FIFA World Cup | ಘಾನಾ ವಿರುದ್ಧ ಗೆದ್ದರೂ ವಿಶ್ವ ಕಪ್‌ನ ನಾಕೌಟ್‌ ಹಂತದಿಂದ ಹೊರಕ್ಕೆ ಬಿದ್ದ ಉರುಗ್ವೆ - Vistara News

ಕ್ರೀಡೆ

FIFA World Cup | ಘಾನಾ ವಿರುದ್ಧ ಗೆದ್ದರೂ ವಿಶ್ವ ಕಪ್‌ನ ನಾಕೌಟ್‌ ಹಂತದಿಂದ ಹೊರಕ್ಕೆ ಬಿದ್ದ ಉರುಗ್ವೆ

ಫಿಫಾ ವಿಶ್ವ ಕಪ್‌ನ (FIFA World Cup) ಲೀಗ್ ಹಂತದ ಹಣಾಹಣಿಯಲ್ಲಿ ಎಚ್‌ ಗುಂಪಿನಿಂದ ಪೋರ್ಚುಗಲ್‌ ಹಾಗೂ ದಕ್ಷಿಣ ಕೊರಿಯಾ ನಾಕೌಟ್ ಹಂತಕ್ಕೇರಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೋಹಾ : ಜಿಯಾರ್ಜಿಯನ್‌ ಅರಾಸ್ಕೆಟಾ (೨೬ ಮತ್ತು ೩೨ನೇ ನಿಮಿಷ) ಾವರ ಅವಳಿ ಗೋಲ್‌ಗಳ ನೆರವಿನಿಂದ ಘಾನಾ ತಂಡದ ವಿರುದ್ಧ ಗೆಲುವು ಸಾಧಿಸಿದ ಹೊರತಾಗಿಯೂ ಉರುಗ್ವೆ ತಂಡ, ಫಿಫಾ ವಿಶ್ವ ಕಪ್‌ನ (FIFA World Cup) ನಾಕೌಟ್‌ ಹಂತಕ್ಕೆ ಪ್ರವೇಶ ಪಡೆಯಲು ವಿಫಲಗೊಂಡಿತು. ದಿನದ ಇನ್ನೊಂದು ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ ಪೋರ್ಚುಗಲ್‌ ತಂಡ ಸೋಲು ಕಂಡಿರುವುದೇ ಈ ಫಲಿತಾಂಶಕ್ಕೆ ಕಾರಣವಾಯಿತು. ಹೀಗಾಗಿ ಎಚ್‌ ಗುಂಪಿನಿಂದ ಪೋರ್ಚುಗಲ್‌ ಹಾಗೂ ದಕ್ಷಿಣ ಕೊರಿಯಾ ತಂಡಗಳು ಮುಂದಿನ ಹಂತಕ್ಕೆ ಪ್ರವೇಶ ಪಡೆಯಿತು.

ಅಲ್‌ ಜಾನೊಬ್‌ ಸ್ಟೇಡಿಯಮ್‌ನಲ್ಲಿ ನಡೆದ ಪಂದ್ಯದಲ್ಲಿ ಆರಂಭದಿಂದಲೂ ಸಂಪೂರ್ಣ ಹಿಡಿತ ಸಾಧಿಸಿಕೊಂಡು ಆಡಿದ ಉರುಗ್ವೆ ಬಳಗ ಪ್ರಥಮಾರ್ಧಕ್ಕೆ ಮೊದಲೇ ಎರಡು ಗೋಲ್‌ಗಳನ್ನು ಬಾರಿಸುವ ಮೂಲಕ ಮುನ್ನಡೆ ಪಡೆದುಕೊಂಡಿತು. ಕೊನೇ ತನಕವೂ ಅದೇ ಗೋಲ್‌ಗಳನ್ನು ಕಾಪಾಡಿಕೊಂಡು ಜಯ ಸಾಧಿಸಿತು.

ಎಜುಕೇಷನ್‌ ಸಿಟಿ ಸ್ಟೇಡಿಯಮ್‌ನಲ್ಲಿ ನಡೆದ ಇನ್ನೊಂದು ಪಂದ್ಯದಲ್ಲಿ ಪೋರ್ಚುಗಲ್‌ ತಂಡದ ವಿರುದ್ಧ ದಕ್ಷಿಣ ಕೊರಿಯಾ ೨-೧ ಗೋಲ್‌ಗಳಿಂದ ಜಯ ಸಾಧಿಸಿತು. ಕೊರಿಯಾ ಪರ ಕಿಮ್‌-ಯಾಂಗ್- ಗಾನ್‌ (೨೭ನೇ ನಿಮಿಷ) ಹಾಗೂ ಹಾಂಗ್- ಹೀ- ಚಾನ್‌ (೯೦+೧ ನಿಮಿಷ) ಗೋಲ್‌ ದಾಖಲಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾದರು. ಪೋರ್ಚುಗಲ್‌ ಪರ ರಿಕಾರ್ಡೊ ಹೊರ್ಟಾ (೫ನೇ ನಿಮಿಷ) ಗೋಲ್‌ ಬಾರಿಸಿದರು.

ಇದನ್ನೂ ಓದಿ | Fifa World Cup | ಫಿಫಾ ಫ್ಯಾನ್ ಫೆಸ್ಟಿವಲ್‌ನಲ್ಲಿ ತ್ರಿವರ್ಣ ಧ್ವಜ ನೆಲಕ್ಕೆ ಬೀಳಿಸಿದರೇ ನೋರಾ ಫತೇಹಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಮಿನಿ ವಿಶ್ವಕಪ್​ ಸಮರದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ದಾಂಡಿಗರಿವರು!

T20 World Cup 2024: ಪಾಕಿಸ್ತಾನ ತಂಡದ ಮಾಜಿ ಆಟಗಾರ ಅಹ್ಮದ್​ ಶೆಹಜಾದ್​ 2014ರ ಟಿ20 ವಿಶ್ವ ಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 62 ಎಸೆತ ಎದುರಿಸಿ 10 ಬೌಂಡರಿ ಹಾಗೂ 5 ಸಿಕ್ಸರ್​ ನೆರವಿನಿಂದ ಅಜೇಯ 111 ರನ್​ ಗಳಿಸಿದ್ದರು. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ಆಟಗಾರರ ಯಾದಿಯಲ್ಲಿ ಶೆಹಜಾದ್ 4ನೇ ಸ್ಥಾನಿಯಾಗಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಕಳೆದ ಮೂರು ತಿಂಗಳುಗಳ ಕಾಲ ಐಪಿಎಲ್​ ಗುಂಗಿನಲ್ಲಿದ್ದ ಕ್ರಿಕೆಟ್​ ಪ್ರೇಮಿಗಳು ಇನ್ನು ಟಿ20 ವಿಶ್ವಕಪ್​(T20 World Cup 2024) ಕಡೆ ತೆರೆದುಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ಟಿ20 ವಿಶ್ವಕಪ್​ ನಡೆಯಲಿದ್ದು ಟೂರ್ನಿ ಆರಂಭಕ್ಕೆ ಇನ್ನು ಕೇವಲ 4 ದಿನ ಮಾತ್ರ ಉಳಿದುಕೊಂಡಿದೆ. ಇದುವರೆಗಿನ 8 ಆವೃತ್ತಿಯ ಟಿ20 ವಿಶ್ವ ಕಪ್​ ಟೂರ್ನಿಯ ಇತಿಹಾಸದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ಅಗ್ರ 5 ಆಟಗಾರರನ್ನು ಪಟ್ಟಿ ಮಾಡಲಾಗಿದ್ದು ಈ ವಿವರ ಇಂತಿದೆ.

ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್‌)


ಟಿ20 ವಿಶ್ವ ಕಪ್ ಕೂಟದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಮಾಡಿದ ದಾಖಲೆ ನ್ಯೂಜಿಲ್ಯಾಂಡ್​ ತಂಡದ ಮಾಜಿ ನಾಯಕ ಬ್ರೆಂಡನ್ ಮೆಕಲಮ್(BB McCullum) ಅವರ ಹೆಸರಿನಲ್ಲಿದೆ. ಬಾಂಗ್ಲಾದೇಶದ ವಿರುದ್ಧ 2012ರ ಆವೃತ್ತಿಯ ಆರಂಭಿಕ ಪಂದ್ಯದ ವೇಳೆ ಮೆಕಲಮ್ 58 ಎಸೆತಗಳಲ್ಲಿ 123 ರನ್ ಗಳಿಸಿದ್ದರು. ಈ ಇನಿಂಗ್ಸ್ ವೇಳೆ ಅವರ ಬ್ಯಾಟ್‌ನಿಂದ 11 ಬೌಂಡರಿ ಮತ್ತು ಏಳು ಸಿಕ್ಸರ್​ ಸಿಡಿಯಲ್ಪಟ್ಟಿತು. ಇದು ಸದ್ಯ ದಾಖಲೆಯಾಗಿಯೇ ಉಳಿದಿದೆ.


ಕ್ರಿಸ್​ ಗೇಲ್​ (ವೆಸ್ಟ್‌ ಇಂಡೀಸ್‌)


2007ರ ಟಿ20 ವಿಶ್ವ ಕಪ್‌ನ ಉದ್ಘಾಟನಾ ಆವೃತ್ತಿಯ ಮೊದಲ ಪಂದ್ಯದಲ್ಲಿ “ಯೂನಿವರ್ಸ್ ಬಾಸ್” ಖ್ಯಾತಿಯ ವಿಂಡೀಸ್​ ದೈತ್ಯ ಕ್ರಿಸ್ ಗೇಲ್(Chris Gayl), ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ 57 ಎಸೆತಗಳಲ್ಲಿ 7 ಬೌಂಡರಿಗಳು ಮತ್ತು 10 ಸಿಕ್ಸರ್‌ಗಳನ್ನು ಒಳಗೊಂಡ ಇನಿಂಗ್ಸ್​ನಲ್ಲಿ 117 ರನ್ ಗಳಿಸಿದರು. ಗೇಲ್​ ಅವರ ಈ ಸ್ಫೋಟಕ ಇನಿಂಗ್ಸ್​ ವೇಳೆ 88 ರನ್​ ಕೇವಲ ಸಿಕ್ಸರ್​ ಮತ್ತು ಬೌಂಡರಿಯಿಂದ ಒಟ್ಟುಗೂಡಿದ್ದವು.


ಅಲೆಕ್ಸ್ ಹೇಲ್ಸ್ (ಇಂಗ್ಲೆಂಡ್‌)

ಇಂಗ್ಲೆಂಡ್​ ಕ್ರಿಕೆಟ್​ ತಂಡದ ಬಲಗೈ ದಾಂಡಿಗ ಅಲೆಕ್ಸ್ ಹೇಲ್ಸ್(Alex Hales) ಈ ಯಾದಿಯಲ್ಲಿ ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. 2014ರ ಟಿ20 ವಿಶ್ವ ಕಪ್​ನಲ್ಲಿ ಶ್ರೀಲಂಕಾ ವಿರುದ್ಧ 64 ಎಸೆತಗಳಲ್ಲಿ ಅಜೇಯ 116 ರನ್ ಗಳಿಸಿದ್ದರು. ಈ ವೇಳೆ 11 ಬೌಂಡರಿ ಮತ್ತು 6 ಸಿಕ್ಸರ್​ ಸಿಡಿಯಲ್ಪಟ್ಟಿತು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು


ಅಹ್ಮದ್​ ಶೆಹಜಾದ್​ (ಪಾಕಿಸ್ತಾನ)


ಪಾಕಿಸ್ತಾನ ತಂಡದ ಮಾಜಿ ಆಟಗಾರ ಅಹ್ಮದ್​ ಶೆಹಜಾದ್​ 2014ರ ಟಿ20 ವಿಶ್ವ ಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 62 ಎಸೆತ ಎದುರಿಸಿ 10 ಬೌಂಡರಿ ಹಾಗೂ 5 ಸಿಕ್ಸರ್​ ನೆರವಿನಿಂದ ಅಜೇಯ 111 ರನ್​ ಗಳಿಸಿದ್ದರು. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ಆಟಗಾರರ ಯಾದಿಯಲ್ಲಿ ಶೆಹಜಾದ್ 4ನೇ ಸ್ಥಾನಿಯಾಗಿದ್ದಾರೆ.


ರಿಲೀ ರೋಸೊ


ದಕ್ಷಿಣ ಆಫ್ರಿಕಾ ತಂಡದ ಮಧ್ಯಮ ಕ್ರಮಾಂಕದ ಎಡಗೈ ಬ್ಯಾಟರ್​ ರಿಲೀ ರೋಸೊ ಅವರು ವಿಶ್ವಕಪ್​ ಟೂರ್ನಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ಆಟಗಾರರ ಯಾದಿಯಲ್ಲಿ 5ನೇ ಸ್ಥಾನಿಯಾಗಿದ್ದಾರೆ. ಕಳೆದ 2022ರಲ್ಲಿ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದಿದ್ದ ಟೂರ್ನಿಯಲ್ಲಿ ರೋಸೊ ಬಾಂಗ್ಲಾದೇಶ ವಿರುದ್ಧ ಸಿಡ್ನಿಯಲ್ಲಿ ನಡೆದಿದ್ದ ಪಂದ್ಯದಲ್ಲಿ 56 ಎಸೆತಗಳಿಂದ 7 ಬೌಂಡರಿ ಮತ್ತು 8 ಸಿಕ್ಸರ್​ ನೆರವಿನಿಂದ 109 ರನ್​ ಬಾರಿಸಿದ್ದರು. ಸದ್ಯ ಈ ಆಟಗಾರರ ಹೆಸರಿನಲ್ಲಿರುವ ದಾಖಲೆಯನ್ನು ಈ ಬಾರಿ ಯಾರು ಮುರಿಯಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾದ ಮುಂದಿರುವ ಸವಾಲುಗಳೇನು?

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು

T20 World Cup 2024: ಭಾರತದ ಸ್ಟಾರ್ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ 2007 ರ ಟಿ20 ವಿಶ್ವ ಕಪ್‌ನಲ್ಲಿ ಇಂಗ್ಲೆಂಡ್ ತಂಡದ ವೇಗಿ ಸ್ಟುವರ್ಟ್ ಬ್ರಾಡ್ ಅವರ ಓವರ್‌ನಲ್ಲಿ 6 ಸಿಕ್ಸರ್(yuvraj singh 6 sixes) ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

VISTARANEWS.COM


on

T20 World Cup 2024
Koo

ಬೆಂಗಳೂರು: ಚುಟುಕು ಕ್ರಿಕೆಟ್​ ಸಮರವಾದ ಐಸಿಸಿ ಟಿ20 ವಿಶ್ವಕಪ್​ ಟೂರ್ನಿ ಆರಂಭಕ್ಕೆ ಇನ್ನು ಕೇವಲ 4 ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಬಾರಿ ಗರಿಷ್ಠ 20 ತಂಡಗಳು ಟೂರ್ನಿಯಲ್ಲಿ ಕಣಕ್ಕಿಳಿಯಲಿವೆ. ಅಮೆರಿಕ ಇದೇ ಮೊದಲ ಬಾರಿಗೆ ವೆಸ್ಟ್​ ಇಂಡೀಸ್​ ಜತೆ ಸೇರಿಕೊಂಡು ಜಂಟಿ ಕ್ರಿಕೆಟ್​ ಟೂರ್ನಿಯ ಆತಿಥ್ಯವಹಿಸಿಕೊಂಡಿದೆ. ಟೂರ್ನಿ ಆರಂಭಕ್ಕೂ ಮುನ್ನ ಇದುವರೆಗಿನ ಟಿ20 ವಿಶ್ವ ಕಪ್ (T20 World Cup 2024)​ ಇತಿಹಾಸದಲ್ಲಿ ಎಂದೂ ಮರೆಯದ ಕೆಲ ಸ್ಮರಣೀಯ ಸನ್ನಿವೇಶಗಳ ಇಣುಕು ನೋಡ ಇಂತಿದೆ.

ಯುವರಾಜ್​ ಸಿಂಗ್​ ಸಿಕ್ಸ್​ ಸಿಕ್ಸರ್​


ಭಾರತದ ಸ್ಟಾರ್ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ 2007 ರ ಟಿ20 ವಿಶ್ವ ಕಪ್‌ನಲ್ಲಿ ಇಂಗ್ಲೆಂಡ್ ತಂಡದ ವೇಗಿ ಸ್ಟುವರ್ಟ್ ಬ್ರಾಡ್ ಅವರ ಓವರ್‌ನಲ್ಲಿ 6 ಸಿಕ್ಸರ್(yuvraj singh 6 sixes) ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇಂಗ್ಲೆಂಡ್​ ತಂಡದ ಫ್ಲಿಂಟಾಫ್​​ ಅವರು ಯುವಿಯನ್ನು ಕೆಣಕಿದ ಕಾರಣ ಸಿಟ್ಟಿಗೆದ್ದ ಯುವಿ ಮುಂದಿನ ಓವರ್​ನಲ್ಲಿ ಬ್ರಾಡ್​ಗೆ ಸಿಕ್ಸರ್​ಗಳ ರುಚಿ ತೋರಿಸಿದರು. ಈ ಘಟನೆ ಪ್ರತಿ ಟಿ20 ವಿಶ್ವ ಕಪ್​ ಆರಂಭಗೊಂಡಾಗಲೂ ಮುನ್ನಲೆಗೆ ಬಂದೇ ಬರುತ್ತದೆ. ಅದರಂತೆ ಟಿ20 ವಿಶ್ವ ಕಪ್​ ಎಂದರೆ ಯುವಿಯ 6 ಸಿಕ್ಸರ್​​ ಎಂದೇ ಪ್ರಸಿದ್ಧಿ ಹೊಂದಿದೆ. ಯುವರಾಜ್​ ಬಳಿಕ ದಕ್ಷಿಣ ಆಫ್ರಿಕಾ ತಂಡದ ಹರ್ಷಲ್ ಗಿಬ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.

ಕಾರ್ಲೊಸ್ ಬ್ರಾಥ್‌ವೇಟ್ ಅಸಾಮ್ಯಾನ್ಯ ಬ್ಯಾಟಿಂಗ್​


2016ರ ಟಿ20 ವಿಶ್ವ ಕಪ್ ಫೈನಲ್​ನ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ವೆಸ್ಟ್​ ಇಂಡೀಸ್​ ತಂಡಕ್ಕೆ ಗೆಲ್ಲಲು ಅಂತಿಮ ಓವರ್​ನಲ್ಲಿ 19 ರನ್​ ಬೇಕಿತ್ತು. ಈ ಓವರ್​ ಎಸೆಯಲು ಬಂದ ಬೆನ್​ ಸ್ಟೋಕ್ಸ್​ಗೆ ಕ್ರೀಸ್​ನಲ್ಲಿದ್ದ ಕಾರ್ಲೊಸ್ ಬ್ರಾಥ್‌ವೇಟ್ ಸತತ ನಾಲ್ಕು ಸಿಕ್ಸರ್‌ ಸಿಡಿಸಿ ವೆಸ್ಟ್ ಇಂಡೀಸ್​ಗೆ ಗೆಲುವು ತಂದು ಕೊಟ್ಟರು. ಈ ವೇಳೆ ಕಾಮೆಂಟರಿ ಪ್ಯಾನಲ್​ನಲ್ಲಿದ್ದ ಇಯಾನ್​ ಬಿಷಪ್​ ಕಾರ್ಲೊಸ್ ಬ್ರಾಥ್‌ವೇಟ್, ಹೆಸರನ್ನು ನೆನಪಿಡಿ! (‘Remember the Name’) ಎಂದು ಹೇಳುವ ಮೂಲಕ ವಿಂಡೀಸ್​ ಗೆಲುವಿನ ಸಂಭ್ರಮದಲ್ಲಿ ತಾವೂ ಕೂಡ ಭಾಗಿಯಾದರು.

ಇದನ್ನೂ ಓದಿ T20 World Cup 2024: ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾದ ಮುಂದಿರುವ ಸವಾಲುಗಳೇನು?

ಪಾಕ್​ ವಿರುದ್ಧ ಗೆದ್ದು ಹೀರೊ ಆದ ಜೋಗಿಂದರ್​ ಶರ್ಮಾ


ಟಿ20 ವಿಶ್ವ ಕಪ್‌ನ ಉದ್ಘಾಟನಾ ಋತುವಿನಲ್ಲಿ ಭಾರತದ ಜೋಗಿಂದರ್ ಶರ್ಮಾ ಹೀರೊ ಆಗಿ ಹೊರಹೊಮ್ಮಿದ್ದರು. ಪಾಕಿಸ್ತಾನ ವಿರುದ್ಧದ ಫೈನಲ್​ನಲ್ಲಿ ಅಂತಿಮ ಓವರ್​ ಎಸೆದ ಜೋಗಿಂದರ್​ ಪಾಕ್​ ಬ್ಯಾಟರ್​ ಮಿಸ್ಬಾ-ಉಲ್-ಹಕ್ ಅವರ ನಿರ್ಣಾಯಕ ವಿಕೆಟ್ ಪಡೆದು ಭಾರತಕ್ಕೆ ಗೆಲುವು ತಂದು ಕೊಟ್ಟರು. ಜೋಗಿಂದರ್ ಎಸೆತದಲ್ಲಿ ಎಸ್ ಶ್ರೀಶಾಂತ್ ಅವರಿಗೆ ಮಿಸ್ಬಾ ಕ್ಯಾಚ್ ನೀಡಿದರು. ಈ ಮೂಲಕ ಭಾರತ ಚೊಚ್ಚಲ ಬಾರಿಗೆ ವಿಶ್ವಕಪ್​ ಗೆದ್ದು ಸಂಭ್ರಮಿಸಿತು.

ರಂಗನಾ ಹೆರಾತ್ ಶ್ರೇಷ್ಠ ಬೌಲಿಂಗ್​ ಸಾಧನೆ


ಶ್ರೀಲಂಕಾ ಕ್ರಿಕೆಟ್​ ತಂಡದ ಸ್ಪಿನ್ನರ್​ ರಂಗನಾ ಹೆರಾತ್ ಅವರು ಟಿ20 ಕ್ರಿಕೆಟ್ ಇತಿಹಾಸದಲ್ಲಿಯೇ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಅವರು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 3.3 ಓವರ್‌ಗಳಲ್ಲಿ 2 ಮೇಡನ್ ಸಹಿತ ಕೇವಲ 3 ರನ್ ಬಿಟ್ಟುಕೊಟ್ಟು 5 ವಿಕೆಟ್ ಉರುಳಿಸಿದರು. ನ್ಯೂಜಿಲೆಂಡ್ ತಂಡ ಕೇವಲ 15.3 ಓವರ್‌ಗಳಲ್ಲಿ 60 ರನ್‌ಗಳಿಗೆ ಆಲೌಟ್ ಆಯಿತು. ಹೆರಾತ್​ ಅವರ ಈ ಬೌಲಿಂಗ್​ ಸಾಧನೆ ಈ ವರೆಗಿನ ಟಿ 20 ವಿಶ್ವ ಕಪ್​ನಲ್ಲಿ ಶ್ರೇಷ್ಠ ಸಾಧನೆಯಾಗಿ ಉಳಿದಿದೆ.

ಧೋನಿ ರನೌಟ್​


ಭಾರತದ ಕ್ರಿಕೆಟ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2016ರ ಟಿ20 ವಿಶ್ವ ಕಪ್​ನ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಅವರ ಕೊನೆಯ ಎಸೆತದಲ್ಲಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೇವಲ 2 ಸೆಕೆಂಡುಗಳಲ್ಲಿ ರನ್ ಔಟ್ ಮಾಡಿ ತಂಡಕ್ಕೆ ಗೆಲುವು ತಂದು ಕೊಟ್ಟರು. ಧೋನಿ ಅವರ ಈ ಚುರುಕಿನ ರನ್ ಔಟ್ ಪ್ರಪಂಚದಾದ್ಯಂತ ಭಾರೀ ಸುದ್ದಿಯಾಗಿತ್ತು. ಉಸೇನ್​ ಬೋಲ್ಟ್​ ಅವರಿಗೆ ಧೋನಿ ಪ್ರತಿಸ್ಪರ್ಧಿ ಎಂದು ಕೆಲವರು ಹೋಲಿಕೆ ಮಾಡಿದ್ದರು.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾದ ಮುಂದಿರುವ ಸವಾಲುಗಳೇನು?

T20 World Cup 2024: ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌, ಹಾರ್ದಿಕ್‌ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಇರುವ ಭಾರತ ತಂಡವನ್ನು ಬಲಿಷ್ಠ ಎನ್ನಲೇಬೇಕು. ಆದರೆ, ಭಾರತ ಪೂರ್ಣ ಎಚ್ಚರವಾಗಿಯೇ ಪ್ರತೀ ಪಂದ್ಯದಲ್ಲಿ ಕಣಕ್ಕಿಳಿಯಬೇಕು.

VISTARANEWS.COM


on

T20 World Cup 2024
Koo

ಬೆಂಗಳೂರು:  2007ರ ಟಿ20 ವಿಶ್ವ ಕಪ್ (T20 World Cup 2024)​ ಉದ್ಘಾಟನಾ ಆವೃತ್ತಿಯಲ್ಲೇ ಚಾಂಪಿಯನ್​ ಆಗಿ ಭಾರತ ಹೊರಹೊಮ್ಮಿತು. ಇದರ ಬಳಿಕ ಭಾರತ ಮತ್ತೆ ಟಿ20 ಚಾಂಪಿಯನ್​ ಆಗಲೇ ಇಲ್ಲ. ಇದೀಗ 17 ವರ್ಷಗಳ ಬಳಿಕ ಮತ್ತೆ ಚಾಂಪಿಯನ್​ ಆಗುವ ಇರಾದೆಯೊಂದಿಗೆ ಟೀಮ್ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ ಆದರೆ, ತಂಡಕ್ಕೆ ಹಲವು ಸವಾಲು ಕೂಡ ಇದೆ.

ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಜೂನ್​ 1ರಿಂದ ವಿಶ್ವಕಪ್​ ಮಿನಿ ಸಮರ ಆರಂಭವಾಗಲಿದ್ದು, ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ರೋಹಿತ್​ ಮತ್ತು ಕೊಹ್ಲಿಗೆ ನಿರ್ಣಾಯಕ ಟೂರ್ನಿ


ಈ ಕೂಟದಲ್ಲಿ ಭಾರತ ನೀಡುವ ಪ್ರದರ್ಶನದ ಮೇಲೆ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮ ಟಿ20 ಭವಿಷ್ಯ ಅಡಗಿದೆ. ಈ ಕೂಟ ಮುಗಿದ ಮೇಲೆ ಯಾರ್ಯಾರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ಪ್ರಶ್ನೆಗಳೂ ಇವೆ. ಹೀಗಾಗಿ ರೋಹಿತ್​ ಮತ್ತು ಕೊಹ್ಲಿ ಪಾಲಿಗೆ ಇದೊಂದು ಮಹತ್ವದ ಕೂಟ ಎನ್ನಲಡ್ಡಿಯಿಲ್ಲ.

ಭಾರತ ಬಲಿಷ್ಠ ಆದರೆ ಎಚ್ಚರ ಅಗತ್ಯ


ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌, ಹಾರ್ದಿಕ್‌ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಇರುವ ಭಾರತ ತಂಡವನ್ನು ಬಲಿಷ್ಠ ಎನ್ನಲೇಬೇಕು. ಆದರೆ, ಭಾರತ ಪೂರ್ಣ ಎಚ್ಚರವಾಗಿಯೇ ಪ್ರತೀ ಪಂದ್ಯದಲ್ಲಿ ಕಣಕ್ಕಿಳಿಯಬೇಕು. ಎದುರಾಳಿಯನ್ನು ಒಮ್ಮೆಯೂ ಕಡೆಗಣಿಸುವುದು ಸಾಧ್ಯವೇ ಇಲ್ಲ. ಯಾರು ಯಾರನ್ನು ಕೆಡವಿ ಬೀಳಿಸುತ್ತಾರೆ ಎಂಬುದು ಟಿ20 ಮಾದರಿಯಲ್ಲಿ ಅಂದಾಜಿಸುವುದಕ್ಕೆ ಕಷ್ಟ ಸಾಧ್ಯ. ಇದಕ್ಕೆ ಉತ್ತಮ ನಿದರ್ಶನವೆಂದರೆ ಅಭ್ಯಾಸ ಪಂದ್ಯದಲ್ಲಿ ಅನುಭವಿ ಬಾಂಗ್ಲಾದೇಶಕ್ಕೆ ಕ್ರಿಕೆಟ್​ ಶಿಶು ಅಮೆರಿಕ ಸೋಲುಣಿಸಿದ್ದು. ಆದ್ದರಿಂದ ಭಾರತ ಎಚ್ಚರ ತಪ್ಪಬಾರದು. ಕೆಲವೇ ಓವರ್‌ಗಳಲ್ಲಿ ಪಂದ್ಯದ ಚಿತ್ರಣವೇ ಬದಲಾಗುವುದು ಟಿ20 ಪಂದ್ಯಗಳ ಶಕ್ತಿ.

ಇದನ್ನೂ ಓದಿ T20 World Cup 2024: ನ್ಯೂಯಾರ್ಕ್​ಗೆ ಪ್ರಯಾಣಿಸಿದ ಮೊದಲ ಬ್ಯಾಚ್​; ವಿರಾಟ್​ ಕೊಹ್ಲಿ ಗೈರು, ಅಭ್ಯಾಸ ಪಂದ್ಯಕ್ಕೂ ಅನುಮಾನ

ದ್ರಾವಿಡ್​ಗೆ ಕೊನೆಯ ಟೂರ್ನಿ


ರಾಹುಲ್​ ದ್ರಾವಿಡ್​ ಅವರಿಗೆ ಕೋಚ್​ ಆಗಿ ಇದು ಕೊನೆಯ ಟೂರ್ನಿಯಾಗಿದೆ. ಈ ಟೂರ್ನಿ ಮುಕ್ತಾಯದ ಬಳಿಕ ಅವರು ಕೋಚಿಂಗ್​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. 2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ರಾಹುಲ್​ ದ್ರಾವಿಡ್​ಗೆ ಕೋಚ್​ ಆಗಿ ಮೊದಲ ಸವಾಲಾಗಿತ್ತು. ಇಲ್ಲಿ ಕಪ್​ ಗೆಲ್ಲಲು ತಂಡ ವಿಫಲವಾಗಿತ್ತು. ಬಳಿಕ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ನಲ್ಲಿಯೂ ಭಾರತ ಫೈನಲ್​ನಲ್ಲಿ ಸೋಲು ಕಂಡಿತ್ತು. ಇದೀಗ ನಿರ್ಗಮನದ ಹಂತದಲ್ಲಿರುವ ದ್ರಾವಿಡ್​ ಈ ಟೂರ್ನಿಯಲ್ಲಿದ್ದಾರು ಭಾರತಕ್ಕೆ ಕಪ್​ ಗೆಲ್ಲಿಸಿಕೊಡಬೇಕಿದೆ. ಆದ್ದರಿಂದ ದ್ರಾವಿಡ್​ಗೂ ಈ ಕೂಟ ಮಹತ್ವದಾಗಿದೆ.

ಟಿ20 ವಿಶ್ವ ಕಪ್​ನಲ್ಲಿ ಭಾರತ ಸಾಧನೆ

2007ಚಾಂಪಿಯನ್​
20092ನೇ ಸುತ್ತು
20102ನೇ ಸುತ್ತು
20122ನೇ ಸುತ್ತು
2014ರನ್ನರ್​ ಅಪ್​
2016ಸೆಮಿಫೈನಲ್​
20212ನೇ ಸುತ್ತು
2022ಸೆಮಿಫೈನಲ್​

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರಿಕೆಟ್

Andre Russell Dance: ಬಾಲಿವುಡ್ ನಟಿ ಅನನ್ಯಾ ಪಾಂಡೆ ಜತೆ ‘ಲುಟ್ ಪಟ್ ಗಯಾ’ ಹಾಡಿಗೆ ಡ್ಯಾನ್ಸ್​ ಮಾಡಿದ ಆ್ಯಂಡ್ರೆ ರಸೆಲ್​

Andre Russell Dance: ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ(Shah Rukh Khan) ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Andre Russell Dance:
Koo

ಮುಂಬಯಿ: ಭಾನುವಾರ(ಮೇ 26) ನಡೆದಿದ್ದ ಐಪಿಎಲ್​ ಫೈನಲ್​ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡ ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿ ಮೂರನೇ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿತು. ಈ ಗೆಲುವಿನ ಬಳಿಕ ಕೆಕೆಆರ್​ ತಂಡ ಪಬ್​ನಲ್ಲಿ ಪಾರ್ಟಿ ಮಾಡಿತ್ತು. ಇದೇ ವೇಳೆ ಆ್ಯಂಡ್ರೆ ರಸೆಲ್(Andre Russell Dance)​ ಅವರು ಬಾಲಿವುಡ್ ನಟಿ ಅನನ್ಯಾ ಪಾಂಡೆ(Ananya Pandey) ಜತೆ ಶಾರೂಖ್ ಖಾನ್ ಅಭಿನಯದ ಡಂಕಿ ಚಿತ್ರದ​ ‘ಲುಟ್ ಪಟ್ ಗಯಾ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ(Shah Rukh Khan) ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

ವೆಸ್ಟ್​ ಇಂಡೀಸ್​ ತಂಡ ಸ್ಫೋಟಕ ಬ್ಯಾಟರ್​ ರಸೆಲ್(Andre Russell) ಬಾಲಿವುಡ್​ ನಟಿ ಅವಿಕಾ ಗೋರ್(Avika Gor) ಜತೆ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ವಿಡಿಯೊ ಕೂಡ ಕೆಲವು ದಿನಗಳ ಹಿಂದೆ ವೈರಲ್​ ಆಗಿತ್ತು. ​’ಲಡ್ಕಿ ತು ಕಮಲ್ ಕಿ’ ಎನ್ನುವ ಹಾಡಿಗೆ ರೆಸೆಲ್ ಅವಿಕಾ ಸೇರಿ ಹೆಜ್ಜೆ ಹಾಕಿರುವ ಈ ಹಾಡು ಯೂಟ್ಯೂಬ್​ನಲ್ಲಿ ಮೇ 9 ರಂದು ಬಿಡುಗಡೆಯಾಗಿತ್ತು.

ಈ ಹಾಡಿನಲ್ಲಿ ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚುವ ಜತೆಗೆ ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಅವಿಕಾ ಗೋರ್ ಭಾರತೀಯ ನಟಿಯಾಗಿದ್ದು, ಅವರು ಮುಖ್ಯವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸುತ್ತಾರೆ.

ಇದನ್ನೂ ಓದಿ IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ಮೂರನೇ ಟ್ರೋಫಿ ಗೆದ್ದ ಕೆಕೆಆರ್​


ಚೆನ್ನೈಯ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದ್ದ ಅತ್ಯಂತ ನೀರಸ ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಹೈದರಾಬಾದ್​ ತಂಡ 18.3 ಓವರ್​ಗಳಲ್ಲಿ 113 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಚೇಸಿಂಗ್​ ನಡೆಸಿದ ಕೆಕೆಆರ್​ ಕೇವಲ 10.3 ಓವರ್​ನಲ್ಲಿ 2 ವಿಕೆಟ್​ ನಷ್ಟಕ್ಕೆ 114 ರನ್​ ಬಾರಿಸಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಇದು ಕೆಕೆಆರ್​ಗೆ ಒಲಿದ ಮೂರನೇ ಐಪಿಎಲ್​ ಟ್ರೋಫಿ.

Continue Reading
Advertisement
T20 World Cup 2024
ಕ್ರೀಡೆ36 mins ago

T20 World Cup 2024: ಮಿನಿ ವಿಶ್ವಕಪ್​ ಸಮರದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ದಾಂಡಿಗರಿವರು!

Cyclone Remal
ದೇಶ37 mins ago

Cyclone Remal: ರೆಮಲ್‌ ಚಂಡಮಾರುತದ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ; 16 ಮಂದಿಯನ್ನು ಬಲಿ ಪಡೆದ ಭೀಕರ ಮಳೆ

Prajwal revanna Case
ಪ್ರಮುಖ ಸುದ್ದಿ42 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೇ 31ರ ಮೊದಲು ಬರಲೇಬೇಕು! ಕಾರಣ ಇಲ್ಲಿದೆ

Suspicious Death
ಕ್ರೈಂ48 mins ago

Suspicious Death : ಕೊಪ್ಪಳದಲ್ಲಿ ತಾಯಿ, ಮಗಳು, ಮೊಮ್ಮಗನ ಅನುಮಾನಾಸ್ಪದ ಸಾವು

Viral Video
ವೈರಲ್ ನ್ಯೂಸ್48 mins ago

Viral Video: BMW ಕಾರು ಬಾನೆಟ್‌ ಮೇಲೆ ವ್ಯಕ್ತಿ…ಬ್ಯುಸಿ ರಸ್ತೆಯಲ್ಲಿ ಬಾಲಕನ ಪುಂಡಾಟ; ವಿಡಿಯೋ ವೈರಲ್‌

Munnar Tour
ದೇಶ60 mins ago

Munnar Tour: ಪ್ರಕೃತಿಯ ನಡುವೆ ಅವಿತಿರುವ ಸೌಂದರ್ಯದ ಗಣಿ ಮುನ್ನಾರ್! ಜೀವನದಲ್ಲಿ ಒಮ್ಮೆಯಾದರೂ ನೋಡಲೇಬೇಕು

Road Accident in Anekal
ಕ್ರೈಂ1 hour ago

Road Accident : ತಿರುವಿನಲ್ಲಿದ್ದ ಜವರಾಯ; ಸ್ಪೀಡಾಗಿ ಬಂದು ಫೆನ್ಸಿಂಗ್ ಕಂಬಕ್ಕೆ ಡಿಕ್ಕಿ, ಬೈಕ್‌ ಸವಾರ ಸಾವು

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು

Human trafficking
ದೇಶ2 hours ago

Human trafficking Case: ದೇಶಾದ್ಯಂತ NIA ರೇಡ್‌; ಮಾನವ ಕಳ್ಳಸಾಗಣೆ ಜಾಲ ಬಯಲು

Stone Quarry Collapses
ದೇಶ2 hours ago

Stone Quarry Collapses: ಕಲ್ಲಿನ ಗಣಿ ಕುಸಿದು 10 ಮಂದಿ ಜೀವಂತ ಸಮಾಧಿ; ರಕ್ಷಣಾ ಕಾರ್ಯಾಚರಣೆಗೆ ಭೀಕರ ಮಳೆ ಅಡ್ಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ19 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌