ಮಂಗಳೂರು ಸ್ಫೋಟ | ಕುಕ್ಕರ್‌ ಬ್ಲಾಸ್ಟ್‌ ರೂವಾರಿ ಶಾರಿಕ್‌ ನಗದು ವ್ಯವಹಾರ ಮಾಡ್ತಿರಲಿಲ್ಲ, ಬರೀ ಬಿಟ್‌ ಕಾಯಿನ್‌! - Vistara News

ಕರ್ನಾಟಕ

ಮಂಗಳೂರು ಸ್ಫೋಟ | ಕುಕ್ಕರ್‌ ಬ್ಲಾಸ್ಟ್‌ ರೂವಾರಿ ಶಾರಿಕ್‌ ನಗದು ವ್ಯವಹಾರ ಮಾಡ್ತಿರಲಿಲ್ಲ, ಬರೀ ಬಿಟ್‌ ಕಾಯಿನ್‌!

ಕುಕ್ಕರ್‌ ಬ್ಲಾಸ್ಟ್‌ ರೂವಾರಿ ಶಾರಿಕ್‌ ತನ್ನ ಚಟುವಟಿಕೆಗಳು ಯಾರಿಗೂ ಗೊತ್ತಾಗದಂತೆ ಹತ್ತಾರು ಪ್ಲ್ಯಾನ್‌ಗಳನ್ನು ಮಾಡಿದ್ದ. ಆತ ವ್ಯವಹಾರಕ್ಕೆ ಹಣವನ್ನೇ ಬಳಸದಷ್ಟು ಚಾಣಾಕ್ಷ!

VISTARANEWS.COM


on

shariq bit coin crime
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಕಳೆದ ಶನಿವಾರ ಸಂಜೆ ೪.೩೦ಕ್ಕೆ ಮಂಗಳೂರಿನ ನಾಗುರಿಯಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟದಲ್ಲಿ ಗಾಯಗೊಂಡ, ಸ್ಪೋಟ ರೂವಾರಿ ಮೊಹಮ್ಮದ್‌ ಶಾರಿಕ್‌ ಪರಮ ಪಾತಕಿ ಮಾತ್ರವಲ್ಲ, ಸಿಕ್ಕಿಬೀಳದಂತೆ ತಪ್ಪಿಸಿಕೊಳ್ಳುವಲ್ಲಿ ಪಕ್ಕಾ ಕ್ರಿಮಿನಲ್‌ ಆಗಿದ್ದ ಎನ್ನುವುದು ತನಿಖೆಯ ವೇಳೆ ತಿಳಿದುಬಂದಿದೆ.

ಈ ಹಿಂದೆ ಗೋಡೆಬರಹ ಪ್ರಕರಣದಲ್ಲಿ ಸಿಕ್ಕಿಬಿದ್ದು ೨೦೨೧ರ ಸೆಪ್ಟೆಂಬರ್‌ನಲ್ಲಿ ಜಾಮೀನು ಪಡೆದು ಹೊರಗೆ ಬಂದಿದ್ದ ಆತ ಬಳಿಕ ಇನ್ನಷ್ಟು ಕ್ರಿಮಿನಲ್‌ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಆದರೆ, ಆತನ ಯಾವ ಚಟುವಟಿಕೆಗಳೂ ಪೊಲೀಸರಿಗೆ ತಿಳಿಯುತ್ತಲೇ ಇರಲಿಲ್ಲ. ಇದರಲ್ಲಿ ಸಣ್ಣಮಟ್ಟದಲ್ಲಿ ಪೊಲೀಸರ ವೈಫಲ್ಯವೂ ಇದೆಯಾದರೂ ಪೊಲೀಸರನ್ನು ಯಾಮಾರಿಸಿ ಆತ ತಂತ್ರಗಳನ್ನು ಹೆಣೆದಿದ್ದ ಎನ್ನುವುದು ಮೇಲ್ನೋಟಕ್ಕೆ ಕಾಣುವ ಸತ್ಯ.

ಉಗ್ರ ಶಾರಿಕ್‌ ಭಯೋತ್ಪಾದನಾ ಚಟುವಟಿಕೆಗಳ ಸಂದರ್ಭದಲ್ಲಿ ಎಲ್ಲೂ ಹಣವನ್ನು ಉಪಯೋಗಿಸುತ್ತಿರಲಿಲ್ಲ. ಬದಲಾಗಿ ಬಿಟ್‌ ಕಾಯಿನ್‌ ಬಳಸುತ್ತಿದ್ದ ಎಂದು ಹೇಳಲಾಗಿದೆ. ಯಾರ ಜೊತೆಯೂ ನಗದು ವ್ಯವಹಾರವೇ ಇರಲಿಲ್ಲ. ಆತನ ಚಟುವಟಿಕೆಗಳಿಗೆ ದುಬೈ ಸೇರಿದಂತೆ ಕೆಲವು ದೇಶಗಳಿಂದ ಬಿಟ್ ಕಾಯಿನ್ ಮೂಲಕವೇ ಹಣ ವರ್ಗಾವಣೆ ಆಗುತ್ತಿತ್ತು ಎಂಬ ಮಾಹಿತಿ ಇದೆ.

ಬ್ಲಾಕ್ ವೆಬ್ ಮೂಲಕ ಬಿಟ್ ಕಾಯಿನ್ ದಂಧೆ ಮಾಡುತ್ತಿದ್ದ ಶಾರಿಕ್‌ ಮಾತುಕತೆಗೆ ಇಂಟರ್‌ನೆಟ್‌ ಕಾಲ್‌ ಮಾಡ್ತಿದ್ದ. ಹೀಗಾಗಿ ಅವನ ಚಲನವಲನಗಳನ್ನು ಪತ್ತೆ ಹಚ್ಚುವುದು ಸಾಧ್ಯವಾಗಿಯೇ ಇರಲಿಲ್ಲ.

ಮನೆ ಹುಡುಕಿದ್ದೂ ಒಎಲ್‌ಎಕ್ಸ್‌ನಲ್ಲಿ!
ಸ್ಫೋಟದ ಪೂರ್ವ ಸಿದ್ಧತೆಗಾಗಿ ಮೈಸೂರನ್ನು ಆಯ್ಕೆ ಮಾಡಿದ್ದ ಶಾರಿಕ್‌ ಅಲ್ಲಿ ಮನೆಯನ್ನು ಹುಡುಕುವುದಕ್ಕಾಗಿ ಆಯ್ಕೆ ಮಾಡಿದ್ದು ಕೂಡಾ ಆನ್‌ಲೈನ್‌ ದಾರಿಯನ್ನೇ. ಕೇರಳದಲ್ಲಿದ್ದ ಆತ ಮೈಸೂರಿಗೆ ಬಂದು ಮನೆ ಹುಡುಕಲು ಬೀದಿ ಬೀದಿ ಅಲೆದರೆ ಪೊಲೀಸರಿಗೆ ತನ್ನ ಗುರುತು ಸಿಗಬಹುದು ಎಂದು ಭಾವಿಸಿ ಆನ್‌ಲೈನ್‌ನಲ್ಲೇ ಮನೆ ನೋಡಿ, ಮಾಲೀಕರಿಗೆ ಕರೆ ಮಾಡಿ ಮನೆ ಫೈನಲ್‌ ಮಾಡಿದ್ದ.

ಮನೆ ಮಾಲೀಕನ ನಂಬರ್‌ಗೆ ಕರೆ
ಕೇರಳದಲ್ಲಿಯೇ ಕುಳಿತು ಮನೆ ಮಾಲೀಕ ಮೋಹನ್‌ ಅವರಿಗೆ ಕರೆ ಮಾಡಿದ್ದ ಶಾರಿಕ್‌, ತಾನು ಪ್ರೇಮ್‌ ರಾಜ್‌ ಎಂದು ಪರಿಚಯ ಮಾಡಿಕೊಂಡಿದ್ದ. ತನಗೆ ನಿಮ್ಮ ಮನೆ ಇಷ್ಟವಾಗಿದೆ. ಫೋಟೊಗಳನ್ನು ನೋಡಿದ್ದೇನೆ. ಬಹುತೇಕ ಫೈನಲ್‌ ಮಾಡುತ್ತೇನೆ ಎಂದು ಹೇಳಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮನೆ ಮಾಲೀಕ ಮೋಹನ್‌ ಸಹ, “ಯಾವಾಗ ಬಂದು ನೋಡುತ್ತೀರಾ..?” ಎಂದು ಕೇಳಿದ್ದಾರೆ. ಇದಕ್ಕೆ ಶಾರಿಕ್‌, “ನಾನು ಕೇರಳದಲ್ಲಿ ಪ್ರವಾಸದಲ್ಲಿದ್ದೇನೆ. ಅಲ್ಲಿಂದ ಬಂದ ತಕ್ಷಣ ನಿಮಗೆ ತಿಳಿಸುತ್ತೇನೆ” ಎಂದು ಹೇಳಿದ್ದ. ಬಳಿಕ ಅದೇ ರೀತಿ ಅವರನ್ನು ಸಂಪರ್ಕಿಸಿ ವಿಶ್ವಾಸ ಗಳಿಸಿ ಮನೆ ಪಡೆದಿದ್ದ.

ಇದನ್ನೂ ಓದಿ | ಮಂಗಳೂರು ಸ್ಫೋಟ | ಶಾರಿಕ್‌ ಎಲ್ಲೂ ಮುಸ್ಲಿಂ ಐಡೆಂಟಿಟಿ ತೋರಿಸಿಕೊಂಡಿರಲಿಲ್ಲ, ತನ್ನನ್ನು ಹಿಂದು ಎಂದೇ ಬಿಂಬಿಸಿಕೊಂಡಿದ್ದ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಳ್ಳಾರಿ

Ballari News: ಚೇಳ್ಳಗುರ್ಕಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Ballari News: ಬಳ್ಳಾರಿ ತಾಲೂಕಿನ ಚೇಳ್ಳಗುರ್ಕಿ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಆಂಧ್ರಪ್ರದೇಶದ ಹ್ಯಾಂಡ್ಸ್‌ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ವೆಂಕಟರೆಡ್ಡಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ಗ್ರಾಮೀಣರಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.

VISTARANEWS.COM


on

World Environment Day programme in Chellagurki
Koo

ಬಳ್ಳಾರಿ: ತಾಲೂಕಿನ ಚೇಳ್ಳಗುರ್ಕಿ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day) ಕಾರ್ಯಕ್ರಮವನ್ನು (Ballari News) ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಾಧ್ಯಾಪಕ ನಾರಾಯಣಸ್ವಾಮಿ, ಪರಿಸರ ಹಾಗೂ ನೀರಿನ ಸದ್ಬಳಕೆ ಕುರಿತು ತಿಳಿಸಿದರು.

ಇದನ್ನೂ ಓದಿ: Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

ಆಂಧ್ರಪ್ರದೇಶದ ಹ್ಯಾಂಡ್ಸ್‌ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ವೆಂಕಟರೆಡ್ಡಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ಗ್ರಾಮೀಣರಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.

ಹ್ಯಾಂಡ್ಸ್‌ ಸಂಸ್ಥೆಯ ಡಿ. ಗಂಗಾಧರ ಮಾತನಾಡಿ, ಪರಿಸರ ನಾಶದಿಂದಾಗುತ್ತಿರುವ ಅಪಾಯಗಳು ಹಾಗೂ ಜನಜೀವನದ ಮೇಲಿನ ಪರಿಣಾಮಗಳು ಕುರಿತು ತಿಳಿಸಿದರು. ತೋಟಗಾರಿಕೆ ಅಧಿಕಾರಿ ವಿನಯ್ ಕುಮಾರ, ಇಲಾಖೆಯ ಯೋಜನೆಗಳ ಕುರಿತು ತಿಳಿಸಿದರು.

ಇದನ್ನೂ ಓದಿ: KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಸಿ.ಎಂ. ಬಸವರಾಜ ಸ್ವಾಮಿ, ಶಿವಕುಮಾರ ರೆಡ್ಡಿ, ನಾರಾಯಣ, ಟಿ. ತಿಮ್ಮನಗೌಡ, ವೈ.ಎಸ್. ಎರ್ರೆಣ್ಣ, ದೊಡ್ಡಬಸವನಗೌಡ, ಶಶಿಧರಗೌಡ, ವಿ. ಎರಿಸ್ವಾಮಿ, ಟಿ. ಎರಿಸ್ವಾಮಿ ಹಾಗೂ ದ್ರಾಕ್ಷಾಯಿಣಮ್ಮ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Lakshmi Hebbalkar visit the Women and Children Nutritious Food Manufacturing Unit at Yaragatti
Koo

ಯರಗಟ್ಟಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಿದ್ದರೆ ಎಂಎಸ್‌ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು. ಅಂಗನವಾಡಿ ಮಕ್ಕಳು ಸ್ವಂತ ಮಕ್ಕಳು ಎಂದು ತಿಳಿದು, ಉತ್ತಮ ಗುಣಮಟ್ಟದ ಪೂರಕ ಆಹಾರಗಳನ್ನು ಒದಗಿಸಬೇಕು. ಕಳಪೆ ಆಹಾರಗಳ ಪೂರೈಕೆಯನ್ನು ಯಾವುದೇ ಕಾರಣದಿಂದ ಸಹಿಸಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Kempegowda Jayanti: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತರಾದವರಲ್ಲ; ಸಿದ್ದರಾಮಯ್ಯ

ಸ್ಥಳೀಯ ಮಟ್ಟದಲ್ಲಿ ತಪ್ಪುಗಳಾದರೆ ಅದು ಮೇಲ್ಮಟ್ಟದವರೆಗೆ ಎಲ್ಲರಿಗೂ ಕೆಟ್ಟ ಹೆಸರು ತರುತ್ತದೆ. ಮಕ್ಕಳ ಹಾಗೂ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಗುಣಮಟ್ಟಕ್ಕೆ ಅತೀ ಹೆಚ್ಚು ಆದ್ಯತೆ ನೀಡಬೇಕು. ಘಟಕದ ಪ್ರತಿಯೊಂದು ಉತ್ಪನ್ನಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಚಿವರು, ಯಾವುದಾದರೂ ಕಳಪೆ ಎಂದು ಕಂಡು ಬಂದರೆ ಘಟಕದವರೇ ತಿರಸ್ಕರಿಸಬೇಕು. ಎಲ್ಲ ಉತ್ಪನ್ನಗಳನ್ನು ಸ್ವಚ್ಛಗೊಳಿಸಿ ಪೂರೈಸಬೇಕು. ಈ ವಿಷಯದಲ್ಲಿ ತಪ್ಪಾದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಸಿದರು.

ಅಂಗನವಾಡಿ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಎಲ್ಲ ವಿಭಾಗಗಳನ್ನು ಸಂಪೂರ್ಣ ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಈಗಾಗಲೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಎಂಎಸ್‌ಪಿಸಿ ಘಟಕಗಳ ಸುಧಾರಣೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

ಈ ಸಂದರ್ಭದಲ್ಲಿ ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Continue Reading

ಕರ್ನಾಟಕ

DK Shivakumar: ಹೆಚ್ಚುವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ಬಳಿ ಹೋಗಲಿ; ಡಿ.ಕೆ. ಶಿವಕುಮಾರ್

DK Shivakumar: ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ. ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ . ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

Post of Additional DCM Those who speak before the media should go to the High Command and speak says DCM DK Shivakumar
Koo

ಬೆಂಗಳೂರು: ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ ಎಂದರು.

ಇದನ್ನೂ ಓದಿ: Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, “”ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ. ಅದೇ ರೀತಿ ಅವರು ಎಲ್ಲಾದರೂ ಪರಿಹಾರವನ್ನು ಹುಡುಕಿಕೊಂಡು ಹೋಗಲಿʼʼ ಎಂದು ತಿಳಿಸಿದರು.

ಮುಂದಿನ ವರ್ಷದಿಂದ ಇಂತಹ ತಪ್ಪು ಆಗದಂತೆ ಕ್ರಮ

ಕೆಂಪೇಗೌಡರ ಜಯಂತಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡದ ವಿಚಾರವಾಗಿ ರಾಜ್ಯ ಒಕ್ಕಲಿಗರ ಸಂಘ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಯಾರನ್ನೂ ಅಗೌರವಿಸುವ ಉದ್ದೇಶ ನಮಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರಾಗಿ ಎಸ್.ಎಂ. ಕೃಷ್ಣ, ಸದಾನಂದ ಗೌಡರು, ದೇವೇಗೌಡರು, ಕುಮಾರಸ್ವಾಮಿ ಅವರು ಇದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ಶಿಷ್ಟಾಚಾರವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನ ನೀಡಿದ್ದಾರೆ. ದೇವೇಗೌಡರು ಹಾಸನ ಜಿಲ್ಲಾ ವ್ಯಾಪ್ತಿಗೆ ಬರುತ್ತಾರೆ. ಕುಮಾರಸ್ವಾಮಿ ಮಂಡ್ಯ ಸಂಸದರಾಗಿದ್ದಾರೆ. ಈ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಿತ್ತು. ಮುಂದಿನ ವರ್ಷ ಈ ರೀತಿಯ ತಪ್ಪುಗಳು ನಡೆಯದಂತೆ ಸರಿಪಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Railway New Rules: ರೈಲು ಪ್ರಯಾಣಿಕರೇ, ಬರ್ತ್‌ನಲ್ಲಿ ಮಲಗುವ ಕುರಿತ ಈ ಹೊಸ ರೂಲ್ಸ್‌ ನೆನಪಿನಲ್ಲಿರಲಿ!

ದೆಹಲಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತುವಂತೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

Continue Reading

ಕ್ರೀಡೆ

Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

“ಭಾರತಕ್ಕೆ ಒಲಿಂಪಿಕ್ ಸಂಭ್ರಮವನ್ನು ತರಬೇಕು ಎಂಬ ನೂರಾ ನಲವತ್ತು ಕೋಟಿ ಭಾರತೀಯರ ಕನಸನ್ನು ನನಸಾಗಿಸಲು ಇಂಡಿಯಾ ಹೌಸ್ ಮತ್ತೊಂದು ಹೆಜ್ಜೆಯಾಗಲಿದೆ ಎಂದು ನಾವು ನಿಜವಾಗಿಯೂ ಭಾವಿಸುತ್ತೇವೆ!” ನೀತಾ ಅಂಬಾನಿ ಹೇಳಿದ್ದಾರೆ.

VISTARANEWS.COM


on

Paris Olympics 2024
Koo

ಮುಂಬೈ : ವಿಶ್ವ ಮಟ್ಟದಲ್ಲಿ ಪ್ರಮುಖ ಕ್ರೀಡಾಕೂಟವಾದ ಒಲಿಂಪಿಕ್ಸ್ (Paris Olympics 2024) ಆರಂಭಕ್ಕೆ ಇನ್ನು ಕೇವಲ ಒಂದು ತಿಂಗಳಷ್ಟೇ ಬಾಕಿ ಇದೆ. ಪ್ಯಾರಿಸ್ ಒಲಿಂಪಿಕ್ಸ್- 2024ರ ಕಡೆಗೆ ವಿಶ್ವಾದ್ಯಂತದ ಕ್ರೀಡಾಸಕ್ತರು ಕಣ್ಣು ನೆಟ್ಟಿದ್ದಾರೆ. ಅಂದಹಾಗೆ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ “ಇಂಡಿಯಾ ಹೌಸ್” ಕಾಣಬಹುದಾಗಿದೆ. ಭಾರತೀಯ ಒಲಿಂಪಿಕ್ಸ್ ಒಕ್ಕೂಟದ (ಐಒಎ) ಸಹಭಾಗಿತ್ವ ವಹಿಸಿರುವಂಥ ರಿಲಯನ್ಸ್ ಫೌಂಡೇಷನ್ ನಿಂದ ಈ “ಇಂಡಿಯಾ ಹೌಸ್” ಪರಿಕಲ್ಪನೆ ಮೂಡಿದೆ. ಈ ಇಂಡಿಯಾ ಹೌಸ್ ನಲ್ಲಿ ಭಾರತದ ಕ್ರೀಡಾ ಸಂಸ್ಕೃತಿ- ಪರಂಪರೆಯನ್ನು ಪ್ರದರ್ಶಿಸಲಾಗುತ್ತದೆ. ಅದರಲ್ಲಿ ಕ್ರೀಡೆಗೆ ಸಂಬಂಧಿಸಿ ಭಾರತದ ಭೂತ- ಭವಿಷ್ಯತ್ ಹಾಗೂ ವರ್ತಮಾನದ ಸಾಧನೆ, ಕನಸುಗಳನ್ನು ಸಹ ತೋರಿಸಲಾಗುತ್ತದೆ. ತಂತ್ರಜ್ಞಾನ ಮತ್ತು ಡಿಜಿಟಲೈಸೇಷನ್ ನಲ್ಲಿ ಭಾರತದ ಸಾಧನೆಯನ್ನು ಜಗತ್ತಿನೆದುರು ತೆರೆದಿಡಲಾಗುತ್ತದೆ. ವಿಶ್ವದ ವಿವಿಧ ಅಥ್ಲೀಟ್ ಗಳು, ಗಣ್ಯರು, ಕ್ರೀಡಾ ಉತ್ಸಾಹಿಗಳು ಈ ಇಂಡಿಯಾ ಹೌಸ್ ಗೆ ಭೇಟಿ ನೀಡುವ ನಿರೀಕ್ಷೆ ಇದೆ. ಇನ್ನು ಭಾರತದ ನೀತಿಯನ್ನು ವ್ಯಾಖ್ಯಾನಿಸುವ ಏಕತೆ, ವೈವಿಧ್ಯತೆ ಮತ್ತು ಶ್ರೇಷ್ಠತೆಯನ್ನು ಸಾರುವುದಕ್ಕೂ ಇದು ಸಹಕಾರಿ ಆಗುತ್ತದೆ.

ಇಂಡಿಯಾ ಹೌಸ್ ಎಂಬುದು ಯಾಕೆ ಮಹತ್ವದ್ದು ಎಂಬ ಬಗ್ಗೆ ಮಾತನಾಡಿದ ಐಒಎ ಸದಸ್ಯೆ , ರಿಲಯನ್ಸ್ ಫೌಂಡೇಷನ್ ಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರು , “ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಇಂಡಿಯಾ ಹೌಸ್ ಅನ್ನು ಘೋಷಿಸಲು ನಾನು ಅಪಾರ ಸಂತೋಷ ಪಡುತ್ತೇನೆ ಮತ್ತು ಇದೇ ಉತ್ಸಾಹದಿಂದ ರೋಮಾಂಚನಗೊಂಡಿದ್ದೇನೆ. ಕಳೆದ ವರ್ಷ ಭಾರತದಲ್ಲಿ ನಡೆದ ಐಒಸಿ ಅಧಿವೇಶನವು 40 ವರ್ಷಗಳಲ್ಲಿ ಮೊದಲನೆಯದು, ನಮ್ಮ ಒಲಿಂಪಿಕ್ ಪಯಣದಲ್ಲಿ ಪ್ರಮುಖ ಇದು ಮೈಲುಗಲ್ಲು. ಮತ್ತು ನಮ್ಮ ಕ್ರೀಡಾಪಟುಗಳನ್ನು ಗೌರವಿಸುವ, ನಮ್ಮ ವಿಜಯಗಳನ್ನು ಆಚರಿಸುವ, ನಮ್ಮ ಯಶೋಗಾಥೆಗಳನ್ನು- ಸಾಧನೆಗಳನ್ನು ಹಂಚಿಕೊಳ್ಳುವ ಮತ್ತು ಜಗತ್ತನ್ನು ಭಾರತಕ್ಕೆ ಸ್ವಾಗತಿಸುವ ಜಾಗವಾದ ಇಂಡಿಯಾ ಹೌಸ್ ಅನ್ನು ಪ್ರಾರಂಭಿಸುವುದರೊಂದಿಗೆ ಈ ಪ್ರಯತ್ನಕ್ಕೆ ವೇಗ ನೀಡುವುದನ್ನು ಮುಂದುವರಿಸಲು ನಾವು ಸಂತೋಷಪಡುತ್ತೇವೆ,” ಎಂದಿದ್ದಾರೆ.

“ಭಾರತಕ್ಕೆ ಒಲಿಂಪಿಕ್ ಸಂಭ್ರಮವನ್ನು ತರಬೇಕು ಎಂಬ ನೂರಾ ನಲವತ್ತು ಕೋಟಿ ಭಾರತೀಯರ ಕನಸನ್ನು ನನಸಾಗಿಸಲು ಇಂಡಿಯಾ ಹೌಸ್ ಮತ್ತೊಂದು ಹೆಜ್ಜೆಯಾಗಲಿದೆ ಎಂದು ನಾವು ನಿಜವಾಗಿಯೂ ಭಾವಿಸುತ್ತೇವೆ!” ಎಂದಿದ್ದಾರೆ.

ಇದನ್ನೂ ಓದಿ: Rohit Sharma : ನಿಮ್ಮತಲೆಯಲ್ಲಿರುವ ಮೆದುಳು ಉಪಯೋಗಿಸಿ, ಪಾಕ್​ ಮಾಜಿ ನಾಯಕನ ಚೆಂಡು ವಿರೂಪದ ಆರೋಪಕ್ಕೆ ರೋಹಿತ್ ಶರ್ಮಾ ತಿರುಗೇಟು

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾ ಮಾತನಾಡಿ , ”ರಿಲಯನ್ಸ್ ಫೌಂಡೇನ್ ಸಹಭಾಗಿತ್ವದಲ್ಲಿ ಉದ್ಘಾಟನೆ ಆಗಲಿರುವ ಇಂಡಿಯಾ ಹೌಸ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತೀಯ ಅಭಿಮಾನಿಗಳು ಮತ್ತು ಕ್ರೀಡಾಪಟುಗಳ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಇದು ಅಭಿಮಾನಿಗಳಿಗೆ ಮತ್ತು ಇತರ ದೇಶಗಳ ಜನರು ಭಾರತದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಉತ್ತಮ ಮಾರ್ಗವಾಗಿದೆ. ಮತ್ತು ಭಾರತವು ಪ್ರಮುಖ ಕ್ರೀಡಾವಳಿಗಳ ಆತಿಥೇಯ ಆಗಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ ಮತ್ತು ಇಂಡಿಯಾ ಹೌಸ್ ನಾವು ಕ್ರೀಡಾ ರಾಷ್ಟ್ರವಾಗಿ ಮತ್ತು ಒಲಿಂಪಿಕ್ ನಲ್ಲಿ ಮಾಡಿದ ಸಾಧನೆಗಳನ್ನು ಪ್ರತಿಬಿಂಬಿಸುತ್ತದೆ. ಈ ಉಪಕ್ರಮ ಮತ್ತು ಭಾರತದ ಒಲಿಂಪಿಕ್ ಪಯಣಕ್ಕೆ ಚಾಲನೆ ನೀಡಿದ ಐಒಸಿ ಸದಸ್ಯೆ ನೀತಾ ಅಂಬಾನಿ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ,” ಎಂದಿದ್ದಾರೆ.

ಭಾರತೀಯ ಸಂಸ್ಕೃತಿ- ಪರಂಪರೆಯ ಪ್ರದರ್ಶನ

ಒಲಿಪಿಕ್ಸ್ ಕ್ರೀಡಾಕೂಟದ ಸಮಯದಲ್ಲಿ “ಪಾರ್ಕ್ ಆಫ್ ನೇಷನ್ಸ್” ಎಂದು ಹೆಸರಿಸಲಾದ ಐಕಾನಿಕ್ ಪಾರ್ಕ್ ಡೆ ಲಾ ವಿಲ್ಲೆಟ್ ನಲ್ಲಿ ಇಂಡಿಯಾ ಹೌಸ್ ಇರಲಿದ್ದು, ನೆದರ್ ಲೆಂಡ್ಸ್, ಕೆನಡಾ, ಬ್ರೆಜಿಲ್ ಮತ್ತು ಅತಿಥೇಯ ಫ್ರಾನ್ಸ್ ಸೇರಿದಂತೆ ಒಟ್ಟು 14 ಇತರ ಆತಿಥ್ಯ ಹೌಸ್ ಗಳಿಂದ ಸುತ್ತುವರಿದಿದೆ. ಇಂಡಿಯಾ ಹೌಸ್ ಎಂಬುದು ಸಂಸ್ಕೃತಿಯಿಂದ ಕಲೆ ಮತ್ತು ಕ್ರೀಡೆಗಳವರೆಗೆ ಅಡುಗೆಯ ಸತ್ಕಾರಗಳು ಮತ್ತು ಯೋಗ, ಕರಕುಶಲ ವಸ್ತುಗಳು, ಸಂಗೀತ, ಭಾರತೀಯ ನೃತ್ಯ ಗುಂಪುಗಳಿಂದ ಪ್ರದರ್ಶನಗಳು ಮತ್ತಿತರ ಅನುಭವಗಳನ್ನು ಅಭಿಮಾನಿಗಳಿಗೆ ದೊರಕಿಸುತ್ತದೆ. ಈ ಮೂಲಕ ಜಗತ್ತಿಗೆ ಭಾರತದ ಪ್ರತಿಭೆ, ಸಾಮರ್ಥ್ಯ ಮತ್ತು ಮಹತ್ವಾಕಾಂಕ್ಷೆಯ ಒಂದು ನೋಟವನ್ನು ನೀಡುತ್ತದೆ.

ಭಾರತೀಯ ಕ್ರೀಡಾಪಟುಗಳು ಮತ್ತು ಅಭಿಮಾನಿಗಳಿಗೆ ಮನೆಯಿಂದ ದೂರ

ಇಂಡಿಯಾ ಹೌಸ್ ಭಾರತದ ವಿಜಯಗಳು ಮತ್ತು ಪದಕ ಗೆಲುವುಗಳನ್ನು ಆಚರಿಸುವ ಗುರಿಯನ್ನು ಹೊಂದಿದೆ. ಸಂದರ್ಶಕರು, ಕ್ರೀಡಾ ದಂತಕಥೆಗಳೊಂದಿಗೆ ಮಾತುಕತೆ ನಡೆಸಲು ಮತ್ತು ತೊಡಗಿಸಿಕೊಳ್ಳುವ ಕಾರ್ಯಕ್ರಮಗಳ ಮೂಲಕ ಸ್ನೇಹಿತರೊಂದಿಗೆ ಪ್ರಮುಖ ಘಟನೆಗಳನ್ನು ಸ್ಮರಣೀಯವಾಗಿಸುವ ಗಮ್ಯಸ್ಥಾನವಾಗಿದೆ. ಇದು ಎಲ್ಲಾ ದೇಶಗಳ ಮಾಧ್ಯಮ ಮತ್ತು ಅಭಿಮಾನಿಗಳಿಗೆ ಮುಕ್ತವಾಗಿರುತ್ತದೆ. ಪ್ರಮುಖ ಭಾರತೀಯ ಕಾರ್ಯಕ್ರಮಗಳ ಸಂಭ್ರಮಾಚರಣೆಯನ್ನು ಇಂಡಿಯಾ ಹೌಸ್‌ನಲ್ಲಿ ಭಾರತದಲ್ಲಿ ಒಲಂಪಿಕ್ ಗೇಮ್ಸ್‌ನ ವಿಶೇಷ ಮಾಧ್ಯಮ ಹಕ್ಕುದಾರರಾದ ವಯಾಕಾಮ್18 ಸಹಭಾಗಿತ್ವದಲ್ಲಿ ಪ್ರತ್ಯೇಕವಾಗಿ ನಡೆಸಲಾಗುತ್ತದೆ.

ಒಂದು ಪ್ರಯತ್ನ

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA)ನ ಪ್ರಮುಖ ಪಾಲುದಾರರಾಗಿ ರಿಲಯನ್ಸ್ ಫೌಂಡೇಷನ್ ಸ್ಥಾಪಿಸಿದ ಇಂಡಿಯಾ ಹೌಸ್ ಎಂಬುದು ಜಾಗತಿಕವಾಗಿ ಭಾರತೀಯ ಕ್ರೀಡೆಗಳನ್ನು ಉನ್ನತ ಸ್ಥಾನಕ್ಕೆ ಒಯ್ಯುವ ಸಾಮೂಹಿಕ ಪ್ರಯತ್ನವನ್ನು ಪ್ರತಿನಿಧಿಸುತ್ತದೆ.

Continue Reading
Advertisement
World Environment Day programme in Chellagurki
ಬಳ್ಳಾರಿ10 seconds ago

Ballari News: ಚೇಳ್ಳಗುರ್ಕಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Lakshmi Hebbalkar visit the Women and Children Nutritious Food Manufacturing Unit at Yaragatti
ಕರ್ನಾಟಕ2 mins ago

Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

Post of Additional DCM Those who speak before the media should go to the High Command and speak says DCM DK Shivakumar
ಕರ್ನಾಟಕ4 mins ago

DK Shivakumar: ಹೆಚ್ಚುವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ಬಳಿ ಹೋಗಲಿ; ಡಿ.ಕೆ. ಶಿವಕುಮಾರ್

Paris Olympics 2024
ಕ್ರೀಡೆ29 mins ago

Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

Viral Video
ವೈರಲ್ ನ್ಯೂಸ್33 mins ago

Viral Video: ಅಬ್ಬಾ.. ಎಂಥಾ ಕ್ರೌರ್ಯ! ಮಹಿಳೆ ಮೇಲೆ ಕಿಡಿಗೇಡಿಗಳಿಂದ ಇದೆಂಥಾ ದೌರ್ಜನ್ಯ-ವಿಡಿಯೋ ಇದೆ ನೋಡಿ

Jio Tariffs
ದೇಶ33 mins ago

Jio Tariffs: ಜಿಯೋ ಬಳಕೆದಾರರಿಗೆ ಬ್ಯಾಡ್‌ ನ್ಯೂಸ್;‌ ಶೇ.20ರಷ್ಟು ಶುಲ್ಕ ಹೆಚ್ಚಳ, ನೂತನ ದರಪಟ್ಟಿ ಇಲ್ಲಿದೆ

Internet Addiction
ಆರೋಗ್ಯ43 mins ago

Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ!

Paris Olympics 2024
ಕ್ರೀಡೆ47 mins ago

Paris Olympics 2024: ಒಲಿಂಪಿಕ್ಸ್​ಗೆ ಅರ್ಹತೆ ಪಡೆದ​ ರಾಜ್ಯದ ಇಬ್ಬರು ಸ್ವಿಮ್ಮರ್​ಗಳು

Illegal ganja storage in Ballari Arrest of two accused Rs 19 10 lakh Valuable ganja seized
ಕರ್ನಾಟಕ1 hour ago

Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

Arvind Kejriwal
ದೇಶ1 hour ago

Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌