Suicide | ಗೋಲ ಗುಮ್ಮಟ ನೋಡಲು ಬಂದವನು ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ - Vistara News

ಕರ್ನಾಟಕ

Suicide | ಗೋಲ ಗುಮ್ಮಟ ನೋಡಲು ಬಂದವನು ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ

ವಿಜಯಪುರದ ಗೋಲ ಗುಮ್ಮಟವನ್ನು ವೀಕ್ಷಿಸಲೆಂದು ಬಂದ ವ್ಯಕ್ತಿಯೊಬ್ಬ ಕಟ್ಟಡದ ಮಧ್ಯಭಾಗದಿಂದ ಆವರಣಕ್ಕೆ ಜಿಗಿದು ಪ್ರಾಣ ಕಳೆದುಕೊಂಡಿದ್ದಾನೆ.

VISTARANEWS.COM


on

gola gummata
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಇಲ್ಲಿನ ಪ್ರಸಿದ್ಧ ಗೋಲ ಗುಮ್ಮಟವನ್ನು ನೋಡಲು ಬಂದಿದ್ದ ವ್ಯಕ್ತಿಯೊಬ್ಬ ಎಲ್ಲರೂ ನೋಡುತ್ತಿದ್ದಂತೆಯೇ ಅದೇ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

55 ವರ್ಷದ ವ್ಯಕ್ತಿ ಸಲೀಂ ತಿಕೋಟ್ಕರ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಆತ ಎಲ್ಲರೊಂದಿಗೆ ಗೋಲ ಗುಮ್ಮಟ ವೀಕ್ಷಣೆಗೆ ಸಾಲಿನಲ್ಲಿ ನಿಂತು ಸಾಗುತ್ತಿದ್ದ. ಆದರೆ ಮೇಲಿನ ಅಂತಸ್ತಿಗೆ ಹೋಗುತ್ತಿದ್ದಂತೆಯೇ ಅಲ್ಲಿಂದ ಆವರಣದ ಭಾಗಕ್ಕೆ ಹಾರಿದ್ದಾನೆ. ನೆಲಕ್ಕೆ ಬಿದ್ದು ಗಾಯಗೊಂಡ ಆತ ಅದೇ ಸ್ಥಳದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Suicide | Sorry ಅಮ್ಮ, ಅಣ್ಣ ಎಂದು ಸ್ಟೇಟಸ್‌ ಹಾಕಿ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Prajwal Revanna Case: ಅಶ್ಲೀಲ ವಿಡಿಯೊ ಇರುವ ಪೆನ್​ಡ್ರೈವ್​​ ಹಂಚಿಕೆ ಆರೋಪದಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಕೇಸ್‌ ದಾಖಲಾಗಿತ್ತು. ಆದರೆ, ಕೇಸ್‌ನಲ್ಲಿ ಪ್ರೀತಂ ಗೌಡರನ್ನು ಬಂಧಿಸದೇ ವಿಚಾರಣೆ ನಡೆಸಲು ಎಸ್‌ಐಟಿಗೆ ಹೈಕೋರ್ಟ್‌ ಸೂಚಿಸಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Prajwal Revanna Case) ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌ ಸಿಕ್ಕಿದೆ. ತಮ್ಮ ಮೇಲೆ ಯಾವುದೇ ಆರೋಪವಿಲ್ಲದಿದ್ದರೂ ಕೇಸ್ ದಾಖಲಿಸಲಾಗಿದೆ ಎಂದು ಎಫ್‌ಐಆರ್‌ ಪ್ರಶ್ನಿಸಿ ಪ್ರೀತಂ ಗೌಡ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಕೋರ್ಟ್‌, ಪ್ರೀತಂ ಗೌಡರನ್ನು ಬಂಧಿಸದೆ, ತನಿಖೆ ಮುಂದುವರಿಸಲು ಎಸ್ಐಟಿಗೆ ಸೂಚನೆ ನೀಡಿದೆ.

ಅಶ್ಲೀಲ ವಿಡಿಯೊ ಇರುವ ಪೆನ್​ಡ್ರೈವ್​​ ಹಂಚಿಕೆ ಆರೋಪದಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ನಗರದ ಸಿಐಡಿ ಸೈಬರ್ ಠಾಣೆಯಲ್ಲಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ, ಕಿರಣ್​, ಶರತ್​ ಹಾಗೂ ಪ್ರೀತಂ ಗೌಡ ವಿರುದ್ಧ ಐಪಿಸಿ ಸೆಕ್ಷನ್ 354(ಎ), 354 (ಡಿ), 354 ಬಿ, 506 ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಎಫ್‌ಐಆರ್‌ ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಮಾಜಿ ಶಾಸಕ ಪ್ರೀತಂ ಗೌಡ ರಿಟ್ ಅರ್ಜಿ ಸಲ್ಲಿಸಿದ್ದರು. ಯಾವುದೇ ಆರೋಪವಿಲ್ಲದಿದ್ದರೂ ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ. ಜನ ಮಾತನಾಡುತ್ತಿದ್ದಾರೆಂಬ ಆಧಾರದ ಮೇಲೆ ಕೇಸ್ ಹಾಕಿದ್ದಾರೆ ಎಂದು ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.

ಇದಕ್ಕೆ ಎಸ್‌ಪಿಪಿ ರವಿವರ್ಮ ಕುಮಾರ್ ಆಕ್ಷೇಪ ವ್ಯಕ್ತಪಡಿಸಿ, ಆರೋಪಿ ವಿರುದ್ಧ ಸಂತ್ರಸ್ತೆಯ ವಿಡಿಯೊ ಹಂಚಿದ ಗಂಭೀರ ಆರೋಪವಿದೆ. ಹೀಗಾಗಿ ಮಧ್ಯಂತರ ಆದೇಶ ನೀಡದಂತೆ ಮನವಿ ಮಾಡಿದರು. ಈ ವೇಳೆ ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಮಾತನಾಡಿ, ಜನ ಮಾತನಾಡಿಕೊಳ್ಳುತ್ತಿರುವ ಕಾರಣಕ್ಕೆ ದೂರು ನೀಡಿದ್ದಾರೆ. ಸರ್ಕಾರದವರೇ 3 ಲಕ್ಷ ಪೆನ್ ಡ್ರೈವ್ ಹಂಚಿದ್ದಾರೆಂದು ಜನ ಮಾತನಾಡುತ್ತಿದ್ದಾರೆ. ಹಾಗಿದ್ದರೆ ಸರ್ಕಾರದವರ ಮೇಲೂ ಎಫ್ಐಆರ್ ಮಾಡುತ್ತಾರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ವಾದ-ಪ್ರತಿವಾದ ಆಲಿಸಿದ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರು, ವಿಡಿಯೊ ಹಂಚುವುದರಿಂದ ಮಹಿಳೆಯ ಗೌರವಕ್ಕೆ ಹಾನಿಯಾಗುತ್ತದೆ. ಇದು ಗಂಭೀರ ಅಪರಾಧವಾಗಿದೆ. ಆದರೆ, ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಎಸ್‌ಐಟಿ ಬಂಧಿಸದೇ, ತನಿಖೆ ಮುಂದುವರಿಸಬೇಕು. ಅಲ್ಲದೇ ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಸೂಚಿಸಿದ್ದಾರೆ.

Continue Reading

ಬೆಂಗಳೂರು

vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

vasavi condiments: ಅವರೆಮೇಳದಿಂದ ಹೆಚ್ಚು ಹೆಸರು ಮಾಡಿದ್ದ ವಾಸವಿ ಕಾಂಡಿಮೆಂಟ್ಸ್‌ ಮಾಲಕಿ ಗೀತಾ ಅವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 10 ವರ್ಷಗಳಿಂದ ಕೋಟ್ಯಾಂತರ ರೂ. ಬಾಡಿಗೆ ಕಟ್ಟದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರು ಕೋರ್ಟ್‌ ಮೆಟ್ಟಿಲೇರಿದ್ದರು.

VISTARANEWS.COM


on

By

Vasavi Condiments owner attempts suicide by consuming sleeping pills
ಬಾಡಿಗೆ ಕಟ್ಟದ ಕಾರಣ ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ ಹಾಕಿದ ಪೊಲೀಸರು ಮತ್ತೊಂದು ಕಡೆ ಆತ್ಮಹತ್ಯೆಗೆ ಯತ್ನಿಸಿದ ಮಾಲಕಿ ಗೀತಾ
Koo

ಬೆಂಗಳೂರು: ಬೆಂಗಳೂರಿನ ವಾಸವಿ ಕಾಂಡಿಮೆಂಟ್ಸ್‌ನ (vasavi condiments) ಮಾಲಕಿ ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ಬೆಂಗಳೂರಿನ ಸಜ್ಜನ್ ರಾವ್ ಸರ್ಕಲ್ ಬಳಿ ಇರುವ ಶ್ರೀ ವಾಸವಿ ಕಾಂಡಿಮೆಂಟ್ಸ್‌ನ ಮಾಲಕಿ ಗೀತಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

10 ವರ್ಷ ಬಾಡಿಗೆ ಕಟ್ಟದ ಹಿನ್ನೆಲೆಯಲ್ಲಿ ಗೀತಾ ವಿರುದ್ಧ ಅಂಗಡಿ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು. ವಾಸವಿ ಕಾಂಡಿಮೆಂಟ್ಸ್‌ನ ಮಾಲಕಿ ಗೀತಾ ಬರೋಬ್ಬರಿ ಒಂದು ಕೋಟಿ 70 ಲಕ್ಷ ರೂ. ಬಾಡಿಗೆ ಹಣ ಬಾಕಿ ಉಳಿಸಿಕೊಂಡಿದ್ದರು. ಕೇವಲ 40 ಲಕ್ಷ ಮಾತ್ರ ಬಾಡಿಗೆ ನೀಡಿದ್ದರಂತೆ.

ಹೀಗಾಗಿ ಇಂದು ಕೋರ್ಟ್ ಅನುಮತಿ ಪಡೆದು ಪೊಲೀಸರು ಅಂಗಡಿಗೆ ಬೀಗ ಹಾಕಿದ್ದರು. ಈ ವೇಳೆ ವಾಸವಿ ಕಾಂಡಿಮೆಂಟ್ಸ್ ಮಾಲಕಿ ಗೀತಾ ಕುಸಿದು ಬಿದ್ದಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ನಿದ್ರೆ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಸದ್ಯ ಗೀತಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರೇಕಾಯಿ ತಿನಿಸುಗಳಿಗೆ ಹಾಗೂ ಅವರೇಕಾಯಿ ಮೇಳಕ್ಕೆ ವಾಸವಿ ಕಾಂಡಿಮೆಂಟ್ಸ್ ಪ್ರಸಿದ್ದಿಯಾಗಿತ್ತು. ಆದರೆ ಬಾಡಿಗೆ ಕಟ್ಟದ ಹಿನ್ನೆಲೆ ಪೊಲೀಸರು ಅಂಗಡಿಗೆ ಬೀಗ ಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

CM Siddaramaiah: ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

VISTARANEWS.COM


on

CM Siddaramaiah
Koo

ನವ ದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಭೇಟಿಯಾಗಿ ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A) ಹೆದ್ದಾರಿ, ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ವೇ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ, ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ | CM Siddaramaiah: ಭಾರತ ಹಿಂದು ರಾಷ್ಟ್ರವಲ್ಲ; ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಪ್ರಮುಖ ವಿಷಯಗಳು

  • ದಿನಕ್ಕೆ 10,000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ
  • ಶಿರಾಡಿ ಘಾಟ್‌ನಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.
  • ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.
  • ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ
  • ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ
  • ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ
  • ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.
  • ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ
  • NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಥ ನಿರ್ಮಾಣ.
  • ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.
  • ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.
  • ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಎಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
Continue Reading

ಉತ್ತರ ಕನ್ನಡ

Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

Road Accident : ಸಂಬಂಧಿಕರ ಅಂತ್ಯಸಂಸ್ಕಾರಕ್ಕೆ ತೆರಳಿ ಮನೆಗೆ ವಾಪಸ್‌ ಆಗುವಾಗ ದಂಪತಿ ಮೇಲೆ ಬೃಹತ್‌ ಮರವೊಂದು ಬಿದ್ದಿದೆ. ಇತ್ತ ಉಡುಪಿಯಲ್ಲಿ ಏಕಾಏಕಿ ಕಾರೊಂದು ಹೊತ್ತಿ ಉರಿದಿದೆ.

VISTARANEWS.COM


on

By

Road Accident A huge tree fell on the bike Riders are serious
Koo

ಕಾರವಾರ/ಉಡುಪಿ: ಭಾರಿ ಮಳೆ ಎಫೆಕ್ಟ್‌ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಬೃಹತ್ ಮರ (Road Accident) ಬಿದ್ದಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿಯಲ್ಲಿ ಘಟನೆ ನಡೆದಿದೆ. ಅನಿಲಗೋಡ ಗ್ರಾಮದ ಸವಾರ ಬಾಬು ನಾಯ್ಕ(52), ಭಾಗೀರಥಿ ನಾಯ್ಕ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಈ ದಂಪತಿ ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆ ಬೈಕ್‌ನಲ್ಲಿ ಹೋಗಿ ವಾಪಸ್ ಬರುತ್ತಿದ್ದರು. ಈ ವೇಳೆ ಏಕಾಏಕಿ ಬೃಹತ್‌ ಮರವು ಇವರಿಬ್ಬರ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಸವಾರರನ್ನು ಕೂಡಲೇ ಸ್ಥಳೀಯರು ಹಾಗೂ ಭಟ್ಕಳದ ಬಿಜೆಪಿ ಮುಖಂಡರು ರಕ್ಷಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Road Accident Car Fire

ತಡರಾತ್ರಿ ಹೊತ್ತಿ ಉರಿದ ಕಾರು

ತಡರಾತ್ರಿ ಕಾರೊಂದು ಧಗಧಗನೆ ಹೊತ್ತಿ ಉರಿದಿದೆ. ಉಡುಪಿಯ ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಎದುರು ಘಟನೆ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ರಿಡ್ಜ್ ಕಾರು ಬೆಂಕಿಗಾಹುತಿ ಆಗಿದೆ. ಚಾಲಕ ಕಾರನ್ನು ರಸ್ತೆ ಬದಿ ನಿಲ್ಲಿಸಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿದೆ. ಕಾರಿನ ಬಾನೆಟ್‌ನಲ್ಲಿ ಹೊಗೆ ಕಂಡು ಕಾರು ಚಾಲಕ ಹೊರಬಂದಿದ್ದು, ಕ್ಷಣದಲ್ಲೇ ಹೊತ್ತಿ ಉರಿದಿದೆ. ಕಾರು ಮಾಲೀಕನ ಮಾಹಿತಿ ಮೇಲೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟುಹೋಗಿದೆ.

ಇದನ್ನೂ ಓದಿ: Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

ಹಾವೇರಿ: ಬ್ಯಾಡಗಿಯಲ್ಲಿ (Haveri Accident) ಇಂದು ಮುಂಜಾನೆ 13 ಮಂದಿಯನ್ನು ಬಲಿ ಪಡೆದುಕೊಂಡ ಅಪಘಾತ (Road Accident) ಸಂಭವಿಸಿದ ಟಿಟಿ ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ. ವಾಹನದ ಪೂಜೆಗಾಗಿ (Vehicle Puja) ಕುಟುಂಬ ತೆರಳಿದ್ದು, ಪೂಜೆ ಮುಗಿಸಿಕೊಂಡು ಮರಳಿ ಬರುತ್ತಿತ್ತು.

ಕಳೆದ 15 ದಿನದ ಹಿಂದಷ್ಟೇ ಹೊಸ ಸೆಕೆಂಡ್ ಹ್ಯಾಂಡ್ ಟೆಂಪೊ ಟ್ರಾಕ್ಸ್‌ ವಾಹನ ಖರೀದಿ ಮಾಡಿದ್ದ ಕುಟುಂಬ, ವಾಹನಕ್ಕೆ ಪೂಜೆ ಮಾಡಿಸಲು ಮನೆ ದೇವರು ಯಲ್ಲಮ್ಮ ದೇವಾಲಯಕ್ಕೆ ತೆರಳಿದ್ದರು. ನಾಗೇಶ್‌ ಕುಟುಂಬಸ್ಥರು ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಮ್ಮ ದೇವಾಲಯಕ್ಕೆ ಸೋಮವಾರ ರಾತ್ರಿ ತೆರಳಿದ್ದರು. ವಾಹನಕ್ಕೆ ಪೂಜೆ ಮಾಡಿಸಿಕೊಂಡು ಮರಳುತ್ತಿದ್ದಾಗ ಈ ಘೋರ ದುರಂತ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು.

ಟಿಟಿ ವಾಹನ ಖರೀದಿಸಿ ದೇವರ ದರ್ಶನಕ್ಕೆ ಕುಟುಂಬ ಸಮೇತ ತೆರಳಿದ್ದ ಚಾಲಕ ಆದರ್ಶ, ಪೂಜೆಯ ಬಳಿಕ ಅದರ ಫೋಟೋಗಳನ್ನು ತಮ್ಮ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದರು. ಸೋಮವಾರದಿಂದ ದೇವರ ದರ್ಶನಕ್ಕೆ ಹೊರಟಿದ್ದ ಆದರ್ಶ, ನಿನ್ನೆ ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ಟೆಂಪಲ್‌ನಲ್ಲಿ ವಾಹನ ಪೂಜೆ ಮಾಡಿಸಿ ಪೂಜೆ ಪೋಟೋಗಳನ್ನ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದರು. ಇಂದು ವಾಹನ ಛಿದ್ರಛಿದ್ರವಾಗಿದೆಯಲ್ಲದೆ ಇಡೀ ಕುಟುಂಬವನ್ನು ಬಲಿ ತೆಗೆದುಕೊಂಡಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ದುರ್ಘಟನೆ ನಡೆದಿದೆ. ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಲಾರಿ ನಂಬರ್ ಕೆಎ 51 ಡಿ3530ಗೆ ಟಿಟಿ ವಾಹನ ಸಂಖ್ಯೆ ಕೆಎ01 ಎಬಿ4760 ಡಿಕ್ಕಿ ಹೊಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಲಾರಿಯನ್ನು ಕಾಣದೆ ಟಿಟಿ ಚಾಲಕ ಆದರ್ಶ ಇದಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ರಸ್ತೆಯಲ್ಲಿ ಮಂಜು ಕವಿದಿದ್ದ ಕಾರಣ ಬಹುಶಃ ಲಾರಿ ಕಾಣಿಸಿರಲಾರದು. ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿ ಈ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆದರು. ಸ್ಥಳಕ್ಕೆ ಹಾವೇರಿ ಎಸ್‌ಪಿ ಅಂಶುಕುಮಾರ ಭೇಟಿ ನೀಡಿ ಪರಿಶೀಲಿಸಿದರು.

ಟಿಟಿ ವಾಹನದಲ್ಲಿ 17 ಜನ ಪ್ರಯಾಣ ಮಾಡುತ್ತಿದ್ದರು. 13 ಜನರ ಸಾವಿಗೀಡಾಗಿದ್ದು, 4 ಜನ ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯ (50), ಮಂಜುಳಾಬಾಯಿ (57), ಆದರ್ಶ್ (23), ಮಾನಸಾ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. 4 ವರ್ಷದ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸಹ ಮೃತಪಟ್ಟಿದ್ದಾರೆ. ಅರ್ಪಿತಾ, ಅರುಣಾ, ಅನ್ನಪೂರ್ಣ ಆಸ್ಪತ್ರೆಯಲ್ಲಿರುವ ಗಾಯಾಳುಗಳು.

13 ಜನರ ಸಾವಿನ ಸುದ್ದಿ ಕೇಳಿ ಎಮ್ಮೆಹಟ್ಟಿ ಗ್ರಾಮದ ಜನತೆ ಶಾಕ್ ಆಗಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮೃತ ವಿಶಾಲಾಕ್ಷಮ್ಮ, ಆದರ್ಶ್, ನಾಗೇಶ್, ಭಾಗ್ಯ, ಮಾನಸ, ಸುಭದ್ರತಾಯಿ ಮೂಲತಃ ಎಮ್ಮೆಹಟ್ಟಿ ಗ್ರಾಮದವರು. ಪರಶುರಾಮ್, ರೂಪ ದಂಪತಿಗಳು ಶಿವಮೊಗ್ಗ ನಗರದ ಹಾಲ್ಕೋಳ ನಿವಾಸಿಗಳು. ಮಂಜುಳಬಾಯಿ, ಮಂಜುಳ ಭದ್ರಾವತಿ ತಾಲೂಕಿನ ಕಲ್ಯಾಳ್ ಸರ್ಕಲ್‌ನವರು. ಅಂಜು ಕಡೂರು ತಾಲೂಕಿನ ಬೀರೂರು ನಿವಾಸಿ. ಪುಣ್ಯ ಬಾಯಿ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಹಾಲಿನ ಡೈರಿ ಗ್ರಾಮದ ನಿವಾಸಿ.

ಎಮ್ಮೆಹಟ್ಟಿ ಗ್ರಾಮದ ಶಾಲಾ ಆವರಣದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಮ್ಮೆಹಟ್ಟಿ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Vikram Misri
ಪ್ರಮುಖ ಸುದ್ದಿ5 mins ago

Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Prajwal Revanna Case
ಕರ್ನಾಟಕ10 mins ago

Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Vasavi Condiments owner attempts suicide by consuming sleeping pills
ಬೆಂಗಳೂರು14 mins ago

vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

Dengue Prevention
ಆರೋಗ್ಯ21 mins ago

Dengue Prevention: ರಾಜ್ಯದಲ್ಲಿ 6000ಕ್ಕೂ ಡೆಂಗ್ಯೂ ಪ್ರಕರಣ; ಇದರಿಂದ ಪಾರಾಗಲು ಹೀಗೆ ಮಾಡಿ

ಕ್ರೀಡೆ32 mins ago

IND vs SA: ಗೆದ್ದು ಬಾ ಭಾರತ; ನಾಳೆ ಟಿ20 ವಿಶ್ವಕಪ್​ ಫೈನಲ್​

CM Siddaramaiah
ಕರ್ನಾಟಕ45 mins ago

CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

Dhanya Ramkumar heroine in choukidaar cinema
ಸ್ಯಾಂಡಲ್ ವುಡ್55 mins ago

Dhanya Ramkumar: ʻದಿಯಾʼ ಹೀರೊಗೆ ಜೋಡಿಯಾದ ದೊಡ್ಮನೆ ಬ್ಯೂಟಿ!

Road Accident A huge tree fell on the bike Riders are serious
ಉತ್ತರ ಕನ್ನಡ57 mins ago

Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

Viral Video
Latest1 hour ago

Viral Video: ಸಲಿಂಗ ಪ್ರೇಮ ಪ್ರಕರಣ; ಯುವತಿಯನ್ನು ಮೆಚ್ಚಿ ಮದುವೆಯಾದ ಟಿವಿ ನಟಿ!

US Presidential Election
ವಿದೇಶ1 hour ago

US Presidential Election: ನೀಲಿ ಚಿತ್ರ ತಾರೆ ಜತೆ ಡೊನಾಲ್ಡ್‌ ಟ್ರಂಪ್‌ ಸೆಕ್ಸ್;‌ ಚರ್ಚೆ ವೇಳೆ ಬೈಡೆನ್‌ ಆರೋಪ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌