ಮಹಿಳೆಯ ಕಪಾಳಕ್ಕೆ ಹೊಡೆದ ವಿ.ಸೋಮಣ್ಣ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ: Sorry ಎಂದ ಸಚಿವ - Vistara News

ಕರ್ನಾಟಕ

ಮಹಿಳೆಯ ಕಪಾಳಕ್ಕೆ ಹೊಡೆದ ವಿ.ಸೋಮಣ್ಣ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ: Sorry ಎಂದ ಸಚಿವ

ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ BJPಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ BJPಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

VISTARANEWS.COM


on

v somanna meets union home minister amit shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಸತಿ ಸಚಿವ ವಿ. ಸೋಮಣ್ಣ ಅವರು ಮಹಿಳೆಯೊಬ್ಬರ ಕಪಾಳಕ್ಕೆ ಹೊಡೆದಿರುವ ಘಟನೆ ಇದೀಗ ರಾಜಕೀಯ ವಿವಾದವಾಗಿ ಪರಿಣಮಿಸಿದ್ದು, ಕೂಡಲೇ ಸಚಿವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ಚಾಂರಾಜನಗರದಲ್ಲಿ ಮಹಿಳೆಗೆ ಹೊಡೆದ ನಂತರ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣವಿತ್ತು. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ನಂತರ, ರೈತ ಮುಖಂಡರು ಸೋಮಣ್ಣ ವಿರುದ್ಧ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ | ನಿವೇಶನ ಕೇಳಲು ಬಂದ ಮಹಿಳೆಯ ಕಪಾಳಕ್ಕೆ ಹೊಡೆದ ಸಚಿವ ವಿ. ಸೋಮಣ್ಣ

ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ‌ ರೈತ ಮುಖಂಡರು‌, ಗೋ ಬ್ಯಾಕ್ ಸೋಮಣ್ಣ ಎಂದು ಘೋಷಣೆ ಕೂಗಿದರು. ಈ ಬಗ್ಗೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಬೇಕು. ಸಚಿವ ಸೋಮಣ್ಣ ಅವರನ್ನು ಸಚಿವ ಸಂಪುಟದದಿಂದ ಕೈ ಬಿಡಬೇಕು. ಇದು ಗೋವಿಂದರಾಜನಗರವಲ್ಲ, ಇದು ಚಾಮರಾಜನಗರ. ಇಲ್ಲಿ ನಿಮ್ಮ ಆಟ ನಡೆಯಲ್ಲ ಎಂದು ಆಕ್ರೋಶ ಹೊರಹಾಕಿದರು.

ದಾವಣಗೆರೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದರಿಂದ ಬಿಜೆಪಿ ಸಂಸ್ಕೃತಿ ತಿಳಿದು ಬರುತ್ತದೆ. ಸೋಮಣ್ಣ ಸಚಿವನಾಗಲು ನಾಲಾಯಕ್. ಒಬ್ಬ ಮಂತ್ರಿಗೆ ಅಧಿಕಾರ ಕೊಟ್ಟಿರೋದು ಮಹಿಳೆ ಮೇಲೆ ದಲಿತರ ಮೇಲೆ ಕೈ ಮಾಡಲಿಕ್ಕಾ…? ಅಂತವರೆಲ್ಲ ಮಂತ್ರಿ ಮಂಡಲದಲ್ಲಿ ಇರಬಾರದು. ತಾಳ್ಮೆ, ಸಹನೆ, ಜನರ ಕಷ್ಟ ಕೇಳೋಕೆ ಆಗದಿದ್ದಕ್ಕೆ ಮಂತ್ರಿ ಯಾಕೇ ಆಗಬೇಕು? ರಾಜಿನಾಮೆ ಕೊಟ್ಡು ಮನೆಗೆ ಹೋಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

ರಾಯಚೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೆವಾಲ, ದೇಶದ ಸ್ತ್ರೀಯರನ್ನು ರಕ್ಷಣೆ ಮಾಡಬೇಕು ಎಂದು ಕೆಂಪುಕೋಟೆ ಮೇಲಿನಿಂದ ಪ್ರಧಾನಿ ಮೋದಿ ಭಾಷಣ ಮಾಡುತ್ತಾರೆ. ಆದರೆ ಕರ್ನಾಟಕ ಸರ್ಕಾರದ ಒಬ್ಬ ಹಿರಿಯ ಸಚಿವ, ಮಹಿಳೆಯ ಕೆನ್ನಗೆ ಹೊಡೆದಿದ್ದಾರೆ.ಇದೇನಾ ನೀವು ಮಹಿಳೆಯರಿಗೆ ಕೊಡುವ ಗೌರವ? ಮೊದಲು ಸೋಮಣ್ಣ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಸುರ್ಜೇವಾಲಾ ಒತ್ತಾಯ ಮಾಡಿದ್ದಾರೆ.

ಈ ಕುರಿತು ರಾಯಚೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ಟಿವಿ‌ ಮಾಧ್ಯಮಗಳಲ್ಲಿ ಈ ವಿಚಾರವನ್ನು ನಾನು ಗಮನಿಸಿದೆ. ಈ ವಿಚಾರ ಕೇಳಿ ನನಗೆ ಶಾಕ್ ಆಯಿತು. ಬಿಜೆಪಿ ನಾಯಕರಿಗೆ ‌ಮಹಿಳೆಯರನ್ನು ಕಂಡರೆ ಮೊದಲೇ ಅಗೌರವ. ಅವರ ಹಕ್ಕುಗಳನ್ನು ಕೇಳಲು ಬಂದಾಗ ಇವರು ನಡೆಸಿಕೊಳ್ಳುವ ರೀತಿ ಕ್ಷಮಾಪಣೆಗೆ ಅರ್ಹವಾದದಲ್ಲ.

ಬೊಮ್ಮಾಯಿ ಸರಕಾರಕ್ಕೆ ನಾವು ಕೇಳುವುದು ಇಷ್ಟೇ. ನಿಮ್ಮ ಸಂಪುಟದಲ್ಲಿ ಮಹಿಳಾ ವಿರೋಧಿ ಸಚಿವರನ್ನು ಏಕೆ ಇಟ್ಟುಕೊಂಡಿದ್ದೀರ? ಅವರ ಮೇಲೆ ನೀವು ಏಕೆ ಕ್ರಮ ಜರುಗಿಸುವುದಿಲ್ಲ? ಈ ಹಿಂದೆ ಅರವಿಂದ ಲಿಂಬಾವಳಿ‌ ಕೂಡ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿದ್ದರು. ಬಿಜೆಪಿಯವರು ಬೇಟಿ ಬಚಾವೋ ಬೇಟಿ ಪಡಾವೋ ಎನ್ನುತ್ತಾರೆ, ಆದರೆ ಈ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ. ಸೋಮಣ್ಣ ಮಹಿಳೆಯ ಮುಂದೆ ಬಹಿರಂಗವಾಗಿ ಕ್ಷಮೆ ಕೇಳಬೇಕು. ಕೆಂಪಮ್ಮ ಎಸ್‌ಟಿ ಸಮುದಾಯಕ್ಕೆ ಸೇರಿದ ಮಹಿಳೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ ಮಾಡುತ್ತೇವೆ. ಈ ವಿಡಿಯೋ ಆಧರಿಸಿ ‌ಪೊಲೀಸ್ ಇಲಾಖೆಗೂ ದೂರು‌ ಸಲ್ಲಿಕೆ ಮಾಡುತ್ತೇವೆ ಎಂದರು.

ಟ್ವಿಟರ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಮಾಝಿ ಸಚಿವ ದಿನೇಶ್‌ ಗುಂಡೂರಾವ್‌, ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಕಪಾಳಕ್ಕೆ ಸಚಿವ ಸೋಮಣ್ಣ ಹೊಡೆದಿದ್ದಾರೆ. ‌ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ.?

ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ BJPಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ BJPಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ ಎಂದಿದ್ದಾರೆ.

ಕ್ಷಮೆ ಯಾಚಿಸಿದ ಸೋಮಣ್ಣ

ವಿವಾದ ತೀವ್ರವಾಗುತ್ತಿರುವಂತೆಯೇ ಸಚಿವ ವಿ. ಸೋಮಣ್ಣ ಕ್ಷಮೆ ಯಾಚಿಸಿದ್ದಾರೆ. 45 ವರ್ಷ ರಾಜಕೀಯದಲ್ಲಿ ಹಲವು ಏಳುಬೀಳು ಕಂಡಿದ್ದೇನೆ. ಶನಿವಾರದ ಕಾರ್ಯಕ್ರಮದಲ್ಲಿ ಸಣ್ಣ ಅಪಚಾರವನ್ನೂ ಮಾಡಿಲ್ಲ. ಪ್ರಾಯಶಃ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಾರೆ ಕ್ಷಮೆ ಯಾಚಿಸುತ್ತೇನೆ, ವಿಷಾದ ವ್ಯಕ್ತಪಡಿಸ್ತೇನೆ.

ನಿನ್ನೆಯ ಘಟನೆ ಘಟನೆಯೇ ಅಲ್ಲ. ಹೆಣ್ಣು ಮಗಳು ಪದೇಪದೇ ವೇದಿಕೆ ಮೇಲೆ ಬರ್ತಾ ಇದ್ದಳು. ತಾಯಿ ಎಷ್ಟು ಸಾರಿ ಬರ್ತೀಯ ಅಂತ ವಿಚಾರಿಸಿದೆ, ನಿನ್ನ ಸಮಸ್ಯೆ ಬಗೆ ಹರಿಸುತ್ತೇನೆ ಎಂದು ಕೈಯಲ್ಲಿ ಪಕ್ಕಕ್ಕೆ ಸರಿಸಿದ್ದೇನೆ. ಅಷ್ಟೇ ವಿನಃ ಇನ್ನೇನೂ ಉದ್ದೇಶ ಇರಲ್ಲಿಲ್ಲ.

ಹೆಣ್ಣು ಮಕ್ಕಳ ಬಗ್ಗೆ ಅಪಾರವಾದ ಗೌರವ, ಮಮಕಾರ ಇದೆ. ನಾನು ಕೂಡ ಬಡತನದಿಂದಲೇ ಬಂದವನು. ಆ ಹೆಣ್ಣು ಮಗಳಿಗೆ ಸಹ ಹಕ್ಕು ಪತ್ರ ಕೊಡಿಸಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ | ವಿ. ಸೋಮಣ್ಣ ಫೋಟೊ ಇಟ್ಕೊಂಡು ಪೂಜೆ ಮಾಡ್ತೀನಿ ಎಂದರು ಕಪಾಳಕ್ಕೆ ಏಟು ತಿಂದ ಮಹಿಳೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದಿದ್ದು ಏಕೆ? ಸೀಕ್ರೆಟ್‌ ರಿವೀಲ್‌ ಮಾಡಿದ ಎಚ್‌ಡಿಕೆ!

Prajwal Revanna Case: ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸುವ ವಿಚಾರಕ್ಕೆ ನಾನೂ ಮನವಿ ಮಾಡಿದ್ದೇನೆ. ಜತೆಗೆ ಎಚ್.ಡಿ. ದೇವೇಗೌಡರು ಸಹ ಮನವಿ ಮಾಡಿದ್ದಾರೆ. ಅದನ್ನು ಎಷ್ಟರ ಮಟ್ಟಿಗೆ ಗೌರವಿಸುತ್ತಾರೆ ಎಂಬುದರ ಬಗ್ಗೆ ನಿಮ್ಮಷ್ಟೇ ನಾನು ಸಹ ಕುತೂಹಲ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೆ, ನಮ್ಮ ಕುಟುಂಬವನ್ನು ಸಂಪೂರ್ಣವಾಗಿ ಮುಗಿಸುವ ಹುನ್ನಾರ ನಡೆದಿದೆ. ಅದನ್ನು ಹೊರತುಪಡಿಸಿ ಬೇರೆ ಏನು ಮಾಡಲಾಗುತ್ತಿದೆ? ಪೆನ್‌ಡ್ರೈವ್‌ ಅನ್ನು ಮಾರುಕಟ್ಟೆ ಬಿಟ್ಟ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ? ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case Why did Deve Gowda write a letter to Prajwal and HD Kumaraswamy reveals secret
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದವರಿಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣವನ್ನು (Prajwal Revanna Case) ಜೀವಂತವಾಗಿ ಇಡಬೇಕು ಎಂಬುದನ್ನು ಹೊರತುಪಡಿಸಿದರೆ, ಇದರಲ್ಲಿನ ಸತ್ಯಾಂಶ ಮತ್ತು ವಾಸ್ತವಾಂಶವನ್ನು ಹೊರತರಬೇಕು ಎಂಬುದು ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿದಂತೆ ಯಾರಿಗೂ ಆಸಕ್ತಿ ಇಲ್ಲ. ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡರನ್ನೇ (Devarajegowda) ಮುಖ್ಯಮಂತ್ರಿಗಳು ಪ್ರಶ್ನೆ ಮಾಡುತ್ತಾರೆ. ಹಾಗಾಗಿ ನಾನು ಸಹ ಸಿಎಂಗೆ ಒಂದು ಪ್ರಶ್ನೆ ಕೇಳುತ್ತೇನೆ. ಸಿದ್ದರಾಮಯ್ಯ ಅವರೇ ನಿಮ್ಮ ಮಗ ರಾಕೇಶ್‌ ವಿದೇಶಕ್ಕೆ ಹೋದಾಗ ದುರ್ಘಟನೆ ನಡೆಯಿತಲ್ಲವೇ? ಅಲ್ಲಿ ಯಾವ ಕಾರ್ಯಕ್ರಮಕ್ಕೆ ಹೋಗಿದ್ದರು? ಹಾಗೆ ಹೋಗಲು ನಿಮ್ಮ ಅನುಮತಿಯನ್ನು ಪಡೆದುಕೊಂಡಿದ್ದರಾ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (HD Devegowda) ಮೊಮ್ಮಗ ಪ್ರಜ್ವಲ್‌ ರೇವಣ್ಣ ವಾಪಸ್‌ ಬರುವಂತೆ ಏಕೆ ಪತ್ರ ಬರೆದರು? ಎಂಬ ಬಗ್ಗೆಯೂ ಎಚ್‌ಡಿಕೆ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ರಾಕೇಶ್‌ ವಿದೇಶಕ್ಕೆ ಹೋಗಿದ್ದಾಗ ನಿಮ್ಮ ಮಗನ ಜತೆಗೆ ಯಾರು? ಎಷ್ಟು ಜನ ಇದ್ದರು? ಅಲ್ಲಿ ನಡೆದಿದ್ದಂತಹ ಘಟನೆ ಬಗ್ಗೆ ತನಿಖೆಯನ್ನು ಏಕೆ ಮಾಡಲಿಲ್ಲ. ಆ ವಿಷಯವನ್ನು ಏಕೆ ಮುಚ್ಚಿಟ್ಟಿರಿ? ಹಾಗಿದ್ದರೆ ನೀವೇ ಅನುಮತಿಯನ್ನು ಕೊಟ್ಟಿದ್ದೀರಾ? ಬೆಳೆದಂತಹ ಮಕ್ಕಳು ಪ್ರತಿಯೊಂದು ವಿಚಾರವನ್ನು ತಂದೆ – ತಾಯಿಯನ್ನು ಕೇಳಿ ಮಾಡುತ್ತಾರಾ? ಎಂದು ಪ್ರಶ್ನೆ ಮಾಡಿದರು.

ದೇವೇಗೌಡರು ಪತ್ರ ಬರೆದಿದ್ದು ಯಾಕೆ?

ರಾಜತಾಂತ್ರಿಕ ಪಾಸ್‌ ಪೋರ್ಟ್ ಬಗ್ಗೆ ಹೇಳುತ್ತೀರಲ್ಲವಾ? ಅದರ ಕಾನೂನು ಗೊತ್ತಾ ನಿಮಗೆ? ಈಗ ಪ್ರಜ್ವಲ್‌ನನ್ನು ಕರೆದುಕೊಂಡು ಬರುವುದಕ್ಕೆ ಪತ್ರ ಬರೆದಿದ್ದೀರಲ್ಲವೇ? ಅದು ಸದ್ಯಕ್ಕೆ ಏನೂ ಆಗಲ್ಲ. ಆದರೆ, ಈ ಪ್ರೊಸೆಸ್‌ ಸಾಕಷ್ಟು ದಿನ ಹಿಡಿಯುತ್ತದೆ ಎಂದೇ ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ಮೂಲಕ ಪತ್ರ ಬರೆದು ಕರೆಸುವ ಪ್ರಯತ್ನ ಮಾಡುತ್ತಿದ್ದೇವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವೆಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಎಷ್ಟು ವರ್ಷ ಅವರ ಜತೆ ಕೆಲಸ ಮಾಡಿದ್ದಾರಾ? ಅವರ ಯಾವ ಮಟ್ಟದಲ್ಲಿ ರಾಜಕಾರಣ ಮಾಡಿದ್ದಾರೆ ಅಂತ ಅನುಭವ ಇಲ್ವಾ? ನಿಮ್ಮ ಕುಟುಂಬದಲ್ಲಿ ನಡೆದಿರುವುದು ಏನು? ವಿದೇಶಕ್ಕೆ ನಿಮ್ಮ ಮಗನನ್ನು ನೀವೆ ಕಳಿಸಿದ್ದಿರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸುವ ವಿಚಾರಕ್ಕೆ ನಾನೂ ಮನವಿ ಮಾಡಿದ್ದೇನೆ. ಜತೆಗೆ ಎಚ್.ಡಿ. ದೇವೇಗೌಡರು ಸಹ ಮನವಿ ಮಾಡಿದ್ದಾರೆ. ಅದನ್ನು ಎಷ್ಟರ ಮಟ್ಟಿಗೆ ಗೌರವಿಸುತ್ತಾರೆ ಎಂಬುದರ ಬಗ್ಗೆ ನಿಮ್ಮಷ್ಟೇ ನಾನು ಸಹ ಕುತೂಹಲ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಪೆನ್‌ಡ್ರೈವ್‌ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ?

ಹಾಸನದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯವುಳ್ಳ ಪೆನ್ ಡ್ರೈವ್ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಸಂಪೂರ್ಣವಾಗಿ ಮುಗಿಸುವ ಹುನ್ನಾರ ನಡೆದಿದೆ. ಅದನ್ನು ಹೊರತುಪಡಿಸಿ ಬೇರೆ ಏನು ಮಾಡಲಾಗುತ್ತಿದೆ? ಪೆನ್‌ಡ್ರೈವ್‌ ಅನ್ನು ಮಾರುಕಟ್ಟೆ ಬಿಟ್ಟ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ? ವಿಚಾರಣೆ ನಡೆಯುವಾಗ ಯಾರದ್ದೇ ತಪ್ಪು ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂಬುದಾಗಿ ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗ ಪೆನ್‌ಡ್ರೈವ್‌ ವಿತರಣೆ ಮಾಡಿರುವುದು ಅಪರಾಧ ಅಲ್ಲ ಎಂದು ಅವರೇ ಹೇಳುತ್ತಿದ್ದಾರೆ. ಆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್‌ ಮಾಡದೇ ಹೊರಗಡೆ ಬಿಟ್ಟಿದ್ದೀರಲ್ಲವೇ ಅವರಿಗೆ ಏನು ನ್ಯಾಯ ಕೊಡಿಸುತ್ತೀರಿ? ಸರ್ಕಾರದಿಂದ ಏನು ನ್ಯಾಯ ಕೊಡಲು ಸಾಧ್ಯ? ಇದನ್ನೆಲ್ಲ ಸರಿ ಮಾಡುತ್ತೀರಾ ನೀವು? ನಾಲ್ಕು ಗೋಡೆಗಳ ಮಧ್ಯೆ ನಡೆದದ್ದು ಬೇರೆ, ಆದರೆ ಇದನ್ನು ಬೀದಿಗೆ ತಂದಿದ್ದು ನೀವೆ ತಾನೇ? ಇದರಲ್ಲಿ ಏನು ಮಾಹಿತಿ ಸಿಕ್ಕಿತ್ತೋ ಅದನ್ನು ಇಟ್ಟುಕೊಂಡು ಸಂತ್ರಸ್ತೆಯ ಕುಟುಂಬಕ್ಕೆ ಸಮಸ್ಯೆ ಆಗದಂತೆ ವಿಚಾರಣೆ ನಡೆಸಬೇಕಿತ್ತು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕಾರ್ತಿಕ್‌ಗೆ ಎಸ್‌ಐಟಿಯಲ್ಲಿ ರಾಜಾತಿತ್ಯ

ಮಾತು ಎತ್ತಿದ್ದರೆ ಅದೇನೋ ಹೊಸ ಹೆಸರಿಟ್ಟುಕೊಂಡಿದ್ದಾರೆ, ಬ್ರದರ್‌ ಸ್ವಾಮಿ ಅಂತೆ. ನಿಮ್ಮ ಯೋಗ್ಯತೆಗೆ ಇಷ್ಟು. ನಿಮಗೆ ಮಾನ, ಮರ್ಯಾದೆ ಇದ್ದರೆ? ನೀವು ಯಾವ ರೀತಿ ನಡೆದುಕೊಂಡು ಬಂದಿದ್ದೀರಾ ಎಂಬುದನ್ನು ನೋಡಿಕೊಳ್ಳಿ. ನಿಮ್ಮ ಪಾರ್ಟಿ ಅಧ್ಯಕ್ಷ ಯಾವ ರೀತಿ ನಡೆದುಕೊಂಡು ಬಂದಿದ್ದಾರೆ ಅಂತ ಕಾಂಗ್ರೆಸ್ ಕಾರ್ಯಕರ್ತರನ್ನು ಕೇಳಲು ಬಯಸುತ್ತೇನೆ. ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ. ಎಸ್‌ಐಟಿಯಲ್ಲಿ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ರಾಜಾತಿತ್ಯ ಸಿಗುತ್ತಿದೆ. ಎಲ್ಲಿದ್ದಾನೆ ಅವನು? ಮಾವನ ಮನೆಗೆ ಹೋದಂತೆ ಹೋಗಿ ಬರುತ್ತಾನೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ವಿಧಾನಸೌಧದ ಒಳಗಡೆ ಕ್ಯಾಸೆಟ್ ಸರ್ಕ್ಯುಲೇಷನ್ ಮಾಡಿದವರು ಓಡಾಡಿಕೊಂಡು ಇದ್ದಾರೆ. ಏನು ತನಿಖೆ ನಡೆಸುತ್ತೀರಿ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

ಇದೊಂದು ಕಾಂಗ್ರೆಸ್ ಪಕ್ಷವಾ?

ತನಿಖೆಯ ದಾರಿ ತಪ್ಪಿಸುವ ಕೆಲಸವನ್ನು ನಾನು ಮಾಡಿದ್ದೇನಾ? ಇದೊಂದು ಕಾಂಗ್ರೆಸ್ ಪಕ್ಷವಾ? ಗೌರವ ಇದೆಯಾ? ಮಾನ, ಮರ್ಯಾದೆ ಇದೆಯಾ? ನಿಮ್ಮ ಡಿಸಿಎಂ ಡಿ.ಕೆ. ಶಿವಕುಮಾರ್, ಅದೇ ಸಿಡಿ ಶಿವು ಅವರು ಯಾಕಪ್ಪಾ ಶಿವರಾಮೇಗೌಡರ ಜತೆ ಮಾತನಾಡಿದರು? ಇವರದ್ದು ಹಸ್ತಕ್ಷೇಪ ಇಲ್ಲವೆಂದಾದರೆ ಏಕೆ ಮಾತನಾಡಬೇಕಿತ್ತು? ಇನ್ನೂ ಏನಾದರೂ ಸಾಕ್ಷಿ ಇದ್ದರೆ ಕೊಡು ಅಂತ ಕೇಳಿದ್ದು ಯಾಕೆ? ಬ್ರೋಕರ್‌, ತಲೆ ಹಿಡಿಯುವ ಕೆಲಸವನ್ನು ಮಾಡುತ್ತಿರುವವರು ಇವರು. ನನ್ನ ಬಗ್ಗೆ ಪಕ್ಷದಿಂದ ಟ್ವೀಟ್‌ ಮಾಡಿಸುತ್ತೀರಾ? ನೀವು ಯಾವ ನೈತಿಕತೆ ಇಟ್ಟುಕೊಂಡಿದ್ದೀರಿ? ಗೃಹ ಸಚಿವರೇ ನಿಜವಾದ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಿ. ನಿಮಗೆ ತಂದೆ – ತಾಯಿ ಜನ್ಮ ಕೊಟ್ಟು ಭೂಮಿಗೆ ಬಂದಿದ್ದೀರಿ. ಒಡಹುಟ್ಟಿದ ಅಕ್ಕ – ತಂಗಿಯರು ಇದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ

ಚನ್ನಗಿರಿಯ ಪ್ರಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಯಾರೂ ಗೌರವ ಕೊಡುವ ವಾತಾವರಣವಿಲ್ಲ. ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಗೌರವವಿಲ್ಲ. ಏಕೆಂದರೆ ಸರ್ಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಈ ಸರ್ಕಾರದವರು ಹಾಗೆ ಬಳಕೆ ಮಾಡಿಕೊಂಡಿದ್ದಾರೆ. ಅದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿತ ಕಂಡಿದೆ. ಇದು ಸರ್ಕಾರದ ಸ್ವಯಂ ಜವಾಬ್ದಾರಿಯಾಗಿದೆ. ಅವರೇ ಮಾಡಿಕೊಂಡ ಕೆಲಸ ಇದು. ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ, ಜನತೆಯಲ್ಲೂ ವಿಶ್ವಾಸವಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

Continue Reading

ಮೈಸೂರು

Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

Murder case : ಇತ್ತೀಚೆಗೆ ಸಣ್ಣ ವಿಚಾರಕ್ಕೆಲ್ಲ ಶುರುವಾಗುವ ಜಗಳವು ಕೊಲೆಯಲ್ಲಿ ಅಂತ್ಯವಾಗುತ್ತಿದೆ. ಸದ್ಯ ಮೈಸೂರಿನಲ್ಲಿ ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಜಗಳ ಶುರುವಾಗಿದ್ದು, ಯುವಕನೊರ್ವ ತನ್ನ ದೊಡ್ಡಮ್ಮನನ್ನೇ ಕೊಂದಿದ್ದಾನೆ.

VISTARANEWS.COM


on

By

Murder case in Mysuru
Koo

ಮೈಸೂರು: ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಜಗಳ ಶುರುವಾಗಿ ವಿಕೋಪಕ್ಕೆ ತಿರುಗಿದ್ದು, ಯುವಕನೊರ್ವ ದೊಡ್ಡಮ್ಮನನ್ನೇ ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ (Murder Case) ಮಾಡಿದ್ದಾನೆ. ಮೈಸೂರಿನ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಘಟನೆ ನಡೆದಿದೆ. ನಿಂಗಣ್ಣ ಎಂಬುವವರ ಪತ್ನಿ ವಿನೋದಾ (45) ಕೊಲೆಯಾದವರು.

ನಿಂಗಣ್ಣ ಹಾಗೂ ಸ್ವಾಮಿ ಇಬ್ಬರು ಸಹೋದರರಾಗಿದ್ದು, ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಮತ್ತದೇ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದಿದ್ದು, ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿತ್ತು. ಈ ಮಧ್ಯೆ ಜಗಳಕ್ಕೆ ಎಂಟ್ರಿ ಕೊಟ್ಟ ಸ್ವಾಮಿ ಅವರ ಪುತ್ರ ಅಭಿಷೇಕ್ ತನ್ನ ದೊಡ್ಡಮ್ಮನ ಮೇಲೆ ಹಲ್ಲೆ ಮಾಡಿ ಹೊಟ್ಟೆಗೆ ಒದ್ದಿದ್ದಾನೆ. ಕೆಳಗೆ ಬಿದ್ದವರಿಗೆ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡ ವಿನೋದಾರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಇತ್ತ ದೊಡ್ಡಮ್ಮ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಅಭಿಷೇಕ್ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಎಎಸ್‌ಪಿ ನಂದಿನಿ ಸೇರಿದಂತೆ ಇತರ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕವಲಂದೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Lockup Death: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು, ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ

ದಾವಣಗೆರೆ: ಪೊಲೀಸ್ ಕಸ್ಟಡಿಯಲ್ಲಿದ್ದ (police custody) ಆರೋಪಿಯೊಬ್ಬ ಸಾವಿಗೀಡಾಗಿದ್ದು (Lockup death), ಇದರಿಂದ ರೊಚ್ಚಿಗೆದ್ದ ಆರೋಪಿ (culprit) ಕಡೆಯವರು ಠಾಣೆಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ದಾವಣಗೆರೆ (Davanagere news) ಜಿಲ್ಲೆಯ ಚನ್ನಗಿರಿ (Channagiri news) ತಾಲೂಕಿನಲ್ಲಿ ಘಟನೆ ನಡೆದಿದೆ.

ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈತ ಒಸಿ ಆಡಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರಿಂದ ತನಿಖೆಗೆ ಒಳಗಾಗಿದ್ದ. ಸಂಜೆ ಪೊಲೀಸರು ಈತನನ್ನು ಠಾಣೆಗೆ ಕರೆತಂದಿದ್ದ‌ರು.

ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್‌ನನ್ನು ಪೊಲೀಸರು ಅಸ್ಪತ್ರೆಗೆ ಸಾಗಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅದಿಲ್‌ ಸಾವನ್ನಪ್ಪಿದ್ದ. ಅಕ್ರೋಶಗೊಂಡ ಆರೋಪಿ ಸಂಬಂಧಿಕರು, ಆರೋಪಿಯ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ದೊಂಬಿ ಎಬ್ಬಿಸಿದ್ದಾರೆ. ಪೊಲೀಸರು ನೀಡಿದ ಹಿಂಸೆಯ ಪರಿಣಾಮ ಲಾಕಪ್‌ ಡೆತ್‌ ಆಗಿದೆ, ಅದನ್ನು ಮುಚ್ಚಿಡಲು ಲೋ ಬಿಪಿ ನಾಟಕವಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಅದಿಲ್‌ ಸಂಬಂಧಿಕರು ಹಾಗೂ ಸ್ನೇಹಿತರು, ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯ ಆವರಣದಲ್ಲಿ ನೂರಾರು ಜನ ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ಚಿನ್ನದ ದರ ಇಂದು ಯಥಾಸ್ಥಿತಿ; 22K- 24K ಬಂಗಾರದ ದರಗಳು ಹೀಗಿವೆ

ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಶುಕ್ರವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ನಿನ್ನೆಯಂತೆ ಯಥಾಸ್ಥಿತಿ ಕಾಪಾಡಿಕೊಂಡಿವೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಶುಕ್ರವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ನಿನ್ನೆಯಂತೆ ಯಥಾಸ್ಥಿತಿ ಕಾಪಾಡಿಕೊಂಡಿವೆ. ನಿನ್ನೆ (ಶುಕ್ರವಾರ) 10 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹900 ಹಾಗೂ ₹980 ಇಳಿಕೆಯಾಗಿದ್ದವು. ಮೊನ್ನೆಯೂ (ಗುರುವಾರ) 10 ಗ್ರಾಂಗೆ 1000 ರೂ. ಮೀರಿ ಇಳಿಕೆಯಾಗಿತ್ತು. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,640ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,120 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,400 ಮತ್ತು ₹6,64,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,244 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,952 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,440 ಮತ್ತು ₹7,24,400 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹92.50, ಎಂಟು ಗ್ರಾಂ ₹740 ಮತ್ತು 10 ಗ್ರಾಂ ₹925ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,250 ಮತ್ತು 1 ಕಿಲೋಗ್ರಾಂಗೆ ₹92,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,55072,590
ಮುಂಬಯಿ66,40072,440
ಬೆಂಗಳೂರು66,40072,440
ಚೆನ್ನೈ66,50072,550

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

Continue Reading

ಕ್ರೈಂ

Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Road Accident : ಪ್ರತ್ಯೇಕ ಕಡೆಗಳಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟೈಯರ್‌ ಸಿಡಿದು ಲಾರಿಯೊಂದು ಸುಟ್ಟು ಕರಕಲಾಗಿದ್ದು, ಚಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.

VISTARANEWS.COM


on

By

Road Accident
Koo

ಮೈಸೂರು/ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೈಸೂರಿನ ಹುಣಸೂರು ತಾಲೂಕಿನ ಮೈಸೂರು- ಬಂಟ್ವಳ ರಾಷ್ಟೀಯ ಹೆದ್ದಾರಿ 275ರ ಬನ್ನಿಕುಪ್ಪೆ ಬಳಿ ಅಪಘಾತ (Road Accident) ನಡೆದಿದೆ.

ಬನ್ನಿಕುಪ್ಪೆ ಬಳಿ ಮಹಿಳೆ ಮೈಸೂರು ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನವು ಗುದ್ದಿದೆ. ಗುದ್ದಿದ ರಭಸಕ್ಕೆ ಕೆಳಗೆ ಬಿದ್ದ ಮಹಿಳೆ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಮೃತಳ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆಯಲ್ಲಿ ಬಿದ್ದಿದ್ದ ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಣಸೂರು ಶವಗಾರಕ್ಕೆ ರವಾನೆ ಮಾಡಲಾಗಿದೆ. ಇನ್ನೂ ಮಹಿಳೆ ಬಗ್ಗೆ ಮಾಹಿತಿ ಸಿಕ್ಕವರು 9480805057 ನಂಬರ್ ತಿಳಿಸುವಂತೆ ಇನ್ಸ್‌ಪೆಕ್ಟರ್ ಲೋಲಾಕ್ಷಿ ಮನವಿ ಮಾಡಿದ್ದಾರೆ.

ಅಪಘಾತಕ್ಕೆ ತುಮಕೂರಲ್ಲಿ ಯುವಕ ಸಾವು

ಇತ್ತ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡ ಆಲದಮರದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕನೊರ್ವ ಮೃತಪಟ್ಟಿದ್ದಾನೆ. ಪವನ್ ಎಸ್‌. ಆರ್ (23) ಮೃತ ದುರ್ದೈವಿ.

ಶಿರಾ ನಿವಾಸಿಯಾಗಿರುವ ಪವನ್ ತುಮಕೂರಿನ ಐನಾಕ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಕೆಲಸ ಮುಗಿಸಿ ತುಮಕೂರಿನಿಂದ ಶಿರಾಗೆ ಬೈಕ್‌ನಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಿಂದ ಹಾರಿ ಬಿದ್ದ ಪವನ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ‌

ಇದನ್ನೂ ಓದಿ: Traffic violation : ನಗೆಪಾಟಲಾದ ಟ್ರಾಫಿಕ್‌ ಪೊಲೀಸರು; ಹೆಲ್ಮೆಟ್ ಹಾಕಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ 500 ರೂ. ದಂಡ

ಚಾಮರಾಜನಗರದಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Road Accident

ಟೈಯರ್‌ ಸಿಡಿದು ಸುಟ್ಟು ಕರಕಲಾದ ಲಾರಿ

ಕಾಫಿ ತುಂಬಿದ ಲಾರಿ ಟೈಯರ್ ಸಿಡಿದು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್‌ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಕಣೇನೂರು ಗ್ರಾಮದ ಬಳಿ ಘಟನೆ ನಡೆದಿದೆ. ಲಾರಿ ಚಾಮರಾಜನಗರದಿಂದ ಹುಲ್ಲಹಳ್ಳಿ ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿತ್ತು.

ಈ ವೇಳೆ ಕಣೇನೂರು ಗ್ರಾಮಕ್ಕೆ ಬರುವಾಗ ಲಾರಿ ಮುಂಭಾಗದ ಚಕ್ರ ಸಿಡಿದು ಬೆಂಕಿ ಕಾಣಿಕೊಂಡಿದೆ. ನೋಡನೋಡುತ್ತಿದ್ದಂತೆ ಬೆಂಕಿ ಕೆನ್ನಾಲಿಗೆಗೆ ಲಾರಿ ಭಸ್ಮವಾಗಿತ್ತು. ಲಾರಿಯಲ್ಲಿದ್ದ ಕಾಫಿ ಬೀಜ ಸುಟ್ಟು ಕರಕಲಾಗಿತ್ತು. ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾರಿಯಿಂದ ಜಿಗಿದು ಚಾಲಕ ಪ್ರಾಣ ಉಳಿಸಿಕೊಂಡಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಲಾರಿಯಿಂದ ಬಿದ್ದು ಅಸ್ವಸ್ಥಗೊಂಡಿದ್ದ ಲಾರಿ ಚಾಲಕನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಾಗಿದೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಕಾರಿನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಹೆಚ್ಚಾಗಿ ಕಾರಿನ ಇಂಜಿನ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಇಳಿದು ಪ್ರಯಾಣಿಕರು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Hardik Pandya
ಕ್ರೀಡೆ23 mins ago

Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

Prajwal Revanna Case Why did Deve Gowda write a letter to Prajwal and HD Kumaraswamy reveals secret
ರಾಜಕೀಯ24 mins ago

Prajwal Revanna Case: ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದಿದ್ದು ಏಕೆ? ಸೀಕ್ರೆಟ್‌ ರಿವೀಲ್‌ ಮಾಡಿದ ಎಚ್‌ಡಿಕೆ!

Murder case in Mysuru
ಮೈಸೂರು28 mins ago

Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

Gold Rate Today
ಚಿನ್ನದ ದರ30 mins ago

Gold Rate Today: ಚಿನ್ನದ ದರ ಇಂದು ಯಥಾಸ್ಥಿತಿ; 22K- 24K ಬಂಗಾರದ ದರಗಳು ಹೀಗಿವೆ

Shreerastu Shubhamastu Serial Netra Jadhav out
ಕಿರುತೆರೆ41 mins ago

Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

Road Accident
ಕ್ರೈಂ56 mins ago

Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Sreenath Bhasi Movie Shashidhar direction new Movie
ಸ್ಯಾಂಡಲ್ ವುಡ್1 hour ago

Sreenath Bhasi Movie: ʻಮಂಜುಮ್ಮೆಲ್ ಬಾಯ್ಸ್ʼ ನಟನಿಗೆ ಸ್ಯಾಂಡಲ್​ವುಡ್​ ಡೈರೆಕ್ಟರ್ ಆ್ಯಕ್ಷನ್​ ಕಟ್​!

IPL Final 2024
ಕ್ರಿಕೆಟ್1 hour ago

IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

yogendra yadav lok sabha election 2024
ಪ್ರಮುಖ ಸುದ್ದಿ2 hours ago

Lok Sabha Election: ಬಿಜೆಪಿ ಗೆಲುವು ಖಚಿತ ಎಂದ ಯೋಗೇಂದ್ರ ಯಾದವ್‌; ಸ್ಥಾನಗಳಿಕೆ ಅಂದಾಜು ಹೀಗಿದೆ

Cannes Film Festival Anasuya Sengupta gets Best Actress award
ಸಿನಿಮಾ2 hours ago

Cannes Film Festival: ಕಾನ್ ಚಿತ್ರೋತ್ಸವದಲ್ಲಿ ಅನಸೂಯಾ ಸೇನ್‌ಗುಪ್ತಾ ಅತ್ಯುತ್ತಮ ನಟಿ! ಈ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ತಾರೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌