ಇಂದು ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ - Vistara News

ದೇಶ

ಇಂದು ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ

ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಗೆದ್ದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕೃತವಾಗಿ ಅಧ್ಯಕ್ಷ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

VISTARANEWS.COM


on

Mallikarjun Kharge held a press conference in Mangaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಗೆದ್ದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕೃತವಾಗಿ ಅಧ್ಯಕ್ಷ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರೇ ಕಾಂಗ್ರೆಸ್ ಬಾವುಟವನ್ನು ಖರ್ಗೆ ಅವರಿಗೆ ಹಸ್ತಾಂತರ ಮಾಡುವ ಮೂಲಕ ಜವಾಬ್ದಾರಿ ವರ್ಗಾವಣೆ ಮಾಡಲಿದ್ದಾರೆ. ಎಐಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರು ಈಗಾಗಲೇ ದೆಹಲಿ ತಲುಪಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗು ಬೈರತಿ ಸುರೇಶ್, ಹಿಟ್ನಾಳ್‌ ನಿನ್ನೆಯೇ ದೆಹಲಿ ತಲುಪಿದ್ದು ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿ ಪಯಣ ಬೆಳಸಲಿದ್ದಾರೆ. ಜವಾಬ್ದಾರಿ ಪಡೆದ ಬಳಿಕ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ರಾಜ್ಯದ ನಾಯಕರ ಜತೆ ಪ್ರತ್ಯೇಕ ಸಭೆ ಮಾಡುವ ಸಾಧ್ಯತೆ ಇದೆ.

ಖರ್ಗೆ ಪದಗ್ರಹಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಸುರ್ಜೇವಾಲಾ, ವೇಣುಗೋಪಾಲ್, ದಿಗ್ವಿಜಯ ಸಿಂಗ್ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

Dust Storm: ಭಯಾನಕ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ. ಮುಂಬೈ ಅಗ್ನಿಶಾಮಕ ದಳ ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

VISTARANEWS.COM


on

Dust Storm
Koo

ಮುಂಬೈ: ಇಲ್ಲಿನ ಘಾಟ್​ಕೋಪರ್​ನಲ್ಲಿ ಧೂಳು ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಜಾಹೀರಾತು ಫಲಕ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 59 ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎನ್​​ಡಿಆರ್​) ಒಂದು ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುತ್ತಿದೆ. ಧೂಳು ಗಾಳಿಗೆ ಅನೇಕ ಕಡೆ ಅನಾಹುತಗಳು ಸಂಭವಿಸಿವೆ.

ಭಯಾನಕ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ. ಮುಂಬೈ ಅಗ್ನಿಶಾಮಕ ದಳ ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಭಾರತೀಯ ಹವಾಮಾನ ಇಲಾಖೆ (IMD) ಈ ಹಿಂದೆ ಮೇ 13 ರಂದು ನಗರದ ಕೆಲವು ಭಾಗಗಳಿಗೆ ಯೆಲ್ಲೊ ಅಲರ್ಟ್​ (Yellow Alret) ಎಚ್ಚರಿಕೆ ನೀಡಿತ್ತು. ವಿಶೇಷವಾಗಿ ಥಾಣೆ ಮತ್ತು ರಾಯಗಡ್ ಜಿಲ್ಲೆಗಳಲ್ಲಿ ಭಾರಿ ಮಳೆ, ಗುಡುಗು ಮತ್ತು ಶುಷ್ಕ, ವೇಗದ ಗಾಳಿಯ ಎಚ್ಚರಿಕೆ ನೀಡಿತ್ತು.

2024 ರ ಮೇ 16 ರಿಂದ ವಾಯುವ್ಯ ಭಾರತದಲ್ಲಿ ಹೊಸ ಶಾಖದ ಅಲೆ ಪ್ರಾರಂಭವಾಗುವ ಸಾಧ್ಯತೆಯಿದೆ. 2. 2024 ರ ಮೇ 17 ರವರೆಗೆ ದಕ್ಷಿಣ ಪರ್ಯಾಯ ದ್ವೀಪ ಭಾರತದಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಎಕ್ಸ್ ನಲ್ಲಿ ಪೋಸ್ಟ್​ನಲ್ಲಿ ತಿಳಿಸಿತ್ತು.

ಇದನ್ನೂ ಓದಿ: Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

ಹೋರ್ಡಿಂಗ್ ಬಿದ್ದ ಕಾರಣ ಪೂಜಾ ಜಂಕ್ಷನ್ (ವಡಾಲಾ) ನಾರ್ತ್ ಬೌಂಡ್ ಮತ್ತು ಫ್ರೀವೇ ಟನಲ್ ಟ್ರಾಂಬೆ ಸೌತ್ ನಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಮುಂಬೈ ಸಂಚಾರ ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಮುಂಬೈ ಮೆಟ್ರೋದ ಸಂಚಾರಕ್ಕೂ ಸಮಸ್ಯೆಯಾಗಿದೆ. ಭಾರೀ ಗಾಳಿಯಿಂದಾಗಿ, ಏರ್ಪೋರ್ಟ್ ರಸ್ತೆ ಮೆಟ್ರೋ ನಿಲ್ದಾಣದ ಬಳಿಯ ಒಹೆಚ್ಇಯಲ್ಲಿ ಬಟ್ಟೆ ಸಿಲುಕಿಕೊಂಡಿತು/ ಇದರ ಪರಿಣಾಮವಾಗಿ ಮೆಟ್ರೋ ಸೇವೆಗೆ ಅಡ್ಡಿಯಾಯಿತು. ರೈಲುಗಳು ಈಗ ನಿಗದಿತ ಸಮಯಕ್ಕೆ ತಲುಪಲಿಲ್ಲ ಎಂದು ಹೇಳಿದ್ದರು.

Continue Reading

ದೇಶ

Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

Chandrayaan 4: ಚಂದ್ರಯಾನ 3ರ ಬಾಹ್ಯಾಕಾಶ ನೌಕೆ ಇಳಿದ ಪ್ರದೇಶವೀಗ ಅಧಿಕೃತವಾಗಿ ಶಿವಶಕ್ತಿ ಪಾಯಿಂಟ್‌ ಎನಿಸಿದೆ. ಚಂದ್ರಯಾನ 3 ಮಿಷನ್‌ನ ಯಶಸ್ಸು ಇಸ್ರೋ ಆತ್ಮವಿಶ್ವಾಸವನ್ನು ನೂರ್ಮಡಿಗೊಳಿಸುವ ಜತೆಗೆ ಜಾಗತಿಕ ಖ್ಯಾತಿಯನ್ನೂ ತಂದುಕೊಟ್ಟಿದೆ. ಇದರ ಬೆನ್ನಲ್ಲೇ, ಚಂದ್ರಯಾನ 4 ಕೈಗೊಳ್ಳಲು ಇಸ್ರೋ ಸಜ್ಜಾಗಿದೆ. ನೌಕೆ ಇಳಿಯುವ ಜಾಗವನ್ನೂ ಈಗ ಘೋಷಣೆ ಮಾಡಿದೆ.

VISTARANEWS.COM


on

Chandrayaan 4
Koo

ಬೆಂಗಳೂರು: ಚಂದ್ರಯಾನ 3 ಮಿಷನ್‌ (Chandrayaan 3) ಮೂಲಕ ಇತಿಹಾಸ ಸೃಷ್ಟಿಸಿರುವ ಇಸ್ರೋ (ISRO) ಈಗ ಬಾಹ್ಯಾಕಾಶದಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಲು ಮುಂದಾಗಿದೆ. ಚಂದ್ರಯಾನ 3 ಮಿಷನ್‌ ಕೈಗೊಂಡು ಜಗತ್ತಿನಲ್ಲೇ ದಕ್ಷಿಣ ಧ್ರುವಕ್ಕೆ ಬಾಹ್ಯಾಕಾಶ ನೌಕೆ ಕಳುಹಿಸಿದ ಮೊದಲ ದೇಶ ಎಂಬ ಖ್ಯಾತಿಗೆ ಭಾಜನವಾದ ಬಳಿಕ ಇಸ್ರೋ ಈಗ ಚಂದ್ರಯಾನ 4 ಮಿಷನ್‌ಗೆ ಸಜ್ಜಾಗಿದೆ. ಅಷ್ಟೇ ಅಲ್ಲ, ಚಂದ್ರಯಾನ 4 ಮಿಷನ್‌ನ (Chandrayaan 4) ಬಾಹ್ಯಾಕಾಶ ನೌಕೆಯು ಚಂದ್ರನ ಅಂಗಳದಲ್ಲಿ ಎಲ್ಲಿ ಇಳಿಯಬೇಕು ಎಂಬುದನ್ನೂ ಇಸ್ರೋ ಘೋಷಿಸಿದೆ.

ಚಂದ್ರಯಾನ 4 ಮಿಷನ್‌ ಕುರಿತು ಸ್ಪೇಸ್‌ ಅಪ್ಲಿಕೇಷನ್ಸ್‌ ಸೆಂಟರ್‌ನ (SAC) ನಿರ್ದೇಶಕ ನೀಲೇಶ್‌ ದೇಸಾಯಿ (Nilesh Desai) ಅವರು ಮಾಹಿತಿ ನೀಡಿದ್ದಾರೆ. “ಚಂದ್ರಯಾನ 4 ಮಿಷನ್‌ನ ಬಾಹ್ಯಾಕಾಶ ನೌಕೆಯು ಚಂದ್ರಯಾನ 3ರ ವಿಕ್ರಮ್‌ ಲ್ಯಾಂಡರ್‌ ಹಾಗೂ ಪ್ರಜ್ಞಾನ್‌ ರೋವರ್‌ ಸಾಫ್ಟ್‌ ಲ್ಯಾಂಡ್‌ ಆದ, ಶಿವಶಕ್ತಿ ಪಾಯಿಂಟ್‌ ಎಂದೇ ಖ್ಯಾತಿಯಾದ ಪ್ರದೇಶದ ಬಳಿಯೇ ಲ್ಯಾಂಡ್‌ ಆಗಲಿದೆ. ಚಂದ್ರಯಾನ 4ರಲ್ಲಿ ಚಂದ್ರನ ಅಂಗಳದಿಂದ ಕಲ್ಲು ಹಾಗೂ ಮಣ್ಣನ್ನು ಭಾರತಕ್ಕೆ ತರುವುದು ಪ್ರಮುಖ ಉದ್ದೇಶವಾಗಿದೆ” ಎಂದು ತಿಳಿಸಿದ್ದಾರೆ.

“ಚಂದ್ರನ ಅಂಗಳದಲ್ಲಿ ವೈಜ್ಞಾನಿಕವಾಗಿ ಸಂಶೋಧನೆ ಕೈಗೊಳ್ಳಲು ಸಾಧ್ಯವಿರುವ ಪ್ರದೇಶಗಳಿಂದ ಕಲ್ಲು ಹಾಗೂ ಮಣ್ಣಿನ ಮಾದರಿಗಳನ್ನು ತಂದು, ಅದರ ಕುರಿತು ಅಧ್ಯಯನ ಮಾಡಲಾಗುತ್ತದೆ. ಇದು ಚಂದ್ರನ ಅಂಗಳದ ಕಾಲಮಾನದ ಪ್ರಕಾರ ಒಂದು ದಿನ ಆದರೆ, ಭೂಮಿಯ 14 ದಿನ ಕಾರ್ಯಾಚರಣೆ ಕೈಗೊಳ್ಳಲಿದೆ. ಹಲವು ಸವಾಲುಗಳ ಮಧ್ಯೆ ಯಶಸ್ಸು ಸಾಧಿಸಲು ಇಸ್ರೋ ಹೊರಟಿದೆ” ಎಂದು ಮಾಹಿತಿ ನೀಡಿದರು.

2023ರ ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ LVM3 ರಾಕೆಟ್‌ನ ಮೂಲಕ ಉಡಾವಣೆಗೊಂಡ ಚಂದ್ರಯಾನ-3, ಒಂದು ತಿಂಗಳ ಕಾಲ ಬಾಹ್ಯಾಕಾಶ ಹಾರಾಟದ ನಂತರ ಆಗಸ್ಟ್ 23ರಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿಯಿತು. ಆ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್‌ ಲ್ಯಾಂಡ್‌ ಆದ ಜಗತ್ತಿನ ಮೊದಲ ಮಿಷನ್‌ ಎಂಬ ಖ್ಯಾತಿಗೆ ಭಾಜನವಾಯಿತು. ಇದರೊಂದಿಗೆ ಇಸ್ರೋ ಮೈಲುಗಲ್ಲು ಸ್ಥಾಪಿಸಿತು.

ಅಷ್ಟೇ ಅಲ್ಲ, ಚಂದ್ರಯಾನ 3 ಮಿಷನ್‌ ಲ್ಯಾಂಡ್‌ ಆದ ಪ್ರದೇಶವನ್ನು ಶಿವಶಕ್ತಿ ಎಂಬುದಾಗಿ ಕರೆಯಲು ಅಂತಾರಾಷ್ಟ್ರೀಯ ಖಗೋಳ ಒಕ್ಕೂಟವು (International Astronomical Union) ಮಾರ್ಚ್‌ 19ರಂದು ಅನುಮತಿ ನೀಡಿದೆ. ಇದರೊಂದಿಗೆ ಬಾಹ್ಯಾಕಾಶ ನೌಕೆ ಇಳಿದ ಪ್ರದೇಶವೀಗ ಅಧಿಕೃತವಾಗಿ ಶಿವಶಕ್ತಿ ಪಾಯಿಂಟ್‌ ಎನಿಸಿದೆ. ಚಂದ್ರಯಾನ 3 ಮಿಷನ್‌ನ ಯಶಸ್ಸು ಇಸ್ರೋ ಆತ್ಮವಿಶ್ವಾಸವನ್ನು ನೂರ್ಮಡಿಗೊಳಿಸುವ ಜತೆಗೆ ಜಾಗತಿಕ ಖ್ಯಾತಿಯನ್ನೂ ತಂದುಕೊಟ್ಟಿದೆ. ಚಂದ್ರಯಾನ 4 ಮಿಷನ್‌ ಕೈಗೊಳ್ಳಲು ಇಷ್ಟೊಂದು ಆತ್ಮವಿಶ್ವಾಸ, ಉತ್ಸಾಹ ಬರಲು ಚಂದ್ರಯಾನ 3 ಮಿಷನ್‌ನ ಯಶಸ್ಸೇ ಕಾರಣವಾಗಿದೆ.

ಇದನ್ನೂ ಓದಿ: Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Continue Reading

Latest

Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ!

ಅಮೀರಾ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡ ಗಾಯಕ 115 ಸೆಂ.ಮೀ. ಎತ್ತರದ ಅಬ್ದು ರೋಝಿಕ್ (Abdu Rozik) ತಮ್ಮ ಎತ್ತರ ತಮ್ಮಿಬ್ಬರ ಸಂಬಂಧದ ನಡುವೆ ಎಂದಿಗೂ ಬರುವುದಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

By

Abdu Rozik
Koo

ಸಾಮಾಜಿಕ ಜಾಲತಾಣದಲ್ಲಿ (social media) ಸಕ್ರಿಯರಾಗಿರುವ ಮತ್ತು ಬಿಗ್ ಬಾಸ್ 16 (Bigg Boss 16) ಖ್ಯಾತಿಯ ಅಬ್ದು ರೋಝಿಕ್ (Abdu Rozik) ಇತ್ತೀಚೆಗಷ್ಟೇ ಅಮಿರಾ ಅವರೊಂದಿಗೆ ಮದುವೆ ನಿಶ್ಚಿತಾರ್ಥವನ್ನು (engagement) ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಮುಂದಿನ ಜುಲೈನಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಬಾಲಿವುಡ್ ನಟ (Bollywood actor) ಸಲ್ಮಾನ್ ಖಾನ್ (Salman Khan) ಪಾಲ್ಗೊಳ್ಳಲಿದ್ದಾರೆ ಎಂದು ಅಬ್ದು ತಿಳಿಸಿದ್ದಾರೆ.

20 ವರ್ಷದ ಗಾಯಕ (singer) ಅಬ್ದು ರೋಝಿಕ್ ಅವರು ಅಮೀರಾ ಅವರನ್ನು ಆಹಾರ ಉತ್ಸವದಲ್ಲಿ ಭೇಟಿಯಾಗಿದ್ದರು. ಮೊದಲ ನೋಟದಲ್ಲೇ ಇಬ್ಬರಿಗೂ ಪ್ರೀತಿಯಾಗಿತ್ತು ಎಂದು ಅಬ್ದು ತಿಳಿಸಿದರು.

ಅಬ್ದು ಅವರ ನಿಶ್ಚಿತಾರ್ಥವು ಯಾವುದೇ ಪ್ರಚಾರವಲ್ಲ ಎಂದು ಅಬ್ದು ಸ್ಪಷ್ಟಪಡಿಸಿದ್ದು, ನನ್ನಂತಹ ಸಣ್ಣ ವ್ಯಕ್ತಿ ಪ್ರೀತಿಯನ್ನು ಕಂಡುಕೊಂಡಿದ್ದಾನೆ ಎಂದು ಜನರು ನಂಬಲು ಕಷ್ಟವಾಗಬಹುದು ಎಂದು ತಿಳಿಸಿದರು.
ಅಮೀರಾಗಿಂತ ಚಿಕ್ಕವನಾಗಿರುವ ತನ್ನ ಎತ್ತರದ ವ್ಯತ್ಯಾಸವು ನಮ್ಮ ಪ್ರೀತಿಯ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಹೇಳಿದರು.


ಅಬ್ದು ಅವರು 115 ಸೆಂ ಮತ್ತು ಅಮೀರಾ 155 ಸೆಂ.ಮೀ. ಎತ್ತರವಿದ್ದಾರೆ. ಅವರಿಬ್ಬರೂ ಕಡಿಮೆ ಎತ್ತರದಿಂದಾಗಿ ತಮ್ಮ ಸಂಗಾತಿಯನ್ನು ಹುಡುಕುವ ಬಗ್ಗೆ ಚಿಂತಿತರಾಗಿದ್ದರು. ಆದರೆ ಅಮೀರಾ ಅವರನ್ನು ಭೇಟಿ ಮಾಡಿದ್ದಕ್ಕಾಗಿ ಕೃತಜ್ಞರಾಗಿರುತ್ತೇನೆ. ಅಮೀರಾ ತನಗಿಂತ ಎತ್ತರವಾಗಿದ್ದರೂ ಅದು ನಮ್ಮ ಸಂಬಂಧದ ನಡುವೆ ಎಂದಿಗೂ ಬಂದಿಲ್ಲ ಎಂದು ತಿಳಿಸಿದರು.


ಕೆಲವು ದಿನಗಳ ಹಿಂದೆ ಅಬ್ದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅವರು ಅಮೀರಾ ಅವರ ಮುಖವನ್ನು ಬಹಿರಂಗಪಡಿಸಲಿಲ್ಲ, ಆದರೆ ಹೃದಯದ ಆಕಾರದ ವಜ್ರದ ಉಂಗುರದ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

ಸುದ್ದಿಯನ್ನು ಹಂಚಿಕೊಂಡ ಅವರು, “ಜುಲೈ 7 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸುವುದಾಗಿ ಹೇಳಿದ್ದು, ನನ್ನನ್ನು ಗೌರವಿಸುವ ಪ್ರೀತಿಯನ್ನು ಪಡೆಯುವ ಅದೃಷ್ಟಶಾಲಿ ಎಂದು ನಾನು ನನ್ನ ಜೀವನದಲ್ಲಿ ಎಂದಿಗೂ ಊಹಿಸಿರಲಿಲ್ಲ. ನಾನು ಎಷ್ಟು ಸಂತೋಷವಾಗಿದ್ದೇನೆ ಎಂದು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

Continue Reading

ದೇಶ

Lok Sabha Election: ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ; ಬಂಗಾಳದಲ್ಲಿ ಹೆಚ್ಚು

Lok Sabha Election: ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಈಗ ನಾಲ್ಕನೇ ಹಂತದಲ್ಲಿ ಶೇ.62ರಷ್ಟು ಮತದಾನ ದಾಖಲಾಗಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ (Voter Turnout) ದಾಖಲಾಗಿದೆ. 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಮತದಾನ ಆರಂಭವಾಗಿದ್ದು, ಬಿಸಿಲನ್ನೂ ಲೆಕ್ಕಿಸದೆ ಜನ ಮತದಾನ ಮಾಡಿದರು. ಕೆಲವು ಕಡೆ ಹೊರತುಪಡಿಸಿ ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ನಡೆಯಿತು.

ಯಾವ ರಾಜ್ಯದಲ್ಲಿ ಎಷ್ಟು ಮತದಾನ?

ಸಂಜೆ 5 ಗಂಟೆ ಸುಮಾರಿಗೆ ಆಂಧ್ರಪ್ರದೇಶದಲ್ಲಿ ಶೇ.68.04, ಬಿಹಾರ ಶೇ.54.14, ಜಮ್ಮು ಮತ್ತು ಕಾಶ್ಮೀರ ಶೇ.35.75, ಜಾರ್ಖಂಡ್ ಶೇ.63.14, ಮಧ್ಯಪ್ರದೇಶ ಶೇ.68.01, ಮಹಾರಾಷ್ಟ್ರ ಶೇ.52.49, ಒಡಿಶಾ ಶೇ.62.96, ತೆಲಂಗಾಣ ಶೇ.61.16, ಉತ್ತರ ಪ್ರದೇಶ ಶೇ.56.35, ಪಶ್ಚಿಮ ಬಂಗಾಳದಲ್ಲಿ ಶೇ.75.66ರಷ್ಟು ಮತದಾನ ದಾಖಲಾಗಿದೆ. ದೇಶದ ಹಲವೆಡೆ ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು.

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಐದನೇ ಹಂತದ ಮತದಾನವು ಮೇ 20ರಂದು ನಡೆಯಲಿದೆ. ಜೂನ್‌ 1ರಂದು ಕೊನೆಯ ಅಥವಾ ಏಳನೇ ಹಂತದ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದು ದೇಶಾದ್ಯಂತ ಒಟ್ಟು 96 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, ಎನ್‌ಡಿಎ ಒಟ್ಟು 97 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಆಂತರಿಕ ಬಿಕ್ಕಟ್ಟು ಎದುರಿಸುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದ ಒಂದೊಂದು ಕ್ಷೇತ್ರಗಳಲ್ಲಿ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ(ಅಠಾವಳೆ) ಪಕ್ಷ ಮಿತ್ರ ಪಕ್ಷ ತೆಲುಗು ದೇಶಂ ಪಾರ್ಟಿ ಮತ್ತು ಬಿಜೆಪಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಮೈತ್ರಿಕೂಟಕ್ಕೆ ಸವಾಲೊಡ್ಡಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಎನ್‌ಡಿಎ ಮೈತ್ರಿಕೂಟ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಇನ್ನು ಈ ಹಂತದಲ್ಲಿ ಮತ್ತೊಂದು ಆಸಕ್ತಿಕರ ವಿಚಾರವೇನೆಂದರೆ ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಅತಿ ದೊಡ್ಡ ಪಾಲುದಾರ ಪಕ್ಷವಾಗಿದ್ದು, ಕಳೆದ ಹಂತಗಳಿಗೆ ಹೋಲಿಸಿದರೆ ಈ ಬಾರಿ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಆಂಧ್ರಪ್ರದೇಶದಲ್ಲಿ ಬಿಜೆಪಿ ಒಟ್ಟು 25ಕ್ಷೇತ್ರಗಳಲ್ಲಿ 17 ಕ್ಷೇತ್ರಗಳನ್ನು ಮಿತ್ರ ಪಕ್ಷ ಟಿಡಿಪಿಗೆ ಬಿಟ್ಟುಕೊಟ್ಟಿದೆ. ಇನ್ನು ಎನ್‌ಡಿಎ ಯ ಇತರೆ ಸದಸ್ಯ ಪಕ್ಷಗಳು ಈ ಹಂತದಲ್ಲಿ ಮೂರು ಅಥವಾ ಅದಕ್ಕಿಂತಲೂ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಇದೇ ರೀತಿಯ ಸೀಟು ಹಂಚಿಕೆಯನ್ನು ಐದನೇ ಮತ್ತು ಏಳನೇ ಹಂತದಲ್ಲಿ ಚುನಾವಣೆ ಎದುರಿಸುತ್ತಿರುವ ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: Madhavi Latha: ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಬುರ್ಖಾ ತೆಗೆಸಿ ಐಡಿ ಕಾರ್ಡ್‌ ಚೆಕ್‌ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ!

Continue Reading
Advertisement
HD Revanna Bail Revanna will not leave the country condition imposed by the court
ಕ್ರೈಂ13 mins ago

HD Revanna Bail: ರೇವಣ್ಣಗೆ ಜಾಮೀನು; ನಾಳೆ 11 ದಿನದ ವನವಾಸದಿಂದ ಮುಕ್ತಿ; ಬೇಲ್‌ ಸಿಗಲು ಕಾರಣವೇನು?

Dust Storm
ಪ್ರಮುಖ ಸುದ್ದಿ23 mins ago

Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

CopConnect cyber security caffe inauguration by Dr Nagalakshmi Chaudhary at bengaluru
ಬೆಂಗಳೂರು26 mins ago

Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

35 crore crop damage insurance deposit for farmers of Yallapur constituency says MLA Shivaram Hebbar
ಉತ್ತರ ಕನ್ನಡ30 mins ago

Uttara Kannada News: ಯಲ್ಲಾಪುರ ಕ್ಷೇತ್ರದ ರೈತರಿಗೆ 35 ಕೋಟಿ ರೂ. ಬೆಳೆ ಹಾನಿ ವಿಮೆ ಜಮಾ: ಶಿವರಾಮ ಹೆಬ್ಬಾರ್‌

Bilhara village farmer grew bumper mango on barren land
ಕರ್ನಾಟಕ34 mins ago

Yadgiri News: ಬರಡು ಭೂಮಿಯಲ್ಲಿ ಈ ರೈತ ಬಂಪರ್ ಮಾವು ಬೆಳೆದಿದ್ದು ಹೇಗೆ?

Metro Penalty
ಬೆಂಗಳೂರು37 mins ago

Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

IPL 2024
ಪ್ರಮುಖ ಸುದ್ದಿ39 mins ago

IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

Chandrayaan 4
ದೇಶ42 mins ago

Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

CBSE Class 10 Results
ಮಂಡ್ಯ45 mins ago

CBSE Class 10 Results: ಸತತ 9ನೇ ಬಾರಿಗೆ ಶೇ.100 ಫಲಿತಾಂಶ; ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಅಮೋಘ ಸಾಧನೆ

Climate Plan
ಕರ್ನಾಟಕ56 mins ago

Climate Plan: ರಾಜ್ಯ ಸರ್ಕಾರದ ಹವಾಮಾನ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಒಪ್ಪಿಗೆ; ಏನಿದು ಯೋಜನೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ2 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ2 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ2 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ3 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ3 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ9 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ14 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ16 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌