Chetan Ahimsa | ಮಿ. ಚೇತನ್‌ ಇದು ಲಾಸ್ಟ್‌ ವಾರ್ನಿಂಗ್:‌ ಪಂಚಮಸಾಲಿ ಹೋರಾಟ ಪ್ರಶ್ನಿಸಿದ್ದಕ್ಕೆ ಕಾಶಪ್ಪನವರ್‌ ಎಚ್ಚರಿಕೆ - Vistara News

ಕರ್ನಾಟಕ

Chetan Ahimsa | ಮಿ. ಚೇತನ್‌ ಇದು ಲಾಸ್ಟ್‌ ವಾರ್ನಿಂಗ್:‌ ಪಂಚಮಸಾಲಿ ಹೋರಾಟ ಪ್ರಶ್ನಿಸಿದ್ದಕ್ಕೆ ಕಾಶಪ್ಪನವರ್‌ ಎಚ್ಚರಿಕೆ

ಪಂಚಮಸಾಲಿ ಮೀಸಲಾತಿ ಹೋರಾಟ ಸ್ವಾರ್ಥದ್ದು ಎಂದು ನಟ ಚೇತನ್‌ ಅಹಿಂಸಾ ಅವರಿಗೆ ವಿಜಯಾನಂದ ಕಾಶಪ್ಪವನರ್‌ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

ವಿಜಯಾನಂದ ಕಾಶಪ್ಪನವರ್‌ ಮತ್ತು ಚೇತನ್‌ ಅಹಿಂಸಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟ ಸ್ವಾರ್ಥಕ್ಕಾಗಿ ನಡೆಯುತ್ತಿರುವ ಹೋರಾಟ ಎನ್ನುವ ನಟ ಚೇತನ್‌ ಅಹಿಂಸಾ ಅವರ ಹೇಳಿಕೆಯನ್ನು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌ ಖಂಡಿಸಿದ್ದಾರೆ. ನಟ ಚೇತನ್‌ ಹುಚ್ಚು ಹಿಡಿದ ಹಾಗೆ ಮಾತನಾಡಿದ್ದಾನೆ ಎಂದು ಕಾಶಪ್ಪನವರ್‌ ವಾಗ್ದಾಳಿ ನಡೆಸಿದ್ದಾರೆ. ಜತೆಗೆ ಇದು ಲಾಸ್ಟ್‌ ವಾರ್ನಿಂಗ್‌ ಎಂದು ಎಚ್ಚರಿಸಿದ್ದಾರೆ.

ʻʻನಮ್ಮ ಬಗ್ಗೆ ಮಾತನಾಡುವ ಚೇತನ್ ಏನು ಪ್ರಧಾನ ಮಂತ್ರಿಯೇ?ʼʼ ಎಂದು ಪ್ರಶ್ನಿಸಿರುವ ಅವರು, ʻಏನೋ ಮಿಸ್ಟರ್ ಚೇತನ್ ಎಷ್ಟನೆ ಕ್ಲಾಸ್‌ ಶಾಲೆ ಓದಿದಿಯಾ?ʼʼ ಎಂದು ಕೇಳಿದ್ದಾರೆ ಪಂಚಮಸಾಲಿ ಹೋರಾಟದ ಮುಂಚೂಣಿಯಲ್ಲಿರುವ ವಿಜಯಾನಂದ ಕಾಶಪ್ಪನವರ್‌.

ʻʻಪಂಚಮಸಾಲಿ ಹೋರಾಟದ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಚೇತನ್ ಸಿನಿಮಾವನ್ನು ಪಂಚಮಸಾಲಿ ಸಮಾಜದವರು ನೋಡಬಾರದು. ಚೇತನ್ ಸಿನಿಮಾ ನೋಡಿದ್ರೆ ಪಂಚಮಸಾಲಿ ಸಮಾಜಕ್ಕೆ ಮಾಡಿದ ದ್ರೋಹ, ಅವಮಾನ. ಚೇತನ್ ಸಿನಿಮಾ ಇಡೀ ರಾಜ್ಯದಲ್ಲಿ ಯಾರೂ ನೋಡಬಾರದುʼʼ ಎಂದು ಕಾಶಪ್ಪನವರ್‌ ಹೇಳಿದರು.

ʻʻನಾವು ನಿನ್ನ ಸಿನಿಮಾ ನೋಡಿದ್ದಕ್ಕೇ ನೀ ಹೀರೋ ಆಗಿದಿ, ಇಲ್ಲಂದ್ರ ಝೀರೋ ಇರ್ತಿದ್ದಿ. ನಾವು ಹಣ ಕೊಟ್ಟು ನಿನ್ನ ಸಿನಿಮಾ ನೋಡಬೇಕಾ? ಅದರ ಅವಶ್ಯಕತೆ ನಮಗಿಲ್ಲ. ಸ್ವಾರ್ಥಕ್ಕೋಸ್ಕರ ಹೋರಾಟ ಮಾಡುತ್ತಿದ್ದೇವೆ ಅಂತಿಯಾ? ಇದೇ ಲಾಸ್ಟ್ ವಾರ್ನಿಂಗ್ ಮಿಸ್ಟರ್ ಚೇತನ್… ಹೀಗೆ ಮಾತನಾಡಿದ್ರೆ ನಿನ್ನ ಮನೆಗೆ ಬಂದು ಹೋರಾಟ ಮಾಡಬೇಕಾಗುತ್ತೆʼʼ ಎಂದ ವಿಜಯಾನಂದ ಕಾಶಪ್ಪನವರ್‌, ಚೇತನ್‌ ಭಾರತೀಯನೇ ಅಲ್ಲ ಎಂದಿದ್ದಾರೆ.

ʻʻನೀನು ಲಿಂಗಾಯತ ಸಮಾಜದವನಾಗಿ ನಮ್ಮ ಹೋರಾಟ ಬಗ್ಗೆ ಮಾತಾಡ್ತೀಯಾ? ನೀನು ನಮ್ಮ ಹೋರಾಟದ ಬಗ್ಗೆ, ಮೀಸಲಾತಿ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲʼʼ ಎಂದ ಅವರು, ʻʻಯಾಕೋ ಮಿಸ್ಟರ್ ಚೇತನ್? ಪಂಚಮಸಾಲಿ ಅಂದ್ರ ಸಡಿಲು(ಸರಳ) ಕಂಡಿ ಏನು?ʼʼ ಎಂದು ತಮ್ಮ ಸ್ಟೈಲ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | Panchamasali Reservation | ಪಂಚಮಸಾಲಿ ಮೀಸಲಾತಿ ಹೋರಾಟ ಸ್ವಾರ್ಥದ್ದು, ಒಕ್ಕಲಿಗರಿಗೆ ನನ್ನ ಬೆಂಬಲ: ಚೇತನ್‌ ಅಹಿಂಸಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Dog Meat Controversy: ಅಬ್ದುಲ್‌ ರಜಾಕ್‌ ತಂದಿರೋದು ಕುರಿ ಮಾಂಸ, ‌ಖಚಿತಪಡಿಸಿದ ಲ್ಯಾಬ್‌ ವರದಿ: ಆಹಾರ ಇಲಾಖೆ ಆಯುಕ್ತ

Dog Meat Controversy: ಈ ಮಾಂಸವನ್ನು ನಾಯಿ ಮಾಂಸ ಎಂದು ಆರೋಪಿಸಿದವರ ಮೇಲೆ ಕ್ರಮ ನಾವು ತೆಗೆದುಕೊಳ್ಳುವುದಿಲ್ಲ. ಆಮದು ಮಾಡಿಕೊಂಡವರ ಬಳಿ ಎಲ್ಲಾ ಪರವಾನಗಿ ಇದೆ, ಅವರು ನಮಗೆ ದಾಖಲೆ ಕೊಟ್ಟಿದ್ದಾರೆ ಎಂದು ಶ್ರೀನಿವಾಸ್‌ ಹೇಳಿದ್ದಾರೆ.

VISTARANEWS.COM


on

dog meat controversy food department commissioner
Koo

ಬೆಂಗಳೂರು: ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ (Majestic Railway Station) ಪತ್ತೆಯಾಗಿರುವುದು ಕುರಿ ಮಾಂಸವೇ (mutton) ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್‌ ಹೇಳಿದ್ದಾರೆ. ಲ್ಯಾಬ್ ರಿಪೋರ್ಟ್‌ನಲ್ಲಿ (Lab Report) ಇದು ಕುರಿ ಮಾಂಸ ಎಂದು ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ. ಆ ಮೂಲಕ ʼನಾಯಿ ಮಾಂಸ ವಿವಾದʼ (Dog Meat Controversy) ಎತ್ತಿರುವ ಪುನೀತ್‌ ಕೆರೆಹಳ್ಳಿ (Puneeth Kerehalli) ಬಳಗಕ್ಕೆ ಹಿನ್ನಡೆಯಾಗಿದೆ.

ಜುಲೈ 26ರಂದು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ 86 ಬಾಕ್ಸ್‌ಗಳಷ್ಟು ರಾಜಸ್ಥಾನದಿಂದ ತರಿಸಿದ ಮಾಂಸದ ಬಾಕ್ಸ್‌ಗಳು ಪತ್ತೆಯಾಗಿದ್ದವು. ಇವುಗಳನ್ನು ಹೈದರಾಬಾದ್‌ನ ICAR ನ್ಯಾಷನಲ್ ಮೀಟ್ ರಿಸರ್ಚ್ ಇನ್ಸ್ಟಿಟ್ಯೂಟ್‌ನಲ್ಲಿ ಪರೀಕ್ಷೆ ಮಾಡಿಸಲಾಗಿದೆ. ಅದರಲ್ಲಿ S Ovis Aries ಎಂದು ಲ್ಯಾಬ್ ವರದಿಯಲ್ಲಿ ಬಂದಿದೆ. ಹಾಗೆಂದರೆ ಅದು ಕುರಿಯ ವೈಜ್ಞಾನಿಕ ಹೆಸರು. ಹೀಗಾಗಿ ಇದು ಕುರಿ ಮಾಂಸ ಎಂದು ಇಲಾಖೆ ಆಯುಕ್ತ ಶ್ರೀನಿವಾಸ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

ಈಗ ಡಿಎನ್‌ಎ ಪರೀಕ್ಷೆ ಮಾತ್ರ ಮಾಡಲಾಗಿದೆ. ಇದರ ಶುಚಿತ್ವದ ಬಗ್ಗೆ ಇನ್ನೊಂದು ಲ್ಯಾಬ್‌ನಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಶುಕ್ರವಾರ ಅದರ ವರದಿ ಕೂಡ ಬರುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ಈ ಮಾಂಸವನ್ನು ನಾಯಿ ಮಾಂಸ ಎಂದು ಆರೋಪಿಸಿದವರ ಮೇಲೆ ಕ್ರಮ ನಾವು ತೆಗೆದುಕೊಳ್ಳುವುದಿಲ್ಲ. ನಾವು ಈಗ ಬಂದಿರುವ ವರದಿಯನ್ನು ಪೊಲೀಸರಿಗೆ ನೀಡುತ್ತೇವೆ. ಪೊಲೀಸರು ವರದಿ ಪಡೆದುಕೊಂಡು ಹೊಸ ದೂರು ದಾಖಲಿಸಿ ಕ್ರಮ‌ ತೆಗೆದುಕೊಳ್ಳಬಹುದು. ಅವರು ಮುಂದಿನ ಕಾನೂನಾತ್ಮಕ ಕ್ರಮ ಜರುಗಿಸುತ್ತಾರೆ. ಆಮದು ಮಾಡಿಕೊಂಡವರ ಬಳಿ ಎಲ್ಲಾ ಪರವಾನಗಿ ಇದೆ, ಅವರು ನಮಗೆ ದಾಖಲೆ ಕೊಟ್ಟಿದ್ದಾರೆ ಎಂದು ಶ್ರೀನಿವಾಸ್‌ ಹೇಳಿದ್ದಾರೆ.

FSSAI ಗೈಡ್‌ಲೈನ್ಸ್ ಪ್ರಕಾರ ಉದ್ಯಮಿ ರಜಾಕ್ ಕೊಟ್ಟ ದಾಖಲೆ ಎಲ್ಲವೂ ಸರಿಯಾಗಿಯೇ ಇದೆ. ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ಥಾನ ಸೇರಿದಂತೆ ಹಲವು ಕಡೆಯಿಂದ ನಗರಕ್ಕೆ ಮಾಂಸ ಆಮದಾಗುತ್ತಿದೆ. ಮೀನು, ಕುರಿ ಸೇರಿದಂತೆ ವಿವಿಧ ರೀತಿಯ ಮಾಂಸ ಆಮದಾಗುತ್ತಿದೆ. ಎಲ್ಲವನ್ನೂ ಆಹಾರ ಗುಣಮಟ್ಟ ಇಲಾಖೆ ಪರೀಕ್ಷೆ ಮಾಡಿದೆ. ಮುಂದೆಯೂ ಮಾಡುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪೊಲೀಸರ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಪುನೀತ್‌ ಕೆರೆಹಳ್ಳಿ ಮತ್ತೆ ವಶಕ್ಕೆ, ಪ್ರತಾಪ್‌ ಸಿಂಹ ವಿರುದ್ಧ ದೂರು

ಬೆಂಗಳೂರು: ಪುನೀತ್‌ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ, ಶಾಸಕ ಹರೀಶ್‌ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರು, ಬಸವೇಶ್ವರ ನಗರದ ಪೊಲೀಸ್‌ ಠಾಣೆ ಎದುರು ಬುಧವಾರ ಪ್ರತಿಭಟನೆ (BJP Protest) ನಡೆಸಿದರು. ಮಾಂಸ ಸಾಗಾಟಕ್ಕೆ ತಡೆ ಪ್ರಕರಣದಲ್ಲಿ ಬಂಧನವಾಗಿದ್ದ ಪುನೀತ್‌ ಕೆರೆಹಳ್ಳಿಗೆ ಲಾಕಪ್‌ನಲ್ಲಿ ಬಟ್ಟೆ ಬಿಚ್ಚಿಸಿ, ಹಿಂಸೆ ನೀಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿ, ಜಾಮೀನು ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿದ್ದಾರೆ ಎಂದು ಎಸಿಪಿ ಚಂದನ್ ವಿರುದ್ಧ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಹೀಗಾಗಿ ಪ್ರತಿಭಟನೆ ನಿಯಂತ್ರಿಸಲು ಪುನೀತ್‌ ಕೆರೆಹಳ್ಳಿಯನ್ನು ಬಸವೇಶ್ವರನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

Continue Reading

ಕರ್ನಾಟಕ

BJP Protest: ಪೊಲೀಸರ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಪುನೀತ್‌ ಕೆರೆಹಳ್ಳಿ ಮತ್ತೆ ವಶಕ್ಕೆ, ಪ್ರತಾಪ್‌ ಸಿಂಹ ವಿರುದ್ಧ ದೂರು

BJP Protest: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿ, ಜಾಮೀನು ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ದೌರ್ಜನ್ಯ ಖಂಡಿಸಿ ಬಸವೇಶ್ವರ ನಗರ ಠಾಣೆ ಎದುರು ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

BJP Protest
Koo

ಬೆಂಗಳೂರು: ಪುನೀತ್‌ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ, ಶಾಸಕ ಹರೀಶ್‌ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರು, ಬಸವೇಶ್ವರ ನಗರದ ಪೊಲೀಸ್‌ ಠಾಣೆ ಎದುರು ಬುಧವಾರ ಪ್ರತಿಭಟನೆ (BJP Protest) ನಡೆಸಿದರು. ಮಾಂಸ ಸಾಗಾಟಕ್ಕೆ ತಡೆ ಪ್ರಕರಣದಲ್ಲಿ ಬಂಧನವಾಗಿದ್ದ ಪುನೀತ್‌ ಕೆರೆಹಳ್ಳಿಗೆ ಲಾಕಪ್‌ನಲ್ಲಿ ಬಟ್ಟೆ ಬಿಚ್ಚಿಸಿ, ಹಿಂಸೆ ನೀಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿ, ಜಾಮೀನು ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿದ್ದಾರೆ ಎಂದು ಎಸಿಪಿ ಚಂದನ್ ವಿರುದ್ಧ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಹೀಗಾಗಿ ಪ್ರತಿಭಟನೆ ನಿಯಂತ್ರಿಸಲು ಪುನೀತ್‌ ಕೆರೆಹಳ್ಳಿಯನ್ನು ಬಸವೇಶ್ವರನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಜು.26ರಂದು ರಾತ್ರಿ ಅಕ್ರಮವಾಗಿ ಮಾಂಸ ಬರುತ್ತಿದೆ ಎಂಬ ಮಾಹಿತಿ ಇತ್ತು. ಈ ಹಿಂದೆ ಎಲ್ಲರಿಗೂ ದೂರು ನೀಡಿದೂ ಪ್ರಯೋಜನೆ ಆಗಿರಲಿಲ್ಲ. ಹೀಗಾಗಿ ಪುನೀತ್ ಕೆರೆಹಳ್ಳಿ ಸ್ಥಳಕ್ಕೆ ಹೋಗಿದ್ದರು. ಆಗ ಅಬ್ದುಲ್ ರಜಾಕ್ ಸ್ಥಳಕ್ಕೆ ಬಂದಿದ್ದಾರೆ. ಮಾಂಸದ ಬಾಕ್ಸ್ ಓಪನ್ ಮಾಡಲು ಅಬ್ದುಲ್ ರಜಾಕ್ ಒಪ್ಪಿಲ್ಲ. ಸ್ಥಳಕ್ಕೆ ಪೊಲೀದರು ಬಂದು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದು, ಕಾಟನ್ ಪೇಟೆ ಠಾಣೆಯಲ್ಲಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಪುನೀತ್ ಆರೋಪ ಮಾಡಿದ್ದಾರೆ. ಪುನೀತ್ ಅಲ್ಲಿಗೆ ಹೋಗಿದ್ದು ತಪ್ಪಾ ಎಂದು ಪ್ರಶ್ನಿಸಿದರು.

ಮಾಂಸ ತಂದ ಅಬ್ದುಲ್ ರಜಾಕ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬದಲು, ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳಕ್ಕೆ ಹೋದ ಕೆರೆಹಳ್ಳಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಕಾನೂನಿನಲ್ಲಿ ಯಾವುದೇ ವ್ಯಕ್ತಿಗೆ ಟಾರ್ಚರ್ ಮಾಡೋಕ್ಕೆ ಅವಕಾಶ ಇಲ್ಲ. ಹೀಗಿರುವಾಗ ಯಾಕೆ ಬಟ್ಟೆ ಬಿಚ್ಚಿಸಿದರು?, ಅಬ್ದುಲ್ ರಜಾಕ್ ವಿರುದ್ಧ ಕೇಸ್ ದಾಖಲು ಮಾಡಬೇಕು. ಎಸಿಪಿ ಚಂದನ್ ವಿರುದ್ಧ ತನಿಖೆ ನಡೆಸಬೇಕು. ನಾನು ಯಾರಿಗೂ ವಾರ್ನಿಂಗ್ ಮಾಡಿಲ್ಲ. ಪೊಲೀಸ್ ಕಮಿಷನರ್‌ಗೆ ದೂರು ನೀಡುತ್ತೇವೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ಈ ವೇಳೆ ಶಾಸಕ ಹರೀಶ್‌ ಪೂಂಜಾ ಮಾತನಾಡಿ, ನಾಯಿ ಮಾಂಸ ಮಾರಾಟ ದಂಧೆ ವಿಚಾರದಲ್ಲಿ ಗೃಹಮಂತ್ರಿಗಳು ಹೇಳಿದ್ದು ಸುಳ್ಳು , ಈ ಹಿಂದೆ ಪ್ರಿಯಾಂಕ್ ಖರ್ಗೆ ಕೂಡ ಸುಳ್ಳು ಹೇಳಿದ್ದರು. ಸಾಬೀತಾಗೋಕೆ ಮುಂಚೆಯೇ ಇವರೇ ದೃಢಪಡಿಸುತ್ತಾರೆ. ಇದು ಕಾಂಗ್ರೆಸ್ ಸರ್ಕಾರದ ವ್ಯವಸ್ಥಿತ ಸಂಚು. ನ್ಯಾಯ ಕೇಳೋಕೆ ಬಂದ ನಮ್ಮ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಗೂಂಡಾಗಳಂತೆ ಬಳಸಿಕೊಳ್ಳುತ್ತಿದೆ. ಪ್ರಕರಣ ಬೆಳಕಿಗೆ ತಂದವರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಮಾಂಸ ಯಾವುದು ಅನ್ನೋ ರಿಪೋರ್ಟ್ ಇನ್ನೂ ಬಂದಿಲ್ಲ‌, ಆಗಲೇ ಹೇಗೆ ನೀವು ಅದು ಮೇಕೆ ಮಾಂಸ ಎನ್ನುತ್ತೀರಿ? ಕಾಂಗ್ರೆಸ್ ಸರ್ಕಾರ‌ ಹಿಂದುಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು

ಎಸಿಪಿ ಚಂದನ್‌ಗೆ ಸಾಮಾಜಿಕ ಜಾಲತಾಣದಲ್ಲಿ ಬೇದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಆಮ್ ಆದ್ಮಿ ಪಾರ್ಟಿ ಯುವ ಘಟಕದಿಂದ ಪಶ್ಚಿಮ ಡಿಸಿಪಿಗೆ ದೂರು ನೀಡಲಾಗಿದೆ. ಪುನೀತ್ ಕೆರೆಹಳ್ಳಿ ಬಂಧನಕ್ಕೆ ಸಂಬಂಧಿಸಿ ಪ್ರತಾಪ್ ಸಿಂಹ ಟ್ವೀಟ್‌ ಮಾಡಿ, ಬೆದರಿಕೆ ಹಾಕಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ಯುವ ಘಟಕ ಅಧ್ಯಕ್ಷ ಲೋಹಿತ್ ಕುಮಾರ್ ದೂರು ನೀಡಿದ್ದಾರೆ.

ಜು. 30ರಂದು ಟ್ವೀಟ್ ಮಾಡಿದ್ದ ಪ್ರತಾಪ್‌ ಸಿಂಹ ಅವರು, “ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ಎಸಿಪಿ ಚಂದನ್, ಜು.31ಕ್ಕೆ ಸ್ಟೇಷನ್‌ಗೆ ಬರುತ್ತೇನೆ, ನೀವು ಇರಬೇಕು. ಬೆಳಗ್ಗೆ ಬಸವೇಶ್ವರನಗರ ಎಸಿಪಿ ಆಫೀಸ್ ಎದುರು 10 ಗಂಟೆಗೆ ಬನ್ನಿ” ಎಂದು ಬಸವೇಶ್ವರ ನಗರ ಪೊಲೀಸ್ ಠಾಣೆಯ ಫೋಟೋ ಹಾಕಿ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದರು. ಹೀಗಾಗಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದನ ವಿರುದ್ಧ ಎಎಪಿ ದೂರು ನೀಡಿದೆ.

Continue Reading

ಪ್ರಮುಖ ಸುದ್ದಿ

HD Kumaraswamy: ಬಿಜೆಪಿ ಪಾದಯಾತ್ರೆಗೆ ನಾವು ಬೆಂಬಲ ಕೊಡಲ್ಲ, ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ: ಎಚ್‌ಡಿಕೆ ಕಿಡಿ; ಮೈತ್ರಿಕೂಟದಲ್ಲಿ ಅಪಸ್ವರ

HD Kumaraswamy: ಪ್ರೀತಂ ಗೌಡ (Preetham Gowda) ಯಾರು? ಪೆನ್ ಡ್ರೈವ್ ಹಂಚಿಕೆಗೆ ಯಾರು ಕಾರಣ? ದೇವೇಗೌಡರ (HD Deve Gowda) ಕುಟುಂಬಕ್ಕೆ ವಿಷ ಇಟ್ಟವನು ಅವನು. ಅಂಥವರ ಜೊತೆಗೆ ವೇದಿಕೆ ಮೇಲೆ ಕೂರಿಸ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಹೆಚ್‌ಡಿಕೆ ಕಿಡಿ ಕಾರಿದ್ದಾರೆ.

VISTARANEWS.COM


on

hd kumaraswamy in bjp jds meet
ಮೈತ್ರಿ ಪಕ್ಷ ಸಮನ್ವಯ ಸಭೆಯಲ್ಲಿ ಎಚ್‌ಡಿ ಕುಮಾರಸ್ವಾಮಿ
Koo

ಬೆಂಗಳೂರು: ಬಿಜೆಪಿ- ಜೆಡಿಎಸ್‌ (BJP- JDS) ಮೈತ್ರಿಪಕ್ಷಗಳಲ್ಲಿ ಪಾದಯಾತ್ರೆ (Padayatra) ವಿಚಾರದಲ್ಲಿ ಅಪಸ್ವರ ಕೇಳಿಸಿದೆ. ಬಿಜೆಪಿ ಪಾದಯಾತ್ರೆಗೆ (Bangalore to Mysore) ನಾವು ಬೆಂಬಲ ಕೊಡುವುದಿಲ್ಲ. ನಮ್ಮನ್ನು ಅವರು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಜೆಡಿಎಸ್‌ ನಾಯಕ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ಆಗಸ್ಟ್‌ 3ರಿಂದ ಪಾದಯಾತ್ರೆ ಹಮ್ಮಿಕೊಂಡಿದೆ. ಆದರೆ ಇದರಲ್ಲಿ ಭಾಗವಹಿಸದಿರಲು ಜೆಡಿಎಸ್‌ ನಿರ್ಧರಿಸಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಜೆ‌.ಟಿ ದೇವಗೌಡರ (GT Devegowda) ನೇತೃತ್ವದಲ್ಲಿ ಕೋರ್ ಕಮಿಟಿ ಸದಸ್ಯರು ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ. ಕೇರಳದಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕದ ಜನರು ಗುಡ್ಡ ಕುಸಿತದಲ್ಲಿ (Wayanad landslide) ಕಣ್ಮರೆಯಾಗಿದ್ದಾರೆ. ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲೂ ಹಲವೆಡೆ ರೆಡ್, ಎಲ್ಲೋ ಅಲರ್ಟ್ ಘೋಷಿಸಿದೆ. ಹಲವು ಜಿಲ್ಲೆಗಳಲ್ಲಿ ಜಲಾವೃತಗೊಂಡು ಸಂಕಷ್ಟ ಎದುರಿಸುತ್ತಿದ್ದಾರೆ. ಮಂಡ್ಯ ಭಾಗದಲ್ಲಿ ಭತ್ತದ ಸಸಿ ನೆಡುವ ಕೆಲಸ ಶುರುವಾಗಲಿದೆ. ಈ ಹಿನ್ನಲೆಯಲ್ಲಿ ನಮ್ಮ ನಾಯಕರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಎಚ್‌ಡಿಕೆ ಹೇಳಿದ್ದಾರೆ.

ಪಾದಯಾತ್ರೆ ಮಾಡಬೇಕು ಎಂದು ಬಿಜೆಪಿ ನಾಯಕರು ಈ ಮುಂಚೆ ನಿರ್ಧಾರ ಮಾಡಿದ್ದರು. ಮಾಹಿತಿಗಾಗಿ ನಮಗೆ ಹೇಳಿದ್ದಾರೆ ಅಷ್ಟೇ. ಬಿಜೆಪಿ ನಿಲುವಿನಲ್ಲಿ ತಿರ್ಮಾನ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಸೂಕ್ತವಾದ ಸಂದರ್ಭವಲ್ಲ ಅಂತ ನಾವು ಹಿಂದೆ ಸರಿದಿದ್ದೇವೆ. ಈಗ ಪಾದಯಾತ್ರೆ ಮಾಡಿದರೆ ಜನರ ಟೀಕೆ ವ್ಯಕ್ತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ. ಅಲ್ಲಿನ ಜನರ ಸಮಸ್ಯೆ ಏನು, ಅದು ಮುಖ್ಯ. ಪಾದಯಾತ್ರೆಯಿಂದ ಲಾಭ ಏನು? ಕಾನೂನು ಹೋರಾಟ ಮುಖ್ಯ. ರಾಜಕೀಯವೇ ನಮಗೆ ಪ್ರಾಮುಖ್ಯವಲ್ಲ ಎಂದು ಎಚ್‌ಡಿಕೆ ನುಡಿದರು.

ನಾವು ನೈತಿಕ ಬೆಂಬಲವೂ ಕೊಡಲ್ಲ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಯಾಕೆ ಬೆಂಬಲ ಕೊಡಬೇಕು? ಬೆಂಗಳೂರು ಮೈಸೂರು ವರೆಗೂ ನಮ್ಮ ಶಕ್ತಿ ಇದೆ. ನಮ್ಮನ್ನು ಪರಿಗಣಿಸದಿದ್ದರೆ ಹೇಗೆ? ನನ್ನ ಮನಸ್ಸಿಗೆ ನೋವಾಗಿದೆ, ಯಾಕೆ ಬೆಂಬಲ ಕೊಡಬೇಕು? ಪ್ರೀತಂ ಗೌಡ (Preetham Gowda) ಯಾರು? ಪೆನ್ ಡ್ರೈವ್ ಹಂಚಿಕೆಗೆ ಯಾರು ಕಾರಣ? ದೇವೇಗೌಡರ (HD Deve Gowda) ಕುಟುಂಬಕ್ಕೆ ವಿಷ ಇಟ್ಟವನು ಅವನು. ಅಂಥವರ ಜೊತೆಗೆ ವೇದಿಕೆ ಮೇಲೆ ಕೂರಿಸ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಹೆಚ್‌ಡಿಕೆ ಕಿಡಿ ಕಾರಿದ್ದಾರೆ.

ಜೆಡಿಎಸ್‌ ಅಸಮ್ಮತಿ ನಡುವೆಯೂ ತಯಾರಿ

ಬೆಂಗಳೂರು- ಮೈಸೂರು ಪಾದಯಾತ್ರೆಗೆ ಜೆಡಿಎಸ್ ಅಸಮ್ಮತಿ ನಡುವೆಯೂ ಬಿಜೆಪಿ ಪಾದಯಾತ್ರೆಗೆ ತಯಾರಿ ಮಾಡಿಕೊಂಡಿದೆ. ಯುವಮೋರ್ಚಾ ಮೊದಲ ದಿನದ ಪಾದಯಾತ್ರೆ ಉಸ್ತುವಾರಿ ವಹಿಸಿದೆ. ಯುವಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಹಾಗೂ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಪಾದಯಾತ್ರೆಗೆ ಸಕಲ ತಯಾರಿ ರೂಪುರೇಷೆ ಮಾಡಲಾಗಿದೆ.

ಈ ನಡುವೆ ರಾಜ್ಯಾಧ್ಯಕ್ಷ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ವಿರೋಧದ ಹಿನ್ನೆಲೆಯಲ್ಲಿ, ಹೈಕಮಾಂಡ್ ಒಪ್ಪಿಗೆ ಪಡೆದು ಪಾದಯಾತ್ರೆ ಆರಂಭ ಮಾಡುವ ಸಾಧ್ಯತೆ ಇದೆ.

ಇದನೂ ಓದಿ: HD kumaraswamy : ಆಸ್ಪತ್ರೆಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸ್ಚಾರ್ಜ್

Continue Reading

ಮಂಡ್ಯ

Wayanad Landslide: ಮಂಡ್ಯದ 9 ಜನರ ಕುಟುಂಬ ಭೂಕುಸಿತದಲ್ಲಿ ಸಂಪೂರ್ಣ ಕಣ್ಮರೆ

Wayanad Landslide: ಸೋಮವಾರ ನಡೆದ ಭಾರೀ ಭೂಕುಸಿತದಲ್ಲಿ ಮಂಡ್ಯ ಮೂಲದ ಕುಟುಂಬದ 9 ಜನ ಕಾಣೆಯಾಗಿದ್ದಾರೆ. ಈ ಪೈಕಿ ಮೂವರ ಶವಗಳನ್ನು ರಕ್ಷಣಾ ತಂಡಗಳು ಹೊರ ತೆಗೆದಿವೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಈ ಕುಟುಂಬ ಇಲ್ಲಿನ ಟೀ ಎಸ್ಟೇಟ್‌ನಲ್ಲಿ ಕೂಲಿ ಕಾರ್ಮಿಕರಾಗಿದ್ದರು.

VISTARANEWS.COM


on

wayanad landslide mandya family
Koo

ಚಾಮರಾಜನಗರ: ಭಯಾನಕ ವೈನಾಡ್‌ ಭೂಕುಸಿತ (Wayanad Landslide, Kerala Landslide) ದುರಂತದಲ್ಲಿ ಮಂಡ್ಯ ಮೂಲದ ಇಡೀ ಕುಟುಂಬವೇ (Mandya Family swept) ಕೊಚ್ಚಿಹೋಗಿದೆ. 9 ಜನರ ಕುಟುಂಬ ಸಂಪೂರ್ಣ ನಾಶವಾಗಿದ್ದು, ಮೂವರ ಶವ ಪತ್ತೆಯಾಗಿದೆ. ಇನ್ನೂ ಆರು ಮಂದಿಯ ದೇಹಗಳು ಪತ್ತೆಯಾಗಬೇಕಿವೆ.

ಸೋಮವಾರ ನಡೆದ ಭಾರೀ ಭೂಕುಸಿತದಲ್ಲಿ ಮಂಡ್ಯ ಮೂಲದ ಕುಟುಂಬದ 9 ಜನ ಕಾಣೆಯಾಗಿದ್ದಾರೆ. ಈ ಪೈಕಿ ಮೂವರ ಶವಗಳನ್ನು ರಕ್ಷಣಾ ತಂಡಗಳು ಹೊರ ತೆಗೆದಿವೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಈ ಕುಟುಂಬ ಇಲ್ಲಿನ ಟೀ ಎಸ್ಟೇಟ್‌ನಲ್ಲಿ ಕೂಲಿ ಕಾರ್ಮಿಕರಾಗಿದ್ದರು. ಸಾವಿತ್ರಿ, ಅವರ ಮೊಮ್ಮಗ ಅಚ್ಚು, ಸವಿತಾ ಎಂಬವರ ಪುತ್ರ ಶ್ರೀಕುಟ್ಟಿ ಸಾವಿಗೀಡಾಗಿರುವುದು ಖಚಿತವಾಗಿದೆ. ಇನ್ನುಳಿದ ಆರು ಜನರಿಗಾಗಿ ಹುಡುಕಾಟ ಮುಂದುವರಿದಿದೆ. ಇವರು ಕೇರಳಕ್ಕೆ ಬಂದು ನೆಲೆಸಿ 30 ವರ್ಷಗಳು ಆಗಿವೆ.

ಒಂದು ಮೆಸೇಜ್‌ನಿಂದ ಉಳಿಯಿತು ಜೀವ! ಪಾರಾದ ಕನ್ನಡಿಗ ಕಾರು ಚಾಲಕ

ಬೆಂಗಳೂರು: ಒಂದು ಅಲರ್ಟ್‌ ಮೆಸೇಜ್‌ ಪರಿಣಾಮ ಕನ್ನಡಿಗ ಕಾರು ಚಾಲಕನೊಬ್ಬ ವೈನಾಡಿನ ರುದ್ರಭಯಾನಕ ಭೂಕುಸಿತದ ನಡುವೆ ಜೀವ ಉಳಿಸಿಕೊಂಡಿದ್ದಾರೆ. ಸಾವಿನೂರಿಂದ ಈತ ಬಚಾವ್ ಆಗಿ ಬಂದದ್ದೇ ರೋಚಕ. ಮಿಡ್‌ನೈಟ್ ಬಂದ ಅದೊಂದು ಮೆಸೇಜ್ ಯುವಕನ ಪ್ರಾಣ ಉಳಿಸಿದ ಕತೆ ಇಲ್ಲಿದೆ.

ಬೆಂಗಳೂರಿನಲ್ಲಿ ಟ್ಯಾಕ್ಸಿ ಡ್ರೈವರ್ ಆಗಿರುವ ಹಾವೇರಿ ಮೂಲದ ಮಂಜುನಾಥ್‌, ಇಬ್ಬರು ಯುವಕರು ಹಾಗೂ ಯುವತಿಯರನ್ನು ಬಾಡಿಗೆ ಕರೆದುಕೊಂಡು ವೈನಾಡ್‌ಗೆ ಹೋಗಿದ್ದರು. ದಂಪತಿಗಳು ಉತ್ತರ ಭಾರತ ಮೂಲದವರು. ಎರಡೂ ಜೋಡಿ ವಯನಾಡ್‌ನ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು.

ಮಂಜುನಾಥ್ ರೆಸಾರ್ಟ್‌ನಿಂದ ಸ್ವಲ್ಪ ದೂರದಲ್ಲಿ ಕಾರು ನಿಲ್ಲಿಸಿ, ಅದೇ ಕಾರಿನಲ್ಲಿ ರಾತ್ರಿ ನಿದ್ದೆಗೆ ಜಾರಿದ್ದರು. ಮಧ್ಯರಾತ್ರಿ ಒಂದು ಗಂಟೆ 15 ನಿಮಿಷಕ್ಕೆ ಭೂ ಕುಸಿತವಾಗಿದೆ. ಇದರಿಂದ ರೆಸಾರ್ಟ್‌ನಲ್ಲಿದ್ದ ಹಲವರು ಮಣ್ಣುಪಾಲಾಗಿದ್ದಾರೆ. ಆದರೆ ಚಾಲಕ ಇದ್ಯಾವುದರ ಪರಿವೆಯೇ ಇಲ್ಲದೆ ನಿದ್ದೆಗೆ ಜಾರಿದ್ದರು. ಭೂಕುಸಿತದ ಬಳಿಕ ನದಿ ಪಾತ್ರ ವಿಶಾಲವಾಗಿದ್ದು, 15 ಅಡಿ ಅಗಲದ ನದಿ 150 ಅಡಿಗಳಷ್ಟು ಅಗಲವಾಗಿ ಮಣ್ಣು ಕಲ್ಲು ಮರಗಳನ್ನು ತುಂಬಿಕೊಂಡು ಅಬ್ಬರಿಸಿ ಹರಿದಿದೆ. ಮಂಜುನಾಥ್‌ ಕಾರಿಗೂ ಜಲದಿಗ್ಬಂಧನವಾಗಿದೆ.

ನೀರಿನ ಹೊಡೆತಕ್ಕೆ ಕಾರು ಉಲ್ಟಾ ಮುಖ ಮಾಡಿದೆ. ಈ ವೇಳೆ ಚಾಲಕ ತರಾತುರಿಯಲ್ಲಿ ಕಾರ್ ಚಲಾಯಿಸಲು ಮುಂದಾಗಿದ್ದ. ಕಾರು ಆನ್ ಆಗುತ್ತಿದ್ದಂತೆ ಬೆಂಗಳೂರಿನಲ್ಲಿದ್ದ ಕಾರಿನ‌‌ ಮಾಲಕ ಸಚಿನ್‌ಗೆ ಅಲರ್ಟ್‌ ಮೆಸೇಜ್ ಹೋಗಿದೆ. ಸಚಿನ್‌ ಮೊಬೈಲ್‌ನಲ್ಲಿ ಕಾರಿನ ಆಕ್ಸೆಸ್ ಹೊಂದಿದ್ದರು. ಜಿಪಿಎಸ್ ಆನ್ ಆಗುತ್ತಿದ್ದಂತೆ ಆಟೋಮ್ಯಾಟಿಕ್ ಮೆಸೇಜ್ ಬಂದಿತ್ತು. ಹೊತ್ತಲ್ಲದ ಹೊತ್ತಿನಲ್ಲಿ ಗಾಡಿ ಆನ್ ಆದ ಮೆಸೇಜ್ ನೋಡಿ ಮಾಲೀಕ ಚಕಿತರಾಗಿ, ಕೂಡಲೇ ಈ ವಿಚಾರವಾಗಿ ಚಾಲಕನಿಗೆ ಕಾಲ್ ಮಾಡಿದ್ದಾರೆ.

ಈ ವೇಳೆ ಪ್ರವಾಹದ ಬಗ್ಗೆ ಚಾಲಕ ಮಂಜುನಾಥ್‌ ವಿವರಿಸಿದ್ದರು. ಮಂಜುನಾಥ್‌ಗೆ ಧೈರ್ಯ ತುಂಬಿದ್ದ ಮಾಲೀಕ ಸಚಿನ್, ಅದೇ ಜಾಗದಲ್ಲಿದ್ದ ತನ್ನ ಪರಿಚಯಸ್ಥರಿಗೆ ಮಾಹಿತಿ ನೀಡಿದ್ದರು. ಇದರಿಂದ ಚಾಲಕನ ಸಹಾಯಕ್ಕೆ ಜನ ಬಂದಿದ್ದಾರೆ. ನಂತರ ಜಿಪಿಎಸ್ ಟ್ರ್ಯಾಕ್ ಮಾಡಿ ಚಾಲಕನನ್ನು ಕೆಸರು ನೀರಿನ ಮಧ್ಯದಿಂದ ರಕ್ಷಣೆ ಮಾಡಲಾಗಿದೆ. ಬದುಕುಳಿದು ಬಂದಿರುವ ಮಂಜುನಾಥ್‌, ತಮ್ಮನ್ನು ಕಾಪಾಡಿದವರಿಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ಭಯಾನಕ ಸಾವಿನಿಂದ ರಕ್ಷಿಸಿತು ಸಾಕಿದ ಹಸು! ಕನ್ನಡಿಗ ಕುಟುಂಬದ ಅನುಭವ

Continue Reading
Advertisement
dog meat controversy food department commissioner
ಪ್ರಮುಖ ಸುದ್ದಿ5 mins ago

Dog Meat Controversy: ಅಬ್ದುಲ್‌ ರಜಾಕ್‌ ತಂದಿರೋದು ಕುರಿ ಮಾಂಸ, ‌ಖಚಿತಪಡಿಸಿದ ಲ್ಯಾಬ್‌ ವರದಿ: ಆಹಾರ ಇಲಾಖೆ ಆಯುಕ್ತ

Bribe Case
Latest8 mins ago

Bribe Case: 1 ಸಾವಿರ ರೂ. ಲಂಚ ಪ್ರಕರಣ 25 ವರ್ಷಗಳ ಬಳಿಕ ಇತ್ಯರ್ಥ! ಹಿಂಗಾಂದ್ರೆ ಹೆಂಗೆ ಅಂತಿದ್ದಾರೆ ಜನ!

Triple Talaq
Latest17 mins ago

Triple Talaq: ವರದಕ್ಷಿಣೆ ತರಲು ನಿರಾಕರಿಸಿದ ಪತ್ನಿಗೆ ವಾಟ್ಸಾಪ್‍ನಲ್ಲೇ ತ್ರಿವಳಿ ತಲಾಖ್!

Paris Olympics 2024
ಕ್ರೀಡೆ25 mins ago

Paris Olympics 2024: ಪರ್‌ಫೆಕ್ಟ್‌ ಕ್ಲಿಕ್‌ ಎಂದರೆ ಇದು; ಭಾರಿ ಸದ್ದು ಮಾಡುತ್ತಿದೆ ಒಲಿಂಪಿಕ್ಸ್‌ನ ಈ ವೈರಲ್‌ ಫೋಟೊ

Ismail Haniyeh
ವಿದೇಶ35 mins ago

Ismail Haniyeh: ಹತ್ಯೆಗೀಡಾದ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹಿನ್ನೆಲೆ ಏನು? ಈತನನ್ನು ಇಸ್ರೇಲ್‌ ಮುಗಿಸಿದ್ದೇಕೆ?

Nice Road Kannada Movie Receive Notice To Change Its Name
ಸ್ಯಾಂಡಲ್ ವುಡ್57 mins ago

Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

BJP Protest
ಕರ್ನಾಟಕ59 mins ago

BJP Protest: ಪೊಲೀಸರ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಪುನೀತ್‌ ಕೆರೆಹಳ್ಳಿ ಮತ್ತೆ ವಶಕ್ಕೆ, ಪ್ರತಾಪ್‌ ಸಿಂಹ ವಿರುದ್ಧ ದೂರು

Health Tips
ಆರೋಗ್ಯ1 hour ago

Health Tips: ಉಪಾಹಾರದಲ್ಲಿ ಇವುಗಳು ಬೇಡವೇ ಬೇಡ ಎನ್ನುತ್ತಾರೆ ಮಾಧುರಿ ದೀಕ್ಷಿತ್ ಪತಿ ಡಾ. ಶ್ರೀರಾಮ್ ನೆನೆ

Wayanad Landslide
ದೇಶ1 hour ago

Wayanad Landslide: ಮಣ್ಣಿನ ರಾಶಿಯಂತಾದ ಮುಂಡಕೈ; 400 ಮನೆಗಳ ಪೈಕಿ ಉಳಿದಿದ್ದು 30 ಮಾತ್ರ!

Emmanuel Macron
ವಿದೇಶ1 hour ago

Emmanuel Macron: ಕ್ರೀಡಾ ಸಚಿವೆಗೆ ಎಲ್ಲರೆದುರೇ ಚುಂಬಿಸಿದ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರಾನ್‌-ವಿಡಿಯೋ ಇದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ20 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌