Congress President | ಕಾಂಗ್ರೆಸ್ ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ - Vistara News

ಕರ್ನಾಟಕ

Congress President | ಕಾಂಗ್ರೆಸ್ ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ಇತ್ತೀಚೆಗಷ್ಟೇ ಎಐಸಿಸಿ ಪ್ರೆಸಿಡೆಂಟ್‌ಗಾಗಿ (Congress President) ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಬುಧವಾರ(ಅಕ್ಟೋಬರ್ 26) ಅಧಿಕಾರ ಸ್ವೀಕರಿಸಲಿದ್ದಾರೆ.

VISTARANEWS.COM


on

Mallikarjun Kharge held a press conference in Mangaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಎಐಸಿಸಿ ಅಧ್ಯಕ್ಷ (Congress President) ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ನಾಳೆ ಬುಧವಾರ (ಅಕ್ಟೋಬರ್ 26) ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು ಅವರು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಕರ್ನಾಟಕದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಸಿ ಸೇರಿದಂತೆ ಹಲವು ನಾಯಕರು ಸಾಕ್ಷಿಯಾಗಲಿದ್ದಾರೆ. ಅಕ್ಟೋಬರ್ 17ರಂದು ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 7897 ಮತಗಳನ್ನು ಪಡೆದು ಗೆದ್ದಿದ್ದರೆ, ಅವರ ಸ್ಪರ್ಧಿ ಶಶಿ ತರೂರ್ ಅವರ 1072 ಮತಗಳನ್ನು ಪಡೆಯಲಷ್ಟೇ ಶಕ್ಯರಾಗಿದ್ದರು.

ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನದ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗುತ್ತಿದ್ದಾರೆ. ಹಾಗೆಯೇ, ಕಾಂಗ್ರೆಸ್ ಅಧ್ಯಕ್ಷರಾಗುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ ಮಲ್ಲಿಕಾರ್ಜುನ ಖರ್ಗೆ ಅವರು. ಈ ಹಿಂದೆ ಎಸ್ ನಿಜಲಿಂಗಪ್ಪ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.

ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಚುನಾವಣೆಯಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಮತ ಚಲಾಯಿಸಲು ಅರ್ಹರಾದವರ ಪೈಕಿ 9500 ಕಾಂಗ್ರೆಸ್ ಮತದಾರರು ಚಲಾಯಿಸಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ತಿರುವನಂತಪುರ ಸಂಸದ ಶಶಿ ತರೂರ್ ಅವರ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಚುನಾವಣೆಗೆ ಮುಂಚೆಯೇ ಮಲ್ಲಿಕಾರ್ಜುನ ಖರ್ಗೆ ಗೆಲ್ಲಬಹುದು ಎಂದು ವಿಶ್ಲೇಷಣೆ ಮಾಡಲಾಗುತ್ತಿತ್ತು. ನಿರೀಕ್ಷೆಯಂತೆ ಖರ್ಗೆ ಅವರು ಗೆಲುವು ಸಾಧಿಸಿದ್ದರು.

ಇದನ್ನೂ ಓದಿ | Kharge Congress President | ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

Actor Darshan : ದರ್ಶನ್‌ ಫ್ಯಾನ್ಸ್‌ಗೆ (Actor Darshan Fans) ಕಾನೂನು ಕಂಟಕ ಎದುರಾಗಿದೆ. ಕೊಲೆ ಕೇಸ್‌ನಲ್ಲಿ ನೆಚ್ಚಿನ ನಟ ಜೈಲುಪಾಲಾಗಿದ್ದು, ದರ್ಶನ್‌ಗೆ ನೀಡಿರುವ ಖೈದಿ ನಂಬರ್‌ನನ್ನೇ ಸ್ಟಿಕ್ಟರ್‌ ಆಗಿ ಮಾಡಿಕೊಂಡು ಗಾಡಿಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಇದೀಗ ರೂಲ್ಸ್‌ ಬ್ರೇಕ್‌ ಮಾಡುವವರ ವಿರುದ್ಧ ಕೇಸ್‌ ದಾಖಲಿಸಲು ಚಿಂತನೆ ನಡೆದಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಅಭಿಮಾನಿಗಳ ಗಾಡಿಗಳಲ್ಲಿ ದರ್ಶನ್ (Actor Darshan) ಖೈದಿ ನಂಬರ್ 6106 ಸ್ಟಿಕ್ಕರ್‌ಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಇದರ ಬೆನ್ನಲ್ಲೇ ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ ಎದುರಾಗಿದ್ದು, ರೂಲ್ಸ್‌ ಬ್ರೇಕ್‌ ಮಾಡಿದರೆ ಕೇಸ್‌ ಬೀಳುತ್ತೆ ಎಂಬ ಎಚ್ಚರಿಕೆಯನ್ನು ಬೆಂಗಳೂರು ಟ್ರಾಫಿಕ್‌ ಪೊಲೀಸರು (Traffic violation) ನೀಡಿದ್ದಾರೆ.

ಕೊಲೆ ಕೇಸ್​ನಲ್ಲಿ ನಟ ದರ್ಶನ್‌ ಜೈಲುಪಾಲಾಗಿದ್ದಾರೆ. ದರ್ಶನ್‌ಗೆ ಜೈಲಿನಲ್ಲಿ ಖೈದಿ ನಂಬರ್ 6106 ಅನ್ನು ನೀಡಲಾಗಿದೆ. ಈ ನಂಬರ್‌ ಅನ್ನೇ ಸ್ಟಿಕರ್‌ ಮಾಡಿಕೊಂಡಿರುವ ಫ್ಯಾನ್ಸ್ ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಇದೀಗ ನಂಬರ್ ಪ್ಲೇಟ್ ಮರೆಮಾಚಿ ಸ್ಟಿಕ್ಕರ್ ಅಂಟಿಸಿದವರಿಗೆ ಸಂಕಷ್ಟ ಎದುರಾಗಿದೆ.

Actor Darshan

ಯಾವುದೇ ಕಾರಣಕ್ಕೂ ವಾಹನಗಳ ನಂಬರ್ ಪ್ಲೇಟ್ ಮರೆಮಾಚುವಂತಿಲ್ಲ. ನಂಬರ್‌ ಪ್ಲೇಟ್ ಇರುವ ಕಡೆ ಸ್ಟಿಕ್ಕರ್‌ಗಳನ್ನು ಅಂಟಿಸುವಂತಿಲ್ಲ. ಈ ರೀತಿ ಮಾಡಿದರೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಖೈದಿ ನಂಬರ್ ಸ್ಟಿಕ್ಕರ್ ಅಂಟಿಸಿ ನಂಬರ್ ಪ್ಲೇಟ್ ಮರೆ ಮಾಚಿರುವವರ ವಿರುದ್ಧ ಕೇಸ್ ದಾಖಲಿಸಲು ಟ್ರಾಫಿಕ್‌ ಪೊಲೀಸರು ಮುಂದಾಗಿದ್ದಾರೆ. ಡಿಫೆಕ್ಟಿವ್ ನಂಬರ್ ಪ್ಲೇಟ್ ಅಡಿ ಕೇಸ್ ದಾಖಲಾಗುತ್ತದೆ.

ದರ್ಶನ್ ಭೇಟಿಯಾಗಲು ಅಭಿಮಾನಿಯ ರಂಪಾಟ

ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿದೆ. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಣಾದರು.

ಇದನ್ನೂ ಓದಿ: T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಪ್ರಕರಣದ ಬಗ್ಗೆ ಪವಿತ್ರಾ ಗೌಡಗೆ ಏನೂ ಗೊತ್ತಿಲ್ಲ: ವಕೀಲ

ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಎಲ್ಲರೂ ಚೆನ್ನಾಗಿಯೇ ಇರುತ್ತಾರೆ. ಯಾರಿಗೂ ಹಿಂಸೆ ಕೋಡಲು ಇಲ್ಲಿಗೆ ಕರೆದುಕೊಂಡು ಬರೋದಿಲ್ಲ. ಅವರ ಮನಪರಿವರ್ತನೆಯಾಗಲಿ ಎಂದು ಜೈಲಿಗೆ ಕರೆದುಕೊಂಡು ಬರಲಾಗುತ್ತದೆ. ಎಲ್ಲರೂ ಹೇಗೆ ಇರುತ್ತಾರೋ ಹಾಗೆ ಪವಿತ್ರಾ ಕೂಡ ಇರುತ್ತಾರೆ. ಅವರಿಗೆ ಸ್ಪೇಷಲ್ ಏನು ಇಲ್ಲ ಎಂದು ತಿಳಿಸಿದ್ದಾರೆ.

ಜಾಮೀನು ಅರ್ಜಿ ಯಾವಾಗ ಹಾಕಿಕೊಳ್ಳಬೇಕು ಎನ್ನುವುದಕ್ಕೆ ಕಾಯುತ್ತಿದ್ದೇವೆ. ಅದರ ಬಗ್ಗೆಯೇ ಚರ್ಚೆ ನಡೆಸಲು ಭೇಟಿ ಮಾಡಿದ್ದೆ. ಅವರಿಗೆ ಪ್ರಕರಣದ ಬಗ್ಗೆಯೇ ಏನೂ ತಿಳಿದಿಲ್ಲ. ಅವರಿಗೆ ಶಾಕ್ ಆಗಿದೆ. ಯಾವಾಗಲೂ ತಪ್ಪು ಮಾಡಿರಲಿಲ್ಲ, ಈ ರೀತಿಯಾದಾಗ ನೋವಾಗುತ್ತೆ. ತಪ್ಪು ಮಾಡಿರುವವರಿಗಾದರೆ ಅದರ ಅರಿವಿರುತ್ತದೆ. ನಾನು ಏನೂ ಮಾಡಿಲ್ಲ, ನನಗೆ ಯಾಕೆ ಇಂತ ಪರಿಸ್ಥಿತಿ ಎಂದು ಶಾಕ್‌ನಲ್ಲಿದ್ದಾರೆ. ಜುಲೈ 4ರ ಬಳಿಕ ಜಾಮೀನು ಅರ್ಜಿ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

Road Accident : ಅತಿ ವೇಗ ಚಾಲನೆಯು ಬೈಕ್‌ ಸವಾರರಿಬ್ಬರ ಪ್ರಾಣವನ್ನೇ ಕಸಿದಿದೆ. ನಿಂತಿದ್ದ ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟರೆ, ಮತ್ತೊಂದು ಕಡೆ ಬೈಕ್‌ ಸ್ಕಿಡ್‌ ಆಗಿ ಮತ್ತೊಬ್ಬ ಸವಾರನ ಪ್ರಾಣಪಕ್ಷಿ ಹಾರಿಹೋಗಿದೆ.

VISTARANEWS.COM


on

By

Road Accident
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಬೈಕ್‌ ಸವಾರರು ರಸ್ತೆ ಅಪಘಾತದಲ್ಲಿ (Road Accident ) ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕಾಂಕ್ರೀಟ್ ಮಿಕ್ಸಿಂಗ್ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಮೃತಪಟ್ಟಿದ್ದಾನೆ. ಬೆಂಗಳೂರಿನ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜರ್ನಾಧನ (25) ಮೃತ ದುರ್ದೈವಿ.

ತಡರಾತ್ರಿ 2.30ರ ಸಮಯಕ್ಕೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಬರುತ್ತಿದ್ದ ಜರ್ನಾಧನ ರಸ್ತೆ ಬದಿ ನಿಂತಿದ್ದ ಕಾಂಕ್ರೀಟ್ ಮಿಕ್ಸಿಂಟ್ ಲಾರಿಗೆ ಹಿಂಬದಿಯಿಂದ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಹಾರಿ ಕೆಳಗೆ ಬಿದ್ದ ಜರ್ನಾಧನನ ತಲೆಗೆ ಗಂಭೀರ ಪೆಟ್ಟಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜನಾರ್ಧನನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಬೆಂಗಳೂರಿನ ಮುತ್ಯಾಲ ನಗರ ನಿವಾಸಿಯಾಗಿರುವ ಜರ್ನಾಧನ ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸ್‌ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಕೂಡ್ಲಿಗಿಯಲ್ಲಿ ಮತ್ತೊಂದು ರಸ್ತೆ ಅಪಘಾತ; ಇಬ್ಬರ ಸಾವು

ಬೈಕ್‌ನಿಂದ ಸ್ಕಿಡ್‌ ಆಗಿ ಕೆಳಗೆ ಬಿದ್ದ ಸವಾರ ಸಾವು

ಅತಿ ವೇಗ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಯುವಕನೊರ್ವ ಮೃತಪಟ್ಟಿದ್ದಾನೆ. ಬೈಕ್‌ನಿಂದ ಸ್ಕಿಡ್ ಆಗಿ ಕೆಳಗೆ ಬಿದ್ದ ಕುಮಾರ್ (30) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ತಡರಾತ್ರಿ 1.30ಕ್ಕೆ ಬೆಂಗಳೂರಿನ ಬೊಮ್ಮನಹಳ್ಳಿ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಘಟನೆ ನಡೆದಿದೆ.

ಕುಮಾರ್ ಮತ್ತು ನವೀನ್ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಇಬ್ಬರು ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಕುಮಾರ್ ಮೃತಪಟ್ಟರೇ ನವೀನ್‌ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ನವೀನ್ (20) ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕುಮಾರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಡಿವಾಳ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Self Harming : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

Self Harming : ಸಾಲದ ಸುಳಿಗೆ ಸಿಲುಕಿ ಯುವಕನೊರ್ವ ಡೆತ್‌ನೋಟ್‌ (Death note) ಬರೆದಿಟ್ಟು, ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ನೀಡುವಂತೆ ಡೆತ್ ನೋಟ್‌ ಬರೆದಿದ್ದಾನೆ.

VISTARANEWS.COM


on

By

Self Harming
ಸಾಂದರ್ಭಿಕ ಚಿತ್ರ
Koo

ಮೈಸೂರು: ಸಾಲಬಾಧೆಗೆ ಹೆದರಿದ ಯುವಕನೊರ್ವ ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಘಟನೆ ನಡೆದಿದೆ. ಯತೀಕ್ (25) ಮೃತ ದುರ್ದೈವಿ.

ಕೆಆರ್‌ ತಾಲೂಕಿನ ಹೆಬ್ಬಾಳು ಕೊಪ್ಪಲು ಗ್ರಾಮದ ನಿವಾಸಿಯಾದ ಯತೀಕ್‌ ಡೆತ್ ನೋಟ್ ಬರೆದಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಮನೆಯಲ್ಲಿ ಹಣಕಾಸಿನ ಸಮಸ್ಯೆ ಎಂದು ಕ್ರೆಡಿಟ್ ಕಾರ್ಡ್ ಜತೆಗೆ ಸಾಲ ಪಡೆದಿದ್ದ.

ಸಾಲ ತೀರಿಸಲು ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಯತೀಕ್‌, ಬೆಂಗಳೂರಿನಲ್ಲಿ ಫುಡ್‌ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಷೇರು ಮಾರ್ಕೆಟ್‌ನಲ್ಲೂ ಹಣ ಹೂಡಿಕೆ ಮಾಡಿದ್ದ. ಆದರೆ ಮಾಡಿದ್ದ ಸಾಲಕ್ಕೆ ಇಎಂಐ ಕಟ್ಟಲು ಸಾಧ್ಯವಾಗದೆ ಮನನೊಂದಿದ್ದ. ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ನೀಡುವಂತೆ ಡೆತ್ ನೋಟ್‌ ಬರೆದಿದ್ದಾನೆ.

ಇತ್ತ ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ತಂದೆ ಎಚ್ ಟಿ ರಮೇಶ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Snake Bite : ಮರದಡಿ ಕುಳಿತಾಗ ಮಹಿಳೆಯ ಕಿವಿಗೆ ಕುಟುಕಿದ ಹಾವು; ವಿಷವೇರಿ ಸಾವು

ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

ದೊಡ್ಡಬಳ್ಳಾಪುರ: ಸಾಲ ಮಾಡಿ ಬಡ್ಡಿ ಕಟ್ಟಲಾಗದೆ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಪರ್ವೀಜ್ ಪಾಷ (38) ಆತ್ಮಹತ್ಯೆಗೆ ಶರಣಾದವರು.

ದೊಡ್ಡಬಳ್ಳಾಪುರ ನಗರದ ರೋಜಿಪುರ ಬಡಾವಣೆಯ ನಿವಾಸಿಯಾದ ಪರ್ವೀಜ್ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಕ್ಯಾನಿಕ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಪರ್ವೀಜ್‌ ಈ ಹಿಂದೆ ಹಲವು ವ್ಯಕ್ತಿಗಳ ಬಳಿ ಬಡ್ಡಿಗೆ ಸಾಲ ಪಡೆದಿದ್ದ. ಸಾಲಗಾರರ ಕಾಟ ತಡೆಯಲಾರದೇ ಮನನೊಂದಿದ್ದ.

ಸಾಲ ತೀರಿಸಲು ದಿಕ್ಕು ದೋಚದೆ ಮೂರು ದಿನ ಊಟ ಬಿಟ್ಟಿದ್ದ. ನಂತರ ಅಂಗಡಿ ಮುಂದೆ ಸಾಲಗಾರರ ಕಾಟ ಹೆಚ್ಚಾದಾಗ ಕಳೆದ ಭಾನುವಾರ ಮನೆಗೆ ಬಂದವರೇ ಇಲಿ ಪಾಷಣ ಸೇವಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಪರ್ವೀಜ್‌ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಪರ್ವೀಜ್‌ ಸಾವನ್ನಪ್ಪಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Self harming

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೋಜಿಪುರದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Snake Bite : ಮರದಡಿ ಕುಳಿತಾಗ ಮಹಿಳೆಯ ಕಿವಿಗೆ ಕುಟುಕಿದ ಹಾವು; ವಿಷವೇರಿ ಸಾವು

Snake Bite : ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುವಾಗ ದಿಢೀರ್‌ ಮಳೆ ಸುರಿದಿತ್ತು. ಈ ಕಾರಣಕ್ಕೆ ಮರದಡಿ ಆಸರೆ ಪಡೆಯಲು ಹೋದ ಮಹಿಳೆಯ ಕಿವಿಗೆ ಹಾವು ಕುಟುಕಿದೆ. ವಿಷವೇರಿ ಮಹಿಳೆ ಸತ್ತು ಹೋಗಿದ್ದಾರೆ.

VISTARANEWS.COM


on

By

snake Bite
Koo

ಕಲಬುರಗಿ: ಕಿವಿಗೆ ಹಾವು ಕಡಿದು ಮಹಿಳೆಯೊಬ್ಬರು (Snake Bite) ಮೃತಪಟ್ಟಿದ್ದಾರೆ. ವಿಜಯಲಕ್ಷ್ಮಿ ತೆಳಗೇರಿ (44) ಮೃತ ದುರ್ದೈವಿ. ಕಲಬುರಗಿಯ ಸೂಗೂರು(N) ಗ್ರಾಮದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ.

ಚಿತ್ತಾಪುರ ತಾಲೂಕಿನ ಸೂಗೂರು(N)ಗ್ರಾಮದ ವಿಜಯಲಕ್ಷ್ಮಿ ಕೂಲಿ ಕೆಲಸಕ್ಕಾಗಿ ಜಮೀನಿಗೆ ತೆರಳಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ದಿಢೀರ್‌ ಮಳೆ ಶುರುವಾಗಿತ್ತು. ಹೀಗಾಗಿ ಮಳೆ ನಿಂತ ಮೇಲೆ ಮನೆಗೆ ಹೋಗೋಣಾವೆಂದು ಮರದಡಿ ನಿಂತು ಆಸರೆ ಪಡೆದಿದ್ದರು.

ಆದರೆ ಹಾವು ಮರದಲ್ಲಿ ಇರುವುದನ್ನು ಗಮನಿಸಿದೇ ಮರದ ಕೆಳಗೆ ಆಸರೆ ಪಡೆದಿದ್ದಾರೆ. ಈ ವೇಳೆ ಮಹಿಳೆಯ ಕಿವಿಗೆ ಹಾವು ಕಚ್ಚಿದ್ದು, ಅಸ್ವಸ್ಥಗೊಂಡ ವಿಜಯಲಕ್ಷ್ಮಿ ಕುಸಿದು ಬಿದ್ದಿದ್ದಾರೆ. ಅಲ್ಲಿದ್ದವರು ವಿಜಯಲಕ್ಷ್ಮಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆದಾಗಲೇ ಹಾವಿನ ವಿಷವೇರಿದ್ದರಿಂದ ಆಕೆ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಸದ್ಯ ವಾಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

ಕೊಪ್ಪಳದಲ್ಲಿ ಕೋತಿ ಕಾಟ

ಕೋತಿಯ ಹುಚ್ಚಾಟಕ್ಕೆ ಜನರಿಗೆ ಸಂಕಷ್ಟ ಎದುರಾಗಿದೆ. 15ಕ್ಕೂ ಹೆಚ್ಚು ಜನರಿಗೆ ಕೋತಿ ದಾಳಿ ಮಾಡಿದ್ದು, ಗಾಯಗೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಾಬುಸಾಬ ಪಿಂಜಾರ, ದೇವಪ್ಪ ಕಂಬಾರ, ಮಲ್ಲಪ್ಪ ಅಗಸಿಮುಂದಿನ, ಅಡಿವೆಪ್ಪ ಚಳ್ಳಾರಿ, ಶಂಕ್ರಮ್ಮ ಬೆಣಕಲ್ ಸೇರಿದಂತೆ 15 ಕ್ಕೂ ಹೆಚ್ಚು ಜನರಿಗೆ ಕೋತಿ ಕಡಿದಿದೆ. ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಬೋನು ಇರಿಸಿ ಕೋತಿಗೆ ಸೆರೆಗೆ ಅರಣ್ಯ ಇಲಾಖೆ ಮುಂದಾಗಿದೆ.

ಮೈಸೂರಿನಲ್ಲಿ ಹುಲಿ ಪ್ರತ್ಯಕ್ಷ

ಮೈಸೂರಿನಲ್ಲಿ ಮತ್ತೊಮ್ಮೆ ಹುಲಿಯೊಂದು ಪ್ರತ್ಯಕ್ಷಗೊಂಡಿದೆ. ಮೈಸೂರಿನ ವರುಣ ಹೋಬಳಿ ವರಕೋಡು ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಮುರಾರ್ಜಿ ಶಾಲೆಯ ರಸ್ತೆಯಲ್ಲಿ ಟ್ರ್ಯಾಕ್ಟರ್‌ನಲ್ಲಿ ಹೋಗುತ್ತಿರುವವರಿಗೆ ಹುಲಿ ಕಾಣಿಸಿಕೊಂಡಿದೆ. ದನ, ಕುರಿ, ಮನುಷ್ಯರ ಮೇಲೆ ದಾಳಿ ನಡೆಸುವ ಮುಂಚೆ ಕೂಡಲೇ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಕ್ರೀಡೆ4 mins ago

Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

Actor Darshan
ಬೆಂಗಳೂರು8 mins ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

CM Siddaramaiah To Inaugurate Film Producers Association Building says build film city
ಸ್ಯಾಂಡಲ್ ವುಡ್11 mins ago

CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

Gold Rate Today
ಚಿನ್ನದ ದರ31 mins ago

Gold Rate Today: ಆಭರಣ ಖರೀದಿಗೆ ಇದು ಸೂಕ್ತ ಸಮಯ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Mann Ki Baat
ದೇಶ36 mins ago

Mann Ki Baat: ʼಸಂವಿಧಾನದ ಬಗ್ಗೆ ಅಚಲ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದʼ-ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌ ಹೀಗಿದೆ ನೋಡಿ

Road Accident
ಬೆಂಗಳೂರು42 mins ago

Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

Hardik Pandya
ಕ್ರೀಡೆ43 mins ago

Hardik Pandya: ವಿಶ್ವಕಪ್​ ಗೆಲುವಿನ ಬಳಿಕ ಹಾರ್ದಿಕ್​ ಪಾಂಡ್ಯ ಕರೆ ಮಾಡಿದ್ದು ಯಾರಿಗೆ?; ನೆಟ್ಟಿಗರ ಉತ್ತರವೇನು?

Kamal Haasan on limited screen time in 'Kalki 2898 AD
ಟಾಲಿವುಡ್1 hour ago

Kamal Haasan: ನನ್ನ ಪಾತ್ರ ಚಿಕ್ಕದಿರಬಹುದು ಆದರೆ ಇದು ಆರಂಭವಷ್ಟೇ ಎಂದು ಕಲ್ಕಿ ಭಾಗ- 2ರ ಸುಳಿವು ಕೊಟ್ಟ ಕಮಲ್‌ ಹಾಸನ್‌!

T20 World Cup 2024
ಕ್ರೀಡೆ1 hour ago

T20 World Cup 2024: ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

Self Harming
ಮೈಸೂರು1 hour ago

Self Harming : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು8 mins ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ20 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌