhad Joshi reaction about rahul gandhi statement
Koo

ನವದೆಹಲಿ: ಚಕ್ರವ್ಯೂಹ ರಚನೆಯಾಗುತ್ತಿದೆ. ಆದರೆ ಅದು ಕಾಂಗ್ರೆಸ್ ಹಗರಣಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿಯ ಚಕ್ರವ್ಯೂಹ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಎಎನ್‌ಐ ಜತೆ ಮಾತನಾಡಿರುವ ಸಚಿವ ಪ್ರಲ್ಹಾದ್ ಜೋಶಿ, ಇದನ್ನು ಡ್ರಾಮಾಬಾಜಿ ಎಂದು ಕರೆದಿದ್ದಾರೆ. 60 ವರ್ಷಗಳ ಕಾಲ ಮಾಡಿರುವ ಭ್ರಷ್ಟಾಚಾರ ಮತ್ತು ಹಗರಣವನ್ನು ಮುಚ್ಚಿಹಾಕಲು ಇದೆಲ್ಲವನ್ನೂ ಹೇಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ ‘ವಿದ್ಯಾಧನ’, ‘ಉತ್ಕರ್ಷ’ ಯೋಜನೆ

ರಾಹುಲ್ ಗಾಂಧಿ ಹಾಗೂ ಅವರ ತಾಯಿ ರಿಮೋಟ್ ಕಂಟ್ರೋಲ್ ಮೂಲಕ ಸರ್ಕಾರವನ್ನು ಏಕೆ ನಡೆಸುತ್ತಿದ್ದರು? ಈಗ ಏಕೆ ನಾಟಕವಾಡುತ್ತಿದ್ದಾರೆ? ತಮ್ಮ ಸರ್ಕಾರದಲ್ಲಿ ಮಾಡಿದ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಇದು ಎಂದು ಅವರು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಏನು ಹೇಳಿದ್ದರು?

ಕಾಂಗ್ರೆಸ್‌ ನಾಯಕ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದರಲ್ಲೂ, ಮಹಾಭಾರತದ ಚಕ್ರವ್ಯೂಹವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ ಅವರು ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ಬಾಣ ಪ್ರಯೋಗಿಸಿದ್ದರು. “ಮಹಾಭಾರತದ ಚಕ್ರವ್ಯೂಹದಂತೆ ಈಗಲೂ ಒಂದು ಚಕ್ರವ್ಯೂಹ ರಚಿಸಲಾಗಿದೆ. ದೇಶದ ಜನರು ಆ ಚಕ್ರವ್ಯೂಹಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿ 6 ಮಂದಿಯು ಈ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಹೇಳಿದ್ದರು.

“ಸಾವಿರಾರು ವರ್ಷಗಳ ಹಿಂದೆ, ಹರಿಯಾಣದಲ್ಲಿ ಕುರುಕ್ಷೇತ್ರ ನಡೆಯುವಾಗ 6 ಜನ ಸೇರಿ ಚಕ್ರವ್ಯೂಹವನ್ನು ರಚಿಸಿದ್ದರು. ಆರು ಜನ ಸೇರಿ ಆ ಚಕ್ರವ್ಯೂಹದಲ್ಲಿ ಅಭಿಮನ್ಯುವಿನನ್ನು ಸಿಲುಕಿಸಿ ಕೊಲೆ ಮಾಡಿದರು. ನಾನು ಚಕ್ರವ್ಯೂಹದ ಕುರಿತು ಸಣ್ಣದೊಂದು ಸಂಶೋಧನೆ ಮಾಡಿದ್ದೇನೆ. ಚಕ್ರವ್ಯೂಹವನ್ನು ಪದ್ಮವ್ಯೂಹ ಎಂದೂ ಕರೆಯಲಾಗುತ್ತದೆ. ಪದ್ಮವ್ಯೂಹ ಎಂದರೆ ಕಮಲದ ರಚನೆಯಾಗಿದೆ. ಚಕ್ರವ್ಯೂಹ ಕೂಡ ಕಮಲದ ಆಕಾರದಲ್ಲಿದೆ” ಎಂಬುದಾಗಿ ಬಿಜೆಪಿಯನ್ನು ಕುಟುಕಿದ್ದರು.

“21ನೇ ಶತಮಾನದಲ್ಲೂ ಚಕ್ರವ್ಯೂಹವನ್ನು ರಚಿಸಲಾಗಿದೆ ಹಾಗೂ ಅದು ಕಮಲದ ಆಕಾರದಲ್ಲಿದೆ. ಆ ಚಕ್ರವ್ಯೂಹದ ಚಿಹ್ನೆಯನ್ನು ನರೇಂದ್ರ ಮೋದಿ ಅವರು ಎದೆಯ ಮೇಲೆ ಧರಿಸಿಕೊಂಡು ತಿರುಗಾಡುತ್ತಿದ್ದಾರೆ. ಅಭಿಮನ್ಯುವಿಗೆ ಏನಾಯಿತೋ, ಅದರಂತೆ ಭಾರತದ ಜನರನ್ನು ಆ ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ. ಯುವಕರು, ರೈತರು, ಮಹಿಳೆಯರು, ಸಣ್ಣ ಹಾಗೂ ಮಧ್ಯಮ ಶ್ರೇಣಿ ಉದ್ಯಮಿಗಳು ಈಗ ಆ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ” ಎಂದು ರಾಹುಲ್‌ ಗಾಂಧಿ ಕುಹಕವಾಡಿದ್ದರು.

ಚಕ್ರವ್ಯೂಹದಲ್ಲಿರುವ 6 ಜನ ಯಾರು?

“ಚಕ್ರವ್ಯೂಹದಲ್ಲಿ ತುಂಬ ಜನ ಇರುತ್ತಾರೆ. ಆದರೆ, ಚಕ್ರವ್ಯೂಹದ ಮಧ್ಯದಲ್ಲಿ 6 ಜನ ಇರುತ್ತಾರೆ ಹಾಗೂ ಅವರು ಇಡೀ ಚಕ್ರವ್ಯೂಹವನ್ನು ನಿಯಂತ್ರಿಸುತ್ತಾರೆ. ಆಧುನಿಕ ಕಾಲದ ಚಕ್ರವ್ಯೂಹವನ್ನು ಕೂಡ ಆರು ಜನ ನಿಯಂತ್ರಿಸುತ್ತಿದ್ದಾರೆ. ನರೇಂದ್ರ ಮೋದಿ, ಅಮಿತ್‌ ಶಾ, ಮೋಹನ್‌ ಭಾಗವತ್‌, ಅಜಿತ್‌ ದೋವಲ್‌, ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿಯೇ ಈಗ ಕಮಲದ ಆಕಾರದ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು.

ಇದನ್ನೂ ಓದಿ: Paris Olympics 2024 : ಜುಲೈ 31ರಂದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತೀಯ ಸ್ಪರ್ಧಿಗಳ ವೇಳಾಪಟ್ಟಿ ಇಂತಿದೆ

Continue Reading

ಕರ್ನಾಟಕ

Physical abuse: ಮಹಿಳೆ ಮೇಲೆ ಅತ್ಯಾಚಾರ; ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿ ಬಂಧನ

Physical abuse: ಮಹಿಳೆ ನೀಡಿದ ದೂರಿನನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಹೀಗಾಗಿ ಹಾಸನ ಜಿಲ್ಲೆಯ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Physical abuse
Koo

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ (Physical abuse) ಆರೋಪದಡಿ ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ (39) ಬಂಧಿತ ವ್ಯಕ್ತಿ.

ಬಾಗಲುಗುಂಟೆ ಠಾಣೆ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಕೆಲ ದಿನಗಳ ಹಿಂದೆ ಮಹಿಳೆ ನೀಡಿದ ದೂರಿನನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ದಯಾನಂದ್‌ನ ಪೊಲೀಸರು ಬಂಧಿಸಿದ್ದಾರೆ.

ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ, ಬಳಿಕ ಮಹಿಳೆಯನ್ನು ಕರೆಸಿಕೊಂಡು ಆತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ದಯಾನಂದ್ ಅರಸೀಕೆರೆ ಬಳಿಯ ಗೊಲ್ಲರಹಳ್ಳಿ ಕುರುಗುಂದ ಗ್ರಾಮ ಪಂಚಾಯಿತಿಯ ಸದಸ್ಯನಾಗಿದ್ದಾನೆ. ಮಹಿಳೆ ಪುರದಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಪರಿಚಯ ಮಾಡಿಕೊಂಡಿದ್ದ. ಶಾಸ್ತ್ರ ಹೇಳುತ್ತಿದ್ದ ಪೂಜಾರಿ ದಯಾನಂದ್‌ಗೆ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಮಹಿಳೆಗೆ ಕಂಟಕವಿದೆ‌ ಹೇಳಿ ಆಗಾಗ ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಒಂದು‌ ಲಕ್ಷಕ್ಕಿಂತ ಹೆಚ್ಚು ಹಣ ಮಹಿಳೆಯಿಂದ ಪಡೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ | Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

murder case
murder case

ತುಮಕೂರು: ಪರಪುರುಷನ ಮೋಹಕ್ಕೆ ಸಿಲುಕಿದಾಕೆ ತನ್ನ ಪ್ರೀತಿಗೆ ಅಡ್ಡಿಯಾಗಿದ್ದ ಪತಿಯನ್ನೇ ಕೊಂದು (Murder case) ಮುಗಿಸಿದ್ದಾಳೆ. ಇನ್‌ಸ್ಟಾಗ್ರಾಮ್‌ ಪ್ರಿಯತಮನಿಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ಘಟನೆ ನಡೆದಿದೆ.

ಪ್ರಕಾಶ್ (30) ಮೃತ ದುರ್ದೈವಿ. ಹರ್ಷಿತಾ (28) ಪತಿಯನ್ನು ಕೊಲೆ ಮಾಡಿಸಿದವಳು. ಕಲಬುರಗಿ ಜಿಲ್ಲೆಯ ಚಿಂಚುಲಿ ಮೂಲದ ಪ್ರಕಾಶ್‌ಗೆ ಇದೇ ಇನ್‌ಸ್ಟಾಗ್ರಾಮ್‌ನಿಂದ ಮೂರು ವರ್ಷದ ಹಿಂದೆ ಈ ಹರ್ಷಿತಾಳ ಪರಿಚಯವಾಗಿತ್ತು. ಬಳಿಕ ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು.

ಮದುವೆಯಾದ್ಮೇಲೆ ಪ್ರಕಾಶ್‌ ಪತ್ನಿಯ ತವರಿನಲ್ಲೇ ವಾಸವಿದ್ದ. ಈ ದಂಪತಿಗೆ ಒಂದೂವರೆ ವರ್ಷದ ಮಗುವೂ ಇತ್ತು. ಆದರೆ ಇತ್ತೀಚೆಗೆ ಹರ್ಷಿತಾಳಿಗೆ ಇನ್‌ಸ್ಟಾಗ್ರಾಂನಲ್ಲಿ ಮಾಜಿ ಪ್ರಿಯತಮ ಗುಂಡ ಎಂಬಾತ ಸಂಪರ್ಕಕ್ಕೆ ಸಿಕ್ಕಿದ್ದ. ಗುಂಡನ ಮೋಹಕ್ಕೆ ಸಿಲುಕಿದ ಹರ್ಷಿತಾ, ಪ್ರಕಾಶ್‌ನನ್ನು ಕಡೆಗಣಿಸಿದ್ದಳು. ಹರ್ಷಿತಾ ಮತ್ತು ಗುಂಡ ಇಬ್ಬರಿಗೂ ಮರುಪ್ರೇಮಾಂಕುರವಾಗಿತ್ತು.

ಮಾತ್ರವಲ್ಲ, ಮಗು- ಗಂಡನನ್ನು ಬಿಟ್ಟು ಕಳೆದ 2 ತಿಂಗಳ ಹಿಂದೆ ಪ್ರಿಯತಮ ಗುಂಡನ ಜತೆಗೆ ಮನೆ ಬಿಟ್ಟು ಪರಾರಿಯಾಗಿದ್ದಳು. ಈ ವೇಳೆ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಬಳಿಕ ಹರ್ಷಿತಾ ಮನೆಗೆ ವಾಪಾಸ್ಸಾಗಿದ್ದಳಿ. ಆದರೆ ಒಳಗೊಳಗೆ ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಳು. ಪತಿಯ ಕೊಲೆಗಾಗಿ ಸಹೋದರ ಸೋಮಶೇಖರ್ ಹಾಗೂ ಪ್ರಿಯತಮ ಗುಂಡನಿಗೆ ಸುಪಾರಿ ನೀಡಿದ್ದಳು.

ಪ್ರಕಾಶ್‌ನನ್ನು ಏನೇನೋ ಹೇಳಿ ಪುಸಲಾಯಿಸಿ ಸೋಮಶೇಖರ್‌ ಕರೆಸಿಕೊಂಡಿದ್ದ. ಗುಂಡ ಮತ್ತು ಆತನ ಸ್ನೇಹಿತ ರಂಗಸ್ವಾಮಯ್ಯ, ಪ್ರಕಾಶ್ ಬರುತ್ತಿದ್ದಂತೆ ಆತನ ಮೇಲೆ ಹಲ್ಲೆ ನಡೆಸಿದ್ದರು. ಡ್ರ್ಯಾಗರ್‌ನಿಂದ ಎದೆಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದರು. ಬಳಿಕ ಅಪಘಾತದ ರೀತಿಯಲ್ಲಿ ಬಿಂಬಿಸಲು ಹೊರಟಿದ್ದರು. ಆದರೆ ಎದೆಭಾಗಕ್ಕೆ ಚುಚ್ಚಿದ ಗಾಯದ ಗುರುತು ಪತ್ತೆ ಮಾಡಿದ ಪೊಲೀಸರು ಇದು ಅಪಘಾತವಲ್ಲ ಬದಲಿಗೆ ಕೊಲೆ ಎಂದು ಖಚಿತ ಪಡಿಸಿಕೊಂಡಿದ್ದರು.

ಇದನ್ನೂ ಓದಿ: Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

ವಿಚಾರಣೆ ವೇಳೆ ಪತ್ನಿ ಹರ್ಷಿತಾಳ ಮಾಸ್ಟ್‌ರ್‌ ಪ್ಲ್ಯಾನ್‌ಗೆ ಪೊಲೀಸರೇ ದಂಗಾಗಿದ್ದಾರೆ. ಸದ್ಯ ಕೊರಟಗೆರೆ ಪೊಲೀಸರಿಂದ ಹರ್ಷಿತಾ, ಸೋಮಶೇಖರ್, ರಂಗಸ್ವಾಮಯ್ಯನನ್ನು ಬಂಧಿಸಲಾಗಿದೆ. ಮುಖ್ಯ ಆರೋಪಿ ಗುಂಡನಿಗಾಗಿ ಬಲೆ ಬೀಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement
Rashid Khan
ಪ್ರಮುಖ ಸುದ್ದಿ6 mins ago

Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

Anurag Thakur
ದೇಶ44 mins ago

Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

ICC T20 ranking
ಪ್ರಮುಖ ಸುದ್ದಿ56 mins ago

ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

Asian Cricket Council
ಪ್ರಮುಖ ಸುದ್ದಿ1 hour ago

Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

Viral video
ವೈರಲ್ ನ್ಯೂಸ್2 hours ago

Viral video: ಪೋಷಕರ ಫೋಟೊ ಶೋಕಿ; ಮೊಸಳೆ ಎದುರು ಮಕ್ಕಳಿಗೆ ಪ್ರಾಣ ಸಂಕಟ! ಆಘಾತಕಾರಿ ವಿಡಿಯೊ

Ranbir Kapoor
ಸಿನಿಮಾ2 hours ago

Ranbir Kapoor: ಮುದ್ದಿನ ಮಡದಿ ಅಲಿಯಾ ಕುರಿತ ಸೀಕ್ರೆಟ್ ಮಾಹಿತಿ ಹಂಚಿಕೊಂಡ ರಣಬೀರ್!

Minister Ramalinga Reddy drives for state level inter school Olympics sports in Bengaluru
ಬೆಂಗಳೂರು2 hours ago

Bengaluru News: ರಾಜ್ಯಮಟ್ಟದ ಅಂತರಶಾಲಾ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

Decision to release water from Malaprabha Reservoir says minister Lakshmi Hebbalkar
ಕರ್ನಾಟಕ2 hours ago

Lakshmi Hebbalkar: ಸುರಕ್ಷತೆ ದೃಷ್ಟಿಯಿಂದ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ನಿರ್ಧಾರ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೇರಿದ 18 ವರ್ಷದ ಭಜನ್ ಕೌರ್​

Wayanad Landslide
EXPLAINER2 hours ago

Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ11 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌