Chandrakant Patil | ಮಹಾ ಗಡಿ ಸಮನ್ವಯ ಸಚಿವ ಚಂದ್ರಕಾಂತ ‌ಪಾಟೀಲ್‌ ಮುಖಕ್ಕೆ ಮಸಿ - Vistara News

ರಾಜಕೀಯ

Chandrakant Patil | ಮಹಾ ಗಡಿ ಸಮನ್ವಯ ಸಚಿವ ಚಂದ್ರಕಾಂತ ‌ಪಾಟೀಲ್‌ ಮುಖಕ್ಕೆ ಮಸಿ

ಕಾರ್ಯಕ್ರಮವೊಂದರಲ್ಲಿ ಮಹಾತ್ಮ ಜ್ಯೋತಿ ಬಾ ಫುಲೆ, ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವರೂ ಆಗಿರುವ ಚಂದ್ರಕಾಂತ ಪಾಟೀಲ್‌ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಮಸಿ ಬಳಿಯಲಾಗಿದೆ.

VISTARANEWS.COM


on

Chandrakant Patil
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ನಡುವೆ ಬೆಳಗಾವಿಗೆ ಆಗಮಿಸುತ್ತೇನೆ, ಎಂಇಎಸ್‌ ನೇತೃತ್ವದಲ್ಲಿ ಬೃಹತ್‌ ಸಮಾವೇಶ ಮಾಡುತ್ತೇವೆ ಎಂಬ ಉದ್ಧಟತನದ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಚಂದ್ರಕಾಂತ ‌ಪಾಟೀಲ್‌ (Chandrakant Patil) ಮುಖಕ್ಕೆ ಮಹಾರಾಷ್ಟ್ರದಲ್ಲೇ ಶನಿವಾರ ಮಸಿ ಬಳಿಯಲಾಗಿದೆ.

ಪುಣೆ ನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಹೊರಬರುವಾಗ ಭದ್ರತಾ ಸಿಬ್ಬಂದಿ ಇದ್ದರೂ ಲೆಕ್ಕಿಸದೆ ಚಂದ್ರಕಾಂತ ‌ಪಾಟೀಲ್‌ ಮುಖಕ್ಕೆ ವ್ಯಕ್ತಿಯೊಬ್ಬ ಕಪ್ಪು ಮಸಿ ಎರಚಿದ್ದಾನೆ. ಈ ವೇಳೆ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಜ್ಯೋತಿ ಬಾ ಫುಲೆ, ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಚಂದ್ರಕಾಂತ ಪಾಟೀಲ್‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಿ, ಅವಹೇಳನಕಾರಿ ಹೇಳಿಕೆಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದವು. ಬೇಡಿಕೆಯನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಸಚಿವರ ಮುಖಕ್ಕೆ ಮಸಿ ಬಳಿಯಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ | ಟಿಪ್ಪು ವಿವಾದ | ದೇವರಿಗೆ ಮಾಡುವ ಆರತಿ ರದ್ದಾಗಲ್ಲ, ಹೆಸರು ಬದಲಾಗುತ್ತದೆ ಎಂದ ಸಚಿವೆ ಶಶಿಕಲಾ ಜೊಲ್ಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

Petrol Diesel Price: ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಬಾರದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿದೆ. ಈ ನಿರ್ಧಾರ ವಾಪಸ್‌ ಪಡೆಯದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Petrol Diesel Price
Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಿರೀಕ್ಷಿತ ಸ್ಥಾನಗಳು ಬಾರದ ಹಿನ್ನೆಲೆಯಲ್ಲಿ ಆ ಸಿಟ್ಟನ್ನು ಜನರ ಮೇಲೆ ತೀರಿಸಿಕೊಳ್ಳುತ್ತಿದ್ದಾರೆ. ವಿದ್ಯುತ್ ದರ ಹೆಚ್ಚಳ,‌ ಸ್ಟ್ಯಾಂಪ್ ಡ್ಯೂಟಿ‌ ಹೆಚ್ಚಿಸಿದ್ದರು. ಇದೀಗ ಈಗ ಪೆಟ್ರೋ‌ಲ್, ಡೀಸೆಲ್‌ ದರ ಲೀಟರ್‌ಗೆ 3 ರೂ‌. ಹೆಚ್ಚಳ (Petrol Diesel Price) ಮಾಡಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಬರೆ‌ ಹಾಕಲು ಹೊರಟಿದ್ದಾರೆ. ಇದನ್ನು ಖಂಡಿಸಿ ಮುಂದಿನ ಸೋಮವಾರ ಪ್ರತಿಭಟನೆ ಮಾಡುತ್ತೇವೆ, ಅಷ್ಟರೊಳಗೆ ಎಚ್ಚೆತ್ತು ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯಬೇಕು ಎಂದು ರಾಜ್ಯ ಸರ್ಕಾರವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ‌ದ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿ, ಈ ಸರ್ಕಾರದಲ್ಲಿ ಅಧಿಕಾರಿಗಳಿಗೆ ಸಂಬಳ ಕೊಡಲೂ ಆಗದಂತಹ ಪರಿಸ್ಥಿತಿ ಇದೆ. ಹೀಗಾಗಿ ‌ತೆರಿಗೆ‌ ಹೆಚ್ಚಳ‌ ಮಾಡಿದ್ದಾರೆ. ಇದನ್ನು ಒಪ್ಪಿಕೊಳ್ಳಲು ಸಿಎಂ ರೆಡಿ ಇಲ್ಲ, ಅವರು‌ ಭಂಡತನ ಬಿಡಬೇಕು. ಮುಂದಿನ ಸೋಮವಾರ ಪ್ರತಿಭಟನೆ ಮಾಡುತ್ತೇವೆ. ಅಷ್ಟರೊಳಗೆ ಎಚ್ಚೆತ್ತುಕೊಂಡು ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ | Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಜೂ.18ಕ್ಕೆ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಿಜೆಪಿ ಮುತ್ತಿಗೆ

ಬೆಳಗ್ಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ವಾಲ್ಮೀಕಿ ಸಮುದಾಯದ ನಾಯಕರು ಕಚೇರಿಗೆ ಬಂದಿದ್ದರು. ವಾಲ್ಮೀಕಿ ನಿಗಮ ಹಗರಣ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ. ಏಕೆಂದರೆ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಇಟ್ಟಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನ ಪಕ್ಷ ಇಲ್ಲಿಗೆ ಕೈ ಬಿಡಲ್ಲ, ಪಕ್ಷದಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಿದ್ದೇವೆ. ಇದೇ 18 ರಂದು ರಾಜ್ಯದ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಿಜೆಪಿ ಮುತ್ತಿಗೆ ಹಾಕಲಿದೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕೌಂಟ್‌ಗೆ ವಾಪಸ್ ಬಂದಿದೆ ಎನ್ನುತ್ತಾರೆ. ಅದು ಮುಖ್ಯವಲ್ಲ, ಪ್ರಕರಣವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಬೇಕು. ಸಮುದಾಯಕ್ಕೆ ಆದ‌ ಅನ್ಯಾಯ ಸರಿಪಡಿಸಬೇಕು. ಹಣಕಾಸು‌ ಇಲಾಖೆಗೆ‌ ಮಾಹಿತಿ‌ ಇಲ್ಲದೇ ಇಷ್ಟು ದೊಡ್ಡ‌ ಹಗರಣ ಆಗಲು ಸಾಧ್ಯವಿಲ್ಲ. ಇದನ್ನ ರಾಜ್ಯಸರ್ಕಾರ ಮುಚ್ಚಿ ಹಾಕಲು ಹೊರಟಿದೆ. 28 ರಂದು‌ ಎಲ್ಲಾ ಜಿಲ್ಲಾ‌ಧಿಕಾರಿ ಕಚೇರಿಗಳಿಗೂ ಮುತ್ತಿಗೆ‌ ಹಾಕಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ | Actor Darshan: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಕೊಲೆ ಆರೋಪಿ ದರ್ಶನ್‌ ವಜಾ!

ಲೋಕಸಭಾ ಚುನಾವಣೆಯ‌ಲ್ಲಿ ಹಿನ್ನಡೆ‌ ಪರಿಣಾಮ ನಮ್ಮ ಕಾರ್ಯಕರ್ತರಿಗೆ‌ ಕಿರಿಕುಳ ನೀಡಿ, ಎಫ್‌ಐಆರ್‌ ಹಾಕುತ್ತಿದ್ದಾರೆ. ಹೀಗಾಗಿ ಕಾನೂನು‌ ಪ್ರಕೋಷ್ಠ‌ಗಳನ್ನು ಹೆಚ್ಚಿಸುತ್ತಿದ್ದೇವೆ. ಈ‌ ಬಂಡ ಕಾಂಗ್ರೆಸ್ ಸರ್ಕಾರವನ್ನು ಧೈರ್ಯವಾಗಿ ಎದುರಿಸುತ್ತೇವೆ. ಪ್ರತಿ‌ ಮಂಡಲ ಮಟ್ಟದಲ್ಲೂ ಕಾನೂನು‌ ಪ್ರಕೋಷ್ಠ‌ ಮಾಡುತ್ತೇವೆ ಎಂದು ಹೇಳಿದರು.

Continue Reading

ಕರ್ನಾಟಕ

HD Kumaraswamy: ಚನ್ನಪಟ್ಟಣ ಜನರನ್ನು ಯಾರೂ ಭಯಪಡಿಸಲು ಆಗಲ್ಲ; ಡಿಕೆ ಬ್ರದರ್ಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಚನ್ನಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್‌ ಕಾರ್ಯಕರ್ತರು ಅದ್ಧರಿ ಸ್ವಾಗತ ಕೋರಿದರು.

VISTARANEWS.COM


on

HD Kumaraswamy
Koo

ರಾಮನಗರ: ನನಗೆ ಎರಡು ಖಾತೆಗಳನ್ನು ಕೊಟ್ಟಿದ್ದಾರೆ. ನಿರುದ್ಯೋಗ ನಿವಾರಣೆಗೆ ಇಡೀ ದೇಶದಲ್ಲಿ ಕೆಲಸ ಮಾಡಬೇಕಿದೆ. ಹೊರರಾಜ್ಯಗಳಲ್ಲಿ ಕೆಲಸ ಮಾಡೋದಕ್ಕೂ ಯುವಕರು ಮಾನಸಿಕವಾಗಿ ಸಿದ್ಧರಾಗಬೇಕು. ಚನ್ನಪಟ್ಟಣ ಜನರನ್ನು ಭಯಪಡಿಸಲು ಆಗಲ್ಲ. ಮಂಡ್ಯ ಸೀಮೆಯ ಗಾಳಿ ಈ ಭಾಗದಲ್ಲಿ ಇದೆ ಎಂದು ಪರೋಕ್ಷವಾಗಿ ಡಿಕೆ ಬ್ರದರ್ಸ್‌ ವಿರುದ್ಧ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಚನ್ನಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಈ ಹಿಂದೆ ಯೋಗೇಶ್ವರ್ ಸಚಿವರಾಗಿ ದೇವೇಗೌಡರು ಕಟ್ಟಿದ ಇಗ್ಗಲೂರಿನಿಂದ ನೀರು ತಂದರು. ನಾವು ಜಾಹೀರಾತಿನಿಂದ ಪ್ರಚಾರ ತೆಗೆದುಕೊಳ್ಳಲಿಲ್ಲ. ಜನರ ಕಷ್ಟ ಅರ್ಥ ಮಾಡಿಕೊಂಡು ಬಂದಿದ್ದೇನೆ. ಈ ರಾಜ್ಯದಲ್ಲಿ ಮತ್ತೆ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ನಾನು ಕೃಷಿ ಸಚಿವ ಆಗದೇ ಇರಬಹುದು. ದೇವೇಗೌಡರಿಗೆ ಪ್ರಧಾನಿ ಕೂಡ ಗೌರವ ಕೊಡುತ್ತಾರೆ. ಅದರಂತೆ ನನಗೂ ಸ್ವಲ್ಪ ಗೌರವ ಇದೆ. ಸ್ಮಾರ್ಟ್ ಸಿಟಿ ಯೋಜನೆ ತರುವ ನಿಟ್ಟಿನಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಚನ್ನಪಟ್ಟಣ ನಗರಸಭೆ ಜನ ಹೆಚ್ಚು ಮತ ಕೊಟ್ಟರೂ ಅಭಿವೃದ್ಧಿ ಕುಂಠಿತವಾಯಿತು. ನಮ್ಮ ಎದುರಾಳಿಗಳು ನಮ್ಮನ್ನು ಸೋಲಿಸುವುದಕ್ಕೆ ಆಗಲ್ಲ ಎಂದಿದ್ದರು. ಬಹಳ ಅಭಿವೃದ್ಧಿ ಕೆಲಸ ಮಾಡಿದ್ದೇನೆ, ಕೂಲಿ ಕೊಡುತ್ತಾರೆ ಎಂತಿದ್ದರು. ಅದೇನೋ ಮಾತು ಎತ್ತಿದರೆ ಸಾಕ್ಷಿ ಗುಡ್ಡೆ ಎನ್ನುತ್ತಾರೆ. ಸಾಕ್ಷಿ ಗುಡ್ಡೆ ನೋಡಬೇಕು ಎಂದರೆ ಕನಕಪುರ ಮಾತ್ರ ಸಾಧ್ಯ. ಉಳಿದಂತೆ ಜಿಲ್ಲೆಯ ಯಾವ ಕ್ಷೇತ್ರವು ಅಭಿವೃದ್ಧಿ ಆಗಿಲ್ಲ. ಇದೀಗ ಚನ್ನಪಟ್ಟಣ ಕ್ಷೇತ್ರದ ಮೇಲೆ ವಕ್ರ ದೃಷ್ಟಿ ಬಿದ್ದಿದೆ ಎಂದು ಡಿಕೆ ಸಹೋದರರನ್ನು ಟೀಕಿಸಿದರು.

3 ಕೋಟಿ ಮನೆಗಳನ್ನು ಕಟ್ಟುವ ನಿರ್ಧಾರವನ್ನು ಪ್ರಧಾನಮಂತ್ರಿ ಮಾಡಿದ್ದಾರೆ. ನಾನು ಹುಟ್ಟಿದ್ದು ಹಾಸನ ಜಿಲ್ಲೆಯಾದರೂ ರಾಜಕೀಯ ಶಕ್ತಿ ಕೊಟ್ಟಿದ್ದು ಈ ಜಿಲ್ಲೆಯ ಜನ. ಮಂಡ್ಯ ಜಿಲ್ಲೆಯ ಜನ ಅತ್ಯಂತ ಮುಗ್ಧರು. 50 ವರ್ಷಗಳ ಹಿಂದೆ ಹೇಗಿತ್ತೋ, ಅದೇ ರೀತಿಯಲ್ಲಿ ಆ ಜಿಲ್ಲೆ ಇನ್ನೂ ಉಳಿದಿದೆ. ಕುಮಾರಣ್ಣ ಬಂದ್ರೆ ಏನೋ ಒಳ್ಳೆ ಕೆಲಸ ಮಾಡುತ್ತಾರೆ ಅಂದುಕೊಂಡಿದ್ದಾರೆ, ಹೀಗಾಗಿ ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ನಿಮ್ಮೆಲರ ಒಪ್ಪಿಗೆ ಪಡೆದು ಅನಿವಾರ್ಯವಾಗಿ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾದೆ. ಈ ಬಗ್ಗೆ ಹಲವಾರು ನಾಯಕರಿಗೆ ಅಸಮಾಧಾನವಾಗಿದೆ. ನಾನು ರಾಮನಗರದಲ್ಲಿ ಶಾಸಕನಾಗಿದ್ದಾಗ ಚನ್ನಪಟ್ಟಣಕ್ಕೆ ಬರಬೇಕು ಎಂದಿದ್ದರು. ಅಭಿಮಾನಿಗಳು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚನ್ನಪಟ್ಟಣದ ಶಾಸಕನಾದೆ. ಈ ಬಾರಿ ಲೋಕಸಭೆ ಚುನಾವಣೆಗೆ ನಿಲ್ಲಬೇಕು ಅಂದುಕೊಂಡಿರಲಿಲ್ಲ. ಈ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಇರಬೇಕೋ ಬೇಡವೋ ಅನ್ನೋ ಪರಿಸ್ಥಿತಿಯಾಗಿತ್ತು. ಮಂಡ್ಯದಲ್ಲಿಯೂ ನಾನು ಹೋಗದೇ ಇದ್ದರೂ ಗೆಲ್ಲಿಸಿದ್ದಾರೆ ಎಂದು ತಿಳಿಸಿದರು.

ಕಳೆದ ವಿಧಾಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತಾರೆ ಅಂದುಕೊಂಡಿದ್ದಿರಿ. ಈಗ ನಾನು ಲೋಕಸಭೆಯಲ್ಲಿ ನಿಲ್ಲಬೇಕಾಯ್ತು‌. ಕೇಂದ್ರದಲ್ಲಿ ಕೃಷಿ ಸಚಿವನಾದರೆ ರೈತರಿಗೆ ಅನುಕೂಲವಾಗುತ್ತೆ ಅಂದುಕೊಂಡಿದ್ದಿರಿ. ಎಲ್ಲೇ ಹೋದರೂ ಕೃಷಿ ಸಚಿವ ಅಂತ ಘೋಷಣೆ ಮಾಡುತ್ತಿದ್ದರು. ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್‌ ವ್ಯವಸ್ಥೆ ಮಾಡಲಾಗುತ್ತದೆ. ದೇವೇಗೌಡರ ಮಾರ್ಗದರ್ಶನದಲ್ಲಿ ಹಳ್ಳಿಗಳ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಹಿಂದೆ ಎರಡು ಬಾರಿ ಸಿಎಂ ಆದಾಗ ಈ ರಾಜ್ಯದ ಜನ ಗುರುತಿಸಿದ್ದಾರೆ. ಇಲ್ಲಿ ಸಭೆ ಮಾಡಿದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂದುಕೊಂಡೆ. ಹಲವು ನಾಯಕರು ಇಷ್ಟೆಲ್ಲಾ ಅಭಿವೃದ್ಧಿ ಕೆಲಸ ಮಾಡಿದ್ದೀರಿ, ಉದ್ಘಾಟನೆ ನಾನೇ ಮಾಡುವಂತೆ ಒತ್ತಡ ಹಾಕಿದ್ದರು. ಹೀಗಾಗಿ ಈ ಕಾರ್ಯಕ್ರಮ ಬಳಿಕ ಸಂಜೆ ರಾಜೀನಾಮೆ ಅಂಗೀಕಾರ ಮಾಡುವಂತೆ ಸ್ಪೀಕರ್‌ಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

Continue Reading

ದೇಶ

Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

Mallikarjun Kharge: ಕೇವಲ 15 ದಿನಗಳಲ್ಲೂ ಯಾವುದೇ ಸರ್ಕಾರ ಪತನವಾಗಬಹುದು ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕೆಲ ದಿನಗಳ ಹಿಂದೆ ಹೇಳಿದ್ದರು. ಆ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಪತನಗೊಳ್ಳಲಿದೆ ಎಂದಿದ್ದರು. ಈಗ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಎನ್‌ಡಿಎ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

VISTARANEWS.COM


on

Mallikarjun Kharge
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಪಡೆದು ಸರ್ಕಾರ ರಚಿಸಿದೆ. ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರು ಖಾತೆ ಹಂಚಿಕೆಯನ್ನೂ ಮಾಡಿದ್ದಾರೆ. ಇದರ ಬೆನ್ನಲ್ಲೇ, “ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶೀಘ್ರದಲ್ಲೇ ಪತನವಾಗಲಿದೆ. ಈ ಕುರಿತು ಕಾದು ನೋಡೋಣ” ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಭವಿಷ್ಯ ನುಡಿದಿದ್ದಾರೆ.

“ದೇಶದ ಜನರು ಬಹುಮತದ ಸರ್ಕಾರವನ್ನು ಆಯ್ಕೆ ಮಾಡಿಲ್ಲ. ಅಲ್ಪಮತದ ಸರ್ಕಾರವು ದೇಶದಲ್ಲಿದೆ. ಆಕಸ್ಮಿಕವಾಗಿ ಬಿಜೆಪಿ ಮೈತ್ರಿಕೂಟವು ಸರ್ಕಾರ ರಚಿಸಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಎನ್‌ಡಿಎ ಮೈತ್ರಿಕೂಟದ ಸರ್ಕಾರವು ಪತನವಾಗಬಹುದು” ಎಂಬುದಾಗಿ ಪಿಟಿಐ ಸುದ್ದಿಸಂಸ್ಥೆಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 240 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಟಿಡಿಪಿ, ಜೆಡಿಯು, ಎಲ್‌ಜೆಪಿ ಹಾಗೂ ಏಕನಾಥ್‌ ಶಿಂಧೆ ಬಣದ ಶಿವಸೇನೆಯ ಬೆಂಬಲದೊಂದಿಗೆ ಮೈತ್ರಿ ಸರ್ಕಾರ ರಚಿಸಿದೆ.

Narendra Modi Live

ಕೆ.ಸಿ.ತ್ಯಾಗಿ ತಿರುಗೇಟು

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಜೆಡಿಯು ನಾಯಕ ಕೆ.ಸಿ. ತ್ಯಾಗಿ ತಿರುಗೇಟು ನೀಡಿದ್ದಾರೆ. “ಮಲ್ಲಿಕಾರ್ಜುನ ಖರ್ಗೆ ಅವರು ಹುರುಳಿಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಖರ್ಗೆ ಅವರ ಹೇಳಿಕೆಯನ್ನು ಖಂಡಿಸುತ್ತೇನೆ” ಎಂಬುದಾಗಿ ಕೆ.ಸಿ.ತ್ಯಾಗಿ ಹೇಳಿದ್ದಾರೆ. “ನಾವು ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟವನ್ನು ತೊರೆಯುವುದಿಲ್ಲ” ಎಂಬುದಾಗಿ ನಿತೀಶ್‌ ಕುಮಾರ್‌ ಅವರು ಇದಕ್ಕೂ ಮೊದಲು ಹೇಳಿದ್ದರು. ಚಂದ್ರಬಾಬು ನಾಯ್ಡು ಅವರ ಟಿಡಿಪಿಯು ಕೂಡ ಬಿಜೆಪಿ ಜತೆ ಅಚಲವಾಗಿ ನಿಂತಿದೆ.

ಮೊದಲು ಭವಿಷ್ಯ ನುಡಿದಿದ್ದು ಮಮತಾ

ಕೇಂದ್ರ ಸರ್ಕಾರವು ಶೀಘ್ರದಲ್ಲೇ ಪತನವಾಗಲಿದೆ ಎಂದು ಒಂದು ವಾರದ ಹಿಂದಷ್ಟೇ ಟಿಎಂಸಿ ವರಿಷ್ಠ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದರು. “ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ. ಯಾವ ಸರ್ಕಾರವೂ 15 ದಿನದಲ್ಲಿ ಬೇಕಾದರು ಪತನವಾಗಬಹುದು” ಎಂದಿದ್ದರು.

ಇದನ್ನೂ ಓದಿ: Narendra Modi: ನಗು ನಗುತ್ತಾ ಸೆಲ್ಫಿಗೆ ಪೋಸ್‌ ಕೊಟ್ಟ ಮೋದಿ, ಮೆಲೋನಿ; ಸೋಷಿಯಲ್‌ ಮೀಡಿಯಾದಲ್ಲಿ ʼಮೆಲೋಡಿʼಯದ್ದೇ ಸದ್ದು

Continue Reading

ಪ್ರಮುಖ ಸುದ್ದಿ

Karnataka Politics: ಶಾಸಕ ಸ್ಥಾನಕ್ಕೆ ಎಚ್‌.ಡಿ. ಕುಮಾರಸ್ವಾಮಿ, ಬೊಮ್ಮಾಯಿ ರಾಜೀನಾಮೆ

Karnataka Politics: ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

VISTARANEWS.COM


on

Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Karnataka Politics) ಗೆದ್ದು ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ಮಾಜಿ ಸಿಎಂಗಳಾದ ಎಚ್‌.ಡಿ.ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್‌ ಯು.ಟಿ.ಖಾದರ್‌ ಅವರನ್ನು ಇಬ್ಬರು ನಾಯಕರು ಪ್ರತ್ಯೇಕವಾಗಿ ಭೇಟಿಯಾಗಿ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಸಲ್ಲಿಕೆ ವೇಳೆ ಸ್ಪೀಕರ್ ಜತೆಗೆ ಕುಮಾರಸ್ವಾಮಿ ಉಭಯ ಕುಶಲೋಪರಿ ನಡೆಸಿದರು. ಇದೇ ವೇಳೆ ಸ್ಪೀಕರ್ ಅವರು ಕುದುರೆಮುಖ ವಿಚಾರ ಕೇಳಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಒಂದಷ್ಟು ವಿವರಣೆ ನೀಡಿದರು. ಅಲ್ಲದೇ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಪುನಶ್ಚೇತನದ ಬಗ್ಗೆಯೂ ಮಾತುಕತೆ ನಡೆಸಿದರು.

ರಾಜೀನಾಮೆ ಬಳಿಕ ಎಚ್‌.ಡಿ. ಕುಮಾರಸ್ವಾಮಿ ಅವರು ಮಾತನಾಡಿ, ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಎರಡರಲ್ಲಿ ‌ಒಂದು ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಮುಂದೆ ಮಾತನಾಡೋಣ ಎಂದರು.

ಕುಮಾರಸ್ವಾಮಿ ಚನ್ನಪಟ್ಟಣ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂಬ ಡಿ.ಕೆ. ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ಪಾಪ ದೊಡ್ಡವರು ಅವರೇನೋ ಮಾತನಾಡಿಕೊಳ್ಳಲಿ. ಅವರು ಏನು ಬೇಕಾದರೂ ಮಾತನಾಡಲಿ ಬಿಡಿ ಎಂದು ಡಿಕೆಸುಗೆ ತಿರುಗೇಟು ನೀಡಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಹಾವೇರಿ ಲೋಕಸಭೆ ಕ್ಷೇತ್ರದಿಂದ ಸಂಸದನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ನಿರಂತರವಾಗಿ 4 ಬಾರಿ ಶಾಸಕನಾಗಿ ಆಯ್ಕೆ ಮಾಡಿ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಟ್ಟ ಶಿಗ್ಗಾಂವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಹೇಳುವೆ ಎಂದರು.

ಇದನ್ನೂ ಓದಿ | Actor Darshan: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಕೊಲೆ ಆರೋಪಿ ದರ್ಶನ್‌ ವಜಾ!

ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗೆ ಈಗಾಗಲೇ ಸಿಎಂ ಅವರ ಜೊತೆ ಮಾತನಾಡಿದ್ದೇನೆ. ಸಿಎಂ ಬೆಂಗಳೂರಿಗೆ ಬಂದ ತಕ್ಷಣ ಅವರ ಬಳಿ ಚರ್ಚಿಸಿ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚಿಸುತ್ತೇನೆ. ಹಾವೇರಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕೆಲಸ ಮಾಡುವೆ. ಸಂಸತ್ತಿನಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಹೆಚ್ಚಿನ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವೆ ಎಂದರು.

Continue Reading
Advertisement
Gold Heist
ವಿದೇಶ5 mins ago

Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Petrol Diesel Price
ಕರ್ನಾಟಕ51 mins ago

Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

Siddaramaiah
ಕರ್ನಾಟಕ1 hour ago

ಗ್ಯಾರಂಟಿ ಉಚಿತ, ಬೆಲೆಯೇರಿಕೆ ಖಚಿತ; ಪೆಟ್ರೋಲ್‌ ಬೆಲೆ ಏರಿಕೆಯಿಂದ ರಾಜ್ಯ ಸರ್ಕಾರಕ್ಕೆ ಎಷ್ಟು ಆದಾಯ?

Amazon India
ದೇಶ2 hours ago

Amazon India: ನೀರು ಕುಡಿಯುವಂತಿಲ್ಲ, ವಾಶ್ ರೂಮ್ ಗೆ ಹೋಗುವಂತಿಲ್ಲ; ಸಿಬ್ಬಂದಿಗೆ ಅಮೆಜಾನ್ ಕಂಪನಿ ತಾಕೀತು!

HD Kumaraswamy
ಕರ್ನಾಟಕ2 hours ago

HD Kumaraswamy: ಚನ್ನಪಟ್ಟಣ ಜನರನ್ನು ಯಾರೂ ಭಯಪಡಿಸಲು ಆಗಲ್ಲ; ಡಿಕೆ ಬ್ರದರ್ಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

Father's Day Fashion
ಫ್ಯಾಷನ್2 hours ago

Father’s Day Fashion: ಅಪ್ಪಂದಿರ ದಿನಕ್ಕೂ ಉಂಟು ಫ್ಯಾಷನ್‌ ಸ್ಟೇಟ್‌ಮೆಂಟ್ಸ್!

Kendra Sahitya Akademi Award
ಪ್ರಮುಖ ಸುದ್ದಿ2 hours ago

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

Period Pain Relief Food
ಆರೋಗ್ಯ2 hours ago

Period Pain Relief Food: ಪೀರಿಯಡ್‌ನ ನೋವು ನಿವಾರಣೆಗೆ ಈ ಆಹಾರಗಳು ಸೂಕ್ತ

karnataka Weather Forecast
ಮಳೆ2 hours ago

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

Actor Darshan
ಕರ್ನಾಟಕ3 hours ago

Actor Darshan: ದರ್ಶನ್‌ ಗ್ಯಾಂಗ್‌ಗೆ ಮತ್ತೆ 5 ದಿನ ಪೊಲೀಸ್‌ ಕಸ್ಟಡಿ; ಜಡ್ಜ್‌ ಮುಂದೆ ಪವಿತ್ರಾ ಗೌಡ ಕಣ್ಣೀರು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ7 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 day ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌