UPSC Results 2021: ನಂ.1 ರ‍್ಯಾಂಕ್‌ ಪಡೆದ ಶ್ರುತಿ ಶರ್ಮಾ ಸೋಷಿಯಲ್‌ ಮೀಡಿಯಾದಲ್ಲಿಯೂ ಆ್ಯಕ್ಟಿವ್ - Vistara News

ಉದ್ಯೋಗ

UPSC Results 2021: ನಂ.1 ರ‍್ಯಾಂಕ್‌ ಪಡೆದ ಶ್ರುತಿ ಶರ್ಮಾ ಸೋಷಿಯಲ್‌ ಮೀಡಿಯಾದಲ್ಲಿಯೂ ಆ್ಯಕ್ಟಿವ್

ನಾಗರಿಕ ಸೇವಾ ಪರೀಕ್ಷೆಯಲ್ಲಿ ದೇಶಕ್ಕೇ ಮೊದಲ ಸ್ಥಾನ ಪಡೆದ ಶ್ರುತಿ ತಮ್ಮ ಯಶಸ್ಸಿನ ಗುಟ್ಟನ್ನು ಇಲ್ಲಿ ಬಹಿರಂಗಪಡಿಸಿದ್ದಾರೆ.

VISTARANEWS.COM


on

UPSC Results 2021
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನಾಗರಿಕ ಸೇವಾ ಹುದ್ದೆಗಳಿಗೆ ಸಿದ್ಧತೆ ನಡೆಸುವುದು ಎಂದರೆ ಮೂರು ಹೊತ್ತೂ ಓದಬೇಕು. ಸೋಷಿಯಲ್‌ ಮೀಡಿಯಾ ಬಳಸಬಾರದು, ಹೀಗೆ ನಿಯಮಗಳ ಪಟ್ಟಿಯನ್ನು ಸಾಮಾನ್ಯವಾಗಿ ನೀಡಲಾಗುತ್ತದೆ. ಆದರೆ ಈ ಬಾರಿಯ ಫಲಿತಾಂಶದಲ್ಲಿ (UPSC Results 2021) ದೇಶದಲ್ಲಿಯೇ ನಂ.1 ಸ್ಥಾನ ಪಡೆದ ಶ್ರುತಿ ಶರ್ಮಾ ಓದುವಾಗ ಕೂಡ ಸೋಷಿಯಲ್‌ ಮೀಡಿಯಾ ಬಳಸುತ್ತಿದ್ದರಂತೆ!

ʼʼನಾನು ಅಭ್ಯಾಸ ನಡೆಸುವಾಗ ಸೋಷಿಯಲ್‌ ಮೀಡಿಯಾದಿಂದ ದೂರವೇನೂ ಉಳಿದಿರಲಿಲ್ಲ. ಆದರೆ ಅದರಲ್ಲಿಯೇ ಮುಳುಗಿರುತ್ತಿರಲಿಲ್ಲ. ಎಷ್ಟು ಬೇಕೋ ಅಷ್ಟು ಬಳಸುತ್ತಿದ್ದೆʼʼ ಎಂದು ಅವರು ಹೇಳಿದ್ದಾರೆ. ಅವರ ತಾಯಿ ರುಚಿ ಶರ್ಮಾ ಕೂಡ ಶ್ರುತಿ ಸೋಷಿಯಲ್‌ ಮೀಡಿಯಾ ಬಳಸುತ್ತಿದ್ದರು ಎಂದು ಒಪ್ಪಿಕೊಂಡಿದ್ದಾರೆ. ʼʼಆಕೆ ತಾನೇ ಕಷ್ಟ ಪಟ್ಟು ಓದಿದ್ದಾಳೆ. ಹೆಚ್ಚು ಸಮಯ ಓದುತ್ತಿದ್ದಳು, ನಾವೇ ಮಲಗಿ ನಿದ್ರೆ ಮಾಡು ಎಂದು ಒತ್ತಾಯಿಸಬೇಕಾಗಿತ್ತು. ಎಷ್ಟು ಬೇಕೋ ಅಷ್ಟು ಹೊತ್ತು ಸೋಷಿಯಲ್‌ ಮೀಡಿಯಾದಲ್ಲಿ ಕಾಲ ಕಳೆಯುತ್ತಿದ್ದಳು. ಮೋದಲಿನಿಂದಲೂ ಆಕೆ ಹಾಗೆಯೇ….ʼʼ ಎಂದು ಅವರು ವಿವರಿಸಿದ್ದಾರೆ.

ಇತಿಹಾಸದ ವಿದ್ಯಾರ್ಥಿನಿಯಾಗಿರುವ ಶ್ರುತಿ ಶರ್ಮಾ 2021ನೇ ಸಾಲಿನ ಫಲಿತಾಂಶ ಪ್ರಕಟವಾದ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುತ್ತೇನೆ ಎಂದು ಕಲ್ಪಿಸಿಕೊಂಡೂ ಇರಲಿಲ್ಲವಂತೆ. ಪಟ್ಟಿಯನ್ನು ಎರಡೆರಡು ಬಾರಿ ನೋಡಿ ನನ್ನ ಹೆಸರೇ ಮೊದಲಿದೆ ಎಂದು ಕನ್ಫರ್ಮ್‌ ಮಾಡಿಕೊಂಡೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

UPSC Results 2021

ಬರೆಯುವುದನ್ನು ಪ್ರ್ಯಾಕ್ಟೀಸ್‌ ಮಾಡಿದೆ
ಅಭ್ಯಾಸ ನಡೆಸುವಾಗ ಮುಖ್ಯವಾಗಿ ಸರಿಯಾಗಿ ಉತ್ತರವನ್ನು ಪ್ರೆಸೆಂಟ್‌ ಮಾಡುವುದನ್ನು ನಾನು ಪ್ರ್ಯಾಕ್ಟೀಸ್‌ ಮಾಡಿದೆ ಎಂದು ತಮ್ಮ ಯಶಸ್ಸಿನ ಗುಟ್ಟು ರಟ್ಟು ಮಾಡಿರುವ ಶ್ರುತಿ ಶರ್ಮಾ, ಕೋಚಿಂಗ್‌ ಪಡೆಯುವುದರ ಜತೆಗೆ ನಾನೇ ಪತ್ರಿಕೆಯನ್ನು ಓದಿ, ವಿಷಯಗಳನ್ನು ನೋಟ್ಸ್‌ ಮಾಡಿಕೊಳ್ಳುತ್ತಿದ್ದೆ, ಇದರಿಂದ ನನಗೆ ಈ ಯಶಸ್ಸು ಪಡೆಯಲು ಸಾಧ್ಯವಾಯಿತು ಎಂದಿದ್ದಾರೆ.
ಯುಪಿಎಸ್‌ಸಿ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ ವಿವರಣಾತ್ಮಕವಾದ ಉತ್ತರವನ್ನು ಬರೆಯಬೇಕಾಗಿರುತ್ತದೆ. ನಿಗದಿತ ಸಮುದಲ್ಲಿ ಸರಿಯಾದ ಉತ್ತರವನ್ನು ಬರೆಯುವುದು ಸವಾಲಿನ ವಿಷಯವಾಗಿರುತ್ತದೆ. ಕೇವಲ ಉತ್ತರಗೊತ್ತಿರುವುದಷ್ಟೇ ಅಲ್ಲ, ಅದನ್ನು ಸರಿಯಾಗಿ ಬರೆಯುವುದೂ ಕೂಡ ಮುಖ್ಯವಾಗಿರುತ್ತದೆ. ಜಾಸ್ತಿ ಬರೆಯಬೇಕಾಗಿರುವುದರಿಂದ ಇದನ್ನು ಅಭ್ಯಾಸ ಮಾಡಿಕೊಳ್ಳದ ಅನೇಕರು ವಿಫಲರಾಗುತ್ತಾರೆ. ಈ ವಿಷಯದ ಕಡೆಗೆ ಹೆಚ್ಚು ಗಮನ ನೀಡಿರುವುದು ಶ್ರುತಿಯವರ ಯಶಸ್ಸಿಗೆ ಕಾರಣವಾದ ವಿಷಯಗಳಲ್ಲಿ ಒಂದಾಗಿದೆ.

ತರಬೇತಿಯನ್ನೂ ಪಡೆದಿದ್ದರು!

ಶ್ರುತಿ ಶರ್ಮಾ ಸ್ನಾತಕೋತ್ತರ ಪದವಿ ಪಡೆಯಲು ಜೆಎನ್‌ಯು ಸೇರಿದ್ದರಾದರೂ ಅಲ್ಲಿ ಓದು ಮುಂದುವರಿಸಲು ಸಾಧ್ಯವಾಗಿರಲಿಲ್ಲ. ಮುಂದೆ ದಿಲ್ಲಿ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ (ಡಿಎಸ್‌ಇ)ನಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನಾಗರಿಕ ಸೇವಾ ಪರೀಕ್ಷೆ ಬರೆಯಬೇಕೆಂದೇ ಜಮಿಯಾ ಮಿಲಿಯಾ ಇಸ್ಲಾಮಿಯಾ ರೆಸಿಡೆಂನ್ಷಿಯಲ್‌ ಕೋಚಿಂಗ್‌ ಅಕಾಡೆಮಿಯನ್ನು ಸೇರಿದ್ದರು. ಈ ಬಾರಿ ಆಯ್ಕೆಯಾಗಿರುವ ಅಭ್ಯರ್ಥಿಗಳಲ್ಲಿ ಈ ಅಕಾಡೆಮಿಯ 23 ಅಭ್ಯರ್ಥಿಗಳಿದ್ದಾರೆ. ಇಲ್ಲಿ ಪರೀಕ್ಷೆ ಎದುರಿಸಲು ಸೂಕ್ತ ತರಬೇತಿಯನ್ನು ಪಡೆದುಕೊಂಡೆ ಎಂದು ಶ್ರುತಿ ಹೇಳಿದ್ದಾರೆ.

ಮುಂದೆ ತಮ್ಮ ರಾಜ್ಯ ಉತ್ತರ ಪ್ರದೇಶದಲ್ಲಿಯೇ ವೃತ್ತಿಜೀವನ ಆರಂಭಿಸಬೇಕೆಂದುಕೊಂಡಿರುವ ಶ್ರುತಿ ಶರ್ಮಾ, ಶಿಕ್ಷಣ ಮತ್ತು ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಬೇಕೆಂದುಕೊಂಡಿದ್ದಾರೆ. ನಾಗರಿಕ ಸೇವಾ ಪರೀಕ್ಷೆಗೆ ಓದಬೇಕಾಗಿರುವ ವಿಷಯಗಳು ಬಹಳವಾಗಿರುತ್ತವೆ. ಹೀಗಾಗಿ ಯಾರೊಬ್ಬರೂ ತಮ್ಮದೇ ಆದ ನೋಟ್ಸ್‌ , ಟಿಪ್ಪಣಿ ಸಿದ್ಧಮಾಡಿಕೊಂಡು ಓದಿದರೆ ಸಾಲದು. ಆದರೆ ಇದಕ್ಕೂ ಸಮಯವಿರಿಸಿಕೊಳ್ಳಬೇಕು. ತಮ್ಮದೇ ಆದ ತಂತ್ರಗಾರಿಕೆಯ ಮೂಲಕ ಪರೀಕ್ಷೆ ಎದುರಿಸಬೇಕು. ಎಲ್ಲದಕ್ಕಿಂತ ಮುಖ್ಯವಾಗಿ ಈ ಪರೀಕ್ಷೆಗೆ ಸಿದ್ಧತೆ ನಡೆಸಲು ತಾಳ್ಮೆ ಇರಬೇಕು ಎಂದು ಅವರು ಶ್ರುತಿ ಶರ್ಮಾ ವಿವರಿಸಿದ್ದಾರೆ.

UPSC Results 2021

ಅಭ್ಯರ್ಥಿಗಳಿಗೆ ಶ್ರುತಿ ನೀಡುವ ಸಲಹೆ ಏನು?
ನಾಗರಿಕ ಸೇವಾ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ನಿಮ್ಮ ಸಲಹೆ ಏನು ಎಂಬ ಪ್ರಶ್ನೆಗೆ ಉತ್ತರಿಸಿರುವ ಶ್ರುತಿ ʼʼನಿಮಗೇನಿಷ್ಟವೋ ಅದನ್ನೇ ಮಾಡಿ. ಈ ನಿಮ್ಮ ದೀರ್ಘಕಾಲದ ಸಿದ್ಧತೆಗೆ ಅದೇ ನಿಮಗೆ ಸ್ಫೂರ್ಥಿಯಾಗಿರುತ್ತದೆʼʼ ಎಂದಿದ್ದಾರೆ.

ಫೋಕಸ್‌ ಆಗಿ ಓದಿ

ಈ ಪರೀಕ್ಷೆಗೆ ಎಷ್ಟು ಹೊತ್ತು ಓದುತ್ತೇವೆ ಎನ್ನುವುದಕ್ಕಿಂತ ಯಾವ ವಿಷಯವನ್ನು ಎಷ್ಟು ಚೆನ್ನಾಗಿ ತಿಳಿದುಕೊಳ್ಳುತ್ತೇವೆ ಎಂಬುದು ಬಹಳ ಮುಖ್ಯ. ಎಲ್ಲದಕ್ಕಿಂತಲೂ ಓದುವುದು ಮುಖ್ಯ, ಎಷ್ಟು ಹೊತ್ತು ಓದಿದ್ದೇವೆ ಎಂಬುದಲ್ಲ. ವಿಷಯಗಳ ಓದಿಗೂ ನಾವೇ ಮಿತಿಯನ್ನೂ ಹಾಕಿಕೊಳ್ಳಬೇಕಾಗುತ್ತದೆ. ಇಲ್ಲದಿದ್ದರೆ ಅದು ಮುಗಿಯುವುದೇ ಇಲ್ಲ. ಪರೀಕ್ಷಗೆ ವಿಷಯಗಳನ್ನು ಫೋಕಸ್‌ ಆಗಿ ಓದಬೇಕು. ನಾನು ಮಾತ್ರ ಸರಿಯಾಗಿ ಟಿಪ್ಪಣಿ ಮಾಡಿಕೊಂಡು, ಬರೆಯುವುದನ್ನು ಕಲಿತು ಗೆದ್ದೇ ಎಂದು ಅವರು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಶ್ರುತಿ ಶರ್ಮಾ ಈ ಪರೀಕ್ಷೆ ಬರೆದಿರುವುದು ಇದು ಎರಡನೇ ಬಾರಿ. ಈ ಹಿಂದೆ ಒಮ್ಮೆ ಅವರು ಪರೀಕ್ಷೆ ಬರೆದಿದ್ದರು. ಮುಖ್ಯ ಪರೀಕ್ಷೆಯನ್ನು ಹಿಂದಿಯಲ್ಲಿ ಬರೆದಿದ್ದ ಕಾರಣದಿಂದ, ಸಂದರ್ಶನಕ್ಕೆ ಆಯ್ಕೆಯಾಗಲು ಒಂದು ಅಂಕ ಕಡಿಮೆಯಾಗಿತ್ತಂತೆ. ಹೀಗಾಗಿ ನನ್ನ ಸ್ಟ್ಯಾಟರ್ಜಿಯನ್ನು ಈ ಬಾರಿ ಬದಲಾಯಿಸಿಕೊಂಡು ಯಶ್ಸಸ್ಸು ಪಡೆದೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

Job Alert: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಬರೋಬ್ಬರಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿಯುಸಿ ಪಾಸ್‌ ಆದವರೂ ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್‌ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೊನೆಯ ದಿನ ಮೇ 18. ಮಿಕ್ಕುಳಿದ ವೃಂದದಲ್ಲಿ 2,286 ಮತ್ತು ಸ್ಥಳೀಯ ವೃಂದದಲ್ಲಿ 214 (ಹಿಂಬಾಕಿ 15 ಹುದ್ದೆ ಸೇರಿ) ಹುದ್ದೆಗಳಿವೆ. ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್ ಆದರವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯಲ್ಲಿ ಖಾಲಿ ಇರುವ ಬರೋಬ್ಬರಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Bmtc Conductor Recruitment 2024). ದ್ವಿತೀಯ ಪಿಯುಸಿ ಪಾಸ್‌ ಆದವರೂ ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್‌ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೊನೆಯ ದಿನ ಮೇ 18 (Job alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮಿಕ್ಕುಳಿದ ವೃಂದದಲ್ಲಿ 2,286 ಮತ್ತು ಸ್ಥಳೀಯ ವೃಂದದಲ್ಲಿ 214 (ಹಿಂಬಾಕಿ 15 ಹುದ್ದೆ ಸೇರಿ) ಹುದ್ದೆಗಳಿವೆ. ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್ ಆದರವರು ಅರ್ಜಿ ಸಲ್ಲಿಸಬಹುದು. 3 ವರ್ಷಗಳ ಡಿಪ್ಲೊಮಾ ತೇರ್ಗಡೆಯಾದವರು ಕೂಡ ಅರ್ಜಿ ಸಲ್ಲಿಸಲು ಅರ್ಹರು. ಜತೆಗೆ ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್‌ ಅನ್ನು ಹೊಂದಿರುವುದು ಕಡ್ಡಾಯ. ಪುರುಷರ ಎತ್ತರ 160 ಸೆಂಟಿ ಮೀಟರ್‌, ಮಹಿಳೆಯರ ಎತ್ತರ 150 ಸೆಂಟಿ ಮೀಟರ್‌ ಇರಬೇಕು. ಗಮನಿಸಿ: ಮುಕ್ತ ಶಾಲೆ ಅಥವಾ ಮುಕ್ತ ವಿವಿಯಿಂದ ಪಿಯುಸಿ/ 12ನೇ ತರಗತಿ ಪಾಸಾದವರು ಅಥವಾ ಜೆಒಸಿ / ಜೆಎಲ್‌ಸಿ ಕೋರ್ಸ್‌ಗಳನ್ನು ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಲ್ಲ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 750 ರೂ. ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಸಾಮಾನ್ಯ ಸಾಮರ್ಥ್ಯ ಪರೀಕ್ಷೆ (Commong Aptitude Test), ದೇಹದಾರ್ಢ್ಯತೆ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಯಲಿದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪ್ರಶ್ನೆಗಳು ಇರಲಿದ್ದು, 200 ಅಂಕಗಳನ್ನು ಹೊಂದಿದೆ. ಗಮನಿಸಿ ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು, ಬರೆಯುವಾಗ ಎಚ್ಚರ ವಹಿಸಬೇಕು. ಈ ಪರೀಕ್ಷೆ ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೀದರ್‌, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಧಾಕಾರದ ವೆಬ್‌ಸೈಟ್‌ನಿಂದ ಡೌಲ್‌ಲೋಡ್‌ ಮಾಡಿಕೊಳ್ಳಬೇಕು. ಇದರ ದಿನಾಂಕವನ್ನು ಬಳಿಕ ತಿಳಿಸಲಾಗುವುದು. ಪರೀಕ್ಷೆ ಬರೆಯಲು ಪ್ರವೇಶ ಪತ್ರದೊಂದಿಗೆ ಪ್ಯಾನ್‌ ಕಾರ್ಡ್‌ / ಲೈಸನ್ಸ್‌ / ಆಧಾರ್‌ ಕಾರ್ಡ್‌ / ಪಾಸ್‌ಪೋರ್ಟ್‌ / ವೋಟರ್‌ ಐಡಿ / ಸರ್ಕಾರಿ ನೌಕರರ ಐಡಿ ಪೈಕಿ ಒಂದು ಮೂಲ ಗುರುತಿನ ಚೀಟಿ ಹಾಜರು ಪಡಿಸಬೇಕು.

ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ವೃತ್ತಿ ತರಬೇತಿ ನೀಡಲಾಗುವುದು. ಈ ತರಬೇತಿ ಅವಧಿಯಲ್ಲಿ ಮಾಸಿಕ ಸಮಗ್ರ ತರಬೇತಿ ಭತ್ಯೆಯಾಗಿ 9,100 ರೂ. ನೀಡಲಾಗುವುದು. ಈ ತರಬೇತಿಯನ್ನು ಸಮರ್ಪಕವಾಗಿ ಪೂರೈಸಿದವರನ್ನು ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಗೆ ನೇಮಕಗೊಳಿಸಲಾಗುತ್ತದೆ. ಇದನ್ನು ತೃಪ್ತಿಕರವಾಗಿ ಪೂರೈಸಿದವರನ್ನು ನೇಮಕಾತಿ ಪ್ರಾಧಿಕಾರದಿಂದ ಖಾಯಂಗೊಳಿಸಲಾಗುವುದು.

ಬಿಎಂಟಿಸಿ ಅಧಿಸೂಚನೆ-ಕೆಕೆ (ಎಚ್‌ಕೆ)ಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಬಿಎಂಟಿಸಿ ಅಧಿಸೂಚನೆ-ಆರ್‌ಪಿಸಿ (ಎನ್‌ಎಚ್‌ಕೆ)ಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

Job News: ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ವಿವರ ಇಲ್ಲಿದೆ.

VISTARANEWS.COM


on

Job News
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎನ್ನುವುದು ಬಹತೇಕರ ಕನಸು. ಅದಕ್ಕಾಗಿ ಅನೇಕರು ಹಲವು ವರ್ಷಗಳಿಂದ ಕಠಿಣ ತಯಾರಿಯಲ್ಲಿ ತೊಡಗಿರುತ್ತಾರೆ. ಇದೀಗ ಅಂತಹದ್ದೊಂದು ಸುವರ್ಣಾವಕಾಶ ಬಂದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ (Job News).

ಗ್ರೂಪ್‌ ಬಿ ಹುದ್ದೆಗಳು

ರಾಜ್ಯ ಸರ್ಕಾರದ 9 ಇಲಾಖೆಗಳ ಉಳಿಕೆ ಮೂಲ ವೃಂದ ಹಾಗೂ ಎಚ್‌ಕೆ ವೃಂದದ ವಿವಿಧ ಗ್ರೂಪ್‌ ಬಿ 327 ಹುದ್ದೆಗಳ ಅರ್ಜಿಗೆ ಇಂದೇ (14-05-2024) ಕೊನೆ ದಿನವಾಗಿದೆ. ಇಂದು ರಾತ್ರಿ 11.59 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ಇದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಪದವಿ, ಸ್ನಾತಕೋತ್ತರ ಪದವಿ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಸಿಎಪಿಎಫ್‌ 506 ಹುದ್ದೆಗಳು

ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC)ನ ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್‌ ಪಡೆ, ಇಂಡೊ-ಟೆಬೆಟನ್ ಗಡಿ ಪೊಲೀಸ್‌ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿನ 506 ಹುದ್ದೆಗಳಿಗೆ ಅಪ್ಲೈ ಮಾಡಲು ಇಂದು ಕೊನೆಯ ದಿನ (ಸಂಜೆ 6 ಗಂಟೆ). ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ 4,660 ಹುದ್ದೆಗಳು

ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ ಖಾಲಿ ಇರುವ ಬರೋಬ್ಬರಿ 4,660 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಇಂದೇ ಕೊನೆಯ ದಿನ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

247 ಪಿಡಿಒ ಹುದ್ದೆಗಳು

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಪಿಡಿಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ (ಮೇ 15) ಕೊನೆಯ ದಿನ. ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. 150 ಆರ್‌ಪಿಸಿ ಮತ್ತು 97 ಎಚ್‌ಕೆ ಹುದ್ದೆಗಳು ಸೇರಿ ಒಟ್ಟು 247 ಪೋಸ್ಟ್‌ಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಮೇ 15ರ ರಾತ್ರಿ 11 ಗಂಟೆವರೆಗೆ ಅವಕಾಶ ಇದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ. 20ರಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ. ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಲುಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Continue Reading

ಉದ್ಯೋಗ

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Job Alert: ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 200 ತರಬೇತುದಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಮೇ 20ರಿಂದ 22ರ ತನಕ ಆಯೋಜಿಸಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ಹೈದರಾಬಾದ್‌ನಲ್ಲಿ ನಡೆಯಲಿದೆ. ವೇಳಾಪಟ್ಟಿ ಸೇರಿದಂತೆ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ 200 ತರಬೇತುದಾರ ಹುದ್ದೆಗಳ (Apprentice posts) ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL Recruitment 2024). ವಿವಿಧ ವಿಭಾಗಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಮೇ 20ರಿಂದ 22ರ ತನಕ ಆಯೋಜಿಸಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 55, ಫಿಟ್ಟರ್ – 35, ಎಲೆಕ್ಟ್ರಿಷಿಯನ್ – 25, ಮೆಷಿನಿಸ್ಟ್‌ – 8, ಟರ್ನರ್ – 6, ವೆಲ್ಡರ್ – 3, ರೆಫ್ರಿಜರೇಟರ್ & ಎಸಿ – 2, ಕೋಪಾ – 55, ಪ್ಲಂಬರ್ – 2, ಪೈಂಟರ್‌ – 5, ಡೀಸೆಲ್ ಮೆಕ್ಯಾನಿಕ್ – 1, ಮೋಟಾರು ವಾಹನ – 1, ಡ್ರಾಫ್ಟ್‌ಮ್ಯಾನ್‌ – ಸಿವಿಲ್ – 1, ಡ್ರಾಫ್ಟ್‌ಮ್ಯಾನ್‌ – ಮೆಕ್ಯಾನಿಕಲ್ – 1 ಹುದ್ದೆಗಳಿವೆ. ಅಂಗೀಕೃತ ಬೋರ್ಡ್‌ನಿಂದ ಹತ್ತನೇ ತರಗತಿ ತೇರ್ಡೆಯಾದ ಮತ್ತು ಸಂಬಂದಿಸಿದ ಟ್ರೇಟ್‌ನಲ್ಲಿ ಐಟಿಐ ಮುಗಿಸಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳಿಗೆ ಕನಿಷ್ಠ 16 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯಸ್ಸು 23 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ನೇರ ಸಂದರ್ಶನ ಎಲ್ಲಿ ಯಾವಾಗ?

ಮೇ 20ರಂದು ಬೆಳಗ್ಗೆ 9 ಗಂಟೆಗೆ ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಡೀಸೆಲ್ ಮೆಕ್ಯಾನಿಕ್ ಮತ್ತು ಮಧ್ಯಾಹ್ನ 1 ಗಂಟೆಗೆ ಫಿಟ್ಟರ್‌, ಪ್ಲಂಬರ್‌, ಪೈಂಟರ್‌ ಹುದ್ದೆಗಳ ಆಕಾಂಕ್ಷಿಗಳು ಹಾಜರಾಗಬೇಕು. ಮೇ 21ರ ಬೆಳಗ್ಗೆ 9 ಗಂಟೆಗೆ ಕೋಪಾ, ಮೋಟಾರು ವಾಹನ ಮೆಕ್ಯಾನಿಕ್‌ ಮತ್ತು ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರೀಷಿಯನ್‌, ಡ್ರಾಫ್ಟ್‌ಮ್ಯಾನ್‌-ಮೆಕ್ಯಾನಿಕಲ್‌ ಹುದ್ದೆಗಳ ಸಂದರ್ಶನ ನಡೆಯಲಿದೆ. ಮೇ 22ರಂದು ಬೆಳಗ್ಗೆ 9 ಗಂಟೆಗೆ ಮೆಷಿನಿಸ್ಟ್‌, ರೆಫ್ರಿಜರೇಷನ್‌ & ಎಸಿ, ಟರ್ನರ್‌ ಹುದ್ದೆಗೆ ಮತ್ತು ಮಧ್ಯಾಹ್ನ 1 ಗಂಟೆಗೆ ಡ್ರಾಫ್ಟ್‌ಮ್ಯಾನ್‌ -ಸಿವಿಲ್‌, ವೆಲ್ಡರ್‌ಗಳ ಸಂದರ್ಶನ ಆಯೋಜಿಸಲಾಗಿದೆ. ಆಯ್ಕೆಯಾದವರಿಗೆ 1 ವರ್ಷಗಳ ತರಬೇತಿ ನೀಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ:

Auditorium, Behaind Department of Trainning & Development,
Hindustan Aeronautics Limited, Avionics Division, Balanagar, Hyderabad-500042.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಸಂದರ್ಶನಕ್ಕೆ ಹಾಜರಾಗುವ ವೇಳೆ ಬೇಕಾದ ದಾಖಲೆಗಳು

  • ಆಧಾರ್‌ ಕಾರ್ಡ್‌.
  • ಎಸ್ಸೆಸ್ಸೆಲ್ಸಿ ಮತ್ತು ಐಟಿಐಯ ಎಲ್ಲ ಸೆಮಿಸ್ಟರ್‌ನ ಸರ್ಟಿಫಿಕೆಟ್‌.
  • ಮೀಸಲಾತಿಯ ಸರ್ಟಿಫಿಕೆಟ್‌.
  • ಹೆಸರು ನೋಂದಣಿಯ ಮಾಡಿಕೊಂಡಿರುವ ಅಪ್ಲಿಕೇಷನ್‌ ಫಾರಂ.
  • ಎರಡು ಪಾಸ್‌ಪೋರ್ಟ್‌ ಅಳತೆಯ ಫೋಟೊ.

ಹೆಸರು ನೋಂದಾಯಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹೆಚ್ಚಿನ ಮಾಹಿತಿಗೆ ಎಚ್‌ಎಎಲ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ https://www.hal-india.co.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Job Alert: ಭಾರತ ಸರ್ಕಾರದ ಜವಳಿ ಸಚಿವಾಲಯದ ಟೆಕ್ಸ್‌ಟೈಲ್ಸ್‌ ಕಮಿಟಿ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು. ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಜವಳಿ ಸಚಿವಾಲಯ (Ministry of Textiles)ದ ಟೆಕ್ಸ್‌ಟೈಲ್ಸ್‌ ಕಮಿಟಿ (Textiles Committee) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ (Project Assistant) ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು (Textiles Committee Recruitment 2024). ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು ಎಂದು ಪ್ರಕಟಣೆ ತಿಳಿಸಿದೆ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು (Job Alert).

ಹುದ್ದೆಗಳ ವಿವರ

ಬೆಂಗಳೂರು – 4, ಮುಂಬೈ – 7, ನವಿ ಮುಂಬೈ – 3, ಚೆನ್ನೈ – 3, ಕಾನ್ಪುರ – 1, ಕಣ್ಣೂರು – 1, ಕರೂರು – 1, ಹೈದರಾಬಾದ್‌ – 4, ಗುರುಗ್ರಾಮ – 3, ಜೈಪುರ – 2, ತಿರುಪುರ – 3, ಗುಂಟೂರು – 1, ಕೊಯಂಬತ್ತೂರು – 5, ಲುಧಿಯಾನ – 1, ಕೋಲ್ಕತ್ತಾ – 1 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 26 ಸಾವಿರ ರೂ. ಮಾಸಿಕ ವೇತನ ದೊರೆಯಲಿದೆ. ಆಯ್ಕೆಯಾದವರನ್ನು 3 ವರ್ಷಗಳ ಅವಧಿಗೆ ತಾತ್ಕಾಲಿಕವಾಗಿ ನೇಮಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಗಮನಿಸಿ

  • 2024ರ ಮಾರ್ಚ್‌ 31ಕ್ಕೆ ಹೊಂದಿಕೊಂಡು ಕನಿಷ್ಠ ಮತ್ತು ಗರಿಷ್ಠ ವಯಸ್ಸನ್ನು ನಿರ್ಧರಿಸಲಾಗುತ್ತದೆ.
  • ವಾರಕ್ಕೆ ಒಂದು ದಿನ ರಜೆ ಇರಲಿದ್ದು, ವರ್ಷಕ್ಕೆ 8 ಕ್ಯಾಶುವಲ್‌ ಲೀವ್‌ ನಿಗದಿಪಡಿಸಲಾಗಿದೆ.
  • ಟಿಎ / ಡಿಎ ಪಾವತಿಸಲಾಗುವುದಿಲ್ಲ.
  • ಅಭ್ಯರ್ಥಿಗಳು ಒಂದು ಕಡೆಗೆ ಮಾತ್ರ ಅರ್ಜಿ ಸಲ್ಲಿಸಬೇಕು.

Textiles Committee Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

Textiles Committee Recruitment 2024 ಅಪ್ಲಿಕೇಷನ್‌ ಫಾರಂಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅಪ್ಲಿಕೇಷನ್‌ ಫಾರಂ ಅನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದು ಭರ್ತಿ ಮಾಡಿ.
  • ಫೋಟೊ ಲಗತ್ತಿಸಿ.
  • ಸೆಲ್ಫ್‌ ಎಟೆಸ್ಟ್‌ ಮಾಡಿದ ಡಾಕ್ಯುಮೆಂಟ್‌ಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:

Textiles Committee, FKCCI,
WTC Building, 1st Floor, Kempe Gowda Road,
Bangaluru – 560 009, Karnataka.

ಹೆಚ್ಚಿನ ವಿವರಗಳಿಗೆ ಫೋನ್‌ ನಂಬರ್‌: (080) 2226 1401, ಇಮೇಲ್‌: blr.tc@nic.inಗೆ ಸಂಪರ್ಕಿಸಿ. ಗಮನಿಸಿ ನಿಮ್ಮ ಅಪ್ಲಿಕೇಷನ್‌ ಫಾರಂ ಮೇ 31ರೊಳಗೆ ತಲುಪುವಂತಿರಬೇಕು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading
Advertisement
House of the Dragon season 2 new trailer hints at a bloody
ಸಿನಿಮಾ1 min ago

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

Google Update
ತಂತ್ರಜ್ಞಾನ2 mins ago

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

Seema Haider
ದೇಶ11 mins ago

Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಾಚಾರಿಕೆಯೋ?

ICMR Dietary Guidelines
ಆರೋಗ್ಯ12 mins ago

ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

viral video shakti scheme women fight
ವೈರಲ್ ನ್ಯೂಸ್21 mins ago

Viral video: ಚಪ್ಪಲಿಯಲ್ಲಿ ಬಡಿದಾಡಿ ಬಟ್ಟೆ ಹರಿದುಕೊಂಡರು; ಪುಕ್ಕಟೆ ಬಸ್‌ನಲ್ಲಿ ಮಹಿಳೆಯರ ʼಶಕ್ತಿʼ ಪ್ರದರ್ಶನ!

Narendra Modi
ದೇಶ24 mins ago

ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

Rishabh Pant
ಕ್ರೀಡೆ39 mins ago

Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

LIC
ವಾಣಿಜ್ಯ43 mins ago

LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Mobile Phone Recharges:
ದೇಶ1 hour ago

Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

IPL 2024
ಕ್ರೀಡೆ1 hour ago

IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ11 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ21 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202423 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌