Invest Karnataka Saree Exhibition | ಫ್ಯಾಷನ್‌ ಪ್ರಿಯರನ್ನು ಸೆಳೆದ ಇನ್ವೆಸ್ಟ್ ಕರ್ನಾಟಕದ ಟ್ರೆಡಿಷನಲ್‌ ಸೀರೆಗಳ ಪ್ರದರ್ಶನ - Vistara News

ಇನ್ವೆಸ್ಟ್ ಕರ್ನಾಟಕ

Invest Karnataka Saree Exhibition | ಫ್ಯಾಷನ್‌ ಪ್ರಿಯರನ್ನು ಸೆಳೆದ ಇನ್ವೆಸ್ಟ್ ಕರ್ನಾಟಕದ ಟ್ರೆಡಿಷನಲ್‌ ಸೀರೆಗಳ ಪ್ರದರ್ಶನ

ಚಿತ್ರಕಲಾ ಪ್ರದರ್ಶನದಲ್ಲಿ (Invest Karnataka Saree Exhibition ) ಯಶಸ್ವಿಯಾಗಿ ನಡೆಯುತ್ತಿರುವ ಇನ್ವೆಸ್ಟ್‌ ಕರ್ನಾಟಕದ ಭಾಗವಾಗಿರುವ ಟ್ರೆಡಿಷನಲ್‌ ಟೆಕ್ಸ್‌ಟೈಲ್ಸ್‌ ಹಾಗೂ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಫ್ಯಾಷನ್‌ ಪ್ರಿಯರನ್ನು ಸೆಳೆದಿದೆ. ನವೆಂಬರ್‌ 6ರವರೆಗೆ ಇದು ಮುಂದುವರಿಯಲಿದೆ.

VISTARANEWS.COM


on

Invest Karnataka Saree Exibition
ಚಿತ್ರಕೃಪೆ : ಫ್ಯಾಷನ್‌ ಗುರು ಪ್ರಸಾದ್‌ ಬಿದ್ದಪ್ಪ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು

ಇನ್ವೆಸ್ಟ್‌ ಕರ್ನಾಟಕದ (Invest Karnataka Saree Exhibition) ಭಾಗವಾಗಿ ನಡೆಯುತ್ತಿರುವ ಟ್ರೆಡಿಷನಲ್‌ ಟೆಕ್ಸ್‌ಟೈಲ್ಸ್‌ ಹಾಗೂ ಸೀರೆಗಳ ಪ್ರದರ್ಶನ ಚಿತ್ರಕಲಾ ಪರಿಷತ್‌ನಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ನವೆಂಬರ್‌ ೬ರವರೆಗೂ ಮುಂದುವರಿಯಲಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಸ್ಥಳೀಯ ಬ್ರಾಂಡ್‌ನ ಟೆಕ್ಸ್‌ಟೈಲ್‌ ಹಾಗೂ ಸೀರೆಗಳು ಪ್ರದರ್ಶನಗೊಳ್ಳುತ್ತಿವೆ. ಸೀರೆಗಳ ಮೂಲ ಹಾಗೂ ಕಥಾನಕವನ್ನೊಳಗೊಂಡ ಈ ಪ್ರದರ್ಶನ ನೋಡುಗರನ್ನು ಸೆಳೆಯುತ್ತಿದೆ. ಇಳಕಲ್‌ ಸೀರೆಗಳಿಂದ ಹಿಡಿದು ಮೈಸೂರ್‌ ಸಿಲ್ಕ್‌ವರೆಗಿನ ನಾನಾ ಬಗೆಯ ಸೀರೆಗಳನ್ನು ಇಲ್ಲಿ ಕಾಣಬಹುದು. ನಾನಾ ಕಡೆಯಿಂದ ಉತ್ಪನ್ನಗಳ ರೂವಾರಿಗಳು ಆಗಮಿಸಿದ್ದು, ಅವರಿಂದ ಸೀರೆಗಳ ಇತಿಹಾಸವನ್ನು ತಿಳಿದುಕೊಳ್ಳಬಹುದು.

ಫ್ಯಾಷನ್‌ ಗುರು ಪ್ರಸಾದ್‌ ಬಿದ್ದಪ್ಪ ಪ್ರೋತ್ಸಾಹ
“ಇನ್ವೆಸ್ಟ್ ಕರ್ನಾಟಕದ ಭಾಗವಾಗಿರುವ ಈ ಪ್ರದರ್ಶನಕ್ಕೆ ಕೇವಲ ಫ್ಯಾಷನ್‌ ಪ್ರೇಮಿಗಳಲ್ಲ, ಎಲ್ಲರ ಪ್ರೋತ್ಸಾಹದ ಅಗತ್ಯವಿದೆ. ಇಂತಹ ಕಲಾವಿದರಿಗೆ ಹಾಗೂ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಿದಾಗ ಮಾತ್ರ ನಾವು ಸ್ಥಳೀಯ ಕಲಾವಿದರನ್ನು ಮುಂದೆ ತರಲು ಸಾಧ್ಯ. ನಮ್ಮ ಕರ್ನಾಟಕದ ಸೀರೆಗಳನ್ನು ಬೆಳೆಸುವುದರೊಂದಿಗೆ ಅವುಗಳನ್ನು ಜಾಗತೀಕ ಮಟ್ಟದಲ್ಲಿ ಚಾಲ್ತಿಗೆ ತರಲು ಸಾಧ್ಯವಾಗುತ್ತದೆ” ಎಂದು ಫ್ಯಾಷನ್‌ ಗುರು ಪ್ರಸಾದ್‌ ಬಿದ್ದಪ್ಪ ಹೇಳುತ್ತಾರೆ.

ಇದನ್ನೂ ಓದಿ | Shah Rukh Khan Fashion | ಬಾಲಿವುಡ್‌ ಕಿಂಗ್‌ ಖಾನ್‌ ಶಾರುಖ್‌ ರೀಲ್‌ ಫ್ಯಾಷನ್‌ Vs ರಿಯಲ್‌ ಫ್ಯಾಷನ್‌!

Invest Karnataka Saree Exhibition
Invest Karnataka Saree Exhibition

ಇದಕ್ಕೆ ಪೂರಕ ಎಂಬಂತೆ, ಆಗಾಗ ಸೋಷಿಯಲ್‌ ಮೀಡಿಯಾದಲ್ಲಿ ಕರ್ನಾಟಕದ ಸ್ಥಳೀಯ ಉತ್ಪನ್ನಗಳನ್ನು ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಫೋಸ್ಟ್‌ಗಳನ್ನು ಕೂಡ ಅವರು ಹಾಕುತ್ತಿರುತ್ತಾರೆ.

ಅಪ್‌ಸೈಕಲ್ಡ್‌ ಸೀರೆಯೂ ಉಂಟು
ಪ್ರದರ್ಶನದಲ್ಲಿ ಪಾಲ್ಗೊಂಡ ಸೀರೆ ಪ್ರೇಮಿ ಪದ್ಮಾ ಪ್ರಿಯಾ ಅವರು ಹೇಳುವಂತೆ, ನಮ್ಮ ಟ್ರೆಡಿಷನಲ್‌ ಸಂಸ್ಕೃತಿಗೆ ಸಾಕ್ಷಿಯಾಗಿರುವ ನಾನಾ ಬಗೆಯ ಸೀರೆಗಳಾದ ಮೊಳಕಾಲ್ಮೂರು, ಇಳಕಲ್‌, ಮೈಸೂರ್‌ ಸಿಲ್ಕ್‌ ಸೀರೆಗಳ ಮೂಲ ಮಾತ್ರವಲ್ಲ, ಹೊರಗಡೆಯಿಂದ ಬಂದಿರುವ ನಾನಾ ಫ್ಯಾಬ್ರಿಕ್‌ನ ಸೀರೆಗಳ ಪ್ರದರ್ಶನವನ್ನು ಇಲ್ಲಿ ನೋಡಬಹುದು. ಅಲ್ಲದೇ, ಅಪ್‌ಸೈಕಲ್ಡ್‌ ಸೀರೆಗಳು ಇಲ್ಲಿವೆ. ಸೀರೆ ಪ್ರಿಯರಿಗೆ ಇದು ಹೇಳಿ ಮಾಡಿಸಿದ ಪ್ರದರ್ಶನ. ಇಷ್ಟವಾದಲ್ಲಿ ಖರೀದಿಸಲೂ ಬಹುದು. ಅಷ್ಟೊಂದು ವೆರೈಟಿ ಸೀರೆಗಳಿವೆ ಎನ್ನುತ್ತಾರವರು.

Invest Karnataka Saree Exhibition
Invest Karnataka Saree Exhibition

ಪುರುಷರಿಗೆ ಖಾದಿ ಕಾಟನ್‌ನಲ್ಲೂ ವೆರೈಟಿ ವಿನ್ಯಾಸ
“ಇನ್ನು ಇಲ್ಲಿ ಕೇವಲ ಮಹಿಳೆಯರಿಗೆ ಮಾತ್ರವಲ್ಲ, ಪುರುಷರು ಧರಿಸಬಹುದಾದ ಖಾದಿ ಹಾಗೂ ಕಾಟನ್‌ನ ಕುರ್ತಾ, ಪೈಜಾಮ, ಜುಬ್ಬಾ, ಶ್ರಗ್‌, ವೇಸ್‌ಕೋಟ್‌ ಹಾಗೂ ಶಾಲುಗಳು ಇವೆ. ಈ ವಿಂಟರ್‌ ಸೀಸನ್‌ಗೆ ಹೊಂದುವಂತಹ ಲೇಯರ್‌ ಲುಕ್‌ ನೀಡುವಂತಹ ನಾನಾ ಬಗೆಯ ಸ್ಥಳೀಯ ಫ್ಯಾಬ್ರಿಕ್‌ನಲ್ಲಿ ಸಿದ್ಧಪಡಿಸಿದ ಡಿಸೈನರ್‌ವೇರ್‌ಗಳಿವೆ” ಎನ್ನುತ್ತಾರೆ ಡಿಸೈನಿಂಗ್‌ ಕಾಲೇಜಿನ ಇಂಟರ್ನಿ ರಂಜಿತಾ.

Invest Karnataka Saree Exhibition
Invest Karnataka Saree Exhibition

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ | Stars Winter Fashion | ಲಂಡನ್‌ನಲ್ಲಿ ಕರೀನಾ-ಕರೀಷ್ಮಾ ಕಪೂರ್‌ ವಿಂಟರ್‌ ಫ್ಯಾಷನ್‌ ಮಂತ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Foreign Investment: ರಾಜ್ಯದಲ್ಲಿ ಹೂಡಿಕೆಗೆ ದ. ಕೊರಿಯಾ ಆಸಕ್ತಿ; ಸಚಿವ ಎಂ‌.ಬಿ. ಪಾಟೀಲ್‌ ಚರ್ಚೆ

Foreign Investment: ದಕ್ಷಿಣ ಕೊರಿಯಾದ ಕಾನ್ಸುಲ್ ಜನರಲ್ ಚಾಂಗ್ ನ್ಯುನ್ ಕಿಮ್ ನೇತೃತ್ವದ ನಿಯೋಗವು ಮಂಗಳವಾರ ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ, ಮಾತುಕತೆ ನಡೆಸಿತು. ಈ ವೇಳೆ ಸಚಿವರು, ರಾಜ್ಯದಲ್ಲಿ ಇರುವ ಕೈಗಾರಿಕಾ ಕಾರ್ಯಪರಿಸರ ಮತ್ತು ಉದ್ಯಮಸ್ನೇಹಿ ನೀತಿಗಳನ್ನು ವಿವರಿಸಿದರು.

VISTARANEWS.COM


on

Foreign Investment investment in the state South Korea Consul General along with Minister M.B. Patil discussion
Koo

ಬೆಂಗಳೂರು: ದಕ್ಷಿಣ ಕೊರಿಯಾದ ಕಾನ್ಸುಲ್ ಜನರಲ್ ಚಾಂಗ್ ನ್ಯುನ್ ಕಿಮ್ ನೇತೃತ್ವದ ನಿಯೋಗ ಮಂಗಳವಾರ ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ, ಮಾತುಕತೆ (Foreign Investment) ನಡೆಸಿತು.

ಸಚಿವ ಪಾಟೀಲ ನೇತೃತ್ವದ ರಾಜ್ಯ ನಿಯೋಗವು ಇತ್ತೀಚಿಗೆ ಕೊರಿಯಾಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಹೆಚ್ಚು ಬಂಡವಾಳ ನೀಡುವಂತೆ ಅಲ್ಲಿನ‌ ಉದ್ದಿಮೆಗಳಿಗೆ ಆಹ್ವಾನಿಸಿತ್ತು.

ಇದನ್ನೂ ಓದಿ: Bengaluru Power Cut: ಜು.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಇಂದಿನ ಭೇಟಿಯ ಸಂದರ್ಭದಲ್ಲಿ ಎಂ‌.ಬಿ. ಪಾಟೀಲ ಅವರು, ರಾಜ್ಯದಲ್ಲಿ ಇರುವ ಕೈಗಾರಿಕಾ ಕಾರ್ಯಪರಿಸರ ಮತ್ತು ಉದ್ಯಮಸ್ನೇಹಿ ನೀತಿಗಳನ್ನು ವಿವರಿಸಿದರು. ಮುಖ್ಯವಾಗಿ ವಿದ್ಯುತ್ ಚಾಲಿತ ವಾಹನ ತಯಾರಿಕೆ, ಗ್ರೀನ್ ಎನರ್ಜಿ, ಮರುಬಳಕೆ ಇಂಧನ, ಆಟೋಮೊಬೈಲ್, ವೈಮಾಂತರಿಕ್ಷ ಮತ್ತು ಸಂಶೋಧನೆ ಮುಂತಾದ ವಲಯಗಳಿಗೆ ನೀಡಿರುವ ಆದ್ಯತೆ ಬಗ್ಗೆ ಮನದಟ್ಟು ಮಾಡಿಕೊಟ್ಟರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಕೊರಿಯಾ ನಿಯೋಗದಲ್ಲಿ ಸಂಶೋಧಕರಾದ ಜೂನ್ ಸಿಕ್ ಹ್ವಾಂಗ್, ಇಂದುಜಾ ಅಗರವಾಲ್, ಸಿಯೋ ಯಂಗ್ ಮೂನ್ ಕೂಡ ಇದ್ದರು.

Continue Reading

ಕರ್ನಾಟಕ

Foreign Investment: ರಾಜ್ಯದಲ್ಲಿ ಸ್ಮಾರ್ಟ್ ಫೋನ್ ಕ್ಯಾಮೆರಾ ಬಿಡಿಭಾಗ ತಯಾರಿಕೆ ಘಟಕ; ದ.ಕೊರಿಯಾ ಜತೆ ಕರ್ನಾಟಕ ಒಪ್ಪಂದ

Foreign Investment: ರಾಜ್ಯದಲ್ಲಿ ಸ್ಮಾರ್ಟ್‌ಫೋನ್‌ಗಳ ಕ್ಯಾಮೆರಾ ಪರೀಕ್ಷಿಸುವ ಯಂತ್ರಗಳನ್ನು ತಯಾರಿಸುವ ಘಟಕ ಆರಂಭಿಸುವ ಯೋಜನೆಯ ಒಪ್ಪಂದಕ್ಕೆ ದಕ್ಷಿಣ ಕೊರಿಯಾದ ಹೈವಿಷನ್ ಕಂಪನಿಯು ಕರ್ನಾಟಕ ಸರ್ಕಾರದ ಜತೆ ಶುಕ್ರವಾರ ಸೋಲ್‌ನಲ್ಲಿ ಒಪ್ಪಂದಕ್ಕೆ ಸಹಿ ಹಾಕಿದೆ. ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಹೈವಿಷನ್‌ ಸಿಇಒ ಚೋಯಿ ಡೂ-ವನ್‌ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.

VISTARANEWS.COM


on

A high level delegation of the state led by Minister MB Patil
Koo

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್‌ಫೋನ್‌ಗಳ ಕ್ಯಾಮೆರಾ ಪರೀಕ್ಷಿಸುವ ಯಂತ್ರಗಳನ್ನು ತಯಾರಿಸುವ ಘಟಕ ಆರಂಭಿಸುವ ಯೋಜನೆಯ ಒಪ್ಪಂದಕ್ಕೆ ದಕ್ಷಿಣ ಕೊರಿಯಾದ ಹೈವಿಷನ್ ಕಂಪನಿಯು ಕರ್ನಾಟಕ ಸರ್ಕಾರದ ಜತೆ ಶುಕ್ರವಾರ ಸೋಲ್‌ನಲ್ಲಿ ಒಪ್ಪಂದಕ್ಕೆ ಸಹಿ (Foreign Investment) ಹಾಕಿದೆ.

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಹೈವಿಷನ್‌ ಸಿಇಒ ಚೋಯಿ ಡೂ-ವನ್‌ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಕ್ಯಾಮೆರಾ ಇನ್‌ಸ್ಪೆಕ್ಷನ್‌ ಮಷಿನ್ಸ್‌ ತಯಾರಿಕಾ ಘಟಕವು ಫಾಕ್ಸ್‌ಕಾನ್‌ನ ತಯಾರಿಕಾ ಘಟಕದ ಸಮೀಪ ಕಾರ್ಯಾರಂಭ ಮಾಡಲಿದೆ. ಇದರಿಂದ ರಾಜ್ಯದ ಎಲೆಕ್ಟ್ರಾನಿಕ್ಸ್‌ ತಯಾರಿಕಾ ಉದ್ಯಮದ ಬೆಳವಣಿಗೆಗೆ ನೆರವಾಗಲಿದೆ.

ಎಲೆಕ್ಟ್ರಾನಿಕ್ಸ್‌ ವಲಯಕ್ಕೆ ದೇಶದಲ್ಲಿಯೇ ಗರಿಷ್ಠ ಮಟ್ಟವಾಗಿರುವ ಶೇ 30-35ರಷ್ಟು ಸಬ್ಸಿಡಿಯನ್ನು ಕರ್ನಾಟಕ ಸರ್ಕಾರ ನೀಡುತ್ತಿರುವುದನ್ನು ಸಚಿವ ಎಂ.ಬಿ. ಪಾಟೀಲ ಅವರು, ಹೈವಿಷನ್‌ ಕಂಪನಿಯ ಮುಖ್ಯಸ್ಥರ ಗಮನಕ್ಕೆ ತಂದರು.

ರಾಜ್ಯದ ಉನ್ನತ ಮಟ್ಟದ ನಿಯೋಗವು ಎಲ್ಎಕ್ಸ್ ಇಂಟರ್‌ನ್ಯಾಷನಲ್ ಕಾರ್ಪ್‌, ಸ್ಯಾಮ್‌ಸಂಗ್‌ ಎಲೆಕ್ಟ್ರಾನಿಕ್ಸ್‌ ಮುಖ್ಯಸ್ಥರನ್ನೂ ಭೇಟಿಯಾಗಿ ಮಾತುಕತೆ ನಡೆಸಿತು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

ಎಲ್ಎಕ್ಸ್ ಇಂಟರ್‌ನ್ಯಾಷನಲ್ ಕಾರ್ಪ್‌ ಮುಖ್ಯಸ್ಥರ ಭೇಟಿ ಸಂದರ್ಭದಲ್ಲಿ ವಿದ್ಯುತ್‌ ಚಾಲಿತ ವಾಹನ, ಬ್ಯಾಟರಿ ತಯಾರಿಕೆ ಸಾಧ್ಯತೆ ಮತ್ತು ವಹಿವಾಟು ವಿಸ್ತರಣೆ ಅವಕಾಶಗಳ ಬಗ್ಗೆ ಸಚಿವ ಎಂ.ಬಿ. ಪಾಟೀಲ ಚರ್ಚೆ ನಡೆಸಿದರು.

ಎಲ್‌ಜಿ ಕಾರ್ಪ್‌ನ ಪ್ರತ್ಯೇಕ ಕಂಪನಿಯಾಗಿರುವ ಎಲ್‌ಎಕ್ಸ್‌ ಇಂಟರ್‌ನ್ಯಾಷನಲ್‌ ಕಾರ್ಪ್‌ನ ವಿಭಿನ್ನ ವಹಿವಾಟುಗಳಾದ ಎಲ್‌ಎಕ್ಸ್‌ ಸೆಮಿಕಾನ್‌, ಎಲ್‌ಎಕ್ಸ್‌ ಗ್ಲಾಸ್‌, ಎಲ್‌ಎಕ್ಸ್‌ ಪ್ಲಾಸ್ಟಿಕ್‌ ಮತ್ತು ಎಲ್‌ಎಕ್ಸ್‌ ಹೌಸಸ್‌ ವಹಿವಾಟು ಮತ್ತು ಎಲ್‌ಜಿ ಎನರ್ಜಿ ಸೊಲುಷನ್ಸ್‌ ಜತೆಗಿನ ಸಹಯೋಗದ ಬಗ್ಗೆ ಚರ್ಚೆ ನಡೆಸಲಾಯಿತು.

ಸ್ಯಾಮ್‌ಸಂಗ್‌ ಎಲೆಕ್ಟ್ರಾನಿಕ್ಸ್‌ ಮುಖ್ಯಸ್ಥರ ಜತೆಗಿನ ಭೇಟಿ ಸಂದರ್ಭದಲ್ಲಿ ಸ್ಮಾರ್ಟ್‌ಫೋನ್‌, ಎಲೆಕ್ಟ್ರಾನಿಕ್ಸ್‌, ಬ್ಯಾಟರಿ ಸೆಲ್‌ ತಯಾರಿಕೆಗೆ ಕರ್ನಾಟಕದಲ್ಲಿ ಇರುವ ಅನುಕೂಲತೆಗಳನ್ನು ನಿಯೋಗವು ಮನವರಿಕೆ ಮಾಡಿಕೊಟ್ಟಿತು. ಸೆಮಿಕಂಡಕ್ಟರ್, ವಿದ್ಯುತ್‌ಚಾಲಿತ ವಾಹನ, ಜೈವಿಕ ತಂತ್ರಜ್ಞಾನ ವಲಯಗಳಲ್ಲಿ ಕರ್ನಾಟಕವು ಉತ್ಕೃಷ್ಟ ಮೂಲಸೌಲಭ್ಯ, ಪರಿಣತ ತಂತ್ರಜ್ಞರು, ಪೂರಕ ಪರಿಸರದ ನೆರವಿನಿಂದ ಜಾಗತಿಕ ಆವಿಷ್ಕಾರದಲ್ಲಿ ಮುನ್ನಡೆ ಸಾಧಿಸುತ್ತಿರುವುದನ್ನು ವಿವರಿಸಲಾಗಿದೆ.

ಇದನ್ನೂ ಓದಿ: Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

ಭಾರತದ ರಾಯಭಾರಿಗೆ ಕೃತಜ್ಞತೆ ಸಲ್ಲಿಕೆ

ವಿವಿಧ ಕಂಪನಿಗಳ ಜತೆಗಿನ ಭೇಟಿ ಮತ್ತು ಸೋಲ್‌ನಲ್ಲಿ ಏರ್ಪಡಿಸಿದ್ದ ರೋಡ್‌ಷೋದ ಯಶಸ್ಸಿಗೆ ಸಹಕರಿಸಿದ ದಕ್ಷಿಣ ಕೊರಿಯಾದಲ್ಲಿನ ಭಾರತದ ರಾಯಭಾರಿ ಅಮಿತ್‌ ಕುಮಾರ್‌ ಅವರಿಗೆ ಸಚಿವ ಎಂ.ಬಿ. ಪಾಟೀಲ್‌ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

Continue Reading

ಕರ್ನಾಟಕ

Foreign Investment: ರಾಜ್ಯದಲ್ಲಿ ವಾಹನ ಬಿಡಿಭಾಗ ತಯಾರಿಕೆ; ಬಂಡವಾಳ ಹೂಡಿಕೆಗೆ ದ.ಕೊರಿಯಾ ಒಲವು

Foreign Investment: ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಸೋಮವಾರ ಸೋಲ್‌ನಲ್ಲಿ ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌, ಎಚ್‌ಎಲ್‌ ಮಾಂಡೊ ಕಾರ್ಪೊರೇಷನ್‌, ನಿಫ್ಕೊ, ಡಿಎನ್‌ ಸೊಲುಷನ್ಸ್‌ ಮತ್ತು ಹುಂಡೈ ಮೋಟರ್ಸ್‌ನ ಮುಖ್ಯಸ್ಥರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು.

VISTARANEWS.COM


on

Manufacturing of auto parts in the state Increased propensity for capital investment
Koo

ಬೆಂಗಳೂರು: ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ (Foreign Investment) ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಸೋಮವಾರ ಸೋಲ್‌ನಲ್ಲಿ ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌, ಎಚ್‌ಎಲ್‌ ಮಾಂಡೊ ಕಾರ್ಪೊರೇಷನ್‌, ನಿಫ್ಕೊ, ಡಿಎನ್‌ ಸೊಲುಷನ್ಸ್‌ ಮತ್ತು ಹುಂಡೈ ಮೋಟರ್ಸ್‌ನ ಮುಖ್ಯಸ್ಥರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು.

ಜಪಾನಿನ ಐದು ದಿನಗಳ ಯಶಸ್ವಿ ಭೇಟಿ ಪೂರ್ಣಗೊಳಿಸಿ ದಕ್ಷಿಣ ಕೊರಿಯಾಕ್ಕೆ ತೆರಳಿರುವ ನಿಯೋಗವು ಈ ತಿಂಗಳ 5 ರವರೆಗೆ ಅಲ್ಲಿನ ಬಹುರಾಷ್ಟ್ರೀಯ ಕಂಪನಿಗಳ ಜತೆ ಸಮಾಲೋಚನೆ ನಡೆಸಿ ಬಂಡವಾಳ ಹೂಡಿಕೆ ಆಕರ್ಷಿಸಲಿದೆ.

ರಾಜ್ಯದಲ್ಲಿ ವಾಹನ ಬಿಡಿಭಾಗ, ಜವಳಿ ಉತ್ಪನ್ನ, ನವೀಕರಿಸಬಹುದಾದ ಇಂಧನ, ಮಷಿನ್‌ಟೂಲ್ಸ್‌ ತಯಾರಿಕಾ ವಲಯಗಳಲ್ಲಿ ಬಂಡವಾಳ ಹೂಡಿಕೆ ಹೆಚ್ಚಿಸಲು, ವಹಿವಾಟು ವಿಸ್ತರಿಸಲು ದಕ್ಷಿಣ ಕೊರಿಯಾದ ಈ ಬಹುರಾಷ್ಟ್ರೀಯ ಕಂಪನಿಗಳು ತೀವ್ರ ಆಸಕ್ತಿ ವ್ಯಕ್ತಪಡಿಸಿವೆ.

ಇದನ್ನೂ ಓದಿ: Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

ರಾಜ್ಯದಲ್ಲಿ ವಿದ್ಯುತ್‌ಚಾಲಿತ ವಾಹನಗಳ (ಇವಿ) ಮಾರುಕಟ್ಟೆಯು ವ್ಯಾಪಕವಾಗಿ ವಿಸ್ತರಣೆ ಆಗುತ್ತಿರುವುದು ಮತ್ತು ಭಾರತದಲ್ಲಿನ ತಯಾರಿಕಾ ಘಟಕಗಳಲ್ಲಿ ʼಇವಿʼಗಳನ್ನು ತಯಾರಿಸುವ ಬಗ್ಗೆ ಹುಂಡೈ ಮುಖ್ಯಸ್ಥರ ಜತೆಗಿನ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.

ರಾಜ್ಯದಲ್ಲಿ ಕೈಗಾರಿಕಾ ಅಶಾಂತಿ (ಕಾರ್ಮಿಕರ ವಿವಾದಗಳು) ಕಡಿಮೆ ಪ್ರಮಾಣದಲ್ಲಿ ಇರುವುದು ಮತ್ತು ಪೂರೈಕೆ ಸರಪಣಿಯಲ್ಲಿ ಸ್ಥಿರತೆ ಇರುವುದನ್ನು ಸಚಿವರು ಹುಂಡೈ ಕಂಪನಿಯ ಪ್ರಮುಖರ ಗಮನಕ್ಕೆ ತಂದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ವಾಹನಗಳ ಪ್ಲಾಸ್ಟಿಕ್‌ ಬಿಡಿಭಾಗ ತಯಾರಿಸುವ ಘಟಕ ಸ್ಥಾಪಿಸಲಿರುವ ನಿಫ್ಕೊ ಕೊರಿಯಾ ಕಂಪನಿಗೆ ಅಗತ್ಯವಾದ ಭೂಮಿ ಸ್ವಾಧೀನ ಮತ್ತು ಇತರ ಅನುಮೋದನೆಗಳಿಗೆ ರಾಜ್ಯ ಸರ್ಕಾರ ತ್ವರಿತವಾಗಿ ಸ್ಪಂದಿಸಲಿದೆ. ಕಾರ್ಖಾನೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.

ರಾಜ್ಯದಲ್ಲಿ ಫೈಬರ್‌ ಆಪ್ಟಿಕ್‌ ಅಳವಡಿಕೆ ಯೋಜನೆಗಳು ಮತ್ತು ವಿದ್ಯುತ್‌ಚಾಲಿತ ವಾಹನಗಳ (ಇವಿ) ಬಳಕೆ ಹೆಚ್ಚಿಸುವ ಕ್ಷೇತ್ರಗಳಲ್ಲಿ ವಹಿವಾಟು ನಡೆಸಲು ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌ ಇಂಗಿತ ವ್ಯಕ್ತಪಡಿಸಿದೆ.

ಕಂಪನಿಯ ಉಪಾಧ್ಯಕ್ಷ ಹಾಂಗ್‌ ಸಂಗ್‌ ಅಹ್ನ್‌ ಅವರು ರಾಜ್ಯದ ನಿಯೋಗದ ಜತೆಗಿನ ಮಾತುಕತೆಯಲ್ಲಿ ಭಾಗಿಯಾಗಿದ್ದರು. ಟೈರ್‌ ಕೋರ್ಡ್ಸ್‌ ತಯಾರಿಕೆಗೆ ಭಾರತವನ್ನು ಪ್ರಮುಖ ನೆಲೆಯನ್ನಾಗಿ ಅಭಿವೃದ್ಧಿಪಡಿಸಲು ಕಂಪನಿಯ ಉದ್ದೇಶಿಸಿದೆ. ಭಾರತದಲ್ಲಿ ಪರಿಸರ ಸ್ನೇಹಿ ಸರಕುಗಳು ಹಾಗೂ ಸುಧಾರಿತ ಜವಳಿ ಉತ್ಪನ್ನಗಳನ್ನು ತಯಾರಿಸುವ ವಹಿವಾಟು ವಿಸ್ತರಿಸುವ ಅವಕಾಶಗಳನ್ನು ಕಂಪನಿಯು ಪರಿಶೀಲಿಸುತ್ತಿದೆ.

ಇದನ್ನೂ ಓದಿ: Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

ರಾಜ್ಯದಲ್ಲಿನ ನವೀಕರಿಸಬಹುದಾದ ಇಂಧನ ವಲಯದಲ್ಲಿನ ಭವಿಷ್ಯದ ವಿಸ್ತರಣೆ ಬಗ್ಗೆ ಸೌರಕೋಶಗಳ ಸೆಮಿಕಂಡಕ್ಟರ್‌ ತಯಾರಿಸುವ ಒಸಿಐ ಹೋಲ್ಡಿಂಗ್ಸ್‌ ಕಂಪನಿ ಜೊತೆ ಸಚಿವರು ಮಾತುಕತೆ ನಡೆಸಿದರು.

ಸೌರಶಕ್ತಿ ಫಲಕಗಳನ್ನು ತಯಾರಿಸುವ ಯೋಜನೆಗಳಿಗೆ ರಾಜ್ಯ ಸರ್ಕಾರವು ಕೊಡಮಾಡುತ್ತಿರುವ ಉತ್ತೇಜನಗಳನ್ನು ನಿಯೋಗವು ಕಂಪನಿಯ ಪ್ರಮುಖರಿಗೆ ಮನವರಿಕೆ ಮಾಡಿಕೊಟ್ಟಿತು.

ವಾಹನ ಬಿಡಿಭಾಗ ತಯಾರಿಸುವ ಎಚ್‌ಎಲ್‌ ಮಂಡೊ ಕಾರ್ಪೊರೇಷನ್ನಿನ ಸಿಎಫ್‌ಒ ಲೀ ಚುಲ್‌ ಮತ್ತು ನಿರ್ದೇಶಕ ಕಿಮ್‌ ಇವುನ್‌ ಸಂಗ್‌ ಅವರನ್ನು ರಾಜ್ಯದ ನಿಯೋಗವು ಭೇಟಿಯಾಗಿತ್ತು.

ಇದನ್ನೂ ಓದಿ: Kannada New Movie: ಪ್ರವೀಣ್ ತೇಜ್ ಅಭಿನಯದ ʼಜಿಗರ್ ಚಿತ್ರ ಜುಲೈ 5ರಂದು ಬಿಡುಗಡೆ

ಬೆಂಗಳೂರಿನಲ್ಲಿ ತಯಾರಿಕಾ ಘಟಕ ಹೊಂದಿರುವ ಕಂಪನಿಯು ರಾಜ್ಯದಲ್ಲಿ ಇನ್ನಷ್ಟು ಬಂಡವಾಳ ಹೂಡಿಕೆ ಮಾಡಲು ಉತ್ಸುಕತೆ ತೋರಿದೆ. ವಿದ್ಯುತ್‌ಚಾಲಿತ ಸೇರಿದಂತೆ ರಾಜ್ಯದಲ್ಲಿನ ಒಟ್ಟಾರೆ ವಾಹನ ಉದ್ಯಮ ಕ್ಷೇತ್ರದಲ್ಲಿನ ಅನುಕೂಲತೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರಾಜ್ಯದ ನಿಯೋಗವು ಆಹ್ವಾನ ನೀಡಿದೆ. ಮಷೀನ್‌ಟೂಲ್ಸ್‌ ತಯಾರಿಕಾ ಕಂಪನಿ ಡಿಎನ್‌ ಸೊಲುಷನ್ಸ್‌, ಬೆಂಗಳೂರು ಬಳಿ 25 ಎಕರೆ ಪ್ರದೇಶದಲ್ಲಿ ತನ್ನ ತಯಾರಿಕಾ ಘಟಕ ಆರಂಭಿಸಲಿದೆ.

Continue Reading

ಕರ್ನಾಟಕ

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Foreign Investment: ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಜಪಾನ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ರೋಡ್‌ಶೋದಲ್ಲಿ ಜಪಾನಿನ 150 ಕ್ಕೂ ಹೆಚ್ಚು ಕಂಪನಿಗಳಿಗೆ ರಾಜ್ಯದಲ್ಲಿನ ಬಂಡವಾಳ ಹೂಡಿಕೆಯ ಅವಕಾಶಗಳ ಪರಿಚಯ ಮಾಡಿಕೊಟ್ಟಿತು. ನಿಯೋಗದ ನೇತೃತ್ವ ವಹಿಸಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌, ರಾಜ್ಯದಲ್ಲಿನ ಸದೃಢ ಕೈಗಾರಿಕಾ ಪರಿಸರ ವ್ಯವಸ್ಥೆ, ಉದ್ಯಮಕ್ಕೆ ಅನುಕೂಲಕರ ವಾತಾವರಣ ಮತ್ತು ಸರ್ಕಾರದ ಪ್ರಗತಿಪರ ನೀತಿಗಳನ್ನು ಮನದಟ್ಟು ಮಾಡಿಕೊಟ್ಟರು.

VISTARANEWS.COM


on

minister mb patil visit japan and discuss about investment in Karnataka
Koo

ಟೋಕಿಯೊ: ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಜಪಾನ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ರೋಡ್‌ಶೋದಲ್ಲಿ ಜಪಾನಿನ 150ಕ್ಕೂ ಹೆಚ್ಚು ಕಂಪನಿಗಳಿಗೆ ರಾಜ್ಯದಲ್ಲಿನ ಬಂಡವಾಳ ಹೂಡಿಕೆಯ (Foreign Investment) ಅವಕಾಶಗಳ ಪರಿಚಯ ಮಾಡಿಕೊಟ್ಟಿತು.

ಕರ್ನಾಟಕ ಸರ್ಕಾರದ ಉನ್ನತ ಮಟ್ಟದ ನಿಯೋಗವು ಜಪಾನ್‌ ಭೇಟಿಯ ಎರಡನೇ ದಿನ ಪರಿಸರ ಸಂರಕ್ಷಣೆ ಉಪಕರಣ ತಯಾರಿಸುವ ಬಹುರಾಷ್ಟ್ರೀಯ ಕಂಪನಿ ಡೈಕಿ ಆ್ಯಕ್ಸಿಸ್‌, ಕೈಗಾರಿಕಾ ಯಂತ್ರೋಪಕರಣ ತಯಾರಿಸುವ ಸುಮಿಟೊಮೊ ಹೆವಿ ಇಂಡಸ್ಟ್ರೀಸ್‌ (ಎಸ್‌ಎಚ್‌ಐ), ಸೆಮಿಕಂಡಕ್ಟರ್‌ ಪರಿಕರ ತಯಾರಿಸುವ ರೆನೆಸಸ್‌ ಎಲೆಕ್ಟ್ರಾನಿಕ್ಸ್‌ ಕಾರ್ಪೊರೇಷನ್‌ ಕಂಪನಿ ಹಾಗೂ ಜಪಾನ್‌ ಸರ್ಕಾರದ ಸಣ್ಣ ಕೈಗಾರಿಕೆಗಳ ಸಂಘಟನೆ ʼಎಸ್‌ಎಂಆರ್‌ಜೆʼ ಮುಖ್ಯಸ್ಥರ ಜತೆ ಸಮಾಲೋಚನೆ ನಡೆಸಿತು.

ಈ ಸಭೆಗಳಲ್ಲಿನ ಮಾತುಕತೆಗಳು ರಾಜ್ಯದಲ್ಲಿನ ಬಂಡವಾಳ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸಲು ಮತ್ತು ಕರ್ನಾಟಕ ಮತ್ತು ಜಪಾನ್ ನಡುವಣ ಕೈಗಾರಿಕಾ ಸಹಯೋಗ ಬಲಪಡಿಸುವ ಬಗ್ಗೆ ಕೇಂದ್ರೀಕೃತಗೊಂಡಿದ್ದವು.

ಇದನ್ನೂ ಓದಿ: Bengaluru Power Cut: ಜೂ.27ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ನಿಯೋಗದ ನೇತೃತ್ವ ವಹಿಸಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಅವರು, ರಾಜ್ಯದಲ್ಲಿನ ಸದೃಢ ಕೈಗಾರಿಕಾ ಪರಿಸರ ವ್ಯವಸ್ಥೆ, ಉದ್ಯಮಕ್ಕೆ ಅನುಕೂಲಕರ ವಾತಾವರಣ ಮತ್ತು ಸರ್ಕಾರದ ಪ್ರಗತಿಪರ ನೀತಿಗಳನ್ನು ಮನದಟ್ಟು ಮಾಡಿಕೊಟ್ಟರು.

ಡೈಕಿ ಆ್ಯಕ್ಸಿಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ನ ನಿರ್ದೇಶಕ ರಿಯೊ ರಿಯೊಟಾ ವಾಜಾ ಅವರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಸುಸ್ಥಿರ ಬೆಳವಣಿಗೆ, ನೀರಿನ ಉಳಿತಾಯ, ಕೊಳಚೆ ನೀರು ನಿರ್ವಹಣಾ ಘಟಕ (ಎಸ್‌ಟಿಪಿ) ಸ್ಥಾಪಿಸುವ ಕುರಿತು ಮಾತುಕತೆ ನಡೆಸಿದರು. ಡೈಕಿ ಆ್ಯಕ್ಸಿಸ್‌ 100 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕದಲ್ಲಿ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪಿಸುವ ಒಪ್ಪಂದಕ್ಕೆ ಈ ಸಭೆಯಲ್ಲಿ ಸಹಿ ಹಾಕಲಾಯಿತು.

ರೆನೆಸಸ್‌ ಎಲೆಕ್ಟ್ರಾನಿಕ್ಸ್‌ ಕಾರ್ಪೊರೇಷನ್‌ನ ಸಿಇಒ ಚಾರ್ಲ್ಸ್‌ಕವಾಶಿಮಾ ಅವರನ್ನು ಭೇಟಿ ಮಾಡಿದ ನಿಯೋಗವು ವಿದೇಶಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳು ಮತ್ತು ಸವಾಲುಗಳನ್ನು ಚರ್ಚಿಸಿತು.

ಸುಮಿಟೊಮೊ ಹೆವಿ ಇಂಡಸ್ಟ್ರೀಸ್‌ನ (ಎಸ್‌ಎಚ್‌ಐ) ಚೇರ್ಮನ್‌ ಆಫ್‌ ರಿಪ್ರೆಸೆಂಟೇಟಿವ್‌ ಡೈರೆಕ್ಟರ್‌ ತೆತ್ಸುಯ ಒಕಾಮುರ ಮತ್ತು ಕಾರ್ಯನಿರ್ವಾಹಕ ಉಪಾಧ್ಯಕ್ಷ ತೋಷಿಹರು ತನಾಕಾ ಅವರನ್ನು ರಾಜ್ಯದ ನಿಯೋಗವು ಭೇಟಿಯಾಗಿತ್ತು. ರಾಜ್ಯದಲ್ಲಿ ಕಂಪನಿಯ ವಹಿವಾಟಿನ ವಿಸ್ತರಣೆಗೆ ಅಗತ್ಯ ಬೆಂಬಲ ನೀಡುವುದಾಗಿ ನಿಯೋಗವು ಭರವಸೆ ನೀಡಿತು. 2024 ರ ಅಂತ್ಯದ ವೇಳೆಗೆ ಎಸ್‌ಎಚ್‌ಐ ಬೆಂಗಳೂರಿನಲ್ಲಿ ತನ್ನ ಪ್ರಧಾನ ಕಚೇರಿ ಆರಂಭಿಸಲಿದೆ.

ಜಪಾನ್‌ ಸರ್ಕಾರದ ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಮತ್ತು ಪ್ರಾದೇಶಿಕ ಆವಿಷ್ಕಾರ ಸಂಸ್ಥೆಯ (ಎಸ್‌ಎಂಆರ್‌ಜೆ) ಕಾರ್ಯನಿರ್ವಾಹಕ ಉಪಾಧ್ಯಕ್ಷ ತೊಮೊಹಿರೊ ಕನೆಕೊ ಅವರ ಜತೆ ನಿಯೋಗವು ಸಮಾಲೋಚನೆ ನಡೆಸಿತು.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ವಾಹನ ಬಿಡಿಭಾಗ, ಎಲೆಕ್ಟ್ರಾನಿಕ್ಸ್ , ವೈಮಾಂತರಿಕ್ಷ ಹಾಗೂ ರಕ್ಷಣೆ, ಆಹಾರ ಸಂಸ್ಕರಣೆ, ಭಾರಿ ಯಂತ್ರೋಪಕರಣ ತಯಾರಿಕೆ ಕ್ಷೇತ್ರಗಳಲ್ಲಿ ತಮ್ಮ ವಹಿವಾಟು ವಿಸ್ತರಿಸಲು ʼಎಸ್‌ಎಂಆರ್‌ಜೆʼಗೆ ಅಗತ್ಯ ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಸಚಿವರು ಭರವಸೆ ನೀಡಿದರು. ಜಪಾನಿನ 26,000 ʼಎಸ್‌ಎಂಇʼಗಳ ಸಹಯೋಗದಲ್ಲಿ ಕರ್ನಾಟಕದ ʼಎಸ್‌ಎಂಇʼಗಳ ಬೆಳವಣಿಗೆ ಉತ್ತೇಜಿಸಲು ನೆರವಾಗುವ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಇದನ್ನೂ ಓದಿ: CM Siddaramaiah: ಅಲೆಮಾರಿ ಕುರಿಗಾಹಿಗಳ ಮೇಲಿನ ದೌರ್ಜನ್ಯ ತಡೆಯಲು ಕಾಯ್ದೆ; ಸಿದ್ದರಾಮಯ್ಯ

ಈ ವೇಳೆ ಜಪಾನ್‌ ಮತ್ತು ಭಾರತದ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ (ಎಸ್‌ಎಂಇ) ಮುಖ್ಯಸ್ಥರ ಸಭೆಯನ್ನು ಆಗಸ್ಟ್‌ನಲ್ಲಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಕರ್ನಾಟಕದಲ್ಲಿ ಜಪಾನಿನ ʼಎಸ್‌ಎಂಇʼಗಳು ತಮ್ಮ ವಹಿವಾಟು ವಿಸ್ತರಿಸಲು ನಿಯೋಗವು ಆಹ್ವಾನ ನೀಡಿತು.

ಸೆಮಿಕಂಡಕ್ಟರ್‌ ಪರಿಕರಗಳನ್ನು ತಯಾರಿಸುವ ಬಹುರಾಷ್ಟ್ರೀಯ ಕಂಪನಿ ರೆನೆಸಸ್‌ ಎಲೆಕ್ಟ್ರಾನಿಕ್ಸ್‌ ಕಾರ್ಪೊರೇಷನ್‌ನ ಹಿರಿಯ ನಿರ್ದೇಶಕ ಷೊ ಒಜಾಕಿ ಅವರನ್ನು ನಿಯೋಗವು ಭೇಟಿಯಾಗಿತ್ತು. ಎಲೆಕ್ಟ್ರಾನಿಕ್ಸ್‌ ವಲಯಕ್ಕೆ ದೇಶದಲ್ಲಿಯೇ ಗರಿಷ್ಠ ಪ್ರಮಾಣದ ಸಬ್ಸಿಡಿ ನೀಡುತ್ತಿರುವ ಕರ್ನಾಟಕದಲ್ಲಿನ ಎಲೆಕ್ಟ್ರಾನಿಕ್ಸ್‌ ಸಿಸ್ಟಮ್‌ ಡಿಸೈನ್‌ ಮತ್ತು ತಯಾರಿಕಾ (ಇಎಸ್‌ಡಿಎಂ) ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಿಯೋಗವು ಮನವಿ ಮಾಡಿಕೊಂಡಿತು.

ಕರ್ನಾಟಕದ ನಿಯೋಗವು ಟೋಕಿಯೋದಲ್ಲಿನ ಕನ್ನಡ ಸಂಘದ ಪ್ರತಿನಿಧಿಗಳ ಜತೆ ಬೆಳಗಿನ ಉಪಾಹಾರದ ಸಂದರ್ಭದಲ್ಲಿ ಸಭೆ ನಡೆಸಿತು.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು.

Continue Reading
Advertisement
Paris Olympics 2024
ಪ್ರಮುಖ ಸುದ್ದಿ24 mins ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ34 mins ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ45 mins ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ1 hour ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ1 hour ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ2 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ2 hours ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ2 hours ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ2 hours ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ3 hours ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ10 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ11 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌