ಉಕ್ರೇನ್‌ ಮೇಲೆ ಅನುಕಂಪ, ರಷ್ಯಾ ಸ್ನೇಹಕ್ಕೆ ಧಕ್ಕೆಯಿಲ್ಲ: ಮೋದಿ-ಬೈಡೆನ್‌ ಸಭೆ Updates - Vistara News

ವಿದೇಶ

ಉಕ್ರೇನ್‌ ಮೇಲೆ ಅನುಕಂಪ, ರಷ್ಯಾ ಸ್ನೇಹಕ್ಕೆ ಧಕ್ಕೆಯಿಲ್ಲ: ಮೋದಿ-ಬೈಡೆನ್‌ ಸಭೆ Updates

ರಷ್ಯಾ ವಿರುದ್ಧ ನೇರವಾಗಿ ನಿಲುವು ವ್ಯಕ್ತಪಡಿಸಲು ಭಾರತದ ಮನವೊಲಿಸುವ ಪ್ರಯತ್ನವನ್ನು ಅಮೆರಿಕ ನಡೆಸಿದೆಯಾದರೂ ಭಾರತವು ತನ್ನ ನಿಲುವನ್ನು ಬದಲಾಯಿಸಿಕೊಂಡಿಲ್ಲ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉಕ್ರೇನ್‌ ಹಾಗೂ ರಷ್ಯಾ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಹಾಗೂ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ (Joe Biden) ನಡುವೆ ಮಹತ್ವದ ವರ್ಚುವಲ್‌ ಮಾತುಕತೆ ನಡೆದಿದ್ದು, ಭಾರತ ತನ್ನ ನಿಲುವನ್ನು ಹಾಗೆಯೇ ಉಳಿಸಿಕೊಂಡಿದೆ.

ಪ್ರಧಾನಿ ಮೋದಿ ಮಾತನಾಡಿ, ಉಕ್ರೇನ್‌ನಲ್ಲಿ(Ukraine) ನಡೆಯುತ್ತಿರುವ ನಾಗರಿಕರ ಹತ್ಯೆಯನ್ನು ಬಲವಾಗಿ ಖಂಡಿಸುವುದಾಗಿ ಹೇಳಿದರು. ಇತ್ತೀಚೆಗೆ ಬೂಚಾ(Bucha) ನಗರದ ಹತ್ಯಾಕಾಂಡವೂ ಸೇರಿ ಎಲ್ಲ ನಾಗರಿಕ ಹತ್ಯೆಗಳನ್ನೂ ಬಲವಾಗಿ ಖಂಡಿಸುತ್ತೇವೆ. ಈ ಹತ್ಯೆಗಳ ಕುರಿತು ಸ್ವತಂತ್ರ ತನಿಖೆ ನಡೆಯಬೇಕು ಎಂಬ ಮಾತಿಗೆ ಈಗಲೂ ಬದ್ಧವಾಗಿದ್ದೇವೆ ಎಂದು ಪುನರುಚ್ಛರಿಸಿದರು. ರಷ್ಯಾ ಹಾಗೂ ಉಕ್ರೇನ್‌ ನಡುವೆ ನೇರ ಮಾತುಕತೆಗಳು ನಡೆದು ಸಮಸ್ಯೆ ಬಗೆಹರಿಯುತ್ತದೆ ಎಂಬ ವಿಶ್ವಾಸವಿದೆ ಎಂದರು.

ಎರಡು ಪ್ರಜಾಪ್ರಭುತ್ವ ದೇಶಗಳು ಪರಸ್ಪರ ಉತ್ತಮ ಸಂಬಂಧಗಳನ್ನು ಹಾಗೂ ಸಂವಾದಗಳನ್ನು ಮುಂದುವರಿಸಬೇಕು ಎಂಬ ಆಶಯದೊಂದಿಗೆ ಬೈಡೆನ್‌ ತಮ್ಮ ಮಾತನ್ನು ಆರಂಭಿಸಿದರು. ಉಕ್ರೇನ್‌ಗೆ ಭಾರತ ಒದಗಿಸುತ್ತಿರುವ ಮಾನವೀಯ ನೆರವಿಗಾಗಿ ಅಭಿನಂದನೆ ಸಲ್ಲಿಸುತ್ತೇನೆ. ರಷ್ಯಾ ಯುದ್ಧದಿಂದಾಗಿ ಆಗುತ್ತಿರುವ ಅಸ್ಥಿರತೆಗಳನ್ನು ನಿರ್ವಹಣೆ ಮಾಡಲು ಭಾರತ ಹಾಗೂ ಅಮೆರಿಕ ಸಂವಾದಗಳು ಮುಂದುವರಿಯುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಶ್ವೇತಭವನ ವಕ್ತಾರರು ಪ್ರಶ್ನೆಗಳಿಗೆ ಉತ್ತರಿಸಿದರು. ಭಾರತವು ರಷ್ಯಾ ವಿರುದ್ಧ ನಿಲುವು ತಳೆಯಲು ಒತ್ತಡ ಹೇರಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇತ್ತೀಚಿನ ದಿನಗಳಲ್ಲಿ ಭಾರತವು ಅನೇಕ ದೃಢ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ನಾಗರಿಕರ ಹತ್ಯೆಗಳನ್ನು ಖಂಡಿಸಿದೆ ಹಾಗೂ ಸ್ವತಂತ್ರ ತನಿಖೆಗೆ ಬೆಂಬಲ ನೀಡಿದೆ. ಔಷಧ, ಇನ್ನಿತರೆ ವಸ್ತುಗಳು ಸೇರಿ ಉಕ್ರೇನ್‌ಗೆ ಅನೇಕ ನೆರವನ್ನೂ ಭಾರತ ನೀಡುತ್ತಿದೆ. ಭಾರತವು ತನ್ನ ನಿರ್ಧಾರವನ್ನು ತಾನೇ ಕೈಗೊಳ್ಳುತ್ತದೆ. ಆದರೆ ನಾವು ಸಂವಾದವನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.

ಅಂದರೆ ರಷ್ಯಾ ವಿರುದ್ಧ ನೇರವಾಗಿ ನಿಲುವು ವ್ಯಕ್ತಪಡಿಸಲು ಮನವೊಲಿಸುವ ಪ್ರಯತ್ನವನ್ನು ಅಮೆರಿಕ ನಡೆಸಿದೆಯಾದರೂ ಭಾರತವು ತನ್ನ ನಿಲುವನ್ನು ಬದಲಾಯಿಸಿಕೊಂಡಿಲ್ಲ. ಆದರೆ ಉಕ್ರೇನ್‌ನಲ್ಲಿನ ನಾಗರಿಕರ ಹತ್ಯೆಗಳನ್ನು ಖಂಡಿಸುವಲ್ಲಿ ಹೆಚ್ಚಿನ ನಿಖರತೆ ಇರುವುದು ಅಮೆರಿಕಕ್ಕೆ ಅಲ್ಪಮಟ್ಟಿಗಿನ ಸಂತಸ ನೀಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಭಾರತ ತನ್ನ ನಿರ್ಧಾರ ಕೈಗೊಳ್ಳುತ್ತದೆ

ಭಾರತವು ತನ್ನ ಅಭಿಪ್ರಾಯವನ್ನು ನೇರಾನೇರ ವ್ಯಕ್ತಪಡಿಸಿದೆ ಎಂದಿರುವ ಶ್ವೇತಭವನದ(White House) ವಕ್ತಾರರು, ರಷ್ಯಾ ತನ್ನದೇ ಸಮಸ್ಯೆಗಳನ್ನು ಹೊಂದಿದೆ. ರಷ್ಯಾ ಹಾಗೂ ಚೀನಾ ಸಂಬಂಧದ ಕುರಿತೂ ಭಾರತ ತನ್ನದೇ ವಿಚಾರಗಳನ್ನು ಹೊಂದಿದೆ. ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಈಗಾಗಲೆ ಒತ್ತಡದ ಸ್ಥಿತಿ ಎದುರಿಸುತ್ತಿದೆ. ರಷ್ಯಾ ಹಾಗೂ ಚೀನಾದ ನಡುವೆ ಗಾಢವಾದ ಸಂಬಂಧಗಳು ಭಾರತಕ್ಕೆ ಎಂದು ಗೋಚರಿಸುತ್ತವೆಯೋ ಆಗ ಭಾರತದ ಆಲೋಚನೆಗಳ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಅಧ್ಯಕ್ಷ ಬೈಡೆನ್‌ ನಡುವಿನ ವರ್ಚುವಲ್‌ ಸಭೆಯ ನಂತರ ಎರಡೂ ದೇಶಗಳ ವಿದೇಶಾಂಗ ಹಾಗೂ ರಕ್ಷಣಾ ಸಚಿವರು ಪರಸ್ಪರ ಸಭೆಗಳನ್ನು ನಡೆಸಿದರು. ಯುದ್ಧವನ್ನು ಸ್ಥಗಿತಗೊಳಿಸುವಂತೆ ಎಲ್ಲ ದೇಶಗಳೂ ಒತ್ತಾಯ ಮಾಡಬೇಕು ಎಂಬ ವಿಚಾರವು ಅಮೆರಿಕ ಕಡೆಯಿಂದ ಈ ಸಭೆಗಳಲ್ಲೂ ಚರ್ಚೆ ಆಯಿತು ಎನ್ನಲಾಗಿದೆ.

ರಷ್ಯಾ ವಿರುದ್ಧ ಸ್ಪಷ್ಟವಾದ ನಿಲುವನ್ನು ಹೊಂದಬೇಕು ಹಾಗೂ ಆ ದೇಶವನ್ನು ವಿಶ್ವ ಸಮುದಾಯದಿಂದ ಏಕಾಂಗಿ ಮಾಡಬೇಕೆಂಭ ನಿಟ್ಟಿನಲ್ಲಿ ವಿಶ್ವಸಂಸ್ಥೆ ಹಂತದಲ್ಲಿ 10 ಪ್ರಸ್ತಾವನೆಗಳನ್ನು ಈಲ್ಲಿವರೆಗೆ ಮಂಡಿಸಲಾಗಿದೆ. ಅಮೆರಿಕ ಒತ್ತಾಸೆ ಮೇರೆಗೆ ಮಂಡಿಸಲಾದ ಈ ಎಲ್ಲ ಪ್ರಸ್ತಾವನೆಗಳಿಗೆ ಮತದಾನದ ಸಂದರ್ಭದಲ್ಲೂ ಭಾರತ ಗೈರು ಹಾಜರಾಗಿದೆ. ಇದು ಅಮೆರಿಕಕ್ಕೆ ಮುಜುಗರ ಉಂಟುಮಾಡಿದೆ. ಹಾಗಾಗಿ ಭಾರತ ತನ್ನ ನಿಲುವನ್ನು ಬದಲಾಯಿಸಿಕೊಳ್ಳಲು ಅಮೆರಿಕ ವಿವಿಧ ಮಾರ್ಗಗಳ ಮೂಲಕ ಒತ್ತಾಯ ಮಾಡುತ್ತಲೇ ಬಂದಿದೆ. ಅದರ ಮುಂದುವರಿದ ಭಾಗವೇ ಈ ವರ್ಚುವಲ್‌ ಸಭೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆದರೆ ರಷ್ಯಾದೊಂದಿಗೆ ಭಾರತದ ಸಂಬಂಧಗಳು ದಶಕಗಳಿಗೂ ಹಿಂದಿನಿಂದಲೂ ಗಾಢವಾಗಿದೆ. ಜತೆಗೆ, ರಷ್ಯಾವನ್ನು ಕಟ್ಟಿ ಹಾಕಲು ಉಕ್ರೇನ್‌ನಲ್ಲಿ ನ್ಯಾಟೊ ಪಡೆಗಳನ್ನು ನಿಯೋಜಿಸುವ ಹುನ್ನಾರದ ವಿರುದ್ಧ ರಷ್ಯಾ ಯುದ್ಧ ನಡೆಸುತ್ತಿರುವುದು ಭಾರತಕ್ಕೆ ತಿಳಿದಿದೆ. ತನ್ನ ಸುರಕ್ಷತೆಗಾಗಿ ರಷ್ಯಾ ನಡೆಸುತ್ತಿರುವ ಯುದ್ಧದ ಕುರಿತು ಭಾರತ ಪ್ರತಿಕ್ರಿಯೆ ನೀಡಿಲ್ಲ. ಆದರೆ ಉಕ್ರೇನ್‌ನಲ್ಲಿ ನಾಗರಿಕರ ಮೇಲಿನ ದಾಳಿ ಹಾಗೂ ಹತ್ಯಾಕಾಂಡವನ್ನು ಬಲವಾಗಿ ಖಂಡಿಸಿದೆ.

ಸಭೆಯ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಶ್ವೇತ ಭವನ, Covid-19 ಎದುರಿಸುವುದು, ಜಾಗತಿಕ ಆಹಾರ ಸುರಕ್ಷತೆ ಸೇರಿ ಅನೇಕ ವಿಚಾರಗಳಲ್ಲಿ ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ, ಎಲ್ಲ ದೇಶಗಳ ಸಾರ್ವಭೌಮತೆಯನ್ನು ಗೌರವಿಸಬೇಕೆಂಬುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಉಕ್ರೇನ್‌ ಮೇಲಿನ ರಷ್ಯಾ ದಾಳಿಯಿಂದಾಗಿ ವಿಶ್ವದ ಆಹಾರ ಸರಬರಾಜು ವ್ಯವಸ್ಥೆ ಮೇಲೆ ಆಗುತ್ತಿರುವ ವ್ಯತಿರಿಕ್ತ ಪರಿಣಾಮಗಳನ್ನು ಚರ್ಚೆ ನಡೆಸಿದ್ದಾರೆ. ಮುಂದಿನ ತಿಂಗಳು 24ರಂದು ಟೋಕಿಯೋದಲ್ಲಿ ನಡೆಯಲಿರುವ ಕ್ವಾಡ್‌ ಸಮ್ಮೇಳನದಲ್ಲಿ ಮೋದಿ ಹಾಗೂ ಬೈಡೆನ್‌ ಮುಖಾಮುಖಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.

ಹೆಚ್ಚಿನ ಓದಿಗಾಗಿ: ಭಾರತದ ಸುತ್ತ ಚೀನಾ ಸಾಲದ ಸುಳಿ: ಭೌಗೋಳಿಕ ರಾಜಕೀಯ ಹಿಡಿತಕ್ಕೆ ಹೊಸ ಮಾರ್ಗ

ಕನ್ನಡಿಗ ನವೀನ್‌ ನೆನಪು

ಉಕ್ರೇನ್‌ನಲ್ಲಿನ ನಾಗರಿಕರ ಹತ್ಯೆಗಳನ್ನು ಖಂಡಿಸಿದ ಪ್ರಧಾನಿ ಮೋದಿ, ಯುದ್ಧಗ್ರಸ್ಥ ಪ್ರದೇಶಗಳಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದನ್ನು ಸ್ಮರಿಸಿದರು. ಅವರುಗಳನ್ನು ಭಾರತಕ್ಕೆ ವಾಪಸ್‌ ಕರೆತರಲು ಸಾಕಷ್ಟು ಶ್ರಮ ವಹಿಸಲಾಯಿತು, ಅದರಲ್ಲಿ ಸಫಲವೂ ಆದೆವು. ಆದರೆ ಇಷ್ಟೆಲ್ಲ ಪ್ರಯತ್ನದ ನಡುವೆ ಒಬ್ಬ ಭಾರತೀಯ ವಿದ್ಯಾರ್ಥಿ ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ಮೋದಿ ಬೇಸರ ವ್ಯಕ್ತಪಡಿಸಿದರು. ರಷ್ಯಾ ಬಾಂಬ್‌ ದಾಳಿಗೆ ಕರ್ನಾಟಕದ ಹಾವೇರಿ ಮೂಲದ, ಉಕ್ರೇನ್‌ನಲ್ಲಿ MBBS ವ್ಯಾಸಂಗ ಮಾಡುತ್ತಿದ್ದ ನವೀನ್‌ ಗ್ಯಾನಗೌಡ್ರ ಮೃತಪಟ್ಟಿದ್ದರು. ನಂತರ ಭಾರತದ ವಿದೇಶಾಂಗ ಇಲಾಖೆ ಹಾಗೂ ಕರ್ನಾಟಕ ಸರ್ಕಾರದ ಪ್ರಯತ್ನದಿಂದ ನವೀನ್‌ ಮೃತದೇಹವನ್ನು ತರಲಾಗಿತ್ತು. ಕರ್ನಾಟಕ ಸೇರಿ ಇಡೀ ದೇಶವೇ ನವೀನ್‌ ಸಾವಿಗೆ ಕಂಬನಿ ಮಿಡಿದಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Danesh Palyani: ಪಾಕಿಸ್ತಾನದ ಪ್ರಮುಖ ಹಿಂದು ನಾಯಕರೂ ಆಗಿರುವ ದಾನೇಶ್‌ ಕುಮಾರ್‌ ಪಲ್ಯಾನಿ ಅವರು, ಪಾಕ್‌ನಲ್ಲಿ ಹೇಗೆ ಹಿಂದು ಯುವತಿಯರನ್ನು ಹೇಗೆ ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ, ಹೇಗೆ ಮುಸ್ಲಿಮರು ದೌರ್ಜನ್ಯ ಎಸಗುತ್ತಿದ್ದಾರೆ ಎಂಬುದರ ಕುರಿತು ಸಂಸತ್‌ನಲ್ಲಿಯೇ ಬೆಳಕು ಚೆಲ್ಲಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Danesh Palyani
Koo

ಇಸ್ಲಾಮಾಬಾದ್:‌ ಪಾಕಿಸ್ತಾನದಲ್ಲಿ (Pakistan) ಹಿಂದುಗಳನ್ನು, ಹಿಂದು ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡುವ ಹೀನ ಕೃತ್ಯವು ಮೊದಲಿನಿಂದಲೂ ನಡೆಯುತ್ತಿದೆ. ಭಾರತ ಹಾಗೂ ಪಾಕಿಸ್ತಾನ ವಿಭಾಜನೆಯಾದಾಗಿನಿಂದಲೂ ಮುಸ್ಲಿಮರು ಮತಾಂತರಗೊಳಿಸಿದ ಕಾರಣ ನೆರೆ ರಾಷ್ಟ್ರದಲ್ಲಿ ಹಿಂದುಗಳ ಸಂಖ್ಯೆಯು ಗಣನೀಯವಾಗಿ ಕುಸಿದಿದೆ. ಪಾಕಿಸ್ತಾನದ ಹಿಂದು ಸಂಸದ, ಹಿಂದುಗಳ ನಾಯಕರೂ ಆದ ದಾನೇಶ್‌ ಕುಮಾರ್‌ ಪಲ್ಯಾನಿ (Danesh Kumar Palyani) ಅವರೀಗ ಹಿಂದು ಯುವತಿಯರನ್ನು ಹೇಗೆ ಬಲವಂತವಾಗಿ ಮತಾಂತರ (Conversion) ಮಾಡಲಾಗುತ್ತಿದೆ ಎಂಬುದನ್ನು ಸಂಸತ್‌ನಲ್ಲಿಯೇ ಬಹಿರಂಗಪಡಿಸಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಸಂಸತ್‌ನಲ್ಲಿ ಮಾತನಾಡಿದ ದಾನೇಶ್‌ ಕುಮಾರ್‌ ಪಲ್ಯಾನಿ, “ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಮಾನವ ಹಕ್ಕುಗಳ ಧಕ್ಕೆಯಾಗುತ್ತಿದೆ. ಅದರಲ್ಲೂ, ಹಿಂದು ಯುವತಿಯರನ್ನು ಮುಸ್ಲಿಮರು ಬಲವಂತವಾಗಿ ಮತಾಂತರ ಮಾಡುತ್ತಿದ್ದಾರೆ. ಹಿಂದು ಯುವತಿಯನ್ನು ಅಪಹರಣ ಮಾಡಿ, ಬಳಿಕ ಅವರನ್ನು ಇಸ್ಲಾಂಗೆ ಮತಾಂತರಗೊಳಿಸಲಾಗುತ್ತಿದೆ. ಪಾಕಿಸ್ತಾನವು ಹಿಂದುಗಳನ್ನು ಬಲವಂತವಾಗಿ ಮಾತನಾಡಬಾರದು ಎಂಬ ಹಕ್ಕು ನೀಡಿದೆ. ಆದರೆ, ಸಿಂಧ್‌ ಪ್ರಾಂತ್ಯದಲ್ಲಿ ಹಿಂದುಗಳ ಸ್ಥಿತಿಯು ದುಸ್ಥರವಾಗಿದೆ” ಎಂದು ಹೇಳಿದ್ದಾರೆ.

“ಬಲವಂತವಾಗಿ ಧರ್ಮವನ್ನು ಹೇರಬಾರದು ಎಂಬುದಾಗಿ ಕುರಾನ್‌ ಕೂಡ ಹೇಳುತ್ತದೆ. ನಿಮ್ಮ ಧರ್ಮ ನಿಮ್ಮದು, ನಮ್ಮ ಧರ್ಮ ನಮ್ಮದು ಎಂಬ ಸಂದೇಶ ಸಾರಲಾಗಿದೆ. ಆದರೆ, ಇಸ್ಲಾಂ ಧರ್ಮದ ದುಷ್ಕರ್ಮಿಗಳು ಪಾಕಿಸ್ತಾನದ ಸಂವಿಧಾನವನ್ನೂ ನಂಬಲ್ಲ, ಕುರಾನ್‌ ಷರೀಫ್‌ಅನ್ನು ಕೂಡ ನಂಬುವುದಿಲ್ಲ. ಇದರಿಂದಾಗಿ ಪಾಕಿಸ್ತಾನದಲ್ಲಿ ಹಿಂದು ಯುವತಿಯರು ಬಲವಂತವಾಗಿ ತಮ್ಮ ಧರ್ಮವನ್ನು ಬದಲಾಯಿಸಬೇಕಾಗಿದೆ. ಪ್ರಿಯಾ ಕುಮಾರಿ ಎಂಬ ಯುವತಿಯನ್ನು ಅಪಹರಿಸಿ ಎರಡು ವರ್ಷಗಳೇ ಕಳೆದಿವೆ. ಆದರೂ, ಸರ್ಕಾರ ಇಂತಹ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ” ಎಂದು ದೂರಿದರು.

“ಪಾಕಿಸ್ತಾನದ ಸಂವಿಧಾನವಾಗಲಿ, ಪವಿತ್ರ ಕುರಾನ್‌ ಆಗಲಿ ಬಲವಂತದ ಮತದಾನವನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಹೀಗಿದ್ದರೂ, ನಮ್ಮ ಮಾತೃಭೂಮಿಯಾದ ಪಾಕಿಸ್ತಾನದ ಘನತೆಗೆ ದುಷ್ಕರ್ಮಿಗಳು ಧಕ್ಕೆ ತರುತ್ತಿದ್ದಾರೆ. ಇಂತಹವರ ವಿರುದ್ಧ ಪಾಕಿಸ್ತಾನ ಸರ್ಕಾರವು ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂಬುದಾಗಿ ಆಗ್ರಹಿಸಿದ್ದಾರೆ. ಪಾಕಿಸ್ತಾನದಲ್ಲಿ ಬಲವಂತದ ಮತಾಂತರ, ಯುವತಿಯರ ಅಪಹರಣ, ಮಕ್ಕಳ ಕಳ್ಳ ಸಾಗಣೆ, ಬಾಲ್ಯ ವಿವಾಹದಂತಹ ಸಮಸ್ಯೆಗಳು ತಲೆದೋರಿರುವ ಕುರಿತು ಕೆಲ ದಿನಗಳ ಹಿಂದಷ್ಟೇ ವಿಶ್ವಸಂಸ್ಥೆಯು ಕಳವಳ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: Forced Conversion : ಮಹಿಳೆಯ ಖಾಸಗಿ ವಿಡಿಯೊ ಮಾಡಿ, ಇಸ್ಲಾಂಗೆ ಮತಾಂತರ ಮಾಡಲು ಯತ್ನಿಸಿದ ನೀಚ ದಂಪತಿ

Continue Reading

ಕರ್ನಾಟಕ

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

Prajwal Revanna: ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ, ಅಲ್ಲಿಯೇ ಆಶ್ರಯ ಪಡೆದಿದ್ದಾರೆ. ಎಸ್‌ಐಟಿ ವಿಚಾರಣೆಗೆ ಹಾಜರಾಗದೆ, ಭಾರತಕ್ಕೆ ವಾಪಸಾಗದೆ ಅಲ್ಲಿಯೇ ಅವರು ತಲೆಮರೆಸಿಕೊಂಡಿದ್ದರೆ, ಅವರ ಕಾರು ಓಡಿಸಿಕೊಂಡಿದ್ದ ಕಾರ್ತಿಕ್‌ ಮಲೇಷ್ಯಾದಲ್ಲಿ ಮಜಾ ಮಾಡುತ್ತಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ಅವರು ಕಾರ್ತಿಕ್‌ ಬಗ್ಗೆ ಹೇಳಿಕೆ ನೀಡಿದ ಬಳಿಕವಂತೂ ಹಲವು ಚರ್ಚೆಗಳು ನಡೆಯುತ್ತಿವೆ.

VISTARANEWS.COM


on

Prajwal Revanna
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರ ಕಾಮಕೇಳಿಯ ವಿಡಿಯೊಗಳು ಬಹಿರಂಗವಾದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಪೆನ್‌ಡ್ರೈವ್‌ ಪ್ರಕರಣವು (Pen Drive Case) ಕರ್ನಾಟಕದಲ್ಲಿ (Karnataka) ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ತಂದರೆ, ಕಾಂಗ್ರೆಸ್‌ಗೆ ಅಸ್ತ್ರವಾಗಿದೆ. ಇದರ ಬೆನ್ನಲ್ಲೇ, ಪ್ರಜ್ವಲ್‌ ರೇವಣ್ಣ ಜರ್ಮನಿಯಲ್ಲಿ ಅಜ್ಞಾತವಾಸ ಅನುಭವಿಸುತ್ತಿದ್ದರೆ, ವಿಡಿಯೊ, ಫೋಟೊಗಳು ಎಲ್ಲೆಡೆ ಹರಡಲು ಕಾರಣರಾದ ಮಾಜಿ ಚಾಲಕ ಕಾರ್ತಿಕ್‌ ಮಲೇಷ್ಯಾದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್‌ ಅಜ್ಞಾತಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿ, ಕೆಲ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲ್ಲೇ, “ಕಾರ್ತಿಕ್‌ನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು” ಎಂಬುದಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಇದರೊಂದಿಗೆ ಕಾರ್ತಿಕ್‌ ಮಲೇಷ್ಯಾಗೆ ತೆರಳಿದ್ದು ದೃಢಪಟ್ಟಿದ್ದು, ಕಾರು ಚಾಲಕನೊಬ್ಬ ಮಲೇಷ್ಯಾದಲ್ಲಿ ಕಾಲ ಕಳೆಯುವುದು, ಅಲ್ಲಿಯೇ ಹಾಲಿಡೇಸ್‌ ಎಂಜಾಯ್‌ ಮಾಡುವುದು ಹೇಗೆ ಸಾಧ್ಯ ಎಂಬ ಪ್ರಶ್ನೆಗಳು ಮೂಡಿವೆ.

ಪ್ರಜ್ವಲ್‌ ರೇವಣ್ಣ ಲೈಂಗಿಕ ಶೋಷಣೆ ಮಾಡಿರುವ ಕುರಿತು ಪ್ರಕರಣ ದಾಖಲಿಸಲಾಗಿದ್ದು, ತನಿಖೆಗೆ ಎಸ್‌ಐಟಿ ರಚಿಸಲಾಗಿದೆ. ಇನ್ನು ಸಾವಿರಾರು ಅಶ್ಲೀಲ ವಿಡಿಯೊಗಳಿರುವ ಪೆನ್‌ಡ್ರೈವ್‌ ಎಲ್ಲೆಂದರಲ್ಲಿ ಸಿಕ್ಕಿರುವುದು ಹಲವು ಅನುಮಾನ ಮೂಡಿಸಿವೆ. ಇದರ ಮಧ್ಯೆಯೇ, ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ, ಅಲ್ಲಿಯೇ ಆಶ್ರಯ ಪಡೆದಿದ್ದಾರೆ. ಎಸ್‌ಐಟಿ ವಿಚಾರಣೆಗೆ ಹಾಜರಾಗದೆ, ಭಾರತಕ್ಕೆ ವಾಪಸಾಗದೆ ಅಲ್ಲಿಯೇ ಅವರು ತಲೆಮರೆಸಿಕೊಂಡಿದ್ದರೆ, ಅವರ ಕಾರು ಓಡಿಸಿಕೊಂಡಿದ್ದ ಕಾರ್ತಿಕ್‌ ಮಲೇಷ್ಯಾದಲ್ಲಿ ಮಜಾ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದು ಈಗ ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಕಾರ್ತಿಕ್‌ ಬಗ್ಗೆ ಎಚ್‌ಡಿಕೆ ಸಿಡಿಮಿಡಿ

ಬೆಂಗಳೂರಿನ ಪದ್ಮನಾಭನಗರದ ನಿವಾಸದ ಗೇಟ್‌ ಮುಂಭಾಗದಲ್ಲಿ ಪ್ರಕರಣದ ಬಗ್ಗೆ ಪ್ರಶ್ನಿಸಿದ ಮಾಧ್ಯಮಗಳ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಗರಂ ಆದರು. ಪದೇಪದೇ ಏನು ಕೇಳುತ್ತೀರಿ, ನಿಮಗೆ ಏನು ಕೆಲಸ, ಇಲ್ಲಿ ಯಾಕೆ ಬಂದಿದ್ದೀರಾ? ಸುದ್ದಿ ಬಿಡುವವರ ಜತೆ ಹೋಗಿ ಎಂದು ಕಿಡಿಕಾರಿದರು. ನಿನ್ನೆ ಡ್ರೈವರ್ ಒಬ್ಬ ವಿಡಿಯೋ ಮಾಡಿ ಹೇಳಿದನಲ್ಲಾ? ಯಾರು ಆ ವಿಡಿಯೊ ಮಾಡಿದ್ದು? ಇಲ್ಲಿ ಚಿಲ್ಲರೆ ಅಣ್ಣ ತಮ್ಮ ಇದ್ದಾರಲ್ಲವೇ? ಅವರು ಏನ್ ಹೇಳಿದರು? ಕುಮಾರಸ್ವಾಮಿ ಬಿಟ್ಟಿದ್ದು ಎನ್ನುತ್ತಾರೆ. ಡ್ರೈವರ್ ಕಾರ್ತಿಕ್ ಎಲ್ಲಿದ್ದಾನೆ ಈಗ? ಮಲೇಷ್ಯಾದಲ್ಲಿ ಇದಾನೆ, ಆತನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು ಎಂದು ಪ್ರಶ್ನಿಸಿದರು.

ಆ ಡ್ರೈವರ್‌ ಕಾರ್ತಿಕ್ ಏನು ಹೇಳಿಕೆ ಕೊಟ್ಟಾ? ದೇವರಾಜೇಗೌಡ ಕೈಯಲ್ಲಿ ಪೆನ್ ಡ್ರೈವ್ ಕೊಟ್ಟಿದ್ದೆ ಅಂತ ಹೇಳಿದ್ದ. ಇಂದು ಬೆಳಗ್ಗೆ ಈ ಚಿಲ್ಲರೆ ಅಣ್ಣ ತಮ್ಮ ಇದಾರಲ್ವಾ (ಡಿಕೆಶಿ ಹಾಗೂ ಡಿ.ಕೆ ಸುರೇಶ್), ಕುಮಾರಸ್ವಾಮಿನೇ ಬಿಟ್ಟಿರಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿಯನ್ನು ಈ ಮೊದಲು ದೇವರಾಜೇಗೌಡ ಭೇಟಿಯಾಗಿದ್ದ ಎಂದು ಈ 420ಗಳು ಹೇಳಿದ್ದಾರೆ. ಹಾಗಾದರೆ ಎಲ್ಲಿದ್ದಾನೆ ಈ ಕಾರ್ತಿಕ್? ಯಾರು ಕಳುಹಿಸಿದರು? ಎಲ್ಲಿಂದ ವಿಡಿಯೋ ಮಾಡಿ ಬಿಟ್ಟದ್ದಾನೆ, ಅದನ್ನು ಮೊದಲು ತಿಳಿದುಕೊಳ್ಳಿ. ನನ್ನ ಕೆಣಕಿದ್ದಾರೆ, ಸುಮ್ಮನೆ ಬಿಡಲ್ಲ ನಾನು ಎಂದು ಡಿಕೆ ಬ್ರದರ್ಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Prajwal Revanna Case: ಸಿಂಗಾಪುರ ಮಾಧ್ಯಮಗಳಲ್ಲೂ ಪ್ರಜ್ವಲ್‌ ರೇವಣ್ಣ ಕೇಸ್‌ ಸದ್ದು!

Continue Reading

ದೇಶ

ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

ಕಾಲೇಜು ವಿದ್ಯಾರ್ಥಿನಿಯಾಗಿರುವ ಆಯೇಷಾ ರೆಶಾನ್‌ ಅವರು ಕಳೆದ 10 ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದರು. ಅವರಿಗೆ ಹಾರ್ಟ್‌ ಪಂಪ್‌ ಡಿವೈಸ್‌ ಅಳವಡಿಸಬೇಕಾಗಿತ್ತು. ಇದಕ್ಕಾಗಿ ಅವರು ತಮಿಳುನಾಡಿಗೆ ಆಗಮಿಸಿದ್ದರು. ಚೆನ್ನೈನಲ್ಲಿ ಅವರಿಗೆ ಬೇರೆ ವ್ಯಕ್ತಿಯ ಹೃದಯವನ್ನು ಕಸಿ ಮಾಡಲಾಗಿತ್ತು. ಇದಾದ ಬಳಿಕ ಆಯೇಷಾ, ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದರು.

VISTARANEWS.COM


on

Pakistan Teen
Koo

ಇಸ್ಲಾಮಾಬಾದ್:‌ ಜಗತ್ತಿನ ಯಾವುದೇ ಧರ್ಮಗಳು, ಧರ್ಮ ಗ್ರಂಥಗಳು ಹಿಂಸೆ, ದ್ವೇಷವನ್ನು ಬೆಂಬಲಿಸುವುದಿಲ್ಲ. ಶಾಂತಿ, ಸಹಬಾಳ್ವೆ, ಮಾನವೀಯತೆಯನ್ನೇ ಪ್ರತಿಯೊಂದು ಧರ್ಮವು ಬೋಧಿಸುತ್ತದೆ. ಆದರೆ, ಧರ್ಮಪಾಲಕರ ಎಡವಟ್ಟುಗಳಿಂದಾಗಿ ಧರ್ಮಗಳ ಸಾರಕ್ಕೇ ಕೆಲವೊಮ್ಮೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಪಾಕಿಸ್ತಾನದಿಂದ (Pakistan) ಭಾರತಕ್ಕೆ ಬಂದು, ಚೆನ್ನೈ ಆಸ್ಪತ್ರೆಯಲ್ಲಿ ಹೃದಯದ ಕಸಿ ಮಾಡಿಸಿಕೊಂಡ ಪಾಕಿಸ್ತಾನದ ಯುವತಿಯೊಬ್ಬಳನ್ನು ಅಲ್ಲಿನ ಧರ್ಮಗುರುವೊಬ್ಬ (Pakistani Imam) ಟೀಕಿಸಿದ್ದಾನೆ.

ಯುವತಿಯು ಹೃದಯದ ಕಸಿ ಮಾಡಿಸಿಕೊಂಡಿರುವ ಯುಟ್ಯೂಬರ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಮಾಮ್‌, “ಯುವತಿಗೆ ಹೃದಯ ದಾನ ಮಾಡಿದವನು ಸತ್ತಿದ್ದಾನೆ. ಅವನು ಖಂಡಿತವಾಗಿಯೂ ನಾಸ್ತಿಕನೇ ಆಗಿರುತ್ತಾನೆ. ಅಂತಹ ಹಿಂದುವಿನ ಹೃದಯವನ್ನು ಕಸಿ ಮಾಡಿಸಿಕೊಂಡು ಬಂದ ಪಾಕಿಸ್ತಾನದ ಯುವತಿಯ ಧೈರ್ಯವನ್ನು ಮೆಚ್ಚಬೇಕು. ಆದರೆ, ಹಿಂದುವಿನ ಹೃದಯ ಹೊಂದಿರುವ ಆಯೇಷಾ ಈಗ ಅಲ್ಲಾನ ಎದುರು ತಲೆ ಬಾಗಿ ನಿಲ್ಲಬೇಕು. ಆಗ ಆಕೆಯ ಧೈರ್ಯವನ್ನು ಮೆಚ್ಚುತ್ತೇನೆ” ಎಂಬುದಾಗಿ ಇಮಾಮ್‌ ಹೇಳಿದ್ದಾನೆ. “ಮುಸ್ಲಿಮರು ಅಂಗಾಂಗ ಹಾಗೂ ರಕ್ತವನ್ನು ದಾನ ಮಾಡುವುದು ತಪ್ಪು” ಎಂದು ಕೂಡ ಹೇಳಿದ್ದಾನೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದ್ದು, ಇಮಾಮ್‌ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೃದಯದ ಸಮಸ್ಯೆಯಿಂದಾಗಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಆಯೇಷಾ ರೆಶಾನ್‌ (19) ಎಂಬ ಯುವತಿಗೆ ಚೆನ್ನೈನಲ್ಲಿರುವ ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆ ವೈದ್ಯರು ಉಚಿತವಾಗಿ ಹೃದಯದ ಕಸಿ ಮಾಡುವ ಮೂಲಕ ನೆರೆ ರಾಷ್ಟ್ರದ ಯುವತಿಯ ಬಾಳಿಗೆ ಬೆಳಕಾಗಿದ್ದಾರೆ. ಭಾರತೀಯರೊಬ್ಬರ ಹೃದಯವನ್ನು ಪಾಕಿಸ್ತಾನದ ಯುವತಿಗೆ ಕಸಿ ಮಾಡುವ ಮೂಲಕ, ಆಕೆ ಮತ್ತೆ ಬದುಕು ಕಟ್ಟಿಕೊಳ್ಳಲು ಅಪೂರ್ವ ಅವಕಾಶ ನೀಡುವ ಮೂಲಕ ಔದಾರ್ಯ ಮೆರೆದಿದ್ದಾರೆ. ಇದಕ್ಕಾಗಿ ಆಯೇಷಾ ರೆಶಾನ್‌ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಆಯೇಷಾ ರೆಶಾನ್‌ಗೆ ಏನಾಗಿತ್ತು?

ಕಾಲೇಜು ವಿದ್ಯಾರ್ಥಿನಿಯಾಗಿರುವ ಆಯೇಷಾ ರೆಶಾನ್‌ ಅವರು ಕಳೆದ 10 ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದರು. ಅವರಿಗೆ ಹಾರ್ಟ್‌ ಪಂಪ್‌ ಡಿವೈಸ್‌ ಅಳವಡಿಸಬೇಕಾಗಿತ್ತು. ಇದಕ್ಕಾಗಿ ಅವರು ತಮಿಳುನಾಡಿಗೆ ಆಗಮಿಸಿದ್ದರು. ಆದರೆ, ಹಾರ್ಟ್‌ ಪಂಪ್‌ ಅಳವಡಿಸಿದ ಬಳಿಕ ಶಸ್ತ್ರಚಿಕಿತ್ಸೆಯು ವಿಫಲವಾಗಿತ್ತು. ಇದರಿಂದಾಗಿ ಆಯೇಷಾ ರೆಶಾನ್‌ ಅವರ ಪ್ರಾಣಕ್ಕೆ ಕುತ್ತು ಬಂದಿತ್ತು. ಆಗ, ಆಸ್ಪತ್ರೆಯ ಸರ್ಜನ್‌ಗಳು ದಾನಿಯೊಬ್ಬರ ಹೃದಯವನ್ನು ಆಯೇಷಾ ರೆಷಾನ್‌ ಅವರಿಗೆ ಅಳವಡಿಸುವ ಮೂಲಕ ಆಕೆಯ ಪ್ರಾಣ ಉಳಿಸಿದ್ದಾರೆ.

ಹೃದಯದ ಕಸಿ ಮಾಡಲು ಸುಮಾರು 35 ಲಕ್ಷ ರೂ. ಖರ್ಚಾಗುತ್ತದೆ. ಆದರೆ, ಚೆನ್ನೈನ ಐಶ್ವರ್ಯನ್‌ ಟ್ರಸ್ಟ್‌ ಹಾಗೂ ಆಸ್ಪತ್ರೆ ವೈದ್ಯರೇ ಖರ್ಚು ಭರಿಸಿ, ಉಚಿತವಾಗಿ ಕಸಿ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ದೆಹಲಿ ಮೂಲದ ದಾನಿಯಿಂದ ಹೃದಯ ಪಡೆದ ವೈದ್ಯರು, ಆಯೇಷಾಗೆ ಅಳವಡಿಸಿದ್ದಾರೆ. “ಹೃದಯ ಕಸಿ ಬಳಿಕ ನಾನೀಗ ಆರೋಗ್ಯದಿಂದ ಇದ್ದೇನೆ. ಚೆನ್ನೈ ವೈದ್ಯರಿಂದಾಗಿ ನಾನು ಉಸಿರಾಡುತ್ತಿದ್ದೇನೆ. ನನ್ನ ಜೀವ ಉಳಿಸಿದ ವೈದ್ಯರಿಗೆ ಕೃತಜ್ಞತೆಗಳು. ಪಾಕಿಸ್ತಾನಕ್ಕೆ ತೆರಳಿ ನಾನು ಪದವಿ ಪಡೆಯುತ್ತೇನೆ” ಎಂಬುದಾಗಿ ಆಯೇಷಾ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

Continue Reading

ವೈರಲ್ ನ್ಯೂಸ್

Lottery: ಕೋಟಿ ರೂ. ಲಾಟರಿ ಗೆದ್ದಿದ್ದೀರಿ ಎಂದರೆ, ಸ್ಕ್ಯಾಮ್‌ ಎಂದು ಫೋನಿಟ್ಟ ಮಹಿಳೆ; ಕೊನೆಗೆ ದುಡ್ಡು ಸಿಕ್ತಾ?

Lottery: ಅಮೆರಿಕದ ಮಹಿಳೆಗೆ ಕರೆ ಮಾಡಿ, ನಿಮಗೆ ಲಾಟರಿ ಹೊಡೆದಿದೆ ಎಂದು ಹೇಳಿದರೂ ನಂಬದ ಕಾರಣ ಅಧಿಕಾರಿಗಳು ಗೊಂದಲಕ್ಕೀಡಾಗಿದ್ದಾರೆ. ಈಗ ಏನು ಮಾಡುವುದು ಎಂದು ಅನೆ ಅವರಿಗೆ ಮೇಲ್‌ ಮಾಡಿದ್ದಾರೆ. ಲಾಟರಿ ಕುರಿತು ವಿವರಿಸಿದ್ದಾರೆ. ಆದರೆ, ಅನೆ ಅದೇ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆ. ಇ-ಮೇಲ್‌ಅನ್ನು ಅವರು ನಿರ್ಲಕ್ಷಿಸಿ ಸುಮ್ಮನಾಗಿದ್ದಾರೆ. ಇದು ಅಧಿಕಾರಿಗಳನ್ನು ಇನ್ನಷ್ಟು ತಬ್ಬಿಬ್ಬಾಗಿಸಿದೆ.

VISTARANEWS.COM


on

Lottery
Koo

ವಾಷಿಂಗ್ಟನ್:‌ ನಿಮಗೆ 5 ಕೋಟಿ ರೂ. ಲಾಟರಿ (Lottery) ಹೊಡೆದಿದೆ ಎಂದು ಕರೆ ಬರುತ್ತದೆ. ಲಾಟರಿ ಕುರಿತು ಮೆಸೇಜ್‌ ಕೂಡ ಬರುತ್ತದೆ. ನಂಬಿ ಅವರು ಕಳುಹಿಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿದರೆ, ನಿಮ್ಮ ಖಾತೆಯಲ್ಲಿರುವ ಹಣ ಕಟ್‌ ಆಗುವುದು ಗ್ಯಾರಂಟಿ. ಇಂತಹ ಸ್ಕ್ಯಾಮ್‌ಗಳಿಂದಲೇ ಜನ ಎಚ್ಚೆತ್ತುಕೊಳ್ಳುತ್ತಿದ್ದಾರೆ. ಅನಾಮಧೇಯ ವ್ಯಕ್ತಿಗಳ ಕರೆಗಳಿಗೆ ಪ್ರತಿಕ್ರಿಯೆ ನೀಡಲ್ಲ. ಹೀಗೆ, ಬರುವ ಕರೆಗಳಲ್ಲ ಸ್ಕ್ಯಾಮ್‌ (Cyber Crime) ಎಂದು ತಿಳಿದುಕೊಂಡ ಅಮೆರಿಕದ (America) ಮಹಿಳೆಯೊಬ್ಬರು 1 ಕೋಟಿ ಲಾಟರಿ ಹೊಡೆದಿದೆ ಎಂಬುದಾಗಿ ಬಂದ ಕರೆಯನ್ನು ನಿರ್ಲಕ್ಷಿಸಿದ್ದಾರೆ. ಆದರೆ, ಅವರಿಗೆ ಒಂದು ಕೋಟಿ ರೂ. ಲಾಟರಿ ಮೊತ್ತವನ್ನು ತಲುಪಿಸಲು ಅಧಿಕಾರಿಗಳು ಹೆಣಗಾಡಿದ್ದಾರೆ.

ಹೌದು, ಗ್ರೇಟರ್‌ ಮ್ಯಾಂಚೆಸ್ಟರ್‌ನ ಹೀಲ್ಡ್‌ ಗ್ರೀನ್‌ನಲ್ಲಿರುವ ಅನೆ (Anne) ಎಂಬುವರು ಲಾಟರಿ ಟಿಕೆಟ್‌ ಖರೀದಿಸಿದ್ದರು. ಬಂದರೆ ಬರಲಿ, ಹೋದರೆ ಹೋಗಲಿ ಎಂಬ ಮನಸ್ಥಿತಿಯಲ್ಲಿ ಅವರು ಟಿಕೆಟ್‌ ಖರೀದಿಸಿದ್ದರು. ಟಿಕೆಟ್‌ ಖರೀದಿಸಿ ತುಂಬ ದಿನ ಆದ ಕಾರಣ ನಿರ್ಲಕ್ಷದಿಂದ ಇದ್ದರು. ಆದರೆ, ಕೆಲ ದಿನಗಳ ಹಿಂದಷ್ಟೇ ಅನೆ ಅವರಿಗೆ ಲಾಟರಿ ಕಂಪನಿಯ ಅಧಿಕಾರಿಗಳು ಅನೆ ಅವರಿಗೆ ಕರೆ ಮಾಡಿದ್ದಾರೆ. ನಿಮಗೆ ಒಂದು ಕೋಟಿ ರೂ. ಲಾಟರಿ ಹೊಡೆದಿದೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಇದು ಸ್ಕ್ಯಾಮ್‌ ಎಂದ ಅನೆ, ಕಾಲ್‌ ಕಟ್‌ ಮಾಡಿದ್ದಾರೆ.

ಅನೆಗೆ ದುಡ್ಡು ಸಿಕ್ಕಿದ್ದು ಹೇಗೆ?

ಮಹಿಳೆಯು ಲಾಟರಿ ಹೊಡೆದಿದೆ ಎಂದು ಹೇಳಿದರೂ ನಂಬದ ಕಾರಣ ಅಧಿಕಾರಿಗಳು ಗೊಂದಲಕ್ಕೀಡಾಗಿದ್ದಾರೆ. ಈಗ ಏನು ಮಾಡುವುದು ಎಂದು ಅನೆ ಅವರಿಗೆ ಮೇಲ್‌ ಮಾಡಿದ್ದಾರೆ. ಲಾಟರಿ ಕುರಿತು ವಿವರಿಸಿದ್ದಾರೆ. ಆದರೆ, ಅನೆ ಅದೇ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆ. ಇ-ಮೇಲ್‌ಅನ್ನು ಅವರು ನಿರ್ಲಕ್ಷಿಸಿ ಸುಮ್ಮನಾಗಿದ್ದಾರೆ. ಇದರಿಂದಲೂ ಅಧಿಕಾರಿಗಳಿಗೆ ಗೊಂದಲ ಉಂಟಾಗಿದೆ. ಈಗ ಲಾಟರಿ ಮೊತ್ತವನ್ನು ಇಟ್ಟುಕೊಳ್ಳುವ ಹಾಗೂ ಇಲ್ಲ, ಕೊಡೋಣವೆಂದರೆ ಮಹಿಳೆಯು ಸಿಗುತ್ತಿಲ್ಲ. ಹಾಗಾಗಿ, ಅಧಿಕಾರಿಗಳಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿತ್ತು.

ಲಾಟರಿ ಕಂಪನಿ ಅಧಿಕಾರಿಗಳು ಅಷ್ಟಕ್ಕೇ ಸುಮ್ಮನಾಗಿಲ್ಲ. ಅನೆ ಅವರ ವಿಳಾಸವನ್ನು ಹುಡುಕಿದ್ದಾರೆ. ಗಲ್ಲಿ ಗಲ್ಲಿ ಸುತ್ತಾಡಿ ಕೊನೆಗೂ ಅನೆ ಅವರನ್ನು ಹುಡುಕಿ, ಅವರಿಗೆ ಒಂದು ಕೋಟಿ ರೂ. ಮೌಲ್ಯದ ಚೆಕ್‌ ನೀಡಿದ್ದಾರೆ. ಇದನ್ನು ಕಂಡ ಅನೆ ಹಾಗೂ ಸುತ್ತಮುತ್ತಲಿನವರಿಗೆ ಆಶ್ಚರ್ಯ ಉಂಟಾಗಿದೆ. “ನನಗೆ ಕರೆ ಮಾಡಿದರು, ಇ-ಮೇಲ್‌ ಮಾಡಿದರು. ಇದೆಲ್ಲ ಸ್ಕ್ಯಾಮ್‌ ಇರಬಹುದು ಎಂದು ಸುಮ್ಮನಾದೆ. ಆದರೆ, ಅಧಿಕಾರಿಗಳು ಮನೆಗೇ ಬಂದು ಚೆಕ್‌ ನೀಡಿದ್ದಾರೆ. ಇದರಲ್ಲಿ ಒಂದಷ್ಟು ಹಣವನ್ನು ದಾನವಾಗಿ ನೀಡುವೆ” ಎಂದು ಅನೆ ತಿಳಿಸಿದ್ದಾರೆ.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಮುದ್ರಾ ಯೋಜನೆಯ ಹೆಸರಲ್ಲಿ ರಾಷ್ಟ್ರವ್ಯಾಪಿ ಸೈಬರ್ ವಂಚನೆ

Continue Reading
Advertisement
karnataka Weather Forecast
ಮಳೆ39 mins ago

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Vastu Tips
ಲೈಫ್‌ಸ್ಟೈಲ್47 mins ago

Vastu Tips: ಮನೆ ಹೊರಗಿನ ಉದ್ಯಾನದಲ್ಲಿ ವಾಸ್ತು ಪಾಲಿಸಿ; ಮನೆಯೊಳಗಿನ ನೆಮ್ಮದಿ ವೃದ್ಧಿಸಿ

SMART Missile
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

Aloe Vera face mask
ಆರೋಗ್ಯ1 hour ago

Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

Benefits of Tender Coconut
ಆರೋಗ್ಯ2 hours ago

Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

Bhajanotsava
ಬೆಂಗಳೂರು5 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ6 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ7 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ7 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌