ಜಾತ್ರೆ ಸೀಸನ್‌ಗೂ ಮುನ್ನ ಶುರುವಾಯಿತು ಧರ್ಮ ದಂಗಲ್, ಅನ್ಯಮತೀಯರ ವ್ಯಾಪಾರ ತಡೆಯಲು ಆಗ್ರಹ - Vistara News

ಕರ್ನಾಟಕ

ಜಾತ್ರೆ ಸೀಸನ್‌ಗೂ ಮುನ್ನ ಶುರುವಾಯಿತು ಧರ್ಮ ದಂಗಲ್, ಅನ್ಯಮತೀಯರ ವ್ಯಾಪಾರ ತಡೆಯಲು ಆಗ್ರಹ

ದೇವಸ್ಥಾನದ ಜಾತ್ರಾ ಮಹೋತ್ಸವಗಳು ನಡೆಯುವ ಸಂದರ್ಭದಲ್ಲಿ ಹಿಂದುಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ.

VISTARANEWS.COM


on

dharma dangal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮತ್ತೆ ʻಧರ್ಮ ದಂಗಲ್‌ʼ ಆರಂಭವಾಗಿದೆ. ದೇವಸ್ಥಾನದ ಜಾತ್ರಾ ಮಹೋತ್ಸವಗಳು ನಡೆಯುವ ಸಂದರ್ಭದಲ್ಲಿ ಹಿಂದುಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ಇದೇ ತಿಂಗಳು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಚಂಪಾಷಷ್ಠಿ ಆಚರಣೆಯಲ್ಲಿಯೂ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಮನವಿ ಮಾಡಿಕೊಳ್ಳಲಾಗಿತ್ತು. ಇದೀಗ ಇತರ ಜಾತ್ರಾ ಮಹೋತ್ಸವಗಳಲ್ಲಿಯೂ ಹಿಂದು ಧರ್ಮದವರನ್ನು ಹೊರತು ಪಡಿಸಿ ಬೇರೆ ಧರ್ಮದವರಿಗೆ ವ್ಯಾಪಾರ ಮಾಡಲು ಅವಕಾಶ ನೀಡದಂತೆ ಹಿಂದೂ ಜನಜಾಗೃತಿ ಸಮಿತಿ ಅಧ್ಯಕ್ಷ ಮೋಹನ್ ಗೌಡ ಎಂಬವರು ಧಾರ್ಮಿಕ ದತ್ತಿ‌ ಇಲಾಖೆಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಕಡಲೆಕಾಯಿ ಪರಿಷೆಯಲ್ಲಿ ಅನ್ಯಧರ್ಮಿಯರು ವ್ಯಾಪಾರ ವಹಿವಾಟುಗಳಲ್ಲಿ ಭಾಗಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಭಾಗದಲ್ಲಿ ಜಾತ್ರಾ ಮಹೋತ್ಸವಗಳು ಶುರುವಾಗಲಿವೆ. 2002ರ ಧಾರ್ಮಿಕ ದತ್ತಿ ಇಲಾಖೆ ಕಾಯಿದೆಯಲ್ಲಿಯೂ ಈ ಬಗ್ಗೆ ಉಲ್ಲೇಖವಿದೆ. ಹೀಗಾಗಿ ಜಾತ್ರೆ ಸಂದರ್ಭದಲ್ಲಿ ದೇವಸ್ಥಾನದ ಆವರಣದಲ್ಲಿ ಹಿಂದುಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಕಳೆದ ವರ್ಷವೂ, ದೇವಸ್ಥಾನದ ನಿಗದಿತ ಅಂಗಡಿಗಳ ಏಲಂನಲ್ಲಿ ಅನ್ಯ ಧರ್ಮೀಯರು ಪಾಲ್ಗೊಳ್ಳಲು ಅವಕಾಶವಿರಬಾರದು ಎಂದು ಆಗ್ರಹಿಸಲಾಗಿತ್ತು. ಹಿಂದು ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳಲ್ಲೇ ಈ ವಿಚಾರ ಉಲ್ಲೇಖವಾಗಿರುವುದನ್ನು ಬೊಟ್ಟು ಮಾಡಲಾಗಿತ್ತು. ಅದರ ಜತೆಯೇ ಹಿಂದು ದೇವಳಗಳ ಜಾತ್ರೆ ಸಂದರ್ಭದಲ್ಲಿ ಅನ್ಯಮತೀಯರಿಗೆ ಅಂಗಡಿ ಇಡಲು ಅವಕಾಶ ನೀಡಬಾರದು ಎಂಬ ವಾದ ಜೋರಾಗಿ ಕೇಳಿಬಂದಿತ್ತು. ಈ ವರ್ಷವೂ ಈ ʻಧರ್ಮ ದಂಗಲ್‌ʼ ಆರಂಭವಾಗಿದೆ.

ಇದನ್ನೂ ಓದಿ | Kukke subrahmanya | ಕುಕ್ಕೆ ಕ್ಷೇತ್ರದಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಿರ್ಬಂಧ: ಜಾಗರಣ ವೇದಿಕೆ ಮನವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Road Accident: ಕುಡಿದ ಮತ್ತಿನಲ್ಲಿ ಕಾರು ಹರಿಸಿದ ಚಾಲಕ, ಒಬ್ಬನ ಸಾವು, ಇಬ್ಬರಿಗೆ ಗಾಯ

Road Accident: ಜಿಗಣಿ- ಬೆಂಗಳೂರು ಮುಖ್ಯರಸ್ತೆಯ ಜಂಗಲ್ ಪಾಳ್ಯ ಬಳಿ ಈ ಭೀಕರ ಅಪಘಾತ ನಡೆದಿದೆ. ಜಿಗಣಿ ಕಡೆಯಿಂದ ಬೆಂಗಳೂರು ಮಾರ್ಗವಾಗಿ ಹೋಗುತ್ತಿದ್ದ ಇಟಿಯೋಸ್‌ ಕಾರನ್ನು ಕುಡಿದ ಮತ್ತಿನಲ್ಲಿ ಚಲಾಯಿಸುತ್ತಿದ್ದ ಚಾಲಕ ಪಾದಚಾರಿಗಳ ಮೇಲೆ ಹರಿಸಿದ್ದಾನೆ.

VISTARANEWS.COM


on

Road Accident jigani anekal
Koo

ಆನೇಕಲ್: ಕುಡಿದ ಮತ್ತಿನಲ್ಲಿ (Drink and drive) ವ್ಯಕ್ತಿಯೊಬ್ಬ ಕಾರು ಚಲಾಯಿಸಿದ (Car Accident) ಪರಿಣಾಮ ಭೀಕರ ಅಪಘಾತ (Road Accident) ಸಂಭವಿಸಿದ್ದು, ಒಬ್ಬ ಸ್ಥಳದಲ್ಲಿಯೇ ಸಾವಿಗೀಡಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಜಿಗಣಿ- ಬೆಂಗಳೂರು ಮುಖ್ಯರಸ್ತೆಯ ಜಂಗಲ್ ಪಾಳ್ಯ ಬಳಿ ಈ ಭೀಕರ ಅಪಘಾತ ನಡೆದಿದೆ. ಜಿಗಣಿ ಕಡೆಯಿಂದ ಬೆಂಗಳೂರು ಮಾರ್ಗವಾಗಿ ಹೋಗುತ್ತಿದ್ದ ಇಟಿಯೋಸ್‌ ಕಾರನ್ನು ಕುಡಿದ ಮತ್ತಿನಲ್ಲಿ ಚಲಾಯಿಸುತ್ತಿದ್ದ ಚಾಲಕ ಪಾದಚಾರಿಗಳ ಮೇಲೆ ಹರಿಸಿದ್ದಾನೆ. ಪರಿಣಾಮ ಕುಮಾರ್ (40) ಎಂಬವರು ಮೃತಪಟ್ಟಿದ್ದಾರೆ. ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತ ನಡೆಸಿದ ಕುಡುಕ ಕಾರು ಚಾಲಕನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಕಸದ ಲಾರಿಗೆ ಇಬ್ಬರು ಬಲಿ

ಬೆಂಗಳೂರು: ರಾಜಧಾನಿಯಲ್ಲಿ ಬಿಬಿಎಂಪಿ ಕಸದ ಲಾರಿ ಮತ್ತೆರಡು ಬಲಿ ಪಡೆದುಕೊಂಡಿದೆ. ನಗರದ ಹೃದಯ ಭಾಗದ ಕೆಆರ್ ಸರ್ಕಲ್ ಬಳಿ ಈ ದುರ್ಘಟನೆ ನಡೆದಿದೆ.

ರಾತ್ರಿ 8.45ರ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. ಪ್ರಶಾಂತ್ (25), ಬಯನ್ನಗಾರಿ ಶಿಲ್ಪ (27) ಮೃತ ದುರ್ದೈವಿಗಳು. ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿಯ ಯುವಕ. ಶಿಲ್ಪ ಆಂಧ್ರ ಮೂಲದವಳು. ಪ್ರಶಾಂತ್ ಮತ್ತು ಯುವತಿ ಇಬ್ಬರು ಸಹೋದ್ಯೋಗಿಗಳಾಗಿದ್ದು, ಐಟಿಪಿಎಲ್ ಟಿಸಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪಿಜಿಯಲ್ಲಿ ವಾಸ ಮಾಡುತ್ತಿದ್ದ ಯುವತಿ ಶಿಲ್ಪ, ಊಟಕ್ಕೆ ಎಂದು ಹೊರಗೆ ಬಂದಾಗ ಅಪಘಾತವಾಗಿದೆ.

ಮೆಜೆಸ್ಟಿಕ್‌ದ ಕೆಆರ್ ಸರ್ಕಲ್ ಮಾರ್ಗವಾಗಿ ಇವರಿಬ್ಬರೂ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆಆರ್ ಸರ್ಕಲ್ ಕಡೆ ಕಸದ ಲಾರಿ ತೀವ್ರ ವೇಗದಿಂದ ಬಂದಿದೆ. ತಿರುವು ಇದ್ದ ಮಾರ್ಗದಲ್ಲಿ ಲಾರಿ ವೇಗವಾಗಿ ಬಂದ ಕಾರಣ ಕಸದ ಲಾರಿಯ ವೇಗದಿಂದ ತಪ್ಪಿಸಿಕೊಳ್ಳಲಾಗದೇ ಬೈಕ್‌ ಲಾರಿ ಕೆಳಗೆ ಸಿಲುಕಿಕೊಂಡಿದೆ.

ಮೃತರ ಮೇಲೆ ಹರಿದ ಕಸದ ಲಾರಿ ಸುಮಾರು 10 ಮೀಟರ್‌ನಷ್ಟು ದೂರ ದೇಹಗಳನ್ನು ಎಳೆದೊಯ್ದಿದೆ. ರಸ್ತೆ ಮೇಲೆ ರಕ್ತ ಚೆಲ್ಲಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಅಪಘಾತದ ಬಳಿಕ ಕಸದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಕೂಡಲೇ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗದಲ್ಲಿಯೇ ಇಬ್ಬರೂ ಮೃತ ಪಟ್ಟರು. ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಒಯ್ಯಲಾಗಿದೆ.

ಸ್ಥಳಕ್ಕೆ ಹಲಸೂರು ಗೇಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗನನ್ನು ಕಳೆದುಕೊಂಡು ತಂದೆ ತಾಯಿ ಕಣ್ಣೀರು ಹಾಕಿದ್ದು, ಆಸ್ಪತ್ರೆಯಲ್ಲಿ ಪ್ರಶಾಂತ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. “ಬಿಬಿಎಂಪಿ ವಾಹನ ಅಪಘಾತ ಆಗಿದೆ. ನನ್ನ ಮಗ ಹಾಗೂ ಯುವತಿ ಸಾವನ್ನಪ್ಪಿದ್ದಾರೆ. ಮೊದಲು ಪೊಲೀಸರು ಸರಿಯಾಗಿ ರೆಸ್ಪಾನ್ಸ್ ಕೂಡ ಮಾಡಿಲ್ಲ. ನಮಗೆ ನ್ಯಾಯ ಬೇಕಾಗಿದೆ. ಅಪಘಾತ ಮಾಡಿದ ಚಾಲಕನ ಬಂಧನ ಆಗಬೇಕು. ನ್ಯಾಯ ಸಿಗದಿದ್ದರೆ ನಾನು ನನ್ನ ಪತ್ನಿ ಮತ್ತು ಮಗಳು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ತೇವೆ. ನನ್ನ ಮಗ ಮಾರ್ಥಾಸ್ ಆಸ್ಪತ್ರೆಯಲ್ಲಿಯೇ ಜನಿಸಿದ್ದ. ಇದೇ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ” ಎಂದು ಮೃತ ಪ್ರಶಾಂತ್ ತಂದೆ ಲೋಕೇಶ್ ಹೇಳಿದ್ದಾರೆ.

ಇದನ್ನೂ ಓದಿ: Peenya flyover: ಇಂದಿನಿಂದ ಪೀಣ್ಯ ಮೇಲ್ಸೇತುವೆ ಎಲ್ಲ ವಾಹನಗಳಿಗೆ ಮುಕ್ತ

Continue Reading

ಪ್ರಮುಖ ಸುದ್ದಿ

Peenya flyover: ಇಂದಿನಿಂದ ಪೀಣ್ಯ ಮೇಲ್ಸೇತುವೆ ಎಲ್ಲ ವಾಹನಗಳಿಗೆ ಮುಕ್ತ

Peenya flyover: ಮೇಲ್ಸೇತುವೆ ವಿಶೇಷ ದುರಸ್ತಿ ಕಾಮಗಾರಿ ಇನ್ನೂ ಪ್ರಗತಿಯಲ್ಲಿರುವುದರಿಂದ ಪ್ರತಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಭಾರಿ ವಾಹನಗಳ ಓಡಾಟ ನಿಷೇಧಿಸಲಾಗಿದೆ. ಉಳಿದ ದಿನ ಎಲ್ಲಾ ವಾಹನಗಳು ಪ್ಲೈ ಓವರ್ ಮೇಲೆ ಓಡಾಟ ಮಾಡಬಹುದು.

VISTARANEWS.COM


on

peenya flyover
Koo

ಬೆಂಗಳೂರು: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bangalore- Tumkur Highway) ಸಂಚರಿಸುವ ವಾಹನ ಸವಾರರು ಇಂದಿನಿಂದ ನಿರಾಳ. ಇಂದಿನಿಂದ (ಜುಲೈ 29) ಪೀಣ್ಯ ಫ್ಲೈ ಓವರ್ (Peenya flyover) ಮೇಲೆ ಭಾರಿ ವಾಹನ ಸೇರಿ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಪ್ರತಿ ಶುಕ್ರವಾರ ಮಾತ್ರ ಭಾರಿ ವಾಹನಗಳ (Heavy Vehicles) ಓಡಾಟ ನಿರ್ಬಂಧಿಸಲಾಗಿದೆ.

ಮೇಲ್ಸೇತುವೆ ವಿಶೇಷ ದುರಸ್ತಿ ಕಾಮಗಾರಿ ಇನ್ನೂ ಪ್ರಗತಿಯಲ್ಲಿರುವುದರಿಂದ ಪ್ರತಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಭಾರಿ ವಾಹನಗಳ ಓಡಾಟ ನಿಷೇಧಿಸಲಾಗಿದೆ. ಉಳಿದ ದಿನ ಎಲ್ಲಾ ವಾಹನಗಳು ಪ್ಲೈ ಓವರ್ ಮೇಲೆ ಓಡಾಟ ಮಾಡಬಹುದು. ಆದರೆ, ಭಾರಿ ವಾಹನಗಳು ಮಾತ್ರ ಮೇಲ್ಸೇತುವೆ ಎಡಪಥದಲ್ಲಿ ಗರಿಷ್ಠ 40 ಕಿ.ಮೀ ವೇಗ ಮಿತಿಯಲ್ಲಿ ಸಂಚರಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

ನಗರದ ತುಮಕೂರು ರಸ್ತೆಯಲ್ಲಿರುವ 15 ಮೀಟರ್ ಅಗಲದ, 4.2 ಕಿಮೀ ಉದ್ದದ ಮೇಲ್ಸೇತುವೆಯಲ್ಲಿ 2021ರ ಡಿಸೆಂಬರ್‌ನಿಂದ ಬಸ್‌ಗಳು ಮತ್ತು ಟ್ರಕ್‌ಗಳಂತಹ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಫ್ಲೈಓವರ್‌ನಲ್ಲಿ ಪ್ರಿಸ್ಟ್ರೆಸ್ಡ್ ಕೇಬಲ್‌ಗಳು ತುಕ್ಕು ಹಿಡಿದ ಹಿನ್ನೆಲೆಯಲ್ಲಿ ರಿಪೇರಿ ಮಾಡುವ ಅಗತ್ಯವಿತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 38.5 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ಕೇಬಲ್‌ಗಳ ಅಳವಡಿಕೆ ಕಾರ್ಯ ನಡೆದಿದೆ.

ಜನವರಿಯಲ್ಲಿ, 240 ಪ್ರಿಸ್ಟ್ರೆಸ್ಡ್ ಕೇಬಲ್‌ಗಳಲ್ಲಿ ಲೋಡ್ ಪರೀಕ್ಷೆಗಳನ್ನು ನಡೆಸಲು ಎನ್‌ಎಚ್‌ಎಐ 60 ಗಂಟೆಗಳ ಕಾಲ ಫ್ಲೈಓವರ್ ಮುಚ್ಚಿತ್ತು. ಸಮಿತಿಯ ಲೋಡ್ ಪರೀಕ್ಷೆಯ ಫಲಿತಾಂಶಗಳು ತೃಪ್ತಿಕರವಾಗಿದೆ ಎಂದು ತಜ್ಞರ ಸಮಿತಿಯ ಮುಖ್ಯಸ್ಥ, ಐಐಎಸ್‌ಸಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊ. ಚಂದ್ರ ಕಿಶನ್ ಹೇಳಿದ್ದರು. ಮಾರ್ಚ್‌ನಲ್ಲಿ, ಎನ್‌ಎಚ್‌ಎಐ 1,243 ಪ್ರಿಸ್ಟ್ರೆಸ್ಡ್ ಕೇಬಲ್‌ಗಳನ್ನು ಬದಲಾಯಿಸಲು ಪ್ರಾರಂಭಿಸಿತ್ತು. ಸದ್ಯ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದರಿಂದ ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶಗಳಲ್ಲಿ ಒಂದಾದ ಪೀಣ್ಯದಲ್ಲಿರುವ ಮೇಲ್ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ಎನ್‌ಎಚ್‌ಎಐ ಗ್ರೀನ್ ಸಿಗ್ನಲ್ ನೀಡಿದೆ.

ಫ್ಲೈಓವರ್ ನಿರ್ಬಂಧದಿಂದ ಕಳೆದ ಮೂರು ವರ್ಷಗಳಿಂದ ಕೆಳಗಿನ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿದೆ. ದಿನ ನಿತ್ಯದ ವಾಹನ ದಟ್ಟಣೆಯಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಎನ್‌ಎಚ್‌ಎಐ ಕಳೆದ ವರ್ಷ 38.5 ಕೋಟಿ ರೂಪಾಯಿಯಲ್ಲಿ ರಿಪೇರಿ ಕಾರ್ಯವನ್ನು ಪ್ರಾರಂಭಿಸಿತು. ಪ್ರತಿ ಸ್ಪ್ಯಾನ್‌ನಲ್ಲಿ ಎರಡು ಕೇಬಲ್‌ಗಳನ್ನು ಹೆಚ್ಚುವರಿ ಸ್ಲಾಟ್‌ಗಳಲ್ಲಿ ಸೇರಿಸಲು ಮತ್ತು ಮೇಲ್ಸೇತುವೆಯನ್ನು ಬಲಪಡಿಸಲು ಒತ್ತು ನೀಡಿತ್ತು.

ಜನವರಿಯಲ್ಲಿ, 240 ಪ್ರಿಸ್ಟ್ರೆಸ್ಡ್ ಕೇಬಲ್‌ಗಳಲ್ಲಿ ಲೋಡ್ ಪರೀಕ್ಷೆಗಳನ್ನು ನಡೆಸಲು ಎನ್‌ಎಚ್‌ಎಐ 60 ಗಂಟೆಗಳ ಕಾಲ ಫ್ಲೈಓವರ್ ಮುಚ್ಚಿತ್ತು. ಸಮಿತಿಯ ಲೋಡ್ ಪರೀಕ್ಷೆಯ ಫಲಿತಾಂಶಗಳು ತೃಪ್ತಿಕರವಾಗಿದೆ ಎಂದು ತಜ್ಞರ ಸಮಿತಿಯ ಮುಖ್ಯಸ್ಥ, ಐಐಎಸ್‌ಸಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊ. ಚಂದ್ರ ಕಿಶನ್ ಹೇಳಿದ್ದರು. ಮಾರ್ಚ್‌ನಲ್ಲಿ, ಎನ್‌ಎಚ್‌ಎಐ 1,243 ಪ್ರಿಸ್ಟ್ರೆಸ್ಡ್ ಕೇಬಲ್‌ಗಳನ್ನು ಬದಲಾಯಿಸಲು ಪ್ರಾರಂಭಿಸಿತ್ತು. 

ಇದನ್ನೂ ಓದಿ | Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

Continue Reading

ಬೆಂಗಳೂರು

Road Accident: ಬೆಂಗಳೂರಿನಲ್ಲಿ ಕಸದ ಲಾರಿಯ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿ

Road Accident: ರಾತ್ರಿ 8.45ರ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. ಪ್ರಶಾಂತ್ (25), ಬಯನ್ನಗಾರಿ ಶಿಲ್ಪ (27) ಮೃತ ದುರ್ದೈವಿಗಳು. ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿಯ ಯುವಕ. ಶಿಲ್ಪ ಆಂಧ್ರ ಮೂಲದವಳು. ಪ್ರಶಾಂತ್ ಮತ್ತು ಯುವತಿ ಇಬ್ಬರು ಸಹೋದ್ಯೋಗಿಗಳಾಗಿದ್ದು, ಐಟಿಪಿಎಲ್ ಟಿಸಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು.

VISTARANEWS.COM


on

bbmp lorry road accident
Koo

ಬೆಂಗಳೂರು: ರಾಜಧಾನಿಯಲ್ಲಿ ಬಿಬಿಎಂಪಿ ಕಸದ ಲಾರಿ (BBMP Lorry) ಮತ್ತೆರಡು ಬಲಿ (Road Accident) ಪಡೆದುಕೊಂಡಿದೆ. ನಗರದ ಹೃದಯ ಭಾಗದ ಕೆಆರ್ ಸರ್ಕಲ್ (KR Circle) ಬಳಿ ಈ ದುರ್ಘಟನೆ ನಡೆದಿದೆ. ಮೃತರಿಬ್ಬರೂ ಟೆಕ್ಕಿಗಳಾಗಿದ್ದು, ಟಿಸಿಎಸ್‌ನಲ್ಲಿ (TCS) ಕೆಲಸ ಮಾಡುತ್ತಿದ್ದರು.

ರಾತ್ರಿ 8.45ರ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. ಪ್ರಶಾಂತ್ (25), ಬಯನ್ನಗಾರಿ ಶಿಲ್ಪ (27) ಮೃತ ದುರ್ದೈವಿಗಳು. ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿಯ ಯುವಕ. ಶಿಲ್ಪ ಆಂಧ್ರ ಮೂಲದವಳು. ಪ್ರಶಾಂತ್ ಮತ್ತು ಯುವತಿ ಇಬ್ಬರು ಸಹೋದ್ಯೋಗಿಗಳಾಗಿದ್ದು, ಐಟಿಪಿಎಲ್ ಟಿಸಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪಿಜಿಯಲ್ಲಿ ವಾಸ ಮಾಡುತ್ತಿದ್ದ ಯುವತಿ ಶಿಲ್ಪ, ಊಟಕ್ಕೆ ಎಂದು ಹೊರಗೆ ಬಂದಾಗ ಅಪಘಾತವಾಗಿದೆ.

ಮೆಜೆಸ್ಟಿಕ್‌ದ ಕೆಆರ್ ಸರ್ಕಲ್ ಮಾರ್ಗವಾಗಿ ಇವರಿಬ್ಬರೂ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆಆರ್ ಸರ್ಕಲ್ ಕಡೆ ಕಸದ ಲಾರಿ ತೀವ್ರ ವೇಗದಿಂದ ಬಂದಿದೆ. ತಿರುವು ಇದ್ದ ಮಾರ್ಗದಲ್ಲಿ ಲಾರಿ ವೇಗವಾಗಿ ಬಂದ ಕಾರಣ ಕಸದ ಲಾರಿಯ ವೇಗದಿಂದ ತಪ್ಪಿಸಿಕೊಳ್ಳಲಾಗದೇ ಬೈಕ್‌ ಲಾರಿ ಕೆಳಗೆ ಸಿಲುಕಿಕೊಂಡಿದೆ.

ಮೃತರ ಮೇಲೆ ಹರಿದ ಕಸದ ಲಾರಿ ಸುಮಾರು 10 ಮೀಟರ್‌ನಷ್ಟು ದೂರ ದೇಹಗಳನ್ನು ಎಳೆದೊಯ್ದಿದೆ. ರಸ್ತೆ ಮೇಲೆ ರಕ್ತ ಚೆಲ್ಲಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಅಪಘಾತದ ಬಳಿಕ ಕಸದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಕೂಡಲೇ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗದಲ್ಲಿಯೇ ಇಬ್ಬರೂ ಮೃತ ಪಟ್ಟರು. ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಒಯ್ಯಲಾಗಿದೆ.

ಸ್ಥಳಕ್ಕೆ ಹಲಸೂರು ಗೇಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗನನ್ನು ಕಳೆದುಕೊಂಡು ತಂದೆ ತಾಯಿ ಕಣ್ಣೀರು ಹಾಕಿದ್ದು, ಆಸ್ಪತ್ರೆಯಲ್ಲಿ ಪ್ರಶಾಂತ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. “ಬಿಬಿಎಂಪಿ ವಾಹನ ಅಪಘಾತ ಆಗಿದೆ. ನನ್ನ ಮಗ ಹಾಗೂ ಯುವತಿ ಸಾವನ್ನಪ್ಪಿದ್ದಾರೆ. ಮೊದಲು ಪೊಲೀಸರು ಸರಿಯಾಗಿ ರೆಸ್ಪಾನ್ಸ್ ಕೂಡ ಮಾಡಿಲ್ಲ. ನಮಗೆ ನ್ಯಾಯ ಬೇಕಾಗಿದೆ. ಅಪಘಾತ ಮಾಡಿದ ಚಾಲಕನ ಬಂಧನ ಆಗಬೇಕು. ನ್ಯಾಯ ಸಿಗದಿದ್ದರೆ ನಾನು ನನ್ನ ಪತ್ನಿ ಮತ್ತು ಮಗಳು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ತೇವೆ. ನನ್ನ ಮಗ ಮಾರ್ಥಾಸ್ ಆಸ್ಪತ್ರೆಯಲ್ಲಿಯೇ ಜನಿಸಿದ್ದ. ಇದೇ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ” ಎಂದು ಮೃತ ಪ್ರಶಾಂತ್ ತಂದೆ ಲೋಕೇಶ್ ಹೇಳಿದ್ದಾರೆ.

ವಿಡಿಯೋ ಮಾಡುತ್ತಾ ನೇಣು ಹಾಕಿಕೊಂಡ ಮಹಿಳೆ

ಬೆಂಗಳೂರು: ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಲೈವವ ವಿಡಿಯೊ ಮಾಡಿಟ್ಟುಕೊಂಡು ಫ್ಯಾನ್​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ (Women Suicide) ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆಡಿದೆ. ಮಾನಸ(25)ಆತ್ಮಹತ್ಯೆ ಮಾಡಿಕೊಂಡು ಮಹಿಳೆ.

ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್​ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸ ಅಂದ್ರಹಳ್ಳಿ ಗಂಡನ ಮನೆಯಲ್ಲಿ ವಾಸವಿದ್ದರು. ಭಾನುವಾರ ಸಂಜೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಳಿಕ ದಿಲೀಪ್​ ಮನೆಯವರ ವಿರುದ್ಧ ಮಾನಸ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಎಂದು ಆರೋಪಿಸಿದ್ದಾರೆ. ಠಾಣೆ ಮುಂಭಾಗವೇ ಗಂಡನ ಕಡೆಯವರಿಗೆ ಹಲ್ಲೆ ನಡೆಸಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Puttamadegowda: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಅನಾರೋಗ್ಯದಿಂದ ನಿಧನ

Continue Reading

ಮಳೆ

Karnataka Weather : ಒಳನಾಡಿನಲ್ಲಿ ಬ್ರೇಕ್‌ ಕೊಟ್ಟು, ಕರಾವಳಿ- ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ

Karnataka Weather Forecast : ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆರಾಯ ಬ್ರೇಕ್‌ (Rain News) ಕೊಟ್ಟಿದ್ದು, ಕರಾವಳಿ-ಮಲೆನಾಡಿನಲ್ಲಿ ಭಾರಿ ವರ್ಷಧಾರೆಯಾಗುವ ಸಾಧ್ಯತೆ ಇದೆ. ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾದರೆ, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ಒಣ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಬೆಳಗಾವಿಯಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಯಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು,40-50 ಕಿ.ಮೀದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
India Maldives
ದೇಶ2 mins ago

India Maldives: ದುರಹಂಕಾರ ಬಿಟ್ಟು ಭಾರತಕ್ಕೆ ಧನ್ಯವಾದ ತಿಳಿಸಿದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಜು!

Rajendra Nagar Tragedy
ವೈರಲ್ ನ್ಯೂಸ್8 mins ago

Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಅವಾಂತರ; ದುರಂತದಿಂದ ಪಾರಾದವರ Video ಇಲ್ಲಿದೆ

Health Tips
ಆರೋಗ್ಯ9 mins ago

Health Tips: ಗ್ಯಾಸ್ಟ್ರಿಕ್‌, ಅಜೀರ್ಣ ಸಮಸ್ಯೆಗೆ ನಿಮ್ಮ ಮನೆಯಲ್ಲೇ ಇದೆ ಪರಿಣಾಮಕಾರಿ ಮದ್ದು!

Road Accident jigani anekal
ಬೆಂಗಳೂರು ಗ್ರಾಮಾಂತರ21 mins ago

Road Accident: ಕುಡಿದ ಮತ್ತಿನಲ್ಲಿ ಕಾರು ಹರಿಸಿದ ಚಾಲಕ, ಒಬ್ಬನ ಸಾವು, ಇಬ್ಬರಿಗೆ ಗಾಯ

India Pakistan War
ದೇಶ32 mins ago

India Pakistan War: ಭಾರತಕ್ಕೆ ನುಗ್ಗಿದ ಪಾಕ್‌ನ 600 ಕಮಾಂಡೋಗಳು; ನಡೆಯುತ್ತಾ ಮತ್ತೊಂದು ಯುದ್ಧ?

ITR Filing
ಮನಿ-ಗೈಡ್39 mins ago

ITR Filing: ಐಟಿಆರ್ ಸಲ್ಲಿಕೆ; ಜುಲೈ 31ರ ಗಡುವು ತಪ್ಪಿಸಿಕೊಂಡರೆ ಎಷ್ಟು ದಂಡ?

peenya flyover
ಪ್ರಮುಖ ಸುದ್ದಿ43 mins ago

Peenya flyover: ಇಂದಿನಿಂದ ಪೀಣ್ಯ ಮೇಲ್ಸೇತುವೆ ಎಲ್ಲ ವಾಹನಗಳಿಗೆ ಮುಕ್ತ

bbmp lorry road accident
ಬೆಂಗಳೂರು1 hour ago

Road Accident: ಬೆಂಗಳೂರಿನಲ್ಲಿ ಕಸದ ಲಾರಿಯ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿ

Lakshadweep Tour
Latest1 hour ago

Lakshadweep Tour: ಲಕ್ಷದ್ವೀಪದಲ್ಲಿ ಪ್ರವಾಸಿಗರನ್ನು ಸೆಳೆಯುವ ಪಂಚರತ್ನಗಳಿವು

Monsoon Healthy Cooking Tips
ಆರೋಗ್ಯ1 hour ago

Monsoon Healthy Cooking Tips: ಮಳೆಗಾಲದಲ್ಲಿ ಸೊಪ್ಪಿನ ಅಡುಗೆ ಮಾಡುವ ಮುನ್ನ ಈ ಎಚ್ಚರಿಕೆಗಳನ್ನು ವಹಿಸಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ14 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ16 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ18 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ19 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌