Mann ki baat | ವೃಕ್ಷ ಸಂರಕ್ಷಕ, ಕನ್ನಡ ಹೋರಾಟಗಾರ ಸುರೇಶ್‌ ಕುಮಾರ್‌ಗೆ ಪ್ರಧಾನಿ ಮೋದಿ ಶ್ಲಾಘನೆ - Vistara News

ದೇಶ

Mann ki baat | ವೃಕ್ಷ ಸಂರಕ್ಷಕ, ಕನ್ನಡ ಹೋರಾಟಗಾರ ಸುರೇಶ್‌ ಕುಮಾರ್‌ಗೆ ಪ್ರಧಾನಿ ಮೋದಿ ಶ್ಲಾಘನೆ

ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಮನ್‌ ಕಿ ಬಾತ್‌ನಲ್ಲಿ ಬೆಂಗಳೂರಿನ ಸಹಕಾರ ನಗರದಲ್ಲಿ ಸಾವಿರಾರು ವೃಕ್ಷಗಳನ್ನು ಬೆಳೆಸಿ ಸಂರಕ್ಷಿಸಿರುವ ಸುರೇಶ್‌ ಕುಮಾರ್‌ (Mann ki baat) ಅವರನ್ನು ಶ್ಲಾಘಿಸಿದ್ದಾರೆ.

VISTARANEWS.COM


on

mann ki baat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬೆಂಗಳೂರಿನಲ್ಲಿ ಸಾವಿರಾರು ವೃಕ್ಷಗಳನ್ನು ಸಂರಕ್ಷಿಸಿ ಪೋಷಿಸಿರುವ ಹಾಗೂ ಕನ್ನಡ ನಾಡು-ನುಡಿಯ ಬಗ್ಗೆ ಜನ ಜಾಗೃತಿ ಮೂಡಿಸುತ್ತಿರುವ ಸುರೇಶ್‌ ಕುಮಾರ್‌ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ( Mann ki baat) ಶ್ಲಾಘಿಸಿದ್ದಾರೆ.

ಪ್ರಧಾನಿ ಮೋದಿಯವರು ಭಾನುವಾರ ತಮ್ಮ ಬಾನುಲಿ ಕಾರ್ಯಕ್ರಮ ಮನ್‌ ಕಿ ಬಾತ್‌ನಲ್ಲಿ ಮಾತನಾಡುತ್ತಾ, ಸುರೇಶ್‌ ಕುಮಾರ್‌ ಅವರು ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಮಾಡಿರುವ ಕಾರ್ಯಕ್ರಮಗಳು ಅನನ್ಯ. ಅವರಿಂದ ನಾವು ಕಲಿಯುವಂಥದ್ದು ಬಹಳಷ್ಟು ಇದೆ. 20 ವರ್ಷಗಳ ಹಿಂದೆ ಅವರು ಸಹಕಾರ ನಗರದಲ್ಲಿ ಗಿಡ ಮರಗಳನ್ನು ನೆಟ್ಟು ಸಂರಕ್ಷಣೆ ಮಾಡಲು ನಿರ್ಧರಿಸಿದರು. ಈ ಕೆಲಸ ಸುಲಭವಾಗಿರಲಿಲ್ಲ. ಆದರೆ ಈಗ ಅಲ್ಲಿ 40 ಅಡಿ ಎತ್ತರದ ದೊಡ್ಡ ಮರಗಳು ಚೆನ್ನಾಗಿ ಬೆಳೆದಿವೆ. ಪ್ರತಿಯೊಬ್ಬರೂ ಈ ಹಸಿರಿನ ಸೌಂದರ್ಯವನ್ನು ಮೆಚ್ಚುತ್ತಿದ್ದಾರೆ. ಅಲ್ಲಿನ ನಿವಾಸಿಗಳಿಗೂ ಇದು ಗರ್ವದ ಸಂಗತಿಯಾಗಿದೆ ಎಂದರು.

ಸುರೇಶ್‌ ಕುಮಾರ್‌ ಅವರು ಇನ್ನೂ ಒಂದು ಅದ್ಭುತ ಕೆಲಸವನ್ನು ಮಾಡಿದ್ದಾರೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಪೋಷಿಸಲು ಸಹಕಾರ ನಗರದಲ್ಲಿ ಒಂದು ಬಸ್‌ ನಿಲ್ದಾಣವನ್ನು ಮಾಡಿದ್ದಾರೆ. ನಾಡು ನುಡಿಯ ಬಗ್ಗೆ ಅರಿವು ಮೂಡಿಸುವ ಫಲಕಗಳನ್ನು ಅಚ್ಚುಕಟ್ಟಾಗಿ ಅಳವಡಿಸಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ನಾಡು-ನುಡಿಯ ಸಂರಕ್ಷಣೆಗೆ ಅವರು ಸಲ್ಲಿಸುತ್ತಿರುವ ಕೊಡುಗೆ ಮಾದರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುರೇಶ್‌ ಕುಮಾರ್‌ ಅವರು ಸಹಕಾರ ನಗರದಲ್ಲಿ ರೈಲ್ವೆ ಹಳಿಯ ಬದಿಗಳಲ್ಲಿನ ಖಾಲಿ ಜಾಗಗಳಲ್ಲಿ 2,000 ಗಿಡಗಳನ್ನು ನೆಟ್ಟಿದ್ದರು. ಬೇಸಗೆಯಲ್ಲಿ ಅಷ್ಟೂ ಗಿಡಗಳಿಗೆ ನೀರುಣಿಸಿ ಬೆಳೆಸಿದ್ದರು. ಅವುಗಳು ಈಗ ಮರಗಳಾಗಿ ನೆರಳು ನೀಡುತ್ತವೆ. ಪರಿಸರವನ್ನು ಅಂದಗೊಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Arvind Kejriwal: ಅರೆಸ್ಟ್‌ ಬೆನ್ನಲ್ಲೇ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌

Arvind Kejriwal: ತಮ್ಮ ಅರ್ಜಿಯನ್ನು ಹಿಂಪಡೆಯಲು ಕೇಂಜ್ರಿವಾಲ್‌ ಅವರಿಗೆ ನ್ಯಾ. ಮನೋಜ್‌ ಮಿಶ್ರಾ ಮತ್ತು ಎಸ್‌ವಿಎನ್‌ ಭಟ್ಟಿ ಇದ್ದ ನ್ಯಾಯಪೀಠ ಅವಕಾಶ ನೀಡಿತು. ರೋಸ್‌ ಅವೆನ್ಯೂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಇ.ಡಿ ಅಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸುವವರೆಗೂ ಬಿಡುಗಡೆ ಮಾಡಬಾರದು ಎಂಬುದಾಗಿ ದೆಹಲಿ ಕೋರ್ಟ್‌ ಶುಕ್ರವಾರ (ಜೂನ್‌ 21) ಬೆಳಗ್ಗೆ ಆದೇಶ ಹೊರಡಿಸಿತು. ಜಾಮೀನಿಗೆ ಸಂಬಂಧಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌(Arvind Kejriwal) ಅವರನ್ನು ಸಿಬಿಐ ಇಂದು ಔಪಚಾರಿಕವಾಗಿ ಅರೆಸ್ಟ್‌ ಮಾಡಿತ್ತು. ಬಳಿಕ ಕೋರ್ಟ್‌ಗೆ ಹಾಜರುಪಡಿಸಿದ ಸಿಬಿಐ ಐದು ದಿನಗಳ ಕಾಲ ತನ್ನ ಕಸ್ಟಡಿಗೆ ಕೇಳಿತ್ತು. ಮತ್ತೊಂದೆಡೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ್ದ ರೋಸ್‌ ಅವೆನ್ಯೂ ಕೋರ್ಟ್‌ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ತಾವು ಸಲ್ಲಿಸಿದ್ದ ಅರ್ಜಿಯನ್ನು ಕೇಜ್ರಿವಾಲ್‌ ಹಿಂಪಡೆದಿದ್ದಾರೆ.

ತಮ್ಮ ಅರ್ಜಿಯನ್ನು ಹಿಂಪಡೆಯಲು ಕೇಂಜ್ರಿವಾಲ್‌ ಅವರಿಗೆ ನ್ಯಾ. ಮನೋಜ್‌ ಮಿಶ್ರಾ ಮತ್ತು ಎಸ್‌ವಿಎನ್‌ ಭಟ್ಟಿ ಇದ್ದ ನ್ಯಾಯಪೀಠ ಅವಕಾಶ ನೀಡಿತು. ರೋಸ್‌ ಅವೆನ್ಯೂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಇ.ಡಿ ಅಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸುವವರೆಗೂ ಬಿಡುಗಡೆ ಮಾಡಬಾರದು ಎಂಬುದಾಗಿ ದೆಹಲಿ ಕೋರ್ಟ್‌ ಶುಕ್ರವಾರ (ಜೂನ್‌ 21) ಬೆಳಗ್ಗೆ ಆದೇಶ ಹೊರಡಿಸಿತು. ಜಾಮೀನಿಗೆ ಸಂಬಂಧಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಇನ್ನೂ 2-3 ದಿನಗಳ ಬಳಿಕ ಆದೇಶ ಹೊರಡಿಸಲಾಗುವುದು ಎಂಬುದಾಗಿ ಕೋರ್ಟ್‌ ಹೇಳಿತ್ತು. ಅದೂ ಅಲ್ಲದೇ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಮಂಜೂರು ಮಾಡಿದ್ದ ರೋಸ್‌ ಅವೆನ್ಯೂ ಕೋರ್ಟ್‌ ಆದೇಶಕ್ಕೆ ದೆಹಲಿ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಕೇಜ್ರಿವಾಲ್‌ಗೆ ಅಲ್ಲೂ ರಿಲೀಫ್‌ ಸಿಕ್ಕಿರಲಿಲ್ಲ.

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು.

ಇದನ್ನೂ ಓದಿ:Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

Continue Reading

ವಾಣಿಜ್ಯ

5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

5G Spectrum: ಭಾರ್ತಿ ಏರ್‌ಟೆಲ್‌ ಕಂಪನಿಯು 97 ಎಂಎಚ್‌ಝಡ್‌ (ಮೆಗಾ ಹರ್ಟ್ಸ್‌) ತರಂಗಗಳನ್ನು 6,857 ಕೋಟಿ ರೂ. ಪಾವತಿಸಿ 20 ವರ್ಷಗಳಿಗಾಗಿ ಖರೀದಿಸಿದೆ. ಇದರೊಂದಿಗೆ 5ಜಿ ತರಂಗಗಳ ಹರಾಜು ಪ್ರಕ್ರಿಯೆ ಬುಧವಾರ ಮುಕ್ತಾಯಗೊಂಡಿದ್ದು, ಸರ್ಕಾರಕ್ಕೆ 11,300 ಕೋಟಿ ರೂ. ಆದಾಯ ಲಭಿಸಿದೆ.

VISTARANEWS.COM


on

5G Spectrum
Koo

ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿದ್ದ 5ಜಿ ತರಂಗಗಳ ಹರಾಜು (5G Spectrum) ಪ್ರಕ್ರಿಯೆ ಭಾನುವಾರ ಮುಕ್ತಾಯಗೊಂಡಿದೆ. ಕೇಂದ್ರ ಸರ್ಕಾರವು (Central Government) 11,300 ಕೋಟಿ ರೂಪಾಯಿಗೆ 5ಜಿ ತರಂಗ ಹರಾಜು ಮಾಡಿದ್ದು, ದೇಶದ ಪ್ರಮುಖ ಖಾಸಗಿ ಟೆಲಾಕಾಂ ಕಂಪನಿಯಾದ ಭಾರ್ತಿ ಏರ್‌ಟೆಲ್‌ (Bharti Airtel) 6,857 ಕೋಟಿ ರೂ.ಗೆ ತರಂಗಗಳನ್ನು ಖರೀದಿಸುವ (5G Spectrum Auctions) ಮೂಲಕ ಹರಾಜಿನಲ್ಲಿ ಬೃಹತ್‌ ಬಿಡ್ಡರ್‌ ಎನಿಸಿದೆ.

ಭಾರ್ತಿ ಏರ್‌ಟೆಲ್‌ ಕಂಪನಿಯು 97 ಎಂಎಚ್‌ಝಡ್‌ (ಮೆಗಾ ಹರ್ಟ್ಸ್‌) ತರಂಗಗಳನ್ನು 6,857 ಕೋಟಿ ರೂ. ಪಾವತಿಸಿ 20 ವರ್ಷಗಳಿಗಾಗಿ ಖರೀದಿಸಿದೆ. “ಗ್ರಾಹಕರಿಗೆ ಅತ್ಯುತ್ತಮ, ಅತ್ಯಾಧುನಿಕ ಹಾಗೂ ಕ್ಷಿಪ್ರಗತಿಯ ಸೇವೆಗಳನ್ನು ಒದಗಿಸುವ ದಿಸೆಯಲ್ಲಿ ಭಾರ್ತಿ ಏರ್‌ಟೆಲ್‌ ಕಂಪನಿಯು 5ಜಿ ತರಂಗಗಳನ್ನು ಖರೀದಿಸಿದೆ. ಇದರಿಂದ ದೇಶದ ಮೂಲೆ ಮೂಲೆಗಳಿಗೂ 5ಜಿ ಸೇವೆಯನ್ನು ವಿಸ್ತರಿಸುವ ನಮ್ಮ ಉದ್ದೇಶಕ್ಕೆ ಈಗ ಬಲ ಬಂದಂತಾಗಿದೆ” ಎಂದು ಹರಾಜು ಪ್ರಕ್ರಿಯೆ ಮುಗಿದ ಬಳಿಕ ಕಂಪನಿಯ ಎಂಡಿ ಹಾಗೂ ಸಿಇಒ ಗೋಪಾಲ್‌ ವಿಠಲ್‌ ಮಾಹಿತಿ ನೀಡಿದ್ದಾರೆ.

ತರಂಗಗಳ ಹರಾಜು ಮೊತ್ತ ಕುಸಿತ

ತರಂಗಗಳ ಹರಾಜು ಪ್ರಕ್ರಿಯೆಗೆ 2022ಕ್ಕೆ ಹೋಲಿಸಿದರೆ ಈ ಬಾರಿ ಕಡಿಮೆ ಮೊತ್ತ ಲಭಿಸಿದೆ. 2022ರಲ್ಲಿ 72,097 ಎಂಎಚ್‌ಝಡ್‌ ರೇಡಿಯೊ ತರಂಗಗಳ ಮಾರಾಟದಿಂದ 1.5 ಲಕ್ಷ ಕೋಟಿ ರೂ. ಆದಾಯ ಲಭಿಸಿತ್ತು. ಆ ವರ್ಷದಲ್ಲಿ ಕೇಂದ್ರ ಸರ್ಕಾರವು ಮೊದಲ ಬಾರಿಗೆ 5ಜಿ ತರಂಗಗಳ ಹರಾಜು ನಡೆಸಿತ್ತು. ಆ ವರ್ಷ ಸರ್ಕಾರವು ತರಂಗಗಳ ಹರಾಜಿನಿಂದ ದಾಖಲೆ ಮೊತ್ತದ ಆದಾಯ ಗಳಿಸಿತ್ತು. ಮುಕೇಶ್‌ ಅಂಬಾನಿ ಅವರ ಜಿಯೋ ಒಂದೇ ಸುಮಾರು 88 ಸಾವಿರ ಕೋಟಿ ರೂ. ಕೊಟ್ಟು 5ಜಿ ತರಂಗಗಳನ್ನು ಖರೀದಿಸಿತ್ತು.

ಎರಡನೇ ದಿನದ (ಬುಧವಾರ-ಜೂನ್‌ 26) ಹರಾಜಿನಲ್ಲಿ ಕೇಂದ್ರ ಸರ್ಕಾರವು ಸುಮಾರು 96,238 ಕೋಟಿ ರೂ. ಮೌಲ್ಯದ ತರಂಗಗಳನ್ನು ಮಾರಾಟ ಮಾಡುವ ಉದ್ದೇಶ ಹೊಂದಿತ್ತು. ಆದರೆ, ಸರ್ಕಾರದ ಗುರಿಯಲ್ಲಿ ಶೇ.12ರಷ್ಟು ಗುರಿ ಮಾತ್ರ ಸಾಧಿಸಲಾಯಿತು ಎಂದು ತಿಳಿದುಬಂದಿದೆ. ದೇಶದಲ್ಲಿ ಜಿಯೋ, ಏರ್‌ಟೆಲ್‌ ಸೇರಿ ಹಲವು ಟೆಲಿಕಾಮ್‌ ಕಂಪನಿಗಳು 5 ಜಿ ಸೇವೆಗಳನ್ನು ಒದಗಿಸುತ್ತಿವೆ. ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ 5ಜಿ ಸೇವೆಯು ಲಭ್ಯವಿದೆ. ಈಗಾಗಲೇ ಕೇಂದ್ರ ಸರ್ಕಾರವು 6ಜಿ ಅಳವಡಿಕೆಗೆ ಚಿಂತನೆ ನಡೆಸಿದೆ.

ಇದನ್ನೂ ಓದಿ: 5G India: ಭಾರತದ 5ಜಿ ವೇಗಕ್ಕೆ ಸಾಟಿ ಇಲ್ಲ; ನಮ್ಮ ಸ್ಪೀಡ್‌ ಮುಂದೆ ಜಪಾನ್‌, ಬ್ರಿಟನ್‌ ಕೂಡ ಹಿಂದೆ!

Continue Reading

ಕ್ರೀಡೆ

Yusuf Pathan: ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜೈ ಹಿಂದ್‌ ಘೋಷಣೆ ಕೂಗಿದ ಯೂಸುಫ್ ಪಠಾಣ್

Yusuf Pathan: ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದರು.

VISTARANEWS.COM


on

Koo

ನವದೆಹಲಿ: ಪಶ್ಚಿಮ ಬಂಗಾಳದ ಬರ್ಹಾಂಪೋರ್‌ ಲೋಕಸಭಾ ಕ್ಷೇತ್ರದ ಟಿಎಂಸಿ ಸಂಸದ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್(Yusuf Pathan) ಅವರು ಬುಧವಾರ 18ನೇ ಲೋಕಸಭೆ(Loksabha)ಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಹಿಂದ್‌, ಜೈ​ ಗುಜರಾತ್​, ಜೈ ಬಂಗಾಳ​ ಎಂದು ಘೋಷಣೆ ಕೂಗಿದರು.

ಯೂಸುಫ್ ಪಠಾಣ್ ಮುಸ್ಲಿಂ ಸಮುದಾಯದವರಾಗಿದ್ದರೂ ಕೂಡ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಅಚ್ಚರಿಗೆ ಕಾರಣವಾಗಿದ್ದು, ಕೆಲ ಮುಸ್ಲಿಂ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದರು. ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದಿದ್ದರು. ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.

ಮೂಲತಃ ಗುಜರಾತ್‌ನವರಾದ ಯೂಸುಫ್ ಪಠಾಣ್ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಪರ ಹಲವು ವರ್ಷಗಳ ಕಾಲ ಆಡಿದ್ದರು. ಅಲ್ಲದೆ ತಂಡದ ಪ್ರಧಾನ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಬಂಗಾಳದಾದ್ಯಂತ ಯೂಸುಫ್​ಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇದೇ ಕಾರಣದಿಂದ ಅವರಿಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ಟಿಕೆಟ್​ ನೀಡಲಾಗಿತ್ತು.

ಇದನ್ನೂ ಓದಿ Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

18ನೇ ಲೋಕಸಭೆಯ ಮೊದಲ ಅಧಿವೇಶನ(Parliament Sessions)ದ ಮೂರನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಇಂದು ಸ್ಪೀಕರ್‌ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಓಂ ಬಿರ್ಲಾ(Om Birla) ಅವರು ಎರಡನೇ ಬಾರಿ ಲೋಕಸಭೆಯ ಸ್ಪೀಕರ್‌ ಆಗಿ ಚುನಾಯಿತ(Lok Sabha Speaker)ರಾಗಿದ್ದಾರೆ. ಚುನಾಯಿತರಾದ ಬಳಿಕ ಮೊದಲ ಬಾರಿಗೆ ಸಂಸತ್‌ನಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಸಂದರ್ಭವನ್ನು ಪ್ರಸ್ತಾಪಿಸಿದರು.

ಸ್ಪೀಕರ್‌ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಓಂ ಬಿರ್ಲಾ, ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದರು. ಆ ಸಂದರ್ಭದಲ್ಲಿ ಜನರಿಗಾದ ಕಷ್ಟ ಕಾರ್ಪಣ್ಯಗಳ ಬಗ್ಗೆ ಮಾತನಾಡಿದರು. ಅಲ್ಲದೇ ತುರ್ತು ಪರಿಸ್ಥಿತಿಯ 50ನೇ ವರ್ಷಾಚರಣೆ ಹಿನ್ನೆಲೆ ಎರಡು ದಿನ ಮೌನಾಚರಣೆಗೆ ಕರೆ ನೀಡಿದರು. ಇದರ ಬೆನ್ನಲ್ಲೇ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪರಿಣಾಮವಾಗಿ ಕಲಾಪನ್ನು ಮುಂದೂಡಲಾಯಿತು. ಸರ್ವಾಧಿಕಾರವನ್ನು ನಿಲ್ಲಿಸಿ.. ದೇಶವನ್ನೇ ಜೈಲಾಗಿ ಪರಿವರ್ತಿಸಿದ್ದಾರೆ ಎಂದು ಘೋಷಣೆ ಕೂಗಿದರು.

ಇದಾದ ಬಳಿಕ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ ಓಂ ಬಿರ್ಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಗೌರವಾನ್ವಿತ ಸಭಾಧ್ಯಕ್ಷರು ತುರ್ತು ಪರಿಸ್ಥಿತಿಯನ್ನು ಬಲವಾಗಿ ಖಂಡಿಸಿದ್ದು, ಆ ಸಮಯದಲ್ಲಿ ಮಾಡಿದ ಅತಿರೇಕ ವರ್ತನೆ ಮತ್ತು ಪ್ರಜಾಪ್ರಭುತ್ವವನ್ನು ಕತ್ತು ಹಿಸುಕಿದ ರೀತಿಯನ್ನು ಪ್ರಸ್ತಾಪಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಆ ದಿನಗಳಲ್ಲಿ ನಡೆದ ಹಿಂಸಾಚಾರ ಖಂಡಿಸಿ ನಡೆಸಲಾದ ಮೌನಾಚರಣೆಯನ್ನು ನಾವು ಪ್ರಶಂಸಿಸುತ್ತೇವೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Continue Reading

ದೇಶ

Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

Lok Sabha Speaker:ಸ್ಪೀಕರ್‌ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಓಂ ಬಿರ್ಲಾ, ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದರು. ಆ ಸಂದರ್ಭದಲ್ಲಿ ಜನರಿಗಾದ ಕಷ್ಟ ಕಾರ್ಪಣ್ಯಗಳ ಬಗ್ಗೆ ಮಾತನಾಡಿದರು. ಅಲ್ಲದೇ ತುರ್ತು ಪರಿಸ್ಥಿತಿಯ 50ನೇ ವರ್ಷಾಚರಣೆ ಹಿನ್ನೆಲೆ ಎರಡು ದಿನ ಮೌನಾಚರಣೆಗೆ ಕರೆ ನೀಡಿದರು. ಇದರ ಬೆನ್ನಲ್ಲೇ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪರಿಣಾಮವಾಗಿ ಕಲಾಪನ್ನು ಮುಂದೂಡಲಾಯಿತು. ಸರ್ವಾಧಿಕಾರವನ್ನು ನಿಲ್ಲಿಸಿ.. ದೇಶವನ್ನೇ ಜೈಲಾಗಿ ಪರಿವರ್ತಿಸಿದ್ದಾರೆ ಎಂದು ಘೋಷಣೆ ಕೂಗಿದರು.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ(Parliament Sessions)ದ ಮೂರನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಇಂದು ಸ್ಪೀಕರ್‌ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಓಂ ಬಿರ್ಲಾ(Om Birla) ಅವರು ಎರಡನೇ ಬಾರಿ ಲೋಕಸಭೆಯ ಸ್ಪೀಕರ್‌ ಆಗಿ ಚುನಾಯಿತ(Lok Sabha Speaker)ರಾಗಿದ್ದಾರೆ. ಚುನಾಯಿತರಾದ ಬಳಿಕ ಮೊದಲ ಬಾರಿಗೆ ಸಂಸತ್‌ನಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಸಂದರ್ಭವನ್ನು ಪ್ರಸ್ತಾಪಿಸಿದರು.

ಸ್ಪೀಕರ್‌ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಓಂ ಬಿರ್ಲಾ, ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದರು. ಆ ಸಂದರ್ಭದಲ್ಲಿ ಜನರಿಗಾದ ಕಷ್ಟ ಕಾರ್ಪಣ್ಯಗಳ ಬಗ್ಗೆ ಮಾತನಾಡಿದರು. ಅಲ್ಲದೇ ತುರ್ತು ಪರಿಸ್ಥಿತಿಯ 50ನೇ ವರ್ಷಾಚರಣೆ ಹಿನ್ನೆಲೆ ಎರಡು ದಿನ ಮೌನಾಚರಣೆಗೆ ಕರೆ ನೀಡಿದರು. ಇದರ ಬೆನ್ನಲ್ಲೇ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪರಿಣಾಮವಾಗಿ ಕಲಾಪನ್ನು ಮುಂದೂಡಲಾಯಿತು. ಸರ್ವಾಧಿಕಾರವನ್ನು ನಿಲ್ಲಿಸಿ.. ದೇಶವನ್ನೇ ಜೈಲಾಗಿ ಪರಿವರ್ತಿಸಿದ್ದಾರೆ ಎಂದು ಘೋಷಣೆ ಕೂಗಿದರು.

ಇದಾದ ಬಳಿಕ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ ಓಂ ಬಿರ್ಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಗೌರವಾನ್ವಿತ ಸಭಾಧ್ಯಕ್ಷರು ತುರ್ತು ಪರಿಸ್ಥಿತಿಯನ್ನು ಬಲವಾಗಿ ಖಂಡಿಸಿದ್ದು, ಆ ಸಮಯದಲ್ಲಿ ಮಾಡಿದ ಅತಿರೇಕ ವರ್ತನೆ ಮತ್ತು ಪ್ರಜಾಪ್ರಭುತ್ವವನ್ನು ಕತ್ತು ಹಿಸುಕಿದ ರೀತಿಯನ್ನು ಪ್ರಸ್ತಾಪಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಆ ದಿನಗಳಲ್ಲಿ ನಡೆದ ಹಿಂಸಾಚಾರ ಖಂಡಿಸಿ ನಡೆಸಲಾದ ಮೌನಾಚರಣೆಯನ್ನು ನಾವು ಪ್ರಶಂಸಿಸುತ್ತೇವೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು.

ಇದನ್ನೂ ಓದಿ: CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

Continue Reading
Advertisement
Rohit Sharma
ಕ್ರೀಡೆ2 mins ago

Rohit Sharma: ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​; ಲಂಕಾ ಆಟಗಾರನಿಗೆ ನಡುಕ

Viral Video
Latest3 mins ago

Viral Video: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

Arvind Kejriwal
ದೇಶ5 mins ago

Arvind Kejriwal: ಅರೆಸ್ಟ್‌ ಬೆನ್ನಲ್ಲೇ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌

Actor Darshan Full aggressive mode while he drunk
ಸ್ಯಾಂಡಲ್ ವುಡ್10 mins ago

Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

5G Spectrum
ವಾಣಿಜ್ಯ11 mins ago

5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

Rain News
ಕರ್ನಾಟಕ14 mins ago

Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Money Guide
ಮನಿ-ಗೈಡ್27 mins ago

Money Guide: ಸಾಲಕ್ಕೆ ಅಪ್ಲೈ ಮಾಡುವ ಮುನ್ನ ಈ ಅಂಶ ನಿಮಗೆ ತಿಳಿದಿರಲೇ ಬೇಕು

Prajwal revanna Case
ಕರ್ನಾಟಕ38 mins ago

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Actress Akshita entry to kollywood cinema
ಕಾಲಿವುಡ್43 mins ago

Actress Akshita: ಕನ್ನಡತಿ ಅಕ್ಷಿತಾ ಈಗ ತಮಿಳು ಚಿತ್ರದ ನಾಯಕಿ!

ಕ್ರೀಡೆ45 mins ago

Yusuf Pathan: ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜೈ ಹಿಂದ್‌ ಘೋಷಣೆ ಕೂಗಿದ ಯೂಸುಫ್ ಪಠಾಣ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌