T20 World Cup | ಇಂಗ್ಲೆಂಡ್‌ ವಿರುದ್ಧವೂ ಪಂತ್‌ ಕಣಕ್ಕಿಳಿಯುವ ಸುಳಿವು ನೀಡಿದ ಡ್ರಾವಿಡ್‌ - Vistara News

Latest

T20 World Cup | ಇಂಗ್ಲೆಂಡ್‌ ವಿರುದ್ಧವೂ ಪಂತ್‌ ಕಣಕ್ಕಿಳಿಯುವ ಸುಳಿವು ನೀಡಿದ ಡ್ರಾವಿಡ್‌

ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದ ರಿಷಭ್‌ ಪಂತ್‌ಗೆ ಕೋಚ್‌ ದ್ರಾವಿಡ್‌ ಬೆಂಬಲ ವ್ಯಕ್ತಪಡಿಸಿದ್ದಾರೆ.

VISTARANEWS.COM


on

pant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಅಡಿಲೇಡ್‌: ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ಎಡವಿದ ಟೀಮ್‌ ಇಂಡಿಯಾ ಯುವ ವಿಕೆಟ್‌ ಕೀಪರ್‌-ಎಡಗೈ ಬ್ಯಾಟರ್‌ ರಿಷಭ್‌ ಪಂತ್‌ ಇಂಗ್ಲೆಂಡ್‌ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿಯೂ ಕಣಕ್ಕಿಳಿಯುವ ಬಗ್ಗೆ ತಂಡದ ಕೋಚ್ ರಾಹುಲ್‌ ದ್ರಾವಿಡ್‌ ಸುಳಿವು ನೀಡಿದ್ದಾರೆ.

ಟಿ20 ವಿಶ್ವ ಕಪ್‌ನಲ್ಲಿ ಭಾರತ ಆಡಿದ ಮೊದಲ ನಾಲ್ಕು ಪಂದ್ಯಗಳಲ್ಲಿ ಅನುಭವಿ ಹಿರಿಯ ಆಟಗಾರ ದಿನೇಶ್‌ ಕಾರ್ತಿಕ್‌ ಆಡಿದ್ದರೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದ್ದರು. ಈ ನಿಟ್ಟಿನಲ್ಲಿ ಕ್ರಿಕೆಟ್‌ ಪಂಡಿತರು ಪಂತ್‌ಗೆ ಅವಕಾಶ ನೀಡುವಂತೆ ಒತ್ತಾಸೆ ಮಾಡಿದ್ದರು. ಅದರಂತೆ ಜಿಂಬಾಬ್ವೆ ವಿರುದ್ಧದ 5ನೇ ಪಂದ್ಯದಲ್ಲಿ ಪಂತ್‌ಗೆ ಅವಕಾಶ ನೀಡಲಾಯಿತು. ಆದರೆ ಪಂತ್‌ ಈ ಪಂದ್ಯದಲ್ಲಿ 3 ರನ್‌ಗೆ ವಿಕೆಟ್‌ ಒಪ್ಪಿಸಿ ನಿರಾಶೆ ಮೂಡಿಸಿದರು. ಪಂತ್‌ ಅವರ ಈ ವೈಫಲ್ಯಕ್ಕೆ ಎಲ್ಲಡೆಯಿಂದ ವಿರೋಧ ವ್ಯಕ್ತವಾಗಿತ್ತು. ಪಂತ್‌ಗೆ ಇನ್ನೂ ಬುದ್ಧಿ ಬಂದಿಲ್ಲ ಎಂಬ ಟೀಕೆಗಳು ಟ್ವಿಟರ್‌ನಲ್ಲಿ ಕೇಳಿಬಂದಿತ್ತು.

ಇದೀಗ ಪಂತ್‌ ವಿಚಾರದಲ್ಲಿ ಮಾತನಾಡಿದ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌, ಆಟಗಾರರ ಬಗ್ಗೆ ಒಂದು ಪಂದ್ಯದಿಂದ ನಿರ್ಧರಿಸಲಾಗದು. ಒಂದು ಪಂದ್ಯದ ವೈಫಲ್ಯವನ್ನು ಮುಂದಿಟ್ಟು ಬಳಿಕದ ಪಂದ್ಯದಲ್ಲಿ ಆಡಿಸಬೇಕೆ, ಬೇಡವೇ ಎಂಬ ನಿರ್ಧಾರವಾಗದು. ನಾವೆಂದು ಪಂತ್‌ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿಲ್ಲ. ನಮ್ಮ ತಂಡದ 15 ಆಟಗಾರರ ಬಗ್ಗೆ ನಮಗೆ ವಿಶ್ವಾಸವಿದೆ. ಆದರೆ 11 ಆಟಗಾರರನ್ನು ಮಾತ್ರ ಆಡಿಸಲು ಸಾಧ್ಯ. ಕೆಲ ಪರಿಸ್ಥಿತಿಗೆ ತಕ್ಕಂತೆ ಆಟಗಾರರನ್ನು ಆಡಿಸುತ್ತೇವೆ ಎಂದು ಹೇಳುವ ಮೂಲಕ ಪಂತ್‌ಗೆ ಮುಂದಿನ ಪಂದ್ಯದಲ್ಲಿಯೂ ಅವಕಾಶ ನೀಡುವ ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | T20 World Cup | ಈ ತಂಡ ವಿಶ್ವ ಕಪ್‌ ಗೆಲ್ಲುವುದು ಖಚಿತ; ಎಬಿಡಿ ಆಯ್ಕೆಯ ತಂಡ ಯಾವುದು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ

VISTARANEWS.COM


on

ರಾಜ್ಯದ ಎರಡು ವಿಧಾನಸಭಾ ಕ್ಷೇತಗಳಿಗೆ ನಡೆದ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌, ಬಿಜೆಪಿ ನಡುವಿನ ನೇರ ಹಣಾಹಣಿಯಲ್ಲಿ ಯಾರಿಗೆ ಗೆಲುವು ಸಿಗಲಿದೆ ಎಂಬ ಪ್ರಶ್ನೆಗೆ ನಾಳೆ(ಮೇ.4) ಉತ್ತರ ಸಿಗಲಿದೆ. ಬೆಳಗ್ಗೆ 8 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಾರಂಭವಾಗಲಿದ್ದು, ಬಹುತೇಕ ಮಧ್ಯಾಹ್ನ 2 ಗಂಟೆಯೊಳಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ರ ಪುತ್ರ ಸಮರ್ಥ್‌ ಶಾಮನೂರು ಕಾಂಗ್ರೆಸ್‌ ಅಭ್ಯರ್ಥಿಯಾದ್ರೆ, ಬಿಜೆಪಿಯಿಂದ ಶ್ರೀನಿವಾಸ ದಾಸ್ ಕರಿಯಪ್ಪ ಕಣದಲ್ಲಿದ್ದಾರೆ.
ಬಾಗಲಕೋಟೆ ಶಾಸಕರಾಗಿದ್ದ ಎಚ್‌.ವೈ.ಮೇಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು, ಎಚ್‌.ವೈ.ಮೇಟಿ ಅವರ ಪುತ್ರ ಉಮೇಶ ಮೇಟಿ ಕಾಂಗ್ರೆಸ್‌ನಿಂದ ಕಣದಲ್ಲಿದ್ದಾರೆ. ಬಿಜೆಪಿಯಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ ಸ್ಪರ್ಧೆಯಲ್ಲಿದ್ದು ಯಾರ ಕೊರಳಿಗೆ ಜಯಮಾಲೆ ಬೀಳಲಿದೆ ಎಂಬುದು ಫಲಿತಾಂಶ ಬಂದ ನಂತರ ಗೊತ್ತಾಗಲಿದೆ. ಈಗಾಗಲೇ ಮತಎಣಿಕಾ ಕೇಂದ್ರಗಳ ಸುತ್ತ ಸೂಕ್ತ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Continue Reading

Latest

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

VISTARANEWS.COM


on

ದೇಶದ ಜನತೆಯ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ (ಮೇ.4) ಹೊರಬೀಳಲಿದೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನಸಭಾ ಕ್ಷೇತ್ರಗಳ ಮತಎಣಿಕೆ ನಾಳೆ (ಮೇ.4) ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಬಹುತೇಕ ಮಧ್ಯಾಹ್ನ 2 ಗಂಟೆಯೊಳಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ.

ಯಾರಿಗೆ ಪಶ್ಚಿಮ ಬಂಗಾಳ?
ಪಶ್ಚಿಮ ಬಂಗಾಳದಲ್ಲಿ ಈ ಬಾರಿ ತೃಣಮೂಲ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆದಿದ್ದು, ಯಾರಿಗೆ ವಿಜಯಲಕ್ಷ್ಮಿ ಒಲಿಯಲಿದ್ದಾಳೆ ಎಂಬುದು ನಾಳೆ ಮತಎಣಿಕೆಯ ನಂತರ ಗೊತ್ತಾಗಲಿದೆ. ರಾಜ್ಯದಲ್ಲಿ ನಾಲ್ಕನೇ ಬಾರಿ ಅಧಿಕಾರ ಹಿಡಿಯಲು ಮುಂದಾಗಿರುವ ಟಿಎಂಸಿಗೆ ಈ ಚುನಾವಣೆ “ಮಾಡು ಇಲ್ಲವೇ ಮಡಿ” ಎಂಬಂತಾಗಿದೆ. ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿಸಲೇಬೇಕೆಂದು ಪಣತೊಟ್ಟಿದ್ದ ಬಿಜೆಪಿ ನಾಯಕರು ಈ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದರು. ಈ ಬಾರಿ ಪಶ್ಚಿಮ ಬಂಗಾಳದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯ ಮತದಾನ ನಡೆದಿರುವುದು ಫಲಿತಾಂಶದ ಪರಿಣಾಮ ಬೀರಿರುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ವಿಧಾನಸಭಾ ಕ್ಷೇತ್ರಗಳಿದ್ದು, ಸರ್ಕಾರ ರಚನೆಗೆ ಯಾವುದೇ ಪಕ್ಷ 148 ಸ್ಥಾನಗಳನ್ನು ಪಡೆಯಬೇಕು. ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸ್ಪಷ್ಟ ಜನಾದೇಶ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.

ದ್ರಾವಿಡ ಕೋಟೆಯ ಅಧಿಪತಿ ಯಾರು..?
ತಮಿಳುನಾಡು ವಿಧಾನಸಭೆಗೆ ನಡೆದ ಚುನಾವಣೆ ದೇಶಾದ್ಯಂತ ಭಾರಿ ಕುತೂಹಲವನ್ನೇ ಮೂಡಿಸಿದೆ. ಇದುವರೆಗೆ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ನೇರ ಸ್ಪರ್ಧೆ ಇರುತ್ತಿತ್ತು. ಈ ಬಾರಿ ಚಿತ್ರನಟ ವಿಜಯ್‌ ಅವರ ಟಿವಿಕೆ ಪಕ್ಷ ಕಣದಲ್ಲಿದ್ದು, ಯಾರಿಗೆ ದ್ರಾವಿಡ ಕೋಟೆ ಒಲಿಯಲಿದೆ ಎನ್ನುವ ಪ್ರಶ್ನೆಗೆ ನಾಳೆಯ ಫಲಿತಾಂಶದ ಮೂಲಕ ಉತ್ತರ ಸಿಗಲಿದೆ. ಕೆಲವು ಮತದಾನೋತ್ತರ ಸಮೀಕ್ಷೆಗಳು ಆಡಳಿತಾರೂಢ ಡಿಎಂಕೆ ಪುನಃ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳಿವೆ. ಇದರ ನಡುವೆ ಆಶ್ಚರ್ಯ ಎಂಬಂತೆ ಕೆಲವು ಸಮೀಕ್ಷೆಗಳು ವಿಜಯ್‌ ನೇತೃತ್ವದ ಟಿವಿಕೆ ಬಹುಮತ ಪಡೆಯಲಿದೆ ಎಂದಿವೆ. ವಿಜಯ್‌ ಕಿಂಗ್‌ಮೇಕರ್‌ ಆಗುವ ಸಾಧ್ಯತೆಯ ಬಗ್ಗೆಯೂ ಕೆಲ ಸಮೀಕ್ಷೆಗಳು ಸುಳಿವು ನೀಡಿವೆ. ತಮಿಳುನಾಡಿನಲ್ಲಿ ಒಟ್ಟು 234 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತ ಪಡೆಯಲು 148 ಸ್ಥಾನಗಳ ಅಗತ್ಯವಿದೆ.

ಕೇರಳದಲ್ಲಿ ಜಯ ಯಾರಿಗೆ?
ದೇವರ ನಾಡು ಎಂದೇ ಕರೆಯಲ್ಪಡುವ ಕೇರಳದಲ್ಲಿ ಈ ಬಾರಿ ಅಧಿಕಾರ ಯಾರ ಪಾಲಾಗಲಿದೆ ಎಂಬ ಕುತೂಹಲಕ್ಕೆ ನಾಳೆ ತೆರೆಬೀಳಲಿದೆ. ಸತತ ಮೂರನೇ ಬಾರಿಗೆ ಅಧಿಕಾರಕ್ಕೇರಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಪ್ರಯತ್ನ ನಡೆಸಿದ್ರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸಹ ಈ ಬಾರಿಯ ಚುನಾವಣೆಯಲ್ಲಿ ತೀವ್ರ ಸ್ಪರ್ಧೆ ನೀಡಿದೆ. ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಯುಡಿಎಫ್‌ ಜಯಭೇರಿ ಸಾಧಿಸುವ ಸಾಧ್ಯತೆ ಕಂಡುಬಂದಿದೆ. ಕೇರಳದಲ್ಲಿ ಒಟ್ಟು 140 ಸ್ಥಾನಗಳಿದ್ದು, ಸರಳ ಬಹುಮತಕ್ಕೆ 71 ಸ್ಥಾನಗಳ ಅಗತ್ಯವಿದೆ.

ಹ್ಯಾಟ್ರಿಕ್ ಗೆಲುವು ಸಾಧಿಸುತ್ತಾ ಬಿಜೆಪಿ?
ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಮತದಾನೋತ್ತರ ಸಮೀಕ್ಷೆಗಳು ತಿಳಿಸಿವೆ. ಅಸ್ಸಾಂನ 126 ವಿಧಾನಸಭಾ ಕ್ಷೇತ್ರಗಳ ಪೈಕಿ ಸರಳ ಬಹುಮತಕ್ಕೆ 64 ಸ್ಥಾನಗಳು ಬೇಕು. ಸತತ ಎರಡು ಬಾರಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಈ ಬಾರಿ ಗೆಲುವು ಸಾಧಿಸಿದರೆ ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಲಿದೆ.

ಪುದುಚೇರಿ ಯಾರಿಗೆ?
ಪುದುಚೇರಿ ವಿಧಾನಸಭೆ ಚುನಾವಣಾ ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಪುನಃ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರಬಹುದೆಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು 30 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ 15ರಿಂದ 20 ಸ್ಥಾನಗಳನ್ನು ಪಡೆದು ಎರಡನೇ ಬಾರಿಗೆ ಅಧಿಕಾರ ಗದ್ದುಗೆ ಹಿಡಿಯಬಹುದೆಂದು ಹೇಳಲಾಗುತ್ತಿದೆ.

Continue Reading

Latest

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

VISTARANEWS.COM


on

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಕುರಿತು ದಿನಕ್ಕೊಂದು ಹೊಸ ಸುದ್ದಿ ಬರ್ತಿದೆ. ಇದೀಗ ಸಿನಿಮಾದ ಕೆಲವು ದೃಶ್ಯಗಳ ಬಗ್ಗೆ ಚಿತ್ರದ ನಾಯಕಿ ಕಿಯಾರಾ ಅಡ್ವಾಣಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಚಿತ್ರೀಕರಣಕ್ಕೂ ಮೊದಲು ನಿರ್ದೇಶಕರು ಈ ದೃಶ್ಯಗಳು ನಟಿಯ ಕಂಫರ್ಟ್ ಜೋನ್ ಒಳಗೇ ಇರುತ್ತವೆ ಎಂದು ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ಚಿತ್ರೀಕರಣ ಮುಗಿದ ನಂತರ ಔಟ್‌ಪುಟ್ ನೋಡಿದ ಕಿಯಾರಾ ಅವರಿಗೆ ಆ ದೃಶ್ಯಗಳು ತೆರೆಯ ಮೇಲೆ ಅತಿ ಎನಿಸಿದೆಯಂತೆ. ಈ ಕಾರಣದಿಂದ ಅವರು ದೃಶ್ಯಗಳನ್ನು ಎಡಿಟ್ ಮಾಡಲು ಕೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮತ್ತು ‘ಮಾನ್ಸ್‌ಟರ್ ಮೈಂಡ್ ಕ್ರಿಯೇಷನ್ಸ್’ ಜಂಟಿಯಾಗಿ ನಿರ್ಮಾಣ ಮಾಡುತ್ತಿವೆ. ಜೂನ್ 4ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾದ ರಿಲೀಸ್ ದಿನಾಂಕ ಸದ್ಯಕ್ಕೆ ಮುಂದೂಡಿಕೆ ಆಗಿದೆ. ಹೊಸ ರಿಲೀಸ್ ಡೇಟ್ ತಿಳಿಯಲು ಫ್ಯಾನ್ಸ್ ಕಾತುರದಿಂದ ಕಾಯುತ್ತಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

VISTARANEWS.COM


on

ಪಶ್ಚಿಮ ಬಂಗಾಳದ ಚುನಾವಣೋತ್ತರ ಸಮೀಕ್ಷೆಯ ಟ್ರೆಂಡ್‌ ಪಕ್ಕದ ಬಾಂಗ್ಲಾದೇಶಕ್ಕೆ ಆತಂಕ ಉಂಟುಮಾಡಿದೆ. ಎಂಟು ಎಕ್ಸಿಟ್‌ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮುನ್ಸೂಚನೆ ನೀಡಿವೆ. ಈ ಮುನ್ಸೂಚನೆಯೇ ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಸಂಸದ ಆಖ್ತರ್‌ ಹೊಸೈನ್‌ ಈ ವಿಷಯವನ್ನು ಅಲ್ಲಿನ ಸಂಸತ್ತಿನಲ್ಲಿ ಎತ್ತಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅದು ಅಲ್ಲಿನ ಎಲ್ಲಾ ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಗಟ್ಟುತ್ತದೆ. ಇದು ಬಾಂಗ್ಲಾದೇಶದಲ್ಲಿ ಅತಿದೊಡ್ಡ ಮಾನವೀಯ, ಅರ್ಥಿಕ ಹಾಗೂ ನಿರಾಶ್ರಿತರ ಬಿಕ್ಕಟ್ಟನ್ನು ಸೃಷ್ಟಿಸಲಿದೆ. ಇದು ನಮ್ಮ ಅತಿದೊಡ್ಡ ಆತಂಕಕ್ಕೆ ಕಾರಣವಾಗಿದೆʼʼ ಎಂದು ಹೇಳಿದ್ದಾರೆ.
ಗಡಿದಾಟಿ ಭಾರತಕ್ಕೆ ಬಂದಿರುವ ಅಕ್ರಮ ಬಾಂಗ್ಲಾ ದೇಶಿ ನುಸುಳುಕೋರರನ್ನು ಬಿಜೆಪಿ ಹೊರಗಟ್ಟಿದರೆ ಅವರಿಗೆ ಹೊಸ ನೆಲೆ ಕಲ್ಪಿಸುವುದು ಹೇಗೆ ಎಂಬ ಚಿಂತೆ ಬಾಂಗ್ಲಾದೇಶವನ್ನು ಕಾಡುತ್ತಿದೆ. ಬಾಂಗ್ಲಾದೇಶದ ಅಕ್ರಮ ನುಸುಳುಕೋರರ ಸಮಸ್ಯೆಯೇ ಪಶ್ಚಿಮ ಬಂಗಾಳದ ಅತಿದೊಡ್ಡ ಚುನಾವಣಾ ವಿಷಯವಾಗಿತ್ತು. ಅಧಿಕಾರಕ್ಕೇರಿದ ತಕ್ಷಣವೇ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವುದಾಗಿ ಬಿಜೆಪಿ ಹೇಳಿತ್ತು.

Continue Reading
Advertisement
Latest38 minutes ago

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ

Latest1 hour ago

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

Latest2 hours ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest1 day ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest1 day ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌