INDvsAUS W | ಆಸ್ಟ್ರೇಲಿಯಾ ವನಿತೆಯರಿಗೆ ತಲೆಬಾಗಿದ ಭಾರತ ತಂಡ; ಸರಣಿಯಲ್ಲೂ ಸೋಲು - Vistara News

ಕ್ರಿಕೆಟ್

INDvsAUS W | ಆಸ್ಟ್ರೇಲಿಯಾ ವನಿತೆಯರಿಗೆ ತಲೆಬಾಗಿದ ಭಾರತ ತಂಡ; ಸರಣಿಯಲ್ಲೂ ಸೋಲು

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಸರಣಿಯನ್ನು(INDvsAUS W) ಭಾರತ ಮಹಿಳೆಯರ ತಂಡ 3-1 ಅಂತರದಿಂದ ಕಳೆದುಕೊಂಡಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ : ಸಂಘಟಿತ ಹೋರಾಟದ ಹೊರತಾಗಿಯೂ ಪ್ರಮುಖ ಘಟ್ಟದಲ್ಲಿ ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ವನಿತೆಯರ ತಂಡ ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ದ ಐದು ಪಂದ್ಯಗಳ ಸರಣಿಯ (INDvsAUS W) ನಾಲ್ಕನೇ ಪಂದ್ಯದಲ್ಲಿ 7 ರನ್​ ಸೋಲು ಅನುಭವಿಸಿದೆ. ಇದರೊಂದಿಗೆ ಆತಿಥೇಯ ಭಾರತ ತಂಡ ಇನ್ನೂ ಒಂದು ಪಂದ್ಯ ಬಾಕಿ ಇರವಂತೆಯೇ 3-1 ಅಂತರದಿಂದ ಸರಣಿಯನ್ನು ಕಳೆದುಕೊಂಡಿತು.

ಇಲ್ಲಿನ ಬ್ರಬೋರ್ನ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಶನಿವಾರ ಸಂಜೆ ನಡೆಸ ಪಂದ್ಯದಲ್ಲಿ ಮೊದಲು ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 188 ರನ್​ ಬಾರಿಸಿತು. ಪ್ರತಿಯಾಗಿ ಆಡಿದ ಹರ್ಮನ್​ ಪ್ರೀತ್ ಕೌರ್​ ಪಡೆ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 181 ರನ್​ಗಳನ್ನು ಮಾತ್ರ ಬಾರಿಸಲು ಶಕ್ತಗೊಂಡು ಸೋಲೊಪ್ಪಿಕೊಂಡಿತು.

ಮೊದಲು ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡ ಅಲಿಸಾ ಹೀಲಿ ಅವರ 30 ರನ್​ಗಳ ನೆರವಿನಿಂದ ಉತ್ತಮ ಆರಂಭ ಪಡೆಯಿತು. ಬೆತ್​ ಮೂನಿ (2) ಹಾಗೂ ತಹಿಲಾ ಮೆಕ್​​ಗ್ರಾಥ್​ (09) ಅವರನ್ನು ಬೇಗನೆ ಔಟ್​ ಮಾಡುವ ಮೂಲಕ ಭಾರತ ಚೇತರಿಕೆ ಕಂಡಿತು. ಆದರೆ, ಆಶ್ಲ್ಲೇ ಗಾರ್ಡ್ನರ್​ (42) ಹಾಗೂ ಎಲಿಸ್​ ಪೆರಿ (72) ಸ್ಫೋಟಕ ಬ್ಯಾಟಿಂಗ್ ನಡೆಸಿ ಬೃಹತ್​ ಮೊತ್ತ ಪೇರಿಸಿದರು. ಭಾರತ ಪರ ದೀಪ್ತಿ ಶರ್ಮ 35 ರನ್​ಗಳಿಗೆ 2 ವಿಕೆಟ್​ ಕಬಳಿಸಿದರು.

ಗುರಿ ಬೆನ್ನಟ್ಟಿದ ಭಾರತ ವನಿತೆಯರ ಪಡೆ ಆರಂಭದಲ್ಲೇ ಆಘಾತ ಎದುರಿಸಿತು. ಸ್ಮೃತಿ ಮಂಧಾನ 16 ರನ್​ಗಳಿಗೆ ಸೀಮಿತಗೊಂಡರೆ ಶಫಾಲಿ ವರ್ಮ 20 ರನ್ ಬಾರಿಸಿದರು. ಜೆಮಿಮಾ ರೋಡ್ರಿಗಸ್​ 8 ರನ್​ ಬಾರಿಸಿ ಔಟಾದರು. ನಾಯಕಿ ಹರ್ಮನ್​ಪ್ರೀತ್​ ಕೌರ್ 46 ರನ್​ ಬಾರಿಸಿ ಗೆಲುವಿನ ವಿಶ್ವಾಸ ಮೂಡಿಸಿದರೂ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ಇರಲು ಅವರಿಗೆ ಸಾಧ್ಯವಾಗಲಿಲ್ಲ. ದೇವಿಕಾ ವೈದ್ಯ 32 ರನ್​ ಕೊಡುಗೆ ಕೊಟ್ಟರೆ, ರಿಚಾ ಘೋಷ್​ 40 ರನ್ ಬಾರಿಸಿದರೂ ಭಾರತಕ್ಕೆ ಜಯ ಲಭಿಸಲಿಲ್ಲ.

ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿತ್ತು. ನಂತರದ ಪಂದ್ಯ ಸೂಪರ್​ ಓವರ್​ ಮೂಲಕ ಭಾರತದ ಪಾಲಾಗಿತ್ತು. ಮುಂದಿನೆರಡು ಪಂದ್ಯಗಳು ಪ್ರವಾಸಿ ತಂಡದ ವಶವಾಗಿದೆ. ಕೊನೇ ಪಂದ್ಯ ಡಿಸೆಂಬರ್​ 20ರಂದು ನಡೆಯಲಿದೆ.

ಇದನ್ನೂ ಓದಿ | IREW VS PAKW | ಪಾಕ್​ ವನಿತೆಯರಿಗೆ ತವರಲ್ಲೇ ಮುಖಭಂಗ; ಸರಣಿ ಗೆದ್ದ ಐರ್ಲೆಂಡ್​ ತಂಡ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Viral Video: ಗಲ್ಲಿ ಕ್ರಿಕೆಟ್​ನಲ್ಲಿ ಎಡಗೈ ಬ್ಯಾಟಿಂಗ್​ ನಡೆಸಿದ ಕೆ.ಎಲ್​ ರಾಹುಲ್​

Viral Video: ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ತಂಡ ಮುಂಬೈ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಗೆದ್ದರೂ ಅಂತಿಮ ನಾಲ್ಕರ ಘಟಕ್ಕೆ ತೇರ್ಗಡೆಯಾಗುವ ಅವಕಾಶ ಲಕ್ನೋ ತಂಡಕ್ಕೆ ಬಹಳ ಕಡಿಮೆ. ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಸತತ ಸೋಲು ಕಂಡಿರುವ ಕಾರಣ ತಂಡದ ರನ್‌ರೇಟ್​ ಕಳಪೆಯಾಗಿದೆ

VISTARANEWS.COM


on

Viral Video
Koo

ಮುಂಬಯಿ: ಲಕ್ನೋ ಸೂಪರ್ ಜೈಂಟ್ಸ್ (LSG) ನಾಯಕ ಕೆ.ಎಲ್ ರಾಹುಲ್(KL Rahul) ಗಲ್ಲಿ ಕ್ರಿಕೆಟ್​ ಆಡಿದ ವಿಡಿಯೊವೊಂದು ವೈರಲ್​ ಆಗಿದೆ(Viral Video). ಅಚ್ಚರಿ ಎಂದರೆ ಅವರು ಎಡಗೈ ಶೈಲಿಯಲ್ಲಿ ಬ್ಯಾಟಿಂಗ್​ ನಡೆಸಿದ್ದು. ಇಂದು ನಡೆಯುವ ಐಪಿಎಲ್​(IPL 2024) ಪಂದ್ಯದಲ್ಲಿ ಲಕ್ನೋ ತಂಡ ಮುಂಬೈ(Mumbai Indians) ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ಮುಂಬೈಗೆ ಬಂದ ವೇಳೆ ರಾಹುಲ್​ ಇಲ್ಲಿನ ಗಲ್ಲಿಯೊಂದರಲ್ಲಿ ಕ್ರಿಕೆಟ್​ ಆಡಿದ್ದಾರೆ.

ರಾಹುಲ್​ ಬಲಗೈ ಬ್ಯಾಟರ್​ ಆಗಿದ್ದರೂ ಕೂಡ ಎಡಗೈನಲ್ಲಿ ಬ್ಯಾಟಿಂಗ್​ ನಡೆಸಿದ್ದು ಅಚ್ಚರಿ ತಂದಿದೆ. ಸ್ಟಾರ್​ ಸ್ಪೋರ್ಟ್ಸ್​ ನಡೆಸಿದ ಕಾರ್ಯಕ್ರಮ ಇದಾಗಿತ್ತು. ರಾಹುಲ್​ ಅವರ ಈ ಬ್ಯಾಟಿಂಗ್​ ಫೋಟೊ ಕಂಡ ನೆಟ್ಟಿಗರು ಕೆಲ ತಮಾಷೆಯ ಕಮೆಂಟ್​ಗಳನ್ನು ಮಾಡಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಅವಕಾಶ ಸಿಗದ ಕಾರಣ ಅವರು ಎಡಗೈನಲ್ಲಿ ಬ್ಯಾಟಿಂಗ್​ ನಡೆಸಿ ತಂಡದಲ್ಲಿ ಸ್ಥಾನ ಪಡೆಯುವ ಪ್ರಯತ್ಮ ಪಡುತಿದ್ದಾರೆ ಎಂದು ನಗುವ ಎಮೊಜಿಯೊಂದಿಗೆ ಕಮೆಂಟ್​ ಮಾಡಿದ್ದಾರೆ.


ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ 10 ವಿಕೆಟ್​ಗಳ ಹೀನಾಯ ಸೋಲು ಕಂಡ ಬೇಸರದಲ್ಲಿ ಸಿಟ್ಟಿಗೆದ್ದ ಫ್ರಾಂಚೈಸಿ ಮಾಲಿಕ ಸಂಜೀವ್ ಗೋಯೆಂಕಾ(Sanjiv Goenka) ಮೈದಾನದಲ್ಲೇ ನಾಯಕ ಕೆ.ಎಲ್​ ರಾಹುಲ್(KL Rahul)​ ಜತೆ ಜಗಳವಾಡಿದ್ದರು. ಈ ಘಟನೆ ಬಳಿಕ ಅನೇಕ ಮಾಜಿ ಆಟಗಾರರು ಗೋಯೆಂಕಾ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಗೆ ಸಂಬಂಧಿಸಿ ರಾಹುಲ್​ ಲಕ್ನೋ ತಂಡ ತೊರೆಯಲಿದ್ದಾರೆ, ಆರ್​ಸಿಬಿ ಸೇರಲಿದ್ದಾರೆ, ತಂಡದ ಆಟಗಾರರೊಂದಿಗೆ ಪ್ರಯಾಣಿಸದೆ ಪ್ರತ್ಯೇಕವಾಗಿ ಪ್ರಯಾಣಿಸಿದ್ದಾರೆ ಹೀಗೆ ಹಲವು ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. 

ಇದನ್ನೂ ಓದಿ Viral Video: ವಿಚ್ಛೇದನ ಕೇಸ್​ ಹೆಚ್ಚಳಕ್ಕೆ ಇದುವೇ ಪ್ರಮುಖ ಕಾರಣ ಎಂದ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ

ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮಾತ್ರವಲ್ಲದೆ, ಬೌಲಿಂಗ್​ನಲ್ಲಿಯೂ ಲಕ್ನೋ ಅತ್ಯಂತ ಕಳಪೆ ಪ್ರದರ್ಶನ ತೋರಿತ್ತು. ಕನಿಷ್ಠ 1 ವಿಕೆಟ್​ ಕೂಡ ಕೀಳಲಾಗದ ಘೋರ ವೈಫಲ್ಯ ಕಂಡಿತ್ತು. ಈ ಹೀನಾಯ ಸೋಲಿನಿಂದ ಸಿಟ್ಟಿಗೆದ್ದ ಸಂಜೀವ್ ಗೋಯೆಂಕಾ ನಾಯಕ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವಂತೆ ಕಂಡುಬಂದಿತ್ತು. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾಗಿದ್ದರೂ, ಈ ದೃಶ್ಯ ನೋಡುವಾಗ ಇದು ಅಸಮಾಧಾನದ ನುಡಿ ಎಂದು ತಿಳಿದು ಬಂದಿತ್ತು. ಗೋಯೆಂಕಾ ಮಾತಿಗೆ ರಾಹುಲ್ ಪ್ರತಿಕ್ರಿಯೆ ನೀಡಲು ಮುಂದಾದರೂ ಕೂಡ ಇದನ್ನು ಗೋಯೆಂಕಾ ಒಪ್ಪಿಕೊಳ್ಳದೆ ಏನೋ ಬೈಯುತ್ತಿರುವಂತೆ ದೃಶ್ಯದಲ್ಲಿ ಕಂಡುಬಂದಿತ್ತು. ಗೋಯೆಂಕಾ ವರ್ತನೆಗೆ ಆಕ್ರೋಶ ವ್ಯಕ್ತವಾದ ಕಾರಣ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಕರೆದು ಜತೆಯಾಗಿ ಡಿನ್ನರ್​ ನಡೆಸಿದ್ದರು. ಇದರ ಫೋಟೊ ಕೂಡ ವೈರಲ್​ ಆಗಿತ್ತು.

ಮುಂಬೈ ಎದುರಾಳಿ


ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ತಂಡ ಮುಂಬೈ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಗೆದ್ದರೂ ಅಂತಿಮ ನಾಲ್ಕರ ಘಟಕ್ಕೆ ತೇರ್ಗಡೆಯಾಗುವ ಅವಕಾಶ ಲಕ್ನೋ ತಂಡಕ್ಕೆ ಬಹಳ ಕಡಿಮೆ. ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಸತತ ಸೋಲು ಕಂಡಿರುವ ಕಾರಣ ತಂಡದ ರನ್‌ರೇಟ್​ ಕಳಪೆಯಾಗಿದೆ. ಒಂದೊಮ್ಮೆ ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆದ್ದಿದ್ದರೆ ಲಕ್ನೋಗೆ ಈ ಪಂದ್ಯ ಪ್ಲೇ ಆಫ್​ ಹಂತಕ್ಕೇರಲು ಮಹತ್ವದ ಪಂದ್ಯವಾಗಿರುತ್ತಿತ್ತು.

Continue Reading

ಕ್ರೀಡೆ

T20 World Cup 2024: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

T20 World Cup 2024: ಅಭ್ಯಾಸ ಪಂದ್ಯಗಳು ಮೇ 27ರಿಂದ ಜೂನ್ 1ರವರೆಗೆ ನಡೆಯಲಿದೆ. ಭಾರತ ಮಾತ್ರ ಏಕೈಕ ಪಂದ್ಯ ಆಡಲಿದ್ದು, ಉಳಿದ ತಂಡಗಳು ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತ ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಅಭ್ಯಾಸ ಪಂದ್ಯವನ್ನು ಆಡಲಿದೆ.

VISTARANEWS.COM


on

T20 World Cup 2024
Koo

ದುಬೈ: ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಪಂದ್ಯಾವಳಿಗಳು ನಡೆಯಲಿವೆ. ಜೂನ್​ 1ರಿಂದ ಆರಂಭಗೊಂಡು ಜೂನ್​ 29ರ ತನಕ ಸಾಗಲಿದೆ. ಇದೀಗ ಅಭ್ಯಾಸ ಪಂದ್ಯಗಳ(warm up matches schedule) ವೇಳಾಪಟ್ಟಿ ಐಸಿಸಿ ಪ್ರಕಟಿಸಿದ್ದು, ಭಾರತ ಕೇವಲ ಒಂದು ಪಂದ್ಯ ಮಾತ್ರ ಆಡಲಿದೆ.

ಕೆಲವು ದಿನಗಳ ಹಿಂದೆಯೇ ಭಾರತ ತಂಡ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ ಎಂದು ಕ್ರಿಕ್​ಬಜ್​ ವರದಿ ಮಾಡಿತ್ತು. ಐಪಿಎಲ್​ ಟೂರ್ನಿ ಮೇ 26ಕ್ಕೆ ಮುಕ್ತಾಯ ಕಾಣಲಿದೆ. ಹೀಗಾಗಿ ಆಟಗಾರರಿಗೆ ಮುಂಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಜತೆಗೆ ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ ಎಂದು ಕ್ರಿಕ್​ಬಜ್ ತಿಳಿಸಿತ್ತು. ಇದೀಗ ಈ ವರದಿ ನಿಜವಾಗಿದೆ. ಭಾರತ ಕೇವಲ ಒಂದು ಪಂದ್ಯ ಮಾತ್ರ ಆಡಲಿದೆ.

ಅಭ್ಯಾಸ ಪಂದ್ಯಗಳು ಮೇ 27ರಿಂದ ಜೂನ್ 1ರವರೆಗೆ ನಡೆಯಲಿದೆ. ಭಾರತ ಮಾತ್ರ ಏಕೈಕ ಪಂದ್ಯ ಆಡಲಿದ್ದು, ಉಳಿದ ತಂಡಗಳು ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತ ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಅಭ್ಯಾಸ ಪಂದ್ಯವನ್ನು ಆಡಲಿದೆ. ಆದರೆ ಪಂದ್ಯದ ತಾಣ ಎಲ್ಲಿ ಎನ್ನುವುದು ಇನ್ನಷ್ಟೇ ಖಚಿತವಾಗಬೇಕಿದೆ. ಮೂಲಗಲ ಪ್ರಕಾರ ನ್ಯೂಯಾರ್ಕ್‌ನಲ್ಲಿ ನಡೆಯಲಿದೆ ಎನ್ನಲಾಗಿದೆ.


ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಉಚಿತ ಪ್ರಸಾರ


ಟಿ20 ವಿಶ್ವಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ​ಡಿಸ್ನಿ + ಹಾಟ್‌ಸ್ಟಾರ್(Disney+ Hotstar) ಕ್ರಿಕೆಟ್​ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು ಈ ವರ್ಷದ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಅನ್ನು OTT ಪ್ಲಾಟ್‌ಫಾರ್ಮ್‌ನಲ್ಲಿ ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಡಿಸ್ನಿ + ಹಾಟ್‌ಸ್ಟಾರ್ ಈಗಾಗಲೇ ಘೋಷಿಸಿದೆ. ಕಳೆದ ವರ್ಷ ಏಕದಿನ ವಿಶ್ವಕಪ್ ಮತ್ತು ಏಷ್ಯಾ ಕಪ್‌ ಟೂರ್ನಿಯನ್ನು ಕೂಡ ಡಿಸ್ನಿ + ಹಾಟ್‌ಸ್ಟಾರ್, ಮೊಬೈಲ್​ ಬಳಕೆ ದಾರರಿಗೆ ಉಚಿತ ವೀಕ್ಷಣೆಯನ್ನು ನೀಡಿತ್ತು. ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಇದೇ ನಿಲುವನ್ನು ಮುಂದುವರಿಸಿದೆ.

Continue Reading

ಕ್ರೀಡೆ

RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

RCB vs CSK: 11 ವರ್ಷಗಳ ಹಿಂದೆ ನಡೆದಿದ್ದ ಪಂದ್ಯಕ್ಕೂ ನಾಳೆ ನಡೆಯುವ ಪಂದ್ಯಕ್ಕೂ ದಿನಾಂಕ, ದಿವಸ ಮತ್ತು ಮಳೆಯ ಅಂಕಿ ಸಂಖ್ಯೆಗಳ ಚಮತ್ಕಾರ ತಾಳೆಯಾಗುತ್ತಿದ್ದು ಈ ಆಧಾರದಲ್ಲಿ ಆರ್​ಸಿಬಿ ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ಭವಿಷ್ಯ ನುಡಿಯಲಾರಂಭಿಸಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ನಾಳೆ(ಶನಿವಾರ) ನಡೆಯುವ ಪ್ಲೇ ಆಫ್​ ಪ್ರವೇಶದ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ(RCB vs CSK) ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೆ ಮಳೆ ಭೀತಿ ಇದ್ದರೂ ಕೂಡ ಕಾಕತಾಳೀಯ ಲೆಕ್ಕಾಚಾರವೊಂದರ ಪ್ರಕಾರ ಆರ್​ಸಿಬಿ ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ಪಂದ್ಯಕ್ಕೂ ಮುನ್ನವೇ ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಹೌದು, ಆರ್​ಸಿಬಿ ಮತ್ತು ಚೆನ್ನೈ 2013ರಲ್ಲಿ ತನ್ನ ಕೊನೆಯ ಲೀಗ್​ ಪಂದ್ಯವನ್ನು ಮೇ 18ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಆಡಿತ್ತು. ಈ ಪಂದ್ಯ ಕೂಡ ಶನಿವಾರವೇ ಆಗಿತ್ತು. ಅಲ್ಲದೆ ಪಂದ್ಯಕ್ಕೆ ಮಳೆಯ ಭೀತಿಯೂ ಎದುರಾಗಿತ್ತು. ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯಂತೆ ಪಂದ್ಯಕ್ಕೆ ಮಳೆ ಕೂಡ ಅಡ್ಡಿಪಡಿಸಿತ್ತು. ಬಳಿಕ ಡಕ್​ವರ್ತ್ ಲೂಯಿಸ್​ ನಿಯಮದ ಅನುಸಾರ ಈ ಪಂದ್ಯವನ್ನು 8 ಓವರ್​ಗೆ ಸೀಮಿತಗೊಳಿಸಿ ಆಡಿಸಲಾಗಿತ್ತು.

ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ಓವರ್​ಗೆ ಕೇವಲ 2 ವಿಕೆಟ್​ ಕಳೆದುಕೊಂಡು 106 ರನ್​ ಪೇರಿಸಿತ್ತು. ಕಿಂಗ್​ ವಿರಾಟ್​ ಕೊಹ್ಲಿ ಅಜೇಯ 56 ರನ್​ ಬಾರಿಸಿದರೆ, ಕ್ರಿಸ್​ ಗೇಲ್​ 28 ರನ್​ ಬಾರಿಸಿದ್ದರು. ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್​ ಕಿಂಗ್ಸ್​ 6 ವಿಕೆಟ್​ ಕಳೆದುಕೊಂಡು 82 ರನ್​ಗಳಿಸಲಷ್ಟೇ ಶಕ್ತವಾಗಿ 24 ರನ್​ಗಳ ಸೋಲು ಕಂಡಿತ್ತು.

ಇದೀಗ ನಾಳೆ ನಡೆಯುವ ಪಂದ್ಯವೂ ಕೂಡ ಮೇ 18 ಶನಿವಾರವಾಗಿದೆ. ಜತೆಗೆ ಪಂದ್ಯಕ್ಕೆ ಮಳೆಯ ಭೀತಿ ಕೂಡ ಇದೆ. 11 ವರ್ಷಗಳ ಹಿಂದೆ ನಡೆದಿದ್ದ ಪಂದ್ಯಕ್ಕೂ ನಾಳೆ ನಡೆಯುವ ಪಂದ್ಯಕ್ಕೂ ದಿನಾಂಕ, ದಿವಸ ಮತ್ತು ಮಳೆಯ ಅಂಕಿ ಸಂಖ್ಯೆಗಳ ಚಮತ್ಕಾರ ತಾಳೆಯಾಗುತ್ತಿದ್ದು ಈ ಆಧಾರದಲ್ಲಿ ಆರ್​ಸಿಬಿ ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಹವಾಮಾನ ಇಲಾಖೆ ಈಗಾಗಕೇ ಪಂದ್ಯಕ್ಕೆ ಶೇ.89 ರಷ್ಟು ಮಳೆ(Rain forecast for Bengaluru) ಇದೆ ಎಂದು, ಒಂದು ವಾರಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಶುಕ್ರವಾರ ಬೆಳಗ್ಗಿನಿಂದಲೇ ಬೆಂಗಳೂರಿನಲ್ಲಿ ಭಾರೀ ಮಳೆಯೂ ಆಗಿದೆ. ಹೀಗಾಗಿ ಶನಿವಾರವೂ ಮಳೆ ಇರುವುದು ಖಚಿತಗೊಂಡಿದೆ. ಒಂದೊಮ್ಮೆ ಮಳೆ ಬಂದು ಪಂದ್ಯ ರದ್ದಾದರೆ ಆರ್​ಸಿಬಿ ಪ್ಲೇ ಆಫ್​ನಿಂದ ಹೊರಬೀಳಲಿದೆ. 15 ಅಂಕ ಪಡೆಯುವ ಚೆನ್ನೈ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ. ಈಗಾಗಲೇ ಮೂರು ತಂಡಗಳಾದ ಕೆಕೆಆರ್​, ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ಪ್ಲೇ ಆಫ್​ ತಲುಪಿದೆ. ಒಂದು ಸ್ಥಾನ ನಾಳೆ ನಿರ್ಧಾರವಾಗಲಿದೆ.

ಇದನ್ನೂ ಓದಿ IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

Continue Reading

ಕ್ರೀಡೆ

RCB vs CSK: ಚೆನ್ನೈ-ಆರ್​ಸಿಬಿ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿ ಏನು?

RCB vs CSK: ಶುಕ್ರವಾರ ಬೆಳಗ್ಗಿನಿಂದಲೇ ಬೆಂಗಳೂರಿನಲ್ಲಿ ಭಾರೀ ಮಳೆಯೂ ಆಗಿದೆ. ಹೀಗಾಗಿ ಶನಿವಾರವೂ ಮಳೆ ಇರುವುದು ಖಚಿತಗೊಂಡಿದೆ. ಒಂದೊಮ್ಮೆ ಮಳೆ ಬಂದು ಪಂದ್ಯ ರದ್ದಾದರೆ ಆರ್​ಸಿಬಿ ಪ್ಲೇ ಆಫ್​ನಿಂದ ಹೊರಬೀಳಲಿದೆ.

VISTARANEWS.COM


on

RCB vs CSK
Koo

ಬೆಂಗಳೂರು: ಸತತ ಸೋಲಿನಿಂದ ಕಂಗೆಟ್ಟು ಸ್ವತಃ ಅಭಿಮಾನಿಗಳಿಂದಲೇ ಟ್ರೋಲ್​ ಆಗಿದ್ದ ರಾಯಲ್​​ ಚಾಲೆಂಜರ್ಸ್​ ಬೆಂಗಳೂರು(RCB vs CSK) ತಂಡ ಆ ಬಳಿಕದ ಪಂದ್ಯಗಳಲ್ಲಿ ಸತತವಾಗಿ ಗೆದ್ದು ಯಾರೂ ಕೂಡ ಊಹಿಸದಂತೆ ಪ್ಲೇ ಆಪ್​ ರೇಸ್​ಗೆ ಬಂದು ನಿಂತಿದೆ. ತನ್ನ ಅಂತಿಮ ಲೀಗ್​ ಪಂದ್ಯವನ್ನು ನಾಳೆ(ಶನಿವಾರ) ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಆಡಲಿದೆ. ಗೆದ್ದರೆ ಪ್ಲೇ ಆಫ್​(RCB’s playoff hopes) ಟಿಕೆಟ್​​ ಅಧಿಕೃತಗೊಳ್ಳಲಿದೆ. ಆದರೆ, ಆರ್​ಸಿಬಿ ಪಾಲಿಗೆ ಮಳೆ ವಿಲನ್ ಆಗುವ ಎಲ್ಲ ಸಾಧ್ಯತೆ ಅಧಿಕವಾಗಿ ಗೋಚರಿಸಿದೆ.

​ಭಾರೀ ಮಳೆ ಎಚ್ಚರಿಕೆ


ಹವಾಮಾನ ಇಲಾಖೆ ಶನಿವಾರ ಶೇ.89 ರಷ್ಟು ಮಳೆ(Rain forecast for Bengaluru) ಇದೆ ಎಂದು, ಒಂದು ವಾರಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಶುಕ್ರವಾರ ಬೆಳಗ್ಗಿನಿಂದಲೇ ಬೆಂಗಳೂರಿನಲ್ಲಿ ಭಾರೀ ಮಳೆಯೂ ಆಗಿದೆ. ಹೀಗಾಗಿ ಶನಿವಾರವೂ ಮಳೆ ಇರುವುದು ಖಚಿತಗೊಂಡಿದೆ. ಒಂದೊಮ್ಮೆ ಮಳೆ ಬಂದು ಪಂದ್ಯ ರದ್ದಾದರೆ ಆರ್​ಸಿಬಿ ಪ್ಲೇ ಆಫ್​ನಿಂದ ಹೊರಬೀಳಲಿದೆ. 15 ಅಂಕ ಪಡೆಯುವ ಚೆನ್ನೈ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ. ಈಗಾಗಲೇ ಮೂರು ತಂಡಗಳಾದ ಕೆಕೆಆರ್​, ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ಪ್ಲೇ ಆಫ್​ ತಲುಪಿದೆ. ಒಂದು ಸ್ಥಾನ ನಾಳೆ ನಿರ್ಧಾರವಾಗಲಿದೆ.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

ಇದನ್ನೂ ಓದಿ IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

ಚೆನ್ನೈ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಬಿಸಿ ಬಿಸಿ ಚಹಾ ಕುಡಿದು ಸಂಭ್ರಮಿಸುತ್ತಿದ್ದಾರೆ. ಇದು ನಡೆದಿರುವುದು ಗುರುವಾರ ಬೆಳಗ್ಗೆ ಅಭ್ಯಾಸದ ಅವಧಿಯಲ್ಲಿ. ಚಿನ್ನಸ್ವಾಮಿ ಸ್ಟೇಡಿಯಮ್​​ಲ್ಲಿದ್ದ ಆರ್​ಸಿಬಿ ಶಿಬಿರವು ಎಂ.ಎಸ್. ಧೋನಿಯನ್ನು ಬಿಸಿ ಕಪ್ ಚಹಾದೊಂದಿಗೆ ಸ್ವಾಗತಿಸಿತು. ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ಗೆ ಭೇಟಿ ನೀಡಿದ ಧೋನಿಗೆ ತಂಡದ ಸಹಾಯಕ ಸಿಬ್ಬಂದಿ ಬಿಸಿ ಬಿಸಿ ಚಹಾವನ್ನು ನೀಡಿ ಸತ್ಕರಿಸಿದರು. ಬೆಂಗಳೂರಿನ ಮೋಡ ಮುಸುಕಿದ ಹವಾಮಾನದ ನಡುವೆ, ಧೋನಿ ತಮ್ಮ ತರಬೇತಿಯ ಸಮಯದಲ್ಲಿ ತಮ್ಮ ನೆಚ್ಚಿನ ಪಾನೀಯ ಸೇವಿಸಿದರು.

Continue Reading
Advertisement
Aniruddha Jatkar Chef Chidambara Release Date announce
ಸ್ಯಾಂಡಲ್ ವುಡ್9 mins ago

Aniruddha Jatkar: ಅನಿರುದ್ದ್ ನಟನೆಯ “Chef ಚಿದಂಬರ” ರಿಲೀಸ್‌ ಡೇಟ್‌ ಅನೌನ್ಸ್‌!

Viral Video
ಕ್ರೀಡೆ29 mins ago

Viral Video: ಗಲ್ಲಿ ಕ್ರಿಕೆಟ್​ನಲ್ಲಿ ಎಡಗೈ ಬ್ಯಾಟಿಂಗ್​ ನಡೆಸಿದ ಕೆ.ಎಲ್​ ರಾಹುಲ್​

Physical Abuse
ಕ್ರೈಂ44 mins ago

Physical Abuse: ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅರ್ಚಕನಿಂದ ನಿರೂಪಕಿ ಮೇಲೆ ಅತ್ಯಾಚಾರ

anjali murder suspect girish2
ಕ್ರೈಂ46 mins ago

Anjali Murder Case: ಥಳಿಸಿದವರಿಗೆ ಈತ ಅಂಜಲಿ ಹಂತಕ ಎಂದು ಗೊತ್ತೇ ಇರಲಿಲ್ಲ! ಕೊಲೆಗಾರ ಸಿಕ್ಕಿಬಿದ್ದಿದ್ದು ಹೀಗೆ

Viral video
ವೈರಲ್ ನ್ಯೂಸ್50 mins ago

Viral Video: ಅಬ್ಬಾ.. ಮದ್ವೆ ಮಂಟಪದಲ್ಲೇ ಬಿಗ್‌ ಫೈಟ್‌; ವರನಿಗಾಗಿ ಯುವತಿಯರ ಮಾರಾಮಾರಿ-ವಿಡಿಯೋ ವೈರಲ್‌

T20 World Cup 2024
ಕ್ರೀಡೆ58 mins ago

T20 World Cup 2024: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

Anushka Shetty producer marriage news viral
ಟಾಲಿವುಡ್1 hour ago

Anushka Shetty: ಕನ್ನಡ ನಿರ್ಮಾಪಕನ ಜತೆ ʻಟಾಲಿವುಡ್‌ ಸ್ವೀಟಿʼ ಅನುಷ್ಕಾ ಶೆಟ್ಟಿ ಮದುವೆ?

RCB vs CSK
ಕ್ರೀಡೆ1 hour ago

RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

shoot out doddaballapur murder case
ಕ್ರೈಂ2 hours ago

Shoot Out: ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

Narendra Modi
Lok Sabha Election 20242 hours ago

Narendra Modi: ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ವಿಪಕ್ಷಕ್ಕೆ ಪ್ರಧಾನಿ ಮೋದಿ ತಿರುಗೇಟು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ4 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ21 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು24 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌