Milana Nagaraj | ಅಂಡರ್‌ ವಾಟರ್‌ ಶೂಟಿಂಗ್‌ನಲ್ಲಿ ಪೃಥ್ವಿ ಅಂಬಾರ್‌-ಮಿಲನಾ ನಾಗರಾಜ್‌: `FOR REGN'ನಲ್ಲಿ “ಮೋಕೊ ಬೋಟ್”! - Vistara News

ಸಿನಿಮಾ

Milana Nagaraj | ಅಂಡರ್‌ ವಾಟರ್‌ ಶೂಟಿಂಗ್‌ನಲ್ಲಿ ಪೃಥ್ವಿ ಅಂಬಾರ್‌-ಮಿಲನಾ ನಾಗರಾಜ್‌: `FOR REGN’ನಲ್ಲಿ “ಮೋಕೊ ಬೋಟ್”!

ಮಿಲನಾ ನಾಗರಾಜ್‌ ಹಾಗೂ ಮಿಲನಾ ನಾಗರಾಜ್‌ (Milana Nagaraj) ಹಾಗೂ ʻದಿಯಾʼ ಹೀರೊ ಪೃಥ್ವಿ ಅಂಬಾರ್‌ ನಟನೆಯ ಫಾರ್‌ ರಿಜಿಸ್ಟ್ರೇಷನ್‌ (For Regn) ಚಿತ್ರದ ಬಿಡುಗಡೆಯ ದಿನಾಂಕ ಪ್ರಕಟಗೊಂಡಿದೆ. ಹಾಡಿನ ಚಿತ್ರೀಕರಣಕ್ಕಾಗಿ “ಮೋಕೊ ಬೋಟ್” ಕ್ಯಾಮೆರಾ ಬಳಸಲಾಗಿದೆ.‌

VISTARANEWS.COM


on

Milana Nagaraj (FOR REGN)
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ʻಲವ್‌ ಮಾಕ್ಟೇಲ್ʼ ಖ್ಯಾತಿಯ ಮಿಲನಾ ನಾಗರಾಜ್‌ (Milana Nagaraj) ಹಾಗೂ ʻದಿಯಾʼ ಹೀರೊ ಪೃಥ್ವಿ ಅಂಬಾರ್‌ ನಟನೆಯ ಫಾರ್‌ ರಿಜಿಸ್ಟ್ರೇಷನ್‌ (For Regn) ಚಿತ್ರದ ಬಿಡುಗಡೆಯ ದಿನಾಂಕ ಪ್ರಕಟಗೊಂಡಿದೆ. ಇದರ ಬೆನ್ನಲೇ ಹಾಡೊಂದರ‌ ಮೂಲಕ ಚಿತ್ರೀಕರಣವನ್ನು ಮುಗಿಸಿದೆ ಚಿತ್ರತಂಡ. ಅಂಡರ್ ವಾಟರ್‌ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. ಹಾಡಿನ ಚಿತ್ರೀಕರಣಕ್ಕಾಗಿ “ಮೋಕೊ ಬೋಟ್” ಕ್ಯಾಮೆರಾ ಬಳಸಲಾಗಿದೆ.‌ ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಈ ಕ್ಯಾಮೆರಾ ಬಳಸಿದ್ದು ಎಂದಿದ್ದಾರೆ ನಿರ್ದೇಶಕ ನವೀನ್‌ ದ್ವಾರಕನಾಥ್‌.

ಈ ಹಿಂದೆ ಚಿತ್ರದ ಫಸ್ಟ್‌ ಲುಕ್‌ ಕೂಡ ಚಿತ್ರ ತಂಡ ರಿವೀಲ್‌ ಮಾಡಿತ್ತು. ಎರಡು ಮುಗ್ದ ಮನಸ್ಸುಗಳ ನಡುವಿನ ಹಾಸ್ಯಭರಿತವಾದ ರೊಮ್ಯಾಂಟಿಕ್‌ ಫ್ಯಾಮಿಲಿ ಡ್ರಾಮಾ ಚಿತ್ರ ಇದಾಗಿದ್ದು ಫೆಬ್ರವರಿ 10, 2023ರಂದು ತೆರೆ ಕಾಣುತ್ತಿದೆ. ಇದೀಗ ಹಾಡಿನ ಚಿತ್ರೀಕರಣದ ಫೋಟೊಗಳನ್ನು ಹಂಚಿಕೊಂಡಿರುವ ಚಿತ್ರತಂಡ, “ಮೋಕೊ ಬೋಟ್” ಕ್ಯಾಮೆರಾದ ಬಳಕೆ ಮಾಡಿರುವ ಕುರಿತು ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ | Kannada New Movie | ಪೃಥ್ವಿ ಅಂಬಾರ್‌-ಮಿಲನಾ ಅಭಿನಯದ `For Regn’ ರಿಲೀಸ್‌ ಡೇಟ್‌ ರಿವೀಲ್‌!

Milana Nagaraj (FOR REGN)

ಛಾಯಾಗ್ರಾಹಕ ಅಭಿಷೇಕ್ ಕಾಸರಗೋಡು ಈ ಹಾಡನ್ನು ಅದ್ಭುತವಾಗಿ ಸೆರೆ ಹಿಡಿದಿದ್ದಾರೆ. ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನವಿರುವ ಈ ಹಾಡಿನಲ್ಲಿ ಮಿಂಚಿದ್ದಾರೆ ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್. ಈ ಹಿಂದೆ ಚಿತ್ರದ ಆಡಿಯೊ ಹಕ್ಕನ್ನು ಜಂಕಾರ್ ಮ್ಯೂಸಿಕ್ ಸಂಸ್ಥೆ ಭಾರಿ ಮೊತ್ತ ನೀಡಿ ಖರೀದಿಸಿತ್ತು. ಆರ್‌.ಕೆ. ಹರೀಶ್‌ ಸಂಗೀತ ಸಂಯೋಜಿಸಿರುವ ಆರು ಹಾಡಿಗಳಿಗೆ ಬಹದ್ದೂರ್‌ ಚೇತನ್‌, ಕವಿರಾಜ್‌ ಅರಸ್‌ ಹಾಗೂ ನಾಗಾರ್ಜುನ ಶರ್ಮ ಸಾಹಿತ್ಯ ಬರೆದಿದ್ದಾರೆ. ವಿಜಯ್‌ ಪ್ರಕಾಶ್‌, ಚಂದನ್‌ ಶೆಟ್ಟಿ, ವಾಸುಕಿ ವೈಭವ್‌ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಬಿಡುಗಡೆಗೂ ಮುನ್ನ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಫಾರ್‌ ರಿಜಿಸ್ಟ್ರೇಷನ್‌ ಚಿತ್ರದ ತಾರಾಬಳಗದಲ್ಲಿ, ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು, ಅರವಿಂದ್‌ ಬೋಳಾರ್‌ ಮುಂತಾದವರು ಇದ್ದಾರೆ.

ಸಿನಿಮಾ ಚಿತ್ರೀಕರಣ ಮಂಗಳೂರು, ಸಕಲೇಶಪುರ, ಉಡುಪಿ ಹಾಗೂ ಬೆಂಗಳೂರಿನಲ್ಲಿ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ನಿಶ್ಚಲ್‌ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ಎನ್‌. ನವೀನ್‌ ರಾವ್‌ ಬಂಡವಾಳ ಹೂಡುತ್ತಿದ್ದಾರೆ. ಅಭಿಷೇಕ್ ಕಳತ್ತಿ ಹಾಗೂ ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಮತ್ತು ಮನು ಶೆಡ್ಗಾರ್ ಅವರ ಸಂಕಲನ ಈ ಚಿತ್ರಕ್ಕಿದೆ.

ಇದನ್ನೂ ಓದಿ | Darling Krishna | ಡಾರ್ಲಿಂಗ್‌ ಕೃಷ್ಣ-ಮಿಲನಾ ನಾಗರಾಜ್‌ ಅಭಿನಯದ ಪ್ರತ್ಯೇಕ ಚಿತ್ರಗಳು ಒಂದೇ ದಿನ ರಿಲೀಸ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Janhvi Kapoor: ಪಾಪರಾಜಿಗಳ ಅಸಲಿ ಮುಖ ರಿವೀಲ್‌ ಮಾಡಿದ ಜಾನ್ವಿ ಕಪೂರ್!

Janhvi Kapoor: ಪಾಪರಾಜಿಗಳು, ನಟ ನಟಿಯರು ಎಲ್ಲೇ ಹೋದರು ಬೆನ್ನಹತ್ತಿ ಫೋಟೊ ಕ್ಲಿಕ್ಕಿಸುತ್ತಾರೆ. ಅವರು ಎಲ್ಲಿ ಹೋಗುತ್ತಾರೆ ಎಂಬುದು ಇವರಿಗೆ ಹೇಗೆ ತಿಳಿಯುತ್ತೇ? ತಾರೆಗಳ ಫೋಟೊಗಳನ್ನು ತೆಗೆಯುವುದರಿಂದ ಇವರಿಗೇನು ಲಾಭ ಎನ್ನುವುದರ ಬಗ್ಗೆ ನಟಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಪಾಪರಾಜಿಗಳ ನಿಜ ಮುಖ ಬಯಲು ಮಾಡಿದ್ದಾರೆ. ಅಸಲಿಗೆ ಪಾಪರಾಜಿಗಳು ಹಣ ಕೊಟ್ಟು ಕರೆಸಲಾಗುತ್ತದೆಯಂತೆ ಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Janhvi Kapoor on paparazzi culture
Koo

ಬೆಂಗಳೂರು: ಜಾನ್ವಿ ಕಪೂರ್ (Janhvi Kapoor) ಇತ್ತೀಚೆಗೆ ಬಾಲಿವುಡ್‌ನ ಪಾಪರಾಜಿ ಸಂಸ್ಕೃತಿಯ ( paparazzi culture) ಬಗ್ಗೆ ಚರ್ಚಿಸಿದ್ದಾರೆ. ‘ಮಿಸ್ಟರ್ ಆ್ಯಂಡ್ ಮಿಸಸ್ ಮಹಿ’ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಸಂದರ್ಶನ ವೇಳೆ, ಪಾಪರಾಜಿಗಳು ಅವರು ಕ್ಲಿಕ್ ಮಾಡುವ ಫೋಟೊಗಳ ಆಧಾರದ ಮೇಲೆ ಹಣ ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಪಾಪರಾಜಿಗಳು, ನಟ ನಟಿಯರು ಎಲ್ಲೇ ಹೋದರು ಬೆನ್ನಹತ್ತಿ ಫೋಟೊ ಕ್ಲಿಕ್ಕಿಸುತ್ತಾರೆ. ಅವರು ಎಲ್ಲಿ ಹೋಗುತ್ತಾರೆ ಎಂಬುದು ಇವರಿಗೆ ಹೇಗೆ ತಿಳಿಯುತ್ತೇ? ತಾರೆಗಳ ಫೋಟೊಗಳನ್ನು ತೆಗೆಯುವುದರಿಂದ ಇವರಿಗೇನು ಲಾಭ ಎನ್ನುವುದರ ಬಗ್ಗೆ ನಟಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಪಾಪರಾಜಿಗಳ ನಿಜ ಮುಖ ಬಯಲು ಮಾಡಿದ್ದಾರೆ. ಅಸಲಿಗೆ ಪಾಪರಾಜಿಗಳು ಹಣ ಕೊಟ್ಟು ಕರೆಸಲಾಗುತ್ತದೆಯಂತೆ ಎಂದು ಹೇಳಿಕೊಂಡಿದ್ದಾರೆ.

ʻʻಪ್ರತಿಯೊಬ್ಬ ಸೆಲೆಬ್ರಿಟಿಗಲಳ ಫೋಟೊಗಳು ನಿರ್ದಿಷ್ಟ ಮೊತ್ತಕ್ಕೆ ಮಾರಾಟವಾಗುತ್ತದೆ. ತುಂಬ ವ್ಯಾಲ್ಯೂ ಇದ್ದ ತಾರೆಗಳನ್ನು ಹೆಚ್ಚಾಗಿ ಅವರು ಟಾರ್ಗೆಟ್‌ ಮಾಡುತ್ತಾರೆ. ನಿಮ್ಮ ಕಾರುಗಳನ್ನೇ ಫಾಲೋ ಮಾಡುತ್ತಾರೆ. ಒಮ್ಮೊಮ್ಮೆ ಸಿನಿಮಾ ಪ್ರಚಾರ ಇತ್ಯಾದಿಗಳಿದ್ದರೆ ಹಣ ಕೊಟ್ಟು ಅವರನ್ನು ಕರೆಸಬೇಕಾಗುತ್ತದೆʼʼ ಎಂದಿದ್ದಾರೆ.

ʻʻಈಗಾಗಲೇ ನನ್ನ ಚಿತ್ರದ ಪ್ರಚಾರ ನಡೆಯುತ್ತಿದೆ. ನನ್ನ ಫೋಟೊವನ್ನು ಕ್ಲಿಕ್ಕಿಸಲು ವಿಮಾನ ನಿಲ್ದಾಣಕ್ಕೆ ಅವರನ್ನು ಆಹ್ವಾನಿಸಲಾಗುತ್ತೆ. ನಾನು ಸಿನಿಮಾ ಪ್ರಚಾರ ಮಾಡದಿದ್ದಾಗ ಅಥವಾ ಸಾರ್ವಜನಿಕರಿಂದ ದೂರ ಇದ್ದಾಗ, ಪಾಪರಾಜಿಗಳು ಕೆಲವೊಮ್ಮೆ ನನ್ನ ಕಾರನ್ನು ಫಾಲೊ ಮಾಡುತ್ತಾರೆ. ಕಷ್ಟಪಟ್ಟು ನನ್ನ ಚಿತ್ರಗಳನ್ನು ತೆಗೆಯುತ್ತಾರೆ. ಏಕೆಂದರೆ ಪ್ರತಿ ಚಿತ್ರಕ್ಕೆ ಇಷ್ಟೆಂದು ಅವರು ಹಣ ಪಡೆಯುತ್ತಾರೆʼʼಎಂದರು.

ʻʻಬಾಲಿವುಡ್​ನ ಪ್ರತಿಯೊಬ್ಬ ಸೆಲೆಬ್ರಿಟಿಗೂ ಒಂದೊಂದು ರೇಟ್ ಇದೆ. ಸ್ಟಾರ್ ನಟ-ನಟಿ ಆಗಿದ್ದರೆ ಅವರ ಚಿತ್ರಗಳು ದೊಡ್ಡ ಬೆಲೆಗೆ ಮಾರಾಟವಾಗುತ್ತವೆ. ದೊಡ್ಡ ಸ್ಟಾರ್ ಅಲ್ಲದಿದ್ದರೆ ನೀವೇ ಕರೆ ಮಾಡಿ ಅವರನ್ನು ಕರೆಸಿಕೊಳ್ಳಬೇಕಾಗುತ್ತದೆ. ಹಾಗೆ ಮಾಡುವವರ ಸಂಖ್ಯೆಯೂ ಬಾಲಿವುಡ್​ನಲ್ಲಿ ಹೆಚ್ಚೇ ಇದೆ’ ಎಂದಿದ್ದಾರೆ.

ಇದನ್ನೂ ಓದಿ: Janhvi Kapoor: ಗಾಂಧಿ-ಅಂಬೇಡ್ಕರ್ ʻಜಾತಿವಾದʼದ ಬಗ್ಗೆ ಶ್ರೀದೇವಿ ಮಗಳಿಗೆ ಆಸಕ್ತಿಯಂತೆ!

ಜಾನ್ವಿ ಕಪೂರ್ ಮೇ 31 ರಂದು ಬಿಡುಗಡೆಯಾಗಲಿರುವ ‘ಮಿಸ್ಟರ್ ಅಂಡ್ ಮಿಸಸ್ ಮಹಿ’ ಚಿತ್ರದಲ್ಲಿ ರಾಜ್‌ಕುಮಾರ್ ರಾವ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಮಹಿಯಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ.. ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

ದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

Continue Reading

South Cinema

Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

Dhruva Sarja: ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

VISTARANEWS.COM


on

Dhruva Sarja KD Movie Release date announce
Koo

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಅಭಿನಯದ ಬಹುನೀರಿಕ್ಷಿತ ʼಮಾರ್ಟಿನ್ʼ ಚಿತ್ರದ ರಿಲೀಸ್ ಡೇಟ್ ಈಗಾಗಲೇ ರಿವೀಲ್‌ ಆಗಿದೆ. ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪಂಚ ಭಾಷೆಗಳಲ್ಲಿ ಅಕ್ಟೋಬರ್‌ 11ಕ್ಕೆ ತೆರೆಗೆ ಅಪ್ಪಲಿಸಲಿದೆ. ಈ ಸುದ್ದಿ ಬೆನ್ನಲ್ಲೇ ಮತ್ತೊಮ್ಮೆ ಧ್ರುವ ಸರ್ಜಾ ಅವರು ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಧ್ರುವ ಸರ್ಜಾ ಮತ್ತು ಪ್ರೇಮ್ ಕಾಂಬಿನೇಷನ್ ಸಿನಿಮಾ ‘ಕೆಡಿ’ ಇದೇ ಡಿಸೆಂಬರ್‌ಗೆ ತೆರೆ ಕಾಣಲಿದೆ. ಮೇಕಿಂಗ್ ವಿಡಿಯೊ ರಿಲೀಸ್ ಮಾಡಿ ಸಿಹಿ ಸುದ್ದಿ ಕೊಟ್ಟಿದೆ ʻಕೆಡಿʼ ಸಿನಿಮಾ ಚಿತ್ರತಂಡ.

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

ಇದನ್ನೂ ಓದಿ: Dhruva Sarja: ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ ಆಯ್ತು ʻಮಾರ್ಟಿನ್‌ʼ ಆಡಿಯೊ ರೈಟ್ಸ್‌!

ಆರ್ಕೆಸ್ಟ್ರಾ ಗ್ಲಿಂಪ್ಸ್

ಇದೀಗ ಕೆಡಿ ಸಿನಿಮಾ ಆರ್ಕೆಸ್ಟ್ರಾ ಗ್ಲಿಂಪ್ಸ್‌ವನ್ನು ವಿಡಿಯೊ ಶೇರ್‌ ಮಾಡಿಕೊಂಡಿದೆ ಚಿತ್ರತಂಡ. ವಿದೇಶದಲ್ಲಿ ಮ್ಯೂಸಿಕ್‌ ರೆಕಾರ್ಡ್‌ ಮಾಡಲಾಗಿದೆ. ಈ ಬಗ್ಗೆ ಚಿಕ್ಕ ವಿಡಿಯೊ ಮೂಲಕ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ. ‘ಕೆಡಿ’ ಸಿನಿಮಾದ ಆಡಿಯೋ ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆ ಎಂದೂ ಹೇಳಿಕೊಂಡಿದೆ ಚಿತ್ರತಂಡ. ಈ ವರ್ಷವೇ ಧ್ರುವ ನಟನೆಯ ಮಾರ್ಟಿನ್ ಹಾಗು ಕೆಡಿ ಎರಡು ಸಿನಿಮಾಗಳು ತೆರೆಗೆ ಬರಲಿವೆ .

ಮಾರ್ಟಿನ್ ಚಿತ್ರ

ಪೊಗರು ಚಿತ್ರದ ಬಳಿಕ 3 ವರ್ಷಗಳ ನಂತರ ಧ್ರುವ ಸರ್ಜಾ ತೆರೆಗೆ ಎಂಟ್ರಿ ನೀಡುತ್ತಿದ್ದು, ಮಾರ್ಟಿನ್‌ ಹಾಗೂ ಕೆಡಿ ಚಿತ್ರಗಳು ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅದ್ಧೂರಿ ಬಜೆಟ್‌ ಮತ್ತು ಮೇಕಿಂಗ್‌ನಿಂದಾಗಿ ಸದ್ದು ಮಾಡಿರುವ ಸಿನಿಮಾ ‘ಮಾರ್ಟಿನ್ ಕ್ಲೈಮ್ಯಾಕ್ಸ್‌ನ ಆ್ಯಕ್ಷನ್‌ ದೃಶ್ಯಗಳಿಗೆ ರಾಮ್‌-ಲಕ್ಷ್ಮಣ್‌ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Continue Reading

ಟಾಲಿವುಡ್

Kannada New Movie: ʻಸಂಭವಾಮಿ ಯುಗೇ ಯುಗೇʼ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ನಟಿ ಶ್ರುತಿ ಹರಿಹರನ್!

Kannada New Movie: ಖ್ಯಾತ ನಟಿ ಶ್ರುತಿ ಹರಿಹರನ್ ಜಾನಪದ ಶೈಲಿಯ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಅರಸು ಅಂತಾರೆ ಬರೆದಿರುವ ಈ ಹಾಡಿಗೆ ಗೀತಾ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಪೂರನ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ನಕಾಶ್ ಹಾಗೂ ಸ್ಪರ್ಶ ಹಾಡಿದ್ದಾರೆ. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

VISTARANEWS.COM


on

Sambavami Yuge Yuge song release By sruthi hariharan
Koo

ಬೆಂಗಳೂರು: ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ (Kannada New Movie) ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರದ ಮೊದಲ ಹಾಡು “ಡೋಲು ತಮಟೆ ವಾದ್ಯ” ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ನಟಿ ಶ್ರುತಿ ಹರಿಹರನ್ ಜಾನಪದ ಶೈಲಿಯ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಅರಸು ಅಂತಾರೆ ಬರೆದಿರುವ ಈ ಹಾಡಿಗೆ ಗೀತಾ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಪೂರನ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ನಕಾಶ್ ಹಾಗೂ ಸ್ಪರ್ಶ ಹಾಡಿದ್ದಾರೆ. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ʻʻಇದು ನನ್ನ ಮೊದಲ ಚಿತ್ರ. ನನ್ನ ಮೇಲೆ ನಂಬಿಕೆ ಇಟ್ಟು ಇಂಥದ್ದೊಂದು ಅವಕಾಶ ಕೊಟ್ಟ ನಿರ್ಮಾಪಕಿ ಪ್ರತಿಭಾ ಅವರಿಗೆ ಧನ್ಯವಾದಗಳು. ಇದೊಂದು ಕಮರ್ಷಿಯಲ್‍ ಥ್ರಿಲ್ಲರ್ ನ ಚಿತ್ರ. ಮಂಡ್ಯ, ಚನ್ನಪಟ್ಟಣ, ರಾಮನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ನಾನು ಹತ್ತು ವರ್ಷಗಳಿಂದ ಹಲವು ನಿರ್ದೇಶಕರ ಜೊತೆಗೆ ಕೆಲಸ ಮಾಡಿದ್ದೆ. ಇದೊಂದು ಹಳ್ಳಿ ಹಿನ್ನೆಲೆಯ ಚಿತ್ರ. ಹಳ್ಳಿ ಹುಡುಗರು ಓದಿ, ಪಟ್ಟಣಕ್ಕೆ ಹೋಗಿ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು? ಹಳ್ಳಿ ಉಳಿಯುವುದು ಹೇಗೆ? ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲಸಬೇಕು ಎಂಬುದೆ ಚಿತ್ರದ ಕಥಾ ಸಾರಾಂಶ. ಜೂನ್‍ 21ಕ್ಕೆ ಚಿತ್ರ ಬಿಡುಗಡೆ ಆಗಲಿದೆ. ಇದು ಕಮರ್ಷಿಯಲ್‍ ಚಿತ್ರವಾದರೂ ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವ ಹಲವು ಅಂಶಗಳಿವೆʼʼ ಎಂದರು ನಿರ್ದೇಶಕ ಚೇತನ್ ಚಂದ್ರಶೇಖರ್ ಶೆಟ್ಟಿ.

ಇದನ್ನೂ ಓದಿ: Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

ನಾಯಕ ಜಯ್ ಶೆಟ್ಟಿ ಮಾತನಾಡಿ ʻʻನನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ. ಆ ಹಳ್ಳಿಯ ಪಂಚಾಯ್ತಿ ಅಧ್ಯಕ್ಷನಾಗುತ್ತಾನೆ. ಮುಂದೇನಾಗುತ್ತದೆ ಎಂಬುದು ಚಿತ್ರದ ಕಥೆ. ನಾನು ಹೊಸಬನಾದರೂ ನನ್ನ ಮೇಲೆ ನಂಬಿಕೆ ಇಟ್ಟು, ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ಧನ್ಯವಾದಗಳುʼʼ ಎಂದರು.

ʻʻನಾನು ಬಿಜಾಪುರ ಮೂಲದವಳು. ಆದರೆ, ಬೆಳೆದಿದ್ದು ಮುಂಬೈನಲ್ಲಿ. ಕನ್ನಡದಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಒಂಬತ್ತು ವರ್ಷಗಳ ಕಾಲ ಮಾಡಲಿಂಗ್‍ ಮಾಡಿದ್ದೇನೆ. ಹೀಗಿರುವಾಗಲೇ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತು. ನನ್ನ ಭಾಷೆ ಮತ್ತು ನಟನೆಯನ್ನು ತಿದ್ದಿತೀಡಿದ ನಿರ್ದೇಶಕ ಚೇತನ್‍ ಶೆಟ್ಟಿ ಅವರಿಗೆ ಧನ್ಯವಾದಗಳುʼʼ ಎಂದರು ನಾಯಕಿ ನಿಶಾ ರಜಪೂತ್ .

ಪ್ರಮುಖಪಾತ್ರದಲ್ಲಿ ನಟಿಸಿರುವ ಅಶೋಕ್ ಕುಮಾರ್ ಹಾಗೂ ಮಧುರಗೌಡ ಕೂಡ ತಮ್ಮ ಪಾತ್ರದ ಕುರಿತು ಮಾತನಾಡಿದರು. ಚಿತ್ರದಲ್ಲಿ ನಟಿಸಿರುವ ರಾಜೇಂದ್ರ ಕಾರಂತ್‍, ಅಶ್ವಿನ್‍ ಹಾಸನ್‍, ವಿಕ್ಟರಿ ವಾಸು, ಛಾಯಾಗ್ರಾಹಕ ರಾಜು ಹೆಮ್ಮಿಗೆಪುರ, ಕಾರ್ಯಕಾರಿ ನಿರ್ಮಾಪಕ ದಿನೇಶ್ ರಾಜನ್ ಸೇರಿದಂತೆ ಹಲವರು ಈ ಸಮಾರಂಭದಲ್ಲಿ ಹಾಜರಿದ್ದರು. ನಿರ್ಮಾಪಕಿ ಪ್ರತಿಭಾ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು.

Continue Reading

ಸಿನಿಮಾ

Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

Cannes 2024: ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ಪ್ರಶಸ್ತಿ ಕಾನ್ ಸಿನಿಮೋತ್ಸವದ ಎರಡನೇ ಅತ್ಯುತ್ತಮ ಪ್ರಶಸ್ತಿಯಾಗಿದೆ. ಪಾಯಲ್ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್​ನ ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿದೆಸಿನಿಮಾ ಕಾನ್​ನಲ್ಲಿ ಪ್ರದರ್ಶನವಾದಾಗ ಬರೋಬ್ಬರಿ ಎಂಟು ನಿಮಿಷಗಳ ಸ್ಟಾಂಡಿಂಗ್ ಓವಿಯೇಷನ್ ಈ ಸಿನಿಮಾಕ್ಕೆ ದೊರೆತಿದೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿಯೂ ವೈರಲ್‌ ಆಗಿವೆ.

VISTARANEWS.COM


on

Cannes 2024 Payal Kapadia 'All We Imagine As Light' Wins Grand Prix At Cannes
Koo

ಬೆಂಗಳೂರು: ನಿರ್ದೇಶಕಿ ಪಾಯಲ್ ಕಪಾಡಿಯಾ ಕಾನ್ ಫಿಲ್ಮ್ಸ್‌ ಫೆಸ್ಟಿವಲ್‌ 2024ರಲ್ಲಿ (Cannes 2024) ಇತಿಹಾಸವನ್ನೇ ಬರೆದಿದ್ದಾರೆ. ಪಾಯಲ್ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್​ನ ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ( Grand Prix At Cannes) ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿದೆ .77ನೇ ಆವೃತ್ತಿಯ ಕಾನ್ ಫಿಲ್ಮ್ಸ್‌ ಫೆಸ್ಟಿವಲ್‌ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದೆ. ಹಾಲಿವುಡ್ ನಟ ವಿಯೋಲಾ ಡೇವಿಸ್​ರಿಂದ ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಾಯಲ್, ‘ತಮ್ಮ ಸಿನಿಮಾದ ಮೂವರು ಪ್ರಮುಖ ನಟಿಯರಾದ ಕಣಿ ಕಸ್ತೂರಿ, ದಿವ್ಯಾ ಪ್ರಭಾ ಹಾಗೂ ಕಾವ್ಯಾ ಕದಮ್ ಅವರಿಗೆ ಧನ್ಯವಾದ ತಿಳಿಸಿದರು.

ಗುರುವಾರ ರಾತ್ರಿ (ಮೇ.23) ಸಿನಿಮಾ ಪ್ರದರ್ಶನಲಾಗಿತ್ತು. ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ಈ ಸಿನಿಮಾ ಕುರಿತು ಉತ್ತಮ ವಿಮರ್ಶೆಗಳು ಪ್ರಕಟಗೊಂಡಿದ್ದವು. 30 ವರ್ಷಗಳಲ್ಲಿ ಯಾವ ಭಾರತೀಯರು ಈ ಸಾಧನೆ ಮಾಡಿರಲಿಲ್ಲ. ಪಾಯಲ್ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾ ಕಾನ್​ನ ಗ್ರ್ಯಾಂಡ್​ನ ಪ್ರಿಕ್ಸ್ ಪ್ರೈಜ್ ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿದೆ . ಸಿನಿಮಾ ಕಾನ್​ನಲ್ಲಿ ಪ್ರದರ್ಶನವಾದಾಗ ಬರೋಬ್ಬರಿ ಎಂಟು ನಿಮಿಷಗಳ ಸ್ಟಾಂಡಿಂಗ್ ಓವಿಯೇಷನ್ ಈ ಸಿನಿಮಾಕ್ಕೆ ದೊರೆತಿದೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿಯೂ ವೈರಲ್‌ ಆಗಿವೆ.

ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ಪ್ರಶಸ್ತಿ ಕಾನ್ ಸಿನಿಮೋತ್ಸವದ ಎರಡನೇ ಅತ್ಯುತ್ತಮ ಪ್ರಶಸ್ತಿಯಾಗಿದೆ. ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಫ್‌ಟಿಐಐ) ಹಳೆಯ ವಿದ್ಯಾರ್ಥಿಯಾಗಿರುವ ಕಪಾಡಿಯಾ ಅವರು ತಮ್ಮ ಮೆಚ್ಚುಗೆ ಪಡೆದ ಸಾಕ್ಷ್ಯಚಿತ್ರ “ಎ ನೈಟ್ ಆಫ್ ನೋಯಿಂಗ್ ನಥಿಂಗ್” ಗಾಗಿ ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದು 2021ರ ಕಾನ್‌ ಚಲನಚಿತ್ರೋತ್ಸವದ ಡೈರೆಕ್ಟರ್ಸ್ ಫೋರ್ಟ್‌ನೈಟ್ ಸೈಡ್-ಬಾರ್‌ನಲ್ಲಿ ಪ್ರಥಮ ಪ್ರದರ್ಶನಗೊಂಡಿತ್ತು. ಅಲ್ಲಿ ಅದು ಗೋಲ್ಡನ್ ಐ ಪ್ರಶಸ್ತಿ ಗೆದ್ದಿತ್ತು.

ಇದನ್ನೂ ಓದಿ: Cannes Film Festival: ಕಾನ್ ಚಿತ್ರೋತ್ಸವದಲ್ಲಿ ಅನಸೂಯಾ ಸೇನ್‌ಗುಪ್ತಾ ಅತ್ಯುತ್ತಮ ನಟಿ! ಈ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ತಾರೆ!


ಈ ಸ್ಪರ್ಧೆಯ ತೀರ್ಪುಗಾರರಾಗಿ ಗ್ರೆಟಾ ಗೆರ್ವಿಗ್ಮ ತ್ತು ಸ್ಪ್ಯಾನಿಷ್ ನಿರ್ದೇಶಕ ಜುವಾನ್ ಆಂಟೋನಿಯೊ ಬಯೋನಾ, ಟರ್ಕಿಶ್ ನಟ-ಚಿತ್ರಕಥೆಗಾರ ಎಬ್ರು ಸೆಲಾನ್, ಇಟಾಲಿಯನ್ ನಟ ಪಿಯರ್‌ಫ್ರಾನ್ಸ್‌ಕೊ ಫೆವಿನೊ, ಅಮೇರಿಕನ್ ನಟ ಲಿಲಿ ಗ್ಲಾಡ್‌ಸ್ಟೋನ್, ಜಪಾನಿನ ನಿರ್ದೇಶಕ ಹಿರೊಕಾಜು ಕೊರೆ-ಎಡಾ, ಲೆಬನಾನಿನ ನಟ-ನಿರ್ದೇಶಕ ನಡಿನ್ ಲಬಾಕಿ ಇದ್ದರು.

`ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾವು ಮಲಯಾಳಂ-ಹಿಂದಿ ಸಿನಿಮಾ ಆಗಿದೆ. ಆಸ್ಪತ್ರೆಯಲ್ಲಿ ನರ್ಸ್‌ಗಳಾಗಿ ಸೇವೆ ಸಲ್ಲಿಸುವ ಇಬ್ಬರು ರೂಮ್‌ಮೇಟ್‌ಗಳ ಕಥೆ ಇದರಲ್ಲಿದೆ. ಚಿತ್ರವು ಮೂರು ವಿಭಿನ್ನ ಮಹಿಳೆಯರ ನಡುವಿನ ಸ್ನೇಹದ ಕತೆ ಕೂಡ ಇದೆ.

Continue Reading
Advertisement
IT Raid
ದೇಶ11 seconds ago

IT Raid: ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್‌; ಬೆಳ್ಳಂಬೆಳಗ್ಗೆ ರೇಡ್‌, ಕೋಟಿ ಕೋಟಿ ಹಣ ಜಪ್ತಿ!

Udupi Gang War
ಕರ್ನಾಟಕ7 mins ago

Udupi Gang War: ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

T20 World Cup 2024
ಕ್ರೀಡೆ18 mins ago

T20 World Cup 2024: ನ್ಯೂಯಾರ್ಕ್​ಗೆ ಪ್ರಯಾಣಿಸಿದ ಮೊದಲ ಬ್ಯಾಚ್​; ವಿರಾಟ್​ ಕೊಹ್ಲಿ ಗೈರು, ಅಭ್ಯಾಸ ಪಂದ್ಯಕ್ಕೂ ಅನುಮಾನ

Road Accident in Bengaluru
ಕ್ರೈಂ20 mins ago

Road Accident : ಕಾರು ಡ್ರೈವಿಂಗ್‌ ಕಲಿಯುವಾಗ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಳು; ಡೆಡ್ಲಿ ಆಕ್ಸಿಡೆಂಟ್‌ಗೆ ಬಾಲಕಿ ಬಲಿ

Teenage boy arrested
ಕ್ರೈಂ34 mins ago

Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

Janhvi Kapoor on paparazzi culture
ಬಾಲಿವುಡ್41 mins ago

Janhvi Kapoor: ಪಾಪರಾಜಿಗಳ ಅಸಲಿ ಮುಖ ರಿವೀಲ್‌ ಮಾಡಿದ ಜಾನ್ವಿ ಕಪೂರ್!

Gold Rate Today
ಕರ್ನಾಟಕ46 mins ago

Gold Rate Today: ಇಂದೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Tiger attack
ಮೈಸೂರು1 hour ago

Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

IPL 2024 Final
ಕ್ರೀಡೆ1 hour ago

IPL 2024 Final: ಐಪಿಎಲ್​ ವಿನ್ನರ್​ & ರನ್ನರ್​ಗೆ ಸಿಗುವ ಮೊತ್ತವೆಷ್ಟು? ಈ ಬಾರಿ ಆರೆಂಜ್​ ಕ್ಯಾಪ್​, ಪರ್ಪಲ್​ ಕ್ಯಾಪ್​ ಯಾರಿಗೆ ಸಿಗಲಿದೆ?

Cyclone Remal
ದೇಶ1 hour ago

Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌