Interest rate | ಆರ್‌ಬಿಐ ರೆಪೊ ದರ 0.35% ಏರಿಕೆ, ಸಾಲದ ಇಎಂಐನಲ್ಲಿ 23% ತನಕ ಹೆಚ್ಚಳ ನಿರೀಕ್ಷೆ - Vistara News

ಪ್ರಮುಖ ಸುದ್ದಿ

Interest rate | ಆರ್‌ಬಿಐ ರೆಪೊ ದರ 0.35% ಏರಿಕೆ, ಸಾಲದ ಇಎಂಐನಲ್ಲಿ 23% ತನಕ ಹೆಚ್ಚಳ ನಿರೀಕ್ಷೆ

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಕಳೆದ ಜನವರಿಯಿಂದ ಸತತ 4ನೇ ಸಲ ರೆಪೊ ದರವನ್ನು ಏರಿಸಿದೆ. ಇದರಿಂದ ಸಾಲದ ಬಡ್ಡಿ ದರಗಳು ಮತ್ತಷ್ಟು ಏರಿಕೆ ಆಗಲಿದೆ.

VISTARANEWS.COM


on

rbi governer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಬುಧವಾರ ತನ್ನ ರೆಪೊ ದರವನ್ನು 0.35% ಏರಿಸಿದೆ. ಇದರೊಂದಿಗೆ ರೆಪೊ ದರ 6.25ಕ್ಕೆ ಏರಿಕೆಯಾಗಿದೆ. ಹೀಗಾಗಿ ಸಾಲದ ಇಎಂಐ ಹೆಚ್ಚಳದ ಹೊರೆಗೆ ಸಾಲಗಾರರು ತತ್ತರಿಸುವಂತಾಗಿದೆ.

ರೆಪೊ ದರ ಆಧರಿತ ಸಾಲಗಳ ಇಎಂಐನಲ್ಲಿ 23% ತನಕ ಹೆಚ್ಚಳವನ್ನು ನಿರೀಕ್ಷಿಸಲಾಗಿದೆ. ಉದಾಹರಣೆಗೆ ಈ ವರ್ಷ ಮಾರ್ಚ್‌ನಲ್ಲಿ 20 ವರ್ಷಗಳ ಅವಧಿಗೆ 30 ಲಕ್ಷ ರೂ. ಸಾಲ ತೆಗೆದುಕೊಂಡಿದ್ದರೆ, ಆಗ ಇದ್ದ 7% ಬಡ್ಡಿ ದರ 2023ರ ಜನವರಿ ವೇಳೆಗೆ 9.25%ಕ್ಕೆ ಏರಿಕೆಯಾಗಲಿವೆ. ಇಎಂಐ (ಸಮಾನ ಮಾಸಿಕ ಕಂತು) 23,258 ರೂ.ಗಳಿಂದ 27,387 ರೂ.ಗೆ ಏರಿಕೆಯಾಗಲಿದೆ. ಹೀಗಿದ್ದರೂ, ಸಾಲದ ಅವಧಿ 30 ವರ್ಷ ಆಗಿದ್ದರೆ ಇಎಂಐ 23% ಹೆಚ್ಚಳ ಆಗಲಿದೆ.

ಮುಂದಿನ 12 ತಿಂಗಳಿನಲ್ಲಿ ಹಣದುಬ್ಬರದ ಪ್ರಮಾಣ 4% ಗಿಂತ ಮೇಲಿರಬಹುದು ಎಂದು ಆರ್‌ಬಿಐ ತಿಳಿಸಿದೆ. ಆದರೆ ಹಣದುಬ್ಬರ ನಿಯಂತ್ರಿಸಲು ಆರ್‌ಬಿಐ ರೆಪೊ ದರ ಹೆಚ್ಚಿಸಿದ ಪರಿಣಾಮ ಸಾಲಗಾರರ ಎಲ್ಲ ಫಿಕ್ಸೆಡ್‌ ಹಾಗೂ ಫ್ಲೋಟಿಂಗ್‌ ದರದ ಸಾಲಗಳು ದುಬಾರಿಯಾಗಲಿದೆ.

ಗವರ್ನರ್‌ ಶಕ್ತಿಕಾಂತ ದಾಸ್‌ ಅವರು ಆರ್‌ಬಿಐನ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು. ಈ ಹಿಂದೆ 0.50 % ಲೆಕ್ಕದಲ್ಲಿ ಬಡ್ಡಿ ದರವನ್ನು ಏರಿಸಿದ್ದ ಆರ್‌ಬಿಐ ಈ ಸಲ 0.25%-0.30% ರ ಮಟ್ಟದಲ್ಲಿ ಏರಿಕೆ ಮಾಡುವ ನಿರೀಕ್ಷೆ ಇತ್ತು.

ವಿಶ್ವಾದ್ಯಂತ ಸೆಂಟ್ರಲ್‌ ಬ್ಯಾಂಕ್‌ಗಳು ಬೆಳವಣಿಗೆ ಮತ್ತು ಹಣದುಬ್ಬರದ ನಡುವೆ ಸಮತೋಲನ ಸಾಧಿಸಬೇಕಾದ ಸವಾಲುಗಳನ್ನು ಎದುರಿಸುತ್ತಿವೆ. ಈಗ ರೆಪೊ ದರ 5.90% ಇದೆ. 0.30 ಹೆಚ್ಚಿಸಿದರೆ 6.20%ಕ್ಕೆ ಏರಿಕೆಯಾಗಲಿದೆ.

ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ರಿಸರ್ವ್‌ ಬ್ಯಾಂಕ್‌ ಕಳೆದ ಜೂನ್‌ ಬಳಿಕ ಮೂರು ಸಲ ಬಡ್ಡಿ ದರವನ್ನು ಏರಿಸಿತ್ತು. ರೆಪೊ ದರ ಎಂದರೆ, ಬ್ಯಾಂಕ್‌ಗಳು ಆರ್‌ಬಿಐನಿಂದ ಪಡೆಯುವ ಹಣಕ್ಕೆ ನೀಡುವ ಬಡ್ಡಿ ದರ. ಈ ಹಣವನ್ನು ಬ್ಯಾಂಕ್‌ಗಳು ಸಾಲದ ವಹಿವಾಟಿಗೆ ಬಳಸುತ್ತವೆ.

ಹಣದುಬ್ಬರವನ್ನು ನಿಯಂತ್ರಿಸಲು ಆರ್‌ಬಿಐ ಬಡ್ಡಿ ದರ ಏರಿಸುವ ಸಾಧ್ಯತೆ ಇತ್ತು. ಎರಡನೆಯದಾಗಿ ಇದುವರೆಗಿನ ಬಡ್ಡಿ ದರ ಹೆಚ್ಚಳದಿಂದ ಅಭಿವೃದ್ಧಿಗೆ ತೊಡಕಾಗಿಲ್ಲ. ಹೀಗಾಗಿ ಬಡ್ಡಿ ದರ ಏರಿಕೆ ನಿರೀಕ್ಷಿಸಲಾಗಿತ್ತು. ಕಳೆದ ಏಪ್ರಿಲ್-ಸೆಪ್ಟೆಂಬರ್‌ನಲ್ಲಿ ಜಿಡಿಪಿ ಮೌಲ್ಯ 75.02 ಲಕ್ಷ ಕೋಟಿ ರೂ. ಇದ್ದರೆ, ಕಳೆದ ವರ್ಷ ಇದೇ ಅವಧಿಯಲ್ಲಿ 68.36 ಲಕ್ಷ ಕೋಟಿ ರೂ. ಇತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Ismail Haniyeh: ಇಸ್ರೇಲ್‌ ದಾಳಿಗೆ ಹತನಾಗುವ ಮುನ್ನ ಹಮಾಸ್‌ ಉಗ್ರ ಇಸ್ಮಾಯಿಲ್‌ ಏನು ಮಾಡುತ್ತಿದ್ದ? ಇಲ್ಲಿದೆ ವರದಿ

Ismail Haniyeh: ಇರಾನ್‌ನಲ್ಲಿ ಇಸ್ರೇಲ್‌ನಿಂದ ಹತ್ಯೆಗೀಡಾಗಿರುವ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹಲವು ದಾಳಿಗಳನ್ನು ನಡೆಸಿದ್ದ ಉಗ್ರ ನಾಯಕ. ಮಧ್ಯಪ್ರಾಚ್ಯ ರಾಜಕೀಯ ಬಿಕ್ಕಟ್ಟಿನಲ್ಲಿ ಪ್ರಮುಖ ವ್ಯಕ್ತಿಯಾಗಿ ಗುರುತಿಸಿಕೊಂಡಿರುವ ಹನಿಯೆಹ್, ಪ್ಯಾಲೆಸ್ತೀನ್ ಪ್ರಾಧಿಕಾರದ ಸರ್ಕಾರದ ಪ್ರಧಾನ ಮಂತ್ರಿಯಾಗಿದ್ದಾಗಲೂ ಒಮ್ಮೆ ಈತನ ಮೇಲೆ ದಾಳಿ ನಡೆದಿತ್ತು. ಆಗ ಈತ ಪಾರಾಗಿದ್ದ. ಆದರೆ ಈಗ ಇಸ್ರೇಲ್‌ ಈತನ ಕತೆ ಮುಗಿಸಿದೆ.

VISTARANEWS.COM


on

Ismail Haniyeh
Koo

ಟೆಹ್ರಾನ್: ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು (Ismail Haniyeh) ವಾಯುದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಕಳೆದ ವರ್ಷದ ಅಕ್ಟೋಬರ್‌ 7ರಂದು ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಬೀಡುಬಿಟ್ಟಿರುವ ಹಮಾಸ್‌ ಉಗ್ರರು (Israel Hamas War) ದಾಳಿ ನಡೆಸಿದಕ್ಕೆ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್‌ ಈಗ ಇಸ್ಮಾಯಿಲ್‌ ಹನಿಯೆಹ್‌ನನ್ನು ಹತ್ಯೆ ಮಾಡಿಸಿದೆ ಎಂದೇ ಹೇಳಲಾಗುತ್ತಿದೆ. ಇನ್ನು ಟೆಹ್ರಾನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಸ್ಮಾಯಿಲ್‌ ಹನಿಯೆಹ್‌ ಸಾವಿಗೀಡಾಗುವ ಮೊದಲು ಕೆಲವೇ ಗಂಟೆಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಎಂದು ಇರಾನ್‌ ಮಾಧ್ಯಮಗಳು ವರದಿ ಮಾಡಿವೆ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ. ಈ ವಿಡಿಯೊವನ್ನು ಈಗ ಇರಾನ್‌ ಮಾಧ್ಯಮಗಳು ಹಂಚಿಕೊಂಡಿವೆ.

2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ ಪ್ರತಿದಾಳಿ ಆರಂಭಿಸಿದ್ದು, ಗಾಜಾದಲ್ಲಿ ಇದುವರೆಗೆ ಇಸ್ರೇಲ್‌ ದಾಳಿಗೆ 39,400 ಮಂದಿ ಮೃತಪಟ್ಟಿದ್ದಾರೆ. ಸುಮಾರು 90 ಸಾವಿರ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್‌ ಉಗ್ರರ ಜತೆಗೆ ಹಮಾಸ್‌ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನು ಇಸ್ರೇಲ್‌ ಯೋಧರು ಹುಡುಕಿ ಹುಡುಕಿ ಕೊಲ್ಲುತ್ತಿದ್ದಾರೆ.

ಕಾರ್ಯಾಚರಣೆ ನಡೆದಿದ್ದು ಹೇಗೆ?

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Ismail Haniyeh: ಹತ್ಯೆಗೀಡಾದ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹಿನ್ನೆಲೆ ಏನು? ಈತನನ್ನು ಇಸ್ರೇಲ್‌ ಮುಗಿಸಿದ್ದೇಕೆ?

Continue Reading

ಕರ್ನಾಟಕ

BJP Protest: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ; ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌!

BJP Protest: ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಗುಂಪುಗೂಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ.

VISTARANEWS.COM


on

BJP Protest
Koo

ಬೆಂಗಳೂರು: ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ (BJP Protest) ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಪುನೀತ್ ಕೆರೆಹಳ್ಳಿ ಸೇರಿ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ಠಾಣೆ ಮುಂದೆ ಗುಂಪುಗೂಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುನೀತ್‌ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ಖಂಡಿಸಿ ಬಸವೇಶ್ವರ ನಗರದ ಪೊಲೀಸ್‌ ಠಾಣೆ ಎದುರು ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಪ್ರಕರಣ ದಾಖಲಾಗಿದ್ದು, ಎಫ್‌ಐಆರ್‌ನಲ್ಲಿ ಪುನೀತ್ ಕೆರೆಹಳ್ಳಿ ಎ1 ಹಾಗೂ ಪ್ರತಾಪ್ ಸಿಂಹ ಎ2 ಎಂದು ಉಲ್ಲೇಖಿಸಲಾಗಿದೆ.

ಬಸವೇಶ್ವರ ನಗರದ ಪೊಲೀಸ್‌ ಠಾಣೆ ಎದುರು ಬುಧವಾರ ಮಧ್ಯಾಹ್ನ ಪ್ರತಿಭಟನೆ (BJP Protest) ನಡೆಸಲಾಗಿತ್ತು. ಈ ವೇಳೆ ಪುನೀತ್‌ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ, ಶಾಸಕ ಹರೀಶ್‌ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಮಾಂಸ ಸಾಗಾಟಕ್ಕೆ ತಡೆ ಪ್ರಕರಣದಲ್ಲಿ ಬಂಧನವಾಗಿದ್ದ ಪುನೀತ್‌ ಕೆರೆಹಳ್ಳಿಗೆ ಲಾಕಪ್‌ನಲ್ಲಿ ಬಟ್ಟೆ ಬಿಚ್ಚಿಸಿ, ಹಿಂಸೆ ನೀಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿ, ಜಾಮೀನು ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಪೊಲೀಸರು ವಶಕ್ಕೆ ಪಡೆದಿದ್ದರು. ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿದ್ದಾರೆ ಎಂದು ಎಸಿಪಿ ಚಂದನ್ ವಿರುದ್ಧ ಪ್ರತಾಪ್‌ ಸಿಂಹ ಕಿಡಿಕಾರಿದ್ದರು. ಹೀಗಾಗಿ ಪ್ರತಿಭಟನೆ ನಿಯಂತ್ರಿಸಲು ಪುನೀತ್‌ ಕೆರೆಹಳ್ಳಿಯನ್ನು ಬಸವೇಶ್ವರನಗರ ಪೊಲೀಸರು ವಶಕ್ಕೆ ಪಡೆದಿದ್ದರು.

ಬಳಿಕ ಮಾತನಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಜು.26ರಂದು ರಾತ್ರಿ ಅಕ್ರಮವಾಗಿ ಮಾಂಸ ಬರುತ್ತಿದೆ ಎಂಬ ಮಾಹಿತಿ ಇತ್ತು. ಈ ಹಿಂದೆ ಎಲ್ಲರಿಗೂ ದೂರು ನೀಡಿದೂ ಪ್ರಯೋಜನೆ ಆಗಿರಲಿಲ್ಲ. ಹೀಗಾಗಿ ಪುನೀತ್ ಕೆರೆಹಳ್ಳಿ ಸ್ಥಳಕ್ಕೆ ಹೋಗಿದ್ದರು. ಆಗ ಅಬ್ದುಲ್ ರಜಾಕ್ ಸ್ಥಳಕ್ಕೆ ಬಂದಿದ್ದಾರೆ. ಮಾಂಸದ ಬಾಕ್ಸ್ ಓಪನ್ ಮಾಡಲು ಅಬ್ದುಲ್ ರಜಾಕ್ ಒಪ್ಪಿಲ್ಲ. ಸ್ಥಳಕ್ಕೆ ಪೊಲೀದರು ಬಂದು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದು, ಕಾಟನ್ ಪೇಟೆ ಠಾಣೆಯಲ್ಲಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಪುನೀತ್ ಆರೋಪ ಮಾಡಿದ್ದಾರೆ. ಪುನೀತ್ ಅಲ್ಲಿಗೆ ಹೋಗಿದ್ದು ತಪ್ಪಾ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ | Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

ಮಾಂಸ ತಂದ ಅಬ್ದುಲ್ ರಜಾಕ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬದಲು, ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳಕ್ಕೆ ಹೋದ ಕೆರೆಹಳ್ಳಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಕಾನೂನಿನಲ್ಲಿ ಯಾವುದೇ ವ್ಯಕ್ತಿಗೆ ಟಾರ್ಚರ್ ಮಾಡೋಕ್ಕೆ ಅವಕಾಶ ಇಲ್ಲ. ಹೀಗಿರುವಾಗ ಯಾಕೆ ಬಟ್ಟೆ ಬಿಚ್ಚಿಸಿದರು?, ಅಬ್ದುಲ್ ರಜಾಕ್ ವಿರುದ್ಧ ಕೇಸ್ ದಾಖಲು ಮಾಡಬೇಕು. ಎಸಿಪಿ ಚಂದನ್ ವಿರುದ್ಧ ತನಿಖೆ ನಡೆಸಬೇಕು. ನಾನು ಯಾರಿಗೂ ವಾರ್ನಿಂಗ್ ಮಾಡಿಲ್ಲ. ಪೊಲೀಸ್ ಕಮಿಷನರ್‌ಗೆ ದೂರು ನೀಡುತ್ತೇವೆ ಎಂದು ಪ್ರತಾಪ್‌ ಸಿಂಹ ಹೇಳಿದ್ದರು.

Continue Reading

ದೇಶ

Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

Wayanad Landslide: ವಯನಾಡಿನಲ್ಲಿ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಸೈನಿಕರು ಸೇರಿ ನಿರಂತರವಾಗಿ ಕಾರ್ಯಾಚರಣೆ ಕೈಗೊಳ್ಳುತ್ತಿದ್ದಾರೆ. ಇದುವರೆಗೆ 160 ಶವಗಳನ್ನು ಹೊರತೆಗೆಯಲಾಗಿದ್ದರೆ ಇನ್ನೂ 220 ಜನ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ಕೇರಳದ (Kerala) ವಯನಾಡು ಜಿಲ್ಲೆ ಮೆಪ್ಪಾಡಿ ಪ್ರದೇಶದ ಹಲವು ಗ್ರಾಮಗಳಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ (Wayanad Landslide) ಮೃತಪಟ್ಟವರ ಸಂಖ್ಯೆ 240ಕ್ಕೆ ತಲುಪಿದೆ. ಇದುವರೆಗೆ 160 ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದ್ದು, ಈಗಲೂ ಕಾರ್ಯಾಚರಣೆ ಮುಂದುವರಿದಿದೆ. ಅಷ್ಟೇ ಅಲ್ಲ, 220 ಜನ ಇನ್ನೂ ನಾಪತ್ತೆಯಾಗಿರುವ ಕಾರಣ, ಅವರು ನಾಪತ್ತೆಯಾಗಿ ಈಗಾಗಲೇ 48 ಗಂಟೆಯಾಗಿರುವ ಕಾರಣ ಸಾವಿನ ಸಂಖ್ಯೆ ಜಾಸ್ತಿಯಾಗವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಆರೋಗ್ಯ ಕೇಂದ್ರದಲ್ಲಿ ಹೆಣಗಳ ರಾಶಿ

ಕಲ್ಲು, ಮಣ್ಣು ಸೇರಿ ಹಲವು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶವಗಳನ್ನು ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ಸಿಬ್ಬಂದಿಯು ನಿರಂತರ ಕಾರ್ಯಾಚರಣೆ ಮೂಲಕ ಹೊರತೆಗೆಯುತ್ತಿದ್ದಾರೆ. ಮೆಪ್ಪಾಡಿ ಕೌಟುಂಬಿಕ ಆರೋಗ್ಯ ಕೇಂದ್ರ ಹಾಗೂ ನಿಲಂಬುರ್‌ ಸರ್ಕಾರಿ ಆಸ್ಪತ್ರೆಯಲ್ಲಿ ಶವಗಳ ರಾಶಿಯೇ ಬಿದ್ದದ್ದು, ಅವರ ಕುಟುಂಬಸ್ಥರು ಶವಗಳನ್ನು ಪತ್ತೆಹಚ್ಚಲು ಕೂಡ ಕಷ್ಟವಾಗುತ್ತಿದೆ. ಇನ್ನು, ಶವ ಪತ್ತೆಹಚ್ಚುವ ಕುಟುಂಬಸ್ಥರ ಆಕ್ರಂದನವು ಮುಗಿಲು ಮುಟ್ಟಿದೆ. ಮೆಪ್ಪಾಡಿ ಆರೋಗ್ಯ ಕೇಂದ್ರ ಹಾಗೂ ನಿಲಂಬುರ್‌ ಆಸ್ಪತ್ರೆಯಲ್ಲಿ ಈಗ ಎಲ್ಲೆಂದರಲ್ಲಿ ಶವಗಳೇ ಕಣ್ಣಿಗೆ ರಾಚುತ್ತಿವೆ.

ಭರದಿಂದ ಸಾಗುತ್ತಿರುವ ಕಾರ್ಯಾಚರಣೆ

ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಜತೆಗೆ ಭಾರತೀಯ ಸೇನೆಯ ಯೋಧರು, ರಾಜ್ಯ ಪೊಲೀಸರು ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಭೂಕುಸಿತ ಪೀಡಿತ ಪ್ರದೇಶಗಳಿಂದ ಸೈನಿಕರು ಸುಮಾರು 5,500 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಸೇನೆ, ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಕರು ಸೇರಿ ಒಟ್ಟು 600 ಮಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.

ವಯನಾಡು ದುರಂತವನ್ನು ರಾಷ್ಟ್ರೀಯ ವಿಪತ್ತು ಎಂಬುದಾಗಿ ಘೋಷಿಸಬೇಕು ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಸೇರಿ ಹಲವು ಪ್ರತಿಪಕ್ಷಗಳು ಆರೋಪಿಸಿವೆ. ಇನ್ನು, ಜುಲೈ 23ರಂದೇ ಭೂಕುಸಿತ, ಹವಾಮಾನ್ಯ ವೈಪರೀತ್ಯದ ಕುರಿತು ಕೇರಳ ಸರ್ಕಾರಕ್ಕೆ ಮಾಹಿತಿ ನೀಡಲಾಗಿತ್ತು ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರವು ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದೆ. ನೌಕಾಪಡೆ ತಂಡಗಳು, ವಾಯುಪಡೆ ಹೆಲಿಕಾಪ್ಟರ್‌ಗಳನ್ನು ಕೂಡ ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: Wayanad Landslide: ಎಲ್ಲೆಂದರಲ್ಲಿ ಹೆಣಗಳ ರಾಶಿ; ಕೊಚ್ಚಿ ಹೋದ ಬದುಕು: ಸ್ಮಶಾನದಂತಾದ ಭೂಲೋಕದ ಸ್ವರ್ಗ ವಯನಾಡು

Continue Reading

ಕರ್ನಾಟಕ

Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

Karnataka Rain: 3-4 ದಿನಗಳಿಂದ ಪ್ರವಾಹಕ್ಕೆ ಬಾಳೆಹೊನ್ನೂರು ಜನರು ನಲುಗಿದ್ದು, ತೋಟಗಳು ಮುಳುಗಡೆಯಾಗಿದ್ದರಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಮಳೆ ಹೆಚ್ಚಾದರೆ ಪಟ್ಟಣದ ಹಲವು ಬಡಾವಣೆಗಳು ಜಲಾವೃತವಾಗುವ ಆತಂಕ ಎದುರಾಗಿದೆ.

VISTARANEWS.COM


on

Karnataka Rain
ಬಾಳೆಹೊನ್ನೂರು ಪಟ್ಟಣದ ಸಂತೆ ಮಾರುಕಟ್ಟೆ ಮುಳುಗಿರುವುದು.
Koo

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭದ್ರಾ ನದಿ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಸತತ ಮಳೆಯಿಂದ (Karnataka Rain) ಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣ ಮುಳುಗಡೆಯಾಗಿದೆ. ದೋಬಿ ಹಳ್ಳ ಪ್ರವಾಹಕ್ಕೆ ‌ಬಾಳೆಹೊನ್ನೂರಿನ ನದಿ ತಟದ ಸಂತೆ ಮಾರುಕಟ್ಟೆ, ಮನೆಗಳು, ಅಂಗಡಿ ಮಳಿಗೆಗಳು, ಕಾಫಿ, ಅಡಿಕೆ ತೋಟಗಳು ಮುಳುಗಡೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.

3-4 ದಿನಗಳಿಂದ ಪ್ರವಾಹಕ್ಕೆ ಬಾಳೆಹೊನ್ನೂರು ಜನರು ನಲುಗಿದ್ದು, ತೋಟಗಳು ಮುಳುಗಡೆಯಾಗಿದ್ದರಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಭಾರಿ ಪ್ರಮಾಣ ನೀರಿನಿಂದ ಕಾಫಿ, ಅಡಕೆಗೆ ಕೊಳೆ ರೋಗ ಆವರಿಸುವ ಭೀತಿ ಎದುರಾಗಿದೆ. ಮತ್ತಷ್ಟು ಮಳೆ ಹೆಚ್ಚಾದರೆ ಪಟ್ಟಣದ ಹಲವು ಬಡಾವಣೆಗಳು ಜಲಾವೃತವಾಗುವ ಆತಂಕ ಎದುರಾಗಿದೆ. ಮಳೆ ಹೆಚ್ಚಾದಂತೆ ಕ್ಷಣ ಕ್ಷಣಕ್ಕೂ ಭದ್ರಾ ನೀರಿನ ಅರಿವು ಹೆಚ್ಚಾಗುತ್ತಿದೆ.

ಇದನ್ನೂ ಓದಿ | Wayanad Landslide: ವಯನಾಡು ಭೂಕುಸಿತ; ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮಳೆ ಅಬ್ಬರಕ್ಕೆ ರಸ್ತೆ ಬದಿ ಗುಡ್ಡ ಕುಸಿತ

ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದಲ್ಲಿ ಮಳೆ ಅಬ್ಬರಕ್ಕೆ ರಸ್ತೆ ಬದಿ ಗುಡ್ಡ ಕುಸಿದಿದ್ದು, ರಸ್ತೆ ಸಂಪರ್ಕ ಸ್ಥಗಿತವಾಗೋ ಸಾಧ್ಯತೆ ಇದೆ. ಸುಮಾರು 60 ಅಡಿಯಷ್ಟು ಗುಡ್ಡದ ಮಣ್ಣು ಕುಸಿದು ಬಿದ್ದಿದ್ದು, ರಸ್ತೆ ಸಂಪರ್ಕ‌ ಬಂದ್ ಆದಲ್ಲಿ 500ಕ್ಕೂ ಹೆಚ್ಚು ಕುಟುಂಬಗಳ ಸ್ಥಿತಿ ಅತಂತ್ರವಾಗಲಿದೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡು-ಶೃಂಗೇರಿ ರಸ್ತೆಯಲ್ಲಿ 3-4 ಕಡೆ ರಸ್ತೆ ಬದಿ ಗುಡ್ಡ ಕುಸಿದಿದೆ.

ಜಲಸ್ಫೋಟದಿಂದ ರಸ್ತೆಗೆ ಬಂದು ಕೂತ ಗುಡ್ಡ

ಕಳಸದಲ್ಲಿ ಭೂಮಿಯೊಳಗೆ ಜಲಸ್ಫೋಟದಿಂದ ಗುಡ್ಡ ಜರುಗಿ ರಸ್ತೆಗೆ ಬಂದಿರುವ ಘಟನೆ ನಡೆದಿದೆ. ಇದರಿಂದ ಕಳಸ-ಬಲಿಗೆ-ಹೊರನಾಡು ಸಂಪರ್ಕ ಕಡಿತವಾಗಿದೆ.

ಭಾರಿ ಮಳೆಗೆ ಮುಳುಗಿದ ಸೇತುವೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಶಿರಸಿ ತಾಲೂಕಿನ ದೊಡ್ನಳ್ಳಿ ಭಾಗದಲ್ಲಿ ಮಳೆಗೆ ಸೇತುವೆ ಮುಳುಗಿದ್ದು, ಚಿಪಗಿ-ದೊಡ್ನಳ್ಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ದೊಡ್ನಳ್ಳಿ ಭಾಗದಿಂದ ಓಡಾಡುವ ಗ್ರಾಮಸ್ಥರಿಗೆ ತೊಂದರೆಯಾಗಿದೆ.

ಸೇತುವೆ ಬಳಿ ಸಂಗ್ರಹಗೊಂಡಿದ್ದ ಮರದ ತುಂಡುಗಳನ್ನು ಸ್ಥಳೀಯರು ತೆರವುಗೊಳಿಸಿದ್ದಾರೆ. ಮಳೆಯಿಂದಾಗಿ ದೊಡ್ನಳ್ಳಿ ಪಂಚಾಯತ್ ವ್ಯಾಪ್ತಿಯ ಕೆಳಗಿನ ಎಸಳೆ ಗ್ರಾಮದಲ್ಲಿ ಜಮೀನು ಜಲಾವೃತವಾಗಿದ್ದು, 50 ಎಕರೆಗೂ ಅಧಿಕ ನಾಟಿ ಮಾಡಿದ ಗದ್ದೆ, ಕಬ್ಬಿನ ತೋಟಕ್ಕೆ ನೀರು ನುಗ್ಗಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ, ಭದ್ರಾ ನದಿಗಳು

ಶಿವಮೊಗ್ಗ: ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ತುಂಗಾ, ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಗಾ, ಭದ್ರಾ ಸಂಗಮ ಕ್ಷೇತ್ರದವಾದ ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಕೂಡಲಿ ದೇವಸ್ಥಾನದ ಬಳಿ ಸ್ನಾನಘಟ್ಟ ಮುಳುಗಡೆಯಾಗಿದೆ.

ಭದ್ರಾವತಿ ಬಳಿ 30 ಮನೆಗಳು ಸಂಪೂರ್ಣ ಜಲಾವೃತ

ಭದ್ರಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆ ಭದ್ರಾವತಿ ತಾಲೂಕಿನ ಕವಲುಗುಂದಿ ಗ್ರಾಮದಲ್ಲಿ 30 ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಭದ್ರಾವತಿ ನಗರದ ಕಾಳಜಿ ಕೇಂದ್ರಕ್ಕೆ 30 ಕುಟುಂಬಗಳನ್ನು ಶಿಫ್ಟ್‌ ಮಾಡಲಾಗಿದೆ. ತಡಸ ಧಡಮ್ಘಟ್ಟ ರಸ್ತೆ ಸಂಪರ್ಕ ಬಂದ್ ಅಗಿದ್ದು, ಹತ್ತಾರು ಹಳ್ಳಿಗಳ ಸಂಪರ್ಕ ಸ್ಥಗಿತಗೊಂಡಿದೆ.

ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ

ದಾವಣಗೆರೆ: ಮಲೆನಾಡಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ತುಂಗಾ ಹಾಗೂ ಭದ್ರ ಎರಡು ಜಲಾಶಯಗಳಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಹಳ್ಳಿಗಳ ರಸ್ತೆ ಸಂಪರ್ಕ ಕಡಿತವಾಗಿದೆ.

ಪುಣ್ಯಕ್ಷೇತ್ರ ಉಕ್ಕಡಗಾತ್ರಿ ತುಮ್ಮಿನಕಟ್ಟೆ, ಪತೇಪುರ್ ರಸ್ತೆ ಸಂಪರ್ಕ ಕಡಿತವಾಗಿದ್ದು, ತುಂಗಾಭದ್ರ ನದಿ ಪ್ರವಾಹದಿಂದ ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಸೇತುವೆ ಮುಳುಗಡೆಯಿಂದ ಸುಮಾರು 10 ಕಿ.ಮೀ ಸುತ್ತಿಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಸೇತುವೆ ಮುಳುಗಡೆಯಿಂದ ಶ್ರೀ ಕ್ಷೇತ್ರ ಉಕ್ಕಡಗಾತ್ರಿ ದೇವಸ್ಥಾನಕ್ಕೆ ಬರುವ ಸಾವಿರಾರು ಭಕ್ತರು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ನದಿ ಪ್ರವಾಹದಿಂದ ತರಕಾರಿ ಬೆಳೆ, ಭತ್ತದ ಗದ್ದೆ, ಅಡಿಕೆ ತೆಂಗಿನ ತೋಟಗಳು ಜಲಾವೃತವಾಗಿವೆ. ಇದರಿಂದ ರೈತರು ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ.

ಇದನ್ನೂ ಓದಿ | Wayanad Landslide: ಭೂಕುಸಿತದ ಬಗ್ಗೆ ಒಂದು ವಾರ ಮೊದಲೇ ನೀಡಲಾಗಿತ್ತಾ ಎಚ್ಚರಿಕೆ? ಕೇಂದ್ರದ ಸೂಚನೆ ನಿರ್ಲಕ್ಷಿಸಿತ್ತಾ ಕೇರಳ ಸರ್ಕಾರ?

ಕೊಪ್ಪಳದಲ್ಲಿ ಪ್ರವಾಹ ಭೀತಿ

ಕೊಪ್ಪಳ: ನೀರಿನ ಪ್ರಮಾಣ ಮತ್ತೆ ಏರಿಕೆಯಾದ ಹಿನ್ನೆಲೆ ತುಂಗಭದ್ರಾ ಜಲಾಶಯದಿಂದ ನದಿಗೆ 1.39 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ಮತ್ತೆ ಚಿಕ್ಕಜಂತಕಲ್ ಸೇತುವೆ ಮುಳುಗಿದ್ದು, ವಿರುಪಾಪುರಗಡ್ಡೆ, ನವವೃಂದಾವನ ಗಡ್ಡೆಗೆ ಸಂಪರ್ಕ ಕಡಿತಗೊಂಡಿದೆ.

ಆನೆಗೊಂದಿಯ ಬಳಿಯ ಶ್ರೀಕೃಷ್ಣದೇವರಾಯ ಸಮಾಧಿ, ಬೆನ್ನೂರು ಹೊಳೆಬಸವೇಶ್ವರ ದೇವಸ್ಥಾನ ಜಲಾವೃತವಾಗಿದ್ದು, ನೀರಿನ ಪ್ರಮಾಣ ಹೆಚ್ಚಾದರೆ ಕೃಷಿ ಭೂಮಿಗೆ ನೀರು ನುಗ್ಗುವ ಸಾಧ್ಯತೆ ಇದೆ.

Continue Reading
Advertisement
Ismail Haniyeh
ಪ್ರಮುಖ ಸುದ್ದಿ3 mins ago

Ismail Haniyeh: ಇಸ್ರೇಲ್‌ ದಾಳಿಗೆ ಹತನಾಗುವ ಮುನ್ನ ಹಮಾಸ್‌ ಉಗ್ರ ಇಸ್ಮಾಯಿಲ್‌ ಏನು ಮಾಡುತ್ತಿದ್ದ? ಇಲ್ಲಿದೆ ವರದಿ

BJP Protest
ಕರ್ನಾಟಕ4 mins ago

BJP Protest: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ; ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌!

Israel v/s Hamas
ವಿದೇಶ6 mins ago

Israel v/s Hamas: ಇಸ್ರೇಲ್‌‌ ಮುಂದಿನ ಟಾರ್ಗೆಟ್ ಯಾರು? ಇಲ್ಲಿದೆ ಹಮಾಸ್ ‘ಉಗ್ರ’ ನಾಯಕರ ಹಿಟ್‌ ಲಿಸ್ಟ್!

Wayanad Landslide
ದೇಶ38 mins ago

Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

Sexual Abuse
Latest1 hour ago

Sexual Abuse: ಕ್ಲಾಸ್‌ಗೆ ಹೋಗಲು ಆಟೊ ಹತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಾಲಕ ಮೊಹಮ್ಮದ್‌ ಬಂಧನ

Karnataka Rain
ಕರ್ನಾಟಕ1 hour ago

Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

FASTag new rule
ತಂತ್ರಜ್ಞಾನ1 hour ago

FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

Koti Koti Rokka Galisi kannada song released
ಕರ್ನಾಟಕ1 hour ago

Kannada New Song: ಹೂಡಿ ಚಿನ್ನಿ ಕಂಠಸಿರಿಯಲ್ಲಿ ಮೂಡಿಬಂದ ʼಕೋಟಿ ಕೋಟಿ ರೊಕ್ಕ ಗಳಿಸಿʼ ಹಾಡು ರಿಲೀಸ್‌

Paris Olympics Archery
ಕ್ರೀಡೆ2 hours ago

Paris Olympics Archery: ಪ್ರೀ-ಕ್ವಾರ್ಟರ್‌ ಫೈನಲ್​ಗೇರಿದ ದೀಪಿಕಾ ಕುಮಾರಿ

ITR Filing
ವಾಣಿಜ್ಯ2 hours ago

ITR Filing: ಐಟಿ ರಿಟರ್ನ್ಸ್‌ ಗಡುವು ವಿಸ್ತರಣೆ ಇಲ್ಲ, ಕೊನೇ ಕ್ಷಣದಲ್ಲಿ ಪೋರ್ಟಲ್‌ ಕ್ರ್ಯಾಶ್;‌ ಇನ್ಫೋಸಿಸ್‌ ವಿರುದ್ಧ ಆಕ್ರೋಶ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌