PSI Scam | ಅಕ್ರಮ ಹಣ ವರ್ಗಾವಣೆ; ಬಂಧಿತ ಎಡಿಜಿಪಿ ಅಮೃತ್ ಪಾಲ್, ಡಿವೈಎಸ್‌ಪಿ ಶಾಂತಕುಮಾರ್ ಮನೆ ಮೇಲೆ ಇ.ಡಿ ದಾಳಿ - Vistara News

ಕರ್ನಾಟಕ

PSI Scam | ಅಕ್ರಮ ಹಣ ವರ್ಗಾವಣೆ; ಬಂಧಿತ ಎಡಿಜಿಪಿ ಅಮೃತ್ ಪಾಲ್, ಡಿವೈಎಸ್‌ಪಿ ಶಾಂತಕುಮಾರ್ ಮನೆ ಮೇಲೆ ಇ.ಡಿ ದಾಳಿ

PSI Scam | ಬಂಧಿತ ಎಡಿಜಿಪಿ ಅಮೃತ್‌ ಪಾಲ್‌ ಹಾಗೂ ಡಿವೈಎಸ್‌ಪಿ ಶಾಂತಕುಮಾರ್‌ ಅವರ ಬೆಂಗಳೂರಿನ ಮನೆಗಳ ಮೇಲೆ ಐವರು ಇ.ಡಿ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

VISTARANEWS.COM


on

PSI Scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ (PSI Scam) ಪ್ರಮುಖ ಬಂಧಿತ ಆರೋಪಿಗಳಾದ ಎಡಿಜಿಪಿ ಅಮೃತ್ ಪಾಲ್ ಮತ್ತು ಡಿವೈಎಸ್‌ಪಿ ಶಾಂತಕುಮಾರ್ ಮನೆಗಳ ಮೇಲೆ ಬುಧವಾರ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಆರೋಪಿಗಳ ವಿರುದ್ಧ ಆಗಸ್ಟ್‌ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೆ ಸಂಬಂಧಪಟ್ಟ 11 ಸ್ಥಳಗಳಲ್ಲಿ ದಾಳಿ ನಡೆಸಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಸಹಕಾರನಗರದ ಅಮೃತ್ ಪಾಲ್ ನಿವಾಸದ ಮೇಲೆ ಬೆಳಗ್ಗೆ 11 ಗಂಟೆಗೆ ದಾಳಿ‌ ನಡೆಸಿ ಪರಿಶೀಲನೆ ನಡೆಸಲಾಯಿತು. ಹಾಗೆಯೇ ಶಾಂತಕುಮಾರ್ ಅವರ ಆಡುಗೋಡಿ ಟೆಕ್ನಿಕಲ್ ಸೆಲ್‌ನಲ್ಲಿರುವ ಮನೆ, ಪೊಲೀಸ್ ಕ್ವಾರ್ಟರ್ಸ್‌ ಹಾಗೂ ಲಕ್ಕಸಂದ್ರದ ಮನೆ ಮೇಲೂ ದಾಳಿ ನಡೆಸಿ ಸುಮಾರು 5 ಗಂಟೆಗಳ ಕಾಲ ನಿರಂತರವಾಗಿ ಪರಿಶೀಲನೆ ನಡೆಸಿದರು.

ಈವರೆಗೆ ೪ ಕೋಟಿ ರೂ. ವಶ
ಈ ಹಿಂದೆ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ ಶ್ರೀಧರ್ ಮನೆಯಲ್ಲಿ 1.5 ಕೋಟಿ ರೂಪಾಯಿ ಪತ್ತೆಯಾಗಿತ್ತು. ಅಕ್ರಮ ಹಣ ವರ್ಗಾವಣೆ ಹಿನ್ನೆಲೆಯಲ್ಲಿ ಇ.ಡಿ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣದಲ್ಲಿ ವಿವಿಧ ಕಡೆ ದಾಳಿ ನಡೆಸಿ ಈವರೆಗೆ ಸುಮಾರು 4 ಕೋಟಿ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ. ನಗದು ರೂಪದಲ್ಲೇ ಹಣ ನೀಡಿರುವುದಾಗಿ ವಿಚಾರಣೆ ವೇಳೆ ಅಭ್ಯರ್ಥಿಗಳು ತಿಳಿಸಿದ್ದರು. ಅದರಂತೆ ಅತಿ ಹೆಚ್ಚು ನಗದು ರೂಪದಲ್ಲೇ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿತ್ತು.

ಅಕ್ರಮದ ನಂತರದ ವ್ಯವಹಾರ ಪರಿಶೀಲನೆ
ನೇಮಕಾತಿಗಾಗಿ ಅಭ್ಯರ್ಥಿಗಳು ಯಾವ ರೂಪದಲ್ಲಿ ಹಣ ನೀಡಿದ್ದರು. ಅದನ್ನು ಬಂಧಿತ ಪೊಲೀಸ್‌ ಅಧಿಕಾರಿಗಳು ಯಾರಿಗಾದರೂ ವರ್ಗಾವಣೆ ಮಾಡಿದ್ದಾರಾ? ನೇಮಕಾತಿ ನೋಟಿಫಿಕೇಶನ್ ದಿನಾಂಕದಿಂದ ಮುಂದೆ ಯಾವುದಾದರು ಆಸ್ತಿ ಖರೀದಿ ಮಾಡಿದ್ದಾರಾ? ಎಂಬ ಕುರಿತು ಹಾಗೂ ಮನೆಯಲ್ಲಿರುವ ಚಿನ್ನ ಮತ್ತು ಅದರ ಬಿಲ್‌ಗಳು, ಬ್ಯಾಂಕ್ ಲಾಕರ್‌ನಲ್ಲಿರುವ ಚಿನ್ನ, ಇತ್ತೀಚೆಗೆ ಚಿನ್ನ ಖರೀದಿಸಿದ್ದಾರಾ ಹಾಗೂ ಬೇನಾಮಿ ಹೆಸರಲ್ಲಿ ಬ್ಯಾಂಕ್ ಖಾತೆ ಅಥವಾ ಆಸ್ತಿ ಪತ್ರ ಹೊಂದಿದ್ದಾರಾ ಎನ್ನುವ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ | ವಿದ್ಯಾರ್ಥಿ ವೀಸಾದಲ್ಲಿ ಬಂದು ಡ್ರಗ್‌ ಪೆಡ್ಲಿಂಗ್‌, ಇಬ್ಬರು ನೈಜೀರಿಯ ಪ್ರಜೆಗಳ ಸೆರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಡಗು

Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Murder Case : ಬಾಲಕಿಯ ತಲೆ ಕತ್ತರಿಸಿ ಕಾಡಿನಲ್ಲಿ ಅಡಗಿ ಕುಳಿತಿದ್ದ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತ ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆ ಆಗಿದ್ದು, ಮರದ ಮೇಲೆ ಇರಿಸಿದ್ದ ರುಂಡವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ರುಂಡ ಕಂಡು ಬಾಲಕಿ ಸಹೋದರ ಮೈಮೇಲೆ ಶಕ್ತಿ ಅವಾಹನೆ ಅದಂತೆ ವರ್ತಿಸಿದ ಘಟನೆಯು ನಡೆದಿದೆ.

VISTARANEWS.COM


on

By

Murder Case in kodagu
Koo

ಕೊಡಗು:‌ ಮದುವೆ ರದ್ಧಾಗಿದ್ದಕ್ಕೆ ಕೋಪಗೊಂಡ ಪಾಗಲ್‌ ಪ್ರೇಮಿಯೊಬ್ಬ ಬಾಲಕಿಯನ್ನು ಕೊಲೆ (Murder Case) ಮಾಡಿ ರುಂಡದೊಂದಿಗೆ ಪರಾರಿ ಆಗಿದ್ದ. ಕಾಡಿನಲ್ಲಿ ಬಚ್ಚಿಕೊಂಡಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಶನಿವಾರ ಬಂಧಿಸಿದ್ದರು. ಆದರೆ ಆರೋಪಿ ಸಿಕ್ಕರು ಬಾಲಕಿಯ ರುಂಡ ಪತ್ತೆಯಾಗಿರಲಿಲ್ಲ. ಇದೀಗ ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆಯಾಗಿದೆ. ಬಾಲಕಿಯ ತಲೆಯನ್ನು ಆರೋಪಿ ಪ್ರಕಾಶ್ ಮರದ ಮೇಲೆ ಇರಿಸಿದ್ದ. ಬಾಲಕಿಯ ತಲೆ ಹಾಗೂ ಆಕೆಯ ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಶುಕ್ರವಾರ ಇಡೀ ದಿನ ಹುಡುಕಾಡಿದ್ದರೂ ಬಾಲಕಿ ಮೀನಾ ತಲೆ ಸಿಕ್ಕಿರಲಿಲ್ಲ. ಇತ್ತ ಮಗಳ ತಲೆ ಸಿಗದೆ ಮೃತದೇಹದ ಅಂತ್ಯ ಸಂಸ್ಕಾರ ಮಾಡುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದಿದ್ದರು. ಹೀಗಾಗಿ ಶನಿವಾರ ಮತ್ತೆ 40ಕ್ಕೂ ಹೆಚ್ಚು ಪೊಲೀಸರಿಂದ ಶೋಧ ಕಾರ್ಯ ನಡೆದಿದ್ದು, ಹತ್ಯೆಯಾಗಿದ್ದ ಮೀನಾ ರುಂಡ ಪತ್ತೆ ಮಾಡಿದ್ದಾರೆ. ತಲೆ ವಶಕ್ಕೆ ಪಡೆದು ಬಾಲಕಿ ಮನೆ ಬಳಿ ಮಹಜರ್‌ ನಡೆಸಿದ್ದಾರೆ.

ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ

ಕೊಡಗಿನಲ್ಲಿ ಬಾಲಕಿ ಹತ್ಯೆಯ ಸ್ಥಳ ಮಹಜರು ವೇಳೆ ವಿಚಿತ್ರ ಘಟನೆಯು ನಡೆದಿದೆ. ರುಂಡ ಪತ್ತೆ ಸ್ಥಳದಲ್ಲಿ ಬಾಲಕಿ ಸಹೋದರನ ಮೈಮೇಲೆ ಶಕ್ತಿ ಅವಾಹನೆ ರೀತಿ ವರ್ತಿಸಿದ್ದಾನೆ. ರುಂಡ ಪತ್ತೆಯಾದ ಸ್ಥಳಕ್ಕೆ ಆರೋಪಿ ಪ್ರಕಾಶ್‌ ಮತ್ತು ಬಾಲಕಿ ಸಹೋದರ ಹೋದಾಗ ಏಕಾಏಕಿ ಶಕ್ತಿ ಅವಾಹನೆ ಆದಂತೆ ವರ್ತಿಸಿದ್ದಾನೆ. ಏಕಾಏಕಿ ಆತನ ವರ್ತನೆಗೆ ಪೊಲೀಸರು ಕ್ಷಣಕಾಲ ಬೆಚ್ಚಿ ಬಿದ್ದರು. ಕೂಡಲೇ ಅಲ್ಲಿದ್ದವರು ಬಾಲಕಿ ಮೀನಾ ಸಹೋದರನನ್ನು ಹಿಡಿದುಕೊಂಡಿದ್ದಾರೆ.

ಏನಿದು ಪ್ರಕರಣ?

ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Siddaramaiah: ಮೋದಿ ಸುಳ್ಳಿನ ಸರದಾರ, ಭಾವನಾತ್ಮಕ ಆಟ ನಡೆಯಲ್ಲ; ಸಿದ್ದರಾಮಯ್ಯ ತಿರುಗೇಟು

Siddaramaiah: ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ. ಪ್ರಧಾನಿಯವರನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ. ನರೇಂದ್ರ ಮೋದಿ 10 ವರ್ಷ ಪ್ರಧಾನಿಯಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗೂ ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಭರವಸೆಗಳನ್ನೂ ಈಡೇರಿಸಿಲ್ಲ ಎಂದು ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

VISTARANEWS.COM


on

Siddaramaiah
Koo

ಮೈಸೂರು: “ಪ್ರತಿಪಕ್ಷಗಳು ನನ್ನನ್ನು ಸಮಾಧಿ ಮಾಡಲು ಹೊರಟಿವೆ. ಜನರೇ ನನ್ನನ್ನು ಕಾಪಾಡಲು ಹೊರಟಿವೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿದ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ (Siddaramaiah), “ನರೇಂದ್ರ ಮೋದಿ ಸುಳ್ಳುಗಳ ಸರದಾರ ಆಗಿದ್ದಾರೆ. ಅವರ ಭಾವನಾತ್ಮಕ ಆಟವು ಭಾರತೀಯರಿಗೆ ಗೊತ್ತಾಗಿದೆ” ಎಂದು ಹೇಳಿದರು.

“ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ. ಪ್ರಧಾನಿಯವರನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ. ನರೇಂದ್ರ ಮೋದಿ 10 ವರ್ಷ ಪ್ರಧಾನಿಯಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗೂ ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ರಾಜಕೀಯವಾಗಿ ಅವರನ್ನು ಸೋಲಿಸಬೇಕೆನ್ನುವುದು ವಿರೋಧ ಪಕ್ಷಗಳ ಗುರಿ. ಏಕೆಂದರೆ ಈ ದೇಶ ಆರ್ಥಿಕ ಹಾಗೂ ಬಡವರ ಅಭಿವೃದ್ಧಿ ಆಗಿಲ್ಲ” ಎಂದರು.

ಮೇಲಕ್ಕೇರಿದವರು ಕೆಳಕ್ಕೆ ಇಳಿಯಲೇಬೇಕು

ನರೇಂದ್ರ ಮೋದಿ ಅವರಿಗೆ ಚುನಾವಣೆಯಲ್ಲಿ ಸೋಲುತ್ತೇವೆ ಎಂಬುದು ಖಾತರಿಯಾಗಿದೆ. ಹಾಗಾಗಿಯೇ ಅವರು ಹತಾಶರಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಅವರ ಭಾವನಾತ್ಮಕ ಆಟ ಜನರಿಗೆ ಗೊತ್ತಾಗಿದೆ. ಅವರು ಸುಳ್ಳು ಹೇಳುವುದು, ಭಾವನಾತ್ಮಕವಾಗಿ ಶೋಷಣೆ ಮಾಡುವುದು ಜನರಿಗೆ ಗೊತ್ತಾಗಿದೆ. ಜನರಿಗೆ ಗೊತ್ತಾದ ಮೇಲೆ ಮತ್ತೆ ಅದೇ ತಪ್ಪನ್ನು ಮಾಡುವುದಿಲ್ಲ. ಮೇಲಕ್ಕೇರಿದವರು ಕೆಳಕ್ಕೆ ಇಳಿಯಲೇಬೇಕು” ಎಂದು ಕುಟುಕಿದರು.

ನೈತಿಕ ಹಕ್ಕಿಲ್ಲ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದಲ್ಲಿ ಬರಗಾಲ ಇರುವುದರಿಂದ ರೈತರ ಸಾಲ ಮನ್ನಾ ಮಾಡಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಈ ಹಿಂದೆ ಸಾಲ ಮನ್ನಾ ಮಾಡಿ ಎಂದಾಗ ನಮ್ಮ ಬಳಿ ಪ್ರಿಂಟಿಂಗ್ ಮಶೀನ್ ಇಲ್ಲ ಎಂದಿದ್ದರು ಈಗ. ಇವರಿಗೆ ಯಾವ ನೈತಿಕತೆ ಇದೆ” ಎಂದು ಪ್ರಶ್ನಿಸಿದರು. ಮೈಸೂರಿನಲ್ಲಿ ಶ್ರೀನಿವಾಸ ಪ್ರಸಾದ್‌ ಅವರ ನಿಧನದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದರು.

ಇದನ್ನೂ ಓದಿ: BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Continue Reading

ಕ್ರೈಂ

Accident Case : ಬ್ಯಾನರ್‌ ಕಟ್ಟುವಾಗ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಕಾರು

Accident Case: ಕೊಡಗಿನಲ್ಲಿ ಬ್ಯಾನರ್‌ ಕಟ್ಟುವಾಗ ಕರೆಂಟ್‌ ಶಾಕ್‌ಗೆ ( Electric Shock)ವ್ಯಕ್ತಿಯೊಬ್ಬ ದಾರುಣವಾಗಿ ಮೃತಪಟ್ಟರೆ ಇತ್ತ ವಿಜಯನಗರದಲ್ಲಿ ಚಾಲಕನ (road Accident ) ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

accident case
Koo

ಕೊಡಗು: ಕ್ರಿಕೆಟ್‌ ಪಂದ್ಯಾವಳಿಗಾಗಿ ಬ್ಯಾನರ್ ಕಟ್ಟಲು ಹೋದ ವ್ಯಕ್ತಿಗೆ ಕರೆಂಟ್‌ ಶಾಕ್‌ (Electric Shock) ಹೊಡೆದಿದ್ದು, ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಆರಿಫ್ (34) ವಿದ್ಯುತ್ ಅವಘಡದಿಂದ (Accident Case) ಮೃತಪಟ್ಟವರು.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಹೀಗಾಗಿ ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಕಟ್ಟಲು ಮುಂದಾಗಿದ್ದರು. ಈ ವೇಳೆ ವಿದ್ಯುತ್‌ ತಂತಿ ತಗುಲಿ ಕ್ಷಣ ಮಾತ್ರದಲ್ಲೇ ಆರಿಫ್‌ ಕೆಳಗೆ ಬಿದ್ದಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.

ಸ್ಥಳಕ್ಕಾಗಮಿಸಿದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಮೂರ್ನಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Assault Case : ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌!

ಕಾರು ಪಲ್ಟಿ ಮೂವರು ಗಂಭೀರ

ರಸ್ತೆ ಡಿವೈಡರ್‌ಗೆ ಗುದ್ದಿ ಕಾರು ಪಲ್ಟಿ ಆಗಿದೆ. ಪರಿಣಾಮ ಕಾರಲ್ಲದ್ದ ಮೂವರಿಗೆ ಗಂಭೀರ ಗಾಯವಾಗಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮ ಬಳಿ ರಾ. ಹೆ 50ರಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಕೊಪ್ಪಳ ‌ಕಡೆ ಚಲಿಸುತ್ತಿದ್ದ ಕಾರು ಪಲ್ಟಿಯಾಗಿದೆ.

ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕ‌ವಾಗಿದ್ದು, ಮತ್ತೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿದೆ. ಘಟನಾ ಸ್ಥಳಕ್ಕೆ ಕಾನಾ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾನಾ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರು, ಬೈಕ್ ನಡುವೆ ಭೀಕರ ಅಪಘಾತ; ಸವಾರ ಸಾವು

ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಯನಗುಂಟೆ ಬಳಿ ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಯನಗುಂಟೆ ಗ್ರಾಮದ ಕೃಷ್ಣಪ್ಪ‌ ( 70 ) ಮೃತರು.

ಕೃಷ್ಣಪ್ಪ ಹೊಸಕೋಟೆಯಿಂದ ಗ್ರಾಮದ ಕಡೆಗೆ ಬರುತ್ತಿದ್ದಾಗ, ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಕೆಳಗೆ ಬಿದ್ದ ವೃದ್ಧ ಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

ಶಿವಮೊಗ್ಗ/ಕೋಲಾರ : ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಭೀಕರ ಅಪಘಾತ (Road Accident) ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ದುರ್ಮರಣ ಹೊಂದಿದ್ದಾರೆ. ನಿಂತಿರುವ ಟಿಪ್ಪರ್‌ ವಾಹನಕ್ಕೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಎರಡು ವಾಹನಗಳ ಮುಂಭಾಗ ಜಖಂಗೊಂಡಿದ್ದು, ಅದರಡಿ ಸಿಲುಕಿದ ಸಲ್ಮಾನ್ ಎಂಬಾತ ಮೃತಪಟ್ಟಿದ್ದಾನೆ.

ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿ ನಿವಾಸಿ ಸಲ್ಮಾನ್ ದಾರುಣವಾಗಿ ಮೃತಪಟ್ಟರೆ ಇತ್ತ ಟಿಪ್ಪರ್ ವಾಹನ ಚಾಲಕ ಗಂಭೀರಗೊಂಡಿದ್ದಾರೆ. ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಗುಂಬೆಯಿಂದ ತೀರ್ಥಹಳ್ಳಿಗೆ ಬರುವ ವೇಳೆ ದುರ್ಘಟನೆ ನಡೆದಿದೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೋಲಾರದಲ್ಲಿ ಬೈಕ್‌ಗೆ ಲಾರಿ ಡಿಕ್ಕಿ, ಸವಾರ ಸಾವು

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಬಳಿ ನಡೆದಿದೆ. ಗುಲ್ಲಹಳ್ಳಿ ಗ್ರಾನದ (25) ಮಧು ಮೃತ ದುರ್ದೈವಿ.

ಕಾಮಸಮುದ್ರದಿಂದ ಬೂದಿಕೋಟೆ ಕಡೆ ಬರುತ್ತಿದ್ದ ಲಾರಿಯು ವೇಗವಾಗಿ ಬಂದು ಬೈಕ್‌ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದಾನೆ. ಬೂದಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಕೊಪ್ಪಳದಲ್ಲಿ ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸಾವು

ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತಪಟ್ಟಿದ್ದಾರೆ. ಈರಪ್ಪ ಕುರಿ (55) ಮೃತ ದುರ್ದೈವಿ. ಕಟ್ಟಿಗೆ ತರಲು ಹೋದಾಗ ಅವಘಡ ನಡೆದಿದೆ. ರೆನ್ಯೂ ವಿಂಡ್ ಪವರ್ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕುಕನೂರು ಪೊಲೀಸರು ಪರಿಶೀಲಿಸಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

BS Yediyurappa: ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್‌ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು 4 ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

VISTARANEWS.COM


on

BS Yediyurappa
Koo

ಮೈಸೂರು: ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವು (Prajwal Revanna Case) ಕರ್ನಾಟಕ ಮಾತ್ರವಲ್ಲ ದೇಶಾದ್ಯಂತ ಸಂಚಲನ ಮೂಡಿಸಿದೆ. ಇದರಿಂದ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಗೆ ಭಂಗ ತಂದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಬಿಜೆಪಿ ವರಿಷ್ಠ ನಾಯಕ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ್ದು, “ಪ್ರಜ್ವಲ್ ರೇವಣ್ಣ ಕೇಸ್‌ನಿಂದ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಗೆ ಯಾವುದೇ ಭಂಗ ತರುವುದಿಲ್ಲ” ಎಂದು ತಿಳಿಸಿದರು.

“ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್‌ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು 4 ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನ ಆಗಿಲ್ಲ. ಇಂದು (ಮೇ 11) ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಟ್ಟಿ ಬಿಡುಗಡೆ ಮಾಡಲಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಸಿಬಿಐ ತನಿಖೆಗೆ ವಹಿಸಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದರು. “ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಪ್ರಕರಣದ ಕುರಿತು ಪಾರದರ್ಶಕವಾಗಿ ತನಿಖೆ ನಡೆಯಬೇಕು ಎಂದರೆ ಸಿಬಿಐಗೆ ವಹಿಸಬೇಕು. ಸಿದ್ದರಾಮಯ್ಯ ಅವರ ಅಭಿಪ್ರಾಯ ಅವರದ್ದು. ಆದರೆ, ಸಿಬಿಐ ತನಿಖೆಯಾಗಬೇಕು ಎಂಬುದು ನಮ್ಮ ಅಭಿಪ್ರಾಯ” ಎಂದರು.

400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು

ಲೋಕಸಭೆ ಚುನಾವಣೆ ಕುರಿತು ಮಾತನಾಡಿದ ಬಿ.ಎಸ್.ಯಡಿಯೂರಪ್ಪ, “ದೇಶದಲ್ಲಿ ಎನ್‌ಡಿಎ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಾರೆ. ಸೂರ್ಯ, ಚಂದ್ರ ಇರೋದು ಎಷ್ಟು ಸತ್ಯವೋ, ಮೋದಿ ಅವರು ಮತ್ತೆ ಪ್ರಧಾನಿಯಾಗೋದೂ ಅಷ್ಟೇ ಸತ್ಯ. ಕರ್ನಾಟಕದಲ್ಲಿ ಕಾಂಗ್ರೆಸ್‌ನವರು ಏನು ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ರಾಜ್ಯದಲ್ಲಿ 24-25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಅಷ್ಟಕ್ಕೂ, ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Prajwal Revanna Case: ದೇವರಾಜೇಗೌಡ ಹುಚ್ಚುನಾಯಿ, ನಕಲಿ ವಕೀಲ ಎಂದ ಶಿವರಾಮೇಗೌಡ

Continue Reading
Advertisement
Murder Case in kodagu
ಕೊಡಗು7 mins ago

Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Arvind Kejriwal
ದೇಶ9 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ; ಹೃದಯಸ್ಪರ್ಶಿ ವಿಡಿಯೊ ಇಲ್ಲಿದೆ

Siddaramaiah
ಕರ್ನಾಟಕ19 mins ago

Siddaramaiah: ಮೋದಿ ಸುಳ್ಳಿನ ಸರದಾರ, ಭಾವನಾತ್ಮಕ ಆಟ ನಡೆಯಲ್ಲ; ಸಿದ್ದರಾಮಯ್ಯ ತಿರುಗೇಟು

accident case
ಕ್ರೈಂ51 mins ago

Accident Case : ಬ್ಯಾನರ್‌ ಕಟ್ಟುವಾಗ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಕಾರು

Chinese app
ವಿದೇಶ57 mins ago

Chinese Apps: ಟಿಕ್‌ಟಾಕ್‌ ಮಾತ್ರ ಅಲ್ಲ.. ಚೀನಾದ ಈ ಆಪ್‌ಗಳೂ ಅಷ್ಟೇ ಡೇಂಜರಸ್‌; ಶಾಕಿಂಗ್‌ ವರದಿ ಔಟ್‌

Jyoti Rai
ಕಿರುತೆರೆ1 hour ago

Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

BS Yediyurappa
ಕರ್ನಾಟಕ2 hours ago

BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Assault case in kalaburagi
ಕಲಬುರಗಿ2 hours ago

Assault Case : ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌!

Election Commission
ದೇಶ2 hours ago

Election Commission: ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅಡ್ಡಿಪಡಿಸುವ ಪ್ರಯತ್ನ; ಖರ್ಗೆ ಪತ್ರಕ್ಕೆ EC ತಿರುಗೇಟು

Prajwal Revanna Case
ಕರ್ನಾಟಕ2 hours ago

Prajwal Revanna Case: ದೇವರಾಜೇಗೌಡ ಹುಚ್ಚುನಾಯಿ, ನಕಲಿ ವಕೀಲ ಎಂದ ಶಿವರಾಮೇಗೌಡ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌