Tirutpati Temple | ನವೆಂಬರ್‌ ತಿಂಗಳಲ್ಲಿ 127 ಕೋಟಿ ರೂಪಾಯಿ ಆದಾಯ ಗಳಿಸಿದ ತಿರುಪತಿ ದೇಗುಲ - Vistara News

ದೇಶ

Tirutpati Temple | ನವೆಂಬರ್‌ ತಿಂಗಳಲ್ಲಿ 127 ಕೋಟಿ ರೂಪಾಯಿ ಆದಾಯ ಗಳಿಸಿದ ತಿರುಪತಿ ದೇಗುಲ

ವಿಶ್ವ ವಿಖ್ಯಾತ ತಿರುಮಲ ತಿರುಪತಿ ದೇಗುಲದಲ್ಲಿ ನವೆಂಬರ್‌ ತಿಂಗಳಲ್ಲಿ ಭರ್ಜರಿ ಆದಾಯ ಗಳಿಸಿದೆ.

VISTARANEWS.COM


on

Tirupati Temple Since it takes 40 hours for darshan in Tirupati a new rule has been implemented here are the details
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ತಿರುಪತಿಯ ವೆಂಕಟೇಶ್ವರ ದೇಗುಲಕ್ಕೆ (Tirutpati Temple) ಕಳೆದ ನವೆಂಬರ್‌ ತಿಂಗಳಲ್ಲಿ ದಾಖಲೆಯ ೧೨೭ ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ. ಕೊರೊನಾ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದ್ದ ಆದಾಯದಲ್ಲಿ ಚೇತರಿಕೆ ಕಂಡಿದೆ. ಕೊರೊನಾ ನಿರ್ಬಂಧಗಳು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಭಕ್ತರು ತಿರುಪತಿಗೆ ಸತತವಾಗಿ ಭೇಟಿ ನೀಡುತ್ತಿರುವ ಕಾರಣ ಆದಾಯದಲ್ಲಿ ಏರಿಕೆ ಕಂಡಿದೆ.

ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಹಣಾಧಿಕಾರಿ ಎ. ವಿ ಧರ್ಮಾರೆಡ್ಡಿ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ಈ ವೇಳೆ ಅವರು ನವೆಂಬರ್‌ ತಿಂಗಳಲ್ಲಿ ಒಟ್ಟಾರೆ ೨೨.೭೭ ಲಕ್ಷ ಮಂದಿ ದೇಗುಲದಲ್ಲಿ ದೇವರ ದರ್ಶನ ಮಾಡಿದ್ದಾರೆ ಎಂಬುದಾಗಿ ಹೇಳಿದ್ದಾರೆ.

ನವೆಂಬರ್‌ ತಿಂಗಳಲ್ಲಿ ಭಾರೀ ಆದಾಯ ಸಂಗ್ರಹಗೊಂಡಿದೆ. ಶ್ರೀವಾರಿ ಹುಂಡಿಯಲ್ಲಿ ೧೨೭. ೩೧ ಕೋಟಿ ರೂಪಾಯಿ ಕಾಣಿಕೆ ಬಿದ್ದಿದೆ. ಲಾಡು ಪ್ರಸಾದದಿಂದ ೧.೦೩ ಕೋಟಿ ರೂಪಾಯಿ ಸಂಗ್ರಹವಾಗಿದೆ. ನವೆಂಬರ್‌ ತಿಂಗಳಲ್ಲಿ ೪೩. ೧೩ ಲಕ್ಷ ಮಂದಿ ಅನ್ನು ಪ್ರಸಾದ ಸ್ವೀಕಾರ ಮಾಡಿದ್ದು, ೮.೯೧ ಲಕ್ಷ ಮಂದಿ ಮುಡಿ ಕೊಟ್ಟಿದ್ದಾರೆ ಎಂಬುದಾಗಿ ಅವರು ಹೇಳಿದರು.

ಕಳೆದ ಫೆಬ್ರವರಿ ತಿಂಗಳಲ್ಲಿ ೭೯.೩೪ ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿತ್ತು. ಮಾರ್ಚ್‌ನಲ್ಲಿ ಅದು ೧೨೮.೬೦ ಕೋಟಿ ರೂಪಾಯಿಗೆ ಏರಿಕೆಯಾಗಿತ್ತು. ಏಪ್ರಿಲ್‌ನಲ್ಲಿ ೧೨೭ ಕೋಟಿ ರೂಪಾಯಿ, ಮೇ ತಿಂಗಳಲ್ಲಿ ೧೩೦.೨೯ ಕೋಟಿ ರೂಪಾಯಿ ಗಳಿಸಿತ್ತು. ಬಳಿಕ ಆದಾಯದಲ್ಲಿ ಇಳಿಕೆ ಕಂಡಿತ್ತು. ಇದೀಗ ಮತ್ತೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Amulya Jagadish | ತಿರುಪತಿ ತಿಮ್ಮಪ್ಪನಿಗೆ ಅವಳಿ ಮಕ್ಕಳ ಮುಡಿ ಅರ್ಪಿಸಿದ ನಟಿ ಅಮೂಲ್ಯಾ-ಜಗದೀಶ್​ ದಂಪತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Chandrababu Naidu: ಆಂಧ್ರ ಪ್ರದೇಶದ ರಾಜಧಾನಿ ಅಮರಾವತಿ; ಚಂದ್ರಬಾಬು ನಾಯ್ಡು ಘೋಷಣೆ

Chandrababu Naidu: ಆಂಧ್ರ ಪ್ರದೇಶದ ಮುಖುಮಂತ್ರಿಯಾಗಿ ತೆಲುಗು ದೇಶಂ ಪಾರ್ಟಿಯ ನಾಯಕ ಚಂದ್ರಬಾಬು ನಾಯ್ಡು ಅಧಿಕೃತವಾಗಿ ಆಯ್ಕೆಯಾಗಿದೆ. ಜೂನ್‌ 12 ರಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಅವರು ಅಮರಾವತಿಯನ್ನು ಆಂಧ್ರ ಪ್ರದೇಶದ ರಾಜಧಾನಿಯನ್ನಾಗಿ ಘೋಷಿಸಿದ್ದಾರೆ.

VISTARANEWS.COM


on

Chandrababu Naidu
Koo

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು (Chandrababu Naidu) ನೇತೃತ್ವದ ತೆಲುಗು ದೇಶಂ ಪಾರ್ಟಿ (TDP) ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ನಾಳೆ (ಜೂನ್‌ 12) ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಸಿದ್ಧತೆ ನಡೆಸಲಾಗಿದೆ. ಈ ಮಧ್ಯೆ ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು, ಅಮರಾವತಿ (Amaravati)ಯನ್ನು ಆಂಧ್ರ ಪ್ರದೇಶದ ರಾಜಧಾನಿಯನ್ನಾಗಿ ಘೋಷಿಸಿದರು. ಈ ಬಾರಿ ಆಂಧ್ರ ಪ್ರದೇಶದಲ್ಲಿ ಟಿಡಿಪಿ, ಬಿಜೆಪಿ ಮತ್ತು ಜೆಎಸ್‌ಪಿ ಒಟ್ಟಾಗಿ ಚುನಾವಣೆ ಎದುರಿಸಿದ್ದವು.

ಎ-ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಟಿಡಿಪಿ, ಬಿಜೆಪಿ ಮತ್ತು ಪವನ್‌ ಕಲ್ಯಾಣ ನೇತೃತ್ವದ ಜನಸೇನಾ ಪಾರ್ಟಿ(JSP)ಯ ಶಾಸಕರು ಪಾಲ್ಗೊಂಡಿದ್ದರು. ಈ ವೇಳೆ ಮುಖ್ಯಮಂತ್ರಿ ಹುದ್ದೆಗೆ ಚಂದ್ರಬಾಬು ನಾಯ್ಡು ಅವರ ಹೆಸರನ್ನು ಪವನ್‌ ಕಲ್ಯಾಣ ಪ್ರಸ್ತಾಪಿಸಿದರು. ಇದಕ್ಕೆ ಬಿಜೆಪಿಯ ಡಿ.ಪುರಂದರೇಶ್ವರಿ ಬೆಂಬಲ ಸೂಚಿಸಿದರು. ಬಳಿಕ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ನಂತರ ಸಭೆಯನ್ನುದ್ದೇಶಿಸಿ ಮಾತನಾಡಿ ಚಂದ್ರಬಾಬು ನಾಯ್ಡು ಅವರು, ʼʼಅಮರಾವತಿ ಆಂಧ್ರ ಪ್ರದೇಶದ ರಾಜಧಾನಿಯಾಗಲಿದೆ. ನಾವು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಕೆಲವು ಭಾಗಗಳನ್ನು ಮಾತ್ರವಲ್ಲ ಇಡೀ ರಾಜ್ಯದ ಏಳಿಗೆಗೆ ಕೊಡುಗೆ ನೀಡುತ್ತೇವೆʼʼ ಎಂದು ಅವರು ಭರವಸೆ ನೀಡಿದರು.

ಈ ಮೂಲಕ ನಿರ್ಗಮಿತ ಮುಖ್ಯಮಂತ್ರಿ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು. ವೈಎಸ್‌ಆರ್‌ಸಿಪಿ ಮುಖಂಡ, ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಅವರು ಈ ಹಿಂದೆ ವಿಶಾಖಪಟ್ಟಣಂ ಅನ್ನು ಆಡಳಿತಾತ್ಮಕ ರಾಜಧಾನಿಯಾಗಿ ಅಭಿವೃದ್ಧಿಪಡಿಸುವುದಾಗಿ ಮತ್ತು ಅಲ್ಲಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದರು. ಇದನ್ನು ಪ್ರಸ್ತಾವಿಸಿದ ಚಂದ್ರಬಾಬು ನಾಯ್ಡು, ವಿಶಾಖಪಟ್ಟಣಂನಲ್ಲಿ ವೈಎಸ್‌ಆರ್‌ಸಿಪಿಯನ್ನು ಸೋಲಿಸುವ ಮೂಲಕ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು. ಜಗನ್‌ ಮೋಹನ್‌ ರೆಡ್ಡಿ ಅವರು ಅಮರಾವತಿಯನ್ನು ಶಾಸಕಾಂಗ ರಾಜಧಾನಿಯಾಗಿ, ವಿಶಾಖಪಟ್ಟಣಂ ಅನ್ನು ಆಡಳಿತಾತ್ಮಕ ರಾಜಧಾನಿಯಾಗಿ ಮತ್ತು ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಮಾಡಿಕೊಳ್ಳುವ ಮೂಲಕ ರಾಜ್ಯದಲ್ಲಿ ವಿಕೇಂದ್ರೀಕೃತ ಅಭಿವೃದ್ಧಿಯ ಕಲ್ಪನೆಯನ್ನು ಹುಟ್ಟು ಹಾಕಿದ್ದರು.

ಸರ್ಕಾರದ ಧ್ಯೇಯವಾಕ್ಯ ‘ರಾಜ್ಯ ಮೊದಲು’ ಎಂದು ಚಂದ್ರಬಾಬು ನಾಯ್ಡು ತಿಳಿಸಿದರು. “ನಮ್ಮ ಆರ್ಥಿಕ ಪರಿಸ್ಥಿತಿ ಹೇಗಿದೆ ಎಂದು ನಮಗೆ ತಿಳಿದಿಲ್ಲ. ನಮ್ಮ ರಾಜ್ಯದ ಸಾಲ ಏನು, ಹಣವನ್ನು ಎಲ್ಲಿಂದ ಎರವಲು ಪಡೆಯಲಾಗಿದೆ ಮತ್ತು ಯಾವುದನ್ನು ಅಡಮಾನ ಇಡಲಾಗಿದೆ ಎಂಬುದೂ ತಿಳಿದಿಲ್ಲ. ಆದರೆ ನಾವು ‘ರಾಜ್ಯ ಮೊದಲು’ ಎಂಬ ಧ್ಯೇಯವಾಕ್ಯದೊಂದಿಗೆ ಕೆಲಸ ಮಾಡುತ್ತೇವೆ ಮತ್ತು ಸರ್ವಾಂಗೀಣ ಅಭಿವೃದ್ಧಿಯ ಗುರಿಯನ್ನು ಹೊಂದಿದ್ದೇವೆ” ಎಂದು ಭರವಸೆ ನೀಡಿದರು.

ಇದನ್ನೂ ಓದಿ: Modi 3.0 Government: ನರೇಂದ್ರ ಮೋದಿ ಮುಂದೆ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಇಟ್ಟಿರುವ ಬೇಡಿಕೆಗಳು ಇಷ್ಟು!

ಮೋದಿ ಭಾಗಿ

ಜೂ. 12ರಂದು ಆಯೋಜಿಸಿರುವ ಆಂಧ್ರಪ್ರದೇಶ ಮತ್ತು ಒಡಿಶಾ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 164 ಸ್ಥಾನಗಳನ್ನು ಗೆದ್ದುಕೊಂಡಿದೆ.

Continue Reading

ದೇಶ

Parliament Session 2024: ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ; ಸ್ಪೀಕರ್‌ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?

Parliament Session 2024: ಜೂನ್‌ 24 ಹಾಗೂ ಜೂನ್‌ 25ರಂದು ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್‌ 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟು 8 ದಿನಗಳವರೆಗೆ ವಿಶೇಷ ಅಧಿವೇಶನ ನಡೆಯಲಿದೆ.

VISTARANEWS.COM


on

Parliament Session 2024
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಕೂಟವು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ 71 ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್ ವಿಶೇಷ ಅಧಿವೇಶನ (Parliament Session 2024) ಕರೆಯಲಾಗಿದೆ. ವಿಶೇಷ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಆಯ್ಕೆ ಸೇರಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ ಆರಂಭವಾಗುತ್ತದೆ. ಜೂನ್‌ 24 ಹಾಗೂ ಜೂನ್‌ 25ರಂದು ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್‌ 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟು 8 ದಿನಗಳವರೆಗೆ ವಿಶೇಷ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಯಾವುದೇ ವಿಧೇಯಕಗಳ ಮಂಡನೆ ಕುರಿತು ಮಾಹಿತಿ ಲಭ್ಯವಾಗಿಲ್ಲ.

Parliament Winter session will held from December 4 to 22

ಖಾತೆ ಹಂಚಿಕೆಯಲ್ಲಿ ಮೋದಿ ಪಾರಮ್ಯ

ಸಚಿವರಿಗೆ ಖಾತೆ ಹಂಚಿಕೆಯಲ್ಲೂ ನರೇಂದ್ರ ಮೋದಿ ಅವರೇ ಪ್ರಾಬಲ್ಯ ಮೆರೆದಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರಿಗೆ, ಹಣಕಾಸು ಖಾತೆಯನ್ನು ನಿರ್ಮಲಾ ಸೀತಾರಾಮನ್‌, ರಕ್ಷಣಾ ಖಾತೆಯನ್ನು ರಾಜನಾಥ್‌ ಸಿಂಗ್‌ ಹಾಗೂ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಖಾತೆಯನ್ನು ನಿತಿನ್‌ ಗಡ್ಕರಿ ಅವರಿಗೇ ನೀಡುವ ಮೂಲಕ ನರೇಂದ್ರ ಮೋದಿ ಅವರು ಮೊದಲಿನಂತೆಯೇ ಬಿಜೆಪಿ ಬಳಿಯೇ ಉಳಿಸಿಕೊಳ್ಳುವ ಮೂಲಕ ಚಾಣಾಕ್ಷತನ ಮೆರೆದಿದ್ದಾರೆ. ಅಷ್ಟೇ ಅಲ್ಲ, ಮೈತ್ರಿ ಸರ್ಕಾರದ ಮೇಲೆಯೂ ತಮ್ಮ ಹಿಡಿತ ಇದೆ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ಮೈತ್ರಿ ಸರ್ಕಾರ ರಚನೆಗೂ ಮೊದಲು, ನಿತೀಶ್‌ ಕುಮಾರ್‌ ಹಾಗೂ ಟಿಡಿಪಿ ಸೇರಿ ಮೈತ್ರಿ ಪಕ್ಷಗಳಿಗೇ ಪ್ರಮುಖ ನಾಲ್ಕು ಖಾತೆಗಳಲ್ಲಿ ಒಂದಷ್ಟನ್ನು ಮೋದಿ ನೀಡಬೇಕಾಗುತ್ತದೆ. ಅದರಲ್ಲೂ ಗೃಹ ಖಾತೆ ಹಾಗೂ ಹಣಕಾಸು ಖಾತೆಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಡಬೇಕಾಗುತ್ತದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದರೆ, ಮೊದಲ ಹಾಗೂ ಎರಡನೇ ಅವಧಿಯಂತೆ, ಮೂರನೇ ಅವಧಿಯಲ್ಲೂ ನರೇಂದ್ರ ಮೋದಿ ಅವರು ಪ್ರಮುಖ ಖಾತೆಗಳನ್ನು ಬಿಜೆಪಿ ಬಳಿಯೇ ಉಳಿಸಿಕೊಳ್ಳುವ ಮೂಲಕ ತಮ್ಮ ಹಿಡಿತವನ್ನು ಸಾಬೀತುಪಡಿಸಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: Narendra Modi: ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರಿಗೆ ಹೇಳಿದ ಕಿವಿ ಮಾತು ಇದು

Continue Reading

ದೇಶ

Narendra Modi: ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರಿಗೆ ಹೇಳಿದ ಕಿವಿ ಮಾತು ಇದು

Narendra Modi: ಪ್ರಧಾನಿಯಾಗಿ ಅಧಿಕಾರ ಕೈಗೆತ್ತಿಕೊಂಡ ಬಳಿಕ ಸೋಮವಾರ ನರೇಂದ್ರ ಮೋದಿ ಅವರು ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಕ್ಯಾಬಿನೆಟ್‌ನ ಭಾಗವಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ 71 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಯಿತು. ಈ ವೇಳೆ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಅವರು, “ಅನಗತ್ಯ ಹೇಳಿಕೆಗಳನ್ನು ನೀಡಬೇಡಿ ಮತ್ತು ನಿಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಗತ್ಯವಿದ್ದಾಗ ಮಾತ್ರ ಮಾತನಾಡಿ” ಎಂದು ನಲಹೆ ನೀಡಿದರು.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ (Narendra Modi) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿಯಾಗಿ ಅಧಿಕಾರ ಕೈಗೆತ್ತಿಕೊಂಡ ಬಳಿಕ ಅವರು ಸೋಮವಾರ (ಜೂನ್‌ 10) ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಕ್ಯಾಬಿನೆಟ್‌ನ ಭಾಗವಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ 71 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಯಿತು (Cabinet 3.0). ಈ ವೇಳೆ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಅವರು, “ಅನಗತ್ಯ ಹೇಳಿಕೆಗಳನ್ನು ನೀಡಬೇಡಿ ಮತ್ತು ನಿಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಗತ್ಯವಿದ್ದಾಗ ಮಾತ್ರ ಮಾತನಾಡಿ” ಎಂದು ನಲಹೆ ನೀಡಿದರು.

“ಸಮಯಕ್ಕೆ ಸರಿಯಾಗಿ ಸಚಿವಾಲಯವನ್ನು ತಲುಪಬೇಕು. ಇದು ಕಚೇರಿ ಸಿಬ್ಬಂದಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆʼʼ ಎಂದು ಪ್ರಧಾನಿ ಕೇಂದ್ರ ಸಚಿವರಿಗೆ ಕಿವಿ ಮಾತು ಹೇಳಿದರು. “ಕಡತದ ಬಗ್ಗೆ ರಾಜ್ಯ ಸಚಿವರೊಂದಿಗೆ ಚರ್ಚೆ ನಡೆಸಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಅವರೊಂದಿಗೆ ಚರ್ಚೆ ನಡೆಸಿ. ಅವರನ್ನೂ ಸಕ್ರಿಯವಾಗಿ ತೊಡಗಿಸಿಕೊಳ್ಳಿ” ಎಂದು ಮೋದಿ ಸಚಿವರಿಗೆ ಸಲಹೆ ನೀಡಿದರು.

ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

ನರೇಂದ್ರ ಮೋದಿ ಅವರ ನಿವಾಸದಲ್ಲಿಯೇ ಸಂಪುಟ ಸಭೆ ನಡೆದಿದ್ದು, 30 ಸಂಪುಟ ದರ್ಜೆ ಸಚಿವರು, ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದರು. ಇನ್ನು ಆರಂಭದಲ್ಲಿ ಅವರು ‘ಪಿಎಂ ಕಿಸಾನ್ ನಿಧಿ’ ಬಿಡುಗಡೆಯ ಕಡತಕ್ಕೆ ಮೋದಿ ಸಹಿ ಹಾಕಿದ್ದರು. ಇದು ಅವರು ಮೂರನೇ ಅವಧಿಯಲ್ಲಿ ಸಹಿ ಹಾಕಿದ ಮೊದಲ ಫೈಲ್​. ಪಿಎಂ ಕಿಸಾನ್ ನಿಧಿಯ 17ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಕಡತಕ್ಕೆ ಅವರು ಸಹಿ ಹಾಕಿದ್ದರು. ಈ ಯೋಜನೆ ಮೂಲಕ 9.3 ಕೋಟಿ ರೈತರಿಗೆ ಪ್ರಯೋಜನ ನೀಡುವ ಸುಮಾರು 20,000 ಕೋಟಿ ರೂ. ಬಿಡುಗಡೆಯಾಗಲಿದೆ.

ಪ್ರತಿಭಾ ಪಾಟೀಲ್‌, ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

ಸೋಮವಾರ ಅಧಿಕಾರ ವಹಿಸಿಕೊಂಡ ಕೂಡಲೇ ಮೋದಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ (Pratibha Patil) ಮತ್ತು ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್‌ ಸಿಂಗ್‌ (Manmohan Singh) ಮತ್ತು ಎಚ್‌.ಡಿ.ದೇವೇಗೌಡ (HD Devegowda) ಅವರಿಗೆ ಕರೆ ಮಾಡಿ ಆಶೀರ್ವಾದ ಪಡೆದುಕೊಂಡರು.

ಇದನ್ನೂ ಓದಿ: Rashtrapati Bhavan: ಮೋದಿ ಪ್ರಮಾಣ ವಚನ ಸಮಾರಂಭದ ವೇಳೆ ಕಾಣಿಸಿಕೊಂಡಿದ್ದು ಚಿರತೆಯಲ್ಲ; ಪೊಲೀಸರ ಸ್ಪಷ್ಟನೆ

ಪ್ರತಿಭಾ ಪಾಟೀಲ್‌ ಮತ್ತು ಮನಮೋಹನ್‌ ಸಿಂಗ್ ಇಬ್ಬರೂ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಿಯಾಗಿದ್ದರು. ಕಾಂಗ್ರೆಸ್ ಬೆಂಬಲಿತ ಯುನೈಟೆಡ್ ಫ್ರಂಟ್ ಸರ್ಕಾರದ ಅವಧಿಯಲ್ಲಿ ದೇವೇಗೌಡ ಅವರು ಪ್ರಧಾನಿಯಾಗಿದ್ದರು. ದೇವೇಗೌಡ ಅವರ ಪುತ್ರ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮೋದಿ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ (ಸಂಪುಟ ದರ್ಜೆ)ಯ ಸಚಿವರಾಗಿ ಅವರು ನಿಯುಕ್ತಿಗೊಂಡಿದ್ದಾರೆ.

Continue Reading

ದೇಶ

Supreme Court: ನೀಟ್​ ಅಕ್ರಮ ಆರೋಪ; ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್‌ ಜಾರಿ ಮಾಡಿದ ಸುಪ್ರೀಂ ಕೋರ್ಟ್‌

Supreme Court: ಪದವಿಪೂರ್ವ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಹೊಸದಾಗಿ ಪರೀಕ್ಷೆ ನಡೆಸುವಂತೆ ಹಲವು ಅಭ್ಯರ್ಥಿಗಳು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಮಂಗಳವಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್‌ ಜಾರಿ ಮಾಡಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

VISTARANEWS.COM


on

Supreme Court
Koo

ನವದೆಹಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ (NEET UG)ಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಹೊಸದಾಗಿ ಪರೀಕ್ಷೆ ನಡೆಸುವಂತೆ ಹಲವು ಅಭ್ಯರ್ಥಿಗಳು ಸುಪ್ರೀಂ ಕೋರ್ಟ್‌ (Supreme Court) ಕದ ತಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಮಂಗಳವಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಗೆ ನೋಟಿಸ್‌ ಜಾರಿ ಮಾಡಿದೆ. ಇದೇ ವೇಳೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ತಡೆಯಲು ನಿರಾಕರಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಎನ್‌ಟಿಎಗೆ ಸೂಚಿಸಿದೆ. ಅಲ್ಲದೆ ಈ ಪ್ರಕರಣ ಪರೀಕ್ಷೆಯ ಪಾವಿತ್ರ್ಯತೆಯ ಬಗ್ಗೆಯೂ ಅನುಮಾನ ಮೂಡಿಸಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ನೀಟ್‌ ಪರೀಕ್ಷೆಗೆ ಈ ವರ್ಷ ದೇಶಾದ್ಯಂತ 24 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72,782 ಮಂದಿ ಗೈರಾಗಿದ್ದರು. ಇನ್ನು 10,29,154 ಬಾಲಕರು 13,76,831 ಬಾಲಕಿಯರು ಹಾಗೂ 18 ಮಂದಿ ತೃತೀಯ ಲಿಂಗಿಗಳು ಪರೀಕ್ಷೆ ಬರೆದಿದ್ದರು.

ದೇಶಾದ್ಯಂತ 571 ನಗರ ಮತ್ತು ದೇಶದ ಹೊರಗಿನ 14 ನಗರಗಳು ಸೇರಿದಂತೆ 4,750 ವಿವಿಧ ಕೇಂದ್ರಗಳಲ್ಲಿ ಮೇ 5ರ ಮಧ್ಯಾಹ್ನ 2ರಿಂದ 5:20ರ ವರೆಗೆ ಪರೀಕ್ಷೆ ನಡೆದಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ಜೂನ್​ 4ರಂದು ನೀಟ್​ ಫಲಿತಾಂಶ ಪ್ರಕಟವಾಗಿತ್ತು.

ಆರೋಪ ಏನು?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ. ಇನ್ನು ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂದು ಕೆಲವು ಪೋಷಕರು ಆರೋಪಿಸಿದ್ದಾರೆ. ಹೀಗಾಗಿ ಮರು ಪರೀಕ್ಷೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: NEET UG 2024: ನೀಟ್‌ನಲ್ಲಿ ಹೆಚ್ಚು ಅಂಕ ಗಳಿಸಲು ಏನು ಮಾಡಬೇಕು? ಈ ಟಾಪರ್‌ ಹೇಳೋದು ಕೇಳಿ

1,500 ವಿದ್ಯಾರ್ಥಿಗಳ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಸಮಿತಿ ರಚನೆ

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳ ಫಲಿತಾಂಶವನ್ನು ಮರು ಮೌಲ್ಯಮಾಪನ ಮಾಡಲು ಸಮಿತಿಯೊಂದನ್ನು ರಚಿಸಿದೆ ಎಂದು ಎನ್‌ಟಿಎ ಜೂನ್‌ 8ರಂದು ಮಾಹಿತಿ ನೀಡಿತ್ತು.

“ನೀಟ್‌ ಬರೆದ ಅಭ್ಯರ್ಥಿಗಳಿಗೆ ರ‍್ಯಾಂಕ್‌ ನೀಡುವ ಮಾನದಂಡಕ್ಕೆ ಗ್ರೇಸ್‌ ಮಾರ್ಕ್ಸ್‌ ನೀಡಿರುವುದರಿಂದ ಯಾವುದೇ ಪರಿಣಾಮ ಉಂಟಾಗಿಲ್ಲ. ಆದರೂ ಗ್ರೇಸ್‌ ಮಾರ್ಕ್ಸ್‌ ಪಡೆದವರ ಉತ್ತರ ಪತ್ರಿಕೆಗಳನ್ನು ಮತ್ತೆ ಮೌಲ್ಯಮಾಪನ ಮಾಡಲಾಗುತ್ತದೆ. ಕೇಂದ್ರ ಶಿಕ್ಷಣ ಸಚಿವಾಲಯವು ಈ ಕುರಿತು ಸಮಿತಿಯೊಂದನ್ನು ರಚಿಸಿದೆ. ಮರು ಮೌಲ್ಯಮಾಪನದಿಂದ ವಿದ್ಯಾರ್ಥಿಗಳು ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ಯಾವುದೇ ಪರಿಣಾಮ ಉಂಟಾಗುವುದಿಲ್ಲ” ಎಂಬುದಾಗಿ ಎನ್‌ಟಿಎ ಮಹಾ ನಿರ್ದೇಶಕ ಸುಬೋಧ್‌ ಸಿಂಗ್‌ ಮಾಹಿತಿ ನೀಡಿದ್ದರು. ಹಾಗೆಯೇ ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ, ಪ್ರಶ್ನೆಪತ್ರಿಕೆಗಳ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Continue Reading
Advertisement
Lifetime achievement felicitation ceremony for retired Judge Chandrashekharaiah on June 29 in Bengaluru
ಬೆಂಗಳೂರು17 mins ago

Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

murder case
ಮೈಸೂರು21 mins ago

Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Womens Commission president Dr Nagalakshmi Chaudhary visit bisaadihatti village
ತುಮಕೂರು23 mins ago

Koratagere News: ಗ್ರಾಮೀಣ ಹೆಣ್ಣುಮಕ್ಕಳಿಗೆ ಮೂಲಸೌಕರ್ಯ ಒದಗಿಸುವುದು ಮೊದಲ ಆದ್ಯತೆ: ಮಹಿಳಾ ಆಯೋಗದ ಅಧ್ಯಕ್ಷೆ

IND vs USA
ಕ್ರೀಡೆ28 mins ago

IND vs USA: ಅಪಾಯಕಾರಿ ಅಮೆರಿಕ ಸವಾಲಿಗೆ ಸಡ್ಡು ಹೊಡೆದೀತೇ ಟೀಮ್​ ಇಂಡಿಯಾ?

Chandrababu Naidu
ದೇಶ38 mins ago

Chandrababu Naidu: ಆಂಧ್ರ ಪ್ರದೇಶದ ರಾಜಧಾನಿ ಅಮರಾವತಿ; ಚಂದ್ರಬಾಬು ನಾಯ್ಡು ಘೋಷಣೆ

Contaminated water
ಕರ್ನಾಟಕ48 mins ago

Contaminated Water: ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವಾಂತಿ, ಭೇದಿಯಿಂದ 35 ಜನ ಅಸ್ವಸ್ಥ; ಕಲುಷಿತ ನೀರು ಸೇವನೆ ಶಂಕೆ

Actor Darshan
ಕರ್ನಾಟಕ48 mins ago

Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

Actor Darshan gets a series of questions from the police
ಸಿನಿಮಾ55 mins ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಪ್ರಮುಖ ಸುದ್ದಿ1 hour ago

Actor Darshan : ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

Paris Olympics 2024
ಕ್ರೀಡೆ2 hours ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಕನ್ನಡಿಗ ಬೋಪಣ್ಣ, ಸುಮಿತ್‌ ನಾಗಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan gets a series of questions from the police
ಸಿನಿಮಾ55 mins ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ24 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

ಟ್ರೆಂಡಿಂಗ್‌