DK Shivakumar | ಉಗ್ರರಿಗೆ ಬೆಂಬಲ ನೀಡುವ ಕಾಂಗ್ರೆಸ್‌ ವಿರುದ್ಧ ಡಿ.19, 20, 21ರಂದು ಬಿಜೆಪಿ ಪ್ರತಿಭಟನೆ - Vistara News

ಕರ್ನಾಟಕ

DK Shivakumar | ಉಗ್ರರಿಗೆ ಬೆಂಬಲ ನೀಡುವ ಕಾಂಗ್ರೆಸ್‌ ವಿರುದ್ಧ ಡಿ.19, 20, 21ರಂದು ಬಿಜೆಪಿ ಪ್ರತಿಭಟನೆ

ಮಂಗಳೂರು ಬಾಂಬ್‌ ಬ್ಲಾಸ್ಟ್‌ ಕೇಸಿಗೆ ಸಂಬಂಧಿಸಿ ಡಿ.ಕೆ. ಶಿವಕುಮಾರ್‌ (DK Shivakumar) ನೀಡಿರುವ ಹೇಳಿಕೆಯನ್ನು ನಗದೀಕರಿಸಲು ಬಿಜೆಪಿ ಮುಂದಾಗಿದೆ. ಡಿ. 19, 20, 21ರಂದು ಪ್ರತಿಭಟನೆ ನಡೆಸಲಿದೆ.

VISTARANEWS.COM


on

BJP VS DKS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉಗ್ರರಿಗೆ ಬೆಂಬಲ ನೀಡುವ ಕಾಂಗ್ರೆಸ್‌ ವಿರುದ್ಧ ಮತ್ತು ಅದರ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ. ಡಿ. ೧೯, ೨೦, ೨೧ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌ ಹೇಳಿದರು.

ʻʻಭಯೋತ್ಪಾದಕರನ್ನು ರಕ್ಷಣೆ ಮಾಡುವಂತಹ ವಿರೋಧ ಪಕ್ಷ ನಮ್ಮ ರಾಜ್ಯದಲ್ಲಿದೆ. ಈ ಹಿಂದೆ ಆಡಳಿತದಲ್ಲಿದ್ದಾಗ ಭಯೋತ್ಪಾದಕರನ್ನು ರಕ್ಷಿಸುವಂತಹ, ಭಯೋತ್ಪಾದಕರ‌ ವಿರುದ್ಧದ ಕೇಸ್‌ಗಳನ್ನು ತೆಗೆದುಹಾಕುವ ಕೆಲಸವಾಗಿದೆʼʼ ಎಂದು ಹೇಳಿದ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರು ಸೇರಿಕೊಂಡು ʻಉಗ್ರ ಭಾಗ್ಯ, ಪಿಎಫ್‌ಐ ಭಾಗ್ಯ, ಟಿಪ್ಪು ಭಾಗ್ಯ ಎಲ್ಲವನ್ನೂ ನೀಡಿದ್ದಾರೆʼʼ ಎಂದರು.

ʻʻಮಂಗಳೂರಿನಲ್ಲಿ ಆಗಿರುವ ಕುಕ್ಕರ್ ಬಾಂಬ್ ಬ್ಲಾಸ್ಟ್ ಬಗ್ಗೆ ಡಿಕೆಶಿ ಪ್ರಶ್ನೆ ಮಾಡಿದ್ದಾರೆ. ಕುಕ್ಕರ್‌ನಲ್ಲಿ ಬಾಂಬ್‌ ಇಟ್ಟು ಬ್ಲಾಸ್ಟ್‌ ಮಾಡೋದು ಪ್ರಪಂಚದಾದ್ಯಂತ ಇದೆ. ಕುಕ್ಕರ್‌ ಬ್ಲಾಸ್ಟ್‌ ನಿಜವಾಗಿಯೂ ಪೂರ್ಣ ಪ್ರಮಾಣದಲ್ಲಿ ಆಗಿದ್ದರೆ ದೊಡ್ಡ ಜೀವ ಹಾನಿಯಾಗಿರುತ್ತಿತ್ತು ಎಂದು ಪೋಲಿಸರೇ ಹೇಳಿದ್ದಾರೆ. ಉಗ್ರ ಶಾರಿಕ್‌ ಹೊಂದಿರುವ ನೆಟ್ವರ್ಕನ್ನೂ ಪೊಲೀಸರು ಬಯಲು ಮಾಡಿದ್ದಾರೆ. ಹೀಗಾಗಿಯೇ ಡಿ.ಕೆ ಶಿವಕುಮಾರ್ ಅವರಿಗೆ ಗಾಬರಿಯಾಗಿದೆ. ಬಹುಶಃ ಆ ನೆಟ್ವರ್ಕ್‌ನಲ್ಲಿ ಕಾಂಗ್ರೆಸ್‌ನವರೂ ಇರಬೇಕುʼʼ ಎಂದು ಹೇಳಿದರು ರವಿಕುಮಾರ್‌.

ʻʻಎನ್‌ಐಎ ಮತ್ತು ರಾಜ್ಯ ಪೋಲಿಸ್ ಇಲಾಖೆ ಘಟನೆಯ ಪೂರ್ಣ ತನಿಖೆಯನ್ನು ಮಾಡುತ್ತಿದೆ. ವೋಟಿನ ಗಂಟಿನ ಆಸೆಯಿಂದ ಡಿಕೆಶಿ ಈ ರೀತಿ ಮಾತನಾಡುವುದನ್ನು ನಿಲ್ಲಿಸಬೇಕು. ಭಯೋತ್ಪಾದಕರನ್ನು ಭಯೋತ್ಪಾದಕರೆಂದು ಕರೆಯುವ ಧಮ್ ತೋರಿಸಿ, ಇಲ್ಲವಾದರೆ ತೆಪ್ಪಗಿರಿʼʼ ಎಂದು ರವಿಕುಮಾರ್‌ ಛೇಡಿಸಿದರು.

ಇದನ್ನೂ ಓದಿ | DK Shivakumar | ಡಿಕೆಶಿ ಕುಕ್ಕರ್‌ ಬಾಂಬ್‌ ಹೇಳಿಕೆಗೆ ಕೊನೆಗೂ ಸಿಕ್ತು ಬೆಂಬಲ, ಸಮರ್ಥನೆಗೆ ನಿಂತ ಪ್ರಿಯಾಂಕ್‌ ಖರ್ಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Prajwal Revanna Case: ಲಭ್ಯವಾಗಿರುವ ಆಡಿಯೊ ಪ್ರಕಾರ, ಮೊದಲು ದೇವರಾಜೇಗೌಡ ಹಾಗೂ ಎಲ್‌.ಆರ್.ಶಿವರಾಮೇಗೌಡ ದೂರವಾಣಿಯಲ್ಲಿ ಮಾತನಾಡಿದ್ದಾರೆ. “ನಾನು ಫೋನ್‌ಅನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡುತ್ತೇನೆ. ಏನೇನಾಗಿದೆ ಎಲ್ಲದರ ಕುರಿತು ಮಾಹಿತಿ ಕೊಡು” ಎಂಬುದಾಗಿ ಶಿವರಾಮೇಗೌಡ ಅವರು ದೇವರಾಜೇಗೌಡರಿಗೆ ತಿಳಿಸುತ್ತಾರೆ. ಇದಾದ ಬಳಿಕ ದೇವರಾಜೇಗೌಡ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಈಗ ಲಭ್ಯವಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ (Prajwal Revanna Case) ಸಂಬಂಧಿಸಿದಂತೆ ಮತ್ತೊಂದು ಆಡಿಯೊ ಬಯಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹಾಸನ ಪೆನ್‌ಡ್ರೈವ್‌ ಕೇಸ್‌ಗೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devarajegowda), ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ (LR Shivarame Gowda) ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರ ನಡುವಿನ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೊ ಲಭ್ಯವಾಗಿದ್ದು, ಮಾತುಕತೆಯು ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಕುರಿತೇ ಇವರು ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ಲಭ್ಯವಾಗಿರುವ ಆಡಿಯೊ ಪ್ರಕಾರ, ಮೊದಲು ದೇವರಾಜೇಗೌಡ ಹಾಗೂ ಎಲ್‌.ಆರ್.ಶಿವರಾಮೇಗೌಡ ದೂರವಾಣಿಯಲ್ಲಿ ಮಾತನಾಡಿದ್ದಾರೆ. “ನಾನು ಫೋನ್‌ಅನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡುತ್ತೇನೆ. ಏನೇನಾಗಿದೆ ಎಲ್ಲದರ ಕುರಿತು ಮಾಹಿತಿ ಕೊಡು” ಎಂಬುದಾಗಿ ಶಿವರಾಮೇಗೌಡ ಅವರು ದೇವರಾಜೇಗೌಡರಿಗೆ ತಿಳಿಸುತ್ತಾರೆ. ಇದಾದ ಬಳಿಕ ದೇವರಾಜೇಗೌಡ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಜತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

ಇಲ್ಲಿದೆ ಆಡಿಯೊ ಸಂಭಾಷಣೆ

“ಏನೇನಾಯ್ತು? ಏನಿದೆ ಪರಿಸ್ಥಿತಿ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಕೇಳುತ್ತಾರೆ. ಆಗ ದೇವರಾಜೇಗೌಡ ಅವರು, “ಸದ್ಯದ ಪರಿಸ್ಥಿತಿಯಲ್ಲಿ ನಾಳೆ ಕೋರ್ಟ್‌ನಲ್ಲಿ ಸ್ಟೇ ಆಗೋ ಚಾನ್ಸ್‌ ಇದೆ. ಸರಿಯಾಗಿ ದೂರು ಕೊಟ್ಟಿಲ್ಲ. ಮಹಿಳೆ ನೀಡಿರುವ ಹೇಳಿಕೆ ಹಾಗೂ ನಡೆದಿರುವ ಘಟನೆ ಮಧ್ಯೆ ಹಲವು ವರ್ಷ ವ್ಯತ್ಯಾಸ ಇದೆ. ಆದರೆ, ಎಸ್‌ಐಟಿಯವರು ಮಹಿಳೆಯನ್ನು ಕರೆದುಕೊಂಡು ಹೋಗಿ ವಿಚಾರಣೆ, ತನಿಖೆ ನಡೆಸಿದರೆ ಸೀರಿಯಸ್‌ ಕೇಸ್‌ ಆಗುತ್ತದೆ. ಆದರೆ, ಮಹಿಳೆಯು ಪ್ರಕರಣದಲ್ಲಿ ಸ್ಟ್ರಾಂಗ್‌ ಇಲ್ಲ” ಎಂದಿದ್ದಾರೆ.

ಇದಾದ ಬಳಿಕ ಡಿ.ಕೆ.ಶಿವಕುಮಾರ್‌, “ಏನಾದರೂ ಬೇರೆ ಎವಿಡೆನ್ಸ್‌ ಇದೆಯಾ” ಎಂದು ಪ್ರಶ್ನಿಸಿದ್ದಾರೆ. ಆಗ, ದೇವರಾಜೇಗೌಡ ಅವರು “ಯಾವುದೇ ಎವಿಡೆನ್ಸ್‌ ಇಲ್ಲ” ಎಂದಿದ್ದಾರೆ. ಇದಾದ ಬಳಿಕ ಇಬ್ಬರ ನಡುವಿನ ಮಾತುಕತೆ ಮುಗಿದಿದೆ. ದೇವರಾಜೇಗೌಡ ಅವರು ಜೈಲಿಗೆ ಹೋಗುವ ಮೊದಲು ನಡೆದ ಮಾತುಕತೆ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

ದೇವರಾಜೇಗೌಡ ಗಂಭೀರ ಆರೋಪ

ಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಅವರ ಬಗ್ಗೆ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. “ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Continue Reading

ಕ್ರೈಂ

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Road Accident: ಬೆಂಗಳೂರು ಹಾಗೂ ಗದಗದಲ್ಲಿ ಸರಣಿ ಅಪಘಾತ ಸಂಭವಿಸಿದ್ದು. ಹಲವರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಪುಣೆಯ ಚಾಕನ ಶಿಕ್ರಾಪುರ ರಾಷ್ಟ್ರೀಯ ಹೆದ್ದಾರಿ ಮೇಲೆ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದ್ದು, ಹೋಟೆಲ್‌ ಸೇರಿ ಮನೆಗಳಿಗೆ ಹಾನಿಯಾಗಿವೆ.

VISTARANEWS.COM


on

By

Road Accident
Koo

ಬೆಂಗಳೂರು/ಗದಗ/ಪುಣೆ: ಮಹಾರಾಷ್ಟ್ರದ ಪುಣೆಯ ಚಾಕನ ಶಿಕ್ರಾಪುರ ರಾಷ್ಟ್ರೀಯ ಹೆದ್ದಾರಿ ಮೇಲೆ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಫೋಟದಿಂದ ಮೂರು ಕಂಟೇನರ್ ವಾಹನಗಳು, ಒಂದು ಹೋಟೆಲ್ ಮತ್ತು ಮೂರು ಮನೆಗಳು ಬೆಂಕಿ ಆಹುತಿಯಾಗಿವೆ. ಭಾನುವಾರ ಬೆಳಗಿನ ಜಾವ 5 ಗಂಟೆಗೆ ಸುಮಾರಿಗೆ ಘಟನೆ ನಡೆದಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎರಡು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ (road Accident) ನಡೆದಿದೆ.

road Accident

ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ

ಕುಡಿದ ಅಮಲಿನಲ್ಲಿ ಕಾರು ಚಾಲನೆ ಮಾಡಿದ್ದರಿಂದ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು ಚಾಲಕನಿಂದ ಅಡ್ಡಾದಿಡ್ಡಿ ಚಾಲನೆಗೆ ಆಟೋ, ಎರಡು ಬೈಕ್‌ಗೆ ಡಿಕ್ಕಿಯಾಗಿದೆ. ಬೆಂಗಳೂರಿನ ರಾಜಾಜಿನಗರದ ಈಸ್ಟ್ ವೆಸ್ಟ್ ಪಬ್ಲಿಕ್ ಸ್ಕೂಲ್ ಬಳಿ ಅಪಘಾತ ನಡೆದಿದೆ. ಘಟನೆಯಲ್ಲಿ ಓರ್ವ ಸ್ಥಿತಿ‌ ಗಂಭೀರವಾಗಿದೆ. ಮಲ್ಲೇಶ್ವರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

road Accident

ಇದನ್ನೂ ಓದಿ: Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಗದಗದಲ್ಲಿ ಭೀಕರ ಅಪಘಾತ

ಗದಗ ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ವಿಜಯಪುರ- ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ನಸುಕಿನ ಜಾವ 4 ಗಂಟೆ ಸುಮಾರಿಗೆ ಸರಣಿ ಅಪಘಾತ ನಡೆದಿದೆ. ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಹೋಗುತ್ತಿದ್ದ ವಾಹನಗಳ ನಡುವೆ ಅಪಘಾತ ನಡೆದಿದೆ.

road Accident

ಬೊಲೆರೋ ಪಿಕಪ್ ವಾಹನ ಎರ್ಟಿಗಾ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಎರ್ಟಿಗಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದಿನ ಕ್ಯಾಂಟರ್ ಡಿಕ್ಕಿಯಾಗಿದೆ. ಅದೃಷ್ಟವಾಶತ್‌ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಎರ್ಟಿಗಾ ಚಾಲಕ ಮತ್ತು ಸ್ನೇಹಿತ ಪಾರಾಗಿದ್ದಾರೆ. ಅಪಘಾತ ರಭಸಕ್ಕೆ ಕಾರು ‌ನಜ್ಜುಗುಜ್ಜಾಗಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ಮನ ಕಲಕುವ ಘಟನೆ ನಡೆದಿದೆ. ತಾಯಿ ಶವದ ಜತೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದ್ದಾಳೆ.

VISTARANEWS.COM


on

Kundapur News
Koo

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock in udupi

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

Continue Reading

ದೇಶ

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದ ಬಲಪಂಥೀಯ ವಿಚಾರಧಾರೆ ಹೊಂದಿರುವ ವಿನೀತ್‌, ಕಾಂಗ್ರೆಸ್‌ ಹಿಂದೂಗಳ ಸಂಪತ್ತನ್ನು ಕಸಿದು ಕೇವಲ ಮುಸ್ಲಿಮರಿಗೆ ಹಂಚಲು ಸಂಚು ರೂಪಿಸಿದೆ. ಕಾಂಗ್ರೆಸ್‌ ಎಸ್‌ಸಿ/ಎಸ್‌ಟಿ ಸೇರಿದಂತೆ ಎಲ್ಲಾ ಹಿಂದೂಗಳನ್ನು ದ್ವೇಷಿಸುತ್ತದೆ. ಎಸ್‌ಸಿ, ಎಸ್‌ಟಿಗಳ ಅಭಿವೃದ್ಧಿಗಾಗಿ ಶ್ರಮಿಸುವ ಬಗ್ಗೆ ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ. ಹೀಗಾಗಿ ಕಾಂಗ್ರೆಸ್‌ನವರ ಮುಖಕ್ಕೆ ಅವರ ಪ್ರಣಾಳಿಕೆಯನ್ನು ಎಸೆಯಿರಿ ಎಂದು ವಿಡಿಯೋ ಸಮೇತ ಟ್ವೀಟ್‌ ಮಾಡಿದ್ದರು.

VISTARANEWS.COM


on

Congress Manifesto
Koo

ಗೋವಾ: ಕೈ-ಕಮಲ ಪಾಳಯದಲ್ಲಿ ಪರಸ್ಪರ ವಾಕ್ಸಮರಕ್ಕೆ ಕಾರಣವಾಗಿರುವ ಕಾಂಗ್ರೆಸ್‌ ಪ್ರಣಾಳಿಕೆ (Congress Manifesto) ವಿಚಾರಕ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ ಪ್ರಣಾಳಿಕೆಯನ್ನು ಟೀಕಿಸಿ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದ ವ್ಯಕ್ತಿಯೊಬ್ಬನನ್ನು ಕರ್ನಾಟಕ ಪೊಲೀಸರು(Congress Police) ಗೋವಾದಲ್ಲಿ ಅರೆಸ್ಟ್‌ ಮಾಡಿದ್ದು, ಬಿಜೆಪಿ ಕಾಂಗ್ರೆಸ್‌ ನಡುವೆ ಮತ್ತೆ ವಾಕ್ಸಮರಕ್ಕೆ ಕಾರಣವಾಗಿದೆ. ವಿನೀತ್‌ ನಾಯ್ಕ್‌ ಎಂಬಾತನನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ. ವಿನೀತ್‌ ವಿರುದ್ಧ ಸುಳ್ಳು ಮಾಹಿತಿ ಹರಡಿ ಕೋಮು ಘರ್ಷಣೆ (Communal disturbance)ಗೆ ಕುಮ್ಮಕ್ಕು ನೀಡಿಡ ಆರೋಪ ಕೇಳಿ ಬಂದಿದ್ದು, ಕರ್ನಾಟಕ ಶ್ರೀರಾಮಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಏನಿದು ಪ್ರಕರಣ?

ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದ ಬಲಪಂಥೀಯ ವಿಚಾರಧಾರೆ ಹೊಂದಿರುವ ವಿನೀತ್‌, ಕಾಂಗ್ರೆಸ್‌ ಹಿಂದೂಗಳ ಸಂಪತ್ತನ್ನು ಕಸಿದು ಕೇವಲ ಮುಸ್ಲಿಮರಿಗೆ ಹಂಚಲು ಸಂಚು ರೂಪಿಸಿದೆ. ಕಾಂಗ್ರೆಸ್‌ ಎಸ್‌ಸಿ/ಎಸ್‌ಟಿ ಸೇರಿದಂತೆ ಎಲ್ಲಾ ಹಿಂದೂಗಳನ್ನು ದ್ವೇಷಿಸುತ್ತದೆ. ಎಸ್‌ಸಿ, ಎಸ್‌ಟಿಗಳ ಅಭಿವೃದ್ಧಿಗಾಗಿ ಶ್ರಮಿಸುವ ಬಗ್ಗೆ ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ. ಹೀಗಾಗಿ ಕಾಂಗ್ರೆಸ್‌ನವರ ಮುಖಕ್ಕೆ ಅವರ ಪ್ರಣಾಳಿಕೆಯನ್ನು ಎಸೆಯಿರಿ ಎಂದು ವಿಡಿಯೋ ಸಮೇತ ಟ್ವೀಟ್‌ ಮಾಡಿದ್ದರು. ಇದಾದ ಬಳಿಕ ಏ. 22 ಮತ್ತು ಏ. 29ರಂದು ವಿನೀತ್‌ ನಾಯ್ಕ್‌ ವಿರುದ್ಧ ದೂರು ದಾಖಲಾಗಿತ್ತು.

ಬೆಂಗಳೂರಿನ ನಿವಾಸಿ ಮತ್ತು ಕಾಂಗ್ರೆಸ್ ಕಾರ್ಯಕರ್ತ ಜೆ ಸರವಣನ್ ಅವರು ಏಪ್ರಿಲ್ 29 ರಂದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು. ಸೈಬರ್ ಕ್ರೈಂ ಪೊಲೀಸರು ಎಕ್ಸ್ ಬಳಕೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ 66 (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ತಿರುಚಿ ಪೋಸ್ಟ್​ ಮಾಡಲಾಗಿದೆ ಎಂದು ದೂರಲಾಗಿತ್ತು. ಇನ್ನು ವಿನೀತ್‌ ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಅದನ್ನು ಡಿಲೀಟ್‌ ಮಾಡಿದ್ದ.

ಪ್ರಕರಣ ದಾಖಲಿಸಿಕೊಂಡು ವಿನೀತ್‌ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮತ್ತೊಂದೆಡೆ ನನ್ನ ತಂದೆಯನ್ನು ಬೆಂಗಳೂರು ಪೊಲೀಸರು ಇದ್ದಕ್ಕಿದ್ದಂತೆ ಬಂಧಿಸಿ ಕರೆದೊಯ್ದಿದ್ದಾರೆ, ಅವರನ್ನು ಬಿಡುಗಡೆ ಮಾಡಿ ಎಂದು ಮಗ ನಾಗೇಶ್​ ನಾಯ್ಕ್​ ಟ್ವೀಟ್​ ಮಾಡಿದ್ದಾರೆ.

ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ ಬಿಜೆಪಿ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಎಕ್ಸ್‌ನಲ್ಲಿ, ಕರ್ನಾಟಕ ಪೊಲೀಸರು ಗೋವಾದಲ್ಲಿ ವಿನೀತ್‌ನನ್ನು ಬಂಧಿಸಿದ್ದಾರೆ. ನಾವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಅವರು ಎಲ್ಲಾ ಕಾನೂನು ಬೆಂಬಲವನ್ನು ನೀಡುತ್ತೇವೆ, ಕಾಂಗ್ರೆಸ್ ಅರಾಜಕತೆಯನ್ನು ಹೊರಹಾಕಿದೆ ಎಂದು ಬರೆದಿದ್ದಾರೆ.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಪೋಸ್ಟ್​ ಮಾಡಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಅಧಿಕಾರ ದುರ್ಬಳಕೆಯಾಗಿದೆ. ನಾವು ನ್ಯಾಯಾಲಯದ ಒಳಗೆ ಮತ್ತು ಹೊರಗೆ ಹೋರಾಡಲು ಸಿದ್ಧರಿದ್ದೇವೆ ಎಂದು ಬರೆದಿದ್ದಾರೆ. ಮತ್ತೊಂದೆಡೆ ಕೇಂದ್ರ ಸಚಿವ ಸ್ಮೃತಿ ಇರಾನಿ ಕೂಡ ವಿನೀತ್‌ ಬೆಂಬಲಕ್ಕೆ ನಿಂತಿದ್ದಾರೆ.

ಇದನ್ನೂ ಓದಿ:ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

Continue Reading
Advertisement
Thailand Open 2024
ಬ್ಯಾಡ್ಮಿಂಟನ್5 mins ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ9 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್18 mins ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ22 mins ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್29 mins ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Kundapur News
ಕರ್ನಾಟಕ36 mins ago

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

RCB vs CSK
ಕ್ರಿಕೆಟ್49 mins ago

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

Congress Manifesto
ದೇಶ51 mins ago

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Prajwal Revanna Case
ಕರ್ನಾಟಕ1 hour ago

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Karnataka Rain
ಮಳೆ1 hour ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌