ವಿಸ್ತಾರ ಸಂಪಾದಕೀಯ: ಬಾಲಿಯಲ್ಲಿ ಭಾರತದ ರಾಜತಾಂತ್ರಿಕ ವಿವೇಕ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಬಾಲಿಯಲ್ಲಿ ಭಾರತದ ರಾಜತಾಂತ್ರಿಕ ವಿವೇಕ

ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿರಿ ಧಾನ್ಯಗಳ ಮಹತ್ವವನ್ನು ಸಾರಿರುವುದು ಗಮನಾರ್ಹವಾಗಿದೆ. ರಷ್ಯಾ ನಮ್ಮ ಮಿತ್ರ ದೇಶವೇ ಆಗಿದ್ದರೂ, ಉಕ್ರೇನ್‌ ಮೇಲಿನ ದಾಳಿ ನಿಲ್ಲಿಸಬೇಕು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿರುವುದು ವಿಶ್ವಶಾಂತಿಯ ಬಗ್ಗೆ ಭಾರತದ ಆದ್ಯತೆಯನ್ನು ಸ್ಪಷ್ಟಪಡಿಸಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಡೋನೇಷ್ಯಾದ ಬಾಲಿಯಲ್ಲಿ ಇಂದಿನಿಂದ ಆರಂಭವಾಗಿ ಎರಡು ದಿನಗಳ ಕಾಲ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಆಹಾರ ಸರಪಳಿ ಕಾಯ್ದುಕೊಳ್ಳುವುದರ ಅಗತ್ಯ, ಸಿರಿಧಾನ್ಯಗಳ ಮಹತ್ವ, ರಷ್ಯಾ- ಉಕ್ರೇನ್‌ ಯುದ್ಧವಿರಾಮದ ಅಗತ್ಯಗಳು ಕುರಿತು ಮಾತನಾಡಿದ್ದಾರೆ. ಹಲವು ವಿಶ್ವನಾಯಕರು ಭಾಗವಹಿಸಿದ್ದ ಶೃಂಗಸಭೆಯಲ್ಲಿ ಅವರ ಮಾತುಗಳು ಅಂತಾರಾಷ್ಟ್ರೀಯ ವಲಯದ ಗಮನ ಸೆಳೆದಿವೆ. ‘ಉಕ್ರೇನ್​​ನಲ್ಲಿ ಕದನ ವಿರಾಮ ಸೃಷ್ಟಿಸಿ, ರಾಜತಾಂತ್ರಿಕತೆ ಮರುಸ್ಥಾಪಿಸಲು ನಾವೆಲ್ಲ ಸೇರಿ ಹಾದಿ ಕಂಡುಕೊಳ್ಳಬೇಕು. ಈ ಹಿಂದೆ ವಿಶ್ವಯುದ್ಧಗಳು ಜಗತ್ತನ್ನು ಅಲ್ಲೋಲಕಲ್ಲೋಲ ಮಾಡಿವೆʼ ಎಂದು ಬುದ್ಧಿ ಹೇಳಿದ್ದಾರೆ. ಗೊಬ್ಬರ ಮತ್ತು ಆಹಾರ ಧಾನ್ಯಗಳ ಪೂರೈಕೆ ಸರಪಳಿಯನ್ನು ಸ್ಥಿರವಾಗಿ ನಿರ್ವಹಿಸಲು ನಾವು ಪರಸ್ಪರ ಒಪ್ಪಂದ ಮಾಡಿಕೊಳ್ಳಬೇಕು ಎಂದಿದ್ದಾರೆ. ಶೃಂಗಸಭೆಯಲ್ಲಿ ಭಾಗವಹಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಮೋದಿಯವರನ್ನು ಕಾಣುತ್ತಿದ್ದಂತೆ ಬಂದು ಆತ್ಮೀಯತೆಯಿಂದ ಅಪ್ಪಿಕೊಂಡಿದ್ದನ್ನೂ ಕಾಣಬಹುದು. ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಜತೆಗೂ ಮೋದಿ ಕೆಲಕಾಲ ಮಾತನಾಡಿದ್ದು ವರದಿಯಾಗಿದೆ.

ಇವೆಲ್ಲವೂ, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತದ ನಾಯಕತ್ವವನ್ನು ಎಂದಿಗೂ ಕಡೆಗಣಿಸಲಾಗದು; ವಿಶ್ವವನ್ನು ಮುನ್ನಡೆಸಬಲ್ಲ ವಿವೇಕದ ಹಾದಿ ನಮ್ಮದಾಗಿದೆ ಎಂಬುದನ್ನು ಜಗತ್ತಿಗೆ ಸ್ಪಷ್ಟಪಡಿಸಲು ನಡೆದಂತಿವೆ. ರಷ್ಯ ನಮ್ಮ ಮಿತ್ರ ದೇಶವೇ ಆಗಿದ್ದರೂ, ಉಕ್ರೇನ್‌ ಮೇಲಿನ ಅದರ ದಾಳಿಯನ್ನು ನಿಲ್ಲಿಸಬೇಕು ಎಂದು ಮೋದಿಯವರು ಸ್ಪಷ್ಟ ಮಾತುಗಳಲ್ಲಿ ಹೇಳಿರುವುದು ವಿಶ್ವಶಾಂತಿಯ ಬಗ್ಗೆ ನಮ್ಮ ಆದ್ಯತೆಯನ್ನು ಸ್ಪಷ್ಟಪಡಿಸಿದೆ. ಹಾಗೆಯೇ ರಸಗೊಬ್ಬರದ ಕೊರತೆಯ ಬಗ್ಗೆ, ಅದರಿಂದ ಆಗಬಹುದಾದ ಆಹಾರದ ಬಿಕ್ಕಟ್ಟಿನ ಬಗ್ಗೆ ಅವರು ಹೇಳಿರುವುದು ಶ್ರೀಲಂಕಾದ ಆರ್ಥಿಕ ಪತನದ ಹಿನ್ನೆಲೆಯಲ್ಲಿ ಹೆಚ್ಚು ಅರ್ಥಪೂರ್ಣವಾಗಿದೆ. ಭಾರತದಲ್ಲಿ ಸುಸ್ಥಿರ ಆಹಾರ ಭದ್ರತೆಗಾಗಿ ನೈಸರ್ಗಿಕ ಕೃಷಿಗೆ ನೀಡುತ್ತಿರುವ ಉತ್ತೇಜನ, ಸಿರಿಧಾನ್ಯಗಳಂಥ ಪೌಷ್ಟಿಕ ಮತ್ತು ಸಾಂಪ್ರದಾಯಿಕ ಆಹಾರ ಧಾನ್ಯಗಳಿಗೆ ಜನಪ್ರಿಯತೆ ತಂದುಕೊಡುವ ಕ್ರಮಗಳ ಬಗ್ಗೆ ಹೇಳಿರುವ ಅವರು ಬರುವ ವರ್ಷದಿಂದ ಎಲ್ಲರೂ ಅಂತಾರಾಷ್ಟ್ರೀಯ ಸಿರಿಧಾನ್ಯ ದಿನವನ್ನು ಆಚರಿಸಬೇಕು ಎಂದಿರುವುದು ವಿಶಿಷ್ಟವಾಗಿದೆ; ಹಾಗೆಯೇ ಬೇರೊಂದು ಕೋನದಿಂದ ಸಮಸ್ಯೆಯನ್ನು ಪರಿಶೀಲಿಸಿ ಪರಿಹಾರವನ್ನು ಹೊಳೆಯಿಸಬಲ್ಲ ಮುತ್ಸದ್ಧಿಯ ನಡೆಯೂ ಇದರಲ್ಲಿದೆ.

ಭಾರತದ ವಿದೇಶಾಂಗ ನೀತಿಯೂ ಇತ್ತೀಚೆಗೆ ಹಲವು ದೇಶಗಳ ಶ್ಲಾಘನೆಗೆ ಪಾತ್ರವಾದುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ʼಭಾರತ ಮತ್ತು ರಷ್ಯಾಗಳು ಅತ್ಯುತ್ತಮ ಸಂಬಂಧ ಹೊಂದಿವೆ. ನಮ್ಮ ರಾಷ್ಟ್ರಗಳ ಮಧ್ಯೆ ಯಾವುದೇ ವಿಚಾರದಲ್ಲಿ, ಯಾವುದೇ ಸಮಸ್ಯೆಗಳೂ ಇಲ್ಲʼ ಎಂದು ರಷ್ಯಾ ಅಧ್ಯಕ್ಷ ಪುಟಿನ್‌ ಅವರು ಇತ್ತೀಚೆಗೆ ಹೇಳಿದ್ದರು. “ಭಾರತವು ಸ್ವತಂತ್ರ ವಿದೇಶಾಂಗ ನೀತಿ ಹೊಂದಿದೆ. ಇದರಿಂದಾಗಿಯೇ ರಷ್ಯಾ-ಉಕ್ರೇನ್‌ ಬಿಕ್ಕಟ್ಟಿನಿಂದ ಭಾರತಕ್ಕೆ ಹೆಚ್ಚಿನ ಸಮಸ್ಯೆ ಉಂಟಾಗಿಲ್ಲʼ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ನುಡಿದಿದ್ದರು. ಇದೇ ವೇಳೆಗೆ, ʼಯಾವುದೇ ಕಾರಣಕ್ಕೂ ನ್ಯೂಕ್ಲಿಯರ್‌ ಬಾಂಬ್‌ ಅನ್ನು ಪ್ರಯೋಗಿಸುವ ಯೋಚನೆ ಮಾಡಬಾರದುʼ ಎಂದು ರಷ್ಯಾಕ್ಕೆ ಭಾರತ ತಾಕೀತು ಮಾಡಿದ್ದೂ ಉಂಟು. ಭಾರತವು ವಿದೇಶಾಂಗ ನೀತಿಯ ಜಾರಿಯಲ್ಲಿ ತಿಳಿಯಾದ, ಸ್ಪಷ್ಟ ನಿಲುವು ಹೊಂದಿದೆ. ಯಾವುದೇ ಜಾಗತಿಕ ಒತ್ತಡಕ್ಕೂ ಸಿಲುಕದೆ ನಿರ್ಧಾರ ತೆಗೆದುಕೊಳ್ಳುವ, ದ್ವಿಪಕ್ಷೀಯ ಸಂಬಂಧ ಕೆಡದಂತೆ ಅದನ್ನು ದಿಟ್ಟವಾದ ಮಾತುಗಳಲ್ಲಿ ವ್ಯಕ್ತಪಡಿಸುವ ಸ್ಪಷ್ಟತೆ ಭಾರತದ್ದಾಗಿದೆ. ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಕೂಡ ಒಂದು ಹಂತದಲ್ಲಿ, ʼಭಾರತ ಮಧ್ಯಪ್ರವೇಶಿಸಬೇಕುʼ ಎಂದಿದ್ದರು.

ಭಾರತದ, ಮುಖ್ಯವಾಗಿ ಮೋದಿಯವರ ನೇತೃತ್ವದ ವಿದೇಶಾಂಗ ನೀತಿ ಹಾಗೂ ಅಂತಾರಾಷ್ಟ್ರೀಯ ಸಂಬಂಧಗಳು ಎಲ್ಲರ ಮೆಚ್ಚುಗೆಗೆ ಅರ್ಹವಾಗುವಂತೆ ಇದೆ. ದೇಶ ವಿಶ್ವದ ಐದನೇ ಬೃಹತ್‌ ಎಕಾನಮಿಯಾಗಿ ಬೆಳೆದು ನಿಂತಿರುವಿಕೆ, ಮೋದಿ ಸರ್ಕಾರದ ಚಾರಿತ್ರಿಕ ನಿರ್ಧಾರಗಳು ಹಾಗೂ ನೀತಿಗಳು, ಚೀನಾದಂಥ ಬಲಿಷ್ಠ ಎದುರಾಳಿಗೂ ಮಣಿಯದೆ ಸೆಡ್ಡು ಹೊಡೆದು ನಿಲ್ಲುವ ಗುಂಡಿಗೆ, ವಿಶ್ವಸಂಸ್ಥೆಯನ್ನು ಸದಾ ತನ್ನ ಮಾತಿಗೆ ಮನ್ನಣೆ ದೊರಕಿಸಿಕೊಳ್ಳಬಲ್ಲ ಪ್ರೌಢಿಮೆ ಹಾಗೂ ಮುತ್ಸದ್ದಿತನ, ʼಲುಕ್‌ ಈಸ್ಟ್‌ ಪಾಲಿಸಿʼಯ ಮೂಲಕ ಪೂರ್ವ ಏಷ್ಯಾ ದೇಶಗಳೊಂದಿಗೆ ಮಧುರ ಬಾಂಧವ್ಯ, ಅಮೆರಿಕದ ಮಿತ್ರನಾಗಿದ್ದೂ ಅದರ ರಷ್ಯಾದಿಂದ ತೈಲ ಆಮದಿನಂಥ ವಿಚಾರದಲ್ಲಿ ಅದರ ಒತ್ತಡವನ್ನೊಪ್ಪದ ದಿಟ್ಟತನ, ಪಾಕ್‌ ಜತೆ ಶತ್ರುತ್ವ ಹೊಂದಿದ್ದರೂ ಅರಬ್‌ ದೇಶಗಳ ಜತೆಗಿನ ಆತ್ಮೀಯ ಬಾಂಧವ್ಯ, ಅಂತಾರಾಷ್ಟ್ರೀಯ ಬಿಕ್ಕಟ್ಟುಗಳು ಉಂಟಾದಾಗ ತನ್ನ ಪ್ರಜೆಗಳಿಗೆ ಅದರಿಂದ ಸಂಕಷ್ಟ ಉಂಟಾಗದಂತೆ ನೋಡಿಕೊಳ್ಳುವ ಜಾಣ್ಮೆ, ಜೊತೆಗೇ ಬಲಿಷ್ಠ ಮಿಲಿಟರಿಯನ್ನೂ ಕಟ್ಟಿಕೊಳ್ಳುವ ವಿವೇಕ ಮುಂತಾದವುಗಳನ್ನೆಲ್ಲ ಇದರ ಮುಂದುವರಿಕೆಯಾಗಿ ನೋಡಬಹುದು. ಜಾಗತಿಕ ಸಂಬಂಧಗಳಲ್ಲಿ ಪಾರದರ್ಶಕತೆ, ಜನಹಿತ ನೀತಿ, ನೈತಿಕತೆ, ಪ್ರಾಮಾಣಿಕತೆ, ಪಂಚಶೀಲ ತತ್ವಗಳನ್ನು ಕಾಪಾಡಿಕೊಂಡು ಬಂದಿರುವ ವಿವೇಕಗಳಿಂದ ಇದು ಸಾಧ್ಯವಾಗಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಬಲವಂತದ ಮತಾಂತರದಿಂದ ದೇಶದ ಭದ್ರತೆಗೆ ಅಪಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

Prajwal Revanna Case: ಪ್ರಜ್ವಲ್‌ ರೇವಣ್ಣ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ತಮ್ಮ ಮೊಬೈಲ್‌ ಕಳೆದುಹೋಗಿದೆ ಎಂದಿದ್ದಾರೆ. ತಮ್ಮ ಮೊಬೈಲ್‌ ಒಂದು ವರ್ಷದ ಹಿಂದೆಯೇ ಕಳೆದುಹೋಗಿದ್ದು, ಆ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.

VISTARANEWS.COM


on

prajwal revanna case mobile
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ (physical abuse) ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ನಿನ್ನೆ ಇಡೀ ಕೋರ್ಟ್‌ ಹಾಗೂ ವೈದ್ಯಕೀಯ ಪರೀಕ್ಷೆಗಳ (medical test) ನಡುವೆ ಸಮಯ ಕಳೆದರು. ಈ ನಡುವೆ ಎಸ್‌ಐಟಿ (SIT) ಹಲವಾರು ಪ್ರಶ್ನೆಗಳ ಮೂಲಕ ಗ್ರಿಲ್‌ ಮಾಡಿದ್ದು, ಅದರಲ್ಲಿ ಮುಖ್ಯವಾದುದು ಅವರು ಅಶ್ಲೀಲ ವಿಡಿಯೋಗಳನ್ನು (obscene video) ಚಿತ್ರೀಕರಿಸಿಕೊಂಡ ಮೊಬೈಲ್‌ ಎಲ್ಲಿದೆ ಎಂಬುದಾಗಿತ್ತು.

ಈ ಸಂದರ್ಭದಲ್ಲಿ ಪ್ರಜ್ವಲ್‌ ರೇವಣ್ಣ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ತಮ್ಮ ಮೊಬೈಲ್‌ ಕಳೆದುಹೋಗಿದೆ ಎಂದಿದ್ದಾರೆ. ತಮ್ಮ ಮೊಬೈಲ್‌ ಒಂದು ವರ್ಷದ ಹಿಂದೆಯೇ ಕಳೆದುಹೋಗಿದ್ದು, ಆ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.

ಪ್ರಜ್ವಲ್‌ ಅವರ ವಿಚಾರಣೆ ಮಾಡಿ 161 ಹೇಳಿಕೆಯನ್ನು ಎಸ್‌ಐಟಿ ದಾಖಲಿಸಿದೆ. ಅದರಲ್ಲಿ ಮೊಬೈಲ್‌ ಕುರಿತು ದಾಖಲಿಸಿದೆ. ನೀವು ಹೇಳುತ್ತಿರುವ ಮೊಬೈಲ್ ನನ್ನ ಬಳಿ ಇಲ್ಲ. ಕಳೆದ ವರ್ಷವೇ ಫೋನ್ ಕಳೆದು ಹೋಗಿದ್ದು, ಆ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ನೀಡಿದ್ದೇನೆ ಎಂದು ಪ್ರಜ್ವಲ್‌ ಹೇಳಿದ್ದಾರೆ. ಈ ಹೇಳಿಕೆ ಸತ್ಯಾಸತ್ಯತೆಯನ್ನು ಎಸ್‌ಐಟಿ ಪರಿಶೀಲಿಸಲಿದೆ.

ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ. ವಿಡಿಯೋಗಳ ಬಗ್ಗೆ ನಂಗಷ್ಟು ಗೊತ್ತಿಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗಳನ್ನು ತೋರಿಸಿ ಪ್ರಶ್ನಿಸಿದಾಗ ಈ ಉತ್ತರ ದೊರೆತಿದೆ. ತನ್ನ ಮೇಲಿರುವ ಎಲ್ಲ ಆರೋಪಗಳನ್ನು ಪ್ರಜ್ವಲ್‌ ತಳ್ಳಿ ಹಾಕಿದ್ದಾರೆ.

ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿರುವ ಮೊಬೈಲ್‌ ಪ್ರಜ್ವಲ್‌ ವಿರುದ್ಧದ ಪ್ರಕರಣದಲ್ಲಿ ಪ್ರಬಲವಾದ ಸಾಕ್ಷ್ಯವಾಗಿದೆ. ಈ ಮೊಬೈಲ್‌ ಸಿಕ್ಕಿದರೆ, ಒಂದು ವೇಳೆ ವಿಡಿಯೋಗಳನ್ನು ಅಳಿಸಿದ್ದರೂ ಅದರಿಂದ ರಿಟ್ರೀವ್‌ ಮಾಡಬಹುದು. ಆದರೆ ಮೊಬೈಲ್‌ ಸಂಪೂರ್ಣ ನಾಶವಾಗಿದ್ದರೆ, ಯಾವುದೇ ಮೂಲ ರೆಕಾರ್ಡ್‌ಗಳು ಸಿಗಲಾರದು. ಅದರಿಂದ ಫಾರ್‌ವರ್ಡ್‌ ಆಗಿರುವ ವಿಡಿಯೋಗಳು ಸೆಕೆಂಡರಿ ಸಾಕ್ಷ್ಯಗಳೆನಿಸಿಕೊಳ್ಳುತ್ತವೆ. ಹೀಗಾಗಿ ಮೊಬೈಲ್‌ ಪಡೆಯಲು ಎಸ್‌ಐಟಿ ಪ್ರಯತ್ನ ನಡೆಸಬೇಕಿದೆ.

6 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪ್ರಜ್ವಲ್

ಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna back in India ) ಅವರನ್ನು 6 ದಿನಗಳ ಕಾಲ ಎಸ್​ಐಟಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ. ಎಸಿಎಮ್​ಎಮ್​​ ನ್ಯಾಯಾಲಯದ ನ್ಯಾಯಧೀಶ ಎನ್​. ಶಿವಕುಮಾರ್​​ ಈ ಆದೇಶ ಹೊರಡಿಸಿದ್ದಾರೆ. ಗುರುವಾರ ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್​ ರೇವಣ್ಣ ಅವರನ್ನು ಬಂಧಿಸಿದ್ದ ಎಸ್​ಐಟಿ ಪೊಲೀಸರು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಗಂಭೀರ ಆರೋಪಗಳನ್ನು ಹೊತ್ತಿರುವ ಅವರ ತನಿಖೆಗಾಗಿ ಎಸ್​ಐಟಿ ತನ್ನ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಅದನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.

ಬೆಂಗಳೂರಿನ 42ನೇ ಎಸಿಎಮ್​ಸಿ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು ಪ್ರಜ್ವಲ್ ಅವರಿಗೆ ಯಾವುದೇ ಕಿರಕುಗಳ ನೀಡಬಾರದು ಎಂದು ಎಸ್​ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ವೈದ್ಯಕೀಯ ಪರೀಕ್ಷೆ ಸೇರಿದಂತೆ ತನಿಖೆಗೆ ಎಲ್ಲ ರೀತಿಯಲ್ಲೂ ಸಹಕಾರ ನೀಡುವಂತೆ ಪ್ರಜ್ವಲ್ ರೇವಣ್ಣ ಅವರಿಗೂ ಸೂಚನೆ ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಶುಕ್ರವಾರ ಸೇರಿದಂತೆ ಒಟ್ಟು 15 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದ್ದರು. ಆದರೆ, ಪ್ರಜ್ವಲ್ ಪರ ವಕೀಲರು 1 ದಿನ ಸಾಕು ಎಂದು ವಾದಿಸಿದ್ದರು. ಆದರೆ, ನ್ಯಾಯಾಧೀಶರು 6 ದಿನಗಳನ್ನು ಮಾನ್ಯ ಮಾಡಿದ್ದಾರೆ.

ಗುರುವಾರ ರಾತ್ರಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ್ದ ಪೊಲೀಸರು ಬೆಳಗ್ಗೆ ತನಕ ಎಸ್​ಐಟಿ ಕಚೇರಿಯಲ್ಲೇ ವಿಶ್ರಾಂತಿ ಪಡೆಯಲು ಅನುಕೂಲ ಮಾಡಿಕೊಟ್ಟಿದ್ದರು. ಬೆಳಗ್ಗೆ ಅವರ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಅವರಿಂದ ಅಗತ್ಯ ದಾಖಲೆಗಳಿಗೆ ಸಹಿ ಮಾಡಿಕೊಂಡರು. ಆ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.‌

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Continue Reading

ವಾಣಿಜ್ಯ

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

LPG Price Cut: ಜೂನ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ. ಕಡಿಮೆ ಮಾಡಿವೆ. ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 69.50 ರೂ. ಕಡಿತಗೊಂಡು 1,756 ರೂ.ಗೆ ತಲುಪಿದೆ.

VISTARANEWS.COM


on

LPG Price Cut
Koo

ನವದೆಹಲಿ: ಜೂನ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 69.50 ರೂ. ಕಡಿತಗೊಂಡು 1,756 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,676 ರೂ. ಆಗಿದೆ. ಹಿಂದೆ 1745.50 ರೂ. ಆಗಿತ್ತು. ಮುಂಬೈಯಲ್ಲಿಯೂ 69.50 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,629 ರೂ.ಗೆ ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ 1,840.5೦ ರೂ., ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,787 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಸತತ ಇಳಿಕೆ

ಕಳೆದ ತಿಂಗಳು ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು. ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ವಿವಿಧ ನಗರಗಳಲ್ಲಿ ಪರಿಷ್ಕೃತ ದರ

ನಗರಪರಿಷ್ಕೃತ ದರಹಿಂದಿನ ದರ
ಬೆಂಗಳೂರು1,756 ರೂ.1,825.50
ಕೋಲ್ಕತ್ತಾ1,787 ರೂ.1,859 ರೂ.
ಮುಂಬೈ1,629 ರೂ.1,698.50 ರೂ.
ಚೆನ್ನೈ1,840.50 ರೂ.1,911 ರೂ.
ನವದೆಹಲಿ1,676 ರೂ.1745.50 ರೂ.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ.

ಇದನ್ನೂ ಓದಿ: LPG Aadhaar Link: ಎಲ್‌ಪಿಜಿ ಕನೆಕ್ಷನ್‌ಗೆ ಆಧಾರ್ ಲಿಂಕ್ ಮಾಡಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

Continue Reading

ಪ್ರಮುಖ ಸುದ್ದಿ

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

Bhavani Revanna: ಇಂದು ಹೊಳೆನರಸೀಪುರದ ಅವರ ಮನೆಗೆ ತನಿಖೆಗೆ ಬರುವುದಾಗಿ ಎಸ್‌ಐಟಿ ನೋಟೀಸ್‌ (SIT Notice) ನೀಡಿತ್ತು. ಆದರೆ ಭವಾನಿ ರೇವಣ್ಣ ತಮ್ಮ ನಿವಾಸದಲ್ಲಿ ಇಲ್ಲ ಎಂದು ತಿಳಿದುಬಂದಿರುವ ಕಾರಣ ಅವರು ಎಲ್ಲಿದ್ದಾರೆ ಎಂದು SIT ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

VISTARANEWS.COM


on

bhavani revanna case
Koo

ಹಾಸನ: ನಿನ್ನೆ ಭವಾನಿ ರೇವಣ್ಣ (Bhavani revanna) ಅವರ ಜಾಮೀನು ಅರ್ಜಿ (bail plea) ರದ್ದಾಗಿದ್ದು, ಇಂದು ಅವರ ಬಂಧನ (Arrest) ಸಾಧ್ಯತೆ ಇದೆ. ಕೆ.ಆರ್‌ ನಗರದ ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸಿನಲ್ಲಿ (kidnap case) ಎಸ್‌ಐಟಿಗೆ (SIT) ಭವಾನಿ ರೇವಣ್ಣ ಬೇಕಾಗಿದ್ದು, ಇಂದು ಹೊಳೆನರಸೀಪುರದ ಅವರ ಮನೆಗೆ ತನಿಖೆಗೆ ಬರುವುದಾಗಿ ಎಸ್‌ಐಟಿ ನೋಟೀಸ್‌ (SIT Notice) ನೀಡಿತ್ತು. ಆದರೆ ಭವಾನಿ ಹೊಳೆನರಸೀಪುರದ ಮನೆಯಲ್ಲೂ, ಬೆಂಗಳೂರಿನ ಮನೆಯಲ್ಲೂ ಕಾಣಿಸಿಕೊಂಡಿಲ್ಲ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ನಿನ್ನೆ ರದ್ದಾಗಿರುವ ಹಿನ್ನೆಲೆಯಲ್ಲಿ, ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ ಬಂಧನ ಸಾಧ್ಯತೆ ಇದ್ದು, ಅದಕ್ಕಾಗಿ ಎಸ್ಐಟಿ ಬಲೆ ಬೀಸಿದೆ. ಇಂದು ಭವಾನಿ ರೇವಣ್ಣ ವಿಚಾರಣೆಗಾಗಿ ಹೊಳೆನರಸೀಪುರಕ್ಕೆ ಎಸ್ಐಟಿ ಟೀಂ ಆಗಮಿಸಲಿದೆ. ಕಿಡ್ನಾಪ್ ಆರೋಪ ಪ್ರಕರಣದಲ್ಲಿ ತಮ್ಮ ತನಿಖೆ ಅವಶ್ಯಕತೆ ಇದ್ದು, ತನಿಖೆಗೆ ಸಹಕರಿಸಬೇಕಾಗಿ ಎಸ್‌ಐಟಿ ಹೇಳಿತ್ತು. ತನಿಖೆಗೆ ಹೊಳೆನರಸೀಪುರದ ನಿವಾಸದಲ್ಲಿ ತಾವು ಲಭ್ಯವಿರುವುದಾಗಿ ಮೇ 15ರಂದು ಎಸ್ಐಟಿಗೆ ಭವಾನಿ ಲಿಖಿತ ಪತ್ರ ನೀಡಿದ್ದರು.

ಭವಾನಿ ಅವರ ಪತ್ರವನ್ನೇ ಉಲ್ಲೇಖಿಸಿ ನಿನ್ನೆ ಎಸ್‌ಐಟಿ ನೋಟೀಸ್ ನೀಡಿತ್ತು. ಪ್ರಕರಣ ಸಂಬಂಧ ತಮ್ಮ ವಿಚಾರಣೆ ಅಗತ್ಯ ಇದೆ, ಹಾಗಾಗಿ ಜೂನ್ 1ರಂದು ವಿಚಾರಣೆಗೆ ಬರುವುದಾಗಿ ತಿಳಿಸಿತ್ತು. ಜೂನ್ 1ರ ಶನಿವಾರ ಮಹಿಳಾ ಅಧಿಕಾರಿ ಜೊತೆ ಹೊಳೆನರಸೀಪುರದ ಚನ್ನಾಂಬಿಕ ನಿವಾಸಕ್ಕೆ ತಾವು ಬರುವುದಾಗಿ ಎಸ್‌ಐಟಿ ಮುಖ್ಯಸ್ಥ ಹೇಮಂತ್‌ ಕುಮಾರ್‌ ತಿಳಿಸಿದ್ದರು. ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ನಡುವೆ ನೀವು ತಿಳಿಸಿದ ವಿಳಾಸಕ್ಕೆ ಬರುತ್ತೇವೆ. ಈ ಸಮಯದಲ್ಲಿ ನೀವು ಖುದ್ದು ಹಾಜರಿರಬೇಕು ಎಂದು ಸೂಚಿಸಿದ್ದರು. ಆದರೆ ಭವಾನಿ ರೇವಣ್ಣ ತಮ್ಮ ನಿವಾಸದಲ್ಲಿ ಇಲ್ಲ ಎಂದು ತಿಳಿದುಬಂದಿರುವ ಕಾರಣ ಅವರು ಎಲ್ಲಿದ್ದಾರೆ ಎಂದು SIT ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಕ್ಯಾನ್ಸರ್‌ (Cancer) ಇದೆ. ಚಿಕಿತ್ಸೆ ಪಡೆಯಲು ನಿರೀಕ್ಷಣಾ ಜಾಮೀನು ನೀಡಬೇಕೆಂದು ಭವಾನಿ ಪರ ವಕೀಲರು ಕೋರ್ಟ್‌ನಲ್ಲಿ (Bengaluru Court) ವಾದ ಮಾಡಿದ್ದರು. ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್‌ ಮಾಡಿದ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಬಂಧನ ಭೀತಿಯಿಂದ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದಲ್ಲಿ ದಾಖಲಾಗಿದ್ದ IPC ಸೆಕ್ಷನ್ 120ಬಿ ಕ್ರಿಮಿನಲ್ ಕಾನ್ಸ್‌ಪಿರೆಸಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೊರ್ಟ್, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.

ನಿನ್ನೆ ಅವರ ಪುತ್ರ, ಪ್ರಕರಣದ ಪ್ರಧಾನ ಆರೋಪಿ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು ಬಂಧಿಸಿ ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಪೊಲೀಸ್‌ ಕಸ್ಟಡಿಗೆ ಕೋರ್ಟ್‌ ನೀಡಿದೆ. ಪ್ರಜ್ವಲ್‌ ಅವರ ವೈದ್ಯಕೀಯ ತಪಾಸಣೆ ಕೂಡ ನಡೆಸಲಾಗಿದೆ. ಪ್ರಜ್ವಲ್‌ ಅವರನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲು ಎಸ್‌ಐಟಿ ಮುಂದಾಗಿದೆ.

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Continue Reading

ಪ್ರಮುಖ ಸುದ್ದಿ

New Driving Licence Rules: ಇಂದಿನಿಂದ ಹೊಸ ಟ್ರಾಫಿಕ್‌ ರೂಲ್ಸ್: ತರಬೇತಿ ಕೇಂದ್ರಗಳಲ್ಲೇ ಟೆಸ್ಟ್‌, ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿ ರದ್ದು

Driving Licence: ಜೂನ್ 1 ರಿಂದ, ಅರ್ಜಿದಾರರು ಸರ್ಕಾರಿ ಸ್ವಾಮ್ಯದ ಆರ್‌ಟಿಒಗಳಿಗೆ ಹೋಗುವ ಬದಲು ಖಾಸಗಿ ಚಾಲನಾ ತರಬೇತಿ ಕೇಂದ್ರಗಳಲ್ಲಿ ಚಾಲನಾ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ಇದು ಪರವಾನಗಿ ಅರ್ಹತೆಗಾಗಿ ಪ್ರಮಾಣಪತ್ರಗಳನ್ನು ನೀಡಲು ಸಹ ಅಧಿಕಾರ ನೀಡುತ್ತದೆ.

VISTARANEWS.COM


on

driving licence
Koo

ಹೊಸದಿಲ್ಲಿ: ಇಂದಿನಿಂದ (ಜೂನ್ 1) ದೇಶಾದ್ಯಂತ ಚಾಲನಾ ಪರವಾನಗಿ (Driving licence) ನಿಯಮಗಳಲ್ಲಿ ಹಲವು ಬದಲಾವಣೆಗಳು ಆಗಲಿವೆ. ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್‌ ಲೈಸೆನ್ಸ್‌ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು (New Driving licence Rules) ಪ್ರಕಟಿಸಿದೆ.

ಜೂನ್ 1 ರಿಂದ, ಅರ್ಜಿದಾರರು ಸರ್ಕಾರಿ ಸ್ವಾಮ್ಯದ ಆರ್‌ಟಿಒಗಳಿಗೆ ಹೋಗುವ ಬದಲು ಖಾಸಗಿ ಚಾಲನಾ ತರಬೇತಿ ಕೇಂದ್ರಗಳಲ್ಲಿ ಚಾಲನಾ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ಇದು ಪರವಾನಗಿ ಅರ್ಹತೆಗಾಗಿ ಪ್ರಮಾಣಪತ್ರಗಳನ್ನು ನೀಡಲು ಸಹ ಅಧಿಕಾರ ನೀಡುತ್ತದೆ. ಈ ಕ್ರಮವು ಸರ್ಕಾರಿ ಸ್ವಾಮ್ಯದ ಆರ್‌ಟಿಒಗಳ ಮೇಲಿನ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಸುದೀರ್ಘ ಅವಧಿಯ ಕಾಯುವ ಸಮಯವನ್ನು ಕಡಿಮೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೆಚ್ಚುವರಿಯಾಗಿ, ಹೊಸ ಪರವಾನಗಿ ಅರ್ಜಿಗಳಿಗೆ ದಾಖಲಾತಿ ಅವಶ್ಯಕತೆಗಳನ್ನು ಸರ್ಕಾರ ಸರಳಗೊಳಿಸಿದೆ. ಜೂನ್‌ನಿಂದ, ವಾಹನದ ಪ್ರಕಾರದ ಆಧಾರದ ಮೇಲೆ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಇದು ಆರ್‌ಟಿಒಗಳಲ್ಲಿ ಭೌತಿಕ ಪರಿಶೀಲನೆಯ ಅಗತ್ಯವನ್ನು ಕಡಿಮೆ ಮಾಡುತ್ತದೆ.

ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿಯೇ ರದ್ದು

ಹೊಸ ನಿಯಮಗಳ ಮತ್ತೊಂದು ಪ್ರಮುಖ ಅಂಶವೆಂದರೆ ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವುದು ಕಂಡುಬಂದರೆ ಹೆಚ್ಚಿನ ದಂಡ ವಿಧಿಸಲಾಗುತ್ತದೆ. ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸಿ ಸಿಕ್ಕಿಬಿದ್ದರೆ, 25,000 ರೂ.ಗಳ ದಂಡ ವಿಧಿಸಲಾಗುವುದು ಮತ್ತು ವಾಹನ ಮಾಲೀಕರ ನೋಂದಣಿಯನ್ನು ರದ್ದುಗೊಳಿಸಲಾಗುವುದು. ಇದಲ್ಲದೆ, ಶಿಕ್ಷೆಗೊಳಗಾದ ಅಪ್ರಾಪ್ತ ವಯಸ್ಕರು 25 ವರ್ಷ ವಯಸ್ಸಿನವರೆಗೆ ಚಾಲನಾ ಪರವಾನಗಿಗೆ ಅರ್ಹರಾಗಿರುವುದಿಲ್ಲ. ಈ ಕಠಿಣ ಕ್ರಮವು ಅಪ್ರಾಪ್ತ ವಯಸ್ಕರ ವಾಹನ ಚಾಲನೆಯನ್ನು ತಡೆಯುತ್ತದೆ ಮತ್ತು ರಸ್ತೆ ಸುರಕ್ಷತೆಯನ್ನು ಸುಧಾರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ, ಸುಮಾರು 9,00,000ರಷ್ಟು ಹಳೆಯ ಸರ್ಕಾರಿ ವಾಹನಗಳನ್ನು ಹಂತ ಹಂತವಾಗಿ ತೆಗೆದುಹಾಕುವ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಈ ಉಪಕ್ರಮವು ಇಂಗಾಲ ಹೊರಸೂಸುವಿಕೆಯ ಕಠಿಣ ಮಾನದಂಡಗಳನ್ನು ಜಾರಿಗೊಳಿಸುವ ಮತ್ತು ಪರಿಸರ ಸ್ನೇಹಿ ಅಭ್ಯಾಸಗಳನ್ನು ಉತ್ತೇಜಿಸುವ ವಿಶಾಲ ಕಾರ್ಯತಂತ್ರದ ಭಾಗವಾಗಿದೆ. ಹಳೆಯ, ಹೆಚ್ಚು ಮಾಲಿನ್ಯಕಾರಕ ವಾಹನಗಳನ್ನು ರಸ್ತೆಗಳಿಂದ ತೆಗೆದುಹಾಕುವ ಮೂಲಕ, ದೇಶದ ಇಂಗಾಲದ ಹೆಜ್ಜೆಗುರುತನ್ನು ಕಡಿಮೆ ಮಾಡಲು ಮತ್ತು ಗಾಳಿಯ ಗುಣಮಟ್ಟವನ್ನು ಸುಧಾರಿಸಲು ಸರ್ಕಾರ ಉದ್ದೇಶಿಸಿದೆ.

ತರಬೇತಿ ಕೇಂದ್ರಗಳಿಗೆ ಜಮೀನಿರಬೇಕು

ತರಬೇತಿ ಕೇಂದ್ರಗಳಿಗೆ ಸರ್ಕಾರ ಹೊಸ ನಿಯಮಗಳನ್ನು ರೂಪಿಸಿದೆ. ಈ ಕೇಂದ್ರಗಳು ಲಘು ಮೋಟಾರು ವಾಹನಗಳ ತರಬೇತಿಗಾಗಿ ಕನಿಷ್ಠ 1 ಎಕರೆ ಭೂಮಿಯನ್ನು ಹೊಂದಿರಬೇಕು ಮತ್ತು ಭಾರಿ ಮೋಟಾರು ವಾಹನ ತರಬೇತಿಗಾಗಿ 2 ಎಕರೆ ಭೂಮಿ ಬೇಕಾಗುತ್ತದೆ. ಇದಲ್ಲದೆ, ಈ ಕೇಂದ್ರಗಳು ತಮ್ಮ ಪರೀಕ್ಷಾ ಸೌಲಭ್ಯಗಳಿಗೆ ಪ್ರವೇಶವನ್ನು ಒದಗಿಸಬೇಕಾಗುತ್ತದೆ, ಚಾಲನಾ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಮಾನದಂಡಗಳನ್ನು ಪೂರೈಸುತ್ತವೆ ಎಂದು ಖಚಿತಪಡಿಸಿಕೊಳ್ಳಬೇಕು.

ಹೊಸ ನಿಯಮಗಳ ಪ್ರಕಾರ, ಕಲಿಕಾ ಪರವಾನಗಿ ವಿತರಣೆಗೆ 150 ರೂ., ಕಲಿಕಾ ಪರವಾನಗಿ ಪರೀಕ್ಷೆಗೆ ಅರ್ಜಿದಾರರು 50 ರೂ. ಚಾಲನಾ ಪರೀಕ್ಷೆಗಳಿಗೆ 300 ರೂ., ಚಾಲನಾ ಪರವಾನಗಿ ನೀಡಲು 200 ರೂ. ಅರ್ಜಿಗಳನ್ನು ಸಂಸ್ಕರಿಸಲು ಮತ್ತು ಪರೀಕ್ಷೆಗಳನ್ನು ನಡೆಸಲು ಸಂಬಂಧಿಸಿದ ಆಡಳಿತಾತ್ಮಕ ವೆಚ್ಚಗಳನ್ನು ಭರಿಸಲು ಈ ಶುಲ್ಕಗಳನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Bengaluru Traffic: ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಹೊಸ ತಂತ್ರಜ್ಞಾನ; ಸಂಚಾರ ಇಲಾಖೆಯ ಪ್ಲಾನ್

Continue Reading
Advertisement
IND vs BAN
ಕ್ರೀಡೆ28 mins ago

IND vs BAN: ಇಂದು ಬಾಂಗ್ಲಾ ವಿರುದ್ಧ ಅಭ್ಯಾಸ ಪಂದ್ಯ; ಕೊಹ್ಲಿ ಆಡುವುದು ಅನುಮಾನ

Exit Poll
Lok Sabha Election 202439 mins ago

Exit Poll: ಇಂದು ಸಂಜೆ 6.30ಕ್ಕೆ ಎಕ್ಸಿಟ್ ಪೋಲ್ ರಿಸಲ್ಟ್; ಮತಗಟ್ಟೆ ಸಮೀಕ್ಷೆ ಹೇಗೆ ನಡೆಸುತ್ತಾರೆ?

Kannada Cinema In OTT bad manners 02 Kannada Movie
ಸ್ಯಾಂಡಲ್ ವುಡ್44 mins ago

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

hum do humare barah
ಕರ್ನಾಟಕ46 mins ago

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Neeraj Chopra
ಕ್ರೀಡೆ1 hour ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Neha Gowda is pregnant the actress shared the good news
ಕಿರುತೆರೆ1 hour ago

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Vastu Tips
ಧಾರ್ಮಿಕ1 hour ago

Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

prajwal revanna case mobile
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

LPG Price Cut
ವಾಣಿಜ್ಯ1 hour ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ1 hour ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌