Modi in Bengaluru | ಕನಕ, ವಾಲ್ಮೀಕಿ ಪ್ರತಿಮೆ ನಮ್ಮದು, ಹಾರ ಮಾತ್ರ ಅವರದು ಎಂದ ಸಿದ್ದರಾಮಯ್ಯ - Vistara News

ಬೆಂಗಳೂರು

Modi in Bengaluru | ಕನಕ, ವಾಲ್ಮೀಕಿ ಪ್ರತಿಮೆ ನಮ್ಮದು, ಹಾರ ಮಾತ್ರ ಅವರದು ಎಂದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಾಗ ಕನಕ ದಾಸ ಮತ್ತು ವಾಲ್ಮೀಕಿ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಬಗ್ಗೆ ಸಿದ್ಧರಾಮಯ್ಯ ಅವರು ಹೇಳಿದ್ದೇನು?

VISTARANEWS.COM


on

siddaramaih on BBC Documentary
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Modi in Bengaluru) ಅವರು ತಮ್ಮ ಬೆಂಗಳೂರು ಭೇಟಿ ವೇಳೆ ಕನಕ ದಾಸರು, ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಗಿಮಿಕ್‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ʻʻವಾಲ್ಮೀಕಿ ಪ್ರತಿಮೆ ನಮ್ಮ ಸರ್ಕಾರ ಮಾಡಿದ್ದು. ಅವರು ಹೂವಿನ ಹಾರ ಹಾಕಲು ಬರುತ್ತಿದ್ದಾರೆ ಅಷ್ಟೆ. ವಾಲ್ಮೀಕಿ, ಕನಕದಾಸರ ಪ್ರತಿಮೆಯನ್ನು ವಿಧಾನಸೌಧದ ಎದುರು ಸ್ಥಾಪನೆ ಮಾಡಿದವರು ನಾವು. ಈಗ ಅವರು ಬಂದು ಹೂವಿನ ಹಾರ ಹಾಕಿದಾಕ್ಷಣ ಕನಕದಾಸ ಪರ ಇದ್ದಾರೆ ಅಂತ ಆಗುತ್ತದಾ? ಇವೆಲ್ಲವೂ ಪೊಲಿಟಿಕಲ್ ಗಿಮಿಕ್ʼʼ ಎಂದರು ಸಿದ್ದರಾಮಯ್ಯ.

ʻʻಕೆಂಪೇಗೌಡರ ಜಯಂತಿ ಮಾಡಿದವರು ಯಾರು? ಕೆಂಪೇಗೌಡರ ಪ್ರಾಧಿಕಾರ ಮಾಡಿದವರು ಯಾರು? ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಏರ್‌ಪೋರ್ಟ್‌ ಅಂತ ಹೆಸರು ಇಟ್ಟವರು ಯಾರು? ಇದೆಲ್ಲವನ್ನೂ ಮಾಡಿದ್ದು ನಮ್ಮ ಸರ್ಕಾರ. ಪ್ರತಿಮೆ ಮಾಡಬೇಕು ಎಂದು ನಾವು ಆಗಲೇ ತೀರ್ಮಾನ ಮಾಡಿದ್ದೆವು. ಏರ್ ಪೋರ್ಟ್ ಗೆ ಹೆಸರು ಇಟ್ಟ ಮೇಲೆ ಪ್ರತಿಮೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೆವುʼʼ ಎಂದು ಹೇಳಿದರು ಸಿದ್ದರಾಮಯ್ಯ.

ʻʻನರೇಂದ್ರ ಮೋದಿ ಅವರು 40% ಕಮಿಷನ್ ಬಗ್ಗೆ ಉತ್ತರ ಕೊಡಲಿ. ಅದರ ಬಗ್ಗೆ ಪತ್ರ ಸಹ ಬರೆದಿದ್ದೇನೆ. ಕೆಂಪಣ್ಣ ಹಾಗೂ ನಾನು ಪತ್ರ ಬರೆದಿದ್ದೇವೆʼʼ ಎಂದು ಹೇಳಿದರು.

ಸತೀಶ್‌ ಜಾರಕಿಹೊಳಿ ಅವರು ಹಿಂದು ಪದದ ಬಗ್ಗೆ ಆಡಿದ ಮಾತನ್ನು ಹಿಂದಕ್ಕೆ ಪಡೆದಿದ್ದೇನೆ ಎಂದಿದ್ದಾರೆ. ಈಗಾಗಲೇ ವಿಷಾದ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ನಾನು ಅಶ್ಲೀಲ ಎಂಬ ಪದ ವಾಪಸ್ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ಮುಕುಡಪ್ಪ ಅವರ ಗುಸುಗುಸು ಮಾತಿಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇಂದೇ ಸಚಿವ ನಾಗೇಂದ್ರ ರಾಜೀನಾಮೆ?

Valmiki Corporation Scam: ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಹಾಗೂ ಅವರ ಡೆತ್‌ನೋಟ್‌ ಬಯಲಾದ ಬಳಿಕ ಬೆಳಕಿಗೆ ಬಂದ ಹಗರಣದ ಬಳಿಕ ಇಷ್ಟು ದಿನ ನಾಗೇಂದ್ರ ಯಾರ ಕೈಗೂ ಸಿಕ್ಕಿರಲಿಲ್ಲ, ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.

VISTARANEWS.COM


on

valmiki corporation scam nagendra siddaramaiah
Koo

ಬೆಂಗಳೂರು: ವಾಲ್ಮೀಕಿ ನಿಗಮದ (Valmiki Corporation Scam) ಹಗರಣಕ್ಕೆ ಸಂಬಂಧಿಸಿ ನಿನ್ನೆ ಸಚಿವ ನಾಗೇಂದ್ರ (Minister B Nagendra) ಜೊತೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮಾತುಕತೆ ನಡೆಸಿದ್ದು, ಇಂದು ರಾಜೀನಾಮೆ (Resignation) ಕೊಡಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಭೇಟಿ ವೇಳೆ, ನಾಳೆ ಈ ಕುರಿತು ಇನ್ನಷ್ಟು ಮಾತನಾಡಲು ಬರುವಂತೆ ಸಿಎಂ ತಿಳಿಸಿದ್ದು, ಇಂದು ಬಹುತೇಕ ರಾಜೀನಾಮೆಗೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ನಿನ್ನೆಯೇ ಸಿಎಂ ರಾಜೀನಾಮೆಗೆ ಸಿಎಂ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ನಾಗೇಂದ್ರ, ಸಿಎಂ ಇಂದು ಬರೋದಕ್ಕೆ ತಿಳಿಸಿದ್ದಾರೆ ಅನ್ನುತ್ತಿದ್ದಾರೆ. ಬಹುತೇಕ ಇಂದು ಸ್ಪಷ್ಟ ಚಿತ್ರಣ ಸಿಗಲಿದೆ. ಒಂದು ವೇಳೆ ಸಿಎಂ ಸೂಚನೆ ಮೇರೆಗೆ ಇಂದು ರಾಜೀನಾಮೆ ಕೊಟ್ಟರೆ ಸರ್ಕಾರದ ಮೊದಲ ವಿಕೆಟ್ ಪತನವಾಗಲಿದೆ.

ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಹಾಗೂ ಅವರ ಡೆತ್‌ನೋಟ್‌ ಬಯಲಾದ ಬಳಿಕ ಬೆಳಕಿಗೆ ಬಂದ ಹಗರಣದ ಬಳಿಕ ಇಷ್ಟು ದಿನ ನಾಗೇಂದ್ರ ಯಾರ ಕೈಗೂ ಸಿಕ್ಕಿರಲಿಲ್ಲ, ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ನಿನ್ನೆ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಾಗೇಂದ್ರ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ವಾಲ್ಮೀಕಿ ನಿಗಮ ಆಕ್ರಮ ಹಣ ವರ್ಗಾವಣೆ ವಿಚಾರ ಕುರಿತು ಸಿಎಂ ಚರ್ಚಿಸಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅನ್ನು ಸಚಿವ ನಾಗೇಂದ್ರ ಭೇಟಿಯಾಗಿದ್ದು, ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಚಿವ ಜಮೀರ್ ಸಹ ಉಪಸ್ಥಿತರಿದ್ದರು. ವಾಲ್ಮೀಕಿ ನಿಗಮದ 185 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರತಿಪಕ್ಷಗಳು ಬಿಗಿ ಪಟ್ಟು ಹಿಡಿದಿವೆ. ಬಿಜೆಪಿ ನಾಗೇಂದ್ರ ವಿರುದ್ಧ ರಣಕಹಳೆ ಮೊಳಗಿಸಿದೆ. ಈಗಾಗಲೇ ಈ ಪ್ರಕರಣಕ್ಕೆ ಸಿಬಿಐ ಎಂಟ್ರಿಯಾಗಿದೆ. ಹೀಗಾಗಿ ಏನಾದರೂ ಒಂದು ಕ್ರಮ ತೆಗೆದುಕೊಳ್ಳುವುದು ಸಿಎಂಗೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ನಾಗೇಂದ್ರರನ್ನು ಕರೆಸಿ ಚರ್ಚೆ ಮಾಡಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಈಗಾಗಲೇ ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಬೇಕಾಗಿತ್ತು ಎಂದು ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಸೂಚಿಸಿದ್ದಾರೆ. ಸಂಪುಟದ ಸಹೋದ್ಯೋಗಿಗಳೇ ಮುಗುಂ ಆಗಿದ್ದಾರೆ. ಹೀಗಾಗಿ, ಸಿಬಿಐಯಲ್ಲಿ ಎಫ್ಐಆರ್ ದಾಖಲು ಆಗುತ್ತಿದ್ದಂತೆ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

45 ಕೋಟಿ ರೂ. ಸೀಜ್

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ವರ್ಗಾವಣೆ ಕೇಸ್ ಸಂಬಂಧಿಸಿ SITಯಿಂದ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್‌ನಲ್ಲಿದ್ದ 45 ಕೋಟಿ ರೂ. ಸೀಜ್ ಮಾಡಲಾಗಿದೆ. ಬಂಧಿತ ಆರೋಪಿ ಸತ್ಯನಾರಾಯಣ್‌ ಒಡೆತನದ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ಖಾತೆಗೆ ನಿಗಮದಿಂದ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂ.ನಲ್ಲಿ ಬಹುಪಾಲು ಹಣ ಡ್ರಾ ಆಗಿದೆ. ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್‌ಐಟಿ ತನಿಖೆ ಮುಂದುವರಿಸಿದೆ.

ಸದ್ಯ ಈ ಪ್ರಕರಣದಲ್ಲಿ ಇದುವರೆಗೆ ಐವರನ್ನು ಎಸ್‌ಐಟಿ ಬಂಧಿಸಿದೆ. ಪದ್ಮನಾಭ, ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಸತ್ಯನಾರಾಯಣ ಬಂಧನವಾಗಿದೆ. ಐವರನ್ನು ಕಸ್ಟಡಿಗೆ ಪಡೆದು SIT ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: Valmiki Corporation Scam : ವಾಲ್ಮಿಕಿ ನಿಗಮ ಹಗರಣ; ಆಂಧ್ರದ ಫಸ್ಟ್​​ ಬ್ಯಾಂಕ್ ಅಧ್ಯಕ್ಷ . ಸಚಿವ ನಾಗೇಂದ್ರ ಆಪ್ತರ ಬಂಧನ

Continue Reading

ಕರ್ನಾಟಕ

Dr C N Manjunath: ಬೆಂಗಳೂರಿನಲ್ಲೇ ಸುರೇಶ್‌ ವಿರುದ್ಧ ಡಾ. ಮಂಜುನಾಥ್‌ಗೆ 2 ಲಕ್ಷ ಮತಗಳ ಲೀಡ್‌! ಕ್ಷೇತ್ರವಾರು ಪಟ್ಟಿ ಇಲ್ಲಿದೆ

Dr C N Manjunath: ಬಿಜೆಪಿ ಅಭ್ಯರ್ಥಿಗೆ (Dr C N Manjunath) ಬೆಂಗಳೂರು ನಗರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬಹುದು. ಗ್ರಾಮಾಂತರ ಭಾಗದ ಮತದಾರರು ಡಿ ಕೆ ಸುರೇಶ್‌ ಅವರನ್ನು ಬೆಂಬಲಿಸಬಹುದು. ಹಾಗಾಗಿ ಯಾವುದೇ ಅಭ್ಯರ್ಥಿಯ ಗೆಲುವಿನ ಅಂತರ 50 ಸಾವಿರದ ಒಳಗೇ ಇರಬಹುದು ಎಂಬ ರಾಜಕೀಯ ಪಂಡಿತರ ಲೆಕ್ಕಾಚಾರ ತಪ್ಪಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಡಿ ಕೆ ಸುರೇಶ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ ಸಿ ಎನ್‌ ಮಂಜುನಾಥ್‌ ಅವರು 2,69,590 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

VISTARANEWS.COM


on

Dr C N Manjunath
Koo

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ (Bangalore Rural Election Result 2024) ಮೂರು ಬಾರಿ ಸಂಸದರಾಗಿ ಭಾರಿ ಅಂತರದಿಂದ ಆಯ್ಕೆಯಾಗಿದ್ದ ಡಿ.ಕೆ. ಸುರೇಶ್‌ ಅವರು ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ್‌ (Dr C N Manjunath) ಅವರ ವಿರುದ್ಧ ಭಾರಿ ಅಂತರದಿಂದ ಸೋತಿದ್ದಾರೆ. ವಿಶೇಷ ಅಂದರೆ ಡಿ.ಕೆ. ಸುರೇಶ್‌ ಅವರಿಗೆ ಅವರ ಹುಟ್ಟೂರು ಕನಕಪುರದಲ್ಲಿ ಮಾತ್ರ 25,677 ಮತಗಳ ಲೀಡ್‌ ಸಿಕ್ಕಿದೆ. ರಾಮನಗರದಲ್ಲಿ ಸಿಕ್ಕಿರುವುದು ಕೇವಲ 145 ಮತಗಳ ಮುನ್ನಡೆ.‌ ಇವೆರಡು ಕ್ಷೇತ್ರಗಳನ್ನು ಬಿಟ್ಟರೆ ಉಳಿದ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲೂ ಡಾ. ಸಿ ಎನ್‌ ಮಂಜುನಾಥ್‌ ಅವರಿಗೇ ಲೀಡ್‌ ಸಿಕ್ಕಿದೆ.

ಬಿಜೆಪಿ ಅಭ್ಯರ್ಥಿಗೆ ಬೆಂಗಳೂರು ನಗರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬಹುದು. ಗ್ರಾಮಾಂತರ ಭಾಗದ ಮತದಾರರು ಡಿ.ಕೆ. ಸುರೇಶ್‌ ಅವರನ್ನು ಬೆಂಬಲಿಸಬಹುದು. ಹಾಗಾಗಿ ಯಾವುದೇ ಅಭ್ಯರ್ಥಿಯ ಗೆಲುವಿನ ಅಂತರ 50 ಸಾವಿರದ ಒಳಗೇ ಇರಬಹುದು ಎಂಬ ರಾಜಕೀಯ ಪಂಡಿತರ ಲೆಕ್ಕಾಚಾರ ತಪ್ಪಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ.ಸಿ. ಎನ್‌ ಮಂಜುನಾಥ್‌ ಅವರು 2,69,590 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಇದನ್ನೂ ಓದಿ | Lowest Margin of Wins: ಕೇವಲ 48 ಮತ ಅಂತರದ ಗೆಲುವು! ಕಡಿಮೆ ಅಂತರದಿಂದ ಗೆದ್ದವರ ಪಟ್ಟಿ ಇಲ್ಲಿದೆ

ಬೆಂಗಳೂರು ಹೊರಗಿನ ಮಾಗಡಿ, ಚನ್ನಪಟ್ಟಣ, ಕುಣಿಗಲ್‌, ಆನೇಕಲ್‌ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲೂ ಡಾ.ಸಿ. ಎನ್‌. ಮಂಜುನಾಥ್‌ ಅವರೇ 25 ರಿಂದ 35 ಸಾವಿರದ ತನಕ ಮುನ್ನಡೆ ಸಾಧಿಸಿದ್ದಾರೆ. ಆದರೆ ಬೆಂಗಳೂರು ದಕ್ಷಿಣ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಡಿ.ಕೆ. ಸುರೇಶ್‌ ಅವರಿಗೆ ಭಾರೀ ಹಿನ್ನಡೆಯಾಗಿದೆ. ಡಾ.ಸಿ. ಎನ್‌. ಮಂಜುನಾಥ್‌ ಅವರಿಗೆ ರಾಜರಾಜೇಶ್ವರಿ ನಗರದಲ್ಲಿ 98,997 ಮತಗಳ ಭಾರಿ ಲೀಡ್‌ ಸಿಕ್ಕಿದ್ದರೆ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 97,129 ಮತಗಳ ಮುನ್ನಡೆ ಸಿಕ್ಕಿದೆ. ಹೀಗೆ ಬೆಂಗಳೂರು ನಗರದಲ್ಲೇ ಬಿಜೆಪಿ ಅಭ್ಯರ್ಥಿಗೆ ಸುಮಾರು 2 ಲಕ್ಷ ಮತಗಳ ಮುನ್ನಡೆ ಸಿಕ್ಕಂತಾಗಿದೆ. ಇದರ ಪರಿಣಾಮವಾಗಿ ಡಿ.ಕೆ. ಸುರೇಶ್‌ ಅವರು ಭಾರಿ ಅಂತರದಿಂದ ಸೋತಿದ್ದಾರೆ. ಡಾ. ಮಂಜುನಾಥ್‌ ಅವರಿಗೆ ಶೇ.56.2ರಷ್ಟು ಮತಗಳು ಸಿಕ್ಕಿದ್ದರೆ, ಡಿ ಕೆ ಸುರೇಶ್‌ ಅವರಿಗೆ ಶೇ.42.2ರಷ್ಟು ಮತಗಳು ಲಭಿಸಿವೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತಗಳ ವಿಧಾನಸಭೆ ಕ್ಷೇತ್ರವಾರು ಪಟ್ಟಿ ಈ ಕೆಳಗಿನಂತಿದೆ.

ಒಟ್ಟು ಮತ ಗಳಿಕೆ
ಡಾ. ಮಂಜುನಾಥ್: 1078914
ಡಿ.ಕೆ.ಸುರೇಶ್: 809324
ಗೆಲುವಿನ ಅಂತರ: 2,69,590

ರಾಮನಗರ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 91,945
ಡಿ.ಕೆ.ಸುರೇಶ್: 92,090
ಕ್ಷೇತ್ರದ ಲೀಡ್: 145 (ಕಾಂಗ್ರೆಸ್)

ಮಾಗಡಿ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 1,13,911
ಡಿ.ಕೆ.ಸುರೇಶ್: 83,938
ಕ್ಷೇತ್ರದ ಲೀಡ್: 29973(ಬಿಜೆಪಿ)

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್:106971
ಡಿ.ಕೆ.ಸುರೇಶ್: 85357
ಕ್ಷೇತ್ರದ ಲೀಡ್: 21,614 (ಬಿಜೆಪಿ)

ಕನಕಪುರ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 83,303
ಡಿ.ಕೆ.ಸುರೇಶ್: 1,08,980
ಕ್ಷೇತ್ರದ ಲೀಡ್: 25677 (ಕಾಂಗ್ರೆಸ್)

ಕುಣಿಗಲ್ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 97,248
ಡಿ.ಕೆ.ಸುರೇಶ್: 73,410
ಕ್ಷೇತ್ರದ ಲೀಡ್: 23,838 (ಬಿಜೆಪಿ)

ಅನೇಕಲ್ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 1,37,693
ಡಿ.ಕೆ.ಸುರೇಶ್: 1,15,328
ಕ್ಷೇತ್ರದ ಲೀಡ್: 22,365 (ಬಿಜೆಪಿ)

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 2,55,756
ಡಿ.ಕೆ.ಸುರೇಶ್: 1,58,627
ಕ್ಷೇತ್ರದ ಲೀಡ್: 97,129 (ಬಿಜೆಪಿ)

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 1,88,726
ಡಿ.ಕೆ.ಸುರೇಶ್: 89,729
ಕ್ಷೇತ್ರದ ಲೀಡ್: 98,997 (ಬಿಜೆಪಿ)

ಇದನ್ನೂ ಓದಿ | ಲಕ್ಷ್ಮೀ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಶೆಟ್ಟರ್‌ಗೆ 50 ಸಾವಿರ ಮತಗಳ ಲೀಡ್; ಕ್ಷೇತ್ರವಾರು ಪಟ್ಟಿ ಇಲ್ಲಿದೆ!

Continue Reading

ಕರ್ನಾಟಕ

Water Supply Cut: ಬೆಂಗಳೂರಿನಲ್ಲಿ ಇನ್ನೆರಡು ದಿನ ಕಾವೇರಿ ನೀರು ಪೂರೈಕೆಯಿಲ್ಲ!

Water Supply Cut: ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಕಾಮಗಾರಿ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಜೂನ್‌ 6 ಮತ್ತು 7ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

VISTARANEWS.COM


on

Water Supply Cut
Koo

ಬೆಂಗಳೂರು: ಕಾವೇರಿ ನೀರು ಸರಬರಾಜು ಯೋಜನೆಯ (Cauvery water) 5ನೇ ಹಂತದ ಅನುಷ್ಠಾನದ ಹಿನ್ನೆಲೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ವಿವಿಧ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ನಗರದ ಬಹುತೇಕ ಕಡೆ ಜೂನ್‌ 6 ಮತ್ತು 7ರಂದು ಕಾವೇರಿ ನೀರಿನ (Water Supply Cut) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಬಗ್ಗೆ ಬೆಂಗಳೂರು ಜಲಮಂಡಳಿ ಸುತ್ತೋಲೆ ಹೊರಡಿಸಿದ್ದು, ಕಾಮಗಾರಿ ಹಿನ್ನೆಲೆಯಲ್ಲಿ ಕಾವೇರಿ 1, 2 ಮತ್ತು 3 ನೇ ಹಂತಗಳ ನೀರು ಸರಬರಾಜು ಘಟಕಗಳನ್ನು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹಾಗೂ ಕಾವೇರಿ ನಾಲ್ಕನೇ ಹಂತ, 1 ಮತ್ತು 2ನೇ ಹಂತ ನೀರು ಸರಬರಾಜು ಘಟಕಗಳನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸ್ಥಗಿತಗೊಳಿಸಲಾಗುತ್ತದೆ. ಹೀಗಾಗಿ ಜೂನ್ 6 ಮತ್ತು ಜೂನ್ 7ರಂದು ಎರಡು ದಿನಗಳ ಕಾಲ ಬೆಂಗಳೂರು ನೀರು ನಗರದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ | Rain News: ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು; ಜೂನ್‌ 13ರವರೆಗೆ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ!

ಈ ಮೊದಲು ಜೂನ್ 4 ರಂದು ಕಾಮಗಾರಿ ಕೈಗೊಳ್ಳಲು ಸಿದ್ಧತೆ ನಡೆಸಲಾಗಿತ್ತು, ಆದರೆ ಕಾರಣಾಂತರಗಳಿಂದ ಇದನ್ನು ಜೂನ್ 6ಕ್ಕೆ ಮುಂದೂಡಲಾಗಿದೆ. ಹೀಗಾಗಿ ಜೂನ್ 6 ಮತ್ತು 7ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವ ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಜಲಮಂಡಳಿ ಮಂಡಳಿ ಕೋರಿದೆ.

ನಾಳೆಯಿಂದ ದೇಶಾದ್ಯಂತ ಕೆಲ ರೈಲುಗಳ ಸಂಚಾರದಲ್ಲಿ ಮಾರ್ಗ, ಸಮಯ ಬದಲಾವಣೆ

Train services

ಬೆಂಗಳೂರು: ಸೇಲಂ ವಿಭಾಗದಲ್ಲಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವುದರಿಂದ ಕೆಲ ರೈಲುಗಳ ಮಾರ್ಗ ಬದಲಾವಣೆ (Train services) ಮಾಡಲು ದಕ್ಷಿಣ ರೈಲ್ವೆಯು ಸೂಚಿಸಿದೆ. ಹೀಗಾಗಿ ಜೂನ್ 05, 06 ಮತ್ತು 13 ರಂದು ಎರ್ನಾಕುಲಂನಿಂದ ಹೊರಡುವ ರೈಲು (ರೈಲು ಸಂಖ್ಯೆ 12678) ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಪೊದನೂರು, ಇರುಗೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಕೊಯಂಬತ್ತೂರ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಪೊದನೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಾಗಲಿದೆ.

ಇನ್ನೂ ಜೂನ್ 05, 06 ಮತ್ತು 13 ರಂದು ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12677 ಕೆಎಸ್ಆರ್ ಬೆಂಗಳೂರು-ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು ಪೊದನೂರು, ಇರುಗೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಕೊಯಂಬತ್ತೂರ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಮತ್ತು ಪೊದನೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಾಗಲಿದೆ.

ಜೂನ್ 05, 12 ಮತ್ತು 19 ರಂದು ಎಸ್ಎಂವಿಟಿ ಬೆಂಗಳೂರಿನಿಂದ ಸಂಚರಿಸುವ ರೈಲು ಸಂಖ್ಯೆ 06084 ಎಸ್ಎಂವಿಟಿ ಬೆಂಗಳೂರು-ಕೊಚುವೇಲಿ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 20 ನಿಮಿಷ ನಿಯಂತ್ರಿಸಲಾಗುತ್ತದೆ.

ಇದನ್ನೂ ಓದಿ: NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

ರೈಲುಗಳ ಮರು ವೇಳಾಪಟ್ಟಿ:

ಕನ ಸೊಲಿಮ್ – ಮಜೊರ್ಡಾ ನಿಲ್ದಾಣಗಳ ನಡುವೆ ಜೋಡಿ ಮಾರ್ಗ ಕಾಮಗಾರಿ ನಿಮಿತ್ತ ರೈಲುಗಳನ್ನು ಮರು ನಿಗದಿಪಡಿಸಲಾಗುವುದು.

1.ರೈಲು ಸಂಖ್ಯೆ 12779 ವಾಸ್ಕೋ-ಡ-ಗಾಮಾ – ಹಜರತ್ ನಿಜಾಮುದ್ದೀನ್ ಎಕ್‌ಪ್ರೆಸ್‌ ಜೂನ್ 10ರಂದು ವಾಸ್ಕೋ-ಡ-ಗಾಮಾದಿಂದ 2 ಗಂಟೆ (120 ನಿಮಿಷ) ತಡವಾಗಿ ಹೊರಡಲಿದೆ.

2.ರೈಲು ಸಂಖ್ಯೆ 18048 ವಾಸ್ಕೋ-ಡ-ಗಾಮಾ – ಹೌಸ್‌ನಗರ ಎಕ್ಸ್ ಪ್ರೆಸ್ ಜೂನ್ 09ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ವಾಸ್ಕೋ-ಡ-ಗಾಮಾದಲ್ಲಿ 1 ಗಂಟೆ 30 ನಿಮಿಷ (90 ನಿಮಿಷಗಳ) ತಡವಾಗಿ ಹೊರಡಲಿದೆ. ಜತೆಗೆ ಮಾರ್ಗದಲ್ಲಿ 1 ಗಂಟೆ 45 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Kannada New Movie: ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಬಹು ನಿರೀಕ್ಷೆಯ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ʼಆಪರೇಷನ್ ಲಂಡನ್ ಕೆಫೆʼ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಆದಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ತಿಳಿಸಿದ್ದಾರೆ.

VISTARANEWS.COM


on

Operation London Cafe movie will be released very soon
Koo

ಬೆಂಗಳೂರು: ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಬಹು ನಿರೀಕ್ಷೆಯ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ‘ಆಪರೇಷನ್ ಲಂಡನ್ ಕೆಫೆ’ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಆದಷ್ಟು ಬೇಗ ಚಿತ್ರವನ್ನು (Kannada New Movie) ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ತಿಳಿಸಿದ್ದಾರೆ.

ಕವೀಶ್ ಮತ್ತು ಮೇಘಾ ಶೆಟ್ಟಿ ಜತೆಯಲ್ಲಿ ಮರಾಠಿಯ ಶಿವಾನಿ ಸುರ್ವೆ. ವಿರಾಟ್ ಮಡಕೆ ಪ್ರಸಾದ್ ಕಾಂಡೇಕರ್ ಹಾಗೂ ಕನ್ನಡದ ಅರ್ಜುನ್ ಕಾಪಿಕಾಡ್, ಬಿ ಸುರೇಶ್, ಕೃಷ್ಣ ಹೆಬ್ಬಾಳೆ, ಧರ್ಮೇಂದ್ರ ಅರಸ್, ನೀನಾಸಂ ಅಶ್ವತ್ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಯುವ ಸಂಗೀತ ನಿರ್ದೇಶಕ ಪ್ರಾನ್ಶು ಝಾ ಸಂಗೀತವಿರುವ ಈ ಚಿತ್ರಕ್ಕೆ ಛಾಯಾಗ್ರಾಹಕ ಸುಂದರನಾಥ ಸುವರ್ಣ ಅವರ ಜತೆಯಲ್ಲಿ ದೀರ್ಘ ಕಾಲ ಕೆಲಸ ಮಾಡಿದ ಅನುಭವವಿರುವ ಡಿ. ನಾಗಾರ್ಜುನ್ ಛಾಯಾಗ್ರಹಣವಿದೆ.

ಇದನ್ನೂ ಓದಿ: Virat Kohli: ಬೌಂಡರಿ ಮೂಲಕ ವಿಶ್ವ ದಾಖಲೆ ಬರೆಯಲು ಸಜ್ಜಾದ ಕಿಂಗ್​ ಕೊಹ್ಲಿ

ಕಲಾ ನಿರ್ದೇಶಕ ವರದರಾಜ್ ಕಾಮತ್, ಕೆ. ಎಂ. ಪ್ರಕಾಶ್ ಸಂಕಲನದ ಜತೆಯಲ್ಲಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಸಡಗರ ರಾಘವೇಂದ್ರ ಸಾಹಿತ್ಯ ಮತ್ತು ವಿಕ್ರಂ ಮೊರ್, ಅರ್ಜುನ್ ಮತ್ತು ಮಾಸ್ ಮಾದ ವಿಶೇಷವಾಗಿ ಸಂಯೋಜಿಸಿದ ಸಾಹಸವಿದೆ.

ಇದನ್ನೂ ಓದಿ: R Ashwin: ಮೆಗಾ ಹರಾಜಿಗೂ ಮುನ್ನ ಚೆನ್ನೈ ಫ್ರಾಂಚೈಸಿ ಸೇರಿದ ಆರ್​. ಅಶ್ವಿನ್; ಹೊಸ ಜವಾಬ್ದಾರಿ

ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರವನ್ನು ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

Continue Reading
Advertisement
CBSE
ದೇಶ2 mins ago

CBSE: 50% ವಿದ್ಯಾರ್ಥಿಗಳ ಫಲಿತಾಂಶಗಳಲ್ಲಿ ಭಾರೀ ಎಡವಟ್ಟು; ಶಾಲೆಗಳಿಗೆ ಸಿಬಿಎಸ್‌ಇ ಖಡಕ್‌ ಸೂಚನೆ

Uddhav Thackeray
Lok Sabha Election 20247 mins ago

Uddhav Thackeray: ಉದ್ಧವ್ ಠಾಕ್ರೆ ಎನ್‌ಡಿಎಗೆ ವಾಪಸ್? ಇಂಡಿ ಒಕ್ಕೂಟದ ಸಭೆಗೆ ಹೋಗದ ಶಿವಸೇನೆ ನಾಯಕ!

T20 World Cup 2024
ಕ್ರೀಡೆ15 mins ago

T20 World Cup 2024: ಒಮಾನ್​ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ

Postal Ballets
ದೇಶ38 mins ago

Postal Ballots: ಕೈ ಹಿಡಿದ ಅಂಚೆ ಮತಗಳು..ಕೊನೆಯ ಕ್ಷಣದಲ್ಲಿ ಸೋತು ಗೆದ್ದ ಅಭ್ಯರ್ಥಿಗಳಿವರು

Megha Shetty Pose With R Madhavan
ಕಿರುತೆರೆ47 mins ago

Megha Shetty: ನಟ ಮಾಧವನ್​ ಭೇಟಿ ಮಾಡಿ ಖುಷಿ ಹಂಚಿಕೊಂಡ ಮೇಘಾ ಶೆಟ್ಟಿ!

valmiki corporation scam nagendra siddaramaiah
ಕರ್ನಾಟಕ1 hour ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇಂದೇ ಸಚಿವ ನಾಗೇಂದ್ರ ರಾಜೀನಾಮೆ?

Sunil Chhetri
ಕ್ರೀಡೆ1 hour ago

Sunil Chhetri: ಭಾರತದ ಫುಟ್ಬಾಲ್ ಐಕಾನ್​​ ಸುನೀಲ್‌ ಚೆಟ್ರಿಗೆ ಇಂದು ವಿದಾಯ ಪಂದ್ಯ

Lok Sabha Election 2024
ದೇಶ1 hour ago

Election results 2024: 280 ಸಂಸದರು ಮೊದಲ ಬಾರಿಗೆ ಲೋಕಸಭೆಗೆ ಎಂಟ್ರಿ! ಲಿಸ್ಟ್‌ನಲ್ಲಿದ್ದಾರೆ ಮಾಜಿ ಸಿಎಂಗಳು, ಸಿನಿ ತಾರೆಯರು, ಹೈಕೋರ್ಟ್‌ ಜಡ್ಜ್‌

Dolly Dhananjay Will He Get Married says During Kotee Trailer Launch
ಸ್ಯಾಂಡಲ್ ವುಡ್1 hour ago

Dolly Dhananjay: ರೋಡಲ್ಲಿ ಹೋಗೋರೆಲ್ಲ ನನ್ನ ಮದ್ವೆ ಬಗ್ಗೆನೇ ಕೇಳ್ತಾರೆ ಎಂದ  ಡಾಲಿ ಧನಂಜಯ್!

Hinduism Beliefs
ಧಾರ್ಮಿಕ1 hour ago

Hinduism Beliefs: ಸತ್ತ ವ್ಯಕ್ತಿಯ ದೇಹವನ್ನು ಏಕಾಂಗಿಯಾಗಿ ಬಿಡಬಾರದು ಅನ್ನೋದು ಯಾಕೆ ಗೊತ್ತೇ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 weeks ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌