Dead body in plastic | ಶವ ಸಂಸ್ಕಾರಕ್ಕೆ ಹಣವಿಲ್ಲದೆ ಪತ್ನಿ ಶವವನ್ನು ಪ್ಲಾಸ್ಟಿಕ್‌ನಲ್ಲಿ ಕಟ್ಟಿ ಊರಿಗೆ ಸಾಗಿಸಿದ ಗಂಡ - Vistara News

ಕರ್ನಾಟಕ

Dead body in plastic | ಶವ ಸಂಸ್ಕಾರಕ್ಕೆ ಹಣವಿಲ್ಲದೆ ಪತ್ನಿ ಶವವನ್ನು ಪ್ಲಾಸ್ಟಿಕ್‌ನಲ್ಲಿ ಕಟ್ಟಿ ಊರಿಗೆ ಸಾಗಿಸಿದ ಗಂಡ

ಚಿಂದಿ ಆಯುತ್ತಿದ್ದ ದಂಪತಿ ಪೈಕಿ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ. ಆಕೆಯ ಶವದ ಅಂತ್ಯಕ್ರಿಯೆಗೂ ಹಣವಿಲ್ಲದೆ ಶವವನ್ನು ಪ್ಲಾಸ್ಟಿಕ್‌ನಲ್ಲಿ ಕಟ್ಟಿ ಸಾಗಿಸಲು (Dead body in plastic) ಮುಂದಾದಾಗ ಸಾರ್ವಜನಿಕರಿಗೆ ಕಂಡಿದೆ. ಮುಂದೇನಾಯಿತು?

VISTARANEWS.COM


on

Dead body in plastic
ಅನಾರೋಗ್ಯದಿಂದ ಮೃತಪಟ್ಟ ಪತ್ನಿಯ ಶವವನ್ನು ಪ್ಲಾಸ್ಟಿಕ್‌ನಲ್ಲಿ ಕಟ್ಟಿ ಸಾಗಿಸುತ್ತಿದ್ದ ರವಿಯನ್ನು ಸಾರ್ವಜನಿಕರು ತಡೆದಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಬಡತನ ಎನ್ನುವುದು ಎಷ್ಟು ಕ್ರೂರವಾಗಿರುತ್ತದೆ, ಬದುಕನ್ನು ದೈನೇಸಿಯಾಗಿ ಮಾಡುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಇಲ್ಲೊಬ್ಬ ಅನಾರೋಗ್ಯದಿಂದ ಮೃತಪಟ್ಟ ತನ್ನ ಪತ್ನಿಯ ಅಂತ್ಯಕ್ರಿಯೆ ನಡೆಸಲೂ ಹಣವಿಲ್ಲದೆ, ಶವವನ್ನು ಪ್ಲಾಸ್ಟಿಕ್‌ನಲ್ಲಿ (Dead body in plastic) ಕಟ್ಟಿ ಹೊತ್ತುಕೊಂಡೇ ತನ್ನ ಊರಿಗೆ ಹೊರಟಿದ್ದಾನೆ! ಆದರೂ ಇದರ ಹಿಂದಿನ ನಿಜವಾದ ಕಥೆ ಏನು ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಚಾಮರಾಜ ನಗರ ಜಿಲ್ಲೆಯಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ. ನಗರದ ಕಂದಹಳ್ಳಿ ಸಮೀಪದ ರವಿ ಮತ್ತು ಕಾಳಮ್ಮ (೨೬) ಎಂಬವರು ವಾಸವಿದ್ದರು. ಇಬ್ಬರೂ ಪ್ಲಾಸ್ಟಿಕ್‌ ಮತ್ತು ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದರು. ಈ ನಡುವೆ, ಪತ್ನಿ ಕಾಳಮ್ಮ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಆದರೆ, ಆಕೆಯ ಮೃತದೇಹದ ಅಂತ್ಯ ಸಂಸ್ಕಾರ ನಡೆಸಲು ರವಿ ಬಳಿ ಹಣವಿರಲಿಲ್ಲ. ಇವರು ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ಕಾಗೆಪುರ ಗ್ರಾಮದವರು. ಹಾಗಾಗಿ ಅಲ್ಲಿಗೇ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸುವುದು ಎಂದು ತೀರ್ಮಾನಿಸಿದರು ರವಿ. ಆದರೆ, ಅಲ್ಲಿವರೆಗೆ ಹೋಗುವುದಕ್ಕೂ ಹಣವಿರಲಿಲ್ಲ. ಹೀಗಾಗಿ ಶವವನ್ನು ಪ್ಲಾಸ್ಟಿಕ್‌ನಲ್ಲಿ ಕಟ್ಟಿ ಅದನ್ನು ಹಿಡಿದುಕೊಂಡು ಮಂಡ್ಯದ ಕಡೆಗೆ ಹೊರಟಿದ್ದರು.

ಇದನ್ನು ಗಮನಿಸಿದ ಕೆಲವರು ವಿಚಾರಿಸಿ ಮೂಟೆ ಇಳಿಸಿ ಪರಿಶೀಲಿಸಿದರು. ಅದರಲ್ಲಿ ಹೆಣವಿರುವುದನ್ನು ನೋಡಿ ವಿಚಾರಿಸಿದಾಗ ಬಡತನದ ಕತೆ ಹೇಳಿಕೊಂಡಿದ್ದಾನೆ. ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದರು. ಈಗ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ʻʻನಾನು ಅನಾಥ. ಹೆಂಡತಿಗೆ ಚಿಕಿತ್ಸೆ ಕೊಡಿಸಲು ಹಣ ಇರಲಿಲ್ಲ, ಈಗ ಮೃತದೇಹ ಊರಿಗೆ ತೆಗೆದುಕೊಂಡು ಹೋಗಲು ಹಣವಿಲ್ಲ. ನನಗೆ ಸಂಬಂಧಿಕರೂ ಇಲ್ಲʼʼ ಎನ್ನುತ್ತಿದ್ದಾನೆ ರವಿ. ಇದೀಗ ಪೊಲೀಸರು ಆಕೆಯ ಸಾವಿನ ಹಿನ್ನೆಲೆಯನ್ನೂ ಪರಿಶೀಲಿಸಲಿದ್ದಾರೆ. ಜತೆಗೆ ಸ್ಥಳೀಯರು ಸೇರಿ ಶವದ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ | ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ, ಒಂದು ಮಗು ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪ್ರಜ್ವಲ್‌ ಅರೆಸ್ಟ್‌ ಆದಲ್ಲಿ ಎಸ್‌ಐಟಿ ಕೇಳುವ ಪ್ರಶ್ನೆಗಳಿವು! ರೇವಣ್ಣಗೂ ತಟ್ಟುವ ಬಿಸಿ

Prajwal Revanna Case: ಪ್ರಕರಣ ಸಂಬಂಧ ಸಣ್ಣ ಸಣ್ಣ ಪ್ರಶ್ನೆಗಳನ್ನೂ ಕೇಳಿ ಪ್ರಜ್ವಲ್‌ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್‌ ಅವರ ವಯಸ್ಸಿನಿಂದ ಹಿಡಿದು ಹಲವು ಪ್ರಶ್ನೆಗಳನ್ನು ಕೇಳಲಿದ್ದಾರೆ. ಆರೋಪಗಳ ಬಗ್ಗೆ ಏನು ಹೇಳುತ್ತೀರಿ? ನೀವೇ ರೆಕಾರ್ಡ್‌ ಮಾಡಿಕೊಂಡಿದ್ದೀರಿ ಎಂಬ ಆರೋಪ ಇದೆ. ರೆಕಾರ್ಡ್‌ಗೆ ಯಾವ ಸಾಧನವನ್ನು ಬಳಸಿಕೊಂಡಿದ್ದೀರಿ. ಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎನ್ನಲಾಗಿದೆ.

VISTARANEWS.COM


on

Prajwal Revanna Case These are the questions SIT will ask Prajwal
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್‌ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾದಲ್ಲಿ ಇಲ್ಲವೇ ಅವರನ್ನು ಬಂಧಿಸಿ ಕರೆತಂದಲ್ಲಿ ಅವರಿಗೆ ಸರಣಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈಗಾಗಲೇ ಹಲವು ಪ್ರಶ್ನೆಗಳನ್ನು ಎಸ್‌ಐಟಿ ಸಿದ್ಧಪಡಿಸಿಟ್ಟುಕೊಂಡಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಸಣ್ಣ ಸಣ್ಣ ಪ್ರಶ್ನೆಗಳನ್ನೂ ಕೇಳಿ ಪ್ರಜ್ವಲ್‌ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್‌ ಅವರ ವಯಸ್ಸಿನಿಂದ ಹಿಡಿದು ಹಲವು ಪ್ರಶ್ನೆಗಳನ್ನು ಕೇಳಲಿದ್ದಾರೆ. ಆರೋಪಗಳ ಬಗ್ಗೆ ಏನು ಹೇಳುತ್ತೀರಿ? ನೀವೇ ರೆಕಾರ್ಡ್‌ ಮಾಡಿಕೊಂಡಿದ್ದೀರಿ ಎಂಬ ಆರೋಪ ಇದೆ. ರೆಕಾರ್ಡ್‌ಗೆ ಯಾವ ಸಾಧನವನ್ನು ಬಳಸಿಕೊಂಡಿದ್ದೀರಿ. ಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಅದೇ ರೀತಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್.ಡಿ. ರೇವಣ್ಣ ಅವರಿಗೂ ಹಲವು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ರೆಡಿಯಾಗಿದೆ. ನಿಮ್ಮ ಪುತ್ರನ ಮೇಲೆ ಆರೋಪಿವಿರುವುದು ಗಮನಕ್ಕೆ ಬಂದಿತ್ತಾ? ನಿಮ್ಮ ಗಮನಕ್ಕೆ ಬಂದಿದ್ರೆ ಅದರ ಬಗ್ಗೆ ಪ್ರಜ್ವಲ್‌‌ ಜತೆ ಚರ್ಚಿಸಿದ್ದಿರಾ? ಒಂದು ವೇಳೆ ಚರ್ಚೆ ಮಾಡಿದರೆ ನಿಮ್ಮ ಪುತ್ರ ಏನು ಹೇಳಿದ್ದರು? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಹೇಳಲಾಗಿದೆ.

ಪ್ರಜ್ವಲ್ ರೇವಣ್ಣಗೆ SIT ಕೇಳುವ ಸಂಭಾವ್ಯ ಪ್ರಶ್ನೆಗಳು

1- ಪ್ರಜ್ವಲ್ ಅವರೇ ನಿಮಗೆ ವಯಸ್ಸು ಎಷ್ಟು?
2- ನೀವು ಏನು ಓದಿದ್ದೀರಿ? ಎಲ್ಲಿ ಓದಿದ್ದು?
3- ಎಲೆಕ್ಷನ್ ಮುಗಿದ ತಕ್ಷಣ ತಾವು ಎಲ್ಲಿಗೆ ಹೋದಿರಿ?
4- ನೀವು ಹೆಚ್ಚಾಗಿ ವಾಸವಿರೋದು ಹಾಸನವಾ? ದೆಹಲಿಯಾ? ಅಥವಾ ಬೆಂಗಳೂರಲ್ಲೋ?
5- ನಿಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳ ಬಗ್ಗೆ ಏನಂತೀರಿ?
6- ಅಸಲಿಗೆ ಅವು ನಿಮ್ಮ ವಿಡಿಯೊಗಳಾ?
7- ವಿಡಿಯೋದಲ್ಲಿರುವ ಧ್ವನಿ ನಿಮ್ಮದಲ್ಲವೇ?
8- ನಿಮ್ಮಿಂದಲೇ ರೆಕಾರ್ಡ್‌ ಎನ್ನಲಾಗುತ್ತಿದೆ, ಹೌದೇ?
9- ರೆಕಾರ್ಡ್ ಮಾಡಲು ಬಳಸಿದ ಸಾಧನ ಯಾವುದು?
10- ನೀವೇ ರೆಕಾರ್ಡ್ ಮಾಡಿದ್ದಂತೆ. ಯಾಕೆ ಮಾಡಿದಿರಿ?
11 – ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ?
12- ನಿಮ್ಮ ಮೋಜಿಗೆ ವಿಡಿಯೊಗಳನ್ನು ಮಾಡಿಕೊಳ್ಳುತ್ತಿದ್ದಿರಾ?
13- ರೆಕಾರ್ಡ್ ಮಾಡುವುದು ತಪ್ಪು ಎಂದು ನಿಮಗೆ ಗೊತ್ತಿಲ್ವೆ?
14- ದೃಶ್ಯಗಳಲ್ಲಿ ಇರುವ ಮಹಿಳೆಯರು ನಿಮಗೆ ಪರಿಚಯವೇ?
15- ಆ ಮಹಿಳೆಯರನ್ನು ನೀವು ಎಲ್ಲಿ ಭೇಟಿ ಮಾಡಿದಿರಿ?
16- ದೈಹಿಕ ಸಂಪರ್ಕ ಬೆಳೆಸಲು ಏನಾದರೂ ಆಮಿಷ ಒಡ್ಡಿದ್ರಾ?
17 – ಅದು ಅತ್ಯಾಚಾರಕ್ಕೆ ಸಮ ಎಂದು ಗೊತ್ತಿದೆಯೇ?
18- ಪ್ರಮೋಷನ್, ಕೆಲಸದ ನೆಪದಲ್ಲಿ ದೈಹಿಕ ಸಂಪರ್ಕ ಮಾಡಿದಿರಾ?
19- ನಿಮಗೇನಾದರೂ ಮಾನಸಿಕ ಸಮಸ್ಯೆ ಇದೆಯಾ?
20- ನೀವು ದೌರ್ಜನ್ಯ ನಡೆಸುತ್ತಿರುವಂತಿದೆ, ಏನಂತೀರಿ?
21- ನೋಟಿಸ್ ಕೊಟ್ಟರೂ 7 ದಿನ ಟೈಮ್ ಯಾಕೆ ಕೇಳಿದಿರಿ?
22- ನೀವು ದೃಶ್ಯ ಶೂಟ್ ಮಾಡಲು ಬಳಸಿದ ಸಾಧನ ಎಲ್ಲಿದೆ?
23- ಬೇರೆ ಯಾರ ಬಳಿಯಾದರೂ ವಿಡಿಯೊ ಶೇರ್ ಮಾಡಿದಿರಾ?
24- ಖಾಸಗಿ ದೃಶ್ಯಗಳು ಹೇಗೆ ಹೊರಗೆ ಬಂದವು ಹೇಳಬಹುದಾ?
25- ನಿಮಗೆ ಕಾರ್ತಿಕ್ ಎಂಬ ವ್ಯಕ್ತಿ ಗೊತ್ತಾ?
26 – ನಿಮಗೂ ಕಾರ್ತಿಕ್‌ಗೂ ಸ್ನೇಹವಿತ್ತಾ?
27 – ನಿಮ್ಮ ವಿರುದ್ಧ ಸುದ್ದಿ ಪ್ರಸಾರವಾಗದಂತೆ ತಡೆ ತಂದಿದ್ದಿರಿ ಯಾಕೆ?
28 – ನಿಮ್ಮ ಮೇಲಿನ ಪಿತೂರಿ ಅಂತಾದರೆ ನೀವ್ಯಾಕೆ ದೂರು ನೀಡಲಿಲ್ಲ?
29 – ನಿಮ್ಮ ವಿರುದ್ಧ ಆರೋಪ ಬಂದ ಕೂಡಲೇ ಯಾಕೆ ದೇಶ ಬಿಟ್ಟು ಹೋದಿರಿ?
30 – ಮನೆಯಲ್ಲಿ ಯಾರ ಬಳಿಯಾದರೂ ಈ ವಿಷಯಗಳನ್ನು ಹೇಳಿಕೊಳ್ಳುತ್ತಿದ್ದಿರಾ?
31 – ಕೆಲಸದಾಕೆಯ ಆರೋಪದ ಬಗ್ಗೆ ಏನಂತೀರಿ?
32 – ಪ್ರಜ್ವಲ್ ನೀವು ತನಿಖೆಗೆ ಸಹಕರಿಸಬೇಕು
33 – ತನಿಖೆ ಪೂರ್ಣವಾಗುವವರೆಗೂ ದೇಶ ಬಿಟ್ಟು ಹೋಗಬೇಡಿ

ಎಂಬಿತ್ಯಾದಿ ಪ್ರಶ್ನೆಗಳನ್ನು ಎಸ್‌ಐಟಿ ಕೇಳಲಿದೆ. ಒಂದು ವೇಳೆ ಇವುಗಳಿಗೆ ಆರೋಪಿ ಪ್ರಜ್ವಲ್‌ ಸ್ಪಂದಿಸದೆ ಸಮರ್ಪಕ ಉತ್ತರ ನೀಡಿದ್ದರೆ ಮುಂದಿನ ಕ್ರಮದ ಬಗ್ಗೆ ಎಸ್‌ಐಟಿ ಚಿಂತನೆ ನಡೆಸಲಿದೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

ಎಚ್‌‌‌‌.ಡಿ.ರೇವಣ್ಣಗೆ SIT ಕೇಳುವ ಸಂಭಾವ್ಯ ಪ್ರಶ್ನೆಗಳು!

1) ನಿಮ್ಮ ಹೆಸರೇನು..? ಏನು ಕೆಲಸ ಮಾಡಿಕೊಂಡಿದ್ದೀರಿ..?
2) ಯಾವ ವಿಳಾಸದಲ್ಲಿ ವಾಸವಾಗಿದ್ದೀರಾ? ಎಷ್ಟು ವರ್ಷ..?
3) ನಿಮ್ಮ ಮೇಲೆ ಸಂತ್ರಸ್ತೆ ನೀಡಿದ ದೂರಿನ ಬಗ್ಗೆ ಮಾಹಿತಿ ಇದೆಯಾ?
4) ದೂರು ನೀಡಿರುವ ಮಹಿಳೆ ಪರಿಚಯಸ್ಥರಾ? ಸಂಬಂಧಿನಾ?
5) ಎಷ್ಟು ವರ್ಷಗಳಿಂದ ನಿಮ್ಮ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ..?
6) ದೂರಿನಲ್ಲಿ ಉಲ್ಲೇಖಿಸಿದಂತೆ ಲೈಂಗಿಕ ದೌರ್ಜನ್ಯ ಎಸಗಿದ್ದೀರಾ?
7) ನಿಮ್ಮ ಪುತ್ರನ ಮೇಲೂ ಆರೋಪಿವಿದೆ ಗಮನಕ್ಕೆ ಬಂದಿತ್ತಾ..?
8) ನಿಮ್ಮ ಗಮನಕ್ಕೆ ಬಂದಿದ್ದರೆ ಅದರ ಬಗ್ಗೆ ಪ್ರಜ್ವಲ್‌‌ ಜತೆ ಚರ್ಚಿಸಿದ್ದಿರಾ?
9) ಒಂದು ವೇಳೆ ಚರ್ಚೆ ಮಾಡಿದ್ದರೆ ನಿಮ್ಮ ಪುತ್ರ ಏನು ಹೇಳಿದ್ದರು?
10) ನಿಮ್ಮ ಪುತ್ರನ ಕಾರು ಚಾಲಕ ಕಾರ್ತಿಕ್ ಎಷ್ಟು ವರ್ಷಗಳಿಂದ ಕೆಲಸ ಮಾಡುತ್ತಿದ್ದ ?
11) ನಿಮ್ಮ ಡ್ರೈವರ್ ಕಾರ್ತಿಕ್ ಜತೆ ಏನಾದರೂ ಗಲಾಟೆ ಆಗಿತ್ತಾ?
12) ವಿಡಿಯೊ ನಾನೇ ಕೊಟ್ಟಿದ್ದು ಎಂದು ಕಾರ್ತಿಕ್ ಹೇಳಿಕೆ ನೀಡಿದ್ದಾರಲ್ವಾ, ಇದು ಸತ್ಯನಾ?
13) ಪೆನ್‌ಡ್ರೈವ್‌ನಲ್ಲಿರೋ ವಿಡಿಯೊ ಪ್ರಜ್ವಲ್ ರೇವಣ್ಣನವರೆದ್ದೇನಾ..?
14) ಇಲ್ಲ ಅಂದಾದರೆ ಕೋರ್ಟ್‌ನಲ್ಲಿ ಸ್ಟೇ ತಂದಿದ್ದು ಯಾಕೆ?
15) ಮನೆ ಕೆಲಸದವಳು ಮಾಡುವ ಆರೋಪಕ್ಕೆ ನಿಮ್ಮ ಪ್ರತಿಕ್ರಿಯೆ ಏನು?

Continue Reading

ಚಿನ್ನದ ದರ

Gold Rate Today: ನಿನ್ನೆ ಇಳಿದ ಚಿನ್ನದ ಬೆಲೆ ಇಂದು ತೀವ್ರ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ದರಗಳು ಹೀಗಿವೆ

Gold Rate Today: ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಇಂದಿನ ಚಿನ್ನದ ದರಗಳು ಹೀಗಿವೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ತೀವ್ರವಾಗಿ ಏರಿವೆ. ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ (Gold price today) ಕ್ರಮವಾಗಿ ₹70 ಹಾಗೂ ₹76 ಏರಿಕೆ ಆಗಿವೆ. ನಿನ್ನೆ ಇವು ಕ್ರಮವಾಗಿ ₹100 ಹಾಗೂ ₹109 ಇಳಿಕೆ ಆಗಿದ್ದವು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,625ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,000 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,250 ಮತ್ತು ₹6,62,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,227 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,816 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,270 ಮತ್ತು ₹7,22,700 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹84, ಎಂಟು ಗ್ರಾಂ ₹672 ಮತ್ತು 10 ಗ್ರಾಂ ₹840ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,40072,420
ಮುಂಬಯಿ66,250 72,270
ಬೆಂಗಳೂರು66,250 72,270
ಚೆನ್ನೈ67,15073,250

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರ‌ ಇಂದೇ ತಗೊಳ್ಳಿ! ಚಿನ್ನದ ಬೆಲೆ ಭಾರೀ ಇಳಿಕೆ; ಇಂದು ಇಷ್ಟಿದೆ ನೋಡಿ

Continue Reading

ಕಲಬುರಗಿ

Self Harming : ಕಲಬುರಗಿಯಲ್ಲಿ ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Self Harming : ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಪೊಲೀಸರು ಜಾತಿ ನಿಂದನೆ ಕೇಸ್‌ ದಾಖಲಿಸಿ ತನಿಖೆಯನ್ನು ನಡೆಸಿದ್ದರು. ಆದರೆ ಕೇಸ್‌ ದಾಖಲಿಸಿದ್ದಕ್ಕೆ ಹೆದರಿ ಯುವಕ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ.

VISTARANEWS.COM


on

By

Self Harming
Koo

ಕಲಬುರಗಿ: ಜಾತಿ ನಿಂದನೆ ಕೇಸ್ (Case of casteist slurs) ದಾಖಲಿಸಿದಕ್ಕೆ ಹೆದರಿದ ಯುವಕ ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ (Kalaburagi News) ಕಮಲಾಪುರ ತಾಲ್ಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಪೂಜಾರಿ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟವರು.

ನಾಲ್ಕು ದಿನದ ಹಿಂದೆ ಲಾಡಮುಗುಳಿ ಗ್ರಾಮದಲ್ಲಿ ಜಾತ್ರೆ ವೇಳೆ ಗಲಾಟೆ ನಡೆದಿತ್ತು. ಈ ವೇಳೆ ಕ್ಷುಲ್ಲಕ‌ ವಿಚಾರಕ್ಕೆ ಎರಡು ಸಮುದಾಯದ ಯುವಕರ ನಡುವೆ ಗಲಾಟೆ ನಡೆದಿತ್ತು. ಗಲಾಟೆಯ ಬಳಿಕ ಊರವರ ಸಮ್ಮುಖದಲ್ಲಿ ರಾಜಿ ಸಂಧಾನ ಕೂಡ ನಡೆದಿತ್ತು. ಬಳಿಕ ಇನ್ನೊಂದು ಸಮುದಾಯ ಯುವಕರು ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ಧ ದೂರು ನೀಡಿದ್ದರು.

ನರೋಣಾ ಪೊಲೀಸ್ ಠಾಣೆಯಲ್ಲಿ ನಿಖಿಲ್ ಸೇರಿ ಹಲವರ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಇದರಿಂದ ಹೆದರಿದ ನಿಖಿಲ್‌ ಲಾಡಮುಗಳಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಮರಕ್ಕೆ ನೇಣಿಗೆ ಶರಣಾಗಿದ್ದಾನೆ.

Self Harming in kalaburagi

ಇನ್ನೂ ಯುವಕನ ಕುಟುಂಬಸ್ಥರು ಹಾಗೂ ಸಮುದಾಯದವರು ನ್ಯಾಯಕ್ಕಾಗಿ ಕಲಬುರಗಿಗೆ ಶವ ತರಲು ಮುಂದಾದರು. ಮಿಲಿಟರಿಯವರು ನಡುರಸ್ತೆಯಲ್ಲಿ ತಡೆದ ಹಿನ್ನೆಲೆಯಲ್ಲಿ ಲಾಡ ಮುಗಳಿ ಗ್ರಾಮದ ಹೊರವಲಯದಿಂದ ಮೃತದೇಹವನ್ನು ಹೊತ್ತಿಕೊಂಡು ಬರುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

Prajwal Revanna Case: ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ಸದ್ಯ ಪ್ರಜ್ವಲ್‌ ರೇವಣ್ಣ ತಲೆ ಮೇಲೆ ಈ ಲುಕೌಟ್‌ ನೋಟೀಸ್‌ ತೂಗುಗತ್ತಿ ತೂಗುತ್ತಿದೆ.

VISTARANEWS.COM


on

prajwal revanna case lookout notice
Koo

ಬೆಂಗಳೂರು: ಹಾಸನದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna case) ಅವರಿಗೆ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಲುಕೌಟ್‌ ನೋಟೀಸ್‌ ಎಂದರೇನು, ಅದರ ಪರಿಣಾಮವೇನು, ಅದಕ್ಕೂ ತಡೆ ತರಬಹುದೇ, ಇತ್ಯಾದಿ ವಿವರಗಳು ಇಲ್ಲಿವೆ.

ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ವಿಮಾನ ನಿಲ್ದಾಣ (Airport) ಮತ್ತಿತರ ಸಂಚಾರ ಪಾಯಿಂಟ್‌ಗಳಲ್ಲಿ ಕಾನೂನು ಜಾರಿ ಅಧಿಕಾರಿಗಳಿಗೆ ಅಗತ್ಯವಿರುವ ವ್ಯಕ್ತಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿಗಾ ಇಡಲು, ಪರಿಣಾಮಕಾರಿಯಾಗಿ ತಡೆಗಟ್ಟಲು ಇದನ್ನು ಹೊರಡಿಸಲಾಗುತ್ತದೆ.

ಒಂದು ದೇಶದ ವಲಸೆ ಅಧಿಕಾರಿಗಳು ಯಾವುದೇ ತಲೆಮರೆಸಿಕೊಂಡಿರುವ ಅಪರಾಧಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದರೆ, ಆ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಬಹುದು. ಅಪರಾಧಿಗಳು ಇದರಿಂದಾಗಿ ವಿಮಾನ ನಿಲ್ದಾಣ ಅಥವಾ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸುದ್ದಿಯನ್ನು ನಾವು ಆಗಾಗ ಕೇಳುತ್ತಿರುತ್ತೇವೆ.

ಮಾರ್ಗಸೂಚಿಗಳು

ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಈ ಸರ್ಕ್ಯುಲರ್‌ಗಳ ಮೂಲ ಮಾರ್ಗಸೂಚಿಗಳನ್ನು ಗೃಹ ವ್ಯವಹಾರಗಳ ಸಚಿವಾಲಯ (MHA) ಹೊರಡಿಸಿದೆ. ಈ ಮಾರ್ಗಸೂಚಿಗಳು ಹೀಗಿವೆ:

1) LOC ನೀಡುವ ವಿನಂತಿಯನ್ನು ಭಾರತ ಸರ್ಕಾರದ ಉಪ ಕಾರ್ಯದರ್ಶಿ, ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ, ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳ ಶ್ರೇಣಿಯ ಅಧಿಕಾರಿಗಳು ಮಾತ್ರ ಮಾಡಬಹುದು.

2) ಯಾವುದೇ ಭಾರತೀಯ ವ್ಯಕ್ತಿಯ ವಿರುದ್ಧ ಎಲ್ಲಾ ವಲಸೆ ಚೆಕ್‌ಪೋಸ್ಟ್‌ಗಳಿಗೆ ಲುಕ್‌ಔಟ್ ನೋಟೀಸ್ ಅನ್ನು ಗೃಹ ಸಚಿವಾಲಯ ಸಿದ್ಧಪಡಿಸಿದ ಸ್ವರೂಪದಲ್ಲಿ ಮಾತ್ರ ನೀಡಬಹುದು.

3) ನೋಟಿಸ್ ನೀಡುವ ಏಜೆನ್ಸಿಯು ಆರೋಪಿಯ ಸಂಪೂರ್ಣ ಗುರುತಿನ ವಿವರಗಳನ್ನು ನಿಗದಿತ ನಮೂನೆಯಲ್ಲಿ ನೀಡಬೇಕು. ಆರೋಪಿಯ ಹೆಸರನ್ನು ಹೊರತುಪಡಿಸಿ ಮೂರಕ್ಕಿಂತ ಕಡಿಮೆ ಗುರುತಿನ ಮಾನದಂಡಗಳಿದ್ದಲ್ಲಿ LOC ನೀಡಲಾಗುವುದಿಲ್ಲ.

4) ಸಾಮಾನ್ಯವಾಗಿ ಲುಕ್‌ಔಟ್ ನೋಟೀಸ್ ವಿತರಣೆಯ ದಿನಾಂಕದಿಂದ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಏಜೆನ್ಸಿಯು ಈ ಸೂಚನೆಯ ಅವಧಿಯನ್ನು ಹೆಚ್ಚಿಸಲು ಬಯಸಿದರೆ, ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮಾಡಬಹುದು. ಒಂದು ವರ್ಷದ ನಿಗದಿತ ಅವಧಿಯೊಳಗೆ LOCಯನ್ನು ವಿಸ್ತರಿಸಲು ಯಾವುದೇ ವಿನಂತಿ ಮಾಡದಿದ್ದರೆ, LOC ಅನ್ನು ಅಮಾನತುಗೊಳಿಸಲು ಸಂಬಂಧಿಸಿದ ವಲಸೆ ಅಧಿಕಾರಿಗೆ ಅಧಿಕಾರವಿದೆ.

ಕೋರ್ಟ್ ಮತ್ತು ಇಂಟರ್‌ಪೋಲ್‌ನಿಂದ ಲುಕ್‌ಔಟ್ ನೋಟಿಸ್‌ಗಳನ್ನು ನೀಡಿದರೆ, ಲುಕ್‌ಔಟ್ ನೋಟೀಸ್‌ಗಳು ಒಂದು ವರ್ಷದೊಳಗೆ ಮುಕ್ತಾಯಗೊಳ್ಳುವುದಿಲ್ಲ.

ಲುಕ್‌ಔಟ್ ನೋಟಿಸ್‌ನ ದುರ್ಬಳಕೆ

ಹಲವು ಪ್ರಕರಣಗಳಲ್ಲಿ ಲುಕ್‌ಔಟ್‌ ನೋಟಿಸ್‌ ದುರ್ಬಳಕೆಯಾಗಿದೆ. ಯಾರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆಯೋ ಅವರಿಗೂ ಲುಕ್‌ಔಟ್ ನೋಟಿಸ್ ಬಗ್ಗೆ ಕೆಲವೊಮ್ಮ ತಿಳಿದಿರುವುದಿಲ್ಲ. ವ್ಯಕ್ತಿ ತನ್ನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವುದನ್ನು ನಿರೀಕ್ಷಿಸದೇ ಇರಬಹುದು. ವಿಮಾನ ನಿಲ್ದಾಣ/ಗಡಿ ಇತ್ಯಾದಿಗಳಲ್ಲಿ ವಲಸೆ ಅಧಿಕಾರಿಗಳು ತಡೆದಾಗ ಅಥವಾ ಬಂಧಿಸಿದಾಗ ಮಾತ್ರ ಆರೋಪಿಗೆ ತಿಳಿಯುತ್ತದೆ.

ಆದರೆ ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಯುಗದಲ್ಲಿ ಹೀಗಾಗದು. ಕೆಲವೊಮ್ಮೆ ಲುಕ್‌ಔಟ್ ನೋಟಿಸ್‌ಗಳನ್ನು ಎಲ್ಲಾ ನಿಯಮಗಳ ಪಾಲನೆಯಾಗದೆ ನೀಡಲಾಗುತ್ತದೆ. ಈ ಪ್ರಕರಣಗಳು ಶಂಕಿತ ವ್ಯಕ್ತಿಗಳು, ದೇಶ ವಿರೋಧಿ ಅಂಶಗಳು ಇತ್ಯಾದಿಗಳೊಂದಿಗೆ ಸಂಬಂಧ ಹೊಂದಿವೆ. ಇಂತಹ ಪ್ರಕರಣಗಳಿಂದ ಬಾಧಿತರಾದ ಯಾವುದೇ ವ್ಯಕ್ತಿ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪರಿಹಾರ ಪಡೆಯಲು ಮಾನವ ಹಕ್ಕುಗಳ ಆಯೋಗ ಅಥವಾ ಹೈಕೋರ್ಟ್‌ಗಳನ್ನು ಸಂಪರ್ಕಿಸಬಹುದು. ಆದರೆ ಈ ಪ್ರಕ್ರಿಯೆ ಹಲವು ವರ್ಷಗಳನ್ನು ತೆಗೆದುಕೊಳ್ಳಬಹುದು ಮತ್ತು ತುಂಬಾ ದುಬಾರಿಯಾಗಬಹುದು.

ಲುಕ್‌ಔಟ್ ನೋಟಿಸ್‌ಗಳು ಅಪರಾಧಿಗಳಲ್ಲಿ ಭಯವನ್ನು ಉಂಟುಮಾಡುತ್ತವೆಯೇ? ಅನೇಕ ಪ್ರಕರಣಗಳಲ್ಲಿ ಅನೇಕ ಅಪರಾಧಿಗಳು ಮತ್ತು ಆರೋಪಿಗಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಭಾರತದಲ್ಲಿ ಲುಕ್‌ಔಟ್ ನೋಟಿಸ್‌ಗಳನ್ನು ಹೊರಡಿಸಲಾಗಿದೆ. ಆದರೆ ಇದರಿಂದ ಅವರು ವಿಚಲಿತರಾದಂತಿಲ್ಲ. ಇಲ್ಲಿಯವರೆಗೆ ಎಷ್ಟು ಲುಕ್‌ಔಟ್ ನೋಟಿಸ್‌ಗಳನ್ನು ನೀಡಲಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

ಇದನ್ನೂ ಓದಿ: Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

Continue Reading
Advertisement
Prajwal Revanna Case These are the questions SIT will ask Prajwal
ಕ್ರೈಂ1 min ago

Prajwal Revanna Case: ಪ್ರಜ್ವಲ್‌ ಅರೆಸ್ಟ್‌ ಆದಲ್ಲಿ ಎಸ್‌ಐಟಿ ಕೇಳುವ ಪ್ರಶ್ನೆಗಳಿವು! ರೇವಣ್ಣಗೂ ತಟ್ಟುವ ಬಿಸಿ

Narendra Modi
ದೇಶ14 mins ago

Narendra Modi:”ಇಲ್ಲಿ ಕಾಂಗ್ರೆಸ್‌ ಸಾಯುತ್ತಿದೆ…ಅಲ್ಲಿ ಪಾಕಿಸ್ತಾನ ಅಳುತ್ತಾ ಪ್ರಾರ್ಥಿಸುತ್ತಿದೆ”-ಮೋದಿ ಅಟ್ಯಾಕ್‌

gold rate today
ಚಿನ್ನದ ದರ17 mins ago

Gold Rate Today: ನಿನ್ನೆ ಇಳಿದ ಚಿನ್ನದ ಬೆಲೆ ಇಂದು ತೀವ್ರ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ದರಗಳು ಹೀಗಿವೆ

Self Harming
ಕಲಬುರಗಿ20 mins ago

Self Harming : ಕಲಬುರಗಿಯಲ್ಲಿ ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Bhoomi Shetty African braids Look style
ಸಿನಿಮಾ35 mins ago

Bhoomi Shetty: ಆಫ್ರಿಕನ್‌ ಲುಕ್‌ನಲ್ಲಿ ನಮ್ಮ ʻಕಿನ್ನರಿʼ ನಟಿ! ಈ ಚೇಂಜ್‌ ಹೇಗನಿಸುತ್ತೆ ನಿಮಗೆ?

prajwal revanna case lookout notice
ಕ್ರೈಂ40 mins ago

Prajwal Revanna Case: ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

School Jobs Scam
Lok Sabha Election 202448 mins ago

School Jobs Scam: ಶಾಲಾ ನೇಮಕಾತಿ ಹಗರಣದ ಬಗ್ಗೆ ಟಿಎಂಸಿಗೆ ತಿಳಿದಿತ್ತು; ಹಿರಿಯ ನಾಯಕ ಕುನಾಲ್ ಘೋಷ್ ಆರೋಪ

elephant attack
ಬೆಂಗಳೂರು ಗ್ರಾಮಾಂತರ48 mins ago

Elephant attack : ಜಮೀನಿಗೆ ತೆರಳಿದ್ದ ರೈತನ ಅಟ್ಟಾಡಿಸಿ ಕೊಂದ ಒಂಟಿ ಸಲಗ

Delhi Lieutenant Governor
ದೇಶ58 mins ago

Delhi Lieutenant Governor: ದೆಹಲಿಯ DCW ಗುತ್ತಿಗೆ ನೌಕರರಿಗೆ ಬಿಗ್‌ ಶಾಕ್‌; 220ಕ್ಕೂ ಹೆಚ್ಚು ನೌಕರರು ವಜಾ

Prajwal Revanna Case Application seeking exemption from appearing before SIT rejected
ಕ್ರೈಂ1 hour ago

Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌