INDvsBAN | ಅರ್ಧ ಶತಕ ಬಾರಿಸಿ ಮಿಂಚಿದರೂ, ಕ್ಯಾಚ್‌ ಬಿಟ್ಟು ಟ್ರೋಲ್‌ ಆದ ಕೆ. ಎಲ್‌ ರಾಹುಲ್‌! - Vistara News

ಕ್ರಿಕೆಟ್

INDvsBAN | ಅರ್ಧ ಶತಕ ಬಾರಿಸಿ ಮಿಂಚಿದರೂ, ಕ್ಯಾಚ್‌ ಬಿಟ್ಟು ಟ್ರೋಲ್‌ ಆದ ಕೆ. ಎಲ್‌ ರಾಹುಲ್‌!

ಮೆಹೆದಿ ಹಸನ್ ನೀಡಿದ್ದ ಸುಲಭ ಕ್ಯಾಚ್‌ ಬಿಟ್ಟ ಕೆ. ಎಲ್‌ ರಾಹುಲ್‌ ಟೀಮ್‌ ಇಂಡಿಯಾದ (INDvsBAN) ಅಭಿಮಾನಿಗಳ ಪಾಲಿಗೆ ವಿಲನ್‌ ಎನಿಸಿಕೊಂಡರು.

VISTARANEWS.COM


on

kl rahul
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೀರ್‌ಪುರ್‌ : ಭಾರತ ಮತ್ತ ಬಾಂಗ್ಲಾದೇಶ ನಡುವಿನ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಲಿಗೆ ಹೀರೋ ಆಗಬೇಕಾಗಿದ್ದ ಕೆ. ಎಲ್‌ ರಾಹುಲ್‌ ಏಕಾಏಕಿ ವಿಲನ್ ಆಗಿದ್ದಾರೆ. ಬಾಂಗ್ಲಾದೇಶ ವಿರುದ್ಧ ಅಜೇಯ ೩೮ ರನ್‌ ಬಾರಿಸಿದ್ದ ಮೆಹೆದಿ ಹಸನ್‌ ಅವರ ಸುಲಭ ಕ್ಯಾಚ್‌ ಕೈ ಚೆಲ್ಲುವ ಮೂಲಕ ತಂಡದ ಸೋಲಿಗೆ ಕಾರಣರಾದರು. ಹೀಗಾಗಿ ಪಂದ್ಯ ಮುಗಿದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಕೆ. ಎಲ್‌ ರಾಹುಲ್‌ ಟ್ರೆಂಡ್‌ ಆದರು.

ಮೀರ್‌ಪುರದ ಕಠಿಣ ಪಿಚ್‌ನಲ್ಲಿ ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ ೪೧.೨ ಓವರ್‌ಗಳಲ್ಲಿ ೧೮೬ ರನ್‌ಗಳಿಗೆ ಆಲ್‌ಔಟ್‌ ಆಯಿತು. ಭಾರತ ತಂಡದ ಘಟಾನುಘಟಿ ಬ್ಯಾಟರ್‌ಗಳು ವೈಫಲ್ಯ ಕಂಡ ವೇಳೆ ವಿಕೆಟ್‌ಕೀಪಿಂಗ್ ಕೋಟಾದಲ್ಲಿ ಸ್ಥಾನ ಪಡೆದಿದ್ದ ಕೆ. ಎಲ್‌ ರಾಹುಲ್‌ ಐದನೆಯವರಾಗಿ ಬ್ಯಾಟ್‌ ಮಾಡಲು ಇಳಿದರು. ಅಲ್ಲದೆ ಸಂಯಮದಿಂದ ಬ್ಯಾಟ್‌ ಬೀಸಿ ೭೦ ಎಸೆತಗಳಲ್ಲಿ ೭೩ ರನ್‌ ಬಾರಿಸಿದರು.ಅವರು ಔಟಾದ ಬಳಿಕ ಭಾರತ ತಂಡದ ಉಳಿದ ಬ್ಯಾಟರ್‌ಗಳೂ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲದ ಕಾರಣ ಭಾರತ ತಂಡ ೧೮೬ ರನ್‌ಗಳಿಗೆ ಆಲ್‌ಔಟ್‌ ಆಯಿತು. ಭಾರತ ತಂಡ ಸಣ್ಣ ಮೊತ್ತ ಪೇರಿಸಿದ ಹೊರತಾಗಿಯೂ ಟೀಮ್‌ ಕೆ. ಎಲ್‌ ರಾಹುಲ್‌ ಹೀರೋ ಎನಿಸಿಕೊಂಡರು.

ಭಾರತ ತಂಡ ನೀಡಿದ ಸಾಧಾರಣ ಮೊತ್ತವನ್ನು ಬೆನ್ನಟ್ಟಲು ಹೊರಟ ಬಾಂಗ್ಲಾದೇಶ ತಂಡ ಉತ್ತಮ ಆರಂಭವನ್ನೇ ಪಡೆಯಿತು. ಆದರೆ ಆ ಬಳಿಕ ಭರ್ಜರಿ ಬೌಲಿಂಗ್ ದಾಳಿ ನಡೆಸಿದ ಬೌಲರ್‌ಗಳು ಬಾಂಗ್ಲಾ ಬ್ಯಾಟರ್‌ಗಳನ್ನು ಕಟ್ಟಿ ಹಾಕಿದರು. ಆದರೆ, ಮೆಹೆದಿ ಹಸನ್‌ ಮಿರಾಜ್‌ (೩೮*) ಟೀಮ್‌ ಇಂಡಿಯಾದ ಗೆಲುವು ಕಸಿದರು. ಆದರೆ, ವಿಕೆಟ್‌ಕೀಪರ್‌ ಕೆ. ಎಲ್‌ ರಾಹುಲ್‌ ಮೆಹೆದಿ ಹಸನ್‌ ೧೫ ರನ್‌ ಗಳಿಸಿದ್ದಾಗ ನೀಡಿದ್ದ ಸುಲಭವಾಗಿ ನೀಡಿದ್ದ ಕ್ಯಾಚ್‌ ಅನ್ನು ಕೈ ಚೆಲ್ಲಿದ್ದರು. ಅದು ೧೦ನೇ ವಿಕೆಟ್‌ ಹಾಗೂ ೯ ವಿಕೆಟ್‌ಗೆ ೧೫೫ ರನ್ ಗಳಿಸಿತ್ತು.

ಈ ಕ್ಯಾಚ್‌ ಭಾರತ ತಂಡದ ಸೋಲಿಗೆ ಕಾರಣವಾಯಿತು. ಹೀಗಾಗಿ ಕೆ. ಎಲ್‌ ರಾಹುಲ್‌ ಒಂದೇ ಪಂದ್ಯದಲ್ಲಿ ಹೀರೊ ಹಾಗೂ ವಿಲನ್‌ ಎನಿಸಿಕೊಂಡರು.

ಇದನ್ನೂ ಓದಿ | INDvsBAN | ಗೆಲುವಿನ ಹೊಸ್ತಿಲಲ್ಲಿ ಎಡವಿದ ಭಾರತ, ಮೊದಲ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ 1 ವಿಕೆಟ್‌ ವೀರೋಚಿತ ಸೋಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs PAK: ಭಾರತ-ಪಾಕ್​ ಪಂದ್ಯಕ್ಕೆ ಸಚಿನ್ ಹಾಜರ್; ಮಾಜಿ ಅಧ್ಯಕ್ಷ ಒಬಾಮಗೂ ಇರದ ಭದ್ರತೆಯಲ್ಲಿ ನಡೆಯಲಿದೆ ಪಂದ್ಯ

IND vs PAK: ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್​ ಪಂದ್ಯಕ್ಕೆ ಮಾಸ್ಟರ್‌ ಬ್ಲಾಸ್ಟರ್‌ ಖ್ಯಾತಿಯ ಸಚಿನ್‌ ತೆಂಡೂಲ್ಕರ್‌(Sachin Tendulkar) ಕೂಡ ಹಾಜರ್​ ಆಗಲಿದ್ದಾರೆ. ಈಗಾಗಲೇ ನ್ಯೂಯಾರ್ಕ್​ ತಲುಪಿರುವ ಸಚಿನ್​ ಈ ಪಂದ್ಯವನ್ನು ಕಣ್ತುಂಬಿಸಿಕೊಳ್ಳುವುದರ ಜತೆಗೆ ಭಾರತ ತಂಡವನ್ನು ಹುರಿದುಂಬಿಸಲಿದ್ದಾರೆ.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಇಂದು ನಡೆಯುವ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್​ ಪಂದ್ಯಕ್ಕೆ ಮಾಸ್ಟರ್‌ ಬ್ಲಾಸ್ಟರ್‌ ಖ್ಯಾತಿಯ ಸಚಿನ್‌ ತೆಂಡೂಲ್ಕರ್‌(Sachin Tendulkar) ಕೂಡ ಹಾಜರ್​ ಆಗಲಿದ್ದಾರೆ. ಈಗಾಗಲೇ ನ್ಯೂಯಾರ್ಕ್​ ತಲುಪಿರುವ ಸಚಿನ್​ ಈ ಪಂದ್ಯವನ್ನು ಕಣ್ತುಂಬಿಸಿಕೊಳ್ಳುವುದರ ಜತೆಗೆ ಭಾರತ ತಂಡವನ್ನು ಹುರಿದುಂಬಿಸಲಿದ್ದಾರೆ.

ಸಚಿನ್​ ಅವರು ನ್ಯೂಯಾರ್ಕ್​ನಲ್ಲಿ ಬೇಸ್​ ಬಾಲ್​ ಆಡಿದ ಫೋಟೊಗಳು ಕೂಡ ವೈರಲ್​ ಆಗಿದೆ. ಸಚಿನ್​ ಅವರನ್ನು ಕಂಡು ನ್ಯೂಯಾರ್ಕ್​ ಜನತೆ ಅವರ ಜತೆ ಫೋಟೊ ಮತ್ತು ಆಟೋಗ್ರಾಫ್​ ಕೂಡ ಪಡೆದಿದ್ದಾರೆ. ಈ ಪಂದ್ಯಕ್ಕೆ ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ಅತ್ಯಂತ ಬಿಗಿ ಭದ್ರತೆಯಲ್ಲಿ ಏರ್ಪಡಿಸಲಾಗಿದೆ.

ಈಗಾಗಲೇ ಭದ್ರತೆಯ ಬಗ್ಗೆ ಮಾಹಿತಿ ನೀಡಿರುವ ನ್ಯೂಯಾರ್ಕ್​ನ ಪೊಲೀಸ್‌ ಮಹಾನಿರ್ದೇಶಕ ಪ್ಯಾಟ್ರಿಕ್‌ ರೈಡರ್‌, ನಮಗೆ ಕ್ರಿಕೆಟ್‌ ಹೊಸತೇ ಆಗಿರಬಹುದು. ಆದರೆ ಭದ್ರತೆಯ ಯೋಜನೆ ಹೊಸತಲ್ಲ. ಅಂದು ಅಧ್ಯಕ್ಷ ಬರಾಕ್‌ ಒಬಾಮ ಅವರಿಗೆ ಒದಗಿಸಿದ ಭದ್ರತೆಗಿಂತಲೂ ಹೆಚ್ಚಿನ ಭದ್ರತೆ ಈ ಪಂದ್ಯಕ್ಕೆ ಇರಲಿದೆ ಎಂದು ಹೇಳಿದ್ದಾರೆ.

ಪಂದ್ಯ ಜಿದ್ದಾಜಿದ್ದಿನಿಂದ ಕೂಡಿರುವ ನಿಟ್ಟಿನಲ್ಲಿ ಅಭಿಮಾನಿಗಳು ಕೂಡ ದೊಡ್ಡ ಸಂಖ್ಯೆಯಲ್ಲಿ ಸ್ಟೇಡಿಯಂಗೆ ಬರುವ ಸಾಧ್ಯತೆ ಇದೆ. ಇದೇ ಕಾರಣದಿಂದ ಸ್ಟೇಡಿಯಂಗೆ 4 ಹಂತದ ಭಾರೀ ಭದ್ರತೆ ಏರ್ಪಡಿಸಲಾಗಿದೆ.

ಇದನ್ನೂ ಓದಿ IND vs PAK: ಮೋದಿಯ ಪ್ರಮಾಣ ವಚನದ ಬದಲು ಭಾರತ-ಪಾಕ್ ಪಂದ್ಯ ವೀಕ್ಷಿಸುವೆ ಎಂದ ​ಶಶಿ ತರೂರ್

1. ಸ್ನೈಪರ್ ಗನ್​ ಕಣ್ಗಾವಲು

ನ್ಯೂಯಾರ್ಕ್​ನ(New York stadium) ವಿಶೇಷ ಮಿಲಿಟರಿ ಪಡೆ ಸ್ನೈಪರ್ ಗನ್ ಹಿಡಿದು ಸ್ಟೇಡಿಯಂನ ಮೇಲ್ಛಾವಣಿಯಲ್ಲಿ ಕಣ್ಗಾವಲಿಟ್ಟಿದೆ. ಇದರ ಫೋಟೊಗಳು ಈಗಾಗಲೇ ವೈರಲ್​ ಆಗಿದೆ.

2. ನೊ-ಫ್ಲೈ ಝೋನ್

ಪಂದ್ಯದ ವೇಳೆ ಡ್ರೋನ್ ದಾಳಿ ನಡೆಸುವ ಸಾಧ್ಯತೆ ಕೂಡ ಕಂಡುಬಂದಿರುವ ಕಾರಣ ಪಂದ್ಯ ನಡೆಯುವ ಕ್ರೀಡಾಂಗಣದ ಸುತ್ತ ‘ನೊ-ಫ್ಲೈ ಝೋನ್’ ಎಂದು ಘೋಷಿಸಲಾಗಿದೆ. ಆದರೆ, ವಿಶೇಷ ಸೇನಾ ಹೆಲಿಕಾಪ್ಟರ್‌ಗಳು ಸ್ಕೈಲೈನ್‌ನಲ್ಲಿ ಗಸ್ತು ತಿರುಗಲಿದೆ.

3. ಸಿಸಿಟಿವಿ ಕಣ್ಗಾವಲು

ಪಂದ್ಯ ನೋಡಲು ಬರುವ ಪ್ರೇಕ್ಷಕರ ಗುಂಪಿನ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಯನ್ನು ಪತ್ತೆಹಚ್ಚಲು ಸ್ಟೇಡಿಯಂ ಒಳಗಡೆ ಮತ್ತು ಹೊರಗಡೆ ಹೈಟೆಕ್ ಸಿಸಿಟಿವಿ ಕ್ಯಾಮೆರಾಗಳನ್ನು ಬಳಸಲಾಗಿದೆ. ಇದು ಕ್ರೀಡಾಂಗಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಳವಡಿಸಲಾಗಿದೆ.

4. ವಿಶೇಷ ಪೊಲೀಸ್​ ಪಡೆ

ನ್ಯೂಯಾರ್ಕ್ ಪೊಲೀಸ್ ಇಲಾಖೆ (NYPD) ಮತ್ತು ಇತರ ಭದ್ರತಾ ಏಜೆನ್ಸಿಗಳು ಸಮಗ್ರ ಭದ್ರತಾ ಯೋಜನೆಯನ್ನು ಕಲ್ಪಿಸಿದೆ. ಪಂದ್ಯದ ವೇಳೆ ಯಾರು ಕೂಡ ಮೈದಾನಕ್ಕೆ ನುಗ್ಗದಂತೆ ಎಚ್ಚರ ವಹಿಸಲಾಗಿದೆ. ಅಲ್ಲದೆ ಭದ್ರತಾ ನಿಯಮಗಳನ್ನು ಕೂಡ ಪ್ರಕಟಿಸಲಾಗಿದೆ. ಯಾರಾದರು ಮೈದಾನಕ್ಕೆ ನುಗ್ಗಿ ಆಟಗಾರರನ್ನು ತಬ್ಬಿಕೊಂಡರೆ ಜೈಲು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ.

ಹೈವೋಲ್ಟೇಜ್ ಕದನ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕೂಡ ಕಾರಣ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

Continue Reading

ಕ್ರಿಕೆಟ್

IND vs PAK: ಮೋದಿಯ ಪ್ರಮಾಣ ವಚನದ ಬದಲು ಭಾರತ-ಪಾಕ್ ಪಂದ್ಯ ವೀಕ್ಷಿಸುವೆ ಎಂದ ​ಶಶಿ ತರೂರ್

IND vs PAK: ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ವಿದೇಶಾಂಗ ನೀತಿಗಳು ಸಕಾರಾತ್ಮಕ ಹಾಗೂ ನಕಾರಾತ್ಮಕ ಅಂಶಗಳನ್ನು ಹೊಂದಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಸಂಸತ್​ನಲ್ಲಿ ಚರ್ಚಿಸಲಾಗುವುದು ಎಂದು ಶಶಿ ತರೂರ್ ಹೇಳಿದ್ದಾರೆ. ತರೂರ್​ ಹೇಳಿಕೆಗೆ ಪರ-ವಿರೋಧ ವ್ಯಕ್ತವಾಗಿದೆ.

VISTARANEWS.COM


on

IND vs PAK
Koo

ನವದೆಹಲಿ: ಒಂದೆಡೆ ದೇಶದ ಪ್ರಧಾನಿಯಾಗಿ ಮೂರನೇ ಬಾರಿ(Modi 3.0 Cabinet) ಗದ್ದುಗೆ ಏರಲಿರುವ ನರೇಂದ್ರ ಮೋದಿ (Narendra Modi) ಇಂದು (ಜೂನ್‌ 9) ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ (Modi 3.0 Cabinet). ಈ ಕಾರ್ಯಕ್ರಮಕ್ಕೆ ದೇಶ ವಿದೇಶಗಳ ನಾಯಕರು ಭಾಗಿಯಾಗಲಿದ್ದಾರೆ. ಮತ್ತೊಂದೆಡೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಕಾದಾಟ ನಡೆಸಲಿದೆ. ಇದೀಗ ಕಾಂಗ್ರೆಸ್​ ಸಂಸದ ಶಶಿ ತರೂರ್(Shashi Tharoor) ಅವರು ತಾನು ಮೋದಿ ಅವರ​ ಪದಗ್ರಹಣ ಸಮಾರಂಭದ ಬದಲು ಭಾರತ-ಪಾಕಿಸ್ತಾನ ಕ್ರಿಕೆಟ್​ ಪಂದ್ಯ ನೋಡಲು ಕಾತರಗೊಂಡಿದ್ದೇನೆ ಎಂದು ಲೇವಡಿ ಮಾಡಿದ್ದಾರೆ.

ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಸಂಸದ ಶಶಿ ತರೂರ್​, ನನ್ನನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಿಲ್ಲ. ಹೀಗಾಗಿ ನಾನು ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್​ ಪಂದ್ಯವನ್ನು ವೀಕ್ಷಿಸುತ್ತೇನೆ. ಪ್ರಧಾನಿ ಪ್ರಮಾಣವಚನ ಸಮಾರಂಭಕ್ಕೆ ಬೇರೆ ರಾಷ್ಟ್ರದ ಅದರಲ್ಲೂ ಭಾರತ ವಿರೋಧಿ ಮನಸ್ಥಿತಿಯ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರನ್ನು ಆಹ್ವಾನಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳುವ ಮೂಲಕ ಮೋದಿಗೆ ಟಾಂಗ್​ ಕೊಟ್ಟಿದ್ದಾರೆ.

ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ವಿದೇಶಾಂಗ ನೀತಿಗಳು ಸಕಾರಾತ್ಮಕ ಹಾಗೂ ನಕಾರಾತ್ಮಕ ಅಂಶಗಳನ್ನು ಹೊಂದಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಸಂಸತ್​ನಲ್ಲಿ ಚರ್ಚಿಸಲಾಗುವುದು ಎಂದು ಶಶಿ ತರೂರ್ ಹೇಳಿದ್ದಾರೆ. ತರೂರ್​ ಹೇಳಿಕೆಗೆ ಪರ-ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ Modi 3.0 Cabinet: ಪ್ರಮಾಣ ವಚನಕ್ಕೂ ಮುನ್ನ ಗಾಂಧಿ, ಅಟಲ್‌ ಸಮಾಧಿಗೆ ಮೋದಿ ನಮನ

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಪೂರ್ಣಗೊಂಡಿದೆ. ಏಳು ವಿದೇಶಿ ನಾಯಕರು ಸೇರಿದಂತೆ ಒಟ್ಟು 8,000 ಗಣ್ಯರು ಉಪಸ್ಥಿತರಿರಲಿದ್ದಾರೆ. ಇನ್ನು ಗಣ್ಯರಲ್ಲಿ ವಿವಿಧ ವೃತ್ತಿಪರರು, ಸಾಂಸ್ಕೃತಿಕ ಕಲಾವಿದರು ಸೇರಿದ್ದಾರೆ. ಸಂಜೆ 7:31ರ ಹೊತ್ತಿಗೆ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ರಾಜಘಾಟ್ ಗೆ ತೆರಳಿ, ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದ ಮೋದಿ, ತದನಂತರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು. ರಾಷ್ಯ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಮೋದಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಮೂರು ಸೇನಾಪಡೆಗಳು ಮುಖ್ಯಸ್ಥರು ಮೋದಿ ಅವರಿಗೆ ಸಾಥ್ ನೀಡಿದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂನಲ್ಲಿ ಯುಡಿಎಫ್‌ (ಕಾಂಗ್ರೆಸ್‌) ಅಭ್ಯರ್ಥಿ ಶಶಿ ತರೂರ್‌ (Shashi Tharoor) ಅವರಿಗೆ ಬಿಜೆಪಿಯ ರಾಜೀವ್‌ ಚಂದ್ರಶೇಖರ್‌ (Rajeev Chandrasekhar) ಪ್ರಬಲ ಸ್ಪರ್ಧೆ ಒಡ್ಡಿದ್ದರು. ಒಂದು ಹಂತದಲ್ಲಿ ತರೂರ್‌ ಸೋಲಿನ ಭೀತಿಗೂ ಒಳಗಾಗಿದ್ದರು. ಆರಂಭದಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಮುನ್ನಡೆ ಸಾಧಿಸಿದ್ದರು. ಒಂದು ಹಂತದಲ್ಲಿ ಅವರು ಜಯ ಗಳಿಸುತ್ತಾರೆ ಎಂದೂ ಭಾವಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಫೀನಿಕ್ಸ್‌ನಂತೆ ಎದ್ದು ಬಂದ ಶಶಿ ತರೂರು ಅಂತಿಮವಾಗಿ ಕೇವಲ 16,077 ಮತಗಳ ಅಲ್ಪ ಅಂತರದಿಂದ ಜಯ ಗಳಿಸಿದ್ದರು.

Continue Reading

ಕ್ರೀಡೆ

Viral Video: ಹೋಟೆಲ್ ಕಾರಿಡಾರ್​ನಲ್ಲಿ ಗಾಲ್ಫ್ ಆಡಿದ ಪಂತ್​-ಸೂರ್ಯಕುಮಾರ್​

Viral Video: ರಿಷಭ್​ ಪಂತ್​ ಮತ್ತು ಸೂರ್ಯಕುಮಾರ್​ ಅವರು ಹೋಟೆಲ್ ಕಾರಿಡಾರ್​ನಲ್ಲಿ ಪೇಪರ್​ ಬ್ಯಾಗ್​ ಒಂದನ್ನು ಇರಿಸಿ ಬ್ಯಾಟ್​ ಮೂಲಕ ಗಾಲ್ಫ್ ಆಡಿದ್ದಾರೆ. ಈ ವಿಡಿಯೊ ವೈರಲ್(Viral Video)​ ಆಗಿದೆ.

VISTARANEWS.COM


on

Viral Video
Koo

ನ್ಯೂಯಾರ್ಕ್​: ಇಂದು ನಡೆಯುವ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಪಂದ್ಯದಲ್ಲಿ ಭಾರತ ತಂಡ ತನ್ನ ಬದ್ಧ ಎದುರಾಳಿ ಪಾಕಿಸ್ತಾನ(India vs Pakistan) ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್​ ಇಂಡಿಯಾದ(team India) ಸ್ಟಾರ್​ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ರಿಷಭ್​ ಪಂತ್​(Rishabh Pant) ಮತ್ತು ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​(Suryakumar Yadav) ಅವರು ಹೋಟೆಲ್ ಕಾರಿಡಾರ್​ನಲ್ಲಿ ಗಾಲ್ಫ್​ ಆಡಿದ್ದಾರೆ. ಈ ವಿಡಿಯೊ ವೈರಲ್(Viral Video)​ ಆಗಿದೆ.

ರಿಷಭ್​ ಪಂತ್​ ಮತ್ತು ಸೂರ್ಯಕುಮಾರ್​ ಅವರು ಹೋಟೆಲ್ ಕಾರಿಡಾರ್​ನಲ್ಲಿ ಪೇಪರ್​ ಬ್ಯಾಗ್​ ಒಂದನ್ನು ಇರಿಸಿ ಬ್ಯಾಟ್​ ಮೂಲಕ ಗಾಲ್ಫ್ ಆಡಿದ್ದಾರೆ. ಪಂತ್​ ಅವರು ಗಾಲ್ಫ್ ಚೆಂಡನ್ನು ತಮ್ಮ ಬ್ಯಾಟ್​ ಮೂಲಕ ಬಾರಿಸಿ ಚೆಂಡನ್ನು ನೇರವಾಗಿ ಪೇಪರ್​ ಬ್ಯಾಗ್ ಒಳಗಡೆಗೆ ಬಾರಿಸುವಲ್ಲಿ ಯಶಸ್ಸು ಕೂಡ ಕಂಡಿದ್ದಾರೆ. ಚೆಂಡು ಗುರಿ ತಲುಪಿದ ಸಂತಸದಲ್ಲಿ ಪಂತ್​ ಮತ್ತು ಸೂರ್ಯಕುಮಾರ್​ ಜೋರಾಗಿ ಕಿರುಚುತ್ತಾ ಕುಣಿದು ಕುಪ್ಪಳಿಸಿದ್ದಾರೆ. ಇದರ ವಿಡಿಯೊವನ್ನು ಪಂತ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪಂತ್​ ಅವರು ಕಳೆದ ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಅಜೇಯ 36 ರನ್​ ಬಾರಿಸಿ ಮಿಂಚಿದ್ದರು. ಇದೀಗ ಇಂದು ನಡೆಯುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿಯೂ ಉತ್ತಮ ಬ್ಯಾಟಿಂಗ್​ ನಡೆಸುವ ವಿಶ್ವಾಸದಲ್ಲಿದ್ದಾರೆ. 2022ರಲ್ಲಿ ಪಂತ್​ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಸುಮಾರು 14 ತಿಂಗಳ ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಹೀಗಾಗಿ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿ ಅವರಿಗೆ ಮಿಸ್​ ಆಗಿತ್ತು. ಇದೀಗ ಟಿ20 ವಿಶ್ವಕಪ್​ನಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸುವ ಯೋಜನೆಯಲ್ಲಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿಯೂ ಪಂತ್​ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು.

ಭಾರತ ಈ ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೈನಾಮನ್​ ಖ್ಯಾತಿಯ ಸ್ಪಿನ್ನರ್‌ ಕುಲದೀಪ್‌ ಯಾದವ್‌ ಅವರನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳುವ ಯೋಜನೆಯಲ್ಲಿದೆ. ಅಕ್ಷರ್‌ ಪಟೇಲ್‌ ಅವರನ್ನು ಈ ಪಂದ್ಯದಿಂದ ಕೈಬಿಡುವ ಸಾಧ್ಯತೆ ಅಧಿಕವಾಗಿದೆ. ಉಳಿದಂತೆ ಯಾವುದೇ ಬದಲಾವಣೆ ಕಂಡು ಬಾರದು. ಕೊಹ್ಲಿ ಮತ್ತು ರೋಹಿತ್​ ಅವರೇ ಭಾರತದ ಇನಿಂಗ್ಸ್​ ಆರಂಭಿಸಲಿದ್ದಾರೆ.

ಇದನ್ನೂ ಓದಿ IND vs PAK: ಇಂದು ಪಾಕ್​ ವಿರುದ್ಧ ಆಡಲಿದ್ದಾರಾ ಟೀಮ್​ ಇಂಡಿಯಾ ನಾಯಕ ರೋಹಿತ್​?

ಸಂಭ್ಯಾವ್ಯ ತಂಡಗಳು


ಭಾರತ:
 ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್/ ಕುಲ್​ದೀಪ್​ ಯಾದವ್​, ಜಸ್​ಪ್ರೀತ್​ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್​ ಕೀಪರ್​), ಉಸ್ಮಾನ್ ಖಾನ್, ಫಖರ್ ಜಮಾನ್, ಅಜಮ್ ಖಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಹಾರಿಸ್ ರೌಫ್.

Continue Reading

ಕ್ರೀಡೆ

IND vs PAK: ಇಂದು ಪಾಕ್​ ವಿರುದ್ಧ ಆಡಲಿದ್ದಾರಾ ಟೀಮ್​ ಇಂಡಿಯಾ ನಾಯಕ ರೋಹಿತ್​?

IND vs PAK: ಆತಿಥೇಯ ಅಮೆರಿಕ ವಿರುದ್ಧ ಸೂಪರ್‌ ಓವರ್‌ನಲ್ಲಿ ಮುಗ್ಗರಿಸಿದ ಪಾಕಿಸ್ತಾನ ಮುಂದಿನ ಹಂತಕ್ಕೇರಬೇಕಾದರೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಸೋತರೆ ಟೂರ್ನಿಯಿಂದ ಬಹುತೇಕ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆ ಮಾಡಬಹುದು.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಎರಡೂ ದೇಶಗಳ ಅಭಿಮಾನಿಗಳು ರೋಚಕ ಕ್ಷಣವನ್ನು ಕಣ್ತುಂಬಿಸಿಕೊಳ್ಳಲು ತುದಿಗಾಲಲ್ಲಿ ನಿಂತಿರುವ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ಸಮರಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಭ್ಯಾಸದ ವೇಳೆ ಬೆರಳಿನ ಗಾಯಕ್ಕೆ ತುತ್ತಾಗಿದ್ದ ಟೀಮ್​ ಇಂಡಿಯಾ(Team India) ನಾಯಕ ರೋಹಿತ್​ ಶರ್ಮಾ(Rohit Sharma) ಅವರು ಇಂದಿನ ಪಂದ್ಯದಲ್ಲಿ ಆಡಲಿದ್ದಾರಾ ಎನ್ನುವ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಭುಜಕ್ಕೆ ಚೆಂಡಯ ತಗುಲಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್​ ಮೊಟಕುಗೊಳಿಸಿದ್ದ ರೋಹಿತ್​, ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಶನಿವಾರ ಅಭ್ಯಾಸ ನಡೆಸುವ ವೇಳೆ ಬೆರಳಿನ ಗಾಯಕ್ಕೆ ತುತ್ತಾಗಿದ್ದರು. ಈ ವೇಳೆ ರೋಹಿತ್​ ಅವರು ಪಾಕ್​ ವಿರುದ್ಧದ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಚಿಂತಿಸುವ ಅಗತ್ಯವಿಲ್ಲ. ರೋಹಿತ್​ ಫಿಟ್​ ಆಗಿದ್ದು ಇಂದಿನ ಪಂದ್ಯದಲ್ಲಿ ಆಡಲಿದ್ದಾರೆ. ಈ ವಿಚಾರವನ್ನು ರೋಹಿತ್ ಶನಿವಾರ ರಾತ್ರಿ ನಡೆದ​ ಸುದ್ದಿಗೋಷ್ಠಿಯಲ್ಲಿ ಖಚಿತಪಡಿಸಿದರು.

ಪಾಕ್​ಗೆ ಮಾಡು ಇಲ್ಲವೇ ಮಡಿ ಪಂದ್ಯ


ಆತಿಥೇಯ ಅಮೆರಿಕ ವಿರುದ್ಧ ಸೂಪರ್‌ ಓವರ್‌ನಲ್ಲಿ ಮುಗ್ಗರಿಸಿದ ಪಾಕಿಸ್ತಾನ ಮುಂದಿನ ಹಂತಕ್ಕೇರಬೇಕಾದರೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಸೋತರೆ ಟೂರ್ನಿಯಿಂದ ಬಹುತೇಕ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆ ಮಾಡಬಹುದು. ನಿರೀಕ್ಷಿತ ಬೌನ್ಸರ್​ ಪುಡಿದೇಳುವ ನಾಸ್ಸೌ ಪಿಚ್​ನಲ್ಲಿ ಆಡುವುದು ಕೂಡ ಉಭಯ ತಂಡಗಳಿಗೆ ಸವಾಲಿನಿಂದ ಕೂಡಿರಲಿದೆ. ಬ್ಯಾಟರ್​ಗಳು ಗಾಯಗೊಳ್ಳುವ ಸಾಧ್ಯತೆ ಅಧಿಕವಾಗಿದೆ. ಹೀಗಾಗಿ ಎಚ್ಚರಿಕೆಯಿಂದ ಆಡಬೇಕಿದೆ.

ಭಾರತ ತಂಡದಲ್ಲಿ ಒಂದು ಬದಲಾವಣೆ ಸಾಧ್ಯತೆ


ಭಾರತ ಈ ಪಂದ್ಯಕ್ಕಾಗಿ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೈನಾಮನ್​ ಖ್ಯಾತಿಯ ಸ್ಪಿನ್ನರ್‌ ಕುಲದೀಪ್‌ ಯಾದವ್‌ ಅವರನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳುವ ಯೋಜನೆಯಲ್ಲಿದೆ. ಅಕ್ಷರ್‌ ಪಟೇಲ್‌ ಅವರನ್ನು ಈ ಪಂದ್ಯದಿಂದ ಕೈಬಿಡುವ ಸಾಧ್ಯತೆ ಅಧಿಕವಾಗಿದೆ. ಉಳಿದಂತೆ ಯಾವುದೇ ಬದಲಾವಣೆ ಕಂಡು ಬಾರದು. ಕೊಹ್ಲಿ ಮತ್ತು ರೋಹಿತ್​ ಅವರೇ ಭಾರತದ ಇನಿಂಗ್ಸ್​ ಆರಂಭಿಸಲಿದ್ದಾರೆ.

ಇದನ್ನೂ ಓದಿ IND vs PAK: ಭಾರತ-ಪಾಕ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು?

ಸಂಭ್ಯಾವ್ಯ ತಂಡಗಳು


ಭಾರತ:
 ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್/ ಕುಲ್​ದೀಪ್​ ಯಾದವ್​, ಜಸ್​ಪ್ರೀತ್​ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್​ ಕೀಪರ್​), ಉಸ್ಮಾನ್ ಖಾನ್, ಫಖರ್ ಜಮಾನ್, ಅಜಮ್ ಖಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಹಾರಿಸ್ ರೌಫ್.

Continue Reading
Advertisement
Ramoji Rao Funeral
ಸಿನಿಮಾ4 mins ago

Ramoji Rao Funeral: ರಾಮೋಜಿ ರಾವ್ ಪಾರ್ಥಿವ ಶರೀರ ಹೊತ್ತ ಚಂದ್ರಬಾಬು ನಾಯ್ಡು; ವಿಡಿಯೊ ನೋಡಿ

Karnataka Rain
ಮಳೆ7 mins ago

Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

Modi 3.0 Cabinet
ದೇಶ16 mins ago

Modi 3.0 Cabinet: ಈ ನಾಲ್ಕು ಮಹತ್ವದ ಖಾತೆಗಳು ಬಿಜೆಪಿ ಕೈಯಲ್ಲೇ ಉಳಿಯಲಿವೆ!

Kangana Ranaut Slapped incident Hrithik Roshan Backs Post
ಬಾಲಿವುಡ್34 mins ago

Kangana Ranaut: ಕಂಗನಾ ರಣಾವತ್‌ಗೆ ಕಪಾಳಮೋಕ್ಷ; ಹೃತಿಕ್ ರೋಷನ್ ರಿಯಾಕ್ಷನ್‌ ಏನು?

Modi 3.0 Cabinet
Lok Sabha Election 20241 hour ago

Modi 3.0 Cabinet: ಎನ್‌ಡಿಎ ಸರ್ಕಾರದಲ್ಲಿ ರಾಜ್ಯದಿಂದ ಐವರಿಗೆ ಸ್ಥಾನ; ವಿ.ಸೋಮಣ್ಣ ಅಚ್ಚರಿಯ ಆಯ್ಕೆ?

Murder Case
ಬೆಂಗಳೂರು ಗ್ರಾಮಾಂತರ1 hour ago

Murder Case : ಬಾಡಿಗೆ ಹಣ ಪಡೆಯಲು ಕಿರಿಕ್‌; ಬೆಡ್‌ ರೂಮ್‌ನಲ್ಲೇ ಪತ್ನಿ ಕೊಂದಿದ್ದ ಹಂತಕ ಅರೆಸ್ಟ್‌

IND vs PAK
ಕ್ರೀಡೆ1 hour ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ ಸಚಿನ್ ಹಾಜರ್; ಮಾಜಿ ಅಧ್ಯಕ್ಷ ಒಬಾಮಗೂ ಇರದ ಭದ್ರತೆಯಲ್ಲಿ ನಡೆಯಲಿದೆ ಪಂದ್ಯ

Modi 3.0 Cabinet
ದೇಶ1 hour ago

Modi 3.0 Cabinet: ಬಿಜೆಪಿಯ 5, NDAಯ 10 ಸಂಸದರು INDIA ಜೊತೆ ಸಂಪರ್ಕ? ಹೊಸ ಬಾಂಬ್‌ ಸ್ಫೋಟಿಸಿದ TMC

Road Accident
ಬೆಂಗಳೂರು2 hours ago

Road Accident : ವಾಕಿಂಗ್‌ ಹೊರಟಿದ್ದ ವೃದ್ಧೆಗೆ ಬೈಕ್‌ ಡಿಕ್ಕಿ; ಕ್ಷಣದಲ್ಲೇ ಹಾರಿಹೋಯ್ತು ಪ್ರಾಣ

Valmiki Corporation Scam
ಕರ್ನಾಟಕ2 hours ago

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ; ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಪರಮೇಶ್ವರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌