Abolition of reservation | ಮೀಸಲಾತಿ ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿ: ಕೋಡಿಹಳ್ಳಿ ಚಂದ್ರಶೇಖರ್ - Vistara News

ಉತ್ತರ ಕನ್ನಡ

Abolition of reservation | ಮೀಸಲಾತಿ ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿ: ಕೋಡಿಹಳ್ಳಿ ಚಂದ್ರಶೇಖರ್

ಹಲವು ಸಮುದಾಯಗಳು ಜನಸಂಖ್ಯಾ ಬಲ ಪ್ರದರ್ಶಿಸಿ ಮೀಸಲಾತಿಗೆ ಬೇಡಿಕೆ ಇಡುತ್ತಿವೆ. ಸರ್ಕಾರ ಕೇವಲ ಮತ ಗಿಟ್ಟಿಸಿಕೊಳ್ಳುವ ದೃಷ್ಟಿಯಿಂದ ಮೀಸಲಾತಿ‌ ನೀಡುತ್ತಿದ್ದರೆ ಇದು ಅರ್ಥ ಕಳೆದುಕೊಳ್ಳುವುದರಲ್ಲಿ ಅನುಮಾನವಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮೀಸಲಾತಿಯನ್ನು ರದ್ದುಪಡಿಸುವಲ್ಲಿ (Abolition of reservation) ಕ್ರಮ ಕೈಗೊಳ್ಳಬೇಕು ಎಂದು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟರು.

VISTARANEWS.COM


on

Kodihalli Chandrasekhar hasiru sene Farmers' Association
ಶಿರಸಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ .
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: ರಾಜಕೀಯ ಪ್ರಭಾವ ಬೀರುವ ಹಾಗೂ ಜಾತಿಗಳ ನಡುವೆ ಸಂಘರ್ಷ ಸೃಷ್ಟಿಸುವ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದುಪಡಿಸುವಲ್ಲಿ (Abolition of reservation) ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪ್ರಭಾವವನ್ನು ಬಿಗಿಯಾಗಿಸುವಲ್ಲಿ ಮೀಸಲಾತಿ ಹಂಚಿಕೆ ಮಾಡುವ ಬದಲು ಸಂಪೂರ್ಣವಾಗಿ ಮೀಸಲಾತಿಯನ್ನು ರದ್ದುಪಡಿಸುವಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕು. ಪಂಚಮಸಾಲಿ, ಒಕ್ಕಲಿಗರು ಸೇರಿದಂತೆ ಹಲವು ಸಮುದಾಯಗಳು ಜನಸಂಖ್ಯಾ ಬಲ ಪ್ರದರ್ಶಿಸಿ ಮೀಸಲಾತಿಗೆ ಬೇಡಿಕೆ ಇಡುತ್ತಿವೆ. ಸರ್ಕಾರ ಕೇವಲ ಮತದಾರ ಮತ ಗಿಟ್ಟಿಸಿಕೊಳ್ಳುವ ದೃಷ್ಟಿಯಿಂದ ಮೀಸಲಾತಿ‌ ನೀಡುತ್ತಿದ್ದರೆ ಮೀಸಲಾತಿಯ ಅರ್ಥ ಕಳೆದುಕೊಳ್ಳುವುದರಲ್ಲಿ ಅನುಮಾನವಿಲ್ಲ ಎಂದರು.

ಸರ್ಕಾರ ಮೀಸಲಾತಿ ಹಂಚಿಕೆ ಕುರಿತು ಸ್ಪಷ್ಟ ನಿಲುವು ತಾಳುತ್ತಿಲ್ಲ. ಪ್ರಬಲ ಸಮುದಾಯಗಳ ಒತ್ತಡಕ್ಕೆ ಮಣಿದು ಮೀಸಲಾತಿ‌ ಹಂಚಿಕೆ ಮಾಡಿದರೆ ಸಣ್ಣ ಸಮುದಾಯಗಳು ಸಂವಿಧಾನಬದ್ಧ ಹಕ್ಕುಗಳಿಂದ ವಂಚಿತವಾಗುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಹಂಚಿಕೆಯನ್ನು ಕೈ ಬಿಡುವುದೇ ಸೂಕ್ತ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ | Food Poisoning | ಬಿಸಿಯೂಟ ಸೇವಿಸಿ ವಿದ್ಯಾರ್ಥಿನಿಯರಿಗೆ ವಾಂತಿ, ಭೇದಿ; ಅಸ್ವಸ್ಥಗೊಂಡವರು ಆಸ್ಪತ್ರೆಗೆ ದಾಖಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast : ಕರಾವಳಿಯಲ್ಲಿ ಮಳೆಯು (Rain news) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದ್ದು, ಸಂರ್ಪಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿವೆ. ಮತ್ತೆ ಕೆಲವೆಡೆ ಗುಡ್ಡ ಕುಸಿತದ ಭೀತಿ ಹೆಚ್ಚಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಒಳನಾಡು ಸೇರಿ ಮಲೆನಾಡು, ಕರಾವಳಿಯಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದೆ. ಧಾರವಾಡದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಸಮಯ (Rain News) ಮಳೆಯಾಗಿದೆ. ಕಳೆದ ಒಂದು ವಾರದಿಂದ ನಗರದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಧಾರವಾಡ ಗ್ರಾಮೀಣ ಭಾಗದಲ್ಲೂ ಮಳೆಯು ಅಬ್ಬರಿಸಿದೆ. ಇತ್ತ ಕೊಡಗಿನಲ್ಲಿ ಮತ್ತೆ ಮಳೆಯು ವ್ಯಾಪಿಸಿದೆ. ಎರಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆಯು, ಶುಕ್ರವಾರ ಮಧ್ಯಾಹ್ನದ ನಂತರ ಜಿಲ್ಲೆಯಾದ್ಯಂತ ಅಬ್ಬರಿಸಿದೆ. ಮಳೆಗೆ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಕ್ಕೆ ಹೆಚ್ಚಾದ ಒಳ ಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ.

ಜುಲೈ 6ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ರಿಂದ ಆದೇಶ ಹೊರಡಿಸಲಾಗಿದೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಧಾರಾಕಾರ ಮಳೆಗೆ ಸೇತುವೆಗಳು ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಎರಡು ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ವೇದಗಂಗಾ ಹಾಗೂ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಬಾರವಾಡ-ಕುನ್ನೂರ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ.

ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯಿಂದ ಕಾರದಗಾ-ಭೋಜ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಸುಮಾರು 50 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಸೂಚನೆ ನೀಡಿದೆ. ಆದರೆ ಜಿಲ್ಲಾಡಳಿತದ ಮನವಿಗೆ ಕ್ಯಾರೇ ಎನ್ನದ ಜನರು ನದಿಯಲ್ಲಿ ಇಳಿದು ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಮೀನು ಹಿಡಿಯಲು ಮುಂದಾಗಿದ್ದಾರೆ. ಹೀಗಾಗಿ ನದಿ ಬಳಿ ಬಂದೋಬಸ್ತ್ ಸಲುವಾಗಿ ಜಿಲ್ಲಾಡಳಿತದಿಂದ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

karnataka Weather Forecast

ಶಿರೂರು ಸಮೀಪ ಗುಡ್ಡ ಕುಸಿಯುವ ಭೀತಿ

ಉಡುಪಿಯ ಶಿರೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿಯುವ ಭೀತಿ ಹೆಚ್ಚಾಗಿದೆ. ಬೈಂದೂರು ತಾಲೂಕು, ಶಿರೂರು ಸಮೀಪದಲ್ಲಿ ಗುಡ್ಡ ಜರಿಯುವ ಸಾಧ್ಯತೆ ಇದೆ. ಐಆರ್‌ಬಿ ಸಂಸ್ಥೆಯಿಂದ ರಾಷ್ಟ್ರೀಯ ಹೆದ್ದಾರಿ ಶತಶಪಥ ಕಾಮಗಾರಿಯ ವೇಳೆ ಗುಡ್ಡ ಕೊರೆಯಲಾಗಿತ್ತು. ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಗುಡ್ಡ ಜರಿಯುವ ಭೀತಿ ಇದೆ.

ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಒತ್ತಿನಣೆಯಲ್ಲಿ ನಿಧಾನವಾಗಿ ಜರಿದು ಗುಡ್ಡ ಬೀಳುತ್ತಿದೆ. ಮಳೆ ಮುಂದುವರೆದರೆ ಸಂಪೂರ್ಣ ಗುಡ್ಡ, ಹೆದ್ದಾರಿ ಮೇಲೆ ಕುಸಿಯುವ ಭೀತಿ ಇದೆ. ಒಂದು ವೇಳೆ ಗುಡ್ಡ ಜರಿದರೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ಸಂಪರ್ಕ ಬಂದ್ ಆಗಲಿದೆ.

ಚಿತ್ರದುರ್ಗದಲ್ಲಿ ಶಾಲೆಗೆ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಕಳ್ಳಿಹಟ್ಟಿ ಗೊಲ್ಲರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದೆ. ಜತೆಗೆ ಶಾಲಾ ಕೊಠಡಿಯಲ್ಲಿ ನೀರು ಸೋರುತ್ತಿದೆ. ಹೀಗಾಗಿ ಶಿಕ್ಷಕರು ಮಕ್ಕಳನ್ನು ಒಂದು ಮೂಲೆಗೆ ಕೂರಿಸಿದ್ದಾರೆ. ನೂತನ ಕಟ್ಟಡ ಅಥವಾ ಬೇರೊಂದು ಕಟ್ಟಡ ಕಟ್ಟಿಸಿಕೊಡುವಂತೆ ಹಲವು ಬಾರಿ ಶಾಲಾ ಸಿಬ್ಬಂದಿ ಮನವಿ ಮಾಡಿದ್ದಾರೆ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮೌನಕ್ಕೆ ಜಾರಿದ್ದಾರೆ.

ಒತ್ತಿನೆಣೆ ಬೀಚ್‌ನಲ್ಲಿ ಪ್ರವಾಸಿಗರ ಹುಚ್ಚಾಟ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಪ್ರವಾಸಿ ತಾಣ ಒತ್ತಿನೆಣೆ ಬೀಚ್‌ನಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬಹುತೇಕ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧ ಹೇರಿದೆ. ಅದರಲ್ಲೂ ಎಲ್ಲಾ ಬೀಚ್‌ಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಾಚ್ ಗಾರ್ಡ್ ಸಿಬ್ಬಂದಿ ಕಣ್ಗಾವಲು ಇದೆ. ಆದರೂ ಅಪ್ಪಳಿಸಿ ಬರುವ ಅಲೆಗಳ ಮುಂದೆ ಸೆಲ್ಫಿ ತೆಗೆಯಲು ಪ್ರವಾಸಿಗರು ಯತ್ನಿಸುತ್ತಿದ್ದಾರೆ.

ಅಪಾಯದಲ್ಲಿರುವ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ ಅಪಾಯದಲ್ಲಿದೆ. ಸ್ಥಳೀಯರ ದೂರಿನಂತೆ ಜಿಲ್ಲಾಡಳಿತವು ಘನ ವಾಹನ ಸಂಚಾರ ನಿಷೇಧಿಸಿದೆ. ಸೇತುವೆಯ ಅಡಿ ಭಾಗದಲ್ಲಿ ತುಂಡು ತುಂಡಾಗಿ ಬೀಮ್‌ಗಳ ಸಿಮೆಂಟ್‌ಗಳು ಬೀಳುತ್ತಿವೆ. ನಿರಂತರ ಅಕ್ರಮ ಮರುಳು ಸಾಗಾಟವೇ ಇದಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಈ ಭಾಗದಲ್ಲಿ ಪೋಲಿಸ್ ಚೆಕ್ ಪೋಸ್ಟ್ ಇಲ್ಲದಿರುವುದು ಮರಳು ದಂದೆಕೋರರಿಗೆ ವರದಾನವಾಗಿದೆ ಎಂದು ಕಿಡಿಕಾರಿದ್ದಾರೆ. ಬಳ್ಕುಂಜೆ ಭಾಗದಿಂದ ಪಲಿಮಾರು, ಉಡುಪಿ, ನಿಟ್ಟೆ, ಬೆಳ್ಮಣ್, ಕುದುರೆಮುಖ, ಹೆಬ್ರಿ, ಸಾಗರ ಮೊದಲಾದ ಕಡೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Uttara Kannada News: ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉ.ಕ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ!

Uttara Kannada News: ಉತ್ತರ ಕನ್ನಡ ಜಿಲ್ಲಾಡಳಿತದ ವೆಬ್ ಸೈಟ್ https://uttarakannada.nic.in/ನಲ್ಲಿ ಜೀವನ ಸಂಗಮ ಎಂಬ ಪೋರ್ಟಲ್ ಆರಂಭಿಸಿರುವ ಜಿಲ್ಲಾಡಳಿತ, ಜಿಲ್ಲೆಯಲ್ಲಿನ ಯುವ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆಯ್ಕೆಯನ್ನು ಪರಿಚಯಿಸಲು ಹಾಗೂ ಎಚ್.ಐ.ವಿ. ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧಗಳನ್ನು ಬೆಸೆದು, ಅವರು ವಿವಾಹವಾಗಲು ವೇದಿಕೆ ಒದಗಿಸಲು ಮುಂದಾಗಿದೆ. ಈ ಮೂಲಕ ಅವರ ಬದುಕಿನಲ್ಲಿ ಸುಗಮ ರೀತಿಯಲ್ಲಿ ಅರ್ಥಪೂರ್ಣ ಸಂಬಂಧಗಳು ಏರ್ಪಡುವಂತೆ ಮಾಡಲು ಪ್ರಯತ್ನಿಸಿದೆ.

VISTARANEWS.COM


on

district administration has made an innovative attempt for the first time in the state for the marriage of farmer youth and disabled people
Koo

ಕಾರವಾರ: ಇತ್ತೀಚೆಗೆ ನಡೆದ ʼಜನಸ್ಪಂದನ ಕಾರ್ಯಕ್ರಮʼದಲ್ಲಿ ರೈತ ಯುವಕರೊಬ್ಬರು ತಮಗೆ ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಅರ್ಜಿ ಸಲ್ಲಿಸಿರುವ ವಿಷಯ ವ್ಯಾಪಕ ಸುದ್ದಿಯಾಗಿತ್ತು. ಇದು ರೈತ ಯುವಕರು ವಿವಾಹವಾಗಲು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಜದ ಕಣ್ತೆರೆದಿತ್ತು. ಇದಕ್ಕೆ ಪರಿಹಾರವೆಂಬಂತೆ ರಾಜ್ಯದಲ್ಲೇ ಪ್ರಥಮ ಬಾರಿಗೆ ಜಿಲ್ಲಾಡಳಿತದ (Uttara Kannada News) ಮೂಲಕ ರೈತ ಯುವಕರು ಮಾತ್ರವಲ್ಲದೇ ವಿಕಲಚೇತನರು, ಎಚ್.ಐ.ವಿ. ಪೀಡಿತರಿಗೆ ವಿವಾಹವಾಗಲು ಸೂಕ್ತ ವೇದಿಕೆ ಒದಗಿಸುವ ವಿನೂತನ ಪ್ರಯತ್ನಕ್ಕೆ ಉತ್ತರ ಕನ್ನಡ ಜಿಲ್ಲಾಡಳಿತ ಮುನ್ನುಡಿ ಬರೆದಿದೆ.

ಉತ್ತರ ಕನ್ನಡ ಜಿಲ್ಲಾಡಳಿತದ ವೆಬ್ ಸೈಟ್ https://uttarakannada.nic.in/ ನಲ್ಲಿ ಜೀವನ ಸಂಗಮ ಎಂಬ ಪೋರ್ಟಲ್ ಆರಂಭಿಸಿರುವ ಜಿಲ್ಲಾಡಳಿತ, ಜಿಲ್ಲೆಯಲ್ಲಿನ ಯುವ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆಯ್ಕೆಯನ್ನು ಪರಿಚಯಿಸಲು ಹಾಗೂ ಎಚ್.ಐ.ವಿ. ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧಗಳನ್ನು ಬೆಸೆದು, ಅವರು ವಿವಾಹವಾಗಲು ವೇದಿಕೆ ಒದಗಿಸಲು ಮುಂದಾಗಿದೆ. ಈ ಮೂಲಕ ಅವರ ಬದುಕಿನಲ್ಲಿ ಸುಗಮ ರೀತಿಯಲ್ಲಿ ಅರ್ಥಪೂರ್ಣ ಸಂಬಂಧಗಳು ಏರ್ಪಡುವಂತೆ ಮಾಡಲು ಪ್ರಯತ್ನಿಸಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

ಈ ಪೋರ್ಟಲ್ ಸೇವೆ ಪಡೆಯಲು ಬಳಕೆದಾರರು ಯಾವುದೇ ನೋಂದಣಿ ಶುಲ್ಕ ಅಥವಾ ಇತರೇ ಯಾವುದೇ ಶುಲ್ಕಗಳಿಲ್ಲದೆ ನೋಂದಾಯಿಸಿಕೊಳ್ಳಬಹುದು. ಇದು ಆರ್ಥಿಕವಾಗಿ ಹಿಂದುಳಿದ ವರ್ಗದವರನ್ನೂ ಒಳಗೊಂಡಂತೆ ಎಲ್ಲಾ ವ್ಯಕ್ತಿಗಳಿಗೂ ನೆರವು ಒದಗಿಸಲಿದ್ದು, ಶಿಕ್ಷಣದ ಕೊರತೆ ಮತ್ತು ಬೇರೆ ಯಾವುದೇ ಉದ್ಯೋಗವಿಲ್ಲದ ಕಾರಣ ಸೂಕ್ತ ಜೀವನ ಸಂಗಾತಿಯನ್ನು ಪಡೆಯದ ರೈತ ಯುವಕರಿಗೆ ಜೀವನ ಸಂಗಾತಿಯನ್ನು ಪಡೆಯಲು ಈ ಪೋರ್ಟಲ್ ಉತ್ತಮ ವೇದಿಕೆಯನ್ನು ಒದಗಿಸುತ್ತದೆ.

ಈ ಪೋರ್ಟಲ್ ಎಲ್ಲಾ ಬಳಕೆದಾರರಿಗೆ ಅತ್ಯಂತ ಸುರಕ್ಷಿತ ಪೋರ್ಟಲ್ ಆಗಿದ್ದು, ಹೊಂದಾಣಿಕೆಯ ಪ್ರಕ್ರಿಯೆಯಲ್ಲಿ ಅವರ ಗೌಪ್ಯತೆ ಮತ್ತು ಘನತೆಗೆ ಆದ್ಯತೆ ನೀಡಲಾಗಿದೆ. ವಿವಾಹವಾಗಲು ಸಲ್ಲಿಸುವ ಅರ್ಜಿಗಳನ್ನು ಮತ್ತು ಪ್ರೊಫೈಲ್‌ಗಳನ್ನು ವ್ಯಕ್ತಿಯು ವಾಸವಾಗಿರುವ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರು ಸೇರಿದಂತೆ ಉತ್ತರ ಕನ್ನಡ ಜಿಲ್ಲಾಡಳಿತದ ವಿವಿಧ ಅಧಿಕಾರಿಗಳು ಪರಿಶೀಲಿಸಲಿದ್ದು, ಅರ್ಜಿದಾರರ ಪ್ರೊಫೈಲ್‌ಗಳಲ್ಲಿನ ನೈಜತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸುತ್ತಾರೆ.

ವಿವಾಹವಾಗಲು ಅರ್ಜಿ ಸಲ್ಲಿಸುವ ವ್ಯಕ್ತಿಯ ಹಿನ್ನೆಲೆ, ವಾಸಸ್ಥಳ, ಉದ್ಯೋಗ, ಕೌಟುಂಬಿಕ ಪರಿಸ್ಥಿತಿ, ಆತನ ಆದಾಯ, ಮಾನಸಿಕ ಮತ್ತು ದೈಹಿಕ ಆರೋಗ್ಯ ಸ್ಥಿತಿಗತಿ ಬಗ್ಗೆ ಜಿಲ್ಲೆಯ ವಿವಿಧ ಅಧಿಕಾರಿಗಳು ಖುದ್ದು ಸ್ಥಳ ಭೇಟಿ ಪರಿಶೀಲನೆ ನಡೆಸಲಿದ್ದು, ಅರ್ಹ ವ್ಯಕ್ತಿಗಳಿಗೆ ಮಾತ್ರ ಹೊಂದಾಣಿಕೆಯ ಮುಂದಿನ ಪ್ರಕ್ರಿಯೆಯಲ್ಲಿ ಮುಂದುವರೆಯಲು ಅವಕಾಶ ನೀಡಲಾಗುವುದು.

ಇದನ್ನೂ ಓದಿ: HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

ಈ ಸೇವೆಯು ಎಲ್ಲಾ ಧರ್ಮಗಳ ವ್ಯಕ್ತಿಗಳಿಗೂ ಮುಕ್ತವಾಗಿದ್ದು, ಸಾರ್ವಜನಿಕರು ತಮ್ಮ ಧಾರ್ಮಿಕ ಅದ್ಯತೆಗಳನ್ನು ಮ್ಯಾಚ್ ಮೇಕಿಂಗ್‌ಗೆ ನಿರ್ದಿಷ್ಟಪಡಿಸಲು ಅವಕಾಶ ನೀಡುವುದರ ಜತೆಗೆ, ತಮ್ಮದೇ ಆದ ಜಾತಿಯೊಳಗೆ ಹೊಂದಾಣಿಕೆಗಳನ್ನು ಆಯ್ಕೆ ಮಾಡಬಹುದು ಅಥವಾ ಅಂತರ-ಜಾತಿ ಆಯ್ಕೆಗಳನ್ನು ಆಯ್ಕೆ ಮಾಡಿಕೊಂಡು, ವೈಯಕ್ತಿಕ ಆದ್ಯತೆಗಳ ಆಧಾರದ ಮೇಲೆ ತಮಗೆ ಇಚ್ಚಿಸುವ ಹೊಂದಾಣಿಕೆಯನ್ನು ಆಯ್ಕೆ ಮಾಡಬಹುದು.

ಈ ಪೋರ್ಟಲ್ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ರಕ್ಷಿಸಲು ಸಂಪೂರ್ಣ ಬದ್ಧವಾಗಿದ್ದು, ಎಲ್ಲಾ ಡೇಟಾವನ್ನು ಗೌಪ್ಯವಾಗಿ ಇರಿಸಿ, ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ಬಳಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಅರ್ಹ ಯುವಕ ಯುವತಿಯರಿಗೆ ಮಾತ್ರ ಈ ವಿವಾಹ ಹೊಂದಾಣಿಕೆಗೆ ವೇದಿಕೆ ಒದಗಿಸಲಿದ್ದು, ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಇದರ ನೆರವು ದೊರೆಯಲಿದೆ.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

ಜಿಲ್ಲೆಯಲ್ಲಿ ಸೂಕ್ತ ಸಂಗಾತಿ ದೊರೆಯದೇ ಒಂಟಿಯಾಗಿ ಕೊರಗುತ್ತಿರುವ ಯುವ ರೈತರು, ವಿಕಲಚೇತನರು, ಎಚ್.ಐ.ವಿ. ಪೀಡಿತರಿಗೆ ಸೂಕ್ತ ಜೀವನ ಸಂಗಾತಿಯನ್ನು ಒದಗಿಸುವ ಉದ್ದೇಶದಿಂದ ಜಿಲ್ಲಾಡಳಿತದಿಂದ ಜೀವನ ಸಂಗಮ ಪೋರ್ಟಲ್ ತೆರೆಯಲಾಗಿದೆ. ಇಲ್ಲಿ ಅರ್ಜಿ ಸಲ್ಲಿಸುವವರಿಗೆ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿಕೊಡಲಾಗುವುದು. ಅಂತರ್ಜಾತಿ ವಿವಾಹವಾಗುವವರಿಗೆ ಮತ್ತು ವಿಕಲಚೇತನರನ್ನು ವಿವಾಹವಾಗುವವರಿಗೆ ಸರ್ಕಾರದಿಂದ ದೊರೆಯುವ ಪ್ರೋತ್ಸಾಹ ಧನ ಸೇರಿದಂತೆ ಎಲ್ಲಾ ರೀತಿಯ ನೆರವು ಒದಗಿಸಲಾಗುವುದು. 10 ಕ್ಕಿಂತ ಹೆಚ್ಚು ಜೋಡಿಗಳು ಒಪ್ಪಿಗೆ ನೀಡಿದಲ್ಲಿ ವಿವಿಧ ಸಂಘ ಸಂಸ್ಥೆಗಳ ನೆರವಿನಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಚಿಂತನೆ ಇದೆ. ಜಿಲ್ಲೆಯ ಅನಾಥಾಶ್ರಮಗಳಲ್ಲಿನ ಯುವತಿಯರಿಗೂ ಸಹ ಈ ಪೋರ್ಟಲ್ ಮೂಲಕ ಸೂಕ್ತ ಜೀವನ ಸಂಗಾತಿ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಮಳೆ

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Karnataka Rain : ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯು (Rain Effect) ಅವಾಂತವರವೇ ಸೃಷ್ಟಿಸಿದೆ. ಕಾರವಾರ ಸಮೀಪ ಮಳೆಗೆ ಮನೆಗಳಿಗೆ ಹಾವುಗಳು (snake) ನುಗ್ಗುತ್ತಿವೆ. ಮತ್ತೊಂದು ಕಡೆ ಹೊನ್ನಾವಾರ-ಬೆಂಗಳೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಗಳು ಮುಂದುವರಿದಿದೆ.

VISTARANEWS.COM


on

By

karnataka rain
Koo

ಕಾರವಾರ/ಉಡುಪಿ: ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡ ಎಂಬಾಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಸುಮಾರು 12 ಅಡಿ ಉದ್ದದ ಹೆಬ್ಬಾವು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದರು.

ಅರಣ್ಯ ಪ್ರದೇಶದ ಸಮೀಪದಲ್ಲಿ ಇದ್ದು, ಮಳೆ ನೀರಿನಲ್ಲಿ ಹರಿದು ಬಂದು ಮನೆಯ ಮೇಲೆ ಹೆಬ್ಬಾವು ಸೇರಿಕೊಂಡಿದೆ. ಬಳಿಕ ಸ್ಥಳಕ್ಕಾಗಮಿಸಿದ ಉರಗ ಪ್ರೇಮಿ ಗೋಪಾಲ್ ಸುಮಾರು ಒಂದು ಗಂಟೆ ಕಾಲ‌ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ರಕ್ಷಣೆ ಮಾಡಿದ್ದಾರೆ.

ಭಾರಿ ಮಳೆ-ಗಾಳಿಗೆ ಕುಸಿದು ಬಿದ್ದ ಮನೆ

ಇತ್ತ ಭಾರೀ ಗಾಳಿ ಮಳೆಗೆ ಮನೆಯೊಂದು ಭಾಗಶಃ ಕುಸಿದು ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದೊಡ್ನಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದೊಂದು ವಾರದಿಂದ ಶಿರಸಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ. ಸಂತೋಷ ಜೋಗಿ ಎಂಬುವವರ ಮನೆಯ ಮಣ್ಣಿನ ಗೋಡೆ ನೆನೆದು ಭಾಗಶಃ ಕುಸಿದು ಬಿದ್ದಿದೆ. ಪರಿಹಾರಕ್ಕಾಗಿ ಸರ್ಕಾರಕ್ಕೆ ಅಂಗಲಾಚಿದ್ದಾರೆ. ಸ್ಥಳಕ್ಕೆ ಪಿಡಿಓ ಪ್ರೀತಿ ಶೆಟ್ಟಿ, ಶಾನುಭೋಗ ಸುಕನ್ಯಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಾವಳಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ ತಾಲೂಕುಗಳಲ್ಲಿ ವರುಣಾರ್ಭಟ ಜೋರಾಗಿದೆ. ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆ ಹೆಚ್ಚಾದರೆ ಕಾರವಾರದ ಕದ್ರಾ ಜಲಾಶಯದಿಂದ ನೀರು ಹೊರ ಬರಲಿದೆ. ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕದ್ರಾ ಜಲಾಶಯದಲ್ಲಿ ಸುರಕ್ಷಿತ ಮಟ್ಟ ಕಾಯ್ದುಕೊಳ್ಳಲು ಒಳಹರಿವು ಆಧರಿಸಿ ನೀರು ಬಿಡುಗಡೆಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರದಿಂದಾಗಿ ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ ಬಂದಿದೆ. ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳದಿಂದಾಗಿ ಐತಿಹಾಸಿಕ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭತ ಸೃಷ್ಟಿಯಾಗಿದೆ. ಭಾರತದ ನಯಾಗಾರ ಫಾಲ್ಸ್ ಎಂದೇ‌ ಖ್ಯಾತವಾಗಿರುವ ಗೋಕಾಕ್ ಜಲಪಾತ, 180 ಅಡಿ ಮೇಲಿಂದ ಧುಮ್ಮಿಕ್ಕುವ ನೀರು, ಜಲಪಾತದ ರಮಣೀಯ ದೃಶ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ. ಇನ್ನೂ ಸೆಲ್ಫಿ, ಜಲಪಾತದ ಫೋಟೊ ತೆಗೆಯಲು ಜಲಪಾತದ ತುದಿಗೆ ಹೋಗಿ ಪ್ರವಾಸಿಗರು ಹುಚ್ಚಾಟದ ಕಾರಣಕ್ಕೆ ನಿಗಾ ಇಡಲು ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ‌ನಿಯೋಜನೆ ಮಾಡಲಾಗಿದೆ.

ತುಂಬಿ ಹರಿದ ವಾರಾಹಿ ಮತ್ತು ಕುಬ್ಬಾ ನದಿ

ಪಶ್ಚಿಮಘಟ್ಟದ ತಪ್ಪಲಲ್ಲಿ ಸುರಿದ ಭಾರೀ ಮಳೆ ಎಫೆಕ್ಟ್‌ನಿಂದಾಗಿ ಉಡುಪಿಯ ವಾರಾಹಿ ಮತ್ತು ಕುಬ್ಬಾ ನದಿ ತುಂಬಿ ಹರಿದಿದೆ. ನದಿ ತಟ ಕಂಡ್ಲೂರಿನಲ್ಲಿ ಲಂಗರು ಹಾಕಿದ್ದ ಆರು ನಾಡದೋಣಿಗಳು ನೀರುಪಾಲಾಗಿವೆ. ಹೊಳೆಯ ರಭಸಕ್ಕೆ ಎಲ್ಲಾ ನಾಡದೋಣಿಗಳು ಕೊಚ್ಚಿ ಹೋಗಿವೆ. ಮೀನುಗಾರರು ಕಳೆದ ಎರಡು ದಿನಗಳಿಂದ ಹುಡುಕಾಡುತ್ತಿದ್ದಾರೆ.

ಉಡುಪಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಲ್ಲಿ ಮೂರನೇ ದಿನಕ್ಕೆ ಮುಂದುವರಿದ ಭಾರಿ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮೂರು ತಾಲೂಕುಗಳ ಶಾಲಾ- ಕಾಲೇಜು ರಜೆ ನೀಡಲಾಗಿದೆ. ಬೈಂದೂರು ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ಶಾಲಾ-ಕಾಲೇಜು ಶುಕ್ರವಾರ ರಜೆ ನೀಡಲಾಗಿತ್ತು.

ಬೈಂದೂರು ತಾಲೂಕು, ಮರವಂತೆ ಬೀಚಿನಲ್ಲಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ. ಹೀಗಾಗಿ ಮಳೆಗಾಲ ಮುಗಿಯುವವರೆಗೂ ಮುನ್ನೆಚ್ಚರಿಕೆ ಕ್ರಮವಾಗಿ ಬೀಚ್ ಬಂದ್ ಮಾಡಲಾಗಿದೆ. ಸೌಪರ್ಣಿಕ ನದಿ ಅರಬ್ಬಿ ಸಮುದ್ರ ಮಧ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುಮಾರು ಒಂದುವರೆ ಕಿಲೋಮೀಟರ್ ಉದ್ದವಿದ್ದು, ಯಾವುದೇ ತಡೆ ಬೇಲಿ ಇಲ್ಲ. ಈ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ತೆರಳುವ ಬಹುತೇಕರು ಕಡಲಿಗೆ ಇಳಿಯುವ ಸಾಧ್ಯತೆ ಇದೆ. ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಡಳಿತ ಬೀಚ್ ಕಾವಲು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

ಇಳಿಮುಖವಾದ ನೆರೆ

ಉಡುಪಿಯ ಬೈಂದೂರು ತಾಲೂಕು ನಾವುಂದದಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಸೌಪರ್ಣಿಕಾ ನದಿ ಉಕ್ಕಿ ಹರಿದಿತ್ತು. ಇದರಿಂದಾಗಿ 150 ಎಕರೆ ಮುಳುಗಡೆಯಾಗಿ ಕೃಷಿ ಭೂಮಿಯಲ್ಲಿ ಬೆಳೆದ ಭತ್ತ ನಾಶವಾಗಿತ್ತು. ಸದ್ಯ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ಒಮ್ಮೆ ಭತ್ತದ ನಾಟಿ ಮುಗಿಸಿದ್ದ ರೈತರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಳೆ ನಿಂತಿರುವುದರಿಂದ ಬಡಾಕೆರೆ ಕೃಷಿಕರು ಮತ್ತೆ ಬತ್ತದ ನಾಟಿ ಮಾಡುತ್ತಿದ್ದಾರೆ.

ಗುಡ್ಡ ಕುಸಿತ; ಮಣ್ಣು ತೆರವು ಕಾರ್ಯಾಚರಣೆ ಆರಂಭ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ಹೊನ್ನಾವರದ ವರ್ನಕೇರಿ ಬಳಿ ನಿನ್ನೆ ಗುರುವಾರ ಮರ ಸಹಿತ ಗುಡ್ಡ ಕುಸಿದಿತ್ತು. ಇದರಿಂದಾಗಿ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ, ಬೆಂಗಳೂರು ಮಾರ್ಗದ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ಏಕಮುಖ ಸಂಚಾರಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿತ್ತು.

ಇಂದು ಶುಕ್ರವಾರ ಕಲ್ಲುಬಂಡೆ ಸಹಿತ ಕುಸಿತ ಗುಡ್ಡ ರಸ್ತೆಗೆ ಬಿದ್ದಿದೆ. ಹೀಗಾಗಿ ಹಿಟಾಚಿ ಮೂಲಕ ಗುಡ್ಡದ ಮಣ್ಣು ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಮಣ್ಣು ತೆಗೆದರೂ ಮತ್ತೆ ಗುಡ್ಡ ಕುಸಿಯುತ್ತಿದ್ದು, ಹೊನ್ನಾವರ -ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಅವೈಜ್ಞಾನಿಕ ಕಾಮಗಾರಿಯಿಂದ ಮನೆಗಳು ಜಲಾವೃತ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿ ಹಲವು ಮನೆಗಳು ಜಲಾವೃತಗೊಂಡಿದೆ. ನೌಕಾನೆಲೆ ಕಾಂಪೌಂಡ್‌, ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ನೀರು ಹರಿದುಹೋಗದೇ ಜಲಾವೃತಗೊಂಡಿದೆ. ಸಮುದ್ರಕ್ಕೆ ನೀರು ಸರಾಗವಾಗಿ ಹರಿದುಹೋಗದ ಪರಿಣಾಮ ಅರಗಾ ಗ್ರಾಮದ ನಿವಾಸಿಗಳು ಆತಂಕಗೊಂಡಿದ್ದಾರೆ. ಮಹಿಳೆಯರು, ಮಕ್ಕಳನ್ನು ಇಟ್ಟುಕೊಂಡು ಆತಂಕದಲ್ಲೇ ಕಾಲಕಳೆಯುವ ಪರಿಸ್ಥಿತಿ ಎದುರಾಗಿದೆ. ಮಳೆ ಹೆಚ್ಚಾದಲ್ಲಿ ಮನೆಗಳಿಗೆ ನೀರು ನುಗ್ಗುವ ಆತಂಕ ಇದೆ. ಪ್ರತಿವರ್ಷ ಮಳೆಗಾಲದಲ್ಲಿ ನೆರೆ ಪರಿಸ್ಥಿತಿಯನ್ನು ಅರಗಾ ಗ್ರಾಮಸ್ಥರು ಎದುರಿಸುತ್ತಿದ್ದಾರೆ. ನೀರು ಹರಿದುಹೋಗಲು ಸೂಕ್ತ ವ್ಯವಸ್ಥೆ ಇಲ್ಲದೇ ಅವ್ಯವಸ್ಥೆ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

Karnataka Weather Forecast : ರಾಜ್ಯಾದ್ಯಂತ ಕಳೆದೊಂದು ವಾರದಿಂದ ಮಳೆಯು (Rain news) ಅಬ್ಬರಿಸುತ್ತಿದ್ದು, ಏಳು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೆಂಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

VISTARANEWS.COM


on

By

karnataka Weather Forecast Rain
Koo

ಬೆಂಗಳೂರು: ಜು.5ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಮಧ್ಯಮ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇತ್ತ ಉತ್ತರ ಒಳನಾಡಿನದಲ್ಲಿ ಸಾಕಷ್ಟು ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಆದರೆ ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
RBI Fine
ದೇಶ9 mins ago

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

Namma Metro
ಕರ್ನಾಟಕ14 mins ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Viral Video
ವೈರಲ್ ನ್ಯೂಸ್16 mins ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ20 mins ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Kerala govt
ದೇಶ48 mins ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Teach for India
ಬೆಂಗಳೂರು52 mins ago

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Bridge Collapse
ದೇಶ54 mins ago

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Shivamogga News Give top priority to cleanliness says Raju Hiriyawali
ಶಿವಮೊಗ್ಗ59 mins ago

Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

Stampede Tips and Tricks
ದೇಶ1 hour ago

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

ಕರ್ನಾಟಕ1 hour ago

MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ5 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ5 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ7 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ9 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು10 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು10 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ15 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌