BTS 2022 | ಬಾಹ್ಯಾಕಾಶ, ರಾಕೆಟ್‌ ಸೈನ್ಸ್‌ನಲ್ಲಿ ತೊಡಗಿಸಿಕೊಂಡ 100 ನವೋದ್ಯಮಗಳಿಗೆ ಇಸ್ರೊ ನೆರವು - Vistara News

ಕರ್ನಾಟಕ

BTS 2022 | ಬಾಹ್ಯಾಕಾಶ, ರಾಕೆಟ್‌ ಸೈನ್ಸ್‌ನಲ್ಲಿ ತೊಡಗಿಸಿಕೊಂಡ 100 ನವೋದ್ಯಮಗಳಿಗೆ ಇಸ್ರೊ ನೆರವು

ಬಾಹ್ಯಾಕಾಶ ಸಂಶೋಧನೆಯಲ್ಲಿ ತೊಡಗಿರುವ ಸುಮಾರು 100 ಸ್ಟಾರ್ಟಪ್‌ಗಳಿಗೆ ಸಹಾಯ ನೀಡುವುದಾಗಿ ಇಸ್ರೊ ಪ್ರಕಟಿಸಿದೆ.

VISTARANEWS.COM


on

ISRO SOMANATH
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ)ಯೊಂದಿಗೆ 100 ನವೋದ್ಯಮಗಳು ನೋಂದಾಯಿಸಿಕೊಂಡಿದ್ದು, ಬಾಹ್ಯಾಕಾಶ ಸಂಶೋಧನೆಯ ಹಲವು ವಲಯಗಳಲ್ಲಿ ನೆರವನ್ನು ಒದಗಿಸಲಾಗುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್‌ ಸೋಮನಾಥ್‌ ಹೇಳಿದ್ದಾರೆ. ಬೆಂಗಳೂರು ತಂತ್ರಜ್ಞಾನ ಸಮಾವೇಶದ (BTS 2022) ಎರಡನೇ ದಿನವಾದ ಗುರುವಾರ ಅವರು ‘ಭಾರತದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ: ಜಾಗತಿಕ ಒಳಿತಿಗಾಗಿ ನಾವೀನ್ಯತೆ’ ವಿಚಾರ ಕುರಿತು ಉಪನ್ಯಾಸ ನೀಡಿದರು.

ಭಾರತದ ಹಲವು ಕಂಪನಿಗಳಿಗೆ ಬಾಹ್ಯಾಕಾಶ ವಲಯದಲ್ಲಿ ಮಹತ್ತ್ವದ ಪಾತ್ರ ವಹಿಸುವ ಶಕ್ತಿ ಇದೆ. ಇಸ್ರೋ ಇವುಗಳಿಗೆ ಆರಂಭದಿಂದ ಹಿಡಿದು ಅಂತ್ಯದವರೆಗೂ ಪರಿಪೋಷಣೆ ಮಾಡಲಿದೆ. ಸದ್ಯಕ್ಕೆ 10 ಕಂಪನಿಗಳು ಉಪಗ್ರಹ ಮತ್ತು ರಾಕೆಟ್‌ ನಿರ್ಮಾಣದಲ್ಲಿ ತೊಡಗಿಕೊಂಡಿವೆ ಎಂದು ಅವರು ತಿಳಿಸಿದರು.

ಸಂಸ್ಥೆಯ ಮಹತ್ತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಇನ್ನು ಕೆಲವೇ ತಿಂಗಳಲ್ಲಿ ಕಕ್ಷೆಯನ್ನು ಸೇರಲಿದೆ. ಈ ನಿಟ್ಟಿನಲ್ಲಿ ಇಸ್ರೋ ಅಮೆರಿಕದ ನಾಸಾ ಸಂಸ್ಥೆಯೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ಈ ಯೋಜನೆಯ ರಾಕೆಟ್‌ನಲ್ಲಿ ಬಳಸಲ್ಪಟ್ಟ ಕಂಪ್ಯೂಟರನ್ನು ಭಾರತದಲ್ಲೇ ತಯಾರಿಸಲಾಗಿತ್ತು ಎಂದು ಅವರು ನುಡಿದರು.

ಜಗತ್ತಿನ ಎಲ್ಲೆಡೆಗಳಲ್ಲೂ ಈಗ ಬಾಹ್ಯಾಕಾಶ ಪ್ರವಾಸೋದ್ಯಮ ಜನಪ್ರಿಯವಾಗುತ್ತಿದೆ. ಇಸ್ರೋ ಸಂಸ್ಥೆಯು ದೇಶದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಮತ್ತು ಆಧುನಿಕ ತಯಾರಿಕೆ ವ್ಯವಸ್ಥೆಗಳಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿದೆ. ಮಿಕ್ಕಂತೆ ಉಪಗ್ರಹ ತಂತ್ರಜ್ಞಾನವನ್ನು ಮತ್ತೆ ಮುಂಚೂಣಿಗೆ ತರುವ ಪ್ರಯತ್ನಗಳು ನಡೆದಿವೆ. ಅಲ್ಲದೆ, ಪರಿಸರಸ್ನೇಹಿ ಮತ್ತು ಹೈಬ್ರಿಡ್‌ ಪ್ರೊಪಲ್ಶನ್‌, ಸಣ್ಣ ರಾಕೆಟ್‌ಗಳ ಉಡಾವಣೆ, ಕಾರ್ಬನ್‌ ಫೈಬರ್‍‌ ತಂತ್ರಜ್ಞಾನ, ರೋಬೋಟಿಕ್ಸ್‌, ಡ್ರೋನ್‌, ಕ್ವಾಂಟ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಇಸ್ರೋ ಛಾಪು ಮೂಡಿಸುತ್ತಿದೆ ಎಂದು ಸೋಮನಾಥ್‌ ವಿವರಿಸಿದರು.

ಇದನ್ನೂ ಓದಿ | BTS 2022 | ಕರ್ನಾಟಕದಲ್ಲಿ 6 ಹೊಸ ಹೈಟೆಕ್‌ ನಗರಗಳ ಸ್ಥಾಪನೆ; ಬೆಂಗಳೂರಿನ ಬಳಿಯೂ ಒಂದು: ಸಿಎಂ ಬೊಮ್ಮಾಯಿ ಘೋಷಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Prajwal Revanna Case: ನಿಮಗೆ ಬೇಕಿರುವುದು ಆ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಲ್ಲ. ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡು ಗೆಲ್ಲಬೇಕು ಹಾಗೂ ಪ್ರಧಾನಿ ನರೇಂದ್ರ‌ ಮೋದಿಯವರ ಹೆಸರು ಕೆಡಿಸಬೇಕು ಎಂಬುದಷ್ಟೇ ನಿಮಗೆ ಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅದರಲ್ಲಿ ಏನೂ ರಾಜೀ‌ ಇಲ್ಲ. ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ. ನಾವೇನೂ ಪಲಾಯನವಾದಿಗಳಲ್ಲ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪಾತ್ರವಾಗಲೀ, ನನ್ನ ಪಾತ್ರವಾಗಲೀ ಈ ಪ್ರಕರಣದಲ್ಲಿ ಇಲ್ಲ. ಆದರೂ ನಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Prajwal Revanna Case face not visible in videos says HD Kumaraswamy
Koo

ರಾಯಚೂರು: ಪ್ರಜ್ವಲ್ ರೇವಣ್ಣ (Prajwal Revanna Case) 400 ಮಹಿಳೆಯರನ್ನು ರೇಪ್ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ (Rahul Gandhi) ಹೇಳುತ್ತಾರೆ. ಅವರಿಗೆ ಈ ಮಾಹಿತಿ ಕೊಟ್ಟವರು ಯಾರು? ನೀವು (ಸರ್ಕಾರದವರು) ಕೊಟ್ಟಿದ್ದೀರಾ? ಈ ಕುರಿತು ಬೇಕಾಬಿಟ್ಟಿ ಹೇಳಿಕೆ ನೀಡಿರುವ ರಾಹುಲ್‌ಗೆ ನೋಟಿಸ್‌ ಕೊಡುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿ. ಈ ಸರ್ಕಾರಕ್ಕೆ‌ ಮಾನ, ಮರ್ಯಾದೆ ಇದ್ದಿದ್ದರೆ, ಹೆಣ್ಣು‌ಮಕ್ಕಳ‌ ಫೋಟೊಗಳನ್ನು ಇಡೀ ದೇಶಕ್ಕೆ ಕಳುಹಿಸುತ್ತಿರಲಿಲ್ಲ. ನಿಮಗೆ‌ ಹೆಣ್ಣು ಮಕ್ಕಳ ಮೇಲೆ ಗೌರವ ಇದೆಯಾ? ನಿಮಗೆ‌ ಗಂಡಸ್ತನ, ತಾಕತ್ತಿದ್ದರೆ ರಾಹುಲ್ ಗಾಂಧಿಗೆ ನೋಟಿಸ್‌ ಕೊಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸವಾಲು ಹಾಕಿದರು.

ಈ ಕುರಿತು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ನೀವು‌ ಬಿಟ್ಟಿರುವ ವಿಡಿಯೊಗಳಲ್ಲಿ ಪ್ರಜ್ವಲ್ ಮುಖವೇ ಇಲ್ಲ. ಹಾಗಂತ ನಾನೇನು ಆ ವಿಡಿಯೊಗಳನ್ನು ನೋಡಿಲ್ಲ. ಇಷ್ಟಾದರೂ ಸಹಿಸಿಕೊಂಡಿದ್ದೇವೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ನ ಮಹಾನಾಯಕ ತೋಟದಲ್ಲಿ‌ ಏನೇನಾಗಿದೆ? ನೀನೇನು 6 – 7 ಜನರನ್ನು ಹೋಟೆಲ್‌ನಲ್ಲಿ ತೆಗೆದುಕೊಂಡು ಹೋಗಿ ಇಟ್ಟೀದಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ

ನಿಮಗೆ ಬೇಕಿರುವುದು ಆ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಲ್ಲ. ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡು ಗೆಲ್ಲಬೇಕು ಹಾಗೂ ಪ್ರಧಾನಿ ನರೇಂದ್ರ‌ ಮೋದಿಯವರ ಹೆಸರು ಕೆಡಿಸಬೇಕು ಎಂಬುದಷ್ಟೇ ನಿಮಗೆ ಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅದರಲ್ಲಿ ಏನೂ ರಾಜೀ‌ ಇಲ್ಲ. ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ. ನಾವೇನೂ ಪಲಾಯನವಾದಿಗಳಲ್ಲ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪಾತ್ರವಾಗಲೀ, ನನ್ನ ಪಾತ್ರವಾಗಲೀ ಈ ಪ್ರಕರಣದಲ್ಲಿ ಇಲ್ಲ. ಆದರೂ ನಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಪೆನ್‌ಡ್ರೈವ್‌ ಲೀಕ್‌ ಬಗ್ಗೆ ಹೊರಜಗತ್ತಿಗೆ ಗೊತ್ತಾದ ದಿನವೇ ಹೇಳಿದ್ದೇನೆ. ಈ ನೆಲದ ಕಾನೂನಿಗೆ ತಲೆ ಬಾಗಬೇಕು. ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಹೇಳಿದ್ದೇನೆ. ಆದರೂ‌ ಕ್ಯಾಮರಾ ಹಿಡಿದು ನನ್ನ ಮುಂದೆಯೇ ಏಕೆ ಬರುತ್ತೀರಿ? ಎಂದು ಮಾಧ್ಯಮದವರಿಗೆ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಏನೋ‌ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ.
ಎಸ್.ಐ.ಟಿ. ಜತೆ ಚಿಂತನೆ ಮಾಡುತ್ತೇವೆ ಎಂದು ಹೇಳಿ ಏಪ್ರಿಲ್‌ 28ಕ್ಕೆ ಎಫ್.ಐ.ಆರ್ ಮಾಡಿಸಿದ್ದೀರಿ. ಈ ವಿಚಾರದಲ್ಲಿ ಪದೇ ಪದೆ ಪ್ರಧಾನಿ ಮೋದಿ ಹಾಗೂ ಬಿಜೆಪಿಯವರನ್ನು ಏಕೆ ಎಳೆಯುತ್ತೀರಿ? ಅದಕ್ಕೂ‌ ಪ್ರಧಾನಿಗೂ ಸಂಬಂಧ ಏನು? ಎಂದು ಎಚ್‌.ಡಿ. ಕುಮಾರಸ್ವಾಮಿ ಕೇಳಿದರು.

ಸುಮ್ಮನೆ ನನ್ನನ್ನು ಕೆಣಕಿದ್ದಾರೆ

ನೋಟಿಸ್ ಕೊಟ್ಟ ನಂತರ ಒಂದು ವಾರ ಸಮಯ ಕೇಳಲಾಗಿದೆ. ರೇವಣ್ಣ ಅವರು ಎರಡು ದಿನ ಸಮಯ‌ ಕೇಳಿದ್ದಾರೆ. 8, 10 ಹತ್ತು ಬಾರಿ ಸಮನ್ಸ್ ಕೊಟ್ಟು ಸಮನ್ಸ್‌ಗೇ ಗೌರವ ಕಳಿದಿದ್ದೀರಿ. ದೇವೇಗೌಡರನ್ನು, ಪ್ರಧಾನಿಯವರನ್ನು ಎಳೆದು ತಂದಿದ್ದೀರಿ. ನಿಮ್ಮ ಸರ್ಕಾರದಲ್ಲಿ ನೀವೇ ಈ ರೀತಿಯ ಹೇಳಿಕೆಗಳನ್ನು ಕೊಡುವುದರ ಮುಖಾಂತರ ತನಿಖೆಯ ಹಾದಿಯನ್ನು ತಪ್ಪಿಸುವುದಲ್ಲದೆ, ಪ್ರಚಾರಕ್ಕೋಸ್ಕರ ಈ ಪ್ರಕರಣವನ್ನು ಬಳಸಿಕೊಳ್ಳುತ್ತಿದ್ದೀರಿ. ಕೆಲವರು ಕುಮಾರಸ್ವಾಮಿಯೇ ಈ‌ ಪೆನ್‌ಡ್ರೈವ್‌ ಬಿಟ್ಟಿದ್ದಾಗಿ ಹೇಳುತ್ತಾರೆ. ಇಲ್ಲಿ‌ ನನ್ನ ಹೆಸರನ್ನು ತರಲಾಗಿದೆ. ಸುಮ್ಮನೆ ನನ್ನನ್ನು ಕೆಣಕಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಗುಡುಗಿದರು.

ಇದನ್ನೂ ಓದಿ: Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

ತಂದೆ – ತಾಯಿಗೆ ಆತ್ಮಸ್ಥೈರ್ಯ ತುಂಬಲು ಹೋಗಿದ್ದೆ

ರಾಜ್ಯದ‌ ಮುಖ್ಯಮಂತ್ರಿಗೆ ತಂದೆ – ತಾಯಿ‌ ಮೇಲೆ ಗೌರವ ಇದೆಯೇ? ಸಿದ್ದರಾಮಯ್ಯ ಅವರಿಗೆ ಮನುಷ್ಯತ್ವ ಇಲ್ಲದಿರಬಹುದು. ಆದರೆ, ನಮಗೆ ಇದೆ. ನಾನು ಬಂದಿರುವ ಸಂಸ್ಕೃತಿ ನಮಗೆ ಇದನ್ನು ಕಲಿಸಿದೆ. ನನ್ನ ತಂದೆ – ತಾಯಿ ನೋವಿನಲ್ಲಿದಾರೆ. ಅವರಿಗೆ ಆತ್ಮಸ್ಥೈರ್ಯ ತುಂಬುವುದಕ್ಕೆ ನಾನು ಅವರ ಜತೆ ಎರಡು ದಿನ ಇದ್ದೆ. ನಮ್ಮ ಮನೆಗೆ ಯಾವ ವಕೀಲರು ಬಂದಿದ್ದರು? ಇವತ್ತು ಆರೋಪಿ‌ ಸ್ಥಾನದಲ್ಲಿ‌ ನಿಲ್ಲಿಸಿದ್ದೀರಿ ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

Continue Reading

ಪ್ರಮುಖ ಸುದ್ದಿ

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

Covishield Vaccine: ಕೋವಿಶೀಲ್ಡ್ ಲಸಿಕೆ ಅಡ್ಡಪಾರಿಣಾಮಗಳ ಸಂಬಂಧ ಸೂಚನಾ ಪತ್ರ ಹೊರಡಿಸಿ ಎಡವಟ್ಟು ಮಾಡಿಕೊಂಡಿದ್ದ ಚಿಕ್ಕಬಳ್ಳಾಪುರದ ಹಲವು ಕಾಲೇಜು ಆಡಳಿತ ಮಂಡಳಿಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

VISTARANEWS.COM


on

Covishield Vaccine
Koo

ಚಿಕ್ಕಬಳ್ಳಾಪುರ: ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ದಿಢೀರ್‌ ಹೃದಯಾಘಾತ, ರಕ್ತ ಹೆಪ್ಪುಗಟ್ಟುವುದು ಸೇರಿ ಹಲವು ರೀತಿಯ ಅಡ್ಡಪರಿಣಾಮಗಳು ಉಂಟಾಗಲಿವೆ ಎಂಬ ಸುದ್ದಿಗಳು ವರದಿಯಾದ ಹಿನ್ನೆಲೆಯಲ್ಲಿ ಲಸಿಕೆ ಪಡೆದವರಲ್ಲಿ ಆತಂಕ ಮೂಡಿದೆ. ಈ ನಡುವೆ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯ ಸೇವನೆ ಮಾಡದಂತೆ ಹಲವು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರದ ಮೂಲಕ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದವು. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ, ತಪ್ಪು ಮಾಹಿತಿ ನೀಡಿದ ನಗರದ ವಿವಿಧ ಕಾಲೇಜುಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

ನಗರದ ಸಿದ್ದರಾಮಯ್ಯ ಲಾ ಕಾಲೇಜು ಹಾಗೂ ಜಚನಿ ಪ್ರಥಮ ದರ್ಜೆ ಕಾಲೇಜುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿದೆ. ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ದಿಢೀರ್ ಹೃದಯಾಘಾತ, ರಕ್ತ ಹೆಪ್ಪುಗಟ್ಟುವ ಸಾಧ್ಯತೆ ಇದೆ. ಹೀಗಾಗಿ ಆರೋಗ್ಯ ಇಲಾಖೆ ಸೂಚನೆ ಪ್ರಕಾರ ಈ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯಗಳು ಸೇವನೆ ಮಾಡಬಾರದು ಎಂದು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರ ಹೊರಡಿಸಿದ್ದವು.

ವಾಟ್ಸ್‌ಆ್ಯಪ್‌ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಕಾಲೇಜುಗಳ ಸೂಚನಾ ಪತ್ರಗಳು ವೈರಲ್‌ ಆಗಿದ್ದರಿಂದ ತಕ್ಷಣ ಎಚ್ಚೆತ್ತ ಜಿಲ್ಲಾಡಳಿತ, ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ನೇತೃತ್ವದ ಡಿಜಾಸ್ಟರ್ ಮ್ಯಾನೇಜ್ಮೆಂಟ್ ಕಮಿಟಿ ಮುಂದಾಗಿದೆ. ಸೂಚನಾ ಪತ್ರಗಳ ಬಗ್ಗೆ ಸೂಕ್ತ ಸ್ಪಷ್ಟನೆ ನೀಡುವಂತೆ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

ಆರೋಗ್ಯ ಇಲಾಖೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ

ಕೋವಿಶೀಲ್ಡ್‌ ಲಸಿಕೆ ಪಡೆದವರು ಫ್ರಿಡ್ಜ್‌ನಲ್ಲಿಟ್ಟ ನೀರು, ತಂಪು ಪಾನೀಯಗಳು ಹಾಗೂ ಐಸ್‌ಕ್ರೀಂ ಸೇವಿಸಬಾರದು ಎಂಬ ಕಾಲೇಜು ಆಡಳಿತ ಮಂಡಳಿಗಳ ಸೂಚನಾ ಪತ್ರ ವೈರಲ್‌ ಆಗಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿತ್ತು. ಹೀಗಾಗಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮಗಳ ಬಗ್ಗೆ ಇಲಾಖೆಯಿಂದ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ತಿಳಿಸಿದೆ.

ರಕ್ಷಿತ್‌ ಗಣಪತಿ ಎಂಬುವವರು, ಎಕ್ಸ್‌ ಖಾತೆಯಲ್ಲಿ ಚಿಕ್ಕಬಳ್ಳಾಪುರದ ಸಿದ್ದರಾಮಯ್ಯ ಲಾ ಕಾಲೇಜಿನ ಸೂಚನಾ ಪತ್ರ ಹಾಕಿ, “ಇದು ನಿಜವೇ? ಈ ಪತ್ರ ನೆನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ, ದಯವಿಟ್ಟು ಸ್ಪಷ್ಟನೆ ನೀಡಿ ಎಂದು ಕೋರಿ, ಸಿಎಂ ಸಿದ್ದರಾಮಯ್ಯ, ಆರೋಗ್ಯ ಇಲಾಖೆಗೆ ಟ್ಯಾಗ್‌ ಮಾಡಿದ್ದರು. ಇದಕ್ಕೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

Continue Reading

ಕ್ರೀಡೆ

RCB vs GT: ಬೆಂಗಳೂರಿನಲ್ಲಿ ನಾಳೆ ಐಪಿಎಲ್‌ ಹಬ್ಬ: ತಡರಾತ್ರಿಯೂ ಇದೆ ಮೆಟ್ರೋ ಸೇವೆ, ಪಾರ್ಕಿಂಗ್‌ ಎಲ್ಲೆಲ್ಲಿ?

RCB vs GT: ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(Royal Challengers Bangalore)ಮತ್ತು ಗುಜರಾತ್​ ಟೈಟಾನ್ಸ್​ (Gujarat Titans) ನಡುವಣ ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

VISTARANEWS.COM


on

RCB vs GT
Koo

ಬೆಂಗಳೂರು: ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(Royal Challengers Bangalore) ಮತ್ತು ಗುಜರಾತ್​ ಟೈಟಾನ್ಸ್​ (Gujarat Titans) ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ತವರಿನ ಅಭಿಮಾನಿಗಳು ಕಾತದಿಂದ ಕಾದು ಕುಳಿತಿದ್ದಾರೆ. ಕ್ರಿಕೆಟ್​ ಅಭಿಮಾನಿಗಳಿಗಾಗಿಯೇ ನಮ್ಮ ಮೆಟ್ರೋ(namma metro) ಕೂಡ ವಿಶೇಷ ರೈಲು ಸೇವೆಯನ್ನು ನೀಡಲಿದೆ.

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ಮತ್ತು ಬಿಎಂಟಿಸಿ ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಪೇಪರ್‌ ಟಿಕೆಟ್‌ ಮಾರಾಟ

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ (QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

ಮಳೆ ಸಾಧ್ಯತೆ


ಬೆಂಗಳೂರಿನಲ್ಲಿ ಮೇ 4ರ ಸಂಜೆವರೆಗೆ ಮಳೆ ಬರುವ ಮುನ್ಸೂಚನೆ ಇದೆಯಾದರೂ ಆಟವನ್ನೇ ನಿಲ್ಲಿಸುವಷ್ಟು ಜೋರಾಗಿ ಬರುವ ಸಾಧ್ಯತೆ ಇಲ್ಲ. ಸಣ್ಣಗೆ ತುಂತುರು ಮಳೆ ಬರಲೂಬಹುದು. ಹೀಗೆ ಸ್ವಲ್ಪ ಹೊತ್ತು ಮಳೆ ಬಂದರೂ ಬೇಗನೆ ಅದರ ಪರಿಣಾಮಗಳನ್ನು ನಿವಾರಿಸಿ ಆಟಕ್ಕೆ ಅಣಿ ಮಾಡುವ ತಂತ್ರಜ್ಞಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿದೆ.

ಇದನ್ನೂ ಓದಿ RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

ಪಾರ್ಕಿಂಗ್​ ವ್ಯವಸ್ಥೆ

ಚಿನ್ನಸ್ವಾಮಿ ಕ್ರೀಡಾಂಗಣದತ್ತ ವಾಹನಗಳ ದಂಡೇ ಬರುವುದರಿಂದ ಕೆಲವು ಕಡೆ ಪಾರ್ಕಿಂಗ್‌ ನಿಷೇಧಿಸಲಾಗಿದೆ. ಇನ್ನು ಕೆಲವು ಕಡೆ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಮೇ 4ರಂದು ಸಂಜೆ ನಾಲ್ಕರಿಂದ ರಾತ್ರಿ 11ರವರೆಗಿನ ಮಾರ್ಗಸೂಚಿ ಇಲ್ಲಿದೆ.

ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿರ್ಬಂಧ

ಕ್ವೀನ್ಸ್‌ ರೋಡ್‌, ಎಂಜಿ ರೋಡ್‌ನಿಂದ ಕಬ್ಬನ್‌ ಪಾರ್ಕ್‌ ರಸ್ತೆ, ರಾಜಭವನ್‌ ರೋಡ್‌-ಸೆಂಟ್ರಲ್‌ ಸ್ಟ್ರೀಟ್‌ ರೋಡ್‌, ಕಬ್ಬನ್‌ ರಸ್ತೆ, ಸೈಂಟ್‌ ಮಾರ್ಕ್‌ ರಸ್ತೆ, ಮ್ಯೂಸಿಯಂ ರೋಡ್‌, ಕಸ್ತೂರ್ಬಾ ರೋಡ್‌, ಅಂಬೇಡ್ಕರ್‌ ವೀದಿ, ಟ್ರಿನಿಟಿ, ಲಾವೆಲ್ಲೆ ರೋಡ್‌, ವಿಠಲ್‌ ಮಲ್ಯ ರೋಡ್‌, ನೃಪತುಂಗ ರಸ್ತೆ

ಪಾರ್ಕಿಂಗ್‌ಗೆ ಎಲ್ಲೆಲ್ಲಿ ವ್ಯವಸ್ಥೆ

ಕಿಂಗ್ಸ್‌ ರೋಡ್‌, ಯುಬಿ ಸಿಟಿ ಪಾರ್ಕಿಂಗ್‌, ಬಿಎಂಟಿಸಿ ಟಿಟಿಎಂಸಿ ಶಿವಾಜಿ ನಗರ್‌ ಫಸ್ಟ್‌ ಫ್ಲೋರ್‌, ಹಳೆ ಕೆಜಿಐಡಿ ಬಿಲ್ಡಿಂಗ್‌, ಮೆಟ್ರೋ ಲೇನ್‌ ಕೆಳಗಿನ ಬಿಆರ್‌ವಿ ಗ್ರೌಂಡ್‌

Continue Reading

ಬೆಂಗಳೂರು

Kidnap Case : ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್ ಮಗನನ್ನೇ ಕಿಡ್ನ್ಯಾಪ್ ಮಾಡಿದ ಗೆಳೆಯರು

Kidnap Case: ಆರ್ಮಿ ಆಫೀಸರ್‌ ಮಗನ ಬಳಿ ಸಿಕ್ಕಾಪಟ್ಟೆ ಹಣ ಇರುತ್ತೆ ಎಂದು ಭಾವಿಸಿದ ಕಿಡಿಗೇಡಿ ಗೆಳೆಯರು ಗಾಂಜಾ ಮತ್ತಲ್ಲಿ ವಿದ್ಯಾರ್ಥಿಯನ್ನು ಅಪಹರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.

VISTARANEWS.COM


on

By

Kidnap case in Bengaluru
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಹಣಕ್ಕಾಗಿ ಯುವಕನೊಬ್ಬ ತನ್ನ ಸಹಚರರೊಂದಿಗೆ ಸೇರಿ ಗೆಳೆಯನನ್ನೇ ಕಿಡ್ನ್ಯಾಪ್‌ ಮಾಡಿ (Kidnap Case) ಜೈಲುಪಾಲಾಗಿದ್ದಾನೆ. ಕೇರಳ ಮೂಲದ ಸಾಹೀಲ್ ಸಲೀಂ ಕಿಡ್ನ್ಯಾಪ್‌ ಆದವನು. ಪ್ರಮುಖ ಆರೋಪಿ ಮುಬಾರಕ್‌ ಎಂಬಾತ ತನ್ನ ಸ್ನೇಹಿತ ಸುಂದರ್‌ ಜತೆಗೆ ಮತ್ತೊಂದಿಷ್ಟು ಜನರೊಟ್ಟಿಗೆ ಪ್ಲ್ಯಾನ್‌ ಮಾಡಿ ಸಾಹೀಲ್‌ನನ್ನು ಕಿಡ್ನ್ಯಾಪ್‌ ಮಾಡಿದ್ದರು.

ಪದವಿ ವ್ಯಾಸಂಗ ಮಾಡುತ್ತಿದ್ದ ಸಾಹೀಲ್‌ ಬೆಂಗಳೂರಿನ ಸಂಪಿಗೆಹಳ್ಳಿಯ ಪಿಜಿವೊಂದರಲ್ಲಿ ವಾಸವಿದ್ದ. ಮುಬಾರಕ್ ಹಾಗೂ ಸಾಹೀಲ್ ಇಬ್ಬರು ಪಿಯುಸಿಯಲ್ಲಿ ಕ್ಲಾಸ್ ಮೇಟ್ಸ್ ಆಗಿದ್ದರು.

ಸಾಹೀಲ್ ಆರ್ಮಿ ಆಫೀಸರ್‌ ಮಗ.. ಆತನ ಬಳಿ ಸಿಕ್ಕಾಪಟ್ಟೆ ಹಣ ಇರುತ್ತೆ ಎಂದು ಕಿಡ್ನ್ಯಾಪ್‌ ಪ್ಲಾನ್ ಮಾಡಿದ್ದ. ಪಿಜಿಯಲ್ಲಿದ್ದ ಸಾಹೀಲ್‌ನನ್ನು ಕರೆಸಿ ಶೆಡ್‌ವೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು. ಈ ವೇಳೆ ಸಾಹೀಲ್‌ನಿಂದ 25 ಸಾವಿರ ರೂ. ಹಣ ಪಡೆದು ಬಿಟ್ಟು ಕಳಿಸಿದ್ದರು. ಇದರಿಂದ ಹೆದರಿದ ಸಾಹೀಲ್‌ ಕೇರಳ ಸೇರಿದ್ದ.

ಮಗ ಪಿಜಿ ತೊರೆದು ಮನೆ ಸೇರಿದ್ದು ಪೋಷಕರಿಗೆ ಅನುಮಾನ ಮೂಡಿಸಿತ್ತು. ಹೀಗಾಗಿ ವಿಚಾರಿಸಿದಾಗ ಸಾಹಿಲ್‌ ತನ್ನ ತಂದೆ ಬಳಿ ನಡೆದಿದ್ದನ್ನು ತಿಳಿಸಿದ್ದ. ಸದ್ಯ ಸಾಹೀಲ್ ತಂದೆ ನೀಡಿದ ದೂರಿನನ್ವಯ ಸಂಪಿಗೆಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಿಗಾಗಿ ಬಲೆಬೀಸಿದ್ದಾರೆ.

ಇದನ್ನೂ ಓದಿ: Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ

ಯಾದಗಿರಿ: ಹಾಡಹಗಲೆ ದುಷ್ಕರ್ಮಿಯೊಬ್ಬ ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು (kidnap case) ಯತ್ನಿಸಿದ್ದಾರೆ. ಯಾದಗಿರಿಯ ಅಜೀಜ್ ಕಾಲೋನಿಯಲ್ಲಿ ಘಟನೆ (Crime News) ನಡೆದಿದೆ. 6 ವರ್ಷದ ಸಂಜನಾ ಎಂಬಾಕೆ ಎಂದಿನಂತೆ ಸ್ನೇಹಿತೆ ಮನೆಯಿಂದ ಟ್ಯೂಶನ್‌ಗೆ ತೆರಳುತ್ತಿದ್ದಳು.

ಈ ವೇಳೆ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಯೊರ್ವ ಬಾಲಕಿಯ ಕಣ್ಣಿಗೆ ಸ್ಪ್ರೇ ಮಾಡಿದ್ದಾನೆ. ಬಳಿಕ ಅಪಹರಿಸಲು ಯತ್ನಿಸಿದಾಗ ಬಾಲಕಿ ಆತನಿಂದ ತಪ್ಪಿಸಿಕೊಂಡು ಮನೆಗೆ ಓಡಿ ಬಂದಿದ್ದಾಳೆ. ಸದ್ಯ ಪೋಷಕರ ದೂರಿನ ಮೇರೆಗೆ ಘಟನಾ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rohit Sharma
ಪ್ರಮುಖ ಸುದ್ದಿ34 seconds ago

Rohit Sharma : ರೋಹಿತ್ ಶರ್ಮಾ ದೌರ್ಬಲ್ಯವನ್ನು ಬೊಟ್ಟು ಮಾಡಿ ತೋರಿಸಿದ ವಾಸಿಮ್​ ಜಾಫರ್​

Prajwal Revanna Case face not visible in videos says HD Kumaraswamy
ಕ್ರೈಂ6 mins ago

Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Covishield Vaccine
ಪ್ರಮುಖ ಸುದ್ದಿ17 mins ago

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

T20 World Cup
ಪ್ರಮುಖ ಸುದ್ದಿ22 mins ago

T20 World Cup : ವಿಶ್ವ ಕಪ್​​ ಟೂರ್ನಿಗೆ ಭಾರತದ ಇಬ್ಬರು ಅಂಪೈರ್​ಗಳು ಆಯ್ಕೆ; ಯಾರೆಲ್ಲ ಅವರು?

Namesakes
ದೇಶ26 mins ago

Namesake: ರಾಹುಲ್‌ಗಳು, ಲಾಲುಗಳು; ಒಂದೇ ಹೆಸರಿನವರ ಸ್ಪರ್ಧೆ ಕುರಿತು ಕೋರ್ಟ್‌ ಮಹತ್ವದ ಹೇಳಿಕೆ

Saanya Iyer
ಫ್ಯಾಷನ್46 mins ago

Saanya Iyer: ಗ್ರ್ಯಾಂಡ್‌ ಲೆಹೆಂಗಾದಲ್ಲಿ ರಾಣಿಯಂತೆ ಕಂಗೊಳಿಸಿದ ನಟಿ ಸಾನ್ಯಾ ಅಯ್ಯರ್‌

Bharti Singh admitted to hospital
ಬಾಲಿವುಡ್51 mins ago

Bharti Singh: ಬಾಲಿವುಡ್‌ ಖ್ಯಾತ ನಿರೂಪಕಿ ಆಸ್ಪತ್ರೆಗೆ ದಾಖಲು

RCB vs GT
ಕ್ರೀಡೆ1 hour ago

RCB vs GT: ಬೆಂಗಳೂರಿನಲ್ಲಿ ನಾಳೆ ಐಪಿಎಲ್‌ ಹಬ್ಬ: ತಡರಾತ್ರಿಯೂ ಇದೆ ಮೆಟ್ರೋ ಸೇವೆ, ಪಾರ್ಕಿಂಗ್‌ ಎಲ್ಲೆಲ್ಲಿ?

Kidnap case in Bengaluru
ಬೆಂಗಳೂರು1 hour ago

Kidnap Case : ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್ ಮಗನನ್ನೇ ಕಿಡ್ನ್ಯಾಪ್ ಮಾಡಿದ ಗೆಳೆಯರು

Costly wedding gift
ವಾಣಿಜ್ಯ1 hour ago

Costly wedding gift: ಮಗನಿಗೆ ಬಂಗಲೆ, ಸೊಸೆಗೆ ನೆಕ್ಲೇಸ್ ಗಿಫ್ಟ್‌ ಕೊಟ್ಟ ಅಂಬಾನಿ; ಬೆಲೆ ಕೇಳಿದರೆ ಅಚ್ಚರಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ2 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ13 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ23 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌