Video| ‘ಕುಡಿದು ರಾಜ್ಯವನ್ನು ಡ್ರೈವ್​ ಮಾಡ್ತಿದ್ದಾರೆ’; ಪಂಜಾಬ್​ ಸಿಎಂಗೆ ಹರ್ಸಿಮೃತ್​ ಕೌರ್​ ಹಿಗ್ಗಾಮುಗ್ಗ ಬೈಗುಳ, ದೊಡ್ಡದಾಗಿ ನಕ್ಕ ಅಮಿತ್​ ಶಾ - Vistara News

ದೇಶ

Video| ‘ಕುಡಿದು ರಾಜ್ಯವನ್ನು ಡ್ರೈವ್​ ಮಾಡ್ತಿದ್ದಾರೆ’; ಪಂಜಾಬ್​ ಸಿಎಂಗೆ ಹರ್ಸಿಮೃತ್​ ಕೌರ್​ ಹಿಗ್ಗಾಮುಗ್ಗ ಬೈಗುಳ, ದೊಡ್ಡದಾಗಿ ನಕ್ಕ ಅಮಿತ್​ ಶಾ

ಶಿರೋಮಣಿ ಅಕಾಲಿ ದಳ ನಾಯಕಿ, ಮಾಜಿ ಕೇಂದ್ರ ಸಚಿವೆ ಹರ್ಸಿಮೃತ್​ ಕೌರ್​ ಬಾದಲ್ ಅವರು ಪಂಜಾಬ್​ ಮುಖ್ಯಮಂತ್ರಿ ಭಗವಂತ್ ಮಾನ್​ ವಿರುದ್ಧ ಸಂಸತ್ತಿನಲ್ಲಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Amit Shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಶಿರೋಮಣಿ ಅಕಾಲಿ ದಳ​ (ಎಸ್​ಎಡಿ)ದ ಸಂಸದೆ ಹರ್ಸಿಮೃತ್​ ಕೌರ್​ ಬಾದಲ್​ ಅವರು ಇಂದು ಪಂಜಾಬ್​ ಮುಖ್ಯಮಂತ್ರಿ ಭಗವಂತ್​ ಮಾನ್​ ವಿರುದ್ಧ ಲೋಕಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಂಜಾಬ್​​ನಲ್ಲಿ ಹೆಚ್ಚಿದ ಮಾದಕ ದ್ರವ್ಯ ಬಳಕೆ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ವಿಚಾರಕ್ಕೆ ಅವರು ಮಾನ್​​ ವಿರುದ್ಧ ಕಿಡಿಕಾರಿದ್ದಾರೆ. ಹರ್ಸಿಮೃತ್​ ಕೌರ್​ ಬಾದಲ್​ ಅವರು ಭಗವಂತ್ ಮಾನ್​​ಗೆ ಹಿಗ್ಗಾಮುಗ್ಗಾ ಬೈಯ್ಯುತ್ತಿದ್ದರೆ, ಗೃಹ ಸಚಿವ ಅಮಿತ್​ ಶಾ, ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ಮತ್ತು ಇತರ ಹಲವು ಸಂಸದರೆಲ್ಲ ನಗುತ್ತಿರುವುದು ಕಂಡುಬಂತು.

ಸಂಸತ್​​ನಲ್ಲಿ ಮಾತನಾಡಿದ ಸಂಸದೆ ಹರ್ಸಿಮೃತ್​ ಕೌರ್​ ಬಾದಲ್, ‘ಪಂಜಾಬ್​ ಮುಖ್ಯಮಂತ್ರಿ ಭಗವಂತ್​ ಮಾನ್​ ಕೆಲವೇ ತಿಂಗಳುಗಳ ಹಿಂದೆ ಇದೇ ಸಂಸತ್ತಿನ ಮೂಲೆಯೊಂದರಲ್ಲಿ ಕುಳಿತುಕೊಳ್ಳುತ್ತಿದ್ದರು​. ಬೆಳಗ್ಗೆಯೇ ಅದೇನು ತಿಂದು-ಕುಡಿದು ಬರುತ್ತಿದ್ದರೋ ಗೊತ್ತಿಲ್ಲ. ಸದಾ ಅಮಲೇರಿಸಿಕೊಂಡಿರುತ್ತಿದ್ದರು. ಅವರ ಪಕ್ಕ ಕುಳಿತುಕೊಳ್ಳಲು ಯಾರೂ ಮುಂದೆ ಬರುತ್ತಿರಲಿಲ್ಲ. ಅವರ ಪಕ್ಕ ಕುಳಿತುಕೊಂಡವರೆಲ್ಲ ‘ನಮ್ಮ ಸೀಟ್​ ಬದಲಿಸಿಕೊಡಿ’ ಎಂದು ಸ್ಪೀಕರ್​ ಬಳಿಯೇ ಕೇಳುತ್ತಿದ್ದರು. ಈ ಹಿಂದಿನ ಸ್ಪೀಕರ್​​ನ ಕೇಳಿನೋಡಿ, ಅವರ ಬಳಿಯಂತೂ ಅದೆಷ್ಟು ಮಂದಿ ಹೋಗಿ, ಮಾನ್​ ಬಗ್ಗೆ ದೂರಿದ್ದಾರೆ ಲೆಕ್ಕವಿಲ್ಲ. ಒಟ್ಟಿನಲ್ಲಿ ಜಾಗ ಬದಲಿಸಿಕೊಂಡು ಹೋಗುತ್ತಿದ್ದರು’ ಎಂದು ಹೇಳಿದರು.

ಅಷ್ಟೇ ಅಲ್ಲ, ‘ಕುಡಿದು ವಾಹನ ಚಲಾಯಿಸಬೇಡಿ’ ಎಂಬ ಬೋರ್ಡ್​​ನ್ನು ಪಂಜಾಬ್​​ನ ರಸ್ತೆಗಳ ಪಕ್ಕ ಅನೇಕ ಕಡೆ ಹಾಕಿಡಲಾಗಿದೆ. ಆದರೆ ಈ ಭಗವಂತ್​ ಮಾನ್ ಮದ್ಯಪಾನ ಮಾಡಿ ಇಡೀ ರಾಜ್ಯವನ್ನು ಡ್ರೈವ್ ಮಾಡುತ್ತಿದ್ದಾರೆ. ಮಾನ್​ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದಾಗ, ಅವರು ಕುಡಿತ ಬಿಡುವುದಾಗಿ ತಾಯಿ ಮೇಲೆ ಆಣೆ ಮಾಡಿದ್ದಾರೆ ಎಂದೆಲ್ಲ ಅರವಿಂದ್​ ಕೇಜ್ರಿವಾಲ್​ ಹೇಳಿದ್ದಾರೆ. ಅದೇನೋ ಮಹಾನ್​ ತ್ಯಾಗ ಎಂಬಂತೆ ಬಿಂಬಿಸಿದ್ದಾರೆ. ಕುಡಿತ ಬಿಡುವುದು ತ್ಯಾಗವೇ’ ಎಂದು ಹರ್ಸಿಮೃತ್​ ಕೌರ್ ಪ್ರಶ್ನಿಸಿದರು.

‘ಹಿಂದೊಮ್ಮೆ ಸಂಸತ್ತಿನ ಮೇಲೆ ದಾಳಿಯಾಗಿದ್ದು ಭಗವಂತ್ ಮಾನ್​ಗೆ ಗೊತ್ತಿತ್ತು. ಪಾರ್ಲಿಮೆಂಟ್ ಭದ್ರತಾ ನಿಯಮಗಳೂ ಗೊತ್ತಿದೆ. ಹಾಗಿದ್ದಾಗ್ಯೂ 2016ರಲ್ಲಿ ಅವರು ಇಡೀ ಸಂಸತ್ತಿನ ಮೂಲೆಮೂಲೆಯನ್ನು ವಿಡಿಯೊ ಮಾಡಿ ಲೈವ್​​ಸ್ಟ್ರೀಮ್​​ನಲ್ಲಿ ತೋರಿಸಿದ್ದರು. ಇಂಥವರನ್ನು ಅದು ಹೇಗೆ ಮುಖ್ಯಮಂತ್ರಿ ಮಾಡಿದರು ಎಂದೇ ಅರ್ಥವಾಗುತ್ತಿಲ್ಲ’ ಎಂದೂ ಕೌರ್​ ಹೇಳಿದ್ದಾರೆ. ಹೀಗೆ ಹರ್ಸಿಮೃತ್​ ಕೌರ್​ ಬಾದಲ್ ಅವರು ನಿರರ್ಗಳವಾಗಿ ಭಗವಂತ್​ ಮಾನ್​​ಗೆ ಬೈಯುತ್ತಿದ್ದರೆ, ಅಮಿತ್​ ಶಾ, ಓಂಬಿರ್ಲಾ ಮತ್ತು ಉಳಿದೆಲ್ಲ ಸಂಸದರೂ ಜೋರಾಗಿ ನಗುತ್ತಿದ್ದರು. ಪಂಜಾಬ್​​ ಸಂಸದರೊಬ್ಬರು ಪ್ರಾರಂಭದಲ್ಲಿ ಕೌರ್​ಗೆ ವಿರೋಧ ವ್ಯಕ್ತಪಡಿಸಲು ಮುಂದಾದರೂ, ಬಳಿಕ ಅವರು ಸುಮ್ಮನೇ ಕುಳಿತುಕೊಂಡರು.

ಈ ಹಿಂದೆ ಎಸ್​ಎಡಿ ಪಕ್ಷ ಎನ್​ಡಿಎ ಒಕ್ಕೂಟದಲ್ಲಿ ಇದ್ದಾಗ ಹರ್ಸಿಮೃತ್​ ಕೌರ್​ ಬಾದಲ್​ ಕೇಂದ್ರದಲ್ಲಿ ಮಂತ್ರಿಯಾಗಿದ್ದರು. ಬಳಿಕ ಕೃಷಿ ಕಾಯ್ದೆ ವಿರೋಧಿಸಿ ಎಸ್​ಎಡಿ ಪಕ್ಷ ಬಿಜೆಪಿ ಒಕ್ಕೂಟದಿಂದ ಹೊರಬಿದ್ದಿದೆ. ಇವರು ಭಗವಂತ್​ ಮಾನ್​ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದು ಇದೇ ಮೊದಲೇನೂ ಅಲ್ಲ. ಹಿಂದೆಯೂ ಹಲವು ಬಾರಿ ಮಾನ್​​ರನ್ನು ಟೀಕಿಸಿದ್ದರು.

ಇದನ್ನೂ ಓದಿ: ಪಂಜಾಬ್​ ಪೊಲೀಸ್ ಠಾಣೆ ಮೇಲೆ ಗ್ರೆನೇಡ್​ ದಾಳಿ ಮಾಡಿದ್ದ 6 ಮಂದಿ ಬಂಧನ; ಯೂಟ್ಯೂಬ್​ ನೋಡಿ ದಾಳಿ ಮಾಡುವುದನ್ನು ಕಲಿತಿದ್ದರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

VISTARANEWS.COM


on

wayanad landslide cm siddaramaiah pinarayi vijayan
Koo

ಬೆಂಗಳೂರು: ವಯನಾಡ್‌ ಭೂಕುಸಿತ (Wayanad landslide, Kerala landslide) ಸಂತ್ರಸ್ತರಿಗೆ 100 ಮನೆ ನಿರ್ಮಾಣ ಮಾಡಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ (Pinarayi Vijayan) ಅವರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಹೇಳಿಕೆ ನೀಡಿದ್ದಾರೆ.

“ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ” ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು. ಭೂಕುಸಿತದಿಂದ ಸಂಕಷ್ಟದಲ್ಲಿರುವ ಕನ್ನಡಿಗರ ನೆರವಿಗೆ ಧಾವಿಸಲು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗಿತ್ತು. ಗಡಿ ಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿತ್ತು. ಹೆಚ್.ಡಿ ಕೋಟೆಯಲ್ಲಿ ಗಾಯಾಳುಗಳನ್ನು ಕರೆತಂದು ಅಗತ್ಯ ಚಿಕಿತ್ಸೆ ಕೊಡಿಸಲು ಬಸ್‌ಗಳನ್ನು ಏರ್ಪಡಿಸಲಾಗಿತ್ತು. ಅಗತ್ಯ ಸಲಕರಣೆಗಳನ್ನು ಹೊತ್ತ ಬೆಂಗಳೂರಿನ ಎನ್.ಡಿ.ಆರ್.ಎಫ್ ಹಾಗೂ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಸೇನಾಪಡೆಯ ತಂಡಗಳು ವಯನಾಡು ತಲುಪಿದ್ದವು.

ವಯನಾಡು ದುರಂತವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಕರ್ನಾಟಕದ ಯಾವುದೇ ಮೂಲೆಯಲ್ಲಿ ಪ್ರವಾಹ, ಭೂಕುಸಿತ ಅಥವಾ ಇತರೇ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದರೆ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರಲು ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಿನ್ನೆ ಮುಖ್ಯಮಂತ್ರಿಗಳು ಕೊಡಗಿನಲ್ಲಿ ಭೂಕುಸಿತ ಸಂಭವಿಸಿದ ಜಾಗಕ್ಕೆ ಭೇಟಿ ನೀಡಿದ್ದರು.

“ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು” ಎಂದು ಭೇಟಿಯ ಬಳಿಕ ಹೇಳಿದ್ದರು. “ಜಿಲ್ಲೆಯಲ್ಲಿ 20 ಕಡೆ ಭೂ ಕುಸಿತ ಆಗಿದೆ, ಬಹುತೇಕ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ.‌ 67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ. ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ. ಈಗಾಗಲೇ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ. 16 ಜಾನುವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಮಾತನಾಡಿದ್ದೇನೆ” ಎಂದು ಸಿಎಂ ಹೇಳಿದ್ದಾರೆ.

“28 ಹೆಕ್ಟೇರ್ ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2,708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. 150 ಬಿಟ್ಟು ಉಳಿದೆಲ್ಲಾವನ್ನೂ ಮತ್ತೆ ಅಳವಡಿಸಲಾಗಿದೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್ ಗಳನ್ನೂ ಹೊಸದಾಗಿ ಅಳವಡಿಸಲಾಗಿದೆ. 344 ಕಿಮೀ ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆದ್ಯತೆ ಮೇಲೆ ಸರಿಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ50 ರಷ್ಟು ಹೆಚ್ಚು ಮಳೆಯಾಗಿದೆ.‌ ಮುಂಜಾಗ್ರತಾ ಕ್ರಮಗಳ ಜೊತೆಗೆ ಅನಾಹುತದ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆ. ಭೂ ಕುಸಿತದ ದುರಸ್ತಿ ಕಾರ್ಯವನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಶಿರಾಡಿ ಘಾಟಿಗೆ ಭೇಟಿ ನೀಡಿ ಅನಾಹುತಗಳನ್ನು ಪರಿಶೀಲನೆ ನಡೆಸುತ್ತೇನೆ. ಭೂ‌ಕುಸಿತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರಕ್ಕೆ ಜಿಎಸ್‌ಐ ವರದಿ ನೋಡಿ ನಂತರ ತೀರ್ಮಾನಿಸಲಾಗುವುದು” ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ಭೂಕುಸಿತದ ಹಾಟ್‌ಸ್ಪಾಟ್‌ಗಳಲ್ಲಿ ಕಾಮಗಾರಿಗೆ ಅನುಮತಿ ನೀಡಿದ್ದೇಕೆ? ಹಸಿರು ನ್ಯಾಯ ಮಂಡಳಿ ಪ್ರಶ್ನೆ

Continue Reading

ದೇಶ

Narco-Terrorism: ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸುತ್ತಿದ್ದ ಆರು ಸರ್ಕಾರಿ ಅಧಿಕಾರಿಗಳ ಅಮಾನತು

Narco-Terrorism: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮಾದಕ ವಸ್ತು ಮಾರಾಟದ ಮೂಲಕ ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸಿದ ಆರೋಪದ ಮೇಲೆ ಐವರು ಪೊಲೀಸರು ಕಾನ್ಸ್‌ಟೇಬಲ್‌ ಸೇರಿದಂತೆ ಆರು ಸರ್ಕಾರಿ ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಈ ಅಧಿಕಾರಿಗಳು ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ ಮತ್ತು ಪಾಕಿಸ್ತಾನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಭಯೋತ್ಪಾದಕ ಗುಂಪುಗಳ ಜಾಲದ ಭಾಗವಾಗಿದ್ದರು.

VISTARANEWS.COM


on

Narco-Terrorism
Koo

ಶ್ರೀನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರ (Jammu and Kashmir)ದಲ್ಲಿ ಮಾದಕ ವಸ್ತು ಮಾರಾಟದ ಮೂಲಕ ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸಿದ ಆರೋಪದ ಮೇಲೆ ಐವರು ಪೊಲೀಸರು ಕಾನ್ಸ್‌ಟೇಬಲ್‌ ಸೇರಿದಂತೆ ಆರು ಸರ್ಕಾರಿ ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಈ ಅಧಿಕಾರಿಗಳು ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (Inter-Services Intelligence) ಮತ್ತು ಪಾಕಿಸ್ತಾನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಭಯೋತ್ಪಾದಕ ಗುಂಪುಗಳ ಜಾಲದ ಭಾಗವಾಗಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ (Narco-Terrorism).

ಈ ಜಾಲವು ಮಾದಕ ವಸ್ತುಗಳ ಮಾರಾಟಕ್ಕೆ ನೆರವಾಗಿದೆ. ಅದರಿಂದ ಬಂದ ಲಾಭವನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ವಿನಿಯೋಗಿಸಲಾಗಿದೆ. “ಐವರು ಪೊಲೀಸರು ಮತ್ತು ಒಬ್ಬ ಶಿಕ್ಷಕ ಸೇರಿದಂತೆ ಆರು ಸರ್ಕಾರಿ ಅಧಿಕಾರಿಗಳು ಮಾದಕ ವಸ್ತು ಮಾರಾಟದ ಮೂಲಕ ಭಯೋತ್ಪಾದಕರಿಗೆ ಹಣಕಾಸು ಒದಗಿಸುವಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಂವಿಧಾನದ 311 (2) (ಸಿ) ಸೆಕ್ಷನ್‌ ಪ್ರಕಾರ ತಕ್ಷಣವೇ ಜಾರಿಗೆ ಬರುವಂತೆ ಆರು ಮಂದಿಯನ್ನು ಅಮಾನತುಗೊಳಿಸಿದರು. ರಾಜ್ಯದ ಭದ್ರತೆಯ ಹಿತದೃಷ್ಟಿಯಿಂದ ವಿಚಾರಣೆಯಿಲ್ಲದೆ ನೌಕರರನ್ನು ಅಮಾನತುಗೊಳಿಸಿಸುವ ಅಧಿಕಾರವನ್ನು ಈ ಸೆಕ್ಷನ್‌ ಸರ್ಕಾರಕ್ಕೆ ನೀಡುತ್ತದೆ. ಇದರೊಂದಿಗೆ 2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಆಡಳಿತವು 70 ಸರ್ಕಾರಿ ನೌಕರರನ್ನು ವಜಾ ಮಾಡಿದಂತಾಗಿದೆ. ಮಾದಕ ವಸ್ತು ಭಯೋತ್ಪಾದನೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಕಳೆದ ತಿಂಗಳು ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ಅಮಾನತುಗೊಳಿಸಲಾಗಿತ್ತು.

ಅಮಾನತುಗೊಂಡ 6 ಅಧಿಕಾರಿಗಳು

ಫಾರೂಕ್ ಅಹ್ಮದ್ ಶೇಖ್ (ಕಾನ್ಸ್‌ಟೇಬಲ್‌): 2000ನೇ ಇಸವಿಯಲ್ಲಿ ನೇಮಕಗೊಂಡ ಈತ ಕುಪ್ವಾರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಪಾಕಿಸ್ತಾನದಿಂದ ಜಮ್ಮು ಮತ್ತು ಕಾಶ್ಮೀರದ ನಗರ ಪ್ರದೇಶಗಳಿಗೆ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡಿದ ತಂಡದಲ್ಲಿ ಸಕ್ರಿಯನಾಗಿದ್ದ. 454 ಗ್ರಾಂ ಬ್ರೌನ್ ಶುಗರ್‌ನೊಂದಿಗೆ ಈತನನ್ನು ಬಂಧಿಸಲಾಗಿದೆ.

ಖಾಲಿದ್ ಹುಸೇನ್ ಶಾ (ಕಾನ್ಸ್‌ಟೇಬಲ್‌): 2009ರಲ್ಲಿ ನೇಮಕಗೊಂಡ ಈತ ಶ್ರೀನಗರದ ಕುಪ್ವಾರಾ ಮತ್ತು ಕಾಶ್ಮೀರದ ಕೌಂಟರ್ ಇಂಟೆಲಿಜೆನ್ಸ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದ. 557 ಗ್ರಾಂ ಬ್ರೌನ್ ಶುಗರ್‌ನೊಂದಿಗೆ ಸಿಕ್ಕಿ ಬಿದ್ದಿದ್ದಾನೆ.

ರಹಮತ್ ಶಾ (ಕಾನ್ಸ್‌ಟೇಬಲ್‌): ಕುಪ್ವಾರಾದಲ್ಲಿ ಸೇವೆ ಕರ್ತವ್ಯ ನಿರ್ವಹಿಸುತ್ತಿದ್ದ ಈತನಿಗೆ ಮೊದಲಿನಿಂದಲೂ ಡ್ರಗ್ ಪೆಡ್ಲರ್‌ಗಳ ಪರಿಚಯವಿತ್ತು. 806 ಗ್ರಾಂ ಬ್ರೌನ್ ಶುಗರ್‌ನೊಂದಿಗೆ ಬಲೆಗೆ ಬಿದ್ದಿದ್ದಾನೆ.

ಇರ್ಷಾದ್ ಅಹ್ಮದ್ ಚಾಲ್ಕೂ (ಕಾನ್ಸ್‌ಟೇಬಲ್‌): 2009ರಲ್ಲಿ ನೇಮಕಗೊಂಡ ಈತ ಬಾರಾಮುಲ್ಲಾದ ಅನಂತ್ ನಾಗ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದ. ಲಷ್ಕರ್-ಎ-ತೊಯ್ಬಾದ ಓವರ್ ಗ್ರೌಂಡ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದ. ಸೆರೆ ಸಿಕ್ಕ ವೇಳೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡು ಹೊಂದಿದ್ದ.

ಸೈಫ್ ದಿನ್ (ಕಾನ್ಸ್‌ಟೇಬಲ್‌): 1995ರಲ್ಲಿ ನೇಮಕಗೊಂಡ ಇವನು ಜಮ್ಮು ಮತ್ತು ಕಾಶ್ಮೀರ ಸಶಸ್ತ್ರ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ. ಕುಖ್ಯಾತ ಡ್ರಗ್ ಪೆಡ್ಲರ್, ಹಿಜ್ಬುಲ್ ಮುಜಾಹಿದ್ದೀನ್ ಜತೆ ನಂಟು ಹೊಂದಿದ್ದ ಈತನನ್ನು ಹವಾಲಾ ಹಣ ವರ್ಗಾವಣೆಯ ಪುರಾವೆಗಳೊಂದಿಗೆ ಬಂಧಿಸಲಾಗಿದೆ.

ನಜಮ್ ದಿನ್ (ಶಿಕ್ಷಕ): 2014ರಿಂದ ಈತ ಪೂಂಛ್‌ನಲ್ಲಿ ಶಿಕ್ಷಕನಾಗಿದ್ದ. ಭಯೋತ್ಪಾದಕ ಚಟುವಟಿಕೆಗಳಿಗಾಗಿ ಹಿಜ್ಬುಲ್ ಮುಜಾಹಿದ್ದೀನ್ ಒಜಿಡಬ್ಲ್ಯು ಸಂಘಟನೆಯಿಂದ ಹಣ ಪಡೆದಿದ್ದ. 5 ಕೆಜಿ ಹೆರಾಯಿನ್‌ನೊಂದಿಗೆ ಈತನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಮತ್ತೊಂದು ಕುತಂತ್ರ ಬಯಲು: ಪಿಒಕೆಯಲ್ಲಿ ಸಮವಸ್ತ್ರದ ಬದಲು ಪಠಾಣಿ ಸೂಟ್ ಧರಿಸಿ ಬೇಹುಗಾರಿಕೆಗೆ ಮುಂದಾದ ಪಾಕ್‌ ಸೇನೆ

Continue Reading

ದೇಶ

Wayanad Landslide: ಭೂಕುಸಿತದ ಹಾಟ್‌ಸ್ಪಾಟ್‌ಗಳಲ್ಲಿ ಕಾಮಗಾರಿಗೆ ಅನುಮತಿ ನೀಡಿದ್ದೇಕೆ? ಹಸಿರು ನ್ಯಾಯ ಮಂಡಳಿ ಪ್ರಶ್ನೆ

Wayanad Landslide: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಮಾನವ ಹಸ್ತಕ್ಷೇಪವೇ ಕಾರಣ ಎಂದು ತಜ್ಞರು ತಿಳಿಸಿದ್ದು, ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ದಕ್ಷಿಣ ಪೀಠವು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿದೆ. ಪರಿಸರ ಸೂಕ್ಷ್ಮ ಮತ್ತು ಭೂಕುಸಿತದ ಹಾಟ್‌ಸ್ಪಾಟ್‌ಗಳೆಂದು ಕರೆಯಲ್ಪಡುವ ಪಶ್ಚಿಮ ಘಟ್ಟಗಳ ಬೆಟ್ಟದ ಇಳಿಜಾರುಗಳಲ್ಲಿ ಕಾಮಗಾರಿಗಳಿಗೆ ಅವಕಾಶ ನೀಡಿದ್ದಕ್ಕಾಗಿ ಕೇರಳ ಮತ್ತು ತಮಿಳುನಾಡು ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ಧಾರಾಕಾರವಾಗಿ ಸುರಿದ ಮಳೆಗೆ ದೇವರನಾಡು ಕೇರಳ ತತ್ತರಿಸಿದ್ದು, ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿ 340ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ (Wayanad Landslide). ಈ ದುರಂತಕ್ಕೆ ಮಾನವ ಹಸ್ತಕ್ಷೇಪವೇ ಕಾರಣ ಎಂದು ತಜ್ಞರು ತಿಳಿಸಿದ್ದು, ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ (National Green Tribunal)ಯ ದಕ್ಷಿಣ ಪೀಠವು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿದೆ. ಪರಿಸರ ಸೂಕ್ಷ್ಮ ಮತ್ತು ಭೂಕುಸಿತದ ಹಾಟ್‌ಸ್ಪಾಟ್‌ಗಳೆಂದು ಕರೆಯಲ್ಪಡುವ ಪಶ್ಚಿಮ ಘಟ್ಟಗಳ ಬೆಟ್ಟದ ಇಳಿಜಾರುಗಳಲ್ಲಿ ಕಾಮಗಾರಿಗಳಿಗೆ ಅವಕಾಶ ನೀಡಿದ್ದಕ್ಕಾಗಿ ಕೇರಳ ಮತ್ತು ತಮಿಳುನಾಡು ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಎರಡೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು, ಕೇರಳದ ವಯನಾಡು ಮತ್ತು ಇಡುಕ್ಕಿ ಹಾಗೂ ತಮಿಳುನಾಡಿನ ನೀಲಗಿರಿ ಮತ್ತು ಕೊಯಮತ್ತೂರು ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.

“ವಯನಾಡು ಭೂಕುಸಿತ ಹೇಗೆ ಸಂಭವಿಸಿತು ಎಂಬ ವಿವರ ಬೇಡ. ಆದರೆ ಇಂತಹ ದುರಂತಗಳು ಮರುಕಳಿಸದಂತೆ ತಡೆಯಲು ಕೈಗೊಂಡ ಕ್ರಮಗಳು ಯಾವುವು ಎಂದು ತಿಳಿಯಲು ನಾವು ಬಯಸುತ್ತೇವೆ” ಎಂದು ನ್ಯಾಯಾಂಗ ಮಂಡಳಿಯ ನ್ಯಾಯಾಧೀಶೆ ಪುಷ್ಪಾ ಸತ್ಯನಾರಾಯಣ ತಿಳಿಸಿದ್ದಾರೆ. ಕೇರಳ ಮತ್ತು ತಮಿಳುನಾಡಿನಲ್ಲಿ ಬೆಟ್ಟದ ಇಳಿಜಾರುಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಹೇಗೆ ಅನುಮತಿ ನೀಡಲಾಗುತ್ತಿದೆ ಎಂದು ನ್ಯಾಯಮಂಡಳಿ ಅಸಮಾಧಾನ ವ್ಯಕ್ತಪಡಿಸಿದೆ.

ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾದ ವಯನಾಡಿನ ಮೆಪ್ಪಾಡಿ ಪ್ರದೇಶದ ಚುರಲ್‌ಮಲ ಮತ್ತು ಮುಂಡಕೈ ಬಂಡೆಯಂತದ ಗಟ್ಟಿಯಾದ ನೆಲದ ಮೇಲೆ ರೂಪುಗೊಂಡಿಲ್ಲ. ಬದಲಾಗಿ ಮೆದುವಾದ ಮಣ್ಣನ್ನು ಹೊಂದಿದೆ. ಇಲ್ಲಿರುವುದು ಕೆಂಪು ಮಣ್ಣು. ಆದರೂ ಇಲ್ಲಿ ಅಷ್ಟೊಂದು ಕಟ್ಟಡಗಳು ಏಕೆ ಇವೆ? ಇದಕ್ಕೆ ನಮಗೆ ಉತ್ತರ ಬೇಕು ಎಂದು ನ್ಯಾಯಪೀಠ ಹೇಳಿದೆ.

ಪರಿಸರ ತಜ್ಞ ಮಾಧವ್ ಗಾಡ್ಗೀಳ್ ನೇತೃತ್ವದ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿಯು ಭೂಕುಸಿತ ಸಂಭವಿಸಿದ ವಯನಾಡು ಜಿಲ್ಲೆಯ ವೈತಿರಿ ತಾಲೂಕನ್ನು ಪರಿಸರ ಸೂಕ್ಷ್ಮ ವಲಯ -1 ಎಂದು ಸೂಚಿಸಿದೆ. ಅಂದರೆ ಇಲ್ಲಿ ಭೂಮಿಗೆ ಹಾನಿಯಾಗುವ ಯಾವುದೇ ಚಟುವಟಿಕೆ ನಡೆಯಬಾರದು ಎಂದು ಈ ಹಿಂದೆಯೇ ತಿಳಿಸಿದೆ ಎಂದು ನ್ಯಾಯಪೀಠ ತನ್ನ ನೋಟಿಸ್‌ನಲ್ಲಿ ಉಲ್ಲೇಖಿಸಿದೆ.

ತಮಿಳುನಾಡಿಗೂ ಚಾಟಿ

ಕೇರಳದ ಜತೆಗೆ ತಮಿಳುನಾಡಿಗೂ ಚಾಟಿ ಬೀಸಿದ ನ್ಯಾಯಪೀಠ, ಗಿರಿಧಾಮಗಳಲ್ಲಿ ಕಟ್ಟಡಗಳ ನಿರ್ಮಾಣವನ್ನು ನಿರ್ಬಂಧಿಸುವ ತಮಿಳುನಾಡು ಜಿಲ್ಲಾ ಪುರಸಭೆಗಳ ಕಾಯ್ದೆ, 1920ರ ಚಾಪ್ಟರ್‌ 10 ಎ ಅನ್ನು ತಮಿಳುನಾಡು ಕಟ್ಟುನಿಟ್ಟಾಗಿ ಅನುಸರಿಸುತ್ತಿದೆಯೇ? ಎಂದು ಪ್ರಶ್ನಿಸಿದೆ. “ತಮಿಳುನಾಡಿನಲ್ಲಿ ಚಾಪ್ಟರ್‌ 10 ಎ ಅನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿದೆಯೇ ಮತ್ತು ಕೇರಳದಲ್ಲಿ ಅಂತಹ ಯಾವುದಾದರೂ ನಿಯಮಗಳಿವೆಯೇ ಎಂದು ತಿಳಿಯಲು ಬಯಸುತ್ತೇವೆ. ಆ ವಿವರಗಳನ್ನು ಒದಗಿಸಿ” ಎಂದು ನ್ಯಾಯಪೀಠ ಕೇರಳ ಮತ್ತು ತಮಿಳುನಾಡಿಗೆ ಸೂಚಿಸಿದೆ.

ತಮಿಳುನಾಡಿನ ನೀಲಗಿರಿ ಮತ್ತು ವಾಲ್ಪಾರೈನಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ರೆಸಾರ್ಟ್‌ಗಳ ಬಗ್ಗೆ ನ್ಯಾಯ ಮಂಡಳೀ ತೀವ್ರ ಕಳವಳ ವ್ಯಕ್ತಪಡಿಸಿದೆ. ʼʼಖಾಸಗಿಯವರಿಗೆ ರೆಸಾರ್ಟ್ ನಿರ್ಮಿಸಲು ಅವಕಾಶ ನೀಡಿ ಮುಗ್ಧ ಜನರ ಜೀವಕ್ಕೆ ಅಪಾಯವನ್ನುಂಟು ಮಾಡುವ ಚಟುವಟಿಕೆಯನ್ನು ಪ್ರವಾಸೋದ್ಯಮ ಇಲಾಖೆಗೆ ಏಕೆ ನಿಯಂತ್ರಿಸುತ್ತಿಲ್ಲ?ʼʼ ಎಂದು ನ್ಯಾಯಮೂರ್ತಿ ಪುಷ್ಪಾ ಸತ್ಯನಾರಾಯಣ ಪ್ರಶ್ನಿಸಿದರು. ʼʼಭೂಕುಸಿತ ಪೀಡಿತ ಪ್ರದೇಶಗಳಲ್ಲಿ ಇನ್ನು ಮುಂದೆ ಯಾವುದೇ ನಿರ್ಮಾಣವನ್ನು ಮಾಡಬಾರದುʼʼ ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಇದನ್ನೂ ಓದಿ: Wayanad Landslide: ವಯನಾಡ್‌ನಲ್ಲಿ ಕರ್ತವ್ಯಪರತೆ ಮೆರೆದ ಕನ್ನಡತಿ ಜಿಲ್ಲಾಧಿಕಾರಿ, ಭೂಕುಸಿತ ಸ್ಥಳದಲ್ಲೇ ಮೊಕ್ಕಾಂ

Continue Reading

ದೇಶ

Physical Abuse: ಹಾಸಿಗೆ ಹಿಡಿದಿದ್ದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ

Physical Abuse: 2022ರಲ್ಲಿ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ತೀವ್ರ ಖಾಯಿಲೆಗೆ ತುತ್ತಾಗಿ ಹಾಸಿಗೆ ಹಿಡಿದಿದ್ದ ವೃದ್ಧೆಯ ಕೈಕಾಲು ಕಟ್ಟಿ ಹಾಕಿ 30ವರ್ಷದ ಅಂಕಿತ್‌ ಎಂಬಾತ ಅತ್ಯಾಚಾರ ಎಸಗಿದ್ದ. ಬಿಟ್ಟುಬಿಡುವಂತೆ ಎಷ್ಟೇ ಗೋಗರೆದರೂ ಕೇಳದ ಅಂಕಿತ್‌ ಮೃಗದಂತೆ ಆಕೆ ಮೈಮೇಲೆ ಎರಗಿದ್ದ. ಬಳಿಕ ವೃದ್ಧೆ ನೀಡಿದ ದೂರಿನ ಮೇರೆಗೆ ಅಂಕಿತ್‌ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

VISTARANEWS.COM


on

Physical abuse
Koo

ನವದೆಹಲಿ: ಖಾಯಿಲೆಯಿಂದ ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ(Physical Abuse) ಎಸಗಿದ್ದ ಕಿಡಿಗೇಡಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ದೆಹಲಿಯ ತೀಸ್‌ ಹಜಾರಿ ಕೋರ್ಟ್‌ ಈ ಮಹತ್ವ ತೀರ್ಪು ಹೊರಹಾಕಿದೆ.

2022ರಲ್ಲಿ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ತೀವ್ರ ಖಾಯಿಲೆಗೆ ತುತ್ತಾಗಿ ಹಾಸಿಗೆ ಹಿಡಿದಿದ್ದ ವೃದ್ಧೆಯ ಕೈಕಾಲು ಕಟ್ಟಿ ಹಾಕಿ 30ವರ್ಷದ ಅಂಕಿತ್‌ ಎಂಬಾತ ಅತ್ಯಾಚಾರ ಎಸಗಿದ್ದ. ಬಿಟ್ಟುಬಿಡುವಂತೆ ಎಷ್ಟೇ ಗೋಗರೆದರೂ ಕೇಳದ ಅಂಕಿತ್‌ ಮೃಗದಂತೆ ಆಕೆ ಮೈಮೇಲೆ ಎರಗಿದ್ದ. ಬಳಿಕ ವೃದ್ಧೆ ನೀಡಿದ ದೂರಿನ ಮೇರೆಗೆ ಅಂಕಿತ್‌ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಪರಾಧಿಯು ವೃದ್ಧೆಯ ಮನೆಗೆ ಪ್ರವೇಶಿಸಿದಾಗ ಆಕೆ ಅನಾರೋಗ್ಯದಿಂದ ಹಾಸಿಗೆ ಮೇಲೆ ಮಲಗಿದ್ದಳು. ಆತ ವೃದ್ಧೆಯನ್ನು ಥಳಿಸಿ, ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ.

ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆಂಚಲ್ ಅವರು ವೃದ್ಧೆಯ ಸಾಕ್ಷ್ಯವನ್ನು ಗಮನಿಸಿದ್ದು, ಅಂಕಿತ್‌ಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಈ ಘಟನೆಯ ನಂತರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆಯ ಮುಖ, ಕೈ ಮತ್ತು ಎದೆಯ ಮೇಲೆ ಗಾಯಗಳಾಗಿರುವುದು ಕಂಡುಬಂದವು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಇನ್ನು ಅಂಕಿತ್ ಅಲಿಯಾಸ್ ಮೊಗ್ಲಿ ಅತ್ಯಾಚಾರ, ಮನೆ ಅತಿಕ್ರಮಣ, ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆಯೂ ಇಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿತ್ತು. 85 ವರ್ಷದ ವೃದ್ಧೆಯ ಮೇಲೆ 35 ವರ್ಷದ ಕಿಡಿಗೇಡಿಯೊಬ್ಬ ಬರ್ಬರವಾಗಿ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯ ಮೃತಪಟ್ಟಿರುವ ಹೀನಕೃತ್ಯ ಉತ್ತರಪ್ರದೇಶದ ಬರೇಲಿಯ ಹಫೀಜ್‌ಗಂಜ್‌ನಲ್ಲಿ ನಡೆದಿದೆ. 85 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ(Physical Abuse)ಕ್ಕೊಳಗಾದ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧೆಯ ನೆರೆಮನೆಯಲ್ಲಿ ವಾಸಿಸುವ ರಾಕೇಶ್ ಎಂದು ಗುರುತಿಸಲಾದ 35 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪತಿ ಮತ್ತು ಮಗ ಮೃತಪಟ್ಟ ನಂತರ ಸಂತ್ರಸ್ತೆ ಒಂಟಿಯಾಗಿ ವಾಸವಾಗಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ. ಮಹಿಳೆಯ ಸಹೋದರ ಮತ್ತು ಅತ್ತಿಗೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರ ಸೊಸೆ ಅವರೊಂದಿಗೆ ವಾಸಿಸುತ್ತಿದ್ದಾರೆ. ಸೊಸೆಯ ಪ್ರಕಾರ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂತ್ರಸ್ತೆಯ ಮನೆಗೆ ಹೋದಾಗ, ರಾಕೇಶ್ ತನ್ನ ಅತ್ತೆಯ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಳು ಎಂದು ಆರ್ಯ ಹೇಳಿದರು.

ಬಳಿಕ ಆಕೆ ಆತನಿಗೆ ಎಚ್ಚರಿಕೆ ನೀಡಿದಾಗ ಆರೋಪಿ ಪರಾರಿಯಾಗಿದ್ದು, ಮನೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಈ ಭೀಕರ ಕೃತ್ಯದ ಬಳಿಕ ವೃದ್ಧೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮದ್ಯವ್ಯಸನಿಯಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಆರ್ಯ ತಿಳಿಸಿದ್ದಾರೆ. ಮಹಿಳೆಯ ಮರಣೋತ್ತರ ಪರೀಕ್ಷೆ ನಡೆಸುವಂತೆ ಸಮಿತಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: Akshay Kumar: ನಾನು ಸತ್ತೇ ಹೋದೆ ಎಂಬ ರೀತಿಯಲ್ಲಿ ಸಂತಾಪದ ಸಂದೇಶ ಕಳಿಸುತ್ತಾರೆ ಎಂದು ಗರಂ ಆದ ಅಕ್ಷಯ್‌ ಕುಮಾರ್‌!

Continue Reading
Advertisement
ಮಾಲಿವುಡ್3 mins ago

Mohanlal Visits Landslide: ಸೇನಾ ಸಮವಸ್ತ್ರ ಧರಿಸಿ ವಯನಾಡಿಗೆ ಬಂದ ಮೋಹನ್​ಲಾಲ್!

M R Mamata
ಶ್ರದ್ಧಾಂಜಲಿ4 mins ago

M R Mamata: ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್ ಮಮತಾ ನಿಧನ

wayanad landslide cm siddaramaiah pinarayi vijayan
ಕರ್ನಾಟಕ20 mins ago

Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Paris Olympics
ಪ್ರಮುಖ ಸುದ್ದಿ20 mins ago

Paris Olympics: ಹ್ಯಾಟ್ರಿಕ್​ ಪದಕ ತಪ್ಪಿಸಿಕೊಂಡ ಮನು ಭಾಕರ್​; 4ನೇ ಸ್ಥಾನಕ್ಕೆ ತೃಪ್ತಿ

Self Harming
ಚಿಕ್ಕೋಡಿ37 mins ago

Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

BJP-JDS Padayatra
ಕರ್ನಾಟಕ38 mins ago

BJP-JDS Padayatra: ಮೈಸೂರು ಚಲೋ ಪಾದಯಾತ್ರೆ ಆರಂಭ; ದಲಿತರು, ರೈತರಿಗೆ ನ್ಯಾಯ ಕೊಡಿಸಲು ಹೋರಾಟ ಎಂದ ವಿಜಯೇಂದ್ರ

Narco-Terrorism
ದೇಶ40 mins ago

Narco-Terrorism: ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸುತ್ತಿದ್ದ ಆರು ಸರ್ಕಾರಿ ಅಧಿಕಾರಿಗಳ ಅಮಾನತು

Ismail Haniyeh
ವಿದೇಶ59 mins ago

Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

karnataka rain
ಮಳೆ1 hour ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

hd kumaraswamy muda
ಪ್ರಮುಖ ಸುದ್ದಿ1 hour ago

HD Kumaraswamy: ಇನ್ನೂ ಹತ್ತು ತಿಂಗಳು ಸರ್ಕಾರ ನಡೆಸಿ ನೋಡೋಣ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ1 hour ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌