Anand Mamani | ಸವದತ್ತಿಯತ್ತ ಡೆಪ್ಯುಟಿ ಸ್ಪೀಕರ್‌ ಆನಂದ ಮಾಮನಿ ಪಾರ್ಥಿವ ಶರೀರ - Vistara News

ಬೆಳಗಾವಿ

Anand Mamani | ಸವದತ್ತಿಯತ್ತ ಡೆಪ್ಯುಟಿ ಸ್ಪೀಕರ್‌ ಆನಂದ ಮಾಮನಿ ಪಾರ್ಥಿವ ಶರೀರ

ಅನಾರೋಗ್ಯದಿಂದ ವಿಧಿವಶರಾಗಿರುವ ಡೆಪ್ಯುಟಿ ಸ್ಪೀಕರ್‌ ಆನಂದ ಮಾಮನಿ ಅವರ (Anand Mamani) ಪಾರ್ಥಿವ ಶರೀರವನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಿಂದ ಸವದತ್ತಿಯತ್ತ ತರಲಾಗುತ್ತಿದೆ. ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ.

VISTARANEWS.COM


on

Anand Mamani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ತೀವ್ರ ಅನಾರೋಗ್ಯದಿಂದ ವಿಧಿವಶರಾಗಿರುವ ಡೆಪ್ಯುಟಿ ಸ್ಪೀಕರ್ ‌ಆನಂದ ಮಾಮನಿ ಅವರ ಪಾರ್ಥಿವ ಶರೀರವನ್ನು (Anand Mamani) ಬೆಂಗಳೂರಿನ ಮಣಿಪಾಲ್ ‌ಆಸ್ಪತ್ರೆಯಿಂದ ಸವದತ್ತಿಯತ್ತ ತರಲಾಗುತ್ತಿದೆ.

ಸವದತ್ತಿಗೆ ಆನಂದ ಮಾಮನಿ ಪಾರ್ಥಿವ ಶರೀರ ಆಗಮಿಸಲಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ತಾಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಆನಂದ ಮಾಮನಿ ನಿವಾಸಕ್ಕೆ ಬೈಲಹೊಂಗಲ ಎಸಿ ಶಶಿಧರ ಬಗಲಿ ಭೇಟಿ, ಕುಟುಂಬಸ್ಥರ ಜೊತೆಗೆ ಚರ್ಚೆ ನಡೆಸಿದ್ದಾರೆ. ಯಡ್ರಾಂವಿ ರಸ್ತೆಯಲ್ಲಿರುವ ಮಾಮನಿ ಅವರ ಜಮೀನಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರಾದ ಮುರಗೇಶ ನಿರಾಣಿ, ಗೋವಿಂದ ಕಾರಜೋಳ ಭಾಗವಹಿಸುವ ಸಾಧ್ಯತೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Belagavi News: ಸ್ವಾತಂತ್ರ್ಯ ದಿ‌ನಾಚರಣೆಯಂದು ಅಂಗಾಂಗ ದಾನಿಗಳ ಕುಟುಂಬಗಳಿಗೆ ಗೌರವ; ದಿ‌ನೇಶ್ ಗುಂಡೂರಾವ್

Belagavi News: ಸಾವಿನ ಅಂಚಿನಲ್ಲಿರುವಾಗ ಇನ್ನೊಬ್ಬರ ಜೀವ ಉಳಿಸಲು ಅಂಗಾಂಗ ದಾನ ಮಾಡುವ ನಿರ್ಣಯ ಕೈಗೊಳ್ಳುವುದು ನಿಜಕ್ಕೂ ಪುಣ್ಯದ ಕೆಲಸ. ಅಂಗಾಂಗಗಳಿಗೆ ಇಂದು ಹೆಚ್ಚು ಬೇಡಿಕೆಯಿದೆ.‌ ಆದರೆ ಬೇಡಿಕೆಗೆ ತಕ್ಕಂತೆ ಅಂಗಾಂಗಗಳ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಸುಮಾರು 8500 ರೋಗಿಗಳು ಇಂದು ಅಂಗಾಂಗಗಳಿಗೆ ಕಾಯುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ನಾವೆಲ್ಲರು ಇಂದು ಪ್ರತಿಜ್ಞೆ ಮಾಡಬೇಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

VISTARANEWS.COM


on

Indian Organ Donation Day program inauguration by Minister Dinesh Gundurao at Belagavi
Koo

ಬೆಳಗಾವಿ: ದೇಶದಲ್ಲಿಯೇ ಅಂಗಾಂಗ ದಾನದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದರೂ, ದಾನಿಗಳ ಸಂಖ್ಯೆ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Belagavi News) ತಿಳಿಸಿದರು.

ಆರೋಗ್ಯ ಇಲಾಖೆಯ ವತಿಯಿಂದ ಬೆಳಗಾವಿಯಲ್ಲಿ ಇಂದು ಹಮ್ಮಿಕೊಂಡಿದ್ದ ಭಾರತೀಯ ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಂಗಾಂಗ ದಾನಿಗಳ ಕುಟುಂಬಗಳನ್ನು ಸನ್ಮಾನಿಸಿ, ಗೌರವಿಸುವುದರ ಜತೆಗೆ ರಾಜ್ಯ ಸರ್ಕಾರದ ಪ್ರಶಂಸಾ ಪತ್ರ ವಿತರಿಸಿ ಅವರು ಮಾತನಾಡಿದರು.

ಸಾವಿನ ಅಂಚಿನಲ್ಲಿರುವಾಗ ಇನ್ನೊಬ್ಬರ ಜೀವ ಉಳಿಸಲು ಅಂಗಾಂಗ ದಾನ ಮಾಡುವ ನಿರ್ಣಯ ಕೈಗೊಳ್ಳುವುದು ನಿಜಕ್ಕೂ ಪುಣ್ಯದ ಕೆಲಸ. ಅಂಗಾಂಗಗಳಿಗೆ ಇಂದು ಹೆಚ್ಚು ಬೇಡಿಕೆಯಿದೆ.‌ ಆದರೆ ಬೇಡಿಕೆಗೆ ತಕ್ಕಂತೆ ಅಂಗಾಂಗಗಳ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಸುಮಾರು 8500 ರೋಗಿಗಳು ಇಂದು ಅಂಗಾಂಗಗಳಿಗೆ ಕಾಯುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ನಾವೆಲ್ಲರು ಇಂದು ಪ್ರತಿಜ್ಞೆ ಮಾಡಬೇಕಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇದನ್ನೂ ಓದಿ: 2nd PUC Exam Result 2024: ದ್ವಿತೀಯ ಪಿಯುಸಿ ಪರೀಕ್ಷೆ-1, 2, 3ರಲ್ಲಿ ಒಟ್ಟಾರೆ ಶೇ. 84.87 ವಿದ್ಯಾರ್ಥಿಗಳು ಪಾಸ್; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

ಅಂಗಾಂಗ ದಾನವನ್ನು ಪ್ರೇರಿಪಸಲು ಆರೋಗ್ಯ ಇಲಾಖೆ ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಿದೆ.‌ ಅಂಗಾಂಗ ದಾನಿಗಳ ಕುಟುಂಬಗಳನ್ನು ಸನ್ಮಾನಿಸುವ ಕಾರ್ಯಕ್ರಮ ಹಾಕಿಕೊಂಡಿದ್ದು, ಇನ್ನು ಮುಂದೆ ದಾನಿಗಳ ಮನೆಗಳಿಗೇ ಆರೋಗ್ಯ ಇಲಾಖೆ ಅಧಿಕಾರಿಗಳು ತೆರಳಿ ಸನ್ಮಾನಿಸಲಿದ್ದಾರೆ. ಅಲ್ಲದೇ ವಿಶೇಷವಾಗಿ ಸ್ವಾತಂತ್ರ್ಯ ದಿನಾಚಾರಣೆಯ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಅಂಗಾಂಗ ದಾನಿಗಳನ್ನು ಸನ್ಮಾನಿಸಿ, ಗೌರವಿಸುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಸಚಿವರು ತಿಳಿಸಿದರು.

ಅಂಗಾಂಗ ದಾನಕ್ಕೆ ಯಾವುದೇ ಧರ್ಮದಲ್ಲಿ ಅಡ್ಡಿ ಇಲ್ಲ. ಅಂಗಾಂಗ ದಾನ ಮಾಡಿದರೆ ಪುನರ್ಜನ್ಮಕ್ಕೆ ತೊಂದರೆಯಾಗುತ್ತೆ ಎಂಬ ಕೆಲ ಮೂಢನಂಬಿಕೆಗಳು ಜನರಲ್ಲಿವೆ. ಪುನರ್ಜನ್ಮ ಗ್ಯಾರಂಟಿ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಆದರೆ ನೀವು ಮಾಡುವ ಅಂಗಾಂಗ ದಾನದಿಂದ ಇನ್ನೊಬ್ಬರ ಜೀವ ಉಳಿಯುವುದು ಗ್ಯಾರಂಟಿ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇದನ್ನೂ ಓದಿ: Moon: ಭೂಮಿಯಿಂದ ದೂರ ಹೊರಟ ಚಂದ್ರ, ಶೀಘ್ರದಲ್ಲೇ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

ಕರ್ನಾಟಕ ರಾಜ್ಯ 2ನೇ ಸ್ಥಾನದಲ್ಲಿ

2023 ನೇ ಸಾಲಿನಲ್ಲಿ 178 ಅಂಗಾಂಗ ದಾನ ನಡೆದಿದ್ದು, ಕರ್ನಾಟಕ ರಾಜ್ಯವು ದೇಶದಲ್ಲಿ 2ನೇ ಸ್ಥಾನದಲ್ಲಿದೆ.‌ ಆದರೆ ಅಂಗಾಂಗ ಕಸಿಗಾಗಿ ಕಾಯುತ್ತಿರುವವರ ಸಂಖ್ಯೆಗೂ ಅಂಗಾಂಗಗಳ ಪೂರೈಕೆಗೂ ಅಜಗಜಾಂತರ ಅಂತರವಿದೆ. ಅತ್ಯಂತ ಬೇಡಿಕೆಯುಳ್ಳ, ಅಂಗ ಎಂದರೆ ಮೂತ್ರಪಿಂಡ, ಒಟ್ಟಾರೆಯಾಗಿ 8,500 ಕ್ಕೂ ಹೆಚ್ಚು ಜನರು ಅಂಗಾಂಗಳಿಗಾಗಿ ಜೀವಸಾರ್ಥಕತೆಯಲ್ಲಿ ನೋಂದಾಯಿಸಿಕೊಂಡಿರುತ್ತಾರೆ.

ಮೆದುಳು ನಿಷ್ಕ್ರಿಯವಾದ ಒಬ್ಬ ಮಾನವನ ಅಂಗಾಂಗ ದಾನ ಮಾಡುವುದರ ಮೂಲಕ 8 ಜನರ ಜೀವ ಉಳಿಸಬಹುದಾಗಿದೆ. ಚರ್ಮ, ಮೂಳೆ, ಅಸ್ಥಿಮಜ್ಜೆ, ಹೃದಯದ ಕವಾಟಗಳು ಇತ್ಯಾದಿ ಅಂಗಾಂಶಗಳನ್ನು ದಾನ ಮಾಡುವುದರ ಮೂಲಕ 50ಕ್ಕೂ ಹೆಚ್ಚು ರೋಗಿಗಳಿಗೆ ಗುಣಮಟ್ಟದ ಜೀವನ ನೀಡಬಹುದು.

ಅಂಗಾಂಗ ದಾನ ಪ್ರತಿಜ್ಞೆಯಲ್ಲಿ ದೇಶದಲ್ಲಿ ಕರ್ನಾಟಕ ರಾಜ್ಯವು ಮೂರನೇ ಸ್ಥಾನದಲ್ಲಿದೆ. ಒಟ್ಟಾರೆಯಾಗಿ 63 ಸಾವಿರಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಿತರಾಗಿ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿರುತ್ತಾರೆ. ಪ್ರತಿಜ್ಞೆ ಮಾಡುವುದರಲ್ಲಿ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ. QR code scan ಮಾಡುವ ಮೂಲಕ ಎಲ್ಲಿಂದಲಾದರೂ ನೀವು ಬಯಸಿದ ಅಂಗಾಂಗಗಳು ಮತ್ತು ಅಂಗಾಂಶಗಳ ದಾನಕ್ಕೆ ಪ್ರತಿಜ್ಞೆ ಮಾಡಬಹುದಾಗಿದೆ.

ರಾಜ್ಯದಲ್ಲಿ ಸುಮಾರು 78ಕ್ಕೂ ಹೆಚ್ಚು ಅಂಗಾಂಗ ಕಸಿ ಕೇಂದ್ರ ಜೀವಸಾರ್ಥಕತೆ ಅಡಿಯಲ್ಲಿ ನೋಂದಾಯಿಸಿಕೊಂಡಿರುತ್ತವೆ. ಇದರಲ್ಲಿ ಬೆಳಗಾವಿ ವಿಭಾಗದಲ್ಲಿ ಏಳು ಆಸತ್ರೆಗಳಲ್ಲಿ ಅಂಗಾಂಗ ಕಸಿ ಮಾಡಲಾಗುತ್ತದೆ. ಬೆಳಗಾವಿಯಲ್ಲಿನ ಕೆ.ಎಲ್.ಇ ಆಸತ್ರೆ, ಕಿಡ್ನಿ, ಲಿವರ್, ಹೃದಯ ಅಂಗಾಂಗ ಕಸಿ ಸೌಲಭ್ಯ ಲಭ್ಯವಿದೆ.

ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಇದುವರೆಗೂ 27 ಕಿಡ್ನಿ (Kidney) ಅಂಗಾಂಗ ಕಸಿ ಮಾಡಲಾಗಿದೆ.. ಎಲ್ಲಾ ವೈದ್ಯಕೀಯ ಕಾಲೇಜಿನ ಆಸತ್ರೆಗಳನ್ನು ಜಿಲ್ಲಾ ಆಸತ್ರೆಗಳನ್ನು NTHORC-Non Transplant Human Organ Retrieval Centers ಆಗಿ ಸ್ಥಾಪಿಸಲು ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ.

ಈಗಾಗಲೇ 26 NTHORC ಗಳನ್ನು ನೋಂದಾಯಿಸಲಾಗಿದೆ. ಅವುಗಳಲ್ಲಿ ನಿಮಾನ್ಸ್, ಬೆಂಗಳೂರು ವೈದ್ಯಕೀಯ ಕಾಲೇಜಿನ ಟ್ರಾಮಾ ಕೇರ್ ಕೂಡ ಸೇರಿದೆ. Institute Of Nephro Urology (NU) ಮತ್ತು Institute of Gastroenterology Sciences & Organ Transplant (IGOT) ನಡೆಯುತ್ತಿವೆ. ಇಲ್ಲಿಯವರೆಗೆ 281 ಬಿಪಿಎಲ್ ರೋಗಿಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿಂದ ಅಂಗಾಂಗ ಕಸಿ ವೆಚ್ಚ ಭರಿಸಲಾಗಿದೆ.

ಇದನ್ನೂ ಓದಿ: KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

ಯಾವ ಧರ್ಮದಲ್ಲೂ ಅಂಗಾಂಗ ದಾನ ನಿಷಿದ್ಧವಿಲ್ಲ, ಕರ್ನಾಟಕ ರಾಜ್ಯದಲ್ಲೇ ಎಲ್ಲಾ ಧರ್ಮದವರು ಅಂಗಾಂಗ ದಾನ ಮಾಡಿರುವ ನಿದರ್ಶನಗಳಿವೆ. ಕೆ.ಎಲ್.ಇ ಆಸ್ಪತ್ರೆಯ ವೈದ್ಯರುಗಳು ನಡೆಸಿರುವ ವಿಶೇಷ ಅಂಗಾಂಗ ಕಸಿಯಲ್ಲಿ ಯಾವುದೇ ಧರ್ಮದ ತಾರತಮ್ಯವಿಲ್ಲದೆ ಹಿಂದೂ ಹೃದಯ ದಾನಿಯಿಂದ ಪಡೆದ ಅಂಗವನ್ನು ಕ್ರಿಶ್ಚಿಯನ್ ವೈದ್ಯರು ಮುಸ್ಲಿಂ ರೋಗಿಯ ದೇಹಕ್ಕೆ ಕಸಿ ಮಾಡಿ ಭಾವೈಕತೆ ಸಾರಿದ್ದಾರೆ.

Continue Reading

ಮಳೆ

Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

Karnataka Weather Forecast : ಮಳೆಗೆ (Rain News) ಹೊನ್ನಾವರದಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದ್ದು, ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸಕ್ಕೆ ಮುಂದಾದ ಘಟನೆಯೂ ನಡೆದಿದೆ. ಭಾನುವಾರವೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ
Koo

ಉತ್ತರಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಭಾರಿ ಮಳೆಗೆ (Karnataka weather Forecast) ಶರಾವತಿ ನದಿ ಉಕ್ಕಿ ಹರಿದು ಹೊನ್ನಾವರ ಹಲವೆಡೆ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ. ತಾಲೂಕಿನ ಸರಳಗಿ, ಮಾವಿನಹೊಳೆ, ಅಳ್ಳಂಕಿ ಸೇರಿ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದೆ. ನೆರೆ ಆತಂಕದ ಸುಮಾರು 169ಕ್ಕೂ ಅಧಿಕ‌ ಮಂದಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದೆ. ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಸಾಧ್ಯತೆ ಇದ್ದು, ನದಿ ಪಾತ್ರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಚೌಡಯ್ಯನ ಐಕ್ಯ ಮಂಟಪ ಮುಳುಗಡೆ

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚೌಡಯ್ಯಧಾನಪುರದ ನಿಜಶರಣ ಅಂಬಿಗರ ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಇತ್ತ ಮಲೆನಾಡಿನ ಶಿವಮೊಗ್ಗದಲ್ಲೂ ಮಳೆ ಅಬ್ಬರ ಮುಂದುವರಿದಿದೆ. ಮಳೆಯ ಅಬ್ಬರಕ್ಕೆ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಲಿಂಗನಮಕ್ಕಿ ಜಲಾಶಯದಿಂದ 11 ಕ್ರಸ್ಟ್ ಗೇಟ್ ಮೂಲಕ 42,705 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸ

ಗದಗ ಜಿಲ್ಲೆಯಲ್ಲಿ ತುಂಗಭದ್ರಾ ನದಿಯು ಉಕ್ಕಿ ಹರಿಯುತ್ತಿದೆ. ಮುಂಡರಗಿ ತಾಲೂಕಿನ ಸಿಂಗಟಾಲೂರು ಬ್ಯಾರೇಜ್ ಭರ್ತಿಯಾಗಿದ್ದು, ಕೆಲವರು ಜೀವ ಭಯವಿಲ್ಲದೆ ಮೀನು ಹಿಡಿಯುವ ದುಸ್ಸಾಹಸಕ್ಕೆ ಇಳಿದಿದ್ದರು. ನದಿ ತಟಗಳಿಗೆ ಗದಗ ಜಿಲ್ಲಾಡಳಿತ ಹೋಗದಂತೆ ಸೂಚನೆ ನೀಡಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಮೀನುಗಾರರು ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ನಾಳೆ ಕರಾವಳಿಗೆ ಭಾರಿ ಮಳೆ ಎಚ್ಚರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ನೈರುತ್ಯ ದುರ್ಬಲ

ನೈರುತ್ಯ ಮಾನ್ಸೂನ್ ಕರಾವಳಿಯ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಆಗುಂಬೆಯಲ್ಲಿ 18, ಕ್ಯಾಸಲ್ ರಾಕ್ 12 ಸೆಂ.ಮೀ ಮಳೆಯಾಗಿದೆ.

ಸಿದ್ದಾಪುರ 11, ಲೋಂಡಾ 10, ಕಾರ್ಕಳ, ಕೋಟ, ಕಾರವಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಗೇರ್ಸೊಪ್ಪ, ಹೊನ್ನಾವರ, ಉತ್ತರ ಕನ್ನಡ, ಕೊಲ್ಲೂರು, ಗೋಕರ್ಣ, ಶೃಂಗೇರಿ ಎಚ್‌ಎಂಎಸ್ 8 ಸೆಂ.ಮೀ ಮಳೆಯಾಗಿದೆ. ಮೂಲ್ಕಿ , ಶಿರಾಲಿ ಪಿಟಿಒ , ಸಿದ್ದಾಪುರ, ಮಂಕಿ, ಕುಂದಾಪುರ , ಕದ್ರಾ, ಲಿಂಗನಮಕ್ಕಿ ಎಚ್‌ಎಂಎಸ್ , ಕಮ್ಮರಡಿ,ಚಿಕ್ಕಮಗಳೂರು, ಭಾಗಮಂಡಲ, ಜಯಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕೋಡಿ

Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

Self Harming: ಕೃಷ್ಣಾ ನದಿಗೆ (Krishna River) ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

VISTARANEWS.COM


on

By

Self Harming
Koo

ಚಿಕ್ಕೋಡಿ: ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಅಂಕಲಿ – ನಸಲಾಪೂರ ಗ್ರಾಮದ ಮಧ್ಯದ ಸೇತುವೆ ಬಳಿ ಆತ್ಮಹತ್ಯೆ (Krishna River) ಮಾಡಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದವರು.

ಅಂಕಲಿ ಹಾಗೂ ನಸಲಾಪೂರ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವಂತಹ ಸೇತುವೆ ಮೇಲೆ ನಿಂತು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗಾಗಲೇ ಅಂಕಲಿ ಪೋಲಿಸರು ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!

ರಾಯಚೂರು: ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ (Ramakrishna Ashram) ಅಮಾನವೀಯ ಘಟನೆಯೊಂದು ನಡೆದಿದೆ. ಬಾಲಕನೊಬ್ಬ ಪೆನ್ನು ಕದ್ದಿದ್ದಕ್ಕೆ ಆಶ್ರಮದ ಗುರೂಜಿ ಮನಬಂದಂತೆ ಹಲ್ಲೆ (Assault Case) ನಡೆಸಿದ್ದಾರೆ. ಮೂರು ದಿನಗಳ ಕಾಲ ಕತ್ತಲೆ ಕೋಣೆಯಲ್ಲಿ ಕೂಡಿಟ್ಟು ವಿದ್ಯಾರ್ಥಿಯ ಕಣ್ಣುಗಳು ಬಾವು ಬರುವಂತೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ವಿದ್ಯಾರ್ಥಿ ಶ್ರವಣ್ ಕುಮಾರ್ ಹಲ್ಲೆಗೊಳಗಾದ ಬಾಲಕನಾಗಿದ್ದಾನೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಶ್ರವಣ ಬಡತನದ ಕಾರಣ ಆಶ್ರಮದಲ್ಲಿದ್ದ. ಸಹಪಾಠಿಗಳ ಜತೆ ಆಟವಾಡುತ್ತಾ ಪೆನ್ನು ಕದ್ದಿದ್ದ. ಶ್ರವಣಕುಮಾರ್ ವಿರುದ್ಧ ಸಹಪಾಠಿಗಳು ದೂರೂ ನೀಡಿದ್ದರು. ದೂರಿನ್ವಯ ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ ಎಂಬಾತ ಶ್ರವಣಗೆ ಮನಬಂದಂತೆ ಥಳಿಸಿದ್ದಾರೆ. ಚಿಕ್ಕ ಹುಡುಗ ಎಂಬುದನ್ನು ಪರಿಗಣಿಸಿದೇ ಮೂರು ದಿನಗಳು ಕತ್ತಲೇ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ.

ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರು ರಾಮಕೃಷ್ಣ ಆಶ್ರಮಕ್ಕೆ ಆಕಸ್ಮಿಕವಾಗಿ ಶ್ರವಣ ತಾಯಿ ಭೇಟಿ ನೀಡಿದಾಗ ವಿಷಯ ಬಹಿರಂಗವಾಗಿದೆ. ಸದ್ಯ ಶ್ರವಣಕುಮಾರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೈಕೈ ತುಂಬಾ ಗಾಯಗಳಾಗಿದ್ದು, ಕಣ್ಣು ಪೂರ್ತಿ ಬಾವು ಬಂದಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುಟ್ಟ ಬಾಲಕನ ಸ್ಥಿತಿಗೆ ಪೋಷಕರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಮೃತರ ಸಂಖ್ಯೆ 344ಕ್ಕೆ ಏರಿಕೆ; ರಾಡಾರ್‌ಗೆ ಸಿಕ್ಕ ನಿಗೂಢ ಉಸಿರಾಟ ಯಾರದ್ದು?

ಯುವತಿಯ ಪರ್ಸ್‌ ಕಿತ್ತುಕೊಂಡು ಮಂಗಳಮುಖಿಯರಿಂದ ಕಿರುಕುಳ

ಮಂಗಳಮುಖಿಯರ ಕುಕೃತ್ಯವನ್ನು ಯುವತಿಯೊಬ್ಬಳು ಬಿಚ್ಚಿಟ್ಟಿದ್ದಾಳೆ. 10 ರೂಪಾಯಿ ನಿವಾಳಿಸಿ ಕೊಡುತ್ತಿನಿ ಎಂದು 700 ರೂಪಾಯಿ ಪಡೆದರಂತೆ. ಪರ್ಸ್ ಕಿತ್ತು ಅದರಲ್ಲಿದ್ದ ಹಣವನ್ನು ಬಲವಂತವಾಗಿ ಪಡೆದು ಕಿರುಕುಳ ನೀಡಿದ್ದರಂತೆ. 700 ಪಡೆದು ಹತ್ತು ರೂಪಾಯಿ ವಾಪಾಸ್ ಕೊಟ್ಟರಂತೆ. ಮೂರು ಮಂಗಳಮುಖಿಯರಿಂದ ಯುವತಿಗೆ ಬೆಂಗಳೂರಿನ ಮಾರತ್ ಹಳ್ಳಿ ಸಿಗ್ನಲ್ ಬಳಿ ಕಿರುಕುಳ ನೀಡಿದ್ದಾರೆ. ಅಷ್ಟು ಜನ ಇದ್ದರೂ ಏನೂ ಮಾಡೋದಕ್ಕೆ ಸಾಧ್ಯವಾಗಿಲ್ಲ ಎಂದು ವಿಡಿಯೋ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಾಳೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

Karnataka Rain : ಕಾರವಾರದಲ್ಲಿ ಬಿಣಗಾ ಕಾರವಾರ ಟನೆಲ್‌ ಬಳಿ ಕಲ್ಲು ಕುಸಿದಿದ್ದು, ರಸ್ತೆ ಬಂದ್‌ ಮಾಡಿದ್ದಾರೆ. ಬೆಳಗಾವಿಯಲ್ಲಿ ದೇವಸ್ಥಾನದ ಗೋಪುರ ಕುಸಿದು ಬಿದ್ದಿದೆ. ವಿಜಯನಗರದಲ್ಲಿ ರಾಮ-ಲಕ್ಷ್ಮಣ ದೇಗುಲಕ್ಕೆ ಜಲದಿಗ್ಭಂದನ ಹಾಕಲಾಗಿದೆ.

VISTARANEWS.COM


on

By

karnataka rain
Koo

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ (Karnataka Rain) ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿದೆ. ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಕಲ್ಲು, ಮಣ್ಣು ಜಾರಿ ಬಿದ್ದಿದೆ. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದಾರೆ.

ಸ್ಥಳಕ್ಕೆ ಕಾರವಾರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿದ್ದಾರೆ. ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

karnataka rain
karnataka rain

ಕುಸಿದು ಬಿದ್ದ ದೇವಸ್ಥಾನದ ಗೋಪುರ

ಬೆಳಗಾವಿ: ನಿರಂತರ ಮಳೆಗೆ ಬೆಳಗಾವಿಯ ಕಿತ್ತೂರಿನ ಕೊಂಡವಾಡ ಚೌಕಿನಲ್ಲಿರುವ ಕರೆಮ್ಮ ದೇವಿ ದೇವಸ್ಥಾನದ ಗೋಪುರ ಕುಸಿದು ಬಿದ್ದಿದೆ. ಕಳೆದ ಮೂರು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಗೋಪುರ ಸಂಪೂರ್ಣವಾಗಿ ಕುಸಿದು, ಪಕ್ಕದ ಮಳಿಗೆಯ ಮೇಲೆ ಗೋಪುರ ಬಿದ್ದಿದೆ. ಘಟನೆಯಲ್ಲಿ ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ನಿನ್ನೆ ಶುಕ್ರವಾರವಷ್ಟೇ ಕಿತ್ತೂರು ಕೋಟೆಯ ಆವರಣದಲ್ಲಿದ್ದ ಐತಿಹಾಸಿಕ ವಾಚ್ ಟವರ್ ಕುಸಿದು ಬಿದ್ದಿತ್ತು.

ರಾಮ-ಲಕ್ಷ್ಮಣ ದೇಗುಲಕ್ಕೆ ಜಲದಿಗ್ಭಂದನ

ಜಲಾಶಯದಿಂದ 1.80 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಹರಿಬಿಟ್ಟ ಹಿನ್ನೆಲೆಯಲ್ಲಿ ವಿಜಯನಗರದ ವಿಶ್ವ ವಿಖ್ಯಾತ ಹಂಪಿಯಲ್ಲಿ ತುಂಗಭದ್ರಾ ಉಕ್ಕಿ ಹರಿಯುತ್ತಿದೆ. ನದಿಯ ರೌದ್ರ ನರ್ತನ ಹೆಚ್ಚಾಗಿದ್ದರಿಂದ ಹಂಪಿಯ ಹಲವು ಸ್ಮಾರಕಗಳು ಮುಳುಗಿವೆ. ಅದರಲ್ಲೂ ಐತಿಹಾಸಿಕ ರಾಮ – ಲಕ್ಷ್ಮಣ ದೇಗುಲಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಪ್ರವಾಸಿಗರು ಉಳಿದುಕೊಳುತ್ತಿದ್ದ ಮೂರು ಕಲ್ಲಿನ ಮಂಟಪಗಳು ಮುಕ್ಕಾಲು ಭಾಗ ಮುಳುಗಡೆಯಾಗಿದೆ.

ತುಂಗಭದ್ರಾ ನದಿ ನೀರು ನುಗ್ಗಿದ್ದರಿಂದ ದೇಗುಲಕ್ಕೆ ಭಕ್ತರ ಸಂಖ್ಯೆಯಲ್ಲಿ ಭಾರೀ ವಿರಳವಾಗಿದೆ. ರಾಮ – ಲಕ್ಷ್ಮಣ, ಸೀತೆ ದೇಗುಲ 2011, 2017ರಲ್ಲಿ ಎರಡು ಬಾರಿ ಸಂಪೂರ್ಣ ಮುಳುಗಡೆ ಆಗಿತ್ತು. ವಾಲಿ ಎನ್ನುವ ರಾಜನನ್ನು ಸಂಹರಿಸಿ ಸುಗ್ರೀವ ಅನ್ನೋ ರಾಜನಿಗೆ ಪಟ್ಟಾಭಿಷೇಕ ಮಾಡಿದ ಜಾಗವೇ ರಾಮ-ಲಕ್ಷ್ಮಣ ದೇಗುಲವಾಗಿದೆ. ರಾಮ-ಲಕ್ಷ್ಮಣ, ಸೀತಾಮಾತೆ, ಆಂಜನೇಯ ಹಾಗೂ ಸುಗ್ರೀವ ರಾಜ ಸೇರಿ ಐದು ಜನರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

ವಿಧಿ, ವಿಧಾನ ಮಂಟಪ, ಸ್ನಾನ ಘಟ್ಟ, ಪುರಂದರ ದಾಸರ ಮಂಟಪ ಸೇರಿ ಹತ್ತಾರು ಸ್ಮಾರಕಗಳು ಈಗಾಗಲೇ ಮುಳುಗಡೆಯಾಗಿದೆ. ಸ್ಮಾರಕಗಳು ಎಲ್ಲಿವೆ ಎಂಬುದು ಗೊತ್ತಾಗದ ರೀತಿ ತುಂಗಭದ್ರಾ ಉಕ್ಕಿ ಹರಿಯುತ್ತಿದೆ.

ಇದನ್ನೂ ಓದಿ: Murder case : ಮಲೆನಾಡಲ್ಲಿ ಒಂಟಿ ಮಹಿಳೆ ಕೊಲೆ; ಕತ್ತು ಹಿಸುಕಿ ಕೊಂದವರು ಯಾರು?

ಮುಳುಗಿದ ಸಂಗಮೇಶ್ವರ ದೇವಾಲಯ

ಮಲೆನಾಡಿನ ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಅಬ್ಬರಕ್ಕೆ ಮಲೆನಾಡಿನ ನದಿಗಳು ಮೈದುಂಬಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ತುಂಗಾ, ಭದ್ರಾ ಹರಿಯುತ್ತಿದೆ‌. ತುಂಗಾ, ಭದ್ರಾ ನದಿ ಸಂಗಮ ಕ್ಷೇತ್ರ ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೂಡ್ಲಿ ತುಂಗಾ ಹಾಗೂ ಭದ್ರಾ ನದಿ ಬಂದು ಸಂಗಮ ಆಗುವ ಪುಣ್ಯಕ್ಷೇತ್ರವಾಗಿದ್ದು, ಸಂಗಮೇಶ್ವರ ದೇವಾಲಯ ಮುಳುಗಿದೆ.

ಏತ ನೀರಾವರಿ ಬ್ಯಾರೇಜ್‌ಗೆ ಪ್ರವಾಸಿಗರ ದಂಡು

ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಬ್ಯಾರೇಜ್‌ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಮುಂಡರಗಿ ತಾಲೂಕಿನ ಹಮ್ಮಿಗಿ, ಗುಮ್ಮಗೋಳ, ವಿಠಲಾಪುರ ಸೇರಿದಂತೆ ಅನೇಕ ಗ್ರಾಮದ ರೈತರು ತತ್ತರಿಸಿದ್ದಾರೆ.

ಬ್ಯಾರೇಜ್‌ನ 26 ಗೇಟ್‌ಗಳಲ್ಲಿ 19 ಗೇಟ್‌ಗಳು ತೆರದು 2,90,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಬ್ಯಾರೇಜ್‌ನಿಂದ ರಭಸವಾಗಿ ಹರಿಯುತ್ತಿರುವ ನೀರು ನೋಡಲು ಕಿರು ಆಣೆಕಟ್ಟು ವೀಕ್ಷಿಸಲು ಪ್ರವಾಸಿಗರು ದೌಡಯಿಸಿದ್ದಾರೆ. ಬ್ಯಾರೇಜ್ ಎದುರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ.

ಜೋಗ ಜಲಪಾತಕ್ಕೆ ಪ್ರವಾಸಿಗರು ಫಿದಾ

ಲಿಂಗನಮಕ್ಕಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ವಿಶ್ವವಿಖ್ಯಾತ ಜೋಗ ಜಲಪಾತ ಕಣ್ಮನ ಸೆಳೆಯುತ್ತಿದೆ. ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Champions Trophy 2025
ಪ್ರಮುಖ ಸುದ್ದಿ11 mins ago

Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

Viral Video
ವೈರಲ್ ನ್ಯೂಸ್13 mins ago

Viral Video: ಪ್ರವಾಹದಲ್ಲಿ ಸಿಲುಕಿದ ನಾಯಿಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ ರವಾನೆ; ಮಾನವೀಯತೆ ಅಂದ್ರೆ ಇದು!

Best Teacher Award
ಕರ್ನಾಟಕ15 mins ago

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Union Minister Pralhad Joshi latest statement at Mysore Chalo Padayatra
ಕರ್ನಾಟಕ34 mins ago

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

Farmer dies after falling under power tiller wheel in Moralli village
ಉತ್ತರ ಕನ್ನಡ35 mins ago

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

KHIR City project Launch on August 23 at bengaluru says Minister MB Patil
ಕರ್ನಾಟಕ38 mins ago

KHIR City: ಬೆಂಗಳೂರಿನಲ್ಲಿ ದೇಶದಲ್ಲೇ ಮೊದಲ ‘ನಾಲೆಡ್ಜ್, ಹೆಲ್ತ್, ಇನ್ನೋವೇಶನ್ ಆಂಡ್ ರೀಸರ್ಚ್ ಸಿಟಿ’; ಆ.23ರಂದು ಉದ್ಘಾಟನೆ

IND vs SL ODI
ಪ್ರಮುಖ ಸುದ್ದಿ39 mins ago

IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

Indian Organ Donation Day program inauguration by Minister Dinesh Gundurao at Belagavi
ಕರ್ನಾಟಕ45 mins ago

Belagavi News: ಸ್ವಾತಂತ್ರ್ಯ ದಿ‌ನಾಚರಣೆಯಂದು ಅಂಗಾಂಗ ದಾನಿಗಳ ಕುಟುಂಬಗಳಿಗೆ ಗೌರವ; ದಿ‌ನೇಶ್ ಗುಂಡೂರಾವ್

Minister MB Patil statement in janandolana programme by congress party at ramanagara
ಕರ್ನಾಟಕ52 mins ago

MB Patil: ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ, ಜೆಡಿಎಸ್ ಷಡ್ಯಂತ್ರ; ಎಂ‌.ಬಿ. ಪಾಟೀಲ ಆರೋಪ

Wayanad Tragedy
Latest54 mins ago

Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ9 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌