ರೋಹಿತ್‌ ಚಕ್ರತೀರ್ಥ ತಲೆದಂಡ ಸಾಧ್ಯತೆ: ಇಂದು ಗಂಭೀರವಾಗಿ ಪರಿಶೀಲನೆ ಎಂದ ಬೊಮ್ಮಾಯಿ - Vistara News

ಪ್ರಮುಖ ಸುದ್ದಿ

ರೋಹಿತ್‌ ಚಕ್ರತೀರ್ಥ ತಲೆದಂಡ ಸಾಧ್ಯತೆ: ಇಂದು ಗಂಭೀರವಾಗಿ ಪರಿಶೀಲನೆ ಎಂದ ಬೊಮ್ಮಾಯಿ

ಶಾಲಾ ಮಕ್ಕಳಿಗೆ ನಿಜವಾದ ಇತಿಹಾಸವನ್ನು ತಿಳಿಸಿಕೊಡಬೇಕು ಎಂದು ಸರ್ಕಾರ ಆರಂಭಿಸಿದ ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ಇದೀಗ ವಿವಾದವಾಗಿದೆ. ಪಠ್ಯದ ವಿಚಾರವನ್ನು ಮೀರಿ ಇದೀಗ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರೇ ಟಾರ್ಗೆಟ್‌ ಆಗಿದ್ದಾರೆ.

VISTARANEWS.COM


on

rohit_chakratirha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅನೇಕ ದಿನಗಳಿಂದ ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿರುವ ಪಠ್ಯಪುಸ್ತಕ ರಚನಾ ವಿಚಾರ ಇದೀಗ, ಸಮಿತಿಯ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರ ತಲೆದಂಡದೊಂದಿಗೆ ಮುಕ್ತಾಯವಾಗುವ ಲಕ್ಷಣ ಗೋಚರಿಸಿದೆ. ನಾಡಗೀತೆ ಹಾಗೂ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ವಿಚಾರದಲ್ಲಿ ರೋಹಿತ್‌ ಚಕ್ರತೀರ್ಥ ಅವರ ಪದಚ್ಯುತಿ ಆಗಬಹುದು ಎನ್ನಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಅಂತಿಮ ತೀರ್ಮಾನ ಕೈಗೊಳ್ಳೂವ ಸಾಧ್ಯತೆ ಇದೆ.

ಕಾಂಗ್ರೆಸ್‌ ಅಧಿಕಾರದಲ್ಲಿದ್ದ ಸಮಯದಲ್ಲಿ ಹಿರಿಯ ಲೇಖಕ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿತ್ತು. ಈ ಪುಸ್ತಕಗಳಲ್ಲಿ ಬ್ರಾಹ್ಮಣ ಸಮುದಾಯ ಹಾಗೂ ಹಿಂದು ಧರ್ಮದ ಕುರಿತು ಪೂರ್ವಾಗ್ರಹ ಪೀಡಿತರಾಗಿ ಪಠ್ಯ ನೀಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಜತೆಗೆ, ನಾಡಿಗೆ ದ್ರೋಹ ಎಸಗಿದವರನ್ನು ಅನಗತ್ಯವಾಗಿ ವೈಭವೀಕರಿಸುವ ಮೂಲಕ ಮಕ್ಕಳಿಗೆ ಸುಳ್ಳು ಇತಿಹಾಸ ಹೇಳಲಾಗುತ್ತಿದೆ ಎಂಬ ಕಾರಣಕ್ಕೆ ಲೇಖಕ ರೋಹಿತ್‌ ಚಕ್ರತೀರ್ಥ ಅವರ ನೇತೃತ್ವದ ಸಮಿತಿಯನ್ನು ರಾಜ್ಯ ಸರ್ಕಾರ ನೇಮಕ ಮಾಡಿತ್ತು.

ಇದನ್ನೂ ಓದಿ | ರೋಹಿತ್‌ ಚಕ್ರತೀರ್ಥ ಅವರನ್ನು ಕೈಬಿಡುವ ಕುರಿತು ಶಿಕ್ಷಣ ಸಚಿವರ ಜತೆ ಚರ್ಚೆ: ಸಿಎಂ ಬೊಮ್ಮಾಯಿ

ಪ್ರಮುಖವಾಗಿ ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್‌ ಸಂಸ್ಥಾಪಕ ಡಾ. ಕೇಶವ ಬಲಿರಾಮ ಹೆಡಗೆವಾರ್‌ ಅವರ ಭಾಷಣವೊಂದನ್ನು ಸೇರ್ಪಡೆ ಮಾಡಲಾಗಿದೆ ಎಂಬುದರಿಂದ ವಿವಾದ ಆರಂಭವಾಯಿತು. ಈ ಪಠ್ಯದಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠವನ್ನೂ ಸೇರ್ಪಡೆ ಮಾಡಿರುವುದಕ್ಕೆ ಎಡ ಚಿಂತಕರ ವಲಯದಿಂದ ವಿರೋಧ ವ್ಯಕ್ತವಾಯಿತು. 83 ಎಡ ಪರ ಚಿಂತಕರು ಸರ್ಕಾರಕ್ಕೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದರು. ರಾಷ್ಟ್ರಕವಿ ಕುವೆಂಪು ಅವರ ಕುರಿತು ಅತ್ಯಂತ ಬಾಲಿಷವಾದ ಪರಿಚಯ ನೀಡಿ ಅವಮಾನಿಸಲಾಗಿದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಈ ಪರಿಚಯವನ್ನು ಬರಗೂರು ಅವರ ಸಮಯದಲ್ಲೆ ಸೇರಿಸಲಾಗಿತ್ತು ಎಂಬುದು ಆನಂತರ ತಿಳಿದುಬಂದಿತ್ತು.

ಆದರೆ ರೋಹಿತ್‌ ಚಕ್ರತೀರ್ಥ ಅವರು ಅನೇಕ ವರ್ಷಗಳ ಹಿಂದೆ ಕಾಂಗ್ರೆಸ್‌ ಟೀಖಿಸುವ ಸಲುವಾಗಿ ಬರೆದಿದ್ದ ಫೇಸ್‌ಬುಕ್‌ ಪೋಸ್ಟ್‌ ಹೆಚ್ಚಿನ ವಿವಾದಕ್ಕೆ ನಾಂದಿ ಹಾಡಿತ್ತು. ನಾಡಗೀತೆಯನ್ನು ತಿರುಚಿ ಬರೆದಿರುವುದು ಸರಿಯಲ್ಲ ಎಂದು ಆಕ್ಷೇಪಗಳು ಕೇಳಿಬಂದಿದ್ದವು. ನಾಡಗೀತೆಯನ್ನು ಅವಮಾನಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಂಗನಾಥ್‌ ದೂರು ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆಯೂ ರೋಹಿತ್‌ ಚಕ್ರತೀರ್ಥ ಅವರ ನಡೆಯನ್ನು ವಿರೋಧಿಸಿತ್ತು. ಎರಡು ದಿನದ ಹಿಂದಷ್ಟೆ ಸುದ್ದಿಗೋಷ್ಠಿ ನಡೆಸಿದ್ದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್‌. ಬಾಲಕೃಷ್ಣ, ರೋಹಿತ್‌ ಚಕ್ರತೀರ್ಥ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ | ʼವಿವಾದದ ಚಕ್ರತೀರ್ಥʼದಲ್ಲಿ ಪಠ್ಯಪುಸ್ತಕ : ಹೊಸ ಪಠ್ಯವನ್ನು ತಡೆಹಿಡಿಯಲು ಹಂಪನಾ ಆಗ್ರಹ

ಈ ಕುರಿತು ಶನಿವಾರ ಪ್ರತಿಕ್ರಿಯೆ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವರ ಜತೆಗೆ ಚರ್ಚೆ ಮಾಡಲಾಗುತ್ತದೆ ಎಂದಿದ್ದರು. ಇದೆ ಬೆನ್ನಿಗೇ ಸರ್ಕಾರಕ್ಕೆ ಆದಿಚುಂಚನಗಿರಿ ಶ್ರೀಗಳು ಪತ್ರ ಬರೆದಿದ್ದಾರೆ. ನಾಡಗೀತೆಗೆ ಅವಮಾನವನ್ನು ಎಂದಿಗೂ ಸಹಿಸಬಾರದು. ಮುಂದಿನ ದಿನಗಳಲ್ಲಿ ಇಂತಹ ಕೆಲಸಕ್ಕೆ ಯಾರೂ ಇಳಿಯದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಪತ್ರದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಭಾನುವಾರ ಪ್ರತಿಕ್ರಿಯಿಸಿದ್ದಾರೆ. ನಿರ್ಮಲಾನಂದನಾಥ ಸ್ವಾಮೀಜಿಯವರ ಅಭಿಪ್ರಾಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ. ಇಂದು ಶಿಕ್ಷಣ ಸಚಿವರನ್ನು ಕರೆಸಿ ಮಾತುಕತೆ ನಡೆಸುತ್ತೇನೆ. ನಂತರ ತೀರ್ಮಾನ ಮಾಡುತ್ತೇನೆ ಎಂದಿದ್ದಾರೆ.

ರೋಹಿತ್‌ ಚಕ್ರತೀರ್ಥ ಅವರನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅತ್ಯಂತ ಬಲವಾಗಿ ಸಮರ್ಥನೆ ಮಾಡಿಕೊಳ್ಳುತ್ತಲೇ ಬಂದಿದ್ದಾರೆ. ಪಿಯು ಪಠ್ಯ ಪರಿಷ್ಕರಣೆಗೂ ರೋಹಿತ್‌ ಚಕ್ರತೀರ್ಥ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದರು. ಇದೀಗ ಅನೇಕ ಕಡೆಗಳಿಂದ ಒತ್ತಡ ಉಂಟಾಗಿರುವುದರಿಂದ ಸಿಎಂ ಎದುರು ನಾಗೇಶ್‌ ಯಾವ ರೀತಿ ಸಮರ್ಥನೆ ಮಾಡಿಕೊಳ್ಳುತ್ತಾರೆ ತಿಳಿಯಬೇಕಿದೆ. ಒಂದೆರಡು ದಿನದಲ್ಲಿ ಈ ಕುರಿತು ಸ್ಪಷ್ಟ ನಿರ್ಧಾರ ಸರ್ಕಾರದ ಕಡೆಯಿಂದ ಹೊರಬೀಳಬಹುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ | ಪಠ್ಯದಲ್ಲಿ ಬ್ರಾಹ್ಮಣೀಕರಣ ಮಾಡುತ್ತಿಲ್ಲ, ಇತಿಹಾಸ ಹಾಗೂ ರಾಷ್ಟ್ರೀಯತೆ ಇದೆ ಎಂದ ಸಚಿವ ನಾಗೇಶ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

CM Siddaramaiah: ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

VISTARANEWS.COM


on

cm Siddaramaiah And DK Shivakumar
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಇಬ್ಬರೂ ಇಂದು ಮಾನನಷ್ಟ ಮೊಕದ್ದಮೆಯೊಂದಕ್ಕೆ (Defamation case) ಸಂಬಂಧಿಸಿ ಎಸಿಎಂಎಂ ನ್ಯಾಯಾಲಯಕ್ಕೆ (ACMM court) ಹಾಜರಾಗಲಿದ್ದಾರೆ. ಬೆಳಗ್ಗೆ ಇಬ್ಬರೂ ಹಾಜರಾಗಿ ಜಾಮೀನು ಅರ್ಜಿ (bail plea) ಸಲ್ಲಿಸಲಿದ್ದಾರೆ.

ವಿಧಾನ ಪರಿಷತ್‌ ಸದಸ್ಯ, ಬಿಜೆಪಿ (BJP) ಮುಖಂಡ ಕೇಶವ ಪ್ರಸಾದ್ ಅವರು ಸಲ್ಲಿಸಿರುವ ಖಾಸಗಿ ದೂರು ವಿಚಾರಣೆಗೆ ಬಂದಿದ್ದು, ಇಂದು ನ್ಯಾಯಾಧೀಶರ ಮುಂದೆ ಸಿಎಂ, ಡಿಸಿಎಂ ಹಾಜರ್ ಆಗುತ್ತಿದ್ದಾರೆ. ವಿಧಾನಸಭೆ ಚುನಾವಣೆ (Assembly election) ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಆರೋಪಿಸಿದ್ದ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿದೆ.

“2500 ಕೋಟಿ ರೂಪಾಯಿ ಬಿಜೆಪಿ ಹೈಕಮಾಂಡ್‌ಗೆ ಕೊಟ್ಟರೆ ಸಿಎಂ ಹುದ್ದೆ ಸಿಗುತ್ತದೆ” ಎಂದಿದ್ದ ಆರೋಪ, ಕೋವಿಡ್ ಕಿಟ್ ಖರೀದಿ ಹಗರಣ, 40% ಕಮಿಷನ್ ಆರೋಪಗಳನ್ನು ಮಾಡಿದ್ದ ಕೈ ನಾಯಕರ ಮೇಲೆ ಕೇಶವ ಪ್ರಸಾದ್‌ ಮಾನನಷ್ಟ ಮೊಕದ್ದಮೆ ಹಾಕಿದ್ದರು. 08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರ ದಾಖಲು ಮಾಡಿದ್ದರು. ಈ ಪ್ರಕರಣದ ಕುರಿತು ಇಂದು ನಡೆಯುವ ವಿಚಾರಣೆಗೆ ಸಿಎಂ, ಡಿಸಿಎಂ ಹಾಜರ್ ಆಗಲಿದ್ದಾರೆ.

ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

ಏನು ಹೇಳಿದ್ದರು?

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

Continue Reading

ಪ್ರಮುಖ ಸುದ್ದಿ

Shatru Bhairavi Yaga: ಶತ್ರು ಭೈರವಿ ಯಾಗ ನಡೆದಿಲ್ಲ, ಪ್ರಾಣಿಬಲಿಯೂ ಇಲ್ಲ: ಕೇರಳ ಸರಕಾರದಿಂದಲೇ ತನಿಖೆ, ಸ್ಪಷ್ಟನೆ

Shatru Bhairavi Yaga: ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ (Kerala police) ಈ ಕುರಿತು ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಅದರ ಮೂಲಕ ತನಿಖೆ ನಡೆಸಲಾಗಿದೆ. ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಓಡಾಡಿ ಕೇರಳ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

VISTARANEWS.COM


on

shatru bhairavi yaga
ತಳಿಪರಂಬ ಶ್ರೀ ರಾಜರಾಜೇಶ್ವರ ದೇವಾಲಯ
Koo

ಮಂಗಳೂರು: ʼತಮ್ಮನ್ನು ಮುಗಿಸಲು ಕೇರಳದಲ್ಲಿ ಶತ್ರು ಭೈರವಿ ಯಾಗ (Shatru Bhairavi Yaga) ನಡೆದಿದೆʼ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ನೀಡಿದ್ದ ಹೇಳಿಕೆ ಕೇರಳದಲ್ಲಿ (Kerala) ಸಂಚಲನ ಸೃಷ್ಟಿಸಿದ್ದು, ಈ ಬಗ್ಗೆ ಅಲ್ಲಿನ ಸರ್ಕಾರ ತನಿಖೆ ನಡೆಸಿದೆ. ಅಂಥ ಯಾವುದೇ ಯಾಗ ನಡೆದಿಲ್ಲ, ಪ್ರಾಣಿ ಬಲಿ (animal sacrifice) ನೀಡಲಾಗಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ (Kerala police) ಈ ಕುರಿತು ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಅದರ ಮೂಲಕ ತನಿಖೆ ನಡೆಸಲಾಗಿದೆ. ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಓಡಾಡಿ ಕೇರಳ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಾಣಿ ಬಲಿ ಕೊಟ್ಟು ಶತ್ರು ಭೈರವಿ ಯಾಗ ನಡೆದಿದೆಯಾ ಎಂದು ತನಿಖೆ ನಡೆಸಿ ಸಮಗ್ರ ಮಾಹಿತಿ ಸಂಗ್ರಹಿಸಿ ಕೇರಳ ಡಿಜಿಪಿಗೆ ವಿಶೇಷ ತನಿಖಾ ತಂಡ ವರದಿ ಸಲ್ಲಿಸಿದೆ.

ತಳಿಪರಂಬ ಶ್ರೀ ರಾಜರಾಜೇಶ್ವರಿ ದೇವರು

ತಳಿಪರಂಬ, ರಾಜರಾಜೇಶ್ವರಂ ಹಾಗೂ ಕಣ್ಣೂರು ಸುತ್ತಮುತ್ತ ಪ್ರದೇಶದಲ್ಲಿ ತನಿಖೆ ನಡೆಸಿದ ಕೇರಳ ಟೀಂ, ಅಂಥ ಯಾವುದೇ ಪ್ರಾಣಿ ಬಲಿ ಯಾಗ ನಡೆದಿಲ್ಲ ಎಂದು ಕೇರಳ ಡಿಜಿಪಿಗೆ ವರದಿ ಸಲ್ಲಿಸಿದೆ. ಈ ನಡುವೆ ಕರ್ನಾಟಕ ಪೊಲೀಸ್ ವಿಶೇಷ ತಂಡದಿಂದಲೂ ಗುಪ್ತವಾಗಿ ಮಾಹಿತಿ ಸಂಗ್ರಹ ನಡೆದಿದೆ. ಆದರೆ ಯಾರ ತನಿಖೆಯಲ್ಲೂ ಯಾಗದ ಕುರಿತು ಸುಳಿವು ದೊರೆತಿಲ್ಲ.

ಕೇರಳ ಸಚಿವರಿಂದಲೂ ಸ್ಪಷ್ಟನೆ

ಕೇರಳದ ದೇವಸ್ವಂ ಬೋರ್ಡ್ ಸಚಿವ ರಾಧಾಕೃಷ್ಣನ್ ಅವರೂ ಡಿಕೆ ಶಿವಕುಮಾರ್ ಆರೋಪವನ್ನು ನಿರಾಕರಿಸಿದ್ದಾರೆ. ನಮ್ಮ ರಾಜ್ಯದ ಯಾವುದೇ ದೇವಸ್ಥಾನಗಳಲ್ಲೂ ಪ್ರಾಣಿ ಬಲಿ ನಡೆಯಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ದೇವಳ ಆಡಳಿತ ಮಂಡಳಿ ನಿರಾಕರಣೆ

“ದೇವಸ್ವಂ ಬೋರ್ಡ್ ಅಧೀನದಲ್ಲಿರುವ ಯಾವುದೇ ದೇವಾಲಯಗಳಲ್ಲಿ ಪ್ರಾಣಿ ಬಲಿಯನ್ನು ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯಗಳು ನಡೆಯುವುದಿಲ್ಲ. ಕೇರಳದ ಮಲಬಾರ್ ದೇವಸ್ವಂ ಬೋರ್ಡ್ ಅಧೀನದಲ್ಲಿರುವ ರಾಜರಾಜೇಶ್ವರಂ ದೇವಸ್ಥಾನದ ಹೆಸರಿನ ಬಗ್ಗೆ ದೃಶ್ಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಅಸತ್ಯ ಮತ್ತು ದುರದೃಷ್ಟಕರ” ಎಂದು ಅಧಿಕೃತ ಪತ್ರಿಕಾ ಹೇಳಿಕೆ‌ ಮೂಲಕ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ದೇವಾಲಯ ಆಡಳಿತ ಮಂಡಳಿ ಸ್ಪಷ್ಟನೆ

“ಶ್ರೀ ರಾಜರಾಜೇಶ್ವರಿ ದೇವಸ್ಥಾನವು ಕೇರಳದ ಅತ್ಯಂತ ಹಳೆಯ ಮತ್ತು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಕಣ್ಣೂರು ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಅಂತಹ ಯಾವುದೇ ಪೂಜೆ ಅಥವಾ ಶತ್ರು ಭೈರವಿ ಯಾಗವನ್ನು ನಡೆಸಲಾಗುವುದಿಲ್ಲ. ಮಲಬಾರ್ ದೇವಸ್ವಂ ಬೋರ್ಡ್ ಅಧೀನದಲ್ಲಿರುವ ಯಾವುದೇ ದೇವಾಲಯಗಳಲ್ಲಿ ಪ್ರಾಣಿ ಬಲಿಯನ್ನು ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯಗಳಿಲ್ಲ. ದೇವಾಲಯದ ಹಿತಾಸಕ್ತಿಗಳ ವಿರುದ್ಧದ ಪ್ರಚಾರಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ” ಎಂದು ಪತ್ರಿಕಾ ಹೇಳಿಕೆ ಮೂಲಕ ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹೇಳಿಕೆ ನೀಡಿದ್ದಾರೆ.

ಡಿಕೆಶಿ ಆರೋಪ ಏನಿತ್ತು?

ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನದಲ್ಲಿ ಸಿಎಂ ಹಾಗೂ ನನ್ನ ವಿರುದ್ಧ ಶತ್ರು ಭೈರವಿ ಯಾಗ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆಶಿ ಮೊನ್ನೆ ಹೇಳಿದ್ದರು. “ಇದು ಶತ್ರು ಸಂಹಾರಕ್ಕಾಗಿ ಮಾಡುತ್ತಿರುವ ಶತ್ರು ಭೈರವಿ ಯಾಗವಾಗಿದ್ದು, ಇದನ್ನು ಮಾಡಿಸುತ್ತಿರುವವರು ಯಾರೆಂದು ಗೊತ್ತಿದೆ. ರಾಜಕೀಯ ವೈರಿಗಳು ಮಾಡಿಸುತ್ತಿದ್ದಾರೆ. ಯಾಗದಲ್ಲಿ ಮೇಕೆ, ಹಂದಿ, ಕುರಿ, ಹೀಗೆ ಪಂಚಬಲಿ ಕೊಟ್ಟಿದ್ದಾರೆ. ಅಘೋರಿಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಆಸುಪಾಸು ಚೆಕ್ ಮಾಡಿ, ನಿಮಗೇ ಗೊತ್ತಾಗುತ್ತೆ. ಇದರಲ್ಲಿ ಭಾಗವಹಿಸಿದವರೇ ನನಗೆ ಮಾಹಿತಿ ನೀಡಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದರು.

ಇದನ್ನೂ ಓದಿ: ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

Prajwal Revanna Case: ಪ್ರಜ್ವಲ್‌ ರೇವಣ್ಣ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ತಮ್ಮ ಮೊಬೈಲ್‌ ಕಳೆದುಹೋಗಿದೆ ಎಂದಿದ್ದಾರೆ. ತಮ್ಮ ಮೊಬೈಲ್‌ ಒಂದು ವರ್ಷದ ಹಿಂದೆಯೇ ಕಳೆದುಹೋಗಿದ್ದು, ಆ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.

VISTARANEWS.COM


on

prajwal revanna case mobile
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ (physical abuse) ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ನಿನ್ನೆ ಇಡೀ ಕೋರ್ಟ್‌ ಹಾಗೂ ವೈದ್ಯಕೀಯ ಪರೀಕ್ಷೆಗಳ (medical test) ನಡುವೆ ಸಮಯ ಕಳೆದರು. ಈ ನಡುವೆ ಎಸ್‌ಐಟಿ (SIT) ಹಲವಾರು ಪ್ರಶ್ನೆಗಳ ಮೂಲಕ ಗ್ರಿಲ್‌ ಮಾಡಿದ್ದು, ಅದರಲ್ಲಿ ಮುಖ್ಯವಾದುದು ಅವರು ಅಶ್ಲೀಲ ವಿಡಿಯೋಗಳನ್ನು (obscene video) ಚಿತ್ರೀಕರಿಸಿಕೊಂಡ ಮೊಬೈಲ್‌ ಎಲ್ಲಿದೆ ಎಂಬುದಾಗಿತ್ತು.

ಈ ಸಂದರ್ಭದಲ್ಲಿ ಪ್ರಜ್ವಲ್‌ ರೇವಣ್ಣ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ತಮ್ಮ ಮೊಬೈಲ್‌ ಕಳೆದುಹೋಗಿದೆ ಎಂದಿದ್ದಾರೆ. ತಮ್ಮ ಮೊಬೈಲ್‌ ಒಂದು ವರ್ಷದ ಹಿಂದೆಯೇ ಕಳೆದುಹೋಗಿದ್ದು, ಆ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.

ಪ್ರಜ್ವಲ್‌ ಅವರ ವಿಚಾರಣೆ ಮಾಡಿ 161 ಹೇಳಿಕೆಯನ್ನು ಎಸ್‌ಐಟಿ ದಾಖಲಿಸಿದೆ. ಅದರಲ್ಲಿ ಮೊಬೈಲ್‌ ಕುರಿತು ದಾಖಲಿಸಿದೆ. ನೀವು ಹೇಳುತ್ತಿರುವ ಮೊಬೈಲ್ ನನ್ನ ಬಳಿ ಇಲ್ಲ. ಕಳೆದ ವರ್ಷವೇ ಫೋನ್ ಕಳೆದು ಹೋಗಿದ್ದು, ಆ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ನೀಡಿದ್ದೇನೆ ಎಂದು ಪ್ರಜ್ವಲ್‌ ಹೇಳಿದ್ದಾರೆ. ಈ ಹೇಳಿಕೆ ಸತ್ಯಾಸತ್ಯತೆಯನ್ನು ಎಸ್‌ಐಟಿ ಪರಿಶೀಲಿಸಲಿದೆ.

ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ. ವಿಡಿಯೋಗಳ ಬಗ್ಗೆ ನಂಗಷ್ಟು ಗೊತ್ತಿಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗಳನ್ನು ತೋರಿಸಿ ಪ್ರಶ್ನಿಸಿದಾಗ ಈ ಉತ್ತರ ದೊರೆತಿದೆ. ತನ್ನ ಮೇಲಿರುವ ಎಲ್ಲ ಆರೋಪಗಳನ್ನು ಪ್ರಜ್ವಲ್‌ ತಳ್ಳಿ ಹಾಕಿದ್ದಾರೆ.

ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿರುವ ಮೊಬೈಲ್‌ ಪ್ರಜ್ವಲ್‌ ವಿರುದ್ಧದ ಪ್ರಕರಣದಲ್ಲಿ ಪ್ರಬಲವಾದ ಸಾಕ್ಷ್ಯವಾಗಿದೆ. ಈ ಮೊಬೈಲ್‌ ಸಿಕ್ಕಿದರೆ, ಒಂದು ವೇಳೆ ವಿಡಿಯೋಗಳನ್ನು ಅಳಿಸಿದ್ದರೂ ಅದರಿಂದ ರಿಟ್ರೀವ್‌ ಮಾಡಬಹುದು. ಆದರೆ ಮೊಬೈಲ್‌ ಸಂಪೂರ್ಣ ನಾಶವಾಗಿದ್ದರೆ, ಯಾವುದೇ ಮೂಲ ರೆಕಾರ್ಡ್‌ಗಳು ಸಿಗಲಾರದು. ಅದರಿಂದ ಫಾರ್‌ವರ್ಡ್‌ ಆಗಿರುವ ವಿಡಿಯೋಗಳು ಸೆಕೆಂಡರಿ ಸಾಕ್ಷ್ಯಗಳೆನಿಸಿಕೊಳ್ಳುತ್ತವೆ. ಹೀಗಾಗಿ ಮೊಬೈಲ್‌ ಪಡೆಯಲು ಎಸ್‌ಐಟಿ ಪ್ರಯತ್ನ ನಡೆಸಬೇಕಿದೆ.

6 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪ್ರಜ್ವಲ್

ಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna back in India ) ಅವರನ್ನು 6 ದಿನಗಳ ಕಾಲ ಎಸ್​ಐಟಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ. ಎಸಿಎಮ್​ಎಮ್​​ ನ್ಯಾಯಾಲಯದ ನ್ಯಾಯಧೀಶ ಎನ್​. ಶಿವಕುಮಾರ್​​ ಈ ಆದೇಶ ಹೊರಡಿಸಿದ್ದಾರೆ. ಗುರುವಾರ ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್​ ರೇವಣ್ಣ ಅವರನ್ನು ಬಂಧಿಸಿದ್ದ ಎಸ್​ಐಟಿ ಪೊಲೀಸರು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಗಂಭೀರ ಆರೋಪಗಳನ್ನು ಹೊತ್ತಿರುವ ಅವರ ತನಿಖೆಗಾಗಿ ಎಸ್​ಐಟಿ ತನ್ನ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಅದನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.

ಬೆಂಗಳೂರಿನ 42ನೇ ಎಸಿಎಮ್​ಸಿ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು ಪ್ರಜ್ವಲ್ ಅವರಿಗೆ ಯಾವುದೇ ಕಿರಕುಗಳ ನೀಡಬಾರದು ಎಂದು ಎಸ್​ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ವೈದ್ಯಕೀಯ ಪರೀಕ್ಷೆ ಸೇರಿದಂತೆ ತನಿಖೆಗೆ ಎಲ್ಲ ರೀತಿಯಲ್ಲೂ ಸಹಕಾರ ನೀಡುವಂತೆ ಪ್ರಜ್ವಲ್ ರೇವಣ್ಣ ಅವರಿಗೂ ಸೂಚನೆ ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಶುಕ್ರವಾರ ಸೇರಿದಂತೆ ಒಟ್ಟು 15 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದ್ದರು. ಆದರೆ, ಪ್ರಜ್ವಲ್ ಪರ ವಕೀಲರು 1 ದಿನ ಸಾಕು ಎಂದು ವಾದಿಸಿದ್ದರು. ಆದರೆ, ನ್ಯಾಯಾಧೀಶರು 6 ದಿನಗಳನ್ನು ಮಾನ್ಯ ಮಾಡಿದ್ದಾರೆ.

ಗುರುವಾರ ರಾತ್ರಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ್ದ ಪೊಲೀಸರು ಬೆಳಗ್ಗೆ ತನಕ ಎಸ್​ಐಟಿ ಕಚೇರಿಯಲ್ಲೇ ವಿಶ್ರಾಂತಿ ಪಡೆಯಲು ಅನುಕೂಲ ಮಾಡಿಕೊಟ್ಟಿದ್ದರು. ಬೆಳಗ್ಗೆ ಅವರ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಅವರಿಂದ ಅಗತ್ಯ ದಾಖಲೆಗಳಿಗೆ ಸಹಿ ಮಾಡಿಕೊಂಡರು. ಆ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.‌

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Continue Reading

ವಾಣಿಜ್ಯ

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

LPG Price Cut: ಜೂನ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ. ಕಡಿಮೆ ಮಾಡಿವೆ. ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 69.50 ರೂ. ಕಡಿತಗೊಂಡು 1,756 ರೂ.ಗೆ ತಲುಪಿದೆ.

VISTARANEWS.COM


on

LPG Price Cut
Koo

ನವದೆಹಲಿ: ಜೂನ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 69.50 ರೂ. ಕಡಿತಗೊಂಡು 1,756 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,676 ರೂ. ಆಗಿದೆ. ಹಿಂದೆ 1745.50 ರೂ. ಆಗಿತ್ತು. ಮುಂಬೈಯಲ್ಲಿಯೂ 69.50 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,629 ರೂ.ಗೆ ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ 1,840.5೦ ರೂ., ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,787 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಸತತ ಇಳಿಕೆ

ಕಳೆದ ತಿಂಗಳು ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು. ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ವಿವಿಧ ನಗರಗಳಲ್ಲಿ ಪರಿಷ್ಕೃತ ದರ

ನಗರಪರಿಷ್ಕೃತ ದರಹಿಂದಿನ ದರ
ಬೆಂಗಳೂರು1,756 ರೂ.1,825.50
ಕೋಲ್ಕತ್ತಾ1,787 ರೂ.1,859 ರೂ.
ಮುಂಬೈ1,629 ರೂ.1,698.50 ರೂ.
ಚೆನ್ನೈ1,840.50 ರೂ.1,911 ರೂ.
ನವದೆಹಲಿ1,676 ರೂ.1745.50 ರೂ.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ.

ಇದನ್ನೂ ಓದಿ: LPG Aadhaar Link: ಎಲ್‌ಪಿಜಿ ಕನೆಕ್ಷನ್‌ಗೆ ಆಧಾರ್ ಲಿಂಕ್ ಮಾಡಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

Continue Reading
Advertisement
Porsche Crash
ದೇಶ17 mins ago

Porsche Crash: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣ; ಸಾಕ್ಷ್ಯ ತಿರುಚಿದ ಅಪ್ರಾಪ್ತನ ತಾಯಿಯ ಬಂಧನ

Physical Abuse
ಉಡುಪಿ22 mins ago

Physical Abuse : ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚರ್‌‌

Nandamuri Balakrishna touch actress anjali back
ಟಾಲಿವುಡ್47 mins ago

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Shubman Gill
ಕ್ರೀಡೆ49 mins ago

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Narendra Modi
Lok Sabha Election 202453 mins ago

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Murder Case in tumkur
ತುಮಕೂರು56 mins ago

Murder case : ಸ್ನೇಹಿತರೇ ದುಷ್ಮನ್‌ಗಳು; ಕಂಠಪೂರ್ತಿ ಕುಡಿಸಿ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ

OpenAI
Lok Sabha Election 20241 hour ago

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

Murder Case in Mysuru
ಕ್ರೈಂ1 hour ago

Murder case : ಜಸ್ಟ್‌ ಗುರಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ; ಸಾವಿನ ಕೊನೆ ಕ್ಷಣ ಸೆರೆ

Ambati Rayudu
ಕ್ರೀಡೆ1 hour ago

Ambati Rayudu: ಸ್ಟಾಂಡರ್ಡ್​ ಕಮ್ಮಿ ಮಾಡಿದರೆ ಉತ್ತಮ ಎಂದು ಕೊಹ್ಲಿಯ ಕಾಲೆಳೆದ ರಾಯುಡು

cm Siddaramaiah And DK Shivakumar
ಪ್ರಮುಖ ಸುದ್ದಿ2 hours ago

CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌