Nepal Plane Crash: ನೇಪಾಳ ವಿಮಾನ ಪತನಗೊಂಡ ಸ್ಥಳ ಪತ್ತೆ; 22 ಪ್ರಯಾಣಿಕರ ಸುಳಿವಿಲ್ಲ

ಪ್ರಮುಖ ಸುದ್ದಿ

Nepal Plane Crash: ನೇಪಾಳ ವಿಮಾನ ಪತನಗೊಂಡ ಸ್ಥಳ ಪತ್ತೆ; 22 ಪ್ರಯಾಣಿಕರ ಸುಳಿವಿಲ್ಲ

ನೇಪಾಳದ ಪೊಖರದಿಂದ ಹೊರಟಿದ್ದ ವಿಮಾನ ಕೆಲವೇ ಹೊತ್ತಲ್ಲಿ ಕಂಟ್ರೋಲ್‌ ರೂಂನ ನಿಯಂತ್ರಣ ಕಳೆದುಕೊಂಡಿತ್ತು. ಪತನಗೊಂಡ ವಿಮಾನ (Nepal Plane Crash)ದಲ್ಲಿ ನಾಲ್ವರು ಭಾರತೀಯರೂ ಇದ್ದಾರೆ.

VISTARANEWS.COM


on

Nepal Plane Crash
ವಿಮಾನದ ಅವಶೇಷಗಳು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾಠ್ಮಂಡು: ನಾಲ್ವರು ಭಾರತೀಯರು ಸೇರಿ 22 ಜನ ಪ್ರಯಾಣಿಕರಿದ್ದ ನೇಪಾಳದ ದೇಶೀಯ ವಿಮಾನವೊಂದು ಮೇ 29 ರಂದು ಪತನ (Nepal Plane Crash)ವಾಗಿದೆ. ತಾರಾ ಏರ್‌ ಸಂಸ್ಥೆಗೆ ಸೇರಿದ 9 NAET ಎಂಬ ಎರಡು ಎಂಜಿನ್‌ಗಳ ಏರ್‌ಕ್ರಾಫ್ಟ್‌ ಬೆಳಗ್ಗೆ 9.55ಕ್ಕೆ ಪೋಖರದಿಂದ ಹೊರಟಿತ್ತು. ಸ್ವಲ್ಪ ಹೊತ್ತಿನಲ್ಲೇ ಗುಡ್ಡಗಾಡು ಪ್ರದೇಶಗಳ ಮಧ್ಯೆ ನಾಪತ್ತೆಯಾಗಿತ್ತು. ಅದಾದ ಎರಡೇ ತಾಸುಗಳಲ್ಲಿ ಮುಸ್ತಾಂಗ್‌ನ ಕೊವಾಂಗ್‌ ಎಂಬ ಹಳ್ಳಿಯಲ್ಲಿ ವಿಮಾನ ಪತ್ತೆಯಾಗಿತ್ತು. ಆದರೆ ಈ ವಿಮಾನ ಎಲ್ಲಿ ಅಪಘಾತವಾಯಿತು ಎಂಬುದು ಗೊತ್ತಾಗಿರಲಿಲ್ಲ. ಆದರೆ ಈಗ ವಿಮಾನ ಅಪಘಾತದ ಸ್ಥಳ ಮತ್ತು ಅದರ ಅವಶೇಷಗಳನ್ನು ಪತ್ತೆ ಮಾಡಿದ್ದೇವೆ ಎಂದು ನೇಪಾಳ ಸೇನೆ ಟ್ವೀಟ್‌ ಮೂಲಕ ತಿಳಿಸಿದೆ.

ಈ ವಿಮಾನದಲ್ಲಿ ನಾಲ್ವರು ಭಾರತೀಯರು, ಇಬ್ಬರು ಜರ್ಮನ್ನರು ಮತ್ತು 13 ನೇಪಾಳಿಗಳು ಇದ್ದರು. ಹಾಗೇ, ವಿಮಾನದ ಸಿಬ್ಬಂದಿ ಮೂವರೂ ನೇಪಾಳದವರೇ ಆಗಿದ್ದರು. ಇದು ಸುಮಾರು 43 ವರ್ಷಗಳ ಹಳೇ ವಿಮಾನವಾಗಿತ್ತು. ಭಾನುವಾರ ನೇಪಾಳದ ಪ್ರಸಿದ್ಧ ಪ್ರವಾಸಿ ತಾಣವಾದ ಜೋಮ್ಸಮ್‌ಗೆ ಹೊರಟಿತ್ತು. ಟೇಕ್‌ಆಫ್‌ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ನಿಯಂತ್ರಣ ಕೇಂದ್ರದ ಸಂಪರ್ಕ ಕಳೆದುಕೊಂಡಿದ್ದ ವಿಮಾನ ಮುಸ್ತಾಂಗ್‌ನ ಥಾಸಾಂಗ್‌-2 ಬಳಿಯ ಸನೋಸ್ವೇರ್‌ ಎಂಬಲ್ಲಿ ಪತನಗೊಂಡಿದ್ದು ಗೊತ್ತಾಗಿದೆ ಎಂದು ನೇಪಾಳ ಆರ್ಮಿ ವಕ್ತಾರ ಬ್ರಿಗೇಡಿಯರ್‌ ಜನರಲ್‌ ನಾರಾಯಣ್‌ ಸಿಲ್ವಾಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಏರ್‌ಪೋರ್ಟ್‌ನಲ್ಲೇ ಹೆಲಿಕಾಪ್ಟರ್‌ ಪತನ; ಇಬ್ಬರು ಪೈಲಟ್‌ಗಳ ದುರ್ಮರಣ

ಭಾನುವಾರ ವಿಮಾನ ನಾಪತ್ತೆಯಾದಾಗಿನಿಂದಲೂ ಅದರ ಪತ್ತೆ ಕಾರ್ಯ ನಡೆಯುತ್ತಿತ್ತು. ಕೊವಾಂಗ್‌ ಹಳ್ಳಿ ಬಳಿ ಕಾಣಿಸಿದ್ದರೂ ಅದು ಯಾವ ಸ್ಥಿತಿಯಲ್ಲಿದೆ ಎಂಬ ಮಾಹಿತಿಯನ್ನು ಬಹಿರಂಗಪಡಿಸಿರಲಿಲ್ಲ. ಇದೀಗ ವಿಮಾನದ ಅವಶೇಷ ಪತ್ತೆಯಾಗಿರುವುದಾಗಿ ಹೇಳಿದ್ದು, ಯಾವುದೇ ಪ್ರಯಾಣಿಕರೂ ಕಾಣಿಸುತ್ತಿಲ್ಲ. ಇವರ್ಯಾರೂ ಬದುಕಿರುವ ಸಾಧ್ಯತೆಯಿಲ್ಲ ಎಂದೇ ಹೇಳಲಾಗಿದೆ. ವಿಮಾನದಲ್ಲಿದ್ದ ನಾಲ್ವರು ಭಾರತೀಯರು ಮಹಾರಾಷ್ಟ್ರದ ಥಾಣೆಯವರಾಗಿದ್ದು, ಅಶೋಕ್‌ ಕುಮಾರ್‌ ತ್ರಿಪಾಠಿ, ಅವರ ಮಾಜಿ ಪತ್ನಿ ವೈಭವಿ ತ್ರಿಪಾಠಿ, ಮಗ ಧನುಷ್‌ ತ್ರಿಪಾಠಿ ಮತ್ತು ಮಗಳು ರಿತಿಕಾ ತ್ರಿಪಾಠಿ ಎಂದು ಗುರುತಿಸಲಾಗಿದೆ. ಅಶೋಕ್‌ ತ್ರಿಪಾಠಿ ಮತ್ತು ವೈಭವಿ ತ್ರಿಪಾಠಿ ವಿಚ್ಛೇದಿತರಾಗಿದ್ದರೂ, ವರ್ಷಕ್ಕೆ ಒಮ್ಮೆ ಮಕ್ಕಳಿಗಾಗಿ ಒಟ್ಟಾಗಿ ರಜಾದಿನಗಳನ್ನು ಕಳೆಯುತ್ತಿದ್ದರು. ಈ ಕುಟುಂಬದವರೊಂದಿಗೆ ನೇಪಾಳ ಸರ್ಕಾರ ಸಂಪರ್ಕದಲ್ಲಿದೆ. ಸದ್ಯ ವೈಭವಿ ತ್ರಿಪಾಠಿ ತಾಯಿಗೆ ವಿಷಯ ತಿಳಿಸಿಲ್ಲ.

ರಕ್ಷಣಾ ಕಾರ್ಯಾಚರಣೆಗೆ ತೊಡಕು
ವಿಮಾನ ಪತನಕ್ಕೆ ಹವಾಮಾನ ಪ್ರತಿಕೂಲವೇ ಕಾರಣ ಎನ್ನಲಾಗಿದೆ. ಈ ಖಾಸಗಿ ವಿಮಾನ ಕಾಣೆಯಾಗುತ್ತಿದ್ದಂತೆ ಅದನ್ನು ಪತ್ತೆ ಮಾಡಿ, ಪ್ರಯಾಣಿಕರನ್ನು ರಕ್ಷಿಸಲು ಮುಸ್ತಾಂಗ್‌ ಮತ್ತು ಪೊಖರದ ಎರಡು ಖಾಸಗಿ ಹೆಲಿಕಾಪ್ಟರ್‌ಗಳನ್ನು ನೇಪಾಳ ಗೃಹ ಇಲಾಖೆ ನಿಯೋಜಿಸಿತ್ತು. ಆದರೆ ಹಿಮಾಚ್ಛಾದಿತವಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿತ್ತು. ಇನ್ನು ನೇಪಾಳದಲ್ಲಿ ಮೌಂಟ್‌ ಎವರೆಸ್ಟ್‌ ಸೇರಿ 14 ಅತ್ಯಂತ ಎತ್ತರದ ಶಿಖರಗಳಿವೆ. ಅದರ ಹೊರತಾಗಿಯೂ ಚಿಕ್ಕ ಗುಡ್ಡಗಳಿವೆ. ಇದೊಂದು ಪರ್ವತ ಪ್ರದೇಶವಾಗಿದ್ದು, ವಿಮಾನ ಅಪಘಾತಗಳ ಸಂಖ್ಯೆಯೂ ಹೆಚ್ಚಾಗಿದೆ.

2016ರಲ್ಲಿ ಇದೇ ತಾರಾ ಏರ್‌ಲೈನ್‌ಗೆ ಸೇರಿದ ವಿಮಾನವೊಂದು ಇದೇ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದಾಗ ಪತನಗೊಂಡು 23 ಮಂದಿ ಮೃತಪಟ್ಟಿದ್ದರು. 2018ರಲ್ಲಿ ಯುಎಸ್‌-ಬಾಂಗ್ಲಾ ವಿಮಾನವೊಂದು ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿ 51 ಪ್ರಯಾಣಿಕರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ಫ್ರಾನ್ಸ್‌ನಲ್ಲಿ ಏರ್‌ ಶೋ ವೇಳೆ ಎರಡು ರಫೇಲ್‌ ವಿಮಾನಗಳ ಡಿಕ್ಕಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

HSRP Number Plate : ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

VISTARANEWS.COM


on

HSRP Number plate
Koo

ಬೆಂಗಳೂರು: 2019ಕ್ಕಿಂತ ಹಿಂದೆ ಮಾರುಕಟ್ಟೆಗೆ ಇಳಿದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಸಂಖ್ಯೆ ಫಲಕ (HSRP Number Plate) ಕಡ್ಡಾಯವಾಗಿ ಅಳವಡಿಸಬೇಕೆಂಬ ಗಡುವು ಜುಲೈ 4ರವರೆಗೆ ವಿಸ್ತರಣೆಯಾಗಿದೆ. ಹೀಗಾಗಿ ನಾನಾ ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ನಂಬರ್​ಪ್ಲೇಟ್​ ಅಳವಡಿಸದ ವಾಹನಗಳ ಮಾಲೀಕರಿಗೆ ನೆಮ್ಮದಿ ಸಿಕ್ಕಿದೆ. ಹೊಸ ನಂಬರ್​ ಪ್ಲೇಟ್ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಹೈಕೋರ್ಟ್‌ ಮೇ 21ರಂದು ಹೊರಡಿಸಿದ್ದ ಆದೇಶ ಜುಲೈ 4ರವರೆಗೆ ವಿಸ್ತರಣೆಯಾಗಿರುವುದರಿಂದ ವಾಹನ ಮಾಲೀಕರಿಗೆ ತೊಂದರೆ ತಪ್ಪಿದೆ.

ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

ಪ್ರಕರಣದಲ್ಲಿ ಸರಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ್‌ ಹುಯಿಲಗೋಳ, ಅವರೂ ಸರ್ಕಾರದ ನಿಲುವನ್ನು ಇದೇ ವೇಳೆ ವ್ಯಕ್ತಪಡಿಸಿದ್ದಾರೆ. “ಎಚ್‌ಎಸ್‌ಆರ್‌ಪಿ ಫಲಕಗಳ ಅಳವಡಿಕೆ ಅವಧಿಯನ್ನು ರಾಜ್ಯ ಸರಕಾರ 2024ರ ಆಗಸ್ಟ್‌ ಇಲ್ಲವೇ ಸೆಪ್ಟೆಂಬರ್‌ವರೆಗೂ ವಿಸ್ತರಿಸುವ ಚಿಂತನೆ ನಡೆಸಿದೆ. ಹೈಕೋರ್ಟ್‌ ಅನುಮತಿ ನೀಡಿದಲ್ಲಿ ಸರಕಾರ ಈ ಸಂಬಂಧ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಿದೆ,” ಎಂದು ಮನವರಿಕೆ ಮಾಡಿದರು. ಈ ವೇಳೆ ನ್ಯಾಯಪೀಠ, ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವ ಅವಧಿಯನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲು ಸರಕಾರ ಸ್ವತಂತ್ರ,” ಎಂದು ಹೇಳಿತು.

ರಾಜ್ಯದಲ್ಲಿ 2019ರ ಏಪ್ರಿಲ್‌ 1ಕ್ಕಿಂತ ಮುನ್ನ ನೋಂದಣಿಯಾದ ಎಲ್ಲ ಮಾದರಿಯ ವಾಹನಗಳಿಗೆ ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ 2023ರ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ, ವಿತರಣೆ, ಅಳವಡಿಕೆ ಸೇರಿದಂತೆ ನಾನಾ ಸಮಸ್ಯೆಗಳಿಂದ ಈ ಯೋಜನೆಗೆ ಸಮಸ್ಯೆಯಾಗುತ್ತಿದೆ. ಸುರಕ್ಷಿತ ನಂಬರ್​ ಪ್ಲೇಟ್ ಅಳವಡಿಸಲು ಸುಮಾರು ಅರ್ಧದಷ್ಟು ವಾಹನ ಮಾಲೀಕರಿಗೆ ಇನ್ನೂ ಆಗಿಲ್ಲ. ಹೀಗಾಗಿ ಗಡುವು ವಿಸ್ತರಣೆ ಆಗುತ್ತಲೇ ಇದೆ. ಇದೀಗ ಕೋರ್ಟ್​ ಆದೇಶದ ಮೂಲಕ ಮತ್ತಷ್ಟು ವಿಸ್ತರಣೆಯಾಗಿದೆ. ಸರ್ಕಾರವೂ ಇದನ್ನು ಇನ್ನಷ್ಟು ಮುಂದುವರಿಸುವ ಯೋಜನೆ ಹೊಂದಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ಕೆಲವು ಸಂಸ್ಥೆಗಳನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಆಕ್ಷೇಪಿಸಿ ಹೈ ಸೆಕ್ಯುರಿಟಿ ರೆಜಿಸ್ಪ್ರೇಷನ್‌ ಪ್ಲೇಟ್‌ ಮ್ಯಾನುಫ್ಯಾಕ್ಚರರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಸೇರಿ ಅವಕಾಶ ವಂಚಿತ ಕೆಲ ಸಂಸ್ಥೆಗಳು ನ್ಯಾಯಾಲಯದ ಮೊರೆ ಹೋಗಿವೆ. ಆ ಅರ್ಜಿ ಜತೆಗೆ ಮಧ್ಯಂತರ ಅರ್ಜಿ ಹೂಡಿರುವ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಎಚ್‌ಎಸ್‌ಆರ್‌ಪಿ ಅಳವಡಿಕೆ ವಿಧಿಸಿರುವ ಗಡುವು ವಿಸ್ತರಿಸಲು ಕೋರಿದೆ.

Continue Reading

ಕರ್ನಾಟಕ

Karnataka Weather: ಇಂದು ಕರಾವಳಿ ಭಾಗ, ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

Karnataka Weather: ಕರ್ನಾಟಕ ಕರಾವಳಿಯ ಉದ್ದಕ್ಕೂ ಭಾರಿ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

Rain News
ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಭಾರೀ ಮಳೆ ಸುರಿದಿದ್ದು, ಕಿನ್ನಾಳ ರಸ್ತೆಯಲ್ಲಿ ದೊಡ್ಡ ಪ್ರಮಾಣದಲ್ಲಿ ರಾಜಕಾಲುವೆ ನೀರು ರಸ್ತೆ ಮೇಲೆ ಹರಿದಿದ್ದರಿಂದ ವಾಹನ ಸವಾರರು ಪರದಾಡಿದರು.
Koo

ಬೆಂಗಳೂರು: ಕರ್ನಾಟಕದ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಅಥವಾ ಗುಡುಗು ಸಹತ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಜೂನ್‌ 14ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳ ಮೇಲೆ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಪರಿಸ್ಥಿತಿ ಜೂನ್‌ 16ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ

ಚಂಡಮಾರುತದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ: ಮೂಲ್ಕಿಯಿಂದ ಮಂಗಳೂರಿನವರೆಗೆ ದಕ್ಷಿಣ ಕನ್ನಡ, ಕರ್ನಾಟಕ ಕರಾವಳಿಗೆ ಹೈ ವೇವ್ ಅಲರ್ಟ್‌ ಇದೆ. . ಜೂನ್ 12‌ರಿಂದ 13ರ ಬೆಳಗ್ಗೆ 11:30 ಗಂಟೆಗಳವರೆಗೆ 1.9 – 2.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.

ಉಡುಪಿ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ ಹೈ ವೇವ್ ಅಲರ್ಟ್‌ ಇದೆ. ಜೂನ್‌ 12ರಿಂದ 13ರ ಬೆಳಗ್ಗೆ 11:30ರವರೆಗೆ 1.9- 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.

ಉತ್ತರ ಕನ್ನಡ: ಉತ್ತರ ಕನ್ನಡ, ಕರ್ನಾಟಕ ಕರಾವಳಿಯ ಮಾಜಾಳಿಯಿಂದ ಭಟ್ಕಳದವರೆಗೆ ಹೈ ವೇವ್ ಅಲರ್ಟ್‌ ನೀಡಲಾಗಿದೆ. ಜೂನ್‌ 12ರಿಂದ 13ರ ರಾತ್ರಿ 11.30ರವರೆ 2.0 – 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ತಕ್ಷಣ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂದು ಸಲಹೆ ನೀಡಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶ. ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29ನೇC ಮತ್ತು 21c ಆಗಿರಬಹುದು.

Continue Reading

ಪ್ರಮುಖ ಸುದ್ದಿ

ಒಂದೇ ವರ್ಷದೊಳಗೆ 3ನೇ ಬಾರಿ ಮದ್ಯದ ದರ ಏರಿಕೆ? ಉಚಿತ ಯೋಜನೆಗೆ ಹಣ ಹೊಂದಿಸುವ ಕಸರತ್ತು

ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರವು ಮತ್ತೊಂದು ಶಾಕ್‌ ನೀಡಲು ಸಜ್ಜಾದಂತಿದೆ. ಒಂದು ವರ್ಷದಲ್ಲಿಯೇ ಎರಡು ಬಾರಿ ಮದ್ಯದ ಬೆಲೆಯೇರಿಕೆ ಮಾಡಿದ್ದ ರಾಜ್ಯ ಸರ್ಕಾರವು ಶೀಘ್ರದಲ್ಲೇ ಮೂರನೇ ಬಾರಿ ಬೆಲೆಯೇರಿಕೆ ಮಾಡಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಅಬಕಾರಿ ಇಲಾಖೆಯು ವರ್ಷದಲ್ಲಿ ಒಮ್ಮೆ ಬೆಲೆ ಪರಿಷ್ಕರಣೆ ಮಾಡುತ್ತದೆ. ಆದರೆ, ಸಂಪನ್ಮೂಲ ಕ್ರೋಡೀಕರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಬೆಲೆಯೇರಿಕೆ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Alcohal
Koo

ಬೆಂಗಳೂರು: ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು (Guarantee Schemes) ಜಾರಿಗೆ ತಂದು, ಹಲವು ಉಚಿತ ಕೊಡುಗೆಗಳನ್ನು ನೀಡುತ್ತಿರುವ ರಾಜ್ಯ ಸರ್ಕಾರವು (Karnataka Government), ವರ್ಷಕ್ಕೆ ಇವುಗಳಿಗೆಂದೇ ಸುಮಾರು 59 ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿಯೇ ಸಂಪನ್ಮೂಲ ಕ್ರೋಡೀಕರಿಸಲು ರಾಜ್ಯ ಸರ್ಕಾರವು ಹಲವು ರೀತಿಯ ಬೆಲೆಯೇರಿಕೆಯ ಅಸ್ತ್ರ ಬಳಸುತ್ತಿದೆ. ಅದರಲ್ಲೂ, ಕಳೆದ ಒಂದು ವರ್ಷದಲ್ಲಿಯೇ ಎರಡು ಬಾರಿ ಮದ್ಯದ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರವು ಈಗ ವರ್ಷದೊಳಗೇ ಮೂರನೇ ಬಾರಿ ಬೆಲೆಯೇರಿಕೆ (Liquor Price Hike ) ಮಾಡುವ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಇದು ಮದ್ಯಪ್ರಿಯರಿಗೆ ಶಾಕಿಂಗ್‌ ಎನಿಸಿದೆ.

ಹೌದು, ಅಬಕಾರಿ ಇಲಾಖೆಯು ಮದ್ಯದ ಬೆಲೆಯೇರಿಕೆ ಮಾಡುವ ಕುರಿತು ಚಿಂತನೆ ನಡೆಸಿದ್ದು, ಈ ಬಗ್ಗೆ ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ಹಾಗೊಂದು ವೇಳೆ ರಾಜ್ಯ ಸರ್ಕಾರವು ಬೆಲೆಯೇರಿಕೆ ಮಾಡಿದರೆ ಓಲ್ಡ್‌ ಮಾಂಕ್‌, ಎಂಸಿ ರಮ್‌, ಬಿಪಿ, ಒಟಿ ಹಾಗೂ 8 ಪಿಎಂ ಬ್ರ್ಯಾಂಡ್‌ನ ಮದ್ಯದ ಬಾಟಲಿಗಳ ಬೆಲೆಯೇರಿಕೆ ಆಗಲಿದೆ. ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದೆ. ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರವು ಸಂಪನ್ಮೂಲ ಕ್ರೋಡೀಕರಣ ಮಾಡಲು ಮದ್ಯದ ಬೆಲೆಯೇರಿಕೆ ಪ್ರಮುಖ ಅಸ್ತ್ರವಾಗಲಿದೆ. ಹಾಗಾಗಿ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಬೆಲೆಯೇರಿಕೆ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

Constables

2023ರ ಜೂನ್‌ ತಿಂಗಳಲ್ಲಿ ಮದ್ಯದ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಮದ್ಯದ ದರದಲ್ಲಿ ಪ್ರತಿ ಬಾಟಲ್‌ಗೆ 10 ರೂ.ನಿಂದ 20 ರೂ.ವರೆಗೆ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿತ್ತು, ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್ ಗಳ ಬೆಲೆಯಲ್ಲಿ ಹೆಚ್ಚಳವಾಗಿತ್ತು. ಬಡ್ ವೈಸರ್ ಬಿಯರ್ ದರ 198 ರೂ.ನಿಂದ 220 ರೂ.ಗೆ ಏರಿಕೆ ಮಾಡಲಾಗಿತ್ತು. ಕಿಂಗ್‌ಫಿಶರ್ ಬಿಯರ್ ದರವನ್ನು 160 ರೂ.ನಿಂದ 170 ರೂ.ಗೆ ಏರಿಕೆ ಮಾಡಲಾಗಿತ್ತು. ಯುಬಿ ಪ್ರೀಮಿಯಂ ದರವನ್ನು 125 ರೂ.ನಿಂದ 130-135 ರೂ.ಗೆ ಏರಿಕೆಸಲಾಗಿತ್ತು.

ಇದಾದ ಕೆಲವೇ ತಿಂಗಳಲ್ಲಿ ಮತ್ತೆ ಮದ್ಯದ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಬಿಯರ್‌ ಮೇಲಿನ ದರವನ್ನು ಹೆಚ್ಚಳ ಮಾಡಲು ಅಬಕಾರಿ ಇಲಾಖೆ 2024ರ ಜನವರಿಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿತ್ತು. ಅದರಂತೆ, ಒಂದು ಬಿಯರ್‌ ಮೇಲೆ 8ರಿಂದ 10 ರೂಪಾಯಿ ಹೆಚ್ಚಳ ಮಾಡಲು ಸರ್ಕಾರಕ್ಕೆ ಮನವಿ ಮಾಡಿತ್ತು. ಅದರಂತೆ, ಫೆಬ್ರವರಿಯಲ್ಲಿ ಬಜೆಟ್‌ ಮಂಡಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯದ ಬೆಲೆಯೇರಿಕೆ ಕುರಿತು ಘೋಷಣೆ ಮಾಡಿದ್ದರು. ಈಗ ಮೂರನೇ ಬಾರಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 500 ಕೋಟಿ ರೂ. ಸೇರಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Continue Reading

ಪ್ರಮುಖ ಸುದ್ದಿ

Dina Bhavishya: ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಸಿಂಹ ರಾಶಿಯಿಂದ ಬುಧವಾರ 01:38ಕ್ಕೆ ಕನ್ಯಾರಾಶಿಗೆ ಪ್ರವೇಶಿಸಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕನ್ಯಾ ರಾಶಿಯವರಿಗೆ ಹಣಕಾಸು, ವ್ಯಾಪಾರ- ವ್ಯವಹಾರಗಳಲ್ಲಿ ಲಾಭ. ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಗಲಿದೆ. ಮೀನ ರಾಶಿಯವರು ಆಪ್ತರೊಂದಿಗೆ ಅನಿವಾರ್ಯ ಕಾರಣದಿಂದ ಮುನಿಸಿಕೊಳ್ಳುವ ಸಾಧ್ಯತೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (13-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ 21:32 ವಾರ: ಗುರುವಾರ
ನಕ್ಷತ್ರ: ಪೂರ್ವ ಪಾಲ್ಗುಣಿ 29:07 ಯೋಗ: ವಜ್ರ 18:03
ಕರಣ: ಗರಜ 08:21 ಅಮೃತ ಕಾಲ: ರಾತ್ರಿ 9:57 ರಿಂದ 11:45 ವರೆಗೆ
ದಿನದ ವಿಶೇಷ: ಬೆಂಗಳೂರು ಕೋಟೆ ರಥ

ಸೂರ್ಯೋದಯ : 05:42   ಸೂರ್ಯಾಸ್ತ : 07:07

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಬಿಕ್ಕಟ್ಟುಗಳು ಮತ್ತು ಭಿನ್ನಾಭಿಪ್ರಾಯಗಳು ನಿಮಗೆ ಕಿರಿಕಿರಿ ಹಾಗೂ ಆತಂಕವನ್ನು ತರಬಹುದು. ಯಾರಾದರೂ ನಿಮ್ಮ ಸಹಾಯ ಕೇಳಬಹುದು. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ನಿಮ್ಮ ಸಂಬಂಧದ ಆ ಎಲ್ಲಾ ದೂರುಗಳು ಮತ್ತು ದ್ವೇಷಗಳು ಈ ಅದ್ಭುತವಾದ ದಿನದಂದು ಕಣ್ಮರೆಯಾಗುತ್ತವೆ. ಪ್ರೇಮಿಗಳಿಗೆ ಇಂದು ಹೊಸ ಆಶಾಭಾವನೆ ಮೂಡಿಸಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಸಹೋದ್ಯೋಗಿಗಳೊಂದಿಗೆ ಸಂಯಮದಿಂದ ವರ್ತಿಸಿ, ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ. ಸಾಮಾಜಿಕ ಕಾರ್ಯಗಳಲ್ಲಿ ಹಾಜರಾಗಲು ಅವಕಾಶಗಳು ಬರಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯಕ್ಕೆ ಬಹಳಷ್ಟು ಮೆಚ್ಚುಗೆ ಸಿಗುತ್ತದೆ ಮತ್ತು ನಿಮಗೆ ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣ, ಹಣಕಾಸು ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಮಧ್ಯಮ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಹಣಕಾಸು ಯೋಜನೆಗಳ ಕುರಿತಾಗಿ ಆಲೋಚನೆ, ನಿಮ್ಮ ಸಂಗಾತಿ ನಿಮ್ಮ ಬಗ್ಗೆ ಒಳ್ಳೆಯದನ್ನು ಯೋಚಿಸುತ್ತಾನೆ, ಆದ್ದರಿಂದ ಕೆಲವೊಮ್ಮೆ ನಿಮ್ಮ ಮೇಲೆ ಕೋಪವನ್ನು ಸಹ ತೋರಿಸಬಹುದು. ಅವರ ಕೋಪಕ್ಕೆ ಕೋಪಗೊಳ್ಳುವುದಕ್ಕಿಂತ ಅವರ ಮಾತುಗಳನ್ನು ನೀವು ಅರ್ಥಮಾಡಿಕೊಳ್ಳುವುದು ಉತ್ತಮ. ಹಳೆ ಸ್ನೇಹಿತರೊಂದಿಗೆ ಭೇಟಿ, ಮಾತನಾಡಲು ಯೋಜಿಸಬಹುದು. ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ, ಕೌಟುಂಬಿಕ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅನಗತ್ಯ ಖರ್ಚಿನ ಹೊರತಾಗಿಯೂ ನಿಮ್ಮ ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ನಿಮ್ಮ ಆಕರ್ಷಿತ ವ್ಯಕ್ತಿತ್ವವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ವಾಹನ ಚಾಲನೆ ಮಾಡುವಾಗ ಜಾಗೃತೆ ಅವಶ್ಯವಾಗಿ ವಹಿಸಿ, ಅಪಘಾತ ಸಂಭವ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ.ಮನದ ಬಯಕೆ ಇಡೆರುವ ಆಶಾಭಾವನೆ ಮೂಡಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಭೂಮಿ ಸಂಬಂಧಿ ವ್ಯವಹಾರ ನಡೆಯುವ ಸಾಧ್ಯತೆ ಇದ್ದು, ನಿಮಗೆ ಲಾಭದಾಯಕವಾಗಲಿದೆ. ನಿಮ್ಮ ಪ್ರೀತಿ ಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ. ಉದ್ಯೋಗಿಗಳಿಗೆ ನಿಧಾನಗತಿಯಿಂದಾಗಿ ಸ್ವಲ್ಪ ಒತ್ತಡ ತರುವ ಸಾಧ್ಯತೆ. ಸಂಗಾತಿಯ ಮಾತುಗಳು ಹಿತವೇನಿಸುವುದು. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಒತ್ತಡ ಮುಕ್ತವಾಗಿ ಶಾಂತ ವಾತಾವರಣ ನಿರ್ಮಾಣವಾಗಲಿದೆ. ಹಣಕಾಸು, ವ್ಯಾಪಾರ- ವ್ಯವಹಾರಗಳಲ್ಲಿ ಲಾಭ. ಅನಿವಾರ್ಯ ಕಾರಣ ನೀವು ಖರ್ಚು ಮಾಡುವ ಸಾಧ್ಯತೆಯಿಂದಾಗಿ ಮನಸ್ಸಿಗೆ ಕೊಂಚ ಬೇಸರ. ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ. ನಿಮಗೆ ಅಗತ್ಯವಿಲ್ಲದ ವಿಷಯಗಳ ಮೇಲೆ ಇಂದು ನಿಮ್ಮ ಹೆಚ್ಚಿನ ಸಮಯವನ್ನು ವ್ಯರ್ಥ ಮಾಡವುದು ಬೇಡ. ಆರೋಗ್ಯ ಪರಿಪೂರ್ಣ. ಸಂಗಾತಿಯ ಮಾತುಗಳು ಅಹಿತವೆನಿಬಹುದು. ಕಲಹಗಳಿಗೆ ಆಸ್ಪದ ಕೊಡಬೇಡಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಪ್ರೇಮ ಪ್ರಕರಣ ಹದಗೆಡುವ ಸಾಧ್ಯತೆ. ಅನಿವಾರ್ಯ ಪ್ರಸಂಗಗಳಿಂದಾಗಿ ಪ್ರಯಾಣ ಸಾಧ್ಯತೆ. ಸಂಬಂಧಿಕರ ಹಸ್ತಕ್ಷೇಪ ದಾಂಪತ್ಯ ಜೀವನದಲ್ಲಿ ವೈರತ್ವ ಮೂಡುವಂತೆ ಮಾಡಬಹುದು, ಅದಕ್ಕೆ ಅವಕಾಶ ಕೊಡಬೇಡಿ. ಆರೋಗ್ಯ ಪರಿಪೂರ್ಣ, ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು, ಆರ್ಥಿಕ ಸ್ಥಿತಿ ಉತ್ತಮ.ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ : ನಿಮ್ಮ ಆಕರ್ಷಿತ ವ್ಯಕ್ತಿತ್ವ ಇತರರನ್ನು ಸೆಳೆಯಲಿದೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದ್ದು, ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ. ಪಾಲಕರು ಮತ್ತು ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸಲು ಅವರಿಗೆ ಸಾಧ್ಯವಾದುದ್ದನ್ನೆಲ್ಲ ಮಾಡುತ್ತಾರೆ. ಇಂದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಭವಿಷ್ಯದ ಹೂಡಿಕೆ ಬಗೆಗೆ ಆಲೋಚನೆ. ಆಪ್ತರ ಆಗಮನದಿಂದ ಕಾರ್ಯದಲ್ಲಿ ವಿಳಂಬ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಹಣಕಾಸು ಹೂಡಿಕೆ ಬಗೆಗೆ ಆಲೋಚನೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಮನೆಯಲ್ಲಿನ ವ್ಯತಿರಿಕ್ತ ವಾತಾವರಣ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ. ಅದರಿಂದ ದೂರ ಇರಿ. ನಿಮ್ಮ ಆಪ್ತರೊಂದಿಗೆ ವಿಷಯ ಹಂಚಿಕೊಳ್ಳುವ ಸಾಧ್ಯತೆ. ಆದರೆ ಗೌಪ್ಯ ವಿಷಯಗಳು ಗೌಪ್ಯವಾಗಿದ್ದರೆ ಚೆನ್ನ. ದೈಹಿಕ ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಇಂದು ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಯ ಕಾರಣದಿಂದ ತೊಂದರೆಗೊಳಗಾಗಬಹುದು. ಅತಿಥಿಗಳ ಆಗಮನ ಕೊಂಚ ಮಟ್ಟಿಗೆ ಸಮಾಧಾನ ತರಿಸಬಹುದು. ಉದ್ಯೋಗದ ಸ್ಥಳದಲ್ಲಿ ಮಾತಿನ ನಿಯಂತ್ರಣ ತಪ್ಪಿ ಅಪಾಯ ತಂದು ಕೊಳ್ಳುವುದು ಬೇಡ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಪ್ರಗತಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ನಿಮ್ಮ ಅಪಾರ ವಿಶ್ವಾಸ ನಿಮಗೆ ಯಶಸ್ಸು ತಂದುಕೊಡಲಿದೆ. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ. ದಿನದ ಕೊನೆಯಲ್ಲಿ ಅನಿವಾರ್ಯ ಕಾರಣದಿಂದ ಮನಸ್ಸಿಗೆ ನೋವುಂಟು ಆಗುವ ಸಾಧ್ಯತೆ. ನೀವು ಅತೀ ಉದಾರಿಯಾಗಿದ್ದಲ್ಲಿ – ನಿಮ್ಮ ನಿಕಟ ಜನರು ನಿಮ್ಮ ಅನುಚಿತ ಲಾಭ ತೆಗೆದುಕೊಳ್ಳಬಹುದು. ಸ್ನೇಹಿತರೊಬ್ಬನೊಂದಿಗೆ ಇಂದು ಸಮಯವನ್ನು ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವೃಥಾ ಗಾಳಿಯಲ್ಲಿ ಗೋಪುರ ಕಟ್ಟಿ ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ. ಬದಲಿಗೆ ಏನಾದರೂ ಅರ್ಥಪೂರ್ಣವಾದುದ್ದನ್ನು ಮಾಡಲು ನಿಮ್ಮ ಶಕ್ತಿ ವ್ಯಯಿಸಿ. ಆಪ್ತರೊಂದಿಗೆ ಅನಿವಾರ್ಯ ಕಾರಣದಿಂದ ಮುನಿಸಿಕೊಳ್ಳುವ ಸಾಧ್ಯತೆ. ಇದಕ್ಕೆ ಅವಕಾಶ ಕೊಡದೆ ನಿಮ್ಮ ಹಾಸ್ಯ ಮನೋಭಾವನೆಯಿಂದ ಸಮಸ್ಯೆ ಪರಿಹರಿಸಿಕೊಳ್ಳಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಸಂಗಾತಿಯ ಮಾತುಗಳು ಹಿತವೆನಿಸುತ್ತದೆ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ ಸಾಧಾರಣ.ಕೌಟುಂಬಿಕವಾಗಿ ಶುಭ ಫಲ ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Health Tips Kannada
ಆರೋಗ್ಯ34 mins ago

Health Tips Kannada: ನಮ್ಮ ದೇಹದಲ್ಲಿ ಉಪ್ಪಿನ ಅಂಶ ಕಡಿಮೆಯಾಗಿದೆ ಎಂದು ತಿಳಿಯುವುದು ಹೇಗೆ?

HSRP Number plate
ಪ್ರಮುಖ ಸುದ್ದಿ44 mins ago

HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

Rain News
ಕರ್ನಾಟಕ1 hour ago

Karnataka Weather: ಇಂದು ಕರಾವಳಿ ಭಾಗ, ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

Tips For Rainy Season
ಆರೋಗ್ಯ2 hours ago

Tips For Rainy Season: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

Alcohal
ಪ್ರಮುಖ ಸುದ್ದಿ3 hours ago

ಒಂದೇ ವರ್ಷದೊಳಗೆ 3ನೇ ಬಾರಿ ಮದ್ಯದ ದರ ಏರಿಕೆ? ಉಚಿತ ಯೋಜನೆಗೆ ಹಣ ಹೊಂದಿಸುವ ಕಸರತ್ತು

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ!

Hassan Ali
ದೇಶ8 hours ago

Hassan Ali: ರಿಯಾಸಿ ಉಗ್ರರ ದಾಳಿ ಖಂಡಿಸಿದ ಪಾಕ್‌ ಕ್ರಿಕೆಟಿಗ ಹಸನ್‌ ಅಲಿ; ಆಲ್‌ ಐಸ್‌ ಆನ್‌ ವೈಷ್ಣೋದೇವಿ ಎಂದಿದ್ದೇಕೆ?

IND vs USA
ಪ್ರಮುಖ ಸುದ್ದಿ8 hours ago

IND vs USA: ಅರ್ಶದೀಪ್​ ಮಾರಕ ದಾಳಿಗೆ ಪತರುಗುಟ್ಟಿದ ಅಮೆರಿಕ; ಟೀಮ್​ ಇಂಡಿಯಾ ಸೂಪರ್​-8 ಪ್ರವೇಶ

disqualification for hanawala Gram Panchayat Vice President and Cancellation of membership ordered
ಕರ್ನಾಟಕ8 hours ago

Koppala News: ಹಣವಾಳ ಗ್ರಾ.ಪಂ ಉಪಾಧ್ಯಕ್ಷೆಗೆ ಅನರ್ಹತೆಯ ಶಿಕ್ಷೆ; ಸದಸ್ಯತ್ವ ರದ್ದುಗೊಳಿಸಿ ಆದೇಶ

Court Order
ದೇಶ9 hours ago

ಬಾಲಕಿಯ ಒಳ ವಸ್ತ್ರ ಕಳಚಿ ಬೆತ್ತಲೆಗೊಳಿಸುವುದು ಅತ್ಯಾಚಾರ ಯತ್ನವಲ್ಲ ಎಂದ ಹೈಕೋರ್ಟ್! ನಿಮ್ಮ ಅಭಿಪ್ರಾಯವೇನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌