Wall collapse | ಅಂಕೋಲಾ ತಾಲೂಕಿನ ಬಾವಿಕೇರಿಯಲ್ಲಿ ಮನೆ ಗೋಡೆ ಕುಸಿದು ಇಬ್ಬರು ಸಾವು - Vistara News

ಉತ್ತರ ಕನ್ನಡ

Wall collapse | ಅಂಕೋಲಾ ತಾಲೂಕಿನ ಬಾವಿಕೇರಿಯಲ್ಲಿ ಮನೆ ಗೋಡೆ ಕುಸಿದು ಇಬ್ಬರು ಸಾವು

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೇರಿಯಲ್ಲಿ ಹಳೆ ಮನೆ ಗೋಡೆಯನ್ನು ತೆರವುಗೊಳಿಸುವ ವೇಳೆ ದುರಂತ ನಡೆದಿದೆ.

VISTARANEWS.COM


on

Wall collapse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಮನೆ ಗೋಡೆ ಕುಸಿದು(Wall collapse) ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೇರಿಯಲ್ಲಿ ನಡೆದಿದೆ. ಮಧುಕರ ಸುಬ್ರಾಯ ನಾಯಕ(58), ಶಾಂತಾರಾಮ ನಾರಾಯಣ ನಾಯಕ(58) ಮೃತರು.

ಮೃತ ಮಧುಕರ ಅವರ ಹಳೆ ಮನೆ ಗೋಡೆಯನ್ನು ಮಂಗಳವಾರ ತೆರವುಗೊಳಿಸುವ ಆಕಸ್ಮಿಕವಾಗಿ ಗೋಡೆ ಕುಸಿದುಬಿದ್ದ ಪರಿಣಾಮವಾಗಿ ಇಬ್ಬರೂ ಗೋಡೆ ಅವಶೇಷಗಳಡಿ ಸಿಲುಕಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಇದ್ದವರನ್ನು ಪ್ರತ್ಯೇಕವಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಒಬ್ಬರು ಕುಮಟಾ ಮಿರ್ಜಾನ ಬಳಿ, ಮತ್ತೊಬ್ಬರು ಕುಂದಾಪುರ
ಬೈಂದೂರು ಬಳಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Road Accident | ತುಮಕೂರಿನಲ್ಲಿ ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Uttara Kannada Landslide: ನೀರು ನುಗ್ಗಿದ ರಭಸದಿಂದ ಮೂರು ಮನೆಗಳು ನೆಲಸಮವಾಗಿವೆ. ಮನೆಯಲ್ಲಿದ್ದ ಸೀಥಿಗೌಡ (65) ಎನ್ನುವ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಎನ್‌ಡಿಆರ್‌ಎಫ್ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.

VISTARANEWS.COM


on

uttara kannada landslide shirur
Koo

ಕಾರವಾರ: ಅಂಕೋಲಾ- ಶಿರೂರು ಹೆದ್ದಾರಿಯಲ್ಲಿ (Ankola Shiruru Lanslide) ಗುಡ್ಡ ಕುಸಿದ (Uttara Kannada Landslide) ಪ್ರಕರಣದಲ್ಲಿ ಇನ್ನೊಂದು ಅವಾಂತರ ಉಂಟಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗುಡ್ಡ ಕುಸಿತದಿಂದ ಭಾರಿ ಪ್ರಮಾಣದ ಮಣ್ಣು ಗಂಗಾವಳಿ ನದಿಗೆ (Gangavali River) ಬಿದ್ದ ಪರಿಣಾಮ ನದಿ ಬದಿಯ ಉಳುವರೆ ಗ್ರಾಮಕ್ಕೂ ಡ್ಯಾಮೇಜ್ ಆಗಿದೆ. ಸುನಾಮಿ ಅಲೆಯ ರೀತಿ ಗ್ರಾಮಕ್ಕೆ ನೀರು ನುಗ್ಗಿದ್ದು, ನೀರಿನ ರಭಸಕ್ಕೆ ಮೂರು ಮನೆಗಳು ನಾಶವಾಗಿ (homes collapse) ಮಹಿಳೆಯೊಬ್ಬರು (Woman swept) ಕೊಚ್ಚಿಹೋಗಿದ್ದಾರೆ.

ನೀರು ನುಗ್ಗಿದ ರಭಸದಿಂದ ಮೂರು ಮನೆಗಳು ನೆಲಸಮವಾಗಿವೆ. ಮನೆಯಲ್ಲಿದ್ದ ಸೀಥಿಗೌಡ (65) ಎನ್ನುವ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಎನ್‌ಡಿಆರ್‌ಎಫ್ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.

ಕುಮಟ ತಾಲ್ಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಉಳುವರೆ ಗ್ರಾಮದ ಗಣಪತಿ ಬೊಮ್ಮಾ ಗೌಡ, ಸಾವಿತ್ರಿ ನೀಲಾ ಗೌಡ, ದಿವ್ಯಾ ನೀಲಾ ಗೌಡ, ಆಶಾ ಮಂಗೇಶ ಗೌಡ, ಹರ್ಶಿತಾ ಗಣಪತಿ ಗೌಡ, ದಿಕ್ಷಾ ವಿನಾಯಕ ಗೌಡ, ದೀಪಾ ಹೂವಾ ಗೌಡ, ಧನ್ಯ ಹೂವಾ ಗೌಡ, ಹೂವಾ ಸೋಮಾ ಗೌಡ, ಸೋಮಾ ಅನಂತ ಗೌಡ, ಮಂಗೇಶ ಮಾಣಿ ಗೌಡ, ನೀಲಾ ಮುದ್ದು ಗೌಡ, ನಾಗೀ ಬೊಮ್ಮಾ ಗೌಡ, ತಮ್ಮಣ್ಣಿ ಅನಂತ ಗೌಡ ಗಾಯಗೊಂಡವರು.

ಸ್ಥಳಕ್ಕೆ ಅಂಕೋಲ ತಹಶೀಲ್ದಾರ್ ಅನಂತ ಶಂಕರ ಭೇಟಿ ನೀಡಿದ್ದಾರೆ. ಈಗಾಗಲೇ ನಾಲ್ಕು ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ನಡೆಯುತ್ತಿದೆ ಎಂದಿದ್ದಾರೆ. ಖಚಿತವಾಗಿ ಎಷ್ಟು ಜನ ಮಣ್ಣಿನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಇಲ್ಲ. ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಮೃತದೇಹ ಹುಡುಕಾಟ ನಡೆಯುತ್ತಿದೆ‌. ನೀರಿನಲ್ಲಿ ಒಬ್ಬರ ಮೃತದೇಹ ಹೋಗಿರುವ ಶಂಕೆ ಇದೆ. ಮಣ್ಣಿನಲ್ಲಿ ಒಬ್ಬರು ಸಿಲುಕಿಕೊಂಡಿದ್ದಾರೆ ಎಂದಿದ್ದಾರೆ.

ತೆರವಾಗದ ಗುಡ್ಡದ ಮಣ್ಣು

ಶಿರಸಿ ತಾಲ್ಲೂಕಿನ ರಾಗಿಹೊಸಳ್ಳಿ ಬಳಿ ನಿನ್ನೆ ಗುಡ್ಡ ಜರಿದು ಅಪಾರ ಪ್ರಮಾಣದ ಮಣ್ಣು ಹೆದ್ದಾರಿಯ ಮೇಲೆ ಕೂತಿದ್ದು, ನಿನ್ನೆಯಿಂದ ಕಾರ್ಯಾಚರಣೆ ನಡೆಯುತ್ತಿದ್ದರೂ ತೆರವಾಗಿಲ್ಲ. ಇದರಿಂದ ಕುಮಟಾ- ಶಿರಸಿ ರಾಷ್ಟ್ರೀಯ ಹೆದ್ದಾರಿ 766EEಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆಗೆ ಹಿನ್ನಡೆಯಾಗಿದೆ. ಹೆದ್ದಾರಿಯ ಸುಮಾರು 100 ಮೀಟರ್ ವ್ಯಾಪ್ತಿಯಲ್ಲಿ ಮರ ಸಹಿತ ಗುಡ್ಡ ಕುಸಿದಿದ್ದು, ಶಿರಸಿ-ಕುಮಟಾ ಹೆದ್ದಾರಿ ನಿನ್ನೆಯಿಂದ ಬಂದ್ ಆಗಿದೆ. ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಗುಡ್ಡ ಕೊರೆಯಲಾಗಿತ್ತು. ಜೆಸಿಬಿ ಮೂಲಕ ನಿನ್ನೆಯಿಂದ ಮಣ್ಣು ತೆರವು ನಡೆಯುತ್ತಿದ್ದು, ಇನ್ನೂ 50 ಮೀಟರ್‌ನಷ್ಟು ಮಣ್ಣು ತೆರವು ಬಾಕಿಯಿದೆ.

ಶೃಂಗೇರಿಯಲ್ಲಿ ನೆರೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ತುಂಗಾ ನದಿ ಆರ್ಭಟದಿಂದ ಹರಿಯುತ್ತಿದೆ. ತುಂಗಾ ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನ ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿವೆ. ಶೃಂಗೇರಿಯಲ್ಲಿ ನಿನ್ನೆಯಿಂದಲೂ ನೆರೆ ಪರಿಸ್ಥಿತಿ ತಗ್ಗಿಲ್ಲ. ಭಾರತಿ ತೀರ್ಥ ರಸ್ತೆ ಮುಳುಗಡೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಇದನ್ನೂ ಓದಿ: Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ

Continue Reading

ಉತ್ತರ ಕನ್ನಡ

Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ

Landslide: ಭೂಕುಸಿತ ಪ್ರದೇಶದಲ್ಲೇ ಸಡಿಲಗೊಂಡಿರುವ ಗುಡ್ಡ ಮತ್ತೆ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲೂ ಮತ್ತೆ ಕುಸಿಯುವ ಸಾಧ್ಯತೆ ಕಂಡುಬಂದಿದೆ. ಗುಡ್ಡದ ಮದ್ಯ ಭಾಗದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಯ ಪಕ್ಕದಲ್ಲಿರುವ ಹೊಳೆಗೆ ಮಣ್ಣನ್ನು ಒಯ್ಯುತ್ತಿದೆ.

VISTARANEWS.COM


on

landslide Karnataka Rain
Koo

ಕಾರವಾರ: ಅಂಕೋಲಾ ಶಿರೂರು ಬಳಿ ಹೆದ್ದಾರಿಯಲ್ಲಿ (Highway landslide) ಭಾರಿ ಗುಡ್ಡ ಕುಸಿದು (Uttarakannada landslide) ಹತ್ತು ಮಂದಿ ನಾಪತ್ತೆಯಾದ ಘೋರ ದುರಂತದ ಸ್ಥಳದಲ್ಲಿ ಐದು ಶವಗಳು ಪತ್ತೆಯಾಗಿವೆ. ಇಂದು ಮುಂಜಾನೆಯಿಂದ ಮತ್ತೆ ಶವ ಪತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಎರಡು ಹಿಟಾಚಿ, ಎರಡು ಜೆಸಿಬಿ ಯಂತ್ರಗಳ ಮೂಲಕ ಗುಡ್ಡದ ಮಣ್ಣು ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್ ತಂಡ ಪಾಲ್ಗೊಂಡಿದೆ. ಈಗಾಗಲೇ ಐದು ಮೃತದೇಹಗಳು ಪತ್ತೆಯಾಗಿವೆ. ಮತ್ತಷ್ಟು ಜನ ಮಣ್ಣಿನಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ. ಹತ್ತು ಮಂದಿ ಮಣ್ಣಿನೊಳಗೆ ಸಿಲುಕಿದ್ದಾರೆ ಎಂದು ಶಂಕಿಸಲಾಗಿತ್ತು. ನಿನ್ನೆ ಮಹಿಳೆಯೊಬ್ಬರ ಶವ ದೊರೆತಿತ್ತು. ನಿನ್ನೆ ಕತ್ತಲಾದ್ದರಿಂದ ಹಾಗೂ ಮಳೆಯ ಕಾರಣ ಕಾರ್ಯಾಚರಣೆ ನಿಲ್ಲಿಸಲಾಗಿತ್ತು.

ಗುಡ್ಡದ ಮಣ್ಣು ಹೆದ್ದಾರಿಗೆ ಭಾರಿ ಪ್ರಮಾಣದಲ್ಲಿ ಕುಸಿದಿದೆ. ತೆರವು ಕಾರ್ಯಾಚರಣೆಗೆ ಹತ್ತಾರು ಲಾರಿ ಬಳಸಲಾಗುತ್ತಿದೆ. ರಕ್ಷಣಾ ಕಾರ್ಯದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್, ಎನ್‌ಡಿಆರ್‌ಎಫ್ ಸಿಬ್ಬಂದಿ ಭಾಗಿಯಾಗಿದ್ದಾರೆ.

ಭೂಕುಸಿತ ಪ್ರದೇಶದಲ್ಲೇ ಸಡಿಲಗೊಂಡಿರುವ ಗುಡ್ಡ ಮತ್ತೆ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲೂ ಮತ್ತೆ ಕುಸಿಯುವ ಸಾಧ್ಯತೆ ಕಂಡುಬಂದಿದೆ. ಗುಡ್ಡದ ಮದ್ಯ ಭಾಗದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಯ ಪಕ್ಕದಲ್ಲಿರುವ ಹೊಳೆಗೆ ಮಣ್ಣನ್ನು ಒಯ್ಯುತ್ತಿದೆ. ರಕ್ಷಣಾ ಕಾರ್ಯಕ್ಕೆ ಅಡ್ಡಿಯೂ ಆಗುತ್ತಿದೆ. ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದಾಗಿ ಗುಡ್ಡಕ್ಕೆ ಸರಿಪಡಿಸಲಾಗದ ಧಕ್ಕೆಯಾಗಿದ್ದು, ಇನ್ನಷ್ಟು ಬಲಿ ಪಡೆಯುವ ಭೀತಿಯಿದೆ ಎನ್ನಲಾಗಿದೆ.

ಸಂಚಾರ ನಿಷೇಧ

ಭೂಕುಸಿತ ಕಾರ್ಯಾಚರಣೆ ಹಿನ್ನಲೆ ಶಿರೂರು ವ್ಯಾಪ್ತಿಯಲ್ಲಿ ಸಾರ್ವಜನಿಕರ ಓಡಾಟಕ್ಕೆ ನಿಷೇಧ ವಿಧಿಸಲಾಗಿದೆ. ಅಂಕೋಲಾ ತಾಲ್ಲೂಕಿನ ವಾಸರಕುದ್ರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶದ ಸುತ್ತ ಸಾರ್ವಜನಿಕರು, ವಾಹನ ಸವಾರರು ಓಡಾಡದಂತೆ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಆದೇಶಿಸಿದ್ದಾರೆ. ಕಾರ್ಯಾಚರಣೆಗೆ ಅಡ್ಡಿಯಾಗದಂತೆ ಮುನ್ನೆಚ್ಚರಿಕೆಯಾಗಿ ನಿಷೇಧ ವಿಧಿಸಲಾಗಿದೆ.

ಉಸ್ತುವಾರಿ ಸಚಿವ ಭೇಟಿ

ಸ್ಥಳಕ್ಕೆ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಭೇಟಿ ನೀಡಿ ಪರಿಶೀಲಿಸಿದರು. ಈಗಾಗಲೇ ಐದು ಮೃತ ದೇಹ ಪತ್ತೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಇದು ದೊಡ್ಡ ದುರಂತ, ಹೀಗೆ ಆಗಬಾರದಿತ್ತು. ಇದರ ಹೊಣೆಗಾರಿಕೆ ಐಆರ್ ಬಿಯವರದು. ಹತ್ತು ವರ್ಷದಿಂದ ಒಂದು ರಸ್ತೆ ಕ್ಲೀಯರ್ ಮಾಡೋಕೆ ಆಗಿಲ್ಲ. ಒಂದು ವರ್ಷದಿಂದ ಐಆರ್ ಬಿಯವರಿಗೆ ಹೇಳಿದ್ದೆ. ಅವರು ವ್ಯತ್ಯಾಸ ಮಾಡಿದ್ದರಿಂದ ಹೀಗೆ ಆಗಿದೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಕೋಡೋಕೆ ತಯಾರಿ ಮಾಡಿಕೊಂಡಿದ್ದೇವೆ ಎಂದಿದ್ದಾರೆ.

ಗೋಕರ್ಣದಲ್ಲೂ ಭೂಕುಸಿತ

ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಸ್ವಲ್ಪ ತಗ್ಗಿದೆಯಾದರೂ, ಗುಡ್ಡ ಕುಸಿತ ಪ್ರಕರಣಗಳು ನಿಂತಿಲ್ಲ. ಕುಮಟಾ ತಾಲೂಕಿನ ಗೋಕರ್ಣದಲ್ಲಿ (Gokarna landslide) ಇಂದು ಬೆಳ್ಳಂಬೆಳಿಗ್ಗೆ ಗುಡ್ಡ ಕುಸಿದಿದೆ. ಗೋಕರ್ಣ ಮುಖ್ಯ ಕಡಲತೀರದ ಹತ್ತಿರದ ರಾಮಮಂದಿರ ಬಳಿ ಗುಡ್ಡ ಕುಸಿತವಾಗಿದೆ. ಅದೃಷ್ಟವಶಾತ್ ದೇವಸ್ಥಾನದಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ.

ಉರುಳಿಕೊಂಡು ಬಂದ ಗುಡ್ಡದ ಬೃಹತ್‌ ಕಲ್ಲು ದೇವಸ್ಥಾನದ ಗೋಡೆಗೆ ತಾಗಿ ನಿಂತಿದೆ. ರಾಮಮಂದಿರ ದೇವಸ್ಥಾನಕ್ಕೆ ಯಾವುದೇ ಹಾನಿ ಆಗಿಲ್ಲ. ಅವ್ಯಾಹತವಾಗಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯ ಪರಿಣಾಮ ಗುಡ್ಡದ ಮಣ್ಣು ಸಡಿಲವಾಗಿದ್ದು, ಮಳೆಗೆ ಕುಸಿದಿದೆ ಎಂದು ಆರೋಪಿಸಲಾಗಿದೆ.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಗಾಳಿ ಮಳೆ ಮುಂದುವರಿದಿದ್ದು, ಸುವರ್ಣಾ, ಸೀತಾ ನದಿಗಳು ತುಂಬಿ ಹರಿಯುತ್ತಿವೆ. ಆಗುಂಬೆ, ಚಿಕ್ಕಮಗಳೂರಿನಲ್ಲಿ ಮಳೆಯಾದ ಪರಿಣಾಮ ಕರಾವಳಿಯ ನದಿಗಳು ಭರ್ತಿಯಾಗಿವೆ. ನದಿ, ಹೊಳೆ ಪಾತ್ರದ ಗದ್ದೆಗಳಲ್ಲಿ ನೆರೆಯ ವಾತಾವರಣ ಕಂಡುಬಂದಿದೆ. ನದಿ, ಸಮುದ್ರ ತೀರದ ಜನಕ್ಕೆ ಉಡುಪಿ ಜಿಲ್ಲಾಡಳಿತ ಕಟ್ಟೆಚ್ಚರ ನೀಡಿದ್ದು, ಎರಡು ದಿನ ಸಮುದ್ರ ಮೀನುಗಾರಿಕೆ ನಿಷೇಧಿಸಿದೆ.

ಇದನ್ನೂ ಓದಿ: Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

Continue Reading

ಮಳೆ

Karnataka Weather : ಬಿರುಗಾಳಿ ಜತೆಗೆ ಅಬ್ಬರಿಸಲಿದ್ದಾನೆ ವರುಣ; ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast: ಕರಾವಳಿ-ಮಲೆನಾಡು ಭಾಗದಲ್ಲಿ ವರುಣನ ರೌದ್ರಾವತಾರಕ್ಕೆ ಜನರು ನಲುಗಿ ಹೋಗಿದ್ದಾರೆ. ಮುಂದಿನ ನಾಲ್ಕೈದು ದಿನಗಳು ಗಾಳಿ ಜತೆಗೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Heavy Rain Alert) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಜು.17ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Heavy rain) ಎಚ್ಚರಿಕೆ ಇದ್ದು, ಮಲೆನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆಯು ಅಬ್ಬರಿಸಲಿದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Rain Effect : ಭಾರಿ ಮಳೆಗೆ ಶಿರೂರು ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ ಮಹಿಳೆ ಮೃತದೇಹ ಪತ್ತೆ, ಉಳಿದವರಿಗಾಗಿ ಹುಡುಕಾಟ

ಬೆಂಗಳೂರಿನಲ್ಲಿ ಮರೆಯಾಗುವ ಸೂರ್ಯ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 24 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ರೆಡ್‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಗಾಳಿ ವೇಗವು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆ ಅನಾಹುತದ ಚಿತ್ರಣ ಹೀಗಿದೆ ನೋಡಿ

Karnataka Rain
Rain Effect
karnataka Rain
Karnataka Rain
Karnataka Rain
karnataka Rain
karnataka rain
karnataka Rain
karnataka Rain

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

Uttara Kannada News: ಕಾರವಾರ ಸೀಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡುಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

VISTARANEWS.COM


on

A permanent solution to artificial flood on national highways says MP Vishweshwar Hegde Kageri
Koo

ಕಾರವಾರ: ಕಾರವಾರ ಸೀಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡುಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Uttara Kannada News) ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತೀ ಮಳೆಗಾಲದಲ್ಲಿ ಸೀಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡದಿಂದ ಬರುವ ನೀರು ಸರಾಗವಾಗಿ ಹರಿದು ಸಮುದ್ರ ಸೇರಲು ಇರುವ ಅಡೆತಡೆಗಳನ್ನು ಶಾಶ್ವತವಾಗಿ ನಿವಾರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ಸೀಬರ್ಡ್ ಮತ್ತು ನೌಕಾನೆಲೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮಳೆ ಕಡಿಮೆಯಾದ ಕೂಡಲೇ ಆ ಪ್ರದೇಶಕ್ಕೆ ಭೇಟಿ ನೀಡಿ ಅಗತ್ಯ ಮಾರ್ಗೋಪಾಯಗಳನ್ನು ಕಂಡುಕೊಂಡು ಅವುಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದ ಸಂಸದರು, ನೌಕಾನೆಲೆಯ ಅಧಿಕಾರಿಗಳು ಜಿಲ್ಲಾಡಳಿತದ ಈ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

ಜಿಲ್ಲೆಯಲ್ಲಿ ಕಾರವಾರದಿಂದ ಭಟ್ಕಳದವರೆಗಿನ ರೈಲು ಮಾರ್ಗದಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಕಾಮಗಾರಿಗಳು ಮತ್ತು ಪ್ರಯಾಣಿಕರ ಹಿತದೃಷ್ಠಿಯಿಂದ ಕೈಗೊಳ್ಳಬೇಕಾಗಿರುವ ಸುಧಾರಣಾ ಕ್ರಮಗಳು ಹಾಗೂ ರೂಪಿಸಬಹುದಾದ ಯೋಜನೆಗಳ ಕುರಿತ ವಿವರವಾದ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಕೊಂಕಣ ರೈಲ್ವೆಯ ಅಧಿಕಾರಿಗಳಿಗೆ ಸೂಚಿಸಿದ ಸಂಸದರು, ಜಿಲ್ಲೆಯಲ್ಲಿ ರೈಲ್ವೆಗೆ ಸಂಬಂಧಪಟ್ಟ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಕುರಿತಂತೆ ರೈಲ್ವೆ ಖಾತೆಯ ಸಚಿವರೊಂದಿಗೆ ಚರ್ಚಿಸಿ ಅವುಗಳ ಸಂಪೂರ್ಣ ಅನುಷ್ಠಾನಕ್ಕೆ ಪ್ರಯತ್ನಿಸುವುದಾಗಿ ಹೇಳಿದರು.

ಕೊಂಕಣ ರೈಲ್ವೆಗೆ ಸಂಬಂಧಪಟ್ಟಂತೆ ಬಾಕಿ ಇರುವ ಭೂಸ್ವಾಧೀನ ಪ್ರಕರಣಗಳ ಪರಿಹಾರದ ಮೊತ್ತವನ್ನು ಸಂತ್ರಸ್ತರಿಗೆ ಶೀಘ್ರದಲ್ಲಿ ಪಾವತಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವವರಿಗೆ ವೈದ್ಯಕೀಯ ನೆರವಿನೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸವಂತೆ ತಿಳಿಸಿದ ಅವರು, ವಿಕೋಪ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಸೇವಾ ಮನೋಭಾವ ಮತ್ತು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಂಬಂಧಪಟ್ಟ ಇಲಾಖೆಗಳು ವಿಪತ್ತು ಎದುರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳೊಂದಿಗೆ ಸದಾ ಜಾಗರೂಕರಾಗಿರಬೇಕು ಎಂದರು.

ಇದನ್ನೂ ಓದಿ: Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಎಸ್ಪಿ ನಾರಾಯಣ್, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಸೀಬರ್ಡ್, ನೌಕಾನಲೆ, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Suryakumar Yadav
ಕ್ರೀಡೆ18 mins ago

Suryakumar Yadav: ಹಾರ್ದಿಕ್​ ಕೈಬಿಟ್ಟು ಸೂರ್ಯಕುಮಾರ್​ಗೆ ಟಿ20 ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿದ್ದೇಕೆ?

Viral Video
Latest19 mins ago

Viral Video: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

Anant Radhika Wedding
ವಾಣಿಜ್ಯ24 mins ago

Anant Radhika Wedding: ಮನಮುಟ್ಟುವಂತೆ ಕನ್ಯಾದಾನದ ಮಹತ್ವ ತಿಳಿಸಿದ ನೀತಾ ಅಂಬಾನಿ; ಭಾವುಕರಾದ ಅತಿಥಿಗಳು; ವಿಡಿಯೊ ನೋಡಿ

Chandan Shetty vidyarthi vidyarthiniyare kannada movie dubai premere
ಸ್ಯಾಂಡಲ್ ವುಡ್38 mins ago

Chandan Shetty: ಚಂದನ್‌ ಶೆಟ್ಟಿ ಅಭಿನಯದ ಸಿನಿಮಾ ದುಬೈನಲ್ಲಿ ಪ್ರೀಮಿಯರ್‌ ಶೋ; ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ!

anant radhika wedding
ಪ್ರಮುಖ ಸುದ್ದಿ41 mins ago

Anant Radhika Wedding: ಪ್ರತಿ ಭಾನುವಾರ ನಮ್ಮನೇಲಿ ನಿಮ್ಮದೇ ತಿಂಡಿ; ಮೈಸೂರು ಕೆಫೆ ಮಾಲಕಿಯ ಕಾಲು ಮುಟ್ಟಿ ನಮಸ್ಕರಿಸಿದ ಅನಂತ್ ಅಂಬಾನಿ! ವಿಡಿಯೊ ನೋಡಿ

Sudha Murty praised for simplicity at Ambani wedding
ಟಾಲಿವುಡ್51 mins ago

Sudha Murty: ಅಂಬಾನಿ ಮದುವೆಗೆ ಮಂಗಳ ಸೂತ್ರ ಮಾತ್ರವೇ ಧರಿಸಿ ಬಂದ ಸುಧಾ ಮೂರ್ತಿ; ಶೋ-ಆಫ್ ಇಲ್ಲ ಅಂದ್ರು ನೆಟ್ಟಿಗರು!

Ravindra Jadeja
ಕ್ರೀಡೆ59 mins ago

Ravindra Jadeja: ವಿಶ್ವಕಪ್​ ಟ್ರೋಫಿಯೊಂದಿಗೆ ತಾಯಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಜಡೇಜಾ

Terror Attacks in India
ದೇಶ1 hour ago

Terror Attacks in India: ಭಾರತದೊಳಕ್ಕೆ ನುಸುಳಲು ಉಗ್ರರಿಗೆ ಪಾಕಿಸ್ತಾನ ಧನಸಹಾಯ: ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ

Director Arrest gajendra in murder case
ಸ್ಯಾಂಡಲ್ ವುಡ್1 hour ago

Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

Vicky Kaushal Kissing Scenes of 27 Seconds deleated From Bad Newz
ಬಾಲಿವುಡ್2 hours ago

Vicky Kaushal: 27 ಸೆಕೆಂಡುಗಳ ಕಾಲ ಚುಂಬಸಿದ ವಿಕ್ಕಿ ಕೌಶಲ್ -ತೃಪ್ತಿ; ಸೆನ್ಸಾರ್‌ ಬೋರ್ಡ್‌ನಿಂದ ಬಿತ್ತು ಕತ್ತರಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌