ಹಾಡು ಮುಗಿಸಿದ ಗಾಯಕ ʼಕೆಕೆʼ, ಕೋಲ್ಕೊತಾ ಕನ್ಸರ್ಟ್‌ ಬಳಿಕ ಕುಸಿದು ಬಿದ್ದು ಸಾವು - Vistara News

ಪ್ರಮುಖ ಸುದ್ದಿ

ಹಾಡು ಮುಗಿಸಿದ ಗಾಯಕ ʼಕೆಕೆʼ, ಕೋಲ್ಕೊತಾ ಕನ್ಸರ್ಟ್‌ ಬಳಿಕ ಕುಸಿದು ಬಿದ್ದು ಸಾವು

ಕೆಕೆ ತಮ್ಮ ಕೊನೆಯ ಹಾಡನ್ನು ಹಾಡಿ ಮುಗಿಸಿದ್ದಾರೆ. ಕೋಲ್ಕೊತಾದಲ್ಲಿ ಕೊನೆಯ ಕನ್ಸರ್ಟ್ ನಡೆಸಿಕೊಟ್ಟ ಬಳಿಕ ಹೃದಯಾಘಾತದಿಂದ ಮಂಗಳವಾರ ರಾತ್ರಿ ಮರಣ ಹೊಂದಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕೊತಾ: ಬಾಲಿವುಡ್‌ನ ಮೆಲೊಡಿ ಸಿಂಗರ್‌ ಕೆಕೆ ಹೃದಯಾಘಾತದಿಂದ ಅಕಾಲಿಕವಾಗಿ ಕೊನೆಯುಸಿರೆಳೆದಿದ್ದಾರೆ. ಕೋಲ್ಕೊತಾದಲ್ಲಿ ಮಂಗಳವಾರ ಕನ್ಸರ್ಟ್‌ ಮುಗಿಸಿದ ಕೆಲವು ಗಂಟೆಯಲ್ಲಿ ಅವರು ಪ್ರಾಣ ಬಿಟ್ಟಿದ್ದಾರೆ. ಕನ್ಸರ್ಟ್ ಮುಗಿಸಿ ಹೋಟೆನಲ್ಲಿ ಮೆಟ್ಟಿಲು ಇಳಿಯುವಾಗ ಅವರು ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಹೃದಯಾಘಾತ ಅವರ ಸಾವಿಗೆ ಕಾರಣ ಎನ್ನಲಾಗುತ್ತಿದೆ.

ಕೃಷ್ಣಕುಮಾರ್‌ ಕುನ್ನಾಥ್ ʼಕೆಕೆʼ ಎಂದೇ ಜನಪ್ರಿಯಾಗಿದ್ದರು. 53 ವರ್ಷದ ಕೆಕೆ ಬಾಲಿವುಡ್‌ನಲ್ಲಿ ಅನೇಕ ಸುಮಧುರ ಗೀತೆಯನ್ನು ಹಾಡಿದ್ದಾರೆ. 90ರ ದಶಕದ ಜನರಿಗೆ ಇವರ ಹಾಡುಗಳು ಹಿತವಾದ ಅನುಭವ ನೀಡಿವೆ. 1999ರಲ್ಲಿ ಇವರು ʼಪಲ್‌ʼ ಆಲ್ಬಂ ಮೂಲಕ ಡೆಬ್ಯೂ ಮಾಡಿದವರು. ಒಮ್ಮೆ ಬಾಲಿವುಡ್‌ನಲ್ಲಿ ಇವರು ಹಾಡಿನ ಮೂಲಕ ಎಂಟ್ರಿ ಕೊಟ್ಟ ಮೇಲೆ ಯಶಸ್ವಿನ ಹಾದಿಯಲ್ಲೇ ಸಾಗಿದ್ದರು. ಇವರ ಇಂಪಾದ ಧ್ವನಿ ಎಲ್ಲರಿಗೂ ಅಚ್ಚುಮೆಚ್ಚಾಗಿತ್ತು, ಮತ್ತೆ ಮತ್ತೆ ಕೇಳುವಷ್ಟು ಸುಮಧುರವಾಗಿತ್ತು.

ʼದಿಲ್‌ ಚಾಹತಾ ಹೈʼ ಸಿನಿಮಾದ ʼಕೋಯಿ ಕಹೆ…ಕೆಹತಾ ರಹೆ..ʼ, ʼದಿವಾನಾ ಕರ್‌ ರಹಾ ಹೈʼ, ʼಹಮ್‌ ದಿಲ್‌ ದೆ ಚುಕೇ ಸನಮ್‌ʼ ಚಿತ್ರದ ʼತಡಪ್‌ ತಡಪ್‌ ಕೆʼ ಹೀಗೆ ಈವರೆಗೆ ಅನೇಕ ಸುಮಧುರ ಗೀತೆಯನ್ನು ಕೆಕೆ ಬಾಲಿವುಡ್‌ಗೆ ನೀಡಿದ್ದಾರೆ. ಅಲ್ಲದೆ ಕನ್ನಡ, ಮಲಯಾಳಂ, ತಮಿಳು, ತೆಲುಗು ಭಾಷೆಯಲ್ಲಿಯೂ ಹಾಡಿ ಜನರ ಮಚ್ಚುಗೆಗೆ ಪಾತ್ರರಾಗಿದ್ದಾರೆ. ಎಂದಿಗೂ ಮರೆಯಲಾಗದಂತಹ ಮಧುರವಾದ ಗೀತೆಗಳನ್ನು ಕೆಕೆ ನೀಡಿದ್ದಾರೆ. ತಮ್ಮ ಹಾಡುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ. ಅವರೇ ಹಾಡಿದ ʼಜಿಂದಗಿ ದೋ ಪಲ್‌ ಕಿʼ ಎಂಬ ಹಾಡಿನ ಸಾರವನ್ನು ನಿಜಗೊಳಿಸಿ ಕೆಕೆ ಅಗಲಿದ್ದಾರೆ.

ಈವರೆಗೆ ಸುಮಾರು 11 ಭಾಷೆಗಳಲ್ಲಿ 3,500ಕ್ಕೂ ಅಧಿಕ ಜಿಂಗಲ್ಸ್‌ ಹಾಡಿದ್ದಾರೆ. ಇವರ ಧ್ವನಿಯನ್ನು ಒಮ್ಮೆ ಕೇಳಿದರೆ ಮರೆಯಲು ಸಾಧ್ಯವಾಗುವುದೇ ಇಲ್ಲ. ಅಷ್ಟು ಸುಮಧುರ ಧ್ವನಿ ಇವರದ್ದು. ಹಾಡು ಮುಗಿಸಿಯೇ ಇಹಲೋಕ ತ್ಯಜಿಸಿದ್ದಾರೆ. ಭಾರತ ಚಿತ್ರರಂಗ ಹಾಗೂ ಸಂಗೀತ ಕ್ಷೇತ್ರ ಅಮೂಲ್ಯ ರತ್ನವೊಂದನ್ನು ಈ ಘಳಿಗೆಯಲ್ಲಿ ಕಳೆದುಕೊಂಡಿದೆ. ಕೆಕೆ ಅವರ ಮರಣದ ಸುದ್ದಿ ಅವರ ಅಭಿಮಾನಿಗಳಿಗೆ ನಂಬಲಸಾಧ್ಯವಾಗುವ ಸಂಗತಿಯಾಗಿದೆ. ಇಷ್ಟು ಬೇಗ ಅವರು ಹಾಡು ನಿಲ್ಲಿಸಿದ್ದು ದುರ್ವಿಧಿಯೇ ಸರಿ. ಕೆಕೆ ಅವರಿಗೆ ಸದ್ಗತಿ ದೊರೆಯಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್ ಸೇರಿದಂತೆ ಅನೇಕ ಗಣ್ಯರು ಟ್ವೀಟ್‌ ಮಾಡುವ ಮೂಲಕ ಕೆಕೆಗೆ ಸಂತಾಪ ಸೂಚಿಸಿದ್ದಾರೆ ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಸಾವನ್ನೇ ಆಹ್ವಾನಿಸಿದ ಸುಂದರಿ ಝೋರಯಾ ಟರ್ ಬ್ರೀಕ್

ರಾಜಮಾರ್ಗ ಅಂಕಣ: ಝೋರಯಾ ಮಾನಸಿಕವಾಗಿ ಧೃಡವಾಗಿ ನಿಂತು ತಾನು ತನ್ನ ಮನೆಯ ಲಿವಿಂಗ್ ರೂಮಿನಲ್ಲಿ ಸೋಫಾದ ಮೇಲೆ ಕುಳಿತು ತನ್ನ ಮುದ್ದಿನ ಬೆಕ್ಕುಗಳನ್ನು ನೇವರಿಸುತ್ತಾ ಸಾವನ್ನು ಸ್ವಾಗತ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ತನ್ನ ದೇಹವನ್ನು ಪಂಚಭೂತಗಳಲ್ಲಿ ಲೀನ ಮಾಡಿ. ಅಂತ್ಯಸಂಸ್ಕಾರಕ್ಕೆ ಜನ ಸೇರಿಸುವ ಅಗತ್ಯ ಇಲ್ಲ. ನನ್ನ ಚಿತಾ ಭಸ್ಮವನ್ನು ಕಾಡಿನೊಳಗೆ ಹರಡಿ ಸಾಕು ಅಂದಿದ್ದಾರೆ.

VISTARANEWS.COM


on

ರಾಜಮಾರ್ಗ ಅಂಕಣ euthanasia zoraya ter beek
Koo

ನೆದರ್‌ಲ್ಯಾಂಡ್ ದೇಶದಲ್ಲೊಂದು ಹೃದಯ ವಿದ್ರಾವಕ ಘಟನೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಕೆ ಲೋಕೋತ್ತರ ಸುಂದರಿ. ವಯಸ್ಸು ಇನ್ನೂ 28. ಆಕೆ ಉತ್ಸಾಹದ ಖಣಿ. ಮೇಲ್ನೋಟಕ್ಕೆ 100% ಫಿಟ್ ಮತ್ತು ಆರೋಗ್ಯಪೂರ್ಣ ಆಗಿದ್ದಾರೆ. ಆದರೆ ಆಕೆ ತನ್ನ ದೇಶದ ಕಾನೂನಿನ ನೆರವು ಪಡೆದುಕೊಡು ತನ್ನ ಜೀವನಕ್ಕೊಂದು ಪೂರ್ಣವಿರಾಮ ಇಡಲು ನಿರ್ಧಾರ ಮಾಡಿದ್ದಾರೆ. ಅದಕ್ಕೆ ಅವರು ಆರಿಸಿಕೊಂಡ ವಿಧಾನ ಅಂದರೆ ದಯಾಮರಣ (euthanasia)! ಅಂದರೆ ತನ್ನ ಇಷ್ಟದ ಪ್ರಕಾರ, ಇಷ್ಟದ ಜಾಗದಲ್ಲಿ, ಇಷ್ಟದ ಜನರ ಮುಂದೆ, ಇಷ್ಟದ ರೀತಿಯಲ್ಲಿ ಸಾಯುವುದು..!

ದಯಾಮರಣ – ನೆದರ್‌ಲ್ಯಾಂಡ್‌ನಲ್ಲಿ ಕಾನೂನು ಸಮ್ಮತ

ನೆದರ್‌ಲ್ಯಾಂಡ್ (Netherlands) ದೇಶವು ದಯಾಮರಣಕ್ಕೆ ಕಾನಾನು ಸಮ್ಮತಿ ನೀಡಿ 22 ವರ್ಷಗಳೇ ಸಂದಿವೆ! ಅಸಹನೀಯ ನೋವು, ಗುಣಪಡಿಸಲು ಆಗದ ಕಾಯಿಲೆ, ಮಾನಸಿಕ ಅಸ್ವಾಸ್ಥ್ಯ ಸೇರಿದಂತೆ ಆರು ಕಾರಣಕ್ಕೆ ಸರಕಾರ ದಯಾಮರಣಕ್ಕೆ ಅನುಮತಿಯನ್ನು ನೀಡುತ್ತದೆ. 2022ರಲ್ಲಿ ಆ ದೇಶದಲ್ಲಿ ಕಾನೂನಿನ ನೆರವು ಪಡೆದು 8730 ಮಂದಿ ದಯಾಮರಣದ ಮೂಲಕ ತಮ್ಮ ಬದುಕನ್ನು ಕೊನೆಗೊಳಿಸಿದ್ದಾರೆ! ಇದು ಕಳೆದ ವರ್ಷಕ್ಕಿಂತ 14% ಅಧಿಕ ಎಂದು ಅಲ್ಲಿನ ಸರಕಾರ ಹೇಳಿದೆ.

ಝೋರಯಾಗೆ ಮಾನಸಿಕ ಕಾಯಿಲೆ

ಈ ಚಂದದ ಹುಡುಗಿ ಝೊರೆಯಾ (Zoraya Ter Beek) ಬಳಲುತ್ತಿರುವುದು ಖಿನ್ನತೆ, ಉದ್ವೇಗ ಆಕೆಯ ಬಾಲ್ಯದ ಒಡನಾಡಿಗಳು. ಇತ್ತೀಚೆಗೆ ಆಟಿಸಂ ಕೂಡ ಸೇರಿಕೊಂಡು ಆಕೆಗೆ ಬದುಕೇ ಅಸಹನೀಯವಾಗುತ್ತು. ಯಾವುದೆಲ್ಲ ಔಷಧಿ, ಚಿಕಿತ್ಸಾ ವಿಜ್ಞಾನ ಮತ್ತು ಕೌನ್ಸೆಲಿಂಗ್ ನಡೆದರೂ ಅವಳಿಗೆ ಅದ್ಯಾವುದೂ ರಿಲೀಫ್ ಕೊಡಲಿಲ್ಲ. ವೈದ್ಯರೂ ʼಇನ್ನು ಸಾಧ್ಯವಿಲ್ಲ’ ಎಂದು ಹೇಳಿದ ನಂತರ ಆಕೆ ಆರಿಸಿಕೊಂಡದ್ದು ಸಾವನ್ನು! ಆತ್ಮಹತ್ಯೆ ಮಾಡಿ ಸಾಯಲು ಮನಸಿಲ್ಲ ಎಂದಾಕೆ ಗಟ್ಟಿಯಾದ ನಿರ್ಧಾರ ತೆಗೆದುಕೊಂಡ ನಂತರ ಆಕೆಗೆ ಉಳಿದದ್ದು ಒಂದೇ ಪರಿಹಾರ – ಅದು ದಯಾಮರಣ! ಆಕೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದು 2020ರಲ್ಲಿ. ಅದೀಗ ಪರ ವಿರೋಧ ಚರ್ಚೆಯಾಗಿ ಈಗ ತೀರ್ಪು ಆಕೆಯ ಪರವಾಗಿ ಬಂದಿದೆ. ಅಂದರೆ ದಯಾಮರಣಕ್ಕೆ ಅನುಮತಿ ದೊರೆತಿದೆ.

ರಾಜಮಾರ್ಗ ಅಂಕಣ euthanasia zoraya ter beek

ದಯಾಮರಣ ಹೇಗೆ?

ಅರ್ಜಿದಾರರು ಇಷ್ಟಪಡುವ ಸ್ಥಳದಲ್ಲಿ, ಇಷ್ಟಪಡುವ ಸನ್ನಿವೇಶವನ್ನು ಕ್ರಿಯೇಟ್ ಮಾಡಿ ನಿಗದಿ ಪಡಿಸಿದ ದಿನದಂದು ವೈದ್ಯರು ಆಕೆಗೆ ಒಂದು ಅರಿವಳಿಕೆಯ ಇಂಜೆಕ್ಷನ್ ನೀಡುತ್ತಾರೆ. ಆಕೆ ಕೋಮಾ ತಲುಪುವುದನ್ನು ಕಾಯುವ ವೈದ್ಯರು ನಂತರ ಹೃದಯವು ನಿಧಾನವಾಗಿ ನಿಲ್ಲುವ ಔಷಧಿ ಕೊಡುತ್ತಾರೆ. ಒಂದಿಷ್ಟೂ ನೋವು ಪಡದೆ ಅರ್ಜಿದಾರರು ನಿಧಾನವಾಗಿ ಶಾಶ್ವತ ನಿದ್ದೆಗೆ ಜಾರುತ್ತಾರೆ. ಆಗ ದಯಾಮರಣ ಸಮಿತಿಯು ಅವರನ್ನು ಪರಿಶೀಲನೆ ಮಾಡಿ ಸಾವು ಸಂಭವಿಸಿದೆ ಎಂದು ಘೋಷಣೆ ಮಾಡಿದಲ್ಲಿಗೆ ಪ್ರಕ್ರಿಯೆ ಪೂರ್ತಿ ಆಗುತ್ತದೆ.

ಸಾವನ್ನು ಸ್ವಾಗತಿಸಲು ಮಾನಸಿಕ ಸಿದ್ಧತೆ

ಝೋರಯಾ ಮಾನಸಿಕವಾಗಿ ಧೃಡವಾಗಿ ನಿಂತು ತಾನು ತನ್ನ ಮನೆಯ ಲಿವಿಂಗ್ ರೂಮಿನಲ್ಲಿ ಸೋಫಾದ ಮೇಲೆ ಕುಳಿತು ತನ್ನ ಮುದ್ದಿನ ಬೆಕ್ಕುಗಳನ್ನು ನೇವರಿಸುತ್ತಾ ಸಾವನ್ನು ಸ್ವಾಗತ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ತನ್ನ ದೇಹವನ್ನು ಪಂಚಭೂತಗಳಲ್ಲಿ ಲೀನ ಮಾಡಿ. ಅಂತ್ಯಸಂಸ್ಕಾರಕ್ಕೆ ಜನ ಸೇರಿಸುವ ಅಗತ್ಯ ಇಲ್ಲ. ನನ್ನ ಚಿತಾ ಭಸ್ಮವನ್ನು ಕಾಡಿನೊಳಗೆ ಹರಡಿ ಸಾಕು ಅಂದಿದ್ದಾರೆ.

`ನನಗೆ ಪಾಪಪ್ರಜ್ಞೆ ಕಾಡುತ್ತಿಲ್ಲ. ನನಗಾಗಿ ಯಾರೂ ಕಣ್ಣೀರು ಸುರಿಸುವ ಅಗತ್ಯ ಇಲ್ಲ. ಇದು ನಾನೇ ಆರಿಸಿಕೊಂಡ ಸಾವು. ಹಾಗಾಗಿ ನನಗೆ ಯಾವ ವಿಷಾದವೂ ಇಲ್ಲ’ ಎಂದಾಕೆ ನಗುನಗುತ್ತಾ ಹೇಳುವಾಗ ಯಾರ ಮನಸ್ಸಾದರೂ ಕರಗದೆ ಇರದು!

ಹೋಗಿ ಬಾ ಝೊರೆಯಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

Continue Reading

ದೇಶ

Lok Sabha Election: ಇಂದು 6ನೇ ಹಂತದಲ್ಲಿ 58 ಕ್ಷೇತ್ರಗಳಿಗೆ ಮತದಾನ; ಖಟ್ಟರ್‌, ಕನ್ಹಯ್ಯ ಸೇರಿ ಹಲವರ ಭವಿಷ್ಯ ನಿರ್ಧಾರ

Lok Sabha Election: ಶನಿವಾರ ಆರನೇ ಹಂತದ ಮತದಾನ ನಡೆಯಲಿದೆ. ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌, ಮನೋಹರ ಲಾಲ್‌ ಖಟ್ಟರ್‌, ಕನ್ಹಯ್ಯ ಕುಮಾರ್‌ ಸೇರಿ ಹಲವು ಪ್ರಮುಖ ನಾಯಕರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯು (Lok Sabha Election 2024) ಅಂತಿಮ ಹಂತ ತಲುಪಿದ್ದು, ಶನಿವಾರ (ಮೇ 24) 58 ಕ್ಷೇತ್ರಗಳಲ್ಲಿ 6ನೇ ಹಂತದ ಮತದಾನ (6th Phase Voting) ನಡೆಯಲಿದೆ. ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌, ಮನೋಹರ ಲಾಲ್‌ ಖಟ್ಟರ್‌, ಕನ್ಹಯ್ಯ ಕುಮಾರ್‌ ಸೇರಿ ಹಲವು ಪ್ರಮುಖ ನಾಯಕರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಂಡಿದೆ.

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆಯಲಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಇದ್ದಾರೆ.

6ನೇ ಹಂತದಲ್ಲಿ ಕಣಕ್ಕಿಳಿದ ಪ್ರಮುಖ ಅಭ್ಯರ್ಥಿಗಳು

ಬಾನ್ಸುರಿ ಸ್ವರಾಜ್: ನವದೆಹಲಿ ಕ್ಷೇತ್ರ
ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್‌ ಅವರು ನವದೆಹಲಿ ಲೋಕಸಭಾ ಅಭ್ಯರ್ಥಿಯಾಗಿದ್ದು, ಎಎಪಿಯ ಸೋಮನಾಥ್ ಭಾರ್ತಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಹಾಲಿ ಸಂಸದೆ ಮೀನಾಕ್ಷಿ ಲೇಖಿ ಬದಲು ಬಾನ್ಸುರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮನೇಕಾ ಗಾಂಧಿ: ಸುಲ್ತಾನ್‌ಪುರ
ಮನೇಕಾ ಗಾಂಧಿ ಸುಲ್ತಾನ್‌ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಮಾಜವಾದಿ ಪಕ್ಷದ ರಾಮ್ ಭುಲ್ ನಿಶಾದ್ ಮತ್ತು ಬಹುಜನ ಸಮಾಜ ಪಕ್ಷದ ಉದಯ್ ರಾಜ್ ವರ್ಮಾ ವಿರುದ್ಧ ಕಣಕ್ಕಿಳಿದಿದ್ದಾರೆ.

Maneka Gandhi

ನವೀನ್ ಜಿಂದಾಲ್: ಕುರುಕ್ಷೇತ್ರ
6ನೇ ಹಂತದ ಚುನಾವಣೆಯಲ್ಲಿ ಹರಿಯಾಣದ ಕುರುಕ್ಷೇತ್ರ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಬಿಜೆಪಿ ಅಭ್ಯರ್ಥಿ ನವೀನ್ ಜಿಂದಾಲ್, ಎಎಪಿಯ ಸುಶೀಲ್ ಗುಪ್ತಾ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳದ (ಐಎನ್‌ಎಲ್‌ಡಿ) ಅಭಯ್ ಸಿಂಗ್ ಚೌಟಾಲಾ ವಿರುದ್ಧ ಕಣಕ್ಕಿಳಿದಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಂದಾಲ್ ಬಂದಿದ್ದಾರೆ

ಅಭಿಜಿತ್ ಗಂಗೋಪಾಧ್ಯಾಯ: ತಮ್ಲುಕ್ ಕ್ಷೇತ್ರ
ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿ. ಟಿಎಂಸಿಯ ದೇಬಂಗ್ಶು ಭಟ್ಟಾಚಾರ್ಯ ಮತ್ತು ಸಿಪಿಐ(ಎಂ) ನಿಂದ ಸಯಾನ್ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿದ್ದಾರೆ. ಗಂಗೋಪಾಧ್ಯಾಯ ಅವರು ಕೋಲ್ಕೊತಾ ಹೈಕೋರ್ಟ್‌ನ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿ ಮಾರ್ಚ್‌ನಲ್ಲಿ ಬಿಜೆಪಿ ಸೇರಿದ್ದರು.

ಪ್ರವೀಣ್ ನಿಶಾದ್: ಸಂತ ಕಬೀರ ನಗರ
ಸಂತ ಕಬೀರ್ ನಗರದಲ್ಲಿ ಬಿಜೆಪಿ ಉಸ್ತುವಾರಿ ಪ್ರವೀಣ್ ನಿಶಾದ್, ಸಮಾಜವಾದಿ ಪಕ್ಷದ ಲಕ್ಷ್ಮೀಕಾಂತ್ ಅಲಿಯಾಸ್ ಪಪ್ಪು ನಿಶಾದ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಮನೋಜ್ ತಿವಾರಿ VS ಮತ್ತು ಕನ್ಹಯ್ಯ ಕುಮಾರ್
ಈಶಾನ್ಯ ದೆಹಲಿ ಕ್ಷೇತ್ರದಲ್ಲಿ ಇಬ್ಬರು ಪ್ರಮುಖ ಅಭ್ಯರ್ಥಿಗಳ ವಿರುದ್ಧ ಕದನ ನಡೆಯಲಿದೆ. ಹಾಲಿ ಸಂಸದ ಮನೋಜ್ ತಿವಾರಿ ಮತ್ತು ಕಾಂಗ್ರೆಸ್‌ನ ಕನ್ಹಯ್ಯ ಕುಮಾರ್ ಕಣದಲ್ಲಿದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದ ಏಳು ಸಂಸದರ ಪೈಕಿ ಎಲ್ಲ ಆರು ಸಂಸದರನ್ನು ಕೈಬಿಟ್ಟರೆ, ತಿವಾರಿ ಮಾತ್ರ ಕಣದಲ್ಲಿದ್ದಾರೆ.

Kanhaiya Kumar

ಸಂಬಿತ್ ಪಾತ್ರಾ: ಪುರಿ ಕ್ಷೇತ್ರ
ಒಡಿಶಾದ ಪುರಿ ಕ್ಷೇತ್ರದಿಂದ ಸಂಬಿತ್ ಪಾತ್ರ ಸ್ಪರ್ಧಿಸುತ್ತಿದ್ದಾರೆ. ಬಿಜೆಡಿಯ ಅರೂಪ್ ಪಟ್ನಾಯಕ್ ಮತ್ತು ಕಾಂಗ್ರೆಸ್‌ನ ಜಯನಾರಾಯಣ ಪಟ್ನಾಯಕ್ ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ.

ದಿನೇಶ್ ಲಾಲ್ ಯಾದವ್ VS ಧರ್ಮೇಂದ್ರ ಯಾದವ್
ಅಜಂಗಢ ಕ್ಷೇತ್ರದಲ್ಲಿ ಸಂಸದ ದಿನೇಶ್ ಲಾಲ್ ಯಾದವ್ ನಿರಾಹುವಾ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರ ಸೋದರ ಸಂಬಂಧಿ ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ಅಜಂಗಢ ಕ್ಷೇತ್ರವನ್ನು ಅಖಿಲೇಶ್ ಯಾದವ್ ಗೆದ್ದಿದ್ದರು.

ಮನೋಹರ್ ಲಾಲ್ ಖಟ್ಟರ್: ಕರ್ನಾಲ್
ಬಿಜೆಪಿ ಅಭ್ಯರ್ಥಿ ಮತ್ತು ಹರಿಯಾಣದ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್, ಕರ್ನಾಲ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ದಿವ್ಯಾoಶು ಬುಧಿರಾಜ ವಿರುದ್ಧ ಸ್ಪರ್ಧಿಸಿದ್ದಾರೆ.

ಅನಂತ್ ನಾಗ್ -ರಾಜೌರಿ ಕ್ಷೇತ್ರ
ಜಮ್ಮು – ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ಇಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಬಿಜೆಪಿಯು ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಇದನ್ನೂ ಓದಿ: Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

Continue Reading

ಭವಿಷ್ಯ

Dina Bhavishya : ಕುಟುಂಬದ ಆಪ್ತರಿಂದ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಧನಸ್ಸು ರಾಶಿಯಿಂದ ಶನಿವಾರ ಬೆಳಗ್ಗೆ 11:35ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಮಿಥುನ ರಾಶಿಯವರು ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ಕನ್ಯಾ ರಾಶಿಯವರು ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದ್ದು ಲಾಭವಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಬಿದಿಗೆ 18:57 ವಾರ: ಶನಿವಾರ
ನಕ್ಷತ್ರ: ಜೇಷ್ಠಾ 10:35 ಯೋಗ: ಸಿದ್ದಿ 10:05
ಕರಣ: ತೈತುಲ 07:14 ಅಮೃತ ಕಾಲ: ಬೆಳಗಿನ ಜಾವ 04:12 ರಿಂದ 05:48
ದಿನದ ವಿಶೇಷ: ನಾರದ ಜಯಂತಿ

ಸೂರ್ಯೋದಯ : 05:53   ಸೂರ್ಯಾಸ್ತ : 06:41

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ:ಹಣದ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದು ಕೊಡಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದ್ದು ಲಾಭವಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮ್ಮದಲ್ಲದ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದೂಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟು ಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದವರು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸುವರು. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ ಇರಲಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

Narendra Modi: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜೂನ್‌ 4ರಂದು ಪತನವಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯುತ್ತರ ನೀಡಿದ್ದು, “ನನ್ನನ್ನು ಯಾರಿಂದಲೂ ನಾಶಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಮಧ್ಯೆ ವಾಕ್ಸಮರ, ವಾಗ್ದಾಳಿ, ಟೀಕೆ, ವ್ಯಂಗ್ಯ ಚುರುಕಾಗಿವೆ. ಇದಕ್ಕೆ ನಿದರ್ಶನ ಎಂಬಂತೆ, “ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜೂನ್‌ 4ರಂದು ಪತನವಾಗುತ್ತದೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತ್ಯುತ್ತರ ನೀಡಿದ್ದು, “ನನ್ನನ್ನು ಯಾರಿಂದಲೂ ನಾಶಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಎನ್‌ಡಿಟಿವಿಗೆ ನೀಡಿದ ಸಂದರ್ಶನದ ವೇಳೆ ಮಮತಾ ಬ್ಯಾನರ್ಜಿ ಹೇಳಿಕೆ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು. “ಮಮತಾ ಬ್ಯಾನರ್ಜಿ ಅವರು ಹೇಳಿದ್ದು ನಿಜ. ಜೂನ್‌ 4ರಂದು ಲೋಕಸಭೆ ಅವಧಿ ಮುಗಿಯಲಿದೆ. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಹೊಸ ಸರ್ಕಾರ ರಚಿಸಲಿದೆ. ನಾನು ಕಾಶಿಯವ (ಅವರ ಲೋಕಸಭೆ ಕ್ಷೇತ್ರ), ನಾನು ಅವಿನಾಶಿ. ಕಾಶಿಯನ್ನು ಹೇಗೆ ನಾಶಪಡಿಸಲು ಆಗುವುದಿಲ್ಲವೋ, ಹಾಗೆಯೇ, ನನ್ನನ್ನು ಕೂಡ ಯಾರಿಂದಲೂ ನಾಶಪಡಿಸಲು ಆಗುವುದಿಲ್ಲ” ಎಂಬುದಾಗಿ ಹೇಳಿದರು.

ಬಿಜೆಪಿಯೇ ಅಧಿಕಾರಕ್ಕೆ ಎಂದ ಸಮೀಕ್ಷೆ

ಲೋಕಸಭೆ ಚುನಾವಣೆ ಕುರಿತು ಸಟ್ಟಾ ಬಜಾರ್‌ ಸಮೀಕ್ಷಾ ವರದಿ ತಯಾರಿಸಿದೆ. ಐದು ಹಂತದ ಮತದಾನದ ಮುಕ್ತಾಯದ ಬಳಿಕ ಸಟ್ಟಾ ಬಜಾರ್ ಸಮೀಕ್ಷಾ ವರದಿ ಪ್ರಕಟಿಸಿದಂತೆ, ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದೇ 300 ಸೀಟುಗಳಲ್ಲಿ ಗೆದ್ದರೂ ಕೆಲ ರಾಜ್ಯಗಳಿಗೆ ಬಿಜೆಪಿಗೆ ಅನುಕೂಲವಾದರೆ, ಕೆಲ ರಾಜ್ಯಗಳಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಲಭಿಸಲಿವೆ ಎಂದು ಹೇಳಲಾಗುತ್ತಿದೆ. ಬಿಹಾರ, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಲಿವೆ. ಆದರೆ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳು ಬರಲಿವೆ. ತಮಿಳುನಾಡು ಹಾಗೂ ಒಡಿಶಾ ಕೂಡ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳನ್ನು ತಂದುಕೊಡಲಿವೆ ಎಂಬುದಾಗಿ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

Continue Reading
Advertisement
ರಾಜಮಾರ್ಗ ಅಂಕಣ euthanasia zoraya ter beek
ಅಂಕಣ32 seconds ago

ರಾಜಮಾರ್ಗ ಅಂಕಣ: ಸಾವನ್ನೇ ಆಹ್ವಾನಿಸಿದ ಸುಂದರಿ ಝೋರಯಾ ಟರ್ ಬ್ರೀಕ್

lockup death channagiri
ಕ್ರೈಂ35 mins ago

Lockup Death: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು, ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ

Lok Sabha Election
ದೇಶ53 mins ago

Lok Sabha Election: ಇಂದು 6ನೇ ಹಂತದಲ್ಲಿ 58 ಕ್ಷೇತ್ರಗಳಿಗೆ ಮತದಾನ; ಖಟ್ಟರ್‌, ಕನ್ಹಯ್ಯ ಸೇರಿ ಹಲವರ ಭವಿಷ್ಯ ನಿರ್ಧಾರ

Egg Benefits
ಆರೋಗ್ಯ1 hour ago

Egg Benefits: ನೀವು ಮೊಟ್ಟೆ ಪ್ರಿಯರೆ? ಹಾಗಾದರೆ ಮೊಟ್ಟೆ ತಿನ್ನಬಹುದು ಎಂಬುದೂ ಅರಿವಿರಲಿ!

karnataka Weather Forecast
ಮಳೆ1 hour ago

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

World Thyroid Day
ಆರೋಗ್ಯ2 hours ago

World Thyroid Day: ಇಂದು ವಿಶ್ವ ಥೈರಾಯ್ಡ್‌ ದಿನ; ‘ಗಂಟಲ ಚಿಟ್ಟೆ’ಯ ಬಗ್ಗೆ ಈ ಸಂಗತಿ ನಿಮಗೆ ಗೊತ್ತೆ?

Dina bhavishya
ಭವಿಷ್ಯ3 hours ago

Dina Bhavishya : ಕುಟುಂಬದ ಆಪ್ತರಿಂದ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Narendra Modi
ದೇಶ8 hours ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ8 hours ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು8 hours ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌