ಮಂಗಳೂರು ಸ್ಫೋಟ | ಪಿಎಫ್‌ಐ ನಾಯಕರ ಜತೆ ಶಾರಿಕ್‌ ನಂಟು ತನಿಖೆ - Vistara News

ಕ್ರೈಂ

ಮಂಗಳೂರು ಸ್ಫೋಟ | ಪಿಎಫ್‌ಐ ನಾಯಕರ ಜತೆ ಶಾರಿಕ್‌ ನಂಟು ತನಿಖೆ

VISTARANEWS.COM


on

shariq matheen
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ನಿಷೇಧಿತ ಪಿಎಫ್‌ಐ ಸಂಘಟನೆ ನಾಯಕರ ಜೊತೆ ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಆರೋಪಿ ಶಾರಿಕ್ ನಂಟು ಹೊಂದಿದ್ದನೇ ಎಂಬ ದಿಕ್ಕಿನಲ್ಲಿ ತನಿಖೆ ಮುಂದುವರಿದಿದೆ.

ತಮಿಳುನಾಡಿನಲ್ಲಿ ಶಾರಿಕ್‌ಗೆ ಮಾಜಿ ಪಿಎಫ್ಐ ನಾಯಕರು ಸಾಥ್ ನೀಡಿದ್ದ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರಿಂದ ಮಾಜಿ ಪಿಎಫ್‌ಐ ನಾಯಕರ ತನಿಖೆ ನಡೆಯುತ್ತಿದೆ. ಕೊಯಮತ್ತೂರು ಬಾಂಬ್ ಸ್ಫೋಟದಲ್ಲೂ ಮಾಜಿ ಪಿಎಫ್‌ಐ ನಾಯಕರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಅಕ್ಟೋಬರ್ 23ರಂದು ಕೊಯಮತ್ತೂರಿನ ಸಂಗಮೇಶ್ವರ ದೇವಸ್ಥಾನ ಬಳಿ ಕಾರ್ ಬಾಂಬ್ ಸ್ಫೋಟವಾಗಿತ್ತು.

ಕೊಯಮತ್ತೂರಿನಲ್ಲಿ ಕೆಲ ಮಾಜಿ ಪಿಎಫ್‌ಐ ನಾಯಕರನ್ನು ಶಾರಿಕ್ ಭೇಟಿಯಾಗಿದ್ದ ಮಾಹಿತಿಯಿದೆ. ಜೊತೆಗೆ 1998ರ ಕೊಯಮತ್ತೂರು ಬಾಂಬ್ ಬ್ಲಾಸ್ಟ್ ರೂವಾರಿಯ ಸಂಬಂಧಿಯನ್ನು ಈತ ಭೇಟಿಯಾದ ಅನುಮಾನವಿದೆ. 1998ರ ಕೊಯಮತ್ತೂರು ಬಾಂಬ್ ಬ್ಲಾಸ್ಟ್ ರೂವಾರಿ ಎಸ್‌‌.ಎ.ಬಾಷಾ ಸಂಬಂಧಿ ಮುಹಮ್ಮದ್ ತಲ್ಕನನ್ನು ಶಾರಿಕ್‌ಗೆ ಮೋಸ್ಟ್ ವಾಂಟೆಡ್‌ ಅಬ್ದುಲ್ ಮತೀನ್‌ ಪರಿಚಯಿಸಿದ್ದಾನೆ. ತಮಿಳುನಾಡು ಹಿಂದೂ ಮುಖಂಡನ ಹತ್ಯೆಯಲ್ಲಿ ಮತೀನ್ ಹೆಸರು ಕೇಳಿ ಬಂದಿತ್ತು. ತಮಿಳುನಾಡಿನ ಹಲವು ಉಗ್ರ ಜಾಲಗಳ ಸಂಪರ್ಕವನ್ನು ಮತೀನ್ ಹೊಂದಿದ್ದಾನೆ. ಈ ಜಾಲವನ್ನು ಶಾರಿಕ್‌ಗೆ ಮತೀನ್ ಕನೆಕ್ಟ್‌ ಮಾಡಿರುವ ಶಂಕೆಯಿದ್ದು, ತಮಿಳುನಾಡು ಪೊಲೀಸರಿಂದಲೂ ತನಿಖೆ ಮುಂದುವರಿದಿದೆ.

ಇದನ್ನೂ ಓದಿ | ಮಂಗಳೂರು ಸ್ಫೋಟ | ಉಗ್ರ ಶಾರಿಕ್‌ ಹಿಂದಿರುವ ಮೇನ್‌ ಹ್ಯಾಂಡ್ಲರ್‌ ಮತೀನ್‌ ತಾಹಾ: ಇವನ ಅಪ್ಪ ಒಬ್ಬರು ಸಜ್ಜನ ಮಾಜಿ ಸೈನಿಕ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

Road Accident : ಹಾಸನ ಹಾಗೂ ಯಾದಗಿರಿ, ಮಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ತಾಯಿ-ಮಗ ಮೃತಪಟ್ಟರೆ, ಯಾದಗಿರಿಯಲ್ಲಿ ಬೈಕ್‌ ಸವಾರರಿಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇತ್ತ ಮಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

VISTARANEWS.COM


on

By

Road Accident
Koo

ಹಾಸನ/ಯಾದಗಿರಿ: ಪ್ರತ್ಯೇಕ ಕಡೆಗಳಲ್ಲಿ ಸಂಭವಿಸಿದ ಅಪಘಾತದಲ್ಲಿ (Road Accident) ತಾಯಿ-ಮಗ ಸೇರಿ ಬೈಕ್‌ ಸವಾರರಿಬ್ಬರು, ಆಟೋ ಪ್ರಯಾಣಿಕ ದಾರುಣವಾಗಿ ಮೃತಪಟ್ಟಿದ್ದಾರೆ. ಐವರಿಗೆ ಗಂಭೀರ ಗಾಯಗೊಂಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಕೆಂಪುಹೊಳೆ ಸಮೀಪ ಇನೋವಾ ಕಾರು ಹಾಗೂ ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ನಾಲ್ವರಿಗೆ ಗಂಭೀರ ಗಾಯವಾಗಿದೆ. ಶಫೀಕ್ (20), ಸಫಿಯಾ (50) ಮೃತ ದುರ್ದೈವಿಗಳು.

ಕಂಟೇನರ್ ಲಾರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಇನೋವಾ ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಕೆಂಪುಹೊಳೆ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರು ಹಾಗೂ ಗಾಯಾಳುಗಳು ದಕ್ಷಿಣ ಕನ್ನಡದ ಬಂಟ್ವಾಳ ಮೂಲದವರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಛಿದ್ರವಾಗಿ ಬಿದ್ದಿದ್ದ ಕಾರನ್ನು ತೆರವುಗೊಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಯಾದಗಿರಿಯಲ್ಲಿ ಬೈಕ್‌ಗಳ ಡಿಕ್ಕಿ, ಇಬ್ಬರು ಸವಾರರು ಸಾವು

ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಿನ್ನೆ ಸೋಮವಾರ ಸಂಜೆ ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಸವಾರನಿಗೆ ಗಂಭೀಯ ಗಾಯವಾಗಿದೆ. ಗಾಯಾಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೈದಾಪುರದ ಸ್ವಾಮಿ ವಿವೇಕಾನಂದ ಶಾಲೆಯ ಮುಂಭಾಗ ಅಪಘಾತ ಸಂಭವಿಸಿದೆ. ಸೈದಾಪುರ ನಿವಾಸಿ ಮೌನೇಶ್ (24) ಹಾಗೂ ಕೊಂಡಾಪುರ ನಿವಾಸಿ ಅಶೋಕ್ (21) ಮೃತ ಬೈಕ್ ಸವಾರರು. ಸೈದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಆಟೋ-ಬೈಕ್‌ ಡಿಕ್ಕಿ, ಹಾರಿ ಬಿದ್ದ ಪ್ರಯಾಣಿಕ ಸಾವು

ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ‌ ರಭಸಕ್ಕೆ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಹಾರಿ ಬಿದ್ದಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಘಟನೆ ನಡೆದಿದೆ. ಮಹಮ್ಮದ್ ಅಲ್ತಾಫ್ (19) ಮೃತ ದುರ್ದೈವಿ.

ಮಹಮ್ಮದ್‌ ಆಟೋದಲ್ಲಿ ಸಜಿಪ ಕಡೆಯಿಂದ ಬಿಸಿರೋಡ್ ಕಡೆ ತೆರಳುತ್ತಿದ್ದರು. ಬಿಸಿರೋಡ್ ನಿಂದ ಪಾಣೆಮಂಗಳೂರು ಕಡೆಯಿಂದ ಬೈಕ್‌ ಬರುವಾಗ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತ ಸಂದರ್ಭದಲ್ಲಿ ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಬೈಕ್ ಸವಾರರಿಗೂ ಸಣ್ಣಪುಟ್ಟ ಗಾಯವಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Actress Murder: ಮೂಲಗಳ ಪ್ರಕಾರ ಆದರೆ ವಿದ್ಯಾ ಅವರು ಕಾಂಗ್ರೆಸ್‌ನಲ್ಲಿದ್ದರೂ ಕೆಲ ನಾಯಕರೊಂದಿಗೆ ಆಪ್ತರಾಗಿದ್ದುದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್‌ ಅವರನ್ನು ವಿವಾಹವಾಗಿದ್ದರು.

VISTARANEWS.COM


on

Mysuru News actress Vidhya Nandish congress leader killed by her husband
Koo

ಬೆಂಗಳೂರು: ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ (Actress Murder) ಭೀಕರವಾಗಿ ಕೊಲೆಯಾಗಿದ್ದಾರೆ. ವಿದ್ಯಾ ನಂದೀಶ್‌ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಇದೀಗ ಪತಿಯೇ ತನ್ನ ಪತ್ನಿಯನ್ನು (Vidhya Nandish) ಕೊಲೆ ಮಾಡಿದ್ದಾನೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

ಇನ್ನು ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು. ಮಾತ್ರವಲ್ಲ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿಭಾಯಿಸಿದ್ದರು. ಇದೀಗ ಕೌಟುಂಬಿಕ ಕಲಹದಿಂದಾಗಿ ನಟಿ ಹತ್ಯೆಯಾಗಿದ್ದಾರೆ. ಸಿನಿಮಾ ಮಾತ್ರವಲ್ಲ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ ಆದರೆ ವಿದ್ಯಾ ಅವರು ಕಾಂಗ್ರೆಸ್‌ನಲ್ಲಿದ್ದರೂ ಕೆಲ ನಾಯಕರೊಂದಿಗೆ ಆಪ್ತರಾಗಿದ್ದುದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್‌ ಅವರನ್ನು ವಿವಾಹವಾಗಿದ್ದರು.

ಇದನ್ನೂ ಓದಿ: Farmer Self Harming: ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

ವಿದ್ಯಾ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ವಿದ್ಯಾ ನಂದೀಶ್ ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆ ನೆಲೆಸಿದ್ದರು. ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾಗ ಗಲಾಟೆ ನಡೆದಿದೆ ಎನ್ನಲಾಗಿದೆ. ಪತಿ ಹಾಗೂ ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಅದು ವಿಕೋಪಕ್ಕೆ ಹೋಗಿದೆ ಕೊಲೆ ಸಂಭವಿಸಿದೆ ಎಂದು ವರದಿಯಾಗಿದೆ. ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್‌ ಹರಿತವಾದ ಆಯುಧದಿಂದ ಹೊಡೆದು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

Rameshwaram Cafe Blast: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ.

VISTARANEWS.COM


on

NIA raid rameshwaram cafe blast
Koo

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ನ (Whitefield) ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು (NIA Raid) ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ದೇಶಾದ್ಯಂತ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ಮಾತ್ರವಲ್ಲ ಕೊಯಮತ್ತೂರಿನಲ್ಲಿಯೂ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಯಮತ್ತೂರ್ ವೈದ್ಯ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮತೀನ್‌, ಶಾಜಿಬ್‌ ಜೊತೆ ಶಾಮೀಲು

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಆರೋಪಿಗಳಾದ ಮತೀನ್ ಮತ್ತು ಶಾಜಿಬ್‌ಗೆ ಸಹಾಯ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಹಾಗೂ ಬನಶಂಕರಿಯಲ್ಲಿ ಒಟ್ಟು ನಾಲ್ಕು ಸ್ಥಳದಲ್ಲಿ ಎನ್ಐಎ ದಾಳಿ ಮಾಡಿ ದಾಖಲೆಗಳನ್ನು ಪಡೆದುಕೊಂಡಿದೆ. ಶಂಕಿತ ಉಗ್ರ ಮತೀನ್ ಬೆಂಗಳೂರಿಗೆ ಬಂದಾಗ ಸಹಾಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆತನೊಂದಿಗೆ ಸಂಪರ್ಕಕ್ಕೆ ಬಂದಿದ್ದವರ ಮನೆ ಹಾಗೂ ವಾಸಸ್ಥಳದ ಮೇಲೆ ದಾಳಿ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್‌ ಮೈಂಡ್‌ ಅಬ್ದುಲ್‌ ಮತೀನ್‌ ತಾಹ ಹಾಗೂ ಬಾಂಬ್‌ ಇರಿಸಿದ್ದ ಮುಸಾವಿರ್‌ ಹುಸೇನ್‌ ಶಾಜಿಬ್‌ರನ್ನು ಎನ್‌ಐಎ ಈಗಾಗಲೇ ಬಂಧಿಸಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಿ ಕೋಲ್ಕತ್ತಾದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದರು. ಬಂಧನದಿಂದ ಬಚಾವ್‌ ಆಗಲು ಇಬ್ಬರೂ ಕೂಡ ಸಾಕಷ್ಟು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದರು ಎನ್ನುವ ವಿವರ ಕೂಡ ಪತ್ತೆಯಾಗಿದೆ. ಬೇರೆ ಹೆಸರಿನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ಶಂಕಿತರು ಅಡಗಿದ್ದರು. ಎನ್ಐಎ ತನಿಖೆ ವೇಳೆ ನಕಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಅಬ್ದುಲ್‌ ಮತೀನ್‌ ತಾಹ, ಯಶ್‌ ಶಹನವಾಜ್‌ ಪಟೇಲ್‌ ಹೆಸರಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಂಡಿದ್ದರೆ, ಮುಸಾವಿರ್‌ ಹುಸೇನ್‌ ಶಾಜಿಬ್‌, ಅನ್ಮೋಲ್‌ ಕುಲಕರ್ಣಿ ಎನ್ನುವ ಹಿಂದು ಹೆಸರಲ್ಲಿ ಆಧಾರ್‌ ಕಾರ್ಡ್‌ ರಚಿಸಿಕೊಂಡಿದ್ದ.

ಇಬ್ಬರೂ ಕೂಡ ಕೋಲ್ಕತ್ತಾದ ಪ್ಯಾರಡೈಸ್ ಹೋಟೆಲ್‌ಗೆ ನಕಲಿ ದಾಖಲೆ ನೀಡಿ ವಾಸ್ತವ್ಯ ಮಾಡಿದ್ದರು. ದಾಳಿ ವೇಳೆ ನಕಲಿ ದಾಖಲೆಗಳನ್ನು ಎನ್‌ಐಎ ವಶಕ್ಕೆ ಪಡೆದಾಗ ಈ ಮಾಹಿತಿ ಪತ್ತೆಯಾಗಿದೆ. ನಕಲಿ ದಾಖಲೆಗಳನ್ನು ಎನ್‌ಐಎ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ್ದಾರೆ. ಉಗ್ರರು ತಲೆಮರೆಸಿಕೊಂಡಿದ್ದ ಸಂಪೂರ್ಣ ಮಾಹಿತಿ ಸಂಗ್ರಹವನ್ನೂ ಮಾಡಿದ್ದಾರೆ. 12 ದಿನ ಕೋಲ್ಕತ್ತದಲ್ಲಿದ್ದ ಇಬ್ಬರೂ ಉಗ್ರರು, ಮೂರು ನಾಲ್ಕು ದಿನಕ್ಕೊಮ್ಮೆ ಸ್ಥಳವನ್ನು ಬದಲಾವಣೆ ಮಾಡುತ್ತಿದ್ದರು.

ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರು ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾದ ಬಳಿಕ ಪುನಃ 7 ದಿನ ಕಸ್ಟಡಿಗೆ ಪಡೆಯಲಾಗಿತ್ತು. ನಂತರ ಮತ್ತೆ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾರ್ಚ್ 1ರಂದು ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರಸಹಿತ 9 ಜನರು ಗಾಯಗೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಹಲವೆಡೆ ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಸುಮಾರು 40 ದಿನಗಳ ಬಳಿಕ ಕೋಲ್ಕೊತಾದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

Continue Reading

ಕೊಡಗು

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Love Case : ಮಗಳನ್ನು ಪ್ರೀತಿಸುತ್ತಿದ್ದ ಯುವಕ ಮನೆಗೆ ಬಂದಿದ್ದಕ್ಕೆ ಮುಖಕ್ಕೆ ಬಿಸಿ ನೀರು ಎರಚಿ ಯುವತಿ ತಂದೆ ವಿಕೃತಿ ಮೆರೆದಿದ್ದಾರೆ. ಸುಟ್ಟ ಗಾಯಗಳಿಂದ ಯುವ ಪ್ರೇಮಿ ಆಸ್ಪತ್ರೆ ಪಾಲಾಗಿದ್ದಾನೆ.

VISTARANEWS.COM


on

By

Love Case Father throws hot water on man who loved his daughter for coming home
Koo

ಕೊಡಗು: ಮಗಳನ್ನು ಪ್ರೀತಿಸುತ್ತಿದ್ದ (Love Case) ಯುವಕನಿಗೆ ಬಿಸಿ ನೀರು ಎರಚಿ ಯುವತಿ ತಂದೆ ವಿಕೃತಿ ಮೆರೆದಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಮದೆನಾಡಿನಲ್ಲಿ ಘಟನೆ ನಡೆದಿದೆ. ಗಣಪತಿ ಬೀದಿ ನಿವಾಸಿ ಸುಹೇಲ್ ಎಂಬಾತ ಆಸ್ಪತ್ರೆಗೆ ದಾಖಲಾದ ಪ್ರೇಮಿಯಾಗಿದ್ದಾನೆ.

ಸುಹೇಲ್‌ಗೆ ಮದೆನಾಡಿನ ಯುವತಿಯೊಂದಿಗೆ ಪ್ರೇಮಾಂಕುರವಾಗಿತ್ತು. ಇಬ್ಬರು ಕೈ-ಕೈ ಹಿಡಿದು ಊರೆಲ್ಲ ಓಡಾಡಿದ್ದರು. ಇವರಿಬ್ಬರ ಪ್ರೀತಿ ವಿಚಾರವು ಯುವತಿ ಮನೆಯವರಿಗೆ ತಿಳಿದುಹೋಗಿತ್ತು. ಇವರಿಬ್ಬರ ಪ್ರೀತಿಗೆ ನಿರಾಕರಿಸಿದ್ದರು. ಇತ್ತ ಯುವತಿ ಸುಹೇಲ್‌ಗೆ ಫೋನ್‌ ಮಾಡಿ ಮನೆಯಲ್ಲಿ ಹಿಂಸೆಯಾಗುತ್ತಿದೆ. ಮನೆಗೆ ಬಂದು ನನ್ನನ್ನು ಕರೆದುಕೊಂಡು ಹೋಗು ಎಂದಿದ್ದಾಳೆ.

ಪ್ರೀತಿಸಿದವಳು ಈ ಪರಿ ಹಿಂಸೆ ಪಡುತ್ತಿರುವ ವಿಷಯ ತಿಳಿದ ಸುಹೇಲ್‌ ಗಟ್ಟಿ ಮನಸ್ಸು ಮಾಡಿ, ಆಕೆಯ ಮನೆಗೆ ಹೋಗಿದ್ದಾನೆ. ಸುಹೇಲ್‌ ಮನೆಯೊಳಗೆ ಕಾಲಿಡುತ್ತಿದ್ದಂತೆ ಸಿಟ್ಟಾದ ಯುವತಿ ತಂದೆ ಏಕಾಏಕಿ ಕೊತ ಕೊತ ಅಂತ ಕುದಿಯುತ್ತಿದ್ದ ನೀರನ್ನು ಎರಚಿದ್ದಾರೆ. ಬಿಸಿ ನೀರು ಎರಚಿದ್ದರಿಂದ ಸುಹೇಲ್‌ನ ಮುಖ ಹಾಗೂ ಕುತ್ತಿಗೆ ಭಾಗವೆಲ್ಲ ಸುಟ್ಟು ಹೋಗಿದೆ.

ಸದ್ಯ ಸುಹೇಲ್‌ಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಾಶತ್‌ ಸುಹೇಲ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಟ್ಟುಗಾಯಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸದ್ಯ ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌

ಉತ್ತರಪ್ರದೇಶ: ಸೊಸೆ ಮೇಲೆ ಅತ್ತೆ ಮತ್ತು ನಾದಿನಿ ಸೇರಿಕೊಂಡು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶ(Uttar Pradesh)ದ ಇಟಾ ಪ್ರದೇಶದಲ್ಲಿ ನಡೆದಿದೆ. ವಿಚಿತ್ರವೆಂದರೆ ಮಹಿಳೆಯ ಪತಿ, ತನ್ನ ತಾಯಿ ಮತ್ತು ತಂಗಿಯನ್ನು ತಡೆಯುವ ಬದಲು ವಿಡಿಯೋ ರೆಕಾರ್ಡ್‌(Video record) ಮಾಡಿದ್ದಾನೆ. ಬಿಟ್ಟು ಬಿಡುವಂತೆ ಎಷ್ಟೇ ಗೋಗರೆದರೂ ಕೇಳದೆ ಮಹಿಳೆ ಮೇಲೆ ಬಹಳ ಕ್ರೂರವಾಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌(Viral Video) ಆಗಿದೆ.

ಇಟಾದಲ್ಲಿ ಈ ಘಟನೆ ನಡೆದಿದ್ದು, ಸೊಸೆಯನ್ನು ಅತ್ತೆ ಮತ್ತು ನಾದಿನಿ ಸೇರಿಕೊಂಡು ಚೆನ್ನಾಗಿ ಥಳಿಸಿದ್ದು, ಬಳಿಕ ಆಕೆಯನ್ನು ನೆಲದಲ್ಲಿ ಎಳೆದಾಡಿದ್ದಾರೆ. ಅಲ್ಲೇ ಇದ್ದ ಪತಿ ಮತ್ತು ಮಾವನ ಬಳಿ ಸಹಾಯಕ್ಕಾಗಿ ಆಕೆ ಎಷ್ಟೇ ಅಂಗಲಾಚಿದರೂ ಆಕೆ ಮೇಲೆ ನಡೆಯುತ್ತಿದ್ದ ಮಾರಣಾಂತಿಕ ಹಲ್ಲೆ ಮಾತ್ರ ನಿಲ್ಲುವುದೇ ಇಲ್ಲ. ಮಹಿಳೆಯ ಜೋರಾಗಿ ಕಿರುಚಿಕೊಂಡು ಬಿಟ್ಟು ಬಿಡಿ ಎಂದು ಬೇಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಕೈಹಿಡಿದು ರಕ್ಷಿಸಬೇಕಿದ್ದ ಪತಿಯೇ ಆಕೆಯ ಸಹಾಯಕ್ಕೆ ಬಾರದೇ ಬರೀ ವಿಡಿಯೋ ಮಾಡುತ್ತಾ ನಿಂತಿದ್ದ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ. ಇಂತಹ ಕ್ರೂರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪೊಲೀಸರು ಸ್ವಯಂಪ್ರೇರಿತರಾಗಿ ದೂರ ದಾಖಲಿಸಿಕೊಂಡು ಆರೋಪಿಗಳನ್ನು ತಕ್ಷಣ ಅರೆಸ್ಟ್‌ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
L2 Empuraan first look poster shared by Prithviraj Sukumaran
South Cinema6 mins ago

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

Shane Watson Apologize
ಕ್ರಿಕೆಟ್23 mins ago

Shane Watson Apologize: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಶೇನ್​ ವಾಟ್ಸನ್

Viral Video
ವೈರಲ್ ನ್ಯೂಸ್24 mins ago

Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

DK Shivakumar speaks about KPCC president post
ಬೆಂಗಳೂರು27 mins ago

‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

Chitta Ranjan Dash
ದೇಶ56 mins ago

Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

Road Accident
ಕ್ರೈಂ58 mins ago

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

DK Shivakumar statement in KPCC. no leadership if the booth lead is not given DK Shivakumar warns leaders
ರಾಜಕೀಯ1 hour ago

‌DK Shivakumar: ಬೂತ್ ಲೀಡ್ ಕೊಡಿಸದಿದ್ದರೆ ನಾಯಕತ್ವ ಇಲ್ಲ; ಜಾಗ ಖಾಲಿ ಮಾಡಿ: ಮುಖಂಡರಿಗೆ ಡಿಕೆಶಿ ವಾರ್ನಿಂಗ್

Mysuru News actress Vidhya Nandish congress leader killed by her husband
ಕ್ರೈಂ1 hour ago

Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Anant Ambani Radhika 2nd pre wedding bash
ಬಾಲಿವುಡ್2 hours ago

Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

NIA raid rameshwaram cafe blast
ಪ್ರಮುಖ ಸುದ್ದಿ2 hours ago

Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌