T20 World Cup | ಪಾಕ್​ ಆಟಗಾರ ಶಾನ್​ ಮಸೂದ್​ ತಲೆಗೆ ಚೆಂಡು ಬಡಿದು ಆಸ್ಪತ್ರೆಗೆ ದಾಖಲು; ವಿಶ್ವ ಕಪ್​ಗೆ ಅನುಮಾನ - Vistara News

T20 ವಿಶ್ವಕಪ್

T20 World Cup | ಪಾಕ್​ ಆಟಗಾರ ಶಾನ್​ ಮಸೂದ್​ ತಲೆಗೆ ಚೆಂಡು ಬಡಿದು ಆಸ್ಪತ್ರೆಗೆ ದಾಖಲು; ವಿಶ್ವ ಕಪ್​ಗೆ ಅನುಮಾನ

ಪಾಕಿಸ್ತಾನ ತಂಡದ ಬ್ಯಾಟರ್​ ಶಾನ್‌ ಮಸೂದ್‌(Shan Masood) ಅಭ್ಯಾಸದ ವೇಳೆ ತಲೆಗೆ ಚೆಂಡು ಬಡಿದು ಆಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೋರ್ನ್​: ಭಾರತ ವಿರುದ್ಧದ ಪಂದ್ಯಕ್ಕೆ ಇನ್ನು ಎರಡು ದಿನ ಬಾಕಿ ಇರುವಾಗಲೇ ಪಾಕಿಸ್ತಾನ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ನೆಟ್ಸ್​ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಪಾಕಿಸ್ತಾನ ತಂಡದ ಬ್ಯಾಟರ್​ ಶಾನ್‌ ಮಸೂದ್‌(Shan Masood) ತಲೆಗೆ ಚೆಂಡು ಬಡಿದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಾಕಿಸ್ತಾನ ತಂಡದ ಆಲ್‌ರೌಂಡರ್‌ ಮೊಹಮ್ಮದ್‌ ನವಾಜ್​ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದರು. ಈ ವೇಳೆ ನೆಟ್ಸ್‌ ಹೊರಗಡೆ ನಿಂತಿದ್ದ ಶಾನ್‌ ಮಸೂದ್‌ ತಲೆಗೆ ಚೆಂಡು ಬಡಿದಿದೆ. ನವಾಜ್​ ಅವರ ತಲೆಗೆ ಚೆಂಡು ಬಡಿದ ತಕ್ಷಣ ಅವರು ಮೈದಾನದಲ್ಲೇ ಕುಸಿದು ಬಿದ್ದರು. ಬಳಿಕ ಪಾಕ್​ ತಂಡದ ಆಟಗಾರರು ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವಾಜ್ ಅವರ ಸ್ಕ್ಯಾನ್ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈ ಗೊಳ್ಳಲಾಗುವುದು. ಒಂದು ವೇಳೆ ಶಾನ್‌ ಮಸೂದ್‌ ಅವರ ಗಾಯ ಗಂಭೀರ ಸ್ವರೂಪವಾಗಿದ್ದರೆ, ಟಿ20 ವಿಶ್ವಕಪ್‌ ಟೂರ್ನಿಯಿಂದ ಅವರನ್ನು ಕೈ ಬಿಡಲಾಗುವುದು ಎಂದು ಪಾಕ್​ ತಂಡದ ಕೋಚ್​ ಸಕ್ಲೆನ್​ ಮುಷ್ತಾಕ್​ ತಿಳಿಸಿದ್ದಾರೆ.

ಇದನ್ನೂ ಓದಿ | T20 World Cup | ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾದ ಸಾಧನೆ, ಸವಾಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

Rohit Sharma: ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Rohit Sharma
Koo

ಮುಂಬಯಿ: ಟಿ20 ವಿಶ್ವಕಪ್(T20 World Cup 2024)​ ಗೆದ್ದು ತವರಿಗೆ ಮರಳಿದ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮಗೆ(Rohit Sharma) ತಮ್ಮ ಬಾಲ್ಯದ ಗೆಳೆಯರು(Rohit Sharma’s childhood friends) ವಿಶೇಷವಾಗಿ ವೆಲ್​ಕಮ್​ ಮಾಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಗುರುವಾರ  ಮುಂಬೈಯಲ್ಲಿ ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ತಂಡದ ಆಟಗಾರರಿಗೆ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ಎಲ್ಲ ಕಾರ್ಯಕ್ರಮ ಮುಗಿದ ಬಳಿಕ ರೋಹಿತ್​ ಅವರು ಬಾಲ್ಯದ ಗೆಳೆಯರನ್ನು ಭೇಟಿ ಮಾಡಿದರು. ಈ ವೇಳೆ ಗೆಳೆಯರು ಸೆಲ್ಯೂಟ್​ ಹೊಡೆದು, ರೋಹಿತ್​ ಅವರನ್ನು ಭುಜದ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು. ಈ ವೇಳೆ​ ಟೀಮ್​ ಇಂಡಿಯಾ ಆಟಗಾರ, ರೋಹಿತ್​ ಅವರ ಆಪ್ತರಾಗಿರುವ ತಿಲಕ್​ ವರ್ಮಾ ಕೂಡ ಜತೆಗಿದ್ದರು. ಇವರು ಕೂಡ ಸೆಲ್ಯೂಟ್​ ಹೊಡೆದು ರೋಹಿತ್​ಗೆ ಗೌರವಿಸಿದ್ದಾರೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಆಟಗಾರರು ತೆರೆದ ಬಸ್​ನಲ್ಲಿ ವಿಶ್ವಕಪ್​ ಟ್ರೋಫಿಯೊಂದಿಗೆ ರೋಡ್ ಶೋ ನಡೆಸಿದ್ದರು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಇದನ್ನೂ ಓದಿ Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ‘ಆ ವಿಷಯಗಳನ್ನು ನನ್ನಿಂದ ವಿವರಿಸಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ಏಕೆಂದರೆ, ಯಾವುದನ್ನೂ ನಾನು ಸ್ಕ್ರಿಪ್ಟ್ ಮಾಡಿಲ್ಲ. ನಾನು ಮೈದಾನಕ್ಕೆ ಇಳಿದಾಗ ಆ ಕ್ಷಣವನ್ನು ಅನುಭವಿಸುತ್ತಿದ್ದೆ. ಗೆಲುವು ತಂದು ಕೊಟ್ಟ ಈ ಪಿಚ್​ನ ಋಣವನ್ನು ಮರೆಯಲು ಸಾಧ್ಯವಿಲ್ಲ. ನನ್ನ ಜೀವನದುದ್ದಕ್ಕೂ ಈ ಪಿಚ್​ನ ಮಣ್ಣಿನ ನೆನಪನ್ನು ಇಟ್ಟು ಕೊಳ್ಳುವ ಸಲುವಾಗಿ ನಾನು ಪಿಚ್​ನ ಮಣ್ಣು ತಿಂದೆ” ಎಂದು ಹೇಳಿದ್ದರು.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

ಕ್ರಿಕೆಟ್

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Team India’s Victory Parade:ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

VISTARANEWS.COM


on

Team India's Victory Parade
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ನಿನ್ನೆ(ಗುರುವಾರ) ಮುಂಬೈಯಲ್ಲಿ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ತಂಡದ ಈ ವಿಜಯೋತ್ಸವದ(Team India’s Victory Parade) ವೇಳೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಪೈಕಿ ಕೆಲವರಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ಇದೀಗ ವರದಿಯಾಗಿವೆ. ಸದ್ಯದ ಮಾಹಿತಿ ಪ್ರಕಾರ 11 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಮಹಿಳೆಯೊಬ್ಬರು ಉಸಿರಾಟ ಸಮಸ್ಯೆಗೆ ಸಿಲುಕಿ ಬಳಿಕ ಪೊಲೀಸ್​ ಅಧಿಕಾರಿಯೊಬ್ಬರು ಮಹಿಳೆಯನ್ನು ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ ದೃಶ್ಯ ಕೂಡ ವೈರಲ್​ ಆಗಿದೆ. ಒಟ್ಟು 9 ಮಂದಿ ಉಸಿರಾಟದ ಸಮಸ್ಯೆಗೆ ಸಿಲುಕಿ ಇಲ್ಲಿನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.

17 ವರ್ಷಗಳ ಬಳಿಕ 2ನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವವನ್ನು ಗುರುವಾರ ಮುಂಬೈನಲ್ಲಿ ಏರ್ಪಡಿಸಲಾಗಿತ್ತು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆಟಗಾರರು ಬಂದೊಡನೆಯೇ ಕ್ರಿಕೆಟ್‌ ಪ್ರೇಮಿಗಳ ಜಯಘೋಷ ಮೊಳಗಿತು. ಅಭಿಮಾನಿಗಳ ಅಬ್ಬರಕ್ಕೆ ಅರಬ್ಬಿ ಸಮುದ್ರ ಕೂಡ ಒಂದು ಕ್ಷಣ ಸ್ಥಬ್ಧವಾಗಿತ್ತು. ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳನ್ನು ಸಲ್ಲಿಸಿದರು.

ಇದನ್ನೂ ಓದಿ Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

ಜೂನ್ 29ರಂದು ಬಾರ್ಬಾಡೋಸ್‌ನಲ್ಲಿ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಎದುರು ಜಯಿಸಿತ್ತು. ಆದರೆ ಕೆರೀಬಿಯನ್ ದ್ವೀಪದಲ್ಲಿ ಚಂಡಮಾರುತ ಬೀಸಿದ್ದ ಕಾರಣ ವಿಮಾನಯಾನ ಸೌಲಭ್ಯ ರದ್ದಾಗಿತ್ತು. ಆದ್ದರಿಂದ ಬುಧವಾರದವರೆಗೂ ತಂಡವು ಬಾರ್ಬಾಡೋಸ್‌ನಲ್ಲಿಯೇ ಉಳಿದಿತ್ತು.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

Continue Reading

ಕ್ರೀಡೆ

Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

Jay Shah: ವಿರಾಟ್​ ಕೊಹ್ಲಿ ಅವರು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕಳೆದ 15 ವರ್ಷಗಳಲ್ಲಿ ರೋಹಿತ್ ಶರ್ಮಾ ಅವರನ್ನು ಇಷ್ಟೊಂದು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದರು.

VISTARANEWS.COM


on

Jay Shah
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದು ತವರಿಗೆ ಮರಳಿದ ಟೀಮ್ ಇಂಡಿಯಾ(Team India) ಆಟಗಾರರಿಗೆ ನಿನ್ನೆ)ಗುರುವಾರ) ಮುಂಬೈಯಲ್ಲಿ ಭರ್ಜರಿ ಸ್ವಾಗತ ಕೋರಲಾಯಿತು. ಮುಂಬೈಯಲ್ಲಿ ಒಂದು ರೀತಿಯ ಹಬ್ಬದ ವಾತಾವರಣವೇ ಸೃಷ್ಟಿಯಾಗಿತ್ತು. ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳ ಮಧ್ಯೆ ತೆರೆದ ಬಸ್‌ನಲ್ಲಿ ಆಟಗಾರರರನ್ನು ಮೆರವಣಿಗೆ ಮಾಡಿ ವಾಂಖೆಡೆ ಮೈದಾನದಲ್ಲೂ ಸಂಭ್ರಮ ಆಚರಿಸಲಾಯಿತು. ಈ ವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಅವರು ವಿರಾಟ್​ ಕೊಹ್ಲಿಗೆ(virat kohli) ಹಸ್ತಲಾಘವ ನೀಡಿದ ಬಳಿಕವೂ ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತು ಮೈಮರೆತ ವಿಡಿಯೊವೊಂದು ವೈರಲ್​ ಆಗಿದೆ.

ಮೋದಿ ಭೇಟಿ ಬಳಿಕ ಟೀಮ್​ ಇಂಡಿಯಾ ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಮಾಡಲಾಯಿತು. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಯಿತು. ಬಳಿಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

ಚೆಕ್‌ ವಿತರಣೆಯ ಕಾರ್ಯಕ್ರಮದ ವೇಳೆ ವೇದಿಕೆಯಲ್ಲಿದ್ದ ಬಿಸಿಸಿಐ ಅಧಿಕಾರಿಗಳಿಗೆ ಆಟಗಾರರು ಹಸ್ತಲಾಘವ ನೀಡುವ ಮೂಲಕ ಗೌರವ ಸೂಚಿಸಿದರು. ಎಲ್ಲ ಆಟಗಾರರಂತೆ ಕೊಹ್ಲಿ ಕೂಡ ಸರತಿ ಸಾಲಿನಲ್ಲಿ ಅಧಿಕಾರಿಗಳ ಕೈ ಕುಲುಕಿ ಮುಂದೆ ಸಾಗಿದರು. ಈ ವೇಳೆ ಜಯ್​ ಶಾ, ಕೊಹ್ಲಿ ಕೈ ಕುಲುಕಿದ ಬಳಿಕ ಕೊಹ್ಲಿಯನ್ನೇ ನೋಡುವುದರಲ್ಲೇ ಮಗ್ನರಾದರು. ನಂತರ ಬಂದ ಆಟಗಾರರಿಗೆ ಕೈ ಕುಲುಕುವುದನ್ನೇ ಮರೆತುಬಿಟ್ಟರು. ಈ ವಿಡಿಯೊ ವೈರಲ್​ ಆಗಿದೆ. ಜಯ್​ ಶಾ ಅವರು ಕೊಹ್ಲಿಯನ್ನೇ ನೋಡುತ್ತಾ ನಿಂತಿದ್ದು ಯಾಕೆ ಎಂಬ ಬಗ್ಗೆ ನೆಟ್ಟಿಗರು ಚರ್ಚೆ ನಡೆಸಲಾರಂಭಿಸಿದ್ದಾರೆ.

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟ್ರೋಫಿ ವೇಳೆ ಸರಣಿ ಶ್ರೇಷ್ಠ ಪ್ರಶಸ್ತಿ ಸ್ವಿಕರಿಸುವಾಗ ಕೊಹ್ಲಿ ಜಯ್​ ಶಾ ಮುಖವನ್ನು ಕೂಡ ನೋಡದೆ ನೇರವಾಗಿ ಬಂದಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು. ಯಾರಿಗೆ ಗೌರವ ನೀಡಬೇಕು ಮತ್ತು ನೀಡಬಾರದು ಎಂಬುದು ಕಿಂಗ್​ ಕೊಹ್ಲಿಗೆ ತಿಳಿದಿದೆ ಎಂಬುದಾಗಿ ಕೊಹ್ಲಿ ಅಭಿಮಾನಿಗಳು ಈ ವಿಡಿಯೊಗೆ ಕಮೆಂಟ್​ ಮಾಡಿದ್ದರು.

15 ವರ್ಷಗಳಲ್ಲಿ ರೋಹಿತ್‌ರನ್ನು ಇಷ್ಟು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕಳೆದ 15 ವರ್ಷಗಳಲ್ಲಿ ರೋಹಿತ್ ಶರ್ಮಾ ಅವರನ್ನು ಇಷ್ಟೊಂದು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದರು. ನಾವು ಕೆನ್ಸಿಂಗ್ಟನ್ ಓವಲ್‌ನಲ್ಲಿ ಮೆಟ್ಟಿಲುಗಳನ್ನು ಹತ್ತುವಾಗ ಅಳುತ್ತಿದ್ದೆವು. 2011ರಲ್ಲಿ ಇದೇ ಮೈದಾನದಲ್ಲಿ ಏಕದಿನ ವಿಶ್ವಕಪ್ ಗೆಲುವಿನ ಬಳಿಕ ಅಂದು ಹಿರಿಯ ಆಟಗಾರರು ಭಾವುಕರಾಗಿದ್ದಾಗ ಅವರ ಭಾವನೆಗಳನ್ನು ಅಷ್ಟೊಂದು ಆಳವಾಗಿ ಗ್ರಹಿಸಲು ಸಾಧ್ಯವಾಗಿರಲಿಲ್ಲ. ಆದರೆ ನನಗೀಗ ಎಲ್ಲವೂ ಅರ್ಥವಾಗುತ್ತಿದೆ’ ಎಂದು ಹೇಳಿದರು.

Continue Reading

ಕ್ರಿಕೆಟ್

Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

Team India: ಕೆಲ ನೆಟ್ಟಿಗರು, ಆಸೀಸ್​​ಗೆ ಇದೊಂದು ಮುಖ್ಯ ವಿಷಯವಲ್ಲ. , ಅವರು ನಮ್ಮಂತೆ ಭಾವನಾತ್ಮಕ ವಿಷಯಗಳನ್ನು ನೋಡುವುದಿಲ್ಲ. ಈ ಬಗ್ಗೆ ಚರ್ಚಿಸಿ ಪ್ರಯೋಜನವಿಲ್ಲ. ಚಿಂತಿಸಲು ಹಲವಾರು ವಿಷಯಗಳಿವೆ ಎಂದು ಹೇಳಿದ್ದಾರೆ.

VISTARANEWS.COM


on

Team India
Koo

ಮುಂಬಯಿ: ಕಳೆದ ವರ್ಷ ಭಾರತದ(Team India) ಆತಿಥ್ಯದಲ್ಲಿ ನಡೆದ 13ನೇ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಆತಿಥೇಯ ಟೀಮ್ ಇಂಡಿಯಾವನ್ನು 6 ವಿಕೆಟ್​ಗಳಿಂದ ಮಣಿಸಿದ ಆಸ್ಟ್ರೇಲಿಯಾ 6ನೇ ಏಕದಿನ ವಿಶ್ವಕಪ್​ ಗೆದ್ದು ಸಂಭ್ರಮಿಸಿತ್ತು. ಈ ಐತಿಹಾಸಿಕ ಸಾಧನೆ ಬಳಿಕ ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌(Mitchell Marsh) ಡ್ರೆಸ್ಸಿಂಗ್​ ರೋಮ್​ನಲ್ಲಿ ಟ್ರೋಫಿ ಮೇಲೆ ಕಾಲಿಟ್ಟು ಸಂಭ್ರಮಿಸಿದ್ದರು. ಮಾರ್ಷ್​ ಅವರ ಈ ದುರ್ವರ್ತನೆಗೆ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಕೆಲವರು ಮಾರ್ಷ್ ವಿರುದ್ಧ ಆರ್‌ಟಿಐ ಕಾರ್ಯಕರ್ತನೊಬ್ಬ ಉತ್ತರ ಪ್ರದೇಶದಲ್ಲಿ ಎಫ್‌ಐಆರ್‌ ದಾಖಲಿಸಿದ್ದರು.

ಇದೀಗ ಭಾರತ ತಂಡ ಟಿ20 ವಿಶ್ವಕಪ್​ ಗೆದ್ದ ತವರಿಗೆ ಮರಳಿದ ವೇಳೆ ಆಟಗಾರರಿಗೆ ಸಿಕ್ಕ ಸ್ವಾಗತ ಮತ್ತು ಆಟಗಾರರು ಟ್ರೋಫಿಗೆ ನೀಡಿದ ಗೌರವವನ್ನು ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಕೊಂಡಾಡಿದ್ದಾರೆ. ಇದು ನೈಜ ಮತ್ತು ನಮ್ಮ ದೇಶದ ಸಂಸ್ಕೃತಿ ಎಂದು ಮಾರ್ಷ್​ಗೆ ಮತ್ತು ಆಸೀಸ್​ ಆಟಗಾರರಿಗೆ ಟಾಂಗ್​ ಕೊಟ್ಟಿದ್ದಾರೆ.

ಆಟಗಾರರ ತ್ಯಾಗ ಮತ್ತು ಪರಿಶ್ರಮದ ಫಲವಾಗಿ ಭಾರತಕ್ಕೆ ವಿಶ್ವಕಪ್​ ಟ್ರೋಫಿ ದೊರಕಿದೆ. ಭಾರತೀಯ ಆಟಗಾರರು ಸರಿಯಾದ ಕ್ರಮದಲ್ಲೇ ಈ ಟ್ರೋಫಿಗೆ ಗೌರವ ಸೂಚಿಸಿದ್ದಾರೆ. ಕಳೆದ ಬಾರಿ ಟ್ರೋಫಿ ಮೇಲೆ ಕಾಲಿಟ್ಟ ಆಸೀಸ್​ ತಂಡ ತನಗಿಂತ ಕೆಲ ಕ್ರಮಾಂಕದ ತಂಡದ ವಿರುದ್ಧ ಕೂಡ ಸೋಲಿನ ಅವಮಾನ ಎದುರಿಸಿತು. ನಿಮ್ಮ ಈ ಸೋಲಿಗೆ ಅಂದು ತೋರಿದ ದರ್ಪವೇ ಕಾರಣ ಎಂದು ನೆಟ್ಟಿಗರು ಆಸೀಸ್​ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ.

ಇದನ್ನೂ ಓದಿ Team India: ಟೀಮ್​ ಇಂಡಿಯಾ ಬಳಿ ಇರುವುದು ನಕಲಿ ವಿಶ್ವಕಪ್​ ಟ್ರೋಫಿ; ಅಸಲಿ ಟ್ರೋಫಿ ಎಲ್ಲಿದೆ?

ಗುರುವಾರ ವಿಶ್ವಕಪ್​ ವಿಜೇತ ತಂಡದ ಆಟಗಾರರನ್ನು ಅಭಿನಂದಿಸುವ(Team India victory parade) ಸಲುವಾಗಿ ಮುಂಬೈಯ ಮರೀನ್ ಡ್ರೈವ್‌ ಪ್ರದೇಶದಲ್ಲಿ ಸೇರಿದ ಅಭಿಮಾನಿಗಳನ್ನು(Team India fans) ಕಾಣುವಾಗ ಅರಬ್ಬಿ ಸಮುದ್ರವೇ ನಾಚಿ ನೀರಾಗುವಷ್ಟು ಕ್ರಿಕೆಟ್‌ ಪ್ರೀತಿಯ ಸಾಗರ ಉಕ್ಕೇರಿತ್ತು.

ನಾಯಕ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಎಲ್ಲ ಆಟಗಾರರು ವಿಶ್ವಕಪ್​ ಟ್ರೋಫಿಗೆ ಮುತ್ತಿಕ್ಕುವ ಮೂಲಕ ಗೌರವ ಸೂಚಿಸುತ್ತಿರುವ ವಿಡಿಯೊ ಮತ್ತು ಫೋಟೊಗಳನ್ನು ನೆಟ್ಟಿಗರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಮಾರ್ಷ್​ಗೆ ತಿರುಗೇಟು ನೀಡಿದ್ದಾರೆ.

ಕೆಲ ನೆಟ್ಟಿಗರು, ಆಸೀಸ್​​ಗೆ ಇದೊಂದು ಮುಖ್ಯ ವಿಷಯವಲ್ಲ. , ಅವರು ನಮ್ಮಂತೆ ಭಾವನಾತ್ಮಕ ವಿಷಯಗಳನ್ನು ನೋಡುವುದಿಲ್ಲ. ಈ ಬಗ್ಗೆ ಚರ್ಚಿಸಿ ಪ್ರಯೋಜನವಿಲ್ಲ. ಚಿಂತಿಸಲು ಹಲವಾರು ವಿಷಯಗಳಿವೆ ಎಂದು ಹೇಳಿದ್ದಾರೆ.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29ರಂದು ನಡೆದಿದ್ದ ಟಿ20 ವಿಶ್ವಕಪ್​ ಫೈನಲ್(​T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ರನ್​ಗಳ ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತ್ತು.

Continue Reading
Advertisement
Champions Trophy 2025:
ಪ್ರಮುಖ ಸುದ್ದಿ5 hours ago

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Rain News
ದೇಶ5 hours ago

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

KAS
ಕರ್ನಾಟಕ5 hours ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ6 hours ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ6 hours ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ6 hours ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ7 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest7 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ7 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest7 hours ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ10 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ13 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ13 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು16 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ17 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ22 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ2 days ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌