ಮೊಳಕಾಲ್ಮುರುವಿನಲ್ಲಿ ಸಚಿವ ಶ್ರೀರಾಮುಲು ಬಾಡೂಟ, ನೆಲಕ್ಕೆ ಬಿದ್ದ ಮಾಂಸವನ್ನು ಬಾಚಿ ಉಂಡ ಜನ! - Vistara News

ಚಿತ್ರದುರ್ಗ

ಮೊಳಕಾಲ್ಮುರುವಿನಲ್ಲಿ ಸಚಿವ ಶ್ರೀರಾಮುಲು ಬಾಡೂಟ, ನೆಲಕ್ಕೆ ಬಿದ್ದ ಮಾಂಸವನ್ನು ಬಾಚಿ ಉಂಡ ಜನ!

ನೆಲಕ್ಕೆ ಬಿದ್ದ ಮಾಂಸದ ಪದಾರ್ಥವನ್ನು ಹಸಿದ ಜನತೆ ಬಾಚಿ ಬಾಚಿ ಉಂಡ ಮನ ಕಲಕುವ ದೃಶ್ಯ ಸಚಿವ ಶ್ರೀರಾಮುಲು ಅವರು ಏರ್ಪಡಿಸಿದ್ದ ಬಾಡೂಟ ಕಾರ್ಯಕ್ರಮದಲ್ಲಿ ಕಂಡುಬಂತು.

VISTARANEWS.COM


on

badoota
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ನೆಲಕ್ಕೆ ಬಿದ್ದ ಮಾಂಸದ ಪದಾರ್ಥವನ್ನು ಹಸಿದ ಜನತೆ ಬಾಚಿ ಬಾಚಿ ಉಂಡ ಮನ ಕಲಕುವ ದೃಶ್ಯ ಸಚಿವ ಶ್ರೀರಾಮುಲು ಅವರು ಏರ್ಪಡಿಸಿದ್ದ ಬಾಡೂಟ ಕಾರ್ಯಕ್ರಮದಲ್ಲಿ ಕಂಡುಬಂತು.

‘ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ, ಬಿಜೆಪಿ ಸರ್ಕಾರದ ಪ್ರತಿಫಲ’ ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದ ಗೌರಸಮುದ್ರ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. ಸಚಿವ ಶ್ರೀರಾಮುಲು ಇದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಆಗಮಿಸಿದ ಜನರಿಗೆ ಬಾಡೂಟ ನೀಡಲಾಗಿತ್ತು. ಊಟದ ಕೊನೆಯಲ್ಲಿ ಮಣ್ಣು ನೆಲದಲ್ಲಿ ಬಿದ್ದ ಮಾಂಸಾಹಾರಕ್ಕೆ ಜನ ಮುಗಿಬಿದ್ದರು. ಮಟನ್ ಪೀಸ್‌ಗಳನ್ನು ಜನತೆ ಬಾಚಿಕೊಂಡು ಹೋಗುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ದೃಶ್ಯ ಮನ ಕಲಕುವಂತಿದೆ.

ಹಲವು ಕಡೆ ಬಾಡೂಟ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ವಿವಿಧೆಡೆ ʼಸಚಿವರೊಂದಿಗೆ ಔತಣಕೂಟʼ ಹೆಸರಿನಲ್ಲಿ ಬಾಡೂಟ ವ್ಯವಸ್ಥೆಯನ್ನು ಸಚಿವ ಶ್ರೀರಾಮುಲು ಆಯೋಜಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಮುಂದಿನ ಬಾರಿ ಮೊಳಕಾಲ್ಮೂರು ಕ್ಷೇತ್ರದಿಂದಲೇ‌ ವಿಧಾನಸಭೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ | Election 2023 | ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಗಿಮಿಕ್‌?: ವರುಣಾ ಖಚಿತ ಎಂದ ಶ್ರೀರಾಮುಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಹವಾಮಾನ ತಜ್ಞರ ವಾರ್ನಿಂಗ್‌; ಇನ್ನೊಂದು ವಾರ ವಿಪರೀತ ಮಳೆ, ಜೂ.6ರ ವರೆಗೂ ಮೀನುಗಾರಿಕೆಗೆ ಬ್ರೇಕ್‌

Heavy Rain Warning: ರಾಜ್ಯಾದ್ಯಂತ (Karnataka Weather forecast) ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ (Yellow Alert) ಮಾಡಲಾಗಿದೆ. ಜತೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ (Fisher Waring) ನೀಡಲಾಗಿದೆ

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು (Monsoon rains) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡಿನ ಕೆಲವು ಭಾಗಗಳಲ್ಲಿ ಮುಂದುವರೆದಿದೆ. ಜೂ.4ರಂದು ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಾಧಾರಣ (Rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಮಂಡ್ಯ ಮತ್ತು ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ. ಜತೆಗೆ ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರದೊಂದಿಗೆ ಶುರುವಾಗಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

ಜೂ.6ರ ವರೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ

ಕರ್ನಾಟಕ ಕರಾವಳಿಯಲ್ಲಿ 35- 45 ಕಿ.ಮೀ ಗಾಳಿ ಬೀಸಲಿದೆ. ಸಮುದ್ರ ಮಟ್ಟದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಇದೆ. ಹೀಗಾಗಿ ಜೂನ್ 4 ರಿಂದ ಜೂನ್ 6ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಯೆಲ್ಲೋ‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ತೊಯ್ದು ತೊಪ್ಪೆಯಾದ ಪುತ್ತೂರು; ನಾಳೆ ಮಳೆ ಅಬ್ಬರ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ಹಲವೆಡೆ ಮಳೆಯು ಅಬ್ಬರಿಸುತ್ತಿದೆ. ಸೋಮವಾರ ಪುತ್ತೂರಿನಲ್ಲಿ ಸುರಿದ ಅರ್ಧ ಗಂಟೆ ಮಳೆಗೆ (Karnataka Weather Forecast) ನದಿಯಂತಾಗಿತ್ತು. ಬೆಳಗಾವಿಯಲ್ಲೂ ನಿರಂತರ ಮಳೆಯಾಗಿದ್ದು, ಕೊಡಗಿಗೆ ಎನ್‍ಡಿಆರ್‍ಎಫ್ ತಂಡ ಭೇಟಿ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Heavy Rain ) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast Putur rain
ಪುತ್ತೂರಿನಲ್ಲಿ ಮಳೆ ಅಬ್ಬರಕ್ಕೆ ನದಿಯಂತಾದ ರಸ್ತೆಗಳು
Koo

ಮಂಗಳೂರು/ಬೆಂಗಳೂರು: ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಭಾರಿ (Heavy Rain) ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಜೂ.4ರಂದು ಗುಡುಗು ಸಹಿತ ಭಾರೀ ಮಳೆಯೊಂದಿಗೆ (Karnataka Weather forecast) ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನದಿಯಂತಾದ ಪುತ್ತೂರಿನ ರಸ್ತೆಗಳು

ಸೋಮವಾರ ಸಂಜೆ ಪುತ್ತೂರಿನಲ್ಲಿ ಗುಡುಗು ಸಿಡಿಲಿನ ಭಾರೀ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿತ್ತು. ಪುತ್ತೂರಿನ ದರ್ಬೆಯ ಅಂಗಡಿ ಹಾಗೂ ಕೋರ್ಟ್ ರೋಡ್ ಬಳಿಯ ಜ್ಯುವೆಲ್ಲರಿ ಅಂಗಡಿಗಳು ಜಲಾವೃತಗೊಂಡಿತ್ತು. ಭಾರೀ ಮಳೆಗೆ ಪುತ್ತೂರಿನ ರಸ್ತೆಗಳು ನದಿಯಂತಾಗಿ, ಜನ ಜೀವನ ಅಸ್ತವ್ಯಸ್ತವಾಗಿತ್ತು. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದೆ ಈ ಅವಾಂತರಕ್ಕೆ ಕಾರಣ ಎಂದು ಕಿಡಿಕಾರಿದರು.

karnataka weather Forecast

ಬೆಳಗಾವಿಯಲ್ಲೂ ಧಾರಾಕಾರ ಮಳೆ

ಬೆಳಗಾವಿಯಲ್ಲಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಬೆಳಗಾವಿ ನಗರ ಸೇರಿ ಜಿಲ್ಲೆಯ ಹಲವಡೆ ಭಾರಿ ಮಳೆಗೆ ಬೀದಿ ಬದಿ ವ್ಯಾಪಾರಸ್ಥರು ಹೈರಾಣಾದರಿ. ಕಳೆದ ಹಲವು ದಿನಗಳಿಂದ ಬಿಸಿಲಿಗೆ ತತ್ತರಿಸಿದ ಜನಕ್ಕೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

ಕೊಡಗಿಗೆ ಎನ್‍ಡಿಆರ್‍ಎಫ್ ತಂಡ ಭೇಟಿ

ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರಿಕೆಯನ್ನು ವಹಿಸುವ ಸಂಬಂಧ ಈಗಾಗಲೇ ಎನ್‍ಡಿಆರ್‍ಎಫ್ ತಂಡ ಆಗಮಿಸಿದೆ. ಈ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್‌ ತಂಡವು ಸೋಮವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಭೇಟಿ ಆಗಿದೆ. ಈ ವೇಳೆ ಎನ್‍ಡಿಆರ್‍ಎಫ್‍ನ ಅಜಯ್ ಕುಮಾರ್ ನೇತೃತ್ವದ ತಂಡವು ಜಿಲ್ಲಾಧಿಕಾರಿ ಜತೆಗೆ ಮಳೆಗಾಲದಲ್ಲಿ ಅನುಸರಿಸಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಿದರು.

karnataka weather Forecast

ಬಳಿಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಮಳೆ ಸಂಬಂಧ ಹವಾಮಾನ ಇಲಾಖೆಯಿಂದ ಕಾಲಕಾಲಕ್ಕೆ ಬಿಡುಗಡೆ ಆಗುವ ಮಾಹಿತಿಯನ್ನು ಅಪ್‍ಡೇಟ್ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಚ್ಚರವಹಿಸಿ, ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಇದೇ ವೇಳೆ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ, ಎನ್‍ಡಿಆರ್‍ಎಫ್ ತಂಡ ಪ್ರಮುಖರು ಇದ್ದರು. ಎನ್‍ಡಿಆರ್‍ಎಫ್ ತಂಡವು ಬೆಂಗಳೂರಿನ ಆರ್‍ಆರ್‍ಸಿ ವಿಭಾಗದಿಂದ ಆಗಮಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Karnataka Rain : ರಾಜಧಾನಿ ಬೆಂಗಳೂರಿನಲ್ಲಿ (Bengaluru Rains) ಭಾನುವಾರ ಸುರಿದ ಎರಡು ಗಂಟೆಯ ಮಳೆಗೆ ಹಳೆಯ ದಾಖಲೆಗಳನ್ನು ಮುರಿದು ಮುನ್ನುಗ್ಗಿದೆ. 133 ವರ್ಷದ ದಾಖಲೆಯನ್ನು ಬೆಂಗಳೂರು ಮಳೆ ರೆಕಾರ್ಡ್ ಬ್ರೇಕ್ ಮಾಡಿದೆ. ಜತೆಗೆ ಸೋಮವಾರವು ಹಲವೆಡೆ ಮಳೆಯು ಅಬ್ಬರಿಸಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru Rain) ಜೂನ್‌ ಮೊದಲ ವಾರವೇ ಮಳೆಯಲ್ಲಿ ರೆಕಾರ್ಡ್‌ ಬ್ರೇಕ್‌ ಮಾಡಿದೆ. ಜೂ.2ರ ಭಾನುವಾರ ಬೆಂಗಳೂರಿನಲ್ಲಿ 111.2 mm ಮಳೆಯಾಗಿದೆ. ಈ ಮೂಲಕ 133 ವರ್ಷಗಳ ದಾಖಲೆಯನ್ನು ಮುರಿದಿದೆ. ಬೆಂಗಳೂರಿನಲ್ಲಿ 1891ರ ಜೂನ್ 16ರಂದು 101.6 mm ಮಳೆ ಆಗಿತ್ತು. ಆದರೆ ನಿನ್ನೆ ಭಾನುವಾರ ಸುರಿದ ಜೂನ್ ತಿಂಗಳ ಮಳೆ 133 ವರ್ಷಗಳ ದಾಖಲೆ (Karnataka Rain) ಮುರಿದಿದೆ ಎಂದು ವಿಸ್ತಾರ ನ್ಯೂಸ್‌ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಾಖಲೆಯ ಮಳೆ ಅಬ್ಬರದ ಡಿಟೈಲ್ಸ್‌

ವರ್ಷ- ಮಳೆ ಪ್ರಮಾಣ
1891ರ ಜೂನ್ 16ರಂದು 101.6 mm
2013ರ ಜೂನ್‌ 1ರಂದು 100mm
2009ರ ಜೂನ್ 11ರಂದು 89.6 mm
2024ರ ಜೂನ್‌ 2ರಂದು 111.2 mm

ಇದನ್ನೂ ಓದಿ: Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

ಚಿಕ್ಕಮಗಳೂರಲ್ಲಿ ಮಳೆಗೆ 50 ಎಕರೆ ಅಡಿಕೆ ತೋಟ ಜಲಾವೃತ

ಚಿಕ್ಕಮಗಳೂರು ಬಯಲುಸೀಮೆ ಭಾಗದಲ್ಲಿ ಸೋಮವಾರ (ಜೂ. 3) ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ 50 ಎಕರೆ ಅಡಿಕೆ ತೋಟ ಜಲಾವೃತಗೊಂಡಿದೆ. ಚಿಕ್ಕಮಗಳೂರು ತಾಲೂಕಿನ ಕ್ಯಾತನಬೀಡು, ಸಾದರಹಳ್ಳಿ ಗ್ರಾಮಗಳಲ್ಲಿ ಘಟನೆ ನಡೆದಿದೆ. ಗ್ರಾಮದ ಬಸವರಾಜು, ಲೋಕೇಶ್ ಸೇರಿದಂತೆ ಹಲವು ರೈತರ ತೋಟ ನೀರುಪಾಲಾಗಿದೆ. ಇನ್ನೂ ಚಿಕ್ಕಮಗಳೂರು, ಮುಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್ ಪುರದಲ್ಲಿ ನಿರಂತರ ಮಳೆಯಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ, ಕಿಗ್ಗಾ, ಬಸರಿ ಕಟ್ಟೆ ಭಾಗದಲ್ಲೂ ವ್ಯಾಪಕ ಮಳೆಯಾಗುತ್ತಿದೆ.

ದಾವಣಗೆರೆಯಲ್ಲಿ ಕೊಚ್ಚಿ ಹೋದ ಮಂಡಲೂರು ಸೇತುವೆ

ಭಾನುವಾರ ರಾತ್ರಿ ಸುರಿದ ಮಳೆಯಿಂದ ಮಂಡಲೂರು ಸೇತುವೆ ಕೊಚ್ಚಿ ಹೋಗಿದೆ. ದಾವಣಗೆರೆಯ ಮಂಡಲೂರಿನಿಂದ ಕಾಟಿಹಳ್ಳಿ ತಾಂಡಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯು ಕೊಚ್ಚಿ ಹೋದ ಕಾರಣದಿಂದ ಸಂಚಾರಕ್ಕೆ ಅಡಚಣೆ ಆಗಿತ್ತು. ಮಂಡಲೂರು ಗ್ರಾಮಕ್ಕೆ ಬರಲು ಹೋಗಲು ಆಗದೆ ಕಾಟಿಹಳ್ಳಿ ತಾಂಡದ ಜನರಿಗೆ ತೊಂದರೆ ಅನುಭವಿಸಿದರು. ಸೇತುವೆ ತುರ್ತು ಕಾಮಗಾರಿ ಆರಂಭಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು.

ಕೊಡಗಿಗೂ ಎಂಟ್ರಿ ಕೊಟ್ಟ ಮುಂಗಾರು ಮಳೆ

ಸೋಮವಾರ ಕೊಡಗು ಜಿಲ್ಲೆಯ ಹಲವೆಡೆ ತುಂತುರು ಮಳೆ ಆರಂಭವಾಗಿದೆ. ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಬಿಸಿಲ ವಾತವರಣವಿತ್ತು. ಸೋಮವಾರ ಮಧ್ಯಾಹ್ನದ ನಂತರ ಮಡಿಕೇರಿ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದ್ದು, ಮನ್ಸೂನ್ ಮಾದರಿಯ ವಾತಾವರಣ ಕಂಡು ಬಂತು. ಮಳೆಯಿಂದಾಗಿ ಕೊಡಗಿನ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿದೆ. ಇತ್ತ ದಿಢೀರ್‌ ಮಳೆಗೆ ಸಾರ್ವಜನಿಕರು ಹಾಗೂ ದ್ವಿಚಕ್ರ ವಾಹನ ಸವಾರರು ಪರದಾಡಿದರು.

ಚಿತ್ರದುರ್ಗದಲ್ಲಿ ಮಳೆಗೆ ಬೆಳೆ ನಾಶ

ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಆರ್ಭಟಕ್ಕೆ ಮೊಳಕಾಲ್ಮುರು ತಾಲೂಕಿನಲ್ಲಿ ಅವ್ಯವಸ್ಥೆ ಆಗಿದೆ. ಪಕ್ಕುರ್ತಿ ಗ್ರಾಮದಲ್ಲಿ ಮಳೆಯಿಂದಾಗಿ ಶೇಂಗಾ, ಹತ್ತಿ, ಕಲ್ಲಂಗಡಿ, ಕನಕಾಂಬರ ಬೆಳೆ ನಾಶವಾಗಿದೆ. ಮಳೆ ರಭಸಕ್ಕೆ ನಾಲ್ಕು ಬೋರ್ವೆಲ್,ವಿದ್ಯುತ್ ಪರಿಕರ,ಪೈಪ್ ಲೈನ್ ಕೊಚ್ಚಿ ಹೋಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Chitradurga Lok Sabha Constituency : ಚಿತ್ರದುರ್ಗ ಕ್ಷೇತ್ರವನ್ನು ಮರು ವಶಪಡಿಸಿಕೊಳ್ಳುವುದೇ ಕಾಂಗ್ರೆಸ್​?

Chitradurga Lok Sabha Constituency : ಬಿಜೆಪಿ ಈ ಬಾರಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ನಿಂದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮೂರನೇ ಬಾರಿಗೆ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಗಣನೀಯ ಸಂಖ್ಯೆಯ ಎಸ್ಸಿ ಮತ್ತು ಎಸ್ಟಿ ಮತದಾರರಿದ್ದಾರೆ. 2019ರಲ್ಲಿ ಇಲ್ಲಿ 17.61 ಲಕ್ಷ ಮತದಾರರು ಇದ್ದರೆ 2024ರಲ್ಲಿ 18. 49 ಲಕ್ಷ ಮತದಾರರು ಕಾಣಿಸಿಕೊಂಡಿದ್ದಾರೆ.

VISTARANEWS.COM


on

Chitradurga Lok Sabha Constituency
Koo

ಚಿತ್ರದುರ್ಗ ಲೋಕಸಭೆ ಕ್ಷೇತ್ರ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮೀಸಲಾಗಿದೆ. ಇದು ಇಡೀ ಚಿತ್ರದುರ್ಗ ಜಿಲ್ಲೆ ಮತ್ತು ತುಮಕೂರು ಜಿಲ್ಲೆಯ ಕೆಲವು ಭಾಗಗಳನ್ನು ಒಳಗೊಂಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಮೊಳಕಾಲ್ಮೂರು (ಎಸ್ಟಿ), ಚಳ್ಳಕೆರೆ (ಎಸ್ಟಿ), ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ (ಎಸ್ಸಿ), ಶಿರಾ ಮತ್ತು ಪಾವಗಡ (ಎಸ್ಸಿ) ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು . 1977 ರಿಂದ ಈ ಸ್ಥಾನವು ಕರ್ನಾಟಕ ರಾಜ್ಯದ ಭಾಗವಾಯಿತು.

ಚಿತ್ರದುರ್ಗ ಕ್ಷೇತ್ರದಲ್ಲಿ ಒಟ್ಟು 16 ಲೋಕಸಭಾ ಚುನಾವಣೆಗಳು ನಡೆದಿದ್ದು, ಕಾಂಗ್ರೆಸ್ 11 ಬಾರಿ ಗೆದ್ದಿದೆ. ಇದಲ್ಲದೆ, ಪ್ರಜಾ ಸೋಷಿಯಲಿಸ್ಟ್ ಪಾರ್ಟಿ, ಸ್ವತಂತ್ರ ಅಭ್ಯರ್ಥಿ , ಜನತಾದಳ ಮತ್ತು ಜೆಡಿಯು ಅಭ್ಯರ್ಥಿಗಳು ಇಲ್ಲಿ ಗೆಲುವು ದಾಖಲಿಸಿದ್ದಾರೆ. 2009 ರಲ್ಲಿ ಮೊದಲ ಬಾರಿಗೆ ಬಿಜೆಪಿ ಈ ಸ್ಥಾನದಿಂದ ಗೆದ್ದಿತ್ತು. 2019 ರಲ್ಲಿ ಮತ್ತೆ ಸ್ಥಾನ ಕಸಿದುಕೊಂಡಿತು. ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಸಾಮಾನ್ಯವಾಗಿ ಕಾಂಗ್ರೆಸ್ ನ ಸಾಂಪ್ರದಾಯಿಕ ಕ್ಷೇತ್ರವೆಂದು ಪರಿಗಣಿಸಲಾಗುತ್ತದೆ.

ಬಿಜೆಪಿ ಈ ಬಾರಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ನಿಂದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮೂರನೇ ಬಾರಿಗೆ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಗಣನೀಯ ಸಂಖ್ಯೆಯ ಎಸ್ಸಿ ಮತ್ತು ಎಸ್ಟಿ ಮತದಾರರಿದ್ದಾರೆ. 2019ರಲ್ಲಿ ಇಲ್ಲಿ 17.61 ಲಕ್ಷ ಮತದಾರರು ಇದ್ದರೆ 2024ರಲ್ಲಿ 18. 49 ಲಕ್ಷ ಮತದಾರರು ಕಾಣಿಸಿಕೊಂಡಿದ್ದಾರೆ.

ಹಿಂದಿನ ಫಲಿತಾಂಶಗಳು ಇಲ್ಲಿವೆ

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಎ .ನಾರಾಯಣಸ್ವಾಮಿ ಅವರು ಕಾಂಗ್ರೆಸ್​​ನ ಬಿ.ಎನ್.ಚಂದ್ರಪ್ಪ ಅವರನ್ನು 80,178 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ 2019 ರಲ್ಲಿ ಬಿಜೆಪಿ 50.24% ಮತಗಳನ್ನು ಹೊಂದಿತ್ತು.

ಇದನ್ನೂ ಓದಿ:Udupi-Chikmagalur Lok Sabha constituency: ಬದಲಾವಣೆ ನಡುವೆ ಯಾರಿಗೆ ಮಣೆ ಹಾಕಲಿದ್ದಾರೆ ಉಡುಪಿ ಕ್ಷೇತ್ರದ ಮತದಾರರು?

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿ.ಎನ್.ಚಂದ್ರಪ್ಪ ಅವರು ಬಿಜೆಪಿಯ ಜನಾರ್ಧನ ಸ್ವಾಮಿ ಅವರನ್ನು 1,01,291 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 42.64% ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಜನಾರ್ದನ ಸ್ವಾಮಿ ಅವರು ಕಾಂಗ್ರೆಸ್​​ನ ಡಾ.ಬಿ.ತಿಪ್ಪೇಸ್ವಾಮಿ ಅವರನ್ನು 1,35,571 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.44.35ರಷ್ಟು ಮತಗಳನ್ನು ಪಡೆದಿತ್ತು.

2011ರ ಜನಗಣತಿಯ ಅಂಕಿಅಂಶಗಳ ಪ್ರಕಾರ ಜಿಲ್ಲೆಯ ಜನಸಂಖ್ಯೆ 1659456. ಸರಾಸರಿ ಸಾಕ್ಷರತಾ ಪ್ರಮಾಣವು 73.71% – ಮಹಿಳೆಯರಲ್ಲಿ 65.88% ಮತ್ತು ಪುರುಷರಲ್ಲಿ 81.37% ಆಗಿತ್ತು. ಸಂಸತ್ತಿನಲ್ಲಿ ಎಸ್ಸಿ ಮತದಾರರು ಸುಮಾರು 23.7% ರಷ್ಟಿದ್ದರೆ, ಎಸ್ಟಿ ಮತದಾರರು 16.8% ರಷ್ಟಿದ್ದಾರೆ. ಗ್ರಾಮೀಣ ಮತದಾರರು ಮತದಾರರಲ್ಲಿ ಸುಮಾರು 80% ರಷ್ಟಿದ್ದಾರೆ. ಈ ಕ್ಷೇತ್ರದಲ್ಲಿ ಮತದಾರರ ಲಿಂಗ ಅನುಪಾತ (1000 ಪುರುಷ ಮತದಾರರಿಗೆ ಮಹಿಳಾ ಮತದಾರರ ಸಂಖ್ಯೆ) 2024 ರಲ್ಲಿ 1,006, 2019 ರಲ್ಲಿ ಇದು 979, 2014 ರಲ್ಲಿ 966 ಮತ್ತು 2009 ರಲ್ಲಿ 967 ಆಗಿತ್ತು.

Continue Reading
Advertisement
Election Result 2024
ದೇಶ17 mins ago

Election results 2024: ದಿಲ್ಲಿಯಲ್ಲಿ ಈ ಬಾರಿಯೂ ಕ್ಲೀನ್‌ ಸ್ವೀಪ್‌ ಮಾಡುತ್ತಾ ಬಿಜೆಪಿ? ಏಳೂ ಕ್ಷೇತ್ರಗಳಲ್ಲಿ ಮುನ್ನಡೆ

sensex crashed
ಪ್ರಮುಖ ಸುದ್ದಿ26 mins ago

Sensex Crashed : ಲೋಕ ಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ನೆಲಕಚ್ಚಿದ ಷೇರು ಮಾರುಕಟ್ಟೆ

Election Results 2024
ಕರ್ನಾಟಕ34 mins ago

Election Results 2024: ಹಾಸನದಲ್ಲಿ ಜೆಡಿಎಸ್‌ ಮುನ್ನಡೆ; ಪ್ರಜ್ವಲ್ ರೇವಣ್ಣಗೆ ಇಲ್ಲ ಫಲಿತಾಂಶ ನೋಡುವ ಭಾಗ್ಯ!

Andhra Assembly Result 2024
ದೇಶ35 mins ago

AP Election Results 2024 Live: ಆಂಧ್ರ ಪ್ರದೇಶ ವಿಧಾನಸಭೆ; ಎನ್‌ಡಿಎಗೆ ಭರ್ಜರಿ ಮುನ್ನಡೆ

election resluts 2024 nitish kumar tejaswi yadav
ಪ್ರಮುಖ ಸುದ್ದಿ37 mins ago

Election Results 2024: ಬಿಹಾರದಲ್ಲಿ ಕಾಂಗ್ರೆಸ್-ಆರ್‌ಜೆಡಿಗೆ ಭಾರಿ ಹಿನ್ನಡೆ; ಬಿಜೆಪಿ-ಜೆಡಿಯು ಜಯಭೇರಿಯತ್ತ

Election Result 2024
ದೇಶ43 mins ago

Election Results 2024: ವಾರಾಣಸಿಯಲ್ಲಿ ಮೋದಿಗೆ ಆಘಾತ; 6,223 ಮತಗಳ ಹಿನ್ನಡೆ

Urfi Javed shares photos of swollen face, accepts
ಬಾಲಿವುಡ್53 mins ago

Urfi Javed: ಉರ್ಫಿ ಜಾವೇದ್‌ಗೆ ಮುಖ ಹೀಗೆ ಊದಿಕೊಳ್ಳುತ್ತೆ; ಆರೋಗ್ಯ ಸಮಸ್ಯೆಯಿಂದ ಬಳಲ್ತಾ ಇದ್ದಾರೆ ಫ್ಯಾಷನ್‌ ಐಕಾನ್‌!

Odisha Assembly Result 2024
ದೇಶ1 hour ago

Odisha Assembly Result 2024: ಅಸೆಂಬ್ಲಿ ಎಲೆಕ್ಷನ್‌; ಮತ ಎಣಿಕೆ ಶುರು-ಒಡಿಶಾದಲ್ಲಿ ಮತ್ತೆ ಗದ್ದುಗೆ ಏರುತ್ತಾ ಬಿಜೆಡಿ?

election results 2024 Lok Sabha Election 2024 Bengaluru Rural Lok Sabha constituency is the most sensitive Election Commission deploys paramilitary forces
Lok Sabha Election 20241 hour ago

Election results 2024: ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಭರ್ಜರಿ ಮುನ್ನಡೆ

Varun Dhawan Natasha Dalal welcome baby girl
ಬಾಲಿವುಡ್2 hours ago

Varun Dhawan: ಹೆಣ್ಣು ಮಗುವಿಗೆ ತಂದೆಯಾದ ಬಾಲಿವುಡ್ ನಟ ವರುಣ್ ಧವನ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ3 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ19 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ19 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ7 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು7 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌