Rape In Bhopal | ಕೈತುತ್ತು ಕೊಟ್ಟ 78 ವರ್ಷದ ಭಿಕ್ಷುಕಿ ಮೇಲೆಯೇ ಅತ್ಯಾಚಾರ ಎಸಗಿದ ದುರುಳ! - Vistara News

ಕ್ರೈಂ

Rape In Bhopal | ಕೈತುತ್ತು ಕೊಟ್ಟ 78 ವರ್ಷದ ಭಿಕ್ಷುಕಿ ಮೇಲೆಯೇ ಅತ್ಯಾಚಾರ ಎಸಗಿದ ದುರುಳ!

ಭೋಪಾಲ್‌ನ ಬೀದಿಗಳಲ್ಲಿ ಮಲಗುತ್ತಿದ್ದವನಿಗೆ ಊಟ ಕೊಟ್ಟ, ಮಗನಂತೆ ನೋಡಿಕೊಳ್ಳುತ್ತಿದ್ದ ವೃದ್ಧೆಯ ಮೇಲೆಯೇ ದುರುಳನೊಬ್ಬ ಅತ್ಯಾಚಾರ (Rape In Bhopal) ಎಸಗಿದ್ದಾನೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

16-year-Old Girl Raped By Instagram Friend In Kanpur's Hookah Bar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭೋಪಾಲ್:‌ ದೇಶದಲ್ಲಿ ನಡೆಯುವ ಕೆಲವೊಂದು ಕೃತ್ಯಗಳನ್ನು ನೋಡಿದರೆ ಸಮಾಜದಲ್ಲಿ ಮೌಲ್ಯಗಳು ಮರೀಚಿಕೆಯಾಗಿವೆಯೇನೋ ಅನಿಸುತ್ತದೆ. ಇದಕ್ಕೆ ನಿದರ್ಶನ ಎಂಬಂತೆ ಮಧ್ಯಪ್ರದೇಶ ರಾಜಧಾನಿ ಭೋಪಾಲ್‌ನಲ್ಲಿ 78 ವರ್ಷದ ಭಿಕ್ಷುಕಿ ಮೇಲೆ (Rape In Bhopal) ದುರುಳನೊಬ್ಬ ಅತ್ಯಾಚಾರ ಎಸಗಿದ್ದಾನೆ. ಕೃತ್ಯ ಎಸಗಿದ 37 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಬೀಬ್‌ಗಂಜ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ದೇವಾಲಯವೊಂದರ ಬಳಿ ವೃದ್ಧೆಯು ಭಿಕ್ಷೆ ಬೇಡುತ್ತಾರೆ. ದೇವಸ್ಥಾನಕ್ಕೆ ಬರುವವರು ನೀಡುವ ಹಣ ಹಾಗೂ ಆಹಾರದಿಂದಲೇ ಇವರು ಜೀವನ ಸಾಗಿಸುತ್ತಿದ್ದಾರೆ. ಆದರೆ, ಕಳೆದ ಅಕ್ಟೋಬರ್‌ 26ರ ಮಧ್ಯರಾತ್ರಿ ದೇವಾಲಯ ಪಕ್ಕದ ಗುಡಿಸಲಿನಲ್ಲಿ ವೃದ್ಧೆ ಮಲಗಿದ್ದಾಗ ಆಕೆಯ ಮೇಲೆ ವ್ಯಕ್ತಿಯು ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ವ್ಯಕ್ತಿಯು ಬೀದಿ ಬದಿ ಮಲಗುತ್ತಿದ್ದ. ಅವನು ಕೂಡ ದೇವಾಲಯದ ಎದುರು ಭಿಕ್ಷೆ ಬೇಡುತ್ತಿದ್ದ. ಎಷ್ಟೋ ಸಲ ವೃದ್ಧೆಯೇ ಆತನಿಗೆ ಊಟ ಕೊಡುತ್ತಿದ್ದಳು ಹಾಗೂ ಮಗನಂತೆ ನೋಡಿಕೊಳ್ಳುತ್ತಿದ್ದಳು. ಅಂತಹ ಮಹಿಳೆ ಮೇಲೆಯೇ ದುರುಳನು ಅತ್ಯಾಚಾರಗೈದಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದರು.

ಇದನ್ನೂ ಓದಿ | ಅಪರಿಚಿತ ಮಹಿಳೆ ಶವ ಅರೆನಗ್ನವಾಗಿ ಪತ್ತೆ, ಅತ್ಯಾಚಾರ- ಕೊಲೆ ಶಂಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Hunters Arrest :ರಾಜ್ಯದ ಹಲವೆಡೆ ಬೇಟೆಗಾರರ ಬೆನ್ನತ್ತಿರುವ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾಡು ಹಂದಿ ಹಾಗೂ ಬಾಗಲಕೋಟೆಯಲ್ಲಿ ಕೃಷ್ಣ ಮೃಗ ಬೇಟೆಯಾಡುತ್ತಿದ್ದವರನ್ನು ಬಂಧಿಸಲಾಗಿದೆ. ಇತ್ತ ಶಿವಮೊಗ್ಗದಲ್ಲಿ ಬೇಟೆಗಾರರ ಕೃತ್ಯಕ್ಕೆ ಕಾಡು ಕೋಣಗಳು ಬಲಿಯಾಗಿವೆ.

VISTARANEWS.COM


on

By

Hunters Arrest
Koo

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಾಡು ಕೋಣಗಳ ಮಾರಣಹೋಮ ಹೋಗಿದೆ. ದುಷ್ಕರ್ಮಿಗಳು (Hunters Arrest) ನಾಲ್ಕೈದು ಕಾಡು ಕೋಣಗಳನ್ನು ಬೇಟೆಯಾಡಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಅಕ್ರಮ ಬಂದೂಕು ಬಳಸಿ ಕಾಡುಕೋಣಗಳ ಹತ್ಯೆ (Bison) ಮಾಡಲಾಗಿದೆ. ಕಾಡುಕೋಣಗಳ ಕಳೆಬರ ಪತ್ತೆಯಾಗಿದೆ.

ಸ್ಥಳಕ್ಕೆ ಸಾಗರ ಡಿಎಫ್‌ಓ ಸಂತೋಷ್ ಕೆಂಚಣ್ಣನವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡುಕೋಣದ ಕಳೇಬರಗಳನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಿದ್ದಾರೆ. ಆರೋಪಿಗಳು ಕಾಡುಕೋಣಗಳ ಮಾಂಸಕಾಗಿ ಬೇಟೆಯಾಡಿರುವ ಸಾಧ್ಯತೆ ಇದೆ. ಸದ್ಯ ಅರಣ್ಯಾಧಿಕಾರಿಗಳು ಕಾಡುಕೋಣಗಳ ಹತ್ಯೆ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಕಾಡು ಹಂದಿಗಳ ಬೇಟೆ

ಚಿಕ್ಕಬಳ್ಳಾಪುರದಲ್ಲಿ ಕಾಡು ಹಂದಿಗಳ ಬೇಟೆಯಾಡಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಬೀಚಗಾನಹಳ್ಳಿ ಮಿಟ್ಟೇಮರಿ ಅರಣ್ಯದಲ್ಲಿ ಕಾಡು ಹಂದಿಗಳ ಬೇಟೆಯಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಸಿಕ್ಕಿದ ಆರು ಕಾಡು ಹಂದಿಗಳನ್ನು ರಕ್ಷಣೆ ಮಾಡಲಾಗಿದೆ. ದಾಳಿಯಲ್ಲಿ ಇಬ್ಬರು ಸಿಕ್ಕಿ ಬಿದ್ದಿದ್ದು, ನಾಲ್ವರು ಪರಾರಿ ಆಗಿದ್ದಾರೆ. ಒಂದು ಬುಲೇರೋ ವಾಹನ ಸೀಸ್ ಮಾಡಿದ್ದಾರೆ. ಬಾಗೇಪಲ್ಲಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Hunters Arrest

ಇದನ್ನೂ ಓದಿ: Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

ಕೃಷ್ಣ ಮೃಗ ಬೇಟೆಯಾಡುತ್ತಿದ್ದ 7 ಜನರ ಬಂಧನ

ಬಾಗಲಕೋಟೆಯ ಜಮಖಂಡಿ ಹೊರ ವಲಯದ ಅರಣ್ಯ ಪ್ರದೇಶದಲ್ಲಿ ಕೃಷ್ಣ ಮೃಗ ಬೇಟೆಯಾಡುತ್ತಿದ್ದ 7 ಜನರನ್ನು ಬಂಧಿಸಲಾಗಿದೆ. ರಾಯಭಾಗ ತಾಲೂಕಿನ ಕಡಕಬಾವಿ ಗ್ರಾಮದ ಸಿದ್ದಪ್ಪ ಪಿಡಾಯಿ (23), ಬ್ಯಾಕೋಡ ಗ್ರಾಮದ ಸುರೇಶ್ ಪಕಾಂಡೆ (21), ಚೇತನ್ ಬಿದರಿ (24) , ಕಂಕನವಾಡಿ ಗ್ರಾಮದ ನಿಂಗಪ್ಪ ಪಡತಾರೆ (24) ಹಾಗೂ ದೇವರಪಟ್ಟಿ ಗ್ರಾಮದ ಪ್ರಜ್ವಲ್ ಮೆಳವಂಕಿ (18), ರಬಕವಿ ಬನಹಟ್ಟಿ ತಾಲ್ಲೂಕಿನ ಹಳಿಂಗಳಿ ಗ್ರಾಮದ ಶಬ್ಬಿರ್ ಗುಡ್ಡದಮನಿ (25), ರಮಜಾನ್‌ಸಾಬ್ ಅಲಸ್ (25) ಬಂಧಿತ ಆರೋಪಿಗಳು.

Hunters Arrest

ಬಂಧಿತರಿಂದ 13.5 ಕೆಜಿ ಹಂದಿ ಮಾಂಸ, 4 ಮೊಬೈಲ್, ಕಾರು, ನಾಲ್ಕು ಬೇಟೆ ನಾಯಿಯನ್ನು ವಶಕ್ಕೆ ಪಡೆಯಲಾಗಿದೆ. ಡಿಸಿಎಫ್‌ಸಿ ಶ್ರೀಧರ್ ನೇತೃತ್ವದಲ್ಲಿ ಎಸಿಎಫ್ ರಾಜೇಶ್ವರಿ, ಆರ್‌ಎಫ್‌ಒ ಪವನ್ ಕುರನಿಂಗ ತಂಡ ಕಾರ್ಯಾಚರಣೆ ನಡೆಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Actor Darshan: ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ದರ್ಶನ್‌ ಈ ಬಗ್ಗೆ ಮಾತನಾಡಿ ʻʻತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಉಮಾಪತಿಗೆ ಪ್ರಶ್ನೆ ಮಾಡಿದ್ದರು. ʻಈ ಕಥೆ ನಾನು ಮಾಡಿಸಿದೆ, ಕಥೆ ನಾನು ಕೊಟ್ಟೆ ಎಂದು ಎಂದು ಹೇಳಿಕೊಂಡು ಬಂದಿದ್ದೆಯಲ್ವಾ?ಇಂಥ ಒಳ್ಳೆ ಕಥೆ ಯಾಕೆ ಬಿಟ್ಟೆ ನೀನು. ಅಯ್ಯೋ ತಗಡೇ… ಎಲ್ಲ ಆಧಾರ ಇಟ್ಟುಕೊಂಡೇ ಮಾತನಾಡಬೇಕುʼʼ ಎಂದು ಉಮಾಪತಿಗೆ ನೇರವಾಗಿ ದರ್ಶನ್‌ ಖಡಕ್ ವಾರ್ನಿಂಗ್ ಕೊಟ್ಟಿದ್ದರು.

VISTARANEWS.COM


on

Actor Darshan tagadu word umapathy counter now
Koo

ಬೆಂಗಳೂರು: ʻಕಾಟೇರʼ ಸಿನಿಮಾದ 50ನೇ ದಿನದ ಸಂಭ್ರಮಾಚರಣೆ ಸಂದರ್ಭದಲ್ಲಿ ದರ್ಶನ್‌ (Actor Darshan) ʻರಾಬರ್ಟ್ʼ ಸಿನಿಮಾದ ನಿರ್ಮಾಪಕ ಉಮಾಪತಿಗೆ ‘ತಗಡು’ ಇನ್ನಿತರೆ ಕಠು ಪದಗಳನ್ನು ಬಳಸಿ ನಿಂದಿಸಿದ್ದರು. ಇದಾದ ಬಳಿಕ ನಿರ್ಮಾಪಕ ಉಮಾಪತಿ ಕೂಡ ಬೇಸರದಲ್ಲಿಯೇ ಪ್ರತಿಕ್ರಿಯೆ ನೀಡಿದ್ದರು. ಇದೀಗ ದರ್ಶನ್‌ ಕೊಲೆ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದಾರೆ. ಅಂದು ʻತಗಡುʼ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಪರೋಕ್ಷವಾಗಿ ಪೋಸ್ಟ್‌ ಮೂಲಕ ತಿರುಗೇಟು ಕೊಟ್ಟಿದ್ದಾರೆ. “ತಾಳ್ಮೆ ಕೆಲವೊಮ್ಮೆ ಶಕ್ತಿ” ಎಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ ಉಮಾಪತಿ.

ತಗಡು ಯಾರು ಗೊತಾಯ್ತಾ? ಎಂದು ಪರೋಕ್ಷವಾಗಿ ಕೌಂಟರ್ ಕೊಟ್ಟಿದ್ದಾರೆ ಉಮಾಪತಿ. ಉಮಾಪತಿ ಪರವಾಗಿ ಹಲವು ಮೀಮ್ಸ್ ವೈರಲ್ ಆಗಿದ್ದವು. ಇವುಗಳನ್ನು ರಿಪೋಸ್ಟ್‌ ಮಾಡಿಕೊಳ್ಳುತ್ತಿದ್ದಾರೆ ಉಮಾಪತಿ.

ದರ್ಶನ್‌ ಉಮಾಪತಿಗೆ ವಾರ್ನಿಂಗ್‌ ನೀಡಿದ್ದೇನು?

ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ದರ್ಶನ್‌ ಈ ಬಗ್ಗೆ ಮಾತನಾಡಿ ʻʻತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಉಮಾಪತಿಗೆ ಪ್ರಶ್ನೆ ಮಾಡಿದ್ದರು. ʻಈ ಕಥೆ ನಾನು ಮಾಡಿಸಿದೆ, ಕಥೆ ನಾನು ಕೊಟ್ಟೆ ಎಂದು ಎಂದು ಹೇಳಿಕೊಂಡು ಬಂದಿದ್ದೆಯಲ್ವಾ?ಇಂಥ ಒಳ್ಳೆ ಕಥೆ ಯಾಕೆ ಬಿಟ್ಟೆ ನೀನು. ಅಯ್ಯೋ ತಗಡೇ… ಎಲ್ಲ ಆಧಾರ ಇಟ್ಟುಕೊಂಡೇ ಮಾತನಾಡಬೇಕುʼʼ ಎಂದು ಉಮಾಪತಿಗೆ ನೇರವಾಗಿ ದರ್ಶನ್‌ ಖಡಕ್ ವಾರ್ನಿಂಗ್ ಕೊಟ್ಟಿದ್ದರು.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

ದೇಹ ತೂಕ ವಿದ್ದರೆ ಸಾಲದು ಮಾತು ತೂಕವಿರಬೇಕು

ನಟ ದರ್ಶನ್ ಬಳಸಿದ ಪದ ಬಳಕೆ ಬಗ್ಗೆ ಬಳಿಕ ಉಮಾಪತಿ ಮಾತನಾಡಿ ʻʻಅದು ತಪ್ಪು ಸರ್, ಸಮಸ್ಯೆಗಳು ಎಲ್ಲ ಕಡೆ ಬರುತ್ತದೆ. ಆದರೆ ಅದನ್ನು ಹ್ಯಾಂಡಲ್ ಮಾಡುವ ರೀತಿ ಗೊತ್ತಿರಬೇಕು. ಸಮಾಜದಲ್ಲಿ ತೂಕವಿರುವ ವ್ಯಕ್ತಿ ಘನತೆಯಿಂದ ನಡೆದುಕೊಳ್ಳಬೇಕು. ದೇಹ ತೂಕ ವಿದ್ದರೆ ಸಾಲದು ಮಾತು ತೂಕವಿರಬೇಕು. ನಾನು ತಪ್ಪು ಮಾಡಿದರೂ ತಪ್ಪೆ. ಬೇರೆ ಯಾರಾದರೂ ತಪ್ಪು ಮಾಡಿದರೆ ತಪ್ಪೇ. ನಾವೆಲ್ಲ ಸಿನಿಮಾ ಮುಖಾಂತರ ಮೆಸೆಜ್ ಕೊಡಬೇಕು. ಈ ವಿವಾದಿಂದ ಸಂದೇಶ ಕೊಡುವಂತದ್ದು ಏನಿಲ್ಲʼʼಎಂದಿದ್ದರು.

Continue Reading

ರಾಯಚೂರು

Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

Road Accident : ರಾಯಚೂರು ಹಾಗೂ ಕೊಡಗಿನ ಪ್ರತ್ಯೇಕ ಕಡೆಗಳಲ್ಲಿ ಅಪಘಾತ ನಡೆದಿದೆ. ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟರೆ, ಕಾರೊಂದು ಮತ್ತೊಂದು ಕಾರಿಗೆ ಗುದ್ದಿದ ರಭಸಕ್ಕೆ ನಾಲ್ಕೈದು ವಾಹನಗಳು ಜಖಂಗೊಂಡಿವೆ.

VISTARANEWS.COM


on

By

Road Accident
Koo

ರಾಯಚೂರು: ನಿಂತಿದ್ದ ಟ್ಯಾಂಕರ್ ಟ್ಯಾಲಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬಳಿ ಅಪಘಾತ ನಡೆದಿದೆ. ಯಮನಪ್ಪ (40) ಮೃತ ದುರ್ದೈವಿ.

ಮಸ್ಕಿ ತಾಲೂಕಿನ ಗುಡಿಹಾಳ ಗ್ರಾಮದ ಯಮನಪ್ಪ ಲಿಂಗಸೂಗೂರು ಕಡೆಯಿಂದ ಮಸ್ಕಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ನಿಂತಿದ್ದ ಟ್ಯಾಂಕರ್‌ ಟ್ಯಾಲಿ ಕಾಣದೆ ಬೈಕ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿದ್ದು, ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ ಇದ್ದ ಗಂಗಣ್ಣ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಸ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಜ್ಜು-ಗುಜ್ಜಾಗಿದ್ದ ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಹಿಟ್‌ ಆ್ಯಂಡ್‌ ರನ್‌ ಕೇಸ್‌ಗೆ ಬೈಕ್‌ ಸವಾರ ಸಾವು

ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರಕನ್ನಡದ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಶಿರಾಲಿ ಬಳಿ ಘಟನೆ ನಡೆದಿದೆ. ರಾಮಚಂದ್ರ ನಾಗೇಶ್ ಮೊಗೇರ (42) ಮೃತ ದುರ್ದೈವಿ.

ರಾಮಚಂದ್ರ ಭಟ್ಕಳ ತಾಲೂಕಿನ ಅಳ್ವೆಕೋಡಿ ನಿವಾಸಿಯಾಗಿದ್ದು, ಕೈಕಿಣಿಯಿಂದ ಅಳ್ವೆಕೋಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮುರ್ಡೇಶ್ವರ ಕಡೆಯಿಂದ ಭಟ್ಕಳ ಕಡೆ ತೆರಳುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಾಘತದ ಬಳಿಕ ವೆಂಕಟಾಪುರ ಬಳಿ ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದಾನೆ.

ಗಂಭೀರ ಗಾಯಗೊಂಡಿದ್ದ ರಾಮಚಂದ್ರರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಕೊಡಗಿನಲ್ಲಿ ಕಾರಿಗೆ ಕಾರು ಡಿಕ್ಕಿ

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ನಾಲ್ಕು ಕಾರುಗಳು ಜಖಂಗೊಂಡಿವೆ. ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ಮೀನುಪೇಟೆಯಲ್ಲಿ ಘಟನೆ ನಡೆದಿದೆ. ನಿದ್ರೆ ಮಂಪರಿನಲ್ಲಿ ಇದ್ದಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ನಸುಕಿನ ಜಾವ 2.30 ರ ಸಮಯಕ್ಕೆ ಅಪಘಾತ ನಡೆದಿದ್ದು, ಕಾರಿನಲ್ಲಿನದ್ದ ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor Darshan : ಕೊಲೆ ಕೇಸ್‌ ಬೆನ್ನಲ್ಲೆ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಈಜಲು ಹೋಗಿ ಬಾಲಕರು ನೀರುಪಾಲು

ಮೈಸೂರು: ಈಜಲು (Swimming) ಹೋಗಿ ಇಬ್ಬರು ಬಾಲಕರು ನೀರು ಪಾಲಾದ ಘಟನೆ (Drowned) ಮೈಸೂರಿನ ಸೌಕಾರಹುಂಡಿ ಕೆರೆಯಲ್ಲಿ (Lake) ನಡೆದಿದೆ. ಹೂಟಗಳ್ಳಿ ಹೌಸಿಂಗ್ ಬೋರ್ಡ್ ನಿವಾಸಿ ವರುಣ್ (16) ಹಾಗೂ ಬಸವನಪುರ ನಿವಾಸಿ ಜಸ್ವಂತ್ (14) ಮೃತ ದುರ್ದೈವಿಗಳು.

ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಈ ಯುವಕರು ಈಜುವ ವೇಳೆ ದುರ್ಘಟನೆ ನಡೆದಿದೆ. ನಡು ಕೆರೆಯಲ್ಲಿದ್ದಾಗ ಬಳಲಿ ತೀರಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾವರೆ ಕೊಯ್ಯಲು ಹೋಗಿ ಹೂವಿನ ವ್ಯಾಪಾರಿ ಸಾವು

ತುಮಕೂರು: ಕೆರೆಯಲ್ಲಿದ್ದ ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಸಾವಿಗೀಡಾದ ಘಟನೆ ತುಮಕೂರು ತಾಲೂಕಿನ ಅರಕೆರೆ ಕೆರೆಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಮಧ್ಯವೆಂಕಟಪುರದ ನಿವಾಸಿ ಶ್ರೀನಿವಾಸ್ (35) ಮೃತ ದುರ್ದೈವಿ.

ಹೂವಿನ ವ್ಯಾಪಾರಿಯಾಗಿದ್ದ ಶ್ರೀನಿವಾಸ್ ಅವರು, ಅದೇ ಊರಿನ ಕೆಂಪರಾಮಯ್ಯ, ಚಿಕ್ಕಹನುಮಯ್ಯ ಜೊತೆ ಕಮಲದ ಹೂ ಕೀಳಲು ಹೋಗಿದ್ದರು. ಈ ವೇಳೆ ಕೆಸರಲ್ಲಿ ಸಿಲುಕಿ ಮೇಲೇಳಲಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ದುರ್ಘಟನೆ ನಡೆದಿದ್ದು, ಜೊತೆಗಿದ್ದವರು ಊರಿಗೆ ಹೋಗಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ತಿಬೆಲೆಯಲ್ಲಿ ಬಾಲಕ ನೀರುಪಾಲು

ಆನೇಕಲ್: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲಾಗಿರುವ ಘಟನೆ (Drowns in lake) ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಬಳ್ಳೂರು ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ನಡೆದಿದೆ. ಅತ್ತಿಬೆಲೆ ವಾಸಿ ಧನುಷ್ (14) ಮೃತ ಬಾಲಕ.

ರೈನ್ ಬೋ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ, ಭಾನುವಾರ ಶಾಲೆಗೆ ರಜೆ ಇದಿದ್ದದ್ದರಿಂದ ಸ್ನೇಹಿತರ ಜತೆ ಈಜಲು ಕೆರೆಗೆ ಹೋಗಿದ್ದ. ಈ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan: ದಾನ ಧರ್ಮಗಳೇ ದರ್ಶನ್‌ರನ್ನ ಕಾಪಾಡುತ್ತೆ ಎಂದ ʻನಾಗಕನ್ನಿಕೆʼ ಸೀರಿಯಲ್‌ ನಟಿ!

Actor Darshan: ಕನ್ನಡ, ತಮಿಳು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಮಿಂಚಿದ್ದಾರೆ. ಇನ್ನು ದಮಯಂತಿ, BMW, ಮಹಾನುಬಾವರು, ಧೈರ್ಯಂ ಸರ್ವತ್ರ ಸಾಧನಂ, ಖಡಕ್ ಮತ್ತು ಇನ್ನಿತರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ನಟಿ ದರ್ಶನ್‌ ಕುರಿತಾಗಿ ಪ್ರತಿಕ್ರಿಯಿಸಿದ್ದಾರೆ. ʻʻಕಾನೂನು ಇದೆ ನೋಡಿಕೊಳ್ಳುತ್ತೆ. ತಪ್ಪು ಮಾಡಿಲ್ಲವಾದರೆ ಅವರ ದಾನಧರ್ಮಗಳೇ ಅವರನ್ನ ಕಾಪಾಡುತ್ತೆ. ಕಾನೂನಿನ ಮುಂದೆ ನಾವೆಲ್ಲರೂ ಚಿಕ್ಕವರೆ. ಸದ್ಯಕ್ಕಿನ್ನು ಆರೋಪಿಯಷ್ಟೆ ಅಪರಾಧಿಯಾಗಿಲ್ಲ…ಮುಂದೆ ಕಾದು ನೋಡೋಣʼʼಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Actor Darshan support by Anusha Rai
Koo

ಬೆಂಗಳೂರು: ನಟಿ ಅನುಷಾ ರೈ ಅವರು ‘ನಾಗಕನ್ನಿಕೆ’ ಹಾಗೂ ‘ರಾಜಕುಮಾರಿ’ ಧಾರಾವಾಹಿಗಳ ಮೂಲಕ ಕನ್ನಡ ಕಿರುತೆರೆ ವೀಕ್ಷಕರಿಗೆ ಚಿರಪರಿಚಿತರಾಗಿದ್ದಾರೆ. ಕನ್ನಡ, ತಮಿಳು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಮಿಂಚಿದ್ದಾರೆ. ಇನ್ನು ದಮಯಂತಿ, BMW, ಮಹಾನುಬಾವರು, ಧೈರ್ಯಂ ಸರ್ವತ್ರ ಸಾಧನಂ, ಖಡಕ್ ಮತ್ತು ಇನ್ನಿತರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ನಟಿ ದರ್ಶನ್‌ ಕುರಿತಾಗಿ ಪ್ರತಿಕ್ರಿಯಿಸಿದ್ದಾರೆ. ʻʻಕಾನೂನು ಇದೆ ನೋಡಿಕೊಳ್ಳುತ್ತೆ. ತಪ್ಪು ಮಾಡಿಲ್ಲವಾದರೆ ಅವರ ದಾನಧರ್ಮಗಳೇ ಅವರನ್ನ ಕಾಪಾಡುತ್ತೆ. ಕಾನೂನಿನ ಮುಂದೆ ನಾವೆಲ್ಲರೂ ಚಿಕ್ಕವರೆ. ಸದ್ಯಕ್ಕಿನ್ನು ಆರೋಪಿಯಷ್ಟೆ ಅಪರಾಧಿಯಾಗಿಲ್ಲ…ಮುಂದೆ ಕಾದು ನೋಡೋಣʼʼಎಂದು ಬರೆದುಕೊಂಡಿದ್ದಾರೆ.

ನಟಿ ಅನುಷಾ ರೈ ಇನ್‌ಸ್ಟಾದಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻಅಭಿಮಾನಿಗಳು ನನಗೆ ವರ್ಷದ 365 ದಿನವೂ ಊಟ ಹಾಕ್ತಾರೆ. ಆದ್ರೆ ನಾನು ಹುಟ್ಟುಹಬ್ಬದ ಒಂದು ದಿನ‌ ಮಾತ್ರ ಅವರಿಗೆ ಊಟ ಹಾಕ್ತೀನಿ ಎಂದವರು ದರ್ಶನ್.. ಮೈಮೇಲೆ ಆತರ ನನ್ನ ಹೆಸರನ್ನು ಹಚ್ಚೆ ಹಾಕಿಸಿಕೊಳ್ಳಬೇಡಿ ಸಿನಿಮಾ ನೋಡಿ ಸಾಕು, ನಿಮ್ಮ ಅಪ್ಪ ಅಮ್ಮನ‌ ಹೆಸರು ಹಾಕಿಸಿಕೊಳ್ಳಿ ಎನ್ನುತ್ತಾ ತಾವೇ ಎದೆಯ ಮೇಲೆ ನನ್ನ‌ ಸೆಲೆಬ್ರಿಟೀಸ್ ಎಂದು ಹಚ್ಚೆ ಹಾಕಿಸಿಕೊಂಡ ಅಭಿಮಾನಿಗಳ ದಾಸ. .ನಾನು ಕಾರಲ್ಲಿ ಸ್ಪೀಡಾಗಿ ಹೋಗೊವಾಗ ಹಿಂದೆ ಬರಬೇಡಿ, ಅಕಸ್ಮಾತ್ ಆಕ್ಸಿಡೆಂಟ್ ಆಗಿ ಹೆಚ್ಚು ಕಮ್ಮಿ ಆದ್ರೆ ನಿಮ್ಮ ಕುಟುಂಬದ ಗತಿ ಏನು?? ಎಂದು ಅಭಿಮಾನಿಗಳಿಗೆ ಪ್ರೀತಿಯಿಂದ ಕಾಳಜಿಯಿಂದ ಬುದ್ಧಿವಾದ ಹೇಳಿದ್ದ ಈ ಮೈಸೂರಿನ ಆರಡಿಯ ತೂಗುದೀಪʼʼಎಂದು ಹೇಳಿದ್ದಾರೆ.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!


ʻʻಇಂತಹ ವ್ಯಕ್ತಿಯಿಂದ ಇಂತಹ ತಪ್ಪಾಯಿತೆಂದರೆ ನಂಬಲಸಾಧ್ಯ. ಅದೇನೆ ಆದರೂ ಕಾನೂನು ಇದೆ ನೋಡಿಕೊಳ್ಳುತ್ತೆ. ತಪ್ಪು ಮಾಡಿಲ್ಲವಾದರೆ ಅವರ ದಾನಧರ್ಮಗಳೇ ಅವರನ್ನ ಕಾಪಾಡುತ್ತೆ. ಕಾನೂನಿನ ಮುಂದೆ ನಾವೆಲ್ಲರೂ ಚಿಕ್ಕವರೆ. ಸದ್ಯಕ್ಕಿನ್ನು ಆರೋಪಿಯಷ್ಟೆ ಅಪರಾಧಿಯಾಗಿಲ್ಲ…ಮುಂದೆ ಕಾದು ನೋಡೋಣ. ಇನ್ನು ಈ ಅನಾಹುತಕ್ಕೆ ಬಲಿಯಾದ ರೇಣುಕಾಸ್ವಾಮಿ ಗೂ ಅವರ ಕುಟುಂಬಕ್ಕೂ ಆ ದೇವರು ದುಃಖವನ್ನು ಭರಿಸೊ ಶಕ್ತಿ ನೀಡಲಿ. ಅವರು ಮಾಡಿದ್ದು ಸಹ ತಪ್ಪೇ ಆದರೂ ಈರೀತಿಯ ಶಿಕ್ಷೆ ಸರಿಯಲ್ಲ. ಕಾನೂನಿನ ಪ್ರಕಾರವೇ ರೇಣುಕಾಸ್ವಾಮಿಗೆ ಶಿಕ್ಷೆ ಕೊಡಿಸೊ ಬದಲು ಯಾರೋ ಜೀವ ತೆಗೆದಿದ್ದು ಅಕ್ಷಮ್ಯ ಅಪರಾಧ. ತಂದೆಯಾಗುವ ಮೊದಲೇ ಕಣ್ ಮುಚ್ಚಿದ ರೇಣುಕಾಸ್ವಾಮಿ ಮತ್ತೆ ಮಗುವಾಗಿ ಹೆಂಡತಿಯ ಹೊಟ್ಟೆಯಲ್ಲಿ ಹುಟ್ಟಲಿ ಅನ್ನೋದೆ ನಮ್ಮ ಹಾರೈಕೆ….ಕ್ಷಮಿಸಿ

ಈ ಪ್ರಕರಣದಲ್ಲಿ ದರ್ಶನ್ ಕುಟುಂಬಕ್ಕೆ ಶಾಪ ಹಾಕಿದರೆ ಪ್ರಯೋಜನವೇನು ?? ನನ್ನ ತಂದೆ ಒಬ್ಬ ದೊಡ್ಡ ಸ್ಟಾರ್ ಅನ್ನೋದು ಸಹ ಗೊತ್ತಿಲ್ಲದ ಆ ಹಾಲುಗಲ್ಲದ ಮುದ್ದು ಹುಡುಗ ವಿನೀಶ್ ನೋಡಿದರೆ ಸಂಕಟವಾಗದಿರುವುದೆ? ಫಾದರ್ಸ್ ಡೇ ದಿನ ತಂದೆಯನ್ನು ನೆನೆದು ವಿನೀಶ್ ಹಾಕಿದ ಪೋಸ್ಟ್ ಗೆ ಮನಕಲಕದೆ ಇರುವುದೇ ? ಜೊತೆಗೆ ದರ್ಶನ್ ಜೀವನಕ್ಕೆ 22 ವರ್ಷದಿಂದ ವಿಜಯವೂ ಆಗಿ ಲಕ್ಷ್ಮಿಯೂ ಆಗಿರುವ ವಿಜಯಲಕ್ಷ್ಮಿ ಯವರನ್ನು ತಪ್ಪಿತಸ್ಥರಂತೆ ಕಾಣೋದು ಸರಿಯೇ?? ಇಂತಹ ಸಂದರ್ಭದಲ್ಲಿ ಅವರಿಬ್ಬರಿಗೂ ಧೈರ್ಯ ಹೇಳಬೇಕೇ ಹೊರತು ಹೀಯಾಳಿಸುವುದು ಬೇಡʼʼಎಂದು ಬರೆದುಕೊಂಡಿದ್ದಾರೆ.

ಇದೀಗ ನಟಿಯ ಈ ಪೋಸ್ಟ್‌ಗೆ ಚರ್ಚೆಗಳು ಆಗುತ್ತಿವೆ. ಇನ್ನು ‘ಬೆಂಗಳೂರಿನ ಇನ್’ ಸಿನಿಮಾದಲ್ಲಿಯೂ ನಟಿಸಿದ್ದರು ಅನುಷಾ ರೈ .

Continue Reading
Advertisement
Hunters Arrest
ಕ್ರೈಂ24 mins ago

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Petrol Diesel Price Hike
ಕರ್ನಾಟಕ24 mins ago

Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Kisan Samman Nidhi
ದೇಶ47 mins ago

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

petrol diesel price hike bjp protest
ಪ್ರಮುಖ ಸುದ್ದಿ53 mins ago

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Actor Darshan tagadu word umapathy counter now
ಕ್ರೈಂ53 mins ago

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

MS Dhoni
ಕ್ರೀಡೆ57 mins ago

MS Dhoni: ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ತಡೆದು ನಿಲ್ಲಿಸಿ ಫೋಟೊ ತೆಗೆಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

Road Accident
ರಾಯಚೂರು57 mins ago

Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

Actor Darshan support by Anusha Rai
ಸ್ಯಾಂಡಲ್ ವುಡ್1 hour ago

Actor Darshan: ದಾನ ಧರ್ಮಗಳೇ ದರ್ಶನ್‌ರನ್ನ ಕಾಪಾಡುತ್ತೆ ಎಂದ ʻನಾಗಕನ್ನಿಕೆʼ ಸೀರಿಯಲ್‌ ನಟಿ!

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಖರೀದಿಸುವವರಿಗೆ ರಿಲೀಫ್‌; ಇಳಿದ ಚಿನ್ನದ ದರ

GPF Interest
ಕರ್ನಾಟಕ1 hour ago

GPF Interest: ಸರ್ಕಾರಿ ನೌಕರರೇ ಗಮನಿಸಿ; 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ಸರ್ಕಾರ ಆದೇಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು2 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ20 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ21 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌