Job News: ಚಿನ್ನದ ಕಂಪನಿಯಲ್ಲಿ ಬಂಗಾರದಂತಹ ಕೆಲಸ! - Vistara News

ಉದ್ಯೋಗ

Job News: ಚಿನ್ನದ ಕಂಪನಿಯಲ್ಲಿ ಬಂಗಾರದಂತಹ ಕೆಲಸ!

ರಾಯಚೂರು ಜಿಲ್ಲೆ ಹಟ್ಟಿಯಲ್ಲಿರುವ ಚಿನ್ನದ ಅದಿರು ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ

VISTARANEWS.COM


on

Job News job news kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿನ್ನದ ಉತ್ಪಾದನೆಯಲ್ಲಿ ದೇಶದಲ್ಲಿಯೇ ಅಗ್ರಸ್ಥಾನದಲ್ಲಿರುವ ಕರ್ನಾಟಕ ಸರ್ಕಾರದ ಹೆಮ್ಮೆಯ ಗಣಿ ಸಂಸ್ಥೆ ʼದಿ ಹಟ್ಟಿ ಗೋಲ್ಡ್‌ ಮೈನ್ಸ್‌ ಕಂಪನಿ ಲಿಮಿಟೆಡ್‌ʼ ಸಿಹಿ ಸುದ್ದಿ (Job News) ನೀಡಿದೆ. ಕಂಪನಿಯು ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಾರ್ಷಿಕ ಸುಮಾರು 650 ಕೋಟಿ ರೂ.ಗಳ ವಹಿವಾಟು ಹೊಂದಿರುವ ಈ ಗಣಿಕಂಪನಿಯಲ್ಲಿನ ವಿವಿಧ ವಿಭಾಗಗಳಲ್ಲಿ ಒಟ್ಟು 216 ಸ್ಥಳೀಯ ವೃಂದದ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್‌ 10 ರಂದು ಆರಂಭಗೊಳ್ಳಲಿದ್ದು, ಜುಲೈ 9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ಯಾವ್ಯಾವ ಹುದ್ದೆಗಳಿಗೆ ನೇಮಕ?

ಮ್ಯಾನೇಜ್‌ ಮೆಂಟ್‌ ಟ್ರೇನಿ ಒಟ್ಟು 29 ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಗಣಿ, ಅನ್ವೇಷಣೆ, ಲೋಹ, ಮೆಕಾನಿಕಲ್‌, ಎಲೆಕ್ಟ್ರಿಕಲ್‌, ಕಂಪ್ಯೂಟರ್‌ ಸೈನ್ಸ್‌, ಇ & ಸಿ, ಸಿವಿಲ್‌, ಎಚ್‌ ಆರ್‌, ಅಕೌಂಟ್ಸ್‌, ಸರಕು ಮತ್ತು ಭದ್ರತಾ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ವಿದ್ಯಾರ್ಹತೆ: ಸಂಬಂಧಿತ ವಿಷಯಗಳಲ್ಲಿ ಎಂಜಿನಿಯರಿಂಗ್‌ ಮಾಡಿದ (ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು) ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅನ್ವೇಷಣೆಯ ಹುದ್ದೆಗೆ ಎಮ್‌ಎಸ್‌ಸಿ ಜಿಯಾಲಜಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಲೋಹ ವಿಭಾಗದ ಹುದ್ದೆಗೆ ಮಿನರಲ್‌ ಡ್ರೆಸ್ಸಿಂಗ್‌ನಲ್ಲಿ ಸ್ನಾತಕೋತ್ತರ ಪದವಿ/ಬಿಇ/ಮೆಟಲರ್ಜಿ/ಬಿಇ ಕೆಮಿಕಲ್‌, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

ಎಚ್‌ಆರ್‌ ವಿಭಾಗದಲ್ಲಿನ ಮ್ಯಾನೇಜ್‌ಮೆಂಟ್‌ ಟ್ರೇನಿ ಹುದ್ದೆಗೆ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸೋಷಿಯಲ್‌ ವರ್ಕ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಜತೆಗೆ ಪಿಎಂ&ಐಆರ್‌ ಅಥವಾ ಎಂಬಿಎ (ಎಚ್‌ಆರ್‌) ಪದವಿ ಪಡೆದಿರಬೇಕು. ಅಕೌಂಟ್ಸ್‌ ವಿಭಾಗದಲ್ಲಿನ ಹುದ್ದೆಗೆ ಎಮ್‌ಕಾಂ/ಎಂಎಸ್ಸಿ (ಗಣಿತ) ಎಮ್‌ಎ (ಸಂಖ್ಯಾಶಾಸ್ತ್ರ)/ಬಿಕಾಮ್‌ ಪದವಿಯೊಂದಿಗೆ ಹಣಕಾಸು/ಕಾಸ್ಟಿಂಗ್‌ ವಿಷಯದಲ್ಲಿ ಪಿಜಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಸರಕು ವಿಭಾಗದ ಹುದ್ದೆಗೆ ಯಾವುದೇ ಬಿಇ ಪದವಿಯೊಂದಿಗೆ ಐಐಎಮ್‌ಎಮ್‌ ಇನ್ಸ್‌ಟಿಟ್ಯೂಟ್‌ನಿಂದ ಪಿಜಿ ಡಿಪ್ಲೊಮೊ ಇನ್‌ ಮೆಟೀರಿಯಲ್‌ ಮ್ಯಾನೇಜ್‌ಮೆಂಟ್‌ ಪದವಿ ಪಡೆದಿರಬೇಕು. ಸೆಕ್ಯೂರಿಟಿ ವಿಭಾಗದ ಹುದ್ದೆಗೆ ಸಶಸ್ತ್ರ ಪಡೆ/ಅರೆ ಸೇನಾಪಡೆ/ ಪೊಲೀಸ್‌ ಸೇವೆಯಲ್ಲಿ ಕ್ಯಾಪ್ಟನ್‌ ಅಥವಾ ಸರಿಸಮಾನಾದ ರ‍್ಯಾಂಕ್‌ನಲ್ಲಿ ಎಂಟು ವರ್ಷಗಳ ಸೇವಾನುಭವ ಹೊಂದಿದವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಎಷ್ಟು?: ಮ್ಯಾನೇಜ್‌ಮೆಂಟ್‌ ಟ್ರೇನಿ ಹುದ್ದೆಗೆ ಪರೀಕ್ಷಾರ್ಥ ಅವಧಿಯಲ್ಲಿ 45 ಸಾವಿರ ರೂ. ಹಾಗೂ ನಂತರ 47,800-81,200  ರೂ. ವೇತನ ನೀಡಲಾಗುತ್ತದೆ.

ಜಿ-8 ದರ್ಜೆಯ ಹುದ್ದೆಗಳೂ ಇವೆ!

ಐಟಿಐ ಫಿಟ್ಟರ್‌ ಮತ್ತು ಎಲೆಕ್ಟ್ರಿಕಲ್‌ ದರ್ಜೆಯ ಒಟ್ಟು 92 ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ. ಇವರ ದೈಹಿಕ  ಮತ್ತು ಸಹಿಷ್ಣುತೆ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಇದಲ್ಲದೆ, ಸೆಕ್ಯುರಿಟಿ ಗಾರ್ಡ್‌ನ 42, ಲ್ಯಾಬ್‌ ಟೆಕ್ನಿಷಿಯನ್‌ ಮತ್ತು ನರ್ಸಿಂಗ್‌ ಏಡ್‌ ತಲಾ ಒಂದು ಹುದ್ದೆಗೆ ನೇಮಕ ನಡೆಯಲಿದ್ದು, ಸೆಕ್ಯುರಿಟಿ ಗಾರ್ಡ್‌ ಹುದ್ದೆಗೆ ಪಿಯುಸಿ ಮತ್ತು ಐಟಿಐ ಮಾಡಿದವರು, ಲ್ಯಾಬ್‌ ಟೆಕ್ನಿಷಿಯನ್‌ ಹುದ್ದೆಗೆ ಈ ವಿಷಯದಲ್ಲಿ ಡಿಪ್ಲೊಮೊ ಮಾಡಿದವರು ಹಾಗೂ ನರ್ಸಿಂಗ್‌ ಹುದ್ದೆಗೆ ಎಎನ್‌ಎಮ್‌ ಮಾಡಿದವರು ಅರ್ಸಿ ಸಲ್ಲಿಸಬಹುದಾಗಿದೆ.

ವೇತನ ಎಷ್ಟು? : ಈ ಹುದ್ದೆಗಳಿಗೆ 20,920-42,660 ರೂ. ವೇತನ ಹಾಗೂ ಕೈಗಾರಿಕಾ ತುಟ್ಟು ಭತ್ಯೆ ನೀಡಲಾಗುತ್ತದೆ.

ವಯೋಮಿತಿ ಎಷ್ಟಿರುತ್ತದೆ?

ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ. ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ, ಪ್ರವರ್ಗ-3ಬಿಯ ಅಭ್ಯರ್ಥಿಗಳಿಗೆ 38 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.

ಇತ್ತ ಗಮನಿಸಿ

  • ಸ್ಥಳೀಯ ಅಭ್ಯರ್ಥಿಗಳು ಇಚ್ಚಿಸಿದಲ್ಲಿ ಸ್ಥಳೀಯ ವೃಂದಕ್ಕೂ ಮತ್ತು ಸ್ಥಳೀಯರಲ್ಲದ ವೃಂದಕ್ಕೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
  • ಈ ನೇಮಕಾತಿಯಲ್ಲಿ ಬೀದರ್‌, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ,ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ ಭಾಷಾ ಜ್ಞಾನ ಹೊಂದಿರಬೇಕು.
  • ಹುದ್ದೆಗಳನ್ನು ಮೀಸಲಾತಿಯನ್ವಯ ಹಂಚಿಕೆ ಮಾಡಲಾಗಿರುತ್ತದೆ.

ಅರ್ಜಿ ಶುಲ್ಕ ಎಷ್ಟು?

ಪ.ಜಾ/ಪ.ಪಂ., ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 100 ರೂ, ಹಿಂದುಳಿದ ವರ್ಗದ(2ಎ, 2ಬಿ, 3ಎ, 3ಬಿ) ಅಭ್ಯರ್ಥಿಗಳಿಗೆ 300 ರೂ. ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600 ಶುಲ್ಕ ನಿಗದಿಪಡಿಸಲಾಗಿದೆ. ಶುಲ್ಕವನ್ನು ಆನ್‌ಲೈನ್‌ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪೇಮೆಂಟ್‌ ಗೇಟ್‌ವೇ ಮೂಲಕ ಪಾವತಿಸಬಹುದಾಗಿದೆ.

ನೇಮಕಾತಿ ಅಧಿಸೂಚನೆ ಇಲ್ಲಿದೆ ನೋಡಿ

ನೇಮಕ ಪ್ರಕ್ರಿಯೆ ಹೇಗಿರುತ್ತದೆ?

ಪ್ರತಿ ಹುದ್ದೆಗೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ್ನು (ಶೇ.50 weightage) ಹಾಗೂ ನೇಮಕಾತಿ ಪ್ರಾಧಿಕಾರವು ನಡೆಸುವ ಕಂಪ್ಯೂಟರ್‌ ಆಧಾರಿತ ಪರೀಕ್ಷೆ (Computer Based Test- CBT) ಯಲ್ಲಿ ಪಡೆದ ಅಂಕಗಳನ್ನು (50% weightage) ಪರಿಗಣಿಸಿ ಅರ್ಹತಾ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಈ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗೆ 1:2 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಆಹ್ವಾನಿಸಲಾಗುತ್ತದೆ. ನಂತರ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ| Job News: ಸೇನಾಧಿಕಾರಿಯಾಗಬೇಕಾ? ಎನ್‌ಡಿಎ-ಎನ್‌ಎ ಪರೀಕ್ಷೆ ಬರೆಯಿರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉದ್ಯೋಗ

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Job Alert: ನವೋದಯ ವಿದ್ಯಾಲಯ ಸಮಿತಿಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 1,377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು

VISTARANEWS.COM


on

Job Alert
Koo

ಬೆಂಗಳೂರು: ನವೋದಯ ವಿದ್ಯಾಲಯ ಸಮಿತಿ (Navodaya Vidyalaya Samiti)ಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Navodaya Vidyalaya Samiti Recruitment 2024). ಬರೋಬ್ಬರಿ 1,377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಟಾಫ್‌ ನರ್ಸ್‌ 121 ಹುದ್ದೆ, ವಿದ್ಯಾರ್ಹತೆ: ಬಿಎಸ್ಸಿ ನರ್ಸಿಂಗ್ ಅಸಿಸ್ಟಂಟ್ ಸೆಕ್ಷನ್‌ ಆಫೀಸರ್ (ಎಎಸ್‌ಒ) 5 ಹುದ್ದೆ, ವಿದ್ಯಾರ್ಹತೆ: ಯಾವುದೇ ಪದವಿ
ಆಡಿಟ್ ಅಸಿಸ್ಟಂಟ್ 12 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ
ಜೂನಿಯರ್ ಟ್ರಾನ್ಸ್‌ಲೇಷನ್ ಆಫೀಸರ್ 4 ಹುದ್ದೆ, ವಿದ್ಯಾರ್ಹತೆ: ಸ್ನಾತಕೊತ್ತರ ಪದವಿ
ಲೀಗಲ್ ಅಸಿಸ್ಟಂಟ್ 1 ಹುದ್ದೆ, ವಿದ್ಯಾರ್ಹತೆ: ಕಾನೂನು ಪದವಿ
ಸ್ಟೆನೋಗ್ರಾಫರ್ 23 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್
ಕಂಪ್ಯೂಟರ್ ಆಪರೇಟರ್ 2 ಹುದ್ದೆ, ವಿದ್ಯಾರ್ಹತೆ: ಸಿಎಸ್‌, ಐಟಿ ವಿಷಯಗಳಲ್ಲಿ ಬಿಇ / ಬಿ.ಟೆಕ್ / ಬಿಸಿಎ/ ಬಿಎಸ್ಸಿ
ಕ್ಯಾಟರಿಂಗ್ ಸೂಪರ್‌ವೈಸರ್ 78 ಹುದ್ದೆ, ಹೋಟೆಲ್‌ ಮ್ಯಾನೇಜ್‌ಮೆಂಟ್‌ ಪದವಿ
ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ 21 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್
ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ (ಜೆಎಸ್‌ಎ) 360
ಇಲೆಕ್ಟ್ರೀಷಿಯನ್ ಕಮ್ ಪ್ಲಂಬರ್ 128 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಇಲೆಕ್ಟ್ರೀಷಿಯನ್ ಅಂಡ್ ವೈರಿಂಗ್
ಲ್ಯಾಬ್‌ ಅಟೆಂಡಂಟ್ 161 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ / ಪಿಯುಸಿ ಜತೆಗೆ ಲ್ಯಾಬೋರೇಟರಿ ಟೆಕ್ನಿಕಲ್ ಸ್ಕಿಲ್‌
ಮೆಸ್‌ ಹೆಲ್ಪರ್ 442 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್‌ (ಎಂಟಿಎಸ್) 19 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 37 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಸ್ಟಾಫ್‌ ನರ್ಸ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,500 ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಒಬಿಸಿ ವಿಭಾಗದವರು 1,000 ರೂ. ಮತ್ತು ಇತರ ವರ್ಗದವರು 500 ರೂ. ಅರ್ಜಿ ಶುಲ್ಕವಾಗಿ ಪಾವತಿಸಬೇಕು.

Navodaya Vidyalaya Samiti Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಿಸಿದ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

Continue Reading

ಪ್ರಮುಖ ಸುದ್ದಿ

Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಸಲು ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಮೇ 15ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಕೆಇಎ ವಿಸ್ತರಿಸಿದೆ.

VISTARANEWS.COM


on

Village Administrative Officer
Koo

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆ (Village Administrative Officer) ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮತ್ತೆ ವಿಸ್ತರಣೆ ಮಾಡಿದೆ. ಅರ್ಜಿ ಸಲ್ಲಿಕೆಗೆ ಮೇ 5 ಕೊನೆಯ ದಿನವಾಗಿತ್ತು. ಆದರೆ, ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಸಲು ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲು ಹುದ್ದೆ ಆಕಾಂಕ್ಷಿಗಳು ಕೋರಿದ್ದರು. ಹೀಗಾಗಿ ಮೇ 15ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ (Job News) ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (Karnataka Examinations Authority) ಫೆ.20ರಂದು ಅಧಿಸೂಚನೆ (VAO Recruitment 2024) ಪ್ರಕಟಿಸಿತ್ತು. ಅದರಂತೆ ಮಾರ್ಚ್‌ 3 ರಿಂದ ಏಪ್ರಿಲ್ 3ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ, ಆನ್‌ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಿ, ಮೇ 4 ವರೆಗೆ ಅರ್ಜಿ ಸಲ್ಲಿಸಲು ಹಾಗೂ ಮೇ 7 ರ ರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಗಿತ್ತು. ಹೀಗಿದ್ದರೂ ಮತ್ತೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಎರಡನೇ ಬಾರಿ ಅರ್ಜಿ ಸಲ್ಲಿಕೆ ಅವಧಿ (ಮೇ 15ರವರೆಗೆ) ವಿಸ್ತರಿಸಲಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ವಿಸ್ತರಿಸಲಾದ ಕೊನೆಯ ದಿನಾಂಕ: ಮೇ 15
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ (ಬ್ಯಾಂಕ್ ಕೆಲಸದ ವೇಳೆ ವರೆಗೆ): ಮೇ 18

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ.20ರಂದು ಅಧಿಸೂಚನೆ ಹೊರಡಿಸಿತ್ತು. ಆಸಕ್ತ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 15 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
  • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
  • ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
  • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
  • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ)

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

ಇದನ್ನೂ ಓದಿ: Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆಗೆ ತಿದ್ದುಪಡಿ; ಹೊಸ ಅಧಿಸೂಚನೆಯಲ್ಲಿ ಏನಿದೆ?

ಇದನ್ನು ಗಮನಿಸಿ

  • ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
  • ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳ ಪೈಕಿ ಕನಿಷ್ಠ ಶೇ. 35ರಷ್ಟು ಅಂಕ ಗಳಿಸುವುದು ಕಡ್ಡಾಯ.
  • ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕ ಕಳೆಯಲಾಗುತ್ತದೆ. ಹೀಗಾಗಿ ಉತ್ತರ ಬರೆಯುವಾಗ ಎಚ್ಚರಿಕೆ ವಹಿಸಿ.
  • ಪ್ರಶ್ನೆಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ.
  • ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಅರ್ಜಿ ಫಾರಂನ ಒಂದು ಪ್ರತಿಯ ಪ್ರಿಂಟ್‌ ಔಟ್‌ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು.
Continue Reading

ಉದ್ಯೋಗ

Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ರಾಜ್ಯದಲ್ಲೇ ಕೆಲಸ ನಿರ್ವಹಿಸಬೇಕು ಎನ್ನುವ ಆಕಾಂಕ್ಷೆ ಹೊಂದಿದ್ದೀರಾ? ಹಾಗಾದರೆ ನಿಮಗಾಗಿ ಕಾದಿದೆ ಗುಡ್‌ನ್ಯೂಸ್‌. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನ (Peon) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 3ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಕೊನೆಯ ದಿನ ಜೂನ್‌ 3. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ರಾಜ್ಯದಲ್ಲೇ ಕೆಲಸ ನಿರ್ವಹಿಸಬೇಕು ಎನ್ನುವ ಆಕಾಂಕ್ಷೆ ಹೊಂದಿದ್ದೀರಾ? ಹಾಗಾದರೆ ನಿಮಗಾಗಿ ಕಾದಿದೆ ಗುಡ್‌ನ್ಯೂಸ್‌. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನ (Peon) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 3ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಕೊನೆಯ ದಿನ ಜೂನ್‌ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಾಮಾನ್ಯ ಅಭ್ಯರ್ಥಿ – 18, ಪರಿಶಿಷ್ಟ ಜಾತಿ – 7, ಪರಿಶಿಷ್ಟ ಪಂಗಡ – 4, ಪ್ರವರ್ಗ – 1- 2, ಪ್ರವರ್ಗ-2 (ಎ) -6, ಪ್ರವರ್ಗ-2 (ಬಿ)-2, ಪ್ರವರ್ಗ-3 (ಎ)-1, ಪ್ರವರ್ಗ-3 (ಬಿ)-1 ಹುದ್ದೆಗಳಿವೆ. ಅರ್ಜಿ ಸಲ್ಲಿಸುವವರು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜತೆಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು. ತತ್ಸಮಾನ ವಿದ್ಯಾರ್ಹತೆ: ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆ ಮತ್ತು ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆ. ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಓಪನ್‌ ಸ್ಕೂಲಿಂಗ್‌ (ಎನ್‌.ಐ.ಒ.ಎಸ್‌.) ವತಿಯಿಂದ ನಡೆಸುವ ಪ್ರೌಢ ಶಿಕ್ಷಣ ಕೋರ್ಸ್‌. ಕರ್ನಾಟಕ ಪ್ರೌಢ ಶಿಕ್ಷಣ ಪ್ರೀಕ್ಷಾ ಮಂಡಳಿ ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್‌ (ಕೆ.ಒ.ಎಸ್‌.).

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ. ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. 2 ಎ, 2 ಬಿ, 3 ಎ, 3 ಬಿ ವಿಭಾಗದವರಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ ವರ್ಗದವರು ಅರ್ಜಿ ಶುಲ್ಕವಾಗಿ 300 ರೂ., ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 150 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಇದಕ್ಕಾಗಿ ಕ್ರೆಡಿಟ್‌ / ಡೆಬಿಟ್‌ ಕಾರ್ಡ್‌, ನೆಟ್‌ ಬ್ಯಾಂಕಿಂಗ್‌ ಸೌಲಭ್ಯ ಬಳಸಬಹುದು.

ಆಯ್ಕೆ ವಿಧಾನ

ಕರ್ನಾಟಕ ಅಧೀನ ನ್ಯಾಯಾಲಯಗಳ ನಿಯಮಗಳ ಅನ್ವಯ ನೇಮಕಾತಿ ನಡೆಯಲಿದೆ. ಅದರಂತೆ 10ನೇ ತರಗತಿಯ ಗರಿಷ್ಠ ಅಂಕಗಳನ್ನು ಆಧರಿಸಿ ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಆ ಪೈಕಿ ಅರ್ಹರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ ಜಲ ಸಂಪನ್ಮೂಲ ಇಲಾಖೆ & ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ 313 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 28. ಡಿಪ್ಲೋಮಾ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (KPSC) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆ & ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಈ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ. ಕಿರಿಯ ಎಂಜಿನಿಯರ್‌, ಸಹಾಯಕ ಗ್ರಂಥ ಪಾಲಕ ಸೇರಿ ಒಟ್ಟು 313 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ಇನಾಂಕ ಮೇ 28 (Job Alert).

ಹುದ್ದೆಗಳ ವಿವರ

ಕಿರಿಯ ಎಂಜಿನಿಯರ್‌ (ಸಿವಿಲ್‌)-ಜಲ ಸಂಪನ್ಮೂಲ ಇಲಾಖೆ: 216 ಹುದ್ದೆ, ಕಿರಿಯ ಎಂಜಿನಿಯರ್‌ (ಸಿವಿಲ್‌)-ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್‌ ಸಿ ಸಿಬ್ಬಂದಿಗೆ: 54 ಹುದ್ದೆ, ಕಿರಿಯ ಎಂಜಿನಿಯರ್‌ (ಮೆಕ್ಯಾನಿಕಲ್‌)- ಜಲ ಸಂಪನ್ಮೂಲ ಇಲಾಖೆ: 26 ಹುದ್ದೆ, ಕಿರಿಯ ಎಂಜಿನಿಯರ್‌ (ಮೆಕ್ಯಾನಿಕಲ್‌)-ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್‌ ಸಿ ಸಿಬ್ಬಂದಿಗೆ: 4 ಹುದ್ದೆ, ಸಹಾಯಕ ಗ್ರಂಥಪಾಲಕ-ಸಾರ್ವಜನಿಕ ಗ್ರಂಥಾಲಯ: 13 ಹುದ್ದೆಗಳಿವೆ.

ವಿದ್ಯಾರ್ಹತೆ

ಕಿರಿಯ ಇಂಜಿನಿಯರ್ (JE): ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಸಿವಿಲ್‌ / ಮೆಕ್ಯಾನಿಕಲ್‌ ಡಿಪ್ಲೋಮಾ ಪದವಿ ಪಡೆದಿರಬೇಕು.

ಗ್ರಂಥಾಲಯ ಸಹಾಯಕ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಡಿಪ್ಲೋಮಾ ಇನ್‌ ಲೈಬ್ರರಿ ಸೈನ್ಸ್‌ (Diploma in Library Science) ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 600 ರೂ. ಪಾವತಿಸಬೇಕು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ / ಯುಪಿಐ ಮೂಲಕ ಆನ್‌ಲೈನ್‌ನಲ್ಲೇ ಪಾವತಿ ಮಾಡಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ವಿಷಯಗಳ ಪತ್ರಿಕೆಯನ್ನು ಹೊಂದಿದೆ. ಪ್ರತಿಯೊಂದು ಪತ್ರಿಕೆಯು 100 ಅಂಕಗಳ ಪ್ರಶ್ನೆಯನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ಒಟ್ಟು ಅಂಕ 200. ಗಮನಿಸಿ, ಪರೀಕ್ಷೆಯಲ್ಲಿ ನೆಗೆಟಿವ್‌ ಅಂಕವಿದ್ದು, ಎಚ್ಚರಿಕೆಯಿಂದ ಉತ್ತರಿಸಬೇಕು. ಆಯ್ಕೆಯಾಗುವ ಕಿರಿಯ ಎಂಜಿನಿಯರ್‌ಗೆ 33,450 ರೂ. -62,600 ರೂ. ಮತ್ತು ಗ್ರಂಥಾಲಯ ಸಹಾಯಕರಿಗೆ 30,350 ರೂ. – 58,250 ರೂ. ಮಾಸಿಕ ವೇತನ ಲಭಿಸಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Continue Reading
Advertisement
Dina bhavishya
ಭವಿಷ್ಯ59 mins ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Ramanagara News
ಕರ್ನಾಟಕ6 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ6 hours ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ6 hours ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ6 hours ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ6 hours ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ6 hours ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ7 hours ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ7 hours ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ7 hours ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ59 mins ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ10 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ12 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ12 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌