Property fraud | ಹೆತ್ತವಳಿಗೆ ವಂಚನೆ ಮಾಡಿದ ಪಾಪಿ ಮಗ; ಕೋರ್ಟ್‌ ನೋಟಿಸ್‌ಗೆ ಮಂಚದಲ್ಲೆ ಹೊತ್ತು ತಂದ ಮಕ್ಕಳು - Vistara News

ಕರ್ನಾಟಕ

Property fraud | ಹೆತ್ತವಳಿಗೆ ವಂಚನೆ ಮಾಡಿದ ಪಾಪಿ ಮಗ; ಕೋರ್ಟ್‌ ನೋಟಿಸ್‌ಗೆ ಮಂಚದಲ್ಲೆ ಹೊತ್ತು ತಂದ ಮಕ್ಕಳು

ಸುಳ್ಳು ಹೇಳಿ ಆಸ್ತಿ ಬರೆಸಿಕೊಂಡು (Property fraud) ತಾಯಿಯನ್ನು ಹೊರಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ, ಅನಾರೋಗ್ಯ ಪೀಡಿತ ತಾಯಿಯನ್ನು ಮಂಚದ ಮೇಲೆ ಮಲಗಿಸಿ ಎಸಿ ಕೋರ್ಟ್‌ಗೆ ಕರೆತಂದ ಘಟನೆಗೆ ಕೊಳ್ಳೇಗಾಲದ ಎಸಿ ಕೋರ್ಟ್ ಸಾಕ್ಷಿಯಾಗಿದೆ.

VISTARANEWS.COM


on

Kollegal AC Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಇಲ್ಲಿನ ಕೊಳ್ಳೇಗಾಲದ ಎಸಿ ಕೋರ್ಟ್‌ನಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ವಯಸ್ಸಾದ ಕಾಲದಲ್ಲಿ ಆಸರೆ ಆಗಬೇಕಾದ ಮಗನೊಬ್ಬ ಸುಳ್ಳು ಹೇಳಿ, ತಾಯಿಯ ಆಸ್ತಿಯನ್ನು ಬರೆಸಿಕೊಂಡಿದ್ದಲ್ಲದೇ, ಜೀವ ಬೆದರಿಕೆ ಹಾಕಿರುವ (Property fraud) ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಪ್ರಕರಣ ಸಂಬಂಧ ಕೋರ್ಟ್‌ ನೋಟಿಸ್‌ ಬಂದಿದ್ದರಿಂದ ಹಾಸಿಗೆ ಹಿಡಿದ ಸ್ಥಿತಿಯಲ್ಲಿಯೇ ಕೋರ್ಟ್‌ಗೆ ವೃದ್ಧೆ ಹಾಜರಾದ ಪ್ರಸಂಗ ನಡೆದಿದೆ.

ಹಜ್‌ ಯಾತ್ರೆಗೆ ಪಾಸ್‌ಪೋರ್ಟ್‌ ಮಾಡಿಸಿಕೊಡುವುದಾಗಿ ನಂಬಿಸಿ ತಾಯಿಯ ಹೆಸರಿನಲ್ಲಿದ್ದ ೩ ಎಕರೆ ಜಮೀನು ಜಾಗವನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾನೆ. ಸುಳ್ಳು ಹೇಳಿ ಆಸ್ತಿ ಬರೆಸಿಕೊಂಡ ಮಗನ ಮೇಲೆ ತಾಯಿ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಚಾಮರಾಜನಗರ ನಿವಾಸಿ ಮುಮ್ತಾಜ್ ಬೇಗಂಗೆ (75) ವಂಚನೆಗೊಳಗಾದವರು. ಇವರ ಕೊನೆಯ ಮಗ ಅಬ್ದುಲ್‌ ರಜಾಕ್ ಅಲಿಯಾಸ್‌ ಸಿದ್ದಿಕ್ ವಂಚನೆ ಮಾಡಿರುವುದು ಗೊತ್ತಾಗಿದೆ. ಮುಮ್ತಾಜ್‌ಗೆ ಮೂವರು ಹೆಣ್ಣು ಮಕ್ಕಳು ಮತ್ತು 6 ಗಂಡು ಮಕ್ಕಳಿದ್ದಾರೆ. ಕಳೆದ 22 ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಪತ್ನಿ ಹೆಸರಿಗೆ ಪತಿ ಸಿ.ಎಸ್‌.ನಿಸಾರ್ ಅಹ್ಮದ್ ಮೂರು ಎಕರೆ ಜಮೀನನ್ನು ಬರೆದಿದ್ದರು. ಆದರೆ, ಇದೇ ಜಮೀನು ಈಗ ಬೇಗಂ ಅವರಿಗೆ ಉರುಳಾಗಿ ಪರಿಣಮಿಸಿದೆ.

ವೃದ್ಧೆ ಬೇಗಂರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ನೆನಪಿನ ಶಕ್ತಿಯೂ ಕಡಿಮೆಯಾಗಿದೆ ಎಂದು ಹೇಳಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಅಬ್ದುಲ್‌ ರಜಾಕ್ ಅಲಿಯಾಸ್‌ ಸಿದ್ದಿಕ್, ಹಜ್ ಯಾತ್ರೆಗೆ ಹೋಗಲು ಪಾಸ್‌ಪೋರ್ಟ್ ಮಾಡಿಸುವುದಾಗಿ ಹೇಳಿದ್ದಾನೆ. ಬಳಿಕ ನೇರವಾಗಿ ಚಾಮರಾಜನಗರ ಸಬ್‌ರಿಜಿಸ್ಟ್ರಾರ್‌ ಆಫೀಸ್‌ಗೆ ಕರೆದುಕೊಂಡು ಹೋಗಿದ್ದು, ತಾಯಿಯ ಹೆಸರಿನಲ್ಲಿದ್ದ ಜಮೀನನ್ನು ತನ್ನ ಹೆಸರಿಗೆ ದಾನಪತ್ರವನ್ನು ಬರೆಸಿಕೊಂಡಿದ್ದಾನೆ. ಅಲ್ಲದೆ, ಸುಳ್ಳು ವಂಶವೃಕ್ಷ ಮಾಡಿಸಿಕೊಂಡು ಸಹಿ ಹಾಕಿಸಿಕೊಂಡು ವಂಚನೆ ಮಾಡಿರುವುದಾಗಿ ವೃದ್ಧೆ ಬೇಗಂ ಆರೋಪಿಸಿದ್ದಾರೆ.

ಇವೆಲ್ಲದರ ಜತೆಗೆ ಬ್ಯಾಂಕ್‌ ಅಕೌಂಟ್‌ ಮಾಡಿಸುವುದಾಗಿ ಹೇಳಿ ತಾಯಿಯಿಂದ ಸಹಿ ಹಾಕಿಸಿಕೊಂಡು 3,50,000 ರೂ. ಸಾಲ ತೆಗೆದುಕೊಂಡಿದ್ದಾನೆ. ಬ್ಯಾಂಕ್‌ನಿಂದ ಕೋರ್ಟ್ ಮುಖಾಂತರ ನೋಟಿಸ್ ಬಂದಾಗಲೇ, ಉಳಿದ ಎಲ್ಲ ಮಕ್ಕಳಿಗೆ ವಂಚನೆ ಮಾಡಿರುವ ವಿಷಯ ತಿಳಿದಿದೆ.

ಪ್ರಾಣ ಬೆದರಿಕೆ ಹಾಕಿದ ಮಗ, ಕೋರ್ಟ್‌ ಮೆಟ್ಟಿಲೇರಿದ ತಾಯಿ
ಮಗನ ಮೋಸ ಜಾಲ ತಿಳಿಯುತ್ತಿದ್ದಂತೆ ವೃದ್ಧೆ ಮುಮ್ತಾಜ್‌ ಬೇಗಂ ಲೋಕ ಅದಾಲತ್‌ಗೆ ಕೇಸ್ ಹಾಕಿದ್ದಾರೆ. ಈ ವೇಳೆ ಕೋರ್ಟ್‌ಗೆ ಮೊಕದ್ದಮೆಯನ್ನು ಕೊಟ್ಟ ಮೇಲೆ ಮಗನಿಂದ ಪ್ರಾಣ ಬೆದರಿಕೆ ಬಂದಿರುವುದಾಗಿ ಆರೋಪಿಸಿದ್ದಾರೆ. ಕೇಸ್‌ ವಾಪಸ್‌ ತೆಗೆದುಕೊಳ್ಳಬೇಕುಮ ಇಲ್ಲದಿದ್ದರೆ ʻನಿಮ್ಮನ್ನು ಅಪಹರಣ ಮಾಡಿ ಹೊರಗೆ ಕರೆದುಕೊಂಡು ಹೋಗಿ ಹೊಡೆದು ಸಾಯಿಸುತ್ತೇನೆ, ಸಹೋದರಿ ಆಯಿಷಾಳನ್ನೂ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇತ್ತ ಮಗನಿಗೆ ಹೆದರಿದ ತಾಯಿ ಮನೆ ಬಿಟ್ಟು ಹೋಗಿ ಮೈಸೂರಿನಲ್ಲಿ ವಾಸವಿದ್ದರು ಎನ್ನಲಾಗಿದೆ. ಈ ವಿಷಯ ತಿಳಿದ ಅಬ್ದುಲ್‌ ಕಾರಿನಲ್ಲಿ 5-6 ಜನರನ್ನು ಕರೆದುಕೊಂಡು ಹೋಗಿ ಗಲಾಟೆ ಮಾಡಿ ಬಂದಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಇತ್ತ ಲೋಕ ಅದಾಲತ್‌ನಲ್ಲಿ ಕೇಸ್‌ ಹಾಕಿದ್ದರಿಂದ ಕೊಳ್ಳೇಗಾಲದ ಎಸಿ ಕೋರ್ಟ್‌ಗೆ ಹಾಜರಾಗಬೇಕೆಂದು ಮುಮ್ತಾಜ್‌ ಬೇಗಂಗೆ ನೋಟಿಸ್ ಬಂದಿದೆ. ಪ್ರಾಣ ಭಯ ಹಾಗೂ ಅನಾರೋಗ್ಯ ಕಾರಣದಿಂದಾಗಿ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ ಎಂದು ಬೇಗಂ ತಿಳಿಸಿದ್ದಾರೆ. ಅಲ್ಲದೆ, ಇವರ ಉಳಿದ ಮಕ್ಕಳು ಈ ಕೃತ್ಯದ ಬಗ್ಗೆ ಆಕ್ರೋಶವನ್ನು ಹೊರಹಾಕಿದ್ದಾರೆ.

ಅನಾರೋಗ್ಯ ಪೀಡಿತ ತಾಯಿಯನ್ನು ಮಂಚದಲ್ಲಿ ಹೊತ್ತು ತಂದ ಮಗ
ಆಸ್ತಿ ವಿವಾದ ಸಂಬಂಧ ವಿಚಾರಣೆ ಇದ್ದ ಕಾರಣಕ್ಕಾಗಿ ಆಸ್ಪತ್ರೆಯಲ್ಲಿದ್ದ ತಾಯಿಯನ್ನು ಮಂಚದ ಮೇಲೆಯೇ ಕೊಳ್ಳೇಗಾಲ ಕೋರ್ಟ್‌ಗೆ ಕರೆ ತಂದ ಘಟನೆ ಬುಧವಾರ ನಡೆದಿದೆ. ಪುತ್ರನ ವಿರುದ್ಧ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ 2007ರ ಅಡಿ ಮುಮ್ತಾಜ್ ಬೇಗಂ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ, ವಂಚನೆ ಪ್ರಕರಣ ಸಂಬಂಧ ಮುಮ್ತಾಜ್‌ಗೆ ನೋಟಿಸ್‌ ಬಂದಿದ್ದರಿಂದ ಉಳಿದ ಮಕ್ಕಳು ಹಾಸಿಗೆ ಹಿಡಿದ ಸ್ಥಿತಿಯಲ್ಲಿ ಮಂಚದ ಸಮೇತವೇ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಈ ವೇಳೆ ಮಂಚದ ಮೇಲೆ ಬಂದ ವೃದ್ಧೆಯನ್ನು ಕಂಡು ವಿಚಾರಣೆ ನಡೆಸದೆ ಕೊಳ್ಳೇಗಾಲದ ಎಸಿ ಗೀತಾ ಹುಡೇದ ವಾಪಸ್ ಕಳುಹಿಸಿದ್ದಾರೆ.

ಅಲ್ಲದೆ, ಮಗನಿಂದ ಪ್ರಾಣ ಬೆದರಿಕೆ ಇದೆ ಎಂದು ಮುಮ್ತಾಜ್‌ ಬೇಗಂ ಮತ್ತು ಮಗಳು ಸಿ.ಎನ್.ನೂರ್ ಆಯಿಷಾ ದೂರು ನೀಡಿದ್ದರಿಂದ ರಕ್ಷಣೆ ನೀಡುವ ಸಂಬಂಧ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‌ರಾಜ್ ಅವರನ್ನು ಭೇಟಿ ಮಾಡಿಸಿ ಸಮಾಲೋಚನೆ ನಡೆಸಲಾಗಿದೆ ಎಂದು ಗೀತಾ ಹುಡೇದಾ ಹೇಳಿದ್ದಾರೆ.

ಇದನ್ನೂ ಓದಿ | Moral policing | ಬಸ್ಸಿನಲ್ಲಿ ಮೈ ತಾಗಿದ ವಿಚಾರದಲ್ಲಿ ತಗಾದೆ: ಮುಸ್ಲಿಂ ಕೂಲಿ ಕಾರ್ಮಿಕನ ಮೇಲೆ ಯದ್ವಾತದ್ವಾ ಹಲ್ಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Namma Metro : ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದ 4 ವರ್ಷದ ಮಗು! ಮುಂದೇನಾಯ್ತು

Namma Metro : ತಾಯಿ ಜತೆಗೆ ಮೆಟ್ರೋಗೆ ಬಂದಿದ್ದ ಮಗುವೊಂದು ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದ ಘಟನೆ ಬೈಯಪ್ಪನಹಳ್ಳಿಯಲ್ಲಿ (Baiyappanahalli Metro) ನಡೆದಿದೆ. ಅದೃಷ್ಟವಶಾತ್‌ ಮಗುವು ಪ್ರಾಣಾಪಾಯದಿಂದ ಪಾರಾಗಿದೆ.

VISTARANEWS.COM


on

By

Namma Metro
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro ) ಮಕ್ಕಳಿಗೆ ಸೇಫ್ಟಿ ಇಲ್ವಾ?? ಇಂತಹದೊಂದು ಅನುಮಾನ ಸಹಜವಾಗಿಯೇ ಕಾಡುತ್ತದೆ. ಕೆಲವೊಮ್ಮೆ ಸಿಬ್ಬಂದಿ ಇದ್ದರೂ ಅಚಾರ್ತುಯಗಳು ನಡೆದು ಹೋಗಿ ಬಿಡುತ್ತವೆ. ಸದ್ಯ ನಿನ್ನೆ ಗುರುವಾರ ನಾಲ್ಕು ವರ್ಷದ ಮಗುವೊಂದು ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದಿದೆ.

ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್‌ನಲ್ಲಿ (Baiyappanahalli Metro) ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೆಟ್ರೋ ರೈಲು ಬರಲು ನಾಲ್ಕೈದ ನಿಮಿಷಗಳು ಬಾಕಿ ಇದ್ವು. ಈ ವೇಳೆ ಆಟವಾಡುತ್ತಾ ಮಗು ಟ್ರ್ಯಾಕ್‌ ಮುಂದೆ ಬಂದಿದೆ. ಬಗ್ಗಿ ನೋಡುವಾಗ ಆಕಸ್ಮಿಕವಾಗಿ ಆಯತಪ್ಪಿ ಟ್ರ್ಯಾಕ್‌ಗೆ ಬಂದಿದೆ. ಮಗು ಟ್ರ್ಯಾಕ್‌ಗೆ ಬಿದ್ದ ತಕ್ಷಣ ಅಲರ್ಟ್‌ ಆದ ಮೆಟ್ರೋ ಸಿಬ್ಬಂದಿ, ಮೆಟ್ರೋ ಟ್ರ್ಯಾಕ್‌ನ ಪವರ್ ಕಟ್ ಮಾಡಿಸಿದ್ದಾರೆ.

ಇದನ್ನೂ ಓದಿ: Gold Rate Today: ಸ್ವರ್ಣಪ್ರಿಯರಿಗೆ ಶಾಕ್‌; ಮತ್ತೆ ಏರಿಕೆ ಕಂಡ ಚಿನ್ನದ ದರ

ಕೂಡಲೇ ಟ್ರ್ಯಾಕ್‌ಗೆ ಇಳಿದು ಮಗುವನ್ನು ರಕ್ಷಣೆ ಮಾಡಿದ್ದಾರೆ. ಅದೃಷ್ಟವಶಾತ್‌ ಮಗುವಿಗೆ ಯಾವುದೇ ಅಪಾಯವಾಗಿಲ್ಲ. ಇನ್ನೂ ಈ ಘಟನೆಯಿಂದ ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ನಿನ್ನೆ (ಆ.1) ರಾತ್ರಿ 9 ಗಂಟೆ 8 ನಿಮಿಷದಿಂದ 9 ಗಂಟೆ 16 ನಿಮಿಷದ ವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿ, 2 ರೈಲು ಸಂಚಾರವನ್ನು ಬಿಎಂಆರ್‌ಸಿಎಲ್‌ ಸ್ಥಗಿತಗೊಳಿಸಿತ್ತು. ಬಳಿಕ ಎಂದಿನಂತೆ ಮೆಟ್ರೋ ಸಂಚಾರಾರಂಭವಾಗಿತ್ತು.

ಇಬ್ಬರೂ ಮೆಟ್ರೋ ಸೆಕ್ಯುರಿಟಿ ಗಾರ್ಡ್‌ಗಳಿಂದ ಮಗುವಿನ ಪ್ರಾಣ ಉಳಿದಿದೆ. ಮಗುವಿಗೆ ಯಾವುದೇ ಗಾಯಗಳು ಆಗದ ರೀತಿಯಲ್ಲಿ ಮೆಟ್ರೋ ವಿದ್ಯುತ್ ಲೈನ್ ಆಫ್ ಮಾಡಿದ್ದಾರೆ. ಮೆಟ್ರೋ ಸೆಕ್ಯುರಿಟಿಗಳು, ಸಿಬ್ಬಂದಿ ಚೂರು ಯಾಮಾರಿದರೂ ಮಗುವಿನ ಪ್ರಾಣ ಹೋಗುತ್ತಿತ್ತು ಎಂಬ ಮಾಹಿತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Actor Darshan: ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ನಡುವೆಯೇ ಚಕಮಕಿ, ಗೋಳಾಟ!

Actor Darshan: ಸದ್ಯ ಸುರಕ್ಷತೆಯ ಕಾರಣದ ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ಸ್ಥಳಾಂತರಿಸಿರುವ ನಾಲ್ವರ ನಡುವೆ ಮಾತಿನ ಚಕಮಕಿ ನಡೆದಿದೆ. ಆರೋಪಿಗಳಾದ ರವಿಶಂಕರ್, ನಿಖಿಲ್, ಕಾರ್ತಿಕ್, ಕೇಶವ ಎಲ್ಲರೂ ಒಂದೇ ಬ್ಯಾರಕ್‌ನಲ್ಲಿದ್ದಾರೆ. ಪ್ರಕರಣದ ಹೊಣೆ ನಿನ್ನದು ನಿನ್ನದು ಎಂದು ನಾಲ್ವರೂ ಬೈದಾಡಿಕೊಂಡಿದ್ದಾರೆ.

VISTARANEWS.COM


on

Actor Darshan Lost KG In 25 Days
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಜೊತೆಗೆ ಬಂಧಿತರಾಗಿ ನಂತರ ತುಮಕೂರು ಜೈಲಿನಲ್ಲಿ (Tumkur news) ಒಂದೇ ಸೆಲ್‌ನಲ್ಲಿರುವ ಆರೋಪಿಗಳ ನಡುವೆ ಪರಸ್ಪರ ಮಾತಿನ ಚಕಮಕಿ, ಬೈಗುಳ ವಿನಿಮಯ ಹಾಗೂ ಹೊಯ್‌ಕೈ ನಡೆದಿರುವುದು ವರದಿಯಾಗಿದೆ.

ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳಲ್ಲಿ ಒಬ್ಬೊಬ್ಬನ ಕತೆಯೂ ಒಂದೊಂದು ಬಗೆಯಾಗಿದ್ದು, ತನ್ನ ಸ್ಥಿತಿಯಿಂದಾಗಿ ಹತಾಶರಾಗಿದ್ದಾರೆ. ಪ್ರಕರಣದಲ್ಲಿ ಎ1 ಆರೋಪಿ ಪವಿತ್ರ ಗೌಡ, ಎ2 ಆರೋಪಿ ದರ್ಶನ್‌ ಸೇರಿದಂತೆ ಯಾರಿಗೂ ಜಾಮೀನು ದೊರೆತಿಲ್ಲ. ಹೀಗಾಗಿ ಇನ್ನುಳಿದವರಿಗೂ ಜಾಮೀನು ಸಿಗುವ ಸಾಧ್ಯತೆ ಕ್ಷೀಣವಾಗಿದೆ.

ಸದ್ಯ ಸುರಕ್ಷತೆಯ ಕಾರಣದ ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ಸ್ಥಳಾಂತರಿಸಿರುವ ನಾಲ್ವರ ನಡುವೆ ಮಾತಿನ ಚಕಮಕಿ ನಡೆದಿದೆ. ಆರೋಪಿಗಳಾದ ರವಿಶಂಕರ್, ನಿಖಿಲ್, ಕಾರ್ತಿಕ್, ಕೇಶವ ಎಲ್ಲರೂ ಒಂದೇ ಬ್ಯಾರಕ್‌ನಲ್ಲಿದ್ದಾರೆ. ಪ್ರಕರಣದ ಹೊಣೆ ನಿನ್ನದು ನಿನ್ನದು ಎಂದು ನಾಲ್ವರೂ ಬೈದಾಡಿಕೊಂಡಿದ್ದಾರೆ.

ನಿನ್ನ ಮಾತು ಕೇಳಿ ನಾನೂ ಸಿಕ್ಹಾಕಿಕೊಂಡೆ ಅಂತ ಪರಸ್ಪರ ನಿಂದಿಸಿಕೊಂಡಿದ್ದಾರೆ. ರಾಘವೇಂದ್ರನ ಮಾತು ಕೇಳಿ ನಾವು ಸಿಲುಕಿಕೊಂಡೆವು. ನಮಗೆ ಜೈಲೇ ಗಟ್ಟಿಯಾಗುತ್ತೆ. ಯಾರೂ ಸಹಾಯ ಮಾಡುವುದಿಲ್ಲ ಎಂದು ಗೋಳಾಡಿಕೊಂಡಿದ್ದಾರೆ.‌ ದರ್ಶನ್‌ಗೆ ಜಾಮೀನು ಅರ್ಜಿಯನ್ನಾದರೂ ಸಲ್ಲಿಸಲಾಗಿತ್ತು. ಆದರೆ ಇವರಿಗೆ ಜಾಮೀನು ನೀಡುವುದಕ್ಕೂ ಯಾರೂ ಮುಂದೆ ಬಂದಿಲ್ಲ. ದರ್ಶನ್‌ ಮನೆಯವರು ಹಾಗೂ ನ್ಯಾಯವಾದಿಗಳ ತಂಡದ ಕಡೆಯಿಂದಲೂ ಸಹಾಯದ ಭರವಸೆ ದೊರೆತಿಲ್ಲ ಎನ್ನಲಾಗಿದೆ.

ಈ ಪ್ರಕರಣದ ಬಳಿಕ ನಮ್ಮೆಲ್ಲರ ಜೀವನ ಸೆಟ್ಲ್ ಆಗುತ್ತೆ ಡೋಂಟ್ ವರಿ ಎಂದು ಇನ್ನೊಬ್ಬ ಆರೋಪಿ ರಾಘವೇಂದ್ರ ಹಣದ ಆಮಿಷ ತೋರಿಸಿದ್ದನಂತೆ. ಕೊಲೆ ಬಳಿಕ ಮೃತದೇಹ ಬಿಸಾಡಿದ್ದು, ಸ್ಟೇಷನ್‌ಗೆ ಹೋಗಿ ಸರೆಂಡರ್ ಆಗಿದ್ದು ಎಲ್ಲವನ್ನೂ ಈ ಆರೋಪಿಗಳು ರಾಘವೇಂದ್ರ ಹೇಳಿದಂತೆ ಮಾಡಿದ್ದಾರೆ. ಆದರೆ ಪೊಲೀಸರ ತನಿಖೆಯ ಬಿಗಿ ಹೆಚ್ಚಾಗುತ್ತ ಹೋದಂತೆ ಎಲ್ಲವನ್ನೂ ಹೇಳಿಬಿಟ್ಟಿದ್ದಾರೆ.

ದುಡ್ಡಿನ ಆಸೆಗೆ ತಪ್ಪು ಮಾಡಿಬಿಟ್ಟೆವು ಎಂದು ಇದೀಗ ಜೈಲು ಸಿಬ್ಬಂದಿ ಬಳಿ ಆರೋಪಿಗಳು ಅಳಲು ತೋಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ. ಜೋರು ಮಾತುಗಳಿಂದ ನಾಲ್ವರೂ ಬೈದಾಡಿಕೊಂಡಿದ್ದು, ಜೈಲಾಧಿಕಾರಿಗಳು ನಾಲ್ವರಿಗೂ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಗಲಾಟೆ ಮಾಡಿಕೊಂಡರೆ ಕಷ್ಟ ಎಂದು ಜೈಲು ಸಿಬ್ಬಂದಿ ಹೆಚ್ಚಿನ ನಿಗಾ ಇಟ್ಟಿದ್ದಾರೆ.

ಸಾಕ್ಷಿಗಳಿಗೆ ಬೆದರಿಕೆ, ಎನ್‌ಸಿಆರ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಜೈಲಿನಲ್ಲಿದ್ದೇ ಡಿ ಗ್ಯಾಂಗ್ ಪ್ಲಾನ್ ಮಾಡಿದೆ ಎಂದು ವರದಿಯಾಗಿದ್ದು, ಪೊಲೀಸರ ಮುಂದೆ ಸಾಕ್ಷಿ ಹೇಳದಂತೆ ಹಲವರಿಗೆ ಬೆದರಿಕೆ ಒಡ್ಡಿದೆ ಎಂದು ಗೊತ್ತಾಗಿದೆ. ಕೊಲೆಯ ಪ್ರಮುಖ ಸಾಕ್ಷಿಯಾಗಿದ್ದ ವ್ಯಕ್ತಿಗೆ ಜೈಲಿನಲ್ಲಿದ್ದುಕೊಂಡೇ ಈ ಟೀಮ್‌ ಬೆದರಿಕೆ ಹಾಕುತ್ತಿದ್ದು, ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲು ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾವ ಮಾಹಿತಿಯೂ ಹೇಳದಂತೆ ಬೆದರಿಕೆ ಹಾಕಲಾಗಿದೆ. ಆದರೆ ಈ ಬಗ್ಗೆ ಪೊಲೀಸರು ಎನ್‌ಸಿಆರ್ ದಾಖಲಿಸಿ ಸಾಕ್ಷಿಗಳಿಗೆ ಧೈರ್ಯ ತುಂಬಿದ್ದಾರೆ. ಈಗಾಗಲೇ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ಬಂಧನಕ್ಕೂ ಮುನ್ನವೇ ಗ್ಯಾಂಗ್‌ ಡಿಲೀಟ್ ಮಾಡಿಸಿತ್ತು. ಸಾಕ್ಷ್ಯನಾಶ ಮಾಡಲು ಡಿ ಗ್ಯಾಂಗ್ ಸರ್ವ ಪ್ಲಾನ್‌ಗಳನ್ನೂ ಮಾಡಿತ್ತು. ಸಾಕ್ಷಿಗಳು ಈ ಕುರಿತು ಆತಂಕದಲ್ಲಿದ್ದಾರೆ ಎಂದು ಗೊತ್ತಾಗಿದೆ.

ಇದನ್ನೂ ಓದಿ: Actor Darshan: ದರ್ಶನ್​ & ಗ್ಯಾಂಗ್​ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ!

Continue Reading

ಕರ್ನಾಟಕ

Gold Rate Today: ಸ್ವರ್ಣಪ್ರಿಯರಿಗೆ ಶಾಕ್‌; ಮತ್ತೆ ಏರಿಕೆ ಕಂಡ ಚಿನ್ನದ ದರ

Gold Rate Today: ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,480 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,069 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,840 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,800 ಮತ್ತು ₹ 6,48,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,552 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,690 ಮತ್ತು ₹ 7,06,900 ತಲುಪಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 2) ಮತ್ತೆ ಏರಿಕೆಯಾಗಿದೆ (Gold Rate Today). ಮಂಗಳವಾರ ಕುಸಿದಿದ್ದ ದರ ಬುಧವಾರ ಹೆಚ್ಚಾಗಿತ್ತು. ನಿನ್ನೆ ಮತ್ತೆ ಏರುಗತಿಯಲ್ಲಿ ಸಾಗಿತ್ತು. ಇಂದು ಮತ್ತೆ ಹೆಚ್ಚಾಗಿದ್ದು, 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹30 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 33 ಹೆಚ್ಚಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,480 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,069 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,840 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,800 ಮತ್ತು ₹ 6,48,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,552 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,690 ಮತ್ತು ₹ 7,06,900 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,495₹ 7,084
ಮುಂಬೈ₹ 6,480₹ 7,069
ಬೆಂಗಳೂರು₹ 6,480₹ 7,069
ಚೆನ್ನೈ₹ 6,460₹ 7,047

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆ ಯಾಥಾಸ್ಥಿತಿ ಕಾಯ್ದುಕೊಂಡಿದ್ದು, ಬೆಳ್ಳಿ ಒಂದು ಗ್ರಾಂಗೆ ₹ 85.50 ಹಾಗೂ 8 ಗ್ರಾಂಗೆ ₹ 684 ಇದೆ. 10 ಗ್ರಾಂ ₹ 855 ಹಾಗೂ 1 ಕಿಲೋಗ್ರಾಂ ₹ 85,500 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು ‘K’.

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Stock Market: ಷೇರುಪೇಟೆಯಲ್ಲಿ ಭಾರೀ ಕುಸಿತ; ಸೆನ್ಸೆಕ್ಸ್‌ 700 ಅಂಕಗಳಷ್ಟು ಪತನ

Continue Reading

ನೋಟಿಸ್ ಬೋರ್ಡ್

KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

KSET 2024: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) 2024ಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್‌ 22ರಂದು ಕೊನೆ ದಿನವಾಗಿದೆ. ಪರೀಕ್ಷೆ ನೋಂದಣಿ, ಅರ್ಜಿ ಸಲ್ಲಿಸುವ ಎಲ್ಲ ವಿವರಗಳು ಈ ಕೆಳಕಂಡಂತಿವೆ.

VISTARANEWS.COM


on

By

KSET 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಸರ್ಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್- 2024) ಅನ್ನು ನಡೆಸಲಾಗುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮುಂದಿನ ನವೆಂಬರ್‌ 24ರಂದು ಪರೀಕ್ಷೆ ನಡೆಸಲು (KSET 2024) ಯೋಜಿಸಿದೆ. ಅದರಂತೆ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿ.

ಕಳೆದ ಜುಲೈ 22ರಿಂದಲ್ಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಆಗಸ್ಟ್‌ 22ರಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಆಗಸ್ಟ್‌ 26ರಂದು ಕಡೆ ದಿನವಾಗಿದೆ. ಅಭ್ಯರ್ಥಿಗಳು ಕೆಸೆಟ್-2024ಕ್ಕೆ ಆನ್‌ಲೈನ್‌ (Online) ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಯಾವುದೇ ಇತರ ನಮೂನೆಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಕೆಇಎ ವೆಬ್‌ ಸೈಟ್ http://kea.kar.nic.in ಅನ್ನು ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

ಯಾರೆಲ್ಲ ಅರ್ಹರು?

ಕೆಸೆಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಪದವಿ ಕಾಲೇಜು ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ ಹಾಗೂ ಆಯಾ ಸಂಸ್ಥೆಗಳ ನಿಯಮ ಮತ್ತು ಕಾಯ್ದೆಗಳಿಗೆ ಒಳಪಟ್ಟಿರುತ್ತಾರೆ.

ವಿಕಲಚೇತನ (PwD), ತೃತೀಯ ಲಿಂಗ, ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಮತ್ತು ಇತರೆ ಹಿಂದುಳಿದ ವರ್ಗದ (ಪ್ರವರ್ಗ-I, IIA, IIB, IIIA, ಮತ್ತು IIIB) ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗದವರ ಪಟ್ಟಿಯಲ್ಲಿರುವಂತಿರಬೇಕು.

ವಯೋಮಿತಿ ಏನು?

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತೆಗೆದುಕೊಳ್ಳಲು ಗರಿಷ್ಟ ವಯೋಮಿತಿ ಇಲ್ಲ..

ಪರೀಕ್ಷಾ ಶುಲ್ಕ ಹೀಗಿದೆ

ಸಾಮಾನ್ಯ ವರ್ಗ, ಪ್ರವರ್ಗ IIA, IIB, IIIA, IIIB ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ 1000 ರೂ. ಶುಲ್ಕ ನಿಗದಿ ಮಾಡಲಾಗಿದೆ. ಪ್ರವರ್ಗ-I,SC,ST,PwD ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ 700 ರೂ. ನಿಗದಿ ಮಾಡಲಾಗಿದೆ.
ಇನ್ನೂ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಶುಲ್ಕ ವಿನಾಯಿತಿಯನ್ನು ಪ್ರವರ್ಗ-I, SC, ST, ತೃತೀಯ ಲಿಂಗ ಮತ್ತು ವಿಕಲಚೇತನರ (Medical Certificate with 40% or more disability ) ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. ಅಭ್ಯರ್ಥಿಗಳು ಬೇರೆ ಯಾವುದೇ ವಿಧಾನದ ಮೂಲಕ ಶುಲ್ಕ ಪಾವತಿಸಲು ಅವಕಾಶವಿರುವುದಿಲ್ಲ (ಉದಾ : Money Order / Demand Draft / IPO Office Challan ಇತ್ಯಾದಿಗಳನ್ನು ಮಾಡುವಂತಿಲ್ಲ. ಒಮ್ಮೆ ಶುಲ್ಕ ಪಾವತಿಸಿದ ನಂತರ ಅದನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.

ಪರೀಕ್ಷಾ ದಿನಾಂಕ -ಸಮಯದ ವಿವರ

ಕೆಸೆಟ್‌ ಪರೀಕ್ಷೆಯಲ್ಲಿ ಎರಡು ಪ್ರಶ್ನೆಪತ್ರಿಕೆ ಇರಲಿದ್ದು, ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯನ್ನು ನವೆಂಬರ್‌ 24ರಂದು ನಡೆಸಲಾಗುತ್ತದೆ. ನವೆಂಬರ್‌ 24ರ ಬೆಳಗ್ಗೆ 10ರಿಂದ 1 ರವರೆಗೆ ಪರೀಕ್ಷೆ ನಡೆಯಲಿದೆ. ಮೊದಲ ಪತ್ರಿಕೆ 100 ಅಂಕಗಳಿಗೆ (50 ಪ್ರಶ್ನೆಗಳು ಕಡ್ಡಾಯವಾಗಿರುತ್ತದೆ), ಎರಡನೇ ಪತ್ರಿಕೆ 200 ಅಂಕ (100 ಪ್ರಶ್ನೆಗಳು ಕಡ್ಡಾಯವಾಗಿರುತ್ತದೆ). ಅಭ್ಯರ್ಥಿಗಳು ಮಧ್ಯಾಹ್ನ 1 ಗಂಟೆಯ ಮೊದಲು ಪರೀಕ್ಷಾ ಕೇಂದ್ರದಿಂದ ಹೊರಬರಲು ಅನುಮತಿಸಲಾಗುವುದಿಲ್ಲ.

ಪರೀಕ್ಷಾ ಕೇಂದ್ರಗಳು

ಬೆಂಗಳೂರು, ಬೆಳಗಾವಿ, ಬಳ್ಳಾರಿ, ಬೀದರ್‌, ದಾವಣಗೆರೆ, ಧಾರವಾಡ ಹಾಗೂ ಕಲಬುರಗಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ, ವಿಜಯಪುರದಲ್ಲಿ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: 14 Hours Work: ಒಂದೆಡೆ ಐಟಿ ಉದ್ಯೋಗಿಗಳಿಂದ ಬೃಹತ್ ಪ್ರತಿಭಟನೆ, ಇನ್ನೊಂದೆಡೆ ಐಟಿ ಕಂಪನಿಗಳ ಮುಂದೆ ಕೆಲಸಕ್ಕಾಗಿ ಮೈಲುಗಟ್ಟಲೆ ಕ್ಯೂ!

ಸಾಮಾನ್ಯ ಸೂಚನೆಗಳಿವು

  1. 1.ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪ್ರಾಧಿಕಾರದ ವೆಬ್ ಸೈಟಿನಿಂದ ಡೌನ್‌ ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ಮುದ್ರಿತವಾಗಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ ಪರೀಕ್ಷಾ ಕೇಂದ್ರವನ್ನು ಖಚಿತಪಡಿಸಿಕೊಳ್ಳಬೇಕು.
  2. 2.ಪ್ರವೇಶ ಪತ್ರದ ಜತೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳುವ ಸೂಚನೆಗಳನ್ನು ತಪ್ಪದೆ ಓಸಬೇಕು.
  3. 3.ತಪ್ಪು ಉತ್ತರಗಳಿಗೆ ಅಂಕಗಳನ್ನು (negative answers) ಕಳೆಯುವುದಿಲ್ಲ.
  4. 4.ಕೇವಲ ಕೆಸೆಟ್-2024ಕ್ಕೆ ಹಾಜರಾದ ಮಾತ್ರಕ್ಕೆ ಅರ್ಹತೆಯನ್ನು ಪಡೆದಿದ್ದೇನೆಂದು ಅಭ್ಯರ್ಥಿಗಳು ಭಾವಿಸುವಂತಿಲ್ಲ.
  5. 5.ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂತ್‌, ಗ್ಯಾಡ್ಜೆಟ್ಸ್, ಮಾರ್ಕರ್, ಕ್ಯಾಲ್‌ಕ್ಯುಲೇಟರ್, ವೈಟ್ ಪ್ಯೂಯಿಡ್, ರ್ವೈಲಿಸ್ ಸೆಟ್ಸ್, ಚೀಟಿಗಳು, ಬುಕ್ಸ್ / ಪುಸ್ತಕ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.
  6. 6.ಅಲ್ಲದೆ ಈ ಮೇಲಿನ ಯಾವುದೇ ವಸ್ತುಗಳನ್ನು ಸಂರಕ್ಷಿಸಿಡಲು ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಇರುವುದಿಲ್ಲ.
  7. 7.ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು / ತೆಗೆದುಕೊಂಡು ಹೋಗುವಂತಿಲ್ಲ. ಪರೀಕ್ಷಾ ಮಧ್ಯಂತರದಲ್ಲಿ ಬಾರಿಸುವ ಎಚ್ಚರಿಕೆಯ ಗಂಟೆಗಳ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸುವ ಬೆಲ್ ಸಮಯವನ್ನು ನೋಡಲು ಕೋರಿದೆ.
  8. 8.ಅಭ್ಯರ್ಥಿಗಳು ಮೊಣಕೈವರೆಗೆ ಬರುವಂತಹ ಅರ್ಧ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಬಹದು, ಕಿವಿ, ತಲೆ ಮುಚ್ಚುವಂತಹ ವಸ್ತ್ರವನ್ನು ನಿಷೇಧಿಸಲಾಗಿದೆ.
  9. 9.ಯಾವುದೇ ರೀತಿಯ ಲೋಪದ ಆಭರಣಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸಿದೆ. (ಮಂಗಳ ಸೂತ್ರವನ್ನು ಹೊರತುಪಡಿಸಿ)
  10. 10.ಅಭ್ಯರ್ಥಿತನವು ಸಂಪೂರ್ಣವಾಗಿ ತಾತ್ಕಾಲಿಕವಾಗಿರುತ್ತದೆ ಎಂಬುದನ್ನು ಗಮನಿಸಬೇಕು. ಕೇವಲ ಪ್ರವೇಶ ಪತ್ರವನ್ನು ನೀಡಿದ ಮಾತ್ರಕ್ಕೆ ಹಾಗೂ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಿದ ಮಾತ್ರಕ್ಕೆ, ಪ್ರಾಧಿಕಾರವು ಅಭ್ಯರ್ಥಿಗಳ ವಿವರವನ್ನು ಒಪ್ಪಿದೆಯೆಂದು ಪರಿಗಣಿಸಬಾರದು.
  11. 11.ಪ್ರವೇಶ ಪತ್ರದ ಜತೆಯಲ್ಲಿ ಅಭ್ಯರ್ಥಿಯು ಕಡ್ಡಾಯವಾಗಿ ಸರ್ಕಾರದಿಂದ ಮಾನ್ಯತೆ ಇರುವ ಭಾವಚಿತ್ರವುಳ್ಳ ಯಾವುದಾದರೂ ಒಂದು ಗುರುತಿನ ಚೀಟಿ / ಡ್ರೈವಿಂಗ್ ಲೈಸೆನ್ಸ್ / ಪಾಸ್‌ಪೋರ್ಟ್ / ಆಧಾರ್ ಕಾರ್ಡ್ / ಪಾನ್ ಕಾರ್ಡ್ ಅನ್ನು ತೆಗೆದುಕೊಂಡು ಹೋಗಬೇಕು.
  12. 12.ಕೊಠಡಿ ಮೇಲ್ವಿಚಾರಕರು ನೀಡುವ ಎಲ್ಲಾ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಸೂಚನೆಗಳನ್ನು ಪಾಲಿಸದೇ ಇರುವ ಅಭ್ಯರ್ಥಿಗಳನ್ನು ಅನ್ಯಾಯದ ವಿಧಾನವೆಂದು ಪರಿಗಣಿಸಿ ಅಂತಹ ಅಭ್ಯರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗುವುದು.
  13. 13.ಪ್ರವೇಶ ಪತ್ರದಲ್ಲಿ ನಮೂದಿಸಿರುವ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು.
  14. 14.ಪ್ರವೇಶ ಪತ್ರದಲ್ಲಿ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರವನ್ನು ಹೊರತುಪಡಿಸಿ ಬೇರೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯಲು ಅನುವು ಮಾಡಿಕೊಡುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Wayanad landslides
ದೇಶ6 mins ago

Wayanad Landslide: ವಯನಾಡು ಹಿಂದೆ ಹೇಗಿತ್ತು? ಈಗ ಹೇಗಿದೆ? ದುರಂತ ಸ್ಥಳದ ದೃಶ್ಯ ಸೆರೆ ಹಿಡಿದ ಇಸ್ರೋ

Namma Metro
ಬೆಂಗಳೂರು14 mins ago

Namma Metro : ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದ 4 ವರ್ಷದ ಮಗು! ಮುಂದೇನಾಯ್ತು

Paris Olympics
ಕ್ರೀಡೆ16 mins ago

Paris Olympics: ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿ ಮನು ಭಾಕರ್; 25 ಮೀ. ಪಿಸ್ತೂಲ್ ವಿಭಾಗದಲ್ಲಿ ಸ್ಪರ್ಧೆ

Actor Darshan Lost KG In 25 Days
ಕ್ರೈಂ55 mins ago

Actor Darshan: ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ನಡುವೆಯೇ ಚಕಮಕಿ, ಗೋಳಾಟ!

Gold Rate Today
ಕರ್ನಾಟಕ55 mins ago

Gold Rate Today: ಸ್ವರ್ಣಪ್ರಿಯರಿಗೆ ಶಾಕ್‌; ಮತ್ತೆ ಏರಿಕೆ ಕಂಡ ಚಿನ್ನದ ದರ

KSET 2024
ನೋಟಿಸ್ ಬೋರ್ಡ್56 mins ago

KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

Stock Market
ದೇಶ1 hour ago

Stock Market: ಷೇರುಪೇಟೆಯಲ್ಲಿ ಭಾರೀ ಕುಸಿತ; ಸೆನ್ಸೆಕ್ಸ್‌ 700 ಅಂಕಗಳಷ್ಟು ಪತನ

Swapnil Kusale
ಕ್ರೀಡೆ2 hours ago

Swapnil Kusale: ಕಂಚು ಗೆದ್ದ ಸ್ವಪ್ನಿಲ್ ಕುಸಾಲೆಗೆ 1 ಕೋಟಿ ಬಹುಮಾನ ಪ್ರಕಟಿಸಿದ ಶಿಂಧೆ ಸರ್ಕಾರ

raichur food poisoning 1
ಕ್ರೈಂ2 hours ago

Food Poisoning: ವಿಷ ಬೆರೆತ ಮಟನ್‌ ಸೇವಿಸಿ ಒಂದೇ ಕುಟುಂಬದ ನಾಲ್ವರ ಘೋರ ಸಾವು; ಆತ್ಮಹತ್ಯೆ ಶಂಕೆ

Paris Olympics
ಕ್ರೀಡೆ2 hours ago

Paris Olympic: ಒಲಿಂಪಿಕ್ಸ್​ ಪದಕ ವಿಜೇತರಿಗೆ ಸಿಗಲಿದೆ ದುಬಾರಿ ಬೆಲೆಯ ಕಾರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ22 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ23 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ23 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌