ಮುರುಘಾಶ್ರೀ ಪ್ರಕರಣ | ನೀಲಕಂಠೇಶ್ವರ ದೇಗುಲದಲ್ಲಿ ಕೊನೆಗೂ ಮುರುಘಾಶರಣರ ಫೋಟೊ ತೆರವು - Vistara News

ಕರ್ನಾಟಕ

ಮುರುಘಾಶ್ರೀ ಪ್ರಕರಣ | ನೀಲಕಂಠೇಶ್ವರ ದೇಗುಲದಲ್ಲಿ ಕೊನೆಗೂ ಮುರುಘಾಶರಣರ ಫೋಟೊ ತೆರವು

ಮುರುಘಾಶ್ರೀ ಪ್ರಕರಣ | ಚಿತ್ರದುರ್ಗ ನಗರದ ನೀಲಕಂಠೇಶ್ವರ ದೇಗುಲದಲ್ಲಿನ ಮುರುಘಾಶ್ರೀ ಭಾವಚಿತ್ರವನ್ನು ದೇವಸ್ಥಾನ ಆಡಳಿತ ಮಂಡಳಿ ತೆರವುಗೊಳಿಸಿದ್ದು, ಆ ಜಾಗಕ್ಕೆ ಮುರುಘಾ ಮಠದ ಹಿಂದಿನ ಶ್ರೀಗಳಾದ ಶಾಂತವೀರ ಸ್ವಾಮೀಜಿ ಫೋಟೊವನ್ನು ಅಳವಡಿಕೆ ಮಾಡಲಾಗಿದೆ.

VISTARANEWS.COM


on

ctd murugasharana photo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಿತ್ರದುರ್ಗ: ಮಠದ ಹಾಸ್ಟೆಲ್‌ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಮುರುಘಾ ಶರಣರು ಬಂಧಿತರಾಗಿರುವ ಹಿನ್ನೆಲೆಯಲ್ಲಿ ನಗರದ ನೀಲಕಂಠೇಶ್ವರ ದೇಗುಲದಲ್ಲಿನ ಮುರುಘಾಶ್ರೀ ಭಾವಚಿತ್ರವನ್ನು ತೆರವುಗೊಳಿಸಲಾಗಿದೆ.

ನಗರದಲ್ಲಿರುವ ನೀಲಕಂಠೇಶ್ವರ ದೇಗುಲಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ, ಪೂಜಾ ಕಾರ್ಯದಲ್ಲಿ ತೊಡಗುತ್ತಾರೆ. ಇಂತಹ ಸಂದರ್ಭದಲ್ಲಿ ದೇವಸ್ಥಾನದ ಗರ್ಭಗುಡಿ ಮುಂಭಾಗದ ಗೋಡೆ ಮೇಲೆ ಅವರ ಫೋಟೊವನ್ನು ಹಾಕಲಾಗಿರುವುದು ಸರಿಯಲ್ಲ. ಇದು ಭಕ್ತರಿಗೆ ಮುಜುಗರವನ್ನುಂಟು ಮಾಡುತ್ತದೆ. ಅಲ್ಲದೆ, ಮಹಿಳಾ ಭಕ್ತರಿಗೂ ಇದು ಇರಿಸುಮುರಿಸನ್ನು ತಂದೊಡ್ಡುತ್ತದೆ. ಈ ಹಿನ್ನೆಲೆಯಲ್ಲಿ ಅಲ್ಲಿ ಹಾಕಲಾಗಿರುವ ಮುರುಘಾಶರಣರ ಫೋಟೊವನ್ನು ಕೂಡಲೇ ತೆರವುಗೊಳಿಸಬೇಕು ಎಂದು ಅಕ್ಟೋಬರ್ 18ರಂದು ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕವು ಆಗ್ರಹಿಸಿತ್ತು. ಅಲ್ಲದೆ, ದೇಗುಲ ಸಮಿತಿ ಮತ್ತು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿತ್ತು.

ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದಿಂದ ಆಗ್ರಹ ವ್ಯಕ್ತವಾದಾಗಲೂ ದೇವಸ್ಥಾನ ಆಡಳಿತ ಮಂಡಳಿಯವರು ತತ್‌ ಕ್ಷಣದ ಕ್ರಮವನ್ನು ತೆಗೆದುಕೊಂಡಿರಲಿಲ್ಲ. ಹೀಗಾಗಿ ಫೋಟೊ ತೆರವಿಗೆ ಒತ್ತಡಗಳು ಬರುತ್ತಲೇ ಇದ್ದವು. ಈ ಹಿನ್ನೆಲೆಯಲ್ಲಿ ಶನಿವಾರ (ಅ. ೨೨) ನೀಲಕಂಠೇಶ್ವರ ದೇಗುಲದಲ್ಲಿನ ಮುರುಘಾಶ್ರೀ ಭಾವಚಿತ್ರವನ್ನು ತೆರವುಗೊಳಿಸಲಾಗಿದೆ. ಅಲ್ಲದೆ, ಆ ಜಾಗಕ್ಕೆ ಮುರುಘಾ ಮಠದ ಹಿಂದಿನ ಸ್ವಾಮೀಜಿಯವರಾದ ಶಾಂತವೀರ ಶ್ರೀಗಳ ಫೋಟೊವನ್ನು ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಮಠದ ವಿದ್ಯಾರ್ಥಿನಿಲಯದಲ್ಲಿದ್ದ ಅಷ್ಟೂ ಹೆಣ್ಣು ಮಕ್ಕಳ ಆಪ್ತ ಸಮಾಲೋಚನೆಗೆ ಆದೇಶ

ನ್ಯಾಯಾಂಗ ಬಂಧನ ವಿಸ್ತರಣೆ
ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶರಣರು ಜಾಮೀನು ಕೋರಿ ಚಿತ್ರದುರ್ಗ 2ನೇ ಅಪರ & ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲವು ನವೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿತ್ತು. ಇನ್ನು ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಮಹಿಳಾ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನವೂ ವಿಸ್ತರಣೆಯಾಗಿದ್ದು, ಈ ಮೂಲಕ ಇನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದಂತಾಗಿದೆ.

ಪ್ರಕರಣದ ಸಾರಾಂಶ
ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ಮುರುಘಾಶರಣರು ಜೈಲಿನಲ್ಲಿ ಇರುವ ಬೆನ್ನಲ್ಲೇ ಶುಕ್ರವಾರ (ಅ.೧೪) ಮೈಸೂರಲ್ಲಿ ಮಠದ ಅಡುಗೆ ಸಹಾಯಕಿಯೊಬ್ಬರು ತನ್ನಿಬ್ಬರು ಮಕ್ಕಳು ಸೇರಿದಂತೆ ಮತ್ತಿಬ್ಬರು ಮಕ್ಕಳ ಮೇಲೆ ಮುರುಘಾಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ದಾಖಲು ಮಾಡಿದ್ದರು. ಈ ವೇಳೆ ಪೊಲೀಸರು ಹಾಗೂ ಸಿಡಬ್ಲ್ಯೂಸಿ ಅಧಿಕಾರಿಗಳು ಆಕೆಯ ಹಾಗೂ ಒಬ್ಬಳು ಮಗಳ ಹೇಳಿಕೆಯನ್ನು ಪಡೆದುಕೊಂಡಿದ್ದರು. ನಾಲ್ಕು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ತಾಯಿ ಹೇಳಿದ್ದಾರೆ. “ಪತಿ ಇಲ್ಲದ ಕಾರಣ ತಾನು ಮಠದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದೆ. ನನ್ನ ಮಕ್ಕಳು ಮಠದ ವಸತಿ ಶಾಲೆಯಲ್ಲಿ ಓದುತ್ತಿದ್ದರು. ನನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಮುರುಘಾ ಶರಣರು ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಪ್ರಭಾವ ಹೊಂದಿರುವ ಕಾರಣ ತಡವಾಗಿ ದೂರು ನೀಡುತ್ತಿದ್ದೇನೆ” ಎಂದೂ ಸಹ ಸಂತ್ರಸ್ತ ಬಾಲಕಿಯರಿಬ್ಬರ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಸಂಬಂಧ ಮೈಸೂರಿ‌ನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಒಟ್ಟು 7 ಮಂದಿ ಮೇಲೆ ಕೇಸ್‌ ಹಾಕಲಾಗಿತ್ತು. ಸ್ವಾಮೀಜಿಯವರ ಸಹಾಯಕರಾದ ಮಹಾಲಿಂಗ, ಅಡುಗೆ ಸಹಾಯಕ ಕರಿಯಪ್ಪ ಎಂಬ ಇಬ್ಬರ ಮೇಲೆ ಹೊಸದಾಗಿ ಎಫ್‌ಐಆರ್ ದಾಖಲಾದಂತಾಗಿತ್ತು.

ಶಿವಮೂರ್ತಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದು, ಉಳಿದವರಾದ ಲೇಡಿ ಹಾಸ್ಟೆಲ್ ವಾರ್ಡನ್, ಮಠದ ಉತ್ತರಾಧಿಕಾರಿ, ಮಠದ ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರಯ್ಯ, ಮುರುಘಾಶ್ರೀ ಸಹಾಯಕ ಮಹಾಲಿಂಗ, ಮುರುಘಾಶ್ರೀ ಅಡುಗೆಭಟ್ಟ ಕರಿಬಸಪ್ಪ ವಿರುದ್ಧ ಕ್ರಮವಾಗಿ ಕೇಸ್ ದಾಖಲಾಗಿದೆ.

ಏನಿದು ಮೊದಲ ಲೈಂಗಿಕ ಕಿರುಕುಳ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮುರುಘಾ ಮಠದ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ವಸತಿ ಶಾಲೆಯಲ್ಲಿದ್ದ ಈ ಈ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆಂದು ದೂರು ನೀಡಲಾಗಿತ್ತು. ಅಲ್ಲದೆ, ಇದಕ್ಕೆ ಅಲ್ಲಿನ ವಾರ್ಡನ್‌ ಸೇರಿ ಹಲವರು ಸಹಕಾರ ನೀಡುತ್ತಿದ್ದಾರೆ ಎಂದು ಆಗಸ್ಟ್‌ ೨೭ರಂದು ಇಬ್ಬರು ವಿದ್ಯಾರ್ಥಿನಿಯರು ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರ್‌ಬಾದ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಒಬ್ಬಳು ವಿದ್ಯಾರ್ಥಿನಿ ಮೇಲೆ ೩ ವರ್ಷದಿಂದ ಹಾಗೂ ಇನ್ನೊಬ್ಬ ವಿದ್ಯಾರ್ಥಿನಿಯ ಮೇಲೆ ಕಳೆದ ಒಂದೂವರೆ ವರ್ಷದಿಂದ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಾ ಬರಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಯಾರೆಲ್ಲ ಭಾಗಿಗಳು?
ಡಾ. ಶಿವಮೂರ್ತಿ ಮುರುಘಾಶರಣರ ಮೇಲೆ ಅತ್ಯಾಚಾರ ಆರೋಪವನ್ನು ಹೊರಿಸಲಾಗಿದ್ದು, ಅವರಿಗೆ ಸಹಕಾರ ನೀಡಿದ ಆರೋಪದಡಿ ವಸತಿ ಶಾಲೆಯ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ ಬಸವಾದಿತ್ಯ, ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರ್‌ ಮೇಲೆ ದೂರು ದಾಖಲಾಗಿತ್ತು. ಈ ಇಬ್ಬರು ವಿದ್ಯಾರ್ಥಿನಿಯರನ್ನು ಒತ್ತಾಯಪೂರ್ವಕವಾಗಿ ಸ್ವಾಮೀಜಿ ಬಳಿ ಕಳುಹಿಸಲಾಗುತ್ತಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಲೈಂಗಿಕ ಕ್ರಿಯೆಗೆ ಒಪ್ಪದೇ ಇದ್ದರೆ ಹಣ್ಣು, ಸಿಹಿಯಲ್ಲಿ ಮತ್ತುಬರುವ ಔಷಧವನ್ನು ಬೆರೆಸಿ ಅತ್ಯಾಚಾರ ನಡೆಸಲಾಗುತ್ತದೆ ಎಂದೂ ಹೇಳಲಾಗಿದೆ.

ಬಂಧನದ ಬಳಿಕ
ಆಗಸ್ಟ್‌ ೨೭ರಂದು ದೂರು ದಾಖಲಾಗಿತ್ತಾದರೂ ಮುಂದಿನ ನಾಲ್ಕು ದಿನಗಳ ಕಾಲ ಕಾನೂನು ಪ್ರಕ್ರಿಯೆಯನ್ನು ತೆಗೆದುಕೊಂಡಿರಲಿಲ್ಲ. ಸೆಪ್ಟೆಂಬರ್‌ ೧ರಂದು ರಾತ್ರಿ ಸ್ವಾಮೀಜಿಯನ್ನು ಬಂಧನ ಮಾಡಲಾಯಿತು. ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌ ರಶ್ಮಿಯನ್ನು ಸಹ ಬಳಿಕ ಬಂಧನ ಮಾಡಿ ಶಿವಮೊಗ್ಗದ ಜೈಲಿಗೆ ಕಳುಹಿಸಲಾಗಿದೆ. ಇದರ ಜತೆಗೆ ಉಳಿದ ಆರೋಪಿಗಳ ಪೈಕಿ ಬಸವಾದಿತ್ಯ ಮತ್ತು ಪರಮಶಿವಯ್ಯ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಕೋರ್ಟ್‌ ಅದನ್ನು ಪುರಸ್ಕರಿಸದೆ ವಿಚಾರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ನಡುವೆ, ವಕೀಲರಾಗಿರುವ ಗಂಗಾಧರಯ್ಯ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ಕರೆದಾಗ ಬರುವ ಷರತ್ತಿನೊಂದಿಗೆ ಬಿಟ್ಟುಕಳುಹಿಸಲಾಗಿದೆ.

ಇದನ್ನೂ ಓದಿ | ಮುರುಘಾ ಶ್ರೀ | ಒಡನಾಡಿ ಸೇವಾ ಸಂಸ್ಥೆಯಿಂದ ಮತ್ತೊಂದು ದೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

VISTARANEWS.COM


on

ಮಂಗಳೂರು ನಗರವನ್ನು ಬೆಚ್ಚಿಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಈ ಸ್ಫೋಟ ಸಂಭವಿಸಿತ್ತು. ಆರೋಪಿ ಶಾರಿಕ್ ಸ್ಫೋಟಕ ತುಂಬಿದ್ದ ಕುಕ್ಕರ್ ಅನ್ನು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ, ನಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು.

ದೇಶದ ಭದ್ರತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ಉದ್ದೇಶದಿಂದ ಈ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿತ್ತು. ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಇದರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿತ್ತು. ತನಿಖೆಯ ವೇಳೆ ಶಾರಿಕ್ ನಿಷೇಧಿತ ಉಗ್ರಗಾಮಿ ಸಂಘಟನೆಗಳಿಂದ ಪ್ರೇರಿತನಾಗಿದ್ದದ್ದು ಮತ್ತು ಡಾರ್ಕ್ ವೆಬ್ ಮೂಲಕ ವಿದೇಶಿ ಹ್ಯಾಂಡ್ಲರ್‌ಗಳ ಸಂಪರ್ಕದಲ್ಲಿದ್ದು ಬಾಂಬ್ ತಯಾರಿಕಾ ತರಬೇತಿ ಪಡೆದಿದ್ದ ಎಂಬ ಆಘಾತಕಾರಿ ಸತ್ಯಗಳು ಹೊರಬಂದಿದ್ದವು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಎನ್‌ಐಎ ಸಲ್ಲಿಸಿದ್ದ ಸಾಕ್ಷ್ಯಧಾರಗಳನ್ನು ಪುರಸ್ಕರಿಸಿ ಶಾರಿಕ್ ದೋಷಿ ಎಂದು ತೀರ್ಪು ನೀಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೇರಿದಂತೆ ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ಪ್ರಕಟಿಸಿದೆ.

Continue Reading
Advertisement
Latest8 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest9 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest9 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking9 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest11 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest12 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest13 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ14 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest14 hours ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

Latest15 hours ago

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌