Acid Attacks In India |‌ 3 ವರ್ಷದಲ್ಲಿ ದೇಶಾದ್ಯಂತ 650 ಆ್ಯಸಿಡ್‌ ದಾಳಿ, ಬಂಗಾಳ ಅಗ್ರ, ಕರ್ನಾಟಕದ ಸ್ಥಾನ ಎಷ್ಟು? - Vistara News

ಕರ್ನಾಟಕ

Acid Attacks In India |‌ 3 ವರ್ಷದಲ್ಲಿ ದೇಶಾದ್ಯಂತ 650 ಆ್ಯಸಿಡ್‌ ದಾಳಿ, ಬಂಗಾಳ ಅಗ್ರ, ಕರ್ನಾಟಕದ ಸ್ಥಾನ ಎಷ್ಟು?

ಮೂರು ವರ್ಷದಲ್ಲಿ ದೇಶಾದ್ಯಂತ ಆ್ಯಸಿಡ್‌ ದಾಳಿ (Acid Attacks In India) ನಡೆದಿರುವ ಕುರಿತು ಕ್ರೈಂ ಇನ್‌ ಇಂಡಿಯಾ (Crime In India) ವರದಿ ನೀಡಿದ್ದು, ಪಶ್ಚಿಮ ಬಂಗಾಳದಲ್ಲಿ ಹೆಚ್ಚು ದಾಳಿ ನಡೆದಿವೆ.

VISTARANEWS.COM


on

Acid Attack on Girl
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮನುಷ್ಯ ಅನಕ್ಷರಸ್ಥನಾದಷ್ಟು, ಹೆಚ್ಚಿನ ವಿದ್ಯೆ ಕಲಿತಷ್ಟು ಆಂತರ್ಯದಲ್ಲಿರುವ ದ್ವೇಷ, ಕ್ರೌರ್ಯ, ಹಿಂಸಾ ಮನೋಭಾವ ಕುಂಠಿತವಾಗುತ್ತ ಹೋಗಬೇಕು. ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕನಾಗಬೇಕು. ಆದರೆ, ದೇಶದಲ್ಲಿ ಒಂದೆಡೆ ಸಾಕ್ಷರತೆ ಪ್ರಮಾಣ ಹೆಚ್ಚಾಗುತ್ತಿದ್ದರೆ, ಮತ್ತೊಂದೆಡೆ ಕ್ರೌರ್ಯ, ಹಿಂಸೆಯೂ ದುಪ್ಪಟ್ಟಾಗುತ್ತಿದೆ. ಇದಕ್ಕೆ ಉತ್ತಮ ನಿದರ್ಶನ ಎಂದರೆ, ದೇಶಾದ್ಯಂತ ಮೂರು ವರ್ಷದಲ್ಲಿ 659 ಆ್ಯಸಿಡ್‌ ದಾಳಿ ನಡೆದಿರುವುದು (Acid Attacks In India) ವರದಿಯೊಂದರಿಂದ ಬಹಿರಂಗವಾಗಿದೆ.

ದೇಶಾದ್ಯಂತ 2018ರಿಂದ 2020ರ ಅವಧಿಯ ಮೂರು ವರ್ಷದಲ್ಲಿ 659 ಆ್ಯಸಿಡ್‌ ದಾಳಿಗಳು ನಡೆದಿವೆ. ಆ್ಯಸಿಡ್‌ ದಾಳಿಗಳಲ್ಲಿ ಪಶ್ಚಿಮ ಬಂಗಾಳದ ಪ್ರಥಮ ಸ್ಥಾನ ಪಡೆದಿದ್ದು, 160 ಪ್ರಕರಣಗಳು ದಾಖಲಾಗಿವೆ. ನಂತರದ ಸ್ಥಾನದಲ್ಲಿ ಉತ್ತರ ಪ್ರದೇಶ (115), ಒಡಿಶಾ (35), ಮಧ್ಯಪ್ರದೇಶ (34), ಬಿಹಾರ (30) ಇವೆ. ಹಾಗೆಯೇ, ಕರ್ನಾಟಕವು 19 ಕೇಸ್‌ಗಳೊಂದಿಗೆ 11ನೇ ಸ್ಥಾನದಲ್ಲಿದೆ.

ಕರ್ನಾಟಕದಲ್ಲಿ 2018ರಲ್ಲಿ ಏಳು, 2019ರಲ್ಲಿ ಏಳು ಹಾಗೂ 2020ರಲ್ಲಿ ಐದು ಆ್ಯಸಿಡ್‌ ದಾಳಿ ಪ್ರಕರಣಗಳು ದಾಖಲಾಗಿವೆ. ಗಮನಾರ್ಹ ಸಂಗತಿ ಎಂದರೆ, ಅರುಣಾಚಲ ಪ್ರದೇಶ, ಮಿಜೋರಾಂ, ನಾಗಾಲ್ಯಾಂಡ್‌ ಹಾಗೂ ಸಿಕ್ಕಿಂನಲ್ಲಿ ಒಂದೇ ಒಂದು ಆ್ಯಸಿಡ್‌ ದಾಳಿ ಕೇಸ್‌ ದಾಖಲಾಗಿಲ್ಲ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ | Video| ವಿದ್ಯಾರ್ಥಿನಿ ಮೇಲೆ ಆ್ಯಸಿಡ್​ ದಾಳಿ; ಉರಿ ತಾಳಲಾರದೆ ನೋವಿನಿಂದ ಕಿರುಚುತ್ತ ರಸ್ತೆ ತುಂಬ ಓಡಿದ ಹುಡುಗಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಯಾದಗಿರಿ

Yadgiri News: ಬೆಳೆ ಸಮೀಕ್ಷೆ ಗುರಿ ಸಾಧನೆಗೆ ಅಧಿಕಾರಿಗಳು ಒತ್ತುಕೊಡಿ: ಡಿಸಿ ಡಾ. ಸುಶೀಲ

Yadgiri News: ರೈತರು ಮಾಡಿದ ಬೆಳೆ ಸಮೀಕ್ಷೆ ದತ್ತಾಂಶವು ಮುಂಬರುವ ದಿನಗಳಲ್ಲಿ ಅತಿವೃಷ್ಟಿ, ಅನಾವೃಷ್ಟಿ, ಬೆಳೆ ಹಾನಿ, ಬೆಂಬಲ ಬೆಲೆ, ಬೆಳೆವಿಮೆ ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳಿಂದ ಸೌಲಭ್ಯ ಪಡೆಯಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ತಿಳಿಸಿದ್ದಾರೆ.

VISTARANEWS.COM


on

Officers should emphasize on achieving crop survey targets says yadgiri DC Dr Sushila b
Koo

ಯಾದಗಿರಿ: ಬೆಳೆ ಸಮೀಕ್ಷೆಯಲ್ಲಿ ರೈತರಿಗೆ ತೊಂದರೆಯಾಗದ ರೀತಿಯಲ್ಲಿ ಅಧಿಕಾರಿಗಳು ಕಾರ್ಯ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ನಿರ್ದೇಶನ (Yadgiri News) ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಾತನಾಡಿದ ಅವರು, ರೈತರು ನಡೆಸುವ ಬೆಳೆ ಸಮೀಕ್ಷೆಯನ್ನು ಇಲಾಖೆಯ ಮೇಲ್ವಿಚಾರಕರು ಸರಿಯಾಗಿ ಪರಿಶೀಲಿಸಿ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪ್ರಸ್ತಕ ಸಾಲಿನಲ್ಲಿ ಕೂಡ ಬೆಳೆ ಸಮೀಕ್ಷೆ ಗುರಿ ಸಾಧನೆಗೆ ಒತ್ತುಕೊಡಬೇಕು. ರೈತರ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಅವರಿಂದ ಸ್ವೀಕರಿಸಿರುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಶೀಘ್ರ ವಿಲೇವಾರಿ ಮಾಡಿ ಪ್ರಗತಿ ಸಾಧಿಸಿ ಎಂದರು.

ರೈತರು ಮಾಡಿದ ಬೆಳೆ ಸಮೀಕ್ಷೆ ದತ್ತಾಂಶವು ಮುಂಬರುವ ದಿನಗಳಲ್ಲಿ ಅತಿವೃಷ್ಟಿ, ಅನಾವೃಷ್ಟಿ, ಬೆಳೆ ಹಾನಿ, ಬೆಂಬಲ ಬೆಲೆ, ಬೆಳೆವಿಮೆ ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳಿಂದ ಸೌಲಭ್ಯ ಪಡೆಯಲು ಸಹಕಾರಿಯಾಗಲಿದೆ ಎಂದು ಡಿಸಿ ತಿಳಿಸಿದರು.

ಇದನ್ನೂ ಓದಿ: Tulsi Tea Benefits: ನಿತ್ಯವೂ ತುಳಸಿ ಚಹಾ ಕುಡಿಯುವುದರಿಂದ ಏನೆಲ್ಲ ಲಾಭಗಳಿವೆ ಗೊತ್ತೇ?

ಜಿಲ್ಲೆಯಲ್ಲಿ ಜಮೀನು ಸರ್ವೇ ಕಾರ್ಯಗಳ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ಇಲಾಖೆಯ ಹಾಗೂ ನೋಂದಾಯಿತ ಸರ್ವೇಯರ್‌ಗಳಿಗೆ ಪ್ರಕರಣಗಳನ್ನು ಹಂಚಿಕೆ ಮಾಡಿದ ನಂತರ, ಸಂಬಂಧಪಟ್ಟ ಸ್ಥಳಕ್ಕೆ ಭೇಟಿ ನೀಡಿ, ಶೀಘ್ರದಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸರ್ವೇಯರ್‌ಗಳ ಪ್ರಗತಿಯನ್ನು ನಿರಂತರವಾಗಿ ಗಮನಿಸಲು ತಿಳಿಸಿದ ಅವರು, ಎಲ್ಲಾ ತಹಸೀಲ್ದಾರರು ಸರ್ಕಾರಿ ಜಮೀನಿಗೆ ಸಂಬಂಧಿಸಿದಂತೆ ಲ್ಯಾಂಡ್ ಬೀಟ್ ಆ್ಯಪ್‌ನಲ್ಲಿ ಕಾಲೋಚಿತ ಗೊಳಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದ ಸಂದರ್ಭದಲ್ಲಿ ಪ್ರವಾಹ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿಹಾನಿಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮಕೈಗೊಳ್ಳಬೇಕು ಎಂದರು.

ಮಳೆಯಿಂದ ಜಾನುವಾರು ಪ್ರಾಣ ಹಾನಿ, ವಾಸದ ಮನೆ ಹಾನಿಯಾಗಿದ್ದಲ್ಲಿ ತಕ್ಷಣ ಪರಿಹಾರ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಕೃಷಿ ಇಲಾಖೆ ಉಪ ನಿರ್ದೇಶಕಿ ಮಂಜುಳಾ ಸೇರಿದಂತೆ ಎಲ್ಲಾ ತಾಲೂಕಿನ ತಹಶೀಲ್ದಾರರು, ಕಂದಾಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Uttara Kannada News: ಸ್ಥಳೀಯ ಯುವ ಜನತೆಗೆ ಉದ್ಯೋಗವಕಾಶ ಸೃಷ್ಟಿಸಿ: ಡಾ. ರಮಣ ರೆಡ್ಡಿ

Uttara Kannada News: ಉತ್ತರ ಕನ್ನಡ ಜಿಲ್ಲೆಯ ಯುವಜನತೆಗೆ ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾ ನೆಲೆಯಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸುವಂತೆ ಹಾಗೂ ಈ ಕುರಿತು ಅಗತ್ಯವಿರುವ ಕೌಶಲ್ಯ ತರಬೇತಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ.ಇ.ವಿ. ರಮಣ ರೆಡ್ಡಿ ತಿಳಿಸಿದ್ದಾರೆ.

VISTARANEWS.COM


on

Create employment opportunities for local youth says Dr Raman Reddy
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯುವಜನತೆಗೆ ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾ ನೆಲೆಯಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸುವಂತೆ ಹಾಗೂ ಈ ಕುರಿತು ಅಗತ್ಯವಿರುವ ಕೌಶಲ್ಯ ತರಬೇತಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ. ಇ.ವಿ. ರಮಣರೆಡ್ಡಿ (Uttara Kannada News) ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಉದ್ಯೋಗಗಳನ್ನು ಒದಗಿಸಲು ಮತ್ತು ನೌಕಾ ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ಯೋಗವಕಾಶಗಳನ್ನು ಸ್ಥಳೀಯ ಯುವಜನತೆ ಒದಗಿಸುವ ಮೂಲಕ ಸ್ಥಳೀಯರಿಗೆ ಆರ್ಥಿಕ ಭದ್ರತೆ ಒದಗಿಸಬಹುದಾಗಿದೆ.

ಪ್ರಸ್ತುತ ಈ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸಲು ಸ್ಥಳೀಯ ಯುವಜನತೆ ದೊರೆಯದ ಕಾರಣ ಹೊರರಾಜ್ಯದಿಂದ ಕಾರ್ಮಿಕರು ಬರುತ್ತಿದ್ದಾರೆ. ಈ ಕಾರ್ಮಿಕರಿಗೆ ಇಲ್ಲಿ ತಂಗಲು ವಸತಿ ವ್ಯವಸ್ಥೆ ಮತ್ತು ಊಟೋಪಚಾರದ ವ್ಯವಸ್ಥೆಯನ್ನೂ ಸಹ ಸಂಬಂಧಪಟ್ಟ ಕಾರ್ಮಿಕ ಏಜೆನ್ಸಿಗಳು ನೋಡಿಕೊಳುತ್ತಿದ್ದು ಅವರಿಗೂ ಸಹ ಇದು ಹೆಚ್ಚಿನ ಹೊರೆಯಾಗಿದೆ ಎಂದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

ಆದ್ದರಿಂದ ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾ ನಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಲಭ್ಯವಿರುವ ಉದ್ಯೋಗವಕಾಶಗಳು, ಮಾನವ ಸಂಪನ್ಮೂಲದ ಬೇಡಿಕೆ ಮತ್ತು ಅದಕ್ಕೆ ಅಗತ್ಯವಿರುವ ಕೌಶಲ್ಯ ತರಬೇತಿಯ ಕುರಿತಂತೆ ಸಂಬಂಧಪಟ್ಟ ಸಂಸ್ಥೆಗಳಿಂದ ಮಾಹಿತಿ ಪಡೆದು, ಇಲ್ಲಿನ ಸ್ಥಳೀಯ ಯುವಜನತೆಗೆ ಕೌಶಲ್ಯ ತರಬೇತಿ ನೀಡುವುದರ ಮೂಲಕ ಉದ್ಯೋಗ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕೌಶಲ್ಯ ತರಬೇತಿ ಪಡೆದಿರುವ ಜಿಲ್ಲೆಯ ಸ್ಥಳೀಯ ಯುವಜನತೆಗೆ ನೌಕಾ ನೆಲೆಯಲ್ಲಿ ಅಪ್ರೆಂಟಿಸ್ ತರಬೇತಿ ನೀಡಲು ಎಲ್ಲಾ ವ್ಯವಸ್ಥೆಗಳನ್ನು ಒದಗಿಸುವುದಾಗಿ ನೌಕಾನೆಲೆಯ ಅಧಿಕಾರಿಗಳು ತಿಳಿಸಿದರು. ಸೂಕ್ತ ತರಬೇತಿ ಪಡೆದಿರುವ ಸ್ಥಳೀಯ ಯುವಜನತೆಗೆ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಉದ್ಯೋಗವಕಾಶ ನೀಡುವುದಾಗಿ ಮಾನವ ಸಂಪನ್ಮೂಲ ಒದಗಿಸುವ ಸಂಸ್ಥೆಗಳ ಅಧಿಕಾರಿಗಳು ಸಭೆಗೆ ತಿಳಿಸಿದರು.

ಜಿಲ್ಲೆಯ ಎಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾನೆಲೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯವಿರುವ ತಿಳುವಳಿಕೆ ಪತ್ರದ ಒಪ್ಪಂದ ಮಾಡಿಕೊಂಡು, ಸ್ಥಳೀಯ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಡಾ.ಇ.ವಿ.ರಮಣರೆಡ್ಡಿ ಸೂಚನೆ ನೀಡಿದರು.

ಇದನ್ನೂ ಓದಿ: Tulsi Tea Benefits: ನಿತ್ಯವೂ ತುಳಸಿ ಚಹಾ ಕುಡಿಯುವುದರಿಂದ ಏನೆಲ್ಲ ಲಾಭಗಳಿವೆ ಗೊತ್ತೇ?

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಸೀಬರ್ಡ್ ನೌಕಾನಲೆ, ಕೌಶಲ್ಯಾಭಿವೃದ್ದಿ, ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

Karnataka Rain: ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಾಳೆಯೂ ಕರಾವಳಿ ಭಾಗ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

VISTARANEWS.COM


on

ಉಡುಪಿ ಜಿಲ್ಲೆಯ ಸೀತಾ ನದಿ ಹರಿಯುವ ಭಾಗದಲ್ಲಿ ಗ್ರಾಮ, ತೋಟಗದ್ದೆಗಳು ಜಲಾವೃತವಾದ ದೃಶ್ಯ.
Koo

ಬೆಂಗಳೂರು: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿಯಾಗಿದೆ. ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆ ಸೇರಿ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದ (Karnataka Rain) ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ನೀರಿನ ರಭಸಕ್ಕೆ ಹಲವೆಡೆ ಸೇತುವೆಗಳು ಕುಸಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಡ್ರೋನ್ ಕಣ್ಣಲ್ಲಿ ಅಘನಾಶಿನಿ ನದಿ ಪ್ರವಾಹ ಸೆರೆ

ಕಾರವಾರ: ಜಿಲ್ಲೆಯ ಕರಾವಳಿಯಲ್ಲಿ ಕಳೆದೊಂದು ವಾರದಿಂದ ವರುಣ ಅಬ್ಬರಿಸುತ್ತಿದ್ದಾನೆ. ವರುಣಾರ್ಭಟಕ್ಕೆ ನದಿಗಳು ಉಕ್ಕಿ ಹರಿದು ಹಲವೆಡೆ ನೆರೆ ಸೃಷ್ಟಿಯಾಗಿದ್ದು, ಡ್ರೋನ್ ಕಣ್ಣಲ್ಲಿ ಅಘನಾಶಿನಿ ನದಿ ಪ್ರವಾಹ ಸೆರೆಯಾಗಿದೆ. ಕುಮಟಾ ತಾಲೂಕಿನ ಹಲವು ಗ್ರಾಮಗಳಲ್ಲಿ ಅಘನಾಶಿನಿ ನೆರೆ ಸೃಷ್ಟಿಸಿದ್ದು, ಹವ್ಯಾಸಿ ಛಾಯಾಚಿತ್ರಗಾರ ಗೋಪಿ ಜಾಲಿ ಡ್ರೋನ್ ಕ್ಯಾಮೆರಾದಲ್ಲಿ ನೆರೆ ಸ್ಥಿತಿಯನ್ನು ಸೆರೆಹಿಡಿದಿದ್ದಾರೆ.

ಸಕಲೇಶಪುರ ಬಳಿ ಹೆದ್ದಾರಿಯ ತಡೆಗೋಡೆ ಕುಸಿತ

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಬಳಿ ಹೆದ್ದಾರಿಯ ತಡೆಗೋಡೆ ಕುಸಿದಿದೆ. ಸುಮಾರು 500 ಮೀಟರ್ ಉದ್ದಕ್ಕೂ ರಸ್ತೆಗೆ ಹೊಂದಿಕೊಂಡಿದ್ದ ತಡೆ ಗೋಡೆ ಕುಸಿಯುತ್ತಿದೆ. ಮಳೆ ಹೆಚ್ಚಾದರೆ ಚತುಷ್ಪಥ ರಸ್ತೆಯ ಒಂದು ಭಾಗದ ಕಾಂಕ್ರಿಟ್ ರಸ್ತೆಯೇ ಕೊಚ್ಚಿ ಹೋಗೋ ಆತಂಕ ಇದೆ. ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ರಸ್ತೆ ಕುಸಿತ ಆರೋಪ ಕೇಳಿಬಂದಿದೆ. ನೆನ್ನೆ ಕೂಡ ತಾಲೂಕಿನ ಗುಲಗಳಲೆ ಬಳಿ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿ ಕುಸಿದಿತ್ತು.

ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಮಳೆ ನೀರು ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದೆ.

ದೊಡ್ಡತಪ್ಲು ಬಳಿ‌ ಗುಡ್ಡ ಕುಸಿತ

ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ‌ ಗುಡ್ಡ ಕುಸಿದಿದ್ದರಿಂದ ಸುಮಾರು ಒಂದುಗಂಟೆಗೂ ಅಧಿಕ ಸಮಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ರಸ್ತೆಗೆ ಕುಸಿದು ಮಣ್ಣು ತೆರವು ಬಳಿಕ ವಾಹನ ಸಂಚಾರ ಮತ್ತೆ ಆರಂಭವಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ ಕಡೆಯಿಂದ‌ ಮಂಗಳೂರು ಕಡೆಗೆ ಹೋಗೋ ವಾಹನಗಳ‌ ಮಾರ್ಗ ಬದಲಾವಣೆ ಮಾಡಲಾಗಿದ್ದು, ಹಾನುಬಾಳ್ ಮೂಲಕ ತೆರಳಲು ಸೂಚಿಸಿಲಾಗಿದೆ.

ಶೃಂಗೇರಿಯಲ್ಲಿ ನಿಲ್ಲದ ತುಂಗಾ ನದಿ ಆರ್ಭಟ

ಚಿಕ್ಕಮಗಳೂರು: ಜಿಲ್ಲೆಯ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ತುಂಗಾ ನದಿ ಆರ್ಭಟಿಸುತ್ತಿದೆ. ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನವು ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ.

ಶೃಂಗೇರಿಯ ಗಾಂಧಿ ಮೈದಾನವು ಸಂಪೂರ್ಣ ಮುಳುಗಡೆಯಾಗಿದೆ.

ಭಾರಿ ಮಳೆಗೆ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲೂ ಗುಡ್ಡ ಕುಸಿತಿದ್ದು, ಐದರಿಂದ ಆರು ಕಡೆ ಗುಡ್ಡದ ಮಣ್ಣು ಕುಸಿದಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಪ್ರವಾಸಿ ತಾಣಗಳಾಗಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ವಾಹನಗಳಿಗೆ ನಿಷೇಧ ವಿಧಿಸಲಾಗಿದೆ.

ಮುರಿದು ಬಿದ್ದ ಕಬ್ಬಿಣದ ಸೇತುವೆ

ಭಾರೀ ಮಳೆ ಹಿನ್ನೆಲೆ ಶೃಂಗೇರಿ ತಾಲೂಕಿನ ಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಮ್ಮಾರು ಗ್ರಾಮದ ತೂಗು ಸೇತುವೆ ಕುಸಿದಿದೆ. ನೋಡ ನೋಡುತ್ತಿದ್ದಂತೆ ಜನರ ಕಣ್ಣೆದುರೇ ಕಬ್ಬಿಣದ ಸೇತುವೆ ಮುರಿದು ಬಿದ್ದಿದೆ.
ಸುಮಾರು ಐದಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹೊಳೆಹದ್ದು ಸೇತುವೆ ಇದಾಗಿದ್ದು, ಗ್ರಾಮದಿಂದ ಹೊರ ಬರಲಾಗದೆ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತವಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಮಲಕಾಪುರ ಕಲ್ಲುಗಣಿಯಲ್ಲಿ‌ ತಡೆಗೋಡೆ ಕುಸಿದಿದೆ.

ಹೊನ್ನಾಳಿ, ಹರಿಹರದಲ್ಲಿ ನದಿ ಪಾತ್ರದ ಪ್ರದೇಶಗಳು ಮುಳುಗಡೆ

ದಾವಣಗೆರೆ: ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದ ದಾವಣಗೆರೆ ಜಿಲ್ಲೆಯ ಸಮೀಪ ತುಂಗಭದ್ರಾ ನದಿ ಮೈತುಂಬಿ ಹರಿಯುತ್ತಿದೆ. ತುಂಗಾ ನದಿಯಿಂದ 75 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರು ಹೊರ ಬಿಟ್ಟ ಹಿನ್ನೆಲೆಯಲ್ಲಿ ಹೊನ್ನಾಳಿ, ಹರಿಹರ ಸೇರಿದಂತೆ ನದಿ ಪಾತ್ರದ ಪ್ರದೇಶಗಳು ಮುಳುಗಡೆಯಾಗಿವೆ.

ಶ್ರೀ ಕ್ಷೇತ್ರ ಉಕ್ಕಡಗಾತ್ರಿ ದೇವಸ್ಥಾನದ ಮುಂಭಾಗಕ್ಕೆ ತುಂಗಭದ್ರಾ ನದಿ ನೀರು ಬಂದಿದ್ದು, ಸ್ನಾನ ಘಟ್ಟ, ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಳುಗಡೆಯಾಗಿವೆ. ಉಕ್ಕಡಗಾತ್ರಿಗೆ ಪ್ರವೇಶ ಮಾಡುವ ಒಂದು ರಸ್ತೆ ಮುಳುಗಡೆಯಾಗಿದೆ. ಸೇತುವೆ ಮಾಡಿಸಿ ಎಂದು ದಶಕಗಳಿಂದ ಹೋರಾಟ ನಡೆಯುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ. ಪ್ರತಿ ಬಾರಿ ನದಿಯಲ್ಲಿ ನೀರು ಹೆಚ್ಚಾದಾಗ ಎರಡು ರಸ್ತೆಗಳು ಬಂದ್ ಆಗಿ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಜನರು ಅಸಮಾಧಾನ ಹೊರಹಾಕಿದ್ದಾರೆ. ಹೊನ್ನಾಳಿ, ಹರಿಹರ ಸೇರಿದಂತೆ ಹಲವು ಕಡೆಗಳಲ್ಲಿ ಕೂಡ ವಸತಿ ಪ್ರದೇಶಕ್ಕೆ ನೀರು ನುಗ್ಗುವ ಆತಂಕ ಎದುರಾಗಿದೆ. ನದಿಯಲ್ಲಿ ಹೊರ ಹರಿವು ಕಡಿಮೆಯಾಗದಿದ್ದರೆ ಜನರನ್ನು ಸ್ಥಳಾಂತರ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಭಾರಿ ಮಳೆಯಿಂದ ಗೋಪಾಲ ಶಾಹೀರ್ ಎಂಬುವವರ ಮನೆಯ ಚಾವಣಿ ಕುಸಿತಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮೂಲೆ ಗದ್ದೆಮಠದ ಹತ್ತಿರ ಬಿದ್ದ ಬೃಹತ್ ಮರ ಬಿದ್ದಿದೆ.

ಮಡಿಕೇರಿ ಸಮೀಪ ಬಿರುಕು ಬಿಟ್ಟ ಗುಡ್ಡ

ಕೊಡಗು: ಮಡಿಕೇರಿ ಸಮೀಪದ ಮದೆನಾಡು ಸಮೀಪ ರಾಷ್ಟ್ರೀಯ 275ರಲ್ಲಿ ಗುಡ್ಡ ಕುಸಿಯುವ ಆತಂಕ ಉಂಟಾಗಿದೆ. ರಸ್ತೆ ಬದಿ ಇರೋ ಗುಡ್ಡದಲ್ಲಿ ಅಲ್ಲಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಯಾವ ಕ್ಷಣದಲ್ಲಾದರೂ ಗುಡ್ಡ ಕುಸಿದು ಬೀಳುವ ಸಾಧ್ಯತೆ ಇದೆ. ಮಂಜು ಮುಸುಕಿದ ವಾತಾವರಣದಿಂದ ವಾಹನ ಸವಾರರಿಗೆ ದಾರಿ ಸರಿಯಾಗಿ ಕಾಣುತ್ತಿಲ್ಲ. ಬಿರುಕು ಬಿಟ್ಟ ಸ್ಥಳಕ್ಕೆ ಮತ್ತಷ್ಟು ನೀರು ನುಗ್ಗಿದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ.

ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌

ಉಡುಪಿ: ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಪಶ್ಚಿಮ ಘಟ್ಟ, ಹೆಬ್ರಿ, ಕಾರ್ಕಳ, ಆಗುಂಬೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಸೀತಾ ನದಿಯ ಸುತ್ತಮುತ್ತಲ ಗ್ರಾಮ, ತೋಟಗದ್ದೆಗಳು ಜಲಾವೃತವಾದ ದೃಶ್ಯವನ್ನು ಡ್ರೋನ್ ಕ್ಯಾಮೆರಾದಿಂದ ಛಾಯಾಗ್ರಹಕ ಸಿದ್ಧಾರ್ಥ ನೀಲಾವರ ಸೆರೆಹಿಡಿದಿದ್ದಾರೆ. ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆ

ಮೈಸೂರು: ಕಬಿನಿ ಜಲಾಶಯದಿಂದ 36 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಹಿನ್ನೆಲೆಯಲ್ಲಿ ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಕಬಿನಿ ಡ್ಯಾಂನಿಂದ ಕಪಿಲಾ ನದಿಗೆ ನೀರು ಬಿಡುಗಡೆ ಮಾಡಿದ್ದರಿಂದ
ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಇನ್ನು ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಕ್ಕದ ನಿವಾಸಿಗಳು ಮನೆ ಖಾಲಿ ಮಾಡುತ್ತಿದ್ದು, ಪ್ರವಾಹದ ಭೀತಿ ಎದುರಿದುತ್ತಿದ್ದಾರೆ.

ಇದನ್ನೂ ಓದಿ | Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈದುಂಬಿ ಧುಮ್ಮಿಕ್ಕುತ್ತಿರುವ ಹೊಗೇನಕಲ್ ಜಲಪಾತ

ಚಾಮರಾಜನಗರ: ಕೆ.ಆರ್.ಎಸ್. ಹಾಗೂ ಕಬಿನಿ ಜಲಾಶಯದಿಂದ ಹೊರಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಕಾವೇರಿ ರೌದ್ರ ನರ್ತನ ಮಾಡುತ್ತಿದ್ದು, ಇದರಿಂದ ಕರ್ನಾಟಕ- ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ.

Continue Reading

ಪ್ರಮುಖ ಸುದ್ದಿ

Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

Karnataka Jobs Reservation: ಮುಂಜಾನೆ ಸಿಎಂ ಮಾಡಿದ್ದ ಎಕ್ಸ್‌ ಪೋಸ್ಟ್‌ ಬಗ್ಗೆ ಖಾಸಗಿ ಉದ್ಯಮ ವಲಯದಲ್ಲಿ ಕೋಲಾಹಲವೇ ಎದ್ದಿತ್ತು. ಕಿರಣ್‌ ಮಜುಂದಾರ್‌ ಶಾ, ಮೋಹನದಾಸ ಪೈ ಮುಂತಾದವರು ಈ ವಿಧೇಯಕವನ್ನು ಆಕ್ಷೇಪಿಸಿದ್ದರು. ಇದಾದ ಬಳಿಕ ಪೋಸ್ಟ್‌ ಅಳಿಸಿದ್ದ ಸಿಎಂ, ಇದೀಗ ಹೊಸ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

CM Siddaramaiah karnataka jobs reservation
Koo

ಬೆಂಗಳೂರು: ರಾಜ್ಯದ ಖಾಸಗಿ ಕೈಗಾರಿಕೆಗಳು (Private industry) ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ (Kannadiga employees) ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ (karnataka jobs reservation) ನಿಗದಿಪಡಿಸುವ ವಿಧೇಯಕಕ್ಕೆ (private jobs quota for locals bill) ಸೋಮವಾರ ನಡೆದ ಸಚಿವ ಸಂಪುಟ ಸಭೆಯು (karnataka Cabinet meeting) ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramiah) ತಿಳಿಸಿದ್ದಾರೆ.

ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ. ಇಂದು ಮುಂಜಾನೆ ಹಾಕಿದ್ದ ಪೋಸ್ಟ್‌ ಅನ್ನು ಅಳಿಸಿ ಬೇರೊಂದು ಪೋಸ್ಟ್‌ ಹಾಕಿದ್ದು, ಅದರಲ್ಲಿ ಈ ವಿಚಾರ ತಿಳಿಸಿದ್ದಾರೆ. ಪೋಸ್ಟ್‌ನಲ್ಲಿ ಹೀಗಿದೆ:

“ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ.”

ಮುಂಜಾನೆ ಅವರು ಮಾಡಿದ್ದ ಪೋಸ್ಟ್‌ನಲ್ಲಿ, “ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ʼಸಿʼ ಮತ್ತು ʼಡಿʼ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ” ಎಂದು ಬರೆದಿದ್ದರು. ಈ ಬಗ್ಗೆ ಖಾಸಗಿ ಉದ್ಯಮ ವಲಯದಲ್ಲಿ ಕೋಲಾಹಲವೇ ಎದ್ದಿತ್ತು. ಕಿರಣ್‌ ಮಜುಂದಾರ್‌ ಶಾ, ಮೋಹನದಾಸ ಪೈ ಮುಂತಾದವರು ಈ ವಿಧೇಯಕವನ್ನು ಆಕ್ಷೇಪಿಸಿದ್ದರು. ಇದಾದ ಬಳಿಕ ಪೋಸ್ಟ್‌ ಅಳಿಸಿದ್ದ ಸಿಎಂ, ಇದೀಗ ಹೊಸ ಪೋಸ್ಟ್‌ ಮಾಡಿದ್ದಾರೆ.

ಎಚ್ಚರದಿಂದ ಕಾನೂನು ರೂಪಿಸುತ್ತೇವೆ: ಪೊನ್ನಣ್ಣ

“ಖಾಸಗಿ ಕಂಪನಿಗಳು ಹಾಗೂ ಖಾಸಗಿ ವ್ಯಕ್ತಿಗಳ‌ ಮೇಲೆ ಕಾನೂನು ತರಬೇಕಾದರೆ ಸಂವಿಧಾನದ ಆಶಯಗಳಡಿಯ ಹಕ್ಕುಗಳ ಉಲ್ಲಂಘನೆಯಾಗದಂತೆ ಕಾನೂನು ಜಾರಿ ಮಾಡಬೇಕುʼ ಎಂದು ಸಿಎಂ ಕಾನೂನು ಸಲಹೆಗಾರರು ಪೊನ್ನಣ್ಣ ಹೇಳಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರದಲ್ಲಿ ಮಾತನಾಡಿರುವ ಅವರು, ʼಈ ಕಾನೂನುಗಳನ್ನ ನಾನು ಓದಿಲ್ಲ. ಓದಿದ ಮೇಲೆ‌ ಮಾತನಾಡಬಹುದು. ಗಂಭೀರವಾಗಿ ಅಧ್ಯಯನ ಮಾಡಿ ಅದನ್ನು ಜಾರಿಮಾಡುವ ಕೆಲಸವಾಗುತ್ತೆʼ ಎಂದಿದ್ದಾರೆ.

ʼಖಾಸಗಿ ಕಂಪನಿಗಳಿಗೆ ಹಾಗೂ ವ್ಯಕ್ತಿಗಳಿಗೆ ರಾಜ್ಯಾಂಗ, ರಾಜ್ಯದ ಸಂಸ್ಥೆಗಳಿಗಿಂತ ಹೆಚ್ಚಿನ ಮೂಲಭೂತ ಹಕ್ಕುಗಳಿರುತ್ತವೆ. ಸರ್ಕಾರ ಅದರಲ್ಲಿ ಹಸ್ತಕ್ಷೇಪ ಮಾಡುವ ಅವಕಾಶ ಕಡಿಮೆ. ಕನ್ನಡಿಗರಿಗೆ ಮೀಸಲಾತಿ ಕೋಡುವುದರಲ್ಲಿ ಸಂಶಯವಿಲ್ಲ. ಅದರಲ್ಲಿ ಶಾಲೆಗಳು, ಸರ್ಕಾರದ ಅನುದಾನ ಪಡೆಯುವಂತಹ ಸಂಸ್ಥೆಗಳಲ್ಲಿ ಮೀಸಲಾತಿ ಕೊಡಬಹುದು. ಸಂಪೂರ್ಣ ಖಾಸಗಿ ಸಂಸ್ಥೆಗಳಿಗೆ ಮೀಸಲಾತಿ ಕೋಡುವ ವೇಳೆ ಅದನ್ನು ಸಂಪೂರ್ಣ ಪರಿಶೀಲನೆ ಮಾಡಿ ಕೊಡಬೇಕಾಗುತ್ತದೆ. ಕೋರ್ಟ್‌ಗಳಲ್ಲಿ ನಾಳೆ ಪ್ರಶ್ನೆ ಮಾಡಿದರೆ ಅದರಲ್ಲೂ ಯಶಸ್ವಿಯಾಗಬೇಕು. ಕ್ಯಾಬಿನೆಟ್‌ನಲ್ಲಿ ಮಾಡಿರುತ್ತಾರೆ ಅಂದ್ರೆ ಸಂಪೂರ್ಣ ಅಧ್ಯಯನ ಮಾಡಿರುತ್ತಾರೆ. ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ಏಳ್ಗೆಗೆ ಬದ್ಧವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: CM Siddaramaiah : ಅಸಮಾನತೆ ತೊಲಗಿದಾಗ ಮಾತ್ರ ಸ್ವಾತಂತ್ರ್ಯಕ್ಕೆ ಬೆಲೆ ಎಂದ ಸಿಎಂ ಸಿದ್ದರಾಮಯ್ಯ

Continue Reading
Advertisement
Gautam Gambhir
ಪ್ರಮುಖ ಸುದ್ದಿ15 seconds ago

Gautam Gambhir : ಬೌಲಿಂಗ್​, ಬ್ಯಾಟಿಂಗ್​ ಕೋಚ್​ಗಳ ಆಯ್ಕೆಯಲ್ಲಿ ಗಂಭೀರ್​ ಬೇಡಿಕೆಗಳನ್ನು ತಿರಸ್ಕರಿಸಿದ ಬಿಸಿಸಿಐ

Murder Case
Latest12 mins ago

Murder Case: ನರ್ಸ್‌ ಜೊತೆ ಅಕ್ರಮ ಸಂಬಂಧ; ಪತ್ನಿ, ಇಬ್ಬರು ಮಕ್ಕಳನ್ನು ಕೊಂದ ಡಾಕ್ಟರ್‌!

Nita Ambani Saree Fashion
ಫ್ಯಾಷನ್18 mins ago

Nita Ambani Saree Fashion: ಮಾರುಕಟ್ಟೆಗೆ ಬಂತು ನೀತಾ ಅಂಬಾನಿಯ ಸೀರೆಗಳ ಮಾಡೆಲ್‌!

Anant Radhika Wedding
Latest18 mins ago

Anant Radhika Wedding: ಅನಂತ್‌-ರಾಧಿಕಾಗೆ ಗುಜರಾತ್‌ ಜನತೆಯಿಂದ ಅದ್ಧೂರಿ ಸ್ವಾಗತ; ವಿಡಿಯೊ ನೋಡಿ

Officers should emphasize on achieving crop survey targets says yadgiri DC Dr Sushila b
ಯಾದಗಿರಿ21 mins ago

Yadgiri News: ಬೆಳೆ ಸಮೀಕ್ಷೆ ಗುರಿ ಸಾಧನೆಗೆ ಅಧಿಕಾರಿಗಳು ಒತ್ತುಕೊಡಿ: ಡಿಸಿ ಡಾ. ಸುಶೀಲ

Suvendu Adhikari
ದೇಶ27 mins ago

Suvendu Adhikari: “ಅಲ್ಪಸಂಖ್ಯಾತ ಮೋರ್ಚಾದ ಅವಶ್ಯಕತೆ ಇಲ್ಲ..ರದ್ದು ಮಾಡಿ”- ಸುವೆಂದು ಅಧಿಕಾರಿ ವಿವಾದ

Create employment opportunities for local youth says Dr Raman Reddy
ಉತ್ತರ ಕನ್ನಡ50 mins ago

Uttara Kannada News: ಸ್ಥಳೀಯ ಯುವ ಜನತೆಗೆ ಉದ್ಯೋಗವಕಾಶ ಸೃಷ್ಟಿಸಿ: ಡಾ. ರಮಣ ರೆಡ್ಡಿ

ICC T20 Ranking
ಪ್ರಮುಖ ಸುದ್ದಿ1 hour ago

ICC T20 Ranking: ಟಿ20 ರ್ಯಾಂಕಿಂಗ್​ನಲ್ಲಿ ಭರ್ಜರಿ ಬಡ್ತಿ ಪಡೆದ ಯಶಸ್ವಿ ಜೈಸ್ವಾಲ್​, ಶುಭ್​ಮನ್​ ಗಿಲ್​

Viral Video
ವೈರಲ್ ನ್ಯೂಸ್2 hours ago

Viral Video: ಡಿಸಿ ಆಫೀಸ್‌ನಲ್ಲಿ ಗೋಳಾಡುತ್ತಾ ನೆಲದಲ್ಲಿ ಹೊರಳಾಡಿದ ರೈತ; ವೈರಲಾಗ್ತಿದೆ ಈ ವಿಡಿಯೋ

Yezdi Roadster
ಆಟೋಮೊಬೈಲ್2 hours ago

Yezdi Roadster : ಯೆಜ್ಡಿ ರೋಡ್‌ಸ್ಟರ್ ಜತೆಗೆ ಈ ಹಲವು ಆ್ಯಕ್ಸೆಸರಿಗಳಿರುವ ಟ್ರಯಲ್ ಪ್ಯಾಕ್ ಉಚಿತ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌