Skill Development | ಶಿಗ್ಗಾಂವಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ ಅಭಿವೃದ್ಧಿ ಆಗಲಿದೆ: ಸಿಎಂ ಬೊಮ್ಮಾಯಿ - Vistara News

ರಾಜಕೀಯ

Skill Development | ಶಿಗ್ಗಾಂವಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ ಅಭಿವೃದ್ಧಿ ಆಗಲಿದೆ: ಸಿಎಂ ಬೊಮ್ಮಾಯಿ

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನೂತನ ಬಸ್ ಘಟಕ ಮತ್ತು ಚಾಲನಾ ಹಾಗೂ ತಾಂತ್ರಿಕ ತರಬೇತಿ ಕೇಂದ್ರದ ಕಾಮಗಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಂಕುಸ್ಥಾಪನೆ ನೆರವೇರಿಸಿದರು.

VISTARANEWS.COM


on

Skill Development
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: ಶಿಗ್ಗಾಂವಿ ತಾಲೂಕಿನಲ್ಲಿ ಶೀಘ್ರದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾರಂಭವಾಗುತ್ತದೆ. ಬೇರೆ ಬೇರೆ ತಂತ್ರಜ್ಞಾನದಲ್ಲಿ ಆಧುನಿಕ ತರಬೇತಿ ಕೇಂದ್ರಕ್ಕೆ ಮುಂದಿನ ತಿಂಗಳು ಅದಕ್ಕೆ ಅಡಿಗಲ್ಲು ಹಾಕಲಿದ್ದೇನೆ. ಈ ಮೂಲಕ ಶಿಗ್ಗಾಂವಿ ತಾಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ ಅಭಿವೃದ್ಧಿ ಮಾಡುವ ಇಚ್ಛೆ ನನ್ನದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಶಿಗ್ಗಾಂವಿಯಲ್ಲಿ ನೂತನ ಬಸ್ ಘಟಕ ಮತ್ತು ಚಾಲನಾ ಹಾಗೂ ತಾಂತ್ರಿಕ ತರಬೇತಿ ಕೇಂದ್ರದ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಶಿಗ್ಗಾಂವಿಗೆ ಬಸ್ ಡಿಪೋ ಆಗಬೇಕೆಂದು ಸುಮಾರು 10 ವರ್ಷದಿಂದ ಬೇಡಿಕೆ ಇತ್ತು. ಇದಕ್ಕಾಗಿ ಮೀಸಲಿಟ್ಟಿದ್ದ ಜಾಗಕ್ಕೂ ಸಮಸ್ಯೆ ಆಗಿತ್ತು. ಅದನ್ನೆಲ್ಲವನ್ನೂ ನಿವಾರಿಸಿ 28 ಕೋಟಿ ರೂಪಾಯಿ ವೆಚ್ಚದಲ್ಲಿ ಬಸ್ ಡಿಪೋ ಮತ್ತು ತರಬೇತಿ ಕೇಂದ್ರವನ್ನು ಪ್ರಾರಂಭ ಮಾಡುತ್ತಿದ್ದೇವೆ. ಶಿಗ್ಗಾಂವಿ ಸುತ್ತಮುತ್ತ ಅಭಿವೃದ್ಧಿ ಆಗುತ್ತಿರುವುದರಿಂದ ಸಾರಿಗೆ ವ್ಯವಸ್ಥೆ ಸುಗಮವಾಗಿ ಆಗಲು ಇಲ್ಲಿ ಡಿಪೋ ಆಗುವುದು ಅವಶ್ಯಕವಾಗಿತ್ತು. ಇದರಿಂದ ಡಿಪೋ ಆಧಾರಿತ ಕೆಲಸಗಳು ಹೆಚ್ಚಾಗಿ ಈ ಭಾಗದವರಿಗೆ ಸಿಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಇದನ್ನೂ ಓದಿ | Corruption Politics | ಸಿಎಂ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ʼದಮ್‌ʼ ಪಾಲಿಟಿಕ್ಸ್‌; ಈಗ ಡಿಕೆಶಿ ಚಾಲೆಂಜ್‌!

ಶಿಗ್ಗಾಂವಿಯಲ್ಲಿ ಈಗಾಗಲೇ ಒಳ್ಳೆಯ ಐಟಿಐ ಕಾಲೇಜು ಇದೆ, ಬಂಕಾಪುರದಲ್ಲಿ ಪಾಲಿಟೆಕ್ನಿಕ್ ಕಾಲೇಜು ಇದೆ. ಇದರ ಜತೆ ಇಲ್ಲಿನ ತರಬೇತಿ ಕೇಂದ್ರ ಶೀಘ್ರದಲ್ಲಿ ಪ್ರಾರಂಭವಾಗಲಿದೆ. ತಾಂತ್ರಿಕತೆಗೆ ಒತ್ತು ನೀಡಿ ತರಬೇತಿ ಸಿಗುವ ಸಂಸ್ಥೆಗಳನ್ನು ಶಿಗ್ಗಾಂವಿ ತಾಲೂಕಿನಲ್ಲಿ ಪ್ರಾರಂಭಿಸುವ ಗುರಿ ನನ್ನದು. ಖಾಸಗಿ ವಲಯದವರೂ ಇಲ್ಲಿ ಕೌಶಲಾಭಿವೃದ್ಧಿ ತರಬೇತಿ ಸಂಸ್ಥೆ ತೆರೆಯಲು ಉತ್ಸುಕರಾಗಿದ್ದಾರೆ. ಅವರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನೂ ನಾವು ಕೊಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಅನೇಕ ಉದ್ದಿಮೆಗಳು ಬರಲಿವೆ
ಜೆಸಿಬಿ ಸಂಸ್ಥೆಯ ತರಬೇತಿ ಕೇಂದ್ರವನ್ನು ಶಿಗ್ಗಾಂವಿಗೆ ತರುವ ಪ್ರಯತ್ನ ಆಗುತ್ತಿದೆ. ಅದು ಬಂದರೆ ದೊಡ್ಡ ಪ್ರಮಾಣದಲ್ಲಿ ಯುವಕರು ಜೆಸಿಬಿ ವಾಹನ ಚಾಲಕ ತರಬೇತಿ ಪಡೆಯಬಹುದು. ಇದರ ಜತೆಯಲ್ಲಿ ಶಿಗ್ಗಾಂವಿಗೆ ಆಟೋಮೊಬೈಲ್ಸ್‌ ಉದ್ಯಮಗಳನ್ನು ತರಲು ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲಿ 350 ಎಂಪಿಎಲ್‌ಡಿ ಸಾಮರ್ಥ್ಯದ ಬಹುದೊಡ್ಡ ಎಥನಾಲ್ ಉತ್ಪಾದನಾ ಘಟಕ ಪ್ರಾರಂಭವಾಗುತ್ತದೆ. ಇದರಿಂದ ರೈತರಿಗೆ ದೊಡ್ಡ ಅನುಕೂಲ ಆಗುತ್ತದೆ. ಟೆಕ್ಸ್‌ಟೈಲ್‌ ಪಾರ್ಕ್ ಪ್ರಾರಂಭಿಸುವುದರ ಮೂಲಕ 5 ಸಾವಿರ ಹೆಣ್ಣುಮಕ್ಕಳಿಗೆ ಕೆಲಸ ಸಿಗಲಿದೆ ಎಂದು ಸಿಎಂ ಹೇಳಿದರು.

ಶಾಲಾ ಮಕ್ಕಳಿಗೆ ಖಾಸಗಿ ಸಹಭಾಗಿತ್ವದಲ್ಲಿ ಬಸ್ ಸೌಲಭ್ಯ
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಯೋಜನೆ ರೂಪಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಾಯುವ್ಯ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಖಾಸಗಿ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳಿಗಾಗಿ ಬಸ್‌ಗಳನ್ನು ನಡೆಸುವ ಈ ಯೋಜನೆಯನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿ ಇದ್ದು, ನನ್ನ ಕ್ಷೇತ್ರದಿಂದಲೇ ಇದನ್ನು ಪ್ರಾರಂಭಿಸಬೇಕೆಂಬ ಉದ್ದೇಶ ಇದೆ. ಈ ಮೂಲಕ ಶಾಲಾ ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಮಾಡುವ ಪೈಲಟ್ ಯೋಜನೆ ನಮ್ಮ ಕ್ಷೇತ್ರದಲ್ಲಿ ಪ್ರಾರಂಭವಾಗಲಿ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾರ್ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಸಂಕನೂರ, ವಾಯುವ್ಯ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಬಸವರಾಜ ಕೆಲಗಾರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ | ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಪುಟ್ಟಣ್ಣ ಕಣಗಾಲ್: ಡಾ. ಮಹೇಶ ಜೋಶಿ ಬಣ್ಣನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

Raksha Ramaiah: ಚಿಕ್ಕಬಳ್ಳಾಪುರದಲ್ಲಿ ನಾನಾ ಕಾರಣಗಳಿಂದ ಮತಗಳನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಿಲ್ಲ: ರಕ್ಷಾ ರಾಮಯ್ಯ

Raksha Ramaiah: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳು ಬಂದಿದ್ದರೂ ಸಹ ನಾನಾ ಕಾರಣಗಳಿಂದಾಗಿ ಅದನ್ನು ಗೆಲುವಾಗಿ ಪರಿವರ್ತನೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಕಾಂಗ್ರೆಸ್‌ಗೆ ಶೇ. 3 ರಷ್ಟು ಮತಗಳು ಹೆಚ್ಚಿನ ಪ್ರಮಾಣದಲ್ಲಿ ಬಂದಿತ್ತು. ಆದರೆ ಅದನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Youth Congress National General Secretary Raksha Ramaiah latest statement
Koo

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳು ಬಂದಿದ್ದರೂ ಸಹ ನಾನಾ ಕಾರಣಗಳಿಂದಾಗಿ ಅದನ್ನು ಗೆಲುವಾಗಿ ಪರಿವರ್ತನೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ (Raksha Ramaiah) ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಪತ್ರಕರ್ತರ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್, ಮಾಜಿ ಸಚಿವ, ಎಂಎಲ್‌ಸಿ ಡಾ. ಎಂ.ಆರ್. ಸೀತಾರಾಂ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಕಾಂಗ್ರೆಸ್‌ಗೆ ಶೇ. 3 ರಷ್ಟು ಮತಗಳು ಹೆಚ್ಚಿನ ಪ್ರಮಾಣದಲ್ಲಿ ಬಂದಿತ್ತು. ಆದರೆ ಅದನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ತಮಗೆ 6.60 ಲಕ್ಷ ಮತಗಳು ದೊರೆತಿದ್ದು, 1.60 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿರುವ ತಮ್ಮ ಪ್ರತಿಸ್ಪರ್ಧಿ ಸುಧಾಕರ್ ಅವರಿಗೆ ಶುಭ ಕೋರುತ್ತೇನೆ. ಜನರ ನಿರೀಕ್ಷೆಯಂತೆ ಅವರು ಕೆಲಸ ಮಾಡುತ್ತಾರೆ. ಕ್ಷೇತ್ರದ ಜನರ ಧ್ವನಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಇದನ್ನೂ ಓದಿ: Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

ಕರ್ನಾಟಕದಲ್ಲಿ 11 ಕ್ಷೇತ್ರದಲ್ಲಿ 40ಕ್ಕಿಂತ ಕಡಿಮೆ ವಯಸ್ಸಿನವರಿಗೆ ಸ್ಪರ್ಧಿಸಲು ಅವಕಾಶ ದೊರೆತ್ತಿತ್ತು. ನಾಲ್ವರು ಯುವಕರು ಗೆಲುವು ಸಾಧಿಸಿರುವುದು ಉತ್ತಮ ಬೆಳವಣಿಗೆ. ಜನಪರ ಕಾರ್ಯಕ್ರಮಗಳ ಮೂಲಕ ಚುನಾವಣೆ ಎದುರಿಸಿದೆವು. ಮನೆ ಮನೆಗಳಿಗೆ ನಮ್ಮ ಕಾರ್ಯಕ್ರಮಗಳು ತಲುಪಿವೆ. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಯುವ ಜನಾಂಗಕ್ಕೆ ಆದ್ಯತೆ ಕಲ್ಪಿಸಿದ್ದರು. ಅವರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನರಿಗೆ ಧನ್ಯವಾದಗಳು. ಚಿಕ್ಕಬಳ್ಳಾಪುರದಲ್ಲಿ ಕಳೆದ ಐದಾರು ವರ್ಷಗಳಿಂದ ಯುವ ಕಾಂಗ್ರೆಸ್ ಜತೆಗೂಡಿ ಕೆಲಸ ಮಾಡುತ್ತಿದ್ದೆ. ಅತಿ ಹೆಚ್ಚು ಮತಗಳನ್ನು ಪಡೆಯಲು ಪ್ರಯತ್ನಿಸಿದ್ದೇವೆ. ಮುಂಬರುವ ದಿನಗಳಲ್ಲಿ ಚಿಕ್ಕಬಳ್ಳಾಪುರದಲ್ಲಿ ಹೂವಿನ ಮಾರುಕಟ್ಟ ಸ್ಥಾಪಿಸುವುದು ಸೇರಿದಂತೆ ರೈತರು, ಮಹಿಳೆಯರ ಪರವಾಗಿ ಕೆಲಸ ಮಾಡುತ್ತೇವೆ ಎಂದರು.

ಇದನ್ನೂ ಓದಿ: Food Tips Kannada: ಇನ್‌ಸ್ಟಂಟ್‌ ನೂಡಲ್ಸ್‌ ತಿಂದರೆ ಆರೋಗ್ಯಕ್ಕೆ ತೊಂದರೆ ಇದೆಯೆ?

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೇಶವರೆಡ್ಡಿ, ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ, ಅನುಸೂಯಮ್ಮ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading

ವೈರಲ್ ನ್ಯೂಸ್

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಹಣ ಹಿಂತಿರುಗಿಸಲು ತೆಲಂಗಾಣ ಸಿಎಂಗೆ ಪತ್ರ ಬರೆದ ಕನ್ನಡಿಗರು

Valmiki Corporation Scam: ನಿಮ್ಮ ನಾಯಕ ರಾಹುಲ್ ಗಾಂಧಿ ಆಣತಿಯಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ, ತೆಲಂಗಾಣದ ಕಾಂಗ್ರೆಸ್ ಚುನಾವಣಾ ಖರ್ಚಿಗೆ ಹಣ ಸಾಗಿಸಿದೆ. ಹೀಗಾಗಿ ಹಣವನ್ನು ಹಿಂತಿರುಗಿಸಬೇಕು ಎಂದು ಪತ್ರದಲ್ಲಿ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಗೆ ಮನವಿ ಮಾಡಲಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ (Valmiki Corporation Scam) ಕೋಟ್ಯಂತರ ರೂಪಾಯಿ ತೆಲಂಗಾಣ ಕಂಪನಿಗಳಿಗೆ ವರ್ಗಾವಣೆಯಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಹಣ ವಾಪಸ್ ನೀಡುವಂತೆ ನೆರೆ ರಾಜ್ಯದ ಸಿಎಂಗೆ ಕನ್ನಡಿಗರು ಪತ್ರ ಬರೆದಿರುವುದು ಕಂಡುಬಂದಿದೆ. ಕರ್ನಾಟಕದ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಲಾಗಿದೆ. ಹೀಗಾಗಿ ಅಕ್ರಮವಾಗಿ ವರ್ಗಾವಣೆಯಾದ ಹಣವನ್ನು ಹಿಂತಿರುಗಿಸಬೇಕು ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅವರಿಗೆ ಮನವಿ ಮಾಡಲಾಗಿದೆ.

ತೆಲಂಗಾಣ ಸಿಎಂಗೆ ಕನ್ನಡಿಗರ ಹೆಸರಿನಲ್ಲಿ ಪತ್ರ ಬರೆದಿರುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್‌ ಹಂಚಿಕೊಂಡಿದೆ. ಕರ್ನಾಟಕದ ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಾಗಿದ್ದ ಸುಮಾರು 187 ಕೋಟಿ ರೂ. ಹಣವನ್ನು ನಿಮ್ಮ ನಾಯಕ ರಾಹುಲ್ ಗಾಂಧಿ ಅವರ ಆಣತಿಯಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಸಚಿವ ನಾಗೇಂದ್ರ ಅವರ ಮೂಲಕ ತೆಲಂಗಾಣದ ಕಾಂಗ್ರೆಸ್ ಚುನಾವಣಾ ಖರ್ಚಿಗೆ ಸಾಗಿಸಿದ್ದಾರೆ.

ಇದನ್ನೂ ಓದಿ | Congress Guarantee: ʼಸ್ಯಾಡಿಸ್ಟ್‌ʼ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟವಾಗಿಲ್ಲ, ನಿಲ್ಲಿಸೋದೇ ಒಳಿತು ಎಂದ ಲಕ್ಷ್ಮಣ್‌!

ನಿಮ್ಮಲ್ಲಿ ಕನ್ನಡಿಗರು ಕೇಳಿಕೊಳ್ಳುವುದೇನೆಂದರೆ ನಮ್ಮ ರಾಜ್ಯಕ್ಕೆ ಸೇರಬೇಕಾಗಿದ್ದ ಹಣವನ್ನು ದಯಮಾಡಿ ಹಿಂತಿರುಗಿಸಿ ಕೊಡಿ. ಈ ಹಣ ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಬಳಕೆ ಆಗಬೇಕಿತ್ತು ಈ ನೀಚ ಸರ್ಕಾರ ಉಂಡು ಹೋದ ಕೊಂಡು ಹೋದ ಎಂಬಂತೆ ತಮ್ಮ ಸ್ವಾರ್ಥಕ್ಕಾಗಿ ಇಲ್ಲಿ ಲೂಟಿ ಹೊಡೆದದ್ದಲ್ಲದೆ, ಮಿಕ್ಕ ಹಣವನ್ನೂ ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಖರ್ಚಿಗೆ ಸಾಗಿಸಿದ್ದಾರೆ.

ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ನಮಗೆ ತಿಳಿದಿದೆ ಆದ್ರೆ ಕೊನೆ ಪ್ರಯತ್ನವಾಗಿ ನಿಮ್ಮಲ್ಲಿ ಈ ಮನವಿ ಮಾಡುತ್ತಿದ್ದೇವೆ, ಹಣ ಹಿಂತಿರುಗಿಸಿ ವಿಶ್ವಾಸ ಉಳಿಸಿಕೊಳ್ಳಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಸದ್ಯ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇದನ್ನೂ ಓದಿ | ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

ತೆಲಂಗಾಣ ಸಹಕಾರ ಬ್ಯಾಂಕ್‌ ಅಧ್ಯಕ್ಷನನ್ನು ಬಂಧಿಸಿದ್ದ ಎಸ್‌ಐಟಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸಹಕಾರ ಬ್ಯಾಂಕ್‌ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎಂಬುವವರನ್ನು ಸಿಐಡಿ ಎಸ್‌ಐಟಿ ಜೂನ್‌ 4ರಂದು ಬಂಧಿಸಿತ್ತು. ಆರೋಪಿ ಸತ್ಯನಾರಾಯಣ ಹೈದರಾಬಾದ್‌ನ ನಲ್ಲಕುಂಟ ಪ್ರದೇಶದಲ್ಲಿರುವ ಫಸ್ಟ್‌ ಫೈನಾನ್ಸ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕರಾಗಿದ್ದಾರೆ.

ವಾಲ್ಮೀಕಿ ನಿಗಮದ 94.73 ಕೋಟಿ ರೂ. ಅಕ್ರಮ ವರ್ಗಾವಣೆಯಲ್ಲಿ ಸತ್ಯನಾರಾಯಣ ಪ್ರಧಾನ ಸೂತ್ರಧಾರ ಆರೋಪಿಯಾಗಿದ್ದಾರೆ. ಯೂನಿಯನ್‌ ಬ್ಯಾಂಕ್‌ನಲ್ಲಿರುವ ವಾಲ್ಮೀಕಿ ನಿಗಮದ ಖಾತೆಯಿಂದ 18 ನಕಲಿ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಆಗಿತ್ತು. ತನಿಖೆ ವೇಳೆ ಫೈನಾನ್ಸ್‌ ಕಂಪನಿ ಸತ್ಯನಾರಾಯಣ ಅವರೇ 18 ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿತ್ತು. ಹೀಗಾಗಿ ಅವರನ್ನು ಎಸ್‌ಐಟಿ ಬಂಧಿಸಿತ್ತು.

Continue Reading

ದೇಶ

Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Mamata Banerjee: ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ ಎಂದು ಪರೋಕ್ಷವಾಗಿ ಇಂಡಿಯಾ ಒಕ್ಕೂಟವೇ ಸರ್ಕಾರ ರಚಿಸಲಿದೆ ಎಂದು ಮಮತಾ ಬ್ಯಾನರ್ಜಿ ಸುಳಿವು ನೀಡಿದ್ದಾರೆ.

VISTARANEWS.COM


on

Mamata Banerjee
Koo

ಕೋಲ್ಕೊತಾ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 294 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ನರೇಂದ್ರ ಮೋದಿ (Narendra Modi) ಅವರು ಭಾನುವಾರ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ವರಿಷ್ಠ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. “ಯಾವುದೇ ಸರ್ಕಾರವು 15 ದಿನಗಳಲ್ಲಿ ಬೇಕಾದರೂ ಪತನವಾಗಬಹುದು” ಎಂಬುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತೃಣಮೂಲ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯ ಬಳಿಕ ಮಮತಾ ಬ್ಯಾನರ್ಜಿ ಮಾತನಾಡಿದರು. “ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ” ಎಂದು ಹೇಳಿದರು.

ಇಂಡಿಯಾ ಒಕ್ಕೂಟದ್ದೇ ಸರ್ಕಾರ

ಕೇಂದ್ರದಲ್ಲಿ ಇಂಡಿಯಾ ಒಕ್ಕೂಟವೇ ಸರ್ಕಾರ ರಚಿಸಲಿದೆ ಎಂಬುದಾಗಿ ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಕೊನೆಗೆ ಒಂದು ದಿನ ಇಂಡಿಯಾ ಒಕ್ಕೂಟವು ಸರ್ಕಾರ ರಚಿಸುತ್ತದೆ. ಕೆಲವು ದಿನಗಳವರೆಗೆ ಅವರು ಅಧಿಕಾರದಲ್ಲಿ ಇರಲಿ. ಆದರೆ, ಒಂದು ನೆನಪಿರಲಿ, ಒಂದೇ ದಿನದಲ್ಲಿ ಬೇಕಾದರೂ ಸರ್ಕಾರ ಬೀಳಬಹುದು. ಏನು ಬೇಕಾದರೂ ಆಗಬಹುದು. ಯಾರಿಗೆ ಗೊತ್ತು, 15 ದಿನಗಳಲ್ಲಿ ಬೇಕಾದರೂ ಸರ್ಕಾರ ಪತನವಾಗಬಹುದು” ಎಂಬುದಾಗಿ ಎನ್‌ಡಿಎ ಸರ್ಕಾರದ ಪತನದ ಕುರಿತು ಮಮತಾ ಬ್ಯಾನರ್ಜಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರು

ನರೇಂದ್ರ ಮೋದಿ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಟಿಎಂಸಿ ನಿರ್ಧರಿಸಿದೆ ಎಂಬುದಾಗಿ ಮಮತಾ ಬ್ಯಾನರ್ಜಿ ಹೇಳಿದರು. “ಕಾನೂನುಬಾಹಿರ ಹಾಗೂ ಪ್ರಜಾಸತ್ತಾತ್ಮಕವಲ್ಲದ ಮಾರ್ಗದ ಮೂಲಕ ಎನ್‌ಡಿಎ ಸರ್ಕಾರ ರಚಿಸುತ್ತಿದೆ. ಹಾಗಾಗಿ, ಪ್ರಮಾಣವಚನ ಕಾರ್ಯಕ್ರಮದಲ್ಲಿ ಟಿಎಂಸಿ ಭಾಗವಹಿಸಲ್ಲ” ಎಂದಿದ್ದಾರೆ.

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: Sonia Gandhi: ಮತ್ತೆ ಸೋನಿಯಾ ಗಾಂಧಿಗೆ ಮಣೆ; ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆ!

Continue Reading

ದೇಶ

Sonia Gandhi: ಮತ್ತೆ ಸೋನಿಯಾ ಗಾಂಧಿಗೆ ಮಣೆ; ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆ!

Sonia Gandhi: ಹಳೆಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆ ನಡೆದಿದ್ದು, ಅಲ್ಲಿಯೇ ಅವಿರೋಧವಾಗಿ ಸೋನಿಯಾ ಗಾಂಧಿ ಅವರನ್ನು ಸಂಸದೀಯ ಪಕ್ಷದ ಅಧ್ಯಕ್ಷೆಯನ್ನಾಗಿ ಮರು ಆಯ್ಕೆ ಮಾಡಲಾಗಿದೆ. ಸಭೆಯ ಬಳಿಕ ಸೋನಿಯಾ ಗಾಂಧಿ ಮರು ನೇಮಕದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಹಿತಿ ನೀಡಿದರು.

VISTARANEWS.COM


on

sonia gandhi
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪಕ್ಷದಲ್ಲಿ ಸಕಾರಾತ್ಮಕ ಮನೋಭಾವ ಮೂಡಿದೆ. ಹಾಗಾಗಿ, ಪಕ್ಷದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಹೈಕಮಾಂಡ್‌ ತೀರ್ಮಾನಿಸಿದೆ. ಅಷ್ಟೇ ಅಲ್ಲ, ಮತ್ತೆ ಸೋನಿಯಾ ಗಾಂಧಿ (Sonia Gandhi) ಅವರ ನಾಯಕತ್ವಕ್ಕೆ ಮಣೆ ಹಾಕಲಾಗಿದೆ. ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅವರನ್ನು ಮರು ಆಯ್ಕೆ ಮಾಡಲಾಗಿದೆ.

ಹಳೆಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆ ನಡೆದಿದ್ದು, ಅಲ್ಲಿಯೇ ಅವಿರೋಧವಾಗಿ ಸೋನಿಯಾ ಗಾಂಧಿ ಅವರನ್ನು ಸಂಸದೀಯ ಪಕ್ಷದ ಅಧ್ಯಕ್ಷೆಯನ್ನಾಗಿ ಮರು ಆಯ್ಕೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಪಕ್ಷದ ನಾಯಕರಾದ ಗೌರವ್‌ ಗೊಗೊಯ್‌, ತಾರಿಕ್‌ ಅನ್ವರ್‌, ಕೆ.ಸುಧಾಕರನ್‌ ಸೇರಿ ಹಲವು ನಾಯಕರು ಇದನ್ನೇ ಅನುಮೋದಿಸಿದರು.

ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು. “ಸೋನಿಯಾ ಗಾಂಧಿ ಅವರನ್ನೇ ಸಂಸದೀಯ ಪಕ್ಷದ ಅಧ್ಯಕ್ಷೆಯನ್ನಾಗಿ ಮರು ಆಯ್ಕೆ ಮಾಡಿರುವುದು ದೊಡ್ಡ ಸಂಗತಿಯಾಗಿದೆ. ಅವರು ನಮಗೆ ನೀಡುತ್ತಿರುವ ಮಾರ್ಗದರ್ಶವನ್ನು ಮುಂದುವರಿಸುತ್ತಾರೆ. ಅವರ ಸೇವೆಯು ಪಕ್ಷಕ್ಕಾಗಿ ಮುಂದುವರಿಯುತ್ತದೆ ಇದಕ್ಕಾಗಿ ನಾನು ಅವರಿಗೆ ಸೆಲ್ಯೂಟ್‌ ಹೊಡೆಯುತ್ತೇನೆʼ ಎಂಬುದಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಹಿತಿ ನೀಡಿದರು.

ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, “ಮೊದಲು, ಸಂಸದರಾಗಿ ಆಯ್ಕೆಯಾದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಸವಾಲಿನ ಸಂದರ್ಭದಲ್ಲಿ ನೀವೆಲ್ಲ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೀರಿ. ಚುನಾವಣೆ ಪ್ರಚಾರದ ವೇಳೆ ಎದುರಾದ ಸಂಕಷ್ಟಗಳನ್ನು ಮೆಟ್ಟಿ ನೀವು ಜಯ ತಂದಿದ್ದೀರಿ. ಇದು ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷವು ಇನ್ನಷ್ಟು ಪ್ರಬಲವಾಗಿ ಕೆಲಸ ಮಾಡಲು ಸಾಧ್ಯವಾಗಲಿದೆ. ಇನ್ನು ಪಕ್ಷದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಕ್ಕೆ ಧನ್ಯವಾದಗಳು” ಎಂದಿದ್ದಾರೆ.

ಮತ್ತೊಂದೆಡೆ, ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಅವರನ್ನು ಪ್ರತಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲು ಸಿಡಬ್ಲ್ಯೂಸಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. “ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನನ್ನಾಗಿ ರಾಹುಲ್‌ ಗಾಂಧಿ ಅವರನ್ನು ನೇಮಕ ಮಾಡುವ ದಿಸೆಯಲ್ಲಿ ಸಿಡಬ್ಲ್ಯೂಸಿಯು ಅವಿರೋಧವಾಗಿ ನಿರ್ಣಯ ತೆಗೆದುಕೊಂಡಿದೆ. ಸಂಸತ್‌ನಲ್ಲಿ ಪ್ರತಿಪಕ್ಷದ ನಾಯಕತ್ವ ವಹಿಸಲು ರಾಹುಲ್‌ ಗಾಂಧಿ ಅವರೇ ಸಮರ್ಥ ನಾಯಕರಾಗಿದ್ದಾರೆ. ನೀವೇ ಪ್ರತಿಪಕ್ಷ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಿ ಎಂಬುದಾಗಿ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡಲಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ್‌ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಪ್ರಮಾಣವಚನಕ್ಕೆ 7 ವಿದೇಶಿ ನಾಯಕರು; 8000 ಅತಿಥಿಗಳು

Continue Reading
Advertisement
NED vs RSA
T20 ವಿಶ್ವಕಪ್4 hours ago

NED vs RSA: ಹೋರಾಡಿ ಸೋತ ನೆದರ್ಲೆಂಡ್ಸ್​; ಹರಿಣ ಪಡೆಗೆ ಪ್ರಯಾಸದ ಗೆಲುವು

Karnataka police
ಕರ್ನಾಟಕ6 hours ago

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

French Open Final 2024
ಪ್ರಮುಖ ಸುದ್ದಿ6 hours ago

French Open Final 2024: 4ನೇ​ ಫ್ರೆಂಚ್‌ ಓಪನ್‌ ಟ್ರೋಫಿ ಗೆದ್ದ ಇಗಾ ಸ್ವಿಯಾಟೆಕ್‌

Govt Employees
ಕರ್ನಾಟಕ6 hours ago

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Kisan Samman Nidhi
ಪ್ರಮುಖ ಸುದ್ದಿ7 hours ago

Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.!

IND vs PAK
ಕ್ರೀಡೆ7 hours ago

IND vs PAK: ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯದ ಹವಾಮಾನ ವರದಿ, ಆಡುವ ಬಳಗ ಹೇಗಿದೆ?

World Environment Day Celebration at Kittur Rani Chennamma Residential School
ದಾವಣಗೆರೆ7 hours ago

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

Physical Abuse
ಕರ್ನಾಟಕ7 hours ago

Physical Abuse: 34 ವರ್ಷದ ವಿಚ್ಛೇದಿತ ಮಹಿಳೆ ಜತೆ 25ರ ಯುವಕನ ಲವ್ವಿ ಡವ್ವಿ; ಗರ್ಭಿಣಿ ಮಾಡಿ ಪರಾರಿ!

World Environment Day Celebration at Kamaruru Government higher Primary School
ಶಿವಮೊಗ್ಗ7 hours ago

World Environment Day: ಚಂದ್ರಗುತ್ತಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Youth Congress National General Secretary Raksha Ramaiah latest statement
ಚಿಕ್ಕಬಳ್ಳಾಪುರ7 hours ago

Raksha Ramaiah: ಚಿಕ್ಕಬಳ್ಳಾಪುರದಲ್ಲಿ ನಾನಾ ಕಾರಣಗಳಿಂದ ಮತಗಳನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಿಲ್ಲ: ರಕ್ಷಾ ರಾಮಯ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌